Tag: ಪ್ರಹ್ಲಾದ್ ಜೋಶಿ

  • 17ನೇ ಲೋಕಸಭೆಯಲ್ಲಿ 221 ಮಸೂದೆ ಅಂಗೀಕಾರ: ಪ್ರಹ್ಲಾದ್ ಜೋಶಿ

    17ನೇ ಲೋಕಸಭೆಯಲ್ಲಿ 221 ಮಸೂದೆ ಅಂಗೀಕಾರ: ಪ್ರಹ್ಲಾದ್ ಜೋಶಿ

    ನವದೆಹಲಿ: 17ನೇ ಲೋಕಸಭೆ (Lok Sabha Election) ಅವಧಿಯಲ್ಲಿ ಉಭಯ ಸದನಗಳಲ್ಲಿ ಐದು ವರ್ಷಗಳ ಕಾಲ ಒಟ್ಟು 221 ಮಸೂದೆಗಳನ್ನು (Bill) ಅಂಗೀಕರಿಸಲಾಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ತಿಳಿಸಿದ್ದಾರೆ.

    17ನೇ ಲೋಕಸಭೆ ಕೊನೆಯ ಅಧಿವೇಶನದ ಕೊನೆಯ ದಿನವಾದ ಶನಿವಾರ ಸಂಸತ್ ಕಲಾಪದಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, 5 ವರ್ಷಗಳಲ್ಲಿ 545 ಸಭೆಗಳಲ್ಲಿ ಸಕ್ರೀಯವಾಗಿ ಭಾಗಿಯಾಗಿದೆ ಹೇಳಿದ್ದಾರೆ. 5 ವರ್ಷಗಳ ಕಾಲ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಸಮರ್ಥ ನಾಯಕತ್ವದಲ್ಲಿ ಸಂಸದೀಯ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸುವ ಸುಯೋಗಕ್ಕಾಗಿ ಕೃತಜ್ಞನಾಗಿರುತ್ತೇನೆ ಎಂದರು. ಇದನ್ನೂ ಓದಿ: ಮುಂದಿನ 25 ವರ್ಷಗಳಲ್ಲಿ ‘ವಿಕಸಿತ ಭಾರತ’ ಕನಸು ನನಸಾಗುತ್ತೆ: ಮೋದಿ ಭರವಸೆ

    ಕಳೆದ 5 ವರ್ಷಗಳಲ್ಲಿ ಉಭಯ ಸದನಗಳ ವ್ಯವಹಾರಕ್ಕೆ ಕೊಡುಗೆ ನೀಡಿ, 545 ಸಭೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ ಪ್ರತಿಯೊಬ್ಬ ಸದಸ್ಯರು ಮತ್ತು ರಾಜಕೀಯ ಪಕ್ಷಗಳಿಗೆ ಜೋಶಿ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಉಭಯ ಸದನಗಳಿಂದ ಒಟ್ಟು 221 ಮಸೂದೆಗಳು ಅಂಗೀಕರಿಸಲ್ಪಟ್ಟಿವೆ ಮತ್ತು ಕಾಯ್ದೆಗಳಾಗಿ ಮಾರ್ಪಟ್ಟಿವೆ ಎಂದ ವಿವರಿಸಿದರು. ಇದನ್ನೂ ಓದಿ: ದೇಶಕ್ಕೆ ಒಂದೇ ಸಂವಿಧಾನ ಬೇಕೆಂಬ ಕನಸು ಸಾಕಾರಗೊಂಡಿದೆ – ಮೋದಿ ಬಣ್ಣನೆ

    17ನೇ ಲೋಕಸಭೆಯ ಉತ್ಪಾದಕತೆ 97% ಆಗಿದೆ. ಈ ಸಭೆಯನ್ನು ಮುಕ್ತಾಯಗೊಳಿಸುತ್ತಿದ್ದಂತೆ, 100% ಕ್ಕಿಂತ ಹೆಚ್ಚು ಉತ್ಪಾದಕತೆಯನ್ನು ಸಾಧಿಸುವ ಸಂಕಲ್ಪದೊಂದಿಗೆ ನಾವು 18ನೇ ಲೋಕಸಭೆಗೆ ಪ್ರವೇಶಿಸುತ್ತೇವೆ ಎಂಬ ವಿಶ್ವಾಸವನ್ನು ಪ್ರಧಾನಿ ನರೇಂದ್ರ ಮೋದಿ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ರಾಮಮಂದಿರ ಮುಂದಿನ ತಲೆಮಾರಿಗೆ ಹೆಮ್ಮೆಯ ಸಂಕೇತ: ಮೋದಿ

  • ರಾಹುಲ್ ಗಾಂಧಿ ಬಾಯಿ ಬಿಟ್ಟರೆ ಬರೀ ಸುಳ್ಳು – ಸಚಿವ ಪ್ರಹ್ಲಾದ್‌ ಜೋಶಿ ಕಿಡಿ

    ರಾಹುಲ್ ಗಾಂಧಿ ಬಾಯಿ ಬಿಟ್ಟರೆ ಬರೀ ಸುಳ್ಳು – ಸಚಿವ ಪ್ರಹ್ಲಾದ್‌ ಜೋಶಿ ಕಿಡಿ

    ­- 1999ರಲ್ಲೇ ಮೋದಿ ಜೀಗೆ OBC ಸ್ಥಾನಮಾನ ನೀಡಲಾಗಿದೆ

    ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ನಾಚಿಕೆಯೇ ಆಗುವುದಿಲ್ಲವೇ? ಬರೀ ಸುಳ್ಳು ಸುಳ್ಳು ಸುದ್ದಿಗಳನ್ನು ಹರಿ ಬಿಡುತ್ತಿದ್ದಾರೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು OBC ಜಾತಿಯಲ್ಲಿ ಹುಟ್ಟಿಲ್ಲ ಮತ್ತು ಅವರು ಗುಜರಾತ್‌ ಸಿಎಂ ಆದ ಮೇಲೆ OBC ಜಾತಿಯನ್ನು ಸೂಚಿಸಿದ್ದಾರೆ ಎಂದಿರುವ ರಾಹುಲ್ ಗಾಂಧಿ ಆರೋಪಕ್ಕೆ ಸಚಿವ ಜೋಶಿ ಅವರು ತಿರುಗೇಟು ನೀಡಿದ್ದು, ತಮ್ಮ X ಖಾತೆಯಲ್ಲಿ ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಗೆ ಮಸಿ ಬಳಿದ ಕಾಂಗ್ರೆಸ್ ಕಾರ್ಯಕರ್ತರು

    ಕಾಂಗ್ರೆಸ್‌ನ (Congress) ಸುಳ್ಳಿನ ಬುತ್ತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವ ಸಮಯ ಬಂದಿದೆ. ವಾಸ್ತವ ಬೇರೆಯೇ ಇರುವಾಗ ಕಾಂಗ್ರೆಸ್ ಬರೀ ಸುಳ್ಳುಗಳನ್ನೇ ಹೆಣೆದು ಜನರ ಕಿವಿಗೆ ಹೂವಿನ ಗೊಂಚಲೇ ಇಡುತ್ತಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಮಂಗಳ ಗ್ರಹಕ್ಕೆ ಸೋಲಾರ್‌ ಚಾಲಿತ ವಿಮಾನ ಕಳಿಸಲು ನಾಸಾ ಚಿಂತನೆ – ಏನಿದರ ವಿಶೇಷ?

    ಇಲ್ಲಿದೆ ಸತ್ಯ:
    ಮೋದಿಯವರು ಗುಜರಾತ್ (Gujarat) ಮುಖ್ಯಮಂತ್ರಿಯಾಗುವ ಎರಡು ವರ್ಷಗಳ ಮೊದಲು 1999ರ ಅಕ್ಟೋಬರ್ 27ರಂದು ಅವರ OBC ಸ್ಥಾನಮಾನವನ್ನು ಗುರುತಿಸಲಾಗಿದೆ ಎಂದು ಜೋಶಿ ದಾಖಲೆ ಸಮೇತ ಸ್ಪಷ್ಟಪಡಿಸಿದ್ದಾರೆ.

    ಪ್ರಧಾನಿ ಮೋದಿ ಅವರನ್ನು OBC ಅಲ್ಲ ಎನ್ನುವ ಮೂಲಕ ಕಾಂಗ್ರೆಸ್ ಮತ್ತೊಮ್ಮೆ ಇಡೀ OBC ಸಮುದಾಯವನ್ನೇ ಅವಮಾನಿಸಿದೆ. ಒಬಿಸಿ ವರ್ಗದವರೆಲ್ಲ ಲೋಕಸಭೆ ಚುನಾವಣೆಯಲ್ಲಿ ಪ್ರತಿಧ್ವನಿಸುವ ಮೂಲಕ ರಾಹುಲ್ ಗಾಂಧಿ ಆರೋಪಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಜೋಶಿ ಎಚ್ಚರಿಸಿದ್ದಾರೆ. ಇದನ್ನೂ ಓದಿ: ಸಮಯ ಸಿಕ್ಕಾಗ ವಿದ್ಯಾರ್ಥಿ ಮನೆಗೇ ಹೋಗಿ ಸೆಕ್ಸ್‌ ಮಾಡ್ತಿದ್ದೆ – ತಪ್ಪೊಪ್ಪಿಕೊಂಡ ಶಿಕ್ಷಕಿಗೆ 50 ವರ್ಷ ಜೈಲು

    ರಾಹುಲ್‌ ಗಾಂಧಿ ಹೇಳಿದ್ದೇನು?
    ಒಡಿಶಾದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯ ವೇಳೆ ಮಾತನಾಡಿದ ರಾಹುಲ್‌ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ಮೂಲತಃ ಹಿಂದುಳಿದ ವರ್ಗದಲ್ಲಿ ಜನಿಸಿಲ್ಲ, ಆದ್ರೆ ತಮ್ಮನ್ನು ಒಬಿಸಿ ಎಂದು ಹೇಳಿಕೊಳ್ಳುವ ಮೂಲಕ ಇತರೇ ವರ್ಗದ ಜನರನ್ನ ದಾರಿ ತಪ್ಪಿಸುತ್ತಿದ್ದಾರೆ. ಮೋದಿ ಜೀ ಅವರು `ತೇಲಿ’ ಜಾತಿಯ ಕುಟುಂಬದಲ್ಲಿ ಜನಿಸಿದ್ದಾರೆ. 2000ನೇ ಇಸವಿಯಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ತಮ್ಮನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದರು. ಆದ್ದರಿಂದ ಮೋದಿ ಜಿ ಹುಟ್ಟಿನಿಂದ ಒಬಿಸಿ ಅಲ್ಲ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಪ್ರತಿಪಾದಿಸಿದ್ದರು.

  • ಗ್ಯಾರಂಟಿ ನಿರ್ವಹಿಸಲಾಗದೆ ಕೇಂದ್ರದ ಅನುದಾನ ಬಂದಿಲ್ಲ ಅಂತಿದ್ದಾರೆ ಕಾಂಗ್ರೆಸ್‌ನವ್ರು: ಜೋಶಿ ಆರೋಪ

    ಗ್ಯಾರಂಟಿ ನಿರ್ವಹಿಸಲಾಗದೆ ಕೇಂದ್ರದ ಅನುದಾನ ಬಂದಿಲ್ಲ ಅಂತಿದ್ದಾರೆ ಕಾಂಗ್ರೆಸ್‌ನವ್ರು: ಜೋಶಿ ಆರೋಪ

    – ಹುಬ್ಬಳ್ಳಿಯಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ

    ಹುಬ್ಬಳ್ಳಿ: ಕಾಂಗ್ರೆಸ್‌ನಲ್ಲಿ (Congress) ಭ್ರಷ್ಟಾಚಾರ, ಒಳಜಗಳ ಹೆಚ್ಚಾಗಿದೆ. ಹಾಗಾಗಿ ಗಮನ ಬೇರೆಡೆ ಸೆಳೆಯಲು ಕೇಂದ್ರದ ಅನುದಾನ‌ ಬಂದಿಲ್ಲ ಎನ್ನುತ್ತಿದ್ದಾರೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi)  ಆರೋಪಿಸಿದರು.

    ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಲೋಕಸಭೆ ಚುನಾವಣೆ ತಯಾರಿ ಕುರಿತು ಚರ್ಚಿಸಿ ಮಾತನಾಡಿದರು. ಇದನ್ನೂ ಓದಿ: ದೇವೇಗೌಡರಿಗೆ ನಾನೇ ಕೇಸರಿ ಶಾಲು ಹಾಕಿ ಸ್ವಾಗತಿಸುತ್ತೇನೆ: ಯಶ್‌ಪಾಲ್ ಸುವರ್ಣ

    ರಾಜ್ಯದ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ಕಿತ್ತಾಟ ಇದೆ. ಗ್ಯಾರಂಟಿ ಯೋಜನೆ ನಿರ್ವಹಣೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಶಾಸಕ ಬಾಲಕೃಷ್ಣ ಗ್ಯಾರಂಟಿ ರದ್ದು ಎಂದಿದ್ದಾರೆ. ಇದನ್ನು ಮರೆಮಾಚಲು ಕೇಂದ್ರದ ಅನುದಾನ ಬಂದಿಲ್ಲ ಎನ್ನುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದರು.

    ಭಾರತ ಸರ್ವ ಕ್ಷೇತ್ರಗಳಲ್ಲೂ ಉತ್ತುಂಗಕ್ಕೆ ಏರಿದ್ದು, ಪ್ರಧಾನಿ ಮೋದಿ ಅವರ ಮೇಲೆ ದೇಶದ ಜನ ಅದಮ್ಯ ವಿಶ್ವಾಸ ಇಟ್ಟಿದ್ದಾರೆ. ಜನರ‌ ಭರವಸೆಯನ್ನು ಈಡೇರಿಸುವಲ್ಲಿ, ದೇಶದ ಹಿತ ಕಾಯುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಹಿಂದೆಯೇ ಅಡ್ವಾಣಿಗೆ ಭಾರತ ರತ್ನ ಕೊಡಬೇಕಿತ್ತು: ಸತೀಶ್‌ ಜಾರಕಿಹೊಳಿ

    ಅತಿ ವೇಗವಾಗಿ ಬೆಳೆಯುತ್ತಿದೆ ಹುಬ್ಬಳ್ಳಿ-ಧಾರವಾಡ
    ಹುಬ್ಬಳ್ಳಿ-ಧಾರವಾಡ ಅವಳಿ ನಗರ ಅತಿ ವೇಗವಾಗಿ ಬೆಳೆಯುತ್ತಿವೆ. ಅಭಿವೃದ್ಧಿ ಯೋಜನೆಗಳು ಜಿಲ್ಲೆಯ ಸಮಗ್ರ ಚಿತ್ರಣವನ್ನೇ ಬದಲಾಯಿಸಲಾಗಿದೆ ಎಂದು ಸಚಿವ ಜೋಶಿ ಹೇಳಿದರು.

    ಬಿಜೆಪಿ (BJP) ಕಾರ್ಯಕಾರಿಣಿ ಸಭೆಯಲ್ಲಿ ಶಾಸಕರಾದ ಮಹೇಶ ತೆಂಗಿನಕಾಯಿ, ಅರವಿಂದ ಬೆಲ್ಲದ, ಪ್ರದೀಪ್ ಶೆಟ್ಟರ್, ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಹು-ಧಾ ಮಹಾನಗರ ಪಾಲಿಕೆ ಮೇಯರ್ ವೀಣಾ ಬರದ್ವಾಡ, ಮಾಜಿ ಶಾಸಕ ಅಶೋಕ್ ಕಾಟವೆ, ಅಮೃತ್ ದೇಸಾಯಿ, ಅನಿಲ್ ಬೆನಕೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು. ಇದನ್ನೂ ಓದಿ: ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಗೆ ‘ಭಾರತ ರತ್ನ’ ಕೊಡಿ ಅಂತಾ ಪತ್ರ ಬರೆದಿದ್ದೆವು: ಸಿದ್ದರಾಮಯ್ಯ

  • ಕಾಂಗ್ರೆಸ್ ಸಂಸದನ ದೇಶ ವಿಭಜನೆ ಹೇಳಿಕೆ – ಸೋನಿಯಾ ಗಾಂಧಿ ಭಾರತೀಯರ ಕ್ಷಮೆಯಾಚಿಸಲಿ: ಜೋಶಿ ಆಗ್ರಹ

    ಕಾಂಗ್ರೆಸ್ ಸಂಸದನ ದೇಶ ವಿಭಜನೆ ಹೇಳಿಕೆ – ಸೋನಿಯಾ ಗಾಂಧಿ ಭಾರತೀಯರ ಕ್ಷಮೆಯಾಚಿಸಲಿ: ಜೋಶಿ ಆಗ್ರಹ

    – ಅಧಿವೇಶನದಲ್ಲಿ ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ ತರಾಟೆ

    ನವದೆಹಲಿ: ದೇಶ ವಿಭಜನೆ ಕೂಗೆಬ್ಬಿಸಿರುವ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ (D.K.Suresh) ವಿರುದ್ಧ ಸಂವಿಧಾನಾತ್ಮಕ ಕ್ರಮ ಕೈಗೊಳ್ಳಬೇಕು ಮತ್ತು ಕಾಂಗ್ರೆಸ್ ಪಕ್ಷ ದೇಶದ ಕ್ಷಮೆ ಕೇಳಬೇಕು ಎಂದು ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಆಗ್ರಹಿಸಿದ್ದಾರೆ.

    ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ಧ್ವನಿ ಎತ್ತಿದ ಜೋಶಿ ಅವರು, ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ದೇಶ ವಿಭಜನೆ ಹೇಳಿಕೆ ನೀಡುವ ಮೂಲಕ ಭಾರತೀಯ ಸಂವಿಧಾನಕ್ಕೆ, ಡಾ.ಅಂಬೇಡ್ಕರ್‌ಗೆ ಅಪಮಾನ ಎಸಗಿದ್ದಾರೆ. ರಾಷ್ಟ್ರದ ಅಖಂಡತೆಗೆ ಧಕ್ಕೆ ತಂದಿದ್ದಾರೆ. ಹಾಗಾಗಿ ಇವರ ವಿರುದ್ಧ ಕಾನೂನಾತ್ಮಕ ಕ್ರಮವಾಗಲೇಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕಲ್ಲು ಹೊಡೆದುಕೊಂಡು ಇದ್ದೋರನ್ನ ಲೋಕಸಭೆಗೆ ಕಳುಹಿಸಿದ್ರೆ ಇನ್ನೇನಾಗುತ್ತೆ: ಡಿ.ಕೆ.ಸುರೇಶ್‌ಗೆ ಹೆಚ್‌ಡಿಕೆ ತಿರುಗೇಟು

    ತಮ್ಮ ಪಕ್ಷದ ಸದಸ್ಯ, ಸಂಸದನ ದೇಶ ಒಡೆಯುವ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ದೇಶದ ಕ್ಷಮೆ ಯಾಚಿಸಬೇಕು ಎಂದು ಜೋಶಿ ಆಗ್ರಹಿಸಿದ್ದಾರೆ. ದೇಶವನ್ನು ವಿಭಜಿಸುವ ಡಿ.ಕೆ.ಸುರೇಶ್ ಅವರ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತೇನೆ ಎಂದಿದ್ದಾರೆ.

    ಸಂವಿಧಾನ ಮತ್ತು ಬಾಬಾಸಾಹೇಬ್ ಅಂಬೇಡ್ಕರ್‌ಗೆ ಘೋರ ಅವಮಾನ ಮಾಡಿರುವ ಡಿ.ಕೆ.ಸುರೇಶ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾನು ಕಾಂಗ್ರೆಸ್‌ಗೆ ಒತ್ತಾಯಿಸುತ್ತೇನೆ. ಕಾಂಗ್ರೆಸ್ ಕ್ರಮ ಕೈಗೊಳ್ಳದೇ ಹೋದಲ್ಲಿ ದೇಶವನ್ನು ಛಿದ್ರಗೊಳಿಸುವ ಅವರ ಹೇಳಿಕೆಗೆ ಕಾಂಗ್ರೆಸ್ ಬೆಂಬಲವೂ ಇದೆ ಎಂದಂತಾಗುತ್ತದೆ ಎಂದು ಸಚಿವ ಜೋಶಿ ಕಾಂಗ್ರೆಸ್ ವಿರುದ್ಧ ಹರಿ ಹಾಯ್ದಿದ್ದಾರೆ. ಇದನ್ನೂ ಓದಿ: ಸಂಸತ್ತಿನಲ್ಲಿ ಸದ್ದು ಮಾಡಿದ ಡಿಕೆ ಸುರೇಶ್ ‌ʼಪ್ರತ್ಯೇಕ ರಾಷ್ಟ್ರʼ ಹೇಳಿಕೆ- ಕಾಂಗ್ರೆಸ್‌ ಕ್ಷಮೆ ಕೇಳುವಂತೆ ಆಗ್ರಹ

    ದೇಶವನ್ನು ದಕ್ಷಿಣ ಭಾರತ- ಉತ್ತರ ಭಾರತ ಎನ್ನುವುದು ತಪ್ಪು. ನಾನೂ ಒಬ್ಬ ದಕ್ಷಿಣ ಭಾಗದ ಸಂಸದ. ದೇಶದ ಅಖಂಡತೆಯನ್ನು ಎತ್ತಿ ಹಿಡಿಯುತ್ತೇನೆ. ದೇಶ ವಿಭಜಿಸುವ ಹೇಳಿಕೆ ನೀಡಿದವರಿಗೆ ತಕ್ಕ ಶಾಸ್ತಿ ಅಗಲೇಬೇಕು ಎಂದು ಸಚಿವ ಜೋಶಿ ಪ್ರತಿಪಾದಿಸಿದರು.

    ದೇಶ ಒಡೆಯುವ ನೀತಿ ಕಾಂಗ್ರೆಸ್‌ನ ಪರಂಪರೆಯಾಗಿಬಿಟ್ಟಿದೆ. ಈಗ ಅದೇ ಪಕ್ಷದ ಸಂಸದ, ಅದೂ ಒಬ್ಬ ಉಪ ಮುಖ್ಯಮಂತ್ರಿ ಸಹೋದರನ ದೇಶ ವಿಭಜನೆ ಹೇಳಿಕೆ ಸಂಬಂಧ ತನಿಖೆಗೆ ಎಥಿಕ್ಸ್ ಕಮಿಟಿ ರಚನೆಯಗಬೇಕು ಎಂದು ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಸದನವನ್ನು ಒತ್ತಾಯಿಸಿದರು. ಇದನ್ನೂ ಓದಿ: ನಮ್ಮ ಭವ್ಯ ಭಾರತವನ್ನು ಒಡೆಯುವ ಮಾತು ಯಾರೂ ಆಡಬಾರದು: ಪರಮೇಶ್ವರ್ ತಿರುಗೇಟು

  • ವಿರೋಧ ಪಕ್ಷದಲ್ಲಿ ಕುಳಿತು ದೇಶ ಒಡೆಯುವ ಹುನ್ನಾರ: ಡಿಕೆಸು ವಿರುದ್ಧ ಜೋಶಿ ಆಕ್ರೋಶ

    ವಿರೋಧ ಪಕ್ಷದಲ್ಲಿ ಕುಳಿತು ದೇಶ ಒಡೆಯುವ ಹುನ್ನಾರ: ಡಿಕೆಸು ವಿರುದ್ಧ ಜೋಶಿ ಆಕ್ರೋಶ

    ನವದೆಹಲಿ: ದೇಶ ಒಡೆಯುವ ಕೂಗೆಬ್ಬಿಸಿರುವ ಸಂಸದ ಡಿ.ಕೆ. ಸುರೇಶ್ (DK Suresh) ಅವರನ್ನು ಮೊದಲು ಕಾಂಗ್ರೆಸ್ ವಜಾಗೊಳಿಸಬೇಕು ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಆಗ್ರಹಿಸಿದ್ದಾರೆ.

    ಸಂಸದ ಸುರೇಶ್ ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸಚಿವ ಜೋಶಿ ಅವರು, ಕಾಂಗ್ರೆಸ್ ಪಕ್ಷಕ್ಕೆ ನೈತಿಕತೆ ಇದ್ದರೆ ಮೊದಲು ಅವರನ್ನು ಪಕ್ಷದಿಂದ ಹೊರ ಹಾಕಲಿ ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಪ್ರತ್ಯೇಕ ದೇಶ ಕೇಳೋಕೆ ಆಗಲ್ಲ: ಸಿದ್ದರಾಮಯ್ಯ

     

    ಡಿ.ಕೆ. ಸುರೇಶ್ ಅವರ ದೇಶ ವಿಭಜನೆ ಹೇಳಿಕೆ ಸಂಬಂಧ ಕಾನೂನಾತ್ಮಕ ಕ್ರಮ ಜರುಗಿಸಬೇಕು ಎಂದು ಸಚಿವ ಜೋಶಿ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನಾನು ಅಖಂಡ ಭಾರತದವನು, ಸುರೇಶ್ ಜನರ ಅಭಿಪ್ರಾಯ ಹೇಳಿದ್ದಾರೆ ಅಷ್ಟೇ: ಡಿಕೆಶಿ

    ಇವರದ್ದು ದೇಶ ದ್ರೋಹದ ಮನಸ್ಥಿತಿ. ಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕ ಮಾತೆ ಎಂದು ಬಣ್ಣಿಸಿದ ಕವಿ ಕುವೆಂಪುಗೆ ಮಾಡಿದ ಅವಮಾನವಾಗಿದೆ. ಕಾಂಗ್ರೆಸ್ ವಿರೋಧ ಪಕ್ಷದಲ್ಲಿ ಕುಳಿತು ದೇಶ ಒಡೆಯುವ ಹುನ್ನಾರ ಮಾಡುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ನೈತಿಕತೆ ಇದ್ದರೆ ಮೊದಲು ಅವರನ್ನು ಪಕ್ಷದಿಂದ ವಜಾಗೊಳಿಸಲಿ ಎಂದು ಹೇಳಿದರು.

     

  • ಬಡವರಿಗೆ 2 ಕೋಟಿ ಮನೆ ಮೋದಿ ಸರ್ಕಾರದ ಗ್ಯಾರಂಟಿ: ಪ್ರಹ್ಲಾದ್ ಜೋಶಿ

    ಬಡವರಿಗೆ 2 ಕೋಟಿ ಮನೆ ಮೋದಿ ಸರ್ಕಾರದ ಗ್ಯಾರಂಟಿ: ಪ್ರಹ್ಲಾದ್ ಜೋಶಿ

    ಬೆಂಗಳೂರು: ಮುಂದಿನ 5 ವರ್ಷಗಳಲ್ಲಿ 2 ಕೋಟಿ ಮನೆಗಳನ್ನು (House) ಬಡವರಿಗೆ ಒದಗಿಸುವ ಗುರಿಯೇ ‘ಮೋದಿ ಸರ್ಕಾರದ ಗ್ಯಾರಂಟಿ’ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ.

    ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) 3 ಕೋಟಿ ಮನೆಗಳ ಹಂಚಿಕೆ ಗುರಿ ಸಾಧನೆ ಸಮೀಪದಲ್ಲಿದ್ದು, ಮುಂದಿನ 5 ವರ್ಷಗಳಲ್ಲಿ ಹೆಚ್ಚುವರಿ 2 ಕೋಟಿ ಮನೆಗಳ ಹಂಚಿಕೆ ಗುರಿ ಹಾಕಿಕೊಳ್ಳಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಹೈಕಮಾಂಡ್‌ಗೆ ಸೆಡ್ಡು – ಮುದ್ದಹನುಮೇಗೌಡ ಪರ ಪ್ರಚಾರ ಆರಂಭಿಸಿದ ರಾಜಣ್ಣ

    ವಿಕಸಿತ-ಪ್ರಗತಿಶೀಲ ಭಾರತಕ್ಕೆ ಪೂರಕ ಬಜೆಟ್:
    ಲೋಕಸಭಾ ಚುನಾವಣೆ ಪೂರ್ವ ನಮ್ಮ ಕೇಂದ್ರ ಬಜೆಟ್ ಪ್ರಗತಿಶೀಲ ಭಾರತಕ್ಕೆ ಪೂರಕವಾಗಿದೆ ಎಂದು ಜೋಶಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಶ್ರೀಸಾಮಾನ್ಯರ ಪರವಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಇದನ್ನೂ ಓದಿ: ಲೋಕಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಸೋಲೊಪ್ಪಿಕೊಂಡಿದೆ: ನಿಖಿಲ್ ಕುಮಾರಸ್ವಾಮಿ

    ದೂರದೃಷ್ಟಿ ಮತ್ತು ಪರಿವರ್ತನಾಶೀಲ, ವಿಕಸಿತ ಭಾರತದ ಬಜೆಟ್ ಇದಾಗಿದೆ ಎಂದಿರುವ ಜೋಶಿ, 7 ಲಕ್ಷ ರೂ. ಆದಾಯ ಇರುವ ಮಧ್ಯಮ ವರ್ಗಕ್ಕೆ ತೆರಿಗೆ ವಿನಾಯಿತಿ ಕೊಟ್ಟು ಬಹು ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: ವಿಜಯೇಂದ್ರ‌ ಮುಂದಿನ‌ ಮುಖ್ಯಮಂತ್ರಿ ಎಂದ ಶಾಸಕ ಶಿವರಾಜ್ ಪಾಟೀಲ್

    1 ಕೋಟಿ ಮನೆಗಳಿಗೆ ಸೋಲಾರ್ ವಿದ್ಯುತ್, ಕಾರ್ಪೋರೇಟ್ ಟ್ಯಾಕ್ಸ್ ಶೇ.22ಕ್ಕೆ ಇಳಿಕೆ, ವಿಮಾನ ನಿಲ್ದಾಣ, ವಿಮಾನಗಳ ಸಂಖ್ಯೆ ಹೆಚ್ಚಳ, ಪ್ರವಾಸೋದ್ಯಮ ಅಭಿವೃದ್ಧಿ, ರೈಲ್ವೆ ಸೌಲಭ್ಯ ಹೀಗೆ ಸಮತೋಲಿತ ಬಜೆಟ್ ಇದಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಂಥದ್ದೇ ಡ್ರೆಸ್‌ ಹಾಕೊಳ್ಳಿ, ಬಟ್ಟೆ ಬಿಚ್ಚಾಕ್ಕೊಂಡು ಹೋಗಿ ಹೇಳಲ್ಲ- ದೇಗುಲಗಳಲ್ಲಿನ ಡ್ರೆಸ್‌ ಕೋಡ್‌ಗೆ ಸಿಎಂ ವಿರೋಧ

    ಸರ್ವ ವರ್ಗದ ಅಗತ್ಯ ಆಶೋತ್ತರಗಳಿಗೆ ಸ್ಪಂದಿಸಿ, ವಿಕಸಿತ-ಪ್ರಗತಿಶೀಲ ಭಾರತದ ಬಜೆಟ್ ಪ್ರಸ್ತುತಪಡಿಸಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಚಿವ ಜೋಶಿ ಕೃತಜ್ಞತೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ವಿಕಸಿತ ಭಾರತ್ ಬಜೆಟ್ – ಹಣಕಾಸು ಸಚಿವೆಗೆ ಪ್ರಧಾನಿ ಮೋದಿ ಶ್ಲಾಘನೆ

  • ಸಂಸತ್ ಸದಸ್ಯರ ಅಮಾನತು ಹಿಂಪಡೆಯಲು ಕ್ರಮ: ಪ್ರಹ್ಲಾದ್‌ ಜೋಶಿ

    ಸಂಸತ್ ಸದಸ್ಯರ ಅಮಾನತು ಹಿಂಪಡೆಯಲು ಕ್ರಮ: ಪ್ರಹ್ಲಾದ್‌ ಜೋಶಿ

    – ಸಭಾಧ್ಯಕ್ಷರು, ಸಭಾಪತಿಗೆ ಸರ್ಕಾರದ ಪರ ಮನವಿ ಸಲ್ಲಿಕೆ

    ನವದೆಹಲಿ: ಅಮಾನತುಗೊಂಡ ಸಂಸತ್ ಸದಸ್ಯರ ಅಮಾನತು ಹಿಂಪಡೆಯಲು ಸಭಾಧ್ಯಕ್ಷರು ಮತ್ತು ಸಭಾಪತಿಗಳಿಗೆ ಸರ್ಕಾರದ ಪರವಾಗಿ ಮನವಿ ಮಾಡಿದ್ದೇವೆ ಎಂದು ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ತಿಳಿಸಿದರು.

    ದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಬಂಧಪಟ್ಟ ವಿಶೇಷಾಧಿಕಾರ ಸಮಿತಿಯೊಂದಿಗೆ ಚರ್ಚಿಸಿ ಅಮಾನತುಗೊಂಡಿರುವ ಎಲ್ಲಾ ಸದಸ್ಯರ ಅಮಾನತು ಹಿಂಪಡೆಯುವಂತೆ ಸರ್ಕಾರದ ಪರವಾಗಿ ಕೋರಲಾಗಿದೆ ಎಂದು ಹೇಳಿದರು.

    I.N.D.I.A ಮೈತ್ರಿ ಬ್ರೈನ್ ಡೆಡ್: INDIA ಮೈತ್ರಿ ಬ್ರೈನ್ ಡೆಡ್ ಸ್ಥಿತಿಯಲ್ಲಿದೆ. ಕಾಂಗ್ರೆಸ್ ನ ಜಗಳದಿಂದಲೇ ಅದರ ಮಿತ್ರ ಪಕ್ಷಗಳೊಂದಿಗಿನ ಮೈತ್ರಿ ಅಂತ್ಯ ಕಂಡಿದೆ ಎಂದು ಸಚಿವ ಜೋಶಿ ಲೇವಡಿ ಮಾಡಿದರು.‌ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳ ನಡುವಿನ ಮೈತ್ರಿ ಹೋರಾಟ ಅಂತ್ಯ ಕಂಡಿದೆ. ಈಗಾಗಲೇ ಸಂಪೂರ್ಣ ಮುರಿದು ಬಿದ್ದಿದೆ ಎಂದು ಹೇಳಿದರು. ಇದನ್ನೂ ಓದಿ: ಆಂಜನೇಯನ ತಂಟೆಗೆ ಬರ್ಬೇಡಿ, ಹುಷಾರ್- ಸಿಎಂಗೆ ಆರ್ ಅಶೋಕ್ ಎಚ್ಚರಿಕೆ

    ಇದು ಅಸ್ವಾಭಾವಿಕ ಮೈತ್ರಿ. ಫೋಟೋಶೂಟ್‌ಗೆ ಸೀಮಿತ ಎಂದು ಹಿಂದೆಯೇ ಹೇಳಿದ್ದೇವೆ. ಇದೀಗ ಅದರ ಬ್ರೈನ್ ಡೆಡ್ ಆಗಿದೆ. INDIA ಮೈತ್ರಿ ಬೇಗ ಸಾಯುವುದು ಖಚಿತ ಎಂದು ಜೋಶಿ ಹೇಳಿದರು. ಮೈತ್ರಿ ಪಕ್ಷಗಳೊಂದಿಗೆ ಹೊಡೆದಾಡಿಕೊಂಡು ಒಡೆಯುವುದು ಕಾಂಗ್ರೆಸ್‌ನ ಸ್ವಭಾವ. ಹಾಗಾಗಿಯೇ ಅದು ಕೊನೆಗಂಡಿದೆ ಎಂದು ಆರೋಪಿಸಿದರು.

    ಕಾಂಗ್ರೆಸ್ ನಲ್ಲೇ ಇನ್ನೂ ಕಾದಾಟ: INDIA ಮೈತ್ರಿ ಮುರಿದು ಬಿದ್ದು ಒಂದೊಂದೇ ಪಕ್ಷಗಳು ದೂರಾಗಿದ್ದರಿಂದ ಈಗ ಕಾಂಗ್ರೆಸ್ ನವರು ತಮ್ಮೊಳಗೆ ತಾವೇ ಕಾದಾಡುವಂತೆ ಆಗಿದೆ ಎಂದು ಪ್ರಹ್ಲಾದ್ ಜೋಶಿ ಲೇವಡಿ ಮಾಡಿದರು.

  • ಸಿದ್ದರಾಮಯ್ಯನವರೇ ಮಹಿಳಾ ರಾಷ್ಟ್ರಪತಿಗೆ ಕೊಡೋ ಗೌರವ ಇದೇನಾ – ಪ್ರಹ್ಲಾದ್‌ ಜೋಶಿ ಪ್ರಶ್ನೆ

    ಸಿದ್ದರಾಮಯ್ಯನವರೇ ಮಹಿಳಾ ರಾಷ್ಟ್ರಪತಿಗೆ ಕೊಡೋ ಗೌರವ ಇದೇನಾ – ಪ್ರಹ್ಲಾದ್‌ ಜೋಶಿ ಪ್ರಶ್ನೆ

    – ಸಿಎಂ ಏಕವಚನ ಮಾತಿಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕೆಂಡಾಮಂಡಲ

    ಬೆಂಗಳೂರು: ಅಹಿಂದ, ನಾರಿ ಶಕ್ತಿ ಎನ್ನುತ್ತ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯನವರೇ (Siddaramaiah) ಬುಡಕಟ್ಟು ಸಮುದಾಯದಿಂದ ಬಂದಂತಹ ಮಹಿಳಾ ರಾಷ್ಟ್ರಪತಿಗಳಿಗೆ ಕೊಡುವ ಗೌರವ ಇದೇನಾ? ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಪ್ರಶ್ನಿಸಿದ್ದಾರೆ.

    ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಜಾಗೃತಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ಭಾಷಣದ ವೇಳೆ, ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರ ಬಗ್ಗೆ ಏಕವಚನ ಪದ ಪ್ರಯೋಗಿಸಿದ್ದರು. ಈ ಕುರಿತ ವೀಡಿಯೋವನ್ನು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಜೋಶಿ ಅವರು ಸಿಎಂ ವಿರುದ್ಧ ಕಿಡಿ ಕಾರಿದ್ದಾರೆ.

    ಸಿದ್ದರಾಮಯ್ಯನವರೇ ನಿಮಗೂ ನಿಮ್ಮ ಪಕ್ಷಕ್ಕೂ ಅದೇನು ಮಂಕು ಬಡಿದಿದೆ, ಸಂವಿಧಾನದ ಪರಮೋಚ್ಛ ಸ್ಥಾನದಲ್ಲಿರುವ, ಅದರಲ್ಲೂ ದೇಶದ ಓರ್ವ ಮಹಿಳಾ ಪ್ರಥಮ ಪ್ರಜೆ ಬಗ್ಗೆ ಏಕವಚನದಲ್ಲಿ ಮಾತನಾಡುವುದೇ ನಿಮ್ಮ ಸಂಸ್ಕೃತಿ ಆಗಿದೆಯೇ? ಎಂದು ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶೋಷಿತರ ಸಮಾವೇಶದಲ್ಲಿ ಕ್ಷಿಂಟಾಲ್‌ಗಟ್ಟಲೇ ಚಿಕನ್ ಬಿರಿಯಾನಿ ನೆಲದ ಪಾಲು

    ಏಕವಚನದ ಶೋಕಿ:
    ದೇಶದ ಪ್ರಧಾನಿಯನ್ನು, ರಾಷ್ಟ್ರಪತಿಯನ್ನು ಏಕವಚನದಲ್ಲಿ ಕರೆಯೋ ಶೋಕಿ ಮಾಡುತ್ತೀರಿ. ಮಹಿಳಾ ರಾಷ್ಟ್ರಪತಿ ಬಗ್ಗೆ ಬಹಿರಂಗ ಸಭೆಯಲ್ಲೇ ಏಕವಚನದಲ್ಲೇ ಮಾತನಾಡುವ ನಿಮ್ಮ ಸಂಸ್ಕೃತಿ- ಸಭ್ಯತೆ ಇದೇನಾ? ಇದು, ರಾಷ್ಟ್ರಪತಿಗೆ ಅದರಲ್ಲೂ ಓರ್ವ ಮಹಿಳಾ ರಾಷ್ಟ್ರಪತಿಗೆ ನೀವು ಅಗೌರವ ತೋರಿದಂತೆ. ಇದನ್ನೂ ಓದಿ: Bigg Boss Kannada: ಡ್ರೋನ್ ಪ್ರತಾಪ್ ಅವರ ಅವಮಾನಕ್ಕೆ ರನ್ನರ್ ಅಪ್ ಉತ್ತರ

    ದುರಹಂಕಾರ ನಿಮ್ಮ, ಪಕ್ಷದ ಅವನತಿಗೆ ಬುನಾದಿ:
    ಸಿದ್ದರಾಮಯ್ಯ ಅವರೇ, ನಿಮ್ಮ ಎಲುಬಿಲ್ಲದ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳಿ. ಈ ದುರಹಂಕಾರ ನಿಮ್ಮ ಹಾಗೂ ನಿಮ್ಮ ಪಕ್ಷದ ಅವನತಿಗೆ ಬುನಾದಿಯಾಗಲಿದೆ. ಸಂವಿಧಾನದ ಪರಮೋಚ್ಚ ಸ್ಥಾನದಲ್ಲಿರುವವರ ಬಗ್ಗೆ ಕಾಂಗ್ರೆಸ್‌ಗೆ ಗೌರವವಿಲ್ಲ ಎಂಬುದು ಪದೇ ಪದೇ ಸಾಬೀತಾಗುತ್ತಿದೆ. ದೇಶದ ಪ್ರಥಮ ಪ್ರಜೆ ಬಗ್ಗೆ ಅಪಮಾನಕಾರಿ ಮಾತುಗಳನ್ನಾಡುವುದಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ಸ್ಪರ್ಧೆಯೇ ಇದ್ದಂತಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಅಧೀರ ರಂಜನ್ ಚೌಧರಿ ನಂತರ ಈಗ ಸಿದ್ದರಾಮಯ್ಯ ಸರದಿ… ಕೆಲವೇ ದಿನಗಳ ಹಿಂದೆ ಕಾಂಗ್ರೆಸ್ ಮೈತ್ರಿಯ ಪಟಾಲಂ ಕೂಡ ಉಪರಾಷ್ಟ್ರಪತಿಗಳನ್ನು ಸಂಸತ್ ಆವರಣದಲ್ಲೇ ಅಪಹಾಸ್ಯ ಮಾಡಿತ್ತು. ಪರಿಣಾಮ ಕಲಾಪದಿಂದ ಬಹಿಷ್ಕರಿಸಲಾಗಿತ್ತು ಎಂಬುದನ್ನು ಮರೆಯಬೇಡಿ ಎಂದು ಸಚಿವ ಜೋಶಿ ಎಚ್ಚರಿಸಿದ್ದಾರೆ.

    ತಪ್ಪೊಪ್ಪಿಕೊಳ್ಳಲಿ ಸಿಎಂ:
    ಇಂತಹ ಬೇಜವಾಬ್ದಾರಿ ನಡವಳಿಕೆ ಅತ್ಯಂತ ಪ್ರಜಾಪ್ರಭುತ್ವಕ್ಕೆ ಮಾರಕ. ಮಾತೆತ್ತಿದರೆ ಸಂವಿಧಾನ ಎನ್ನುವ ಸಿಎಂ ಸಿದ್ದರಾಮಯ್ಯ ಅವರು ತಪ್ಪೊಪ್ಪಿಕೊಳ್ಳಬೇಕು ಎಂದು ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ.

  • ಸಿಎಂ ಸಿದ್ದರಾಮಯ್ಯಗೆ ಹಿಂದೂಗಳ ನಂಬಿಕೆ ಮೇಲೆ ಯಾಕಿಷ್ಟು ತಾತ್ಸಾರ? – ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಕ್ರೋಶ

    ಸಿಎಂ ಸಿದ್ದರಾಮಯ್ಯಗೆ ಹಿಂದೂಗಳ ನಂಬಿಕೆ ಮೇಲೆ ಯಾಕಿಷ್ಟು ತಾತ್ಸಾರ? – ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಕ್ರೋಶ

    ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಹಿಂದೂಗಳ ನಂಬಿಕೆ ಮೇಲೆ ಯಾಕಿಷ್ಟು ತಾತ್ಸಾರ? ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಪ್ರಶ್ನಿಸಿದ್ದಾರೆ.

    ಮಂಡ್ಯದ ಕೆರಗೋಡಿನಲ್ಲಿ ಹನುಮಧ್ವಜ (Hanuma Dhwaja) ವಿವಾದಕ್ಕೆ ಸಂಬಂಧಿಸಿದಂತೆ ಎಕ್ಸ್‌ ಮೂಲಕ ಪ್ರತಿಕ್ರಿಯೆ ನೀಡಿರುವ ಸಚಿವ ಜೋಶಿ ಅವರು, ಹನುಮನ ನಾಡಿನಲ್ಲಿ ಹನುಮ ಧ್ವಜಕ್ಕೆ ಸಮ್ಮಾನ ಇಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೆರಗೋಡು ಹನುಮಧ್ವಜ ಇಳಿಸಿದ ಪ್ರಕರಣ; ಜ.29 ಕ್ಕೆ ಎಲ್ಲ ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ

    ಕಾಂಗ್ರೆಸ್ ಪಕ್ಷದ ತುಷ್ಟೀಕರಣ ನೀತಿಗೆ ಜನ ಉತ್ತರ ಕೊಡುವ ಕಾಲ ದೂರವಿಲ್ಲ ಎಂದು ಎಚ್ಚರಿಸಿದ್ದಾರೆ. ಸರ್ವ ಜನಾಂಗದ ಶಾಂತಿಯ ತೋಟದ ಬಗ್ಗೆ ಪುಂಗಿ ಊದುವ ಕಾಂಗ್ರೆಸ್ ಕರ್ನಾಟಕದಲ್ಲಿ ಈಗ ಏನು ಮಾಡುತ್ತಿದೆ? ಎಂದು ಪ್ರಶ್ನಿಸಿದ್ದಾರೆ.

    ಮಹಿಳೆಯರು ಕೂಡ ಬೀದಿಗಿಳಿದು ನಮ್ಮ ದೇವರ ರಕ್ಷಣೆಗೆ ನಿಲ್ಲೋ ಹಂತಕ್ಕೆ ಪರಿಸ್ಥಿತಿ ಬಂದಿದೆ. ಒಂದು ವರ್ಗದ ಓಲೈಕೆಗಾಗಿ ಕಾಂಗ್ರೆಸ್ ಎಷ್ಟು ಕೆಳಮಟ್ಟದ ರಾಜಕಾರಣ ಮಾಡುತ್ತಿದೆ ಎಂಬುದು ಇದರಿಂದ ಸ್ಪಷ್ಟವಾಗುತ್ತಿದೆ ಎಂದು ಜೋಶಿ ಟೀಕಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರದ ಅಮಲಿನಲ್ಲಿ ಹೀಗೆಲ್ಲ ಆಡ್ತಿದೆ: ಹನುಮಧ್ವಜ ತೆರವು ವಿಚಾರಕ್ಕೆ ಬಿವೈವಿ ಕಿಡಿ

    ಹನುಮನ ನಾಡಿನಲ್ಲಿ ಹನುಮ ಧ್ವಜಕ್ಕೆ ಸಮ್ಮಾನವಿಲ್ಲ. ಇದು ಕಾಂಗ್ರೆಸ್ ಸರ್ಕಾರದ ಸ್ಪಷ್ಟ ನೀತಿ. ಈ ತುಷ್ಟೀಕರಣದ ಪರಮಾವಧಿಗೆ ಜನರೇ ಉತ್ತರ ಕೊಡುತ್ತಾರೆ. ಒಂದಂತೂ ಸತ್ಯ ನಿಮ್ಮ ಆಡಳಿತ ರಾಮ ರಾಜ್ಯ ಅಲ್ಲ ಅನ್ನೋದೇ ಗ್ಯಾರೆಂಟಿ ಎಂದು ಸಚಿವ ಜೋಶಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

  • ನನ್ನನ್ನು ರಾಷ್ಟ್ರೀಯ ಅಧ್ಯಕ್ಷ ಅಂತಿದ್ದಾರೆ, ಪುಣ್ಯಕ್ಕೆ ರಾಷ್ಟ್ರಪತಿ ಎಂದಿಲ್ಲ: ಪ್ರಹ್ಲಾದ್ ಜೋಶಿ

    ನನ್ನನ್ನು ರಾಷ್ಟ್ರೀಯ ಅಧ್ಯಕ್ಷ ಅಂತಿದ್ದಾರೆ, ಪುಣ್ಯಕ್ಕೆ ರಾಷ್ಟ್ರಪತಿ ಎಂದಿಲ್ಲ: ಪ್ರಹ್ಲಾದ್ ಜೋಶಿ

    ಧಾರವಾಡ: ನನ್ನನ್ನು ರಾಷ್ಟ್ರೀಯ ಅಧ್ಯಕ್ಷ ಎನ್ನುತ್ತಿದ್ದಾರೆ, ಪುಣ್ಯಕ್ಕೆ ರಾಷ್ಟ್ರಪತಿ ಎಂದಿಲ್ಲ. ನಾನು ಧಾರವಾಡ (Dharwad) ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ.

    ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲ ಇಲ್ಲ. ನಾನು ಈಗಾಗಲೇ ಚುನಾವಣೆಯ ತಯಾರಿ ಮಾಡಿಕೊಂಡಿದ್ದೇನೆ. ಲೋಕಸಭಾ ಚುನಾವಣೆಗೆ ಈ ಕ್ಷೇತ್ರದಿಂದ ಜೋಶಿನೆ ಅಭ್ಯರ್ಥಿಯಲ್ಲದೇ ಇನ್ನೇನೂ? ಎಂದಿದ್ದಾರೆ. ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸೀಟುಗಳು ಖಚಿತ: ಭೂಪೇಂದ್ರ ಯಾದವ್

    ಕ್ಷೇತ್ರದಲ್ಲಿ ಶಾಸಕರು, ನಗರ ಘಟಕದ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಚುನಾವಣೆ ಸಿದ್ಧತೆಯಲ್ಲಿದ್ದಾರೆ. ಇದರ ನಡುವೆ ಕೆಲವರು ನನ್ನನ್ನು ರಾಷ್ಟ್ರೀಯ ಅಧ್ಯಕ್ಷ ಎನ್ನುತ್ತಿದ್ದಾರೆ. ಪುಣ್ಯಕ್ಕೆ ರಾಷ್ಟ್ರಪತಿ ಆಗುತ್ತಾರೆ ಎಂದಿಲ್ಲ. ಜೋಶಿ ರಾಷ್ಟ್ರಪತಿ ಆಗುತ್ತಾರೆ, ಶೆಟ್ಟರ್ (Jagadish Shettar) ಅಭ್ಯರ್ಥಿ ಆಗುತ್ತಾರೆ ಎಂದು ಹೇಳುತ್ತಿಲ್ಲ ಎಂದಿದ್ದಾರೆ.

    ಶೆಟ್ಟರ್ ಆರು ತಿಂಗಳ ಹಿಂದೆಯೇ ವಾಪಾಸ್ ಬರುತ್ತಾರೆ ಎಂದಿದ್ದೆ. ಅವರು ಬಂದಿದ್ದಕ್ಕೆ ನನಗೆ ಸಂತೋಷವಿದೆ. ಇದನ್ನು ವ್ಯಂಗ್ಯವಾಗಿ ಹೇಳುತ್ತಿಲ್ಲ. ಈ ಭಾಗದಲ್ಲಿ ಎಲ್ಲರೂ ಒಂದುಗೂಡಿ ಪಕ್ಷ ಬಲವರ್ಧನೆ ಮಾಡುತ್ತೇವೆ ಎಂದಿದ್ದಾರೆ.

    ರಾಜ್ಯದಲ್ಲಿ ಕಾಂಗ್ರೆಸ್, ಸರ್ಕಾರವನ್ನು ಐದು ವರ್ಷ ನಡೆಸಬೇಕು. ಆದರೆ ಅವರಲ್ಲಿನ ಆಂತರಿಕ ಕಚ್ಚಾಟದಿಂದ ಅದು ಸರ್ಕಾರವನ್ನು ಸರಿಯಾಗಿ ನಡೆಸುತ್ತಿಲ್ಲ. ಈ ಬಗ್ಗೆ ಜನರಿಗೂ ಆಕ್ರೋಶವಿದೆ. ಇದರಿಂದಾಗಿ ನಮಗೆ ಅವಕಾಶ ಇದೆ ಎಂದಿದ್ದಾರೆ. ಇದನ್ನೂ ಓದಿ: ಮೋದಿ ಮತ್ತೆ ಪ್ರಧಾನಿಯಾಗಬೇಕು ಅನ್ನೋದನ್ನ ಶಾಮನೂರು ಸೂಕ್ಷ್ಮವಾಗಿ ಹೇಳಿದ್ದಾರೆ: ಸಿ.ಟಿ ರವಿ