Tag: ಪ್ರಹ್ಲಾದ್ ಜೋಶಿ

  • ‘ದಾಸವರೇಣ್ಯ ಶ್ರೀ ವಿಜಯ ದಾಸರು’ ಹಾಡು ರಿಲೀಸ್ ಮಾಡಿದ ಕೇಂದ್ರ ಸಚಿವ ಜೋಶಿ

    ‘ದಾಸವರೇಣ್ಯ ಶ್ರೀ ವಿಜಯ ದಾಸರು’ ಹಾಡು ರಿಲೀಸ್ ಮಾಡಿದ ಕೇಂದ್ರ ಸಚಿವ ಜೋಶಿ

    ಖ್ಯಾತ ಹರಿದಾಸರಾದ ಭೃಗು ಋಷಿಗಳ ಅಂಶ ಸಂಭೂತರಾದ ಶ್ರೀವಿಜಯದಾಸರ ಕುರಿತಾದ ‘ದಾಸವರೇಣ್ಯ ಶ್ರೀ ವಿಜಯದಾಸರು’ (Dasavarenya Sri Vijaya Dasaru) ಚಿತ್ರ ತೆರೆಗೆ ಬರಲು ಸಿದ್ದವಾಗಿದೆ.  ತ್ರಿವಿಕ್ರಮ ಜೋಶಿ ಅವರು ಎಸ್ ಪಿ ಜೆ ಮೂವೀಸ್ ಲಾಂಛನದಲ್ಲಿ ನಿರ್ಮಾಣ ಮಾಡಿರುವ,  ಮಧುಸೂದನ್ ಹವಾಲ್ದಾರ್ ನಿರ್ದೇಶಿಸಿರುವ ದಾಸವರೇಣ್ಯ ಶ್ರೀ ವಿಜಯದಾಸರು ಚಿತ್ರದ ಧ್ವನಿ ಸುರುಳಿಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬಿಡುಗಡೆ ಮಾಡಿದರು. ಪಂಡಿತ ಪೂಜ್ಯ ಶ್ರೀ ಸತ್ಯಧ್ಯಾನಾಚಾರ್ಯ ಕಟ್ಟಿ,  ಮಾಜಿ ಸಚಿವ ಮುರುಗೇಶ್ ನಿರಾಣಿ, ಮಾಜಿ ಶಾಸಕ ಬಸವನಗೌಡ, ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ಲಹರಿ ವೇಲು ಸೇರಿದಂತೆ ಅನೇಕ ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

    ಶ್ರೀವೇದವ್ಯಾಸರು ರಚಿಸಿದ ವೇದಗಳು ಸಾಮಾನ್ಯ ಜನರಿಗೆ ಅರ್ಥವಾಗುವುದು ಕಷ್ಟ.  ಹರಿದಾಸರು ವೇದಗಳ ಸಾರವನ್ನು ಕನ್ನಡ ಭಾಷೆಯಲ್ಲಿ ಜನರಿಗೆ ಅರ್ಥವಾಗುವ ಹಾಗೆ ಹಾಡುಗಳ ಮೂಲಕ ನೀಡಿದ್ದಾರೆ‌‌. ಶ್ರೀಪುರಂದರದಾಸರ ನಂತರ ಬರುವ ಶ್ರೀವಿಜಯದಾಸರು 2800 ಕ್ಕೂ ಹೆಚ್ಚು ಸುಳಾದಿಗಳನ್ನು, ಸಾಕಷ್ಟು ದೇವರನಾಮ ಹಾಗೂ ಸುಳಾದಿಗಳನ್ನು ರಚಿಸಿದ್ದಾರೆ. ಭೃಗು ಋಷಿಗಳ ಅಂಶ ಸಂಭೂತರಾದ ಶ್ರೀವಿಜಯದಾಸರ ಕುರಿತಾದ ಈ ಚಿತ್ರವನ್ನು ಸ್ನೇಹಿತರಾದ ತ್ರಿವಿಕ್ರಮ ಜೋಶಿ ನಿರ್ಮಾಣ ಮಾಡಿದ್ದಾರೆ. ಹರಿದಾಸರ ಚಿತ್ರಗಳ ಹ್ಯಾಟ್ರಿಕ್ ನಿರ್ದೇಶಕ ಮಧುಸೂದನ್ ಹವಾಲ್ದಾರ್ ನಿರ್ದೇಶಿಸಿದ್ದಾರೆ‌‌. ವಿಜಯಕೃಷ್ಣ ಅವರ ಸಂಗೀತದಲ್ಲಿ ಮೂಡಿಬಂದಿರುವ ಹಾಡುಗಳು ಚೆನ್ನಾಗಿದೆ. ಚಿತ್ರ ಯಶಸ್ವಿಯಾಗಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾರೈಸಿದರು.

    ಕನ್ನಡದಲ್ಲಿ ನವಕೋಟಿ ನಾರಾಯಣ, ಭಕ್ತ ಕನಕದಾಸ ಚಿತ್ರಗಳ ನಂತರ ಯಾವುದೇ ಹರಿದಾಸರ ಚಿತ್ರಗಳು ಬಂದಿಲ್ಲ ಎಂದು ಮಾತನಾಡಿದ ನಿರ್ಮಾಪಕ ಹಾಗೂ ನಟ ತ್ರಿವಿಕ್ರಮ ಜೋಶಿ, ಶ್ರೀ ಮಾತಾಂಬುಜ ಮೂವೀಸ್ ಮೂಲಕ ನಿರ್ಮಾಣವಾಗಿದ್ದ ಶ್ರೀ ಜಗನ್ನಾಥ ದಾಸರು ಚಿತ್ರದ ಮೂಲಕ ನಾನು ಸಹ ನಿರ್ಮಾಪಕನಾಗಿ ಚಿತ್ರರಂಗ ಪ್ರವೇಶಿಸಿದೆ.  ಈಗ ಶ್ರೀ ದಾಸವರೇಣ್ಯ ವಿಜಯದಾಸರು ಚಿತ್ರವನ್ನು ನಮ್ಮ ತಂದೆ – ತಾಯಿಯ ಆಶೀರ್ವಾದದಿಂದ ಎಸ್ ಪಿ ಜೆ ಮೂವೀಸ್ ಮೂಲಕ  ನಿರ್ಮಿಸಿದ್ದೇನೆ. ಮುಂದೆ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಹರಿದಾಸರ ಕುರಿತಾದ ಚಿತ್ರಗಳನ್ನು ನಿರ್ಮಿಸುವ ಆಸೆಯಿದೆ. ನಾನು ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಮಧುಸೂದನ್ ಹವಾಲ್ದಾರ್ ನಿರ್ದೇಶಿಸಿದ್ದಾರೆ. ವಿಜಯಕೃಷ್ಣ ಸಂಗೀತ ನೀಡಿದ್ದಾರೆ. ಈ ಚಿತ್ರದ ಹಾಡುಗಳನ್ನು ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ ಜೋಶಿ ಅವರು ಬಿಡುಗಡೆ ಮಾಡಿದ್ದಾರೆ. ಅವರಿಗೆ ಹಾಗೂ ಸಮಾರಂಭಕ್ಕೆ ಆಗಮಿಸಿರುವ ಪ್ರತಿಯೊಬ್ಬ ಗಣ್ಯರಿಗೆ ನನ್ನ ಧನ್ಯವಾದ ಎಂದರು.

    ಸಮಾರಂಭಕ್ಕೆ ಆಗಮಿಸಿದ ಎಲ್ಲಾ ಗಣ್ಯರು ದಾಸವರೇಣ್ಯ ಶ್ರೀ ವಿಜಯದಾಸರು ಚಿತ್ರ ವಿಜಯ ಪತಾಕೆ ಹಾರಿಸಲಿ ಎಂದು ತುಂಬು ಹೃದಯದಿಂದ ಹಾರೈಸಿದರು.

  • ಸಿದ್ದರಾಮಯ್ಯನವ್ರೆ ನಿಮ್ದೇನು ಸರ್ಕಾರನಾ? ಸರ್ವಾಧಿಕಾರನಾ: ಪ್ರಹ್ಲಾದ್ ಜೋಶಿ ಪ್ರಶ್ನೆ

    ಸಿದ್ದರಾಮಯ್ಯನವ್ರೆ ನಿಮ್ದೇನು ಸರ್ಕಾರನಾ? ಸರ್ವಾಧಿಕಾರನಾ: ಪ್ರಹ್ಲಾದ್ ಜೋಶಿ ಪ್ರಶ್ನೆ

    ಹುಬ್ಬಳ್ಳಿ: ಕರಸೇವಕ ಶ್ರೀಕಾಂತ್ ಪೂಜಾರಿ ಮೇಲೆ 16 ಕೇಸ್ ಇವೆ ಎಂದು ಯಾವ ಆಧಾರದ ಮೇಲೆ ಹೇಳಿದ್ದೀರಿ? ಸಿದ್ದರಾಮಯ್ಯನವರೇ (Siddaramaiah) ನಿಮ್ದೇನು ಸರ್ಕಾರನಾ? ಸರ್ವಾಧಿಕಾರನಾ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಪ್ರಶ್ನಿಸಿ ಕಿಡಿಕಾರಿದ್ದಾರೆ.

    ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಎಲ್ಲಿದ್ದೀರಿ? ಶ್ರೀಕಾಂತ್ ಮೇಲೆ ಯಾವ ಕೇಸ್ ಇಲ್ಲ. ಜೋಶಿ ಅವರೇನು ಕಾನೂನು ತಜ್ಞರಾ ಎಂದು ಕೇಳಿದ್ದರು. ನಾನು ಕಾನೂನು ತಜ್ಞ ಹೌದೋ ಅಲ್ಲವೋ ನಿಮ್ಮ ಕಡೆ ಕಾನೂನು ತಜ್ಞರು ಇದಾರೋ ಇಲ್ವೋ ಕೇಸ್ ಏನಾಗಿದೆ ಅನ್ನೋದನ್ನ ತಿಳಿದುಕೊಳ್ಳಬೇಕಿತ್ತು. ಈ ತರಹ ಮಾತಾಡೋದು ಒಬ್ಬ ಮುಖ್ಯಮಂತ್ರಿಗಳಿಗೆ ಶೋಭೆ ತರುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಶ್ರೀಕಾಂತ್ ಪೂಜಾರಿಗೆ ರೌಡಿಶೀಟರ್‌ನಿಂದ ಮುಕ್ತಿ ಕೊಟ್ಟಿದ್ದು ನಮ್ಮ ಸರ್ಕಾರ: ದಿನೇಶ್ ಗುಂಡೂರಾವ್

    ಒಂದು ಕೋಮಿನ ವೋಟಿಗಾಗಿ ತುಷ್ಟೀಕರಣದ ಪರಾಕಾಷ್ಠೆ ಹೆಚ್ಚಾಗಿದೆ. ರಾಮಮಂದಿರಕ್ಕೆ ಯಾರೂ ಬರಬಾರದು ಎಂದು ದುಷ್ಟ ಯೋಜನೆ ಸಿದ್ದರಾಮಯ್ಯ ಸರ್ಕಾರದ್ದಾಗಿದೆ. ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಕಾಂಗ್ರೆಸ್‍ನವರು ಭಯ ಹುಟ್ಟಿಸುತ್ತಿದ್ದಾರೆ. ಇದು ಸರ್ಕಾರ ನಡೆಸೋ ರೀತಿನಾ? ದೇಶದಲ್ಲಿ ಹಿಂದೂಗಳ ಸಂಖ್ಯೆ ಹೆಚ್ಚಿದೆ ಎಂದು ಎಚ್ಚರಿಸಿದ್ದಾರೆ.

    ಹುಚ್ಚು ಹುಚ್ಚಾಗಿ ಯಾರನ್ನೋ ಅರೆಸ್ಟ್ ಮಾಡಿದ್ದಾರೆ. ಇದು ಸರ್ಕಾರದ ನಡೆಸುವ ರೀತಿಯಲ್ಲ. ಒಂದು ಕೋಮಿನ ಮತಕ್ಕಾಗಿ, ರಾಮ ಮಂದಿರ ಉದ್ಘಾಟನೆ ಆಗುತ್ತದೆ ಎಂಬ ಹೊಟ್ಟೆಕಿಚ್ಚಿನಿಂದ ಏನೋ ಮಾಡಲು ಹೋಗಿ ಕಾಂಗ್ರೆಸ್ ಕೈ ಸುಟ್ಟುಕೊಂಡಿದೆ. ಸಿದ್ದರಾಮಯ್ಯ ಹೀಗೆ ಆದ್ರೆ, ಈ ಬಾರಿನೂ ಕಾಂಗ್ರೆಸ್ ದೇಶದಲ್ಲಿ ಅಧಿಕೃತ ವಿರೋಧ ಪಕ್ಷ ಆಗುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

    ಶ್ರೀಕಾಂತ್ ಪೂಜಾರಿಯವರಿಗೆ ಬೇಲ್ ಆಗಿರುವುದರಿಂದ ಹೋರಾಟ ಮುಂದುವರಿಸಬೇಕೋ ಬೇಡವೋ ಎಂಬುದನ್ನು ತೀರ್ಮಾನ ಮಾಡುತ್ತೇವೆ. ಕಾಂಗ್ರೆಸ್‍ನ ರಾಜಕೀಯ ಹೋರಾಟ ಆರೋಪಕ್ಕೆ, ನೀವು ಏನನ್ನೂ ರಾಜಕೀಯ ಲಾಭಕ್ಕೆ ಮಾಡೋದಿಲ್ವಾ? ಶ್ರೀಕಾಂತ್ ಪೂಜಾರಿಯವರನ್ನು ಅರೆಸ್ಟ್ ಮಾಡಿರೋದು ರಾಜ್ಯದ ಹಿತ ದೃಷ್ಟಿಯಿಂದನಾ? ಎಂದು ಕಿಡಿಕಾರಿದ್ದಾರೆ.

    ಇನ್ನೂ ಮ್ಯೂಸಿಯಂಗಳಿಗೆ ಬಾಂಬ್ ಬೆದರಿಕೆ ವಿಚಾರದ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಯಾವುದೇ ತಪ್ಪುಗಳು ನಡೆಯದಂತೆ ಸಮಗ್ರ ತನಿಖೆ ಮಾಡಬೇಕು. ಮೇಲ್ ಹಾಕಿದವರು ಯಾವ ಜಾತಿಯವರು ಎಂದು ನೋಡದೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆ – ಹೆಚ್‌.ಆರ್‌.ರಂಗನಾಥ್‌ಗೆ ಆಹ್ವಾನ

  • ಕರಸೇವಕನ ಬಂಧನ ಪ್ರಕರಣದಲ್ಲಿ ಜೋಶಿ ಕೈವಾಡವಿದೆ: ಶೆಟ್ಟರ್ ಗಂಭೀರ ಆರೋಪ

    ಕರಸೇವಕನ ಬಂಧನ ಪ್ರಕರಣದಲ್ಲಿ ಜೋಶಿ ಕೈವಾಡವಿದೆ: ಶೆಟ್ಟರ್ ಗಂಭೀರ ಆರೋಪ

    ಹುಬ್ಬಳ್ಳಿ: ಕರ ಸೇವಕನ ಬಂಧನ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ (Pralhad Joshi) ಕೈವಾಡ ಇದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಗಂಭೀರ ಆರೋಪ ಮಾಡಿದ್ದಾರೆ.

    ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 30 ವರ್ಷದ ಹಿಂದಿನ ಪ್ರಕರಣವನ್ನು ಪರಿಷ್ಕರಣೆ ಮಾಡಿಕೊಂಡು ವಾಪಸ್ ಪಡೆಯಬೇಕಿತ್ತು. ಈಗ ಹೋರಾಟ ಮಾಡುವವರು ಕರಸೇವಕರ ಮೇಲಿನ ಕೇಸ್ ವಾಪಸ್ ಪಡೆಯೋ ಪ್ರಯತ್ನ ಯಾಕೆ ಮಾಡಲಿಲ್ಲ? 7-8 ವರ್ಷ ಬಿಜೆಪಿ (BJP) ಅಧಿಕಾರದಲ್ಲಿತ್ತು. ನಾನು ಕೇವಲ 10 ತಿಂಗಳು ಸಿಎಂ ಆಗಿದ್ದು, ಹಿಂದೆ ಪ್ರಯತ್ನಿಸಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಶ್ರೀಕಾಂತ್ ಪೂಜಾರಿ ಮೇಲೆ 16 ಕೇಸ್ ಇತ್ತು, ಈಗಲೂ ಇದೆ ಎಂದು ನಾವು ಹೇಳ್ತಿಲ್ಲ: ಪರಮೇಶ್ವರ್

    ರ್.ಅಶೋಕ್ ಅವರು ಹೋಮ್ ಮಿನಿಸ್ಟರ್ ಆಗಿದ್ದರು. ಆಗ ಯಾಕೆ ಕೇಸ್ ವಾಪಸ್ ಪಡೆಯಲಿಲ್ಲ? ಲೋಕಸಭಾ ಚುನಾವಣೆಯಲ್ಲಿ ಗೆಲ್ಲೋಕೆ ಬಿಜೆಪಿ ಪ್ಲ್ಯಾನ್ ಮಾಡುತ್ತಿದೆ. ಇದೆಲ್ಲ ಚುನಾವಣೆ ಗಿಮಿಕ್, ಇದರಲ್ಲಿ ಪ್ರಹ್ಲಾದ್ ಜೋಶಿಯವರ ಕೈವಾಡ ಇದೆ ಎಂದು ಆರೋಪಿಸಿದ್ದಾರೆ.

    ಸರ್ಕಾರದ ನಿರ್ದೇಶನದಲ್ಲಿ ಕರ ಸೇವಕನ ಬಂಧನ ಆಗಿಲ್ಲ. ಹಿಂದೂ ಮುಸ್ಲಿಂ ಡಿವೈಡ್ ಮಾಡೋದೇ ನಿಮ್ಮ ಉದ್ದೇಶವಾಗಿದೆ. ಮಣಿಕಂಠ ರಾಠೋಡ್ ವಿರುದ್ಧ ಹತ್ತಾರು ಕ್ರಿಮಿನಲ್ ಕೇಸ್‍ಗಳಿವೆ. ಅಂಥವರಿಗೆ ಬಿಜೆಪಿಯವರು ಟಿಕೆಟ್ ಕೊಟ್ಟಿದ್ದರು. ಈಗ ಧಾರ್ಮಿಕ ವಿಚಾರಗಳ ಮೇಲೆ ಅಧಿಕಾರಕ್ಕೆ ಬರುತ್ತೇವೆ ಎಂದರೆ ಅದು ಭ್ರಮೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭಾವನಾತ್ಮಕ ವಿಚಾರಗಳಿಗೆ ಕೈ ಹಾಕಿ ಬಿಜೆಪಿ ಕೈಸುಟ್ಟುಕೊಂಡಿದೆ. ಈಗಲೂ ಅವರು ಏನೇ ಭಾವನಾತ್ಮಕ ವಿಚಾರ ಮಾಡಲು ಹೋದರೂ ಅವರಿಗೆ ಲಾಭ ಆಗುವುದಿಲ್ಲ ಎಂದಿದ್ದಾರೆ.

    ಅಯೋಧ್ಯೆಯ ರಾಮಮಂದಿರಕ್ಕೆ ಆಹ್ವಾನ ಇಲ್ಲದ ವಿಚಾರವಾಗಿ, ನನ್ನನ್ನು ಕರೆಯಿರಿ ಎಂದು ಎಲ್ಲೂ ಹೇಳಿಲ್ಲ. ಸಾಂವಿಧಾನಿಕ ಹುದ್ದೆಯಲ್ಲಿದ್ದವರ ಬಗ್ಗೆ ಸಂಸದೀಯ ಪದ ಬಳಸಿ ಬಿಜೆಪಿಯವರು ಟೀಕೆ ಮಾಡಲಿ. ಒಂದು ವೇಳೆ ಪ್ರಧಾನಿ ಮೋದಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಲು ಆಗುತ್ತಾ? ಕೀಳು ಮಟ್ಟದ ಪದ ಬಳಸಿದರೆ ಹೇಗೆ? ಎಂದು ಬಿಜೆಪಿಗರಿಗೆ ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಕೇಸ್‌ – ಕರಸೇವಕ ಶ್ರೀಕಾಂತ್‌ ಪೂಜಾರಿಗೆ ಜಾಮೀನು

  • ‘ಕಾಟೇರ’ ಸಿನಿಮಾ ವೀಕ್ಷಿಸಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

    ‘ಕಾಟೇರ’ ಸಿನಿಮಾ ವೀಕ್ಷಿಸಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

    ರ್ಶನ್ (Darshan) ನಟನೆಯ ಕಾಟೇರ (Katera) ಸಿನಿಮಾ ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ. ಅಲ್ಲದೇ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗುತ್ತಿದೆ. ಸಿನಿಮಾ ರಂಗದ ಅನೇಕ ಗಣ್ಯರಷ್ಟೇ ಅಲ್ಲ, ರಾಜಕಾರಣಿಗಳು ಕೂಡ ಸಿನಿಮಾ ವೀಕ್ಷಿಸಿ ಮೆಚ್ಚುಗೆಯನ್ನು ಸೂಚಿಸುತ್ತಿದ್ದಾರೆ. ಕಾಟೇರ ಸಿನಿಮಾ ವೀಕ್ಷಣೆ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Prahlad Joshi), ದರ್ಶನ್ ನಟನೆಗೆ ಫುಲ್ ಫಿದಾ ಆಗಿದ್ದಾರೆ.  ಚಿತ್ರತಂಡಕ್ಕೂ ಶುಭಾಶಯ ತಿಳಿಸಿದ್ದಾರೆ.

    ಈ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಜೋಶಿ, ‘ಚಂದನವನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಕ್‌ಲೈನ್ ವೆಂಕಟೇಶ ಅವರ ನಿರ್ಮಾಣದಲ್ಲಿ ತರುಣ್ ಸುಧೀರ್ ಅವರ ನಿರ್ದೇಶನದಲ್ಲಿ ಮೂಡಿಬಂದ ಕಾಟೇರ ಚಲನಚಿತ್ರವನ್ನು ಹುಬ್ಬಳ್ಳಿಯಲ್ಲಿ ವೀಕ್ಷಿಸಿದೆನು. ರೈತರಿಗೆ ಪ್ರತಿಯೊಬ್ಬರೂ ನೀಡಬೇಕಾದ ಪ್ರಾಮುಖ್ಯತೆ, ಸಮಾಜದಲ್ಲಿ ಸರ್ವರನ್ನೂ ಸಮಾನವಾಗಿ ಕಾಣಬೇಕೆನ್ನುವ ಸಂದೇಶವನ್ನು ಚಲನಚಿತ್ರದ ಮೂಲಕ ಅಚ್ಚುಕಟ್ಟಾಗಿ ಅದ್ಭುತವಾಗಿ ತೋರಿಸಲಾಗಿದೆ. ದರ್ಶನ್ ಅವರ ಅದ್ಭುತ ನಟನೆ ಅಭಿಮಾನಿಗಳನ್ನು ಚಲನಚಿತ್ರ ಪ್ರಿಯರನ್ನು ಮತ್ತೊಮ್ಮೆ ರಂಜಿಸುವುದರ ಜೊತೆಗೆ ಹೊಸ ಸಂದೇಶವನ್ನು ಸಾರಿದ್ದಾರೆ. ಚಲನಚಿತ್ರ ಯಶಸ್ಸು ಕಾಣಲಿ ಎಂದು ಕಾಟೇರ ಚಲನಚಿತ್ರ ತಂಡಕ್ಕೆ ಶುಭ ಹಾರೈಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

    ಜೋಶಿ ಅವರು ಸಿನಿಮಾ ವೀಕ್ಷಿಸುವ ಸಮಯದಲ್ಲಿ ಶಾಸಕ ಮಹೇಶ್‌ ಟೆಂಗಿನಕಾಯಿ, ವಿಧಾನ ಪರಿಷತ್ ಮಾಜಿ ಸದಸ್ಯರಾದ ನಾಗರಾಜ್ ಛಬ್ಬಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಂದಗೋಳಮಠ ಸೇರಿದಂತೆ ಹಲವರು ಹಾಜರಿದ್ದನ್ನು ಅವರು ನೆನಪಿಸಿಕೊಂಡಿದ್ದಾರೆ. ಈ ಹಿಂದೆಯೂ ಪ್ರಹ್ಲಾದ್ ಜೋಶಿ ಅವರು ಕಾಟೇರ ಸಿನಿಮಾಗೆ ಸಾಥ್ ನೀಡಿದ್ದರು. ಹಾಡು ಬಿಡುಗಡೆ ಮಾಡಿ ಶುಭ ಹಾರೈಸಿದ್ದರು.

  • ಯಡಿಯೂರಪ್ಪ, ವಿಜಯೇಂದ್ರ ಬಗ್ಗೆ ಹಗುರವಾಗಿ ಮಾತನಾಡೋದು ಸರಿಯಲ್ಲ: ಯತ್ನಾಳ್‌ಗೆ ಜೋಶಿ ಕಿವಿಮಾತು

    ಯಡಿಯೂರಪ್ಪ, ವಿಜಯೇಂದ್ರ ಬಗ್ಗೆ ಹಗುರವಾಗಿ ಮಾತನಾಡೋದು ಸರಿಯಲ್ಲ: ಯತ್ನಾಳ್‌ಗೆ ಜೋಶಿ ಕಿವಿಮಾತು

    ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿ.ವೈ.ವಿಜಯೇಂದ್ರ (Vijayendra) ಅವರನ್ನು ರಾಷ್ಟ್ರೀಯ ನಾಯಕರು ಆಯ್ಕೆ ಮಾಡಿದ್ದಾರೆ. ಈ ಆಯ್ಕೆ ಬಗ್ಗೆ ವಿರೋಧ ಮಾಡೋದು ತಪ್ಪು ಎಂದು ದಾವಣಗೆರೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi), ಶಾಸಕ ಯತ್ನಾಳ್‌ಗೆ ಕಿವಿಮಾತು ಹೇಳಿದರು.

    ನಗರದ ಜಿಎಂಐಟಿ‌ ಅತಿಥಿಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕ ಯತ್ನಾಳ್ (Basanagouda Patil Yatnal) ಅವರು ಬಿ.ಎಸ್.ಯಡಿಯೂರಪ್ಪ (Yediyurappa) ಹಾಗೂ ಬಿ.ವೈ.ವಿಜಯೇಂದ್ರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ಯಾರೇ ಆಗಲಿ ಪಕ್ಷದ ವಿರುದ್ಧವಾಗಿ ಬಹಿರಂಗವಾಗಿ ಮಾತನಾಡಬಾರದು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ಕ್ರಿಯಾ ಯೋಜನೆ ರೂಪಿಸಿ – ಸಿಎಂ ಸೂಚನೆ

    ಏನೇ ಸಮಸ್ಯೆ ಇದ್ದರೂ ಯಾರೇ ಆಗಲಿ ರಾಜ್ಯಾಧ್ಯಕ್ಷರ ಬಳಿ ದೂರು ನೀಡಬೇಕು. ಇಲ್ಲವಾದ್ರೆ ಕೇಂದ್ರ ನಾಯಕರ ಜೊತೆ ಮಾತನಾಡಲಿ. ವರಿಷ್ಠರಾದ ಅಮಿತ್ ಶಾ, ರಾಜನಾಥ್ ಸಿಂಗ್, ರಾಷ್ಟ್ರೀಯ ಅಧ್ಯಕ್ಷರಿದ್ದಾರೆ ಅವರ ಜೊತೆ ಮಾತನಾಡಲಿ. ಈ ಬಗ್ಗೆ ಹೈಕಮಾಂಡ್ ನಾಯಕರು ಕ್ರಮ ಕೈಗೊಳ್ಳುತ್ತದೆ. ಆದರೆ ಹಾದಿ ಬೀದಿಯಲ್ಲಿ ಮಾತನಾಡುವುದನ್ನು ಬಿಡಬೇಕು ಎಂದರು.

    ಕನ್ನಡಪರ ಹೋರಾಟಗಾರರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕೊಟ್ಟಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ. ಡಿಜೆ ಹಳ್ಳಿ, ಕೆಜಿ ಹಳ್ಳಿ ದಾಂಧಲೆ ಮಾಡಿದವರ ಕೇಸ್ ವಾಪಸ್ ಪಡೆಯಲು ಹೇಳುವ ರಾಜ್ಯ ಸರ್ಕಾರ ಕನ್ನಡಪರ ಹೋರಾಟಗಾರರನ್ನು ಬಂಧಿಸಿರುವುದು ಸರಿಯಲ್ಲ. ಕನ್ನಡಪರ ಹೋರಾಟಗಾರರ ಹೋರಾಟ ನ್ಯಾಯಯುತವಾಗಿದೆ. ಆದರೆ ಈ ರಾಜ್ಯ ಸರ್ಕಾರ ಮತ್ತೊಮ್ಮೆ ಹೋರಾಟ ಮಾಡದಂತೆ ಎಲ್ಲ ಸೆಕ್ಷನ್ ಹಾಕಿದ್ದಾರೆ. ಕೆಜಿ ಹಳ್ಳಿ ಗಲಭೆಕೋರರು ಪೊಲೀಸರನ್ನೇ ಕೊಲ್ಲಲು ಹಾಗೂ ಪೊಲೀಸರನ್ನು ಸುಡಲು ಹೊರಟಿದ್ದರು. ಈ ಬಗ್ಗೆ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಿದೆ. ರಾಜ್ಯ ಸರ್ಕಾರ ಇಂತಹ ಇಬ್ಬಗೆಯ ನೀತಿ ಬಿಟ್ಟು ಹೋರಾಟಗಾರರನ್ನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಕನ್ನಡ ಹೋರಾಟಗಾರರ ಬಂಧನದಿಂದ ದುಃಖವಾಗಿದೆ: ಬೊಮ್ಮಾಯಿ

    ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಬುರುಡೆ ಸರ್ಕಾರ ಅಂತಾ ಆರೋಪ ಮಾಡುತ್ತಿದ್ದರು. ಆದರೆ ಅವರ ಸರ್ಕಾರದಲ್ಲೇ ಕಾಂಗ್ರೆಸ್‌ನವರಿಗೆ ಗ್ಯಾಸ್ ಕೊಡೋ ಯೋಗ್ಯತೆ ಇಲ್ಲ. ಅವರಿಗೆ ಮನೆ ಮನೆ ಗ್ಯಾಸ್ ಸಿಗುವಂತೆ ಮಾಡಿದ್ದು ಮೋದಿ ಸರ್ಕಾರ. ಪ್ರಧಾನಿ ಮೋದಿಯವರು 4 ಕೋಟಿ ಮನೆಗಳನ್ನು ಕೊಟ್ಟಿದ್ದಾರೆ. ಆದರೂ ಸಿದ್ದರಾಮಯ್ಯ ಅವರು ಬುರುಡೆ ಸರ್ಕಾರ ಅಂತಾರೆ. ತಮ್ಮ ಸರ್ಕಾರದ ನ್ಯೂನತೆಗಳನ್ನ ಮುಚ್ಚಿ ಹಾಕಲು ಈ ರೀತಿ ವಿಷಯಾಂತರ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

  • ಸಿದ್ದರಾಮಯ್ಯ ಮುಗ್ಧ ಅಲ್ಲ ಧೂರ್ತ: ಪ್ರಹ್ಲಾದ್ ಜೋಶಿ ವಾಗ್ದಾಳಿ

    ಸಿದ್ದರಾಮಯ್ಯ ಮುಗ್ಧ ಅಲ್ಲ ಧೂರ್ತ: ಪ್ರಹ್ಲಾದ್ ಜೋಶಿ ವಾಗ್ದಾಳಿ

    ಹುಬ್ಬಳ್ಳಿ: ಸಿದ್ದರಾಮಯ್ಯ (Siddaramaiah) ಮುಗ್ಧ ಅಲ್ಲ ಧೂರ್ತ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನಿಮ್ಮ ವೈಫಲ್ಯ ಮುಚ್ಚಲು ಈ ರೀತಿ ವಿವಾದ ಹುಟ್ಟು ಹಾಕೋದು ನಿಮ್ಮ ಕೆಲಸವಾ? ನಾವೇನಾದರೂ ಹಿಜಬ್ ವಿಷಯ ಎತ್ತಿದ್ವಾ? ಬಹುತೇಕ ಇಸ್ಲಾಂ ದೇಶಗಳಲ್ಲಿ ಹಿಜಬ್ ಇಲ್ಲ. ನಿಮಗ್ಯಾಕೆ ಈ ಕೆಟ್ಟ ವಿಚಾರ. ಸಿದ್ದರಾಮಯ್ಯಗೆ ಇದು ಗೊತ್ತಿಲ್ಲ ಅಂತಾ ಅಲ್ಲ. ಸಿದ್ದರಾಮಯ್ಯ ಮುದ್ಧ ಅಲ್ಲ, ಸಿದ್ದರಾಮಯ್ಯ ಧೂರ್ತರಿದ್ದಾರೆ. ಇದು‌ ನನ್ನ ಗಂಭೀರ ಆರೋಪ ಎಂದು ಗರಂ ಆಗಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪ ಶಕುನಿ ಇದ್ದ ಹಾಗೆ: ಯತ್ನಾಳ್

    ಸಿದ್ದರಾಮಯ್ಯನವರೇ ಏನ್ ಮಾಡೋಕೆ ಹೊರಟಿದ್ದೀರಿ. ನಿಮ್ದು ಮುಠ್ಠಾಳತನವೋ, ಸಮಾಜ ಒಡೆಯಲು ಅತ್ಯಂತ ತಲೆ ಕೆಟ್ಟವರ ಥರ ಹೇಳಿಕೆ ಕೊಡ್ತಿದ್ದೀರೋ. ಸಮಾಜ ಒಡೆದು ವೋಟ್ ತೆಗೆದುಕೊಳ್ಳಬೇಕು ಅನ್ನೋದಾ? ಒಂದು ಕರ್ನಾಟಕ, ಹಿಮಾಚಲ ಪ್ರದೇಶ, ತೆಲಂಗಾಣದಲ್ಲಿ ಮಾತ್ರ ನೀವಿರೋದು. ಇದು ನಿಮ್ಮ ಸ್ಥಿತಿ. ಹೀಗೆ ನೀವು ಹುಚ್ಚ ಹುಚ್ಚರಾಗಿ ಮಾತಾಡಿದ್ರೆ ಜನ ಇತಿಹಾಸದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಸದ ಬುಟ್ಟಿಗೆ ಸೇರಿಸ್ತಾರೆ ನೆನಪಿಟ್ಟುಕೊಳ್ಳಿ ಎಂದು ಎಚ್ಚರಿಸಿದ್ದಾರೆ.

    ಮಧ್ಯಪ್ರದೇಶದಲ್ಲಿ ಹನುಮಾನ್ ಚಾಲೀಸಾ ಮಾಡೋಕೆ ಹೋದ್ರು, ರಾಹುಲ್ ಗಾಂಧಿ ಜನಿವಾರ ಹಾಕಿದ್ರು. ಸಿದ್ದರಾಮಯ್ಯ 10 ಸಾವಿರ ಕೋಟಿ ಕೊಡ್ತೀನಿ ಅಂತಾರೆ. ಮನಮೋಹನ್ ಸಿಂಗ್ ಅವರು ಬಜೆಟ್ ಮೇಲೆ ಮುಸಲ್ಮಾನರಿಗೆ ಹಕ್ಕಿದೆ ಅಂತಾರೆ.‌ ಮುಸಲ್ಮಾನರನ್ನು ತಪ್ಪು ದಾರಿಗೆ ಎಳೆಯೋದು ಗೊತ್ತಾಗುತ್ತೆ. ಎಲ್ಲಿಯೂ ಹಿಜಬ್ ಬ್ಯಾನ್ ಇಲ್ಲ. ವಸ್ತ್ರ ಸಂಹಿತೆ ಬಿಟ್ಟು ಹಿಜಬ್ ಹಾಕ್ತೀವಿ ಅಂದ್ರೆ ನಾಳೆ ಒಬ್ರು ಕೇಸರಿ ಶಾಲು ಹಾಕೊಂಡು ಬರ್ತೀನಿ ಅಂತಾರೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ತೆಗೆದುಕೊಳ್ತಿದ್ದಿದ್ದಕ್ಕೆ ರಿಲೇಷನ್‍ಶಿಪ್ ಬೇಡ ಎಂದಿದ್ದೇನೆ: ಕಾರಿಯಪ್ಪ

    ಕಾಂಗ್ರೆಸ್ ಪಕ್ಷಕ್ಕೆ ಒಂದು ಸ್ಟ್ಯಾಂಡ್ ಇಲ್ಲ. ಅವರ ಸ್ಟ್ಯಾಂಡ್ ಅಂದ್ರೆ ಬಸ್ಟ್ಯಾಂಡ್ ಇದ್ದ ಹಾಗೆ. ಯಾರ ಬೇಕಾದರೂ ಏನಾದರೂ ಮಾತಾಡ್ತಾರೆ ಎಂದು ಟಾಂಗ್‌ ಕೊಟ್ಟಿದ್ದಾರೆ.

  • ಸಿದ್ದರಾಮಯ್ಯ ಮೂರ್ಖರಲ್ಲ, ತುಷ್ಟೀಕರಣದಿಂದಲೇ 2018ರಲ್ಲಿ ಅವರು ಸೋತಿದ್ದು: ಪ್ರಹ್ಲಾದ್ ಜೋಶಿ ವಾಗ್ದಾಳಿ

    ಸಿದ್ದರಾಮಯ್ಯ ಮೂರ್ಖರಲ್ಲ, ತುಷ್ಟೀಕರಣದಿಂದಲೇ 2018ರಲ್ಲಿ ಅವರು ಸೋತಿದ್ದು: ಪ್ರಹ್ಲಾದ್ ಜೋಶಿ ವಾಗ್ದಾಳಿ

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳುವಳಿಕೆಗೇಡಿ ಅಲ್ಲ, ತಿಳುವಳಿಕೆಗೇಡಿ ಥರಾ ಆಡುತ್ತಿದ್ದಾರೆ. ತುಷ್ಟೀಕರಣದಿಂದಲೇ 2018ರಲ್ಲಿ ಅವರು ಸೋತಿದ್ದು ಎಂಬುದನ್ನ ಮರೆಯಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ವಾಗ್ದಾಳಿ ನಡೆಸಿದ್ದಾರೆ.

    ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಬ್ ವಾಪಸ್ ಪಡೆಯುವ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ಹಿಜಬ್ (Hijab) ಬ್ಯಾನ್ ವಾಪಸ್ ಪಡೆಯುತ್ತೇನೆ ಎಂದು ಸಿದ್ದರಾಮಯ್ಯ ಭಾಷಣ ಮಾಡ್ತಾರೆ. ಹಿಜಬ್ ಎಲ್ಲಾ ಕಡೆ ಬ್ಯಾನ್ ಆಗಿದೆಯಾ? ಶಾಲಾ ಕಾಲೇಜುಗಳಲ್ಲಿ ಡ್ರೆಸ್ ಕೋಡ್ ಅನುಸರಿಸಬೇಕು. ಅವರು ಹಿಜಬ್ ಹಾಕೊಂಡು ಬಂದರೆ, ಇನ್ನೊಬ್ಬರು ಕೇಸರಿ ಶಾಲು ಹಾಗೂ ಮತ್ತೊಬ್ಬರು ಟೋಪಿ ಹಾಕಿಕೊಂಡು ಬರುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮದ್ಯಪ್ರಿಯರ ಬೇಡಿಕೆಗಳು ನ್ಯಾಯಯುತವಾಗಿವೆ: ಸಚಿವ ಲಾಡ್

    ಬಣ್ಣದ ಆಧಾರದ ಮೇಲೆ ಗುರುತಿಸಿಕೊಳ್ಳಬೇಕಾ? ಎಲ್ಲಾ ಕಡೆ ಹಿಜಬ್ ನಿಷೇಧ ಮಾಡಲಾಗಿದೆಯೇ? ಬೇಕಾದ ಕಡೆ ಹಾಕಿಕೊಳ್ಳಲಿ, ಆದರೆ ಶಾಲೆಗಳಲ್ಲಿ ಬೇಡ ಅಷ್ಟೇ. ಸಿದ್ದರಾಮಯ್ಯ ಇದನ್ನ ತಿಳಿದುಕೊಳ್ಳಬೇಕು ಅಥವಾ ತಿಳಿದು ತಿಳಿಯದವರಂತೆ ಮಾತಾಡ್ತಿದ್ದಾರೋ ಗೊತ್ತಿಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.

    ಹಿಜಬ್ ಶಾಲಾ-ಕಾಲೇಜುಗಳಲ್ಲಿ ಮಾತ್ರ ನಿಷೇಧ ಇದೆ. ಅಲ್ಲಿ ಸಮವಸ್ತ್ರ ಇರುತ್ತದೆ. ಅದನ್ನು ಅನುಸರಿಸಬೇಕು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಖಾಸಗಿ ಆಸ್ಪತ್ರೆ ಮಾಲೀಕನೂ ಆಗಿರುವ ಬಿಜೆಪಿ ಮುಖಂಡನಿಗೆ ಕೊರೊನಾ ಪಾಸಿಟಿವ್

  • ರಾಹುಲ್ ಗಾಂಧಿ ಚೈಲ್ಡಿಶ್ ಹೇಳಿಕೆ ಕೊಡೋದು ಬಿಡಬೇಕು: ಪ್ರಹ್ಲಾದ್ ಜೋಶಿ

    ರಾಹುಲ್ ಗಾಂಧಿ ಚೈಲ್ಡಿಶ್ ಹೇಳಿಕೆ ಕೊಡೋದು ಬಿಡಬೇಕು: ಪ್ರಹ್ಲಾದ್ ಜೋಶಿ

    ಬೆಂಗಳೂರು: ಸಂಸತ್ (Parliament) ಮೇಲಿನ ದಾಳಿಗೆ ನಿರುದ್ಯೋಗ ಕಾರಣ ಎಂಬ ರಾಹುಲ್ ಗಾಂಧಿ ಹೇಳಿಕೆ ಚೈಲ್ಡಿಶ್ ಹೇಳಿಕೆ ಅಂತ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಹೇಳಿಕೆ ಚೈಲ್ಡಿಶ್ ಹೇಳಿಕೆ. ನಿರುದ್ಯೋಗ ಸಮಸ್ಯೆ ಬಗ್ಗೆ ಚರ್ಚೆ ಆಗಲಿ ಬೇಡ ಅನ್ನೊಲ್ಲ. ನಿರುದ್ಯೋಗ ಇದೆ ಅಂತ ಹೇಳಿ ಕೊಲೆ ಮಾಡ್ತೀನಿ, ಎಂಪಿಯನ್ನ, ಕೊಲೆ ಮಾಡ್ತೀನಿ ಅಂದ್ರೆ. ಕರ್ನಾಟಕದಲ್ಲಿ ನಿರುದ್ಯೋಗ ಇಲ್ಲವಾ? ಛತ್ತೀಸ್ಗಢದಲ್ಲಿ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಇತ್ತು ಅಲ್ಲಿ ನಿರುದ್ಯೋಗ ಇಲ್ಲವಾ. ನಿರುದ್ಯೋಗ ಇದೆ ಅಂತ ದೇಶದ ವಿರೋಧಿ, ದೇಶದ್ರೋಹಿ, ಟೆರರಿಸ್ಟ್ ಜೊತೆ ಲಿಂಕ್ ಇಟ್ಟುಕೊಳ್ಳುವ ಸಂಘಟನೆ ಜೊತೆ ಹೀಗೆ ಮಾಡೋಕೆ ನಿಮ್ಮ ಬೆಂಬಲ ಇದೆಯಾ ರಾಹುಲ್ ಗಾಂಧಿ ಅಂತ ಪ್ರಶ್ನೆ ಮಾಡಿದ್ರು.

    ಮರ್ಡರ್ ಮಾಡಿದವನಿಗೂ ಅವನದ್ದೇ ಲಾಜಿಕ್ ಇರತ್ತೆ. ಆದರೆ ಇದನ್ನ ಸಮಾಜ ಒಪ್ಪುತ್ತಾ? ರಾಹುಲ್ ಗಾಂಧಿ ಎಷ್ಟು ಚೈಲ್ಡಿಶ್ ಆಗಿ ಮಾತಾಡ್ತಾ ಇದ್ದೀರಾ. ಮೋದಿ ವಿರೋಧ ಮಾಡೋ ಭರದಲ್ಲಿ ರಾಷ್ಟ್ರದ್ರೋಹಿಗಳನ್ನ ಸಮರ್ಥನೆ ಮಾಡಿಕೊಳ್ತೀರಾ. ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge), ಸೋನಿಯಾ ಗಾಂಧಿ (Sonia Gandhi), ರಾಹುಲ್ ಗಾಂಧಿ ಹೇಳಿಕೆ ಬಗ್ಗೆ ಸ್ಪಷ್ಟನೆ ಕೊಡಬೇಕು. ರಾಹುಲ್ ಹೇಳಿಕೆ ಇನ್ ಮೆಚ್ಯೂರ್ಡ್ ಹೇಳಿಕೆ. ನಿರುದ್ಯೋಗದ ಬಗ್ಗೆ ಪ್ರತ್ಯೇಕ ಚರ್ಚೆ ಮಾಡಲಿ. ಅದಕ್ಕೆ ಉತ್ತರ ಕೊಡೋಕೆ ನಾವು ತಯಾರು ಇದ್ದೇವೆ. ಜಗತ್ತಿನಲ್ಲಿ ವೇಗವಾಗಿ ಬೇಳೆಯುತ್ತಿರೋ ಆರ್ಥಿಕ ನಮ್ಮದು. ಉದ್ಯೋಗ ಸಿಗದೇ ಆರ್ಥಿಕತೆ ಬೆಳೆಯುತ್ತದೆಯಾ? ಯಾರಾದ್ರು ನಾಳೆ ಮರ್ಡರ್ ಮಾಡಿದ್ರು, ರೇಪ್ ಮಾಡಿದ್ರು ಆಗ ಅವನಿಗೆ ಕೆಲಸ ಸಿಗಲಿಲ್ಲ. ಅದಕ್ಕೆ ಮಾಡಿದ ಅಂತ ಹೇಳಿದ್ರೆ ಅದಕ್ಕೆ ಸಮರ್ಥನೆ ಇದೆಯಾ? ಸಮಾಜವನ್ನು ಯಾವ ದಿಕ್ಕಿನಲ್ಲಿ ತೆಗೆದುಕೊಂಡು ಹೋಗೋಕೆ ಮಾಡ್ತಿದ್ದೀರಾ? ಈ ರೀತಿ ಸಮರ್ಥನೆ ಮಾಡೋದು ದೇಶಕ್ಕೆ ಮಾಡೋ ಅನ್ಯಾಯ ಅಂತ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಂಸತ್‌ ಮೇಲಿನ ದಾಳಿ ಗಂಭೀರವಾದದ್ದು; ಚರ್ಚೆ ಬೇಡ, ವಿಸ್ತೃತ ತನಿಖೆಯಾಗಲಿ: ಪ್ರಧಾನಿ ಮೋದಿ ಮೊದಲ ಪ್ರತಿಕ್ರಿಯೆ

    ಮೋದಿ (Narendra Modi) ಜನಪ್ರಿಯತೆ ಏನು, ಕಾಂಗ್ರೆಸ್ ಜನಪ್ರಿಯತೆ ಏನು ಅಂತ ಜನ ನೋಡಿದ್ದಾರೆ. ಕಾಂಗ್ರೆಸ್ ಸುದೈದಿಂದ ತೆಲಂಗಾಣದಲ್ಲಿ ರಾಹುಲ್ ಗಾಂಧಿ ಜಾಸ್ತಿ ಪ್ರಚಾರ ಮಾಡಲಿಲ್ಲ. ಅದೇ ನಮಗೆ ಬೇಜಾರ್ ಆಗಿದ್ದು. ರಾಹುಲ್ ಗಾಂಧಿ ತೆಲಂಗಾಣದಲ್ಲಿ ಓಡಾಡಿದ್ರೆ ಕಾಂಗ್ರೆಸ್ ಸೋಲುತ್ತಿತ್ತು. ರಾಹುಲ್ ಪ್ರಚಾರ ಮಾಡಿದ್ರೆ ಈಗ ಬಂದಿದ್ದ ಹೆಚ್ಚು ಸ್ಥಾನದಲ್ಲಿ 10-12 ಸ್ಥಾನದಲ್ಲಿ ಸೋಲ್ತಿದ್ದರು. ಮೋದಿ ಜನಪ್ರಿಯತೆ ಕಾರಣ ನಾವು ಎಲ್ಲಾ ಕಡೆ ಗೆದ್ದಿದ್ದೇವೆ. ಲೋಕಸಭೆಯಲ್ಲಿ ಎಲ್ಲಾ ಸರ್ವೆಗಳು 330 ಸ್ಥಾನಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಅಂತ ಹೇಳ್ತಿವೆ. ರಾಹುಲ್ ಗಾಂಧಿಗೆ ಇನ್ ಮೆಚ್ಯೂರಿಟಿ. ಅವರನ್ನು ನೋಡಿ ಉಳಿದವರು ಏನೇನೋ ಹೇಳ್ತಾರೆ ಅಂತ ರಾಹುಲ್ (Rahul Gandhi) ವಿರುದ್ಧ ಜೋಶಿ ಕಿಡಿಕಾರಿದರು.

    ಸಂಸತ್ ಘಟನೆ ವಿಚಾರದಲ್ಲಿ ವಿಪಕ್ಷಗಳು ಸಂಸತ್ ಘಟನೆಯಲ್ಲಿ ರಾಜಕೀಯ ಮಾಡೋದು ಬೇಡ. ದೇಶದ ಎಲ್ಲಾ ವಿಪಕ್ಷಗಳಿಗೆ ಮನವಿ ಮಾಡ್ತೀನಿ. ರಾಜಕೀಯ ಮಾಡುವ ಬದಲಿಗೆ ಏನಾದ್ರು ಸಲಹೆಗಳನ್ನ ಕೊಡಲಿ. ಈಗಾಗಲೇ ಸ್ಪೀಕರ್ ಅವರು ಹೈ ಲೆವೆಲ್ ತನಿಖೆ ನಡೆಯುತ್ತಿದೆ. ಸುರಕ್ಷತೆ ಕ್ರಮ ಏನು ಆಗಬೇಕು ಅಂತ ಸ್ಪೀಕರ್ ಕ್ರಮ ತೆಗೆದುಕೊಳ್ತಿದ್ದಾರೆ. ಸ್ವತಃ ಸ್ಪೀಕರ್ ಇದನ್ನ ಮಾನಿಟರ್ ಮಾಡುತ್ತಿದ್ದಾರೆ. ಅವರು ಕೊಟ್ಟ ಸಲಹೆಗಳನ್ನ ಭದ್ರತೆ ವಿಚಾರದಲ್ಲಿ ಜಾರಿ ಮಾಡೋ ಕೆಲಸ ಆಗುತ್ತದೆ ಎಂದರು. ಟೆಕ್ನಾಲಜಿ ಬಳಕೆ ಮಾಡಿ ಸುರಕ್ಷತೆ ಹೆಚ್ಚಳ ಮಾಡೋ ಕೆಲಸ ಮಾಡ್ತಿದ್ದೇವೆ. ಈ ಹಿಂದೆಯೂ ಸಂಸತ್ ನಲ್ಲಿ ಅನೇಕ ಘಟನೆಗಳು ನಡೆದಿವೆ. ಸಂಸತ್ ನಲ್ಲಿ ವೆಪನ್ ತಂದಿರುವ ಉದಾಹರಣೆ ಇದೆ. ಆಗ ಅಂದಿನ ಸ್ಪೀಕರ್ ಕ್ರಮ ತೆಗೆದುಕೊಂಡಿದ್ದರು. ಅದರಂತೆ ಇಂದಿನ ಸ್ಪೀಕರ್ ಕ್ರಮ ತೆಗೆದುಕೊಳ್ತಿದ್ದಾರೆ. ಅವರು ಕೊಟ್ಟ ಮತ್ತಷ್ಟು ಸಲಹೆಗಳನ್ನು ಪರಿಗಣಿಸುತ್ತೇವೆ. ಹೀಗಾಗಿ ವಿಪಕ್ಷಗಳು ಸಂಸತ್ ಕಲಾಪ ನಡೆಸೋಕೆ ಸಹಕಾರ ನೀಡಿ ಎಂದರು.

    ಸಂಸದ ಪ್ರತಾಪ್ ಸಿಂಹ ವಿರುದ್ಧ ಕ್ರಮಕ್ಕೆ ವಿಪಕ್ಷಗಳ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರು ಯಾರೇ ಇದ್ದರು ಕ್ರಮ ತೆಗೆದುಕೊಳ್ತಾರೆ, ತನಿಖೆ ಆಗ್ತಿದೆ. ವರದಿ ಬಂದ ಮೇಲೆ ಸ್ಪೀಕರ್ ಕ್ರಮತೆಗೆದು ಕೊಳ್ತಾರೆ ಎಂದರು.

  • ಜಗದೀಶ್ ಶೆಟ್ಟರ್ ನನ್ನ ವಿರುದ್ಧ ಸ್ಪರ್ಧೆ ಮಾಡಿದ್ರೆ ಸ್ವಾಗತ: ಪ್ರಹ್ಲಾದ್ ಜೋಶಿ

    ಜಗದೀಶ್ ಶೆಟ್ಟರ್ ನನ್ನ ವಿರುದ್ಧ ಸ್ಪರ್ಧೆ ಮಾಡಿದ್ರೆ ಸ್ವಾಗತ: ಪ್ರಹ್ಲಾದ್ ಜೋಶಿ

    ಬೆಂಗಳೂರು: ಜಗದೀಶ್ ಶೆಟ್ಟರ್ (Jagadeesh Shettar) ನನ್ನ ವಿರುದ್ಧ ಸ್ಪರ್ಧೆ ಮಾಡಿದ್ರೆ ನನಗೇನೂ ತೊಂದರೆಯಿಲ್ಲ. ಸ್ಪರ್ಧೆ ಮಾಡಲಿ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಸವಾಲ್ ಹಾಕಿದ್ದಾರೆ.

    ಹುಬ್ಬಳ್ಳಿ ಧಾರವಾಡ ಕ್ಷೇತ್ರದಿಂದ ಜಗದೀಶ್ ಶೆಟ್ಟರ್ ಲೋಕಸಭೆ ಅಭ್ಯರ್ಥಿ ಆಗೋ ಇಚ್ಛೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಜೋಶಿ, ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷದ ನಾಯಕರು ಹೀಗಾಗಿ ಸಿಎಂ ಅವರು ಅವರ ಮನೆಗೆ ಹೋಗಿ ಭೇಟಿ ಕೊಟ್ಟಿದ್ದಾರೆ. ಶೆಟ್ಟರ್ ಅವರು ನನ್ನ ವಿರುದ್ಧ ಸ್ಪರ್ಧೆ ಮಾಡಲಿ. ಬಹಳ ಸಂತೋಷ. ಅವರ ಪಕ್ಷದ ಅಭ್ಯರ್ಥಿ ಯಾರು ಅಂತ ನಮ್ಮನ್ನ ಕೇಳೋದು ಬೇಡ ಎಂದರು.

    ನಾನು ಈಗ ಬಿಜೆಪಿಯ (BJP) ಹುಬ್ಬಳ್ಳಿ-ಧಾರವಾಡದಲ್ಲಿ ಎಂಪಿ ಆಗಿದ್ದೇನೆ ನಾನು ಹುಬ್ಬಳ್ಳಿಯಿಂದಲೇ ಮತ್ತೆ ಸ್ಪರ್ಧೆ ಮಾಡ್ತೀನಿ.ಶೆಟ್ಟರ್ ಬಂದರೆ ನನಗೇನೂ ಭಯ ಇಲ್ಲ. ಯಾರು ಬೇಕಾದ್ರು ಸ್ಪರ್ಧೆ ಮಾಡಬಹುದು ಎಂದು ಹೇಳಿದರು. ಇದನ್ನೂ ಓದಿ: ಜೋಶಿ ವಿರುದ್ಧ ಶೆಟ್ಟರ್ ಕಣಕ್ಕಿಳಿಸಲು ಪ್ಲಾನ್- ಲೋಕಸಭಾ ಟಿಕೆಟ್ ಆಫರ್ ಕೊಟ್ಟ ಸಿಎಂ

    ಕಾಂಗ್ರೆಸ್ ಪ್ಲಾನ್ ಏನು?: ಲೋಕಸಭಾ ಚುನಾವಣೆಗೆ (Loksabha Election) ಪ್ರಹ್ಲಾದ್ ಜೋಶಿ ವಿರುದ್ಧ ಜಗದೀಶ್ ಶೆಟ್ಟರನ್ನು ಕಣಕ್ಕಿಳಿಸಲು ಕಾಂಗ್ರೆಸ್ (Congress) ಮಾಸ್ಟರ್ ಪ್ಲಾನ್ ಮಾಡಿದೆ. ಶೆಟ್ಟರ್ ಭೇಟಿಯ ಬಳಿಕ ಸಿಎಂ ಅವರು ಈ ಗುಟ್ಟನ್ನು ಬಿಟ್ಟಕೊಟ್ಟರು. ಶೆಟ್ಟರ್ ನಿವಾಸದ ಮುಂದೆಯೇ ಲೋಕಸಭಾ ಟಿಕೆಟ್ ಆಫರ್ ಕೊಟ್ಟರು. ಶೆಟ್ಟರ್ ಗೆ ಟಿಕೆಟ್ ನೀಡುವ ವಿಚಾರವಾಗಿ ಸ್ಥಳೀಯವಾಗಿ ಕಾರ್ಯಕರ್ತರ ಮತ್ತು ಶಾಸಕರಿಂದ ಅಭಿಪ್ರಾಯ ಕೇಳುತ್ತಾ ಇದ್ದೀವಿ.ಅವರು ಕೂಡ ಆಕಾಂಕ್ಷಿ ಅಂತ ಅಂದುಕೊಂಡಿದ್ದೀವಿ ಎಂದು ಸಿಎಂ ಹೇಳಿದರು. ಈ ವೇಳೆ ಮಧ್ಯ ಪ್ರವೇಶಿಸಿ ನಗುತ್ತಲೇ ನಾನು ಆಕಾಂಕ್ಷಿ ಅಲ್ಲಾ ಎಂದು ಶೆಟ್ಟರ್ ಹೇಳಿದರು.

    ನಮ್ಮ ಶಾಸಕರು, ಕಾರ್ಯಕರ್ತರು ಯಾರಿಗೆ ಹೇಳ್ತಾರೆ ಅವರಿಗೆ ಟಿಕೆಟ್ ಕೊಡುತ್ತೇವೆ. ಪ್ರತಿ ಜಿಲ್ಲೆಯಲ್ಲೂ ಕೂಡ ಒಬ್ಬೊಬ್ಬ ಸಚಿವರನ್ನು ವೀಕ್ಷರನ್ನು ನೇಮಕ ಮಾಡಿದ್ದೇವೆ. ಅವರು ಅಭಿಪ್ರಾಯ ನನ್ನ ಕಲೆಕ್ಟ್ ಮಾಡುತ್ತಿದ್ದಾರೆ. ಅಭಿಪ್ರಾಯ ಕಲೆಕ್ಟ್ ಮಾಡಿ ಪ್ಯಾನೆಲ್ ಕೊಡಿ ಅಂತ ಹೇಳಿದ್ದೇವೆ. ಅವರಲ್ಲಿ ಯಾರು ಸೂಕ್ತ ಆಗ್ತಾರೆ ಅಂತ ಅಭ್ಯರ್ಥಿನಾ ಆಯ್ಕೆ ಮಾಡುತ್ತೇವೆ ಎಂದರು.

  • ಪ್ರತಾಪ್‌ ಸಿಂಹ ಅವ್ರು ಯಾವ ಹಿನ್ನೆಲೆಯಲ್ಲಿ ಪಾಸ್‌ ಕೊಟ್ಟರು ಎಲ್ಲವೂ ತನಿಖೆ ಆಗುತ್ತೆ: ಪ್ರಹ್ಲಾದ್‌ ಜೋಶಿ

    ಪ್ರತಾಪ್‌ ಸಿಂಹ ಅವ್ರು ಯಾವ ಹಿನ್ನೆಲೆಯಲ್ಲಿ ಪಾಸ್‌ ಕೊಟ್ಟರು ಎಲ್ಲವೂ ತನಿಖೆ ಆಗುತ್ತೆ: ಪ್ರಹ್ಲಾದ್‌ ಜೋಶಿ

    ನವದೆಹಲಿ: ಪ್ರತಾಪ್‌ ಸಿಂಹ (Pratap Simha) ಅವರು ಯಾವ ಹಿನ್ನೆಲೆಯಲ್ಲಿ ಪಾಸ್‌ ಕೊಟ್ಟರು ಎಂಬುದೆಲ್ಲವೂ ತನಿಖೆ ಆಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆಯ ಘಟನೆ ವಿಷಾದನೀಯ, ಖಂಡನೀಯ. ಘಟನೆಯ ಬಳಿಕ ಲೋಕಸಭಾ ಸ್ಪೀಕರ್ ಸಭಾ ನಾಯಕರ ಸಭೆ ನಡೆಸಿದರು. ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಿದರು. ಘಟನೆಯಿಂದ ಪಾಠ ಕಲಿತು ಮುಂದೆ ತೆಗೆದುಕೊಳ್ಳುವ ಕ್ರಮದ ಬಗ್ಗೆ ಸಮಾಲೋಚನೆ ಮಾಡಲಾಯಿತು. ಎಲ್ಲರ ಸಲಹೆ ಪಡೆದು ಸಂಸತ್ ಸುರಕ್ಷತೆ ಮಾಡುವುದು ನಮ್ಮ ಉದ್ದೇಶ. 1971 ರಿಂದ ದಾಖಲೆಗಳ ಪ್ರಕಾರ ಇಂತಹ ಘಟನೆಯಲ್ಲಿ ಸ್ಪೀಕರ್ ಕೈಗೊಂಡಿರುವ ಕ್ರಮಗಳಂತೆ ಈ ಬಾರಿಯೂ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಶಿಸ್ತಿನ ವರ್ತನೆ – ಲೋಕಸಭೆಯ 14 ಸಂಸದರು ಸಸ್ಪೆಂಡ್‌

    ಆಯುಧ ಸೇರಿದಂತೆ ಇತ್ಯಾಧಿ ವಸ್ತು ಪಡೆದು ಗ್ಯಾಲರಿಗೆ ಬಂದಿರುವುದು ಇದೆ. ಇಂತಹ ಘಟನೆಯಲ್ಲಿ ಅಂದಿನ ಸ್ಪೀಕರ್ ತೆಗೆದುಕೊಂಡ‌ ಪರಂಪರೆಯನ್ನು ಪರಿಶೀಲಿಸಿ ಅಂತೆಯೇ ಈ ಬಾರಿಯೂ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ. ಗೃಹ ಸಚಿವಾಲಯಕ್ಕೆ ಪತ್ರ ಬರೆದು ಉನ್ನತ ತನಿಖೆಗೆ ಸ್ಪೀಕರ್ ಆದೇಶಿಸಿದ್ದಾರೆ. ಸದನದ ಮುಖ್ಯಸ್ಥರು ಸ್ಪೀಕರ್ ಅವರ ನಿರ್ಣಯ ಅಂತಿಮ. ಭದ್ರತೆಯನ್ನು ಅವರೇ ಅಂತಿಮ ಮಾಡುತ್ತಾರೆ. ಸರ್ಕಾರದ ಪಾತ್ರ ಇಲ್ಲಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

    ತನಿಖೆಗೆ ನೀಡಿದ ಬಳಿಕ ಸದನ ಶುರುವಾಯಿತು. ಈ ವೇಳೆ ವಿರೋಧ ಪಕ್ಷಗಳ ಗಲಾಟೆ ಆರಂಭಿಸಿದವು. ಮತ್ತೆ ಸಭೆ ಕರೆದು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಿತು. ಆದರೆ ಇಂದೂ ಮತ್ತೆ ವಿಪಕ್ಷಗಳು ಗಲಾಟೆ ಆರಂಭಿಸಿವೆ. ತಪ್ಪಿತಸ್ಥರರಿಗೆ ಶಿಕ್ಷೆ ಕೊಡಿಸುವ ಕೆಲಸ ಸರ್ಕಾರ ಮಾಡಲಿದೆ. ದೇಶದ ಭದ್ರತೆಯ ವಿಚಾರದಲ್ಲಿ ಸ್ಪೀಕರ್ ಆದೇಶದಂತೆ ಕೆಲಸ ಮಾಡಲಿದೆ. ಪ್ರತಾಪ್ ಸಿಂಹ ಅವರು ಯಾವ ಹಿನ್ನೆಲೆಯಲ್ಲಿ ಪಾಸ್ ಕೊಟ್ಟರು ಎಲ್ಲವೂ ತನಿಖೆ ಆಗಲಿದೆ. ಯಾರನ್ನು ಯಾವ ಕಾರಣಕ್ಕೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ರಾಜ್ಯಸಭೆಯಿಂದ ಅಮಾನತು

    ಕ್ಷೇತ್ರದ ಜನರು ಬಂದಾಗ ಪಾಸ್ ಕೊಡುವುದು ಸಹಜ. ಪಾಸ್ ಕೊಟ್ಟ ವಿಚಾರವೂ ತನಿಖೆಗೆ ಒಳಪಡಲಿದೆ. ಮೂರು ಸಲ ಪಾಸ್ ಪಡೆದಿರುವುದು ಗೊತ್ತಿಲ್ಲ. ಮೈಸೂರಿನವರು ಎನ್ನುವ ಕಾರಣಕ್ಕೆ ಪಾಸ್ ಕೊಟ್ಟೆ ಎಂದು ನನ್ನ ಬಳಿ ಹೇಳಿದ್ದಾರೆ. ಹೀಗಾಗಿ ಇದನ್ನು ಮಹುವಾ ಮೊಯಿತ್ರಾ ಪ್ರಕರಣಕ್ಕೆ ಹೋಲಿಸಬೇಡಿ. ಇದು ಬೇರೆ ರೀತಿಯ ಪ್ರಕರಣ. ಜನಪ್ರತಿನಿಧಿಯಾಗಿ ಅವರು ಒಳ್ಳೆ ಉದ್ದೇಶದಿಂದ ಪಾಸ್ ಕೊಟ್ಟಿರುತ್ತಾರೆ.
    ಬೇರೆ ಉದ್ದೇಶಕ್ಕೆ ಬಳಕೆಯಾಗಿದೆ. ಎರಡನ್ನೂ ಹೋಲಿಸುವುದು ತಪ್ಪು ಎಂದರು.