Tag: ಪ್ರಹ್ಲಾದ್ ಜೋಶಿ

  • ಕಾಂಗ್ರೆಸ್ ಆರು ತಿಂಗಳಲ್ಲಿ ನೆಲ ಕಚ್ಚುವ ಪರಿಸ್ಥಿತಿ ತಲುಪಲಿದೆ: ಪ್ರಹ್ಲಾದ್ ಜೋಶಿ

    ಕಾಂಗ್ರೆಸ್ ಆರು ತಿಂಗಳಲ್ಲಿ ನೆಲ ಕಚ್ಚುವ ಪರಿಸ್ಥಿತಿ ತಲುಪಲಿದೆ: ಪ್ರಹ್ಲಾದ್ ಜೋಶಿ

    ಹುಬ್ಬಳ್ಳಿ: ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸಂಪೂರ್ಣ ನಿಂತಿದೆ. ಆರು ತಿಂಗಳಲ್ಲೇ ಭ್ರಷ್ಟಾಚಾರ (Corruption) ತಾಂಡವವಾಡುತ್ತಿದೆ. ಕಾಂಗ್ರೆಸ್ (Congress) ನಾಯಕರು ಬಿಜೆಪಿಗೆ 40% ಸರ್ಕಾರ ಎನ್ನುತ್ತಿದ್ದರು. ಆದರೆ ಕಾಂಗ್ರೆಸ್ ಪರಿಸ್ಥಿತಿ ಬರೀ ಆರು ತಿಂಗಳಲ್ಲಿ ಭೀಕರವಾಗಿದೆ. ನೆಲ ಕಚ್ಚುವ ಪರಿಸ್ಥಿತಿ ತಲುಪಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ.

    ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ಭಾರತ ಸರ್ಕಾರದ ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೂ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಲು ಅನುಮತಿ ಕೊಡುತ್ತಿಲ್ಲ. ಮೇಲಿನಿಂದ ಹೇಳಿದ್ದಾರೆ, ಅದಕ್ಕೆ ಪೆಂಡಿಂಗ್ ಅಂತ ಅಧಿಕಾರಿಗಳು ನೆಪ ಹೇಳುತ್ತಿದ್ದಾರೆ. ಮೇಲಿನಿಂದ ಅಂದರೆ ಯಾರು? ಯಾಕೆ ದುಡ್ಡು ಕೊಡುತ್ತಿಲ್ಲ ಎಂಬ ಬಗ್ಗೆ ಪರಿಶೀಲನೆ ಮಾಡಿ ಗುತ್ತಿಗೆದಾರರಿಗೆ ಹಣ ನೀಡಲಿ ಎಂದರು. ಇನ್ನೂ ಡಿಕೆ ಶಿವಕುಮಾರ್ (DK Shivakumar) ಮುನ್ನಡೆ ಅಥವಾ ಹಿನ್ನಡೆ ಅದು ಅವರಿಗೆ ಬಿಟ್ಟ ವಿಚಾರ. ಇದರ ಅರ್ಥ ಕೋರ್ಟ್ ಒಪ್ಪಿದೆ ಅಂತಲ್ಲಾ. ಆದರೆ ತನಿಖೆ ಮುಂದುವರೆಯಲಿದೆ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿ ರಿಪೇರಿ ಮಾಡಲಾರದಷ್ಟು ಹದಗೆಟ್ಟಿದೆ, ವಿಜಯೇಂದ್ರ ಸರಿ ಮಾಡೋಕಾಗಲ್ಲ: ಶೆಟ್ಟರ್‌ ವಾಗ್ದಾಳಿ

    ಬೆಳೆ ವಿಮೆ ಭಾರತ ಸರ್ಕಾರದ್ದು. ಆದರೆ ಬೆಳೆ ವಿಮೆ ಏಜೆನ್ಸಿ, ಪರಿಹಾರದ ಪ್ರಮಾಣ, ಎಲ್ಲವನ್ನೂ ನಿರ್ಧಾರ ಮಾಡುವುದು ರಾಜ್ಯ ಸರ್ಕಾರ. ಹೀಗಾಗಿ ತಪ್ಪಾಗಿದೆ. ಅದನ್ನು ಮರು ಪರಿಶೀಲನೆ ಮಾಡುತ್ತೇವೆ. ಹುಬ್ಬಳ್ಳಿ ವಿಮಾನ ನಿಲ್ದಾಣ ಅಭಿವೃದ್ಧಿ ಮೊದಲಿನಿಂದಲೂ ಚಿಂತನೆಯಿದೆ. ಈಗ 324 ಕೋಟಿ ರೂ. ಯೋಜನೆಯ ಪ್ಲಾನ್ ಸಿದ್ಧವಾಗಿದೆ. ಇದಕ್ಕೆ ಅನುಮೋದನೆ ಪಡೆದು ಟೆಂಡರ್ ಕರೆಯಲಾಗುತ್ತದೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ತಂದೆ-ತಾಯಿಯನ್ನು ಸಾಕುವವರೇ ಹೆಣ್ಣು ಮಕ್ಕಳು: ಭ್ರೂಣಹತ್ಯೆ ವಿರುದ್ಧ ಎಂಬಿ ಪಾಟೀಲ್ ಕಿಡಿ

  • ರಾಜ್ಯ ಸರ್ಕಾರ ಲೋಕಸಭೆ ಚುನಾವಣೆಗೆ ಅನೈತಿಕ ಮಾರ್ಗದಿಂದ 1,000 ಕೋಟಿ ಸಂಗ್ರಹಕ್ಕೆ ಮುಂದಾಗಿದೆ: ಜೋಶಿ

    ರಾಜ್ಯ ಸರ್ಕಾರ ಲೋಕಸಭೆ ಚುನಾವಣೆಗೆ ಅನೈತಿಕ ಮಾರ್ಗದಿಂದ 1,000 ಕೋಟಿ ಸಂಗ್ರಹಕ್ಕೆ ಮುಂದಾಗಿದೆ: ಜೋಶಿ

    ಹುಬ್ಬಳ್ಳಿ: ರಾಜ್ಯ ಸರ್ಕಾರ ಪಂಚ ರಾಜ್ಯ ಮತ್ತು ಲೋಕಸಭೆ ಚುನಾವಣೆಗೆ (Lok Sabha Election) ಅನೈತಿಕ ಮಾರ್ಗದಿಂದ 1,000 ಕೋಟಿ ಹಣ ಸಂಗ್ರಹಕ್ಕೆ ಮುಂದಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಆರೋಪಿಸಿದ್ದಾರೆ.

    ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಐಟಿ ದಾಳಿ ಆಗಿದೆ. ಒಬ್ಬರ ಮನೆಯಲ್ಲಿ 42 ಕೋಟಿ ರೂ., ಇನ್ನೊಬ್ಬರ ಮನೆಯಲ್ಲಿ 45 ಕೋಟಿ ಹಣ ಸಿಕ್ಕಿದೆ. ಇದು ಕಾಂಗ್ರೆಸ್ ಮುಖಂಡರ ದುಡ್ಡು ಎಂದು ಸಂತೋಷ್ ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ಮೊದಲನೇ ದುಡ್ಡು ಕಾಂಗ್ರೆಸ್‌ನ (Congress) ಭ್ರಷ್ಟಾಚಾರ ಹಣ ಅನ್ನೋದು ಜನಜನಿತ. ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರೇ ಕಾಂಗ್ರೆಸ್. ಇದು ಇಲ್ಲಿವರೆಗೂ ಆಗಿರೋದು. ಮುಂದೆ ಏನೇನು ಆಗುತ್ತೋ ನೋಡಬೇಕು ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ನಗದು ಅಭಿವೃದ್ಧಿ ಇಲಾಖೆ ಎಂದರೆ ಡಿಕೆಶಿಯದ್ದಾ – ಹೆಚ್‌ಡಿಕೆ ತಿರುಗೇಟು

    ಇದು ಕಮಿಷನ್ ಹಣ ಎನ್ನುವ ಆರೋಪ ಇದೆ. ಇದರ ಸಮಗ್ರ ತನಿಖೆ ಆಗಬೇಕು. ಕಾಂಗ್ರೆಸ್ ಕರಾಳ ಮುಖ ಹೊರ ಬಂದಿದೆ. ಸತ್ಯಹರಿಶ್ಚಂದ್ರ ಎನ್ನುವ ಪೋಸ್ ಕೊಟ್ಟಿದ್ದರು. ಕಾಂಗ್ರೆಸ್ ಕೈವಾಡ ಇರೋದು ಸ್ಪಷ್ಟವಾಗಿದೆ. ಕಾಂಗ್ರೆಸ್ ‌ನೈತಿಕ‌ ಅಧಃಪತನಕ್ಕೆ ಇಳದಿದೆ. ಕಾಂಗ್ರೆಸ್ ಸರ್ಕಾರ ಅಲ್ಲ ಅದು. ಕಾಂಗ್ರೆಸ್ ಕಮಿಷನ್ ಸರ್ಕಾರ. ಜನರ ಬಗ್ಗೆ ಅರಿವಿಲ್ಲ, ಕಾಳಜಿ ಇಲ್ಲ. ಕಾನೂನುಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗಿದವರು ಇದರಲ್ಲಿ ಇದ್ದಾರೆ ಎಂದು ಆರೋಪ ಮಾಡಿದ್ದಾರೆ.

    ಈ ದಾಳಿ ಹಿಂದೆ ಅಕ್ರಮ ಹಣ ವರ್ಗಾವಣೆ ನಡದಿರುವ ಅನುಮಾನ ಇದೆ. ಕಾಂಗ್ರೆಸ್ ಮುಖಂಡರೇ ಇದರಲ್ಲಿ ಇರೋದು ಎಲ್ಲರಿಗೂ ಗೊತ್ತು. ಕಾನೂನಿನ ವಿರುದ್ಧ ಇರೋದು ಕಾಂಗ್ರೆಸ್ ಪಾರ್ಟಿ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಅಂಬಿಕಾಪತಿ, ಸಂತೋಷ್‌ ಕೃಷ್ಣಪ್ಪ ರಾಜ್ಯದ ನಂ 1, ನಂ 2 ಅವರ ಬೇನಾಮಿಗಳು: ಸಿಟಿ ರವಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಷ್ಟ್ರಪತಿ ವಿಚಾರದಲ್ಲಿ ಕಾಂಗ್ರೆಸ್‌ನಿಂದ ಚಿಲ್ಲರೆ ರಾಜಕಾರಣ – ಪ್ರಹ್ಲಾದ್‌ ಜೋಶಿ ಕಿಡಿ

    ರಾಷ್ಟ್ರಪತಿ ವಿಚಾರದಲ್ಲಿ ಕಾಂಗ್ರೆಸ್‌ನಿಂದ ಚಿಲ್ಲರೆ ರಾಜಕಾರಣ – ಪ್ರಹ್ಲಾದ್‌ ಜೋಶಿ ಕಿಡಿ

    ಹುಬ್ಬಳ್ಳಿ: ನೂತನ ಸಂಸತ್ ಭವನ (New Parliament Building) ವಿಚಾರವಾಗಿ ರಾಷ್ಟ್ರಪತಿ ಹೆಸರಲ್ಲಿ ಕಾಂಗ್ರೆಸ್ ಚಿಲ್ಲರೆ ರಾಜಕಾರಣ ಮಾಡುತ್ತಿದೆ. ಚಿಲ್ಲರೆ ರಾಜಕಾರಣ ಮಾಡುವುದು ಕಾಂಗ್ರೆಸ್‌ನ ಡಿಎನ್‌ಎನಲ್ಲಿಯೇ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಹರಿಹಾಯ್ದಿದ್ದಾರೆ.

    ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿಂದು ನಡೆದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೂತನ ಸಂಸತ್‌ ಭವನ ಶಿಲಾನ್ಯಾಸ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದಲಿತರೆಂಬ ಕಾರಣಕ್ಕೆ ಆಹ್ವಾನಿಸಲಿಲ್ಲ ಎಂಬ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kgarge) ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‌ನವರು ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಅವರಿಗೆ ಏಕೆ ಬೆಂಬಲ ನೀಡಿರಲಿಲ್ಲ? ಸೋಲುತ್ತೇವೆಂದು ಗೊತ್ತಿದ್ದರೂ ಬೇರೆ ಅಭ್ಯರ್ಥಿಯನ್ನ ಕಣಕ್ಕಿಳಿಸಿದ್ದರು. ಅದು ಚಿಲ್ಲರೆ ರಾಜಕಾರಣ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.

    ಆಧುನಿಕ ವ್ಯವಸ್ಥೆಗೆ ತಕ್ಕಂತೆ ನೂತನ ಸಂಸತ್ ಭವನ ನಿರ್ಮಿಸಲಾಗಿದೆ. ಆದ್ರೆ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್‌ ನೂತನ ಸಂಸತ್ ಭವನವನ್ನ ಮೋದಿ (Modi) ಮಲ್ಟಿಫ್ಲೆಕ್ಸ್ ಎಂದು ಕೇವಲವಾಗಿ ಹೇಳಿಕೆ ನೀಡಿದ್ದಾರೆ. ವಿಶ್ವವೇ ಈ ಭವನ ಮೆಚ್ಚಿಕೊಳ್ಳುತ್ತಿದೆ, ಒಳ್ಳೆಯ ಕೆಲಸವನ್ನ ಕಾಂಗ್ರೆಸ್ ಸಹಿಸುವುದಿಲ್ಲ ಎಂಬುದಕ್ಕೆ ಇದೇ ಸಾಕ್ಷಿ. ಅವರ ಕೆಳಮಟ್ಟದ ಮನಸ್ಥಿತಿ ಏನೆಂಬುದು ಇದರಿಂದ ಅರ್ಥವಾಗುತ್ತದೆ. ಜನರೇ ಅವರಿಗೆ ತಕ್ಕಪಾಠ ಕಲಿಸುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಸೆ.26ರಂದು ಬೆಂಗಳೂರು ಬಂದ್ ಜೊತೆಗೆ ರಾಮನಗರ ಬಂದ್ – ಹಲವು ಸಂಘಟನೆಗಳ ಬೆಂಬಲ

    2011ರಲ್ಲಿ ಕಾಂಗ್ರೆಸ್ ಸರ್ಕಾರ ಜಾತಿಗಣತಿ ಮಾಡಲಿಲ್ಲ. ಆದರೀಗ ರಾಹುಲ್ ಗಾಂಧಿ (Rahul Gandhi) ಈ ಬಗ್ಗೆ ಮಾತನಾಡುತ್ತಿದ್ದಾರೆ‌. ಅತಿವೃಷ್ಟಿ , ಅನಾವೃಷ್ಟಿಯಾದರೂ ಪ್ರಧಾನಿ ಮೋದಿ ಅವರನ್ನ ತೆಗಳುತ್ತಾರೆ. ಅವರ ಜನಪ್ರಿಯತೆ ಸಹಿಸಿಕೊಳ್ಳಲಾಗದೇ ಕನಸಲ್ಲೂ ನೆನಪು ಮಾಡಿಕೊಳ್ಳುತ್ತಿದ್ದಾರೆ. ಎಲ್ಲ ವರ್ಗಗಳಿಗೂ ಪ್ರಾತಿನಿಧ್ಯ ನೀಡಿ 33% ಮಹಿಳಾ ಮೀಸಲಾತಿ ಕಲ್ಪಿಸಲಾಗುತ್ತದೆ. ಕಾಂಗ್ರೆಸ್ ಈ ಹಿಂದೆಯೂ ಮೀಸಲಾತಿ ಕಲ್ಪಿಸಿಲ್ಲ, ಮುಂದೆಯೂ ಕಲ್ಪಿಸುವುದಿಲ್ಲ. ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಮಹಿಳಾ ಮೀಸಲಾತಿ ಜಾರಿ 100% ಖಚಿತ, ಆದ್ರೆ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಅಷ್ಟೇ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಾನ್ಯ ಬರ್ತ್‌ಡೇಯಲ್ಲಿ ಕಾಣಿಸಿಕೊಂಡ ರೂಪೇಶ್ ಶೆಟ್ಟಿಗೆ ವಿಶೇಷ ಬೇಡಿಕೆಯಿಟ್ಟ ಫ್ಯಾನ್ಸ್

    ಬಿಜೆಪಿ, ಜೆಡಿಎಸ್ ಮೈತ್ರಿ ಕುರಿತು ಪ್ರತಿಕ್ರಿಯಿಸಿದ ಅವರು, ಯಾವುದೇ ರಾಜಕೀಯ ಬೆಳವಣಿಗೆಯಾದಾಗ ಚರ್ಚೆಗಳು ನಡೆಯುವುದು ಸಹಜ. ಇದೆಲ್ಲದರಿಂದ ಕೊನೆಗೆ ಅಮೃತವೇ ಹೊರಬರುತ್ತೆ ಎಂಬ ನಂಬಿಕೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಹಿಳಾ ಮೀಸಲಾತಿ ಅಂಗೀಕಾರ – ಇದು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡೋ ದಿನ: ಪ್ರಹ್ಲಾದ್ ಜೋಶಿ

    ಮಹಿಳಾ ಮೀಸಲಾತಿ ಅಂಗೀಕಾರ – ಇದು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡೋ ದಿನ: ಪ್ರಹ್ಲಾದ್ ಜೋಶಿ

    ಹುಬ್ಬಳ್ಳಿ: ಮೋದಿ (Narendra Modi) ಅವರ ಉದಾತ್ತ ಚಿಂತನೆಯಲ್ಲಿ ಮೂಡಿ ಬಂದ ಕಲ್ಪನೆ ಮಹಿಳಾ ಮೀಸಲಾತಿ (Women’s Reservation) ಇವತ್ತು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡೋ ದಿನ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಸಂತಸ ವ್ಯಕ್ತಪಡಿಸಿದ್ದಾರೆ.

    ನಾರಿ ಶಕ್ತಿ ವಂದನ್ ಅಧಿನಿಯಮ ಅಂಗೀಕಾರದ ಬಳಿಕ ತಮ್ಮ ದೆಹಲಿ ಕಚೇರಿಯಿಂದ ಹೇಳಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿರುವ ಅವರು, ಜಗತ್ತಿನ ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ಮಹಿಳಾ ಮೀಸಲಾತಿ ಇಲ್ಲ. ಭಾರತದಲ್ಲಿ ಮೋದಿ ಅವರ ನಾಯಕತ್ವದಲ್ಲಿ ಮಹಿಳಾ ಮೀಸಲಾತಿ ಜಾರಿಗೆ ಬಂದಿದೆ. 1980-90ರ ದಶಕದಿಂದ ಮಹಿಳಾ ಮೀಸಲಾತಿ ಕೂಗಿತ್ತು. ಹಲವು ಸರ್ಕಾರಗಳು ಬಂದು ಹೋದವು. ಅಟಲ್ ಬಿಹಾರಿ ವಾಜಪೇಯಿ ಬಹಳ ಪ್ರಯತ್ನ ಪಟ್ಟರು. ಸಂಪೂರ್ಣ ಬಹುಮತ ಇರದ ಕಾರಣ ಅವರ ಪ್ರಯತ್ನ ಆಗಲಿಲ್ಲ. ಮುಂದೆ ಬಂದ ಯುಪಿಎ ಸರ್ಕಾರ ಇದನ್ನು ವೋಟ್ ಬ್ಯಾಂಕ್ ರೀತಿ ನೋಡಿ, ಪ್ರಮಾಣಿಕ ಪ್ರಯತ್ನ ಮಾಡಲಿಲ್ಲ. ಇದನ್ನೂ ಓದಿ: ಬಿಜೆಪಿ ಮಹಿಳಾ ಕಾರ್ಯಕರ್ತೆಯರಿಂದ ಸನ್ಮಾನ- ತಲೆಬಾಗಿ ಕೈಮುಗಿದ ಪ್ರಧಾನಿ

    ಆದರೆ ಮೋದಿ ಅವರ ಧೃಡ ನಿಶ್ಚಯ, ರಾಜಕೀಯ ಇಚ್ಛಾ ಶಕ್ತಿ ಕಾರಣದಿಂದ ಶಾಸನಸಭೆಯಲ್ಲಿ ಮಹಿಳಾ ಮೀಸಲಾತಿ ಅಂಗೀಕಾರ ಆಗಿದೆ. ಅತ್ಯಲ್ಪ ಎಂದರೆ 2 ವೋಟ್ ವಿರೋಧಿಂದ ಅಂಗೀಕಾರ ಆಗಿದೆ. ದೇಶದ ಎಲ್ಲ ಮಹಿಳೆಯರ ಪರವಾಗಿ ಮೋದಿ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಇದನ್ನೂ ಓದಿ: ಮಂಡ್ಯ ಬಂದ್‌ಗೆ ಕರೆ – ಪ್ರತಿಭಟನಾಕಾರರಿಗೆ ಎಚ್ಚರಿಕೆ ಕೊಟ್ಟ ಗೃಹಸಚಿವ ಜಿ.ಪರಮೇಶ್ವರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾವೇರಿ ನೀರು ಹಂಚಿಕೆ ಸಂಕಷ್ಟ – ದಿಲ್ಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಭೇಟಿಯಾದ ಡಿಕೆಶಿ

    ಕಾವೇರಿ ನೀರು ಹಂಚಿಕೆ ಸಂಕಷ್ಟ – ದಿಲ್ಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಭೇಟಿಯಾದ ಡಿಕೆಶಿ

    ನವದೆಹಲಿ: ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water Issue) ಹರಿಸುವ ವಿಚಾರವಾಗಿ ಕರ್ನಾಟಕಕ್ಕೆ ಸಂಕಷ್ಟ ಎದುರಾಗಿದೆ. ಈ ಸಂಬಂಧ ಸಮಾಲೋಚನೆ ನಡೆಸಲು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಅವರನ್ನು ಭೇಟಿಯಾದರು.

    ಮಂಗಳವಾರ ತಡರಾತ್ರಿ ದೆಹಲಿಯ ಜೋಶಿ ಅವರ ನಿವಾಸದಲ್ಲಿ ಡಿಕೆಶಿ (D.K.Shivakumar) ಭೇಟಿಯಾದರು. ಈ ವೇಳೆ ಸಚಿವ ಟಿ.ಬಿ.ಜಯಚಂದ್ರ, ಸಂಸದರಾದ ಡಿ.ಕೆ.ಸುರೇಶ್‌, ಜಿ.ಸಿ.ಚಂದ್ರಶೇಖರ್‌ ಇದ್ದರು. ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕೇಂದ್ರ ಸಚಿವರ ಜೊತೆ ಸಮಾಲೋಚನೆ ನಡೆಸಿದರು. ಇದನ್ನೂ ಓದಿ: ಮಹಿಳಾ ಮೀಸಲಾತಿ ಶ್ರೇಯಸ್ಸು ಮೋದಿಗೆ ಸಲ್ಲಬೇಕು: ಕಂಗನಾ

    ಸೋಮವಾರ ನಡೆದ ಸಭೆಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡು ಪರವಾಗಿ ಆದೇಶ ಹೊರಡಿಸಿತ್ತು. ಸಿಡಬ್ಲ್ಯೂಆರ್‌ಸಿ ಆದೇಶದಂತೆ ಕರ್ನಾಟಕ ನಿತ್ಯ 5,000 ಕ್ಯೂಸೆಕ್‌ ನೀರನ್ನು 15 ದಿನಗಳ ಕಾಲ ತಮಿಳುನಾಡಿಗೆ ಹರಿಸಬೇಕು ಎಂದು ಸೂಚಿಸಿತ್ತು.

    ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕಾನೂನು ಹೋರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಸೆ.21 ರಂದು ಸುಪ್ರೀಂ ಕೋರ್ಟ್‌ನಲ್ಲಿ ಕಾವೇರಿ ಅರ್ಜಿ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ವಕೀಲರ ಜೊತೆ ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈಮುರುಗನ್‌ ಇಂದು ಸಭೆ ನಡೆಸಲಿದ್ದಾರೆ. ಇದನ್ನೂ ಓದಿ: ಸಿಎಂ ನೇತೃತ್ವದಲ್ಲಿ ದೆಹಲಿಯಲ್ಲಿ ರಾಜ್ಯದ ಎಲ್ಲಾ ಸಂಸದರೊಂದಿಗೆ ಸಭೆ: ಡಿಕೆಶಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರತ, ಇಂಡಿಯಾ ಚರ್ಚೆಯನ್ನು ನಾವು ಹುಟ್ಟು ಹಾಕಿಲ್ಲ: ಪ್ರಹ್ಲಾದ್ ಜೋಶಿ

    ಭಾರತ, ಇಂಡಿಯಾ ಚರ್ಚೆಯನ್ನು ನಾವು ಹುಟ್ಟು ಹಾಕಿಲ್ಲ: ಪ್ರಹ್ಲಾದ್ ಜೋಶಿ

    ಹುಬ್ಬಳ್ಳಿ: ಭಾರತ್ ಹೆಸರಿನ ಕುರಿತು ಕೇಂದ್ರ ಸರ್ಕಾರದ ವಕ್ತಾರರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಭಾರತ ಎನ್ನುವವರು ಭಾರತ ಎನ್ನಲಿ. ಇಂಡಿಯಾ ಎನ್ನುವವರು ಇಂಡಿಯಾ ಎನ್ನಲಿ. ಈ ಚರ್ಚೆಯನ್ನು ನಾವು ಹುಟ್ಟು ಹಾಕಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ.

    ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಡಿಯಾ ಘಟಬಂಧನ ಉಳಿಸಲು ತಮಿಳುನಾಡಿಗೆ ರಾಜ್ಯ ಸರ್ಕಾರ ನೀರು ಬಿಟ್ಟಿದೆ. ರಾಜ್ಯದ ಹಿತಾಸಕ್ತಿ ಬಲಿಕೊಟ್ಟು ಈಗ ಕೋರ್ಟ್‍ಗೆ ಹೋಗಿದ್ದಾರೆ. ಈ ಮೂಲಕ ಮೋದಿಯವರನ್ನು ಸೋಲಿಸುವ ಷಡ್ಯಂತ್ರ ಮಾಡುತ್ತಿದ್ದಾರೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಜನರು ಮೋದಿಯವರನ್ನು ಬೆಂಬಲಿಸಲಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: SC, ST ಸಮುದಾಯದ ದೌರ್ಜನ್ಯ ಕೇಸ್ ಸರಿಯಾಗಿ ನಿರ್ವಹಣೆ ಮಾಡದೇ ಹೋದ್ರೆ ಅಧಿಕಾರಿಗಳೇ ಹೊಣೆ: ಸಿಎಂ

    ನಟ ಪ್ರಕಾಶ್ ರಾಜ್ ಸೇರಿದಂತೆ ಅತೃಪ್ತ ಆತ್ಮಗಳು ಸುದ್ದಿಯಲ್ಲಿ ಇರಲು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಪರಮೇಶ್ವರ್ ಜಂಟಲ್‍ಮೆನ್ ಎಂದುಕೊಂಡಿದ್ದೆವು. ಆದರೆ ವೋಟ್‍ಬ್ಯಾಂಕ್ ಪಾಲಿಟಿಕ್ಸ್‍ಗಾಗಿ ಏನೇನೋ ಮಾತನಾಡುತ್ತಿದ್ದಾರೆ. ಹಿಂದೂ, ಸನಾತನ ಧರ್ಮ ಎನ್ನುವುದು ನಿತ್ಯನೂತನವಾದದ್ದು. ಸನಾತನ ಸಂಸ್ಕೃತಿ ಬಹಳ ಪುರಾತನವಾದದ್ದು ಎನ್ನುವುದನ್ನು ಅವರು ತಿಳಿದುಕೊಳ್ಳಲಿ ಎಂದಿದ್ದಾರೆ.

    ಬಿಜೆಪಿ ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿರುವ ವಿಚಾರವಾಗಿ, ಸರ್ಕಾರ ಯಾವುದೂ ಶಾಶ್ವತ ಅಲ್ಲ. ಪೊಲೀಸರು ಬಿಜೆಪಿ (BJP) ಕಾರ್ಯಕರ್ತರ ಮೇಲೆ ದೌರ್ಜನ್ಯ ನಿಲ್ಲಿಸಬೇಕು. ರಾಜಕಾರಣಿಗಳ ಮಾತು ಕೇಳಿ ಕೇಸ್ ಹಾಕಬಾರದು. ಹಾಗೇನಾದರೂ ನಡೆದರೆ ಪೊಲೀಸರ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

    ನಗರದಲ್ಲಿರುವ ಈದ್ಗಾ ಮೈದಾನ ಯಾವುದೇ ಒಂದು ಸಮುದಾಯಕ್ಕೆ ಸೇರಿದ್ದಲ್ಲ. ಮೈದಾನ ಪಾಲಿಕೆಯ ಆಸ್ತಿ. ಗಣೇಶ ಮೂರ್ತಿ ಇಡಲು ಪಾಲಿಕೆ ಅನುಮತಿ ಬೇಕು. ಕಳೆದ ವರ್ಷ ಕೋರ್ಟ್ ಆದೇಶದಂತೆ ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ-ಸಾಗರ ರೈಲ್ವೆ ಹಳಿ ಮೇಲೆ ತುಂಡಾಗಿ ಬಿದ್ದ ವಿದ್ಯುತ್ ತಂತಿ – ರೈಲು 2 ಗಂಟೆ ವಿಳಂಬ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೋಮಶೇಖರ್, ಹೆಬ್ಬಾರ್ ಪಕ್ಷ ಬಿಟ್ಟು ಹೋಗಲ್ಲಾ ಎಂದಿದ್ದಾರೆ: ಪ್ರಹ್ಲಾದ್ ಜೋಶಿ

    ಸೋಮಶೇಖರ್, ಹೆಬ್ಬಾರ್ ಪಕ್ಷ ಬಿಟ್ಟು ಹೋಗಲ್ಲಾ ಎಂದಿದ್ದಾರೆ: ಪ್ರಹ್ಲಾದ್ ಜೋಶಿ

    ಹುಬ್ಬಳ್ಳಿ: ಸೋಮಶೇಖರ್ (S.T.Somshekar), ಹೆಬ್ಬಾರ್ (Shivaram Hebbar) ಪಕ್ಷ ಬಿಟ್ಟು ಹೋಗಲ್ಲಾ ಎಂದಿದ್ದಾರೆ. ಸದ್ಯದ‌ ಮಟ್ಟಿಗೆ ನನಗೆ ಹೆಚ್ಚಿನ ಮಾಹಿತಿಯಿಲ್ಲ. ಈ ಬಗ್ಗೆ ರಾಜ್ಯಾಧ್ಯಕ್ಷರೊಂದಿಗೆ ಮಾತಾಡಿದ್ದೇನೆ. ಆ ರೀತಿ ಯಾವುದೇ ಬೆಳವಣಿಗೆ ಆಗಿಲ್ಲಾ ಎಂದಿದ್ದಾರೆ ಎಂದು ಬಾಂಬೆ ಬಾಯ್ಸ್ ಕಾಂಗ್ರೆಸ್ (Congress) ಸೇರ್ಪಡೆ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಸ್ಪಷ್ಟನೆ ನೀಡಿದ್ದಾರೆ.

    ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ನಾಳೆ ಏನಾಗುತ್ತೆ ಅಂತ ಹೇಳಲು ನಾನು ಭವಿಷ್ಯಗಾರ ಅಲ್ಲ. ನನಗೆ ಇರುವ ಮಾಹಿತಿ ಪ್ರಕಾರ ಯಾರೂ ಬಿಜೆಪಿ ಬಿಟ್ಟು ಹೋಗಲ್ಲ. ಮುನೇನಕೊಪ್ಪ ಕೂಡ ನನ್ನೊಂದಿಗೆ ಮಾತಾಡಿದ್ದು, ಅವರು ಪಕ್ಷ ತೊರೆಯಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ದೇಗುಲಗಳಿಗೆ ರಿಲೀಸ್ ಮಾಡಿದ್ದ ಅನುದಾನಕ್ಕೆ ಬ್ರೇಕ್

    ಮೋದಿಯವರ ನಾಯಕತ್ವ, ಬಿಜೆಪಿ ಪ್ರಸ್ತುತತೆ ಎಲ್ಲರಿಗೂ ಗೊತ್ತಿದೆ. ಹೀಗಾಗಿ ಯಾರೂ ಬಿಜೆಪಿ ಬಿಟ್ಟು ಹೋಗಲ್ಲ. ಕಾವೇರಿ ವಿಷಯ ಡೈವರ್ಟ್ ಮಾಡಲು ಪಕ್ಷಾಂತರ ವಿಚಾರ ಮುಂದೆ ತಂದಿದ್ದಾರೆ. ಭ್ರಷ್ಟಾಚಾರ ಹೆಚ್ಚಾಗಿದೆ ಅಂತ ಕಾಂಗ್ರೆಸ್ ಪಾರ್ಟಿಯವರೇ ಹೇಳುತ್ತಿದ್ದಾರೆ. ಕಾಂಗ್ರೆಸ್‌ಗೆ ನೇತೃತ್ವ ಮತ್ತು ನಿಯತ್ತಿಲ್ಲ. ಬಿಜೆಪಿ ಬಂಡೆಗಲ್ಲಂತೆ ಗಟ್ಟಿಯಾಗಿದೆ ಎಂದಿದ್ದಾರೆ.

    ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ ಎಂದು ರಾಮಲಿಂಗಾರೆಡ್ಡಿಗೆ ಹೇಗೆ ಗೊತ್ತು, ಅವರೇನು ಬಿಜೆಪಿ ಪಕ್ಷದಲ್ಲಿದ್ದಾರಾ? ಚೆಲುವರಾಯಸ್ವಾಮಿ ಸೇರಿ ಮತ್ತೊಬ್ಬರ ಹೇಳಿಕೆಗೆ ನಾನು ಉತ್ತರ ಕೊಡುವ ಅಗತ್ಯವಿಲ್ಲ. ಚೆಲುವರಾಯಸ್ಬಾಮಿ ಮೇಲೆ ಗಂಭೀರ ಆರೋಪ ಬಂದಿವೆ. ಅವರು ರಾಜೀನಾಮೆ ಕೊಡಬೇಕು. ಕಾಂಗ್ರೆಸ್ ಸರ್ಕಾರದ ಮೇಲೆ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬಂದಿವೆ. ಪ್ರಾಥಮಿಕವಾಗಿ ಕಾಣುವಂತೆ ಸತ್ಯ ಎನ್ನಬಹುದಾದ ಆರೋಪಗಳು ಕೇಳಿ ಬಂದಿವೆ. ದೂರು ಕೊಟ್ಟ ಗುತ್ತಿಗೆದಾರರನ್ನು ಮೊದಲು ಪೊಲೀಸ್ ಠಾಣೆಗೆ ಕರೆಸುತ್ತಿದ್ದಾರೆ. ಗುತ್ತಿಗೆದಾರರನ್ನು ಹೆದರಿಸಿ, ಬೆದರಿಸಿ ಉಲ್ಟಾ ಹೊಡೆಯುವ ಹಾಗೆ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಡ್ಯಾಂನಲ್ಲಿ ತುಂಬಿ ಹಿಡಿದುಟ್ಟುಕೊಳ್ಳಲು ಆಗದೇ ಇದ್ದಾಗ ತಮಿಳುನಾಡಿಗೆ ನೀರು ಬಿಟ್ಟಿದ್ವಿ: ಹೆಚ್‍ಡಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಂಗ್ರೆಸ್ ಸುಳ್ಳು ಹೇಳುವ ಸ್ಪರ್ಧೆಗಿಳಿದಿದೆ: ಪ್ರಹ್ಲಾದ್ ಜೋಶಿ

    ಕಾಂಗ್ರೆಸ್ ಸುಳ್ಳು ಹೇಳುವ ಸ್ಪರ್ಧೆಗಿಳಿದಿದೆ: ಪ್ರಹ್ಲಾದ್ ಜೋಶಿ

    ಧಾರವಾಡ: ಕಾಂಗ್ರೆಸ್ (Congress) ಎಲ್ಲಾ ಸಂದರ್ಭದಲ್ಲಿ ವಿರೋಧ ಮಾಡುತ್ತಿದೆ. ಸೆಂಟರ್ ವಿಸ್ತಾಗೆ ವಿರೋಧ ಮಾಡಿದ್ದರು. ಇದೀಗ ಹೊಸ ಪಾರ್ಲಿಮೆಂಟ್‌ಗೆ ವಿರೋಧ ಮಾಡುತ್ತಿದೆ. ಕಾಂಗ್ರೆಸ್ ಸುಳ್ಳು ಹೇಳುವ ಸ್ಪರ್ಧೆಗಿಳಿದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

    ಧಾರವಾಡದಲ್ಲಿ (Dharwad) ಮಾತನಾಡಿದ ಅವರು, ನಾವು ಉದ್ಯಮಿಗಳ ಹತ್ತಾರು ಕೋಟಿ ಮನ್ನಾ ಮಾಡಿದ್ದೇವೆ ಎಂದು ಕಾಂಗ್ರೆಸ್‌ನವರು ಹೇಳಿದ್ದಾರೆ. ನಿಮಗೆ ನಾಚಿಕೆ, ಮಾನ, ಮರ್ಯಾದೆ ಇದೆಯಾ ಎಂದು ಕಿಡಿಕಾರಿದರು. ಇವರ ಕಾಲದಲ್ಲಿಯೇ ಅತಿ ಹೆಚ್ಚು ಸಾಲಕೊಡಿಸಿದ್ದಾರೆ. ಅವರು ಸಾಲ ವಾಪಸ್ ತುಂಬಿರಲೇ ಇಲ್ಲ. ಮೋದಿ ಬಂದ ಮೇಲೆ ಬಾಕಿ ಸಾಲ ವಾಪಸ್ ತುಂಬಿ ಎಂದಿದ್ದರು. ಆಗ ಅಂತಹ ಉದ್ಯಮಿಗಳು ಓಡಿ ಹೋಗಿದ್ದಾರೆ. ಓಡಿ ಹೋದ ಉದ್ಯಮಿ, ವಂಚಕರ ಆಸ್ತಿ ವಶಪಡಿಸಿಕೊಳ್ಳುತ್ತೇವೆ. ಇದಕ್ಕಾಗಿ ಹೊಸ ಕಾಯ್ದೆ ತಂದಿದ್ದೇವೆ. ಹೊಸ ಸಾಲ ಕೊಡುವ ಕಾರ್ಯ ಮಾಡಿಲ್ಲ ಎಂದರು. ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿನ ಕಾಮಗಾರಿಗಳ ಬಗ್ಗೆ ಮಾಹಿತಿ ಕೊಡಿ: BBMPಗೆ ಡಿಕೆಶಿ ಪತ್ರ

    ಕಾಂಗ್ರೆಸ್‌ನವರು ಕಾಯ್ದೆ, ಕಾನೂನು ಬಿಟ್ಟು ಸಾಲ ಕೊಟ್ಟಿದ್ದಾರೆ. ಸಿದ್ದರಾಮಯ್ಯ, ಡಿಕೆಶಿ ನಾವು ಉದ್ಯಮಿ ಸಾಲ ಮನ್ನಾ ಮಾಡಿದ್ದೇವೆ ಎಂದು ಸಾಬೀತುಪಡಿಸಲಿ. ಸಾಬೀತು ಮಾಡಿದರೆ ನಾವು ರಾಜಕೀಯ ನಿವೃತ್ತಿ ಪಡೆಯುತ್ತೇವೆ. ನಯಾಪೈಸೆ ಮನ್ನಾ ಮಾಡಿಲ್ಲ ಎಂದಾದರೆ ಅವರು ರಾಜಕೀಯ ನಿವೃತ್ತಿ ಪಡೆಯುತ್ತಾರಾ? ಎಂದು ಸವಾಲು ಹಾಕಿದರು. ಇದನ್ನೂ ಓದಿ: ನರೇಂದ್ರ ಮೋದಿ ಸರ್ಕಾರ ಸ್ವರ್ಗ ತೋರಿಸ್ತೀನಿ ಅಂತ ಜನರಿಗೆ ನರಕ ತೋರಿಸಿದ್ದಾರೆ: ಸಲೀಂ ಅಹಮದ್

    30ರಿಂದ 40 ಸಾವಿರ ಕೋಟಿ ರೂ. ಸಾಲ ನಾವು ಈಗಾಗಲೇ ವಸೂಲಿ ಮಾಡಿದ್ದೇವೆ. ಓಡಿ ಹೋದವರನ್ನು ಕರೆದು ವಸೂಲಿ ಮಾಡುತ್ತೇವೆ. ಓಡಿ ಹೋದವರಿಗೆ ಸಾಲ ಕೊಟ್ಟವರೇ ಇವರು. ಓಡಿ ಹೋದವರು ಬಂದರೆ ಅದೆಲ್ಲ ಹೊರಗೆ ಬರುತ್ತದೆ. ಹೀಗಾಗಿ ಓಡಿ ಹೋದ ವಂಚಕರು ವಾಪಸ್ ಬರದಂತೆ ತಡೆಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ದೇಶಾದ್ಯಂತ 508 ರೈಲ್ವೆ ನಿಲ್ದಾಣ ಪುನರಾಭಿವೃದ್ಧಿಗೆ ಮೋದಿ ಚಾಲನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಧಾರವಾಡ ಜಿಲ್ಲೆಯಲ್ಲಿಯೂ ಅಧಿಕಾರಿಗಳ ವರ್ಗಾವಣೆ ಹರಾಜು ಪ್ರಕ್ರಿಯೆ ನಡೆದಿದೆ: ಪ್ರಹ್ಲಾದ್‌ ಜೋಶಿ ಬಾಂಬ್‌

    ಧಾರವಾಡ ಜಿಲ್ಲೆಯಲ್ಲಿಯೂ ಅಧಿಕಾರಿಗಳ ವರ್ಗಾವಣೆ ಹರಾಜು ಪ್ರಕ್ರಿಯೆ ನಡೆದಿದೆ: ಪ್ರಹ್ಲಾದ್‌ ಜೋಶಿ ಬಾಂಬ್‌

    ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿಯೂ ಸಹ ಅಧಿಕಾರಿಗಳ ವರ್ಗಾವಣೆ ಹರಾಜು ಪ್ರಕ್ರಿಯೆ ನಡೆದಿದ್ದು, ಅಧಿಕಾರಿಗಳು ನನಗೆ ವಯಕ್ತಿಕವಾಗಿ ಕರೆ ಮಾಡಿ ನೋವು ನೋಡಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಬಾಂಬ್ ಸಿಡಿಸಿದ್ದಾರೆ.

    ಮಾಜಿ ಸಿಎಂ ಕುಮಾರಸ್ವಾಮಿ (H.D. Kumaraswamy) ವರ್ಗಾವಣೆ ಆರೋಪ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, ವರ್ಗಾವಣೆ ವಿಚಾರದಲ್ಲಿ ಸಾಕಷ್ಟು ಅವ್ಯವಹಾರ ನಡೆಯುತ್ತಿವೆ. ಬಿಜೆಪಿ ಮೇಲೆ ಕಾಂಗ್ರೆಸ್ ಮಾಡಿದ್ದ ಆರೋಪದ ಹತ್ತು ಪಟ್ಟು ಭ್ರಷ್ಟಾಚಾರ ನಡೆಯುತ್ತಿದೆ. ವರ್ಗಾವಣೆಗಳನ್ನು ಹರಾಜು ಮಾಡಲಾಗುತ್ತಿದೆ. 10, 12 ಲಕ್ಷ ಕೊಟ್ಟವರಿಗೆ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಅನ್ಯಕೋಮಿನ ಸದಸ್ಯನಿಗೆ ದಕ್ಕಿದ ಅಧ್ಯಕ್ಷ ಸ್ಥಾನ – 19 ಗ್ರಾಪಂ ಸದಸ್ಯರಿಂದ ಸಾಮೂಹಿಕ ರಾಜೀನಾಮೆ

    ಸುಪ್ರೀಂ ಕೋರ್ಟ್‌ ತೀರ್ಪಿನ ಕುರಿತು ಮಾತನಾಡಿ, ರಾಹುಲ್ ಗಾಂಧಿಯವರ ಶಿಕ್ಷೆಯನ್ನು ಕೋರ್ಟ್ ತಡೆದಿದೆಯೇ ಹೊರೆತು, ಅವರು ಮಾಡಿದ್ದು ಸರಿ ಅಂತ ಒಪ್ಪಿಕೊಂಡಿಲ್ಲ. ಮಾತನಾಡಿದ್ದು ತಪ್ಪು ಅಂತ ಹೇಳಿದೆ. ಕೋರ್ಟ್ ತೀರ್ಪು ಆಧರಸಿ ಸ್ಪೀಕರ್ ಅವರು ರಾಹುಲ್ ಗಾಂಧಿ ಸಂಸದ ಸ್ಥಾನದ ಬಗ್ಗೆ ತೀರ್ಮಾನ ತೆಗೆದುಕೊಳ್ಳತ್ತಾರೆ. ರಾಹುಲ್ ಗಾಂಧಿಯ ಅವರ ಪ್ರಕರಣದಲ್ಲಿ ಯಾವುದೇ ರಾಜಕೀಯ ಇಲ್ಲ. ಅದು‌ ನ್ಯಾಯಾಲಯದ ವಿಚಾರ ಎಂದರು.

    ಸಮಾಜ ವಿದ್ರೋಹಿಗಳಿಗೆ ಕಾಂಗ್ರೆಸ್ ಬಂದಿದ್ದು ಕುಮ್ಮಕ್ಕು ಸಿಕ್ಕಂತಾಗಿದೆ. ನಾವು ಏನು ಮಾಡಿದರೂ ಕಾಂಗ್ರೆಸ್ ಪಾರ್ಟಿ ಸಂರಕ್ಷಣೆ ನೀಡುತ್ತೆ ಅಂತ ಇದನ್ನು ಮಾಡಲಾಗುತ್ತಿದೆ ಎಂದು ಉಡುಪಿ ಹಾಸ್ಟೆಲ್ ವೀಡಿಯೋ ಮತ್ತು ಹುಬ್ಬಳ್ಳಿ ಕಾಲೇಜು ಪೋಸ್ಟ್ ವಿಚಾರವಾಗಿ ಗರಂ ಆದರು. ಇದನ್ನೂ ಓದಿ: ಮೋದಿ ಮತ್ತೆ ಪ್ರಧಾನಿಯಾಗಲಿ: ಅಮರನಾಥ ಯಾತ್ರೆ ಮಾಡಿ ಶೋಭಾ ಕರಂದ್ಲಾಜೆ ವಿಶೇಷ ಪೂಜೆ

    ಆರಗ ಜ್ಞಾನೇಂದ್ರ ಅವರ ಬೇಡಿಕೆಗೆ ನಮ್ಮ ಸಮ್ಮತಿ ಇದೆ. ಆದರೆ ಅವರ ಹೇಳಿಕೆಗೆ ನಮ್ಮ ವಿರೋಧವಿದೆ. ಖರ್ಗೆಯವರ ಬಗ್ಗೆ ಜ್ಞಾನೇಂದ್ರ ಆ ರೀತಿ ಮಾತನಾಡಬಾರದಿತ್ತು. ರಾಜಕೀಯ ವಿಚಾರವಾಗಿ ಖರ್ಗೆ ಮತ್ತು ನಮ್ಮ ನಡುವೆ ಸಾಕಷ್ಟು ಭಿನ್ನಾಭಿಪ್ರಾಯವಿದೆ. ಆದರೆ ವಯಕ್ತಿಕವಾಗಿ ಖರ್ಗೆ ಅನುಭವ, ಹಿರಿತನದ ಬಗ್ಗೆ ಗೌರವವಿದೆ. ಯಾವುದೇ ವ್ಯಕ್ತಿ ಮೈ ಬಣ್ಣ, ಪ್ರದೇಶ‌ ನೋಡಿ ಮಾತನಾಡುವುದು ಸರಿಯಲ್ಲ.
    ಈ ಕುರಿತು ನಾನು ಜ್ಞಾನೇಂದ್ರಗೆ ತಿಳಿ ಹೇಳುತ್ತೇನೆ ಎಂದು ಹೇಳಿದರು.

    ಗೃಹಜ್ಯೋತಿ ಅರ್ಜಿ ಸಲ್ಲಿಕೆ ವಿಚಾರದಲ್ಲಿ ಸಾಕಷ್ಟು ಗೊಂದಲಗಳಿದ್ದವು. ಈಗ ಅದೇ ಮುಂದುವರಿದಿದೆ. ದಿನ ಬಳಕೆ ವಿದ್ಯುತ್ ದರ ಜಾಸ್ತಿ ಮಾಡಿ ಯೋಜನೆ ಜಾರಿ ಮಾಡಲಾಗಿದೆ. ರಾಜಸ್ಥಾನದಲ್ಲಿ ಹೀಗೆ ಫ್ರೀ ವಿದ್ಯುತ್ ಕೊಡುತ್ತೇನೆ ಅಂತ ಹೇಳಿ ವಿದ್ಯುತ್ ದರ ಏರಿಕೆ ಮಾಡಿದ್ದಾರೆ ಎಂದು ಲೇವಡಿ ಮಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಎಂ ಬಜೆಟ್ ಮಂಡಿಸಿದ್ರಾ, ಬಿಜೆಪಿಗೆ ಬೈದ್ರಾ ಅರ್ಥವಾಗ್ತಿಲ್ಲ: ಪ್ರಹ್ಲಾದ್ ಜೋಶಿ

    ಸಿಎಂ ಬಜೆಟ್ ಮಂಡಿಸಿದ್ರಾ, ಬಿಜೆಪಿಗೆ ಬೈದ್ರಾ ಅರ್ಥವಾಗ್ತಿಲ್ಲ: ಪ್ರಹ್ಲಾದ್ ಜೋಶಿ

    ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ (Siddaramaiah Budget) ಮಂಡಿಸಿದ್ರಾ ಅಥವಾ ಬಿಜೆಪಿಗೆ (BJP) ಬೈದ್ರಾ ಅರ್ಥವಾಗುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ.

    ಬಜೆಟ್ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಜೆಟ್ ಮಂಡನೆಗಿಂತ ಬಿಜೆಪಿಯನ್ನು ಬೈದಿದ್ದೇ ಹೆಚ್ಚು. ಕೋವಿಡ್ ನಿರ್ವಹಣೆ ಬಗ್ಗೆ ಮಾತನಾಡಿದ್ದಾರೆ. ಇದೇ ಮೊದಲ ಬಾರಿಗೆ ದೇಶದಲ್ಲಿ ವ್ಯಾಕ್ಸಿನ್ ತಯಾರಿಸಿ ಎಲ್ಲರಿಗೂ ನೀಡಿದ್ದೇವೆ. ಅಲ್ಲದೆ ಬೇರೆ ದೇಶಗಳಿಗೂ ಸಹ ಕೊಟ್ಟಿದ್ದೇವೆ. ಇದನ್ನು ಸಿದ್ದರಾಮಯ್ಯ ಪ್ರಶ್ನೆ ಮಾಡುತ್ತಾರೆ ಎಂದರು.

    ಸಿದ್ದರಾಮಯ್ಯನವರು ಭಾರತ ದ್ವೇಷಿ ರಾಹುಲ್ ಗಾಂಧಿ (Rahul Gandhi) ತರಹ ಮಾತನಾಡುತ್ತಿದ್ದಾರೆ. ಅಬಕಾರಿ ಟಾರ್ಗೆಟ್ ಕೊಟ್ಟಿದ್ದಾರೆ. ಎಲ್ಲರಿಗೂ ಮದ್ಯಪಾನ ಮಾಡಿಸಿ ಹಣ ತಂದುಕೊಡಿ ಅನ್ನೋದು ಇದು. ಎನ್ ಇಪಿಗೆ ಮೊದಲು ಕಾಂಗ್ರೆಸ್ ಒಪ್ಪಿಗೆ ನೀಡಿತ್ತು, ಆದರೆ ಇವತ್ತು ಕೈ ಬಿಟ್ಟಿದ್ದಾರೆ. ಸಂಪೂರ್ಣ ತುಷ್ಠೀಕರಣ ಬಜೆಟ್ ಮಂಡನೆ ಮಾಡಿದ್ದಾರೆ. ಅಭಿವೃದ್ಧಿ ಪೂರ್ವಕವಲ್ಲ ಎಂದು ಹೇಳಿದರು. ಇದನ್ನೂ ಓದಿ: ಆನ್‌ಲೈನ್‌ನಲ್ಲಿ ವಿದ್ಯುತ್ ಬಿಲ್ ಕಟ್ಟುವ ಮುನ್ನ ಎಚ್ಚರ – 53 ಸಾವಿರ ಎಗರಿಸಿದ ಸೈಬರ್ ಕಳ್ಳರು!

    ಮೂಲಭೂತ ಸೌಕರ್ಯಗಳು ನೆಲಕಚ್ಚುವ ಬಜೆಟ್ ಇದು. ಶಾಸಕರಿಗೆ ಅನುದಾನ ಕೇಳಬೇಡಿ ಅಂತ ನೇರವಾಗಿ ಹೇಳತ್ತಿದ್ದಾರೆ ಕಾಂಗ್ರೆಸ್ ಯಾವ ಸ್ಥಿತಿಗೆ ಬಂದಿದೆ ಎಂಬುವುದಕ್ಕೆ ಸಾಕ್ಷಿ. ಯುವಶಕ್ತಿಗೆ ನಯಾಪೈಸೆ ಹಣ ಇಟ್ಟಿಲ್ಲ, ಗೃಹ ಲಕ್ಷ್ಮಿಗೆ ಈಗ ಹಣ ಇಟ್ಟಿದ್ದಾರೆ. ರೈಲ್ವೆ ಯೋಜನೆಗೆ ರಾಜ್ಯದ ಪಾಲಿನ ಅನುದಾನ ಮೀಸಲಿಟ್ಟಿಲ್ಲ. ರಾಜ್ಯವನ್ನು ಸಾಲದಕೂಪಕ್ಕೆ ತಳ್ಳಿ ಸಿದ್ದರಾಮಯ್ಯ ತನ್ನ ರಾಜಕೀಯ ಚಟ ತೀರಿಸಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    10 ಕೆಜಿ ಅಕ್ಕಿ ಬಗ್ಗೆ ಬಜೆಟ್ ನಲ್ಲಿ ಹೇಳಿದ್ದಾರೆ. ಈ ಪೈಕಿ ಐದು ಕೆ.ಜಿ ಕೇಂದ್ರ ಸರ್ಕಾರದ್ದಿದೆ. ಅವರೇನು ಕೊಡುತ್ತಾರೆ ಎಂಬುವುದನ್ನು ಹೇಳತ್ತಿಲ್ಲ, ಬರಿ ಬಿಜೆಪಿಯನ್ನು ಬೈತಾರೆ. ಸಿದ್ದರಾಮಯ್ಯನವರು ಹಿಟ್ಲರ್ ರೀತಿಯಲ್ಲಿ ಆಡಳಿತ ಮಾಡಲು ತೀರ್ಮಾನ ಮಾಡಿದ್ದಾರೆ. ಬಿಜೆಪಿಗೆ ಸತತವಾಗಿ ಬೈಯೋದನ್ನೆ ಕಾಯಕ ಮಾಡಿಕೊಂಡಿದ್ದಾರೆ ಇದನ್ನು ಎದುರಿಸಲು ನಾವು ಸಿದ್ಧ ಎಂದು ಜೋಶಿ ಸವಾಲೆಸೆದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]