ಹುಬ್ಬಳ್ಳಿ: ಬೆಳಗಾವಿ (Belagavi) ರಾಜಕಾರಣ ಹುಬ್ಬಳ್ಳಿಗೆ (Hubballi) ಶಿಫ್ಟ್ ಆಗಿದ್ದು, ಒಂದೇ ಕಡೆ ಬಿಜೆಪಿ ಅತೃಪ್ತ ನಾಯಕರು ಕಾಣಿಸಿಕೊಂಡಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಮತ್ತು ಲಕ್ಷ್ಮಣ ಸವದಿ (Laxman Savadi) ಮತ್ತಿತರರ ಭೇಟಿ ಈಗ ತೀವ್ರ ಕುತೂಹಲ ಕೆರಳಿಸಿದೆ.
ಮೊದಲಿಗೆ ಹುಬ್ಬಳ್ಳಿಯ ಕ್ಯೂಬಿಕ್ಸ್ ಹೋಟೆಲ್‌ನಲ್ಲಿ ಬಿಜೆಪಿ ನಾಯಕರ ಸೀಕ್ರೆಟ್ ಮೀಟಿಂಗ್ ನಡೆಯಿತು. ಕೇಂದ್ರ ಸಚಿವ ನಾರಾಯಣಸ್ವಾಮಿ, ಸಚಿವ ಗೋವಿಂದ ಕಾರಜೋಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಮಹೇಶ್ ಕುಮಟಳ್ಳಿ ಟಿಕೆಟ್‌ಗಾಗಿ ಸಾಹುಕಾರ್ ರಮೇಶ ಜಾರಕಿಹೊಳಿ ಪಟ್ಟು ಹಿಡಿದರು. ಈ ವೇಳೆ ಮಧ್ಯ ಪ್ರವೇಶ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರು ಜಾರಕಿಹೊಳಿ, ಸವದಿ ಮುನಿಸು ಅಂತ್ಯ ಮಾಡುವ ಪ್ರಯತ್ನ ಮಾಡಿದರು. ಇದನ್ನೂ ಓದಿ: ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಮೊಮ್ಮಗ ಶಶಿಭೂಷಣ್ ಹೆಗಡೆ ಬಿಜೆಪಿ ಸೇರ್ಪಡೆ
ಇಬ್ಬರ ನಡುವಿನ ಮುನಿಸು ಶಮನಕಾರಿ ಮಾಡುವಲ್ಲಿ ಯಶಸ್ವಿಯಾದ ಕೇಂದ್ರ ಸಚಿವ ಜೋಶಿ, ಮೀಟಿಂಗ್ ಮುಗಿಸಿ ಒಂದೇ ವಾಹನದಲ್ಲಿ ಜೋಶಿ, ಸಾಹುಕಾರ್, ಸವದಿ ವಿಮಾನ ನಿಲ್ದಾಣದಕ್ಕೆ ತೆರಳಿದ್ದು, ಮೂವರು ಒಟ್ಟಿಗೆ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣಿಸಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಮೇ 10 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ರಾಜ್ಯದ ಪ್ರಮುಖ ಮೂರು ಪಕ್ಷಗಳಲ್ಲೂ ಬಣ ರಾಜಕಾರಣ ಶುರುವಾಗಿದೆ. ಇದು ಪಕ್ಷಗಳ ಹೈಕಮಾಂಡ್‌ಗೆ ತಲೆನೋವು ತಂದಿದೆ. ಬಣ ರಾಜಕಾರಣ ಶಮನಕ್ಕೆ ಕಸರತ್ತು ನಡೆಸಲಾಗುತ್ತಿದೆ. ಇದನ್ನೂ ಓದಿ: ಸಿಎಂ ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಬಿಜೆಪಿ ಕಚೇರಿ ಮೇಲೆ ದಾಳಿ
ಬೆಳಗಾವಿ: ಎರಡು ದಿನಗಳಿಂದ ಎಲ್ಲಾ ಜಿಲ್ಲೆಯ ಕೋರ್ ಕಮಿಟಿ ಸದಸ್ಯರನ್ನು, ಪಕ್ಷದ ಅತ್ಯಂತ ಕೆಲ ಪ್ರಮುಖ ಮುಖಂಡರ ನೇತೃತ್ವದಲ್ಲೂ ಸಭೆ ಮಾಡಿದ್ದೇವೆ. ಅಳೆದುತೂಗಿ ರಾಷ್ಟ್ರೀಯ ಚುನಾವಣಾ ಸಮಿತಿ, ಸಂಸದೀಯ ಮಂಡಳಿಗೆ ಶಿಫಾರಸು ಮಾಡುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ರಾಜ್ಯಾದ್ಯಂತ ಪದಾಧಿಕಾರಿಗಳು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ್ದೇವೆ. ನಾಳೆಯಿಂದ ಕಾರ್ಯಕರ್ತರ ಅಭಿಪ್ರಾಯ ಮತ್ತು ಕೋರ್ ಕಮಿಟಿ ಸದಸ್ಯರು ವ್ಯಕ್ತಪಡಿಸಿದ ಅಭಿಪ್ರಾಯಗಳನ್ನು ಅಳೆದು ತೂಗಿ ನೋಡಿ, ನಾವು ನಾಳೆ ಮತ್ತು ನಾಡಿದ್ದು ವಿಸ್ತೃತವಾಗಿ ಸಭೆ ಮಾಡಲಿದ್ದೇವೆ. ಅದಕ್ಕಿಂತ ಮೊದಲು ಕೆಲವು ಹೆಚ್ಚಿನ ವಿವರವನ್ನು ಪಡೆಯುತ್ತಿದ್ದೇವೆ ಎಂದು ತಿಳಿಸಿದರು.
ಬೆಳಗಾವಿ (Belagavi) ಮತ್ತು ಬೆಂಗಳೂರು (Bengaluru) ಅತಿಹೆಚ್ಚು ಸ್ಥಾನ ಹೊಂದಿರುವ ಪ್ರದೇಶವಾಗಿದೆ. ಆದ್ದರಿಂದ ಇನ್ನೂ ಕೆಲವು ಹೆಚ್ಚಿನ ವಿವರ ಸಂಗ್ರಹಿಸಿ ನಾಳೆ ಶಿಫಾರಸು ಮಾಡುತ್ತೇವೆ. ರಾಷ್ಟ್ರೀಯ ಚುನಾವಣಾ ಸಮಿತಿ, ಸಂಸದೀಯ ಮಂಡಳಿಗೆ ಶಿಫಾರಸು ಮಾಡುತ್ತೇವೆ. ಕೋರ್ ಕಮಿಟಿ ಸಭೆ ಮುಗಿಸಿಕೊಂಡು ಸೋಮವಾರ ಸಂಜೆ ಬೆಂಗಳೂರಿಗೆ ಹೋಗುತ್ತೇವೆ ಎಂದರು.
ಕೋರ್ ಕಮಿಟಿ ಸಭೆಯಲ್ಲಿ ಬೆಳಗಾವಿ ಜಿಲ್ಲೆಯ ನಾಯಕರಿಂದ ಯಾವುದೇ ಗದ್ದಲ ಇಲ್ಲ. ಗಲಾಟೆ ಇಲ್ಲ. ಸ್ಪರ್ಧೆ ಜಾಸ್ತಿ ಇದ್ದಲ್ಲಿ, ಹೆಚ್ಚು ಸೀಟ್‌ಗಳಿದ್ದಲ್ಲಿ ಹೆಚ್ಚು ಗಮನ ಕೊಡಬೇಕಾಗುತ್ತದೆ. ರಮೇಶ್ ಜಾರಕಿಹೊಳಿ ಇಲ್ಲೇ ಇದ್ದಾರೆ. ಅವರನ್ನ ಕೇಳಿ ಯಾವ ಕಿತ್ತಾಟ ಇಲ್ಲ ಎಂದು ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ (BJP) ಬಣ ಬಡೆದಾಟ ಅಲ್ಲಗಳೆದರು. ಇದನ್ನೂ ಓದಿ: ದೇಶವನ್ನು ಭ್ರಷ್ಟಾಚಾರ ಮುಕ್ತಗೊಳಿಸುವುದು ಸಿಬಿಐ ಜವಾಬ್ದಾರಿ: ಮೋದಿ
ಬೆಳಗಾವಿಯಲ್ಲಿ 18ಕ್ಕೆ 18 ಕ್ಷೇತ್ರ ಗೆಲ್ಲಲು ಒನ್ ಟೂ ಒನ್ ಮಾತನಾಡಿದ್ದೇನೆ. ಬರುವ ಏ.8 ಅಥವಾ 9ರಂದು ಪಟ್ಟಿ ಬಿಡುಗಡೆ ಆಗುತ್ತದೆ. ಎಲ್ಲರೂ ಸನ್ನದ್ಧರಾಗಿ ಎಂದು ಸೂಚಿಸಿದ್ದೇನೆ. ಸಾಮಾನ್ಯವಾಗಿ 18ಕ್ಕೆ 16 ಗೆಲ್ಲುತ್ತೇವೆ ಎಂದು ಹೇಳುತ್ತಿದ್ದರು. ಈಗ 18 ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಮಾನಹಾನಿ ಪ್ರಕರಣ – ಏಪ್ರಿಲ್ 13 ರವರೆಗೂ ರಾಗಾಗೆ ರಿಲೀಫ್
ಹುಬ್ಬಳ್ಳಿ: ಧಮ್ಕಿ ಹಾಕುವುದು ಡಿ.ಕೆ. ಶಿವಕುಮಾರ್ ಹಾಗೂ ಹೊಡೆಯುವುದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಂಸ್ಕೃತಿಯಾಗಿದೆ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಶ್ರೀಗಳಿಗೆ ಧಮ್ಕಿ ಹಾಕಿದ್ದಾರೆ ಎಂಬ ಕಾಂಗ್ರೆಸ್ (Congress) ನಾಯಕರ ಆರೋಪಕ್ಕೆ ನಗರದಲ್ಲಿಂದು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ನವರ ಆರೋಪ ಬಾಲಿಶವಾಗಿದೆ. ಸಾಂಸ್ಕೃತಿಕ, ಭಾರತೀಯ ಹಿಂದೂ ಸಂಸ್ಕೃತಿಯನ್ನು ಬಿಜೆಪಿ ಪಾಲಿಸಿಕೊಂಡು ಬಂದಿದೆ ಎಂದರು.
ಪಂಚಮಸಾಲಿ ಸಮುದಾಯದ ಹೋರಾಟ ಮುಂದುವರಿಸುವ ಯೋಚನೆ ಕಾಂಗ್ರೆನವರದ್ದಾಗಿತ್ತು. ಈ ಬಿಜೆಪಿ ಸರ್ಕಾರ ಎಲ್ಲ ಮೀಸಲಾತಿ ಸಮಸ್ಯೆ ಪರಿಹರಿಸಿ ತಾರ್ಕಿಕ ಅಂತ್ಯ ಹಾಡಿದೆ. ಡಿ.ಕೆ.ಶಿವಕುಮಾರ್ (DK Shivakumar) ಸಂಸ್ಕೃತಿ ಗೂಂಡಾ ಸಂಸ್ಕೃತಿಯಾಗಿರುವುದು ಜಗತ್ತಿಗೆ ಗೊತ್ತಿದೆ ಎಂದು ಕುಟುಕಿದರು. ಇದನ್ನೂ ಓದಿ: ಟಿಪ್ಪುವನ್ನು ಕೊಂದ ಕ್ರೆಡಿಟ್ ಕೊಡವರಿಗೆ ಹೋಗ್ಬೇಕು: ಎನ್.ಯು ನಾಚಪ್ಪ
ಕಾಂಗ್ರೆಸ್ ನವರು ಮಾಡುತ್ತಿರುವ ಆರೋಪ ಶ್ರೀಗಳಿಗೆ ಮಾಡುತ್ತಿರುವ ಅಪಮಾನವಾಗಿದೆ ಎಂದ ಅವರು, ಒಕ್ಕಲಿಗ ಸಮಾಜಕ್ಕೆ ಮೀಸಲಾತಿ ನೀಡಿರುವುದು ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರಿಗೆ ಸಹಮತವಿಲ್ಲ ಎಂಬುದು ಸ್ಪಷ್ಟವಾಗಿದೆ. ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರು ಪಂಚಮ ಸಾಲಿ ಹೋರಾಟದಲ್ಲಿ ಭಾಗವಹಿಸುತ್ತಿದ್ದರು. ಅವರು ಬಿಜೆಪಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿಸಲು ಮಾತ್ರ ಮಾಡುತ್ತಿದ್ದರು. ಇದರ ಅರ್ಥ ಅವರ ಬದ್ಧತೆ ಇರಲಿಲ್ಲ. ಸದಾಶಿವ ಆಯೋಗ ಒಪ್ಪವಂತಹ, ಸಮಸ್ಯೆ ಬಗೆಹರಿಸುವ ತಾಕತ್ತು ಇರಲಿಲ್ಲ. ತಮ್ಮ ಕಾಲದಲ್ಲಿ ಅವೈಜ್ಞಾನಿಕವಾಗಿ ಮೀಸಲಾತಿ ನೀಡಿದ್ದರು. ಧರ್ಮದ ಆಧಾರ ಮೀಸಲಾತಿ ಕೊಡಲು ಸಾಧ್ಯವಿಲ್ಲ ಎಂಬ ಸ್ಪಷ್ಟ ನಿರ್ಣಯವಾಗಿದೆ. ಬಿಜೆಪಿ ನಿರ್ಣಾಯಕ ಸರ್ಕಾರವಾಗಿದೆ. ನಮ್ಮ ಪಕ್ಷದ ಬದ್ಧತೆ ಸ್ಪಷ್ಟವಾಗಿದೆ ಎಂದು ಹೇಳಿದರು.
ಸಿದ್ದರಾಮಯ್ಯ (Siddaramaiah) ಅಧಿಕಾರಕ್ಕೆ ಬಂದರೆ ಮೀಸಲಾತಿ ಸ್ಥಗಿತ ಮಾಡುತ್ತೇನೆ ಎಂದು ಹೇಳುತ್ತಿದ್ದು, ಬಂದರೆ ಅದರ ಅರ್ಥ ಅವರು ಅಧಿಕಾರಕ್ಕೆ ಬರವುದಿಲ್ಲ ಎಂದು ಗ್ಯಾರಂಟಿಯಾಗಿ ಗೊತ್ತಿದೆ. ಸಿದ್ದರಾಮಯ್ಯ ಅವರಿಗೆ ಇಲ್ಲಿವರೆಗೆ ಕ್ಷೇತ್ರದ ಆಯ್ಕೆ ಮಾಡಲು ಆಗಿಲ್ಲ. ಕಳೆದ ಬಾರಿ ಬಾದಾಮಿಯಲ್ಲಿ 1500 ವೋಟ್ ಬಿಳದಿದ್ದರೆ ಅವರು ಮಾಜಿಮುಖ್ಯಮಂತ್ರಿ ಅಲ್ಲ ಮಾಜಿ ಶಾಸಕರಾಗಿರುತ್ತಿದ್ದರು. 11 ಬಜೆಟ್ ಮಂಡಿಸಿದವರಿಗೆ ಒಂದು ಕ್ಷೇತ್ರವಿಲ್ಲ. ಗೆಲ್ಲವ ವಿಶ್ವಾಸ ಅವರಿಗೆ ಇಲ್ಲ ಎಂದರು.
ಸಿದ್ದರಾಮಯ್ಯ ಅವರು ಪರಮೇಶ್ವರ್ (Parameshwar), ಮುನಿಯಪ್ಪನವರಿಗೆ ಹಾಗೂ ಖರ್ಗೆ ಅವರಿಗೆ ಸತತವಾಗಿ ಅನ್ಯಾಯ ಮಾಡಿದ್ದಾರೆ. ಕಾಂಗ್ರೆಸ್ ಹಳೆ ಪರಂಪರೆ ಇದ್ದು, ದಲಿತ ಹೆಸರು ಹೇಳಿ ಮೋಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಬೆಳಗಾವಿ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಮತ್ತು ಸಿದ್ದರಾಮಯ್ಯ (Siddaramaiah) ಮನೆಗೆ ಹೋಗುವುದು ಗ್ಯಾರಂಟಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದರು.
ಬೈಲಹೊಂಗಲ, ಸವದತ್ತಿಯಲ್ಲಿ ಶನಿವಾರ ಬಿಎಸ್‌ವೈ ಜೊತೆ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ (Vijaya Sankalpa Yatra) ಪಾಲ್ಗೊಂಡು ಮಾತನಾಡಿದ ಅವರು, ʼಕೈʼ ನಾಯಕರು ಎಲ್ಲೆಡೆ ಈ ಬಾರಿ ಕಾಂಗ್ರೆಸ್ ಗ್ಯಾರಂಟಿ ಅಂತಾ ಹೇಳಿಕೊಂಡು ತಿರುಗಾಡ್ತಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಅಲ್ಲ, ಕಾಂಗ್ರೆಸ್ ಮನೆಗೆ ಹೋಗುವುದು ಗ್ಯಾರಂಟಿ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಹುಬ್ಬಳ್ಳಿ-ಬೆಂಗಳೂರು ನಡುವೆ ಮತ್ತೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳು ಸಂಚರಿಸಲಿವೆ – ಪ್ರಹ್ಲಾದ್ ಜೋಶಿ
ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಬಗ್ಗೆ ಹೋದ ಕಡೆಯಲ್ಲೆಲ್ಲಾ ಮಾತಾಡ್ತಾರೆ. ಆದರೆ ಕಾಂಗ್ರೆಸ್‌ನಲ್ಲಿ ದಲಿತ ನಾಯಕರ ಬೆಳವಣಿಗೆಯನ್ನ ಹತ್ತಿಕ್ಕುತ್ತಿರುವವರು ಇದೇ ಸಿದ್ದರಾಮಯ್ಯ. ಸಾಮಾಜಿಕ ನ್ಯಾಯದ ಬಗ್ಗೆ ಸಿದ್ದರಾಮಯ್ಯ ಅವರಿಂದ ಬಿಜೆಪಿ ಪಾಠ ಕಲಿಯಬೇಕಿಲ್ಲ ಎಂದು ಟಾಂಗ್ ಕೊಟ್ಟರು.
ಸಿದ್ದರಾಮಯ್ಯ ಅವರು ಮೊದಲು ಮಲ್ಲಿಕಾರ್ಜುನ ಖರ್ಗೆ ಅವರನ್ನ ರಾಜ್ಯ ರಾಜಕಾರಣದಿಂದ ದೂರ ಸರಿಸಿದರು. ನಂತರ ಜಿ.ಪರಮೇಶ್ವರ್ ಅವರನ್ನ ಹತ್ತಿಕ್ಕಿದರು. ಇದೀಗ ಸಿದ್ದರಾಮಯ್ಯ ಅವರು ಕೋಲಾರಕ್ಕೆ ಹೋಗಿ ಕೆ.ಹೆಚ್.ಮುನಿಯಪ್ಪ ಅವರನ್ನ ಮುಗಿಸಲು ಹೊರಟಿದ್ದಾರೆ. ಮೂವರು ದಲಿತ ನಾಯಕರನ್ನ ಹತ್ತಿಕ್ಕಿರುವ ಸಿದ್ದರಾಮಯ್ಯ, ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತಿರುವುದು ವಿಪರ್ಯಾಸ ಎಂದು ಟೀಕಿಸಿದರು. ಇದನ್ನೂ ಓದಿ: ಕರ್ನಾಟಕದ ಜನ ಒಳ್ಳೆಯವ್ರು, ಆದ್ರೆ ನಾಯಕರು ಕೆಟ್ಟವ್ರು – ರಾಜ್ಯವನ್ನ ಬರ್ಬಾದ್ ಮಾಡ್ತಿದ್ದಾರೆ: ಕೇಜ್ರಿವಾಲ್ ಕಿಡಿ
58 ವರ್ಷ ಆಡಳಿತ ನಡೆಸಿರುವ ಕಾಂಗ್ರೆಸ್ ಏನು ಮಾಡಲಿಲ್ಲ. ರೈತರ ಸಾಲ ಮನ್ನಾ ಮಾಡ್ತೀವಿ. ರೈತರ ಅಕೌಂಟ್‌ಗೆ ನೇರ ಹಣ ವರ್ಗಾವಣೆ ಮಾಡ್ತೀವಿ ಅಂತಾ ಸುಳ್ಳು ಹೇಳಿದ್ದರು. ಆದರೆ ಕಿಸಾನ್ ಸಮ್ಮಾನ್ ಮೂಲಕ ರೈತರ ಖಾತೆಗೆ 6 ಸಾವಿರ ಹಣವನ್ನು ಮೋದಿ ಅವರು ಕೊಟ್ರು. ಅಲ್ಲದೇ ರೈತ ನಾಯಕ ಬಿಎಸ್‌ವೈ 4 ಸಾವಿರ ಹೆಚ್ಚಿಗೆ ಸೇರಿಸಿ ಒಟ್ಟು 10 ಸಾವಿರ ಹಣವನ್ನು ರೈತರ ಖಾತೆಗೆ ಜಮಾ ಮಾಡಿಸಿದ್ದಾರೆ ಎಂದು ಬಣ್ಣಿಸಿದರು.
ಈಗ ಕಾಂಗ್ರೆಸ್‌ನವರು ಉಚಿತ ವಿದ್ಯುತ್ ಕೊಡ್ತೇವೆ ಅಂತಾ ಬುರುಡೆ ಬಿಡ್ತಿದ್ದಾರೆ. ಕಾಂಗ್ರೆಸ್ ಕಾಲದಲ್ಲಿ ಕರೆಂಟೇ ಕೊಡ್ತಿರಲಿಲ್ಲ. ಕೇಂದ್ರದಲ್ಲಿ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಬಂದ ಮೇಲೆ 24 ಗಂಟೆ ಕರೆಂಟ್ ಕೊಡ್ತಿದ್ದೇವೆ. ಫ್ರೀ ಕರೆಂಟ್ ಕೊಡಲು ಸಾಧ್ಯವಿಲ್ಲ. ಬಿಜೆಪಿ ಕ್ವಾಲಿಟಿ ಕರೆಂಟ್ ಕೊಡುವ ನೀತಿ ಅನುಸರಿಸುತ್ತಿದೆ. ಜನರು ಕಾಂಗ್ರೆಸ್ ಸುಳ್ಳುಗಳಿಗೆ ಮರುಳಾಗಬಾರದು ಎಂದು ಮನವಿ ಮಾಡಿದರು. ಇದನ್ನೂ ಓದಿ: ಹಣ ಕೊಡದಿದ್ದಕ್ಕೆ ಬಿಜೆಪಿ ಬಾವುಟಕ್ಕೆ ಬೆಂಕಿ – ಚಿನ್ನ ಗಿರವಿಯಿಟ್ಟು ಕಾರ್ಯಕರ್ತರಿಗೆ ಹಣ ಕೊಟ್ಟ ಮುಖಂಡ
ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ಕೇವಲ ರಾಜಕೀಯ ಮಾಡಿತು. ಗೋವಾಗೆ ಹೋಗಿ ಹನಿ ನೀರು ಕೊಡಲ್ಲ ಎಂದವರು ಸೋನಿಯಾ ಗಾಂಧಿಯವರು. ಆದರೆ ಮಹದಾಯಿ ಯೋಜನೆ ಅನುಷ್ಠಾನಗೊಳಿಸಲು ಬಿಜೆಪಿ ಸರ್ಕಾರ ದಿಟ್ಟ ಹೆಜ್ಜೆಯಿಟ್ಟಿದೆ. ಮಹದಾಯಿ ನೀರು ಬೈಲಹೊಂಗಲ, ಸವದತ್ತಿಗೆ ತರುತ್ತಿದ್ದರೆ ಅದು ಬಿಜೆಪಿ ಅನ್ನೋದನ್ನ ಜನ ಮರೆಯಬಾರದು ಎಂದು ಒತ್ತಿ ಹೇಳಿದರು.
ಬೆಂಗಳೂರು: ಮಾರ್ಚ್ 20 ರಿಂದ ಹುಬ್ಬಳ್ಳಿ-ಬೆಂಗಳೂರು (Hubballi-Bengaluru Train) ನಡುವೆ ವಿಶೇಷ ರೈಲುಗಳ ಸಂಚಾರ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಮಾಹಿತಿ ಹಂಚಿಕೊಂಡಿದ್ದಾರೆ.
ಕಾಯ್ದಿರಿಸಿದ ವಿಶೇಷ ರೈಲು ಸೇವೆಗೆ ಪ್ರಯಾಣಿಕರ ಬೇಡಿಕೆ ಹಿನ್ನೆಲೆಯಲ್ಲಿ, ವಿಶೇಷ ರೈಲು ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯ ಮನವಿ ಮಾಡಿದ್ದರು. ಬೇಡಿಕೆಗೆ ಸ್ಪಂದಿಸಿರುವ ಕೇಂದ್ರ ರೈಲ್ವೆ ಸಚಿವರು ಹುಬ್ಬಳ್ಳಿ-ಬೆಂಗಳೂರು ನಡುವೆ ಎರಡು ವಿಶೇಷ ರೈಲು ಸಂಚಾರಕ್ಕೆ ಅನುಮತಿ ನೀಡಿದ್ದಾರೆ. ನೈರುತ್ಯ ರೈಲ್ವೇ ಹುಬ್ಬಳ್ಳಿ ವಿಭಾಗದಿಂದ ಮಾರ್ಚ್ 20 ರಿಂದ ರೈಲುಗಳ ಸಂಚಾರ ಆರಂಭವಾಗಲಿದೆ. ಇದನ್ನೂ ಓದಿ: ಹಣ ಕೊಡದಿದ್ದಕ್ಕೆ ಬಿಜೆಪಿ ಬಾವುಟಕ್ಕೆ ಬೆಂಕಿ – ಚಿನ್ನ ಗಿರವಿಯಿಟ್ಟು ಕಾರ್ಯಕರ್ತರಿಗೆ ಹಣ ಕೊಟ್ಟ ಮುಖಂಡ
ವಿಶೇಷ ರೈಲು 07339 ಹುಬ್ಬಳ್ಳಿಯನ್ನು ರಾತ್ರಿ 11:15ಕ್ಕೆ ಬಿಟ್ಟು ಕರ್ಜಗಿ, ದಾವಣಗೆರೆ, ಬೀರೂರು, ತುಮಕೂರು, ಯಶವಂತಪುರ ಮಾರ್ಗವಾಗಿ ಬೆಂಗಳೂರನ್ನು ಬೆಳಗ್ಗೆ 6:50ಕ್ಕೆ ತಲುಪುತ್ತದೆ. ಅದೇ ರೀತಿ ರೈಲು ಸಂಖ್ಯೆ 07340 ರಾತ್ರಿ II:I5ಕ್ಕೆ ಬೆಂಗಳೂರು ಬಿಟ್ಟು ತುಮಕೂರು, ಬೀರೂರು, ದಾವಣಗೆರೆ, ಕರ್ಜಗಿ ಮಾರ್ಗವಾಗಿ ಹುಬ್ಬಳ್ಳಿಯನ್ನು ಬೆಳಗ್ಗೆ 7:30ಕ್ಕೆ ತಲುಪಲಿದೆ.
ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮಾರ್ಚ್ 20 ರಿಂದ ವಿಶೇಷ ಎಕ್ಸ್ ಪ್ರೆಸ್ ರೈಲುಗಳ ಸಂಚಾರ.
ಪ್ರಯಾಣಿಕರ ಬೇಡಿಕೆ ಹಿನ್ನಲೆಯಲ್ಲಿ ಕಾಯ್ದಿರಿಸಿದ ವಿಶೇಷ ಸೇವೆಯ ಈ ರೈಲುಗಳು ಇದೆ ಮಾರ್ಚ್ 20 ರಿಂದ ತಮ್ಮ ಸಂಚಾರ ಆರಂಭಿಸಲಿವೆ. ರಾತ್ರಿ 11:15ಕ್ಕೆ ಹುಬ್ಬಳ್ಳಿಯಿಂದ ( ರೈಲು ಸಂ : 07339) ಹೊರಡುವ ರೈಲು ಬೆಳಗ್ಗೆ 6:50ಕ್ಕೆ ಬೆಂಗಳೂರು ತಲುಪಲಿದೆ pic.twitter.com/dz0AuFfWQ5
ವಿಶೇಷ ರೈಲು ಸಂಖ್ಯೆ 07353 ಬೆಂಗಳೂರನ್ನು ಬೆಳಗ್ಗೆ 7:45ಕ್ಕೆ ಬಿಟ್ಟು ತುಮಕೂರು, ಬೀರೂರು, ದಾವಣಗೆರೆ, ಕರ್ಜಗಿ ಮಾರ್ಗವಾಗಿ ಹುಬ್ಬಳ್ಳಿಯನ್ನು ಮಧ್ಯಾಹ್ನ 2:30ಕ್ಕೆ ತಲುಪಲಿದೆ. ಅದೇ ರೀತಿ ರೈಲು ಸಂಖ್ಯೆ 07354 ಹುಬ್ಬಳ್ಳಿಯನ್ನು ಮಧ್ಯಾಹ್ನ 3:15ಕ್ಕೆ ಬಿಟ್ಟು ಕರ್ಜಗಿ, ದಾವಣಗೆರೆ, ಬೀರೂರು, ತುಮಕೂರು, ಯಶವಂತಪುರ ಮಾರ್ಗವಾಗಿ ಬೆಂಗಳೂರನ್ನು ರಾತ್ರಿ 11:10ಕ್ಕೆ ತಲುಪಲಿದೆ. ಇದನ್ನೂ ಓದಿ: ಶಾಸಕರ ಮನೆ ಬೆನ್ನಲ್ಲೇ ಪ್ರತಿಷ್ಠಿತ ಉದ್ಯಮಿ ಮನೆಯಲ್ಲಿದ್ದ ಕೋಟಿ.. ಕೋಟಿ.. ಅಕ್ರಮ ಹಣ ಸೀಜ್
ಈ ಎರಡು ವಿಶೇಷ ರೈಲುಗಳು ಹವಾನಿಯಂತ್ರಿತ ದ್ವಿತೀಯ ದರ್ಜೆ ಒಂದು ಬೋಗಿ, ಹವಾನಿಯಂತ್ರಿತ ತೃತೀಯ ದರ್ಜೆಯ ಎರಡು ಬೋಗಿ ಸೀಪರ್ ಕ್ಲಾಸ್, ಏಳು ಜೋಗಿ ಹಾಗೂ ಎರಡು ಸಾಮನ್ಯ ದರ್ಜೆಯ ಬೋಗಿಗಳನ್ನು ಹೊಂದಿರಲಿದೆ. ಹುಬ್ಬಳ್ಳಿ-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ ಆರಂಭಕ್ಕೆ ಸಹಕರಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಧನ್ಯವಾದ ಹೇಳಿದ್ದಾರೆ.
ಹುಬ್ಬಳ್ಳಿ: ಬಿಜೆಪಿ (BJP) ಟಿಕೆಟ್ ಕೈ ತಪ್ಪುವ ಭೀತಿ ಹಿನ್ನೆಲೆಯಲ್ಲಿ ಮಾಜಿ ಶಾಸಕ ಹಾಗೂ ಯಡಿಯೂರಪ್ಪ (B.S.Yediyurappa) ಆಪ್ತ ಎಸ್ ಐ ಚಿಕ್ಕನಗೌಡರ (Chikkanagoudar) ಜನ್ಮ ದಿನದ ಸಮಾರಂಭದಲ್ಲಿ ಗೋಳಾಡಿ ಬಿಕ್ಕಿ ಬಿಕ್ಕಿ ಜನರೆದುರು ಕಣ್ಣೀರು ಹಾಕಿದ ಪ್ರಸಂಗ ನಡೆದಿದೆ.
ಈ ಬಾರಿ ಬಿಜೆಪಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದ್ದು, ಜನ್ಮ ದಿನದ ಸಮಾರಂಭದಲ್ಲಿ ಗೋಳಾಡಿ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ್ದಾರೆ. ನನ್ನ ಪರಿಸ್ಥಿತಿ ಸರಿ ಇಲ್ಲ, ಆದರೂ ಇದು ಕಡೆ ಸಲ ಚುನಾವಣೆಗೆ ಸ್ಪರ್ಧಿಸುತ್ತೇನೆ. ನಿಮಗೆ ಕಾಲಿಗೆ ಬೀಳ್ತಿನಿ, ಕೈ ಮುಗಿತೀನಿ ಇದೊಂದು ಸಲ ಟಿಕೆಟ್ ನೀಡಿ ಅಂತ ಬಿಜೆಪಿ ವರಿಷ್ಠರನ್ನು ಪರಿಪರಿಯಾಗಿ ಬೇಡಿಕೊಂಡಿದ್ದಾರೆ. ಇತ್ತೀಚೆಗೆ ಕುಂದಗೋಳದಲ್ಲಿ ನಡೆದ ತಮ್ಮ ಜನ್ಮದಿನದ ಸಮಾರಂಭದಲ್ಲಿ ಗೋಳಾಡಿ ಮತ್ತೆ ಟಿಕೆಟ್ ನೀಡುವಂತೆ ಸಾವಿರಾರು ಜನರ ಮುಂದೆ ವೇದಿಕೆ ಮೇಲೆ ಮಂಡಿಯೂರಿ ನಮಸ್ಕಾರ ಮಾಡಿದ್ದಾರೆ. ಇದನ್ನೂ ಓದಿ: ಬೇನಾಮಿ ಆಸ್ತಿ ಗಳಿಕೆ- ಸುನಿಲ್ ಕುಮಾರ್ ವಿರುದ್ಧ ಲೋಕಾಯುಕ್ತಕ್ಕೆ ಮುತಾಲಿಕ್ ದೂರು
ಕುಂದಗೋಳ (Kundgol) ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‍ಗಾಗಿ ಇಬ್ಬರ ನಡುವೆ ಬಿಗ್ ಫೈಟ್ ನಡೆಯುತ್ತಿದ್ದು, ಮಾಜಿ ಸಿಎಂ ಬಿಎಸ್‍ವೈ ಸಂಬಂಧಿ ಚಿಕ್ಕನಗೌಡರ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಆಪ್ತ ಎಮ್.ಆರ್.ಪಾಟೀಲ್ (M.R.Patil) ನಡುವೆ ಟಿಕೆಟ್‍ಗಾಗಿ ತೀವ್ರ ಪೈಪೋಟಿಯಿದೆ. ಟಿಕೆಟ್ ಪಾಟೀಲ್ ಗೆ ಬಹುತೇಕ ಖಚಿತವಾಗಿರುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಚಿಕ್ಕನಗೌಡರ ತಮ್ಮ ಅಳಲು ತೋಡಿಕೊಂಡಿದ್ದಾರೆ.
ನವದೆಹಲಿ: ಮುಂಬರುವ ವಿಧಾನಸಭೆ (Assembly Election) ಮತ್ತು ಲೋಕಸಭೆ ಚುನಾವಣೆಯಲ್ಲಿ (Parliamentary Election) ಒಬಿಸಿಯಲ್ಲಿರುವ (OBC) ಸಮುದಾಯಗಳಿಗೆ ಕ್ಷೇತ್ರಗಳ ಸಂಖ್ಯೆ ಹೆಚ್ಚಿಸುವಂತೆ 40ಕ್ಕೂ ಅಧಿಕ ಹಿಂದುಳಿದ ವರ್ಗಗಳ ನಾಯಕರ ನಿಯೋಗ ಬಿಜೆಪಿ (BJP) ಹೈಕಮಾಂಡ್ ನಾಯಕರನ್ನ ಮನವಿ ಮಾಡಿದೆ.
ದೆಹಲಿಯಲ್ಲಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi), ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಸೇರಿ ಹಲವು ನಾಯಕರನ್ನು ಭೇಟಿ ಮಾಡಿದ ಒಬಿಸಿ ನಾಯಕರ ನಿಯೋಗ, ಸಣ್ಣ ಸಣ್ಣ ಸಮುದಾಯಗಳ ನಾಯಕರನ್ನ ಗುರುತಿಸಿ ಚುನಾವಣೆಯಲ್ಲಿ ಟಿಕೆಟ್ ನೀಡಬೇಕು ಎಂದು ಒಬಿಸಿ ನಾಯಕರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: `ಏಕರೂಪ ನಾಗರಿಕ ಸಂಹಿತೆ’ ಕುರಿತು ಚರ್ಚಿಸಲು ಫೆ.12ರಂದು ಮುಸ್ಲಿಮರ ಬೃಹತ್ ಸಮಾವೇಶ
ಈ ಬಗ್ಗೆ ಮಾತನಾಡಿದ ಮರಾಠ ಸಂಘದ ರಾಜ್ಯಾಧ್ಯಕ್ಷ ಶಾಮಸುಂದರ್ ಗಾಯಕವಾಡ್, ಲೋಕಸಭೆ ವಿಧಾನಸಭೆ ಚುನಾವಣೆಯಲ್ಲಿ ಒಬಿಸಿ ಅಭ್ಯರ್ಥಿಗಳನ್ನ ಕಡೆಗಣಿಸಲಾಗುತ್ತಿದೆ. ರಾಜ್ಯದಲ್ಲಿ ಶೇ.35 ಒಬಿಸಿ, ಎಸ್ಸಿ – ಎಸ್ಟಿ ಮತಗಳು (SCST Community Vote) ಶೇ.23, ಲಿಂಗಾಯತ ಶೇ.16, ಒಕ್ಕಲಿಗ ಶೇ.11, ಬ್ರಾಹ್ಮಣರು ಶೇ.4 ರಷ್ಟಿದ್ದಾರೆ. ಈ ಪೈಕಿ ಒಬಿಸಿ ಶೇ.20ಕ್ಕೂ ಅಧಿಕ ಜನರು ಬಿಜೆಪಿಗೆ (BJP) ಮತ ಚಲಾಯಿಸುತ್ತಿದ್ದಾರೆ. ಎಸ್ಸಿ ಎಸ್ಟಿ ಶೇ.15, ಒಕ್ಕಲಿಗ ಮತ್ತು ಲಿಂಗಾಯತ ಸೇರಿ ಶೇ.17 ಜನರು ಬಿಜೆಪಿಗೆ ಮತ ಹಾಕಿದ್ದಾರೆ. ಮತ ಪ್ರಮಾಣದಲ್ಲಿ ಒಬಿಸಿ ಜನರೇ ಹೆಚ್ಚು ಬಿಜೆಪಿಗೆ ಮತ ಚಲಾಯಿಸಿದ್ದಾರೆ. ಅದಾಗ್ಯೂ ನಮ್ಮನ್ನ ನಿರ್ಲಕ್ಷಿಸಿ ಕೇವಲ ವೀರಶೈವ ಲಿಂಗಾಯತ, ಒಕ್ಕಲಿಗರು, ಬ್ರಾಹ್ಮಣರಿಗೆ ಹೆಚ್ಚಿನ ಮಣೆ ಹಾಕಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಲ ರಾಜ್ಯಧ್ಯಕ್ಷ ಎಲ್. ನಾಗರಾಜ್ ಆಚಾರ್ ಮಾತನಾಡಿ, ಬಹಳಷ್ಟು ವರ್ಷಗಳಿಂದ ಬಿಜೆಪಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ಪಕ್ಷಕ್ಕಾಗಿ ದುಡಿದ್ದೇವೆ, ಹಿಂದುಳಿದ ವರ್ಗದಲ್ಲಿರುವ ಬಹುತೇಕ ಸಮುದಾಯಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನ ದೊಡ್ಡ ಪ್ರಮಾಣದಲ್ಲಿ ಬೆಂಬಲಿಸುತ್ತಿವೆ. ಈ ಹಿನ್ನಲೆ ಆ ವರ್ಗಗಳಿಗೆ ಆದ್ಯತೆ ನೀಡಬೇಕು. ಬೇರೆ ಬೇರೆ ವಿಭಾಗಗಳಲ್ಲಿ ಆದ್ಯತೆ ನೀಡಬೇಕು ಎಂದು ಕೋರಿದರು.
ವಿಶ್ವಕರ್ಮ ಮುಖಂಡ ಹಾಗೂ 2018ರ ಚುನಾವಣೆ ಮಂಡ್ಯ ಪರಾರ್ಜಿತ ಅಭ್ಯರ್ಥಿ ಡಿ.ವೆಂಕಟೇಶ ಮಾತನಾಡಿ, ನಮ್ಮ ಒಬಿಸಿಯಲ್ಲಿರುವ ಸಣ್ಣ ಸಣ್ಣ ಸಮುದಾಯಗಳು ಎಲ್ಲ ದೊಡ್ಡ ಪ್ರಮಾಣದಲ್ಲಿಲ್ಲ. ಯಾವ ಕ್ಷೇತ್ರದಲ್ಲೂ ನಿರ್ಣಾಯಕವಾಗಿಲ್ಲ. ಆದ್ದರಿಂದ ನಮ್ಮ ಸಮುದಾಯದ ನಾಯಕರಿಗೆ ಅವಕಾಶ ನಿರಾಕರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದರು.
ನಿಯೋಗದಲ್ಲಿ ಮರಾಠ, ಗಾಣಿಗ, ಕುರುಬ, ಗೊಲ್ಲ, ವಿಶ್ವಕರ್ಮ, ಕಂಬಾರ, ಬಲಿಜ, ಈಡಿಗ, ನೇಕಾರ, ಸೇರಿ ಇನ್ನು ಹಲವು ಸಮುದಾಯದ ನಾಯಕರು ಇದ್ದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಒಳ್ಳೆಯ ಬಿತ್ತನೆಯಲ್ಲಿ ಪಾರ್ಥೇನಿಯಂ ಹುಡುಕುವುದು ಬೇಡ. ಪ್ರಹ್ಲಾದ್ ಜೋಶಿ (Pralhad Joshi) ಪಾರ್ಥೇನಿಯಂ ಇದ್ದಂತೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಲೇವಡಿ ಮಾಡಿದರು.
ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ನಿತೀಶ್ ಕುಮಾರ್ ಡಿಎನ್‌ಎ ಬಗ್ಗೆ ಚರ್ಚೆ ಆಗಿಲ್ವಾ? ಪೇಶ್ವೆ ಸಮಾಜದ ಡಿಎನ್‌ಎ ಇರುವ ವ್ಯಕ್ತಿಯನ್ನು ಸಿಎಂ ಮಾಡಲು ಹುನ್ನಾರ ಮಾಡಿದ್ದಾರೆ ಅಂತ ಹೇಳಿದೆ. ಇದಕ್ಕೆ ಯಾಕೆ ಗಾಬರಿ? ನಾನು ಯಾವುದೇ ಸಮಾಜಕ್ಕೆ ಅಗೌರವ ತೋರಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಪ್ರಹ್ಲಾದ್ ಜೋಶಿ ಯಾಕೆ ಸಿಎಂ ಆಗಬಾರದು?- ಹೆಚ್‍ಡಿಕೆ ಹೇಳಿಕೆಗೆ ರೇಣುಕಾಚಾರ್ಯ ತಿರುಗೇಟು
ನಾನು ಸಮಾಜದ ಬಗ್ಗೆ ಅಗೌರವ ತೋರಿಲ್ಲ. ದೇಶದ ಇತಿಹಾಸದಲ್ಲಿ ನಡೆದ ಬೆಳವಣಿಗೆ ಹೇಳಿದ್ದೇನೆ. ನಿನ್ನೆ ನಾನು ಕೊಟ್ಟ ಹೇಳಿಕೆ ಬ್ರಾಹ್ಮಣ ಸಮಾಜದ ಅವಹೇಳನ ಅಲ್ಲ. ಹಳೆಯ ಕರ್ನಾಟಕದಲ್ಲಿ ಇರುವ ಬ್ರಾಹ್ಮಣ ಸಮಾಜ ಸುಸಂಸ್ಕೃತ ಸಮಾಜ. ಬ್ರಾಹ್ಮಣ ಸಮಾಜದ ಬಗ್ಗೆ ಗೌರವವಿದೆ. ನಮ್ಮ ಕುಟುಂಬ ಬ್ರಾಹ್ಮಣ ಸಮಾಜ ಮತ್ತು ಶೃಂಗೇರಿ ಬಗ್ಗೆ ಗೌರವ ಇಟ್ಟುಕೊಂಡಿದ್ದೇವೆ ಎಂದು ಹೇಳಿದರು.
ಪ್ರಹ್ಲಾದ್ ಜೋಶಿಯನ್ನು ಕರ್ನಾಟಕದ ಸಿಎಂ ಮಾಡಲು ಆರ್‌ಎಸ್‌ಎಸ್ ಹುನ್ನಾರ ನಡೆಸಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಳೇ ಕರ್ನಾಟಕ ಭಾಗದ ಬ್ರಾಹ್ಮಣರಂತೆ ಒಳ್ಳೆಯ ಸಂಸ್ಕೃತಿಯವರಲ್ಲ. ಶೃಂಗೇರಿ ಮಠವನ್ನು ಧ್ವಂಸ ಮಾಡಿದ, ಮಹಾತ್ಮ ಗಾಂಧಿಯನ್ನು ಕೊಂದ ವಂಶಕ್ಕೆ ಸೇರಿದ ಬ್ರಾಹ್ಮಣರು ಎಂದು ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ಬ್ರಾಹ್ಮಣ ಸಮಾಜಕ್ಕೆ ಅವಹೇಳನ ಮಾಡಿಲ್ಲ- ಭಾರೀ ವಿರೋಧದ ಬಳಿಕ ಹೆಚ್‍ಡಿಕೆ ಸ್ಪಷ್ಟನೆ
ಹೆಚ್‌ಡಿಕೆ ಹೇಳಿಕೆಗೆ ಬಿಜೆಪಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹಾಗೂ ಸಮುದಾಯದ ಮುಖಂಡರು ಖಂಡನೆ ವ್ಯಕ್ತಪಡಿಸಿದರು. ಪ್ರಹ್ಲಾದ್ ಜೋಶಿ ಅವರನ್ನು ಟೀಕಿಸುವ ಭರದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಿದ್ದಾರೆಂದು ಗಂಭೀರ ಆರೋಪ ಮಾಡಲಾಗಿತ್ತು.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಎರಡು ಬಾರಿ ಆಕಸ್ಮಿಕ ಮುಖ್ಯಮಂತ್ರಿಯಾದವರು. ಸಿಎಂ ಆಗಿ ಅಧಿಕಾರ ಎಂಜಾಯ್ ಮಾಡಿದ್ದಾರೆ. ಈಗ ಜೆಡಿಎಸ್ ಕಥೆ ಮುಗಿಯುತ್ತಿದೆ. ಹೀಗಾಗಿ ಹತಾಶರಾಗಿ ಬಿಜೆಪಿ ನಾಯಕರ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ, ಶಾಸಕ ಎಂ.ಪಿ ರೇಣುಕಾಚಾರ್ಯ (MP Renukacharya) ವ್ಯಂಗ್ಯ ಮಾಡಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ (BJP) ಅಧಿಕಾರಕ್ಕೆ ಬರಲಿದೆ, ಯಾರು ಸಿಎಂ ಆಗಲಿದ್ದಾರೆ ಎನ್ನುವುದು ಅಪ್ರಸ್ತುತ. ಪ್ರಹ್ಲಾದ್ ಜೋಶಿ ಸಿಎಂ ಆಗಬಾರದಾ? ಅವರು ಪಕ್ಷದ ರಾಜಧ್ಯಕ್ಷರಾಗಿದ್ದರು, ಸಂಘಟನೆ ಮಾಡಿದವರು, ಬೇರೆ ರಾಜ್ಯಗಳಿಗೆ ಉಸ್ತುವಾರಿಯಾಗಿದ್ದಾರೆ, ಕೇಂದ್ರ ಸಚಿವರಾಗಿದ್ದಾರೆ ಪ್ರಹ್ಲಾದ್ ಜೋಶಿ (Pralhad Joshi) ಯಾಕೆ ಸಿಎಂ ಆಗಬಾರದು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಬ್ರಾಹ್ಮಣ ಸಮಾಜಕ್ಕೆ ಅವಹೇಳನ ಮಾಡಿಲ್ಲ- ಭಾರೀ ವಿರೋಧದ ಬಳಿಕ ಹೆಚ್‍ಡಿಕೆ ಸ್ಪಷ್ಟನೆ
ನರೇಂದ್ರ ಮೋದಿ (Narendra Modi) ಹಿಂದುಳಿದ ವರ್ಗದವರು ಪ್ರಧಾನಿಯಾಗಿದ್ದಾರೆ. ಹಾಗೆಯೇ ಅರ್ಹತೆ ಇದ್ದವರು ಸಿಎಂ ಆಗಲಿದ್ದಾರೆ ನಮ್ಮ ಪಕ್ಷದ ಬಗ್ಗೆ ಮಾತನಾಡುವುದಕ್ಕೆ ನೀವ್ಯಾರು? ನಿಮಗೆ ಅಧಿಕಾರ ಕೊಟ್ಟವರು ಯಾರು ಎಂದು ರೇಣುಕಾಚಾರ್ಯ ತಿರುಗೇಟು ನೀಡಿದರು.
Live Tv
[brid partner=56869869 player=32851 video=960834 autoplay=true]
ಮೊದಲ ದಿನವೇ ವಿಮಾನದ ಎಲ್ಲಾ ಸಿಟ್ ಗಳು ಸಂಪೂರ್ಣ ಭರ್ತಿಯಾಗಿದ್ದು, ಈ ಸೇವೆಯು ಜನರಿಗೆ ಅನುಕೂಲಕರವಾಗಿದೆ ಎಂಬುದು ಖುಷಿಯ ಸಂಗತಿ. ಈ ಸೇವೆಯಿಂದ ಹುಬ್ಬಳ್ಳಿ, ಧಾರವಾಡ ಅವಳಿ ನಗರ ಸೇರಿದಂತೆ ಇಡೀ ಉತ್ತರ ಕರ್ನಾಟಕ ಭಾಗದ ಜನರಿಗೆ ವ್ಯಾಪಾರದ ದೃಷ್ಟಿಯಿಂದ ಸಾಕಷ್ಟು ಅನುಕೂಲವಾಗಲಿದೆ.