ನವದೆಹಲಿ: ಹುಬ್ಬಳ್ಳಿಯಿಂದ (Hubballi) ದೆಹಲಿಗೆ (Delhi) ಪ್ರತಿನಿತ್ಯ ನೇರ ವಿಮಾನ ಸೇವೆ ಪ್ರಾರಂಭಿಸುವ ಕೋರಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಇಂಡಿಗೋ ಏರ್‌ಲೈನ್ಸ್ (Indigo Airlines), ಇದೇ ನವೆಂಬರ್ 14ರಿಂದ ಪ್ರತಿನಿತ್ಯ ಈ ಸೇವೆ ಪ್ರಾರಂಭಿಸುವುದಾಗಿ ಘೋಷಿಸಿದೆ. ಟಿಕೆಟ್ ಬುಕ್ಕಿಂಗ್ ಕೂಡ ಈಗಾಗಲೇ ಪ್ರಾರಂಭವಾಗಿದೆ.
ದೆಹಲಿಯಿಂದ ಹುಬ್ಬಳ್ಳಿಗೆ ಬೆಳಗ್ಗೆ 10:00 ಗಂಟೆಗೆ ಹೊರಡಲಿದ್ದು ಮಧ್ಯಾಹ್ನ 12:45ಕ್ಕೆ ತಲುಪಲಿದೆ. ಹುಬ್ಬಳ್ಳಿಗೆ ದೆಹಲಿಯಿಂದ 13:15 ಗಂಟೆಗೆ ಹೊರಡಲಿದ್ದು ಸಂಜೆ 15:45ಕ್ಕೆ ಹುಬ್ಬಳ್ಳಿ ತಲುಪಲಿದೆ. ಈ ಬಗ್ಗೆ ಪ್ರಹ್ಲಾದ್ ಜೋಶಿ ಕೂಡಾ ಟ್ವೀಟ್ ಮಾಡಿದ್ದು ಮಾಹಿತಿ ಹಂಚಿಕೊಂಡಿದ್ದಾರೆ.
Live Tv
[brid partner=56869869 player=32851 video=960834 autoplay=true]
-ವಿಶ್ವದ ಅತೀ ಉದ್ಧದ ರೈಲ್ವೆ ಪ್ಲಾಟ್ ಫಾರ್ಮ್ ಅನ್ನೋ ಕೀರ್ತಿ ಹುಬ್ಬಳ್ಳಿಗೆ -ರೈಲ್ವೆ ಸಂಪರ್ಕದಲ್ಲಿ ದೇಶದಲ್ಲಿ ಕ್ರಾಂತಿಯಾಗುತ್ತಿದೆ
ಹುಬ್ಬಳ್ಳಿ: ವಿಶ್ವದ ಅತೀ ಉದ್ಧದ ರೈಲ್ವೆ ಪ್ಲಾಟ್ ಫಾರ್ಮ್ ಹೊಂದಿರುವ ಕೀರ್ತಿ ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕಿದೆ. ದ್ವಿತೀಯ ದರ್ಜೆ ನಗರದಲ್ಲಿ ಮೂರನೇ ದ್ವಾರ ಇರುವುದು ಕೇವಲ ಹುಬ್ಬಳ್ಳಿಯಲ್ಲಿ ಮಾತ್ರ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹರ್ಷ ವ್ಯಕ್ತಪಡಿಸಿದ್ದಾರೆ.
ರೈಲ್ವೆ ನಿಲ್ದಾಣದ ಮೂರನೇ ಮುಖ್ಯ ದ್ವಾರಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಮೂರನೇ ಮುಖ್ಯ ದ್ವಾರ ಉದ್ಘಾಟನೆ ಆಗುತ್ತಿರುವುದು ನಮಗೆ ಬಹಳ ಸಂತೋಷವಾಗಿದೆ. ದಿವಂಗತ ರೈಲ್ವೆ ಸಚಿವ ಸುರೇಶ್ ಅಂಗಡಿಯವರ ಪರಿಶ್ರಮದಿಂದ ರೈಲ್ವೆ ನಿಲ್ದಾಣಕ್ಕೆ ಸಿದ್ದಾರೂಢರ ಹೆಸರನ್ನು ಇಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇನ್ಫೋಸಿಸ್ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್. ಎಸ್ ರಾಜೀನಾಮೆ
ರಾಜಕಾರಣಿ ಅಂದರೆ ಬುದ್ಧಿ ಇಲ್ಲದವರು ಎನ್ನುವ ಮಾತಿದೆ. ಆದರೆ ಸದ್ಯ ಇರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಇಂಜಿನೀಯರಿಂಗ್‍ನಲ್ಲಿ ಗೋಲ್ಡ್ ಮೆಡಲಿಸ್ಟ್. ಈ ಹಿಂದೆ ಎರಡು ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದಾರೆ. ಇದೀಗ ಮಂತ್ರಿಯಾಗಿ ಜನರಿಗೆ ಹತ್ತಿರವಾಗಿದ್ದಾರೆ. ಸದ್ಯ ಭಾರತದಲ್ಲಿ ರೈಲ್ವೆ ಪ್ರಗತಿ ಸಾಧಿಸಿದೆ ಎಂದು ಹೇಳಿದ್ದಾರೆ.
Live Tv
[brid partner=56869869 player=32851 video=960834 autoplay=true]
ಧಾರವಾಡ: ನವೀಕೃತ ಧಾರವಾಡದ ರೈಲು ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೇಂದ್ರ ರೇಲ್ವೇ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw), ಧಾರವಾಡ ಪೇಡಾವನ್ನು (Dharwad Peda) ಹಾಡಿ ಹೊಗಳಿದರು. ಅದರ ಜೊತೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರನ್ನೂ ವೈಷ್ಣವ್ ಕೊಂಡಾಡಿದ ಪ್ರಸಂಗ ನಡೆಯಿತು.
ಪೇಡಾ ನಗರದ ಜನರಿಗೆ ನಮಸ್ಕಾರ ಎಂದ ಸಚಿವ ವೈಷ್ಣವ್ ಅವರು, ಧಾರವಾಡ ಪೇಡಾ ತಿನ್ನಬೇಕು ಎಂದು ಹೇಳಿ ನಸು ನಕ್ಕರು. ಇಲ್ಲಿ ಜೋಶಿ ಅವರು ಇದ್ದಾರೆ, ಅದರ ಜೊತೆಗೆ ಪೇಡಾನೂ ಇದೆ. ವಂದೇ ಭಾರತ್ ರೈಲು ನಿಮಗೆ ಕೊಡಲೇ ಬೇಕು. ಯಾಕಂದ್ರೆ ನಮಗೆ ಪೇಡಾ ಸಿಕ್ಕಿದೆ ಎಂದು ನುಡಿದರು.
ನಾವು ನಿಮಗೆ ಪಕ್ಕಾ ರೈಲು ಕೊಡುತ್ತೇವೆ. ಮೋದಿ ಅವರ ಬಳಿ ಹೋಗಿ ವಂದೇ ಭಾರತ್ ತಂದಿದ್ದೇವೆ. ಈಗ ಪೇಡಾ ಕೊಡಿ ಎಂದು ಕೇಳುತ್ತೇವೆ. ಇಲ್ಲಿ ಜೋಶಿ ಅವರಿಂದ ಬಹಳ ಅಭಿವೃದ್ಧಿ ಕೆಲಸ ಆಗಿದೆ. ಪೇಡಾ ತಿನ್ನಿಸಿ ಅವರು ಇದನ್ನು ತಂದಿದ್ದಾರೆ ಎಂದು ಹಾಸ್ಯವಾಡಿದರು. ಇದನ್ನೂ ಓದಿ: ವಾಜಪೇಯಿ ನಿರ್ಮಾಣ ಮಾಡಿದ ರಸ್ತೆಯಲ್ಲಿ ಭಾರತ ಜೋಡೋ ಮಾಡ್ತಿದ್ದಾರೆ: ಕಟೀಲ್ ಕಿಡಿ
ಈ ವೇಳೆ ಹುಬ್ಬಳ್ಳಿ ದೆಹಲಿ ನಿಜಾಮುದ್ದೀನ್ ರೈಲಿಗೆ ಸವಾಯಿ ಗಂಧರ್ವ ಎಂಬ ಹೆಸರು ಇಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬೇಡಿಕೆ ಇಟ್ಟರು. ಅವರ ಬೇಡಿಕೆಯನ್ನೂ ಈಡೇರಿಸುತ್ತೇನೆ ಎಂದು ವೈಷ್ಣವ್ ಭರವಸೆ ನೀಡಿದರು. ಇದನ್ನೂ ಓದಿ: ಜಿಂಕೆ ಮೇಲೆ ಕೋತಿ ಸವಾರಿ- ಐಐಟಿ ಮದ್ರಾಸ್‌ನಲ್ಲಿ ಅಪರೂಪದ ದೃಶ್ಯ ಸೆರೆ
Live Tv
[brid partner=56869869 player=32851 video=960834 autoplay=true]
ಹುಬ್ಬಳ್ಳಿ: ಭಾರತ್ ಜೋಡೋ ಯಾತ್ರೆಯಿಂದ (Bharat Jodo Yatra) ರಾಹುಲ್ ಗಾಂಧಿ (Rahul Gandhi) ಮತ್ತು ಸಿದ್ದರಾಮಯ್ಯ (Siddaramaiah) ಆರೋಗ್ಯ ಸುಧಾರಿಸಿದೆ. ಕಾಂಗ್ರೆಸ್ ಅವರನ್ನ ನಿಷ್ಪಪ್ರಯೋಜಕ, ಅಪ್ರಯೋಜಕ, ಬುದ್ಧಿ ಇಲ್ಲದವರು ಅಂತ ನಾವು ಹೇಳುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರು ಲೇವಡಿ ಮಾಡಿದ್ದಾರೆ.
ನನ್ನ ವಿರುದ್ಧ ಅಪಪ್ರಚಾರಕ್ಕೆ ಕೋಟಿ, ಕೋಟಿ ಖರ್ಚು ಮಾಡುತ್ತಾರೆ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಪ್ರಹ್ಲಾದ್ ಜೋಶಿ ಅವರು, ರಾಹುಲ್ ಗಾಂಧಿ ವಿರುದ್ಧ ನಾವ್ಯಾಕೆ ಖರ್ಚು ಮಾಡಬೇಕು. ಇದು ಜನರಿಗೂ ಗೊತ್ತಾಗಿದೆ ಅವರ ಪಕ್ಷದವರಿಗೂ ಗೊತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಒಕ್ಕಲಿಗ ಮತ ಸೆಳೆಯಲು JDS ಮೇಲೆ ಚೆಲುವರಾಯಸ್ವಾಮಿ ಸಾಫ್ಟ್ ಕಾರ್ನರ್
ಕಾಂಗ್ರೆಸ್ (Congress) ವಿರೋಧ ಪಕ್ಷದಲ್ಲಿ ಕುರುವುದಕ್ಕೆ ಅರ್ಹತೆ ಇಲ್ಲ. ಒಂದು ಕಾಲದಲ್ಲಿ 28 ರಾಜ್ಯಗಳಲ್ಲಿ 26, 27 ರಾಜ್ಯಗಳಲ್ಲಿ ಅವರದೇ ಅಧಿಕಾರವಿತ್ತು. ಆದರೆ ಈಗ ಕೇವಲ ಎರಡು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ಇದಲ್ಲದೆ ರಾಜಸ್ಥಾನದಲ್ಲೂ ಇದೀಗ ಅಲುಗಾಡುತ್ತಿದೆ. ಸ್ಪರ್ಧೆ ಮಾಡುವ ಎಲ್ಲ ಚುನಾವಣೆಯಲ್ಲಿ ಸೋಲುತ್ತಿದಾರೆ. ಉತ್ತರ ಪ್ರದೇಶದಲ್ಲಿ ಒಂದು ಸೀಟ್ ಗೆದ್ದಿಲ್ಲ. 398 ಸೀಟ್‍ನಲ್ಲಿ 388 ಸೀಟ್‍ನಲ್ಲಿ ಡಿಪಾಸೀಟ್ ಕಳೆದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ರಾಜಸ್ಥಾನದ ಹಿರಿಯ ಕಾಂಗ್ರೆಸ್ ನಾಯಕ ಭನ್ವರ್ ಲಾಲ್ ಶರ್ಮಾ ನಿಧನ
Live Tv
[brid partner=56869869 player=32851 video=960834 autoplay=true]
ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್ ಕನ್ನಡ ಸಂಘದ(Ahmedabad Kannada Organisation) 75ನೇ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ(Narendra Modi) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಏಕ ಭಾರತ್, ಶ್ರೇಷ್ಠ ಭಾರತ್. ಇಂತಹ ಸಾಂಸ್ಕೃತಿಕ ವಿನಿಮಯಗಳು ಉತ್ತೇಜನಕಾರಿ. ಕರ್ನಾಟಕದ ಸಂಸ್ಕೃತಿ ಮತ್ತು ಕನ್ನಡ ಭಾಷೆಯನ್ನು ಭಾರತದಾದ್ಯಂತ ವ್ಯಾಪಕವಾಗಿ ಗೌರವಿಸಲಾಗುತ್ತಿದೆ ಎಂದು ಮೋದಿ ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.
ಏಕ ಭಾರತ್, ಶ್ರೇಷ್ಠ ಭಾರತ್.
ಇಂತಹ ಸಾಂಸ್ಕೃತಿಕ ವಿನಿಮಯಗಳು ಉತ್ತೇಜನಕಾರಿ. ಕರ್ನಾಟಕದ ಸಂಸ್ಕೃತಿ ಮತ್ತು ಕನ್ನಡ ಭಾಷೆಯನ್ನು ಭಾರತದಾದ್ಯಂತ ವ್ಯಾಪಕವಾಗಿ ಗೌರವಿಸಲಾಗುತ್ತಿದೆ! https://t.co/4rbVVzAnJl
ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕೇಂದ್ರ ಸಂಸದೀಯ ಮತ್ತು ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಅಹಮದಾಬಾದ್‌ನಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ ಸ್ಥಳ ನೀಡುವಂತೆ ಗುಜರಾತ್(Gujarat) ಸಿಎಂ ಭೂಪೇಂದ್ರ ಪಟೇಲ್ ಅವರಲ್ಲಿ ಮನವಿ ಮಾಡಿದ್ದಾರೆ.
ಕರ್ನಾಟಕ ಭವನ ನಿರ್ಮಾಣಕ್ಕೆ ಕರ್ನಾಟಕ ರಾಜ್ಯ ಸರ್ಕಾರ ಹಾಗೂ ತಮ್ಮ ವೈಯಕ್ತಿಕ ಸಹಕಾರ ನೀಡುವುದಾಗಿ ಅವರು ಹೇಳಿದರು. ವಾರ್ಷಿಕೋತ್ಸವದಲ್ಲಿ ಗುಜರಾತ್ ಕನ್ನಡಿಗರೊಂದಿಗೆ ಎರಡು ರಾಜ್ಯಗಳು ಹೊಂದಿರುವ ವಿಶೇಷ ಬಾಂಧವ್ಯದ ಕುರಿತ ಹಲವು ವಿಚಾರಗಳನ್ನು ಹಂಚಿಕೊಂಡರು.
ನರ್ಮದಾ ನದಿಯಿಂದ ಕಾವೇರಿ ವರೆಗೆ ಕನ್ನಡ ಹಾಗೂ ಗುಜರಾತಿ ಮಾತನಾಡುವವರಿದ್ದಾರೆ. ಈ ಬಾಂಧವ್ಯ ನೂರಾರು ವರ್ಷಗಳಿಂದೆ ನಡೆದುಕೊಂಡು ಬಂದಿದೆ, ಮುಂದೆ ಕೂಡ ಇದೇ ರೀತಿ ಉಳಿಯಲಿದೆ.
ಮುಂಚಿನಿಂದಲೂ ನನಗೆ ವೈಯ್ಯಕ್ತಿವಾಗಿ ಹಾಗೂ ಸಂಘಟನೆಯ ದೃಷ್ಟಿಯಿಂದ ಗುಜರಾತಿ ಸಮುದಾಯದೊಂದಿಗೆ ಗಾಢವಾದ ಸಂಬಂಧವಿದೆ.3/12 pic.twitter.com/r8TkLexMgY
ಒಂದೆಡೆ ದೇಶದ ಆಜಾದಿ ಕಾ ಅಮೃತ ಮಹೋತ್ಸವ ನಡೆಯುತ್ತಿದೆ. ಗುಜರಾತ್ ನಲ್ಲಿ ಕನ್ನಡ ಸಂಘದ 75ನೇ ವರ್ಷದ ಸಂಭ್ರಮ ನಡೆಯುತ್ತಿದೆ. ಅಂದಿನ ದಿನಗಳಲ್ಲಿಯೇ ಕನ್ನಡಿಗರು ಗುಜರಾತ್ ರಾಜ್ಯಕ್ಕೆ ಬಂದು, ಇಲ್ಲಿನ ಜನರೊಂದಿಗೆ ಬೆರೆತು, ವ್ಯಾಪಾರ-ವಹಿವಾಟು ನಡೆಸಿ ಗುಜರಾತನ ಏಳಿಗೆಗೆ ಕೊಡುಗೆಗಳನ್ನು ನೀಡಿದ್ದಾರೆ. ಇದು ಶ್ಲಾಘನೀಯ ಕಾರ್ಯ. ನರ್ಮದಾ ನದಿಯಿಂದ ಕಾವೇರಿವರೆಗೆ ಕನ್ನಡ ಹಾಗೂ ಗುಜರಾತಿ ಮಾತನಾಡುವವರಿದ್ದಾರೆ. ಈ ಬಾಂಧವ್ಯ ನೂರಾರು ವರ್ಷಗಳಿಂದೆ ನಡೆದುಕೊಂಡು ಬಂದಿದೆ ಎಂದು ಜೋಶಿ(Pralhad joshi) ಸಂತಸ ವ್ಯಕ್ತಪಡಿಸಿದರು.
ಆರ್‌ಎಸ್‌ಎಸ್, ಜನ ಸಂಘ ಹಾಗೂ ಬಿಜೆಪಿಯನ್ನು ಕಟ್ಟುವಾಗ ಆರಂಭಿಕ ದಿನಗಳಲ್ಲಿ ನಮಗೆ ಸಹಕಾರ ನೀಡುತ್ತಿದ್ದವರು ಗುಜರಾತಿಗಳು. ಈ ದೃಷ್ಟಿಯಿಂದ ಈ ಸಮುದಾಯದೊಂದಿಗೆ ನನ್ನ ವಿಶೇಷ ಸಂಬಂಧವಿದೆ ಎಂದು ಜೋಶಿ ತಮ್ಮ ಹಳೆಯ ನೆನಪುಗಳನ್ನು ಸ್ಮರಿಸಿದರು. ಇದನ್ನೂ ಓದಿ: ತಿರುಪತಿಯಲ್ಲಿ ದರ್ಶನಕ್ಕೆ ಕಾಯಬೇಕು 50 ಗಂಟೆ
ಆಜಾದಿ ಕಾ ಅಮೃತ ಮಹೋತ್ಸವ ಸಮಯದಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ನಮ್ಮ ಪ್ರಧಾನಿಗಳು ಕರೆ ನೀಡಿದಾಗ, ದೇಶ ಸ್ಪಂದಿಸಿದ ರೀತಿ ಅದ್ಭುತ. ಗುಜರಾತ ಹಾಗೂ ಕರ್ನಾಟಕ ಸೇರಿದಂತೆ ಪ್ರತಿ ಮನೆಯ ಮೆಲೆ ತ್ರಿವರ್ಣ ರಾರಾಜಿಸುತ್ತಿತ್ತು. 5/12 pic.twitter.com/9IbUyvA5QD
ಇಂದು ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ದೇಶ ಅಭೂತಪೂರ್ವ ಬೆಳವಣಿಗೆ ಕಾಣುತ್ತಿದೆ. 200 ವರ್ಷಗಳ ವರೆಗೆ ನಮ್ಮನ್ನು ಆಳಿ, ದೇಶ ಬಿಟ್ಟು ಹೋಗುವಾಗ ಅಪಹಾಸ್ಯ ಮಾಡಿ, ಈ ದೇಶದ ಏಳಿಗೆ ಸಾಧ್ಯವೇ ಇಲ್ಲ ಎಂಬ ರೀತಿಯಲ್ಲಿ ಮಾತನಾಡಿದ್ದ ಬ್ರಿಟಿಷರನ್ನು ಹಿಂದಿಕ್ಕಿ ನಾವು ಇಂದು ಐದನೇ ಅತ್ಯಂತ ಪ್ರಬಲ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದ್ದೇವೆ. ಈ ಸಾಧನೆಯಲ್ಲಿ ಕರ್ನಾಟಕ ಹಾಗೂ ಗುಜರಾತ್ ಅತ್ಯಂತ ಮಹತ್ವದ ಕೊಡುಗೆಗಳನ್ನು ನೀಡಿವೆ ಎಂದು ಜೋಶಿ ತಮ್ಮ ಅನಿಸಿಕೆ ಹಂಚಿಕೊಂಡರು.
ಈಗ ಸರ್ಕಾರ ಕೈಗೆತ್ತಿಕೊಂಡಿರುವ ಮತ್ತೊಂದು ಮಹತ್ವದ ಕಾರ್ಯ ನೂತನ ಶಿಕ್ಷಣ ನೀತಿ. ರಾಷ್ಟ್ರದ ಭವಿಷ್ಯದ ದೃಷ್ಟಿಯಿಂದ ಇದು ಅತ್ಯಂತ ಉತ್ತಮ ನೀತಿಯಾಗಿದೆ. ಆಯಾ ರಾಜ್ಯದಲ್ಲಿ, ಅಲ್ಲಿನ ಮಾತೃ ಭಾಷೆಗೆ ಪ್ರಾಮುಖ್ಯತೆ ನೀಡಲಾಗಿದೆ. ಇಂಗ್ಲೀಷ್‌ಗಿಂತ ಪುರಾತನ ಇತಿಹಾಸ ಹೊಂದಿರುವ ಭಾಷೆಗಳು ನಮ್ಮ ದೇಶದಲ್ಲಿದ್ದು, ಅವುಗಳಿಗೆ ಪ್ರಾಮುಖ್ಯತೆ ನೀಡುವ ದೃಷ್ಟಿಯಿಂದ ಈ ನೀತಿ ಜಾರಿಗೊಳಿಸಲಾಗುತ್ತಿದೆ. 19 ಹಾಗೂ 20ನೇ ಶತಮಾನಗಳು ಪಾಶ್ಚಿಮಾತ್ಯರ ಪಾಲಾಗಿದ್ದರೆ, 21ನೇ ಶತಮಾನ ಭಾರತದ್ದಾಗಿ ಮಾಡುವ ಸಂಕಲ್ಪದೊಂದಿಗೆ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರ ನೇತೃತ್ವದಲ್ಲಿ ನಾವು ಶ್ರಮಿಸುತ್ತಿದ್ದೇವೆ ಎಂದು ಇದೇ ವೇಳೆ ಪ್ರಹ್ಲಾದ್ ಜೋಶಿ ಹೇಳಿದರು.
Live Tv
[brid partner=56869869 player=32851 video=960834 autoplay=true]
ಧಾರವಾಡ: ಕಾಂಗ್ರೆಸ್ (Congress) ಪಕ್ಷ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ತಲುಪಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಕುಟುಕಿದ್ದಾರೆ.
ಧಾರವಾಡದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಸಂಪೂರ್ಣ ಸಾಯಬಾರದು ಅನ್ನೋ ಅಪೇಕ್ಷೆ ನಮಗೂ ಇದೆ. ಏಕೆಂದರೆ ವಿರೋಧ ಪಕ್ಷ ಇರಬೇಕು. ಆದರೆ ಕಾಂಗ್ರೆಸ್ ಆತ್ಮಹತ್ಯೆ ಮಾಡಿಕೊಳ್ಳೋಕೆ ಹೊರಟಿದ್ರೆ ದೇವರೂ ಕಾಪಾಡೋಕಾಗಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ರೀಲ್ಸ್ ಮಾಡಲು ಹೋಗಿ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವು
ರಾಹುಲ್ ಗಾಂಧಿ (Rahul Gandhi) ಯಾತ್ರೆಯಿಂದ ಬಿಜೆಪಿಗೆ (BJP) ನಡುಕ ಹುಟ್ಟಿದೆ ಎಂಬ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿಕೆ ವಿಚಾರವಾಗಿ ಮಾತನಾಡಿ, ನಾನು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ. ಎಲ್ಲೆಲ್ಲಿ ಚುನಾವಣೆ (Election) ಬರ್ತಾವೆ ಅಲ್ಲಲ್ಲಿ ರಾಹುಲ್ ಗಾಂಧಿಯನ್ನ ಕಳಿಸಿಕೊಡುವಂತೆ ಖರ್ಗೆ ಹಾಗೂ ಕಾಂಗ್ರೆಸ್ ಮುಖಂಡರಲ್ಲಿ ಕೈಮುಗಿದು ಬೇಡಿಕೊಳ್ಳುತ್ತೇನೆ. ಏಕೆಂದರೆ ರಾಹುಲ್ ಹೋದಲ್ಲೆಲ್ಲಾ ಕಾಂಗ್ರೆಸ್ ಸೋಲುತ್ತೆ. ಅವರು ಓಡಾಡಿದಷ್ಟು ಬಿಜೆಪಿಗೇ ಲಾಭ ಎಂದು ಹೇಳಿದ್ದಾರೆ.
ಖರ್ಗೆ ಎಐಸಿಸಿ ಅಧ್ಯಕ್ಷರಾದರೇ (AICC President) ಕಾಂಗ್ರೆಸ್‌ನಲ್ಲಿ ಬದಲಾವಣೆ ಆಗಬಹುದೆಂಬ ವಿಚಾರವಾಗಿ ಮಾತನಾಡಿದ ಅವರು, ಮನಮೋಹನ್ ಸಿಂಗ್ ಪ್ರಧಾನಿ ಆದಾಗ ಏನಾದ್ರು ಬದಲಾವಣೆ ಆಯ್ತಾ? ರಿಮೋಟ್ ಕಂಟ್ರೋಲ್ ಅಧ್ಯಕ್ಷರು, ರಿಮೋಟ್ ಕಂಟ್ರೋಲ್ ಪ್ರಧಾನಿಗಳೇ ಇದ್ದರು. ಅವರು ಏನು ಮಾಡಬೇಕಾದರೂ, ಮನೆಯಿಂದ ಒಂದು ಹೆಜ್ಜೆ ಹೊರಗಿಡಬೇಕಾದ್ರು ಗಾಂಧಿ ಕುಟುಂಬ ಕೇಳಿ ಮಾಡಬೇಕು. ಅದನ್ನು ಶಶಿ ತರೂರ್ ಅವರೇ ಹೇಳಿದ್ದಾರೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ದೇವಿಗೆ ಅರ್ಪಿಸಿದ್ದ ಸೇಬು ಹಣ್ಣನ್ನು ತಿಂದಿದ್ದಕ್ಕೆ 6ರ ಬಾಲಕನನ್ನು ಥಳಿಸಿ ಕೊಲೆ
ಪಿಎಫ್‌ಐ ಮತ್ತು ಆರ್‌ಎಸ್‌ಎಸ್ ಒಂದೇ ನಾಣ್ಯದ ಎರಡು ಮುಖ ಎಂಬ ಬಿ.ಕೆ.ಹರಿಪ್ರಸಾದ್ ಹೇಳಿಕೆ ವಿಚಾರವಾಗಿ ಮಾತನಾಡಿದ ಜೋಶಿ, ನೆಹರೂ ಕಾಲದಿಂದಲೂ ಕಾಂಗ್ರೆಸ್‌ಗೆ ತುಷ್ಟೀಕರಣದ ರಾಜಕಾರಣ ರೂಢಿಯಾಗಿಬಿಟ್ಟಿದೆ. ಇಂದಿರಾ ಗಾಂಧಿ ಕಾಲದಲ್ಲಿ ಪರಾಕಾಷ್ಠೆಗೆ ತಲುಪಿ, ಸೋನಿಯಾ ಗಾಂಧಿ ಕಾಲದಲ್ಲಿ ತುಷ್ಟೀಕರಣ ಆಕಾಶ ದಾಟಿ ಮೇಲೆ ಹೋಗಿದೆ. ಪಿಎಫ್‌ಐ ಬ್ಯಾನ್ ಮಾಡಿರುವುದು ಅವರಿಗೆ ವಿರೋಧ ಮಾಡಲು ಸಾಧ್ಯವಾಗುತ್ತಿಲ್ಲ. ವಿರೋಧ ಮಾಡಿದರೆ ಜನ ಸರಿಯಾದ ಪಾಠ ಕಲಿಸುತ್ತಾರೆ. ಅದಕ್ಕಾಗಿ ಆರ್‌ಎಸ್‌ಎಸ್ ಕ್ಯಾತೆ ತೆಗೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿ.ಕೆ.ಹರಿಪ್ರಸಾದ್ ಅವರಿಗೆ ಒಂದು ಮಾತು ಹೇಳ್ತೀನಿ. ಮನಮೋಹನ್ ಸಿಂಗ್, ಇಂದಿರಾಗಾಂಧಿ ಹಾಗೂ ನೆಹರೂ ಸರ್ಕಾರದಲ್ಲಿ ಆರ್‌ಎಸ್‌ಎಸ್ ಅನ್ನು ತುಳಿಯುವ ಕೆಲಸ ಮಾಡಿದ್ದರು. ಅದು ಸಾಧ್ಯವಾಗಲಿಲ್ಲ. ಇಂದು ಆರ್‌ಎಸ್‌ಎಸ್ ಶತಮಾನಕ್ಕೆ ತಲುಪುತ್ತಿದೆ. ನಾವೆಲ್ಲ ಆರ್‌ಎಸ್‌ಎಸ್‌ನವರು, ದೇಶದ ಪ್ರಮುಖ ಹುದ್ದೆಯಲ್ಲಿರುವವರು ಆರ್‌ಎಸ್‌ಎಸ್ ನವರು, ನೀವು ಏನು ಹೇಳಿದರೂ ಉಪಯೋಗವಿಲ್ಲ. ತುಷ್ಟೀಕರಣ ಮಾಡಿದ್ದರಿಂದ ವಿರೋಧ ಪಕ್ಷದಲ್ಲಿ ಕೂರುವ ಸ್ಥಿತಿಯಲ್ಲೂ ಇಲ್ಲ ಎಂದು ಟೀಕಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ನಿಮಗೆ ಒಂದು ಸೀಟ್ ಕೂಡ ಬಂದಿಲ್ಲ. ಉತ್ತರಾಖಂಡದಲ್ಲಿ ನಿಮ್ಮ ಪಾರ್ಟಿ ಎಲ್ಲಿದೆ ಎಂದು ಹುಡುಕಾಡಬೇಕಿದೆ. ಈಶಾನ್ಯದಲ್ಲಿ ನಿಮ್ಮ ಒಬ್ಬ ಸಂಸದರೂ ಇಲ್ಲ. ಈ ಸ್ಥಿತಿಗೆ ತಲುಪಿದ ಮೇಲೆ ನೆಹರೂ ಕುಟುಂಬ ಪ್ರಯತ್ನ ಮಾಡಿದರು ಏನೂ ಸಾಧ್ಯವಾಗಿಲ್ಲ. ಈಗ 40-50 ಸಂಸದರು ಇದ್ದೀರಿ, ರಾಜ್ಯಸಭೆಯಲ್ಲಿ ಸ್ಥಾನಕ್ಕೆ ಬಂದಿದ್ದೀರಿ. ದೇಶದ 2 ರಾಜ್ಯ ಬಿಟ್ಟರೆ ಬೇರೆಲ್ಲೂ ಇಲ್ಲ. ಈ ಬಾರಿ ಚುನಾವಣೆಯಲ್ಲಿ ಅದನ್ನೂ ಕಳೆದುಕೊಳ್ಳುತ್ತೀರಿ. ರಾಹುಲ್ ಗಾಂಧಿ ಯಾತ್ರೆಯಿಂದ ರಾಜಸ್ಥಾನವನ್ನೂ ಕಳೆದುಕೊಳ್ಳುವ ಸ್ಥಿತಿಗೆ ಬಂದಿದೆ. ಸ್ವಲ್ಪ ಸದ್ಬುದ್ಧಿ, ಸ್ವವಿವೇಚನೆ ಉಪಯೋಗ ಮಾಡಿಕೊಂಡರೆ ದೇವರು ಒಳ್ಳೆಯದು ಮಾಡುತ್ತಾನೆ ಎಂದು ವ್ಯಂಗ್ಯವಾಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಹುಬ್ಬಳ್ಳಿ : ಹುಬ್ಬಳ್ಳಿ – ಅಂಕೋಲಾ (Hubballi – Ankola) ರೈಲು ಮಾರ್ಗ ಅಭಿವೃದ್ಧಿಗೆ ಪೂರಕವಾಗಲಿದೆ. ಅಲ್ಲದೇ ಗೋವಾ, ಕಾರವಾರ ಹಾಗೂ ಮಂಗಳೂರು ಬಂದರುಗಳಿಂದ ವಿದೇಶ ವ್ಯಾಪಾರಕ್ಕೆ ಸಹಕಾರಿಯಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ.
ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್‍ನಲ್ಲಿಂದು ಹುಬ್ಬಳ್ಳಿ – ಅಂಕೋಲಾ ರೈಲು ಮಾರ್ಗದ ಕುರಿತು ರಾಷ್ಟ್ರೀಯ ವನ್ಯಜೀವಿ ಮಂಡಳಿಯ ತಜ್ಞರ ತಂಡದೊಂದಿಗೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಮಾರ್ಗದಿಂದ ಸಾರಿಗೆ ವೆಚ್ಚ ಸಹ ತಗ್ಗಲಿದೆ. ದೇಶದ ದೊಡ್ಡದಾದ ಸೀಬರ್ಡ್ ನೌಕಾನೆಲೆಗೆ ಉಪಯುಕ್ತಕರವಾಗಲಿದೆ. ಇದನ್ನೂ ಓದಿ: ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದ ಯೂಟ್ಯೂಬರ್ ಭೀಕರ ಅಪಘಾತದಲ್ಲಿ ಸಾವು
ಜಾಗತಿಕ ಮಟ್ಟದಲ್ಲಿ ದೇಶದ ಉತ್ಪನ್ನಗಳು ಗುರುತಿಸಿಕೊಳ್ಳಲು ಮತ್ತು ವಹಿವಾಟು ನಡೆಸಲು ಈ ರೈಲ್ವೆ ಮಾರ್ಗ ಅವಶ್ಯಕವಾಗಿ ಬೇಕಾಗಿದೆ. ಲಾಜಿಸ್ಟಿಕ್ ವೆಚ್ಚವು ಬೇರೆ ದೇಶಗಳಿಗೆ ಹೋಲಿಸಿದರೆ ದೇಶದಲ್ಲಿ ಹೆಚ್ಚಾಗಿದೆ. ಅರಣ್ಯ ಸಂಪತ್ತು, ವನ್ಯ ಮೃಗಗಳು, ಜಲಚರಗಳಿಗೆ ಆದ್ಯತೆ ಇರಬೇಕು. ನಮ್ಮ ದೇಶದ ಆರ್ಥಿಕತೆಯು 2025ಕ್ಕೆ 5 ಟ್ರಿಲಿಯನ್ ಮತ್ತು 2047 ಕ್ಕೆ 32 ಟ್ರಿಲಿಯನ್ ಡಾಲರ್ 10 ಪಟ್ಟು ಹೆಚ್ಚಾಗಬೇಕಿದೆ. ದೇಶವು ಜಗತ್ತಿನಲ್ಲಿ ಎರಡನೇ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ. ಹೀಗಾಗಿ ಕೈಗಾರಿಕೆಗಳು, ಉದ್ಯೋಗಾವಕಾಶ ಸೇರಿದಂತೆ ಇತರೆ ಜನರ ಅವಶ್ಯಕತೆಗಳನ್ನು ಪೂರೈಸಬೇಕಾಗಿದೆ. ರೈಲು ಮಾರ್ಗದ ಕುರಿತು ತಂಡದೊಂದಿಗೆ ಚರ್ಚಿಸಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಇಂದು ಸ್ಯಾನಿಟರಿ ಪ್ಯಾಡ್, ನಾಳೆ ಕಾಂಡೋಮ್ ಕೇಳ್ತೀರಿ – ವಿವಾದಿತ ಹೇಳಿಕೆಗೆ ಕ್ಷಮೆಯಾಚಿಸಿದ ಐಎಎಸ್ ಅಧಿಕಾರಿ
Live Tv
[brid partner=56869869 player=32851 video=960834 autoplay=true]
ನವದೆಹಲಿ: ಪಿಎಫ್‍ಐ ಮೇಲೆ ಸಿದ್ದರಾಮಯ್ಯ (Siddaramaiah) ಸೇರಿದಂತೆ ಕಾಂಗ್ರೆಸ್‍ಗೆ ಈಗಲೂ ಒಳಗೊಳಗೆ ಪ್ರೀತಿ ಇದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ( Prahlad Joshi) ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಬಿಜೆಪಿ ಸರ್ಕಾರ (BJP) ಪಿಎಫ್‍ಐ ಬ್ಯಾನ್ ಮಾಡಿರುವುದನ್ನು ಕಂಡು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಒಳಗೊಳಗೆ ಕುದಿಯುತ್ತಿದೆ. ಪಿಎಫ್‍ಐ ಭಯೋತ್ಪಾದಕ ಚಟುವಟಿಕೆಗಳು, ದೇಶದ್ರೋಹ ಕೃತ್ಯಗಳ ಬಗ್ಗೆ ಜನರಿಗೆ ಮಾಹಿತಿ ಇದೆ. ಇಂಥಹ ಸಂದರ್ಭದಲ್ಲಿ ಪಿಎಫ್‍ಐ ಬ್ಯಾನ್ ಮಾಡಿರುವುದನ್ನು ವಿರೋಧಿಸಿದರೆ ಜನ ಒದೆಯುತ್ತಾರೆ ಅಷ್ಟೇ. ಪಿಎಫ್‍ಐ ಪರ ಮಾತನಾಡಿದರೆ ಎಲ್ಲಿ ದೇಶದ ಜನರ ಕಂಗೆಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂಬುದು ಕಾಂಗ್ರೆಸ್‍ಗೆ ಚಿಂತೆಯಾಗಿದೆ ಎಂದು ಹೇಳಿದರು.
ಪಿಎಫ್‍ಐ ಬ್ಯಾನ್ ಮಾಡಿರುವ ಬಿಜೆಪಿ ಸರ್ಕಾರದ ನಿಲುವನ್ನು ವಿರೋಧಿಸಲು ಕಾಂಗ್ರೆಸ್‍ಗೆ ಸಾಧ್ಯವಾಗುತ್ತಿಲ್ಲ. ಏಕೆಂದರೆ ಪಿಎಫ್‍ಐ ವಿರುದ್ಧ ದೇಶದ್ರೋಹದ ಕೃತ್ಯಗಳ ಸಾಕಷ್ಟು ಸಾಕ್ಷಿಗಳು ನಮ್ಮ ಬಳಿ ಇವೆ. ಹೀಗಾಗಿ ಏನಾದರು ಮಾಡಿ ಮುಸ್ಲಿಂ ಓಲೈಕೆ ಮಾಡಬೇಕು ಎಂಬ ಕಾರಣಕ್ಕೆ ಆರ್‌ಎಸ್‍ಎಸ್ ಬಗ್ಗೆ ಕಾಂಗ್ರೆಸ್ ಮಾತನಾಡುತ್ತಿದೆ. ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ: ಅಶೋಕ್ ಗೆಹ್ಲೋಟ್ ಸ್ಪಷ್ಟನೆ
ಆರ್‌ಎಸ್‌ಎಸ್ (RSS) ಎಂದರೆ ನಾವೇ. ಈ ದೇಶದ ಪ್ರಧಾನಿ ನರೇಂದ್ರ ಮೋದಿ ಅವರೇ ಆರ್‌ಎಸ್‍ಎಸ್‍ನಿಂದ ಬಂದವರು. ಆರ್‌ಎಸ್‍ಎಸ್ ಅನ್ನು ಯಾವ ಆಧಾರದ ಮೇಲೆ ಹೇಗೆ ಬ್ಯಾನ್ ಮಾಡುತ್ತೀರಾ? ಈ ಹಿಂದೆ ಕಾಂಗ್ರೆಸ್ ಸರ್ಕಾರ ಮೂರು ಬಾರಿ ಆರ್‌ಎಸ್‍ಎಸ್ ಬ್ಯಾನ್ ಮಾಡಿತ್ತು. ಬ್ಯಾನ್ ಮಾಡಿ ಕಾಂಗ್ರೆಸ್ ಏನು ಸಾಧಿಸಿದೆ. ಆರ್‌ಎಸ್‍ಎಸ್ ವಿರುದ್ಧ ಒಂದೇ ಒಂದು ಸಾಕ್ಷಿಯನ್ನು ಪ್ರಸ್ತುತಪಡಿಸಲು ಕಾಂಗ್ರೆಸ್‍ಗೆ ಸಾಧ್ಯವಾಗಿಲ್ಲ ಎಂದು ಕಿಡಿಕಾರಿದರು.
ಆರ್‌ಎಸ್‍ಎಸ್ ಒಂದು ರಾಷ್ಟ್ರೀಯವಾದಿ ಸಂಘಟನೆ. ದೇಶದ ಪರ ಕೆಲಸ ಮಾಡುತ್ತಿರುವ ಸಂಘಟನೆ. ಆದರೆ ಪಿಎಫ್‍ಐ ಸಂಘಟನೆ ಭಯೋತ್ಪಾದನಾ ಚಟುವಟಿಕೆಗಳನ್ನು ಪ್ರೇರೇಪಿಸುತ್ತಿರುವ ಕುರಿತು ಹಲವು ಸಾಕ್ಷ್ಯಗಳು ದೊರೆತಿವೆ. ದೇಶದಾದ್ಯಂತ ಹಲವು ಹತ್ಯೆಗಳಲ್ಲಿ ಈ ಸಂಘಟನೆ ಕೈವಾಡವಿರುವುದು ಸ್ಪಷ್ಟವಾಗಿದೆ. ಎಲ್ಲ ಸಾಕ್ಷಿಗಳನ್ನು ಕಲೆಹಾಕಿಯೇ ಕೇಂದ್ರ ಬಿಜೆಪಿ ಸರ್ಕಾರ ಪಿಎಫ್‍ಐ ಬ್ಯಾನ್ ಮಾಡಿದೆ. ಇದು ರಾಷ್ಟ್ರೀಯ ಸುರಕ್ಷತೆಯ ವಿಚಾರ. ಇಂಥಹ ಸೂಕ್ಷ್ಮ ವಿಚಾರದಲ್ಲಿ ಬಿಜೆಪಿ ಯಾವತ್ತು ಮತಬ್ಯಾಂಕ್ ರಾಜಕಾರಣ ಮಾಡಿಲ್ಲ. ಎಸ್‍ಡಿಪಿಐ ಒಂದು ಪೊಲಿಟಿಕಲ್ ಪಾರ್ಟಿ. ಚುನಾವಣಾ ಆಯೋಗ ಈ ನಿಟ್ಟಿನಲ್ಲಿ ತನ್ನ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಪಿಎಫ್‌ಐ ಬ್ಯಾನ್ (PFI Ban) ಮಾಡುವುದರ ಮೂಲಕ ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡವರಿಗೆ ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ (Pralhad Joshi) ಜೋಶಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಆಡಳಿತದಲ್ಲಿ ರಾಷ್ಟ್ರೀಯ ಸುರಕ್ಷತೆಯೇ ಸರ್ವೋಚ್ಛ ಆದ್ಯತೆಯಾಗಿದೆ. ಸಂಘಟನೆಯ ನಿಷೇಧದಿಂದ ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತೆಗೆ ಅಪಾಯಕಾರಿಯಾಗಿದ್ದ ಚಟುವಟಿಕೆಗಳು ಸ್ಥಗಿತಗೊಳ್ಳಲಿವೆ. ನಮ್ಮ ದೇಶ ಸುರಕ್ಷತೆಗೆ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಪ್ರಹ್ಲಾದ್ ಜೋಶಿ ಟ್ವೀಟ್ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪಿಎಸ್‌ಐ ಅಕ್ರಮ ಚಟುಟಿಕೆಗಳ ಬಗ್ಗೆ ಈ ಹಿಂದೆಯೇ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಪ್ರಕರಣದಲ್ಲಿ ಪಿಎಫ್‌ಐ ಕೈವಾಡ ಇರುವ ಬಗ್ಗೆ ಆರೋಪಿಸಿದ್ದರು. ಈ ಬಗ್ಗೆ ಸಿಎಂ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ, ಪ್ರಕರಣದಲ್ಲಿ ಪಿಎಫ್‌ಐ ಸಂಘಟನೆ ಕೈವಾಡವಿರುವ ಕುರಿತು ತನಿಖೆ ತೀವ್ರಗೊಳಿಸುವಂತೆ ಸೂಚಿಸಿದ್ದರು. ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳು ದೇಶ ವಿರೋಧಿ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಕೇಂದ್ರ ಸರ್ಕಾರಕ್ಕಿರುವ ಮಾಹಿತಿಗಳ ಬಗ್ಗೆ ಸಿಎಂ ಬೊಮ್ಮಾಯಿ ಜೊತೆ ಹಂಚಿಕೊಂಡಿದ್ದರು. ಇದನ್ನೂ ಓದಿ: ಸಾವಿರಾರು ಪಿಎಫ್‌ಐ ಉಗ್ರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಕ್ಷಮಾದಾನ: ಸುನಿಲ್ ಕುಮಾರ್
ಕೇಂದ್ರ ಸರ್ಕಾರ ಪಿಎಫ್‍ಐ ಬ್ಯಾನ್ ಮಾಡುವುದರ ಮೂಲಕ ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡವರಿಗೆ ಅತ್ಯಂತ ಕಠಿಣ ಹಾಗೂ ಸ್ಪಷ್ಟ ಸಂದೇಶವನ್ನು ರವಾನಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ರಾಷ್ಟ್ರೀಯ ಸುರಕ್ಷತೆಯೇ ಸರ್ವೋಚ್ಛ ಆದ್ಯತೆಯಾಗಿದೆ .
ಈ ನಿಟ್ಟಿನಲ್ಲಿ ಪಿಎಫ್‌ಐ ಬ್ಯಾನ್‌ಗೆ ಕೇಂದ್ರ ಗೃಹ ಇಲಾಖೆ ಜೊತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಚರ್ಚೆ ನಡೆಸಿದ್ದರು. ದೇಶ ವಿರೋಧಿ ಕೃತ್ಯದಲ್ಲಿರುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಸಂಘಟನೆಯನ್ನು ಬ್ಯಾನ್ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದರು.
ಪಿಎಫ್‌ಐ ಮೇಲೆ ಸಂಘಟಿತ ದಾಳಿ ನಡೆಸಿದ್ದ ರಾಷ್ಟ್ರೀಯ ತನಿಖಾದಳ, ಇಡಿ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ನೂರಾರು ಪಿಎಫ್‌ಐ, ಎಸ್‌ಡಿಪಿಐ ಕಾರ್ಯಕರ್ತರನ್ನು ಬಂಧಿಸಿತ್ತು. ಪಿಎಫ್‌ಐ ಸಂಘಟನೆ ಭಯೋತ್ಪಾದಕ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿರುವ ಬಗ್ಗೆ ಹಲವು ಸಾಕ್ಷ್ಯಗಳು ದೊರೆತ ಹಿನ್ನೆಲೆಯಲ್ಲಿ ಪಿಎಫ್‌ಐ ಸಂಘಟನೆಯನ್ನು ಕೇಂದ್ರ ಸರ್ಕಾರ 5 ವರ್ಷಗಳ ಕಾಲ ಬ್ಯಾನ್ ಮಾಡಿದೆ. ಇದನ್ನೂ ಓದಿ: ಯು.ಟಿ ಖಾದರ್ SDPI, PFI ಬ್ಯಾನ್ ಮಾಡುವಂತೆ ನಮ್ಮ ಎದುರು ಕಣ್ಣೀರು ಹಾಕಿದ್ದರು: ಕಟೀಲ್
Live Tv
[brid partner=56869869 player=32851 video=960834 autoplay=true]
ಧಾರವಾಡ: ಮಕ್ಕಳಲ್ಲಿ ಗಣಿತ(Mathematics) ಕುರಿತು ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಿರುವ ಗಣಿತ ಮೇಳ ವಿಭಿನ್ನ, ವಿಶಿಷ್ಠವಾದದ್ದು. ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಸ್ಪರ್ಧೆ ಕೂಡಾ ಆಯೋಜಿಸಬೇಕು. ಪ್ರಥಮ ಸ್ಥಾನ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂಪಾಯಿ, ದ್ವಿತೀಯ ಸ್ಥಾನ 15 ಸಾವಿರ ಮತ್ತು ತೃತೀಯ ಸ್ಥಾನ ಪಡೆಯುವ ವಿದ್ಯಾರ್ಥಿಗೆ ವೈಯಕ್ತಿಕವಾಗಿ ಬಹುಮಾನ ನೀಡುತ್ತೇನೆ ಎಂದು ಸಚಿವ ಪ್ರಹ್ಲಾದ್ ಜೋಶಿ(Pralhad Joshi) ಘೋಷಿಸಿದರು.
ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ 72ನೇ ಜನ್ಮದಿನದ ಅಂಗವಾಗಿ ನಗರದ ಕರ್ಷ ಜ್ಞಾನ ಫೌಂಡೇಶನ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕೆ.ಇ. ಬೋರ್ಡ್ ಸಂಸ್ಥೆ ಜಂಟಿಯಾಗಿ ಇಲ್ಲಿನ ಕರ್ನಾಟಕ ಪ್ರೌಢಶಾಲೆಯಲ್ಲಿ ಆಯೋಜಿಸಿರುವ ಎರಡು ದಿನಗಳ ಮೋಜಿನೊಂದಿಗೆ ಗಣಿತ ಕಲಿಕೆ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು. ಇದನ್ನೂ ಓದಿ: ಮೋದಿ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ – 2,500 ಯೂನಿಟ್ ರಕ್ತ ಸಂಗ್ರಹ
ನಿತ್ಯ ಬದುಕಿನ ಭಾಗವಾಗಿರುವ ಗಣಿತದ ಕುರಿತು ಆಸಕ್ತಿ ಮೂಡಿಸುವ ಅಗತ್ಯವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿಪ್ರಾಯಪಟ್ಟರು. ಭಾರತೀಯ ವೇದ, ಪುರಾಣಗಳಲ್ಲಿ ಗಣಿತದ ಉಲ್ಲೇಖವಿದ್ದು, ಗಣಿತ ಶಾಸ್ತ್ರಕ್ಕೆ ಮೂರು ಸಾವಿರ ವರ್ಷಗಳ ಇತಿಹಾಸವಿದೆ. ಜಗತ್ತಿಗೆ ಸೊನ್ನೆ ಪರಿಚಯಿಸಿದ ಕೀರ್ತಿ ಭಾರತೀಯರಿಗೆ ಸಲ್ಲುತ್ತದೆ. ಭಾಸ್ಕರಾಚಾರ್ಯರಿಂದ ಹಿಡಿದು ಇತ್ತೀಚಿಗಿನ ಶ್ರೀನಿವಾಸ ರಾಮಾನುಜನ್ ಸೇರಿದಂತೆ ಅನೇಕ ಗಣಿತ ಶಾಸ್ತ್ರಜ್ಞರು ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಆದರೆ ಬದಲಾದ ಸಂದರ್ಭದಲ್ಲಿ ಗಣಿತ ಕಬ್ಬಿಣದ ಕಡಲೆ ಎಂದು ವಿದ್ಯಾರ್ಥಿಗಳು ಭಾವಿಸುತ್ತಿದ್ದು, ಆ ಭಯ ತೊಡೆದು ಗಣಿತದಲ್ಲಿ ಆಸಕ್ತಿ ಮೂಡಿಸಲು ಈ ಮೇಳ ಆಯೋಜಿಸಿರುವುದು ಅಭಿನಂದನೀಯ ಕಾರ್ಯ ಎಂದರು.
ರಾಜಕೀಯ ಎಂದರೆ ತಿರಸ್ಕೃತ ಎನ್ನುವ ಭಾವನೆ ಬಲವಾಗುತ್ತಿರುವ ಸಂದರ್ಭದಲ್ಲಿ, ಆ ವ್ಯವಸ್ಥೆಯಲ್ಲಿ ಪುನರಪಿ ವಿಶ್ವಾಸ ಮೂಡುವಂತೆ ಮಾಡಿದ, ಪ್ರತಿಯೊಂದರಲ್ಲೂ ಭಾರತೀಯ ಭಾವನೆಯನ್ನು ಉದ್ದೀಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ಹಲವು ರೀತಿಯ ಸಾಮಾಜಿಕ ಕಾರ್ಯಗಳ ಮೂಲಕ ದೇಶಾದ್ಯಂತ ಆಚರಿಸಲಾಗುತ್ತಿದೆ. ಆದರೆ ಇಲ್ಲಿ ಗಣಿತವನ್ನು ಮಕ್ಕಳಿಗೆ ಸುಲಭವಾಗಿಸುವ ಮತ್ತು ಅರ್ಥೈಸುವ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಮೇಯರ್ ಈರೇಶ ಅಂಚಟಗೇರಿ, ಪಾಲಿಕೆ ಸದಸ್ಯ ಸುರೇಶ ಬೇದರೆ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ, ವಕೀಲ ಅರುಣ ಜೋಶಿ, ವಿನಾಯಕ ಜೋಶಿ, ಸಂಯೋಜಕಿ ಸುಮಂಗಲಾ ದಾಂಡೇವಾಲೆ, ಮಯೂರ ದಾಂಡೇವಾಲೆ ಸೇರಿದಂತೆ ಧಾರವಾಡ ಶಹರ ಮತ್ತು ಗ್ರಾಮೀಣ ಭಾಗದ ಸಾವಿರಾರು ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರು ಭಾಗವಹಿಸಿದ್ದರು.
Live Tv
[brid partner=56869869 player=32851 video=960834 autoplay=true]