Tag: ಪ್ರಹ್ಲಾದ್ ಜೋಶಿ

  • ಕರ್ನಾಟಕದ ಬೆಟ್ಟ ಕುರುಬ ಜನಾಂಗವನ್ನು ಎಸ್‌ಟಿಗೆ ಸೇರಿಸಿದ ಕೇಂದ್ರ – ಜೋಶಿ ಸಂತಸ

    ಕರ್ನಾಟಕದ ಬೆಟ್ಟ ಕುರುಬ ಜನಾಂಗವನ್ನು ಎಸ್‌ಟಿಗೆ ಸೇರಿಸಿದ ಕೇಂದ್ರ – ಜೋಶಿ ಸಂತಸ

    ನವದೆಹಲಿ: ಪ್ರಧಾನಿ‌ ನರೇಂದ್ರ ಮೋದಿ(Narendra Modi) ಅವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ(Karnataka) ವಿಚಾರವಾಗಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಕರ್ನಾಟಕದ ಬೆಟ್ಟ ಕುರುಬ(Betta Kuruba) ಜನಾಂಗಕ್ಕೆ ಸೇರಿದ 12 ಜಾತಿಗಳನ್ನ ಪರಿಶಿಷ್ಟ ಪಂಗಡ(Scheduled Tribes) ಸಮುದಾಯದ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ.

    ಕರ್ನಾಟಕ ಸರ್ಕಾರ ಮಾಡಿದ ಶಿಫಾರಸ್ಸನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ಈ ಕುರಿತಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

    ಕರ್ನಾಟಕದ ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳ ಅಂಚಿನಲ್ಲಿ ಬೆಟ್ಟ ಕುರುಬ ಜನಾಂಗ ನೆಲೆಸಿತ್ತು. ಕಾರಣಾಂತರಗಳಿಂದ ಈ ಜನಾಂಗದವರನ್ನು ಒಕ್ಕಲೆಬ್ಬಿಸಲಾಗಿತ್ತು. ಪರಿಶಿಷ್ಟ ವರ್ಗಕ್ಕೆ ಸೇರ್ಪಡೆಗೊಳಿಸುವಂತೆ ಈ ಜನಾಂಗದವರು ಕಳೆದ 30 ವರ್ಷಗಳಿಂದ ಹೋರಾಡುತ್ತಿದ್ದರು. ಇದನ್ನೂ ಓದಿ: ಕೇಂದ್ರದ ನಿರ್ಧಾರವನ್ನು ತುಂಬು ಹೃದಯದಿಂದ ಸ್ವಾಗತಿಸಿ ಸಿದ್ದರಾಮಯ್ಯ

    ಕರ್ನಾಟಕದ ಮಲೆ ಮಹದೇಶ್ವರ ಬೆಟ್ಟದಲ್ಲಿ ಹಾಗೂ ಸುತ್ತಮುತ್ತಲಿನ ಬೆಟ್ಟಗಳಲ್ಲಿ ಬೆಟ್ಟ ಕುರುಬರು ವಾಸಿಸುತ್ತಿದ್ದರು. ಇವರನ್ನು ಕಾಡು ಕುರುಬರು ಎಂದು ಕರೆಯಲಾಗುತ್ತಿತ್ತು. ನಂತರದಲ್ಲಿ ಬೆಟ್ಟ ಕುರುಬರು ಎಂದು ಕರೆಯಲಾಗುತ್ತಿತ್ತು. ಇದೀಗ ಈ ಸಮುದಾಯಕ್ಕೆ ಸೇರಿದ 12 ಉಪ ಜಾತಿಗಳನ್ನು ಎಸ್.ಟಿ ಸಮುದಾಯಕ್ಕೆ ಸೇರಿಸಲು‌ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

    Live Tv
    [brid partner=56869869 player=32851 video=960834 autoplay=true]

  • ‘ಕೈ’ ನಾಯಕರು ಪಕ್ಷ ಬಿಟ್ಟು ಹೋಗಲು ನಾಯತ್ವದಲ್ಲಿರುವ ದುರಂಹಕಾರ ಕಾರಣ: ಪ್ರಹ್ಲಾದ್ ಜೋಶಿ

    ‘ಕೈ’ ನಾಯಕರು ಪಕ್ಷ ಬಿಟ್ಟು ಹೋಗಲು ನಾಯತ್ವದಲ್ಲಿರುವ ದುರಂಹಕಾರ ಕಾರಣ: ಪ್ರಹ್ಲಾದ್ ಜೋಶಿ

    ಧಾರವಾಡ: ಈಗಾಗಲೇ ಕಾಂಗ್ರೆಸ್‌ನ ಅನೇಕ ಹಿರಿಯರು ಪಕ್ಷ ಬಿಟ್ಟು ಹೋಗಿದ್ದಾರೆ. ಇದಕ್ಕೆ ಆ ಪಕ್ಷದಲ್ಲಿ ನಾಯಕತ್ವದ ದುರಂಹಕಾರ ಪರಮಾವಧಿಯಿಂದ ಆಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದರು.

    ಕಾಂಗ್ರೆಸ್ ಮುಖಂಡ ಗುಲಾಬ್ ನಬಿ ಆಜಾದ್ ಪಕ್ಷಕ್ಕೆ ರಾಜೀನಾಮೆ ನೀಡಿದ ವಿಚಾರವಾಗಿ ಧಾರವಾಡದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಆಯಾ ನಾಯಕತ್ವದ ಅವಧಿ ಮುಗಿದಾಗ ಬಿಟ್ಟು ಕೊಡಬೇಕು. ಆದರೆ ಕಾಂಗ್ರೆಸ್‌ನಲ್ಲಿ ಅದು ಆಗುತ್ತಿಲ್ಲ. ಆ ಕಾರಣದಿಂದಾಗಿ ಗುಲಾಂ ನಬಿ ಆಜಾದ ಪಕ್ಷ ಬಿಟ್ಟಿದ್ದಾರೆ ಎಂದರು.

    Congress

    ಚಿತ್ರದುರ್ಗ ಸ್ವಾಮೀಜಿ ಮೇಲಿನ ಕೇಸ್ ವಿಚಾರವಾಗಿ ಮಾತನಾಡಿ, ಅವರ ಮೇಲೆ ಕೇಸ್ ಆಗಿದೆ. ಅದರ ತನಿಖೆ ನಡೆಯುತ್ತಿದೆ. ಹೀಗಾಗಿ ಹೆಚ್ಚು ಮಾತನಾಡುವ ಅಗತ್ಯ ಇಲ್ಲ. ಅವರು ನಾಡಿನ ಒಬ್ಬ ಪ್ರತಿಷ್ಠಿತ ಸ್ವಾಮೀಜಿ, ಸೂಕ್ತವಾದ, ನ್ಯಾಯಯುತವಾದ ತನಿಖೆಯಾಗಲಿ, ಅಲ್ಲಿಯವರೆಗೆ ಎಲ್ಲದ್ದಕ್ಕೂ ಪ್ರತಿಕ್ರಿಯೆ ಕೊಡಬೇಕಿಲ್ಲ ಎಂದು ತಿಳಿಸಿದರು.

    ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಬದಲಾಗುತ್ತಾರೆ ಎಂದು ಮಾಧ್ಯಮಗಳು ಹೇಳುತ್ತಿವೆ. ಸಾಮಾನ್ಯವಾಗಿ 3 ವರ್ಷ ಅವಧಿ ನಮ್ಮಲ್ಲಿ ಇರುತ್ತದೆ. ಆದರೆ 3 ವರ್ಷದ ಬಳಿಕ ಬದಲಾವಣೆ ಮಾಡಲೇಬೇಕು ಅಂತಿಲ್ಲ. ನಮ್ಮಲ್ಲಿ ಆ ಯಾವುದೇ ಚರ್ಚೆ ಆಗಿಲ್ಲ ಎಂದು ಹೇಳಿದರು. ಇದನ್ನೂ ಓದಿ: 3,700 ಕೆ.ಜಿ ಸ್ಫೋಟಕ, 10 ಸೆಕೆಂಡ್- 1,200 ಕೋಟಿಯ ದೈತ್ಯ ಅವಳಿ ಕಟ್ಟಡ ಉಡೀಸ್

    bjP

    ಯಡಿಯೂರಪ್ಪ ದೆಹಲಿ ಭೇಟಿ ವಿಚಾರವಾಗಿ ಮಾತನಾಡಿ, ಯಡಿಯೂರಪ್ಪ ಈಗ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯರು, ಅವರು ಪಕ್ಷದ ಹಿರಿಯರಲ್ಲೊಬ್ಬರು, ಈ ಹಿನ್ನೆಲೆ ಪ್ರಮುಖ ನಾಯಕರ ಭೇಟಿಗೆ ಹೋಗಿದ್ದರು ಎಂದರು. ಇದನ್ನೂ ಓದಿ: ರಾಷ್ಟ್ರಕ್ಕಾಗಿ ಖಾದಿ, ಆದ್ರೆ ರಾಷ್ಟ್ರಧ್ವಜಕ್ಕೆ ಚೈನೀಸ್ ಪಾಲಿಸ್ಟರ್ : ಮೋದಿ ವಿರುದ್ಧ ರಾಹುಲ್ ಟೀಕೆ

    Live Tv
    [brid partner=56869869 player=32851 video=960834 autoplay=true]

  • ಹುಬ್ಬಳ್ಳಿಯಲ್ಲಿ ಮುಂದಿನ ತಿಂಗಳು ‘ಬಿಯಾಂಡ್ ಬೆಂಗಳೂರು’ ಸಮಾವೇಶ: ಜೋಶಿ, ರಾಜೀವ್ ಚಂದ್ರಶೇಖರ್‌ಗೆ ಆಹ್ವಾನ

    ಹುಬ್ಬಳ್ಳಿಯಲ್ಲಿ ಮುಂದಿನ ತಿಂಗಳು ‘ಬಿಯಾಂಡ್ ಬೆಂಗಳೂರು’ ಸಮಾವೇಶ: ಜೋಶಿ, ರಾಜೀವ್ ಚಂದ್ರಶೇಖರ್‌ಗೆ ಆಹ್ವಾನ

    ನವದೆಹಲಿ: ಹುಬ್ಬಳ್ಳಿ, ಮೈಸೂರು ಹಾಗೂ ಮಂಗಳೂರಿನಲ್ಲಿ ನಡೆಯಲಿರುವ ‘ಬಿಯಾಂಡ್ ಬೆಂಗಳೂರು’ ಸಮಾವೇಶಗಳಿಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ರಾಜೀವ್ ಚಂದ್ರಶೇಖರ್ ಅವರನ್ನು ಐಟಿ-ಬಿಟಿ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ಅವರು ರಾಜ್ಯ ಸರ್ಕಾರದ ಪರವಾಗಿ ಮಂಗಳವಾರ ಆಹ್ವಾನಿಸಿದರು.

    ಸೆ.26ರಂದು ಹುಬ್ಬಳ್ಳಿಯಲ್ಲಿ ಮತ್ತು ಅಕ್ಟೋಬರ್ 19, 20ರಂದು ಮೈಸೂರಿನಲ್ಲಿ ‘ಬಿಯಾಂಡ್ ಬೆಂಗಳೂರು’ ಟೆಕ್ ಸಮಾವೇಶ ನಡೆಯಲಿದೆ. ಇವುಗಳನ್ನು ಕ್ರಮವಾಗಿ ಪ್ರಹ್ಲಾದ್ ಜೋಶಿ ಮತ್ತು ರಾಜೀವ್ ಚಂದ್ರಶೇಖರ್ ಅವರು ಉದ್ಘಾಟಿಸಲಿದ್ದಾರೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ಗೋವು ಕಳ್ಳಸಾಗಣೆ ಪ್ರಕರಣ – ಅನುಬ್ರತಾ ಮೊಂಡಲ್‌ಗೆ ಜಾಮೀನು ನೀಡಿ, ಇಲ್ಲವೇ..: ನ್ಯಾಯಾಧೀಶರಿಗೆ ಬೆದರಿಕೆ ಪತ್ರ

    ಆಹ್ವಾನವನ್ನು ಸ್ವೀಕರಿಸಿದ ಕೇಂದ್ರ ಸಚಿವರು ಸಮಾವೇಶಕ್ಕೆ ಬರುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ತೋಟಗಾರಿಕೆ ಸಚಿವ ಮುನಿರತ್ನ ಕೂಡ ಇದ್ದರು.

    ಬೆಂಗಳೂರು ನಗರದ ಆಚೆಗೂ ರಾಜ್ಯದ ವಿವಿಧ ಭಾಗಗಳಲ್ಲಿ ಕೈಗಾರಿಕೆಗಳು ನೆಲೆಯೂರುವಂತೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರ ಭಾಗವಾಗಿ, ನವೆಂಬರ್‌ನಲ್ಲಿ ನಡೆಯಲಿರುವ ಬೆಂಗಳೂರು ತಂತ್ರಜ್ಞಾನ ಸಮಾವೇಶಕ್ಕೂ (ಬಿಟಿಎಸ್) ಮುನ್ನ ಹುಬ್ಬಳ್ಳಿ, ಮೈಸೂರು ಮತ್ತು ಮಂಗಳೂರಿನಲ್ಲಿ ‘ಬಿಯಾಂಡ್ ಬೆಂಗಳೂರು’ ಸಮಾವೇಶಗಳನ್ನು ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದರು. ಇದನ್ನೂ ಓದಿ: ಪ್ರವಾದಿ ಅವಹೇಳನ – BJPಯಿಂದ ಶಾಸಕ ರಾಜಾ ಸಿಂಗ್‌ ಅಮಾನತು

    ಈ ಸಮಾವೇಶಗಳಲ್ಲಿ ಉದ್ಯಮಗಳ ಸ್ಥಾಪನೆ ಮತ್ತು ಹೂಡಿಕೆಗೆ ಇರುವ ಅವಕಾಶಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಲಾಗುವುದು. ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯ ಉದ್ಯಮಿಗಳು ಮತ್ತು ಹೂಡಿಕೆದಾರರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

    Live Tv
    [brid partner=56869869 player=32851 video=960834 autoplay=true]

  • ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಕಾನೂನಾತ್ಮಕ ಸಹಕಾರ: ಪ್ರಹ್ಲಾದ್ ಜೋಶಿ

    ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಕಾನೂನಾತ್ಮಕ ಸಹಕಾರ: ಪ್ರಹ್ಲಾದ್ ಜೋಶಿ

    ಬೆಂಗಳೂರು: ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸುವ ನಿಟ್ಟಿನಲ್ಲಿ ಕಾನೂನಾತ್ಮಕ ಸಹಕಾರ ನೀಡುವುದಾಗಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

    ಕಳೆದ ಆರು ತಿಂಗಳುಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರು ನಡೆಸುತ್ತಿರುವ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿದ ಜೋಶಿ, ಸ್ವಾಮೀಜಿಯವರ ಆರೋಗ್ಯ ವಿಚಾರಿಸಿದರು. ಇದನ್ನೂ ಓದಿ: ರಕ್ತದೊತ್ತಡ, ಮಧುಮೇಹದ ರಾಜಧಾನಿಯಾಗುತ್ತಿದೆ ಭಾರತ – ಸುಧಾಕರ್ ಆತಂಕ

    ಶೇ.7.5 ಕ್ಕೆ ಎಸ್‌ಟಿ ಸಮುದಾಯದ ಮೀಸಲಾತಿ ಹೆಚ್ಚಳ ಸೇರಿದಂತೆ ನಾಗಮೋಹನ್ ದಾಸ್ ವರದಿ ಜಾರಿಗೆ ಆಗ್ರಹಿಸಿ ಪ್ರಸನ್ನಾನಂದ ಸ್ವಾಮೀಜಿಯವರು ಧರಣಿ ನಡೆಸುತ್ತಿದ್ದಾರೆ. ಶೇ.3 ರಷ್ಟು ಇರುವ ಎಸ್‌ಟಿ ಮೀಸಲಾತಿ ಹೆಚ್ಚಳ ಕುರಿತಂತೆ ಕಾನೂನಾತ್ಮಕವಾಗಿ ಸಹಕಾರ ನೀಡಲು ಸಿದ್ಧ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸ್ವಾಮೀಜಿ ಅವರಿಗೆ ಭರವಸೆ ನೀಡಿದ್ದಾರೆ.

    ಸ್ವಾಮೀಜಿಯವರನ್ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಜೋಶಿ, ಪ್ರಸನ್ನಾನಂದ ಸ್ವಾಮೀಜಿ ಅವರ ಬೇಡಿಕೆಗಳನ್ನ ಆಲಿಸಿದರು. ನಾಗಮೋಹನ್ ದಾಸ್ ವರದಿ ಜಾರಿ ಕುರಿತ ಸ್ವಾಮೀಜಿ ಅವರ ಬೇಡಿಕೆಗೆ ಸ್ಪಂದಿಸಿರುವ ಕೇಂದ್ರ ಸಚಿವರು, ಈ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡುವುದಾಗಿ ಸ್ವಾಮೀಜಿಯವರಿಗೆ ತಿಳಿಸಿದರು. ಇದನ್ನೂ ಓದಿ: ಮೊಟ್ಟೆ ಹೊಡೆದ ಸಂಪತ್ ಕಾಂಗ್ರೆಸ್‌ನವನಲ್ಲ – ಪಕ್ಕಾ RSS ಕಾರ್ಯಕರ್ತ: ಸಿದ್ದರಾಮಯ್ಯ

    ಎಸ್‌ಟಿ ಮೀಸಲಾತಿ ಶೇ.3 ರಿಂದ ಶೇ.7.5 ರಷ್ಟು ಹೆಚ್ಚಿಸಲು ಕೆಲವು ಕಾನೂನಿನ ತೊಡಕಗಳು ಎದುರಾಗಲಿವೆ. ಕಾನೂನಿನ ಅಡ್ಡಿಗಳನ್ನ ನಿವಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮಟ್ಟದಲ್ಲಿ ಸಹಕಾರ ನೀಡುವ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಪ್ರಹ್ಲಾದ್ ಜೋಶಿ ಹೇಳಿದರು. ಧರಣಿ ಕೈ ಬಿಡುವಂತೆ ಪ್ರಸನ್ನಾನಂದ ಸ್ವಾಮೀಜಿ ಅವರಲ್ಲಿ ಈ ವೇಳೆ ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಿದ್ದರಾಮಯ್ಯ ಎಷ್ಟೇ ತುಷ್ಟೀಕರಣದ ರಾಜಕಾರಣ ಮಾಡಲಿ ಮೊಟ್ಟೆ ಎಸೆಯಬೇಡಿ – ಪ್ರಹ್ಲಾದ್‌ ಜೋಶಿ‌

    ಸಿದ್ದರಾಮಯ್ಯ ಎಷ್ಟೇ ತುಷ್ಟೀಕರಣದ ರಾಜಕಾರಣ ಮಾಡಲಿ ಮೊಟ್ಟೆ ಎಸೆಯಬೇಡಿ – ಪ್ರಹ್ಲಾದ್‌ ಜೋಶಿ‌

    ಹುಬ್ಬಳ್ಳಿ: ಸಾವರ್ಕರ್ ಭಾವಚಿತ್ರ ಮುಸ್ಲಿಂ ಏರಿಯಾದಲ್ಲಿ ಏಕೆ ಹಾಕಬೇಕಿತ್ತು ಎಂಬ ಸಿದ್ದರಾಮಯ್ಯ ಹೇಳಿಕೆಯನ್ನು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಖಂಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದಿದ್ದೂ ಕೂಡ ಸರಿಯಲ್ಲ ಎಂದರು

    ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ತಪ್ಪು. ಸಿದ್ದರಾಮಯ್ಯ ವಿಪಕ್ಷ ನಾಯಕರು. ಅವರು ಏಲ್ಲಿ ಬೇಕಾದ್ರು ಹೋಗಬಹುದು. ಅವರ ಮೇಲೆ ಮೊಟ್ಟೆ ಎಸೆಯುವಂತದ್ದು ಸರಿಯಲ್ಲ. ಸಿದ್ದರಾಮಯ್ಯ ಅಷ್ಟೇ ಅಲ್ಲ ಯಾವ ಪಕ್ಷದ ನಾಯಕರಿಗೂ ಹೀಗೆ ಮಾಡಬಾರದು ಎಂದು ಜೋಶಿ ಹೇಳಿದ್ದಾರೆ.

    ಸಾವರ್ಕರ್ ಭಾವಚಿತ್ರ ಕುರಿತಂತೆ ಸಿದ್ದರಮಯ್ಯ ಅವರ ಮುಸ್ಲಿಂ ಏರಿಯಾ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿರುವ ಜೋಶಿ, ಸಾವರ್ಕರ್ ಬಗ್ಗೆ ಹೀಗೆ ಮಾತನಾಡುತ್ತಿರುವ ಇವರು ನಕಲಿ ಕಾಂಗ್ರೆಸಿಗರು ಎಂದಿದ್ದಾರೆ.

    “ಸಾವರ್ಕರ್ ಗುರುತಿಸಲ್ಪಡುವ ಭಾರತದ ಸುಪುತ್ರ” ಎಂದು ಸ್ವತಃ ಇಂಧಿರಾ ಗಾಂಧಿ ಅವರು ಹೇಳಿದ್ದರು. ಗಾಂಧಿಜೀ ಸೇರಿದಂತೆ ಅಂದಿನ ಕಾಂಗ್ರೆಸ್ ನಾಯಕರು ಸಾವರ್ಕರ್ ಬಿಡುಗಡೆಗೆ ಬ್ರಿಟೀಷ್ ಸರ್ಕಾರಕ್ಕೆ ಆಗ್ರಹಿಸಿದ್ದರು. ಅವರೆಲ್ಲ ಒರಿಜಿನಲ್ ಕಾಂಗ್ರೆಸಿಗರು.‌ ವಿಚಾರಗಳಲ್ಲಿ ಭಿನ್ನಾಭಿಪ್ರಾಯಗಳಿದ್ದರೂ, ಸಾವರ್ಕರ್ ಅವರ ಹೋರಾಟ, ವ್ಯಕ್ತಿತ್ವಕ್ಕೆ ಗೌರವ ಕೊಡುತ್ತಿದ್ದರು. ಈಗಿರುವವರು ನಕಲಿ ಕಾಂಗ್ರೆಸಿಗರು. ಇವರು ಸಾವರ್ಕರ್ ವಿರುದ್ಧ ಮಾತನಾಡುತ್ತಿದ್ದಾರೆ. ಇವರು ಒರಿಜಿನಲ್ ಕಾಂಗ್ರೆಸಿಗರಲ್ಲ ಎಂದು ಜೋಶಿ ಟೀಕಿಸಿದ್ದಾರೆ.

    ತುಷ್ಠಿಕರಣ ರಾಜಕಾರಣದ ಭಾಗವಾಗಿ ಸಿದ್ದರಾಮಯ್ಯ ಅವರು ಬಾಯಿಗೆ ಬಂದ ಹಾಗೆ ಮಾತನಾಡ್ತಿದ್ದಾರೆ. ಮುಸ್ಲಿಂ ಒಲೈಕೆಗ ರಾಜಕಾರಣದಲ್ಲಿ ನಿರತರಾಗಿದ್ಧಾರೆ.‌ ಸಿದ್ದರಾಮಯ್ಯ ಅವರು ಕಾಂಗ್ರೆಸಿಗರಲ್ಲ. ಹೀಗಾಗಿ ಅವರ ಹೈಕಮಾಂಡ್ ನಾಯಕರನ್ನು ಮೆಚ್ಚಿಸಲು ಈ ರೀತಿಯ ಹೇಳಿಕೆಗಳನ್ನ ನೀಡುತ್ತಿದ್ದಾರೆ ಎಂದರು.

    ಅವರು ಯಾರನ್ನಾದ್ರು ಒಲೈಸಿಕೊಳ್ಳಲಿ. ಆದರೆ, ಸಾವರ್ಕರ್ ಬಗ್ಗೆ ಮಾತಾಡುವುದು ಸರಿಯಲ್ಲ. ಅವರೊಬ್ಬ “ರಿಮಾರ್ಕಬಲ್ ಸನ್ ಆಫ್ ಇಂಡಿಯಾ” ಅಂತಾ ಇಂದಿರಾ ಗಾಂಧಿ ಅವರೇ ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಇದನ್ನ ತಿಳಿದುಕೊಳ್ಳಲಿ ಎಂದು ಪ್ರಹ್ಲಾದ್‌ ಜೋಶಿ ತಿರುಗೇಟು ನೀಡಿದರು.

    Live Tv
    [brid partner=56869869 player=32851 video=960834 autoplay=true]

  • ಗಾಂಧೀಜಿ ಕಾಂಗ್ರೆಸ್ ಬೇರೆ, ಈಗಿನದು ಡುಪ್ಲಿಕೇಟ್ ಕಾಂಗ್ರೆಸ್: ಪ್ರಹ್ಲಾದ್‌ ಜೋಶಿ

    ಗಾಂಧೀಜಿ ಕಾಂಗ್ರೆಸ್ ಬೇರೆ, ಈಗಿನದು ಡುಪ್ಲಿಕೇಟ್ ಕಾಂಗ್ರೆಸ್: ಪ್ರಹ್ಲಾದ್‌ ಜೋಶಿ

    ಹಾವೇರಿ: ಸ್ವಾತಂತ್ರ್ಯ ಹೋರಾಟ ನಮ್ಮದು ಎಂದು ಹೇಳಲು ಕಾಂಗ್ರೆಸ್‍ನವರಿಗೆ ಅರ್ಹತೆ, ನೈತಿಕತೆ, ಅಧಿಕಾರವೂ ಇಲ್ಲ. ಈಗಿನ ಕಾಂಗ್ರೆಸ್‍ನವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ. ಮಹಾತ್ಮ ಗಾಂಧೀಜಿ ಅವರ ಕಾಂಗ್ರೆಸ್ ಬೇರೆ, ಈಗಿನ ಕಾಂಗ್ರೆಸ್ ಬೇರೆ. ಈಗಿನದು ಡುಪ್ಲಿಕೇಟ್ ಕಾಂಗ್ರೆಸ್, ಈಗಿನವರು ನಕಲಿ ಗಾಂಧಿವಾದಿಗಳು ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದರು.

    ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಬಿಜೆಪಿ ವತಿಯಿಂದ ಆಯೋಜಿಸಿದ್ದ ಬೈಕ್ ರ್ಯಾಲಿಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಸ್ವಾತಂತ್ರ್ಯದ ವಿಚಾರದಲ್ಲಿ ಕಾಂಗ್ರೆಸ್‍ನವರು ರಾಜಕೀಯ ಮಾಡಬಾರದಿತ್ತು. ಈಗಿರುವುದು ಮಹಾತ್ಮ ಗಾಂಧೀಜಿ ಕಾಂಗ್ರೆಸ್ ಅಲ್ಲ, ಇಂದಿರಾ ಕಾಂಗ್ರೆಸ್. ಐ ಕಾಂಗ್ರೆಸ್- ಅಂದರೆ ಇಂದಿರಾ ಕಾಂಗ್ರೆಸ್ ಎಂದು ಟೀಕಿಸಿದರು.

    Congress

    ಸಾವರ್ಕರ್ ಮತ್ತು ಟಿಪ್ಪು ಸುಲ್ತಾನ್‍ಗೆ ಹೋಲಿಕೆ ಮಾಡಬಾರದು. ಬ್ಯಾನರ್‌ಗಳ ಬಗ್ಗೆ ಆಕ್ಷೇಪಣೆ ಇದ್ದರೆ ಆಕ್ಷೇಪಣೆ ಸಲ್ಲಿಸಲಿ. ಹರಿಯುವುದು ಇತ್ಯಾದಿ ಮಾಡಿ ಯಾರೂ ಸೌಹಾರ್ದತೆಯನ್ನು ಹಾಳು ಮಾಡಬಾರದು. ಅದನ್ನು ನಾನು ಎಲ್ಲರಿಗೂ ಸಲಹೆ ಕೊಡುತ್ತೇನೆ ಎಂದರು. ಇದನ್ನೂ ಓದಿ: ಕಾಶ್ಮೀರದಲ್ಲಿ ಇನ್ನು ಭಾರತದ ಧ್ವಜ ಮಾತ್ರ ಹಾರುತ್ತದೆ, ಪಾಕ್ ಧ್ವಜ ಇತಿಹಾಸ ಮಾತ್ರ: ಮನೋಜ್ ಸಿನ್ಹಾ

    ದೇಶದ ಸ್ವಾತಂತ್ರ್ಯಕ್ಕಾಗಿ ಅಭೂತಪೂರ್ವ ಹೋರಾಟಗಳು ನಡೆದಿವೆ. ಅನೇಕರು ಪ್ರಾಣ ತ್ಯಾಗ ಮಾಡಿದ್ದಾರೆ. ಮೂರೂವರೆ ಕೋಟಿ ಜನರು ಪ್ರಾಣತ್ಯಾಗ ಮಾಡಿರು ಅಂದಾಜಿದೆ. ಅದೆಲ್ಲವನ್ನು ನೆನಪಿಸಬೇಕು. ದೇಶವನ್ನು ಇನ್ನಷ್ಟು ಗಟ್ಟಿಯಾಗಿ ಕಟ್ಟಿ, ಜಗತ್ತಿನಲ್ಲಿ ಭಾರತ ಒಂದು ಹಿರಿಯಣ್ಣನಂತೆ ಆಗಬೇಕು ಎನ್ನುವ ಕಾರಣಕ್ಕೆ ಮೋದಿಯವರ ಕರೆಯಂತೆ ಈ ಕೆಲಸ ಮಾಡುತ್ತಿದ್ದೇವೆ. ಇದಕ್ಕೆ ಅಭೂತಪೂರ್ವ ಯಶಸ್ಸು ಸಿಗುತ್ತಿದೆ. ಧ್ವಜ ಖರೀದಿ ಮಾಡಿ ಎಂದಾಗ ಒಂದೇ ದಿನದಲ್ಲಿ ಒಂದು ಕೋಟಿ ಧ್ವಜ ಖರೀದಿ ಮಾಡಿದ್ದಾರೆ. ಯಾರು ಇದನ್ನು ವಿರೋಧಿಸುತ್ತಿದ್ದರೋ ಅವರೇ ಈಗ ಆಜಾದಿ ಕಾ ಅಮೃತ ಮಹೋತ್ಸವ ಆಚರಿಸುವ ಪರಿಸ್ಥಿತಿ ಬಂದಿದೆ ಎಂದು ವ್ಯಂಗ್ಯವಾಡಿದರು.

    ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರದ ಬಗ್ಗೆ ಮಾತನಾಡಿದ ಅವರು, ಅದು ಕಾರ್ಪೋರೇಶನ್ ಮೈದಾನ. ಯಾರಿಗೆ ಕೊಡಬೇಕು, ಯಾರಿಗೆ ಬೇಡ ಅನ್ನೋದು. ಅಲ್ಲಿನ ಕಾರ್ಪೋರೆಶನ್ ಅವರಿಗೆ ಅಧಿಕಾರವಿದೆ. ಅಲ್ಲಿನ ಕಾರ್ಪೋರೇಶನ್ ಅವರು ಮತ್ತು ಅಲ್ಲಿನ ಕಾನೂನು ಪಾಲನೆ ಮಾಡೋರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಹಾಸನದಲ್ಲಿ ದೇವೇಗೌಡರು, ಅವರ ಕುಟುಂಬ ಬಿಟ್ಟು ರಾಜಕಾರಣ ಮಾಡಲು ಆಗಲ್ಲ: ಸೂರಜ್‍ರೇವಣ್ಣ

    Live Tv
    [brid partner=56869869 player=32851 video=960834 autoplay=true]

  • ಪ್ರಿಯಾಂಕ್ ಖರ್ಗೆಯಿಂದ ಇಡೀ ಮಹಿಳಾ ಕುಲಕ್ಕೆ ಅಪಮಾನ: ಪ್ರಹ್ಲಾದ್ ಜೋಶಿ

    ಪ್ರಿಯಾಂಕ್ ಖರ್ಗೆಯಿಂದ ಇಡೀ ಮಹಿಳಾ ಕುಲಕ್ಕೆ ಅಪಮಾನ: ಪ್ರಹ್ಲಾದ್ ಜೋಶಿ

    ಹುಬ್ಬಳ್ಳಿ: ಪ್ರಿಯಾಂಕ್ ಖರ್ಗೆ ಅವರು ಇಡೀ ಮಹಿಳಾ ಕುಲಕ್ಕೆ ಅಪಮಾನ ಮಾಡಿದ್ದಾರೆ. ಯಾವ ಮಹಿಳೆಯೂ ಈ ಹೇಳಿಕೆಯನ್ನ ಸಹಿಸುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು.

    ಪ್ರಿಯಾಂಕ್ ಖರ್ಗೆಯ ಲಂಚ, ಮಂಚ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದು ಅವರ ಕೀಳು ಅಭಿರುಚಿ ತೋರಿಸುತ್ತಿದೆ. ಮಹಿಳಾ ಸಮುದಾಯಕ್ಕೆ ಅವರು ಈ ಕೂಡಲೇ ಕ್ಷಮೆ ಕೇಳಬೇಕು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಸಾಕಷ್ಟು ಭ್ರಷ್ಟಾಚಾರವಾಗಿದೆ. ಮಲ್ಲಿಕಾರ್ಜುನ್ ಖರ್ಗೆ ಕೇಂದ್ರದ ಸಚಿವ ಇದ್ದಾಗ ಅನೇಕ ವಿಷಯಗಳಲ್ಲಿ ಭ್ರಷ್ಟಾಚಾರವಾಗಿದೆ. ಅವರಿಗೆ ನಾಚಿಕೆ, ಮಾನ, ಮರ್ಯಾದೆ ಇದ್ದಿದ್ರೆ ಭ್ರಷ್ಟಾಚಾರದ ಬಗ್ಗೆ ಮಾತನಾಡಬಾರದು ಎಂದು ವಾಗ್ದಾಳಿ ನಡೆಸಿದರು.

    ಹೊಸ ಸಂಸತ್ ನಿರ್ಮಾಣ ವಿಚಾರವಾಗಿ ಮಾತನಾಡಿದ ಅವರು, ಮುಂದಿನ ನೂರು ವರ್ಷಕ್ಕೆ ಸಂಸತ್ ಯಾವ ರೀತಿ ಇರಬೇಕು ಎಂಬ ಚಿಂತನೆಯಲ್ಲಿ ಸಂಸತ್ ನಿರ್ಮಾಣ ಮಾಡಲಾಗಿದೆ. ಜಗತ್ತಿನಲ್ಲೇ ಈ ರೀತಿಯ ಕಟ್ಟಡ ಎಲ್ಲಿಯೂ ನಿರ್ಮಾಣ ಮಾಡಿಲ್ಲ. ಜಗತ್ತಿಗೆ ಒಂದು ಉತ್ತಮ ನಿದರ್ಶನ ಈ ಸಂಸತ್ ಆಗಿದೆ ಎಂದರು. ಇದನ್ನೂ ಓದಿ: ಸರ್ಕಾರಿ ಕೆಲಸಕ್ಕೆ ಯುವತಿಯರು ಮಂಚ ಹತ್ತಬೇಕು – ಬಿಜೆಪಿ ಟೀಕಿಸೋ ಭರದಲ್ಲಿ ಪ್ರಿಯಾಂಕ್ ಖರ್ಗೆ ವಿವಾದ

    ಇದೇ ಸಂದರ್ಭದಲ್ಲಿ ಇಂದಿನ ಹರ್ ಘರ್ ತಿರಂಗಾ ಅಭಿಯಾನ ಆರಂಭ ಹಿನ್ನಲೆಯಲ್ಲಿ ಹುಬ್ಬಳ್ಳಿ ಮಯೂರಿ ಎಸ್ಟೇಟ್ ನಲ್ಲಿರುವ ಜೋಶಿಯವರ ಮನೆಯಲ್ಲಿ ತಮ್ಮ ಪತ್ನಿ ಜೊತೆಗೆ ಮನೆ ಮುಂದೆ ತಿರಂಗಾ ಹಾರಿಸಿದರು. ಧ್ವಜಾರೋಹಣ ಮಾಡಿ ಘೋಷಣೆ ಕೂಗಿದರು. ಈ ಬಗ್ಗೆ ಮಾತನಾಡಿದ ಅವರು, ಇಂದಿನಿಂದ ಪ್ರಧಾನಿ ಮೋದಿಯವರು ತಿರಂಗಾ ಅಭಿಯಾನಕ್ಕೆ ಕರೆ ನೀಡಿದ್ದಾರೆ. ಈಗಾಗಲೇ ಒಂದು ಕೋಟಿ ಧ್ವಜ ಮಾರಾಟವಾಗಿವೆ. ರಾಷ್ಟ್ರ ಧ್ವಜದ ಮಹತ್ವವನ್ನ ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಭಾರತದ ವಿದ್ಯಾರ್ಥಿಗಳು ಸಾರಿದ್ದಾರೆ. ಇನ್ನೂ ಯಾರು ಧ್ವಜ ಹಾರಿಸಿಲ್ಲ ಇಂದಿನಿಂದ ತಮ್ಮ ಮನೆಗಳ ಮುಂದೆ ಹಾರಿಸಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಇಂದಿನಿಂದ ಮೂರು ದಿನಗಳ ಕಾಲ ಹರ್ ಘರ್ ತಿರಂಗಾ ಅಭಿಯಾನ

    Live Tv
    [brid partner=56869869 player=32851 video=960834 autoplay=true]

  • ರಾಜ್ಯದಲ್ಲಿ ಶುರುವಾಯ್ತು ಹರ್ ಘರ್ ತಿರಂಗಾ ಹವಾ – ತಿರಂಗಾ ನಡೆಗೆ ಚಾಲನೆ ನೀಡಿದ ಪ್ರಹ್ಲಾದ್ ಜೋಶಿ

    ರಾಜ್ಯದಲ್ಲಿ ಶುರುವಾಯ್ತು ಹರ್ ಘರ್ ತಿರಂಗಾ ಹವಾ – ತಿರಂಗಾ ನಡೆಗೆ ಚಾಲನೆ ನೀಡಿದ ಪ್ರಹ್ಲಾದ್ ಜೋಶಿ

    ಹುಬ್ಬಳ್ಳಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳುವಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಕರೆ ನೀಡಿದ್ದಾರೆ.

    ನಾಳೆಯಿಂದ ಆರಂಭವಾಗಲಿರುವ ಹರ್ ಘರ್ ತಿರಂಗಾ ಅಭಿಯಾನದ ಮುನ್ನಾ ದಿನವೇ ರಾಜ್ಯದಲ್ಲಿ ಹರ್ ಘರ್ ತಿರಂಗಾ ಹವಾ ಆರಂಭವಾಗಿದೆ. ಮನೆ ಮನೆಗಳಲ್ಲೂ ತ್ರಿವರ್ಣ ಧ್ವಜ ಹಾರಾಡಬೇಕು. ಈ ನಿಟ್ಟಿನಲ್ಲಿ ಅಭಿಯಾನದ ಮುನ್ನಾ ದಿನವೇ ಪ್ರಹ್ಲಾದ್ ಜೋಶಿ ತಿರಂಗಾ ನಡೆ ಯಾತ್ರೆಗೆ ಚಾಲನೆ ನೀಡಿದರು.  ಇದನ್ನೂ ಓದಿ: ಆ.28ಕ್ಕೆ ನೋಯ್ಡಾದ ಸೂಪರ್‌ಟೆಕ್‌ನ ಅವಳಿ ಟವರ್‌ ನೆಲಸಮ – ಅವಧಿ ವಿಸ್ತರಿಸಿದ ಸುಪ್ರೀಂ

    ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಇಂದು ತಿರಂಗಾ ನಡೆ ಆಯೋಜಿಸಲಾಗಿತ್ತು. ತಿರಂಗಾ ನಡೆ ಯಾತ್ರೆಯನ್ನು ಪ್ರಹ್ಲಾದ್ ಜೋಶಿ ಉದ್ಘಾಟಿಸುವ ವೇಳೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಾಥ್ ನೀಡಿ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ವಿಶೇಷವಾಗಿ ಪ್ರಹ್ಲಾದ್ ಜೋಶಿಯವರು ಈ ಯಾತ್ರೆಯಲ್ಲಿ ಡೋಲು ಹಾಗೂ ವೀರಗಾಸೆ ವಾದ್ಯಗಳನ್ನು ಬಾರಿಸುವ ಮೂಲಕ ಹರ್ ಘರ್ ತಿರಂಗಾ ಅಭಿಯಾನಕ್ಕೆ ಜನರಲ್ಲಿ ಹುರುಪು ತುಂಬಿದರು.

    ದೇಶಕ್ಕೆ ಸ್ವಾತಂತ್ರ್ಯ ದೊರಕಿ 75 ವರ್ಷಗಳು ತುಂಬುತ್ತಿರುವ ಈ ಸಂದರ್ಭದಲ್ಲಿ ಪ್ರತಿ ಮನೆಯ ಮೇಲೆ ನಮ್ಮ ರಾಷ್ಟ್ರಧ್ವಜವನ್ನು ಹಾರಿಸಿ ದೇಶದೊಂದಿಗೆ ನಮ್ಮ ರಾಷ್ಟ್ರ ಭಕ್ತಿಯನ್ನು ವ್ಯಕ್ತಪಡಿಸಬೇಕು. ಈ ಅಭಿಯಾನವನ್ನು ಎಲ್ಲರೂ ಸೇರಿ ಯಶಸ್ವಿಗೊಳಿಸೋಣ ಎಂದು ಪ್ರಹ್ಲಾದ್ ಜೋಶಿ ರಾಜ್ಯದ ಜನರಿಗೆ ಕರೆ ನೀಡಿದ್ದಾರೆ. ಇದನ್ನೂ ಓದಿ: ಈಗ ಚುನಾವಣೆ ನಡೆದರೆ ಎನ್‌ಡಿಎಗೆ 286, ಕರ್ನಾಟಕದಲ್ಲಿ ಬಿಜೆಪಿಗೆ 13 ಸ್ಥಾನ

    Live Tv
    [brid partner=56869869 player=32851 video=960834 autoplay=true]

  • ಅಧಿವೇಶನ ಇಲ್ಲದಿದ್ದಾಗಲೂ ರಾಹುಲ್, ಸೋನಿಯಾ ಇಡಿ ತನಿಖೆಗೆ ಸಹಕರಿಸಿಲ್ಲ: ಖರ್ಗೆಗೆ ಪ್ರಹ್ಲಾದ್ ಜೋಶಿ ತಿರುಗೇಟು

    ಅಧಿವೇಶನ ಇಲ್ಲದಿದ್ದಾಗಲೂ ರಾಹುಲ್, ಸೋನಿಯಾ ಇಡಿ ತನಿಖೆಗೆ ಸಹಕರಿಸಿಲ್ಲ: ಖರ್ಗೆಗೆ ಪ್ರಹ್ಲಾದ್ ಜೋಶಿ ತಿರುಗೇಟು

    ಬೆಂಗಳೂರು: ಅಧಿವೇಶನ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ವಿಚಾರಣೆಗೆ ಕರೆದರೆ, ನಾವು ಕಲಾಪಗಳಲ್ಲಿ ಹೇಗೆ ಪಾಲ್ಗೊಳ್ಳಬೇಕು ಎಂಬ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಯವರ ಆಕ್ಷೇಪಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ.

    ಅಧಿವೇಶನ ಇಲ್ಲದ ಸಂದರ್ಭದಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರನ್ನು ಇಡಿ ವಿಚಾರಣೆಗೆ ಕರೆದಾಗ ಕಾಂಗ್ರೆಸ್ ನಾಯಕರು ಸಹಕರಿಸಿದ್ದರಾ? ಆಗಲೂ ಅವರು ಇಡಿ ತನಿಖೆಗೆ ಸಹಕಾರ ನೀಡಿಲ್ಲ. ತನಿಖೆ ನಡೆಯಬಾರದು ಎಂಬುದು ಕಾಂಗ್ರೆಸ್‌ನವರ ಉದ್ದೇಶವಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ.

    ಇಡಿ ತನಿಖೆಗೆ ತಡೆ ಕೋರಿ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರು ಹೈಕೋರ್ಟ್, ಸುಪ್ರೀಂ ಕೋರ್ಟ್ ಮುಂದೆಯೂ ಹೋಗಿದ್ದರು. ಆದರೆ ನ್ಯಾಯಾಲಯಗಳಲ್ಲಿ ಅವರಿಗೆ ತಡೆಯಾಜ್ಞೆ ಸಿಕ್ಕಿಲ್ಲ. ತನಿಖೆಯನ್ನು ತಡೆಯಲು ದೇಶದ ಸುಪ್ರೀಂ ಕೋರ್ಟ್ ನಿರಾಕರಿಸಿರುವಾಗ, ಇಡಿ ತನಿಖೆಯನ್ನು ನಿಲ್ಲಿಸಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.

    ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಯಂಗ್ ಇಂಡಿಯಾ ಕಂಪನಿಯ ಸಿಇಒ ಆಗಿದ್ದಾರೆ. ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈ ಕಂಪನಿಯದ್ದು ಪ್ರಮುಖ ಪಾತ್ರವಿದೆ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಡಿ ತನಿಖೆಗೆ ಒಳಪಡಿಸಿದೆ. ಸಾರ್ವಜನಿಕ ಜೀವನದಲ್ಲಿರುವ ಖರ್ಗೆ ಅವರು ತನಿಖೆಗೆ ಸಹಕರಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ : ಅಮಿತ್ ಶಾ ವಿರುದ್ಧ ಸಿದ್ದು ಕಿಡಿ

    ಅಧಿವೇಶನ ನಡೆಯುವಾಗ ಇಡಿ ಸಮನ್ಸ್ ಮಾಡಿದರೆ ಹೇಗೆ ಎಂದು ಕೇಳುವ ಖರ್ಗೆ ಅವರು, ಸೆಷನ್ ಇಲ್ಲದಿದ್ದಾಗ ತನಿಖೆಗೆ ಎಷ್ಟು ಸಹಕಾರ ನೀಡಿದ್ದಾರೆ? ಸೋನಿಯಾ, ರಾಹುಲ್ ಗಾಂಧಿ ಅವರಿಗೆ ಇಡಿ ಸಮನ್ಸ್ ನೀಡಿದಾಗ ಸದನದ ಕಲಾಪಕ್ಕೆ ಅಡ್ಡಿಪಡಿಸಿ, ಸದನ ನಡೆಯದಂತೆ ಮಾಡಿದವರು ಕಾಂಗ್ರೆಸ್‌ನವರು. ಸದನದ ಕಲಾಪ ನಡೆಯಲು ಖರ್ಗೆ ಅವರು ಎಷ್ಟು ಸಹಕಾರ ಕೊಟ್ಟಿದ್ದಾರೆ ಹೇಳಲಿ ಎಂದು ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ.

    ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದವರಿಂದ ನಾವು ಪ್ರಜಾಪ್ರಭುತ್ವದ ಪಾಠ ಕಲಿಯಬೇಕಾಗಿಲ್ಲ. ಕಾಂಗ್ರೆಸ್ ತನ್ನ ಪಕ್ಷದ ರಚನೆಯಲ್ಲೇ ಪ್ರಜಾಪ್ರಭುತ್ವವನ್ನು ಅನುಸರಿಸಲಿಲ್ಲ. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ದೇಶದ ಪ್ರಜಾಪ್ರಭುತ್ವವನ್ನು ತಡೆ ಹಿಡಿದವರು ಯಾರು? ಇಂದು ದೇಶದ ಎಲ್ಲಾ ನ್ಯಾಯಾಲಯಗಳು ಕಾಂಗ್ರೆಸ್‌ನ ಮನವಿಯನ್ನು ತಿರಸ್ಕರಿಸಿದೆ. ಆದರೂ ಕಾಂಗ್ರೆಸ್ ನ್ಯಾಯಾಂಗ ವ್ಯವಸ್ಥೆಯನ್ನೇ ನಂಬುತ್ತಿಲ್ಲ. ಇದು ಪ್ರಜಾಪ್ರಭುತ್ವದ ವಿರೋಧಿ ಧೋರಣೆ ಅಲ್ಲವೇ ಎಂದು ಜೋಶಿ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮೋದಿ ಮುಂದೆ ರಾಹುಲ್ ಗಾಂಧಿ ಜೀರೋ: ರೇಣುಕಾಚಾರ್ಯ

    Live Tv
    [brid partner=56869869 player=32851 video=960834 autoplay=true]

  • ಹರ್ ಘರ್ ತಿರಂಗಾಕ್ಕೆ ಪ್ರೇರಣೆ ನೀಡುವ ಸಂಕಲ್ಪದೊಂದಿಗೆ ತಿರಂಗಾ ರ್‍ಯಾಲಿಯಲ್ಲಿ ಜೋಶಿ ಭಾಗಿ

    ಹರ್ ಘರ್ ತಿರಂಗಾಕ್ಕೆ ಪ್ರೇರಣೆ ನೀಡುವ ಸಂಕಲ್ಪದೊಂದಿಗೆ ತಿರಂಗಾ ರ್‍ಯಾಲಿಯಲ್ಲಿ ಜೋಶಿ ಭಾಗಿ

    ನವದೆಹಲಿ: ಭಾರತ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷ ತುಂಬಿದ ಶುಭ ಸಂದರ್ಭದಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಪ್ರೇರಣೆ ನೀಡುವಲ್ಲಿ ಇಂದು ಸಂಸದರ ತಿರಂಗಾ ಬೈಕ್ ರ್‍ಯಾಲಿ ನಡೆಯಿತು.

    ದೆಹಲಿಯ ಕೆಂಪುಕೋಟೆಯಿಂದ ವಿಜಯ್ ಚೌಕ್‍ವರೆಗೆ ಸಂಸದರು ತ್ರಿವರ್ಣ ಧ್ವಜ ಹಿಡಿದು ಬೈಕ್ ರ್‍ಯಾಲಿ ನಡೆಸಿದರು. ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ತಿರಂಗಾ ಬೈಕ್ ರ್‍ಯಾಲಿಗೆ ಚಾಲನೆ ನೀಡಿದರು. ಇದನ್ನೂ ಓದಿ: ಸಿದ್ದರಾಮಯ್ಯ ಇಂದು ತಮ್ಮ ರಾಜಕೀಯ ನಿವೃತ್ತಿ ಘೋಷಿಸಲಿ: ಅಶ್ವತ್ಥ್‌ನಾರಾಯಣ ಟಾಂಗ್

    ಅಮೃತ ಮಹೋತ್ಸವದ ಹಿನ್ನೆಲೆ ದೇಶದಲ್ಲಿ ರಾಷ್ಟ್ರೀಯ ಭಾವನೆಯನ್ನು ಇಮ್ಮಡಿಗೊಳಿಸುವಂತ ಹಲವು ಕಾರ್ಯಕ್ರಮಗಳನ್ನು ಕೇಂದ್ರ ಬಿಜೆಪಿ ಸರ್ಕಾರ ಹಮ್ಮಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷ ಪೂರ್ಣಗೊಂಡಿರುವ ಕುರಿತು ತಮ್ಮ ಮನದಾಳದ ಮಾತುಗಳನ್ನು ಆಡಿದರು. ಅಮೃತ ಮಹೋತ್ಸವ ಒಂದು ಅಭಿಯಾನವಾಗಬೇಕು. ಈ ನಿಟ್ಟಿನಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಯೂ ಅಜಾದಿ ಕೀ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ತಮ್ಮ ಪಾಲ್ಗೊಳ್ಳುವಿಕೆಯನ್ನು ತೋರ್ಪಡಿಸುವಂತೆ ಕರೆ ನೀಡಿದರು. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ED ಅಧಿಕಾರ ಎತ್ತಿಹಿಡಿದ ಸುಪ್ರೀಂ – ʻಅಪಾಯಕಾರಿ ತೀರ್ಪುʼ ಎಂದ ವಿಪಕ್ಷಗಳು

    ಈ ನಡುವೆ ದೇಶದ ಸಂಸದರನ್ನು ಒಟ್ಟುಗೂಡಿಸಿಕೊಂಡು ತಿರಂಗಾ ರ್‍ಯಾಲಿ ಕಾರ್ಯಕ್ರಮ ನಡೆಸುವ ಕುರಿತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಕೇಂದ್ರ ಸಂಸ್ಕೃತಿ ಇಲಾಖೆಗೆ ಸೂಚನೆ ನೀಡಿದ್ದರು. ಇದು ಬಿಜೆಪಿಯ ಕಾರ್ಯಕ್ರಮವಲ್ಲ. ಇದೊಂದು ರಾಷ್ಟ್ರಾಭಿಮಾನ ಹೆಚ್ಚಿಸುವ ಮಹತ್ವದ ಅಭಿಯಾನ. ದೇಶದ ಜನರನ್ನು ಪ್ರತಿನಿಧಿಸುವ ಸಂಸದರು ತ್ರಿವರ್ಣ ಧ್ವಜ ಹಿಡಿದು ದೇಶದ ಜನರಿಗೆ ಸಂದೇಶ ಸಾರುವುದು ಮುಖ್ಯ. ಈ ನಿಟ್ಟಿನಲ್ಲಿ ಎಲ್ಲ ಸಂಸದರು ಪಾಲ್ಗೊಳ್ಳುವಂತೆ ತಿಳಿಸಿದರು.

    ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆ ಕೇಂದ್ರ ಸಂಸ್ಕೃತಿ ಸಚಿವಾಲಯ ಕಾರ್ಯಕ್ರಮವನ್ನು ಆಯೋಜಿಸಿತ್ತು. ತಿರಂಗಾ ರ್ಯಾಲಿಗೆ ಚಾಲನೆ ನೀಡಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ಪ್ರಹ್ಲಾದ್ ಜೋಶಿ ಅವರು ಧ್ವಜ ಹಾರಿಸುವ ಮೂಲಕ ಸಂಭ್ರಮಿಸಿದರು. ತಿರಂಗಾ ಬೈಕ್ ರ್‍ಯಾಲಿಯಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಸಂಸದರು ಪಾಲ್ಗೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]