ಹುಬ್ಬಳ್ಳಿ: ನಮಗೆ 10 ಕೋಟಿ ಧ್ವಜ ಬೇಕು, ಅದನ್ನು ಪೂರೈಕೆ ಮಾಡಲು ಖಾದಿ ಗ್ರಾಮೋದ್ಯೋಗ ಘಟಕಕ್ಕೆ ಆಗುವುದಿಲ್ಲ. ಹೀಗಾಗಿ ಧ್ವಜ ನೀತಿಗೆ ತಿದ್ದುಪಡಿ ತರಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಮ್ಮ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಖಾದಿ ಧ್ವಜಕ್ಕೆ ಹೆಚ್ಚು ದುಡ್ಡು ಕೊಡಬೇಕು. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಹೀಗಾಗಿ ಧ್ವಜ ನೀತಿಗೆ ತಿದ್ದುಪಡಿ ಮಾಡಲಾಗಿದೆ. ಇದರಲ್ಲಿ ರಾಜಕೀಯ ಮಾಡುವ ಅವಶ್ಯಕತೆಯಿಲ್ಲ ಎಂದು ಹೇಳಿಕೆ ನೀಡಿದರು.
75 ನೇ ಸ್ವಾತಂತ್ರ‍್ಯ ದಿನಾಚರಣೆ ಹಿನ್ನೆಲೆ ಆಗಸ್ಟ್ 13 ರಿಂದ ಆಗಸ್ಟ್ 15 ರ ವರೆಗೆ ಜನರು ರಾಷ್ಟ್ರ ಧ್ವಜವನ್ನು ಅವರ ಮನೆಗಳ ಮೇಲೆ ಹಾರಿಸಬಹುದು. ಒಂದು ಧ್ವಜಕ್ಕೆ 20 ರೂ. ಕೊಟ್ಟು ಸಾರ್ವಜನಿಕರು ಖರೀದಿ ಮಾಡಬೇಕು. ನ್ಯಾಯಬೆಲೆ ಅಂಗಡಿ, ಮಾಲ್, ಮಹಾನಗರ ಪಾಲಿಕೆಗೆ ಸಂಬಂಧಪಟ್ಟ ಕಚೇರಿಗಳಲ್ಲಿ ಧ್ವಜ ಮಾರಾಟಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮುಂಬೈ ವಿವಾದ – ಮಹಾರಾಷ್ಟ್ರ ರಾಜ್ಯಪಾಲರ ಹೇಳಿಕೆ ಒಪ್ಪಲ್ಲ ಎಂದ ಸಿಎಂ ಶಿಂದೆ
Live Tv
[brid partner=56869869 player=32851 video=960834 autoplay=true]
ನವದೆಹಲಿ: ಪಿಎಫ್‍ಐ ಸಂಘಟನೆ ಬ್ಯಾನ್ ಮಾಡುವ ಕುರಿತಂತೆ ಕೇಂದ್ರ ಗೃಹ ಇಲಾಖೆ ಜೊತೆ ಸಿಎಂ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
PFI’s activities should be monitored at the national level. The Chief Minister of Karnataka told me that he is deliberating over the matter with the Home Minister.
ಪಿಎಫ್‍ಐ ಚಟುವಟಿಕೆಗಳ ಮೇಲೆ ರಾಷ್ಟ್ರಮಟ್ಟದಲ್ಲಿ ನಿಗಾ ಇಡಬೇಕಾಗಿದೆ. ಇಂಥಹ ಸಂಘಟನೆಗಳನ್ನು ರಾಷ್ಟ್ರಮಟ್ಟದಲ್ಲಿಯೇ ಬ್ಯಾನ್ ಮಾಡಬೇಕು ಎಂಬ ಅಭಿಪ್ರಾಯ ಬಸವರಾಜ್ ಬೊಮ್ಮಾಯಿ ಅವರದ್ದಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗೃಹ ಇಲಾಖೆಯ ಜೊತೆ ಚರ್ಚೆ ನಡೆಸುವುದಾಗಿ ನನ್ನ ಜೊತೆ ಮಾತನಾಡುವಾಗ ತಿಳಿಸಿದ್ದಾರೆ ಎಂದರು.
ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ ಪ್ರಹ್ಲಾದ್ ಜೋಶಿ ಅವರು ಪಿಎಫ್‍ಐ, ಎಸ್‍ಡಿಪಿಐ ಸಂಘಟನೆಯವರು ಇಂಥಹ ಕೃತ್ಯದ ಹಿಂದಿದ್ದಾರೆ ಎಂಬ ಶಂಕೆ ವ್ಯಕ್ತಪಡಿಸಿದರು. ಈ ಸಂಘಟನೆಗಳ ಕೈವಾಡ ಇರುವ ಬಗ್ಗೆ ಹಲವು ಪ್ರಾಥಮಿಕ ಮತ್ತು ಮಾಧ್ಯಮ ವರದಿಗಳಿವೆ. ಇಂಥಹ ಕೃತ್ಯ ನಡೆಸುವವರಿಗೆ ಕೇರಳದಲ್ಲಿ ರಕ್ಷಣೆ ನೀಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ನಮ್ಮ ಕಾರ್ಯಕರ್ತರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ನಳಿನ್ ಕುಮಾರ್ ಕಟೀಲ್
ಪ್ರವೀಣ್ ಹತ್ಯೆಯಿಂದಾಗಿ ರಾಜ್ಯದಲ್ಲಿ ಜನಾಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಬಸವರಾಜ್ ಬೊಮ್ಮಾಯಿ ಅವರು, ಪ್ರಹ್ಲಾದ್ ಜೋಶಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಪಿಎಫ್‍ಐ ಬ್ಯಾನ್ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಗೃಹ ಇಲಾಖೆ ಜೊತೆ ಚರ್ಚೆ ನಡೆಸುವ ಬಗ್ಗೆ ಜೋಶಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖಂಡಿಸಿ, ಕಾಂಗ್ರೆಸ್ ಪಕ್ಷದ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಕುರಿತು ನವದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಜೋಶಿ ಅವರು, ಪ್ರಕರಣದ ಕುರಿತು ಆರಂಭಿಕ ವರದಿಗಳು ಮತ್ತು ಕೆಲವು ಮಾಧ್ಯಮ ವರದಿಗಳು ಎಸ್‍ಡಿಪಿಐ, ಪಿಎಫ್‍ಐ ಲಿಂಕ್‍ಗಳಿರೋದನ್ನ ಸೂಚಿಸುತ್ತಿದೆ. ಕೇರಳದಲ್ಲಿ ಅವರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಕೂಡಾ ಇಂಥವರನ್ನ ಪ್ರೋತ್ಸಾಹಿಸುತ್ತಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಪಿಎಫ್‍ಐ ಕಾರ್ಯಕರ್ತರ ಮೇಲಿನ ಕೇಸುಗಳನ್ನೆಲ್ಲ ಹಿಂಪಡೆದರು ಎಂದು ದೂರಿದ್ದಾರೆ. ಇದನ್ನೂ ಓದಿ: ಚೆಸ್ ಒಲಿಂಪಿಯಾಡ್‌ನಲ್ಲಿ ಮೋದಿ ಫೋಟೋ ಹಾಕದೇ ಜಾಹೀರಾತು – ಎಲ್ಲ ಬೋರ್ಡ್‍ಗಳಿಗೂ ಫೋಟೋ ಅಂಟಿಸಿದ ಬಿಜೆಪಿ
ಈ ರೀತಿ ಕಾಂಗ್ರೆಸ್ ಪಿಎಫ್‍ಐಗೆ ಪ್ರೋತ್ಸಾಹ ನೀಡುತ್ತಿದೆ. ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಕರ್ನಾಟಕ ಸರ್ಕಾರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ಕೊಟ್ಟಿದ್ದಾರೆ.
ಇದೇ ವೇಳೆ ಪ್ರವೀಣ್ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ ಅವರು, ದುಷ್ಕರ್ಮಿಗಳು ನಡೆಸಿದ ದಾಳಿಯಿಂದ ನಮ್ಮ ಕಾರ್ಯಕರ್ತನ ಹತ್ಯೆಯಾಗಿದೆ. ಈ ಕೃತ್ಯ ಎಸಗಿದವರನ್ನು ಯಾವುದೇ ಮುಲಾಜಿಲ್ಲದೆ ಬಂಧಿಸಬೇಕು. ಎಲ್ಲರಿಗೂ ಪಾಠವಾಗುವಂತೆ ಶಿಕ್ಷೆ ಆಗಬೇಕು. ಆ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ಹಾಗೂ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳುವುದಾಗಿ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಾಕ್ ಏಜೆಂಟರ ಹನಿಟ್ರ್ಯಾಪ್‍ಗೆ ಸಿಲುಕಿದ ಸೇನಾ ಸಿಬ್ಬಂದಿ – ಮಾಹಿತಿ ಸೋರಿಕೆ
ಪ್ರವೀಣ್ ನೆಟ್ಟಾರು ಆತ್ಮಕ್ಕೆ ಶಾಂತಿ ಕೋರಿದ ಸಚಿವರು, ಪ್ರವೀಣ್ ಕುಟುಂಬಕ್ಕೆ ದುಃಖ ನೀಗಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸಿದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: 20 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸಂಸತ್ ಭವನದಲ್ಲಿ ಬಸವಣ್ಣನವರ ಅನುಭವ ಮಂಟಪ ಕಲಾಕೃತಿಯನ್ನು ಪ್ರದರ್ಶಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇದು ನಿಜಕ್ಕೂ ಕರ್ನಾಟಕಕ್ಕೆ ಹೆಮ್ಮೆಯ ಸಂಗತಿ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನೂತನ ಸಂಸತ್ ಭವನದಲ್ಲಿ ಸಂವಿಧಾನದ ಗ್ಯಾಲರಿ ನಿರ್ಮಿಸಲಾಗುತ್ತಿದ್ದು, 12ನೇ ಶತಮಾನದ ಬಸವಣ್ಣನವರ ಅನುಭವ ಮಂಟಪಕ್ಕೆ ಸಂಬಂಧಿಸಿದ ಹಸ್ತಪ್ರತಿ, ಕಲಾಕೃತಿ ಸೇರಿದಂತೆ ಲಭ್ಯ ಇರುವ ಅಗತ್ಯ ದೃಶ್ಯ ದಾಖಲೆಗಳನ್ನೂ ಪ್ರದರ್ಶಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ವೇಳೆ ಕಾಂಗ್ರೆಸ್ ಮುಖಂಡನ ಕೂದಲು ಹಿಡಿದು ಜೀಪಿನೊಳಗೆ ದಬ್ಬಿದ ಪೊಲೀಸರು
ಈ ನಿಟ್ಟಿನಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯ, ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಪತ್ರ ಬರೆದು, ಹಸ್ತಪ್ರತಿ ಹಾಗೂ ಕಲಾಕೃತಿ ಪೂರೈಸುವಂತೆ ಮನವಿ ಮಾಡಿದೆ. ವಿವಿಧ ಕ್ಷೇತ್ರಗಳಲ್ಲಿ ಅನುಭವ ಪಡೆದವರು ಚರ್ಚಿಸಿ ಅನುಭವ ಹಂಚಿಕೊಳ್ಳುತ್ತಿದ್ದ, ಪ್ರಜಾಪ್ರಭುತ್ವ ವ್ಯವಸ್ಥೆಯ ತಳಹದಿ, ಜಗತ್ತಿನ ಮೊದಲ ಸಂಸತ್ ಎನಿಸಿಕೊಂಡಿರುವ ಅನುಭವ ಮಂಟಪದ ಕಲಾಕೃತಿ ನೂತನ ಸಂಸತ್ ಭವನದ ಗ್ಯಾಲರಿಯಲ್ಲಿ ಪ್ರದರ್ಶನಗೊಳ್ಳುವುದು. ಇದು ಸಮಸ್ತ ಕನ್ನಡಿಗರಿಗೆ ಗೌರವದ ವಿಷಯ ಎಂದು ಜೋಶಿ ಟ್ವೀಟರ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಟ್ರಯಲ್ ಬ್ಲಾಸ್ಟ್ ನಡೆಸಲು ಮುಂದಾಗಿರುವ ಬೇಬಿಬೆಟ್ಟದ ಆ ಜಾಗ ಮೈಸೂರು ಅರಮನೆಗೆ ಸೇರಿದ್ದು: ಯದುವೀರ್
20 ಸಾವಿರ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಂಸತ್ ಭವನ ಇನ್ನೆರಡು ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಬಸವಣ್ಣನವರ ಅನುಭವ ಮಂಟಪ 12ನೇ ಶತಮಾನದಲ್ಲೇ ಪ್ರಜಾಪ್ರಭುತ್ವ ವ್ಯವಸ್ಥೆ ಭಾರತದಲ್ಲಿತ್ತು ಎಂಬುದರ ಬಗ್ಗೆ ಪ್ರಧಾನಿ ಮೋದಿ ಅವರು ತಮ್ಮ ಭಾಷಣಗಳಲ್ಲೂ ಪ್ರಸ್ತಾಪಿಸಿದ್ದರು. ಕರ್ನಾಟಕ ವಿಶ್ವ ವಿದ್ಯಾಲಯವು ಈ ಕುರಿತಂತೆ ಈಗಾಗಲೇ ಮಾಹಿತಿ ಸಂಗ್ರಹಿಸಲು ಅಣಿಯಾಗಿದ್ದು, ಬಸವ ಅಧ್ಯಯನ ಪೀಠ ಹಾಗೂ ಹಿರಿಯ ಸಂಶೋಧಕರೊಂದಿಗೆ ಒಂದು ಸುತ್ತಿನ ಸಭೆ ನಡೆಸಿದೆ.
Live Tv
[brid partner=56869869 player=32851 video=960834 autoplay=true]
ಕಾಂಗ್ರೆಸ್‍ನಿಂದ ಉಪರಾಷ್ಟ್ರಪತಿ ಅಭ್ಯರ್ಥಿಯಾದ ಬಳಿಕ ಮಾರ್ಗರೇಟ್ ಆಳ್ವಾ ಅವರು ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಸುದ್ದಿಯಲ್ಲಿದ್ದಾರೆ. ಇಂದು ನನ್ನ ಫೋನ್ ಟ್ಯಾಪ್ ಮಾಡಲಾಗಿದೆ ಎಂದು ಆಳ್ವಾ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
Dear BSNL/ MTNL,
After speaking to some friends in the BJP today, all calls to my mobile are being diverted & I’m unable to make or receive calls. If you restore the phone. I promise not to call any MP from the BJP, TMC or BJD tonight.
ಇಂದು ಬಿಜೆಪಿಯ ಕೆಲವು ಸ್ನೇಹಿತರೊಂದಿಗೆ ಮಾತನಾಡಿದೆ. ಆ ನಂತರ ನನ್ನ ಮೊಬೈಲ್‍ಗೆ ಎಲ್ಲಾ ಕರೆಗಳನ್ನು ಡೈವರ್ಟ್ ಮಾಡಲಾಗುತ್ತಿದೆ ಎಂದು ಮಾರ್ಗರೇಟ್ ಆಳ್ವಾ ಅವರು ಆರೋಪಿಸಿದ್ದರು. ನನ್ನ ಫೋನ್ ಟ್ಯಾಪ್ ಆಗಿದ್ದು, ನನಗೆ ಕರೆ ಮಾಡಲು ಅಥವಾ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ನನ್ನ ಫೋನ್ ಸರಿಮಾಡಿದರೆ, ಇಂದು ರಾತ್ರಿ ಬಿಜೆಪಿ, ಟಿಎಂಸಿ ಅಥವಾ ಬಿಜೆಡಿಯಿಂದ ಯಾವುದೇ ಸಂಸದರನ್ನು ಕರೆಯುವುದಿಲ್ಲ ಎಂಬ ಭರವಸೆ ನೀಡುತ್ತೇನೆ ಎಂದು ಬಿಜೆಪಿಯನ್ನು ಗುರಿಯಾಗಿಸಿ ಟ್ವೀಟ್ ಮಾಡಿದ್ದರು.
Why should anybody tap her phone? We’re confident about what the result of the VP election will be. Why should we do this? These are childish allegations. She’s a senior person & at least she should not make such allegations. pic.twitter.com/jACVAAbfuo
ಆಳ್ವಾ ಅವರ ಆರೋಪವನ್ನು ಸಂಪೂರ್ಣವಾಗಿ ತಳ್ಳಿಹಾಕಿರುವ ಪ್ರಹ್ಲಾದ್ ಜೋಶಿ ಅವರು, ಇದೊಂದು ಬಾಲಿಶ ಹೇಳಿಕೆ ಅಂತಾ ಲೇವಡಿ ಮಾಡಿದ್ದಾರೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ. ಅದು ಎಲ್ಲರಿಗೂ ಈಗಾಗಲೇ ಗೊತ್ತಿರುವಂತದ್ದು. ಹೀಗಿರುವಾಗ ಯಾರಾದರೂ ಆಳ್ವಾ ಅವರ ಫೋನ್ ಅನ್ನು ಏಕೆ ಟ್ಯಾಪ್ ಮಾಡುತ್ತಾರೆ ಎಂದು ಪ್ರಶ್ನಿಸಿದ್ದಾರೆ.
ಮಾರ್ಗರೇಟ್ ಆಳ್ವಾ ಅವರು ಹಿರಿಯ ನಾಯಕಿ. ಈ ರೀತಿಯ ಹೇಳಿಕೆಗಳು ಚೈಲ್ಡಿಶ್ ಮನೋಭಾವವನ್ನು ತೋರಿಸುತ್ತವೆ. ಇಂಥಹ ಹೇಳಿಕೆಗಳು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವಂತದ್ದಲ್ಲ. ಆರೋಪಗಳನ್ನು ಮಾಡುವಾಗ ಕನಿಷ್ಠ ಆಲೋಚನೆ ಮಾಡಿ ಆರೋಪಿಸಲಿ. ಹುರುಳಿಲ್ಲದ, ಆಧಾರವಿಲ್ಲದ ಆರೋಪಗಳಿಗೆ ಅರ್ಥವಿಲ್ಲ ಎಂದು ಆಳ್ವಾ ಅವರಿಗೆ ತಿರುಗೇಟು ನೀಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಹುಬ್ಬಳ್ಳಿ: ತಾರಿಹಾಳ ಕೈಗಾರಿಕಾ ವಲಯದ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದ ಸಂತ್ರಸ್ತರಿಗೆ ಕೂಡಲೇ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾಳಜಿ ವಹಿಸಿದ್ದಾರೆ.
ಘಟನೆಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ಹಾಗೂ ಗಾಯಗೊಂಡವರಿಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದರು. ಈ ವೇಳೆ ಅಗ್ನಿ ಅವಘಡದ ಬಗ್ಗೆ ಸಿಎಂ ಜೊತೆ ಚರ್ಚಿಸಿದ ಕೇಂದ್ರ ಸಚಿವರು, ಮೃತಪಟ್ಟವರ ಕುಟುಂಬದವರಿಗೆ ಹಾಗೂ ಗಾಯಗೊಂಡವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿ ಮೂಲಕ ನೆರವು ನೀಡುವ ವಿಚಾರವಾಗಿ ಚರ್ಚೆ ನಡೆಸಿದ್ದಾರೆ.
ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ವಲಯದಲ್ಲಿರುವ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವುದು ತಿಳಿದು ತುಂಬಾ ಆಘಾತ ಉಂಟಾಗಿದೆ.
ಈಗಾಗಲೇ ಈ ಬಗ್ಗೆ ಮುಖ್ಯಮಂತ್ರಿ ಶ್ರೀ @BSBommai ಅವರ ಜೊತೆ ಮಾತನಾಡಿದ್ದು ಘಟನೆಯಲ್ಲಿ ಮರಣಹೊಂದಿದವರ ಮತ್ತು ಗಾಯಗೊಂಡವರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೆರವು ನೀಡುವುದಾಗಿ ಸ್ಪಂದಿಸಿದ್ದಾರೆ
ಈ ಬಗ್ಗೆ ಟ್ವಿಟ್ಟರ್ ಮೂಲಕ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಈ ದುರ್ಘಟನೆಯ ಬಗ್ಗೆ ತಿಳಿದು ಅಘಾತವಾಯಿತು. ಬೆಂಕಿ ಅವಘಡಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅವಘಡದಲ್ಲಿ ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ಹಾಗೂ ಗಾಯಾಳುಗಳಿಗೆ ಪರಿಹಾರ ನೀಡುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಮಾತಾಡಿದ್ದೇನೆ. ಸಿಎಂ ಕೂಡಲೇ ಈ ಬಗ್ಗೆ ಕ್ರಮವಹಿಸೋದಾಗಿ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಸ್ಪಂದನೆಗೆ ಧನ್ಯವಾದ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಬೆಂಗಳೂರು ಹೋಟೆಲ್ ಬಳಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಉಗ್ರರಿಗೆ ಸಿಲಿಕಾನ್ ಸಿಟಿ ಸ್ಲೀಪರ್ ಸೇಲ್?
Live Tv
[brid partner=56869869 player=32851 video=960834 autoplay=true]
ನವದೆಹಲಿ: ಸಂಸತ್‍ನಲ್ಲಿ ಚರ್ಚೆ ನಡೆಯದಂತೆ ಅಡ್ಡಿಪಡಿಸುವುದು ನಂತರ ಹೊರಗೆ ಬಂದು ಸುಳ್ಳು ಹೇಳುವುದೇ ಕಾಂಗ್ರೆಸ್‍ನ ಸಿಂಗಲ್ ಪಾಯಿಂಟ್ ಅಜೆಂಡಾ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಪ್ರತಿಪಕ್ಷದ ವಿರುದ್ಧ ಟೀಕಾ ಪ್ರಹಾರ ನಡೆಸಿದರು.
ರಾಜ್ಯಸಭೆ ಕಲಾಪದಲ್ಲಿ ಚರ್ಚೆಗೆ ಅವಕಾಶ ಕೊಟ್ಟಿಲ್ಲ ಎಂದು ಟ್ವೀಟ್ ಮಾಡಿದ ಕಾಂಗ್ರೆಸ್ ಪಕ್ಷದ ರಾಜ್ಯಸಭೆ ಸದಸ್ಯ, ಕೇಂದ್ರದ ಮಾಜಿ ಸಚಿವ ಜೈರಾಂ ರಮೇಶ್, ಆಹಾರ ಪದಾರ್ಥಗಳ ಮೇಲಿನ ಜಿಎಸ್‍ಟಿ ದರ ಹೆಚ್ಚಳ ಒಮ್ಮತದ ನಿರ್ಧಾರವಲ್ಲ ಅಂತ ಟ್ವಿಟ್ಟರ್‌ನಲ್ಲಿ ಟೀಕಿಸಿದರು.
ಸರಣಿ ಟ್ವೀಟ್ ಮಾಡಿದ ಜೈರಾಮ್ ರಮೇಶ್‍ಗೆ ಟ್ವಿಟ್ಟರ್‌ನಲ್ಲೇ ತಿರುಗೇಟು ನೀಡಿದ ಅವರು, ಚರ್ಚೆಗೆ ನಾವು ಸಿದ್ಧ, ಸದನದಲ್ಲಿ ಯಾವುದೇ ವಿಷಯಗಳ ಚರ್ಚೆಗೆ ಸದನದ ನೀತಿ ನಿಯಮಾವಳಿಗಳಿವೆ. ಪ್ರತಿಪಕ್ಷಗಳು ಸಭಾಧ್ಯಕ್ಷರಿಗೆ ನೋಟಿಸ್ ಕೊಟ್ಟು ಚರ್ಚೆಗೆ ಅವಕಾಶ ಕೋರಬೇಕು. ಆ ಬಳಿಕ ಅದು ಕಲಾಪ ಸಲಹಾ ಸಮಿತಿಯಲ್ಲಿ ಚರ್ಚೆಯಾಗಿ ಸಮಯ ನಿಗದಿಯಾಗಬೇಕು. ಆದರೆ ಕಾಂಗ್ರೆಸ್‍ಗೆ ಚರ್ಚಿಸುವುದು ಬೇಕಿಲ್ಲ, ಸದನದೊಳಗೆ ಕಲಾಪಕ್ಕೆ ಅಡ್ಡಿಪಡಿಸುವುದು. ಸದನದ ಹೊರಗೆ ಬಂದು ಸುಳ್ಳು ಹೇಳುವುದೇ ಕಾಂಗ್ರೆಸ್ ಕೆಲಸ ಎಂದು ಕಿಡಿಕಾರಿದರು.
However, the Opposition didn’t pay heed to the chair!
It’s highly 'parliamentary'? !!
During COVID when we dispensed Question Hour, they said Question Hour is the lifeline of the Parliament & now they don't allow it, this shows their double standards.
ಪ್ರತಿಯೊಬ್ಬ ಸಂಸದರಿಗೂ ಪ್ರಶ್ನೋತ್ತರ ಅವಧಿ ಬಹಳ ಮುಖ್ಯ. ಆದರೆ ಪ್ರತಿಪಕ್ಷ ಕಾಂಗ್ರೆಸ್ ಪ್ರಶ್ನೋತ್ತರ ಅವಧಿಯನ್ನೇ ನಡೆಸಲು ಅವಕಾಶವಾಗದಂತೆ ಸದನದ ಕಲಾಪಕ್ಕೆ ಅಡ್ಡಿ ಮಾಡುತ್ತಿದೆ ಎಂದು ಜೋಶಿ ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಟ್ವೀಟ್‍ನಲ್ಲಿ ಏನಿದೆ?
ಆಹಾರ ಪದಾರ್ಥಗಳ ಮೇಲಿನ ಜಿಎಸ್‍ಟಿ ದರಗಳ ಕುರಿತು ಮುಕ್ತ ಮನಸ್ಸಿನಿಂದ ಚರ್ಚಿಸಲು ನಾವು ತಯಾರಿದ್ದೇವೆ. ಆದರೆ ಕೇಂದ್ರ ವಿತ್ತ ಸಚಿವರು ಕೋವಿಡ್‍ಗೆ ತುತ್ತಾಗಿ ಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಚೇತರಿಸಿಕೊಂಡ ತಕ್ಷಣ ಮತ್ತು ಸಂಸದೀಯ ಕಲಾಪ ಸಲಹಾ ಸಮಿತಿ ನಿರ್ಧರಿಸಿದ ತಕ್ಷಣ ವಿತ್ತ ಸಚಿವರು ಉತ್ತರಿಸುತ್ತಾರೆ.
ಇಂದು ರಾಜ್ಯಸಭೆಯ ಗೌರವಾನ್ವಿತ ಸಭಾಧ್ಯಕ್ಷರು ಚರ್ಚೆಗೂ ಅವಕಾಶ ನೀಡೋದಾಗಿ ಹೇಳಿದರು. ಸದನದ ವಿಷಯ ಪಟ್ಟಿಯಂತೆ ಚರ್ಚೆಯ ಪ್ರಕ್ರಿಯೆಗಳು ಆರಂಭವಾಗಬೇಕು. ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಅವರಿಗೆ ಸದನದ ಪದ್ದತಿ ಗೊತ್ತಿಲ್ಲವೇ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಪಕ್ಷದ ಉದ್ದೇಶ ಸಂಸತ್ತಿನ ಕಲಾಪ ಅಡ್ಡಿಪಡಿಸೋದು ಮಾತ್ರ, ಚರ್ಚೆ ನಡೆಸೋದಲ್ಲ. ವಾಸ್ತವವನ್ನು ಎದುರಿಸಲು ಸಾಧ್ಯವಾಗದ ಕಾರಣ ಸರ್ಕಾರದ ಉದ್ದೇಶದ ಬಗ್ಗೆ ಕಾಂಗ್ರೆಸ್ ಮುಖಂಡರು ಸುಳ್ಳು ಹೇಳುತ್ತಿದ್ದಾರೆ. ಕಲಾಪ ಅಡ್ಡಿಪಡಿಸುವುದು ಮತ್ತು ಪ್ರಪಂಚದ ಮುಂದೆ ಸುಳ್ಳು ಹೇಳುವುದು ಇದು ಕಾಂಗ್ರೆಸ್ ನೀತಿ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: 16 ಗೇಟ್‍ಗಳನ್ನು ರಿಪ್ಲೇಸ್ ಮಾಡಲಾಗಿದ್ದು, ಇವತ್ತಿಗೂ 61 ಗೇಟ್ ಬದಲಿಸಬೇಕಾಗಿದೆ: ಸಿಎಂ
ಪ್ರಪಂಚದ ಬೇರೆ-ಬೇರೆ ರಾಷ್ಟ್ರಗಳಲ್ಲಿ ಹಣದುಬ್ಬರ ಎಲ್ಲಿಗೆ ತಲುಪಿದೆ ಎನ್ನುವುದು ಕಾಂಗ್ರೆಸ್‍ಗೂ ಗೊತ್ತಿದೆ. ಭಾರತ ಹಣದುಬ್ಬರವನ್ನು ಕಂಟ್ರೋಲ್ ಮಾಡುವಲ್ಲಿ ದಿಟ್ಟ ಹೆಜ್ಜೆಗಳನ್ನ ತೆಗೆದುಕೊಂಡಿದೆ. ಹೀಗಾಗಿ ಸದನದಲ್ಲಿ ಕಾಂಗ್ರೆಸ್ ಚರ್ಚಿಸಲು ತಯಾರಿಲ್ಲ ಎಂದು ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಸಂಸತ್‌ನಲ್ಲಿ ಚರ್ಚೆಗೆ ಅವಕಾಶ ನೀಡುತ್ತಿಲ್ಲ ಎಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ.
ರಾಹುಲ್ ಗಾಂಧಿಗೆ ಟ್ವಿಟ್ಟರ್‌ನಲ್ಲಿ ತಿರುಗೇಟು ನೀಡಿರುವ ಪ್ರಹ್ಲಾದ್ ಜೋಶಿ, ಸಂಸತ್‌ನಲ್ಲಿ ಚರ್ಚೆಗೆ ಯಾವುದೇ ನಿರ್ಬಂಧಗಳು ಇಲ್ಲ. 1975 ರಲ್ಲಿ ಮಾತ್ರ ಜನರ ವಿಷಯ ಪ್ರಸ್ತಾಪಿಸಲು ಸಂಸತ್‌ನಲ್ಲಿ ನಿರ್ಬಂಧ ಇತ್ತು. ರಚನಾತ್ಮಕ ವಿರೋಧ ಪಕ್ಷಗಳ ಉತ್ತಮ ಚರ್ಚೆಗೆ ಯಾವಾಗಲೂ ಸ್ವಾಗತವಿರುತ್ತದೆ ಎಂದು ಟ್ವಿಟ್ಟರ್ ಮೂಲಕ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ.
ರೂಪಾಯಿ ಮೌಲ್ಯ ಡಾಲರ್ ಎದುರು 80 ರೂ. ದಾಟಿದೆ. ಎಲ್‌ಪಿಜಿ ಸಿಲಿಂಡರ್ ಬೆಲೆ 1,000 ರೂ. ದಾಟಿದೆ. ಜೂನ್ ತಿಂಗಳಲ್ಲಿ 1.3 ಕೋಟಿ ನಿರುದ್ಯೋಗ ಇದೆ. ದವಸ ಧಾನ್ಯಗಳ ಮೇಲೂ ಜಿಎಸ್‌ಟಿ ಹಾಕಲಾಗಿದೆ. ಜನರ ವಿಷಯ ಪ್ರಸ್ತಾಪಿಸಲು ನಮ್ಮನ್ನು ಯಾರೂ ತಡೆಯಲಾಗಲ್ಲ. ಸರ್ಕಾರ ಉತ್ತರ ಕೊಡಲೇಬೇಕು. ಸಂಸತ್‌ನಲ್ಲಿ ಚರ್ಚೆ, ಪ್ರಶ್ನೆಗಳಿಂದ ಓಡಿ ಹೋಗುವುದು ಅಸಂಸದೀಯ ಪ್ರಧಾನ ಮಂತ್ರಿಗಳೇ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿ ಕಿಡಿಕಾರಿದ್ದರು.
ಇದಕ್ಕೆ ತುರ್ತು ಪರಿಸ್ಥಿತಿಯ ದಿನಗಳ ಉದಾಹರಣೆ ನೀಡಿ ಉತ್ತರಿಸಿರುವ ಪ್ರಹ್ಲಾದ್ ಜೋಶಿ, ಕೇವಲ 1975 ರಲ್ಲಿ ಮಾತ್ರ ಜನರ ವಿಷಯ ಪ್ರಸ್ತಾಪಿಸಲು ನಿರ್ಬಂಧ ಹೇರಲಾಗಿತ್ತು. ಅದನ್ನು ಹೊರತುಪಡಿಸಿ ರಚನಾತ್ಮಕವಾಗಿ ವಿಚಾರ ಪ್ರಸ್ತಾಪಿಸಲು ವಿರೋಧ ಪಕ್ಷಕ್ಕೆ ಮುಕ್ತ ಅವಕಾಶವಿದೆ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಮದರಸ ಟೆರರಿಸ್ಟ್‌ಗಳನ್ನು ತಯಾರು ಮಾಡುವ ಕೇಂದ್ರ: ಮುತಾಲಿಕ್
Live Tv
[brid partner=56869869 player=32851 video=960834 autoplay=true]
ನವದೆಹಲಿ: ರಾಜ್ಯಸಭಾ ಸದಸ್ಯರಾಗಿ ನೂತನವಾಗಿ ನಾಮನಿರ್ದೇಶನಗೊಂಡ “ಒಲಿಂಪಿಕ್ಸ್ ರಾಣಿ” ಪಿ.ಟಿ. ಉಷಾ ಇಂದು ನವದೆಹಲಿಯ ಸಂಸತ್ ಭವನದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ಪಿ.ಟಿ. ಉಷಾ ಅವರು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ನ್ಯಾಯ ಸಲ್ಲಿಸುವ ನಿಟ್ಟಿನಲ್ಲಿ ತಮ್ಮ ಕರ್ತವ್ಯಗಳನ್ನು ಹೃದಯಪೂರ್ವಕವಾಗಿ ಹಾಗೂ ಅಷ್ಟೇ ಸರಾಗವಾಗಿ ನೆರವೇರಿಸಲಿದ್ದಾರೆ ಎಂದು ಪ್ರಹ್ಲಾದ್ ಜೋಶಿಯವರು ಆಶಾಭಾವ ವ್ಯಕ್ತಪಡಿಸಿದರು. ಇದನ್ನೂ ಓದಿ: ಹಳೆ ಮೈಸೂರು ಜೀವನಾಡಿ KRS ಭರ್ತಿ- ನಾಳೆ ಸಿಎಂ ಬಾಗಿನ ಅರ್ಪಣೆ
Live Tv
[brid partner=56869869 player=32851 video=960834 autoplay=true]
ನವದೆಹಲಿ: ಇಂದಿಗೆ 100 ದಿನಗಳನ್ನು ಪೂರೈಸಿರುವ ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನ ಕುರಿತು ಚರ್ಚಿಸಲು ಮಂಗಳವಾರ (ಜುಲೈ 21ರಂದು) ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು, ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ವಿವಿಧ ಪಕ್ಷಗಳ ನಾಯಕರು ಭಾಗವಹಿಸಿದ್ದ ಸರ್ವಪಕ್ಷ ಸಭೆಯ ನಂತರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಸಂಸತ್ತಿನ ನಿಯಮಗಳು ಮತ್ತು ಕಾರ್ಯವಿಧಾನಗಳ ಅಡಿಯಲ್ಲಿ ಸರ್ಕಾರವು ಎಲ್ಲಾ ವಿಷಯಗಳ ಬಗ್ಗೆ ಚರ್ಚೆಗೆ ಮುಕ್ತವಾಗಿದೆ ಎಂದು ಹೇಳಿದ್ದಾರೆ.
ಆರ್ಥಿಕ ಬಿಕ್ಕಟ್ಟಿನಿಂದಾಗಿ ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಗೊಟಬಯ ರಾಜಪಕ್ಸೆ ತಮ್ಮ ಸ್ಥಾನಕ್ಕೆ ಈಚೆಗೆ ರಾಜೀನಾಮೆ ನೀಡಿದರು. ತಮ್ಮ ವಿರುದ್ಧದ ಪ್ರತಿಭಟನೆಯಿಂದ ತಪ್ಪಿಸಿಕೊಳ್ಳಲು ಶ್ರೀಲಂಕಾ ತೊರೆದು ಪಲಾಯನಗೈದಿರುವ ಹಿನ್ನೆಲೆ ಕಳೆದ ಗುರುವಾರ ಸಂಸತ್ತಿನ ಸ್ಪೀಕರ್‌ಗೆ ರಾಜೀನಾಮೆ ಪತ್ರವನ್ನು ಇ-ಮೇಲ್ ಮಾಡಿದ್ದರು.
ಇದಕ್ಕೂ ಮುನ್ನ ಲಂಕಾದ ಆರ್ಥಿಕ ಬಿಕ್ಕಟ್ಟಿನಿಂದಾಗಿ ಅಲ್ಲಿನ ಜನರು ಬೃಹತ್ ಪ್ರತಿಭಟನೆ ನಡೆಸಿದ್ದು, ರಾಜಪಕ್ಸೆ ಹಾಗೂ ಪ್ರಧಾನಿ ವಿಕ್ರಮಸಿಂಘೆ ತಮ್ಮ ಅಧಿಕಾರದಿಂದ ಕೆಳಗಿಳಿಯುವಂತೆ ಒತ್ತಾಯಿಸಿ, ಅಧ್ಯಕ್ಷೀಯ ಭವನಕ್ಕೆ ಮುತ್ತಿಗೆ ಹಾಕಿದ್ದರು. ಇದನ್ನೂ ಓದಿ: 18 ತಿಂಗಳಲ್ಲಿ 200 ಕೋಟಿ ಡೋಸ್ ಕೊರೊನಾ ಲಸಿಕೆ- ದಾಖಲೆ ಸೃಷ್ಟಿಸಿದ ಭಾರತ
ಆ ನಂತರ ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಪ್ರಮಾಣ ವಚನ ಸ್ವೀಕರಿಸಿದ್ದು, ಹೊಸ ಅಧ್ಯಕ್ಷರ ಆಯ್ಕೆಯ ಪ್ರಕ್ರಿಯೆ 7 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದರು. ಸದ್ಯ ಮುಂದಿನ ವಾರ ನಡೆಯುವ ಮತದಾನದಲ್ಲಿ ಅವರು ಶಾಶ್ವತವಾಗಿ ಉತ್ತರಾಧಿಕಾರಿಯಾಗುವ ಪ್ರಮುಖ ಅಭ್ಯರ್ಥಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
Live Tv
[brid partner=56869869 player=32851 video=960834 autoplay=true]