Tag: ಪ್ರಹ್ಲಾದ್ ಜೋಶಿ

  • ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆ ಸೂಚಿಸಿರುವ ಡ್ರೆಸ್ ಕೋಡ್ ಅನುಸರಿಸಬೇಕು: ಪ್ರಹ್ಲಾದ್ ಜೋಶಿ

    ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆ ಸೂಚಿಸಿರುವ ಡ್ರೆಸ್ ಕೋಡ್ ಅನುಸರಿಸಬೇಕು: ಪ್ರಹ್ಲಾದ್ ಜೋಶಿ

    ನವದೆಹಲಿ: ಕೆಲವು ದಿನಗಳಿಂದ ಕರ್ನಾಟಕದಲ್ಲಿ ನಡೆಯುತ್ತಿರುವ ‘ಹಿಜಬ್’ ವಿವಾದ ನಡುವೆ, ರಾಜ್ಯದ ಎಲ್ಲಾ ವಿದ್ಯಾರ್ಥಿಗಳು ಶಾಲೆಗಳು ಅಥವಾ ಆಡಳಿತ ಮಂಡಳಿಯು ಸೂಚಿಸುವ ಡ್ರೆಸ್ ಕೋಡ್ ಮಾತ್ರ ಅನುಸರಿಸಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

    ಎಲ್ಲಾ ವಿದ್ಯಾರ್ಥಿಗಳು ಶಾಲೆಗಳು ಅಥವಾ ಆಡಳಿತ ಮಂಡಳಿ ಸೂಚಿಸಿದ ಡ್ರೆಸ್ ಕೋಡ್ ಅನುಸರಿಸಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕು. ಇನ್ನೂ ಈ ವಿಚಾರವಾಗಿ ವಿದ್ಯಾರ್ಥಿಗಳನ್ನು ಪ್ರಚೋದಿಸುತ್ತಿರುವವರು ಯಾರು ಎಂಬುದನ್ನು ಕಂಡು ಹಿಡಿಯಬೇಕು ಎಂದಿದ್ದಾರೆ. ಇದನ್ನೂ ಓದಿ: ಕೇಸರಿ ಪೇಟ, ಕೇಸರಿ ಶಾಲಿನೊಂದಿಗೆ ಕಾಲೇಜಿಗೆ ಬಂದ ಎಂಜಿಎಂ ವಿದ್ಯಾರ್ಥಿಗಳು!

    ಫೆಬ್ರವರಿ 4 ರಂದು ಕರ್ನಾಟಕದ ಉಡುಪಿ ಜಿಲ್ಲೆಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಹಿಜಬ್ ಪ್ರತಿಭಟನೆ ಪ್ರಾರಂಭವಾಯಿತು. ಕೆಲವು ವಿದ್ಯಾರ್ಥಿಗಳು ಹಿಜಾಬ್ (ಮುಸ್ಲಿಂ ಮಹಿಳೆಯರು ಧರಿಸುವ ಸ್ಕಾರ್ಫ್) ಧರಿಸಿ ತರಗತಿಗಳಿಗೆ ಹಾಜರಾಗದಂತೆ ನಿರ್ಬಂಧಿಸಲಾಗಿದೆ ಎಂದು ಆರೋಪಿಸಿದ್ದರು. ನಂತರ ಸೋಮವಾರ ವಿಜಯಪುರದ ಶಾಂತೇಶ್ವರ ಶಿಕ್ಷಣ ಟ್ರಸ್ಟ್‌ಗೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಆಗಮಿಸಿದ್ದರು. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಇಂದು ಮೊದಲ ಹಂತದ ಮತದಾನ

    ಹೀಗಾಗಿ ವಿದ್ಯಾರ್ಥಿಗಳು ಶಾಲಾ ಆಡಳಿತ ಮಂಡಳಿ ಅನುಮೋದಿಸಿದ ಸಮವಸ್ತ್ರವನ್ನು ಮಾತ್ರ ಧರಿಸಬಹುದಾಗಿದ್ದು, ಕಾಲೇಜುಗಳಲ್ಲಿ ಇತರೆ ಧಾರ್ಮಿಕ ಆಚರಣೆಗಳಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿತು. ಇದರಿಂದ ಪ್ರತಿಭಟನೆಯ ಕಾವು ಹೆಚ್ಚಾದ್ದರಿಂದ ಉನ್ನತ ಶಿಕ್ಷಣ ಇಲಾಖೆಯ ಅಧೀನದಲ್ಲಿರುವ ಎಲ್ಲಾ ವಿಶ್ವವಿದ್ಯಾಲಯಗಳು, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ (ಡಿಸಿಟಿಇ) ಅಡಿಯಲ್ಲಿರುವ ಕಾಲೇಜುಗಳಿಗೆ ಫೆಬ್ರವರಿ 9 ರಿಂದ 11 ರವರೆಗೆ ಮೂರು ದಿನಗಳ ರಜೆ ಘೋಷಿಸಲಾಗಿದೆ.

  • ಚೀನಾವನ್ನು ಪ್ರತಿನಿಧಿಸಲು ಬಂದಿದ್ದಾರೆಯೇ: ರಾಹುಲ್ ವಿರುದ್ಧ ಜೋಶಿ ಕಿಡಿ

    ಚೀನಾವನ್ನು ಪ್ರತಿನಿಧಿಸಲು ಬಂದಿದ್ದಾರೆಯೇ: ರಾಹುಲ್ ವಿರುದ್ಧ ಜೋಶಿ ಕಿಡಿ

    ನವದೆಹಲಿ: ರಾಹುಲ್ ಗಾಂಧಿ ಅವರು ತಮ್ಮ ಬುದ್ಧಿಯ ಸ್ಥಿಮಿತವನ್ನು ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಗೊಂದಲಕ್ಕೊಳಗಾಗಿದ್ದಾರೆ. ಅವರು ಭಾರತ ಒಂದು ರಾಷ್ಟ್ರವಲ್ಲ. ಭಾರತ ಇತಿಹಾಸಕ್ಕೆ ಒಳಪಟ್ಟಿಲ್ಲ. ಚೀನಾ ದೃಷ್ಟಿಕೋನ ಸರಿಯಾಗಿದೆ ಎಂದ ಹೇಳುತ್ತಾರೆ. ಅವರೇನು ಸಂಸತ್ತಿನಲ್ಲಿ ಚೀನಾವನ್ನು ಪ್ರತಿನಿಧಿಸಲು ಬಂದಿದ್ದಾರೆಯೇ ಎಂದು ಪ್ರಶ್ನಿಸಿದ ಅವರು, ನೀವು ಸಂವಿಧಾನವನ್ನು ಓದಿದರೆ ಭಾರತವನ್ನು ರಾಜ್ಯಗಳ ಒಕ್ಕೂಟ ಎಂದು ವಿವರಿಸಲಾಗಿದೆ ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

    ರಾಹುಲ್ ಗಾಂಧಿಗೆ ನೆನಪಿನ ಶಕ್ತಿ ಹೋಗಿದೆ ಅನ್ನಿಸುತ್ತದೆ. ಭಾರತವಷ್ಟೇ ಅಲ್ಲ, ಇಡೀ ಜಗತ್ತು ಕೊರೊನಾ ಸೋಂಕಿನಿಂದ ಸುತ್ತುವರಿದಿದೆ. ಹಾಗಾಗಿ ಆಯಾ ರಾಷ್ಟ್ರಗಳು ದ್ವೀಪದಂತೆ ಪ್ರತ್ಯೇಕಗೊಂಡಿವೆ. ಹಾಗಾಗಿ ಕೊರೊನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಗಣರಾಜ್ಯೋತ್ಸವಕ್ಕೆ ಯಾವುದೇ ಅತಿಥಿಯನ್ನು ಭಾರತ ಆಹ್ವಾನಿಸಿಲ್ಲ ಎಂದು ಪ್ರತ್ಯುತ್ತರ ನೀಡಿದ್ದಾರೆ.

    ರಾಹುಲ್ ಗಾಂಧಿ ಹೇಳಿದ್ದೇನು?: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಮಾತನಾಡುವಾಗ ರಾಜ್ಯದ ಒಕ್ಕೂಟದ ದನಿ ಅಡಗಿಸಲು ಕೇಂದ್ರ ಸಕಾರವು ನ್ಯಾಯಾಂಗ ವ್ಯವಸ್ಥೆ ಹಾಗೂ ಪೆಗಾಸಸ್ ಸ್ಪೈವೇರ್‍ಗಳನ್ನು ಸಾಧನವಾಗಿ ಬಳಸಿಕೊಳ್ಳುತ್ತಿದೆ ಎಂದು ಹೇಳಿದಕ್ಕೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತವಾಗಿದೆ.

    ಭಾರತವು ಒಂದು ದೇಶವಲ್ಲ ಇದು ರಾಜ್ಯಗಳ ಒಕ್ಕೂಟ ಎಂದು ಸಂವಿಧಾನ ಹೇಳುತ್ತದೆ. ಯಾವುದೇ ಒಬ್ಬ ವ್ಯಕ್ತಿ ಇಡೀ ದೇಶದ ಮೇಲೆ ಪ್ರಭುತ್ವ ಸಾಧಿಸಲು ಆಗದು. ದೇಶದಲ್ಲಿ ಬಹುಸಂಸ್ಕøತಿ ಹಾಗೂ ಬಹುಭಾಷೆ ಇವೆ. ಇವನ್ನು ದಮನಿಸಲು ಆಗದು. ಇದು ಒಂದು ಒಕ್ಕೂಟ ವ್ಯವಸ್ಥೆಯೇ ಹೊರತು ಸಾಮ್ರಾಜ್ಯವಲ್ಲ ಎಂದಿದ್ದರು. ಇದನ್ನೂ ಓದಿ: ಸಂಪುಟ ವಿಸ್ತರಣೆಗೆ ಸಿಗುತ್ತಾ ವರಿಷ್ಠರ ಗ್ರೀನ್ ಸಿಗ್ನಲ್- ಯಾರೆಲ್ಲ ಸಚಿವಾಕಾಂಕ್ಷಿಗಳು?

    ಜಮ್ಮು ಮತ್ತು ಕಾಶ್ಮೀರದಲ್ಲಿ ಚೀನಾ ಮತ್ತು ಪಾಕಿಸ್ತಾನವನ್ನು ಒಟ್ಟಿಗೆ ತರುವ ಅಪರಾಧವನ್ನು ಕೇಂದ್ರ ಸರ್ಕಾರ ಮಾಡಿದೆ. ದೊಡ್ಡ ವ್ಯೂಹಾತ್ಮಕ ತಪ್ಪು ಮಾಡಿದೆ ಎಂದು ರಾಹುಲ್ ಗಾಂಧಿ ಬಿಜೆಪಿ ಸರ್ಕಾರದ ವಿದೇಶಾಂಗ ನೀತಿಯನ್ನು ತೀವ್ರವಾಗಿ ಟೀಕಿಸಿದ್ದರು. ಇದನ್ನೂ ಓದಿ: ರಾಜಕೀಯ ಪುನರ್‌ ಪ್ರವೇಶಕ್ಕೆ ರೆಡ್ಡಿ ಯತ್ನ – ಅನುಮತಿ ನೀಡುತ್ತಾ ಹೈಕಮಾಂಡ್‌?

  • ಧಾರವಾಡ ಬೈಪಾಸ್ 6 ಪಥದ ಎಕ್ಸ್ ಪ್ರೆಸ್‌ವೇ  4 ಪಥದ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಟೆಂಡರ್: ಪ್ರಹ್ಲಾದ್ ಜೋಶಿ

    ಧಾರವಾಡ ಬೈಪಾಸ್ 6 ಪಥದ ಎಕ್ಸ್ ಪ್ರೆಸ್‌ವೇ  4 ಪಥದ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಟೆಂಡರ್: ಪ್ರಹ್ಲಾದ್ ಜೋಶಿ

    ಹುಬ್ಬಳ್ಳಿ: ಇಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನವದೆಹಲಿ ಅವರು ಹುಬ್ಬಳ್ಳಿ-ಧಾರವಾಡ ಬೈಪಾಸ್ 31 ಕಿಮೀ ರಸ್ತೆಯನ್ನು ಷಟ್ಪಥ ಎಕ್ಸ್ ಪ್ರೆಸ್‌ ಹೈವೆ ಆಗಿ ಮಾರ್ಪಡಿಸಲು ಹಾಗೂ ನಾಲ್ಕು ಪಥದ ಸರ್ವಿಸ್ ರಸ್ತೆ ನಿರ್ಮಿಸಲು ಇ.ಪಿ.ಸಿ(ಎಂಜಿನಿಯರಿಂಗ್, ಸಂಗ್ರಹಣೆ ಮತ್ತು ನಿರ್ಮಾಣ) ಮಾದರಿಯಲ್ಲಿ ಈ ರಸ್ತೆ ನಿರ್ಮಿಸಲು ಟೆಂಡರ್ ಕರೆಯಲಾಗಿದೆ. ಆರು ಪಥದ ಎಕ್ಸ್ ಪ್ರೆಸ್‌ ರಸ್ತೆ ಹಾಗೂ ಸಮರ್ಪಕವಾಗಿ ಎರಡೂ ಬದಿಯಲ್ಲಿ ದ್ವಿಪಥದ ಸರ್ವಿಸ್ ರಸ್ತೆಯನ್ನು ನಿರ್ಮಿಸಲು ಟೆಂಡರ್ ಕರೆಯಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

    ಈ ಬಗ್ಗೆ ಜೋಶಿ ಅವರು ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು, ಕಾಮಗಾರಿಗೆ ಇಂದು ಟೆಂಡರ್ ಕರೆಯಲಾಗಿದ್ದು, ಫೆಬ್ರವರಿ 22ರಲ್ಲಿ ಟೆಂಡರ್ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಕಾಮಗಾರಿ ಮುಗಿಸಲು 2.5 ವರ್ಷ ನಿಗದಿಗೊಳಿಸಲಾಗಿದೆ. ನಿರ್ಮಾಣದ ನಂತರ 5 ವರ್ಷದ ನಿರ್ವಹಣೆಯನ್ನೂ ಗುತ್ತಿಗೆದಾರರೆ ನಿರ್ವಹಿಸುವ ಕರಾರೊಂದಿಗೆ ಟೆಂಡರ್ ನಲ್ಲಿ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅತಿಥಿ ಉಪನ್ಯಾಸಕರ ಸಮಸ್ಯೆಗೆ ಶೀಘ್ರ ಪರಿಹಾರ: ಅಶ್ವಥ್ ನಾರಾಯಣ್ ಭರವಸೆ

    That Black Stuff on the Road? Technically Not Asphalt | HowStuffWorks

    ಮುಖ್ಯವಾಗಿ ಈಗಿರುವ ಬೈಪಾಸ್ ನ ಎಲ್ಲ ಟೋಲ್ ಪ್ಲಾಜಾಗಳನ್ನು ತೆಗೆದು ಕೇವಲ ಒಂದು ಟೋಲ್ ಪ್ಲಾಜಾ ಮಾತ್ರ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಈ ಟೋಲ್ ಕೆಲಗೇರಿ ಮತ್ತು ನರೇಂದ್ರ ಮಧ್ಯೆ ಮಾಡಲಾಗಿದೆ. ಇದರಿಂದ ಹುಬ್ಬಳ್ಳಿ-ಧಾರವಾಡ ಮಧ್ಯ ಸಂಚರಿಸುವ ಪ್ರಯಾಣಿಕರು ಟೋಲ್ ನಿಂದ ವಿನಾಯಿತಿ ನೀಡಲಾಗಿದೆ. ಈ ಬೈಪಾಸ್ ನಿರ್ಮಾಣದಿಂದ ನಗರ ಮಧ್ಯದೊಳಗಿನ ಸಂಚರಿಸುವ ವಾಹನ ದಟ್ಟಣೆ ಕಡಿಮೆಯಾಗಲಿದೆ ಎಂದು ತಿಳಿಸಿದ್ದಾರೆ.

    ಪುಣೆ-ಬೆಂಗಳೂರು ಹೆದ್ದಾರಿ ವಿಸ್ತರಣೆ ಆಯಿತು. ಆದರೆ ಹುಬ್ಬಳ್ಳಿ-ಧಾರವಾಡ ಬೈಪಾಸ್ ವಿಸ್ತರಣೆ ಆಗಿಲ್ಲ. 6 ಪಥದ ರಸ್ತೆಯಲ್ಲಿ ವೇಗವಾಗಿ ವಾಹನ ಚಲಾಯಿಸಿಕೊಂಡು ಬರುವ ಚಾಲಕರು ಬೈಪಾಸ್ ನಲ್ಲಿಯೂ ಅದೇ ವೇಗದಲ್ಲಿ ಬರುವುದರಿಂದ ಇಂತಹ ಅಪಘಾತಗಳು ಸಂಭವಿಸುತ್ತವೆ. ಈ ಬಗ್ಗೆ ತಜ್ಞರ ಅಭಿಪ್ರಾಯದೊಂದಿಗೆ ಬೈಪಾಸ್ ಕೂಡಾ ಕನಿಷ್ಠ 6 ಪಥಗಳಿಗೆ ವಿಸ್ತರಣೆ ಆಗಬೇಕೆಂದು ಆಗ್ರಹಿಸಿದರು.

    MONEY

    ಈ ಯೋಜನೆ ಒಟ್ಟು 1200 ಕೋಟಿ ರೂ. ವೆಚ್ಚದಲ್ಲಿ ಹುಬ್ಬಳಿಯ ಗಬ್ಬೂರು ಎನ್.ಹೆಚ್.4 ರಸ್ತೆಯ 402.6 ಕಿಮೀ ಯಿಂದ ಧಾರವಾಡದ ನರೇಂದ್ರ ಕ್ರಾಸ್ ಬಳಿ 433.2 ಕಿಮೀ ವರೆಗಿನ ಒಟ್ಟು 31 ಕಿಮೀ 6 ಪಥದ ಎಕ್ಸ್ ಪ್ರೆಸ್‌ವೇ ಹಾಗೂ ನಾಲ್ಕು ಪಥದ ರಸ್ತೆ ನಿರ್ಮಾಣಕ್ಕೆ 800 ಕೋಟಿ ರೂ. ಹಾಗೂ ಭೂ ಸ್ವಾಧೀನ ಡಿಪಿಆರ್ ತಯಾರಿಕೆ ಹಾಗೂ ಇನ್ನಿತರೆ ಕಾರ್ಯಕ್ಕೆ 400 ಕೋಟಿ ರೂ. ಕೇಂದ್ರ ಸರ್ಕಾರ ನೀಡಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಾರ್ಚ 15 ರಿಂದ 23 ರ ವರೆಗೆ ರಾಜ್ಯದ ಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಿ ಜಾತ್ರೆ

    ಈ ಬೈಪಾಸ್ ರಸ್ತೆಗೆ ಅನುಮೋದನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಜೋಶಿ ಅವರು ಅವಳಿ ನಗರದ ನಾಗರಿಕರ ಪರವಾಗಿ ಅಭಿನಂದಿಸಿದ್ದಾರೆ.

  • ಅಧಿವೇಶನದಲ್ಲಿ ವಿರೋಧ ಪಕ್ಷದವರು ಚರ್ಚೆಯಿಂದ ಓಡಿ ಹೋದರು: ಜೋಶಿ ವ್ಯಂಗ್ಯ

    ಅಧಿವೇಶನದಲ್ಲಿ ವಿರೋಧ ಪಕ್ಷದವರು ಚರ್ಚೆಯಿಂದ ಓಡಿ ಹೋದರು: ಜೋಶಿ ವ್ಯಂಗ್ಯ

    ನವದೆಹಲಿ: ನೂತನ ಎಲೆಕ್ಷನ್ ಬಿಲ್ ಅನ್ನೇ ನೆಪ ಮಾಡಿಕೊಂಡು ವಿರೋಧ ಪಕ್ಷಗಳು ಉದ್ದೇಶಪೂರ್ವಕವಾಗಿ ಸಂಸತ್ ಅಧಿವೇಶನದಲ್ಲಿ ಗಲಾಟೆ ಮಾಡಿದವು, ಅವರಿಗೆ ಸ್ಪೀಕರ್ ಚರ್ಚೆಗೆ ಅವಕಾಶ ನೀಡಿದರೂ ಚರ್ಚೆ ಮಾಡದೇ ಓಡಿ ಹೋದರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ.

    ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳು ಅನಿರ್ದಿಷ್ಟವಾಧಿಗೆ ಮುಂದೂಡಿಕೆಯಾದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿಯ ಅಧಿವೇಶನದಲ್ಲೂ ವಿಪಕ್ಷಗಳು ಅತ್ಯಂತ ಕೆಟ್ಟದಾಗಿ ವರ್ತಿಸಿವೆ, ರೂಲ್ ಬುಕ್ ಹರಿಯುವ ಮೂಲಕ ಸಂಸತ್‍ಗೆ ಅವಮಾನ ಮಾಡಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: MES ಗಲಭೆಗೆ ಕಾಂಗ್ರೆಸ್, ಬಿಜೆಪಿ ಕೈವಾಡ ಇಲ್ಲ, ಇದು ಪುಂಡ ಪೋಕರಿಗಳ ಕೆಲಸ: ಪ್ರಹ್ಲಾದ್ ಜೋಶಿ

    ವಿಪಕ್ಷಗಳ ಗಲಾಟೆಯ ನಡುವೆಯೂ 18 ದಿನಗಳ ಕಾಲ ಅಧಿವೇಶನವನ್ನು ಯಶಸ್ವಿಯಾಗಿ ನಡೆಸಲಾಯಿತು, ಈ ಬಾರಿಯ ಅಧಿವೇಶನದಲ್ಲಿ 13 ಬಿಲ್ ಮಂಡನೆ ಮಾಡಲಾಗಿತ್ತು ಈ ಪೈಕಿ ಎರಡು ಸದನದಲ್ಲಿ 11 ಬಿಲ್‍ಗಳು ಪಾಸಾಗಿದೆ. ಎಲೆಕ್ಷನ್ ಬಿಲ್ ಸೇರಿದಂತೆ ಹಲವು ಬಿಲ್ ಮಂಡನೆಯಾಗಿದ್ದು ವ್ಯವಸ್ಥೆಯನ್ನು ಸುಧಾರಿಸಲು ಇವು ಸಹಕಾರಿಯಾಗಲಿದೆ ಎಂದರು.ಇದನ್ನೂ ಓದಿ: LPG ಗ್ಯಾಸ್, ಟಾಯ್ಲೆಟ್‌ ಕಟ್ಟೋದು ಮಹಿಳಾ ಸಬಲೀಕರಣ ಅಲ್ಲ: ಪ್ರಿಯಾಂಕಾ ಗಾಂಧಿ

    ಇನ್ನು ಕ್ರಿಪ್ಟೊ ಕರೆನ್ಸಿ ನಿಷೇಧ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕ್ರಿಪ್ಟೊ ಕರೆನ್ಸಿ ನಿಷೇಧ ಮಾಡುವ ಬಿಲ್ ಮತ್ತಷ್ಟು ಪರಿಶೀಲನೆಗೆ ಒಳಪಟ್ಟಿದೆ ಇಲಾಖೆಯು ಆತಂರಿಕವಾಗಿ ಸಾಧಕ ಬಾಧಕಗಳ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಆರಂಭದಲ್ಲಿ ಇಲಾಖೆ ಬಿಲ್ ಮಂಡಿಸುವ ಮಾಹಿತಿ ನೀಡಿತ್ತು ಹೀಗಾಗಿ ಇದನ್ನು ಅಧಿಕೃತ ಬಿಲ್ ಗಳ ಪಟ್ಟಿಯಲ್ಲಿ ಸೇರಿಸಲಾಗಿತ್ತು ಆದರೆ ಇದನ್ನು ಮತ್ತಷ್ಟು ಅಧ್ಯಯನಕ್ಕೆ ಒಳಪಡಿಸಿರುವ ಹಿನ್ನಲೆ ಮುಂದಿನ ಅಧಿವೇಶನದಲ್ಲಿ ಮಂಡನೆಯಾಗಬಹುದು ಎಂದರು. ಇದನ್ನೂ ಓದಿ: 2023ರ ವರೆಗೂ ಬೊಮ್ಮಾಯಿ ಸಿಎಂ ಆಗಿ ಮುಂದುವರಿಯಲಿದ್ದಾರೆ: ಪ್ರಹ್ಲಾದ್ ಜೋಶಿ

    ಮಹಿಳೆಯರ ವಿವಾಹ ವಯೋಮಿತಿ ಹೆಚ್ಚಿಸುವ ಬಿಲ್ ಸ್ಟ್ಯಾಂಡಿಂಗ್ ಕಮಿಟಿಗೆ ಕಳುಹಿಸಿದ್ದೆವೆ. ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಪುರುಷರಷ್ಟೆ ಮಹಿಳೆಯರಿಗೂ ಸಮಾನ ಅವಕಾಶ ಮಹಿಳೆಯರಿಗೂ ನೀಡಬೇಕಿದ್ದು ಈ ಬಿಲ್ ಶೈಕ್ಷಣಿಕವಾಗಿ ಮಹಿಳೆಯರಿಗೆ ಸಹಕಾರಿಯಾಗಲಿದೆ. ಮಹಿಳೆಯರು ಹೆಚ್ಚು ವಿದ್ಯಾವಂತರಾಗಲು ಅವಕಾಶ ನೀಡಲಿದೆ. ಈ ಹಿಂದೆ ಮಹಿಳೆಯರ ಮದುವೆ ವಯಸ್ಸು 10 ವರ್ಷವಿತ್ತು, ಕಾಲಕ್ಕೆ ತಕ್ಕಂತೆ ಬದಲಾಗಿ ಇಂದು 18 ವರ್ಷಕ್ಕೆ ಬಂದು ತಲುಪಿದೆ ಭವಿಷ್ಯದ ದೃಷ್ಟಿಯಿಂದ ಇದು 21 ವರ್ಷಕ್ಕೆ ಏರಿಸುವ ಸೂಕ್ತ ಎಂದು ಜೋಶಿ ಹೇಳಿದರು.

  • 2023ರ ವರೆಗೂ ಬೊಮ್ಮಾಯಿ ಸಿಎಂ ಆಗಿ ಮುಂದುವರಿಯಲಿದ್ದಾರೆ: ಪ್ರಹ್ಲಾದ್ ಜೋಶಿ

    2023ರ ವರೆಗೂ ಬೊಮ್ಮಾಯಿ ಸಿಎಂ ಆಗಿ ಮುಂದುವರಿಯಲಿದ್ದಾರೆ: ಪ್ರಹ್ಲಾದ್ ಜೋಶಿ

    ನವದೆಹಲಿ: ಮುಂದಿನ ಚುನಾವಣೆವರೆಗೂ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನಗಳಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

    ಶಿಗ್ಗಾಂವ್‍ನಲ್ಲಿ ಬಸವರಾಜ ಬೊಮ್ಮಾಯಿ ಅವರ ಭಾವನಾತ್ಮಕ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಬೊಮ್ಮಾಯಿ ಇದೇ ಮೊದಲ ಬಾರಿಗೆ ಹೀಗೆ ಮಾತನಾಡುತ್ತಿಲ್ಲ, ಅವರು ಹೀಗೆ ಫಿಲಾಸಫಿಕಲ್ ಆಗಿ ಮಾತನಾಡಿದ್ದಾರೆ. ಇದನ್ನು ನಾನೇ ಹತ್ತಾರು ಬಾರಿ ನೋಡಿದ್ದೇನೆ. ಇದಕ್ಕೆ ಮುಖ್ಯಮಂತ್ರಿ ಬದಲಾವಣೆ ಎಂದು ವಿಶೇಷ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದರು.

    ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ಮಟ್ಟದಲ್ಲೂ ಯಾವುದೇ ಚರ್ಚೆಗಳು ನಡೆದಿಲ್ಲ. ಆ ಪ್ರಸ್ತಾಪವೂ ಇಲ್ಲ. ಬೊಮ್ಮಾಯಿ ವಿದೇಶಕ್ಕೆ ತೆರಳುತ್ತಿರುವ ಬಗ್ಗೆ ಯಾವುದೇ ಮಾಹಿತಿ ನನಗಿಲ್ಲ ಎಂದು ಜೋಶಿ ಹೇಳಿದರು. ಇದನ್ನೂ ಓದಿ: MES ಗಲಭೆಗೆ ಕಾಂಗ್ರೆಸ್, ಬಿಜೆಪಿ ಕೈವಾಡ ಇಲ್ಲ, ಇದು ಪುಂಡ ಪೋಕರಿಗಳ ಕೆಲಸ: ಪ್ರಹ್ಲಾದ್ ಜೋಶಿ

  • MES ಗಲಭೆ ಹಿಂದೆ ಕಾಂಗ್ರೆಸ್, ಬಿಜೆಪಿ ಕೈವಾಡ ಇಲ್ಲ, ಇದು ಪುಂಡ ಪೋಕರಿಗಳ ಕೆಲಸ: ಪ್ರಹ್ಲಾದ್ ಜೋಶಿ

    MES ಗಲಭೆ ಹಿಂದೆ ಕಾಂಗ್ರೆಸ್, ಬಿಜೆಪಿ ಕೈವಾಡ ಇಲ್ಲ, ಇದು ಪುಂಡ ಪೋಕರಿಗಳ ಕೆಲಸ: ಪ್ರಹ್ಲಾದ್ ಜೋಶಿ

    ನವದೆಹಲಿ:  ಎಂಇಎಸ್(MES) ಕಾರ್ಯಕರ್ತರು ಬೆಳಗಾವಿಯಲ್ಲಿ ನಡೆಸಿದ ಗಲಭೆಯ ಹಿಂದೆ ಕಾಂಗ್ರೆಸ್, ಬಿಜೆಪಿ ಸೇರಿದಂತೆ ಯಾವುದೇ ರಾಜಕೀಯ ಪಕ್ಷಗಳ ಪಾತ್ರ ಇಲ್ಲ. ಇದು ಕೆಲವು ಪುಂಡ ಪೋಕರಿಗಳು ಮಾಡಿರುವ ಕೆಲಸ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

    ನವದೆಹಲಿಯಲ್ಲಿ ಮಾತನಾಡಿದ ಅವರು, ಕೆಲವು ವ್ಯಕ್ತಿಗಳು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಈ ರೀತಿಯ ಕೃತ್ಯಗಳಿಗೆ ಬೆಂಬಲ ನೀಡುತ್ತಿದ್ದಾರೆ, ಬೆಳಗಾವಿಯಲ್ಲಿ ಸಂಗೂಳ್ಳಿ ರಾಯಣ್ಣನ ಪ್ರತಿಮೆ ಧ್ವಂಸ, ಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಸಿ ಬಳಿದಿರುವುದು ಖಂಡನೀಯ. ಈ ಕೃತ್ಯ ಎಸಗಿದವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಇನ್ನೊಮ್ಮೆ ಈ ರೀತಿ ಮಾಡದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಟೋಲ್ ಆದಾಯ ಮುಂದಿನ 3 ವರ್ಷಗಳಲ್ಲಿ 1.40 ಲಕ್ಷ ಕೋಟಿ ರೂ.ಗೆ ಏರಿಕೆ

    ಬೆಳಗಾವಿಯಲ್ಲಿ ನಡೆದಿರುವುದು ಗಡಿ ವಿವಾದ ಅಲ್ಲ, ಇದು ಕೆಲವರು ತೆಗೆದಿರುವ ತಗಾದೆಯಷ್ಟೆ ಗಡಿ ವಿವಾದ ಈಗಾಗಲೇ ಬಗೆಹರಿದಿದೆ. ದುಷ್ಕøತ್ಯ ಎಸಗಿದರ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಶಕ್ತವಾಗಿದೆ ಎಂದರು. ಇನ್ನು ಎಂಇಎಸ್ ಬ್ಯಾನ್ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಎಂಇಎಸ್ ಈಗಾಗಲೇ ರಾಜಕೀಯ ಪಕ್ಷವಾಗಿ ನೊಂದಣಿಯಾಗಿದೆ ಹೀಗಾಗಿ ಕಾನೂನಾತ್ಮಕವಾಗಿ ನಿಷೇಧ ಮಾಡುವ ಬಗ್ಗೆ ಪರಿಶೀಲನೆ ಮಾಡಬೇಕಿದ್ದು ಆ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು ಎಂದರು. ಇದನ್ನೂ ಓದಿ: LPG ಗ್ಯಾಸ್, ಟಾಯ್ಲೆಟ್‌ ಕಟ್ಟೋದು ಮಹಿಳಾ ಸಬಲೀಕರಣ ಅಲ್ಲ: ಪ್ರಿಯಾಂಕಾ ಗಾಂಧಿ

     

  • ನೋಟರಿ ಕಾಯ್ದೆ ತಿದ್ದುಪಡಿ ವಿರೋಧ – ಸಚಿವ ಪ್ರಹ್ಲಾದ್ ಜೋಶಿಗೆ ಮನವಿ

    ನೋಟರಿ ಕಾಯ್ದೆ ತಿದ್ದುಪಡಿ ವಿರೋಧ – ಸಚಿವ ಪ್ರಹ್ಲಾದ್ ಜೋಶಿಗೆ ಮನವಿ

    ಹಾವೇರಿ: ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಡಿ ನೋಟರೀಸ್ ಅಮೆಂಡ್ಮೆಂಟ್ ಬಿಲ್ 2020 ವಿರೋಧಿಸಿ, ನೋಟರಿ ಕಾಯ್ದೆ ತಿದ್ದುಪಡಿ ಕೈಬಿಡುವಂತೆ ಆಗ್ರಹಿಸಿ ಹಾವೇರಿ ಜಿಲ್ಲಾ ನೋಟರಿ ಸಂಘದವತಿಯಿಂದ ಪದಾಧಿಕಾರಿಗಳು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮೂಲಕ ಪ್ರಧಾನಮಂತ್ರಿಗಳಿಗೆ, ಕಾನೂನು ಸಚಿವರಿಗೆ ಹಾಗೂ ಈ ಕೇಂದ್ರ ಕಾನೂನು ಕಾರ್ಯದರ್ಶಿಗಳಿಗೆ ಮನವಿ ಅರ್ಪಿಸಿದ್ದಾರೆ.

    ಈ ಕುರಿತು ಮಾತನಾಡಿದ ಪದಾಧಿಕಾರಿಗಳು, ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಡಿ ನೋಟ್ರೀಸ್ ಅಮೆಂಡ್ಮೆಂಟ್ ಬಿಲ್ 2021 ಈ ನೀತಿ ಮಾರಕವಾದ ತಿದ್ದುಪಡಿಯಿಂದ ನೋಟರಿ ಬೀದಿಗೆ ಬರುವ ವ್ಯವಸ್ಥೆ ಉಲ್ಬಣಗೊಳ್ಳುತ್ತಿದೆ. ನೋಟರಿ ಉದ್ಯೋಗ ಕಿತ್ತುಕೊಳ್ಳುವ ಕೆಲಸಕ್ಕೆ ಕೇಂದ್ರ ಸರ್ಕಾರ ಹುನ್ನಾರ ನಡೆಸಿದೆ. ನೋಟರಿಯವರ ಕಾರ್ಯ ಸಮಾಜಕ್ಕೆ ಎಷ್ಟು ಅವಶ್ಯಕತೆ ಇದೆ ಎಂಬುದನ್ನು ಅರಿತು 1952ರಲ್ಲಿ ಈ ಕಾಯ್ದೆ ಜಾರಿಗೆ ಬಂದಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕರೀನಾ, ಅಮೃತಾ ಅರೋರಾಗೆ ಕೊರೊನಾ ಪಾಸಿಟಿವ್

    ಹತ್ತು ವರ್ಷ ವಕೀಲರ ವೃತ್ತಿಯಲ್ಲಿ ಕೆಲಸ ಮಾಡಿ ನೋಟರಿಯಾಗಲು ಅರ್ಹರಾಗಿರುತ್ತಾರೆ. ನಂತರ ಅಂತವರನ್ನು ನೋಟರಿಯನ್ನಾಗಿ ಸರ್ಕಾರ ನೇಮಕ ಮಾಡುತ್ತದೆ. ಆದರೆ ಪ್ರಸ್ತುತ ನೋಟರಿಸ್ ಕಲಂ ತಿದ್ದುಪಡಿಯನ್ನು ತರಲಾಗಿದೆ. ಇದರಿಂದ ನೋಟರಿಗಳಿಗೆ ತೊಂದರೆಯಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ವೃತ್ತಿಯಲ್ಲಿರುವ ವಕೀಲರ ಉಪಜೀವನಕ್ಕೆ ಈ ತಿದ್ದುಪಡಿಯಿಂದ ತೀವ್ರ ತೊಂದರೆಯಾಗುತ್ತದೆ. ನೋಟರಿ ಕಾಯ್ದೆ ತಿದ್ದುಪಡಿಯಲ್ಲಿ 15 ವರ್ಷ ನೋಟರಿಯಾಗಿ ಸೇವೆ ಪೂರೈಸಿದವರ ನೋಟರಿ ವೃತ್ತಿಗೆ ನಿರ್ಬಂಧ ಹೇರಲಾಗಿದೆ. ಇದರಿಂದ ನೂರಾರು ನೋಟರಿಗಳು ಹಾಗೂ ಅವರ ಕುಟುಂಬಗಳು ಬೀದಿಗೆ ಬರುವಂತಾಗುತ್ತದೆ. ಕೂಡಲೇ ಈ ತಿದ್ದುಪಡಿ ವಿಚಾರವನ್ನು ಕೇಂದ್ರ ಸರ್ಕಾರ ಕೈ ಬಿಡಬೇಕು ಎಂದು ಆಗ್ರಹಿಸಿದರು.

    ಸರ್ಕಾರವೂ ಹೊಸ ಅವಕಾಶಗಳನ್ನು ಸೃಷ್ಠಿ ಮಾಡಬೇಕೆ ವಿನಃ ಬೇರೆಯವರಿಂದ ಅವಕಾಶ ಕಿತ್ತುಕೊಂಡು ಇನ್ನೊಬ್ಬರಿಗೆ ನೀಡುವುದು ಯಾವ ನ್ಯಾಯ? ಈ ದೆಸೆಯಲ್ಲಿ ಕೇಂದ್ರ ಸಚಿವರು, ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಡಿ ನೋಟ್ರೀಸ್ ಅಮೆಂಡ್ಮೆಂಟ್ ಬಿಲ್ 2021ನ್ನು ಕೈಬಿಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ ಎಂದರು. ಇದನ್ನೂ ಓದಿ: ಪೊಲೀಸ್ ಬಸ್ ಮೇಲೆ ಭಯೋತ್ಪಾದಕರ ದಾಳಿ – ಮೂವರು ಹುತಾತ್ಮ, 14 ಜನರಿಗೆ ಗಾಯ 

    ಮನವಿ ಅರ್ಪಿಸುವ ಸಂದರ್ಭದಲ್ಲಿ ಹಾವೇರಿ ಜಿಲ್ಲಾ ನೋಟರಿಗಳ ಸಂಘದ ಕಾರ್ಯದರ್ಶಿ ಜಿ.ಕೆ.ಕಮ್ಮಾರ, ನೋಟರಿ ಹಾಗೂ ಕರ್ನಾಟಕ ರಾಜ್ಯ ನೋಟರಿಗಳ ಸಂಘದ ಉಪಾಧ್ಯಕ್ಷ ಎಮ್.ಸಿ.ನಡುವಿನಮಠ, ಹಾಗೂ ಸಿ.ಆರ್.ಕಿತ್ತೂರಮಠ, ಪಿ.ಎಸ್.ಹಿತ್ತಲಮನಿ, ಎಮ್.ಎಚ್.ನದಾಫ, ಎಸ್.ಎಫ್.ವಡ್ನಕೊಪ್ಪ, ಎಮ್.ಎಲ್.ಸೊನ್ನದ, ಕೆ.ಸಿ.ರಜಪೂತ, ಎಮ್.ಸಿ.ಮರಡಿ ಸೇರಿದಂತೆ ಜಿಲ್ಲೆಯ ಎಲ್ಲ ನೋಟರಿಗಳು ಹಾಜರಿದ್ದರು.

  • ಜನರು ತಮ್ಮ ಹಣವನ್ನು ಬ್ಯಾಂಕ್‍ಗಳಲ್ಲಿ ಠೇವಣಿ ಇಡಲು ಸಂಪೂರ್ಣ ವಿಶ್ವಾಸದೊಂದಿಗೆ ಮುಂದೆ ಬನ್ನಿ: ಮೋದಿ

    ಜನರು ತಮ್ಮ ಹಣವನ್ನು ಬ್ಯಾಂಕ್‍ಗಳಲ್ಲಿ ಠೇವಣಿ ಇಡಲು ಸಂಪೂರ್ಣ ವಿಶ್ವಾಸದೊಂದಿಗೆ ಮುಂದೆ ಬನ್ನಿ: ಮೋದಿ

    ಬೆಂಗಳೂರು: ಯಾವುದೇ ದೇಶದ ಪ್ರಗತಿಯಲ್ಲಿ ಬ್ಯಾಂಕುಗಳ ಪಾತ್ರ ದೊಡ್ಡದ್ದು. ಈ ಬ್ಯಾಂಕುಗಳ ಉಳಿವಿಗೆ ಇವುಗಳ ಠೇವಣಿದಾರರ ಹಿತಾಸಕ್ತಿ ಕಾಪಾಡುವುದು ಅತ್ಯಗತ್ಯ, ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಅಭಿಪ್ರಾಯಪಟ್ಟಿದ್ದಾರೆ.

    ದೇಶದ ವಿವಿಧ ಬ್ಯಾಂಕುಗಳಲ್ಲಿ ಠೇವಣಿ ಇರಿಸಿ ಬ್ಯಾಂಕುಗಳ ನಷ್ಟದಿಂದಾಗಿ ಕಷ್ಟ ಅನುಭವಿಸಿದ್ದಂತಹ ಸಹಸ್ರಾರು ಠೇವಣಿದಾರರಿಗೆ ಅವರ ಹಣವನ್ನು ವಾಪಸ್ ನೀಡುವ ಕಾರ್ಯಕ್ರಮಕ್ಕೆ ಇಂದು ದೆಹಲಿಯ ವಿಜ್ಞಾನ ಭವನದ ಪ್ಲೀನರಿ ಸಭಾಂಗಣದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಜನರು ತಮ್ಮ ಹಣವನ್ನು ಬ್ಯಾಂಕುಗಳಲ್ಲಿ ಠೇವಣಿ ಇಡಲು ಸಂಪೂರ್ಣ ವಿಶ್ವಾಸದೊಂದಿಗೆ ಮುಂದೆ ಬರಬೇಕು. ಹಾಗಾಗಬೇಕಾದರೆ, ಸಣ್ಣ ಮತ್ತು ಮಧ್ಯಮ ವರ್ಗಕ್ಕೆ ಸೇರಿದ ಠೇವಣಿದಾರರ ಹಣಕ್ಕೆ ಬ್ಯಾಂಕ್ ಗಳು ಸುರಕ್ಷತೆ ಒದಗಿಸಬೇಕು ಎಂದು ಪ್ರಧಾನಿ ತಿಳಿಸಿದರು. ಇದನ್ನೂ ಓದಿ: ಹಿಂದುತ್ವವಾದಿಗಳು ಅಧಿಕಾರಕ್ಕಾಗಿ ಯಾರನ್ನು ಬೇಕಾದ್ರೂ ಕೊಲ್ತಾರೆ: ರಾಹುಲ್ ಗಾಂಧಿ

    ಬ್ಯಾಂಕುಗಳ ದಿವಾಳಿ ಸಂದರ್ಭದಲ್ಲಿ ಠೇವಣಿದಾರರ ಹಣ ಮರುಪಾವತಿ ಪ್ರಕ್ರಿಯೆ ಬಹಳಷ್ಟು ವಿಳಂಬವಾಗುತ್ತಿದ್ದನ್ನು ಗಮನಿಸಿ, ಠೇವಣಿ ವಿಮೆ ಮತ್ತು ಸಾಲ ಖಾತರಿ ನಿಗಮ (ಡೆಪಾಸಿಟ್ ಇನ್ಶೂರೆನ್ಸ್ ಮತ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್) ಆಕ್ಟ್ ಗೆ ತಿದ್ದುಪಡಿಯನ್ನು 2021ರ ಸೆಪ್ಟೆಂಬರ್ 1 ರಿಂದ ಜಾರಿಗೆ ಬರುವಂತೆ ಕ್ರಮವಹಿಸಲಾಗಿದೆ. ಈ ತಿದ್ದುಪಡಿಗಳಂತೆ, ಈ ಹಿಂದೆ ಫೆಬ್ರವರಿ 2020ರಲ್ಲಿ ಠೇವಣಿದಾರರು ಎದುರಿಸುತ್ತಿದ್ದ ತೊಂದರೆಗಳಿಗೆ ಠೇವಣಿದಾರರ ಠೇವಣಿ ವಿಮಾ ರಕ್ಷಣೆಯನ್ನು ಮುಂಚೆಯಿದ್ದ 1,00,000 ರೂಪಾಯಿಗಳಿಂದ ಇದೀಗ 5,00,000 ರೂಪಾಯಿಗಳಿಗೆ ಹೆಚ್ಚಿಸಿ ಬ್ಯಾಂಕಿಂಗ್ ಕ್ಷೇತ್ರದ ಇತಿಹಾಸದಲ್ಲೇ ಮಹತ್ತರ ಬದಲಾವಣೆ ತರಲಾಗಿದೆ. ಈಗ ಸರಳ ಸುಲಭವಾಗಿ ಮತ್ತು ಸಮಯಕ್ಕೆ ಸರಿಯಾಗಿ ಠೇವಣಿದಾರರು ತಮ್ಮ ಠೇವಣಿಗಳಿಗೆ, ಠೇವಣಿ ವಿಮಾ ರಕ್ಷಣೆ (ರೂಪಾಯಿ ಐದು ಲಕ್ಷಗಳ ವರೆಗೆ) ಮದ್ಯಂತರ ಪಾವತಿ ಮೂಲಕ DICGC ಯಿಂದ ನಿಗದಿಪಡಿಸಿದ ಕೇವಲ 90 ದಿನಗಳ ಸಮಯದ ಅಂತರದಲ್ಲಿ ಪಡೆಯಬಹುದಾಗಿದೆ ಎಂದು ಮಾಹಿತಿ ಹಂಚಿಕೊಂಡರು.  ಇದನ್ನೂ ಓದಿ: ಯೋಗಿ ಸರ್ಕಾರದಿಂದ ಇಲ್ಲಿಯವರೆಗೆ 15246 ಕಿ.ಮೀ.ಗೂ ಹೆಚ್ಚು ಗ್ರಾಮೀಣ ರಸ್ತೆಗಳನ್ನು ನಿರ್ಮಾಣ

    33 ಸಾವಿರ ಠೇವಣಿದಾರರಿಗೆ ಒಟ್ಟು 753.61 ಕೋಟಿ ರೂ. ವಾಪಸ್:
    ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಭಾಂಗಣದಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೇಂದ್ರ ಕಲ್ಲಿದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಮಾತನಾಡಿ, ನಗರದ ಶ್ರೀಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್‍ನ ಸುಮಾರು 33 ಸಾವಿರ ಠೇವಣಿದಾರರ ಕ್ಲೇಮುಗಳಿಗೆ ಠೇವಣಿ ವಿಮಾ ರಕ್ಷಣೆ ಕಾಯ್ದೆಯಡಿ ಒಟ್ಟು ರೂ 753.61 ಕೋಟಿಗಳ ಹಣವನ್ನು ಖಾತೆಗೆ ವಾಪಸ್ ಜಮೆ ಮಾಡಲಾಗಿದೆ ಎಂದು ತಿಳಿಸಿದರು.

    ದೇಶದಲ್ಲಿ ವಿವಿಧ ಬ್ಯಾಂಕುಗಳಲ್ಲಿ ಒಂದರಿಂದ ಐದು ಲಕ್ಷದವರೆಗಿನ ಹಣದ ಠೇವಣಿಯಲ್ಲಿ ಶೇ.98.1 ರಷ್ಟು ಸಣ್ಣ ಮತ್ತು ಮಧ್ಯಮ ವರ್ಗಕ್ಕೆ ಸೇರಿದವರಾಗಿದ್ದಾರೆ. ಶ್ರೀಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಜೊತೆಗೆ ರಾಜ್ಯದ ಇತರೆ ಜಿಲ್ಲೆಗಳ ಅಂದರೆ, ಬಾಗಲಕೋಟೆಯ ಮುಧೋಳ್ ಕೋ- ಆಪರೇಟೀವ್ ಬ್ಯಾಂಕ್, ವಿಜಯಪುರದ ಡೆಕ್ಕನ್ ಅರ್ಬನ್ ಕೋ- ಆಪರೇಟೀವ್ ಬ್ಯಾಂಕ್, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ಮಿಲ್ಲಾತ್ ಕೋ- ಆಪರೇಟೀವ್ ಬ್ಯಾಂಕ್‍ಗಳ ಒಟ್ಟು 77,819 ಠೇವಣಿದಾರರು ಮುಂದಿನ ದಿನಗಳಲ್ಲಿ ಈ ಕಾರ್ಯಕ್ರಮದ ಫಲಾನುಭವಿಗಳಾಗಿ ತಮ್ಮ ಕ್ಲೇಮುಗಳಿಗೆ ಹಣ ಮರುಪಾವತಿ ಪಡೆಯಲಿದ್ದಾರೆ ಎಂದರು. ಇದನ್ನೂ ಓದಿ: ಯುವಕನ ಜೊತೆಗೆ ವಾಸವಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

    ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ಬೆಂಗಳೂರಿನಲ್ಲಿರುವ ಶ್ರೀಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಮತ್ತು ಕರ್ನಾಟಕದಲ್ಲಿ ಐದು ಕೇಂದ್ರಗಳಲ್ಲಿರುವ ಇತರ ನಾಲ್ಕು UCBಗಳು ವಿಫಲವಾದ ನಂತರ ಭಾರತ ಸರ್ಕಾರವು ತನ್ನ ಗ್ರಾಹಕರಿಗೆ DICGC ಕ್ಲೈಮ್ ಮೊತ್ತವನ್ನು ಗರಿಷ್ಠ 5 ಲಕ್ಷ ರೂಪಾಯಿಗಳವರೆಗೆ ಹಣ ಕಳೆದುಕೊಂಡ ಗ್ರಾಹಕರಿಗೆ ಬಿಡುಗಡೆ ಮಾಡಿದೆ. ಇದಕ್ಕೆ ಸಂಬಂಧಿಸಿದ ಮಧ್ಯಂತರ ಪಾವತಿಯ ಮೊದಲ ಕಂತನ್ನು DICGCಯು ದಿನಾಂಕ 2021ರ ನವೆಂಬರ್ 29 ರಂದು ಬಿಡುಗಡೆ ಮಾಡಿದೆ.

    ಸಾಂಕೇತಿಕವಾಗಿ ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್‍ನ ಕೆಲವು ಠೇವಣಿದಾರರಿಗೆ ಕೇಂದ್ರ ಸಚಿವರು ಹಾಗು ನೆರೆದ ಇತರೆ ಗಣ್ಯರು ಹಣ ಮರುಪಾವತಿ ಚೆಕ್ ವಿತರಿಸಿದರು. ಕಾರ್ಯಕ್ರಮದಲ್ಲಿ ಸಂಸದ ಪಿ. ಸಿ ಮೋಹನ್, ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಂಜುಳಾ, ಜಿಲ್ಲಾಧಿಕಾರಿ ಜೆ ಮಂಜುನಾಥ್, ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಂಗಪ್ಪ ಸೇರಿದಂತೆ ಬ್ಯಾಂಕುಗಳ ಅಧಿಕಾರಿಗಳು, ಠೇವಣಿದಾರರು ಉಪಸ್ಥಿತರಿದ್ದರು.

  • ಲ್ಯಾಂಡಿಂಗ್ ಸಮಸ್ಯೆಯಾದ ಸಿಎಂ ಬೊಮ್ಮಾಯಿ ಇದ್ದ ವಿಮಾನ

    ಲ್ಯಾಂಡಿಂಗ್ ಸಮಸ್ಯೆಯಾದ ಸಿಎಂ ಬೊಮ್ಮಾಯಿ ಇದ್ದ ವಿಮಾನ

    ಹುಬ್ಬಳ್ಳಿ: ಪ್ರತಿಕೂಲ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ವಿಮಾನ  ಲ್ಯಾಂಡಿಂಗ್ ಗೆ ಸಮಸ್ಯೆಯಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂಡಿಗೊ ವಿಮಾನದಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದರು. ಆದರೆ ಹುಬ್ಬಳ್ಳಿಯಲ್ಲಿ  ಹವಾಮಾನ ವೈಪರೀತ್ಯ ಕಂಡುಬಂದಿದೆ. ಇದರಿಂದಾಗಿ ಲ್ಯಾಂಡಿಂಗ್ ಸಮಸ್ಯೆ ಉಂಟಾಗಿದೆ.  ಹುಬ್ಬಳ್ಳಿಯಲ್ಲೇ ಮೂರು ಸುತ್ತುತ್ತಾ ಆಕಾಶದಲ್ಲೆ ವಿಮಾನ ಹಾರಾಡಿದೆ.

    ಇಂಡಿಗೊ 6ಇ-7227 ವಿಮಾನದ ಮೂಲಕ ಸಿಎಂ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದರು. ದಟ್ಟ ಮಂಜು ಆವರಿಸಿದ ಹಿನ್ನೆಲೆಯಲ್ಲಿ ಲ್ಯಾಂಡಿಂಗ್ ಸಮಸ್ಯೆಯಾಗಿ ವಿಮಾನ 15 ನಿಮಿಷಗಳ ಕಾಲ ಆಕಾಶದಲ್ಲೇ ಹಾರುವ ಪರಿಸ್ಥಿತಿ ಒದಗಿತು. ನಂತರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ 7:30ಕ್ಕೆ ಲ್ಯಾಡಿಂಗ್ ಆಗಬೇಕಿದ್ದ ಅರ್ಧ ಗಂಟೆ ತಡವಾಗಿ ಲ್ಯಾಂಡಿಂಗ್ ಆಯಿತು. ಇದನ್ನೂ ಓದಿ: ವೀರ ಸೇನಾನಿಗಳಿಗೆ ಗಣ್ಯರ ನಮನ – ಪ್ರಧಾನಿ, ರಕ್ಷಣಾ ಸಚಿವ, ತ್ರಿದಳ ಮುಖ್ಯಸ್ಥರಿಂದ ಗೌರವಾರ್ಪಣೆ

    ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿ, ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಇಂದು ಶಿಗ್ಗಾಂವನಲ್ಲಿ ಮತಚಲಾವಣೆ ಮಾಡಲು ಆಗಮಿಸಿದ್ದೇನೆ. ಆದರೆ ಹವಾಮಾನ ವೈಪ್ಯರಿತ್ಯರಿಂದ ವಿಮಾನ ತಡವಾಗಿ ಲ್ಯಾಂಡಿಂಗ್ ಆಗಿದೆ ಎಂದರು. ಇದನ್ನೂ ಓದಿ: ಪ್ರತಿಭಟನೆ ಮುಂದುವರಿಯಲಿದೆ: ನಾಳೆ ಮತ್ತೆ ರೈತರ ಸಭೆ

    ಓಮಿಕ್ರಾನ್ ಬಗ್ಗೆ ಮಾತನಾಡಿದ ಅವರು, ಕ್ರಿಸ್ಮಸ್ ಹಾಗೂ ಹೊಸ ವರ್ಷಕ್ಕೆ ಯಾವುದೆ ನಿರ್ಬಂಧನೆ ಸದ್ಯಕ್ಕಿಲ್ಲ. ಈ ಬಗ್ಗೆ ಯಾವುದೇ ತೀರ್ಮಾನವನ್ನು ಕೈಗೊಂಡಿಲ್ಲ ಎಂದು ಹೇಳಿದರು. ಇದೇ ವೇಳೆ ಮಹದಾಯಿ ವಿಚಾರವಾಗಿ ಮತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಮಹದಾಯಿ ವಿಚಾರ ನ್ಯಾಯಾಲಯದಲ್ಲಿದೆ. ಮಹದಾಯಿ ಕಾಮಗಾರಿ ಆರಂಭಿಸಲು ಏನೂ ಮಾಡಬೇಕು ಅದನ್ನು ಮಾಡುತ್ತೇವೆ ಎಂದ ಅವರು, ಬೆಳೆ ಹಾನಿ ಹಿನ್ನೆಲೆಯಲ್ಲಿ ಪರಿಹಾರ ವಿತರಣೆ ಆರಂಭವಾಗಿದೆ. ಪರಿಹಾರ ಆ್ಯಪ್ ಮೂಲಕ ಪರಿಹಾರ ವಿತರಣೆ ಕಾರ್ಯ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಟೊಮೆಟೊ ಕದ್ದ ಖಾಕಿ ಸಮವಸ್ತ್ರಧಾರಿ – ವೀಡಿಯೋ ವೈರಲ್

  • ಖ್ಯಾತ ವಿದ್ವಾಂಸ ಪ್ರೊ. ಕೆ.ಎಸ್.ನಾರಾಯಣಾಚಾರ್ಯ ವಿಧಿವಶ

    ಖ್ಯಾತ ವಿದ್ವಾಂಸ ಪ್ರೊ. ಕೆ.ಎಸ್.ನಾರಾಯಣಾಚಾರ್ಯ ವಿಧಿವಶ

    ಬೆಂಗಳೂರು: ಸುಪ್ರಸಿದ್ಧ ಲೇಖಕ ಹಾಗೂ ಹಿರಿಯ ವಿದ್ವಾಂಸ ಪ್ರೊ.ಕೆ.ಎಸ್. ನಾರಾಯಣಾಚಾರ್ಯ(88) ನಿಧನರಾಗಿದ್ದಾರೆ.

    ಇಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ತಮ್ಮ ಬೆಂಗಳೂರಿನ ನಿವಾಸದಲ್ಲಿ ಪ್ರೊ.ಕೆ.ಎಸ್. ನಾರಾಯಣಾಚಾರ್ಯ ಅವರು ಕೊನೆಯುಸಿರೆಳೆದಿದ್ದಾರೆ. ಕೆ. ಎಸ್. ನಾರಾಯಣಾಚಾರ್ಯ ಅವರು, 1933ರಲ್ಲಿ ಕನಕಪುರದ ವೈದಿಕ ಶ್ರೀ ವೈಷ್ಣವ ಕುಟುಂಬದಲ್ಲಿ ಜನಿಸಿದರು. ಬೇಂದ್ರೆಯವರಿಂದ ಪ್ರೇರಣೆಗೊಳಗಾಗಿ ಇವರು ಪ್ರವಚನಗಳಿಂದ ಲೇಖನದೆಡೆಗೂ ಮುಖ ಮಾಡಿದರು. ನಂತರ ಪ್ರವಚನ ಮತ್ತು ಕಾದಂಬರಿಕಾರರಾಗಿ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಅವರು ರಾಮಾಯಣಾಚಾರ್ಯ ಎಂದೇ ಖ್ಯಾತಿ ಪಡೆದಿದ್ದರು. ಇದನ್ನೂ ಓದಿ: ರೈತರ ಹೋರಾಟಕ್ಕೆ ಇಂದಿಗೆ ಒಂದು ವರ್ಷ – ಸಿಂಘು, ಟ್ರಿಕ್ರಿ ಗಡಿಯಲ್ಲಿ ಅನ್ನದಾತರ ಮಹಾಪಂಚಾಯತ್

    Koo App

    ಖ್ಯಾತ ಚಿಂತಕರು, ಸುಪ್ರಸಿದ್ಧ ಲೇಖಕರು, ಮೇರು ವಿದ್ವಾಂಸರಾಗಿದ್ದ ಪ್ರೊ। ಕೆ.ಎಸ್. ನಾರಾಯಣಾಚಾರ್ಯರ ಅವರು ಇಂದು ಬೆಳಗಿನ ಜಾವ ನಿಧನರಾಗಿದ್ದು, ಅತೀವ ದುಃಖ ತಂದಿದೆ. ಅವರು ರಾಷ್ಚ್ರಭಕ್ತಿ, ಸಂಸ್ಕೃತಿಗಳ ಪರಮ ಆರಾಧಕರಾಗಿದ್ದರು. ಅವರ ನಿಧನವು ಕನ್ನಡ ಸಾರಸ್ವತ ಹಾಗೂ ವಿದ್ವತ್ ಲೋಕಕ್ಕೆ ತುಂಬಲಾರದ ನಷ್ಟವನ್ನುಂಟುಮಾಡಿದೆ. ಅವರ ಕೃತಿಗಳ ಮೂಲಕ ಸದಾಕಾಲ ಅವರ ನೆನಪು ಸದಾಕಾಲ ಉಳಿಯಲಿ ಮತ್ತು ಅಗಲಿದ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿಯೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ‌. ಓಂ ಶಾಂತಿಃ

    Basavaraj Bommai (@bsbommai) 26 Nov 2021

    ಶ್ರೀ ರಾಮಾವತಾರ ಸಂಪೂರ್ಣವಾದಾ, ಶ್ರೀ ರಾಮಾಯಣ ಪಾತ್ರ ಪ್ರಪಂಚ, ಶ್ರೀ ಮಹಾಭಾರತ ಪಾತ್ರ ಪ್ರಪಂಚ ಸೇರಿ ಹಲವಾರು ಪುಸ್ತಕಗಳನ್ನು ಕೆ. ಎಸ್. ನಾರಾಯಣಾಚಾರ್ಯ ಅವರು ಬರೆದಿದ್ದಾರೆ. ಅಲ್ಲದೇ ಇವರಿಗೆ ಸರ್ಕಾರದಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ವಿದ್ವನ್ಮಣಿ’, ‘ವೇದಭೂಷಣ’, ‘ವಾಲ್ಮೀಕಿ ಹೃದಯಜ್ಞ’, ‘ರಾಮಾಯಣಾಚಾರ್ಯ’, ‘ಮಹಾಭಾರತಾಚಾರ್ಯ’ ಮೊದಲಾದ ಬಿರುದುಗಳು ವಿವಿಧ ಮಠಾಧೀಶರಿಂದ ಕೆ. ಎಸ್. ನಾರಾಯಣಾಚಾರ್ಯ ದೊರೆತಿದೆ.

    ಸದ್ಯ ಕೆ. ಎಸ್.ನಾರಾಯಣಾಚಾರ್ಯ ಅವರ ಅಗಲಿಕೆಗೆ ಅನೇಕ ಮಂದಿ ಸಂತಾಪ ಸೂಚಿಸಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ, ಪ್ರಖ್ಯಾತ ವಿದ್ವಾಂಸರು ಹಾಗೂ ಅನೇಕ ಪೌರಾಣಿಕ ಕಾದಂಬರಿಗಳ ರಚನಾಕಾರರಾಗಿದ್ದ ಪ್ರೊ.ಕೆ.ಎಸ್.ನಾರಾಯಣಾಚಾರ್ಯರ ನಿಧನ ನೋವಿನ ಸಂಗತಿ. ಪ್ರವಚನ ಮತ್ತು ಕಾದಂಬರಿಕಾರರಾಗಿ ಅಪಾರ ಅಭಿಮಾನಿಗಳನ್ನು ಅವರು ಹೊಂದಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಆಫ್ರಿಕಾದಲ್ಲಿ ರೂಪಾಂತರ ಕೋವಿಡ್ ತಳಿ ಪತ್ತೆ – ಕಟ್ಟೆಚ್ಚರಕ್ಕೆ ಎಲ್ಲ ರಾಜ್ಯಗಳಿಗೆ ಕೇಂದ್ರದಿಂದ ಸೂಚನೆ