Tag: ಪ್ರಹ್ಲಾದ್ ಜೋಶಿ

  • ಕಾಂಗ್ರೆಸ್, ಪಾಕಿಸ್ತಾನದ ಭಾಷೆ ಒಂದೇ ಆಗಿದೆ: ಪ್ರಹ್ಲಾದ್ ಜೋಶಿ

    ಕಾಂಗ್ರೆಸ್, ಪಾಕಿಸ್ತಾನದ ಭಾಷೆ ಒಂದೇ ಆಗಿದೆ: ಪ್ರಹ್ಲಾದ್ ಜೋಶಿ

    ರಾಯಚೂರು: ಪಾಕಿಸ್ತಾನದ ಭಯೋತ್ಪಾದನೆ ಮುಖವನ್ನು ವಿಶ್ವದ ಮುಂದೆ ನಿಲ್ಲಿಸುವ ಕೆಲಸ ಯಶಸ್ವಿಯಾಗಿ ನಡೆದಿದೆ. ಪಾಕ್ ನಲ್ಲಿನ ಅಸಹಿಷ್ಣುತೆ ಹಾಗೂ ಸರ್ಕಾರ ಅಲ್ಪ ಸಂಖ್ಯಾತರ ಮೇಲಿನ ನಡೆಸಿರುವ ಧಾರ್ಮಿಕ ಅತ್ಯಾಚಾರವನ್ನು ಜಗತ್ತಿಗೆ ತೋರಿಸಲು ಅವಕಾಶ ಇದೆ. ಆದರೆ ಕಾಂಗ್ರೆಸ್ಸಿನವರು ಪೌರತ್ವ ಕಾಯ್ದೆ (ಸಿಎಎ) ವಿರೋಧಿಸಿ ಹೋರಾಟ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

    ರಾಯಚೂರಿನಲ್ಲಿ ಆಯೋಜಿಸಿರುವ ಸಿಎಎ ಜಾಗೃತಿ ಜಾಥ ಆರಂಭಕ್ಕೂ ಮುನ್ನ ಮಾತನಾಡಿದ ಜೋಶಿ, ಕಾಂಗ್ರೆಸ್ಸಿನವರು ಸೋಲಿನಿಂದ ಕಂಗೆಟ್ಟಿದ್ದಾರೆ. ಮೋದಿಯನ್ನ ವಿರೋಧ ಮಾಡುತ್ತಾ ದೇಶದ ವಿರುದ್ಧ ಮಾತಾಡುತ್ತಿದ್ದಾರೆ. ಪಾಕಿಸ್ತಾನದ ಭಾಷೆ ಹಾಗೂ ಕಾಂಗ್ರೆಸ್ ಭಾಷೆ ಒಂದೇ ಆಗಿದೆ ಯಾಕೆ, ಪಾಕಿಸ್ತಾನವನ್ನು ಬೆತ್ತಲೆ ಮಾಡುವ ಅವಕಾಶಕ್ಕೆ ವಿರೋಧಿಸುತ್ತಿದ್ದೀರಿ ಯಾಕೆ ಅಂತ ಪ್ರಶ್ನಿಸಿದರು. ಪಾಕಿಸ್ತಾನದಲ್ಲಿ ಶೇ.22 ರಷ್ಟು ಇದ್ದ ಹಿಂದೂ ಅಲ್ಪಸಂಖ್ಯಾತರ ಜನಸಂಖ್ಯೆ ಶೇ.2ಕ್ಕೆ ಬಂದಿದೆ. ದೇಶಕ್ಕೆ ಲಕ್ಷಾಂತರ ಜನ ಅಕ್ರಮವಾಗಿ ನುಸುಳಿ ಬಂದಿದ್ದಾರೆ. ಅವರ ಬಗ್ಗೆ ಚಕಾರವೆತ್ತುತ್ತಿಲ್ಲ. ಕಾಂಗ್ರೆಸ್ಸಿನವರು ಅಲ್ಪಸಂಖ್ಯಾತರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದರು.

    ಮಾಜಿ ಸಚಿವ ಯು.ಟಿ ಖಾದರ್ ಅವರೇ ಸಿಎಎ ಬಿಲ್ ಬಂದ ನಂತರ ನಿಮಗೆ ಏನಾದರೂ ತೊಂದರೆಯಾಗಿದೆಯಾ. ನಿಮ್ಮ ಉದ್ದೇಶ ಏನು ಅನ್ನೋದನ್ನ ಸ್ಪಷ್ಟಪಡಿಸಬೇಕು. ಪಾಕಿಸ್ತಾನ ಯಾವ ಅಲ್ಪಸಂಖ್ಯಾತರನ್ನ ಸುರಕ್ಷಿತವಾಗಿ ನೋಡಿಕೊಂಡಿದೆ. ಇದು ಪೌರತ್ವ ಕೊಡಲು ಇರುವ ಕಾನೂನು, ಕಿತ್ತುಕೊಳ್ಳುವ ಕಾನೂನು ಅಲ್ಲ ಎಂದರು. ಕುಮಾರಸ್ವಾಮಿ ಸಿ.ಡಿ ಬಿಡುಗಡೆ ಬಗ್ಗೆ ಸಿಎಂ ಹಾಗೂ ಪೊಲೀಸ್ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಕುಮಾರಸ್ವಾಮಿಯವರದ್ದು ಹಿಟ್ ಆ್ಯಂಡ್ ರನ್ ನಡೆ. ಪೊಲೀಸರು ಪರಿಸ್ಥಿತಿಗೆ ಅನುಗುಣವಾಗಿ ಕ್ರಮಕೈಗೊಂಡಿದ್ದಾರೆ. ಪೊಲೀಸರು ಕ್ರಮ ಕೈಗೊಂಡರೆ ಅವರ ವಿರುದ್ಧ ನಿಲ್ಲುವುದು ಸರಿಯಲ್ಲ ಎಂದು ಜೋಶಿ ಹೇಳಿದರು.

    ಆಂಧ್ರದ ಕರ್ನೂಲ್ ರಾಜ್ಯಕ್ಕೆ ಸೇರಿಸುವ ವಿಚಾರ ಸರಿಯಿದೆ. ಆದರೆ ಗಡಿ ವಿವಾದಗಳು ಬಹಳ ಇವೆ. ಅಭಿವೃದ್ಧಿ ಕಡೆ ಗಮನ ಕೊಡುವುದು ಒಳಿತು ಎಂದರು. ಜಗತ್ತಿನ ನಾಲ್ಕನೆ ಹೆಚ್ಚು ಕಲ್ಲಿದ್ದಲು ಸಂಪನ್ಮೂಲ ಹೊಂದಿರುವ ದೇಶ ಭಾರತ ಆದರೆ ಕೋಲ್ ಇಂಡಿಯಾದಿಂದ ದೇಶದ ಎಲ್ಲಾ ಅವಶ್ಯಕತೆ ಪೂರೈಸಲು ಸಾಧ್ಯವಿಲ್ಲ. 2024 ಕ್ಕೆ ಕೋಲ್ ಇಂಡಿಯಾ 1 ಬಿಲಿಯನ್ ಟನ್, ಉಳಿದ ಮೂಲಗಳಿಂದ 1500 ಮಿಲಿಯನ್ ಟನ್ ಉತ್ಪಾದನೆ ಮಾಡಬೇಕು ಅನ್ನೋ ಗುರಿ ಹೊಂದಲಾಗಿದೆ ಎಂದು ಜೋಶಿ ತಿಳಿಸಿದರು.

  • ದಿಶಾ ಸಭೆಯಲ್ಲಿ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಕೇಂದ್ರ ಸಚಿವ ಜೋಶಿ

    ದಿಶಾ ಸಭೆಯಲ್ಲಿ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಕೇಂದ್ರ ಸಚಿವ ಜೋಶಿ

    ಧಾರವಾಡ: ದಿಶಾ ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು. ಧಾರವಾಡ ಜಿಲ್ಲಾ ಪಂಚಾಯ್ತಿಯಲ್ಲಿ ನಡೆದಿದ್ದ ಈ ಸಭೆಯಲ್ಲಿ ಕುಂದಗೋಳ ತಾಲೂಕಿನಲ್ಲಿ ನರೇಗಾ ಯೋಜನೆಯಲ್ಲಿ ಮನೆ ಕಟ್ಟಿಸಿ ಕೊಂಡವರಿಗೆ ಹಣ ಹಾಕುವ ಬದಲು ಬೇರೆಯವರ ಅಕೌಂಟ್‍ಗೆ ಹಣ ಹಾಕಿದ್ದಕ್ಕೆ ಆಕ್ರೋಶ ವ್ಯಕ್ತ ಪಡಿಸಿದರು.

    ವಾಲೀಕಾರ್ ಎನ್ನುವ ಮಹಿಳೆ ಬದಲು ಗೋಪಾಲ ರಾಮಪೂರ ಎಂಬವರಿಗೆ ಹಣ ಹಾಕಿದ್ದಕ್ಕೆ ಜಿಲ್ಲಾ ಪಂಚಾಯತಿ ಸಿಇಓ ಸತೀಶ್ ಗೆ ಕ್ಲಾಸ್ ತೆಗೆದುಕೊಂಡರು. ಈ ವೇಳೆ ಸರ್ಕಾರಕ್ಕೆ ಓಪನ್ ಆಗಿ ಟೋಪಿ ಹಾಕುವ ಕೆಲಸ ಮಾಡಲಾಗುತ್ತದೆ ಎಂದ ಪ್ರಹ್ಲಾದ ಜೋಶಿ, ನೀವು ಏನು ಮಾಡ್ತೀರಾ? ಅಧಿಕಾರಿಗಳಿಗೆ ಹೇಳುವುದಕ್ಕೆ ಆಗಾಲ್ವಾ ಎಂದು ಗರಂ ಆದರು. ಈ ವೇಳೆ ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಿ ಸಮಾಧಾನ ಪಡಿಸಿದರು.

    ನಂತರ ಮಾತನಾಡಿದ ಅವರು, 29 ಇಲಾಖೆಗಳ ಪರಿಶೀಲನಾ ಸಭೆ ನಡೆಸಿದ್ದು, ವೈದ್ಯರ ಕೊರತೆ ಇಲ್ಲೇ ಅಲ್ಲ ಭಾರತದಲ್ಲೇ ಇದೆ. ಗ್ರಾಮಾಂತರ ಪ್ರದೇಶದ ರಸ್ತೆಗಳಿಗೆ ವಿಶೇಷ ಗಮನ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಹೇಳಿದ್ದೇನೆ. ಎನ್.ಆರ್.ಎಲ್.ಎಂ ಸಂಜೀವಿನಿ ಯೋಜನೆಯಡಿ ಗ್ರಾಮೀಣ ಕುಟುಂಬಗಳ ಜೀವನೋಪಾಯಕ್ಕಾಗಿ ರೂಪಿಸಿರುವ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನವಾಗಬೇಕು ಎಂದು ತಿಳಿಸಿದರು.

    ಸ್ವಚ್ಛ ಭಾರತ ಮಿಷನ್ ಗ್ರಾಮೀಣ ಯೋಜನೆಯಡಿ ಜಿಲ್ಲೆಯಲ್ಲಿ ಇದುವರೆಗೆ 11 ಸಾವಿರ ವೈಯಕ್ತಿಕ ಶೌಚಾಲಯ ನಿರ್ಮಿಸಲಾಗಿದೆ. ಉಳಿದ 9 ಸಾವಿರ ಶೌಚಾಲಯಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಶೌಚಾಲಯ ಕಟ್ಟಿಕೊಂಡವರು ಅದನ್ನು ಬಳಸಲು ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಶುದ್ಧ ಕುಡಿಯುವ ನೀರಿನ ಘಟಕಗಳ ಸಮರ್ಪಕ ನಿರ್ವಹಣೆಗೆ ಶಾಶ್ವತ ಪರಿಹಾರ ಹುಡುಕಿಕೊಳ್ಳಬೇಕು. ಪ್ರಾಯೋಗಿಕವಾಗಿ ಕೆಲವು ಪ್ರಯೋಗ ಮಾಡಬೇಕು ಎಂದರು.

  • ಆರ್ಥಿಕ ಸದೃಢತೆ ಸಾಧನೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ: ಜೋಶಿ

    ಆರ್ಥಿಕ ಸದೃಢತೆ ಸಾಧನೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ: ಜೋಶಿ

    ಹುಬ್ಬಳ್ಳಿ: ಬರುವ ವರ್ಷಗಳಲ್ಲಿ ಭಾರತವನ್ನು 5 ಟ್ರಿಲಿಯನ್ ಅರ್ಥವ್ಯವಸ್ಥೆಯ ರಾಷ್ಟ್ರವಾಗಿ ಸಶಕ್ತಗೊಳಿಸುವುದು ಸೇರಿದಂತೆ ಅನೇಕ ಆರ್ಥಿಕ ಮತ್ತು ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಸ್ಪಷ್ಟ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಕೃಷಿ ಮೇಲಿನ ಉದ್ಯೋಗ ಅವಲಂಬನೆ ಕಡಿಮೆಗೊಳಿಸಿ ಪರ್ಯಾಯ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಇಂದಿನ ಸಭೆಯಲ್ಲಿ ಸಂಗ್ರಹಿಸಲಾಗಿರುವ ಬರುವ ಬುಧವಾರದ ಕೇಂದ್ರ ಸಚಿವ ಸಂಪುಟ ಸಭೆಯ ಒಳಗಾಗಿ ಕೇಂದ್ರ ಹಣಕಾಸು ಸಚಿವರಿಗೆ ತಲುಪಿಸಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

    ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಂಗಣದಲ್ಲಿ ಇಂದು ಕೇಂದ್ರ ಬಜೆಟ್ ಪೂರ್ವ ಪ್ರಸ್ತಾವನೆಗಳ ಕುರಿತು ಆರ್ಥಿಕ ತಜ್ಞರು ಮತ್ತು ಸಾರ್ವಜನಿಕರೊಂದಿಗೆ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

    ಕಳೆದ 16 ವರ್ಷಗಳಿಂದ ನಿರಂತರವಾಗಿ ಬಜೆಟ್ ಪೂರ್ವ ಸಂವಾದ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದೇನೆ. ಧಾರವಾಡ ಲೋಕಸಭಾ ಕ್ಷೇತ್ರದ ಮತದಾರರ ಆಶೀರ್ವಾದದಿಂದ ಕೇಂದ್ರ ಸರ್ಕಾರದ ಸಚಿವನಾಗಿ ಸಭೆ ನಡೆಸುವ ಸದಾವಕಾಶ ದೊರೆತಿದೆ. ಭಾರತವನ್ನು 5 ಟ್ರಿಲಿಯನ್ ಅರ್ಥವ್ಯವಸ್ಥೆಯ ರಾಷ್ಟ್ರವಾಗಿಸುವ ಮತ್ತು 1 ಲಕ್ಷ ಕೋಟಿ ರೂ.ಗಳನ್ನು ಬರುವ ಐದು ವರ್ಷಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿನಿಯೋಗಿಸುವ ಗುರಿ ಹೊಂದಲಾಗಿದೆ. ಬರುವ ಹತ್ತು ವರ್ಷಗಳಲ್ಲಿ ರೇಲ್ವೇ ವ್ಯವಸ್ಥೆಯ ಅಭಿವೃದ್ಧಿಗೆ 50 ಲಕ್ಷ ಕೋಟಿ ರೂ.ಬಳಸುವ ಗುರಿ ಹೊಂದಲಾಗಿದೆ ಎಂದರು.

    ಜಿಎಸ್ ಟಿ ತೆರಿಗೆಯು ಸರಳ ಮತ್ತು ಸುಲಭ ವಿಧಾನವಾಗಿದೆ ಎಂಬುದು ಬಹುತೇಕ ಚಾರ್ಟರ್ಡ್ ಅಕೌಂಟೆಂಟ್ ಗಳ ಅಭಿಪ್ರಾಯವಾಗಿದೆ. 60 ದಿನಗಳಲ್ಲಿ ಜಿಎಸ್‍ಟಿ ಮರುಪಾವತಿ ಮಾಡಲಾಗುವುದು. ದೇಶದ ಸಮಗ್ರ ಅಭಿವೃದ್ಧಿಗಾಗಿ ಪಕ್ಷಾತೀತವಾಗಿ ಎಲ್ಲರ ಸಲಹೆ ಪಡೆಯಲು ಈ ಸಭೆ ಆಯೋಜಿಸಲಾಗಿದೆ. ರಚನಾತ್ಮಕ ಸಲಹೆಗಳನ್ನು ಕ್ರೂಢೀಕರಿಸಿ ಕೇಂದ್ರದ ಹಣಕಾಸು ಸಚಿವರು ಮತ್ತು ಪ್ರಧಾನ ಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದರು.

    ಉದ್ಯಮಿಗಳು, ಸಾರ್ವಜನಿಕರ ಅಭಿಪ್ರಾಯಗಳು:
    ಸಂವಾದದಲ್ಲಿ ಭಾಗವಹಿಸಿದ ವಿವಿಧ ಕೈಗಾರಿಕೋದ್ಯಮಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮಾತನಾಡಿ, ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗಕ್ಕೆ ಅಡ್ಡಿಯಾಗಿರುವ ಅಂಶಗಳನ್ನು ಪರಿಹರಿಸಬೇಕು. ಮಂಗಳೂರು-ವಿಜಯಪುರ ರೈಲನ್ನು ಖಾಯಂಗೊಳಿಸಬೇಕು. ಹುಬ್ಬಳ್ಳಿ ರೈಲ್ವೇ ನಿಲ್ದಾಣಕ್ಕೆ ಶ್ರೀ ಸಿದ್ದಾರೂಢರ ಹೆಸರಿಡಬೇಕು. ಧಾರವಾಡ ರೇಲ್ವೇ ಸ್ಟೇಷನ್ ಹತ್ತಿರ ಕಲ್ಯಾಣ ನಗರಕ್ಕೆ ತೆರಳುವ ಮಾರ್ಗದಲ್ಲಿ ರೇಲ್ವೆ ಮೇಲ್ಸೇತುವೆ ನಿರ್ಮಿಸಬೇಕು. ತೆರಿಗೆ ನೀತಿಯ ಪರಿಷ್ಕರಣೆ, 2005 ರವರೆಗೂ ಗ್ರಾಮೀಣ ಬ್ಯಾಂಕುಗಳಿಗೆ ತೆರಿಗೆ ವಿಧಿಸುತ್ತಿರಲಿಲ್ಲ. 2005 ರ ನಂತರ ಗ್ರಾಮೀಣ ಬ್ಯಾಂಕುಗಳು ರಾಷ್ಟ್ರೀಕೃತ ಬ್ಯಾಂಕುಗಳಿಗಿಂತ ಅಧಿಕ ತೆರಿಗೆ ಪಾವತಿಸುತ್ತಿವೆ. ಈ ವ್ಯತ್ಯಾಸ ಸರಿಪಡಿಸಬೇಕು. ಸಹಕಾರಿ ರಂಗದ ಬ್ಯಾಂಕುಗಳು ಉತ್ತೇಜನಕ್ಕೆ ಕ್ರಮಗಳನ್ನು ಅಳವಡಿಸಬೇಕು. ವಿಮಾ ವಲಯದ ಮೇಲೆ ವಿಧಿಸುತ್ತಿರುವ ಜಿಎಸ್‍ಟಿ ತೆರಿಗೆ ಕಡಿತಗೊಳಿಸಿ. ಇದೇ ಸಂದರ್ಭದಲ್ಲಿ ಪೂರ್ಣಪ್ರಜ್ಞ ಎಂಬ ಯುವ ವಿದ್ಯಾರ್ಥಿಯೊಬ್ಬ ಮಾತನಾಡಿ, ಉನ್ನತ ಶಿಕ್ಷಣದಲ್ಲಿ ಹುಬ್ಬಳ್ಳಿ ಧಾರವಾಡ ಅವಳಿ ನಗರದ ಸಾಮಥ್ರ್ಯ ಹೆಚ್ಚಿಸಲು ಶಿಕ್ಷಣದ ಹೂಡಿಕೆಯ ಪ್ರಮಾಣ ಹೆಚ್ಚಿಸಬೇಕು. ಉನ್ನತ ಗುಣಮಟ್ಟದ ಎಂ.ಬಿ.ಎ ಮತ್ತಿತರ ವೃತ್ತಿಪರ ಸ್ನಾತಕೋತ್ತರ ಶಿಕ್ಷಣ ಸಂಸ್ಥೆಗಳು ತಲೆ ಎತ್ತಬೇಕು ಎಂದರು.

    ಶಾಸಕ ಅರವಿಂದ ಬೆಲ್ಲದ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಪ್ರದೀಪ್ ಶೆಟ್ಟರ್, ಜಿಲ್ಲಾಧಿಕಾರಿ ದೀಪಾ ಚೋಳನ್, ವಾಕರಸಾಸಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ ಸತೀಶ್, ಆದಾಯ ತೆರಿಗೆ ಇಲಾಖೆಯ ಜಂಟಿ ಆಯುಕ್ತ ಮ್ಯಾಥ್ಯೂ, ನೈಋತ್ಯ ರೇಲ್ವೇ ವಲಯದ ಎಡಿಜಿಎಂ ಎ.ಕೆ.ಮಿಶ್ರಾ, ಅಶೋಕ್ ಗಡಾದ ಮತ್ತಿತರರು ವೇದಿಕೆಯಲ್ಲಿದ್ದರು.

    ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಮಹೇಂದ್ರ ಲದ್ದಡ ಸ್ವಾಗತಿಸಿದರು. ಶೇಷಗಿರಿ ಕುಲಕರ್ಣಿ ನಿರೂಪಿಸಿದರು. ಮಲ್ಲಿಕಾರ್ಜುನಗೌಡ ಪಾಟೀಲ ವಂದಿಸಿದರು. ಕೈಗಾರಿಕೋದ್ಯಮಿಗಳು, ಚಾರ್ಟರ್ಡ್ ಅಕೌಂಟೆಂಟ್‍ಗಳು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

  • 100 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ಸಮುಚ್ಚಯ ನಿರ್ಮಾಣ: ಪ್ರಹ್ಲಾದ್ ಜೋಶಿ ಭರವಸೆ

    100 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ಸಮುಚ್ಚಯ ನಿರ್ಮಾಣ: ಪ್ರಹ್ಲಾದ್ ಜೋಶಿ ಭರವಸೆ

    ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆ ಅಡಿ ಹುಬ್ಬಳ್ಳಿಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ಸಮುಚ್ಚಯ ನಿರ್ಮಾಣ ಮಾಡಲಾಗುವುದು ಎಂದು ಕೇಂದ್ರದ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಭರವಸೆ ನೀಡಿದ್ದಾರೆ.

    ಸ್ಮಾರ್ಟ್ ಸಿಟಿ ಯೋಜನೆಯ ಅನುದಾನದಲ್ಲಿ ಮಹಾನಗರ ಪಾಲಿಕೆಯ ಈಜುಗೊಳ, ಸ್ಮಾರ್ಟ್ ಹೆಲ್ತ್, ಸ್ಮಾರ್ಟ್ ಸ್ಕೂಲ್‍ಗಳ ಉದ್ಘಾಟನೆ ಹಾಗೂ ನೂತನ ಯೋಜನೆಗಳಾದ ಬೆಂಗೇರಿ ಮತ್ತು ಉಣಕಲ್ ಮಾರುಕಟ್ಟೆ ನಿರ್ಮಾಣ, ಬಹುವಾಹನ ನಿಲುಗಡೆ, ಸ್ಮಾರ್ಟ್ ರಸ್ತೆ ಕಾಮಗಾರಿ ಪ್ಯಾಕೇಜ್ 5&6, ಪುಟಾಣಿ ರೈಲು ಯೋಜನೆಗಳಿಗೆ ಪ್ರಹ್ಲಾದ್ ಜೋಶಿ ಶಂಕುಸ್ಥಾಪನೆ ನೆರವೇರಿಸಿದರು.

    ಬಳಿಕ ಮಾತನಾಡಿದ ಅವರು, ದೇಶದ ಜನರ ಆರೋಗ್ಯ ಗುಣಮಟ್ಟದ ಮೇಲೆ ದೇಶದ ಪ್ರಗತಿ ಅಳೆಯಲಾಗುತ್ತದೆ. ಉತ್ತಮ ಆರೋಗ್ಯ ಹೊಂದಿರುವ ಪ್ರಜೆಗಳು ದೇಶದ ಆರ್ಥಿಕತೆಗೆ ಕೊಡುಗೆ ನೀಡಬಲ್ಲರು. ಸ್ಮಾರ್ಟ್ ಸಿಟಿ ಯೋಜನೆ ಅಡಿ ಹಳೆಯ ಈಜುಗೊಳವನ್ನು ನವೀಕರಿಸಲಾಗಿದೆ. ಚಿಟುಗುಪ್ಪಿ ಆಸ್ಪತ್ರೆಯಲ್ಲಿ ಸ್ಮಾರ್ಟ್ ಹೆಲ್ತ್ ಆರಂಭಿಸಲಾಗಿದ್ದು, ಜನರ ಆರೋಗ್ಯ ತಪಾಸಣೆ ಹಾಗೂ ವರದಿಗಳನ್ನು ಕಂಪ್ಯೂಟರ್ ಆಧಾರಿತ ಕೃತಕ ಬುದ್ಧಿಮತ್ತೆಯಿಂದ ತ್ವರಿತವಾಗಿ ಮಾಡಲಾಗುವುದು ಎಂದು ತಿಳಿಸಿದರು.

    ಕಂಪನಿಗಳ ಸಾರ್ವಜನಿಕ ಹೊಣೆಗಾರಿಕೆ ನಿಧಿ ಬಳಸಿ ಧಾರವಾಡದ ಡಿ.ಸಿ.ಕಾಂಪೌಡ್ ಬಳಿ 15 ಕೋಟಿ ರೂ. ವೆಚ್ಚದಲ್ಲಿ ಈಜುಗೋಳ ನಿರ್ಮಿಸಲಾಗುತ್ತಿದೆ. ಇದನ್ನು ಮೇಲ್ದರ್ಜೆಗೇರಿಸಿ ಕ್ರೀಡಾ ಸಮುಚ್ಚಯವನ್ನಾಗಿಸಲಾಗುವುದು. ಇದಕ್ಕೆ ತಗಲುವ ಹೆಚ್ಚುವರಿ 15 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಸ್ವಾಮ್ಯದ ತೈಲ ಹಾಗೂ ನೈಸರ್ಗಿಕ ಅನಿಲ ಕಾರ್ಪೊರೇಷನ್ (ಔಓಉಅ) ನೀಡಲು ಸಿದ್ಧವಿದೆ. ಧಾರವಾಡ ಜಿಲ್ಲೆಯ ಪ್ರತಿ ತಾಲೂಕಿನಲ್ಲೂ ಕಂಪನಿಗಳ ಸಾರ್ವಜನಿಕ ಹೊಣೆಗಾರಿಕೆ ನಿಧಿ ಅಡಿ ಕ್ರೀಡಾಂಗಣಗಳನ್ನು ನಿರ್ಮಿಸಲಾಗುವುದು.
    ಕ್ರೀಡೆಗೆ ಹೆಚ್ಚಿನ ಓತ್ತು ನೀಡುವುದರೊಂದಿಗೆ ಮುಂಬರುವ ಓಲಿಂಪಿಕ್‍ನಲ್ಲಿ ಭಾರತದ ಕ್ರೀಡಾಪಟುಗಳು ಎರಡಂಕಿಯನ್ನು ದಾಟಿ ಪದಗಳನ್ನು ಜಯಿಸುವಂತೆ ಪ್ರೋತ್ಸಾಹಿಸಲಾಗುವುದು ಎಂದರು.

    ಕೇಂದ್ರ ರಸ್ತೆ ನಿಧಿ ಅಡಿ ಹುಬ್ಬಳ್ಳಿ ಧಾರವಾಡ ಬಹುತೇಕ ರಸ್ತೆಗಳನ್ನು ದುರಸ್ತಿಗೊಳಿಸಲಾಗಿದೆ. ಪಾಲಿಕೆಯು ಕಸ ಹಾಗೂ ಧೂಳು ಮುಕ್ತ ನಗರವನ್ನಾಗಿಸಲು ಪ್ರಯತ್ನಿಸಬೇಕು. ಬೀದಿ ದೀಪ ಹಾಗೂ ಕುಡಿಯುವ ನೀರಿನ ಸರಬರಾಜಿಗೂ ಒತ್ತು ನೀಡಬೇಕು ಎಂದು ಹೇಳಿದರು.

    ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಮಾತನಾಡಿ, ಮೊದಲ ಹಂತದ ಸ್ಮಾರ್ಟ್ ಸಿಟಿ ಯೋಜನೆಗಳಿಗೆ ಇಂದು ಚಾಲನೆ ನೀಡಲಾಗಿದೆ. ಆದಷ್ಟು ಬೇಗ ಬಿಆರ್‍ಟಿಎಸ್ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು. ಧಾರವಾಡ ಜಿಲ್ಲೆಯಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಿದೆ. ಸ್ಥಗಿತಗೊಂಡಿದ್ದ ಹಲವು ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ನಗರದ ಪ್ರಮುಖ ರಸ್ತೆಗಳನ್ನು ಕಾಂಕ್ರೀಟಿಕರಣಗೊಳಿಸಲಾಗುವುದು. ಫೆಬ್ರವರಿ 14ರಂದು ಉತ್ತರ ಕರ್ನಾಟಕಕ್ಕೆ ಅನುಕೂಲವಾಗುವಂತೆ ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕುರಿತು ಉದ್ಯಮಿಗಳನ್ನು ಆಹ್ವಾನಿಸಲು ಮುಂಬೈಯಲ್ಲಿ ರೋಡ್ ಶೋ ಮಾಡಲಾಗಿದೆ. ಜ.29 ರಂದು ಹೈದರಾಬಾದ್‍ನಲ್ಲೂ ರೋಡ್ ಶೋ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

    ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಸಿ.ಡಬ್ಲ್ಯೂ.ಶಕೀಲ್ ಅಹಮದ್ ಮಾತನಾಡಿ, ಸ್ಮಾರ್ಟ್ ಸಿಟಿಯ 55 ಯೋಜನೆಗಳ ಪೈಕಿ 9 ಯೋಜನೆಗಳು ಪೂರ್ಣಗೊಂಡಿವೆ. 3.3 ಕೋಟಿ ರೂ. ವೆಚ್ಚದಲ್ಲಿ ಈಜುಗೊಳ, 3.6 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್ ಹೆಲ್ತ್, 1.17ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್ ಸ್ಕೂಲ್ ನಿರ್ಮಿಸಲಾಗಿದೆ. 6.08 ಕೋಟಿ ರೂ. ವೆಚ್ಚದಲ್ಲಿ ಬೆಂಗೇರಿ ಹಾಗೂ 2.09 ಕೋಟಿ ರೂ. ವೆಚ್ಚದಲ್ಲಿ ಉಣಕಲ್ ಮಾರುಕಟ್ಟೆಗಳನ್ನು ಬಹುಉಪಯೋಗಿ ಸ್ಥಳಗಳನ್ನಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಇಂದಿರಾ ಗಾಜಿನ ಮನೆ ಆವರಣದಲ್ಲಿ 4.59 ಕೋಟಿ ರೂ. ವೆಚ್ಚದಲ್ಲಿ ಬಹುವಾಹನ ನಿಲುಗಡೆ ಕಾಮಗಾರಿ ಆರಂಭಿಸಲು ಕಾರ್ಯಾದೇಶ ನೀಡಲಾಗಿದೆ. ಇಂದಿರಾಗಾಜಿನ ಮನೆಯಲ್ಲಿ ಪುಟಾಣಿ ರೈಲು ಹಾಗೂ ಸ್ಮಾರ್ಟ್ ಪ್ಯಾಕೇಜ್ 5&6 ಅಡಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು. ಶಾಸಕ ಅರವಿಂದ ಚಂದ್ರಕಾಂತ್ ಬೆಲ್ಲದ್, ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್, ಹು-ಧಾ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್ ಇದ್ದರು.

  • ರಾಹುಲ್ ಗಾಂಧಿ ಅಪಕ್ವ ರಾಜಕಾರಣಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

    ರಾಹುಲ್ ಗಾಂಧಿ ಅಪಕ್ವ ರಾಜಕಾರಣಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

    ರಾಯಚೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಅಪಕ್ವ ರಾಜಕಾರಣಿ ಅವರಿಗೆ ಬುದ್ದಿ ಭ್ರಮಣೆಯಾಗಿದೆ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

    ರಾಯಚೂರಿನ ರಾಘವೇಂದ್ರ ಸ್ವಾಮಿ ಮಠದಲ್ಲಿ ಆಯೋಜಿಸಿರುವ ದಾಸಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ ಬಳಿಕ ಮಾತನಾಡಿದ ಪ್ರಹ್ಲಾದ್ ಜೋಶಿ, ಮೇಕ್ ಇನ್ ಇಂಡಿಯಾವನ್ನ ರಾಹುಲ್ ಗಾಂಧಿ ರೇಪ್ ಇನ್ ಇಂಡಿಯಾ ಅಂತ ಹೋಲಿಸುತ್ತಾರೆ. ಅವರಿಗೆ ಯಾರೋ ಬರೆದು ಕೊಡುತ್ತಾರೆ ಅದನ್ನ ಹೇಳುತ್ತಾರೆ. ಅವರಿಗೆ ಯಾವುದರ ಬಗ್ಗೆಯೂ ಸರಿಯಾದ ಮಾಹಿತಿ ಇಲ್ಲ. ಅವರು ವಿದೇಶಕ್ಕೆ ಹೋಗಿದರಿಂದ ಬುದ್ಧೊ ಭ್ರಮಣೆಯಾಗಿರಬೇಕು ಅಂತ ಪ್ರಹ್ಲಾದ್ ಜೋಶಿ ಲೇವಡಿ ಮಾಡಿದರು.

    ರಾಜ್ಯದಲ್ಲಿ ಉತ್ತಮ ರೀತಿಯಲ್ಲಿ ವಿದ್ಯುತ್ ಉತ್ಪಾದನೆಯಾಗುತ್ತಿದ್ದು, ನಮಗೆ ಕಲ್ಲಿದ್ದಲಿನ ಕೊರತೆಯಿಲ್ಲ. ಆರ್ ಟಿಪಿಎಸ್, ವೈಟಿಪಿಎಸ್ ಗೆ ಕಲ್ಲಿದ್ದಿಲು ನೀಡುವ ವಿಚಾರವಾಗಿ ಮಾತನಾಡಿ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಕೊರತೆ ಇಲ್ಲ, ಪ್ರಧಾನ ಮಂತ್ರಿಗಳು ವಿದ್ಯುತ್ ಗೆ ವಿಶೇಷ ಆದ್ಯತೆ ನೀಡಿದ್ದಾರೆ ಅಂತ ಹೇಳಿದರು.

    ನಾವು ಧಾರವಾಡ ಪೇಡೆ ಹಂಚಿದ್ದು ಬೇರೆ ಕಾರಣಕ್ಕೆ ಆದರೆ ಅದನ್ನು ಸಿಎಬಿಗೆ ಹಂಚಿದ್ದಾರೆ ಎಂದರೆ ತಪ್ಪಿಲ್ಲ ಎಂದರು. ಸಿಎಬಿಯಿಂದ ಅಲ್ಪಸಂಖ್ಯಾತರಿಗೆ ಏನು ತೊಂದರೆಯಾಗುವುದಿಲ್ಲ. ಸಿಎಬಿಯಲ್ಲಿ ನಾಗರಿಕತ್ವ ಕೊಡುವುದಿದೆ ಹೊರತು ಕಸಿದುಕೊಳ್ಳುವುದು ಇಲ್ಲ. ಸಿಎಬಿ ಯಿಂದ ಜನರ ಮಧ್ಯೆ ಬಿರುಕು ತರಲಿದ್ದಾರೆ ಅಂತ ಕೆಲವರು ಮಾತನಾಡುತ್ತಾರೆ. ರಾಷ್ಟ್ರೀಯ ವಿಷಯಕ್ಕೆ ರಾಜಕೀಯ ಮಾಡಲು ಅನಗತ್ಯವಾಗಿ ಗೊಂದಲ ಸೃಷ್ಠಿಸುತ್ತಿದ್ದಾರೆ ಅಂತ ಜೋಶಿ ಬೇಸರ ವ್ಯಕ್ತಪಡಿಸಿದರು.

  • 100 ವರ್ಷಗಳ ಇತಿಹಾಸದ ರೈಲು ಮಾರ್ಗಕ್ಕೆ ಚಾಲನೆ

    100 ವರ್ಷಗಳ ಇತಿಹಾಸದ ರೈಲು ಮಾರ್ಗಕ್ಕೆ ಚಾಲನೆ

    – ಧಾರವಾಡ-ದಾಂಡೇಲಿ ಭಾಗಕ್ಕೆ ಮೊದಲ ಪ್ಯಾಸೆಂಜರ್ ರೈಲು

    ಕಾರವಾರ: ನೂರು ವರ್ಷಗಳ ಇತಿಹಾಸ ಹೊಂದಿರುವ, ಎರಡು ದಶಕಗಳಿಂದ ನಿಂತು ಹೋಗಿದ್ದ ದಾಂಡೇಲಿ-ಅಳ್ನಾವರ-ಧಾರವಾಡ ಪ್ರಯಾಣಿಕರ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಚಾಲನೆ ನೀಡಿದ್ದಾರೆ.

    ದಾಂಡೇಲಿಯ ರೈಲ್ವೆ ನಿಲ್ದಾಣದಲ್ಲಿ ನೈರುತ್ಯ ರೈಲ್ವೆ ಪ್ಯಾಸೆಂಜರ್ ರೈಲು ಉದ್ಘಾಟನೆ ನೆರವೇರಿತು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಆರ್.ವಿ ದೇಶಪಾಂಡೆ, ಕೇಂದ್ರ ಕಲ್ಲಿದ್ದಲು ಮತ್ತು ಗಣಿಗಾರಿಕಾ, ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.

    ವಿಶೇಷ ವೇನು?
    ಅಂಬೇವಾಡಿ-ಅಳ್ನಾವರ ರೈಲ್ವೆ ಮಾರ್ಗವು 100 ವರ್ಷ ಹಳೆಯದಾದ ಇತಿಹಾಸ ಹೊಂದಿದೆ. 1918ರಲ್ಲಿ ಮದ್ರಾಸ್ ಮತ್ತು ಸರ್ದನ್ ಮರಾಠ (ಮಹಾರಾಷ್ಟ್ರ) ರೈಲ್ವೆಯಿಂದ ರೈಲು ಸಂಚಾರ ನಡೆಯುತ್ತಿತ್ತು. ಈ ಮಾರ್ಗವು ಬೆಳಗಾವಿ-ಹುಬ್ಬಳ್ಳಿ ಮುಖ್ಯ ಮಾರ್ಗವನ್ನು ಸಂಪರ್ಕಿಸುತಿತ್ತು. ಅರಣ್ಯ ಉತ್ಪನ್ನಗಳನ್ನು ವಿಶೇಷವಾಗಿ ಮೊದಲ ಮಹಾ ಯುದ್ಧದ ಸಮಯದಲ್ಲಿ ಮರಮುಟ್ಟುಗಳನ್ನು ಸಾಗಿಸಲು ರೈಲು ಮಾರ್ಗವನ್ನು ಬಳಕೆಯಾಗುತಿತ್ತು.

    1994ರಲ್ಲಿ ಅಂಬೇವಾಡಿ-ಅಳ್ನಾವರ ರೈಲ್ವೆ ಮಾರ್ಗವನ್ನು ಮೀಟರ್ ಗೇಜ್‌ನಿಂದ ಬ್ರಾಡ್ ಗೇಜ್‌ಗೆ ಪರಿವರ್ತಿಸಿ ರೈಲ್ವೆ ಸೇವೆಯನ್ನು ನಿಲ್ಲಿಸಲಾಗಿತ್ತು. 1995ರಲ್ಲಿ ಅಳ್ನಾವರದಿಂದ ಅಂಬೆವಾಡಿಗೆ ಏಕಮುಖ ಸಂಚಾರವನ್ನು ಪ್ರಾರಂಭಿಸಲಾಗಿತ್ತು. ಆದರೆ ದಾಂಡೇಲಿವರೆಗೆ ರೈಲು ಸಂಚಾರ ಪ್ರಾರಂಭಿಸಬೇಕು. ನಮ್ಮ ಭಾಗಕ್ಕೂ ಪ್ಯಾಸೆಂಜರ್ ರೈಲು ಬೇಕು ಎಂದು ದಾಂಡೇಲಿ ಭಾಗದ ಜನರು ಒಂದು ದಶಕದಿಂದ ಹೋರಾಟ ನಡೆಸಿದ್ದರು. ಮಾಜಿ ಸಚಿವ ಆರ್.ವಿ ದೇಶಪಾಂಡೆ ಅವರು ಕೂಡ ಈ ಕುರಿತು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ಜೊತೆಗೆ ಮಾತನಾಡಿ, ಮನವಿ ಸಲ್ಲಿಸಿದ್ದರು. ಆಗ ಸಚಿವರು ಅನುಮತಿ ನೀಡಿದ್ದರಿಂದ ಒಂದು ವರ್ಷದಲ್ಲಿ ಸಂವಹನ ಸಂಕೇತಗಳನ್ನು ಅಳವಡಿಸಿದ ನೈರುತ್ಯ ರೈಲ್ವೆ ವಿಭಾಗವು ಇಂದು ರೈಲಿಗೆ ಚಾಲನೆ ನೀಡಿದೆ.

    ಈ ಭಾಗದಲ್ಲಿ ರೈಲು ಮಾರ್ಗ ಪ್ರಾರಂಭವಾಗಿದ್ದರಿಂದ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಹಾಗೂ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಅತಿ ಕಡಿಮೆ ದರದಲ್ಲಿ ಪ್ರವಾಸಿಗರು ದಾಂಡೇಲಿ ಭಾಗಕ್ಕೆ ಬರಬಹುದಾಗಿದೆ.

    ವೇಳಾಪಟ್ಟಿ:
    ಧಾರವಾಡ-ದಾಂಡೇಲಿ ರೈಲು ಸೋಮವಾರದಿಂದ ಆರಂಭವಾಗಲಿದೆ. ಈ ಮೂಲಕ ಪ್ರತಿದಿನ 11.30ಕ್ಕೆ ಧಾರವಾಡದಿಂದ ಹೊರಟು ಮಧ್ಯಾಹ್ನ 1.00 ಗಂಟೆಗೆ ದಾಂಡೇಲಿ ತಲುಪಲಿದೆ. ಬಳಿಕ ಮಧ್ಯಾಹ್ನ 3 ಗಂಟೆಗೆ ದಾಂಡೇಲಿಯಿಂದ ಮರಳಿ ಮಧ್ಯಾಹ್ನ 4.40ಕ್ಕೆ ಧಾರವಾಡ ತಲುಪಲಿದೆ. ಅಳ್ನಾವರ, ಕುಂಬಾರಗಣವಿ, ಮುಗದ, ಕ್ಯಾರಕೊಪ್ಪ ನಿಲ್ದಾಣದಲ್ಲಿ ರೈಲು ನಿಲುಗಡೆ ಆಗಲಿದೆ.

  • ಸಿದ್ದರಾಮಯ್ಯನವರಿಗೆ ಗಟ್ಸ್ ಇದ್ರೆ ಅಂಬೇಡ್ಕರ್‌ಗೆ ಮೊದಲೇ ಭಾರತರತ್ನ ಕೊಡಿ ಎನ್ನಬೇಕಿತ್ತು-ಜೋಶಿ

    ಸಿದ್ದರಾಮಯ್ಯನವರಿಗೆ ಗಟ್ಸ್ ಇದ್ರೆ ಅಂಬೇಡ್ಕರ್‌ಗೆ ಮೊದಲೇ ಭಾರತರತ್ನ ಕೊಡಿ ಎನ್ನಬೇಕಿತ್ತು-ಜೋಶಿ

    ಧಾರವಾಡ: ಮಾಜಿ ಸಿಎಂ ಸಿದ್ದರಾಮಯ್ಯನವರು ವೀರಸಾರ್ವಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರಿಗೆ ಗಟ್ಸ್ ಇದ್ದರೆ ಅಂಬೇಡ್ಕರ್‌ಗೆ ಮೊದಲೇ ಭಾರತರತ್ನ ಕೊಡಿ ಎಂದು ಕೇಳಬೇಕಿತ್ತು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ.

    ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬೇಡ್ಕರ್ ಅವರಿಗೆ ಮೊದಲು ಭಾರತರತ್ನ ನೀಡದೇ ರಾಜೀವಗಾಂಧಿಯವರಿಗೆ ಕೊಡಲಾಯಿತು. ಅವರ ರಾಹುಲ್ ಗಾಂಧಿಯವರ ತಾತ, ತಾಯಿ ಪ್ರಧಾನಿಯಾಗಿದ್ದಕ್ಕೆ ಅವರಿಗೆ ಪ್ರಧಾನಿ ಸ್ಥಾನ ಬಳುವಳಿಯಾಗಿ ಕೊಡಲಾಯಿತು. ಆದರೆ ಸಂವಿಧಾನ ಬರೆದಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತರತ್ನ ಕೊಡಲಿಲ್ಲ ಎಂದು ಹರಿಹಾಯ್ದರು.

    ದೇಶಕಂಡ ಅಪ್ರತಿಮ ವೀರಸಾರ್ವಕರ್ ಅವರ ಬಗ್ಗೆ ಅಪಮಾನ ಮಾಡುವುದು ಸರಿಯಲ್ಲ. ಸಿದ್ದರಾಮಯ್ಯ ಅವರ ಈ ನಡೆಯನ್ನು ನಾನು ಖಂಡಿಸುತ್ತೇನೆ. ಸಿದ್ದರಾಮಯ್ಯ ಅವರು ಮೊದಲು ಇತಿಹಾಸವನ್ನು ಸರಿಯಾಗಿ ಓದಿಕೊಂಡು ಮಾತನಾಡಲಿ. ಇನ್ನು ಮುಂದೆ ದಾವುದ್ ಇಬ್ರಾಹಿಂಗೂ ಕಾಂಗ್ರೆಸ್ ನವರು ಭಾರತ ರತ್ನ ಕೊಡಲಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವ್ಯಂಗ್ಯಮಾಡಿದರು.

    ಬೆಂಗಳೂರಿನಲ್ಲಿ ಮಹದಾಯಿ ಹೋರಾಟಗಾರರ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಜೋಶಿ, ಪ್ರತಿಭಟನೆಗೆ ಕುಳಿತಿರುವುದು ಗಮನಕ್ಕೆ ಇಲ್ಲ. ಮಹದಾಯಿ ಇತ್ಯರ್ಥಕ್ಕೆ ನಮ್ಮ ಕಡೆಯಿಂದ ನಾವು ಪ್ರಯತ್ನ ಮಾಡುತ್ತಿದ್ದೇವೆ. ಆದಷ್ಟು ಶೀಘ್ರ ಈ ವಿಚಾರ ಇತ್ಯರ್ಥಗೊಳ್ಳಲಿದೆ ಎಂದರು.

  • ಡಿಕೆಶಿ ತಪ್ಪು ಮಾಡದಿದ್ರೆ ಇಡಿ ವಶಕ್ಕೆ ಹೋಗ್ತಿರಲಿಲ್ಲ: ಪ್ರಹ್ಲಾದ್ ಜೋಶಿ

    ಡಿಕೆಶಿ ತಪ್ಪು ಮಾಡದಿದ್ರೆ ಇಡಿ ವಶಕ್ಕೆ ಹೋಗ್ತಿರಲಿಲ್ಲ: ಪ್ರಹ್ಲಾದ್ ಜೋಶಿ

    -ಕಣ್ಣೀರಿನಿಂದ ಅನುಕಂಪ ಗಿಟ್ಟಲ್ಲ

    ಬೆಂಗಳೂರು: ಕಾಂಗ್ರೆಸ್ ನಾಯಕರ ಆರೋಪಗಳೆಲ್ಲ ಸುಳ್ಳು. ನ್ಯಾಯಾಲಯ ಎಂದೂ ತಪ್ಪು ಮಾಡಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ‘ಕೈ’ ನಾಯಕರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

    ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವರು, ಡಿ.ಕೆ.ಶಿವಕುಮಾರ್ ಮತ್ತು ಚಿದಂಬರಂ ಅವರ ಬಂಧನಕ್ಕೆ ಬಿಜೆಪಿ ಕಾರಣ ಎಂಬ ಕಾಂಗ್ರೆಸ್ ಆರೋಪ ಸುಳ್ಳು. ಇಬ್ಬರ ಪರವಾಗಿ ಮಂಡಿಸಿದ್ದ ವಾದಗಳನ್ನು ನ್ಯಾಯಾಲಯ ಮಾನ್ಯ ಮಾಡಿಲ್ಲ. ಅವರು ಮಂಡಿಸಿದ್ದ ವಾದಗಳಲ್ಲಿ ಒಂದಾದರೂ ಅಂಶ ಸತ್ಯವಾಗಿದ್ದರೆ ನ್ಯಾಯಾಲಯ ಒಪ್ಪಿಕೊಳ್ಳುತ್ತಿತ್ತು. ಇಬ್ಬರು ತಪ್ಪು ಮಾಡಿಲ್ಲ ಅಂದ್ರೆ ಇಂದು ನ್ಯಾಯಾಂಗ ಮತ್ತು ಇಡಿ ಬಂಧನದಲ್ಲಿ ಇರುತ್ತಿರಲಿಲ್ಲ. ತಮ್ಮ ತಪ್ಪು ಮತ್ತು ಅಪರಾಧಗಳಿಂದಾಗಿ ಬಂಧನದಲ್ಲಿದ್ದಾರೆ ಎಂದು ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದರು.

    ಇಬ್ಬರ ಬಂಧನಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಡಿ.ಕೆ.ಶಿವಕುಮಾರ್ ಮತ್ತು ಚಿದಂಬರಂ ಏನೆಲ್ಲ ಮಾಡಿದ್ದಾರೆ ಎಂಬ ವಿಷಯ ಜನತೆಗೆ ಗೊತ್ತಿದೆ. ಜೈಲಿಗೆ ಹೋದರೆ ಅನುಕಂಪ ಸಿಗುತ್ತೆ ಎಂದು ಈ ರೀತಿ ಮಾಡುತ್ತಿದ್ದಾರೆ. ಜೈಲಿನಿಂದ ಹೊರ ಬಂದರೆ ಅನುಕಂಪ ಸಿಗಲಿದೆ ಎಂಬುವುದು ಸುಳ್ಳು ಎಂದು ಪ್ರಹ್ಲಾದ್ ಜೋಶಿ ಕಿಡಿಕಾರಿದರು.

    ಸಸಿಕಾಂತ್ ಸೆಂಥಿಲ್ ವಿಷಯವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವರು, ಜಿಲ್ಲಾಧಿಕಾರಿಗಳು ಯಾವ ವಿಷಯಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ವಿಚಾರ ನನಗೆ ಗೊತ್ತಿಲ್ಲ. ದೇಶದಲ್ಲಿ ಪ್ರಜಾಪ್ರಭುತ್ವ ಇರೋದರಿಂದ ಸೆಂಥಿಲ್ ಅವರು ಐಎಎಸ್ ಅಧಿಕಾರಿಯಾಗಿದ್ದಾರೆ. ತಪ್ಪುಗಳನ್ನು ಸರಿಪಡಿಸುವ ಬದಲಾಗಿ ಓಡಿ ಹೋದರೆ ಪರಿಹಾರ ಸಿಗಲ್ಲ ಎಂದರು.

  • ಸತ್ಯ ಒಂದಲ್ಲೊಂದು ದಿನ ಹೊರಗೆ ಬರುತ್ತೆ ಅನ್ನೋದಕ್ಕೆ ಎಚ್‍ಡಿಡಿ ಹೇಳಿಕೆಯೇ ಉದಾಹರಣೆ- ಪ್ರಹ್ಲಾದ್ ಜೋಷಿ

    ಸತ್ಯ ಒಂದಲ್ಲೊಂದು ದಿನ ಹೊರಗೆ ಬರುತ್ತೆ ಅನ್ನೋದಕ್ಕೆ ಎಚ್‍ಡಿಡಿ ಹೇಳಿಕೆಯೇ ಉದಾಹರಣೆ- ಪ್ರಹ್ಲಾದ್ ಜೋಷಿ

    ಹುಬ್ಬಳ್ಳಿ: ಸತ್ಯ ಒಂದಲ್ಲ ಒಂದಿನ ಹೊರಗೆ ಬರುತ್ತದೆ ಅನ್ನೋದಕ್ಕೆ ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರ ಹೇಳಿಕೆಯೇ ಉದಾಹರಣೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮೈತ್ರಿ ಸರ್ಕಾರದ ಪತನ ಕುರಿತು ದೇವೇಗೌಡ ಹೇಳಿಕೆ ಸಂಬಂಧ ಪ್ರತಿಕ್ರಿಯಿಸಿ, ಮೈತ್ರಿ ಸರ್ಕಾರದ ಒಳ ಜಗಳದಿಂದಾಗಿ ಸರ್ಕಾರ ಪತನಗೊಂಡಿದೆ. ಈ ಬಗ್ಗೆ ಈ ಹಿಂದೆಯೇ ನಾನು ಹೇಳಿದ್ದೆ. ಬಿಜೆಪಿಯವರೇ ಮೈತ್ರಿ ಸರ್ಕಾರ ಉರುಳಿಸುತ್ತಿದ್ದಾರೆ ಎಂದು ಜನರ ಮುಂದೆ ಬಿಂಬಿಸಿದ್ದರು. ಆದರೆ ಸತ್ಯ ಒಂದಿಲ್ಲ ಒಂದಿನ ಹೊರಬರುತ್ತದೆ ಅನ್ನೋದಕ್ಕೆ ದೇವೇಗೌಡರು ಹೇಳಿಕೆನೇ ಉದಾಹರಣೆ ಎಂದು ತಿಳಿಸಿದರು.

    ಅಧಿಕಾರದ ವ್ಯಾಮೋಹದಿಂದ ಮೈತ್ರಿ ಸರ್ಕಾರ ರಚನೆ ಮಾಡಿದರು. ಆದರೆ ತಮ್ಮ ಒಳ ಬೇಗುದಿಯಿಂದಾಗಿ ಮೈತ್ರಿ ಸರ್ಕಾರ ಅಧೋಗತಿಗೆ ಬಂತು. ಕಾಂಗ್ರೆಸ್ ಪಕ್ಷ ದೇಶದಲ್ಲೇ ಬೌದ್ಧಿಕ ದಿವಾಳಿಕೋರತನಕ್ಕೆ ಸಾಕ್ಷಿಯಾಗಿದೆ. ಪಿ ಚಿದಂಬರಂ ಅವರು ನೆಲದ ಕಾನೂನಿಗೆ ಬೆಲೆ ಇಲ್ಲದಂತೆ ನಡೆದುಕೊಂಡಿದ್ದಾರೆ. ರಾಜ್ಯ ಹಾಗೂ ದೇಶದಲ್ಲಿ ಕಾಂಗ್ರೆಸ್ ಅಧೋಗತಿಗೆ ತೆರಳಿದೆ. ಕಾಂಗ್ರೆಸ್ ನವರಿಗೆ ಯಾವುದನ್ನ ವಿರೋಧ ಮಾಡಬೇಕು ಎಂಬುದು ತಿಳಿದಿಲ್ಲ ಎಂದು ಗರಂ ಆದರು.

    ಸಚಿವಾಕಾಂಕ್ಷಿಗಳಲ್ಲಿ ಅಸಮಾಧಾನ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಸಮಾಧಾನಗೊಂಡವರನ್ನ ಸಮಾಧಾನ ಪಡಿಸುವಂತಹ ಕೆಲಸ ನಡೆದಿದೆ. ರಾಜ್ಯದಲ್ಲಿ ಬಿಜೆಪಿ ಉತ್ತಮ ಆಡಳಿತವನ್ನ ನೀಡಲಿದೆ. ಸರ್ಕಾರ ನಾಲ್ಕು ವರ್ಷ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಇದೇ ವೇಳೆ ಉಮೆಶ್ ಕತ್ತಿ ಜೆಡಿಎಸ್‍ನವರ ಸಂಪರ್ಕದಲ್ಲಿದ್ದಾರೆ ಎಂಬ ವಿಚಾರದ ಕುರಿತು ಮಾತನಾಡಿದ ಜೋಷಿ, ಅದೆಲ್ಲ ಶುದ್ಧ ಸುಳ್ಳು ವಿಚಾರ. ಜೆಡಿಎಸ್ ಹಾಗೂ ಕಾಂಗ್ರೆಸ್ ಮುಳುಗುತ್ತಿರುವ ಹಡಗುಗಳು. ಮುಳುಗುತ್ತಿರುವ ಹಡಗಿನಲ್ಲಿ ಯಾರೂ ಪ್ರಾಣ ಕಳೆದುಕೊಳ್ಳುವುದಿಲ್ಲ. ನೆರೆ ಪರಿಹಾರಕ್ಕೆ ಈಗಾಗಲೇ ಕೇಂದ್ರದಿಂದ ಹಣ ಬಿಡುಗಡೆಯಾಗಿದೆ. ಇನ್ನೂ ಹೆಚ್ಚಿನ ಹಣ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

    ಮಹೇಶ್ ಕುಮಟಳ್ಳಿ ಅವರನ್ನೂ ನಾವು ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರ ನಡೆಸಲಿದ್ದೇವೆ. ಸಚಿವ ಸಂಪುಟ ವಿಸ್ತರಣೆಯಾಗಿದೆ ಆದಷ್ಟು ಬೇಗ ಖಾತೆ ಹಂಚಿಕೆಯಾಗುತ್ತದೆ. ಅನರ್ಹ ಶಾಕಸರೆಲ್ಲರೂ ಅರ್ಹ ಶಾಸಕರಾಗುತ್ತಾರೆ. ಸುಪ್ರೀಂಕೋರ್ಟಿನಲ್ಲಿ ಅವರಿಗೆ ಜಯ ಸಿಗುತ್ತದೆ ಎಂದರು.

  • ನೆರೆ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಬೇಕಿದ್ದ ಸಚಿವ ಜೋಶಿ ಗೈರು

    ನೆರೆ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಬೇಕಿದ್ದ ಸಚಿವ ಜೋಶಿ ಗೈರು

    ನವದೆಹಲಿ: ರಾಜ್ಯದಲ್ಲಾಗಿರುವ ಪ್ರವಾಹದಿಂದಾಗಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ ಭಾರೀ ಕುತೂಹಲ ಮೂಡಿಸಿತ್ತು. ಆದರೆ, ಈ ಕುರಿತು ಮಾತನಾಡಬೇಕಿದ್ದ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರೇ ಸಂಪುಟ ಸಭೆಗೆ ಗೈರಾಗಿದ್ದರು.

    ಸಭೆಯಲ್ಲಿ ರಾಜ್ಯದಿಂದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಭಾಗವಹಿಸಿದ್ದು, ಸಂಪುಟ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮನವೊಲಿಸಬೇಕಿದ್ದ ಸಚಿವರು ಪರಿಸ್ಥಿತಿಯನ್ನು ಅರ್ಥ ಮಾಡಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಉಂಟಾಗಿರುವ ಪ್ರವಾಹದ ಕುರಿತು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ರೀತಿಯ ನಿರ್ಣಯವನ್ನು ಕೈಗೊಂಡಿಲ್ಲ. ವಾಸ್ತವ ಅರ್ಥ ಮಾಡಿಸದ ಹಿನ್ನೆಲೆ ನೆರೆ ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಿಸಿಲ್ಲ ಎಂದು ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

    ಫನಿ ಚಂಡಮಾರುತದ ವೇಳೆ ಚೆನ್ನೈ ಮತ್ತು ಒಡಿಶಾದಲ್ಲಿ ಪ್ರವಾಹ ಸಂಭವಿಸಿದಾಗ ಸ್ವತಃ ಪ್ರಧಾನಿ ನರೇಂದ್ರ ಮೋದಿ ವೈಮಾನಿಕ ಸಮಿಕ್ಷೆ ನಡೆಸಿದ್ದರು. ಸಮೀಕ್ಷೆ ಬಳಿಕ ಅಧಿಕಾರಗಳಸಭೆ ನಡೆಸಿ ಒಡಿಶಾ ಮತ್ತು ಚೆನ್ನೈಗೆ ಸಾವಿರ ಕೋಟಿ ರೂ. ತುರ್ತಾಗಿ ಬಿಡುಗಡೆ ಮಾಡಿದ್ದರು. ಈ ಬಾರಿ ರಾಜ್ಯದ ನಾಯಕರು ಒತ್ತಡ ಹಾಕದ ಕಾರಣ ಪ್ರಧಾನಿ ನರೇಂದ್ರ ಮೋದಿ ಇನ್ನೂ ವೈಮಾನಿಕ ಸಮೀಕ್ಷೆ ನಡೆಸಿಲ್ಲ. ಹೀಗಾಗಿ ಅಮಿತ್ ಶಾ ಕಳುಹಿಸಿ ಸುಮ್ಮನಾಗಿದ್ದಾರೆ. ಕೇಂದ್ರ ಸಚಿವರು ಈ ಕುರಿತು ಗಮನ ಸೆಳೆಯಬೇಕಿತ್ತು ಎಂದು ವಿರೋಧ ಪಕ್ಷಗಳು ಕಿಡಿ ಕಾರಿವೆ.