Tag: ಪ್ರಹ್ಲಾದ ಜೋಶಿ

  • ನಾಳೆ ಇ-ಕಾಮರ್ಸ್‌ಗಳೊಂದಿಗೆ ಪ್ರಹ್ಲಾದ ಜೋಶಿ ಉನ್ನತ ಮಟ್ಟದ ಸಭೆ

    ನಾಳೆ ಇ-ಕಾಮರ್ಸ್‌ಗಳೊಂದಿಗೆ ಪ್ರಹ್ಲಾದ ಜೋಶಿ ಉನ್ನತ ಮಟ್ಟದ ಸಭೆ

    – ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಜೋಶಿ ಮಾಹಿತಿ
    – ಡಿಜಿಟಲ್ ವಹಿವಾಟಿನಲ್ಲಿ ಪ್ರಮುಖ 13 ಡಾರ್ಕ್ ಪ್ಯಾಟರ್ನ್‌ಗಳ ಗುರುತು
    -ಪಾರದರ್ಶಕತೆ, ಪರಿಹಾರ ಕ್ರಮಗಳ ಕುರಿತು ಮಹತ್ವದ ಸಮಾಲೋಚನೆ

    ನವದೆಹಲಿ: ಇ-ಕಾಮರ್ಸ್ ವೇದಿಕೆಗಳಲ್ಲಿ ಗ್ರಾಹಕರ ಮೇಲೆ ನಕಾರಾತ್ಮಕ ಪರಿಣಾಮ ಬೀರುವಂತಹ ಪ್ರಮುಖ 13 ಕರಾಳ ಮಾದರಿ (Dark Pattern)ಗಳನ್ನು ಗುರುತಿಸಿದ್ದು, ಈ ಕುರಿತು ಪರಿಹಾರ ಕ್ರಮಕ್ಕಾಗಿ ಚರ್ಚಿಸಲು ದೆಹಲಿಯಲ್ಲಿ ಮೇ 28ರಂದು ಉನ್ನತ ಮಟ್ಟದ ಸಭೆ ಕರೆಯಲಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ (Prahlad Joshi) ತಿಳಿಸಿದರು.

    ಇ-ಕಾಮರ್ಸ್ ವೇದಿಕೆಗಳಲ್ಲಿನ ವ್ಯಾಪಾರ-ವಹಿವಾಟುಗಳ ಬಗ್ಗೆ ವಿವಿಧ ರೀತಿಯ ದೂರುಗಳು ಬರುತ್ತಿವೆ. ಕೆಲವೊಂದು ಕರಾಳ ಮಾದರಿ(ಡಾರ್ಕ್ ಪ್ಯಾಟರ್ನ್)ಗಳ ಬಗ್ಗೆ ಗ್ರಾಹಕರಲ್ಲಿ ತೀವ್ರ ಅಸಮಾಧಾನ ಮೂಡಿದೆ. ಹಾಗಾಗಿ ಗ್ರಾಹಕರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಅಂಶಗಳ ಕುರಿತು ಚರ್ಚಿಸಿ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದರು.ಇದನ್ನೂ ಓದಿ: ಸದ್ಯ ಶಾಲೆಗಳಿಗೆ ಯಾವುದೇ ಕೊರೊನಾ ಮಾರ್ಗಸೂಚಿ ಇಲ್ಲ: ಮಧು ಬಂಗಾರಪ್ಪ

    ಆಹಾರ, ಪ್ರಯಾಣ, ಸೌಂದರ್ಯ ವರ್ಧಕಗಳು, ಔಷಧಾಲಯ, ಚಿಲ್ಲರೆ ವ್ಯಾಪಾರ, ಬಟ್ಟೆ ಮತ್ತು ಎಲೆಕ್ಟ್ರಾನಿಕ್ಸ್ ವಲಯಗಳಲ್ಲಿನ ಪ್ರಮುಖ ಇ-ಕಾಮರ್ಸ್ ವೇದಿಕೆಗಳ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಮೆಜಾನ್, ಫ್ಲಿಪ್‌ಕಾರ್ಟ್, 1mg.com, ಆ್ಯಪಲ್, ಬಿಗ್‌ಬಾಸ್ಕೆಟ್, ಮಿಶೋ, ಮೆಟಾ, ಮೇಕ್ ಮೈಟ್ರಿಪ್, ಪೇಟಿಎಂ, ಓಲಾ, ರಿಲಯನ್ಸ್ ರಿಟೇಲ್ ಲಿಮಿಟೆಡ್, ಸ್ವಿಗ್ಗಿ, ಜೊಮಾಟೊ, ಯಾತ್ರಾ, ಉಬರ್, ಟಾಟಾ, ಈಸ್‌ಮೈಟ್ರಿಪ್, ಕ್ಲಿಯರ್ ಟ್ರಿಪ್, ಇಂಡಿಯಾ ಮಾರ್ಟ್, ಇಂಡಿಗೊ ಏರ್‌ಲೈನ್ಸ್, ಕ್ಸಿಗೊ, ಜಸ್ಟ್ ಡಯಲ್, ಮೆಡಿಕಾ ಬಜಾರ್, ನೆಟ್‌ಮೆಡ್ಸ್, ಒಎನ್‌ಡಿಸಿ, ಥಾಮಸ್ ಕುಕ್ ಮತ್ತು ವಾಟ್ಸಾಪ್ ಗ್ರಾಹಕರ ಹಕ್ಕುಗಳ ರಕ್ಷಣೆ, ವ್ಯಾಪಾರದಲ್ಲಿ ಪಾರದರ್ಶಕತೆ, ವಿಶ್ವಾಸಾರ್ಹ ಮಾರುಕಟ್ಟೆ ಬಗ್ಗೆ ಮಹತ್ವದ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಿದರು.

    ಪ್ರಮುಖ ಕೈಗಾರಿಕಾ ಸಂಸ್ಥೆಗಳು, ಸ್ವಯಂ ಸೇವಾ ಗ್ರಾಹಕ ಸಂಸ್ಥೆಗಳು, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು ಸಹ ಈ ಉನ್ನತ ಮಟ್ಟದ ಸಭೆಯಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದು, ಪಾರದರ್ಶಕ ವಹಿವಾಟು ಹಾಗೂ ಕರಾಳ ಮಾದರಿಗಳ ಬಗ್ಗೆ ಗ್ರಾಹಕರಲ್ಲಿರುವ ಕಳವಳ ನಿವಾರಣೆ, ಸಂಶೋಧನೆ, ನಿಯಂತ್ರಣ ಮತ್ತು ಪರಿಹಾರ ಕ್ರಮ ರೂಪಿಸುವ ನಿಟ್ಟಿನಲ್ಲಿ ಅಮೂಲ್ಯ ಸಲಹೆ, ಮಾರ್ಗದರ್ಶನ ನೀಡಲಿವೆ ಎಂದು ಮಾಹಿತಿ ನೀಡಿದರು.

    ಇ-ಕಾಮರ್ಸ್ ಸಂಸ್ಥೆಗಳಲ್ಲಿ ಗ್ರಾಹಕರ ದಾರಿ ತಪ್ಪಿಸುವ ಹಾಗೂ ಅನಪೇಕ್ಷಿತ ಆಯ್ಕೆಗಳನ್ನು ಮಾಡುವಂತೆ ಸೆಳೆಯುವ `ಡಾರ್ಕ್ ಪ್ಯಾಟರ್ನ್’ಗಳ ಅನ್ಯಾಯದ ವ್ಯಾಪಾರ ಪದ್ಧತಿಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಕೇಂದ್ರ ಗ್ರಾಹಕ ಇಲಾಖೆ ತ್ವರಿತ ಮತ್ತು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ. ಡಾರ್ಕ್ ಪ್ಯಾಟರ್ಸ್‌ಗಳನ್ನು ಎದುರಿಸಲು ಇಲಾಖೆ ಅನೇಕ ಮಹತ್ವದ ಕ್ರಮಗಳನ್ನು ಕೈಗೊಂಡಿದೆ ಎಂದರು.

    ಕೇಂದ್ರ ಗ್ರಾಹಕ ಇಲಾಖೆ 2023ರ ನ.30ರಂದು ಡಾರ್ಕ್ ಪ್ಯಾಟರ್ನ್ಗಳ ತಡೆಗಟ್ಟುವಿಕೆ ಕುರಿತು ಸಮಗ್ರ ಮಾರ್ಗಸೂಚಿ ಹೊರಡಿಸಿದೆ. ಇ-ಕಾಮರ್ಸ್ ವೇದಿಕೆಗಳಲ್ಲಿ ಪ್ರಮುಖವಾಗಿ 13 ವಿಧದ ಡಾರ್ಕ್ ಪ್ಯಾಟರ್ನ್ಗಳನ್ನು ಗುರುತಿಸಿದ್ದು, ಫಾಲ್ಸ್ ಅರ್ಜೆನ್ಸಿ, ಬಾಸ್ಕೆಟ್ ಸ್ನೀಕಿಂಗ್, ಕನ್ಫರ್ಮ್ ಶೇಮಿಂಗ್, ಫೋರ್ಸ್ಡ್ ಆಕ್ಷನ್, ಸಬ್‌ಸ್ಕ್ರಿಪ್ಷನ್ ಟ್ರಾಪ್, ಇಂಟರ್‌ಫೇಸ್ ಹಸ್ತಕ್ಷೇಪ, ಬೈಟ್ ಮತ್ತು ಸ್ವಿಚ್, ಡ್ರಿಪ್ ಪ್ರೈಸಿಂಗ್, ಡಿಸ್ಗೈಸ್ಡ್ ಜಾಹೀರಾತು, ನಗ್ಗಿಂಗ್, ಟ್ರಿಕ್ ಪ್ರಶ್ನೆ, ಸಾಸ್ ಬಿಲ್ಲಿಂಗ್ ಮತ್ತು ರೋಗ್ ಮಾಲ್‌ವೇರ್‌ಗಳು ಒಳಗೊಂಡಿವೆ. ಈ ಎಲ್ಲವೂಗಳ ಬಗ್ಗೆಯೂ ಉನ್ನತ ಮಟ್ಟದ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿ, ಅಭಿಪ್ರಾಯ ಸಂಗ್ರಹಿಸಿ ಮತ್ತಷ್ಟು ಕಟ್ಟುನಿಟ್ಟಿನ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.ಇದನ್ನೂ ಓದಿ: ಪ್ರಶಾಂತ್ ನೀಲ್, ಜ್ಯೂ.ಎನ್‌ಟಿಆರ್ ಸಿನಿಮಾದಲ್ಲಿ ರಶ್ಮಿಕಾ ಐಟಂ ಡ್ಯಾನ್ಸ್?

  • ಭಾರತ ಒಬ್ಬ ದೂರದೃಷ್ಟಿ ನಾಯಕನನ್ನು ಕಳೆದುಕೊಂಡಿದೆ – ಪ್ರಹ್ಲಾದ್ ಜೋಶಿ ಸಂತಾಪ

    ಭಾರತ ಒಬ್ಬ ದೂರದೃಷ್ಟಿ ನಾಯಕನನ್ನು ಕಳೆದುಕೊಂಡಿದೆ – ಪ್ರಹ್ಲಾದ್ ಜೋಶಿ ಸಂತಾಪ

    ನವದೆಹಲಿ: ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ (SM Krishna) ಅವರ ನಿಧನದಿಂದ ಭಾರತ ಒಬ್ಬ ದಿಟ್ಟ ಮತ್ತು ದೂರದೃಷ್ಟಿ ನಾಯಕನನ್ನು ಕಳೆದುಕೊಂಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ (Prahlad Joshi) ಸಂತಾಪ ಸೂಚಿಸಿದರು.

    ನವದೆಹಲಿಯಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೃಷ್ಣ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದರು. ಎಸ್.ಎಂ.ಕೃಷ್ಣ ಅವರು ಬ್ರ‍್ಯಾಂಡ್ ಬೆಂಗಳೂರಿನ ರೂವಾರಿ. ಬೆಂಗಳೂರಿಗೆ ಜಾಗತಿಕ ಗುರುತು ನೀಡಿದವರೆ ಇವರು. ಕೃಷ್ಣ ಅವರ ನಿಧನದಿಂದ ಕರ್ನಾಟಕ ಮಾತ್ರವಲ್ಲ ಇಡೀ ರಾಷ್ಟ್ರಕ್ಕೇ ತುಂಬಲಾರದ ನಷ್ಟವಾಗಿದೆ ಎಂದು ಸ್ಮರಿಸಿದರು.ಇದನ್ನೂ ಓದಿ: ಎಸ್‌.ಎಂ ಕೃಷ್ಣ ನಿಧನಕ್ಕೆ ಆರ್‌ಎಸ್‌ಎಸ್ ಸಂತಾಪ

    ಸೌಜನ್ಯ – ಸೌಹಾರ್ದ ರಾಜಕಾರಣಿ:
    ಎಸ್.ಎಂ.ಕೃಷ್ಣ ಅವರು ಒಬ್ಬ ಅನುಭವಿ, ಸೌಮ್ಯ ಮತ್ತು ಸೇವಾ ಸಮರ್ಪಿತ ರಾಜಕಾರಣಿ. ಕೇಂದ್ರದಲ್ಲಿ ವಾಜಪೇಯಿ ಸರ್ಕಾರ ಇದ್ದಾಗ ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಸಿಎಂ ಆಗಿದ್ದರೂ ಕೇಂದ್ರದೊಂದಿಗೆ ಸೌಜನ್ಯ, ಸೌಹಾರ್ದದಿಂದ ನಡೆದುಕೊಂಡಂತಹ ಸೌಮ್ಯ ರಾಜಕಾರಣಿಯಾಗಿದ್ದವರು. ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ, ದೇಶದ ವಿದೇಶಾಂಗ ಮಂತ್ರಿ, ರಾಜ್ಯಪಾಲ ಹೀಗೆ ವಿವಿಧ ಪ್ರಮುಖ ಹುದ್ದೆಗಳನ್ನು ಅಲಂಕರಿಸಿ ದೇಶ ಮತ್ತು ರಾಜ್ಯದ ಪ್ರಗತಿಗೆ ಅನುಪಮ ಸೇವೆ ಸಲ್ಲಿಸಿದ್ದಾರೆ ಎಂದರು.

    ಎಸ್.ಎಂ.ಕೃಷ್ಣ ಅವರಂಥ ಒಬ್ಬ ಒಳ್ಳೆಯ ರಾಜಕೀಯ ಮುತ್ಸದ್ಧಿ, ದಿಗ್ಗಜರನ್ನು ಕಳೆದುಕೊಂಡಿರುವುದು ನಿಜಕ್ಕೂ ದುಃಖಕರ ಸಂಗತಿ ಎಂದು ನಮನ ಸಲ್ಲಿಸಿದರು.ಇದನ್ನೂ ಓದಿ: ಡಿಗ್ನಿಫೈಡ್ ರಾಜಕಾರಣಿ, ಬೆಂಗಳೂರು ನಂ.1 ಆಗಲು ಎಸ್‌ಎಂಕೆ ಕಾರಣ: ಸುಮಲತಾ

  • ಹುಬ್ಬಳ್ಳಿಯಲ್ಲಿ ದತ್ತಾತ್ರೇಯ ಮೂರ್ತಿ ಭಗ್ನ: ಕಿಡಿಗೇಡಿಗಳ ಬಂಧನಕ್ಕೆ ಪ್ರಹ್ಲಾದ್ ಜೋಶಿ ಆಗ್ರಹ

    ಹುಬ್ಬಳ್ಳಿಯಲ್ಲಿ ದತ್ತಾತ್ರೇಯ ಮೂರ್ತಿ ಭಗ್ನ: ಕಿಡಿಗೇಡಿಗಳ ಬಂಧನಕ್ಕೆ ಪ್ರಹ್ಲಾದ್ ಜೋಶಿ ಆಗ್ರಹ

    – ಸರ್ಕಾರದ ಬಿಗಿ ಆಡಳಿತ ಇಲ್ಲದಿರುವುದೇ ಇಂಥ ಘಟನೆಗಳಿಗೆ ಕಾರಣ

    ಹುಬ್ಬಳ್ಳಿ: ದತ್ತಾತ್ರೇಯ ವಿಗ್ರಹವನ್ನು ಕಿಡಿಗೇಡಿಗಳು ಭಗ್ನಗೊಳಿಸಿದ ಘಟನೆ ಜಿಲ್ಲೆಯ ದೇಶಪಾಂಡೆ ನಗರದಲ್ಲಿ ನಡೆದಿತ್ತು. ಇದಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳನ್ನು ಶೀಘ್ರ ಬಂಧಿಸುವಂತೆ ನಗರ ಪೊಲೀಸ್ ಕಮಿಷನರ್‌ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಸೂಚಿಸಿದ್ದಾರೆ.

    ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶಪಾಂಡೆ ನಗರದ (Deshapande Nagar) ದತ್ತಾತ್ರೇಯ ದೇವಸ್ಥಾನದಲ್ಲಿನ ವಿಗ್ರಹವನ್ನು ಭಗ್ನಗೊಳಿಸಿರುವುದು ಅಕ್ಷಮ್ಯ ಅಪರಾಧ ಎಂದು ಘಟನೆ ಖಂಡಿಸಿದರು. ಇತ್ತೀಚೆಗೆ ಹಲವೆಡೆ ಹಿಂದೂಗಳ ನಂಬಿಕೆಗೆ ಧಕ್ಕೆ ತರುವಂತಹ ದುಷ್ಕೃತ್ಯಗಳು ಘಟಿಸುತ್ತಲಿವೆ. ಸರ್ಕಾರದ ಬಿಗಿ ಆಡಳಿತ ಇಲ್ಲದಿರುವುದು ಇದಕ್ಕೆಲ್ಲ ಕಾರಣ ಎಂದು ಆಕ್ರೋಶ ಹೊರಹಾಕಿದ್ದಾರೆ.ಇದನ್ನೂ ಓದಿ: ಸಿದ್ದರಾಮಯ್ಯ ಎಷ್ಟು ವರ್ಷ ಸಿಎಂ ಆಗಿರ್ತಾರೋ ಗೊತ್ತಿಲ್ಲ – ಸಂಚಲನ ಮೂಡಿಸಿದ ಸತೀಶ್ ಜಾರಕಿಹೊಳಿ

    ಸಮಾಜಘಾತಕರನ್ನು ತಕ್ಷಣ ಬಂಧಿಸಿ:
    ದತ್ತಾತ್ರೇಯ ಮೂರ್ತಿಯ ಕೈಗಳನ್ನು ಕತ್ತರಿಸಿ ದುಷ್ಕೃತ್ಯ ಎಸಗಿರುವ ಸಮಾಜಘಾತಕರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮಕ್ಕೆ ಗುರಿಪಡಿಸಬೇಕೆಂದು ಆಗ್ರಹಿಸಿದ್ದಾರೆ.

    ನಾಡಿನೆಲ್ಲೆಡೆ ದಸರಾ ಮಹೋತ್ಸವ ಆಚರಿಸುತ್ತಿದ್ದು, ಜನತೆ ವಿಶೇಷ ಪೂಜೆ-ಪುನಸ್ಕಾರ, ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿದ್ದಾರೆ. ಆದರೆ ಕಿಡಿಗೇಡಿಗಳು ದುಷ್ಕೃತ್ಯ ನಡೆಸಿ ಹಬ್ಬಗಳಲ್ಲಿ ಧಾರ್ಮಿಕ ಆಚರಣೆಗೆ ಭಂಗ ತಂದು ಸಮಾಜದಲ್ಲಿ ಶಾಂತಿ ಕದಡುತ್ತಿದ್ದಾರೆ. ಹೀಗಾಗಿ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದಿದ್ದಾರೆ.ಇದನ್ನೂ ಓದಿ: 70th National Film Awards: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಮಿಥುನ್ ಚಿಕ್ರವರ್ತಿ

  • ಧಾರವಾಡ ಕೃಷಿ ವಿವಿ ಆವರಣದಲ್ಲಿ ಗುಜರಾತ್ ಮಾದರಿ ಫಾರೆನ್ಸಿಕ್ ಕ್ಯಾಂಪಸ್ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್

    ಧಾರವಾಡ ಕೃಷಿ ವಿವಿ ಆವರಣದಲ್ಲಿ ಗುಜರಾತ್ ಮಾದರಿ ಫಾರೆನ್ಸಿಕ್ ಕ್ಯಾಂಪಸ್ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್

    ಧಾರವಾಡ: ನಗರದಲ್ಲಿರುವ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಗುಜರಾತ್ ಮಾದರಿಯ ಫಾರೆನ್ಸಿಕ್ ಕ್ಯಾಂಪಸ್ (Forensic University Centre) ನಿರ್ಮಾಣಕ್ಕೆ ಕೊನೆಗೂ ಜಾಗ ನಿಗದಿಯಾಗಿದೆ.

    ಧಾರವಾಡದ (Dharwad) ಕರ್ನಾಟಕ ವಿಶ್ವವಿದ್ಯಾಲಯ ಅಥವಾ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಈ ಫಾರೆನ್ಸಿಕ್ ಕ್ಯಾಂಪಸ್ ನಿರ್ಮಾಣಕ್ಕೆ ಜಾಗ ಗುರುತು ಮಾಡಲಾಗಿತ್ತು. ಇದಕ್ಕಾಗಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಸ್ಥಳ ಪರಿಶೀಲನೆ ಕೂಡ ನಡೆಸಿದ್ದರು. ಇದೀಗ ಕರ್ನಾಟಕ ಕೃಷಿ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಸೈದಾಪುರ ಗ್ರಾಮದ ಒಟ್ಟು 50 ಎಕರೆ 39 ಗುಂಟೆ ಜಾಗದಲ್ಲಿ ಫಾರೆನ್ಸಿಕ್ ಕ್ಯಾಂಪಸ್ ನಿರ್ಮಾಣಕ್ಕೆ ಜಾಗ ಗುರುತಿಸಿ ಅದೇ ಜಾಗವನ್ನು ಇದೀಗ ಫೈನಲ್ ಮಾಡಲಾಗಿದೆ. ಇದನ್ನೂ ಓದಿ: ದಕ್ಷಿಣ ಭಾರತದಲ್ಲಿ ಫಸ್ಟ್ – ವಿದ್ಯಾಕಾಶಿಯಲ್ಲಿ ಫಾರೆನ್ಸಿಕ್ ವಿವಿ, ಜ.28ಕ್ಕೆ ಶಂಕುಸ್ಥಾನೆ

    ಜ.28 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ರಾಜ್ಯ ಪ್ರವಾಸ ಕೈಗೊಳ್ಳಲಿದ್ದು ಈ ವೇಳೆ ಅವರು ಅಡಿಗಲ್ಲು ನೆರವೇರಿಸಲಿದ್ದಾರೆ. ಕೃಷಿ ವಿಶ್ವವಿದ್ಯಾಲಯಕ್ಕೆ ಒಳಪಡುವ ಸೈದಾಪುರ ಗ್ರಾಮದ ಜಮೀನು ವಿಧಿ ವಿಜ್ಞಾನ ಪ್ರಯೋಗಾಲಯ ಕ್ಯಾಂಪಸ್ ನಿರ್ಮಾಣಕ್ಕೆ ಯೋಗ್ಯವಾಗಿದ್ದು, ಇದೇ ಜಾಗವನ್ನು ಅಂತಿಮಗೊಳಿಸಲಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಹಳಿ ದಾಟುವಾಗ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಪಘಾತದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

    ಅಪಘಾತದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

    ಧಾರವಾಡ: ಬಾಡಾ ಗ್ರಾಮದ ಬಳಿ ಶನಿವಾರ ಮದುವೆ ನಿಶ್ಚಿತಾರ್ಥ ಮುಗಿಸಿಕೊಂಡು ಬರುವಾಗ ನಿಗದಿ ಗ್ರಾಮದ 9 ಜನ ಮದುಮಗನ ಕಡೆಯವರು ಸಾವನ್ನಪ್ಪಿದ್ದರು. ಈ ಹಿನ್ನೆಲೆ 5 ಲಕ್ಷ ರೂ. ಪರಿಹಾರವನ್ನು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

    ಇಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮೃತ ಕುಟುಂಬಕ್ಕೆ ಪರಿಹಾರ ಕೊಡಿಸುವುದಾಗಿ ಭರವಸೆ ಕೊಟ್ಟಿದ್ದರು. ಈ ಹಿನ್ನೆಲೆ ಬೊಮ್ಮಾಯಿ ಅವರು ಟ್ವೀಟ್ ಮಾಡುವ ಮೂಲಕ ಪರಿಹಾರವನ್ನು ಘೋಷಿಸಿದ್ದಾರೆ.

    ACCIDENT

    ಈ ಬಗ್ಗೆ ಟ್ವಿಟ್ಟರ್‍ನಲ್ಲಿ ಬರೆದುಕೊಂಡಿರುವ ಬೊಮ್ಮಾಯಿ ಅವರು, ಧಾರವಾಡದ ಬಾಡಾ ಗ್ರಾಮದ ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ 9 ಜನರ ಕುಟುಂಬಗಳಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮನವಿಯ ಮೆರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಈ ಅಪಘಾತ ಅತ್ಯಂತ ದುರದೃಷ್ಟಕರವಾಗಿದ್ದು, ಮೃತಪಟ್ಟ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಸುತ್ತೇನೆ ಎಂದು ಬರೆದುಕೊಂಡಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಶೀಲ ಶಂಕಿಸಿ ತಲೆ ಹಿಡಿದು ನೆಲಕ್ಕೆ ಜಜ್ಜಿದ ಪತಿ – ಸ್ಥಳದಲ್ಲೇ ಪತ್ನಿ ಸಾವು 

    ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮನಸೂರ ಗ್ರಾಮದಿಂದ ಬೆನಕನಟ್ಟಿಗೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ಈ ಅನಾಹುತ ಸಂಭವಿಸಿದೆ. ಮೃತರನ್ನು ಮಹೇಶ್ವರಯ್ಯ(11), ಅನನ್ಯ(14), ಹರೀಶ್ (12), ಶಿಲ್ಪಾ (34), ನೀಲವ್ವ(60), ಮಧುಶ್ರೀ (20) ಹಾಗೂ ಶಂಭುಲಿಂಗಯ್ಯ(35) ಎಂದು ಗುರುತಿಸಲಾಗಿದೆ.

  • ನೀಟ್ ವ್ಯವಸ್ಥೆ ಬಡವರ ವೈದ್ಯ ಶಿಕ್ಷಣದ ಕನಸು ನುಚ್ಚುನೂರು ಮಾಡುತ್ತಿದೆ: ಕುಮಾರಸ್ವಾಮಿ

    ನೀಟ್ ವ್ಯವಸ್ಥೆ ಬಡವರ ವೈದ್ಯ ಶಿಕ್ಷಣದ ಕನಸು ನುಚ್ಚುನೂರು ಮಾಡುತ್ತಿದೆ: ಕುಮಾರಸ್ವಾಮಿ

    ಬೆಂಗಳೂರು: ನೀಟ್ ವ್ಯವಸ್ಥೆಯಿಂದ ಬಡ, ಮಧ್ಯಮ ವರ್ಗ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ವೈದ್ಯ ಶಿಕ್ಷಣದ ಕನಸು ನುಚ್ಚುನೂರು ಆಗುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

    ನವೀನ್ ಸಾವು ಕುರಿತು ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅವರು ನೀಟ್ ವ್ಯವಸ್ಥೆ ವಿರೋಧಿಸಿದ್ದಾರೆ. ಅಲ್ಲದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಯನ್ನು ಖಂಡಿಸಿದ್ದಾರೆ. ವೈದ್ಯಶಿಕ್ಷಣದ ಕನಸು ಕಾಣುವ ಬಡ, ಮಧ್ಯಮ ವರ್ಗದ ಬದುಕನ್ನು ಛಿದ್ರಗೊಳಿಸುತ್ತಿರುವ ನೀಟ್(ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ – NEET), ವಿದ್ಯಾರ್ಥಿಗಳು ಮತ್ತು ಪೋಷಕರ ಪಾಲಿಗೆ ಮರಣಶಾಸನವಾಗಿದೆ. ಉನ್ನತ ಶಿಕ್ಷಣವನ್ನು ಉಳ್ಳವರಿಗೆ ಮೀಸಲಿಟ್ಟು ಉಳಿದವರಿಗೆ ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ. ಉಕ್ರೇನ್ ಗೆ ಮೆಡಿಕಲ್ ಓದಲು ಹೋಗಿ ರಷ್ಯಾ ದಾಳಿಗೆ ತುತ್ತಾದ ವಿದ್ಯಾರ್ಥಿ ನವೀನ್ ದುರಂತ ಸಾವು ನೀಟ್ ವ್ಯವಸ್ಥೆಯ ನಿರ್ಲಜ್ಜ ಮುಖವನ್ನು ಇಡೀ ದೇಶಕ್ಕೆ ದರ್ಶನ ಮಾಡಿಸಿದೆ. ಅರ್ಹತೆ ನೆಪದಲ್ಲಿ ಪ್ರತಿಭಾವಂತ ಆರ್ಥಿಕ ದುರ್ಬಲ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಮಾಡಲಾಗುತ್ತಿರುವ ಅನ್ಯಾಯಕ್ಕೆ ಅಂತ್ಯ ಹಾಡಬೇಕಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ನವೀನ್ ಕುಟುಂಬಕ್ಕೆ ಪರಿಹಾರ ಕೊಡ್ತೀವಿ: ಬೊಮ್ಮಾಯಿ

    10ನೇ ತರಗತಿಯಲ್ಲಿ 96%, 2ನೇ ಪಿಯುಸಿಯಲ್ಲಿ 97% ಅಂಕ ಗಳಿಸಿದ್ದರೂ ನವೀನ್‍ಗೆ ಜಗತ್ತಿನ ಶಿಕ್ಷಣ ಕಾಶಿ ಭಾರತದಲ್ಲಿ ವೈದ್ಯಸೀಟು ಸಿಗಲ್ಲ. ಗ್ರಾಮೀಣ ವಿದ್ಯಾರ್ಥಿಯೊಬ್ಬ ಇಷ್ಟು ಉತ್ತಮ ಅಂಕ ಗಳಿಸುವುದು ಸುಲಭವಲ್ಲ. ಆದರೂ, ಆತನಿಗೆ ನಮ್ಮ ದೇಶದಲ್ಲಿ ವೈದ್ಯಶಿಕ್ಷಣವನ್ನು ನಿರಾಕರಿಸಲಾಗಿದೆ. ಭಾರತದಲ್ಲಿ ನಿರಾಕರಿಸಲ್ಪಟ್ಟ ಶಿಕ್ಷಣವನ್ನು ಹುಡುಕಿಕೊಂಡು ಉಕ್ರೇನ್ ಗೆ ಹೋಗಿ ಅಲ್ಲಿ ಕಲಿತು ಇನ್ನೊಬ್ಬರ ಜೀವ ಉಳಿಸಲು ನೂರುಕಾಲ ಬಾಳಿ ಬದುಕಬೇಕಿದ್ದ ನವೀನ್ ಇಂದು ಜೀವ ಕಳೆದುಕೊಂಡು ವಿಶ್ವಗುರು ಆಗಬೇಕೆಂದು ಹಾತೊರೆಯುತ್ತಿರುವ ಭಾರತದ ಆತ್ಮಸಾಕ್ಷಿಗೆ ಪ್ರಶ್ನೆಯಾಗಿದ್ದಾನೆ. ಇದಕ್ಕೆ ಯಾರು ಹೊಣೆ? ಎಂದು ಪ್ರಶ್ನೆ ಮಾಡಿದ್ದಾರೆ.

    ನೀಟ್ ಭಾರತದ ಮಧ್ಯಮ, ಬಡವರ್ಗದ ಮಕ್ಕಳ ಮೆಡಿಕಲ್ ಕನಸನ್ನು ಮರೀಚಿಕೆಯನ್ನಾಗಿಸಿದೆ. ಅದು ವಕ್ಕರಿಸಿದ ಮೇಲೆ ಟ್ಯೂಷನ್ ಅಂಗಡಿಗಳು ನಾಯಿಕೊಡೆಗಳಂತೆ ಮೇಲೆದ್ದಿವೆ. ಕೋಟಿ ಕೋಟಿ ವ್ಯಾಪಾರ ಆಗುತ್ತಿದೆ. ಅವು ವಿದ್ಯಾರ್ಥಿಗಳಿಂದ ಲಕ್ಷ ಲಕ್ಷ ಪೀಕುತ್ತಿವೆ. ಶೇ.99ರಷ್ಟು ಕೋಚಿಂಗ್ ಪಡೆದ ವಿದ್ಯಾರ್ಥಿಗಳೇ ನೀಟ್ ಪಾಸ್ ಮಾಡುತ್ತಿದ್ದಾರೆ. ಸರ್ಕಾರಿ ಶಾಲೆ-ಕಾಲೇಜು ವಿದ್ಯಾರ್ಥಿಗಳಿಗೆ ನೀಟ್ ತೇರ್ಗಡೆ ಕಷ್ಟಸಾಧ್ಯ. ಈ ದೌರ್ಬಲ್ಯವನ್ನರಿತೆ ಟ್ಯೂಷನ್ ಅಂಗಡಿಗಳು ಮಾರುಕಟ್ಟೆ ವಿಸ್ತರಿಸಿ ನವೀನ್ ಅವರಂಥ ವಿದ್ಯಾರ್ಥಿಗಳ ಶವಗಳ ಮೇಲೆ ರಣಕೇಕೆ ಹಾಕುತ್ತಿವೆ. ನೀಟ್ ಹೆಸರಿನಲ್ಲಿ ನೀಟಾಗಿ ಉಳ್ಳವರಿಗೆ ವೈದ್ಯ ಶಿಕ್ಷಣವನ್ನು ದಾಸೋಹ ಮಾಡುವ ದಂಧೆ ವಿರುದ್ಧ ಎಲ್ಲರೂ ದನಿ ಎತ್ತಬೇಕಿದೆ ಎಂದು ಕರೆ ಕೊಟ್ಟಿದ್ದಾರೆ.

    ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿಕೆ ನನಗೆ ಅಚ್ಚರಿ ತಂದಿದೆ. ವಿದೇಶದಲ್ಲಿ ವೈದ್ಯಪದವಿ ಪಡೆಯುವ 90% ವಿದ್ಯಾರ್ಥಿಗಳು ಭಾರತದಲ್ಲಿ ಅಗತ್ಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದಿಲ್ಲ. ವಿದೇಶ ಮತ್ತು ಭಾರತದಲ್ಲಿ ವೈದ್ಯಶಿಕ್ಷಣಕ್ಕೆ ಆಗುವ ವೆಚ್ಚದ ಬಗ್ಗೆ ಚರ್ಚೆ ಬೇಡ. ಆ ಚರ್ಚೆಗೆ ಇದು ಸಮಯವೂ ಅಲ್ಲ ಎಂದರು. ಕೇಂದ್ರದ ಕಾನೂನು ಮತ್ತು ಸಂಸದೀಯ ವ್ಯವಹಾರ ಖಾತೆ ಮಂತ್ರಿಗಳೇ, ವೆಚ್ಚದ ಹೋಲಿಕೆ ಮಾಡಲು ನಾನು ಬಯಸುವುದಿಲ್ಲ. ಯಾವುದೇ ವಿವಾದ ಅಥವಾ ಚರ್ಚೆಗೆ ನಾನೀಗ ಕಾರಣನಾಗುವುದಿಲ್ಲ ಎಂದು ಹೇಳುವುದರ ಹಿಂದಿನ ಮರ್ಮವೇನು? ಅವರ ಹೇಳಿಕೆ ಅನೇಕ ಗುಮಾನಿಗಳಿಗೆ ಕಾರಣವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಲ್ಲಿರುವ ಭಾರತೀಯರನ್ನು ಭೇಟಿಯಾಗಿ ಧೈರ್ಯ ತುಂಬಿದ ಸಿಂಧಿಯಾ

    ಟ್ಯೂಷನ್ ಅಂಗಡಿಗಳ ಹಿಂದೆ ಯಾರಿದ್ದಾರೆ? ಯಾರಿಗೂ ಕಾಣದಂತೆ ಕೇಂದ್ರ ಸರ್ಕಾರವೇ ಅವಿತು ಕೂತಿದೆಯಾ? ನೀಟ್ ಸೃಷ್ಟಿಸಿದ ಶೈಕ್ಷಣಿಕ ಅರಾಜಕತೆಗೆ ಇನ್ನೆಷ್ಟು ವಿದ್ಯಾರ್ಥಿಗಳು ಬಲಿಯಾಗಬೇಕು? ನವೀನ್ ಸಾವು ನೀಟ್ ಸಾಚಾತನವನ್ನೇ ಪ್ರಶ್ನಿಸಿದೆ. ಬಡಮಕ್ಕಳ ರಕ್ತವನ್ನು ಹೀರುವ, ಶ್ರೀಮಂತರಿಗಷ್ಟೇ ಮೀಸಲಾಗಿರುವ ವೈದ್ಯಶಿಕ್ಷಣದ ವ್ಯಾಪಾರೀಕರಣ ದೇಶಕ್ಕೆ ಅಪಮಾನಕರ. ವಿಶ್ವಗುರು, ರಾಷ್ಟ್ರೀಯ ಶಿಕ್ಷಣ ನೀತಿ ಎಂದೆಲ್ಲಾ ಬೊಬ್ಬೆ ಹೊಡೆಯುವ ಕೇಂದ್ರವು ಒಮ್ಮೆ ಶುದ್ಧ ಅಂತಃಕರಣದಿಂದ ಆಲೋಚಿಸಲಿ ಎಂದು ಆಗ್ರಹ ಮಾಡಿದ್ದಾರೆ.

  • ಮುಂದಾಗುವ ಅನಾಹುತ ತಿಳಿದೇ ಸರ್ಕಾದಿಂದ ಲಾಕ್‍ಡೌನ್ – ಪ್ರಹ್ಲಾದ್ ಜೋಶಿ

    ಮುಂದಾಗುವ ಅನಾಹುತ ತಿಳಿದೇ ಸರ್ಕಾದಿಂದ ಲಾಕ್‍ಡೌನ್ – ಪ್ರಹ್ಲಾದ್ ಜೋಶಿ

    – ಸರ್ಕಾರದ ಜೊತೆಗೆ ಜನರು ಕೈ ಜೋಡಿಸಬೇಕು

    ನವದೆಹಲಿ: ಜನರ ಸಹಕಾರ ಇಲ್ಲದೇ ಸರ್ಕಾರ ಏನೇ ಕ್ರಮ ತೆಗೆದುಕೊಂಡರು ಅದು ವಿಫಲವಾಗಲಿದೆ. ಶೇಕಡಾ 80% ಜನರು ಭಾರತ ಲಾಕ್‍ಡೌನ್‍ಗೆ ಬೆಂಬಲ ನೀಡಿದ್ದು ಬಾಕಿ 20% ಜನರು ಕೊರೊನಾ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಬೇಕಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

    ದೆಹಲಿಯಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಇನ್ನು ಪರಿಸ್ಥಿತಿ ಕೈ ಮೀರಿಲ್ಲ ಸರ್ಕಾರ ಇದನ್ನು ನಿಭಾಯಿಸುವ ಪ್ರಯತ್ನ ಮಾಡುತ್ತಿದೆ. ಭಾರತ ಲಾಕ್‍ಡೌನ್ ಮಾಡುವ ಮೂಲಕ ಮುಂದಗಾಬಹುದಿದ್ದ ದೊಡ್ಡ ಅನಾಹುತವನ್ನು ತಡೆಯುವ ಪ್ರಯತ್ನ ಸರ್ಕಾರ ಮಾಡಿದೆ. ಸರ್ಕಾರಕ್ಕೆ ಕೊರೊನಾ ಸೃಷ್ಟಿಸಬಹುದಾ ನಷ್ಟದ ಬಗ್ಗೆ ಮುಂಚೆಯೇ ತಿಳಿದಿತ್ತು ಎಂದರು.

    ಕೊರೊನಾ ವಿಚಾರದಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ನಿಜಮುದ್ದೀನ್ ಯಾತ್ರಿಗಳು ಸೇರಿ ಯಾರೇ ಆಗಿರಲಿ ಕೊರೊನಾ ಲಕ್ಷಣಗಳು ಕಂಡು ಬಂದರೆ ಸ್ವಯಂ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಿರಿ. ಬಹುತೇಕ ಪ್ರಮಾಣದ ಜನರು ಬೆಂಬಲ ನೀಡಿದ್ದಾರೆ. ಆದರೆ ಅಲ್ಲಲ್ಲಿ ಜನರು ಮನೆಯಿಂದ ಹೊರಬರುವ ಪ್ರಯತ್ನ ಮಾಡುತ್ತಿದ್ದಾರೆ. ಈ ಜನರು ಕೂಡಾ ಎಚ್ಚೆತುಕೊಂಡು ಮನೆಯಲ್ಲಿರಬೇಕು ತಮ್ಮಗಲ್ಲದಿದ್ದರು ಸಮಾಜದ ಮತ್ತು ದೇಶದ ಸ್ವಾಸ್ಥ್ಯಕ್ಕಾಗಿ ಲಾಕ್‍ಡೌನ್ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದರು.

    ಭಾರತ ಲಾಕ್‍ಡೌನ್ ಆಗಿ ಹದಿನಾರು ದಿನ ಕಳೆದಿದೆ. ಆದರೆ ಪ್ರಮಾಣ ಇಳಕೆಯಾಗಿಲ್ಲ ಇದಕ್ಕೆ ಕೆಲ ಜನರ ನಿರ್ಲಕ್ಷ್ಯವೂ ಕಾರಣವಾಗಿದೆ. ಲಾಕ್‍ಡೌನ್ ಮುಂದುವರೆಸುವ ಬಗ್ಗೆ ನಾನೇನು ಹೇಳಲು ಸಾಧ್ಯವಿಲ್ಲ. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ಬಗ್ಗೆ ಚಿಂತನೆ ನಡೆಸಿದ್ದು ವಿಪಕ್ಷ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ. ಎಲ್ಲ ಸಿಎಂಗಳ ಜೊತೆಗೆ ಚರ್ಚೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.

    ವೈದ್ಯಕೀಯ ಸಾಮಾಗ್ರಿಗಳ ಪೂರೈಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ. ಪಿಪಿಇ ಕಿಟ್, ಮಾಸ್ಕ್, ವೆಂಟಿಲೇಟರ್ ಸೇರಿ ಅಗತ್ಯ ವೈದ್ಯಕೀಯ ಸಾಮಾಗ್ರಿಗಳನ್ನು ಪೂರೈಕೆ ಮಾಡುತ್ತಿದೆ. ಆದರೆ ವಿರೋಧ ಪಕ್ಷಗಳು ಸುಮ್ಮನೆ ಆರೋಪ ಮಾಡಿದೆ. ಕೇಂದ್ರ ಸರ್ಕಾರ ಸಾಮಾಗ್ರಿಗಳ ಪೂರೈಕೆ ಮಾಡಿರುವ ಅಂಕಿ ಅಂಶಗಳನ್ನು ನೀಡಲು ನಾವು ಸಿದ್ಧ ಎಂದು ಸವಾಲು ಹಾಕಿದರು.

  • ರಾಜ್ಯದ ಇತಿಹಾಸದಲ್ಲಿ ಕರಾಳ ಅಧ್ಯಾಯ ಸೃಷ್ಟಿ – ಸ್ಪೀಕರ್ ವಿರುದ್ಧ ಜೋಶಿ ಕಿಡಿ

    ರಾಜ್ಯದ ಇತಿಹಾಸದಲ್ಲಿ ಕರಾಳ ಅಧ್ಯಾಯ ಸೃಷ್ಟಿ – ಸ್ಪೀಕರ್ ವಿರುದ್ಧ ಜೋಶಿ ಕಿಡಿ

    ಹುಬ್ಬಳ್ಳಿ: ರಾಜ್ಯದ ಇತಿಹಾಸದಲ್ಲಿ ಕರಾಳ ಅಧ್ಯಾಯವನ್ನು ಸ್ಪೀಕರ್ ಸೃಷ್ಟಿ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ರಮೇಶ್ ಕುಮಾರ್ ವಿರುದ್ಧ ಹರಿಹಾಯ್ದಿದ್ದಾರೆ.

    ಇಂದು ಸ್ಪೀಕರ್ 14 ಜನ ಅತೃಪ್ತ ಶಾಸಕರ ಅನರ್ಹ ಮಾಡಿದ ವಿಚಾರವಾಗಿ ಮಾತನಾಡಿದ ಜೋಶಿ, ಸ್ಪೀಕರ್ ಆದೇಶ ಒಂದು ದುರ್ದೈವ. ಸ್ಪೀಕರ್ ಮಾತನ್ನು ಕೇಳಿ ಜನ ಅವರನ್ನು ನಂಬಿದ್ದರು. ಆದರೆ ಸ್ಪೀಕರ್ ಹೇಳಿದ ಮಾತಿನಂತೆ ನಡೆದುಕೊಳ್ಳಲಿಲ್ಲ ಎಂದು ಅಸಮಾಧಾನ ಹೊರ ಹಾಕಿದರು.

    ಖುದ್ದು ಹಾಜರಾಗಿ ಶಾಸಕರು ರಾಜೀನಾಮೆ ನೀಡಿದಾಗಲೂ ಸ್ಪೀಕರ್ ಸುಮ್ಮನೆ ಇದ್ದರು. ರಾಜೀನಾಮೆ ಕೊಟ್ಟು ತಿಂಗಳ ಬಳಿಕ ಅನರ್ಹಗೊಳಿಸಿದ್ದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಅವರು ಒತ್ತಡಕ್ಕೆ ಮಣಿದು ಅನರ್ಹ ಮಾಡಿರುವುದು ಈಗ ಜಗಜ್ಜಾಹೀರಾಗಿದೆ. ಖುದ್ದು ಶಾಸಕರೇ ಬಂದು ರಾಜೀನಾಮೆ ನೀಡಿದಾಗ ಅದನ್ನು ಸ್ವೀಕಾರ ಮಾಡುವುದಷ್ಟೇ ಸ್ಪೀಕರ್ ಕೆಲಸ. ಅದನ್ನು ಬಿಟ್ಟು ಅನರ್ಹತೆ ಮಾಡಿರುವುದು ರಮೇಶ್ ಕುಮಾರ್ ಅವರ ಘನತೆಗೆ ಧಕ್ಕೆ ತಂದಿದೆ ಎಂದು ಹೇಳಿದರು.

    ಇದೇ ವೇಳೆ ಅನರ್ಹ ಶಾಸಕರ ಬೆನ್ನಿಗೆ ಬಿಜೆಪಿ ನಿಲ್ಲಲ್ಲ. ಆದರ ಬದಲು ಪ್ರಜಾಪ್ರಭುತ್ವದ ಉಳಿವಿಗೆ ಬಿಜೆಪಿ ನಿಲ್ಲಲಿದೆ. ಸ್ಪೀಕರ್ ಆದೇಶಕ್ಕೆ ಸುಪ್ರೀಂಕೋರ್ಟ್ ತಕ್ಕ ಉತ್ತರ ನೀಡಲಿದೆ ಎಂದು ಸ್ಪಷ್ಟಪಡಿಸಿದರು.

  • ಅಂಗಡಿ ಜಾಗದಲ್ಲಿ ನಾನು ಇದ್ದಿದ್ದರೆ ಸಚಿವ ಸ್ಥಾನ ತಿರಸ್ಕರಿಸುತ್ತಿದ್ದೆ – ಎಂಬಿಪಿ

    ಅಂಗಡಿ ಜಾಗದಲ್ಲಿ ನಾನು ಇದ್ದಿದ್ದರೆ ಸಚಿವ ಸ್ಥಾನ ತಿರಸ್ಕರಿಸುತ್ತಿದ್ದೆ – ಎಂಬಿಪಿ

    ವಿಜಯಪುರ: ಸಚಿವರಾದ ಸುರೇಶ್ ಅಂಗಡಿ ಹಾಗೂ ಪ್ರಹ್ಲಾದ್ ಜೋಶಿಗೆ ಕೇಂದ್ರ ಸರ್ಕಾರ ವ್ಯತ್ಯಾಸ ಮಾಡಿದೆ. ಇದು ಬಿಜೆಪಿಯ ಮನಸ್ಥಿತಿ ತೋರಿಸುತ್ತದೆ. ಇದು ಸರಿಯಾದ ನ್ಯಾಯವಲ್ಲ ಎಂದು ಗೃಹ ಸಚಿವ ಎಂ.ಬಿ. ಪಾಟೀಲ್ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಪಾಟೀಲ್ ಅವರು, ಸುರೇಶ್ ಅಂಗಡಿ ಹಾಗೂ ಪ್ರಹ್ಲಾದ್ ಜೋಶಿಗೆ ಮಾನದಂಡ ಬೇರೆ-ಬೇರೆಯಾಗಿದೆ. ಇಬ್ಬರು ನಾಲ್ಕು ಬಾರಿ ಗೆದ್ದು ಬಂದಿದ್ದು, ಅನುಭವ ಹೊಂದಿದ್ದಾರೆ. ಆದರೆ ಪ್ರಹ್ಲಾದ್ ಜೋಶಿಗೆ ಕ್ಯಾಬಿನೆಟ್ ಸ್ಥಾನ ಸಿಕ್ಕಿದರೆ, ಸುರೇಶ್ ಅಂಗಡಿಯವರು ರಾಜ್ಯ ಸಚಿವರು. ಇಬ್ಬರು ಒಂದೇ ಸಮಾನವಾಗಿದ್ದರೂ ವ್ಯತ್ಯಾಸ ಮಾಡಿದ್ದಾರೆ. ಈ ವಿಚಾರವನ್ನು ಲಿಂಗಾಯತರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

    ಸುರೇಶ್ ಅಂಗಡಿಯವರಿಗೂ ಕ್ಯಾಬಿನೆಟ್ ದರ್ಜೆ ನೀಡಬೇಕಿತ್ತು. ಇದಕ್ಕೆ ಬಿಜೆಪಿ ನಾಯಕರು ಉತ್ತರ ನೀಡಬೇಕು. ಇದು ಒಂದು ದೊಡ್ಡ ಅನ್ಯಾಯ. ಈ ಮೂಲಕ ಲಿಂಗಾಯತರಿಗೆ ಅಗೌರವ ತೋರಿಸಿದ್ದಾರೆ. ಇದನ್ನು ಲಿಂಗಾಯತರು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

    ಪಾಪ ಸುರೇಶ್ ಅಂಗಡಿಯವರು ಕೇಂದ್ರದ ರಾಜ್ಯ ಸಚಿವರು. ಅದಕ್ಕಾಗಿ ಪ್ರಹ್ಲಾದ್ ಜೋಶಿ ಕಡೆಗೆ ಅಂಗಡಿ ನೋಡಬೇಕು. ಸ್ವಾಭಿಮಾನವಿದ್ದರೆ ಸುರೇಶ್ ಅಂಗಡಿ ಜಾಗದಲ್ಲಿ ನಾನು ಇದ್ದಿದ್ದರೆ ಸಚಿವ ಸ್ಥಾನ ತಿರಸ್ಕಾರ ಮಾಡುತ್ತಿದ್ದೆ ಎಂದರು.

    ಹಿಂದಿ ರಾಷ್ಟ್ರ ಭಾಷೆ, ಯಾವುದೇ ಒಂದು ಭಾಷೆಯನ್ನು ಹೇರುವಾಗ ಚರ್ಚೆ ಮಾಡಬೇಕು. ಕನ್ನಡ ಭಾಷೆ ಉಳಿಸಿ ಬೆಳೆಸುವಂತಹ ಕರ್ತವ್ಯ ನಮ್ಮೆಲ್ಲರ ಜವಬ್ದಾರಿಯಾಗಿದೆ. ಹಿಂದಿ ಭಾಷೆಯನ್ನು ವ್ಯಾಪಕವಾಗಿ ಚರ್ಚೆ ನಡೆಸಿ ಅಭಿಪ್ರಾಯ ಕ್ರೋಢಿಕರಿಸಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದರು.

  • ಗಂಡು ಮೆಟ್ಟಿದ ನಾಡಿನಲ್ಲಿ ನಮೋ ರಣಕಹಳೆ-ಪ್ರಧಾನಿಗಳಿಗೆ ವಿಶೇಷ ಕೈಪಿಡಿ ನೀಡಿದ ಪ್ರಹ್ಲಾದ ಜೋಶಿ

    ಗಂಡು ಮೆಟ್ಟಿದ ನಾಡಿನಲ್ಲಿ ನಮೋ ರಣಕಹಳೆ-ಪ್ರಧಾನಿಗಳಿಗೆ ವಿಶೇಷ ಕೈಪಿಡಿ ನೀಡಿದ ಪ್ರಹ್ಲಾದ ಜೋಶಿ

    ಹುಬ್ಬಳ್ಳಿ: ತಮಿಳುನಾಡಿನ ತಿರ್‍ಪುರ್ ನ ಸಮಾವೇಶ ಮುಗಿಸಿಕೊಂಡು ಮೋದಿ ಹುಬ್ಬಳ್ಳಿಗೆ ಆಗಮಿಸಿದ ಮೋದಿ ನೇರವಾಗಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.

    ಹುಬ್ಬಳ್ಳಿಯ ಗಬ್ಬೂರು ಕ್ರಾಸ್ ಬಳಿಯಲ್ಲಿ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಭಾಗಿಯಾದ ಪ್ರಧಾನಿಗಳನ್ನು ರಾಜ್ಯ ನಾಯಕರು ಬರ ಮಾಡಿಕೊಂಡರು. ಈ ವೇಳೆ ಸಂಸದ ಪ್ರಹ್ಲಾದ ಜೋಶಿ, ಧಾರವಾಡ ಜಿಲ್ಲೆಯ ಐದು ವರ್ಷದ ಬಿಜೆಪಿಯ ಸಾಧನೆಯ ಕೈಪಿಡಿ ಉಡುಗೊರೆಯಾಗಿ ನೀಡಿದರು.

    ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಇಂದು ಸೇರಿರುವ ಜನರನ್ನು ನೋಡಿದ್ರೆ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗೋದು ಸತ್ಯ ಎಂದು ಗೊತ್ತಾಗುತ್ತದೆ. ಕಾರ್ಯಕ್ರಮಕ್ಕೆ ಬಂದ ಎಲ್ಲ ಕಾರ್ಯಕರ್ತರಿಗೆ ಧನ್ಯವಾದಗಳು. ಸಮ್ಮಿಶ್ರ ಸರ್ಕಾರದ ನಾಯಕರು ತಾವೇ ಜಗಳ ಮಾಡಿಕೊಳ್ಳುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಎಲ್ಲರು ಬಿಜೆಪಿಗೆ ಮತ ನೀಡಬೇಕೆಂದು ಮನವಿ ಮಾಡಿಕೊಂಡರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv