ಬಾಲಿವುಡ್‌ನಲ್ಲಿ (Bollywood) ದುಬಾರಿ ನಾಯಕಿ ಎಂದೆನಿಸಿಕೊಳ್ಳುವ ಮೂಲಕ ದೀಪಿಕಾ ಪಡುಕೋಣೆ (Deepika Padukone) ಸುದ್ದಿಯಲ್ಲಿದ್ದಾರೆ. `ಪಠಾಣ್’ (Pathaan) ಚಿತ್ರದ ಸೂಪರ್ ಸಕ್ಸಸ್‌ನಲ್ಲಿರುವ ನಟಿ ಈಗ ಪ್ರಭಾಸ್ ನಟನೆಯ `ಪ್ರಾಜೆಕ್ಟ್ ಕೆ’ ಸಿನಿಮಾಗೆ ಭರ್ಜರಿ ಸಂಭಾವನೆ ಪಡೆದಿದ್ದಾರೆ.

`ಐಶ್ವರ್ಯಾ’ (Aishwarya Kannada Film) ಸಿನಿಮಾ ಮೂಲಕ ರಿಯಲ್ ಸ್ಟಾರ್ ಉಪ್ಪಿಗೆ (Upendra) ನಾಯಕಿಯಾಗುವ ಮೂಲಕ ಬಣ್ಣದ ಲೋಕಕ್ಕೆ ಕನ್ನಡತಿ ದೀಪಿಕಾ ಪಡುಕೋಣೆ ಎಂಟ್ರಿ ಕೊಟ್ಟರು. ಬಳಿಕ ಶಾರುಖ್ ಖಾನ್‌ಗೆ (Sharukh Khan) ನಾಯಕಿಯಾಗಿ `ಓಂ ಶಾಂತಿ ಓಂ’ ಚಿತ್ರದಿಂದ ಬಾಲಿವುಡ್‌ಗೆ ಲಗ್ಗೆ ಇಟ್ಟರು. ಸಾಕಷ್ಟು ಹಿಂದಿ ಸಿನಿಮಾಗಳಲ್ಲಿ ಸ್ಟಾರ್ ನಟರ ಜೊತೆ ತೆರೆಹಂಚಿಕೊಂಡು ಸೈ ಎನಿಸಿಕೊಂಡಿದ್ದಾರೆ. ಇದನ್ನೂ ಓದಿ: ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಕಿರುತೆರೆ ಸುಂದರಿ ಅಮೂಲ್ಯ ಗೌಡ

ಈ ವರ್ಷ `ಪಠಾಣ್’ ಚಿತ್ರದ ಮೂಲಕ ಭರ್ಜರಿ ಓಪನಿಂಗ್ಸ್ ಪಡೆದಿದ್ದಾರೆ. ಶಾರುಖ್ ನಾಯಕಿಯಾಗಿ ದೀಪಿಕಾ ಮಿಂಚಿದ್ದಾರೆ. ಸಿನಿಮಾ 1000 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಹೊಸ ದಾಖಲೆ ಬರೆದಿದೆ. ಹಾಗಾಗಿ ತಮ್ಮ ಮುಂದಿನ ಸಿನಿಮಾ `ಪ್ರಾಜೆಕ್ಟ್ ಕೆ’ ಚಿತ್ರಕ್ಕೆ ದುಬಾರಿ ಸಂಭಾವನೆಯನ್ನೇ ನಟಿ ಪಡೆದಿದ್ದಾರೆ.

ಈ ಸಿನಿಮಾಗಾಗಿ ಅವರು ದೊಡ್ಡ ಕಾಲ್‌ಶೀಟ್ ನೀಡಿದ್ದಾರೆ. ಹಲವು ದಿನಗಳನ್ನ ಈ ಚಿತ್ರಕ್ಕಾಗಿ ಮುಡಿಪಿಟ್ಟಿದ್ದಾರೆ. ನಾಗ್ ಅಶ್ವೀನ್ ನಿರ್ದೇಶನದ ಈ ಚಿತ್ರಕ್ಕೆ 10 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಕೆಲ ಸ್ಟಾರ್ ಹೀರೋಗಳು ಕೂಡ ಇಷ್ಟು ಸಂಭಾವನೆ ಪಡೆಯಲ್ಲ ಅನ್ನೋದು ಗಮಿನಿಸಬೇಕಾದ ವಿಷಯ. ಪ್ರಭಾಸ್ ಜೊತೆಗಿನ ಈ ಚಿತ್ರ ಮುಂದಿನ ವರ್ಷ ತೆರೆಗೆ ಅಪ್ಪಳಿಸಲಿದೆ.













`ಬಾಹುಬಲಿ 2′ (Bahubali 2) ಚಿತ್ರದ ನಂತರ ಪ್ರಭಾಸ್ ನಟನೆಯ ಚಿತ್ರಗಳು ಬಾಕ್ಸಾಫೀಸ್‌ನಲ್ಲಿ ಕಮಾಲ್ ಮಾಡೋದರಲ್ಲಿ ಸೋತಿದೆ. ಆದರೆ ಪ್ರಭಾಸ್‌ಗೆ ಇರುವ ಡಿಮ್ಯಾಂಡ್ ಮಾತ್ರ ಕಮ್ಮಿಯಾಗಿಲ್ಲ. ಸದ್ಯ ಪ್ರಶಾಂತ್ ನೀಲ್ (Prashanth Neel) ನಿರ್ದೇಶನದ `ಸಲಾರ್’ (Salaar) ಮತ್ತು `ಪ್ರಾಜೆಕ್ಟ್‌ಕೆ’ (Project k) ಚಿತ್ರಗಳು ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟ ಬ್ಯುಸಿಯಿದ್ದಾರೆ. ಆದರೆ ʻಪ್ರಾಜೆಕ್ಟ್‌ಕೆʼ ಚಿತ್ರದ ಬಗ್ಗೆ ಹೊಸ ಅಪ್‌ಡೇಟ್‌ವೊಂದು ಸಿಕ್ಕಿದೆ. ಇದನ್ನೂ ಓದಿ:
ಚಿತ್ರರಂಗದಲ್ಲಿ ಈಗ ಸೀಕ್ವೆಲ್‌ಗಳ ಅಬ್ಬರ ಜೋರಾಗಿದ್ದು, ಚಿತ್ರಗಳ ಪಾರ್ಟ್ 1 ಮತ್ತು ಪಾರ್ಟ್ 2 ಅಂತಾ ಮಾಡಿ ಚಿತ್ರಗಳು ಗೆದ್ದು ಬೀಗಿರುವ ಇತಿಹಾಸವಿದೆ. ಹೀಗಿರುವಾಗ ನಾಗ್ ಅಶ್ವಿನ್ ನಿರ್ದೇಶನದ, ಪ್ರಭಾಸ್ ನಟನೆಯ `ಪ್ರಾಜೆಕ್ಟ್‌ಕೆʼ ಚಿತ್ರವನ್ನು ಎರಡು ಭಾಗಗಳಾಗಿ ತೆರೆಗೆ ತರಲು ನಿರ್ಧರಿಸಿದ್ದಾರೆ.
ಬಾಹುಬಲಿ, ಕೆಜಿಎಫ್ (KGF) ಚಿತ್ರಗಳಂತೆಯೇ ಪ್ರಾಜೆಕ್ಟ್‌ಕೆ ಚಿತ್ರ ಕೂಡ ಮಾಡಲಾಗುತ್ತಿದೆ. ಮೊದಲ ಭಾಗದಲ್ಲಿ ಅದ್ಭುತ ಲೋಕದ ಪ್ರಪಂಚದ ಪರಿಚಯ ಮಾಡಿಕೊಡಲಿದ್ದು, 2ನೇ ಭಾಗದಲ್ಲಿ ಅಸಲಿ ಕಥೆಯನ್ನ ತೆರೆಯ ಮೇಲೆ ತೋರಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಬಾಹುಬಲಿ ಅಂತೆಯೇ ಪಾರ್ಟ್ 2 ಫಾರ್ಮುಲಾ ಬಳಸಿ ಪ್ರಭಾಸ್ ಗೆಲ್ಲುತ್ತಾರಾ ಎಂಬುದನ್ನ ಕಾದುನೋಡಬೇಕಿದೆ.












