ಲಕ್ನೋ: ಅಯೋಧ್ಯೆಯ ರಾಮಮಂದಿರ (Ayodhya Ram Mandir) ಮತ್ತೊಂದು ಕ್ಷಣಕ್ಕೆ ಸಜ್ಜಾಗಿದೆ. 2ನೇ ಬಾರಿ ಪ್ರಾಣ ಪ್ರತಿಷ್ಠೆಗೆ ಮುನ್ನ ಬಂಗಾರದ ಗುಮ್ಮಟ (Gold Plated Shikhara) ಉದ್ಘಾಟನೆ ಆಗಲಿದೆ.
#WATCH | Ayodhya | Gold-plated ‘Shikhara’ installed on top of Ram Temple ahead of the 3rd June Pran Pratishtha ceremony of Ram Darbar at the temple pic.twitter.com/bPtkTbbBwU
ಗರ್ಭಗುಡಿಯ ಮೇಲೆ ಇರುವ ಬಂಗಾರದ ಶಿಖರವು ಪಾವಿತ್ರ್ಯತೆ, ಪ್ರಗತಿ ಮತ್ತು ಭಕ್ತಿಯ ಸಂಕೇತವಾಗಿದೆ. ಕಿಮೀಗಳ ದೂರಕ್ಕೆ ಗೋಚರಿಸ್ತಿರುವ ಈ ನಯನಮನೋಹರ ಗುಮ್ಮಟವು ಭಕ್ತರ ಕಣ್ಮನ ತಣಿಸುತ್ತಿದೆ. ಭಕ್ತಿ-ಭಾವವನ್ನು ಇಮ್ಮಡಿಗೊಳಿಸುತ್ತಿದೆ. ಇದನ್ನೂ ಓದಿ: ಪಂಜಾಬ್ ಪೊಲೀಸರ ಭರ್ಜರಿ ಕಾರ್ಯಾಚರಣೆ – 113 ಡ್ರಗ್ ಪೆಡ್ಲರ್‌ಗಳು ಅರೆಸ್ಟ್
ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆಯಲ್ಲಿ (Ayodhya) ಭವ್ಯವಾದ ರಾಮಮಂದಿರದ (Ram Mandir) ಉದ್ಘಾಟನೆಗೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಮಂದಿರದಲ್ಲಿ ರಾಮಲಲ್ಲಾನ ಮಹಾಮಸ್ತಕಾಭಿಷೇಕ ಕಾರ್ಯಕ್ರಮ ಇಂದಿನಿಂದ ಆರಂಭವಾಗಲಿದೆ. ಏಳು ದಿನಗಳ ಕಾಲ ಈ ಕಾರ್ಯಕ್ರಮ ನಡೆಯಲಿದ್ದು, ಜನವರಿ 22ರಂದು ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ.
ದೇವಾಲಯದ ಟ್ರಸ್ಟ್‌ನಿಂದ 7,000 ಕ್ಕೂ ಹೆಚ್ಚು ಜನರನ್ನು ಆಹ್ವಾನಿಸಲಾಗಿದೆ. ಅವರಲ್ಲಿ ಕ್ರಿಕೆಟ್ ದಂತಕಥೆಗಳಾದ ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ, ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್ ಸೇರಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳಲಿರುವ ದೇವಸ್ಥಾನದಲ್ಲಿ ನಡೆಯುವ ಅದ್ಧೂರಿ ಸಮಾರಂಭಕ್ಕೆ ನಗರ ಸಜ್ಜುಗೊಳ್ಳುತ್ತಿದೆ.
ಜನವರಿ 16
ಮಹಾಮಸ್ತಕಾಭಿಷೇಕದ ವಿಧಿವಿಧಾನಗಳು ಇಂದಿನಿಂದ ಆರಂಭವಾಗಲಿವೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ದೇವಸ್ಥಾನದ ಟ್ರಸ್ಟ್ ನೇಮಿಸಿದ ಆತಿಥೇಯರು ಪ್ರಾಯಶ್ಚಿತ್ತ ಸಮಾರಂಭವನ್ನು ನಡೆಸಲಿದ್ದಾರೆ. ಸರಯೂ ನದಿಯ ದಡದಲ್ಲಿ ‘ದಶವಿಧ’ ಸ್ನಾನ, ವಿಷ್ಣು ಪೂಜೆ ನಡೆಯಲಿದೆ.
ಜನವರಿ 20
ಜನವರಿ 20 ರಂದು ರಾಮ ಜನ್ಮಭೂಮಿ ದೇವಸ್ಥಾನದ ಗರ್ಭಗುಡಿಯನ್ನು ಸರಯು ನದಿ ನೀರಿನಿಂದ ತೊಳೆಯಲಾಗುತ್ತದೆ. ನಂತರ ವಾಸ್ತು ಶಾಂತಿ ಮತ್ತು ‘ಅನ್ನಾಧಿವಾಸ್’ ಆಚರಣೆಗಳು ನಡೆಯುತ್ತವೆ.
ಜನವರಿ 21
ರಾಮಲಲ್ಲಾ ವಿಗ್ರಹಕ್ಕೆ 125 ಕಲಶಗಳಲ್ಲಿ ಸ್ನಾನ ಮಾಡಿಸಲಾಗುವುದು. ನಂತರ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಲಾಗುವುದು.
ಜನವರಿ 22
ಕಾರ್ಯಕ್ರಮಕ್ಕಾಗಿ ಆಹ್ವಾನಿತರೊಂದಿಗೆ 100 ಕ್ಕೂ ಹೆಚ್ಚು ಚಾರ್ಟರ್ಡ್ ಜೆಟ್‌ಗಳು ಅಯೋಧ್ಯೆಗೆ ಬಂದಿಳಿಯಲಿವೆ. ಅಂತಿಮ ದಿನದ ಸಮಾರಂಭದಲ್ಲಿ 150 ದೇಶಗಳ ಭಕ್ತರು ಅಯೋಧ್ಯೆ ‘ಪ್ರಾಣ ಪ್ರತಿಷ್ಠೆ’ಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮಧ್ಯಾಹ್ನ 12:30 ರಿಂದ 1 ಗಂಟೆಯ ವರೆಗೆ ‘ಪ್ರಾಣ ಪ್ರತಿಷ್ಠೆ’ ಸಮಾರಂಭ ನಡೆಯಲಿದ್ದು, ರಾಮಲಲ್ಲಾ ದೇವರ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದೆ. ಇದನ್ನೂ ಓದಿ: ರಾಮಲಲ್ಲಾ ಪ್ರಾಣಪ್ರತಿಷ್ಠೆ ದಿನ ಶಾಸಕ ಅಭಯ ಪಾಟೀಲ್ ಕಡೆಯಿಂದ 5 ಲಕ್ಷ ಲಾಡು ವಿತರಣೆ
ಜನವರಿ 21 ಮತ್ತು 22 ರಂದು ದೇವಾಲಯವನ್ನು ಮುಚ್ಚಲಾಗುವುದು ಮತ್ತು ಮರುದಿನ ಜನವರಿ 23 ರಂದು ಭಕ್ತರಿಗಾಗಿ ದೇವಾಲಯ ತೆರೆಯಲಾಗುತ್ತದೆ.
ಮಾರಿಷಸ್: ಅಯೋಧ್ಯೆಯಲ್ಲಿ (Ayodhya) ರಾಮನ ಪ್ರಾಣ ಪ್ರತಿಷ್ಠಾ (Ram Prana Prathista) ಕಾರ್ಯಕ್ರಮ ವೀಕ್ಷಿಸಲು ಮಾರಿಷಸ್ (Mauritius) ಸರ್ಕಾರವು ಜ.22 ರಂದು ಹಿಂದೂ (Hindu) ಧರ್ಮೀಯ ಉದ್ಯೋಗಿಗಳಿಗೆ 2 ಗಂಟೆಗಳ ವಿಶೇಷ ಸಮಯಾವಕಾಶ ನೀಡುವುದಾಗಿ ಪ್ರಕಟಿಸಿದೆ.
ಪ್ರಧಾನ ಮಂತ್ರಿ ಪ್ರವಿಂದ್ ಜುಗ್ನಾಥ್ ನೇತೃತ್ವದ ಮಂತ್ರಿ ಮಂಡಳಿಯು ಶುಕ್ರವಾರ ಸಭೆ ಸೇರಿ ರಾಮಮಂದಿರ ಧಾರ್ಮಿಕ ಕಾರ್ಯಕ್ರಮವು ಸಾಂಸ್ಕೃತಿಕ ಮಹತ್ವವನ್ನು ಗುರುತಿಸಿದೆ ಮತ್ತು ಆಚರಣೆಯಲ್ಲಿ ಭಕ್ತರು ಭಾಗವಹಿಸಲು ಅನುಕೂಲ ಮಾಡಿಕೊಡಲು 2 ಗಂಟೆಗಳ ವಿರಾಮ ನೀಡುವುದಾಗಿ ಪ್ರಕಟಿಸಿತು. ಇದನ್ನೂ ಓದಿ: ಮೋದಿ ನಾಸಿಕ್‌ನಿಂದಲೇ ವ್ರತ ಆರಂಭಿಸಿದ್ದು ಯಾಕೆ? ರಾಮಾಯಣಕ್ಕೂ ನಾಸಿಕ್‌ಗೂ ಏನು ಸಂಬಂಧ?
ಮಾರಿಷಸ್‌ನನಲ್ಲಿ ಹಿಂದೂ ಧರ್ಮವು ಪ್ರಮುಖ ಸ್ಥಾನವನ್ನು ಹೊಂದಿದೆ. 2011ರ ಅಂಕಿಅಂಶಗಳ ಪ್ರಕಾರ ಹಿಂದೂಗಳು ಸರಿಸುಮಾರು 48.5 ಪ್ರತಿಶತ ಜನಸಂಖ್ಯೆ ಹೊಂದಿದ್ದಾರೆ.
ವಸಾಹತುಶಾಹಿ ಯುಗದಲ್ಲಿ ಭಾರತೀಯರನ್ನು ಫ್ರೆಂಚ್ ಮತ್ತು ಬ್ರಿಟಿಷ್ ತೋಟಗಳಿಗೆ ಒಪ್ಪಂದದ ಕಾರ್ಮಿಕರಾಗಿ ಕರೆತರಲಾಗಿತ್ತು. ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಜಾರ್ಖಂಡ್, ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶದಂತಹ ಭಾರತೀಯ ರಾಜ್ಯಗಳಿಂದ ವಲಸೆ ಬಂದ ಪರಿಣಾಮ ಮಾರಿಷಸ್‌ನಲ್ಲಿ ಹಿಂದೂಗಳ ಸಂಖ್ಯೆ ಹೆಚ್ಚಿದೆ.
ಹೈದರಾಬಾದ್: ಅಯೋಧ್ಯೆ ಶ್ರೀರಾಮಂದಿರ (Ayodhya Ram Mandir) ಉದ್ಘಾಟನೆಗೆ ಇನ್ನೂ ಕೆಲವೇ ದಿನಗಳು ಬಾಕಿ ಉಳಿದಿದ್ದು, ದೇಶ ವಿದೇಶಗಳಿಂದ ಶ್ರೀರಾಮನ ಭಕ್ತರು ವಿಶೇಷ ಕಾಣಿಕೆಗಳನ್ನು ಅರ್ಪಿಸುತ್ತಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕಾಗಿ ರಾಮನ ಭಕ್ತರು ಉತ್ಸುಕರಾಗಿ ಕಾಯುತ್ತಿದ್ದಾರೆ. ಅಂತಹ ಭಕ್ತರಲ್ಲಿ ತೆಲಂಗಾಣದ ಚಲ್ಲಾ ಶ್ರೀನಿವಾಸ್ ಶಾಸ್ತ್ರಿಯೂ (Challa Srinivas Sastry) ಒಬ್ಬರಾಗಿದ್ದಾರೆ.
#WATCH | Telangana: A 64-year-old man, Challa Srinivas Sastry from Hyderabad embarked on a 7,200-kilometre padayatra to Ayodhya carrying Khadaun ‘charan paduka’ with him ahead of the ‘Pran Pratishtha’ ceremony of the Ram Temple. (09.01) pic.twitter.com/J8hQg6hBcS
ಹೌದು. 64 ವರ್ಷದ ಚಲ್ಲಾ ಶ್ರೀನಿವಾಸ್ ಶಾಸ್ತ್ರಿ ಅವರು ಶ್ರೀರಾಮಂದಿರ ಪ್ರಾಣಪ್ರತಿಷ್ಠೆಗೂ ಮುನ್ನ ʻಚರಣ ಪಾದುಕೆʼಗಳನ್ನ (Khadaun Charan Paduka) ಹೊತ್ತು ಅಯೋಧ್ಯೆಗೆ 7,200 ಕಿಮೀ ಪಾದಯಾತ್ರೆ ಕೈಗೊಂಡಿದ್ದಾರೆ. ವಿಶೇಷವೆಂದರೆ ಶ್ರೀರಾಮ ನಡೆದಾಡಿದ ರಸ್ತೆಯಲ್ಲೇ ಪಾದಯಾತ್ರೆ ಕೈಗೊಂಡಿದ್ದಾರೆ. ಅಂದು ಯಾವ ಮಾರ್ಗದ ಮೂಲಕ ಅಯೋಧ್ಯೆಯಿಂದ ರಾಮೇಶ್ವರ ತಲುಪಿದ್ದಾರೆ ಅದೇ ರಸ್ತೆಗಳಲ್ಲಿ ತೆರಳಿ ರಾಮಮಂದಿರಕ್ಕೆ ವಿಶೇಷ ಕಾಣಿಕೆ ಅರ್ಪಿಸಲು ಮುಂದಾಗಿದ್ದಾರೆ.
ಈಗಾಗಲೇ ಪಾದಯಾತ್ರೆ ಆರಂಭಿಸಿದ್ದು, 8 ಕೆಜಿ ಬೆಳ್ಳಿ ಬಳಸಿ ಸಿದ್ಧಪಡಿಸಲಾದ ಚರಣ ಪಾದುಕೆಯನ್ನು ರಾಮಮಂದಿರಕ್ಕೆ ತಲುಪಿಸಲು ಮುಂದಾಗಿದ್ದಾರೆ. ಜನವರಿ 15 ಅಥವಾ 16 ರಂದು ಪಾದುಕೆಗಳನ್ನು ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಹಸ್ತಾಂತರಿಸುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯ ಸೀತಾಮಾತೆಗೆ ಸೂರತ್‌ನಲ್ಲಿ ಸಿದ್ಧಗೊಂಡಿದೆ ಸ್ಪೆಷಲ್ ಸೀರೆ – ವಿಶೇಷತೆ ಏನು?
ಈ ಕುರಿತು ಮಾತನಾಡಿರುವ ರಾಮಭಕ್ತ ಚಲ್ಲಾ ಶ್ರೀನಿವಾಸ ಶಾಸ್ತ್ರಿ, 8 ಕೆಜಿ ಬೆಳ್ಳಿಯಿಂದ ತಯಾರಿಸಲಾದ ಚರಣ ಪಾದುಕೆಗಳಿಗೆ ಚಿನ್ನದ ಲೇಪನ ಮಾಡಿಸಿದ್ದೇನೆ. ಅಯೋಧ್ಯೆಯಿಂದ ರಾಮೇಶ್ವರಕ್ಕೆ ಭಗವಾನ್ ಶ್ರೀರಾಮ ಸಾಗಿದ ಮಾರ್ಗದಲ್ಲೇ ನಾನೂ ನಡೆಯುತ್ತೇನೆ. ಒಟ್ಟಿನಲ್ಲಿ ನನ್ನ ಗುರಿ ಪ್ರಾಣಪ್ರತಿಷ್ಠೆಗೂ ಮುನ್ನ ಅಯೋಧ್ಯೆ ತಲುಪಬೇಕು ಅನ್ನೋದಷ್ಟೇ. ಜನವರಿ 15 ಅಥವಾ 16ರ ವೇಳೆಗೆ ತಲುಪಿ, ಈ ಕಾಣಿಕೆಗಳನ್ನು ಅರ್ಪಿಸುತ್ತೇನೆ. ಅಲ್ಲದೇ ದಕ್ಷಿಣ ಭಾರತದಿಂದ ಬರುವವರಿಗೆ ಊಟದ ವ್ಯವಸ್ಥೆ ಮಾಡುತ್ತಿದ್ದೇವೆ, 10 ಸಾವಿರ ಲಡ್ಡು ವಿತರಿಸಲಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಮಮಂದಿರಕ್ಕಾಗಿ 30 ವರ್ಷಗಳಿಂದ ‘ಮೌನ ವ್ರತ’ – ಒಂದು ಮಾತೂ ಆಡದೇ ಇದ್ದ ಮಹಿಳೆ ಮುಖದಲ್ಲಿ ಮಂದಹಾಸ
ಸೀತಾಮಾತೆಗೆ ಸೂರತ್‌ನಿಂದ ಸ್ಪೆಷಲ್ ಸೀರೆ: ದೇಶದ ಪ್ರಮುಖ ಜವಳಿ ಕೇಂದ್ರವಾಗಿರುವ ಗುಜರಾತ್‌ನ (Gujarat) ಸೂರತ್ (Surat) ನಗರದಲ್ಲಿ ಅಯೋಧ್ಯೆಯಲ್ಲಿ ನೆಲೆಸಿರುವ ಸೀತಾಮಾತೆಗೆ ಅರ್ಪಿಸಲು ವಿಶೇಷ ಸೀರೆಯೊಂದು ಸಿದ್ಧವಾಗಿದೆ. ಈ ಸೀರೆಯನ್ನು ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ವಿಗ್ರಹ ಪ್ರತಿಷ್ಠಾಪನೆ ಸಮಾರಂಭಕ್ಕೆ ಕಳುಹಿಸಲಾಗುವುದು ಎಂದು ಜವಳಿ ಉದ್ಯಮಿ ಲಲಿತ್ ಶರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: ಕೊಪ್ಪಳಕ್ಕುಂಟು ಶ್ರೀರಾಮನ ನಂಟು – ಈ ಸ್ಥಳದಲ್ಲಿದೆ ಶಬರಿ ಗುಹೆ, ರಾವಣನ ಸಂಹಾರಕ್ಕೆ ಸೈನ್ಯ ಸಜ್ಜಾಗಿದ್ದೂ ಇಲ್ಲಿಯೇ!
ಸೀರೆಯ ವಿಶೇಷತೆಯೇನು? ಸೀತಾಮಾತೆಗೆಂದು ತಯಾರಿಸಿರುವ ಈ ಸೀರೆಯಲ್ಲಿ ಭಗವಾನ್ ರಾಮನ ಚಿತ್ರಗಳು ಮತ್ತು ಅಯೋಧ್ಯೆಯ ದೇವಾಲಯದ ಮುದ್ರಣವಿದೆ. ಸೀರೆ ತಯಾರಿಯ ಮೊದಲ ಕಚ್ಚಾ ವಸ್ತುವಿನ ತುಣುಕನ್ನು ಸೂರತ್‌ನ ಸೀತಾ ದೇವಿಯ ದೇವಾಲಯಕ್ಕೆ ಅರ್ಪಿಸಲಾಗಿದೆ.
ಅಯೋಧ್ಯೆ (ಉತ್ತರ ಪ್ರದೇಶ): ಅಯೋಧ್ಯೆಯಲ್ಲಿ (Ayodhya) ರಾಮಮಂದಿರ (Ram Mandir) ಉದ್ಘಾಟನೆ ಕಾಲ ಸನ್ನಿಹಿತವಾಗಿದೆ. ದೇಶದೆಲ್ಲೆಡೆ ಶ್ರೀರಾಮನ ಸ್ಮರಣೆ, ಭಜನೆ ಕೇಳಿಬರುತ್ತಿದೆ. ಹಿಂದೂಗಳ ಮನೆ ಮನದಲ್ಲಿ ಸಂಭ್ರಮ ತುಂಬಿದೆ. ಇದೇ ಜನವರಿ 22 ರಂದು ರಾಮಮಂದಿರ ಉದ್ಘಾಟನೆಯಾಗಲಿದೆ. ಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ (ಬಾಲರಾಮ) ಪ್ರಾಣ ಪ್ರತಿಷ್ಠೆ ಕೂಡ ಜರುಗಲಿದೆ. ಈ ದಿನಕ್ಕಾಗಿ ಕೋಟ್ಯಂತರ ರಾಮಭಕ್ತರು ಕಾತರದಿಂದ ಕಾಯುತ್ತಿದ್ದಾರೆ.
ಜ.22 ರ ಪ್ರಮುಖ ಧಾರ್ಮಿಕ ಆಚರಣೆ ಪ್ರಾಣ ಪ್ರತಿಷ್ಠೆ (Pran Pratistha). ಎಷ್ಟೋ ಜನಕ್ಕೆ ಪ್ರಾಣ ಪ್ರತಿಷ್ಠೆ ಬಗ್ಗೆ ಗೊತ್ತಿರುವುದಿಲ್ಲ. ಪ್ರಾಣ ಪ್ರತಿಷ್ಠೆ ಎಂದರೇನು? ಇದರಲ್ಲಿನ ಆಚರಣೆಗಳು ಹೇಗಿರುತ್ತವೆ? ಎಂಬ ಪ್ರಶ್ನೆಗಳಿಗೆ ವಿವರ ಇಲ್ಲಿದೆ. ಇದನ್ನೂ ಓದಿ: Ram Mandir Inauguration: ತಿರುಪತಿಯಿಂದ ಅಯೋಧ್ಯೆಗೆ 1 ಲಕ್ಷ ಲಡ್ಡು ಪೂರೈಕೆ
ಏನಿದು ಪ್ರಾಣ ಪ್ರತಿಷ್ಠೆ?
ಪ್ರಾಣ ಪ್ರತಿಷ್ಠೆ ಎನ್ನುವುದು ಹಿಂದೂ ಮತ್ತು ಜೈನ ಧರ್ಮದ ಪ್ರಮುಖ ಆಚರಣೆಯಾಗಿದೆ. ವಿಗ್ರಹವು ಕೇವಲ ದೇವರ ರೂಪವನ್ನು ಚಿತ್ರಿಸುವ ಒಂದು ಕಲಾಕೃತಿಯಷ್ಟೆ. ಪ್ರಾಣ ಪ್ರತಿಷ್ಠೆಯ ನಂತರವೇ ವಿಗ್ರಹವು ದೈವಿಕವಾಗುತ್ತದೆ. ಅದಕ್ಕಾಗಿ ವಿಗ್ರಹವನ್ನು ಪವಿತ್ರಗೊಳಿಸಿ ದೇವಾಲಯದ ಗರ್ಭಗುಡಿಯಲ್ಲಿ ಸ್ಥಾಪಿಸಲಾಗುತ್ತದೆ. ಪ್ರಾಣ ಎಂದರೆ ‘ಜೀವಶಕ್ತಿ, ಉಸಿರು, ಚೈತನ್ಯ’ ಮತ್ತು ಪ್ರತಿಷ್ಠೆ ಎಂದರೆ ‘ಸ್ಥಾಪನೆ’. ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಪೂಜಾ ವಿಧಾನ, ವೈದಿಕ ಸ್ತೋತ್ರಗಳ ಪಠಣ ನಡೆಸಲಾಗುವುದು. ಪ್ರಾಣ ಪ್ರತಿಷ್ಠೆ ಎಂದರೆ, ವಿಗ್ರಹಕ್ಕೆ ಜೀವಶಕ್ತಿ ತುಂಬಿ ದೈವಿಕವಾಗಿಸುವ ಆಚರಣೆ ಎನ್ನುತ್ತಾರೆ ಹಿರಿಯರು.
ಪ್ರಾಣ ಪ್ರತಿಷ್ಠೆ ಪ್ರಕ್ರಿಯೆಗೂ ಮೊದಲು ವಿಗ್ರಹದಲ್ಲಿ ದೈವಿಕ ಶಕ್ತಿ ಇರುವುದಿಲ್ಲ. ಪ್ರಾಣ ಪ್ರತಿಷ್ಠೆ ನಂತರವೇ ವಿಗ್ರಹಕ್ಕೆ ವಿಶೇಷ ಶಕ್ತಿ ಬರುತ್ತದೆ. ಬಳಿಕ ವಿಗ್ರಹವು ದೈವಿಕ ಶಕ್ತಿಯಾಗಿ ರೂಪಾಂತರಗೊಳ್ಳುತ್ತದೆ. ಆಗ ದೇವಾಲಯಗಳಲ್ಲಿ ಭಕ್ತರು ವಿಗ್ರಹವನ್ನು ಪೂಜಿಸಬಹುದು ಎಂಬ ನಂಬಿಕೆಯಿದೆ. ಇದನ್ನೂ ಓದಿ: Ayodhya Ram Mandir: ಆನೆ, ಸಿಂಹ, ಹನುಮಾನ್, ಗರುಡ ಮೂರ್ತಿಗಳ ಫೋಟೋ ಬಿಡುಗಡೆ
ಆಚರಣೆ ಹೇಗಿರುತ್ತೆ?
ವಿಗ್ರಹವನ್ನು ದೇವಾಲಯಕ್ಕೆ ಸಾಂಪ್ರದಾಯಿಕವಾಗಿ ತರುವುದರೊಂದಿಗೆ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಪ್ರಾರಂಭವಾಗುತ್ತದೆ. ಅಂದರೆ ವಿಗ್ರಹವನ್ನು ಹೊರಗಿನಿಂದ ಕೇಂದ್ರ ಸ್ಥಳಕ್ಕೆ ಸ್ಥಳಾಂತರಿಸುವುದು. ಅತಿಥಿಯನ್ನು ಸ್ವಾಗತಿಸುವಂತೆಯೇ ದೇವಾಲಯಕ್ಕೆ ದೇವರ ವಿಗ್ರಹವನ್ನು ತರಲಾಗುವುದು. ನಂತರ ವಿಗ್ರಹಕ್ಕೆ ಅಭಿಷೇಕ ಮಾಡಿಸಲಾಗುತ್ತದೆ. ನಂತರ ಸುಗಂಧ ದ್ರವ್ಯಗಳನ್ನು ಹಚ್ಚಲಾಗುತ್ತದೆ. ನಂತರ ವಿಗ್ರಹದ ಕಣ್ಣಿಗೆ ಬಟ್ಟೆಯನ್ನು ಕಟ್ಟಿ ಸರಿಯಾದ ಸ್ಥಳದಲ್ಲಿ ಪೂರ್ವಾಭಿಮುಖವಾಗಿ ಸ್ಥಾಪಿಸುತ್ತಾರೆ.
ಪುರೋಹಿತರು ಮಂತ್ರಗಳನ್ನು ಪಠಿಸುತ್ತಾರೆ. ಮಂತ್ರಗಳ ಪಠಣೆ, ಆಚರಣೆಯಿಂದ ವಿಗ್ರಹಕ್ಕೆ ದೈವಶಕ್ತಿ ಬರುತ್ತದೆ. ನಂತರ ವಿಗ್ರಹಕ್ಕೆ ಅಭಿಮುಖವಾಗಿ ಕನ್ನಡಿಯನ್ನು ಹಿಡಿಯಲಾಗುತ್ತದೆ. ಬಳಿಕ ವಿಗ್ರಹದ ಕಣ್ಣಿಗೆ ಕಟ್ಟಿದ ಬಟ್ಟೆಯನ್ನು ಬಿಚ್ಚಿಲಾಗುತ್ತದೆ. ಆಗ ಕನ್ನಡಿ ಒಡೆಯುತ್ತದೆ. ಕನ್ನಡಿ ಒಡೆಯುವುದು, ವಿಗ್ರಹ ದೈವಿಕ ಶಕ್ತಿಯಾಗಿ ರೂಪಾಂತರಗೊಂಡಿದೆ ಎಂಬುದಕ್ಕೆ ಸಾಕ್ಷಿ. ಈ ಪ್ರಕ್ರಿಯೆ ಮುಗಿದ ನಂತರ ವಿಗ್ರಹವನ್ನು ಪೂಜಿಸಲು ಯೋಗ್ಯವೆಂದು ಪರಿಗಣಿಸಲಾಗುತ್ತದೆ. ವಿಗ್ರಹಕ್ಕೆ ಜೀವತುಂಬಿ ದೈವಿಕವಾಗಿಸುವ ಆಚರಣೆ ಇದು ಎಂದು ನಂಬಲಾಗಿದೆ. ಇದನ್ನೂ ಓದಿ: Ram Mandir: ರಾಮಮಂದಿರ ಉದ್ಘಾಟನೆಯಂದು ಇಡೀ ದಿನ ಪ್ರಧಾನಿ ಮೋದಿ ಉಪವಾಸ!
ಪೂರ್ವಾಭಿಮುಖವಾಗಿ ವಿಗ್ರಹ ಸ್ಥಾಪಿಸೋದ್ಯಾಕೆ?
ಪೂರ್ವಾಭಿಮುಖ ಎಂದರೆ ಸೂರ್ಯೋದಯದ ಸ್ಥಾನ. ಸೂರ್ಯನ ಉದಯದಿಂದ ಬೆಳಕು ಹೊಮ್ಮುತ್ತದೆ. ಜೀವಗಳಿಗೆ ಚೈತನ್ಯ ಬರುತ್ತದೆ. ಆ ದೃಷ್ಟಿಯಿಂದಲೇ ದೇವಾಲಯಗಳಲ್ಲಿ ವಿಗ್ರಹಗಳನ್ನು ಪೂರ್ವಾಭಿಮುಖವಾಗಿ ಸ್ಥಾಪಿಸಲಾಗುತ್ತದೆ. ಹಿಂದೂ ಧಾರ್ಮಿಕ ಗ್ರಂಥಗಳ ಪ್ರಕಾರ, ಸೂರ್ಯ ಪೂರ್ವ ದಿಕ್ಕಿನಲ್ಲಿ ಉದಯಿಸುವುದರಿಂದ ವಿಗ್ರಹಗಳನ್ನು ಪೂರ್ವಾಭಿಮುಖವಾಗಿ ಸ್ಥಾಪಿಸಬೇಕು. ದೇವರ ವಿಗ್ರಹಕ್ಕೆ ಮೊದಲ ಪೂಜೆ ಬ್ರಾಹ್ಮಿ ಮುಹೂರ್ತದಲ್ಲಿ ನಡೆಯಬೇಕು ಎನ್ನಲಾಗುತ್ತದೆ.
ಅಯೋಧ್ಯೆ: ರಾಮಮಂದಿರದಲ್ಲಿ (Ram Mandir) ಬಾಲ ರಾಮನ ಪ್ರಾಣಪ್ರತಿಷ್ಠೆ (Prana Pratishta) ಆಗುವುದರ ಜೊತೆಗೆ ಆವರಣದಲ್ಲಿ 6 ದೇವರ ಗುಡಿಗಳು ಇರಲಿದೆ.
ಆವರಣದ 4 ಮೂಲೆಯಲ್ಲಿ ಸೂರ್ಯ ದೇವ, ದೇವಿ ಭಗವತಿ, ಗಣೇಶ, ಮತ್ತು ಶಿವನ ಗುಡಿಗಳು ಇರಲಿದೆ. ಇಷ್ಟೇ ಅಲ್ಲದೇ ಉತ್ತರ ಭಾಗದಲ್ಲಿ ಅನ್ನಪೂರ್ಣ ಮತ್ತು ದಕ್ಷಿಣದಲ್ಲಿ ಹನುಮಂತನ ಗುಡಿ ಇರಲಿದೆ.
ಅಯೋಧ್ಯೆ ರಾಮಮಂದಿರ ಸಂಕೀರ್ಣದ ಒಳಗೆ, ಮಹರ್ಷಿ ವಾಲ್ಮೀಕಿ, ಮಹರ್ಷಿ ವಶಿಷ್ಠ, ಮಹರ್ಷಿ ವಿಶ್ವಾಮಿತ್ರ, ಮಹರ್ಷಿ ಅಗಸ್ತ್ಯ, ನಿಶಾದ್ ರಾಜ್, ಮಾತಾ ಶಬರಿ ಮತ್ತು ದೇವಿ ಅಹಲ್ಯಾ ಗುಡಿಗಳಿರಲಿವೆ. ಬಾಲ ರಾಮನ ಮೂರ್ತಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗಲಿದ್ದರೆ ಮೊದಲ ಮಹಡಿಯಲ್ಲಿ ಶ್ರೀರಾಮ ದರ್ಬಾರ್ ಇರುತ್ತದೆ.
ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ. ಮಂದಿರದಲ್ಲಿ ಪೂಜೆ-ಪುನಸ್ಕಾರಕ್ಕೆ ಅರ್ಚಕರ ಆಯ್ಕೆಯೂ ಆಗಿದೆ. ದೇಶಾದ್ಯಂತ ಆಯ್ಕೆಯಾದ 24 ಅರ್ಚಕರಲ್ಲಿ ಇಬ್ಬರು ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಒಬ್ಬರು ಹಿಂದುಳಿದ ವರ್ಗ (ಒಬಿಸಿ)ಕ್ಕೆ ಸೇರಿದವರಿದ್ದಾರೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ ದಿನದವರೆಗೆ ಯುಪಿ ಸರ್ಕಾರಿ ಬಸ್‌ಗಳಲ್ಲಿ ರಾಮ ಭಜನೆ ಪ್ರಸಾರ
ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣದ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ. ಮಂದಿರ ನಿರ್ಮಾಣ ಕಾರ್ಯಕ್ಕೆ ಮತ್ತಷ್ಟು ವೇಗ ನೀಡಲು ಹೆಚ್ಚುವರಿ 500 ಕಾರ್ಮಿಕರನ್ನು ಕರೆತರಲಾಗಿದೆ.
ಜನವರಿ 22ರ ಮಧ್ಯಾಹ್ನ 12 ಗಂಟೆ 29 ನಿಮಿಷ 8 ಸೆಕೆಂಡ್‌ನಿಂದ 12 ಗಂಟೆ 30 ನಿಮಿಷ 32 ಸೆಕೆಂಡ್ ನಡುವಿನ 84 ಸೆಕೆಂಡ್‌ಗಳ ಅವಧಿಯನ್ನು ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗಿದೆ. ರಾಮಮಂದಿರದಲ್ಲಿ ರಾಮನ ಪ್ರತಿಷ್ಠಾಪನೆ ಮುಹೂರ್ತಕ್ಕೆ ಸಮಯ ಸೂಚಿಸುವಂತೆ ದೇಶಾದ್ಯಂತ ಇರುವ ವಿದ್ವಾಂಸರು ಹಾಗೂ ಪ್ರಖ್ಯಾತ ಜ್ಯೋತಿಷಿಗಳಲ್ಲಿ ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಮನವಿ ಮಾಡಿತ್ತು. ಎಲ್ಲರಿಂದ ಬಂದ ಮಾಹಿತಿಯನ್ನು ಸಮನ್ವಯಗೊಳಿಸಿ ಕೊನೆಗೆ ಮುಹೂರ್ತ ಸಮಯ ಅಂತಿಮಗೊಳಿಸಲಾಗಿದೆ. ಇದನ್ನೂ ಓದಿ: Ayodhya Ram Mandir: ಆನೆ, ಸಿಂಹ, ಹನುಮಾನ್, ಗರುಡ ಮೂರ್ತಿಗಳ ಫೋಟೋ ಬಿಡುಗಡೆ
ಕಾಶಿಯ ಜ್ಯೋತಿಷಿಯ ಮುಹೂರ್ತ ಆಯ್ಕೆ
ಕಾಶಿಯ ಜ್ಯೋತಿಷಿ ಪಂಡಿತ್ ಗಣೇಶ್ವರ್ ಶಾಸ್ತ್ರಿ ದ್ರಾವಿಡ ಅವರು 84 ಸೆಕೆಂಡ್ ಅವಧಿಯ ಮುಹೂರ್ತವನ್ನು ಸೂಚಿಸಿದ್ದರು. ಜನವರಿ 22ರಂದು ಮಧ್ಯಾಹ್ನ 12 ಗಂಟೆ 29 ನಿಮಿಷ 08 ಸೆಕೆಂಡ್‌ನಿಂದ 12 ಗಂಟೆ 30 ನಿಮಿಷ 32 ಸೆಕೆಂಡ್ ನಡುವಿನ 84 ಸೆಕೆಂಡ್ ಶುಭ ಮುಹೂರ್ತ ಎಂದು ಸೂಚಿಸಿದ್ದರು.
5 ದಿನಾಂಕಗಳು ಮುಂದಿತ್ತು!
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಾಮನ ಮೂರ್ತಿ ಸ್ಥಾಪನೆಗೆ ದಿನಾಂಕಗಳನ್ನು ಸೂಚಿಸಿತ್ತು. ಇದಕ್ಕೆ ಉತ್ತರವಾಗಿ ದಿನಾಂಕಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿತ್ತು. ಇದರಲ್ಲಿ ಜನವರಿ ತಿಂಗಳ 17ರಿಂದ 25ನೇ ತಾರೀಕಿನ ನಡುವೆ 5 ದಿನಾಂಕಗಳು ಇದ್ದವು. ಕೊನೆಗೆ ಪಂಡಿತ್ ಗಣೇಶ್ವರ್ ಶಾಸ್ತ್ರಿ ದ್ರಾವಿಡ ಅವರು ಜನವರಿ 22ರ ದಿನಾಂಕ ಹಾಗೂ ಪುಣ್ಯ ಮುಹೂರ್ತವನ್ನು ಆಯ್ಕೆ ಮಾಡಿದರು. ಜನವರಿ 22ರ ಮುಹೂರ್ತ ದೇಶಕ್ಕೆ ಸಂಜೀವಿನಿ ಯೋಗ ತರುತ್ತದೆ ಎಂದು ಗಣೇಶ್ವರ ಶಾಸ್ತ್ರಿ ಹೇಳಿದ್ದಾರೆ.
ಲಕ್ನೋ: ಜನವರಿ 22 ರಂದು ಪ್ರಾಣ ಪ್ರತಿಷ್ಠಾ (Pran Prathishta) ಅಥವಾ ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನಾ ಸಮಾರಂಭಕ್ಕೆ ಆಹ್ವಾನಿಸಲಾದ ಎಲ್ಲಾ ಗಣ್ಯ ಅತಿಥಿಗಳಿಗೆ (Guest) ಈ ಸಂದರ್ಭದಲ್ಲಿ ವಿಶೇಷ ಉಡುಗೊರೆಗಳನ್ನು (Special Gift) ನೀಡಲಾಗುವುದು ಎಂದು ದೇವಾಲಯದ ಟ್ರಸ್ಟ್ ಬುಧವಾರ ತಿಳಿಸಿದೆ.
ಅಯೋಧ್ಯೆಯಲ್ಲಿ (Ayodhya) ರಾಮಮಂದಿರ (Ram Mandir) ನಿರ್ಮಾಣ ಮತ್ತು ನಿರ್ವಹಣೆಗಾಗಿ ಸ್ಥಾಪಿಸಲಾದ ಟ್ರಸ್ಟ್‌ನಿಂದ ಪವಿತ್ರ ಪ್ರಸಾದದ ಜೊತೆಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಗೀತಾ ಪ್ರೆಸ್‌ನಿಂದ ‘ಅಯೋಧ್ಯೆ ದರ್ಶನ’ ಪುಸ್ತಕದ ಪ್ರತಿಗಳನ್ನು ನೀಡಲಾಗುತ್ತದೆ. ನಿರ್ದಿಷ್ಟವಾಗಿ, 10,000 ಪ್ರತಿ ಪುಸ್ತಕವನ್ನು ಈ ಸಂದರ್ಭಕ್ಕಾಗಿ ಮುದ್ರಿಸಲಾಗುತ್ತದೆ.
ʼಅಯೋಧ್ಯಾ ದರ್ಶನʼ ಪುಸ್ತಕದಲ್ಲಿ ಏನಿದೆ? ‘ಅಯೋಧ್ಯಾ ದರ್ಶನ’ ಪುಸ್ತಕವು ನಗರದ ಇತಿಹಾಸ, ಪುರಾತನ ಮಹತ್ವ, ರಾಮಾಯಣಕ್ಕೆ ಸಂಬಂಧಿಸಿದ ಅಧ್ಯಾಯಗಳು ಮತ್ತು ದೇವಾಲಯಗಳ ಬಗ್ಗೆ ವಿವರಗಳನ್ನು ಒಳಗೊಂಡಂತೆ ಸಮಗ್ರ ಮಾಹಿತಿಯನ್ನು ಒದಗಿಸುತ್ತದೆ. ಪುಸ್ತಕದ ಮುಖಪುಟದಲ್ಲಿ ಭಗವಾನ್ ರಾಮನ ಚಿತ್ರಣ ಮತ್ತು ರಾಮಮಂದಿರದ ಚಿತ್ರವಿದೆ. ಅಲ್ಲದೇ ಪ್ರತಿಷ್ಠಾಪನಾ ಸಮಾರಂಭದ ದಿನಾಂಕವನ್ನೂ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ: ಮತ್ತೆ 500 ಕಾರ್ಮಿಕರಿಗೆ ಬುಲಾವ್, 4000 ಕಾರ್ಮಿಕರಿಂದ ಹಗಲಿರುಳು ಕೆಲಸ
ಈ ಕಾರ್ಯಕ್ರಮದ ಭಾಗವಾಗಿ ಉಡುಗೊರೆಯಾಗಿ ಕೊಡುವ ಎಲ್ಲಾ 10,000 ಪುಸ್ತಕಗಳು ಗೋರಖ್‌ಪುರದ ಗೀತಾ ಪ್ರೆಸ್‌ನಿಂದ ‘ಸುಪ್ರೀಮ್ ಆಫರಿಂಗ್’ ಎಂಬ ಶೀರ್ಷಿಕೆಯ ವಿಶೇಷ ಟಿಪ್ಪಣಿಯನ್ನು ಒಳಗೊಂಡಿರುತ್ತದೆ. ಈ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸುವ ಎಲ್ಲಾ ಅತಿಥಿಗಳಿಗೆ ‘ಅಯೋಧ್ಯೆ ದರ್ಶನ’ ಪುಸ್ತಕವನ್ನು ನೀಡಲಾಗುವುದು. ಆದರೆ ಆಯ್ದ ಕೆಲವು ವಿಶೇಷ ಅತಿಥಿಗಳು ಮೂರು ಹೆಚ್ಚುವರಿ ಪುಸ್ತಕಗಳನ್ನು ಸ್ವೀಕರಿಸುತ್ತಾರೆ. ಇದನ್ನೂ ಓದಿ: ಅಯೋಧ್ಯೆಯ ರಾಮಮಂದಿರದ ಒಳಗಿನ ಚಿತ್ರಣ ಹೇಗಿದೆ? ಇಲ್ಲಿದೆ ಕೆಲವು ಫೋಟೋಸ್
ಸರಿಸುಮಾರು 100 ಅತಿಥಿಗಳಿಗೆ ‘ಅಯೋಧ್ಯಾ ಮಾಹಾತ್ಮ್ಯ’ (ಅಯೋಧ್ಯೆಯ ಮಹಿಮೆ), ‘ಗೀತಾ ದೈನಂದಿನಿ’ (ಗೀತಾ ಡೈರಿ), ಮತ್ತು ಭಗವಾನ್ ರಾಮನ ಕುರಿತ ಲೇಖನವನ್ನು ಒಳಗೊಂಡ ‘ಕಲ್ಯಾಣ ಪಾತ್ರ’ ಪತ್ರಿಕೆಯ ವಿಶೇಷ ಆವೃತ್ತಿಯನ್ನು ಉಡುಗೊರೆಯಾಗಿ ನೀಡಲಾಗುತ್ತದೆ. ‘ಕಲ್ಯಾಣ’ ಪತ್ರಿಕೆಯ ವಿಶೇಷ ಆವೃತ್ತಿಯನ್ನು ಮೊದಲು 1972 ರಲ್ಲಿ ಪ್ರಕಟಿಸಲಾಯಿತು. ಗೀತಾ ಪ್ರೆಸ್ ಅಯೋಧ್ಯೆಯ ವೈಭವದ ಬಗ್ಗೆ ವಿವಿಧ ಲೇಖನಗಳನ್ನು ಒಳಗೊಂಡಿರುವ ‘ಅಯೋಧ್ಯಾ ಮಾಹಾತ್ಮ್ಯ’ ಪುಸ್ತಕವನ್ನು ಸಹ ಪ್ರಸ್ತುತಪಡಿಸುತ್ತದೆ. ಆರ್ಟ್ ಪೇಪರ್‌ನಲ್ಲಿ 45 ಪುಟಗಳ ಮುದ್ರಿತ ಚಿತ್ರಗಳನ್ನು ಹೊಂದಿರುವ ಈ ಪುಸ್ತಕವು ಓದುಗರಿಗೆ ದೃಶ್ಯ ರಸದೌತಣವಾಗಿದೆ. ಇದನ್ನೂ ಓದಿ: 39 ದಿನಗಳಲ್ಲಿ ಶಬರಿಮಲೆಗೆ 204 ಕೋಟಿ ರೂ. ಆದಾಯ- ಕಳೆದ ವರ್ಷ ಎಷ್ಟಿತ್ತು?
ʼಗೀತಾ ದೈನಂದಿನಿʼ ಡೈರಿಯ ವಿಶೇಷತೆಯೇನು? ಇದಲ್ಲದೆ, ಹೊಸ ವರ್ಷ ಪ್ರಾರಂಭವಾಗುತ್ತಿದ್ದಂತೆ, ಗೀತಾ ಪ್ರೆಸ್ ಇಂಗ್ಲಿಷ್ ಮತ್ತು ಹಿಂದಿ ದಿನಾಂಕಗಳೊಂದಿಗೆ ಭಗವದ್ಗೀತೆಯ ಶ್ಲೋಕಗಳನ್ನು ಒಳಗೊಂಡಿರುವ ‘ಗೀತಾ ದೈನಂದಿನಿ’ ಡೈರಿಯನ್ನು ನೀಡುತ್ತದೆ. ದಿನಚರಿಯು ಉಪವಾಸ, ಹಬ್ಬಗಳು ಮತ್ತು ಸೂರ್ಯೋದಯ ಮತ್ತು ಸೂರ್ಯಾಸ್ತದ ಸಮಯದ ಬಗ್ಗೆ ವಿವರಗಳನ್ನು ಒಳಗೊಂಡಿದೆ. ಇದು ವರ್ಷವಿಡೀ ಮಾಹಿತಿಯನ್ನು ಹುಡುಕುವ ವ್ಯಕ್ತಿಗಳಿಗೆ ಜನಪ್ರಿಯ ಆಯ್ಕೆಯಾಗಿದೆ. ಇದನ್ನೂ ಓದಿ: Ayodhya Ram Mandir – ಕಾರ್ಯಕ್ರಮಕ್ಕೆ ಆಹ್ವಾನಿತ ಗಣ್ಯರ ಕಂಪ್ಲೀಟ್ ಲಿಸ್ಟ್
ದೇವಾಲಯದ ಮೊದಲ ಹಂತವು ಪೂರ್ಣಗೊಳ್ಳುವ ಹಂತದಲ್ಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 22 ರಂದು ರಾಮಲಲ್ಲಾ ವಿಗ್ರಹದ ‘ಪ್ರಾಣ ಪ್ರತಿಷ್ಠೆ’ಯಲ್ಲಿ ಭಾಗವಹಿಸಲಿದ್ದಾರೆ. ಸಾಂಪ್ರದಾಯಿಕ ನಾಗರ ಶೈಲಿಯಲ್ಲಿ ನಿರ್ಮಿಸಲಾದ ದೇವಾಲಯದ ಸಂಕೀರ್ಣವು 380 ಅಡಿ ಉದ್ದ (ಪೂರ್ವ-ಪಶ್ಚಿಮ ದಿಕ್ಕು), 250 ಅಡಿ ಅಗಲ ಮತ್ತು 161 ಅಡಿ ಎತ್ತರವಿದೆ. ದೇವಾಲಯದ ಪ್ರತಿಯೊಂದು ಮಹಡಿಯು 20 ಅಡಿ ಎತ್ತರ ಮತ್ತು ಒಟ್ಟು 392 ಕಂಬಗಳು ಮತ್ತು 44 ದ್ವಾರಗಳನ್ನು ಹೊಂದಿದೆ. ಇದನ್ನೂ ಓದಿ: Ram Mandir: ಭಗವಾನ್ ರಾಮನ ಅಜ್ಜಿ ಮನೆಯಿಂದ 3,000 ಕ್ವಿಂಟಾಲ್ ಅಕ್ಕಿ, ಅತ್ತೆ ಮನೆಯಿಂದ 1,100 ತಟ್ಟೆ ಉಡುಗೊರೆ
ನವದೆಹಲಿ: ಮುಂದಿನ ವರ್ಷದ ಜನವರಿ 22 ರಂದು ಅಯೋಧ್ಯೆ ರಾಮ ಮಂದಿರದಲ್ಲಿ (Ram Mandir) ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆಯನ್ನು (Pran Prathistha) ಪ್ರಧಾನಿ ಮೋದಿ (PM Narendra Modi) ನೆರವೇರಿಸಲಿದ್ದಾರೆ.
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ರಾಮಲಲ್ಲಾ (Ram Lalla) ಮೂರ್ತಿಯನ್ನು ರಚಿಸಿದ್ದು ಈಗಾಗಲೇ ಅವರು ಅಯೋಧ್ಯೆಯಲ್ಲಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಅಯೋಧ್ಯೆ ಪ್ರವೇಶ ದ್ವಾರ ರಾಮ ಮಂದಿರ ಮಾದರಿಯಲ್ಲಿ ನಿರ್ಮಾಣವಾಗಲಿದ್ದು, ರಾಷ್ಟ್ರೀಯ ಹೆದ್ದಾರಿ 28ರ ದ್ವಾರಕ್ಕೆ ʼಶ್ರೀ ರಾಮ ದ್ವಾರʼ ಎಂದು ಹೆಸರನ್ನು ಇಡಲು ಯೋಗಿ ಸರ್ಕಾರ ನಿರ್ಧಾರ ಕೈಗೊಂಡಿದೆ.
ಅಯೋಧ್ಯೆಯಲ್ಲಿ (Ayodhya) ರಾಮಮಂದಿರದ ಮೊದಲ ಹಂತದ ನಿರ್ಮಾಣ ಕಾರ್ಯ ಡಿಸೆಂಬರ್ 30ರೊಳಗೆ ಪೂರ್ಣಗೊಳ್ಳಲಿದ್ದು, ದರ್ಶನ ಮಾಡಲು ಭಕ್ತರಿಗೆ ಅನುವು ಮಾಡಿಕೊಡಲಾಗುವುದು ಎಂದು ರಾಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ (Nripendra Mishra) ಮೂರು ವಾರಗಳ ಹಿಂದೆ ತಿಳಿಸಿದ್ದರು.
ದೇವಾಲಯವನ್ನು ಮೂರು ಹಂತಗಳಲ್ಲಿ ನಿರ್ಮಿಸಲಾಗುತ್ತಿದೆ. ಅದರಲ್ಲಿ ಮೊದಲ ಹಂತದ ನಿರ್ಮಾಣ ಕಾರ್ಯ ಪೂರ್ಣಗೊಂಡ ನಂತರ ಭಕ್ತರು ದೇವಾಲಯವನ್ನು ಪ್ರವೇಶಿಸಲು ಸಾಧ್ಯವಾಗುತ್ತದೆ ಎಂದು ಹೇಳಿದ್ದರು. ಇದನ್ನೂ ಓದಿ: ಮುಂದೆ ತಮಿಳು ನಾಯಕನಿಗೆ ಪ್ರಧಾನಿ ಪಟ್ಟ: ಅಮಿತ್ ಶಾ
ರಾಮಮಂದಿರ ನಿರ್ಮಾಣದ ಮೊದಲ ಹಂತವನ್ನು 2023ರ ಡಿಸೆಂಬರ್ 30 ರೊಳಗೆ ಪೂರ್ಣಗೊಳಿಸಲು ದೇವಸ್ಥಾನದ ಟ್ರಸ್ಟ್ ನಿರ್ಧರಿಸಿದೆ. ಮೊದಲ ಹಂತದಲ್ಲಿ, ನೆಲ ಮಹಡಿಯಲ್ಲಿ ಐದು ‘ಮಂಟಪಗಳು’ ಅವುಗಳಲ್ಲಿ ಅತ್ಯಂತ ಪ್ರಮುಖವಾದದ್ದು ಗರ್ಭಗುಡಿ. ಗರ್ಭಗುಡಿಯಲ್ಲಿ ದೇವರ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುತ್ತದೆ. ಐದು ಮಂಟಪಗಳ ನಿರ್ಮಾಣದಲ್ಲಿ ಸುಮಾರು 160 ಕಂಬಗಳನ್ನು ಬಳಸಲಾಗಿದೆ. ದೇವಾಲಯದ ಕೆಳಗಿನ ಸ್ತಂಭದಲ್ಲಿ ಶ್ರೀರಾಮನ ಸಂಕ್ಷಿಪ್ತ ವಿವರಣೆಯನ್ನು ಪ್ರಾರಂಭಿಸಲಾಗುವುದು. ವಿದ್ಯುತ್ ಸೌಲಭ್ಯ ಮತ್ತು ಇತರ ಸೌಲಭ್ಯಗಳನ್ನು ಪೂರ್ಣಗೊಳಿಸಬೇಕು. ಈ ಎಲ್ಲಾ ಕಾಮಗಾರಿಗಳು ಡಿಸೆಂಬರ್ 30 ರೊಳಗೆ ಪೂರ್ಣಗೊಳ್ಳಲಿವೆ. ಎರಡನೇ ಮಹಡಿಗಳನ್ನು 2024ರ ಡಿಸೆಂಬರ್ 30 ರೊಳಗೆ ಪೂರ್ಣಗೊಳಿಸಲಾಗುವುದು ಎಂದು ವಿವರಿಸಿದ್ದರು.