Tag: ಪ್ರಿಯಕರ

  • ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

    ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

    ಚಿಕ್ಕಬಳ್ಳಾಪುರ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.

    ನಗರರದ 31 ನೇ ವಾರ್ಡ್ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣದ ಹಿಂಭಾಗದ ಇಂದಿರಾನಗರದ ಮನೆಯೊಂದರಲ್ಲಿ ಬುಧವಾರ ಸಂಜೆ ಅಪರಿಚಿತ ವ್ಯಕ್ತಿಯನ್ನ ರಾಘವೇಂದ್ರ ಎಂಬಾತ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದ. ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ (Chikkaballapur) ನಗರ ಪೊಲೀಸರು ಭೇಟಿ ಮಾಡಿ ಕೊಲೆಯಾದವನ ಗುರುತು ಪತ್ತೆ ಹಚ್ಚಿದ್ದು ಮೃತ ವ್ಯಕ್ತಿ ಸಾದಲಿ ಗ್ರಾಮದ 40 ವರ್ಷದ ಅಂಜಿನಪ್ಪ ಪೈಂಟರ್ ಕೆಲಸ ಅಂತ ತಿಳಿದುಬಂದಿದೆ.

    ಘಟನೆ ನಂತರ ಕೊಲೆಗಾರ ರಾಘವೇಂದ್ರ ಹಾಗೂ ಮನೆಯಲ್ಲಿದ್ದ ಆಶಾ ಎಂಬಾಕೆಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ವಿಚಾರಣೆ ನಂತರ ಕೊಲೆಯಾದ ಅಂಜನಪ್ಪ ಹಾಗೂ ಆಶಾಳಿಗೆ ಕಳೆದ 1 ವರ್ಷದಿಂದ ಪರಿಚಯ ಸಂಬಂಧವಿರುವ ವಿಚಾರ ಬಹಿರಂಗಗೊಂಡಿದೆ. ನಿನ್ನೆ ಸಂಜೆ ಆಶಾಳನ್ನ ಭೇಟಿ ಮಾಡಲು ಮನೆಗೆ ಹೋಗಿರೋ ಅಂಜನಪ್ಪ, ನನ್ನ ಆಶಾ ಅವೈಡ್ ಮಾಡಿದ್ದು ಬಲವಂತವಾಗಿ ಮನೆಗೆ ಬಂದ ಅಂತ ಆಶಾ ಪೊಲೀಸರ ಬಳಿ ಹೇಳಿಕೊಂಡಿದ್ದಾಳೆ. ಇದನ್ನೂ ಓದಿ: ಹ್ಯಾರಿಸ್‍ಗೆ ಸಂಕಷ್ಟ – ಚುನಾವಣಾ ತಕರಾರು ಅರ್ಜಿ ವಿಚಾರಣೆಗೆ ಹೈಕೋರ್ಟ್ ಅಸ್ತು

    ಈ ವೇಳೆ ಆಶಾ ತನ್ನ ಗಂಡನಿಗೆ ಕರೆ ಮಾಡುವುದಾಗಿ ಹೇಳಿದಾಗ ಆಕೆಯ ಫೋನ್ ಕಸಿದುಕೊಂಡು ಒಡೆದು ಹಾಕಿದ್ದು, ತದನಂತರ ಬೇರೆಯವರ ಫೋನ್ ಮೂಲಕ ಮೈದುನ ರಾಘವೇಂದ್ರಗೆ ಕರೆ ಮಾಡಿ ತಿಳಿಸಿದಳಂತೆ. ಹೀಗಾಗಿ ಮನೆಗೆ ಬಂದ ಮೈದುನ ರಾಘವೇಂದ್ರ ಹಾಗೂ ಅಂಜನಪ್ಪನ ನಡುವೆ ಜಗಳ ನಡೆದು ಗಲಾಟೆಯಲ್ಲಿ ರಾಘವೇಂದ್ರ ಅಂಜನಪ್ಪನ ತಲೆಗೆ ರಾಡ್ ನಿಂದ ಬಲವಾಗಿ ಹೊಡೆದು ಕೊಲೆ ಮಾಡಿದ್ದಾನೆ. ಸದ್ಯ ಆಶಾ ಹಾಗೂ ರಾಘವೇಂದ್ರ ಇಬ್ಬರನ್ನ ಬಂಧಿಸಿದ್ದು, ಚಿಕ್ಕಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಪ್ರಿಯಕರನ ಮನೆ ಮೇಲೇರಿ ಯುವತಿ ಆತ್ಮಹತ್ಯೆಗೆ ಯತ್ನ

    ಪ್ರಿಯಕರನ ಮನೆ ಮೇಲೇರಿ ಯುವತಿ ಆತ್ಮಹತ್ಯೆಗೆ ಯತ್ನ

    ಬೆಂಗಳೂರು: ಪ್ರಿಯಕರನ ಮನೆ ಮೇಲೇರಿ ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    ಈ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ನಡೆದಿದೆ. ಯುವಕ ಹಾಗೂ ಯುವತಿ ಕಳೆದ ನಾಲ್ಕೈದು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಇದೀಗ ಯುವಕನು ಯುವತಿಗೆ ಕೈ ಕೊಟ್ಟಿದ್ದಾನೆ.

    ಪ್ರಿಯಕರ ಕೈಕೊಟ್ಟಿದ್ದರಿಂದ ಬೇಸರಗೊಂಡ ಯುವತಿ ನೇರವಾಗಿ ಆತನ ಮನೆಗೆ ತೆರಳಿದ್ದಾಳೆ. ಅಲ್ಲದೆ ಮನೆಯ ಟೆರೇಸ್‍ಗೆ ತೆರಳಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾಳೆ. ಇದನ್ನೂ ಓದಿ: ಜಗತ್ತಿನಲ್ಲಿ ಒಬ್ಬನಿಂದ ರೇಪ್ ಮಾಡಲು ಸಾಧ್ಯವಿಲ್ಲ: ಅಮರೇಗೌಡ ವಿವಾದಿತ ಹೇಳಿಕೆ

    ಇತ್ತ ಯುವತಿ ಮನೆಗೆ ಬರುತ್ತಿದ್ದಂತೆಯೇ ಯುವಕ ಮನೆಯಿಂದ ಎಸ್ಕೇಪ್ ಆಗಿದ್ದಾನೆ. ಹೀಗಾಗಿ ಕೈಯಲಿ ಚಾಕು ಹಿಡಿದು ಪ್ರಿಯಕರನ ಮನೆ ಟೆರೇಸ್ ಮೇಲೆ ಯುವತಿ ನಿಂತಿದ್ದಾಳೆ. ಅಲ್ಲದೇ ಈಗಲೇ ಪ್ರಿಯಕರನನ್ನು ಇಲ್ಲಿಗೆ ಕರೆಸಿ ಎಂದು ಬೇಡಿಕೆ ಇಟ್ಟಿದ್ದಾಳೆ.

  • ಹಾಸನದಲ್ಲಿ ಕತ್ತು ಕೊಯ್ದು ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

    ಹಾಸನದಲ್ಲಿ ಕತ್ತು ಕೊಯ್ದು ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

    ಹಾಸನ: ಪ್ರೇಮ ವೈಫಲ್ಯದಿಂದ (Love Failure) ಪ್ರಿಯಕರ ತನ್ನ ಪ್ರೇಯಸಿಯ (Lover) ಕತ್ತು ಕುಯ್ದು ಬರ್ಬರವಾಗಿ ಹತ್ಯೆಗೈದ ಘಟನೆ ಹಾಸನ (Hassan) ತಾಲೂಕಿನ ಕುಂತಿಗುಡ್ಡದಲ್ಲಿ (Kuntigudda) ನಡೆದಿದೆ.

    ಸುಚಿತ್ರಾ (20) ಕೊಲೆಯಾದ ಯುವತಿ. ತೇಜಸ್ (23) ಕೊಲೆ ಮಾಡಿರುವ ಪ್ರಿಯಕರ. ಸುಚಿತ್ರಾ ಆಲೂರು ತಾಲೂಕಿನ ಕವಳಗೆರೆ ಗ್ರಾಮದವಳಾಗಿದ್ದು, ಮೊಸಳೆಹೊಸಳ್ಳಿ ಎಂಜಿನಿಯರ್ ಕಾಲೇಜಿನಲ್ಲಿ ಬಿಇ ಮೆಕ್ಯಾನಿಕಲ್ ಪದವಿ ಓದುತ್ತಿದ್ದಳು. ಮೂಲತಃ ಹಾಸನ ತಾಲೂಕಿನ ಶಂಕರನಹಳ್ಳಿ ಗ್ರಾಮದವನಾದ ತೇಜಸ್ ಸುಚಿತ್ರಾಳ ಕತ್ತು ಕೊಯ್ದು ಬರ್ಬರವಾಗಿ ಕೊಲೆಗೈದಿದ್ದಾನೆ. ಇದನ್ನೂ ಓದಿ: ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ – ಮಗಳ ಮನೆಗೆ ತೆರಳುತ್ತಿದ್ದ ಮಹಿಳೆ ದಾರುಣ ಸಾವು

    ಪ್ರೀತಿಸಲು ನಿರಾಕರಿಸಿದ್ದಕ್ಕೆ ತೇಜಸ್ ಸುಚಿತ್ರಾಳನ್ನು ತನ್ನೊಂದಿಗೆ ಕುಂತಿಬೆಟ್ಟಕ್ಕೆ ಕರೆದೊಯ್ದಿದ್ದಾನೆ. ಇಂದು ಮುಂಜಾನೆ ಯುವತಿಯನ್ನು ಒಂಟಿಯಾಗಿ ಕರೆದೊಯ್ದು ಬಳಿಕ ಕುತ್ತಿಗೆ ಸೀಳಿ ಹತ್ಯೆ ಮಾಡಿದ್ದಾನೆ. ಘಟನೆ ಬಳಿಕ ಆರೋಪಿ ತೇಜಸ್ ಎಸ್ಕೇಪ್ ಆಗಿದ್ದ. ಇದನ್ನೂ ಓದಿ: ಹಳಿಯಲ್ಲಿ ಕಬ್ಬಿಣದ ರಾಡ್, ದೊಡ್ಡ ಮರದ ದಿಮ್ಮಿ – ಮೈಸೂರಿನಲ್ಲಿ ತಪ್ಪಿತು ಭಾರೀ ರೈಲು ದುರಂತ

    ತೇಜಸ್ ಕೂಡಾ ಮೊಸಳೆಹೊಸಳ್ಳಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಮುಗಿಸಿದ್ದ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 10 ಕೋಟಿ ಆಸ್ತಿ ಆಸೆಗೆ ಪತ್ನಿಯನ್ನೇ ಕೊಂದು ಸಹಜ ಸಾವೆಂದು ನಾಟಕವಾಡಿ ಸಿಕ್ಕಿಬಿದ್ದ ಪತಿ

  • ಮದ್ವೆಯಾಗಿದ್ರೂ ಮತ್ತಿಬ್ಬರೊಂದಿಗೆ ಲವ್ವಿ ಡವ್ವಿ; ಪ್ರಿಯಕರನಿಂದಲೇ ತಾಯಿ-ಮಗುವಿನ ಹತ್ಯೆ

    ಮದ್ವೆಯಾಗಿದ್ರೂ ಮತ್ತಿಬ್ಬರೊಂದಿಗೆ ಲವ್ವಿ ಡವ್ವಿ; ಪ್ರಿಯಕರನಿಂದಲೇ ತಾಯಿ-ಮಗುವಿನ ಹತ್ಯೆ

    ಬೆಂಗಳೂರು: ಇಲ್ಲಿನ ಬಾಗಲಗುಂಟೆ ಠಾಣಾ (Bagalagunte Police Station) ವ್ಯಾಪ್ತಿಯಲ್ಲಿ ನಡೆದಿದ್ದ ತಾಯಿ-ಮಗು ಹತ್ಯೆ ಪ್ರಕರಣದಲ್ಲಿ ಸ್ಫೋಟಕ ಸತ್ಯ ಬಯಲಾಗಿದ್ದು, ಮೃತಳ ಪ್ರಿಯಕರ ಶೇಖರ್‌ನನ್ನ ಪೊಲೀಸರು ಬಂಧಿಸಿದ್ದಾರೆ.

    ಕಳೆದ ಎರಡು ದಿನಗಳ ಹಿಂದೆಯಷ್ಟೇ ನವನೀತ (35) ಹಾಗೂ ಪುತ್ರ ಸಾಯಿ ಸೃಜನ್ (8) ಹತ್ಯೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಪ್ರಿಯಕರ ಶೇಖರ್‌ನನ್ನ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

    CRIME

    ಮದುವೆಯಾದ್ಮೇಲೂ ಮತ್ತಿಬ್ಬರೊಂದಿಗೆ ಪ್ರೇಮ:
    ಕೊಲೆಯಾದ ಮಹಿಳೆ (Women) ನವನೀತ ತನ್ನ ಪತಿ ಚಂದ್ರುವಿನಿಂದ ಬೇರ್ಪಟ್ಟು ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಕಳೆದ 2 ವರ್ಷಗಳಿಂದ ಮಗ ಸಾಯಿ ಸೃಜನ್ ಜೊತೆಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ನವನೀತ ಗಂಡಿನಿಂದ ದೂರಾದ ಮೇಲೆ ಆರೋಪಿ ಶೇಖರ್ ಜೊತೆಗೆ ಸ್ನೇಹ ಬೆಳೆಸಿದ್ದಳು. ಬಳಿಕ ಇಬ್ಬರು ಪ್ರೀತಿ ಮಾಡೋಕೆ ಶುರು ಮಾಡಿದ್ದರು. ಆದ್ರೆ ನವನೀತ ಇತ್ತೀಚೆಗೆ ಶೇಖರ್ ಬಿಟ್ಟು ಲೋಕೇಶ್ ಎಂಬಾತನೊಂದಿಗೆ ಸಂಪರ್ಕ ಹೊಂದಿದ್ದಳು. ಇದನ್ನ ಕಂಡ ಮೊದಲ ಪ್ರಿಯಕರ ಶೇಖರ್ ನವನೀತಳಿಗೆ ವಾರ್ನಿಂಗ್ ಕೊಟ್ಟಿದ್ದಾನೆ. ಲೋಕೇಶ್ ಸಹವಾಸ ಬಿಡುವಂತೆ ಎಚ್ಚರಿಕೆ ಕೊಟ್ಟಿದ್ದಾನೆ, ಆಕೆ ಮೇಲೆ ಹಲ್ಲೆಯನ್ನೂ ಮಾಡಿದ್ದಾನೆ. ಆದರೂ ನನವನೀತ ಲೋಕೇಶ್ ಜೊತೆಗೆ ಸಂಪರ್ಕ ಹೊಂದಿದ್ದಳು.

    ಇದರಿಂದ ಬೇಸತ್ತಿದ್ದ ಶೇಖರ್ ಶನಿವಾರ ಎಂದಿನಂತೆ ನವನೀತಳ ಮನೆಗೆ ಬಂದಿದ್ದಾನೆ. ನವನೀತಳ ಮಗನಿಗೆ ಜ್ಯೂಸ್ ತೆಗೆದುಕೊಂಡು ಬರುವಂತೆ ಹೇಳಿದ್ದಾನೆ. ಈ ವೇಳೆ ಆಕೆಯೊಂದಿಗೆ ಜಗಳ ಶುರು ಮಾಡಿ, ಚಾಕುವಿನಿಂದ ಕುತ್ತಿಗೆ ಹಿರಿದು ಕೊಲೆ ಮಾಡಿದ್ದಾನೆ. ನಂತರ ಅಂಗಡಿಯಿಂದ ಜ್ಯೂಸ್ ತೆಗೆದುಕೊಂಡುಬಂದ ಮಗುವಿಗೆ ಮ್ಯಾಜಿಕ್ ಹೇಳಿಕೊಡುತ್ತೇನೆ ಎಂದು ನಂಬಿಸಿ, ಸೀರೆಯಿಂದ ಮಗುವಿನ ಎರಡೂ ಕೈಕಾಲುಗಳನ್ನು ಕಟ್ಟಿದ್ದಾನೆ. ತಲೆ ದಿಂಬಿನಿಂದ ಉಸಿರುಗಟ್ಟಿಸಿ ಬಾಲಕನನ್ನೂ ಕೊಲೆ ಮಾಡಿದ್ದಾನೆ. ಎರಡು ಮೃತ ದೇಹಗಳನ್ನ ರೂಮಿನಲ್ಲಿ ಮಂಚದ ಮೇಲೆ ಎಸೆದು ಪರಾರಿಯಾಗಿದ್ದಾನೆ.

    ಅಕ್ಕ ಪಕ್ಕದ ಏರಿಯಾ ಜನರಿಗೆ ನನಗೆ ಮೋಸ ಮಾಡಿದ್ದಾಳೆ ಅದಕ್ಕಾಗಿ ಕೊಲೆ ಮಾಡಿರುವುದಾಗಿ ಹೇಳಿಕೊಂಡಿದ್ದ. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿಮ್ಮ ತಂದೆ ತೋರಿಸಿದ ಹುಡುಗನನ್ನೇ ಮದುವೆಯಾಗು: ಪ್ರೇಯಸಿಗೆ ವೀಡಿಯೋ ಕಾಲ್‌ ಮಾಡಿ ಆಸ್ಪತ್ರೆ ಬೆಡ್‌ನಲ್ಲೇ ಪ್ರಾಣ ಬಿಟ್ಟ

    ನಿಮ್ಮ ತಂದೆ ತೋರಿಸಿದ ಹುಡುಗನನ್ನೇ ಮದುವೆಯಾಗು: ಪ್ರೇಯಸಿಗೆ ವೀಡಿಯೋ ಕಾಲ್‌ ಮಾಡಿ ಆಸ್ಪತ್ರೆ ಬೆಡ್‌ನಲ್ಲೇ ಪ್ರಾಣ ಬಿಟ್ಟ

    ಬೆಂಗಳೂರು: ರೇಬಿಸ್‌ನಿಂದ (Rabies) ಬಳಲುತ್ತಿದ್ದ ವ್ಯಕ್ತಿ ತನ್ನ ಪ್ರೇಯಸಿಗೆ ವೀಡಿಯೋ ಕಾಲ್‌ ಮಾಡಿ ಮಾತನಾಡುತ್ತಲೇ ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟಿರುವ ಮನಕಲಕುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ನೆಲಮಂಗಲ ನಿವಾಸಿ ಕಿರಣ್‌ (22) ರೇಬಿಸ್‌ಗೆ ಬಲಿಯಾದ ವ್ಯಕ್ತಿ. ರೇಬಿಸ್‌ ರೋಗಕ್ಕೆ ತುತ್ತಾಗಿ ತೀವ್ರ ಅಸ್ವಸ್ಥಗೊಂಡಿದ್ದ. ಬೆಂಗಳೂರಿನ ನಿಮ್ಹಾನ್ಸ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಹೆಸ್ಕಾಂ ಗುತ್ತಿಗೆ ನೌಕರ ಸಾವು

    ನನ್ನ ಅಂತ್ಯಕ್ರಿಯೆಗೆ ನೀನು ಬರಲೇಬೇಕು ಎಂದು ಪ್ರೇಯಸಿಗೆ ಕೈ ಮುಗಿಯುತ್ತಲೇ ಪ್ರಾಣ ಬಿಟ್ಟಿದ್ದಾನೆ. ತಾನು ಬದುಕುವುದಿಲ್ಲ ಎಂದು ತಿಳಿದು ಪ್ರಿಯತಮೆಗೆ ವೀಡಿಯೋ ಕಾಲ್‌ ಮಾಡಿದ್ದ. ನಾನಿನ್ನು ಹೆಚ್ಚು ದಿನಗಳು ಬದುಕುವುದಿಲ್ಲ. ನಿನ್ನೊಟ್ಟಿಗೆ ಬದುಕುವ ಅದೃಷ್ಟ ನನಗಿಲ್ಲ. ನಿಮ್ಮ ತಂದೆ ಹೇಳಿದಂತೆ ಕೇಳು. ಅವರು ತೋರಿಸಿದ ಹುಡುಗನನ್ನು ಮದುವೆ ಆಗು ಎಂದು ಸಲಹೆ ನೀಡಿದ್ದಾನೆ.

    ಈ ಘಟನೆ ಆಗಸ್ಟ್‌ 9 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಿರಣ್‌ ತನ್ನ ಪ್ರೇಯಸಿಗೆ ಕಾಲ್ಗೆಜ್ಜೆ, ಉಂಗುರ ಕೊಡಿಸಿದ್ದ. ಈ ವಿಷಯ ತಿಳಿದ ಯುವತಿ ತಂದೆ ಪ್ರೀತಿಯನ್ನು ನಿರಾಕರಿಸಿ, ಬೈದು ಬುದ್ಧಿ ಹೇಳಿದ್ದರಂತೆ. ಇತ್ತ ಕಿರಣ್‌ ಕುಟುಂಬಸ್ಥರು, ನನ್ನ ಮಗನಿಗೆ ಯುವತಿ ಕುಟುಂಬಸ್ಥರೇ ಏನೋ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ರಾಯಲ್ ಎನ್‍ಫೀಲ್ಡ್‌ಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ – ಮೂವರು ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅವೈಡ್ ಮಾಡ್ತಿದ್ದ ಲವ್ವರ್ ಮನೆಗೆ ಹೋಗಿ ಗಲಾಟೆ ಮಾಡಿ ಚಾಕು ಹಾಕಿದ್ಳು!

    ಅವೈಡ್ ಮಾಡ್ತಿದ್ದ ಲವ್ವರ್ ಮನೆಗೆ ಹೋಗಿ ಗಲಾಟೆ ಮಾಡಿ ಚಾಕು ಹಾಕಿದ್ಳು!

    ಬೆಂಗಳೂರು: ತಾನು ಪ್ರೀತಿಸುತ್ತಿದ್ದ ಯುವಕನಿಗೇ ಯುವತಿಯೊಬ್ಬಳು ಚಾಕುವಿನಿಂದ ಇರಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    ಈ ಘಟನೆ ಬೆಂಗಳೂರಿನ ವಿವೇಕನಗರದಲ್ಲಿ (Vivekanagar) ನಡೆದಿದೆ. ಜಂಟಿ ದಾಸ್ ಚಾಕು ಇರಿತಕ್ಕೆ ಒಳಗಾದ ಪ್ರಿಯಕರನಾಗಿದ್ದು, ಬರೂತಿ ಈ ಕೃತ್ಯ ಎಸಗಿದ್ದಾಳೆ. ಇದನ್ನೂ ಓದಿ: ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ರಕ್ಷಣೆ- ಟ್ರಾಫಿಕ್ ಕಾನ್ಸ್‌ಸ್ಟೇಬಲ್ ಕಾರ್ಯಕ್ಕೆ ಮೆಚ್ಚುಗೆ

    ದಾಸ್ ಹಾಗೂ ಬರೂತಿ ಕೆಲ ಸಮಯಗಳಿಂದ ಪರಸ್ಪರ ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ದಾಸ್, ಪ್ರೇಯಸಿ ಬರೂತಿಯಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದನು. ಪ್ರಿಯಕರನ ವರ್ತನೆ ನೋಡಿ ರೊಚ್ಚಿಗೆದ್ದ ಬರೂತಿ, ದಾಸ್ ಮನೆಯಲ್ಲಿ ಗಲಾಟೆ ಮಾಡಿ ಚಾಕುವಿನಿಂದ ಇರಿದಿದ್ದಾಳೆ.

    ಘಟನೆಯಲ್ಲಿ ಪ್ರಿಯಕರ ಜಂಟಿ ದಾಸ್ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಇತ್ತ ಯುವತಿ ಬರೂತಿಯನ್ನು ವಿವೇಕನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿವಾಹಿತೆಗೆ ಪ್ರಿಯಕರನಿಂದ ಬ್ಲ್ಯಾಕ್‌ಮೇಲ್ – ಮೊಬೈಲ್‌ನಲ್ಲಿ ವೀಡಿಯೋ ಆನ್ ಮಾಡಿ ಮಹಿಳೆ ನೇಣಿಗೆ ಶರಣು

    ವಿವಾಹಿತೆಗೆ ಪ್ರಿಯಕರನಿಂದ ಬ್ಲ್ಯಾಕ್‌ಮೇಲ್ – ಮೊಬೈಲ್‌ನಲ್ಲಿ ವೀಡಿಯೋ ಆನ್ ಮಾಡಿ ಮಹಿಳೆ ನೇಣಿಗೆ ಶರಣು

    ವಿಜಯಪುರ: ವಿವಾಹಿತ ಮಹಿಳೆ (Woman) ಪ್ರಿಯಕರನ ಬ್ಲ್ಯಾಕ್‌ಮೇಲ್‌ಗೆ (Blackmail) ಬೇಸತ್ತು ಮೊಬೈಲಿನಲ್ಲಿ ವೀಡಿಯೊ (Video) ಆನ್ ಮಾಡಿ ನೇಣಿಗೆ ಶರಣಾಗಿರುವ ಭಯಾನಕ ಘಟನೆ ವಿಜಯಪುರದ (Vijayapura) ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ನಡೆದಿದೆ.

    ಸುಹಾನಾ ಸೋನಾರ್ (21) ಆತ್ಮಹತ್ಯೆಗೆ ಶರಣಾದ ವಿವಾಹಿತ ಮಹಿಳೆ. ಆಕೆಗೆ ಪ್ರಿಯಕರ ಅಲ್ತಾಫ್ ಸುಲೈಮಾನ್ ಗಂಡನನ್ನು ಬಿಟ್ಟು ನನ್ನೊಂದಿಗೆ ಬಾ, ಇಲ್ಲವೆಂದರೆ ನನ್ನೊಂದಿಗಿರುವ ಫೋಟೋವನ್ನು ನಿನ್ನ ಗಂಡನಿಗೆ ತೋರಿಸುತ್ತೇನೆ ಎಂದು ಹೇಳಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ. ಇದರಿಂದ ಮರ್ಯಾದೆಗೆ ಹೆದರಿ ಸುಹಾನಾ ಆತ್ಮಹತ್ಯೆ ಮಾಡಕೊಂಡಿದ್ದಾಳೆ.

     

    ಉಪ್ಪಲದಿನ್ನಿ ಗ್ರಾಮದ ಅಲ್ತಾಫ್ ಸುಲೈಮಾನ್ 1 ವರ್ಷದ ಹಿಂದೆ ಸುಹಾನಾಳೊಂದಿಗೆ ಸಲುಗೆ ಬೆಳೆಸಿ ಪ್ರೀತಿಸುತ್ತಿದ್ದ. ಈ ವಿಷಯ ಸುಹಾನಾ ಪೋಷಕರಿಗೆ ಗೊತ್ತಾಗಿ ಹಿರಿಯರ ಸಮ್ಮುಖದಲ್ಲಿ ಅಲ್ತಾಫ್‌ಗೆ ತಾಕೀತು ಮಾಡಿದ್ದರು. ಬಳಿಕ ಸುಹಾನಾಗೆ ಪೋಷಕರು ಹೊಕ್ಕುಂಡಿ ಗ್ರಾಮದ ಷರೀಫ್ ಸೋನಾರ್ ಜೊತೆಗೆ ಇತ್ತೀಚೆಗೆ ಮದುವೆ ಮಾಡಿಕೊಟ್ಟಿದ್ದರು.

    ಪ್ರಿಯಕರನ ಬ್ಲ್ಯಾಕ್‌ಮೇಲ್‌ನೊಂದಿಗೆ ಸುಹಾನಾಳಿಗೆ ಇನ್ನೂ ಕೆಲವರು ಕಿರುಕುಳ ನೀಡಿರುವುದಾಗಿ ವೀಡಿಯೋದಲ್ಲಿ ಉಲ್ಲೇಖಿಸಿದ್ದಾಳೆ. ಇನ್ನೂಸ್ ಪಾರ್ಥನಲ್ಲಿ ಹಾಗೂ ದಸ್ತಗಿರಸಾಬ ಮುಳವಾಡ ಜೊತೆಗೆ ತನ್ನ ತಂದೆ ಅಸ್ಲಂ ಮುಲ್ಲಾಗೆ ರಾಜಕೀಯ ದ್ವೇಷವಿತ್ತು. ದಸ್ತಗಿರಸಾಬ ಮುಳವಾಡ ಮಗಳ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದಿದ್ದಕ್ಕೆ ಅಸ್ಲಂ ಮುಲ್ಲಾ ಕಾರಣವೆಂದು ಸಿಟ್ಟಿತ್ತು. ಇದಕ್ಕೆ ಸಂಬಂಧಿಸಿದಂತೆ ಸುಹಾನಾಳಿಗೆ ಮೂವರು ಸೇರಿ ಬೆನ್ನುಹತ್ತಿ ಕಿರುಕುಳ ಕೊಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಇದನ್ನೂ ಓದಿ: ವಿಮಾನದಲ್ಲಿ ಬಾಟಲಿ ಹಿಡಿದು ಬಡಿದಾಟ; ಫ್ಲೈಟ್‌ ತುರ್ತು ಭೂಸ್ಪರ್ಶ – ಇಬ್ಬರು ಮಹಿಳೆಯರು ಸೇರಿ ನಾಲ್ವರು ಅರೆಸ್ಟ್

    ಸುಹಾನಾ ಏಪ್ರಿಲ್ 15 ರಂದು ಆತ್ಮಹತ್ಯೆಗೆ ಕಾರಣ ತಿಳಿಸಿ ಮೊಬೈಲ್ ವೀಡಿಯೋ ಆನ್ ಮಾಡಿ ನೇಣಿಗೆ ಶರಣಾಗಿದ್ದಾಳೆ. ಈ ಬಗ್ಗೆ ತಂದೆ ಅಸ್ಲಂ ಮುಲ್ಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರ‍್ಯಾಪಿಡೋ ಬೈಕ್‌ ಸವಾರನಿಂದ ಲೈಂಗಿಕ ಕಿರುಕುಳ – ಬೇಸತ್ತ ಯುವತಿ ಬೈಕ್‌ನಿಂದ ಜಂಪ್‌

  • ಪ್ರೇಯಸಿಯ ಬರ್ತ್‌ಡೇ ಕೇಕ್ ಕತ್ತರಿಸಿ ಬಳಿಕ ಕತ್ತನ್ನೂ ಕೊಯ್ದ ಪಾಗಲ್ ಪ್ರೇಮಿ

    ಪ್ರೇಯಸಿಯ ಬರ್ತ್‌ಡೇ ಕೇಕ್ ಕತ್ತರಿಸಿ ಬಳಿಕ ಕತ್ತನ್ನೂ ಕೊಯ್ದ ಪಾಗಲ್ ಪ್ರೇಮಿ

    ಬೆಂಗಳೂರು: ಪ್ರೇಯಸಿಯ ಹುಟ್ಟುಹಬ್ಬವನ್ನು (Birthday) ಕೇಕ್ ಕತ್ತರಿಸುವ ಮೂಲಕ ಅದ್ದೂರಿಯಾಗಿ ಆಚರಿಸಿದ ಬಳಿಕ ಪಾಗಲ್ ಪ್ರಿಯಕರ (Lover) ಆಕೆಯ ಕತ್ತನ್ನು ಕೊಯ್ದು ಹತ್ಯೆ (Murder) ನಡೆಸಿರುವ ವಿಚಿತ್ರ ಘಟನೆ ಬೆಂಗಳೂರಿನ (Bengaluru) ಲಗ್ಗೆರೆಯಲ್ಲಿ ನಡೆದಿದೆ.

    ನವ್ಯ (25) ಕೊಲೆಯಾದ ಯುವತಿಯಾಗಿದ್ದು, ಆಕೆಯ ಪ್ರಿಯಕರ ಪ್ರಶಾಂತ್ ಹತ್ಯೆ ಮಾಡಿದ್ದಾನೆ. ಯುವತಿ ಬೇರೊಬ್ಬನ ಜೊತೆ ಚಾಟ್ ಮಾಡುತ್ತಿದ್ದಳು ಎಂಬ ಅನುಮಾನದ ಹಿನ್ನೆಲೆ ಪ್ರಶಾಂತ್ ಕೃತ್ಯ ಎಸಗಿದ್ದಾನೆ.

    ನವ್ಯ ಪೊಲೀಸ್ ಇಲಾಖೆಯ ಆಂತರಿಕ ಭದ್ರತಾ ವಿಭಾದಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದಳು. ನವ್ಯ ಹಾಗೂ ಪ್ರಶಾಂತ್ ಇಬ್ಬರು ಕನಕಪುರ ಮೂಲದವರಾಗಿದ್ದು, ದೂರದ ಸಂಬಂಧಿಗಳಾಗಿದ್ದರು. ಮಾತ್ರವಲ್ಲದೇ ಇಬ್ಬರೂ ಕಳೆದ 6 ವರ್ಷಗಳಿಂದ ಪ್ರೀತಿಸುತ್ತಿದ್ದರು.

    ಕಳೆದ ಮಂಗಳವಾರ ನವ್ಯ ಹುಟ್ಟುಹಬ್ಬ ಇತ್ತು. ಅಂದು ಆಕೆ ಬ್ಯುಸಿ ಇದ್ದ ಕಾರಣ ಪ್ರಶಾಂತ್ ಶುಕ್ರವಾರ ಹುಟ್ಟುಹಬ್ಬವನ್ನು ಆಚರಿಸಲು ಯೋಜಿಸಿದ್ದ. ಅದರಂತೆಯೇ ಶುಕ್ರವಾರ ರಾತ್ರಿ ಬರ್ತ್‌ಡೇ ಸೆಲೆಬ್ರೇಷನ್ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದ. ಇದನ್ನೂ ಓದಿ: ಜಪಾನ್ ಪ್ರಧಾನಿ ಭಾಷಣದ ವೇಳೆ ಸ್ಫೋಟ

    ಪ್ರೇಯಸಿಯ ಹುಟ್ಟುಹಬ್ಬದ ಕೇಕ್ ಕತ್ತರಿಸಿದ ಬಳಿಕ ಪ್ರಶಾಂತ್ ಆಕೆಯ ಕತ್ತನ್ನು ಕೊಯ್ದು ಹತ್ಯೆ ಮಾಡಿದ್ದಾನೆ. ಘಟನೆ ಬಗ್ಗೆ ತಿಳಿದ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ. ಮೃತ ಯುವತಿಯ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ರಾಜಗೋಪಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌ ಅಭ್ಯರ್ಥಿ ಬಾಬುರಾವ್‌ ಚಿಂಚನಸೂರ್‌ ಕಾರು ಅಪಘಾತ – ಮಾಜಿ ಸಚಿವ ಆಸ್ಪತ್ರೆಗೆ ದಾಖಲು

  • ಪ್ರಿಯತಮೆಯ ಮದುವೆ‌ ನಿಲ್ಲಿಸಲು ಕಲ್ಯಾಣಮಂಟಪಕ್ಕೆ ನುಗ್ಗಿ ಪ್ರಿಯಕರ ರಂಪಾಟ – ಮದುವೆ ಕ್ಯಾನ್ಸಲ್‌

    ಪ್ರಿಯತಮೆಯ ಮದುವೆ‌ ನಿಲ್ಲಿಸಲು ಕಲ್ಯಾಣಮಂಟಪಕ್ಕೆ ನುಗ್ಗಿ ಪ್ರಿಯಕರ ರಂಪಾಟ – ಮದುವೆ ಕ್ಯಾನ್ಸಲ್‌

    ಚಿಕ್ಕಬಳ್ಳಾಪುರ: ತನ್ನ ಪ್ರಿಯತಮೆ ಬೇರೊಬ್ಬನೊಂದಿಗೆ ಮದುವೆಯಾಗುತ್ತಿದ್ದಾಳೆಂದು ಕಲ್ಯಾಣ ಮಂಟಪಕ್ಕೆ ನುಗ್ಗಿ ಪಾಗಲ್‌ ಪ್ರೇಮಿಯೊಬ್ಬ ರಂಪಾಟ ಮಾಡಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಮುಂದಾದ ಘಟನೆ ಚಿಕ್ಕಬಳ್ಳಾಪುರದಲ್ಲಿ (Chikkaballapura) ನಡೆದಿದೆ.

    ನಿತೀಶ್ ಎಂಬಾತ ಮದುವೆ ಮಂಟಪದಲ್ಲಿ ಗಲಾಟೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದಾತ. ಈತ ಮೂಲತಃ ಬೆಂಗಳೂರಿನ ಗೋರಿಪಾಳ್ಯದವನು. ಬುಧವಾರ ರಾತ್ರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಶ್ರೀಕ್ಷೇತ್ರ ಘಾಟಿ ಸುಬ್ರಮಣ್ಯಕ್ಕೆ ಬಂದಿದ್ದಾನೆ. ಜತೆಗೆ ಕ್ಷೇತ್ರಕ್ಕೆ ಬಂದವನೆ ಸೀದಾ ದೇವಸ್ಥಾನದ ಪಕ್ಕದಲಿರುವ ಖಾಸಗಿ ಕಲ್ಯಾಣ ಮಂಟಪಕ್ಕೆ ತೆರಳಿದ್ದು ಎಲ್ಲರೂ ಮದುವೆಗೆ ಬಂದವನು ಅಂತಲೆ ಅಂದುಕೊಂಡಿದ್ದಾರೆ. ಆದ್ರೆ ಅಷ್ಟರಲ್ಲೇ ನೋಡ ನೋಡ್ತಿದ್ದಂತೆ ಯುವತಿಯ ವಿರುದ್ದ ಕೂಗಾಡಿದ ಪಾಗಲ್ ಪ್ರೇಮಿ ತನನ್ನ ಪ್ರೀತಿಸಿ ಬೇರೊಬ್ಬನನ್ನ ಮದುವೆಯಾಗ್ತಿದ್ದಿಯಾ ಅಂತ ಗಲಾಟೆ ಮಾಡಿದ್ದಾನೆ. ಇದನ್ನೂ ಓದಿ: ಅವಳ ಜೊತೆ 3 ದಿನ, ಇವಳ ಜೊತೆ 3 ದಿನ, ಭಾನುವಾರ ರಜೆ – ಗಂಡನೊಂದಿಗೆ ಹೆಂಡತಿಯರ `ಅಗ್ರಿಮೆಂಟ್’

    ಈ ವೇಳೆ ಕಲ್ಯಾಣ ಮಂಟಪದಲ್ಲಿದ್ದ ಯುವತಿಯ ಸಂಬಂಧಿಕರು ಯುವಕನನ್ನ ಥಳಿಸಿದ್ದು, ನಂತರ ಕಲ್ಯಾಣ ಮಂಟಪದಿಂದ ಹೊರಗೆ ಹಾಕಿದ್ದಾರೆ. ಈ ವೇಳೆ ಮತ್ತದೇ ವಿಚಾರಕ್ಕೆ ಯುವಕ ಮತ್ತು ಯುವತಿಯ ಕುಟುಂಬಸ್ಥರ ನಡುವೆ ಗಲಾಟೆ ನಡೆದಿದ್ದು, ಯುವತಿಗಾಗಿ ಯುವಕನೇ ಬ್ಲೇಡ್‌ನಿಂದ ಕುತ್ತಿಗೆ ಕೊಯ್ದುಕೊಂಡಿದ್ದಾನೆ ಎಂದು ಯುವತಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

    ಪ್ರಕರಣ ಏನು?
    ಪಾಗಲ್ ಪ್ರೇಮಿ ನಿತೇಶ್ ಮತ್ತು ನವವಧು ಇಬ್ಬರೂ ಶಾಲೆಯಲ್ಲಿ ಓದುವಾಗಿನಿಂದಲೂ ಸ್ನೇಹಿತರು. ಹಳೆ ಫ್ರೆಂಡ್ಸ್ ವಾಟ್ಸಪ್‌ ಗ್ರೂಪ್ ಮಾಡಿದಾಗ ಮತ್ತೆ ಸ್ನೇಹವಾಗಿ ಸುತ್ತಾಡಿದ್ದರಂತೆ. ಈ ವೇಳೆ ಇಬ್ಬರ ನಡುವೆ ಪ್ರೀತಿಯಿತ್ತು ಎನ್ನಲಾಗಿದೆ. ಆದರೆ ಯುವಕನನ್ನ ಮದುವೆಯಾಗಲು ಯುವತಿ ನಿರಾಕರಿಸಿದ್ದಳು ಅಂತಾ ಹಲವು ಭಾರಿ ಮನೆ ಬಳಿ ಹೋಗಿ ಯುವಕ ಗಲಾಟೆ ಮಾಡಿದ್ದ. ಈ ಬಗ್ಗೆ ಯುವತಿ ಹಾಗೂ ಆಕೆಯ ಪೋಷಕರು ಗೋರಿಪಾಳ್ಯ ಠಾಣೆಗೆ ದೂರು ಸಹ ನೀಡಿದ್ದರು. ಇಷ್ಟೆಲ್ಲ ಆದರೂ ಬಿಡದ ಪಾಗಲ್ ಪ್ರೇಮಿ ಬುಧವಾರ ಸೀದ ಮದುವೆ ಮನೆಗೆ ಬಂದು ಗಲಾಟೆ ಮಾಡಿದ್ದಾನೆ. ಇದನ್ನೂ ಓದಿ: ಚೀತಾ ಹೆಲಿಕಾಪ್ಟರ್ ಪತನ – ಭಾರತೀಯ ಸೇನೆಯ ಇಬ್ಬರು ಪೈಲಟ್‌ಗಳು ಹುತಾತ್ಮ

    ಯುವಕನ ಗಲಾಟೆಯಿಂದ ಬೆಚ್ಚಿಬಿದ್ದ ವರನ ಕಡೆಯವರು ಮದುವೆಯನ್ನ ರದ್ದುಗೊಳಿಸಿಕೊಂಡು ವಾಪಸ್ ಹೋಗಿದ್ದಾರೆ. ಮದುವೆ ಮನೆ ಬಳಿಗೆ ಬಂದಿದ್ದ ಪಾಗಲ್ ಪ್ರೇಮಿ ಮೇಲೆ ಯುವತಿಯ ಕಡೆಯವರು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಯುವಕನ ಹೇಳಿಕೆ ಆಧಾರಿಸಿ ದೊಡ್ಡಬಳ್ಳಾಪುರ ಪೊಲೀಸರು ಯುವತಿಯ ಸಂಬಂಧಿಕರ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕತ್ತು ಕೊಯ್ದುಕೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

  • ವಂಚಿಸಿದ ಪ್ರಿಯಕರನ ಮೇಲೆ ಕುದಿಯುವ ಎಣ್ಣೆ ಸುರಿದ ಯುವತಿ

    ವಂಚಿಸಿದ ಪ್ರಿಯಕರನ ಮೇಲೆ ಕುದಿಯುವ ಎಣ್ಣೆ ಸುರಿದ ಯುವತಿ

    ಚೆನ್ನೈ: ವಂಚಿಸಿದ (Cheat) ಪ್ರಿಯಕರನ (Boy Friend) ಮೇಲೆ ಯುವತಿಯೊಬ್ಬಳು ಕುದಿಯುವ ಎಣ್ಣೆ ಸುರಿದ ಘಟನೆ ತಮಿಳುನಾಡಿನ (Tamil Nadu) ಈರೋಡ್‍ನಲ್ಲಿ ನಡೆದಿದೆ.

    ಕಾರ್ತಿ (27) ತಮಿಳುನಾಡಿನ ಭವಾನಿಯ ವರ್ಣಪುರಂ ನಿವಾಸಿಯಾಗಿದ್ದು, ಪೆರುಂದುರೈನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ. ಈತ ತನ್ನ ಸಂಬಂಧಿ ಮೀನಾ ದೇವಿಯೊಂದಿಗೆ ಸಂಬಂಧ ಹೊಂದಿದ್ದ. ಜೊತೆಗೆ ಮದುವೆಯಾಗುವುದಾಗಿಯೂ ಭರವಸೆ ನೀಡಿದ್ದ.

    ಆದರೆ ಕಾರ್ತಿ ಬೇರೊಬ್ಬ ಮಹಿಳೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ವಿಷಯವನ್ನು ಮೀನಾದೇವಿ ತಿಳಿದಿದ್ದಾಳೆ. ಅದಾದ ಬಳಿಕ ಈ ವಿಚಾರವಾಗಿ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಅದಾದ ಬಳಿಕ ಮೀನಾದೇವಿಯನ್ನು ಕಾರ್ತಿ ಭೇಟಿಯಾಗಲು ಹೋದಾಗ ಮತ್ತೆ ಜಗಳ ನಡೆದಿದೆ. ಇದರಿಂದ ಕೋಪಗೊಂಡ ಮೀನಾ ದೇವಿ ಆತನ ಮೇಲೆ ಕುದಿಯುವ ಎಣ್ಣೆಯನ್ನು ಸುರಿದಿದ್ದಾಳೆ. ಇದನ್ನೂ ಓದಿ: ಉದ್ಯಮಿ ಪ್ರದೀಪ್ ಶೂಟೌಟ್ ಕೇಸ್- A3 ಆರೋಪಿ ಲಿಂಬಾವಳಿ ಹೇಳಿಕೆ ಕೂಡ ದಾಖಲು

    ಇದರಿಂದಾಗಿ ಕೈ ಮತ್ತು ಮುಖ ಉರಿಯಲಾರಂಭಿಸಿದ್ದರಿಂದ ಕಾರ್ತಿ ನೆಲಕ್ಕೆ ಬಿದ್ದಿದ್ದಾನೆ. ಸಹಾಯಕ್ಕಾಗಿ ಆತನ ಕೂಗು ಕೇಳಿದ ನೆರೆಹೊರೆಯವರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದರು. ಘಟನೆಗೆ ಸಂಬಂಧಿಸಿ ಪೊಲೀಸರು ಮೀನಾದೇವಿಯನ್ನು ಬಂಧಿಸಿ ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಸುತ್ತಿಗೆಯಿಂದ ಹೊಡೆದು ತಂದೆಯ ಕೊಲೆ – ಶವವನ್ನು ಪೀಸ್ ಪೀಸ್ ಮಾಡಿ ಸೂಟ್‍ಕೇಸ್‍ನಲ್ಲಿ ತುಂಬಿದ ಪಾಪಿ ಮಗ