Tag: ಪ್ರಿಯಕರ

  • ಪ್ರಿಯಕರನಿಂದಲೇ ವಿವಾಹಿತ ಮಹಿಳೆಯ ಬರ್ಬರ ಕೊಲೆ!

    ಪ್ರಿಯಕರನಿಂದಲೇ ವಿವಾಹಿತ ಮಹಿಳೆಯ ಬರ್ಬರ ಕೊಲೆ!

    ದಾವಣಗೆರೆ: ವಿವಾಹಿತ ಮಹಿಳೆಯೊಬ್ಬರು ಬರ್ಬರವಾಗಿ ಕೊಲೆಯಾದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರದ ಗ್ರಾಮದೇವತೆ ದೇವಸ್ಥಾನದ ನರ್ತಕಿ ಬಾರ್ ಬಳಿ ನಡೆದಿದೆ.

    ಹರಿಹರದ ನಿವಾಸಿ ರೇಖಾ (25) ಕೊಲೆಯಾದ ವಿವಾಹಿತ ಮಹಿಳೆ. ಕುರುಬರ ಕೇರಿ ನಿವಾಸಿಯಾದ ರೇಖಾಳನ್ನು ಅನೈತಿಕ ಸಂಬಂಧದ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪ್ರಿಯಕರ ಚೇತನ್ ಚಾಕು ಇರಿದು ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದ್ದು, ಸದ್ಯ ಈತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ರೇಖಾಳಿಗೆ ಈಗಾಗಲೇ ನಾಗರಾಜ್ ಎಂಬಾತನ ಜೊತೆ ವಿವಾಹವಾಗಿದ್ದು, ಇಬ್ಬರು ಮಕ್ಕಳು ಕೂಡ ಇದ್ದಾರೆ. ಸ್ಥಳಕ್ಕೆ ಎಸ್ ಪಿ ಹನುಮಂತರಾಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹರಿಹರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಲಾಡ್ಜ್‌ಗೆ ಕರೆದೊಯ್ದು ಪ್ರಿಯತಮೆಯ ಹತ್ಯೆಗೈದ!

    ಲಾಡ್ಜ್‌ಗೆ ಕರೆದೊಯ್ದು ಪ್ರಿಯತಮೆಯ ಹತ್ಯೆಗೈದ!

    ಬೆಂಗಳೂರು: ಪ್ರಿಯಕರನೇ ತನ್ನ ಪ್ರಿಯತಮೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

    ಕಮಲ ಕೊಲೆಯಾದ ದುರ್ದೈವಿ. ಪ್ರಿಯಕರ ದಿಲೀಪ್ ಈಕೆಯನ್ನು ಲಾಡ್ಜ್ ಗೆ ಕರೆದೊಯ್ದು ಕೊಲೆ ಮಾಡಿದ್ದಾನೆ. ಬಳಿಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.

    ಕಮಲ ಅಂಗನವಾಡಿ ಟೀಚರ್ ಆಗಿ ಕೆಲಸ ಮಾಡುತ್ತಾ ಇದ್ದಳು. ಕಲಾಸಿಪಾಳ್ಯದ ಅರ್ಚನಾ ಲಾಡ್ಜ್ ಅಲ್ಲಿ ಕಮಲಳನ್ನು ದಿಲೀಪ್ ಕೊಲೆ ಮಾಡಿದ್ದಾನೆ. ಸದ್ಯ ಕೊಲೆಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

    ಕೊಲೆ ಸಂಬಂಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಗೆಳತಿಯ ಪತಿಯನ್ನು ಕಲ್ಲಿನಿಂದ ಜಜ್ಜಿ ಕೊಂದೇ ಬಿಟ್ಟ

    ಗೆಳತಿಯ ಪತಿಯನ್ನು ಕಲ್ಲಿನಿಂದ ಜಜ್ಜಿ ಕೊಂದೇ ಬಿಟ್ಟ

    ಹುಬ್ಬಳ್ಳಿ: ಪತ್ನಿ ಹಾಗೂ ಮಗುವನ್ನು ನೋಡಲು ಬಂದು ಬೀದಿ ಹೆಣವಾಗಿದ್ದ ವ್ಯಕ್ತಿಯ ಕೊಲೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪ್ರಕರಣ ನಡೆದ 24 ಗಂಟೆಗಳಲ್ಲಿ ಆರೋಪಿಯ ಬಂಧಿಸುವಲ್ಲಿ ಹುಬ್ಬಳ್ಳಿಯ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

    ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ಜಗದೀಶ್ ಕೊಲ್ಲಾಪುರ ಕೊಲೆಯಾದ ವ್ಯಕ್ತಿ. ಕೊಲೆಯಾದ ಜಗದೀಶ್‍ನ ಹೆಂಡತಿಯ ಪ್ರಿಯಕರನೇ ಆರೋಪಿ ಎಂಬುದನ್ನು ಪತ್ತೆ ಹಚ್ಚಿರುವ ಪೊಲೀಸರು, ಆರೋಪಿತನಾದ ಅದರಗುಂಚಿ ಗ್ರಾಮದ ಕಾಶಪ್ಪ ನಿಂಗಪ್ಪ ತಿಪ್ಪಣ್ಣನವರ ಬಂಧಿಸಿ ಪ್ರಕರಣವನ್ನು ಬೇಧಿಸಿದ್ದಾರೆ.

    ಜಗದೀಶ್ ಶವ ನಿನ್ನೆ ಹುಬ್ಬಳ್ಳಿ ಹೊರವಲಯದ ಅಂಚಟಗೇರಿ ಬಳಿಯ ಚೆನ್ನಾಪುರ ರಸ್ತೆಯಲ್ಲಿ ಸಿಕ್ಕಿತ್ತು. ಆತನ ತಲೆಯನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಬೆನ್ನತ್ತಿದ ಪೊಲೀಸರಿಗೆ ಕೊಲೆಗೆ ಕಾರಣ ಜಗದೀಶ್‍ನ ಹೆಂಡತಿಯ ಅಕ್ರಮ ಸಂಬಂಧ ಎಂದು ತಿಳಿದು ಬಂದಿತ್ತು. ಜಗದೀಶ್‍ನ ಪತ್ನಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಕಾಶಪ್ಪ ಆತನನ್ನು ಕೊಲೆ ಮಾಡಿ ಪರಾರಿಯಾಗಿದ್ದ.

    ಜಗದೀಶ್ ತವರಿನಲ್ಲಿದ್ದ ಪತ್ನಿ ಹಾಗೂ ಮಗುವನ್ನು ನೋಡಲು ಹುಬ್ಬಳ್ಳಿಗೆ ಬಂದಿದ್ದ. ಈ ವೇಳೆ ಅವನನ್ನು ಭೇಟಿ ಮಾಡಿದ ಕಾಶಪ್ಪ ಜಗದೀಶ್‍ನನ್ನು ಕರೆದುಕೊಂಡು ಊರ ಹೊರಗೆ ಪಾರ್ಟಿ ಮಾಡಿದ್ದಾನೆ. ಆತನಿಗೆ ಕಂಠ ಪೂರ್ತಿ ಮದ್ಯ ಕೂಡಿಸಿ, ಕುಡಿದ ನಶೆಯಲ್ಲಿದ್ದ ಜಗದೀಶ್‍ನ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಪರಾರಿಯಾಗಿದ್ದ. ಈ ಪ್ರಕರಣವನ್ನು ಬೆನ್ನಟ್ಟಿದ ಪೊಲೀಸರು ಒಂದೇ ದಿನದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

    ಈ ಕಾರ್ಯಾಚರಣೆಯಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ರಮೇಶ್ ಗೋಕಾಕ್, ಪಿಎಸ್‍ಐಗಳಾದ ಮಂಜುಳಾ ಮತ್ತು ಚಾಮುಂಡೇಶ್ವರಿ, ಸಿಬ್ಬಂದಿಗಳಾದ ನಾರಾಯಣ ಹಿರೇಹೊಳಿ, ಮಂಜು ಹೆಳವರ, ಮಂಜು ಅಮ್ಮಿನಬಾಯಿ, ಅರ್ಜುನ ಟಕಾಯಿ, ಮಂಜು ವಾಲಿಕಾರ ಮತ್ತು ಚಂದ್ರು ಜನಗಣ್ಣನವರ ಭಾಗವಹಿಸಿದ್ದರು.

  • ಇಷ್ಟವಿಲ್ಲದಿದ್ರೂ ಮದ್ವೆ ಮಾಡಿದ ಪೋಷಕರು- ಪ್ರಿಯಕರನೊಂದಿಗೆ ವಿವಾಹಿತೆ ಆತ್ಮಹತ್ಯೆ

    ಇಷ್ಟವಿಲ್ಲದಿದ್ರೂ ಮದ್ವೆ ಮಾಡಿದ ಪೋಷಕರು- ಪ್ರಿಯಕರನೊಂದಿಗೆ ವಿವಾಹಿತೆ ಆತ್ಮಹತ್ಯೆ

    ಕೋಲಾರ: ಕೃಷಿ ಹೊಂಡಕ್ಕೆ ಹಾರಿ ಪ್ರೇಮಿಗಳು ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಮುಗಿಲಬೆಲೆ ಗ್ರಾಮದಲ್ಲಿ ನಡೆದಿದೆ.

    ಮಾದ ಮಂಗಲ ಗ್ರಾಮದ ಸುರೇಶ್(28) ಹಾಗೂ ಕಾರಹಳ್ಳಿ ರೂಪ (26) ಮೃತ ಪ್ರೇಮಿಗಳು. ಇಷ್ಟವಿಲ್ಲದಿದ್ದರೂ ಮನೆಯವರು ರೂಪಾಗೆ ಮದುವೆ ಮಾಡಿದ ಕಾರಣ ಪ್ರೇಮಿಗಳು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

    ರೂಪಾಗೆ ಎರಡು ತಿಂಗಳ ಹಿಂದೆಯಷ್ಟೆ ಮತ್ತೊರ್ವನೊಂದಿಗೆ ವಿವಾಹ ವಾಗಿತ್ತು. ಆದರೆ ಈ ಮದುವೆ ರೂಪಾಗೆ ಕಿಂಚಿತ್ತೂ ಇಷ್ಟವಿರಲಿಲ್ಲ. ಆದರೂ ಪೋಷಕರು ಒತ್ತಾಯದ ಮೇರೆಗೆ ರೂಪಾಗೆ ಬೇರೊಬ್ಬನ ಜೊತೆ ವಿವಾಹ ಮಾಡಿಯೇ ಬಿಟ್ಟರು. ಇದರಿಂದ ನೊಂದು ರೂಪಾ ಹಾಗೂ ಆಕೆಯ ಪ್ರಿಯಕರ ವೇಲ್ ನಲ್ಲಿ ಸುತ್ತಿಕೊಂಡು ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಬಂಗಾರಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕೊಡಲಿಯಿಂದ ಕೊಚ್ಚಿ ಪತ್ನಿಯ ಕೊಲೆ- ಹೊಡೆತದ ರಭಸಕ್ಕೆ ತಲೆಯಲ್ಲೇ ಸಿಕ್ಕಿಕೊಂಡ ಕೊಡಲಿ! 

  • ಪ್ರಿಯಕರನಿಂದಲೇ ಹಳೆ ಪ್ರಿಯಕರನನ್ನು ಕೊಲೆ ಮಾಡಿಸಿದ ಪ್ರಿಯತಮೆ – ಜೋಡಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

    ಪ್ರಿಯಕರನಿಂದಲೇ ಹಳೆ ಪ್ರಿಯಕರನನ್ನು ಕೊಲೆ ಮಾಡಿಸಿದ ಪ್ರಿಯತಮೆ – ಜೋಡಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

    – ಮಹಜರ್ ವೇಳೆ ತಪ್ಪಿಸಿಕೊಳ್ಳಲು ಆರೋಪಿ ಯತ್ನ, ಪೊಲೀಸರಿಂದ ಫೈರಿಂಗ್

    ಶಿವಮೊಗ್ಗ: ಸಾಗರದ ಜೋಡಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಹೊಸ ಪ್ರಿಯಕರನಿಂದ ಹಳೆ ಪ್ರಿಯಕರನನ್ನು ಮಹಿಳೆ ಕೊಲೆ ಮಾಡಿಸಿರುವುದು ಇದೀಗ ಬೆಳಕಿಗೆ ಬಂದಿದೆ. ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಸ್ಥಳ ಮಹಜರ್ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ.

    ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯ ಬಲಗಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಪೊಲೀಸರ ಗನ್ ಮತ್ತೆ ಸದ್ದು ಮಾಡಿದೆ. ಜಿಲ್ಲೆಯ ಸಾಗರ ತಾಲೂಕಿನ ಹಳೆ ಇಕ್ಕೇರಿ ಸಮೀಪ ಘಟನೆ ನಡೆದಿದೆ. ಗುಂಡೇಟಿಗೆ ಒಳಗಾದ ಆರೋಪಿ ಭರತ್ ಇದೀಗ ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇದೀಗ ಪ್ರಕರಣದ ಪ್ರಮುಖ ಆರೋಪಿ ಶೃತಿಯನ್ನು ಸಹ ಪೊಲೀಸರು ಬಂಧಿಸಿದ್ದಾರೆ.

    ಕೊಲೆ ಮಾಡಿದ್ದು ಯಾಕೆ?
    ಅ.11 ರಂದು ಸಾಗರ ತಾಲೂಕಿನ ಹಳೆ ಇಕ್ಕೇರಿಯಲ್ಲಿ ಬಂಗಾರಮ್ಮ (60), ಪ್ರವೀಣ್ (35) ತಾಯಿ ಮಗನನ್ನು ಮನೆಯಲ್ಲಿ ಮಲಗಿದ್ದ ವೇಳೆಯಲ್ಲಿಯೇ ಮೃತ ಪ್ರವೀಣನ ಪತ್ನಿ ಹಾಗೂ 10 ತಿಂಗಳ ಮಗುವಿನ ಎದುರಿನಲ್ಲಿಯೇ ಕೊಲೆ ಮಾಡಲಾಗಿತ್ತು. ಆದರೆ ಕೊಲೆಗೆ ನಿಖರ ಕಾರಣ ಗೊತ್ತಾಗಿರಲಿಲ್ಲ. ಘಟನೆ ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜ್ ಹಾಗೂ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದರು.

    ಪ್ರಕರಣ ಭೇದಿಸುವುದು ಆರಂಭದಲ್ಲಿ ಪೊಲೀಸರಿಗೆ ತಲೆ ನೋವಾಗಿತ್ತು. ಕೊಲೆ ಏಕೆ ನಡೆದಿದೆ ಎಂಬ ಅನುಮಾನ ಕಾಡಲಾರಂಭಿಸಿತ್ತು. ಕೊಲೆಯಾದವರು ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದವರು. ಅಷ್ಟೊಂದು ಸ್ಥಿತಿವಂತರಲ್ಲ. ಜೊತೆಗೆ ಕೊಲೆ ಮಾಡಿದ ನಂತರ ಮನೆಯಿಂದ ಯಾವ ವಸ್ತುವನ್ನು ತೆಗೆದುಕೊಂಡು ಹೋಗಿಲ್ಲ. ಅಲ್ಲದೇ ಮನೆಯಲ್ಲಿಯೇ ಇದ್ದ ಹತ್ಯೆಯಾದ ಪ್ರವೀಣನ ಪತ್ನಿ ಹಾಗೂ ಆತನ ಮಗುವನ್ನು ಏನೂ ಮಾಡಿಲ್ಲ. ಹೀಗಿರುವಾಗ ಕೊಲೆ ಏಕೆ ನಡೆದಿದೆ ಎಂಬುದು ಪೊಲೀಸರಿಗೆ ಯಕ್ಷ ಪ್ರಶ್ನೆಯಾಗಿತ್ತು. ಹೀಗಾಗಿ ಈ ಪ್ರಕರಣ ಭೇದಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜ್ ಅವರು ವಿಶೇಷ ಪೊಲೀಸ್ ತಂಡ ರಚಿಸಿದ್ದರು. ಪೊಲೀಸರು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಿದ್ದರು. ಮೊದಲಿಗೆ ಹತ್ಯೆಯಾದ ಪ್ರವೀಣನ ಪತ್ನಿ ರೋಹಿಣಿ ಮೇಲೆಯೇ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದರು. ಈಕೆಗೆ ಏನಾದರೂ ಬೇರೆ ಸಂಬಂಧ ಇದೆಯಾ? ಇದಕ್ಕಾಗಿ ಏನಾದರೂ ಕೊಲೆ ನಡೆದಿದೆಯಾ? ಎಂದು ವಿಚಾರಣೆ ನಡೆಸಿದ್ದರು. ಪ್ರವೀಣನ ಪತ್ನಿಗೆ ಆ ರೀತಿ ಯಾವುದೇ ಸಂಬಂಧ ಇರಲಿಲ್ಲ, ಕೊಲೆ ಮಾಡಿಲ್ಲ ಎಂಬುದು ಬಳಿಕ ತಿಳಿಯಿತು.

    ಪ್ರಕರಣದ ಬೆನ್ನತ್ತಿದ್ದ ಪೊಲೀಸರಿಗೆ ತನಿಖೆ ವೇಳೆ ಈ ಕೊಲೆಗೆ ಬೇರೆಯದ್ದೇ ವಿಷಯ ಇದೆ ಎಂಬ ಮಾಹಿತಿ ದೊರೆಯಿತು. ಕೊಲೆಯಾದ ಪ್ರವೀಣನಿಗೆ ನೆರೆ ಮನೆ ನಿವಾಸಿಯಾದ ಶೃತಿ ಜೊತೆ ಪ್ರೀತಿ ಇತ್ತು. ಆದರೆ ಪ್ರವೀಣ ಶೃತಿಗೆ ಕೈಕೊಟ್ಟು ರೋಹಿಣಿಯನ್ನು ವಿವಾಹವಾಗಿ ಸಂಸಾರ ನಡೆಸುತ್ತಿದ್ದ. ಇದಕ್ಕೆ ಶೃತಿ ಪ್ರವೀಣನ ವಿರುದ್ಧ ಕೋಪಗೊಂಡಿದ್ದಳು. ನಂತರ ಶೃತಿ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಳು. ಈ ವೇಳೆ ಶೃತಿಗೆ ಭರತ್ ಎಂಬ ಯುವಕನ ಪರಿಚವಾಗಿದೆ. ಇಬ್ಬರ ಪರಿಚಯ, ಗೆಳೆತನ ನಂತರ ಪ್ರೀತಿಯಾಗಿ ಮಾರ್ಪಟ್ಟಿದೆ. ಮಾಜಿ ಪ್ರಿಯಕರ ಪ್ರವೀಣನಿಂದ ತನಗಾದ ಅನ್ಯಾಯವನ್ನು ಹೊಸ ಪ್ರಿಯಕರ ಭರತ್ ನ ಬಳಿ ಶೃತಿ ನಿವೇದಿಸಿಕೊಂಡಿದ್ದಾಳೆ. ಅಲ್ಲದೆ ಮೊದಲು ಪ್ರವೀಣ್ ಹಾಗೂ ಶೃತಿ ಪ್ರೀತಿ ಮಾಡುತ್ತಿದ್ದ ಸಂದರ್ಭದ ಇಬ್ಬರ ಖಾಸಗಿ ವಿಡಿಯೋ ಪ್ರವೀಣ್ ಬಳಿ ಇತ್ತು. ವಿಡಿಯೋ ಇಟ್ಟುಕೊಂಡು ಪ್ರವೀಣ್ ಬೆದರಿಕೆ ಹಾಕುತ್ತಿದ್ದ. ಹೀಗಾಗಿ ಶೃತಿ ತನ್ನ ಹೊಸ ಪ್ರಿಯತಮ ಭರತ್ ನ ಸಹಾಯ ಪಡೆದು ಆತನಿಂದಲೇ ಪ್ರವೀಣ್ ಹಾಗೂ ಆತನ ತಾಯಿ ಬಂಗಾರಮ್ಮ ಇಬ್ಬರನ್ನು ಕೊಲೆ ಮಾಡಿಸಿದ್ದಾಳೆ ಎಂಬುದು ತನಿಖೆ ವೇಳೆ ತಿಳಿದಿದೆ.

    ಆರೋಪಿ ಭರತ್ ನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಬಳಿಕ ಪೊಲೀಸರು ಆರೋಪಿ ಭರತ್ ನನ್ನು ಮಹಜರ್ ನಡೆಸಲು ಸ್ಥಳಕ್ಕೆ ಕರೆದುಕೊಂಡು ಹೋಗಿದ್ದರು. ಮಹಜರ್ ನಡೆಸಿ ವಾಪಸ್ ಬರುವ ವೇಳೆ ಆರೋಪಿ ಭರತ್ ಮೂತ್ರ ವಿಸರ್ಜನೆ ಮಾಡುವುದಾಗಿ ಪೊಲೀಸರ ಬಳಿ ಹೇಳಿ ಜೀಪಿನಿಂದ ಕೆಳಗಡೆ ಇಳಿದು ಹೋಗಿದ್ದಾನೆ. ಪೊಲೀಸ್ ಕಾನ್ಸ್‍ಟೇಬಲ್ ಒಬ್ಬರು ಸಹ ಈತನನ್ನು ಹಿಂಬಾಲಿಸಿದ್ದರು. ಆರೋಪಿ ಭರತ್ ಪೊಲೀಸರನ್ನು ತಳ್ಳಿ ಹಲ್ಲೆ ಮಾಡಿ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದಾನೆ. ಈ ವೇಳೆ ಸ್ಥಳದಲ್ಲಿಯೇ ಇದ್ದ ಡಿಸಿಆರ್ ಬಿ ಇನ್ಸ್ ಪೆಕ್ಟರ್ ಕುಮಾರ್ ಸ್ವಾಮಿ ಅವರು ಆರೋಪಿ ಭರತ್ ನ ಬಲಗಾಲಿಗೆ ಗುಂಡು ಹಾರಿಸಿದ್ದಾರೆ. ಘಟನೆಯಿಂದ ಗಾಯಗೊಂಡಿರುವ ಆರೋಪಿ ಭರತ್ ಗೆ ಸಾಗರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

     

  • ಪ್ರೇಯಸಿ ಖುಷಿಗಾಗಿ ಬ್ಯಾಂಕಿಗೆ ಕನ್ನ ಹಾಕಿದ ಪ್ರಿಯಕರ

    ಪ್ರೇಯಸಿ ಖುಷಿಗಾಗಿ ಬ್ಯಾಂಕಿಗೆ ಕನ್ನ ಹಾಕಿದ ಪ್ರಿಯಕರ

    – ಹಣ ಕದ್ದು ಹೊಲದಲ್ಲಿ ಬಚ್ಚಿಟ್ಟ

    ರಾಯ್ಪುರ: ಪ್ರೇಯಸಿ ಖುಷಿಗಾಗಿ ಬ್ಯಾಂಕಿಗೆ ಕನ್ನ ಹಾಕಿದ್ದ ಪ್ರಿಯಕರನನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಬ್ಯಾಂಕಿನಿಂದ ಕಳ್ಳತನ ಮಾಡಿದ್ದ 11.55 ಲಕ್ಷ ರೂ.ಯನ್ನ ಹೊಲದಲ್ಲಿ ಬಚ್ಚಿಟ್ಟಿದ್ದನು.

    ರಾಯಗಢದ ಚರಖಾಪುರ ನಿವಾಸಿ ಶಂಕರ್ ರಾಠಿಯಾ ಬಂಧಿತ ಪ್ರಿಯಕರ. ಅಕ್ಟೋಬರ್ 8ರಂದು ಪತ್ಥಲ್‍ಗ್ರಾಮದ ಎಸ್‍ಬಿಐ ಬ್ಯಾಂಕಿನ ಹಿಂಭಾಗದ ಗೋಡೆಗೆ ಕನ್ನ ಹಾಕಲಾಗಿತ್ತು. ಬೆಳಗ್ಗೆ ಬ್ಯಾಂಕಿಗೆ ಬಂದ ಅಧಿಕಾರಿಗಳು ಕನ್ನ ಹಾಕಿರೋದನ್ನ ಗಮನಿಸಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬ್ಯಾಂಕಿನಲ್ಲಿ ಒಟ್ಟು 11.5 ಲಕ್ಷ ರೂ. ನಗದು ಕಳ್ಳತನಾವಗಿತ್ತು.

    ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬ್ಯಾಂಕ್ ಕಟ್ಟಡದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದಾಗ ಶಂಕರ್ ಚಲನವಲನ ಸೆರೆಯಾಗಿತ್ತು. ಬುಧವಾರ ಕಳ್ಳ ಶಂಕರ್ ನನ್ನು ಬಂಧಿಸಲಾಗಿದ್ದು, ಆತ ಹೊಲದಲ್ಲಿ ಬಚ್ಚಿಟ್ಟಿದ್ದ ಹಣವನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

    ಪ್ರೇಯಸಿಗಾಗಿ ಕಳ್ಳತನ: ಶಂಕರ್ ತನ್ನ ಪ್ರೇಯಸಿ ಹೆಚ್ಚು ಖರ್ಚು ಮಾಡುತ್ತಿದ್ದಳು. ಆಕೆಯ ಖರ್ಚಿಗಾಗಿ ಬ್ಯಾಂಕಿನಲ್ಲಿ ಕಳ್ಳತನ ಮಾಡಿದೆ ಎಂದು ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.

     

  • ಲಾಕ್‍ಡೌನ್ ಅಡ್ಡಿ – ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆಗೈದ ಪತ್ನಿ!

    ಲಾಕ್‍ಡೌನ್ ಅಡ್ಡಿ – ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆಗೈದ ಪತ್ನಿ!

    ಹುಬ್ಬಳ್ಳಿ: ಲಾಕ್‍ಡೌನ್ ಘೋಷಣೆಯಾದ ವೇಳೆ ಅನೈತಿಕ ಸಂಬಂಧಕ್ಕೆ ಅಡ್ಡಿ ಉಂಟಾದ ಪರಿಣಾಮ ಪ್ರಿಯಕರನ ಜೊತೆ ಸೇರಿ ಪತ್ನಿಯೇ ಪತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾಳೆ. ಬಳಿಕ ಶವವನ್ನು ರೈಲ್ವೇ ಹಳಿಯ ಮೇಲೆ ಬಿಸಾಕಿದ ಪ್ರಕರಣ ಹುಬ್ಬಳ್ಳಿಯಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಚಂದ್ರಪ್ಪ ಲಮಾಣಿ ಕೊಲೆಯಾದ ವ್ಯಕ್ತಿ. ಇವರನ್ನು ಪತ್ನಿ ಶೋಭಾ ಚಂದ್ರಪ್ಪ ಲಮಾಣಿ ಹಾಗೂ ಆಕೆಯ ಪ್ರಿಯಕರ ದಿಳ್ಳೆಪ್ಪ ಯಮನಪ್ಪ ಅಂತರವಳ್ಳಿ ಕೊಲೆ ಮಾಡಿದ್ದಾರೆ ಎಂದು ತನಿಖೆಯ ವೇಳೆ ತಿಳಿದು ಬಂದಿದೆ.

    ಚಂದ್ರಪ್ಪ ಮೂಲತಃ ಶ್ರೀನಿವಾಸಪೂರದ ಗಂಗಾಜಲ ತಾಂಡದ ನಿವಾಸಿಯಾಗಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಆದರೆ ಪತ್ನಿ ದಿಳ್ಳೆಪ್ಪ ಎಂಬವನ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು, ಲಾಕ್ ಡೌನ್ ಘೋಷಣೆಯಾದ ಸಂದರ್ಭದಲ್ಲಿ ಅನೈತಿಕ ಸಂಬಂಧಕ್ಕೆ ತೊಂದರೆಯಾಗಿದೆ. ಹೀಗಾಗಿ ಪತ್ನಿ, ಆಕೆಯ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿದ್ದಾರೆ. ಅಪ್ರಾಪ್ತ ಬಾಲಕನೊಬ್ಬ ಕೂಡ ಈ ಕೃತ್ಯದಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ.

    ರಾಣೆಬೆನ್ನೂರು ರೈಲ್ವೇ ನಿಲ್ದಾಣದ ಹತ್ತಿರ ಚಂದ್ರಪ್ಪನ ಶವ ದೊರೆತಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದ ರೈಲ್ವೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ರೈಲ್ವೆ ಸಿಪಿಐ ಜೆ ಎಂಕಾಲಿಮಿರ್ಚಿ ನೇತೃತ್ವದಲ್ಲಿ ರೈಲ್ವೆ ಪೊಲೀಸರು ಆರೋಪಿಗಳನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

  • ಹೊಲದಲ್ಲೇ ಪ್ರೇಮಿಯೊಂದಿಗೆ ತಾಯಿ ಸಲ್ಲಾಪ – ಮರುದಿನ 6ರ ಬಾಲಕನ ಶವ ಪತ್ತೆ

    ಹೊಲದಲ್ಲೇ ಪ್ರೇಮಿಯೊಂದಿಗೆ ತಾಯಿ ಸಲ್ಲಾಪ – ಮರುದಿನ 6ರ ಬಾಲಕನ ಶವ ಪತ್ತೆ

    – ಅಮ್ಮನ ಅನೈತಿಕ ಸಂಬಂಧವನ್ನ ತಂದೆಗೆ ಹೇಳಿದ್ದೆ ತಪ್ಪಾಯ್ತು

    ಗಾಂಧಿನಗರ: ಹೆತ್ತ ತಾಯಿಯೇ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಆರು ವರ್ಷದ ಮಗನನ್ನು ಕೊಲೆ ಮಾಡಿರುವ ಘಟನೆ ಗುಜರಾತ್‍ನ ಬನಾಸ್ ಕಾಂತಾ ಜಿಲ್ಲೆಯಲ್ಲಿ ನಡೆದಿದೆ.

    ಜಗದೀಶ್ ಠಾಕೋರ್ ಮೃತ ಬಾಲಕ. ಈತನ ತಾಯಿ ರಾಜುಲ್ ಮತ್ತು ತನ್ನ ಪ್ರಿಯಕರ ಸಂಜಯ್ ಠಾಕೋರ್ ಸೇರಿಕೊಂಡು ಕೊಲೆ ಮಾಡಿದ್ದಾಳೆ. ಈಗಾಗಲೇ ಪೊಲೀಸರು ಇವರಿಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದು, ಕೋವಿಡ್ ಟೆಸ್ಟ್‌ಗೆ ಒಳಪಡಿಸಿದ್ದಾರೆ.

    ಏನಿದು ಪ್ರಕರಣ?
    ಆರೋಪಿ ರಾಜುಲ್ ಮತ್ತು ಸಂಜಯ್ ಠಾಕೋರ್ ಹೊಲದಲ್ಲಿ ಅನೈತಿಕ ಸಂಬಂಧ ಹೊಂದಿದ್ದರು. ಇದನ್ನು ಆರು ವರ್ಷದ ಬಾಲಕ ನೋಡಿದ್ದಾನೆ. ಆಗ ತಮ್ಮ ಅಕ್ರಮ ಸಂಬಂಧದ ಬಗ್ಗೆ ಯಾರಿಗೂ ಹೇಳಬಾರದು ಎಂದು ಬೆದರಿಕೆ ಹಾಕಿದ್ದಾರೆ. ಆದರೂ ಬಾಲಕ ಎಲ್ಲವನ್ನೂ ತಂದೆಗೆ ತಿಳಿಸಿದ್ದಾನೆ. ಮರುದಿನ ಬಾಲಕನನ್ನು ಅಪಹರಿಸಿ, ಕೊಲೆ ಮಾಡಲಾಗಿದೆ. ರಕ್ತದ ಮಡುವಿನಲ್ಲಿ ಬಾಲಕ ಜಗದೀಶ್ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಜಗದೀಶ್ ತನ್ನ ತಾಯಿಯನ್ನು ಹೊಲದಲ್ಲಿ ಸಂಜಯ್ ಜೊತೆ ಅನೈತಿಕ ಸಂಬಂಧ ಹೊಂದಿದ್ದಾಗ ನೋಡಿದ್ದಾನೆ. ಆಗ ಸಂಜಯ್ ಇದನ್ನು ಯಾರಿಗಾದರೂ ಹೇಳಿದರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದನು. ನನ್ನ ಹೆಂಡತಿ ಸಂಜಯ್ ಜೊತೆ ಸಂಬಂಧ ಹೊಂದಿದ್ದಾಳೆ ಎಂದು ಮೊದಲೆ ಅನುಮಾನಿಸಿದ್ದೆ ಎಂದು ಬಾಲಕನ ತಂದೆ ಲಲಿತ್ ಠಾಕೋರ್ ಹೇಳಿದ್ದಾರೆ.

    ಬಾಲಕ ಜಗದೀಶ್ ನಾಪತ್ತೆಯಾದ ತಕ್ಷಣ ತಂದೆ ಲಲಿತ್ ಆತನನ್ನು ಹುಡುಕಾಡಿದ್ದಾರೆ. ಆಗ ಬಾಲ್ಸಾಸನ್ ರಸ್ತೆ ಬಳಿಯ ಹೊಲವೊಂದರಲ್ಲಿ ರಕ್ತದ ಮಡುವಿನಲ್ಲಿ ಜಗದೀಶ್ ಮೃತದೇಹ ಪತ್ತೆಯಾಗಿದೆ. ಕೂಡಲೇ ಲಲಿತ್ ಸಂತಾಲ್ ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಿದ್ದಾರೆ.

    ಆತನ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿ ಸಂಜಯ್ ಮತ್ತು ರಾಜುಲ್ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಕೋವಿಡ್-19 ವರದಿಗಳು ಬಂದ ನಂತರ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ಪ್ರಿಯಕರನ ಜೊತೆ ಸೇರಿ ಪತಿ ಕೊಂದ ಪತ್ನಿ

    ಪ್ರಿಯಕರನ ಜೊತೆ ಸೇರಿ ಪತಿ ಕೊಂದ ಪತ್ನಿ

    ಗದಗ: ಮಹಿಳೆಯೊಬ್ಬಳು ಪ್ರಿಯಕರನ ಜೊತೆ ತನ್ನ ಪತಿಯನ್ನೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಗದಗ ತಾಲೂಕಿನ ಕಬಲಾಯತಕಟ್ಟಿ ತಾಂಡದಲ್ಲಿ ನಡೆದಿದೆ.

    ಮೃತ ವ್ಯಕ್ತಿಯನ್ನು ಲಕ್ಷ್ಮಣ ಪಾಂಡಪ್ಪ ಲಮಾಣಿ (39) ಎಂದು ಗುರುತಿಸಲಾಗಿದೆ. ಪತ್ನಿ ಲಲಿತ ಹಾಗೂ ಪ್ರಿಯಕರ ಸೋಮಪ್ಪ ಲಮಾಣಿ ಎಂಬವರು ಈ ಕೃತ್ಯ ಎಸಗಿದ್ದಾರೆ.

    ರಾತ್ರಿ ಮಲಗಿದ್ದ ವೇಳೆ ಬಟ್ಟೆಯಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಹತ್ಯೆ ಬಳಿಕ ಇಬ್ಬರೂ ಸ್ಥಳದಿಂದ ಕಾಲ್ಕಿತ್ತಿದ್ದಾರೆ. 4 ವರ್ಷಗಳಿಂದ ಲಲಿತಾ ಹಾಗೂ ಸೋಮಪ್ಪ ನಡುವೆ ಅಕ್ರಮ ಸಂಬಂಧ ಇತ್ತು. ಈ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಕ್ಕೆ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

    ಘಟನೆ ಸಂಬಂಧ ಆರೋಪಿ ಲಲಿತಾ ಹಾಗೂ ಪ್ರಿಯಕರ ಸೋಮಪ್ಪರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಗದಗ ಜಿಲ್ಲೆ ಮುಳುಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮದ್ವೆ ನಂತ್ರ ಪ್ರಿಯಕರನ ಜೊತೆ ಎಸ್ಕೇಪ್ – ರಾಜಿಯಾದ ಮೇಲೂ ಮತ್ತೆ ಹೋಟೆಲ್‍ನಲ್ಲಿ ಸಿಕ್ಕಿಬಿದ್ಳು

    ಮದ್ವೆ ನಂತ್ರ ಪ್ರಿಯಕರನ ಜೊತೆ ಎಸ್ಕೇಪ್ – ರಾಜಿಯಾದ ಮೇಲೂ ಮತ್ತೆ ಹೋಟೆಲ್‍ನಲ್ಲಿ ಸಿಕ್ಕಿಬಿದ್ಳು

    ಚಂಡೀಗಢ: ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜೊತೆ ಇದ್ದಾಗಲೇ ಪತಿಯ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದು, ಇಬ್ಬರಿಗೂ ವ್ಯಕ್ತಿ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಹರಿಯಾಣದ ಫರಿದಾಬಾದ್‍ನ ಹೋಟೆಲ್‍ವೊಂದರಲ್ಲಿ ನಡೆದಿದೆ.

    ಪತಿ ಮತ್ತು ಆತನ ಕಿರಿಯ ಸಹೋದರ ಅವರು ಇರುವ ಸ್ಥಳವನ್ನು ತಿಳಿದುಕೊಂಡು ಹೋಗಿ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ನಂತರ ಇಬ್ಬರಿಗೂ ಸಾರ್ವಜನಿಕವಾಗಿಯೇ ಥಳಿಸಿದ್ದಾರೆ. ಇದರಿಂದ ಜನರು ಸ್ಥಳದಲ್ಲಿ ಜಮಾಯಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಆಗ ವ್ಯಕ್ತಿ ತನ್ನ ಹೆಂಡತಿ ಮತ್ತು ಆಕೆಯ ಪ್ರಿಯಕರನನ್ನು ಪೊಲೀಸರಿಗೆ ಒಪ್ಪಿಸಿದ್ದಾನೆ.

    ಏನಿದು ಪ್ರಕರಣ?
    ದಂಪತಿ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದಾರೆ. ಪತಿ ಪಾಲ್ವಾಲ್‍ನ ಅಸಾವತಿ ಗ್ರಾಮದ ನಿವಾಸಿಯಾಗಿದ್ದರೆ, ಪತ್ನಿ ಫಿರೋಜ್‍ಪುರ್ ಕಲಾನ್ ಗ್ರಾಮದವಳು. ಮಹಿಳೆ ಮದುವೆಗೂ ಮುನ್ನ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಳು. ಇದೇ ವಿಚಾರಕ್ಕೆ ಮದುವೆಯ ನಂತರ ದಂಪತಿಯ ನಡುವೆ ಆಗಾಗ ಜಗಳವಾಗುತ್ತಿತ್ತು ಎಂದು ತಿಳಿದು ಬಂದಿದೆ.

    ಮದುವೆಯಾದ ನಂತರ ನನ್ನ ಪತ್ನಿ ಪ್ರಿಯಕರನ ಜೊತೆ ಸಿಕ್ಕಿಬಿದ್ದಿರುವುದು ಇದೇ ಮೊದಲಲ್ಲ ಎಂದು ಪತಿ ಆರೋಪಿಸಿದ್ದಾನೆ. ಈ ಹಿಂದೆಯೂ ಕೂಡ ವಿವಾಹವಾದ ನಂತರ ತನ್ನ ಪ್ರಿಯಕರನ ಜೊತೆ ಮಹಿಳೆ ಓಡಿಹೋಗಿದ್ದಳು. ಆಗ ವಾಪಸ್ ಬಂದ ಪತ್ನಿಯನ್ನು ಪತಿ ಸ್ವೀಕರಿಸಲು ನಿರಾಕರಿಸಿದ್ದನು. ಆದರೆ ಎರಡು ಕುಟುಂಬದವರು ಮಾತನಾಡಿ ರಾಜೀ ಮಾಡಿಸಿದ್ದರು.

    ಮೂರು ದಿನಗಳ ಹಿಂದೆ ಮಹಿಳೆ ತನ್ನ ತಂದೆ ಕಾಲಿಗೆ ಪೆಟ್ಟಾಗಿದೆ ಎಂದು ತಾಯಿಯ ಮನೆಗೆ ಹೋಗಿದ್ದಳು. ಇತ್ತ ಪತಿ ತನ್ನ ಬಾಮೈದನನ್ನು ಕರೆದು ಮಾವನ ಆರೋಗ್ಯದ ಬಗ್ಗೆ ವಿಚಾರಿಸಿದ್ದಾನೆ. ಇದೇ ವೇಳೆ ತನ್ನ ಹೆಂಡತಿಯ ಬಗ್ಗೆಯೂ ಕೇಳಿದ್ದಾನೆ. ಆಗ ಬಾಮೈದ ತಾಯಿಯೊಂದಿಗೆ ಬಲ್ಲಭಗಢ್‍ಗೆ ಶಾಪಿಂಗ್ ಮಾಡಲು ಹೋಗಿದ್ದಾಳೆ ಎಂದು ತಿಳಿಸಿದ್ದನು. ಕಾಕತಾಳೀಯವಾಗಿ ಬಲ್ಲಭಗಢ್‍ನಲ್ಲಿರುವ ಪತಿಯ ಸಂಬಂಧಿ ಸ್ವಲ್ಪ ಸಮಯದ ನಂತರ ಫೋನ್ ಮಾಡಿ, ನಿನ್ನ ಹೆಂಡತಿ ಯಾರೊಂದಿಗೋ ಸುತ್ತಾಡುತ್ತಿರುವುದನ್ನು ನೋಡಿದೆನೆಂದು ತಿಳಿಸಿದ್ದಾನೆ.

    ಪತಿ ತಕ್ಷಣ ಅನುಮಾನಗೊಂಡು ಹೆಂಡತಿಯನ್ನು ಹುಡುಕಲು ಬಲ್ಲಭಗಢ್‍ಗೆ ಹೋಗಿದ್ದಾನೆ. ಪತ್ನಿ ಮತ್ತು ಆತನ ಸಹೋದರ ಆ ಪ್ರದೇಶದಲ್ಲಿ ಹುಡುಕಿದ್ದಾರೆ, ಸುತ್ತಮುತ್ತಲಿನ ಜನರನ್ನು ಕೇಳಿದ್ದಾರೆ. ಕೊನೆಗೆ ಅವರಿಬ್ಬರನ್ನು ಹೋಟೆಲ್‍ನಲ್ಲಿ ಪತ್ತೆ ಮಾಡಿದ್ದಾರೆ. ಈ ವೇಳೆ ಕೋಪಗೊಂಡ ಪತಿ ಸಾರ್ವಜನಿಕವಾಗಿಯೇ ಇಬ್ಬರನ್ನು ಥಳಿಸಿದ್ದಾನೆ.

    ಸದ್ಯಕ್ಕೆ ಸ್ಥಳೀಯ ಪೊಲೀಸರು ಮಹಿಳೆ ಮತ್ತು ಆತನ ಪ್ರಿಯಕರನನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಜೊತೆಗೆ ಅವರ ಕುಟುಂಬ ಸದಸ್ಯರನ್ನು ಠಾಣೆಗೆ ಕರೆಸಿದ್ದಾರೆ. ಈ ಬಗ್ಗೆ ದೂರು ಬಂದರೆ ತನಿಖೆ ಆರಂಭಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.