Tag: ಪ್ರಿಯಾಂಕಾ ವಾದ್ರಾ

  • Wayanad By Eelections| ಪ್ರಿಯಾಂಕಾ ವಿರುದ್ಧ ಸ್ಪರ್ಧಿಸುತ್ತಿರುವ ನವ್ಯಾ ಹರಿದಾಸ್‌ ಯಾರು?

    Wayanad By Eelections| ಪ್ರಿಯಾಂಕಾ ವಿರುದ್ಧ ಸ್ಪರ್ಧಿಸುತ್ತಿರುವ ನವ್ಯಾ ಹರಿದಾಸ್‌ ಯಾರು?

    ನವದೆಹಲಿ: ಕೇರಳದ ವಯನಾಡ್‌ (Wayanad) ಲೋಕಸಭಾ ಉಪಚುನಾವಣೆಗೆ (Lok Sabha Election) ಕಾಂಗ್ರೆಸ್‌ನ ಪ್ರಿಯಾಂಕಾ ವಾದ್ರಾ (Priyanka Gandhi Vadra) ವಿರುದ್ಧ ಬಿಜೆಪಿ ನವ್ಯಾ ಹರಿದಾಸ್‌ (Navya Haridas) ಅವರನ್ನು ಕಣಕ್ಕೆ ಇಳಿಸಿದೆ.

    36 ವರ್ಷದ ನವ್ಯಾ ಹರಿದಾಸ್ ಅವರು ಮೆಕ್ಯಾನಿಕಲ್ ಇಂಜಿನಿಯರ್ ಪದವಿ ಓದಿದ್ದು ,ಕ್ಯಾಲಿಕಟ್ ವಿಶ್ವವಿದ್ಯಾಲಯದ ಕೆಎಂಸಿಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಟೆಕ್ ಪದವಿ ಪಡೆದಿದ್ದಾರೆ. ಸದ್ಯ ಅವರು ಕೋಝಿಕ್ಕೋಡ್ ಕಾರ್ಪೊರೇಷನ್‌ನಲ್ಲಿ ಕೌನ್ಸಿಲರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಟ್ವಿಟ್ಟರ್ ಪ್ರೊಫೈಲ್ ಪ್ರಕಾರ ಅವರು ಬಿಜೆಪಿಯಲ್ಲಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸಿದ್ದಾರೆ.

    ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಪ್ರಕಾರ ನವ್ಯಾ ಅವರ ಮೇಲೆ ಯಾವುದೇ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿಲ್ಲ ಮತ್ತು 1,29,56,264 ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ಇದನ್ನೂ ಓದಿ: ಶಿಗ್ಗಾವಿ ಉಪಚುನಾವಣೆ| ಭರತ್‌ ಬೊಮ್ಮಾಯಿಗೆ ಬಿಜೆಪಿ ಟಿಕೆಟ್‌ ನೀಡಿದ್ದು ಯಾಕೆ?

    ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಹುಲ್‌ ಗಾಂಧಿ (Rahul Gandhi) ವಯನಾಡ್‌ ಮತ್ತು ಉತ್ತರ ಪ್ರದೇಶದ ರಾಯ್‌ಬರೇಲಿಯಿಂದ ಸ್ಪರ್ಧಿಸಿ ಜಯಗಳಿಸಿದ್ದರು. ಈ ಹಿನ್ನೆಲೆಯಲ್ಲಿ ವಯನಾಡ್‌ ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿಯೇ ಅಂತಿಮ: ಸುರೇಶ್ ಬಾಬು

    ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಹಿರಿಯ ನಾಯಕ ಸತ್ಯನ್ ಮೊಕೇರಿ ಅವರನ್ನು ವಯನಾಡ್ ಲೋಕಸಭಾ ಉಪಚುನಾವಣೆಗೆ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಅಭ್ಯರ್ಥಿಯಾಗಿ ಹೆಸರಿಸಿದೆ.

    2009 ರಿಂದ ನಡೆದ ಸತತ 4 ಚುನಾವಣೆಯಲ್ಲಿ ಇಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳೇ ಜಯಗಳಿಸಿದ್ದಾರೆ. ಇದನ್ನೂ ಓದಿ: ಸಂಡೂರು ಉಪಚುನಾವಣೆ| ಬಿಜೆಪಿ ಟೆಕೆಟ್‌ ಪಡೆದ ಬಂಗಾರು ಹನುಮಂತು ಯಾರು?

    2019ರ ಚುನಾವಣೆಯಲ್ಲಿ ರಾಹುಲ್‌ ಗಾಂಧಿ 7,06,367 ಮತಗಳನ್ನು ಪಡೆದು 4,31,770 ಮತಗಳಿಂದ ಜಯಗಳಿಸಿದ್ದರು. ಸಮೀಪದ ಸಿಪಿಐ ಅಭ್ಯರ್ಥಿ 2,74,597 ಮತಗಳನ್ನು ಪಡೆದಿದ್ದರು.

    2024ರ ಚುನಾವಣೆಯಲ್ಲಿ ರಾಹುಲ್‌ ಗಾಂಧಿ 6,47,445 ಮತಗಳನ್ನು ಪಡೆದು 3,64,445 ಮತಗಳ ಅಂತರದಿಂದ ಜಯಗಳಿಸಿದ್ದರು. ಸಮೀಪದ ಸಿಪಿಐ ಅಭ್ಯರ್ಥಿ ಅನ್ನಿ ರಾಜಾ 2,83,023 ಮತಗಳನ್ನು ಪಡೆದರೆ ಬಿಜೆಪಿಯ ಸುರೇಂದ್ರನ್‌ 1,41,045 ಮತಗಳನ್ನು ಗಳಿಸಿದ್ದರು.

     

  • ಚುನಾವಣಾ ರಾಜಕೀಯಕ್ಕೆ ಪ್ರಿಯಾಂಕಾ ಎಂಟ್ರಿ-ವಯನಾಡಿನಿಂದ ಕಣಕ್ಕೆ

    ಚುನಾವಣಾ ರಾಜಕೀಯಕ್ಕೆ ಪ್ರಿಯಾಂಕಾ ಎಂಟ್ರಿ-ವಯನಾಡಿನಿಂದ ಕಣಕ್ಕೆ

    ನವದೆಹಲಿ: ಚುನಾವಣಾ ರಾಜಕೀಯಕ್ಕೆ ಪ್ರಿಯಾಂಕಾ ವಾದ್ರಾ (Priyanka Vadra ಅಧಿಕೃತ ಎಂಟ್ರಿಯಾಗಿದ್ದು ಕೇರಳದ ವಯನಾಡಿನಿಂದ (Wayanad Lok Sabha) ಈ ಬಾರಿ ಕಣಕ್ಕೆ ಇಳಿಯಲಿದ್ದಾರೆ.

    ಸಂಸದ ರಾಹುಲ್‌ ಗಾಂಧಿ  (Rahul Gandhi) ಅವರ ರಾಜೀನಾಮೆಯಿಂದ ತೆರವಾದ ವಯನಾಡು ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕೆ ಇಳಿಸುವುದಾಗಿ ಎಐಸಿಸಿ (AICC) ಅಧಿಕೃತ ಪ್ರಕಟಣೆಯ ಮೂಲಕ ತಿಳಿಸಿದೆ.

     

    ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆ ನ.13 ರಂದು ನಡೆಯಲಿದ್ದು ನ. 23ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ಇಸ್ರೇಲ್‌ ಜೊತೆ ಮೋದಿಗೆ ಉತ್ತಮ ಸಂಬಂಧವಿದೆ – ಕಾಂಗ್ರೆಸ್‌ನಿಂದ ಇವಿಎಂ-ಪೇಜರ್‌ ಅನುಮಾನ

    ಲೋಕಸಭಾ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ಕೇರಳದ ವಯನಾಡು ಮತ್ತು ಉತ್ತರ ಪ್ರದೇಶದ ರಾಯ್‌ ಬರೇಲಿಯಿಂದ ಸ್ಪರ್ಧಿಸಿದ್ದರು. ಎರಡೂ ಕ್ಷೇತ್ರಗಳಲ್ಲಿ ರಾಹುಲ್‌ ಗಾಂಧಿ ಜಯಗಳಿಸಿದ ಬಳಿಕ ವಯನಾಡು ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು.

     

  • ರಾಹುಲ್‌ ಗೆದ್ದ ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಕಣಕ್ಕೆ?

    ರಾಹುಲ್‌ ಗೆದ್ದ ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಕಣಕ್ಕೆ?

    ನವದೆಹಲಿ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ (Priyanka Vadra) ಕೇರಳದ ವಯನಾಡು (Wayanad) ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ಕಣಕ್ಕೆ ಇಳಿಯುತ್ತಾರಾ ಎಂಬ ಪ್ರಶ್ನೆ ಎದ್ದಿದೆ.

    ಹೌದು. ರಾಹುಲ್‌ ಗಾಂಧಿ (Rahul Gandhi) ಈ ಬಾರಿ ಉತ್ತರ ಪ್ರದೇಶದ ಅಮೇಠಿ ಮತ್ತು ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿದ್ದರು. ಎರಡು ಕ್ಷೇತ್ರಗಳಲ್ಲಿ ರಾಹುಲ್‌ ಗಾಂಧಿ ಜಯಗಳಿಸಿದ ಹಿನ್ನೆಲೆಯಲ್ಲಿ ಒಂದು ಕ್ಷೇತ್ರವನ್ನು ಬಿಟ್ಟುಕೊಡಬೇಕಾಗುತ್ತದೆ. ಹೀಗಾಗಿ ವಯನಾಡು ಕ್ಷೇತ್ರಕ್ಕೆ ರಾಜೀನಾಮೆ ನೀಡಬಹುದು ಎಂಬ ಮಾತುಗಳು ಕೇಳಿ ಬರುತ್ತಿದೆ.

    ಇದಕ್ಕೆ ಪೂರಕ ಎಂಬಂತೆ ವಯನಾಡಿನ ಕಲ್ಪೆಟ್ಟಾದಲ್ಲಿ ರಾಹುಲ್ ಗಾಂಧಿ ಬೆಂಬಲಿಗರಿಗೆ ಧನ್ಯವಾದ ಅರ್ಪಿಸಲು ಆಯೋಜಿಸಲಾಗಿದ್ದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಕೇರಳ ಕಾಂಗ್ರೆಸ್‌ ಅಧ್ಯಕ್ಷ ಸುಧಾಕರನ್, ರಾಷ್ಟ್ರವನ್ನು ಮುನ್ನಡೆಸಬೇಕಾದ ರಾಹುಲ್ ಗಾಂಧಿ ಅವರು ವಯನಾಡಿನಲ್ಲಿ ಉಳಿಯುತ್ತಾರೆ ಎಂದು ನಿರೀಕ್ಷಿಸಲು ಸಾಧ್ಯವಿಲ್ಲ. ಆದ್ದರಿಂದ, ನಾವು ದುಃಖಿಸಬಾರದು. ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕು. ಅವರಿಗೆ ತಮ್ಮ ಎಲ್ಲಾ ಶುಭಾಶಯಗಳನ್ನು ಮತ್ತು ಬೆಂಬಲವನ್ನು ನೀಡಬೇಕು ಎಂದು ಹೇಳಿದ್ದರು.  ಇದನ್ನೂ ಓದಿ: ದರ್ಶನ್ ಇರೋ ಠಾಣೆಗೆ ಶಾಮಿಯಾನ ಹಾಕಿದ್ದರ ಹಿಂದಿನ ಸೀಕ್ರೆಟ್ ರಿವೀಲ್

    ವಯನಾಡು ಕ್ಷೇತ್ರಕ್ಕೆ ಕಾಂಗ್ರೆಸ್‌ನ (Congress) ಬೇರೆ ಅಭ್ಯರ್ಥಿಯನ್ನು ನಿಲ್ಲಿಸುವುದಕ್ಕಿಂತ ಪ್ರಿಯಾಂಕಾ ವಾದ್ರಾ ಅವರನ್ನು ನಿಲ್ಲಿಸುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗುತ್ತಿದೆ.  ಇಲ್ಲಿಯವರೆಗೆ ಪ್ರಿಯಾಂಕಾ ವಾದ್ರಾ ಚುನಾವಣಾ ರಾಜಕಾರಣಕ್ಕೆ ಇಳಿದಿರಲಿಲ್ಲ. ಇದನ್ನೂ ಓದಿ: ದೇಶದ ಪ್ರತಿ ಜಿಲ್ಲೆಯಲ್ಲೂ ಉಗ್ರರ ಜಾಲ ರೂಪಿಸಲು ಬಳ್ಳಾರಿಯಲ್ಲಿ ಸಂಚು – NIA ಚಾರ್ಜ್‌ಶೀಟ್‌ನಲ್ಲಿ ಬೆಚ್ಚಿ ಬೀಳಿಸುವ ಮಾಹಿತಿ ಸ್ಫೋಟ!

    ಹಾಗೆ ನೋಡಿದರೆ ಈ ಬಾರಿಯ ಚುನಾವಣೆಯಲ್ಲಿ ಪ್ರಿಯಾಂಕಾ ವಾದ್ರಾ ಕಣಕ್ಕೆ ಇಳಿಯುತ್ತಾರೆ ಎನ್ನಲಾಗುತ್ತಿತ್ತು. ಆದರೆ ಕಣಕ್ಕೆ ಇಳಿದರೆ ಆ ಕ್ಷೇತ್ರದಲ್ಲಿ ಜಾಸ್ತಿ ಪ್ರಚಾರ ನಡೆಸಬೇಕಾಗುತ್ತದೆ. ದೇಶವ್ಯಾಪಿ ಪ್ರಚಾರ ನಡೆಸಲು ಸಾಧ್ಯವಾಗುವುದಿಲ್ಲ. ಒಂದು ವೇಳೆ ಆಯ್ಕೆಯಾದರೆ ಬಿಜೆಪಿಗೆ ಕುಟುಂಬ ರಾಜಕಾರಣದ ಅಸ್ತ್ರ ಸಿಗುತ್ತದೆ ಎಂಬ ಕಾರಣಕ್ಕೆ ಪ್ರಿಯಾಂಕಾ ಹಿಂದೇಟು ಹಾಕಿದ್ದರು ಎಂದು ವರದಿಯಾಗಿತ್ತು.

    ಈಗ ಕೆಲ ಕೈ ನಾಯಕರು ವಯನಾಡಿನಿಂದ ಸ್ಪರ್ಧಿಸುವಂತೆ ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ಪ್ರಿಯಾಂಕಾ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ.

    ರಾಯ್‌ಬರೇಲಿಯಲ್ಲಿ ನಡೆದ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ್ದ ರಾಹುಲ್‌ ಗಾಂಧಿ, ಒಂದು ವೇಳೆ ವಾರಣಾಸಿಯಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದರೆ ಮೋದಿ 2-3 ಲಕ್ಷ ಮತಗಳ ಅಂತರದಿಂದ ಸೋಲುತ್ತಿದ್ದರು ಎಂದು ಹೇಳಿದ್ದರು. ಈ ಹೇಳಿಕೆ ನೀಡುವ ಮೂಲಕ ಪ್ರಿಯಾಂಕಾ ಅವರನ್ನು ಚುನಾವಣಾ ರಾಜಕೀಯಕ್ಕೆ ರಾಹುಲ್‌ ಎಳೆ ತಂದಿದ್ದರು.

    ಇಲ್ಲಿಯವರೆಗೆ ರಾಹುಲ್‌ ಗಾಂಧಿ ಯಾವ ಕ್ಷೇತ್ರವನ್ನು ತೊರೆಯುತ್ತಾರೆ? ಆ ಕ್ಷೇತ್ರದಲ್ಲಿ ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವುದು ಅಧಿಕೃತವಾಗಿ ಪ್ರಕಟವಾಗಿಲ್ಲ.

    ವಯನಾಡ್‌ನಲ್ಲಿ ರಾಹುಲ್‌ ಗಾಂಧಿ 3,64,422 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ರಾಹುಲ್‌ ಗಾಂಧಿ 6,47,445 ಮತಗಳನ್ನು  ಪಡೆದರೆ  ಸಿಪಿಐನಿಂದ ಸ್ಪರ್ಧಿಸಿದ್ದ ಅನ್ನಿ ರಾಜ 2,83,023 ಮತಗಳನ್ನು ಪಡೆದಿದ್ದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಕೆ ಸುರೇಂದ್ರನ್‌ 1,41,045 ಮತ ಪಡೆದು ಮೂರನೇ ಸ್ಥಾನ ಪಡೆದಿದ್ದಾರೆ.

     

  • ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ ರಾಹುಲ್‌, ಪ್ರಿಯಾಂಕಾ

    ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ ರಾಹುಲ್‌, ಪ್ರಿಯಾಂಕಾ

    ಬೆಂಗಳೂರು: ಇಂದು ರಾತ್ರಿ ಬೆಂಗಳೂರಿಗೆ (Bengaluru) ರಾಹುಲ್ ಗಾಂಧಿ (Rahul Gandhi) ಮತ್ತು ಪ್ರಿಯಾಂಕಾ ವಾದ್ರಾ (Priyanka Vadra) ಆಗಮಿಸಲಿದ್ದಾರೆ.

    ಇಂದು ರಾತ್ರಿ ಬೆಂಗಳೂರಲ್ಲೇ ಇಬ್ಬರು ವಾಸ್ತವ್ಯ ಹೂಡಲಿದ್ದು ನಾಳೆ ಬೆಳಗ್ಗೆ ಬೆಂಗಳೂರಿನಿಂದ ಕೇರಳಕ್ಕೆ ತೆರಳಲಿದ್ದಾರೆ. ಸದ್ಯಕ್ಕೆ ಬೆಂಗಳೂರಿನಲ್ಲಿ ಯಾವುದೇ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಮಾಹಿತಿ ಇಲ್ಲ.  ಇದನ್ನೂ ಓದಿ: ಅನಗತ್ಯ ಹೇಳಿಕೆಗಳನ್ನು ನೀಡಬೇಡಿ, ಸರಿಯಾಗಿ ಸಮಯ ಪಾಲನೆ ಮಾಡಿ: ಸಚಿವರಿಗೆ ಮೋದಿ ಪಾಠ

     

    ರಾತ್ರಿ 9 ಗಂಟೆಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ರಾಹುಲ್ ಮತ್ತು ಪ್ರಿಯಾಂಕಾ ಅವರನ್ನು ಬರಮಾಡಿಕೊಳ್ಳಲಿದ್ದಾರೆ.

    ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದು ನಾಳೆ ಬೆಳಗ್ಗೆ 7 ಗಂಟೆಗೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳಕ್ಕೆ ರಾಹುಲ್ ಮತ್ತು ಪ್ರಿಯಾಂಕಾ ಪ್ರಯಾಣಿಸಲಿದ್ದಾರೆ.

  • ರಾಯ್‌ಬರೇಲಿಯಿಂದ ಸ್ಪರ್ಧಿಸಲ್ಲ ಪ್ರಿಯಾಂಕಾ – ಇನ್ನೂ ಅಭ್ಯರ್ಥಿ ಘೋಷಣೆ ಮಾಡದ ಕಾಂಗ್ರೆಸ್‌

    ರಾಯ್‌ಬರೇಲಿಯಿಂದ ಸ್ಪರ್ಧಿಸಲ್ಲ ಪ್ರಿಯಾಂಕಾ – ಇನ್ನೂ ಅಭ್ಯರ್ಥಿ ಘೋಷಣೆ ಮಾಡದ ಕಾಂಗ್ರೆಸ್‌

    ನವದೆಹಲಿ: ಐದನೇ ಹಂತದ ಲೋಕಸಭೆ ಚುನಾವಣೆ (Lok Sabha Election) ಸಂಬಂಧ ನಾಮಪತ್ರ ಸಲ್ಲಿಸಲು ಇನ್ನು ಮೂರು ದಿನ ಉಳಿದಿದೆ. ಆದರೂ ಅಮೇಠಿ, ರಾಯ್‌ಬರೇಲಿಯಲ್ಲಿ ಯಾರನ್ನು ಕಣಕ್ಕೆ ಇಳಿಸಬೇಕು ಎಂಬುದನ್ನು ಫೈನಲ್ ಮಾಡಲಾಗದೇ ಕಾಂಗ್ರೆಸ್ ಹೈಕಮಾಂಡ್ (Congress High Command) ಒದ್ದಾಡುತ್ತಿದೆ.

    ದೆಹಲಿಯಲ್ಲಿ ಸಭೆ ನಡೆದು ಎಂಬತ್ತು ಗಂಟೆ ಕಳೆದರೂ ಈವರೆಗೂ ಯಾವುದೇ ಪ್ರಕಟಣೆ ಹೊರಬಿದ್ದಿಲ್ಲ. ಮೂಲಗಳ ಪ್ರಕಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಮೇ ಮೂರರವರೆಗೂ ಅಮೇಠಿ (Amethi) ವಿಚಾರದಲ್ಲಿ ಸಸ್ಪೆನ್ಸ್ ಮುಂದುವರೆಯುತ್ತದೆ. ಇದನ್ನೂ ಓದಿ: ರಾಯ್‌ಬರೇಲಿಗೆ ನೂಪೂರ್‌ ಶರ್ಮಾ ಬಿಜೆಪಿ ಅಭ್ಯರ್ಥಿ?

    ರಾಯ್‌ಬರೇಲಿ (Raibareli) ಅಭ್ಯರ್ಥಿ ವಿಚಾರದಲ್ಲಿ ಅನಿಶ್ಚಿತತೆ ಮುಂದುವರೆದಿದೆ. ಸದ್ಯದ ಮಾಹಿತಿ ಪ್ರಕಾರ, ರಾಯ್‌ಬರೇಲಿಯಿಂದ ಸ್ಪರ್ಧೆಗೆ ಪ್ರಿಯಾಂಕಾ ವಾದ್ರಾ (Priyanka Vadra) ಆಸಕ್ತಿ ತೋರಿಸಿಲ್ಲ. ಚುನಾವಣೆಗೆ ಸ್ಪರ್ಧೆ ಮಾಡಿದರೆ ದೇಶದ ಎಲ್ಲೆಡೆ ಪ್ರಚಾರ ಮಾಡಲು ಆಗುವುದಿಲ್ಲ ಎಂಬ ಕಾರಣವನ್ನು ನೀಡುವ ಮೂಲಕ ಕಣಕ್ಕಿಳಿಯಲು ಪ್ರಿಯಾಂಕಾ ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ.

    ಅಮೇಠಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವೆ ಸ್ಮೃತಿ ಇರಾನಿ (Smriti Irani) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ರಾಯ್‌ಬರೇಲಿ ಕ್ಷೇತ್ರದ ಅಭ್ಯರ್ಥಿಯನ್ನು ಬಿಜೆಪಿ ಸಹ ಇಲ್ಲಿಯವರೆಗೆ ಪ್ರಕಟಿಸಿಲ್ಲ. ಹೀಗಾಗಿ ಎರಡು ಕ್ಷೇತ್ರಗಳು ಈಗ ಭಾರೀ ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿ ರಾಕೇಶ್‌ ಸಿದ್ದರಾಮಯ್ಯ ವಿಚಾರ ಕೆದಕಿದ ಹೆಚ್‌ಡಿಕೆ

    ರಾಯ್‌ಬರೇಲಿ ಕೈ ಕೋಟೆ:
    ರಾಯ್‌ಬರೇಲಿಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಮೂರು ಬಾರಿ ಸ್ಪರ್ಧಿಸಿ ಗೆದ್ದಿದ್ದರು. 1999 ರಿಂದ ಸೋನಿಯಾ ಗಾಂಧಿ ಲೋಕಸಭೆ ಚುನಾವಣೆಯನ್ನು ಗೆಲ್ಲುತ್ತಾ ಬಂದಿದ್ದಾರೆ. 1999 ರಲ್ಲಿ ಉತ್ತರ ಪ್ರದೇಶದ ಅಮೇಠಿ ಮತ್ತು ಕರ್ನಾಟಕದ ಬಳ್ಳಾರಿಯಿಂದ ಸ್ಪರ್ಧಿಸಿ ಗೆದ್ದಿದ್ದ ಅವರು 2004ರ ಚುನಾವಣೆಯಿಂದ 2019ರ ಚುನಾವಣೆಯವರೆಗೂ ಉತ್ತರ ಪ್ರದೇಶದ ರಾಯ್‌ಬರೇಲಿಯಿಂದ ಸತತವಾಗಿ ಆಯ್ಕೆ ಆಗುತ್ತಿದ್ದಾರೆ. ಈ ಬಾರಿ ಸೋನಿಯಾ ಗಾಂಧಿ ರಾಜ್ಯಸಭೆ ಮೂಲಕ ಸಂತಸ್‌ ಪ್ರವೇಶಿಸಿದ್ದಾರೆ.

  • ಮಹಿಳೆಯರ ಕಷ್ಟ ಅವರಿಗೆ ಮಾತ್ರ ಗೊತ್ತು : ಪ್ರಿಯಾಂಕಾ ವಾದ್ರಾ

    ಮಹಿಳೆಯರ ಕಷ್ಟ ಅವರಿಗೆ ಮಾತ್ರ ಗೊತ್ತು : ಪ್ರಿಯಾಂಕಾ ವಾದ್ರಾ

    ನವದೆಹಲಿ: ಉತ್ತರಪ್ರದೇಶ ಮಹಿಳೆಯರು ಆಭರಣ ಧರಿಸಿ ಮಧ್ಯರಾತ್ರಿ ಎಲ್ಲಿಗೆ ಬೇಕಾದರೂ ತೆರಳಬಹುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಕಿಡಿಕಾರಿದ್ದಾರೆ.

    ಪ್ರತಿನಿತ್ಯ ಯಾವ ಸಂಕಷ್ಟ ಎದುರಿಸಬೇಕು ಎಂಬುದು ಉತ್ತರ ಪ್ರದೇಶದ ಮಹಿಳೆಯರಿಗೆ ಮಾತ್ರ ಗೊತ್ತು ಎಂದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಿಯಾಂಕಾ, ದೇಶದ ಗೃಹ ಸಚಿವರು ಆಭರಣಗಳನ್ನು ಧರಿಸುತ್ತಾರೆ ಎಂದು ಹೇಳುತ್ತಾರೆ, ಆದರೆ ಅವರು ಪ್ರತಿದಿನ ಯಾವ ರೀತಿಯ ವಿಷಯಗಳನ್ನು ಎದುರಿಸಬೇಕೆಂದು ಉತ್ತರಪ್ರದೇಶ ಮಹಿಳೆಯರಿಗೆ ಮಾತ್ರ ತಿಳಿದಿದೆ ಎಂದು ಟ್ವೀಟ್‍ಮಾಡಿ ವಾಗ್ದಾಳಿ ಮಾಡಿದ್ದಾರೆ. ಇದನ್ನೂ ಓದಿ:  ಕಂಗನಾಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿ ವಾಪಸ್ ಪಡೆಯುವಂತೆ ನವಾಬ್ ಮಲ್ಲಿಕ್ ಒತ್ತಾಯ

    ಹೀಗಾಗಿಯೇ ಲಡ್ಕಿ ಹೂಂ, ಲಢ್ ಸಕ್ತಿ ಹೂಂ ಬೇಕು. ರಾಜಕೀಯದಲ್ಲಿ ಮತ್ತು ಭದ್ರತೆಗೆ ಸಂಬಂಧಿಸಿದ ನೀತಿಗಳನ್ನು ರೂಪಿಸುವಲ್ಲಿ ಮಹಿಳೆಯರ ಭಾಗವಹಿಸುವಿಕೆ ಮುಖ್ಯವಾಗಿದೆ ಎಂದು ಹೇಳಿದ್ದು, ಕಾನ್ಪುರದಲ್ಲಿ ಮೂವರು ಮಹಿಳೆಯರ ಸರ ಅಪಹರಣದ ಬಗ್ಗೆ ಪ್ರಿಯಾಂಕಾ ಟ್ವಿಟ್ಟರ್ ನಲ್ಲಿ ಮಾಧ್ಯಮ ವರದಿಯನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:  ನನ್ನ ತಪ್ಪು ಸಾಬೀತಾದರೆ ಪದ್ಮಶ್ರೀ ಹಿಂದಿರುಗಿಸುವೆ: ಕಂಗನಾ ರಣಾವತ್

  • ಸೈಕಲ್ ಗರ್ಲ್‍ಗೆ ಪ್ರಿಯಾಂಕಾ ವಾದ್ರಾ ನೆರವು

    ಸೈಕಲ್ ಗರ್ಲ್‍ಗೆ ಪ್ರಿಯಾಂಕಾ ವಾದ್ರಾ ನೆರವು

    ಪಾಟ್ನಾ: ಬಿಹಾರದ ಸೈಕಲ್ ಗರ್ಲ್ ಎಂದೇ ಖ್ಯಾತಿಯಾಗಿರುವ ಜ್ಯೋತಿ ಕುಮಾರ್ ಅವರ ತಂದೆ ನಿಧನರಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ನೆರವಿನ ಹಸ್ತ ಚಾಚಿದ್ದಾರೆ.

    ಜ್ಯೋತಿ ಕುಮಾರ್ ಜೊತೆ ದೂರವಾಣಿ ಕರೆ ಮಾಡಿ ಮಾತನಾಡಿರುವ ಪ್ರಿಯಾಂಕಾ ಆಕೆಗೆ ಸಮಾಧಾನ ಮಾಡಿದ್ದಾರೆ. ಜೊತೆಗೆ ಆಕೆಯ ವಿಧ್ಯಾಭ್ಯಾಸ ಮತ್ತು ಜೀವನಕ್ಕೆ ನೆರವು ನೀಡುವುದಾಗಿ ಹೇಳಿದ್ದಾರೆ.

    ಮೇ 18 2020 ರಂದು ಜ್ಯೋತಿ ಕುಮಾರಿ ತಂದೆ ಅನಾರೋಗ್ಯಕ್ಕೆ ತುತ್ತಾಗಿದ್ದರು, ತನ್ನ ಅನಾರೋಗ್ಯದ ತಂದೆಯನ್ನು ಹರಿಯಾಣದ ಗುರುಗ್ರಾಮ್‍ನಿಂದ ಬಿಹಾರದ ದಭರ್ಂಗಾಗೆ 1,200 ಕಿ.ಮೀ ಸೈಕಲ್‍ನಲ್ಲಿ ಮನೆಗೆ ಕರೆದೊಯ್ದರು. ಆದರೆ ಕೆಲವು ದಿನಗಳ ನಂತರ ಆಕೆಯ ತಂದೆ ಹೃದಯಾಘಾತದಿಂದ ಸಾವನ್ನಪಿದ್ದರು. ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ. ಜ್ಯೋತಿಕಾ ತಂದೆಯನ್ನು ಉಳಿಸಿಕೊಳ್ಳಲು ಮಾಡಿರು ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು. ಇದನ್ನೂ ಓದಿ: ಸೈಕಲಿನಲ್ಲೇ ಮಗಳೊಂದಿಗೆ ಕ್ರಮಿಸಿ ಸುದ್ದಿಯಾಗಿದ್ದ ವ್ಯಕ್ತಿ ಸಾವು

    ತಂದೆಯನ್ನು ಉಳಿಸಿಕೊಳ್ಳಬೇಕೆಂಬ ಉದ್ದೇಶದಿಂದ ತಂದೆಯನ್ನು ಸೈಕಲ್ ನಲ್ಲಿ ಕರೆದುಕೊಂಡು ಹೋಗಿದ್ದ ವಿಷಯವನ್ನು ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಇವಾಂಕಾ ಟ್ರಂಪ್ ಹೊಗಳಿದ್ದರು. ನೆಟ್ಟಿಗರು ಜ್ಯೋತಿಕಾ ಕಾರ್ಯವನ್ನು ಮೆಚ್ಚಿದ್ದರು. ಇದನ್ನೂ ಓದಿ : ಅನ್‍ಲಾಕ್ ಸುಳಿವು ನೀಡಿದ್ರು ಸಿಎಂ ಯಡಿಯೂರಪ್ಪ

    ಆದರೆ ತಂದೆ ಮೋಹನ್ ಪಾಸ್ವಾನ್ ನಿಧನದ ನಂತರ ಜ್ಯೋತಿಕುಮಾರಿ ಹಣಕಾಸಿನ ಸಮಸ್ಯೆ ಎದುರಿಸುತ್ತಿದ್ದಾರೆ, ಅವರೊಬ್ಬರೇ ಮನೆಯಲ್ಲಿ ದುಡಿಯುತ್ತಿದ್ದು, ಕುಟುಂಬದ ಅಗತ್ಯತೆಗಳನ್ನು ಪೂರೈಸುತ್ತಿದ್ದರು. ಹೀಗಾಗಿ ಆಕೆಗೆ ಕರೆ ಮಾಡಿರುವ ಪ್ರಿಯಾಂಕಾ ಗಾಂಧಿ ವಿಧ್ಯಾಭ್ಯಾಸ ಸೇರಿದಂತೆ ಎಲ್ಲಾ ಖರ್ಚು ವೆಚ್ಚಗಳನ್ನು ಭರಿಸುವುದಾಗಿ ತಿಳಿಸಿದ್ದಾರೆ. ಪ್ರಿಯಾಂಕಾ ಗಾಂಧಿಯವರೊಂದಿಗೆ ಮಾತನಾಡಿದ ಜ್ಯೋತಿ, ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನು ಭೇಟಿ ಮಾಡುವ ಇಚ್ಛೆ ವ್ಯಕ್ತಪಡಿಸಿದರು. ಕೋವಿಡ್-19 ಸಾಂಕ್ರಾಮಿಕ ರೋಗವು ಮುಗಿದ ಕೂಡಲೇ ನವದೆಹಲಿಯಲ್ಲಿ ಭೇಟಿಯಾಗುವುದಾಗಿ ಜ್ಯೋತಿಗೆ ಪ್ರಿಯಾಂಕಾ ಭರವಸೆ ನೀಡಿದ್ದಾರೆ.

    ಪ್ರಿಯಾಂಕಾ ಗಾಂಧಿ ವಾದ್ರಾ ಬರೆದ ಸಂತಾಪ ಪತ್ರವನ್ನು ಪಕ್ಷದ ಮುಖಂಡ ಮಶ್ಕೂಲ್ ಅಹ್ಮದ್ ಅವರು ಜ್ಯೋತಿ ಕುಮಾರಿ ಅವರಿಗೆ ಹಸ್ತಾಂತರಿಸಿದರು. ಯಾವುದಕ್ಕೂ ಮುಜುಗರ ಪಡದೆ ಸಹಾಯ ಕೇಳುವಂತೆ ಪ್ರಿಯಾಂಕಾ ಜ್ಯೋತಿ ಕುಮಾರಿ ಅವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

  • ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

    ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

    ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅನಾರೋಗ್ಯದ ಕಾರಣ ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಸೋನಿಯಾ ಅವರು ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಭಾನುವಾರ ಸಂಜೆ 7 ಗಂಟೆಗೆ ಅವರನ್ನು ಸೆಂಟ್ರಲ್ ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಸೋನಿಯಾ ಅವರ ಜೊತೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಕೂಡ ಆಸ್ಪತ್ರೆಯಲ್ಲಿ ಇದ್ದಾರೆ. ಸೋನಿಯಾ ಅವರಿಗೆ ರೂಟಿನ್ ಚೆಕಪ್ ಮಾಡಲಾಗುತ್ತಿದೆ ಎಂದು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ.

    ಕಳೆದ ಎರಡು ದಿನಗಳಿಂದ ಸೋನಿಯಾ ಗಾಂಧಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಶನಿವಾರ ನಡೆದ ಬಜೆಟ್‍ನಲ್ಲೂ ಸೋನಿಯಾ ಹಾಜರಾಗಲಿಲ್ಲ.

  • ಸೋನಿಯಾ, ರಾಹುಲ್, ಪ್ರಿಯಾಂಕಾಗೆ ನೀಡಲಾಗಿದ್ದ ಎಸ್‍ಪಿಜಿ ಭದ್ರತೆ ವಾಪಸ್

    ಸೋನಿಯಾ, ರಾಹುಲ್, ಪ್ರಿಯಾಂಕಾಗೆ ನೀಡಲಾಗಿದ್ದ ಎಸ್‍ಪಿಜಿ ಭದ್ರತೆ ವಾಪಸ್

    ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪುತ್ರ ರಾಹುಲ್ ಗಾಂಧಿ, ಪುತ್ರಿ ಪ್ರಿಯಾಂಕಾ ವಾದ್ರಾ ಅವರಿಗೆ ನೀಡಿದ್ದ ವಿಶೇಷ ಭದ್ರತಾ ಪಡೆ(ಎಸ್‍ಪಿಜಿ)ಯನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ವರದಿಯಾಗಿದೆ.

    ಅಮಿತ್ ಶಾ ನೇತೃತ್ವದಲ್ಲಿ ನಡೆದ ಗೃಹ ಸಚಿವಾಲಯದ ವಾರ್ಷಿಕ ಸಭೆಯಲ್ಲಿ ಚರ್ಚೆ ನಡೆಸಿದ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಗುಪ್ತಚರ ಇಲಾಖೆ ಬೆದರಿಕೆ ಇಲ್ಲ ಎಂದು ತಿಳಿಸಿದ ಹಿನ್ನೆಲೆಯಲ್ಲಿ ಸರ್ಕಾರ ಎಸ್‍ಪಿಜಿ ಭದ್ರತೆಯನ್ನು ಹಿಂದಕ್ಕೆ ಪಡೆಯಲು ಮುಂದಾಗಿದೆ. ಎಸ್‍ಪಿಜಿ ಭದ್ರತೆಯನ್ನು ಹಿಂದಕ್ಕೆ ಪಡೆಯಲಾಗಿದ್ದು ಇವರಿಗೆ ಝಡ್ ಪ್ಲಸ್ ಭದ್ರತೆಯನ್ನು ಮುಂದುವರಿಸಲಾಗಿದೆ. ಎಲ್ಲ ಏಜೆನ್ಸಿಗಳ ಅಂಕಿ ಅಂಶಗಳನ್ನು ಪರಿಗಣಿಸಿ ನಂತರ ಮೌಲ್ಯಮಾಪನ ಮಾಡಿ, ಗೃಹ ಇಲಾಖೆ ಈ ನಿರ್ಧಾರವನ್ನು ಕೈಗೊಂಡಿದೆ.

    ಆಯ್ದ ಕೆಲವರಿಗೆ ಮಾತ್ರ ಒದಗಿಸಲಾಗಿರುವ ಎಸ್‍ಪಿಜಿ ಭದ್ರತೆಯ ವಾರ್ಷಿಕ ಬದಲಾವಣೆಯ ಭಾಗವಾಗಿ ಈ ಮೊದಲು ಮನಮೋಹನ್ ಸಿಂಗ್ ಅವರಿಗೆ ನೀಡಲಾಗಿದ್ದ ಎಸ್‍ಪಿಜಿ ಭದ್ರತೆಯನ್ನು ವಾಪಸ್ ಪಡೆಯಲಾಗಿತ್ತು.

    ದೇಶದ ಅತ್ಯಂತ ಪ್ರಮುಖ ರಾಜಕಾರಣಿಗಳು ಹಾಗೂ ಗಣ್ಯರಿಗೆ ಮಾತ್ರ ಎಸ್‍ಪಿಜಿ ಭದ್ರತೆ ಒದಗಿಸಲಾಗುತ್ತದೆ. ಮನಮೋಹನ್ ಸಿಂಗ್ ಬಳಿಕ ಇಲ್ಲಿಯವರೆಗೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಮಕ್ಕಳಾದ ರಾಹುಲ್ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಈ ನಾಲ್ವರಿಗೆ ಮಾತ್ರ ಎಸ್‍ಪಿಜಿ ಭದ್ರತೆ ಒದಗಿಸಲಾಗಿದೆ.

    ಈ ಹಿಂದೆ ಭದ್ರತೆಯ ಬದಲಾವಣೆಯ ವಿಮರ್ಶೆಯೂ ಕಾಲಕಾಲಕ್ಕೆ ನಡೆಯುತ್ತದೆ. ಅಲ್ಲದೆ, ಭದ್ರತಾ ಏಜೆನ್ಸಿಗಳ ವೃತ್ತಿಪರ ಮೌಲ್ಯಮಾಪನವನ್ನು ಆಧರಿಸಿದೆ. ಹೀಗಾಗಿ ಯಾರಿಗೆ ಯಾವ ರೀತಿ ಭದ್ರತೆ ನೀಡಬೇಕೆಂದು ಭದ್ರತಾ ಏಜೆನ್ಸಿಗಳು ಚರ್ಚಿಸಿ ತೀರ್ಮಾನಿಸುತ್ತವೆ. ಡಾ.ಮನಮೋಹನ್ ಸಿಂಗ್ ಅವರಿಗೆ ಝಡ್ ಪ್ಲಸ್ ಭದ್ರತೆಯನ್ನು ಮುಂದುವರಿಸಲಾಗಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದರು.

    ಇದೇ ರೀತಿ ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡ ಮತ್ತು ವಿಪಿ ಸಿಂಗ್ ಅವರಿಗೆ ನೀಡಲಾಗಿದ್ದ ಭದ್ರತೆಯನ್ನು ಹಿಂಪಡೆಯಲಾಗಿತ್ತು. ಅನಾರೋಗ್ಯಕ್ಕೆ ತುತ್ತಾಗಿ ಕಳೆದ ಕೆಲವು ವರ್ಷಗಳಿಂದ ಸಾರ್ವಜನಿಕವಾಗಿ ಕಾಣಿಸದಿದ್ದರೂ ಸಹ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಮೃತಪಡುವರೆಗೂ ಎಸ್‍ಪಿಜಿ ಭದ್ರತೆ ನೀಡಲಾಗಿತ್ತು.

    ಎಸ್‍ಪಿಜಿಯಲ್ಲಿ 3 ಸಾವಿರಕ್ಕೂ ಅಧಿಕ ಸಿಬ್ಬಂದಿ ಇದ್ದಾರೆ. ಬೆದರಿಕೆ ಕರೆಗಳನ್ನು ಆಧರಿಸಿ ಪ್ರಧಾನಿ, ಮಾಜಿ ಪ್ರಧಾನಿ ಹಾಗೂ ಅವರ ಕುಟುಂಬದವರಿಗೆ ಈ ಭದ್ರತೆಯನ್ನು ನೀಡಲಾಗುತ್ತದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಅವರ ಭದ್ರತಾ ಸಿಬ್ಬಂದಿ ಹತ್ಯೆ ಮಾಡಿದ ನಂತರ ಎಸ್‍ಪಿಜಿಯನ್ನು 1985ರಲ್ಲಿ ಸ್ಥಾಪಿಸಲಾಗಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ನಂತರ 1991ರಲ್ಲಿ ಎಸ್‍ಪಿಜಿ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಮಾಜಿ ಪ್ರಧಾನಿಗಳು ಹಾಗೂ ಅವರ ಕುಟುಂಬಕ್ಕೆ 10 ವರ್ಷಗಳ ಕಾಲ ಭದ್ರತೆ ನೀಡುವಂತೆ ನಿಯಮ ರೂಪಿಸಲಾಗಿದೆ.