Tag: ಪ್ರಿಯಾ ಪ್ರಕಾಶ್ ವಾರಿಯಾರ್

  • ಕಣ್ಸನ್ನೆ ಆಯ್ತು, ಈಗ ಪ್ರಿಯಾ ಮೇಕಪ್ ವಿಡಿಯೋ ವೈರಲ್

    ಕಣ್ಸನ್ನೆ ಆಯ್ತು, ಈಗ ಪ್ರಿಯಾ ಮೇಕಪ್ ವಿಡಿಯೋ ವೈರಲ್

    ಬೆಂಗಳೂರು: ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ಮೇಕಪ್ ಮಾಡಿಕೊಳ್ಳುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಗುರುವಾರ ಈ ವಿಡಿಯೋವನ್ನು ಪ್ರಿಯಾ ಪ್ರಕಾಶ್ ವಾರಿಯರ್ ಅಪ್ಲೋಡ್ ಮಾಡಿಕೊಂಡಿದ್ದಾರೆ. `ಒರು ಅಡಾರ್ ಲವ್’ ಸಿನಿಮಾದ ಶೂಟಿಂಗ್ ಮೇಕಪ್ ವಿಡಿಯೋ ಎಂದು ಪ್ರಿಯಾ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನ್ಯಾಷನಲ್ ಕ್ರಶ್ ಪ್ರಿಯಾ ಪ್ರಕಾಶ್‍ಗೆ ಸೆಡ್ಡು ಹೊಡೆಯಲು ಇಂಟರ್ ನ್ಯಾಷನಲ್ ಕ್ರಶ್‍ರನ್ನು ಕರೆತರಲಿದ್ದಾರೆ ಪ್ರಥಮ್!

    ಒಂದು ಹಾಡಿನ ವಿಡಿಯೋ ಮೂಲಕ ನ್ಯಾಷನಲ್ ಸೆನ್ಸೇಷನ್ ಸೃಷ್ಟಿಸಿರೋ ಮಲೆಯಾಳಂ ನಟಿ ಪ್ರಿಯಾ ಪ್ರಕಾಶ್ ಸಾಮಾಜಿಕ ಜಾಲತಾಣದಲ್ಲಿ ದಾಖಲೆ ಬರೆದಿದ್ದಾರೆ. ಇನ್ ಸ್ಟಾಗ್ರಾಮ್ ನಲ್ಲಿ ವಿಶ್ವ ಸುಂದರಿ ಮಾನುಷಿ ಚಿಲ್ಲರ್ ಅವರನ್ನು ಹಿಂದಿಕ್ಕಿ ಮುಂದೆ ಸಾಗಿದ್ದಾರೆ. ಪ್ರಿಯಾ ಅವರ ಇನ್ ಸ್ಟಾಗ್ರಾಮ್ ಖಾತೆಯನ್ನ ಕೇವಲ ಒಂದೇ ದಿನದಲ್ಲಿ ಸುಮಾರು 6 ಲಕ್ಷಕ್ಕೂ ಹೆಚ್ಚಿನ ಅಭಿಮಾನಿಗಳು ಫಾಲೋ ಮಾಡಿದ್ದರು. ಈ ಮೂಲಕ ಒಂದೇ ದಿನದಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಫಾಲೋ ಆಗಿರುವ ವಿಶ್ವದ ಮೂರನೇ ಸೆಲೆಬ್ರಿಟಿ ಎನ್ನುವ ಹೆಗ್ಗಳಿಕೆಗೆ ಪ್ರಿಯಾ ಪಾತ್ರರಾಗಿದ್ದರು. ಇದನ್ನೂ ಓದಿ: ಕನ್ನಡಕ್ಕೆ ಬರ್ತಾಳಂತೆ ಕಣ್ಸನ್ನೆ ಬೆಡಗಿ ಪ್ರಿಯಾ ವಾರಿಯರ್!

    https://www.instagram.com/p/BhvTZwXDoX0/

  • ಇನ್ ಸ್ಟಾಗ್ರಾಮ್ ನಲ್ಲಿ ಹೊಸ ದಾಖಲೆ ಬರೆದ ಪ್ರಿಯಾ ವಾರಿಯರ್!

    ಇನ್ ಸ್ಟಾಗ್ರಾಮ್ ನಲ್ಲಿ ಹೊಸ ದಾಖಲೆ ಬರೆದ ಪ್ರಿಯಾ ವಾರಿಯರ್!

    ಮುಂಬೈ: ಒಂದು ಹಾಡಿನ ವಿಡಿಯೋ ಮೂಲಕ ನ್ಯಾಷನಲ್ ಸೆನ್ಸೇಷನ್ ಸೃಷ್ಟಿಸಿದ್ದ ಮಲೆಯಾಳಂ ನಟಿ ಪ್ರಿಯಾ ಪ್ರಕಾಶ್ ಈಗ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ದಾಖಲೆಗೆ ಪಾತ್ರರಾಗಿದ್ದಾರೆ.

    ಕೇವಲ ಒಂದು ದಿನದಲ್ಲಿ ಪ್ರಿಯಾ ಅವರ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಸುಮಾರು 6 ಲಕ್ಷ ಹೆಚ್ಚಿನ ಅಭಿಮಾನಿಗಳು ಫಾಲೋ ಮಾಡಿದ್ದಾರೆ. ಈ ಮೂಲಕ ಒಂದೇ ದಿನದಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಫಾಲೋ ಆಗಿರುವ ವಿಶ್ವದ ಮೂರನೇ ಸೆಲೆಬ್ರಿಟಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    18 ವರ್ಷದ ಪ್ರಿಯಾ ಪ್ರಕಾಶ್ ವಾರಿಯಾರ್ ಈಗ ಹಾಲಿವುಡ್ ನ ಸ್ಟಾರ್ ಗಳಾದ ಅಮೆರಿಕ ಮಾಡೆಲ್, ಟಿವಿ ನಿರೂಪಕಿ ಕೈಲೀ ಜೆನ್ನರ್ ಮತ್ತು ಪ್ರಸಿದ್ಧ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಅವರ ಸಾಲಿನಲ್ಲಿ ಬಂದು ನಿಂತಿದ್ದಾರೆ. ಈ ಹಿಂದೆ ಒಂದೇ ದಿನದಲ್ಲಿ ಕೈಲೀ ಜೆನ್ನರ್ 8 ಲಕ್ಷ, ರೊನಾಲ್ಡೊ ಅವರನ್ನು 6.50 ಲಕ್ಷ ಮಂದಿ ಫಾಲೋ ಮಾಡಿದ್ದರು.

    ಪ್ರಸ್ತುತ 17 ಲಕ್ಷ ಇನ್ ಸ್ಟಾಗ್ರಾಮ್ ಫಾಲೋವರ್ಸ್ ಗಳನ್ನು ಹೊಂದುವ ಮೂಲಕ ಪ್ರಿಯಾ ಅವರು ಸೆನ್ಸೇಷನ್ ಸೃಷ್ಟಿಸಿದ್ದಾರೆ. ಪ್ರಸ್ತುತ ಅವರ ಇನ್ ಸ್ಟಾಗ್ರಾಮ್ ಖಾತೆಗೆ `ಬ್ಲೂ ಟೀಕ್ ಮಾರ್ಕ್’ ಲಭಿಸಿದೆ.

    ಕೇವಲ ಒಂದು ದಿನದಲ್ಲಿ `ಒರು ಆಡಾರ್ ಲವ್’ ಚಿತ್ರದ `ಮಾಣಿಕ್ಯಾ ಮಾಲಾರಾಯಾ ಪೂವಿ’ ಹಾಡಿನ ಮೂಲಕ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಚಿತ್ರದ ಈ ಹಾಡನ್ನು ವಿನೀತ್ ಶ್ರೀನಿವಾಸನ್ ಅವರು ಹಾಡಿದ್ದು, ಶಾನ್ ರಹಮಾನ್ ಗೀತೆ ಸಂಯೋಜನೆ ಮಾಡಿದ್ದಾರೆ.

    ಚಿತ್ರತಂಡ 1.32 ಸೆಕೆಂಡ್ ನ ಹಾಡಿನ ವಿಡಿಯೋ ಬಿಡುಗಡೆ ಮಾಡಿದ್ದು, ಪ್ರಿಯಾ ಅವರ ಕಣ್ಣಿನ ನೋಟ ಎಂಥವರನ್ನು ಕ್ಷಣಕಾಲ ಮಗ್ನಗೊಳಿಸುವಂತೆ ಮಾಡುತ್ತದೆ. ಚಿತ್ರದಲ್ಲಿ ಈ ಹಾಡನ್ನು ತನ್ನ ಹಳೆಯ ಪ್ರೀತಿಯನ್ನು ನೆನಪು ಮಾಡಿಕೊಳ್ಳುವ ಸನ್ನಿವೇಶದಲ್ಲಿ ಮೂಡಿಬಂದಿದೆ. ಹೈಸ್ಕೂಲ್ ನಲ್ಲಿ ಉಂಟಾದ ಮೊದಲ ಲವ್ ಕುರಿತಾಗಿ ಮುಗ್ಧವಾಗಿ ಹಾರನ್ನು ಚಿತ್ರೀಕರಿಸಲಾಗಿದೆ. ಚಿತ್ರದ ಹಾಡಿಗೆ ಸಿಕ್ಕ ಪ್ರತಿಕ್ರಿಯೇ ಕಂಡ ಪ್ರಿಯಾ ಚಿತ್ರದ ನಿರ್ದೇಶಕರು, ಚಿತ್ರ ತಂಡ ಮತ್ತು ಅಭಿಮಾನಿಗಳಿಗೆ ಟ್ವೀಟ್ ಮಾಡಿ ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ : ಜಸ್ಟ್ 1 ವಿಡಿಯೋದಲ್ಲೇ ಇಂಟರ್ ನ್ಯಾಷನಲ್ ಸೆನ್ಸೇಷನ್! – ಕಣ್ಣೋಟದಿಂದಲೇ ಹುಡುಗರ ಮನಗೆದ್ದ ನಟಿ!

    https://twitter.com/ppriyavarrier/status/962751427394248705

    https://twitter.com/ppriyavarrier/status/963256171703382017

    https://www.instagram.com/p/Be-0hR9jBqT/?utm_source=ig_embed

  • ಜಸ್ಟ್ 1 ವಿಡಿಯೋದಲ್ಲೇ ಇಂಟರ್ ನ್ಯಾಷನಲ್ ಸೆನ್ಸೇಷನ್! – ಕಣ್ಣೋಟದಿಂದಲೇ ಹುಡುಗರ ಮನಗೆದ್ದ ನಟಿ!

    ಜಸ್ಟ್ 1 ವಿಡಿಯೋದಲ್ಲೇ ಇಂಟರ್ ನ್ಯಾಷನಲ್ ಸೆನ್ಸೇಷನ್! – ಕಣ್ಣೋಟದಿಂದಲೇ ಹುಡುಗರ ಮನಗೆದ್ದ ನಟಿ!

    ಹೈದರಾಬಾದ್: ಫೆ.14ರ ಪ್ರೇಮಿಗಳ ದಿನಚಾರಣೆ ವಿಶೇಷವಾಗಿ ಬಿಡುಗಡೆಯಾಗಿರುವ ಮಲೆಯಾಳಂ ಹಾಡೊಂದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್ ಆಗಿದೆ. ಈಗಾಗಲೇ 40 ಲಕ್ಷಕ್ಕೂ ಹೆಚ್ಚು ವೀಕ್ಷಣೆಯಾಗುವ ಮೂಲಕ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ವಿಡಿಯೋ ಆಗಿದೆ.

    ಪ್ರೇಮಿಗಳ ದಿನಾಚರಣೆಗೆ ಹಲವರು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಲು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ಇದೇ ವೇಳೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮಲೆಯಾಳಂ ಹಾಡೊಂದು ಬಿಡುಗಡೆಯಾಗಿದ್ದು ಸಖತ್ ಸೌಂಡ್ ಮಾಡಿದೆ. `ಒರು ಆಡಾರ್ ಲವ್’ ಹೆಸರಿನ ಸಿನಿಮಾದ `ಮಾಣಿಕ್ಯಾ ಮಾಲಾರಾಯಾ ಪೂವಿ’ ಹಾಡಿನಲ್ಲಿ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ಣುಗಳು ಸಿನಿಪ್ರಿಯರನ್ನು ಮೋಡಿ ಮಾಡಿದೆ.

    ಹಾಡಿನಲ್ಲಿನ ಆಕೆಯ ಕಣ್ಣಿನ ನೋಟ ಎಂಥವರನ್ನು ಕ್ಷಣಕಾಲ ಮಗ್ನಗೊಳಿಸುವಂತೆ ಮಾಡುತ್ತಿದೆ. ಪ್ರಸ್ತುತ ಈ ಹಾಡಿನ ತುಣುಕನ್ನು ಪ್ರತಿ ಹುಡುಗರು ಸಾಮಾಜಿಕ ಜಾಲತಾಣಗಳ ಸ್ಟೇಟಸ್ ಆಗಿ ಹಾಕುತ್ತಿದ್ದಾರೆ.

    ಅಂದಹಾಗೇ ನಟಿ ಪ್ರಿಯಾ ಪ್ರಕಾಶ್ ಕೇರಳದ ತ್ರಿಶ್ಯೂರ್ ಮೂಲದವರು. ಪ್ರಸ್ತುತ ಅಲ್ಲಿನ ಸ್ಥಳೀಯ ಕಾಲೇಜಿನಲ್ಲಿ ಬಿಕಾಂ ಪದವಿ ಮಾಡುತ್ತಿದ್ದಾರೆ. ಸಿನಿಮಾ ಆಡಿಷನ್ ವೇಳೆ ಇವರಿಗೆ ಸಣ್ಣ ಪಾತ್ರವನ್ನು ನೀಡಲಾಗಿದ್ದು, ಆದರೆ ಇದೀಗ ಈ ಪಾತ್ರದ ಮೂಲಕವೇ ಎಲ್ಲರ ಗಮನಸೆಳೆದಿದ್ದಾರೆ. ಚಿತ್ರದ ಹಾಡು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಯಾಗುತ್ತಿದಂತೆ ಮಲಯಾಳಂ ಮಾತ್ರವಲ್ಲದೇ ಟಾಲಿವುಡ್, ಬಾಲಿವುಡ್ ನಲ್ಲೂ ಹೆಚ್ಚು ವೈರಲ್ ಆಗಿದೆ. ಇನ್ನು ಈ ಚಿತ್ರ ಏಪ್ರಿಲ್ ನಲ್ಲಿ ತೆರೆ ಕಾಣಲಿದೆ ಎಂದು ಚಿತ್ರ ತಂಡ ತಿಳಿಸಿದೆ.

    ಸಾಮಾಜಿಕಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದಂತೆ ಚಿತ್ರತಂಡ ಹರ್ಷ ವ್ಯಕ್ತಪಡಿಸಿದೆ. ಈ ಕುರಿತು ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿರುವ ನಟಿ ಪ್ರಿಯಾ ತಮ್ಮ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಕೇವಲ ಒಂದು ಚಿತ್ರದ ಹಾಡಿನ ಮೂಲಕ ಪ್ರಿಯಾ ಆಪಾರ ಅಭಿಮಾನಿ ಬಳಗವನ್ನು ಪಡೆದಿದ್ದು, ಇವರ ಇನ್ ಸ್ಟಾಗ್ರಾಮ್ ಖಾತೆಗೆ 1.87 ಲಕ್ಷ ಜನರ ಫಾಲೋ ಮಾಡುತ್ತಿದ್ದಾರೆ. ಅಭಿಮಾನಿಗಳ ಪ್ರೀತಿ ಹೆಚ್ಚು ಸಂತೋಷ ಉಂಟುಮಾಡಿದೆ ಎಂದು ಪ್ರಿಯಾ ತಿಳಿಸಿದ್ದಾರೆ.

    ನಮ್ಮ ಸಿನಿಮಾ ಏಪ್ರಿಲ್ ನಲ್ಲಿ ರಿಲೀಸ್ ಆಗುತ್ತಿದೆ. ಎಲ್ಲರೂ ಸಿನಿಮಾ ನೋಡಿ ಇದೇ ರೀತಿ ಸಪೋರ್ಟ್ ಮಾಡಿ. ಶುರುವಿನಿಂದ ನನಗೆ ನಟನೆ ಎಂದರೆ ಇಷ್ಟವಿತ್ತು. ಶಾಲೆಯಲ್ಲೂ ಡ್ಯಾನ್ಸ್, ಡ್ರಾಮಾ ಮಾಡುತ್ತಿದ್ದೆ. ಹಲವು ಶಾರ್ಟ್ ಫಿಲ್ಮ್ ಗಳನ್ನು ಮಾಡಿದ್ದೇನೆ ಎಂದು ತಿಳಿದ್ದಾರೆ.

    https://www.instagram.com/p/Be-0hR9jBqT/?utm_source=ig_embed

    https://twitter.com/priyapvarrier/status/962654259366916096?