Tag: ಪ್ರೇಮವಿವಾಹ

  • ಹಿಂದೂ ಯುವಕ, ಮುಸ್ಲಿಂ ಯುವತಿಯ ಪ್ರೇಮವಿವಾಹ – ರಕ್ಷಣೆ ಕೋರಿ ಪೊಲೀಸ್ ಮೊರೆ ಹೋದ ನವಜೋಡಿ

    ಹಿಂದೂ ಯುವಕ, ಮುಸ್ಲಿಂ ಯುವತಿಯ ಪ್ರೇಮವಿವಾಹ – ರಕ್ಷಣೆ ಕೋರಿ ಪೊಲೀಸ್ ಮೊರೆ ಹೋದ ನವಜೋಡಿ

    ಚಿಕ್ಕಬಳ್ಳಾಪುರ: ಪ್ರೀತಿಗೆ ಜಾತಿ, ಧರ್ಮದ ಗಡಿ ಇಲ್ಲ ಎಂಬಂತೆಯೇ ಇಲ್ಲೊಂದು ಜೋಡಿ ಜಾತಿ ಧರ್ಮಗಳ ಎಲ್ಲೆ ಮೀರಿ ಪ್ರೇಮ ವಿವಾಹವಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ(Chikkaballapura) ನಡೆದಿದೆ.

    ಮುಸ್ಲಿಂ(Muslim) ಯುವತಿಯು ಹಿಂದೂ(Hindu) ಯುವಕನನ್ನು ಪ್ರೀತಿಸಿ ಪ್ರೇಮವಿವಾಹವಾಗಿದ್ದು(Love Marriage), ಈ ವಿವಾಹಕ್ಕೆ ಸಹಜವಾಗಿಯೇ ಪೋಷಕರ ವಿರೋಧ ವ್ಯಕ್ತವಾಗಿದೆ. ಇದೀಗ ರಕ್ಷಣೆ ಕೋರಿ ನವಜೋಡಿಯು ಪೊಲೀಸರ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನವ್ರಿಗೆ ಪಾಕ್‌ ಫ್ರೀ ವೀಸಾ ಕೊಡುತ್ತೆ, ಮಂಜುನಾಥ್ ನೋಡ್ಕೊಂಡು ಬರಲಿ: ಯತ್ನಾಳ್ ಕಿಡಿ

    ಯಾಪಲಹಳ್ಳಿಯ(Yapalahalli) ನಿವಾಸಿ ಹರೀಶ್ ಬಾಬು ಹಾಗೂ ಗುಡಿಬಂಡೆ ತಾಲೂಕಿನ ಸೋಮೇಶ್ವರ(Someshwara) ಗ್ರಾಮದ ಯುವತಿ ನಜ್ಮಾ ಪ್ರೀತಿಸಿ ಮದುವೆಯಾಗಿದ್ದಾರೆ. ಇಬ್ಬರದ್ದು ಬೇರೆ ಬೇರೆ ತಾಲೂಕಾದರೂ ಚಿಕ್ಕಬಳ್ಳಾಪುರ ನಗರದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುವಾಗ ಪರಿಚಯ ಆಗಿದೆ. ಪರಿಚಯ ಸ್ನೇಹಕ್ಕೆ ತಿರುಗಿ, ಸ್ನೇಹ ಪ್ರೀತಿಯಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಭಯೋತ್ಪಾದನಾ ಕೇಂದ್ರಗಳಿಗೆ ನೀರು ಗೊಬ್ಬರ ಹಾಕಿ ಪೋಷಿಸ್ತಿದೆ: ಸಿಟಿ ರವಿ

    ಇಬ್ಬರು ಪ್ರೀತಿಯ ವಿಚಾರವನ್ನು ಮನೆಯವರಿಗೆ ತಿಳಿಸಿದ್ದರು. ಇಬ್ಬರದ್ದೂ ಬೇರೆ ಬೇರೆ ಧರ್ಮವಾದ ಕಾರಣ ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರೀತಿ ವಿಚಾರ ತಿಳಿಯುತ್ತಿದ್ದಂತೆ ಯುವತಿಯನ್ನ ಕೆಲಸಕ್ಕೆ ಕಳುಹಿಸದೇ ಮನೆಯಲ್ಲೇ ಉಳಿಸಿಕೊಂಡಿದ್ದಾರೆ. ವಿರೋಧದ ನಡುವೆಯೇ ಮನೆಯಿಂದ ಹೊರಬಂದ ನಜ್ಮಾ, ಹರೀಶ್ ಬಾಬು ಜೊತೆ ವಿವಾಹವಾಗಿದ್ದಾರೆ. ಇದನ್ನೂ ಓದಿ: ಚಿನ್ನಸ್ವಾಮಿ ಮೈದಾನದಲ್ಲಿ ಮಕ್ಕಳಂತೆ ಈಜಾಡಿದ ಡೇವಿಡ್‌!

    ಕಳೆದ 4 ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಇಬ್ಬರಿಗೂ ವ್ಯಕ್ತಿತ್ವ ಇಷ್ಟವಾಗಿ ಮದುವೆ ಆಗಲು ತೀರ್ಮಾನಿಸಿದ್ದರು. ಮದುವೆಗೆ ಮನೆಯವರು ಒಪ್ಪದ ಕಾರಣ ಇಬ್ಬರು ಪ್ರೇಮವಿವಾಹವಾಗಿದ್ದರು. ಈ ಮದುವೆಗೆ ಯುವತಿ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ.

    ವಿರೋಧದ ಬೆನ್ನಲ್ಲೇ ನವಜೋಡಿ ರಕ್ಷಣೆ ಕೋರಿ ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸಿ ಮೊರೆ ಹೋಗಿದ್ದಾರೆ. ಅಂತರ್ ಧರ್ಮ ಪ್ರೇಮವಿವಾಹದ ಸೂಕ್ಷ್ಮತೆಯನ್ನ ಅರಿತ ಎಸ್ಪಿ ಕುಶಲ್ ಚೌಕ್ಸಿ ಇಬ್ಬರನ್ನ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಕಳುಹಿಸಿದ್ದು, ಯುವಕ ಯುವತಿಯ ತಂದೆ ತಾಯಿಯನ್ನ ಕರೆಸಿ ವಿಚಾರ ಮಾಡುವಂತೆ ತಿಳಿಸಿದ್ದರು. ಇದನ್ನೂ ಓದಿ: ಮನೆಗಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳ ಅರೆಸ್ಟ್ – ಚಿನ್ನಾಭರಣ ಸೇರಿ 7.89 ಲಕ್ಷ ಮೌಲ್ಯದ ವಸ್ತು ಜಪ್ತಿ

    ಠಾಣೆಗೆ ಬಂದ ಯುವತಿ ಪೋಷಕರು ಹಾಗೂ ಸಂಬಂಧಿಕರು ಯುವಕನನ್ನ ಬಿಟ್ಟು ಬರುವಂತೆ ಬೇಡಿಕೊಂಡಿದ್ದರು. ಇದಕ್ಕೆ ಯುವತಿ ಒಪ್ಪಿರಲಿಲ್ಲ. ಹೀಗಾಗಿ ಎರಡು ಕಡೆಯವರನ್ನ ಕರೆಸಿ ಪೊಲೀಸರು ವಿಚಾರಣೆ ಮಾಡಿದ್ದು, ಯುವತಿ ಪೋಷಕರಿಂದ ಮುಚ್ಚಳಿಕೆ ಬರೆಸಿಕೊಂಡು ನವಜೋಡಿಗೆ ಯಾವುದೇ ತೊಂದರೆ ಮಾಡದಂತೆ ತಿಳಿ ಹೇಳಿ ಕಳುಹಿಸಿದ್ದಾರೆ.

  • ಓಡಿಹೋಗಿ ಮದುವೆಯಾದ ಪ್ರೇಮಿಗಳು – ಯುವಕನ ಪೋಷಕರ ಮೇಲೆ ಯುವತಿ ಕಡೆಯವರಿಂದ ಹಲ್ಲೆ

    ಓಡಿಹೋಗಿ ಮದುವೆಯಾದ ಪ್ರೇಮಿಗಳು – ಯುವಕನ ಪೋಷಕರ ಮೇಲೆ ಯುವತಿ ಕಡೆಯವರಿಂದ ಹಲ್ಲೆ

    – ಬೆಳಗಾವಿ ಪ್ರಕರಣ ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ಅಮಾನವೀಯ ಘಟನೆ

    ಚಿಕ್ಕಬಳ್ಳಾಪುರ: ಬೆಳಗಾವಿಯಲ್ಲಿ (Belagavi) ಪ್ರೇಮ ವಿವಾಹ (Love Marriage) ಪ್ರಕರಣದಲ್ಲಿ ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣ ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲೂ (Chikkaballapura) ಸಹ ಅಂತಹದ್ದೇ ಮತ್ತೊಂದು ಘಟನೆ ನಡೆದಿದೆ.

    ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ದಪ್ಪರ್ತಿ ಗ್ರಾಮದ ಮನೋಜ್ ಹಾಗೂ ಅಂಕಿತಾ ಇಬ್ಬರು ಪರಸ್ಪರ ಪ್ರೀತಿಸಿ ಮನೆ ಬಿಟ್ಟು ಓಡಿ ಹೋಗಿ ಭಾನುವಾರ ಮದುವೆಯಾಗಿದ್ದಾರೆ. ಇದರಿಂದ ರೊಚ್ಚಿಗೆದ್ದ ಅಂಕಿತಾ ಕುಟುಂಬಸ್ಥರು ಇಂದು ಯುವಕನ ತಂದೆ-ತಾಯಿ ಮನೆ ಮೇಲೆ ದಾಳಿ ನಡೆಸಿ ತಾಯಿ ವೆಂಕಟಲಕ್ಷ್ಮಮ್ಮ ಹಾಗೂ ತಂದೆ ಗಂಗರಾಜು ಮೇಲೆ ನಡುರಸ್ತೆಯಲ್ಲೇ ಮನಸ್ಸೋಇಚ್ಛೆ ಹಲ್ಲೆ (Assault) ನಡೆಸಿದ್ದಾರೆ. ಇದನ್ನೂ ಓದಿ: ಕೆಸಿ ಜನರಲ್ ಆಸ್ಪತ್ರೆ ಎಡವಟ್ಟಿನಿಂದ ಮಗು ಸಾವು- ಮಗು ಸತ್ತೋದ ಮೇಲೆ ಬಿಲ್ ಕೇಳಿದ ಆರೋಪ

    ಮಧ್ಯಾಹ್ನದ ವೇಳೆಗೆ 20 ಮಂದಿ ಅಂಕಿತಾ ಪೋಷಕರ ಕಡೆಯವರು ಯುವಕನ ಮನೆ ಮೇಲೆ ದಾಳಿ ಮಾಡಿ ಮನೆಯಲ್ಲಿದ್ದ ವೆಂಕಟಲಕ್ಷ್ಮಮ್ಮ ಹಾಗೂ ಗಂಗರಾಜುವಿನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಅಂಬುಲೆನ್ಸ್ ಸಹ ಗ್ರಾಮದೊಳಗೆ ಬರಲು ಬಿಡದೆ ಅಡ್ಡಿಪಡಿಸಿದ್ದಾರೆ ಎನ್ನಲಾಗಿದೆ. ಪೊಲೀಸರು ಬಂದ ನಂತರ ಅಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕ-ಯುವತಿ ಪರಾರಿಯಾಗಲು ಯುವಕನ ಪೋಷಕರು ಸಹ ಕಾರಣ ಎಂದು ಈ ಕೃತ್ಯ ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.  ಇದನ್ನೂ ಓದಿ: ಬೆಂಗಳೂರಿನಲ್ಲಿ ಹಿಟ್&ರನ್‌ಗೆ ವೃದ್ಧೆ ಬಲಿ

  • ಕ್ಷುಲ್ಲಕ ಕಾರಣಕ್ಕೆ ಕುಟುಂಬಗಳ ಮಧ್ಯೆ ಮಾರಾಮಾರಿ- ಮೂವರಿಗೆ ಗಾಯ

    ಕ್ಷುಲ್ಲಕ ಕಾರಣಕ್ಕೆ ಕುಟುಂಬಗಳ ಮಧ್ಯೆ ಮಾರಾಮಾರಿ- ಮೂವರಿಗೆ ಗಾಯ

    ಗದಗ: ಕ್ಷುಲ್ಲಕ ಕಾರಣಕ್ಕೆ 2 ಕುಟುಂಬಗಳ ಮಧ್ಯೆ ಮಾರಾಮಾರಿ ಗಲಾಟೆ ನಡೆದಿದ್ದು, ಈ ಹಿನ್ನೆಲೆ ಮೂವರಿಗೆ ಗಾಯವಾಗಿರುವ ಘಟನೆ ತಾಲೂಕಿನ ಸೊರಟೂರು ಗ್ರಾಮದಲ್ಲಿ ನಡೆದಿದೆ.

    ಹಳೆ ವೈಷಮ್ಯದಿಂದ ಕುಡಿದ ಮತ್ತಿನಲ್ಲಿ ಅಡಿವೆಪ್ಪ ಕಣ್ಣೂರು ಹಾಗೂ ಕೃಷ್ಣಾ ಸುಬ್ಬಣ್ಣವರ್ ಕುಟುಂಬದ ಮಧ್ಯೆ ತಡರಾತ್ರಿ ಜಗಳವಾಗಿದೆ. ಈ ವೇಳೆ ಇಬ್ಬರು ಅಶ್ಲೀಲ ಪದಗಳನ್ನು ಬಳಸಿದ್ದಾರೆ. ಕೈಕೈ ಮಿಲಾಯಿಸಿದ್ದು, ಎರಡು ಕುಟುಂಬದ ಮೂವರಿಗೆ ಗಾಯಗಳಾಗಿವೆ. ಪ್ರಸ್ತುತ ಗಾಯಾಳುಗಳು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಸಾಲಬಾಧೆ ತಾಳದೆ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಘಟನೆಗೆ ಕಾರಣವೇನು?
    ಸುಬ್ಬಣ್ಣವರ್ ಕುಟುಂಬದ ಯುವತಿಯನ್ನು, ಕಣ್ಣೂರು ಕುಟುಂಬದ ಯುವಕ ಪ್ರೀತಿಸಿ ಮದುವೆಯಾಗಿದ್ದಾರೆ. ಇದು ಅಂತರ್ಜಾತಿ ವಿವಾಹವಾದ್ದರಿಂದ ಎರಡು ಕುಟುಂಬದ ಮಧ್ಯೆ ಆಗಾಗ ಜಗಳ ನಡೆಯುತ್ತಲೇ ಇತ್ತು. ಆದರೆ ನಿನ್ನೆ ಕೃಷ್ಣಾ ಸುಬ್ಬಣ್ಣವರ್ ಕುಟುಂಬದ ಹೆಣ್ಣು ಮಕ್ಕಳನ್ನು ಅಡಿವೆಪ್ಪ ಕಣ್ಣೂರ್ ನಿಂದಿಸಿದ್ದರು ಎಂದು ಆರೋಪ ಮಾಡಲಾಗಿದೆ. ಈ ಹಿನ್ನೆಲೆ ಪ್ರಶ್ನೆ ಮಾಡಿದಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಇದನ್ನೂ ಓದಿ: ರಾಜ್ಯದ ಏಕೈಕ ಸ್ವರ್ಣ ಗೌರಿ ದೇವಾಲಯದಲ್ಲಿಲ್ಲ ಪೂಜೆ, ಪುನಸ್ಕಾರ

    ಗದಗನ ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.