ನೆಲಮಂಗಲ: ಪ್ರೇಯಸಿಯೇ ತನ್ನ ಪ್ರಿಯಕರನಿಗೆ ಸ್ಕೆಚ್ ಹಾಕಿ ಮರ್ಡರ್ ಮಾಡಿದ್ದ ಪ್ರಕರಣವನ್ನು ಮಾದನಾಯಕನಹಳ್ಳಿ ಪೊಲೀಸರು ಭೇದಿಸಿದ್ದಾರೆ.
ಸೆಪ್ಟೆಂಬರ್ 5 ರಂದು ಮಾದಾವರದ ನವಿಲೇ ಲೇಔಟ್‍ನ ನಿರ್ಜನ ಪ್ರದೇಶದಲ್ಲಿ ಕಿಡಿಗೇಡಿಗಳು ಕಿರಣ್ ಕುಮಾರ್ ಕೊಲೆ ಮಾಡಲು ಪ್ರಯತ್ನಿಸಿದ್ದರು. ಕೊನೆಗೆ ಬೆಂಗಳೂರಿನ ಪ್ರಕ್ರಿಯ ಆಸ್ಪತ್ರೆಯಲ್ಲಿ ಕಿರಣ್ ಕುಮಾರ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು. ಪ್ರಕರಣವನ್ನು ಕೊಲೆ ಎಂದು ದಾಖಲು ಮಾಡಿಕೊಂಡ ಮಾದನಾಯಕನಹಳ್ಳಿ ಪೊಲೀಸರು ತನಿಖೆ ಕೈಗೊಂಡು, 4 ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ವಿಚ್ಛೇದನ ಜೀವನಾಂಶ ಹಣ ಹೊಂದಿಸಲಾಗಿಲ್ಲ ಅಂತ ಪತಿ ಆತ್ಮಹತ್ಯೆ

5 ವರ್ಷ ಸಂಬಂಧ ಹೊಂದಿದ್ದ ಕಿರಣ್ ಕುಮಾರ್‌ನನ್ನು ಮುಗಿಸಲು ಶ್ವೇತಾ ಡೇವಿಡ್ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಳು. ನಂತರ ಕಿರಣ್ ಮುಗಿಸಲು ಶ್ರೀಕಾಂತ್ ಮತ್ತು ದಿನೇಶ್ ಜೊತೆ ಸೇರಿ 1 ಲಕ್ಷ ರೂಪಾಯಿಗೆ ಡೀಲ್ ಮಾತನಾಡಿಕೊಂಡ ಡೇವಿಡ್ 10 ಸಾವಿರ ಹಣ ನೀಡಿ ತನ್ನ ಬೈಕ್ ಕೊಟ್ಟು ಕಿರಣ್ ಮೇಲೆ ಅಟ್ಯಾಕ್ ಮಾಡಿಸಿದ್ದ. ಈ ಕೊಲೆಗೆ ಕಿರಣ್ ಕುಮಾರ್ ಚಲನವಲನದ ಬಗ್ಗೆ ಸಂಪೂರ್ಣ ಅರಿತಿದ್ದ ಶ್ವೇತಾ ಎಲ್ಲಾ ಮಾಹಿತಿಗಳನ್ನು ನೀಡಿದ್ದಳು.

ಈ ಪ್ರಕರಣ ದಾಖಲಿಸಿಕೊಂಡ ಮಾದನಾಯಕನಹಳ್ಳಿ ಇನ್ಸ್‌ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ತಂಡ ರಚಿಸಿ ಸಿಸಿಟಿವಿಯಲ್ಲಿ ಬೈಕ್ ಚಲನವಲನ ಆಧರಿಸಿ ಶ್ವೇತಾಳನ್ನು ವಿಚಾರಣೆಗೆ ಒಳಪಡಿಸಿದರು ಮತ್ತು ಕೃತ್ಯಕ್ಕೆ ಬಳಸಿದ್ದ ಬೈಕ್, ಚಾಕು, ಡಾಂಗಲ್ ವಶಪಡಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಎಸ್‍ಪಿ ಕೋನವಂಶಿ ಕೃಷ್ಣ ತಿಳಿಸಿದ್ದಾರೆ. ಇದನ್ನೂ ಓದಿ: ಕೊರೊನಾಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಕುಟುಂಬಕ್ಕೂ ಪರಿಹಾರ -ಕೇಂದ್ರ ಸರ್ಕಾರ






























