Tag: ಪ್ಲಾಸ್ಟಿಕ್

  • ನೀರಿನ ಬಾಟಲ್‌ ಸೇರಿದಂತೆ ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ಬ್ಯಾನ್‌

    ನೀರಿನ ಬಾಟಲ್‌ ಸೇರಿದಂತೆ ಮುಜರಾಯಿ ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ಬ್ಯಾನ್‌

    – ಆ.15 ರಿಂದ ನಿಷೇಧ ಜಾರಿ
    – 2 ತಿಂಗಳ ಒಳಗಡೆ ಪ್ಲಾಸ್ಟಿಕ್‌ ಪದಾರ್ಥಗಳನ್ನು ಖಾಲಿ ಮಾಡಬೇಕು

    ಬೆಂಗಳೂರು: ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ (Muzrai Department) ನೀರಿನ ಬಾಟಲ್‌ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್‌ (Plastic) ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ತಿಳಿಸಿದ್ದಾರೆ.

    ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಗಸ್ಟ್ 15 ರಿಂದ ಪ್ಲಾಸ್ಟಿಕ್‌ ಮುಕ್ತ ದೇವಾಲಯ (Plastic Free Temple) ಪ್ರಾರಂಭ ಮಾಡುತ್ತಿದ್ದೇವೆ. ದೇವಾಲಯಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್‌ ಬಳಕೆ ಮಾಡಬಾರದು ಎಂದು ಸೂಚಿಸಿದರು.

    ಈ ಆದೇಶ ಜಾರಿಗೆ 2 ತಿಂಗಳು ಸಮಯ ಕೊಡಲಾಗಿದ್ದು, ಈಗಾಗಲೇ ಪ್ಲಾಸ್ಟಿಕ್‌ ಪದಾರ್ಥಗಳು ತೆಗೆದುಕೊಂಡಿದ್ದರೆ ಅದನ್ನು ಬಳಕೆ ಮಾಡಬಹುದು. ಆಗಸ್ಟ್ 15 ರಿಂದ ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಅವಕಾಶ ಇರುವುದಿಲ್ಲ ಎಂದು ಹೇಳಿದರು.  ಇದನ್ನೂ ಓದಿ: ಜಾತ್ರೆಯಲ್ಲಿ ಲವ್‌… ಓಯೋ ರೂಮಲ್ಲಿ ಕೆಲಸ ಮುಗಿದ್ಮೇಲೆ ಆಂಟಿಯನ್ನ ಇರಿದು ಕೊಂದ ಟೆಕ್ಕಿ

    ಸಭೆಯ ಹೈಲೈಟ್ಸ್‌ ಏನು?
    ಮುಜರಾಯಿ ವ್ಯಾಪ್ತಿಯ ದೇವಾಲಯಗಳ ಮಾಹಿತಿಯನ್ನು 3 ತಿಂಗಳ ಒಳಗೆ ಕೊಡಬೇಕು. 3 ತಿಂಗಳ ಒಳಗೆ ಬಾಕಿ ಇರುವ 20 ಸಾವಿರ ಎಕರೆ ದೇವಾಲಯ ಜಮೀನು ಇಂಡೀಕರಣ ಆಗಬೇಕು.

    ಗ್ರಾಮಾಂತರ ಮತ್ತು ನಗರ ಭಾಗದಲ್ಲಿ ಇರುವ ಮುಜರಾಯಿ ದೇವಾಲಯಗಳ ಆಸ್ತಿಗಳನ್ನ ಪ್ರತ್ಯೇಕ ಸರ್ವೆ ಮಾಡಬೇಕು. ದೇವಸ್ಥಾನ ಹೆಸರಿನಲ್ಲಿ ಖಾತೆ, ಆಸ್ತಿ ಪತ್ರ ದಾಖಲೆಗಳು ಸರಿಯಾಗಿ ಇರದಿದ್ದರೆ ಎಲ್ಲಾ ದೇವಾಲಯದ ಜಾಗ 3 ತಿಂಗಳ ಒಳಗಡೆ ಸರ್ವೆ ಮಾಡಿ ನೋಟಿಫಿಕೇಶನ್ ಮಾಡಲು ಸೂಚನೆ. ಇದನ್ನೂ ಓದಿ: Indore Couple | ಹನಿಮೂನ್ ಮರ್ಡರ್: ‘ರಾಜಾ’ಗೆ ‘ರಾಜ್’ ಮುಹೂರ್ತ!

    ಅರ್ಚಕರಿಗೆ ತಸ್ತೀಕ್ ನೇರ ವರ್ಗಾವಣೆ(DBT) ಮೂಲಕ ನೀಡಲು ಕ್ರಮ. ಈಗ 25 ಸಾವಿರ ಅರ್ಚಕರ ಪೈಕಿ 14 ಸಾವಿರ ಅರ್ಚಕರು ಮಾಹಿತಿ ಕೊಟ್ಟಿದ್ದಾರೆ. ಉಳಿದವರು ಬೇಗ ಮಾಹಿತಿ ಕೊಟ್ಟರೆ ಅವರಿಗೂ DBT ಮೂಲಕ ತಸ್ತೀಕ್ ನೀಡಲು ಕ್ರಮ.

    31 ಜಿಲ್ಲೆಗಳಲ್ಲಿ ಧಾರ್ಮಿಕ ಪರಿಷತ್ ರಚನೆಗೆ ಕ್ರಮಕ್ಕೆ ಸೂಚನೆ ನೀಡಲಾಗಿದೆ. 8 ಜಿಲ್ಲೆಯಲ್ಲಿ ಮಾತ್ರ ಧಾರ್ಮಿಕ ಪರಿಷತ್ ರಚನೆಯಾಗಿದ್ದು ಉಳಿದ ಕಡೆ ಶೀಘ್ರವೇ ಮಾಡಬೇಕು.

    ಬೇರೆ ಬೇರೆ ರಾಜ್ಯದಲ್ಲಿ ಇರೋ ಮುಜರಾಯಿ ಇಲಾಖೆ ವಸತಿ ಭವನಗಳಲ್ಲಿ 3 ಸ್ಟಾರ್ ಸೌಲಭ್ಯ ಗಳನ್ನು ನೀಡಲು ನಿರ್ಧಾರ. ತಿರುಪತಿ, ತುಳಿಜಾಪುರ, ಪಂಡರಾಪುರ, ಸೇರಿ ಹಲವು ಕಡೆ ಭವನಗಳನ್ನು ನಿರ್ಮಾಣಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳುವುದು.

    ಬೇರೆ ರಾಜ್ಯದಲ್ಲಿ ಇರುವ ಭವನಗಳ ರೂಮ್‌ ಬುಕ್ಕಿಂಗ್‌ ಅನ್ನು ಆನ್‌ಲೈನ್‌ ಮೂಲಕ ಜಾರಿ ಮಾಡಲು ವ್ಯವಸ್ಥೆ ರೂಪಿಸಲು ಸೂಚನೆ.

    ಹೊಸ ಪ್ರಾಧಿಕಾರಗಳ ಸಮಗ್ರ ಯೋಜನೆಗೆ ಕ್ರಮವಹಿಸಲಾಗಿದೆ. ಹುಲಿಗೆಮ್ಮ, ಮಲೆ ಮಹದೇಶ್ವರ, ಘಾಟಿ ಸುಬ್ರಮಣ್ಯ, ರೇಣುಕಾ ಎಲ್ಲಮ್ಮ, ಚಾಮುಂಡೇಶ್ವರಿ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ಮಾಸ್ಟರ್ ಪ್ಲ್ಯಾನ್ ಮಾಡಲು ನಿರ್ಧಾರ.

    ಚಾಮುಂಡೇಶ್ವರಿ ಬೆಟ್ಟದಲ್ಲಿ ಒತ್ತುವರಿ ಆಗಿದ್ದ 11 ಎಕರೆ ಜಾಗವನ್ನು ತೆರವು ಮಾಡಲಾಗಿದೆ. ಉಳಿದ ಜಾಗ ತೆರವುಗೊಳಿಸಲು ಸೂಚನೆ.

  • ಕನಿಷ್ಠ ಬೆಲೆ ನೀಡಿ ನೀರಿನ ಬಾಟಲಿ ಹಿಂಪಡೆಯಲು ನಿಯಮ ರೂಪಿಸಿ: ಈಶ್ವರ ಖಂಡ್ರೆ

    ಕನಿಷ್ಠ ಬೆಲೆ ನೀಡಿ ನೀರಿನ ಬಾಟಲಿ ಹಿಂಪಡೆಯಲು ನಿಯಮ ರೂಪಿಸಿ: ಈಶ್ವರ ಖಂಡ್ರೆ

    ಬೆಂಗಳೂರು: ನೀರು ಕುಡಿದ ಬಳಿಕ ಪ್ಲಾಸ್ಟಿಕ್ ಬಾಟಲಿಗಳನ್ನು (Plastic Water Bottles) ಎಲ್ಲೆಂದರಲ್ಲಿ ಎಸೆಯುವುದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ (Eshwar Khandre), ನೀರಿನ ಬಾಟಲಿ ಮಾರುವ ಮಳಿಗೆಗಳು ಕಡ್ಡಾಯವಾಗಿ ಖಾಲಿ ನೀರಿನ ಬಾಟಲಿಗೆ ಕನಿಷ್ಠ ಬೆಲೆ ನೀಡಿ ಮರು ಖರೀದಿಸುವಂತೆ ನಿಯಮ ರೂಪಿಸಲು ಸೂಚನೆ ನೀಡಿದ್ದಾರೆ.

    ತತ್ಸಂಬಂಧ ನಿಯಮ ರೂಪಿಸಲು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಅವರು, ಬಾಟಲಿಗಳ ಮೂಲಕ ಕುಡಿಯುವ ನೀರನ್ನು ಮಾರಾಟ ಮಾಡುವ ಕಂಪನಿಗಳಿಗೆ ಆ ಪ್ಲಾಸ್ಟಿಕ್ ಬಾಟಲಿಯ ವೈಜ್ಞಾನಿಕ ವಿಲೇವಾರಿಯ ಜವಾಬ್ದಾರಿಯೂ ಇರುತ್ತದೆ. ಈ ಹಿನ್ನೆಲೆಯಲ್ಲಿ ಖಾಲಿ ಬಾಟಲಿಗಳನ್ನು ಕನಿಷ್ಠ ದರ ನೀಡಿ ಮರಳಿ ಖರೀದಿಸುವಂತೆ ನಿಯಮ ರೂಪಿಸಿದಲ್ಲಿ ಪ್ಲಾಸ್ಟಿಕ್ ಬಾಟಲಿಯ ಹಾವಳಿ ತಡೆಯಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಐಪಿಎಲ್‌ 10 ಸೆಕೆಂಡ್‌ ಜಾಹೀರಾತಿಗೆ ಲಕ್ಷ ಲಕ್ಷ – 4,500 ಕೋಟಿ ಆದಾಯ ನಿರೀಕ್ಷೆಯಲ್ಲಿ ಜಿಯೋಸ್ಟಾರ್‌

    ಮಣ್ಣಲ್ಲಿ ಮಣ್ಣಾಗದ, ನೀರಿನಲ್ಲಿ ಕರಗದ, ಸುಟ್ಟರೆ ಪ್ರಾಣವಾಯುವಿಗೆ ವಿಷಕಾರಿ ಅಂಶಗಳನ್ನು ಸೇರ್ಪಡೆ ಮಾಡುವ ಪ್ಲಾಸ್ಟಿಕ್ ಪ್ರಕೃತಿ ಪರಿಸರಕ್ಕೆ ಅಷ್ಟೇ ಅಲ್ಲದೆ ಜನ, ಜಾನುವಾರಗಳ ಆರೋಗ್ಯಕ್ಕೂ ಮಾರಕವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಿರ್ದಿಷ್ಟ ಏಕ ಬಳಕೆ ಪ್ಲಾಸ್ಟಿಕ್ ತಯಾರಿಕೆ, ದಾಸ್ತಾನು, ಮಾರಾಟ, ಬಳಕೆಯನ್ನು ನಿಷೇಧಿಸಿದ್ದು, ರಾಜ್ಯ ಸರ್ಕಾರ ಕೂಡ ಈ ಸಂಬಂಧ ನಿಯಮಗಳನ್ನು ರೂಪಿಸಿದೆ. ಆದಾಗ್ಯೂ ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದ್ದು, ಪರಿಸರಕ್ಕೆ ಹಾನಿ ಆಗುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: Karnataka Bandh| ಮೈಸೂರಲ್ಲಿ ಪ್ರತಿಭಟನಾಕಾರರು ಪೊಲೀಸರ ವಶಕ್ಕೆ

    ಮೊದಲಿಗೆ ರಸ್ತೆಯ ಬದಿಯಲ್ಲಿ ಎಲ್ಲೆಂದರಲ್ಲಿ ಬಿದ್ದು ಪರಿಸರ ಹಾಳು ಮಾಡುತ್ತಿರುವ, ಖನಿಜಯುಕ್ತ ನೀರಿನ ಬಾಟಲಿಗೆ (Mineral Water Bottles) ಕಡಿವಾಣ ಹಾಕಬೇಕಾಗಿದೆ. ಹೊಸ ನೀರಿನ ಬಾಟಲಿ ಖರೀದಿಸಲು ಬರುವ ಗ್ರಾಹಕರಿಂದ ಬಾಟಲಿ ನೀರು ಮಾರುವ ಚಿಲ್ಲರೆ ಮಳಿಗೆಗಳು ಯಾವುದೇ ಕಂಪನಿಯ ನೀರಿನ ಬಾಟಲಿ ನೀಡಿದರೂ ಅದಕ್ಕೆ ಕನಿಷ್ಠ ಬೆಲೆ ನೀಡಿ/ಅಷ್ಟು ದರ ಕಡಿತ ಮಾಡಿ ಹೊಸ ಬಾಟಲಿ ಮಾರಾಟ ಮಾಡುವಂತೆ ಮತ್ತು ಈ ರೀತಿ ಸಂಗ್ರಹಿಸಲಾದ ಖಾಲಿ ಬಾಟಲಿಗಳನ್ನು ನೀರು ಮಾರಾಟ ಮಾಡುವ ಕಂಪನಿಗಳೇ ಹಿಂಪಡೆದು, ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದನ್ನು ಕಡ್ಡಾಯಗೊಳಿಸಲು ಸೂಚಿಸಿದ್ದಾರೆ. ಇದನ್ನೂ ಓದಿ: ಅಭಿಮಾನಿಗಳೇ ನಮ್ಮನೆ ದೇವ್ರು – ಎರಡು ಕೈ ಜೋಡಿಸಿ ಪಾಟಿದಾರ್‌ ಕೃತಜ್ಞತೆ

    ಉತ್ಪಾದಕರ ವಿಸ್ತರಿತ ಜವಾಬ್ದಾರಿಯಂತೆ ಯಾವುದೇ ಉತ್ಪನ್ನವನ್ನು ತಯಾರಿಸುವವರು, ತಮ್ಮ ಉತ್ಪನ್ನಗಳಿಂದ ಪರಿಸರ ಮೇಲಾಗುವ ಪರಿಣಾಮಗಳನ್ನು ಉತ್ಪನ್ನವು ಗ್ರಾಹಕರ ಕೈಸೇರಿದ ನಂತರವೂ ನಿರ್ವಹಿಸುವ ಜವಾಬ್ದಾರಿ ಹೊಂದಿರುತ್ತಾರೆ. ಈ ಹಿನ್ನೆಲೆಯಲ್ಲಿ ಖಾಲಿ ಬಾಟಲಿಗಳನ್ನು ನೀರು ಮಾರಾಟ ಮಾಡುವ ಕಂಪನಿಗಳೇ ಮರು ಖರೀದಿ ಮಾಡಿ ವಿಲೇವಾರಿ ಮಾಡಿದಲ್ಲಿ ಬೃಹತ್ ಪ್ರಮಾಣದಲ್ಲಿ ಸಂಗ್ರಹವಾಗುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಿಸಬಹುದು ಎಂಬುದು ಈಶ್ವರ ಖಂಡ್ರೆ ಅವರ ಅಭಿಮತವಾಗಿದೆ. ಇದನ್ನೂ ಓದಿ: ಕರ್ನಾಟಕ ಬಂದ್ ಎಫೆಕ್ಟ್ – ಸ್ಯಾಟಲೈಟ್, ಮೆಜೆಸ್ಟಿಕ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಇಳಿಕೆ

  • ಇಡ್ಲಿ ಬಳಿಕ ಹೋಳಿಗೆ ಪ್ರಿಯರಿಗೆ ಶಾಕ್!

    ಇಡ್ಲಿ ಬಳಿಕ ಹೋಳಿಗೆ ಪ್ರಿಯರಿಗೆ ಶಾಕ್!

    ಬೆಂಗಳೂರು: ಇಡ್ಲಿ (Idli) ಬಳಿಕ ಹೋಳಿಗೆ (Holige) ಪ್ರಿಯರಿಗೆ ಶಾಕ್ ಎದುರಾಗಿದೆ. ಇದೀಗ ಹೋಳಿಗೆಯೂ ನಿಮ್ಮ ಆರೋಗ್ಯಕ್ಕೆ ಕಂಟಕ ತರಬಹುದು. ಹೋಳಿಗೆ ತಯಾರು ಮಾಡುತ್ತಿದ್ದ ಅಂಗಡಿಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಪ್ಲಾಸ್ಟಿಕ್ (Plastic) ಬಳಕೆ ಮಾಡಿಕೊಂಡು ಹೋಳಿಗೆ ತಯಾರಿಸುತ್ತಿರುವುದು ಪತ್ತೆಯಾಗಿದೆ.

    ಪ್ಲಾಸ್ಟಿಕ್ ಕವರ್ ಬಳಕೆ ಮಾಡಿಕೊಂಡು ಹೋಳಿಗೆ ತಯಾರಿಸುವುದು ಕ್ಯಾನ್ಸರ್‌ಗೆ (Cancer) ಕಂಟಕವಾಗಬಹುದು. ಪ್ಲಾಸ್ಟಿಕ್ ಶಾಖದಿಂದ ಕೆಮಿಕಲ್ ಹೊರಸೂಸಿ ಕ್ಯಾನ್ಸರ್ ರೋಗಕ್ಕೆ ಎಡೆಮಾಡಿಕೊಡಬಹುದು. ಆಹಾರ ಸುರಕ್ಷತೆ ಮತ್ತು ಔಷಧ ಗುಣಮಟ್ಟ ಇಲಾಖೆಯ ಅಧಿಕಾರಿಗಳ ತಪಾಸಣೆಯಲ್ಲಿ ಈ ಶಾಕಿಂಗ್ ವಿಚಾರ ಬಯಲಾಗಿದೆ. ಇದನ್ನೂ ಓದಿ: ಕೆಆರ್‌ ನಗರ ರೇಪ್‌ ಸಂತ್ರಸ್ತೆ ಕಿಡ್ನ್ಯಾಪ್ ಕೇಸ್‌ – ಹೈಕೋರ್ಟ್‌ ಮೊರೆ ಹೋದ ಭವಾನಿ ರೇವಣ್ಣ

    ಮೈಸೂರಿನ ಎರಡು ಹೋಟೆಲ್‌ಗಳ ಮೇಲೆ ದಾಳಿ ಮಾಡಿದ ವೇಳೆ ಪ್ಲಾಸ್ಟಿಕ್ ಕವರ್ ಬಳಸಿ ಹೋಳಿಗೆ ತಯಾರು ಮಾಡುವುದು ಕಂಡುಬಂದಿದೆ. ಈ ಹಿನ್ನೆಲೆ ಹೋಳಿಗೆ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಕೆ ಮಾಡದಂತೆ ಅಂಗಡಿಗಳಿಗೆ ಆಹಾರ ಸುರಕ್ಷತಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಇದನ್ನೂ ಓದಿ: ಶಾಸಕರಿಗಾಗಿ ವಿಧಾನಸೌಧಕ್ಕೆ ಬಂತು ರಿಕ್ಲೈನರ್‌, ಮಸಾಜ್ ಚೇರ್‌ಗಳು – ಬೆಲೆ ಎಷ್ಟು?

  • ನಿಷೇಧಿತ ಪ್ಲಾಸ್ಟಿಕ್ ಬಳಸುವ ಗ್ರಾಹಕರಿಗೆ ಕಾದಿದೆ ಹಬ್ಬ – ದಂಡ ಪ್ರಯೋಗಕ್ಕೆ ಮಾರ್ಷಲ್ಸ್ ಎಂಟ್ರಿ

    ನಿಷೇಧಿತ ಪ್ಲಾಸ್ಟಿಕ್ ಬಳಸುವ ಗ್ರಾಹಕರಿಗೆ ಕಾದಿದೆ ಹಬ್ಬ – ದಂಡ ಪ್ರಯೋಗಕ್ಕೆ ಮಾರ್ಷಲ್ಸ್ ಎಂಟ್ರಿ

    ಬೆಂಗಳೂರು: ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ (Plastic)  ಬಳಸುವ ಗ್ರಾಹಕರು 200 ರೂ. ನಿಮ್ಮೊಂದಿಗೆ ಇಟ್ಟುಕೊಂಡಿರಿ. ಯಾಕೆಂದರೆ ಇನ್ಮುಂದೆ ನೀವು ನಿಷೇಧಿತ ಪ್ಲಾಸ್ಟಿಕ್ ಬಳಕೆ ವೇಳೆ ಸಿಕ್ಕಿ ಬಿದ್ದರೆ ದಂಡ ಪ್ರಯೋಗಿಸಲು ಬಿಬಿಎಂಪಿ (BBMP) ಮಾರ್ಷಲ್ಸ್‌ (Marshalls) ಅಖಾಡಕ್ಕಿಳಿದಿದ್ದಾರೆ.

    ಪ್ಲಾಸ್ಟಿಕ್ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ. ಬೆಂಗಳೂರಿನಲ್ಲಿ (Bengaluru) ವ್ಯಾಪಾರಿಗಳು, ಗ್ರಾಹಕರು ಪ್ಲಾಸ್ಟಿಕ್ ಮೇಲೆ ಅವಲಂಬಿತರಾಗಿದ್ದಾರೆ. ತರಕಾರಿ, ಹಣ್ಣು ಖರೀದಿ ವೇಳೆ 20 ರೂ.ಗೆ ಬೇಕಾದ ಸಾಮಾಗ್ರಿ ಸಿಕ್ಕರೆ 5 ರೂ. ಕೈ ಚೀಲಕ್ಕೆ ಖರ್ಚು ಮಾಡಬೇಕಾಗಿದೆ. ಇದನ್ನು ತಪ್ಪಿಸಲು ವ್ಯಾಪಾರಿಗಳು, ಗ್ರಾಹಕರು ನಿಷೇಧಿತ ಪ್ಲಾಸ್ಟಿಕ್ ಬಳಸುತ್ತಿದ್ದಾರೆ. ಇದನ್ನೂ ಓದಿ: ಇಂದು ಮಧ್ಯಾಹ್ನ ಸಿಇಟಿ ಪರಿಷ್ಕೃತ ರ್‍ಯಾಂಕಿಂಗ್ ಪಟ್ಟಿ ಪ್ರಕಟ

    ಇನ್ಮುಂದೆ ಪ್ಲಾಸ್ಟಿಕ್ ಕೈ ಚೀಲ ಬಳಸಿದ್ದು ಕಂಡು ಬಂದರೆ ಗ್ರಾಹಕರಿಗೂ 200 ರೂ. ದಂಡ ಫಿಕ್ಸ್. ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮದಡಿ ಮಾಲಿನ್ಯ ನಿಯಂತ್ರಣ ಮಂಡಳಿ ದಂಡದ ಪ್ರಮಾಣ ಕುರಿತು ಆದೇಶ ಹೊರಡಿಸಿದೆ. ಈ ದಂಡವನ್ನು ಬಿಬಿಎಂಪಿ ಯಥಾವತ್ತಾಗಿ ಜಾರಿಗೆ ತರಲು ಸಜ್ಜಾಗಿದೆ. ಮಾರ್ಷಲ್ಸ್ ಫೀಲ್ಡ್‌ನಲ್ಲಿ ಹಲವೆಡೆ ಪ್ಲಾಸ್ಟಿಕ್ ಬಲ್ಕ್ ಜನರೇಟರ್ ವಿರುದ್ಧ ದಂಡ ಪ್ರಯೋಗಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ಕರ್ನಾಟಕ, ತಮಿಳುನಾಡಿನಲ್ಲಿ ಕೋಮುಗಲಭೆ ಸೃಷ್ಟಿಸಲು ಸಂಚು ರೂಪಿಸಿದ್ದ PFI

    ಪ್ಲಾಸ್ಟಿಕ್ ದಂಡಾಸ್ತ್ರ:
    ನಗರದಲ್ಲಿ ವ್ಯಾಪಾರಿಗಳಿಂದ ಗ್ರಾಹಕರು ಖರೀದಿಸುವ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಬ್ಯಾನರ್ ಬಂಟಿಂಗ್ಸ್, ಫ್ಲೆಕ್ಸ್, ಪ್ಲಾಸ್ಟಿಕ್ ಕಪ್, ಸ್ಪೂನ್, ಡೈನಿಂಗ್ ಟೇಬಲ್ ಮೇಲೆ ಹಾಕುವ ಪ್ಲಾಸ್ಟಿಕ್ ಹಾಳೆ ಕಂಡು ಬಂದಲ್ಲಿ ಕೂಡಲೇ ದಂಡ ಪ್ರಯೋಗಕ್ಕೆ ಮಾರ್ಷಲ್ಸ್ ಸಜ್ಜಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತರಕಾರಿ ವ್ಯಾಪಾರಿಗಳ ಮೇಲೆ ದಂಡ ಪ್ರಯೋಗಕ್ಕೆ ಮುಂದಾದ BBMP

    ತರಕಾರಿ ವ್ಯಾಪಾರಿಗಳ ಮೇಲೆ ದಂಡ ಪ್ರಯೋಗಕ್ಕೆ ಮುಂದಾದ BBMP

    ಬೆಂಗಳೂರು: ಮಾಸ್ಕ್ ದಂಡ, ಕಸದ ದಂಡ, ಪ್ಲಾಸ್ಟಿಕ್ ಬಳಕೆ ದಂಡ ಹಾಕಿದ್ದ ಬಿಬಿಎಂಪಿ, ಈಗ ತರಕಾರಿ ವ್ಯಾಪಾರಿಗಳ ಮೇಲೆ ದಂಡ ಪ್ರಯೋಗಕ್ಕೆ ಮುಂದಾಗಿದೆ.

    ಕೆ.ಆರ್ ಮಾರ್ಕೆಟ್ ರೀತಿಯ ಬೃಹತ್ ಮಾರ್ಕೆಟ್‍ಗೆ ತರಕಾರಿ ಮಾರಲು ತಂದವರು ವ್ಯಾಪಾರ ನಡೆಸಿದ ಬಳಿಕ ಉಳಿದ ತರಕಾರಿಗಳನ್ನು ಮಂಡಿಯಲ್ಲೇ ಬಿಟ್ಟು ಹೋಗ್ತಾರೆ. ಆ ರೀತಿ ತರಕಾರಿಗಳನ್ನು ಮಂಡಿಯಲ್ಲಿ ಬಿಟ್ಟು ಹೋದವರ ಮೇಲೆ ಇನ್ಮುಂದೆ ದಂಡ ಬೀಳಲಿದೆ. ಕೆ.ಆರ್ ಮಾರ್ಕೆಟ್ ಬಳಿ ಮಾರ್ಷಲ್‍ಗಳು ಮೈಕ್‍ನಲ್ಲಿ ಈ ರೀತಿ ಅನೌನ್ಸ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಉಗ್ರರ ಸುರಕ್ಷಿತ ಅಡಗುದಾಣವಾಗ್ತಿದ್ಯಾ ಬೆಂಗಳೂರು? – ಶಂಕಿತ ಲಷ್ಕರ್ ಉಗ್ರನ ವಶ

    ಸ್ವಚ್ಛತೆ ಕಾಪಾಡುವ ದೃಷ್ಟಿಯಿಂದ ದಂಡ ಹಾಕುವುದಕ್ಕೆ ಬಿಬಿಎಂಪಿ ಮುಂದಾಗಿದೆ. ತರಕಾರಿ ಎಷ್ಟು ಬಿಟ್ಟು ಹೋಗಿದ್ದಾರೆ ಎಂಬ ತೂಕದ ಆಧಾರದ ಮೇಲೆ ದಂಡ ಹಾಕಲಾಗುತ್ತದೆ. ಅರ್ಧ ಟನ್, ಒಂದು ಟನ್‍ವರೆಗೂ ತರಕಾರಿ ಮಾರ್ಕೆಟ್‍ನಲ್ಲಿ ಬಿಟ್ಟು ಹೋದ್ರೆ 5 ಸಾವಿರದಿಂದ 10 ಸಾವಿರದವರೆಗೂ ದಂಡ ಹಾಕಲು ನಿರ್ಧರಿಸಲಾಗಿದೆ. ಆದರೆ, ವ್ಯಾಪಾರಿಗಳು ನಮಗೆ ಲಾಭ ಆಗೋದೇ ನೂರು ರೂಪಾಯಿ. ಇದನ್ನು ದಂಡವಾಗಿ ಕಟ್ಟಿದರೆ ನಮ್ಮ ಗತಿ ಏನು ಎಂದು ದಂಡ ಪ್ರಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಕದನ ವಿರಾಮ ಘೋಷಣೆಗೆ ಮುಂದಾಗುತ್ತಾರಾ ಡಿಕೆ ಬದ್ರರ್ಸ್‌?

    ವೇಸ್ಟ್ ತರಕಾರಿಯನ್ನು ಹೀಗೆ ಮಾಡಿ:
    ಬಿಬಿಎಂಪಿ ಕಸದ ಲಾರಿಗೆ ವೇಸ್ಟ್ ತರಕಾರಿ ಹಾಕಿ. ವ್ಯಾಪಾರದ ವೇಳೆ ಪಕ್ಕದಲ್ಲಿ ಚೀಲ ಇಟ್ಕೊಂಡು ಕಸವನ್ನು ಹಾಕಿ. ಕೊಳೆತ ಹಣ್ಣು, ತರಕಾರಿಗಳನ್ನು ಸಂಗ್ರಹಿಸಿ ಕಸದ ಲಾರಿಗೆ ಹಾಕಿ. ತರಕಾರಿ ಮೇಲೆ ಹೊದಿಕೆಗೆ ಹಾಕಿದ ಪೇಪರ್, ಹುಲ್ಲು, ಚೀಲವನ್ನು ಪ್ರತ್ಯೇಕವಾಗಿ ಲಾರಿಗೆ ಹಾಕಿ ಈ ಮೂಲಕ ಸ್ವಚ್ಛತೆಯನ್ನು ಕಾಪಾಡಬಹುದಾಗಿದೆ.

    Live Tv
    [brid partner=56869869 player=32851 video=960834 autoplay=true]

  • ನಿಷೇಧಿತ ಪ್ಲಾಸ್ಟಿಕ್ ಜಪ್ತಿ – 5.97 ಲಕ್ಷ ರೂ. ದಂಡ ವಸೂಲಿ

    ನಿಷೇಧಿತ ಪ್ಲಾಸ್ಟಿಕ್ ಜಪ್ತಿ – 5.97 ಲಕ್ಷ ರೂ. ದಂಡ ವಸೂಲಿ

    ಬೆಂಗಳೂರು: ನಿಷೇಧಿತ ಪ್ಲಾಸ್ಟಿಕ್ ಜಪ್ತಿ ಮಾಡಿರುವ ಬಿಬಿಎಂಪಿ ಮಾರ್ಷಲ್ ಗಳು 5.97 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ.

    ಏಕಬಳಕೆ ಪ್ಲಾಸ್ಟಿಕ್ ಉಪಯೋಗಿಸುವ ಮಾರಾಟಗಾರರು ಮತ್ತು ಮಳಿಗೆಗಳ ಮೇಲೆ ಮಾರ್ಷಲ್ ಗಳು ದಾಳಿ ಮಾಡಿದ್ದಾರೆ. ಜುಲೈ 01 ರಿಂದ ನಿನ್ನೆಯವರೆಗೂ 5.97 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ. 999 ಸ್ಥಳಗಳಲ್ಲಿ ತಪಾಸಣೆ ಮಾಡಿ 1380 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ ಪಡೆದುಕೊಳ್ಳಲಾಗಿದೆ.

    ಬೆಂಗಳೂರಿನ 8 ವಲಯಗಳಲ್ಲೂ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡ್ತಿರೋದು ಬಯಲಾಗಿದೆ. 8 ವಾರ್ಡ್ ಗಳಲ್ಲೂ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಬಿಬಿಎಂಪಿ ಘನತ್ಯಾಜ್ಯ ವಿಭಾಗ ಕ್ರಮ ವಹಿಸುತ್ತಾ ಇದೆ. ಇದನ್ನೂ ಓದಿ: ಏಕ ಬಳಕೆಯ ಪ್ಲಾಸ್ಟಿಕ್ ಸಂಪೂರ್ಣ ನಿಷೇಧಿಸಲು ಒಂದು ವರ್ಷ ಅವಕಾಶ ಕೊಡಿ: ವರ್ತಕರ ಸಂಘ ಮನವಿ

    Live Tv
    [brid partner=56869869 player=32851 video=960834 autoplay=true]

  • ಏಕ ಬಳಕೆಯ ಪ್ಲಾಸ್ಟಿಕ್ ಸಂಪೂರ್ಣ ನಿಷೇಧಿಸಲು ಒಂದು ವರ್ಷ ಅವಕಾಶ ಕೊಡಿ: ವರ್ತಕರ ಸಂಘ ಮನವಿ

    ನವದೆಹಲಿ: ದೇಶದಲ್ಲಿ ಜುಲೈ 1 ರಿಂದ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ. ಈ ಕುರಿತಾಗಿ ಸಂಪೂರ್ಣ ನಿಷೇಧಕ್ಕೂ ಮೊದಲು ನಮಗೆ ಒಂದು ವರ್ಷಗಳ ಕಾಲ ಅವಕಾಶ ಕೊಡಿ ಎಂದು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (ಸಿಎಐಟಿ) ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್‍ಗೆ ಮನವಿ ಸಲ್ಲಿಸಿದ್ದಾರೆ.

    ಇಂದು ಭೂಪೇಂದರ್ ಯಾದವ್ ಅವರಿಗೆ ಮನವಿ ಸಲ್ಲಿಸಿದ ವರ್ತಕರ ಸಂಘ ಜುಲೈ 1 ರಿಂದ ಜಾರಿಗೆ ಬಂದ ಏಕ-ಬಳಕೆಯ ಪ್ಲಾಸ್ಟಿಕ್ ನಿಷೇಧವನ್ನು ಅನುಸರಿಸಲು ಒಂದು ವರ್ಷದ ಅವಧಿಯನ್ನು ಕೇಳಿದೆ. ಉದ್ಯಮದಾರರನ್ನು ಮತ್ತು ಉದ್ಯೋಗಿಗಳಿಗೆ ಪೂರಕವಾಗಿ ಸಚಿವರು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಜುಲೈ 1ರಿಂದ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳು ಬ್ಯಾನ್ – ಮಾರಾಟ ಮಾಡಿದ್ರೆ ದುಬಾರಿ ದಂಡ

    ವರ್ತಕರ ಸಂಘದ ಪ್ರಕಾರ ಈಗಾಗಲೇ ಕೆಲ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಉದ್ಯಮವಾಗಿಸಿಕೊಂಡು ಹಲವಾರು ಕಂಪನಿಗಳು ಇವೆ. ಹಲವು ಕಂಪನಿಗಳು ಈಗಾಗಲೇ ಸ್ಟಾಕ್ ಇಟ್ಟಿರುವ ಪ್ಲಾಸ್ಟಿಕ್ ಸಾಮಾಗ್ರಿಗಳನ್ನು ಬಳಕೆಗೆ ಅವಕಾಶ ಮಾಡಿಕೊಡಬೇಕು. ಹಲವು ಕಂಪನಿಗಳು ಬ್ಯಾಂಕ್‍ಗಳಲ್ಲಿ ಸಾಲ ಮಾಡಿ ಉದ್ಯಮಗಳನ್ನು ಆರಂಭಿಸಿದೆ. ಇದೀಗ ಏಕಾಏಕಿ ಸರ್ಕಾರ ಪ್ಲಾಸ್ಟಿಕ್ ಬಳಕೆ ನಿಷೇಧಿಸಿದರೆ ಹೊಡೆತ ಬೀಳುತ್ತದೆ. ಸಾವಿರಾರೂ ಉದ್ಯೋಗಿಗಳು ಬೀದಿ ಪಾಲಾಗುತ್ತಾರೆ. ಈ ಬಗ್ಗೆ ಸರ್ಕಾರ ಗಮನಹರಿಸಬೇಕು. ವರ್ಷಕ್ಕೆ 60,000 ಕೋಟಿ ರೂ.ಗಳ ವ್ಯವಹಾರ ಪ್ಲಾಸ್ಟಿಕ್ ಮೂಲಕ ನಡೆಯುತ್ತದೆ. ಹಾಗಾಗಿ ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಮುಂದಿನ ಕ್ರಮ ವಹಿಸಬೇಕಾಗಿ ಮನವಿ ಮಾಡಿಕೊಂಡಿದೆ.

    PLASTIC

    ಜುಲೈ 1 ರಿಂದ ಪ್ಲಾಸ್ಟಿಕ್ ಕಡ್ಡಿ ಹೊಂದಿರುವ ಇಯರ್ ಬಡ್ಸ್, ಬಲೂನ್‍ನ ಪ್ಲಾಸ್ಟಿಕ್ ಕಡ್ಡಿ, ಐಸ್‍ಕ್ರೀಂ-ಕ್ಯಾಂಡಿ ಸ್ಟಿಕ್, ಪ್ಲಾಸ್ಟಿಕ್ ಪ್ಲೇಟ್ಸ್, ಕಪ್ಸ್, ಗ್ಲಾಸ್, ಸ್ಪೂನ್, ಪ್ಲಾಸ್ಟಿಕ್ ಚಾಕು ಸೇರಿದಂತೆ ಇನ್ನಿತರ ಕೆಲ ಏಕಬಳಕೆಯ ಪ್ಲಾಸ್ಟಿಕ್‍ಗಳನ್ನು ಬ್ಯಾನ್ ಮಾಡಲಾಗಿದೆ. ಇದನ್ನೂ ಓದಿ: ದೇಶಕ್ಕೆ ಮಾತಾಡುವ ರಾಷ್ಟ್ರಪತಿ ಬೇಕು; ನಾನು ಗೆದ್ದರೆ ದೇಶದ್ರೋಹ ಕಾನೂನು ರದ್ದು ಮಾಡ್ತೀನಿ – ಯಶವಂತ್‌ ಸಿನ್ಹಾ

    2016ರ ನಂತರ ನಿಷೇಧ ಜಾರಿಯಾದ ಬಳಿಕ ಹಲವು ಉತ್ಪಾದನಾ ಘಟಕಗಳ ಮೇಲೆ ದಾಳಿ ನಡೆಸಿ ಮುಚ್ಚಲಾಗಿದೆ. ಅದಾಗ್ಯೂ ಪ್ಲಾಸ್ಟಿಕ್ ಬಳಕೆಯಾಗುತ್ತಲೇ ಇದ್ದು, ಇದು ಮಾರಾಟಗಾರರು, ತಿನಿಸುಗಳು, ಹಣ್ಣು ಮತ್ತು ತರಕಾರಿ ಮಾರಾಟಗಾರರು ಮತ್ತು ಅಂಗಡಿಗಳಲ್ಲಿ ಕಂಡುಬರುತ್ತದೆ. ಆದ್ದರಿಂದ ಹಂತಹಂತವಾಗಿ ಜಾಗೃತಿ ಅಭಿಯಾನಗಳನ್ನು ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ.

    Live Tv

  • ಜುಲೈ 1ರಿಂದ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳು ಬ್ಯಾನ್ – ಮಾರಾಟ ಮಾಡಿದ್ರೆ ದುಬಾರಿ ದಂಡ

    ಜುಲೈ 1ರಿಂದ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳು ಬ್ಯಾನ್ – ಮಾರಾಟ ಮಾಡಿದ್ರೆ ದುಬಾರಿ ದಂಡ

    ಬೆಂಗಳೂರು: ದೇಶದಲ್ಲಿ ನಾಳೆಯಿಂದ ಹೊಸ ಶಕೆ ಆರಂಭವಾಗಲಿದೆ. ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳು ಬ್ಯಾನ್ ಆಗಲಿವೆ.

    ಕೇಂದ್ರ ಸರ್ಕಾರದ ಆದೇಶ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‍ಪಿಸಿಬಿ)  ಅಧ್ಯಕ್ಷ ತಿಮ್ಮಯ್ಯ ಸುದ್ದಿಗೋಷ್ಠಿ ನಡೆಸಿ, ಏಕ ಬಳಕೆ ಪ್ಲಾಸ್ಟಿಕ್ ಬ್ಯಾನ್ ಆಗ್ತಿರುವ ಬಗ್ಗೆ ಮಾಹಿತಿ ನೀಡಿದರು. ನಾಳೆಯಿಂದ ಪ್ಲಾಸ್ಟಿಕ್ ಕಡ್ಡಿ ಹೊಂದಿರುವ ಇಯರ್ ಬಡ್ಸ್, ಬಲೂನ್‍ನ ಪ್ಲಾಸ್ಟಿಕ್ ಕಡ್ಡಿ, ಐಸ್‍ಕ್ರೀಂ-ಕ್ಯಾಂಡಿ ಸ್ಟಿಕ್, ಪ್ಲಾಸ್ಟಿಕ್ ಪ್ಲೇಟ್ಸ್, ಕಪ್ಸ್, ಗ್ಲಾಸ್, ಸ್ಪೂನ್, ಪ್ಲಾಸ್ಟಿಕ್ ಚಾಕು ಎಲ್ಲಾ ಬ್ಯಾನ್ ಆಗಲಿವೆ. ಇದನ್ನೂ ಓದಿ: ಬಿಜೆಪಿ `ಮಹಾ’ ಮಾಸ್ಟರ್ ಪ್ಲಾನ್ – ಅಂದು ಅಟೋ ಡ್ರೈವರ್‌ ಇಂದು ಚೀಫ್‌ ಮಿನಿಸ್ಟರ್‌

    ಈ ನಿಷೇಧಿತ ಪ್ಲಾಸ್ಟಿಕ್ ಬಳಸಿದ್ರೆ, ಮಾರಾಟ ಮಾಡಿದ್ರೆ ದಂಡ ವಿಧಿಸಲಾಗುತ್ತದೆ. ಉತ್ಪಾದಕರಿಗೆ 5 ರಿಂದ 20 ಸಾವಿರ ರೂಪಾಯಿವರೆಗೂ ದಂಡ, ಮಾರಾಟಗಾರರಿಗೆ 200 ರೂಪಾಯಿಯಿಂದ 1 ಸಾವಿರ ರೂಪಾಯಿವರೆಗೂ ದಂಡ ಬೀಳಲಿದೆ. ಜೊತೆಗೆ ಎಲ್ಲಾ ವಸ್ತುಗಳು ಸೀಜ್ ಆಗಲಿವೆ. ಕೆಎಸ್‍ಪಿಸಿಬಿ ಜುಲೈ 1 ರಿಂದ ನಿಷೇಧಿತ ವಸ್ತುಗಳ ಪಟ್ಟಿಯನ್ನು ಸಹ ಸಿದ್ಧಪಡಿಸಿದ್ದು, ಅವರು ಪ್ಲಾಸ್ಟಿಕ್‍ಗೆ ಪರ್ಯಾಯಗಳನ್ನು ಒದಗಿಸುವ ಕೆಲಸವನ್ನೂ ಮಾಡುತ್ತಿದ್ದಾರೆ. ಮಿಶ್ರಗೊಬ್ಬರ ಚೀಲಗಳು ಮತ್ತು ಬಟ್ಟೆ ಚೀಲಗಳ ಪೂರೈಕೆಗೆ ಮಂಡಳಿಯು ಈಗಾಗಲೇ ಅನುಮೋದನೆ ನೀಡಿದೆ. ನಿಷೇಧ ಆದೇಶವು ಕಟ್ಟುನಿಟ್ಟಾಗಿ ಜಾರಿಯನ್ನು ಖಚಿತಪಡಿಸಿಕೊಳ್ಳಲು ಹೆಚ್ಚಿನ ಅಧಿಕಾರವನ್ನು ನೀಡಿದೆ. ಕಟ್ಟುನಿಟ್ಟಿನ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು, ಮಂಗಳವಾರ ಮಾರ್ಷಲ್‍ಗಳೊಂದಿಗೆ ಸಭೆ ನಡೆಸಲಾಯಿತು. ಮಾರ್ಷಲ್‍ಗಳಿಗೆ ತರಬೇತಿ ನೀಡಿ ಯಾವ ಕ್ರಮ ಕೈಗೊಳ್ಳಬೇಕು, ಯಾವ ಕಾಯ್ದೆ ಮತ್ತು ಷರತ್ತಿನ ಅನ್ವಯ ದಂಡವನ್ನು ವಿಧಿಸಬೇಕು ಮತ್ತು ಯಾವ ಕಾಯ್ದೆಯ ಅಡಿಯಲ್ಲಿ ಉತ್ಪಾದನೆ ಮತ್ತು ಚಿಲ್ಲರೆ ಘಟಕಗಳನ್ನು ಮುಚ್ಚಬೇಕು ಎಂದು ತಿಳಿಸಲಾಯಿತು ಎಂದರು. ಇದನ್ನೂ ಓದಿ: ಬ್ಯಾಕ್ಟೀರಿಯಾ ಪತ್ತೆ- ವಿಶ್ವದ ಅತಿ ದೊಡ್ಡ ಚಾಕೊಲೇಟ್ ಫ್ಯಾಕ್ಟರಿ ಸ್ಥಗಿತ

    ಮಹಾರಾಷ್ಟ್ರ ಮತ್ತು ಅಹಮದಾಬಾದ್‍ನ ಎರಡು ಏಜೆನ್ಸಿಗಳಿಗೆ ಮಿಶ್ರಗೊಬ್ಬರ ಪ್ಲಾಸ್ಟಿಕ್ ಪೂರೈಕೆಗೆ ಅನುಮೋದನೆ ನೀಡಲಾಗಿದೆ. ಅಂತೆಯೇ ಈ ಏಜೆನ್ಸಿಗಳು ಸಿಪಿಸಿಬಿ ಮತ್ತು ಪ್ಲಾಸ್ಟಿಕ್ ಯುನಿಟ್ ಆಫ್ ಇಂಡಿಯಾದಿಂದ ಅನುಮತಿಯನ್ನು ಪಡೆದಿವೆ. ಈ ವಿಶೇಷ ಬ್ಯಾಗ್‍ಗಳು ಬಾರ್ ಕೋಡ್‍ಗಳೊಂದಿಗೆ ಬರಲಿದ್ದು, ಸ್ಕ್ಯಾನ್ ಮಾಡಿದಾಗ ಉತ್ಪಾದನಾ ಘಟಕ ಮತ್ತು ಪೂರೈಕೆದಾರರ ಸಂಪೂರ್ಣ ವಿವರಗಳನ್ನು ನೀಡುತ್ತದೆ. ಈ ಏಜೆನ್ಸಿಗಳನ್ನು ಕರ್ನಾಟಕದಲ್ಲಿಯೂ ಘಟಕಗಳನ್ನು ಸ್ಥಾಪಿಸಲು ಪ್ರೋತ್ಸಾಹಿಸಲಾಗುವುದು ಎಂದು ಮಾಹಿತಿ ಹಂಚಿಕೊಂಡರು.

    2016ರ ನಂತರ ನಿಷೇಧ ಜಾರಿಯಾದ ಬಳಿಕ ಹಲವು ಉತ್ಪಾದನಾ ಘಟಕಗಳ ಮೇಲೆ ದಾಳಿ ನಡೆಸಿ ಮುಚ್ಚಲಾಗಿದೆ. ಅದಾಗ್ಯೂ ಪ್ಲಾಸ್ಟಿಕ್ ಬಳಕೆಯಾಗುತ್ತಲೇ ಇದ್ದು, ಇದು ಮಾರಾಟಗಾರರು, ತಿನಿಸುಗಳು, ಹಣ್ಣು ಮತ್ತು ತರಕಾರಿ ಮಾರಾಟಗಾರರು ಮತ್ತು ಅಂಗಡಿಗಳಲ್ಲಿ ಕಂಡುಬರುತ್ತದೆ. ಆದ್ದರಿಂದ ಹಂತಹಂತವಾಗಿ ಜಾಗೃತಿ ಅಭಿಯಾನಗಳನ್ನು ಕೈಗೊಳ್ಳಬೇಕಾಗಿದೆ. ಸದ್ಯಕ್ಕೆ ನಂದಿನಿ ಹಾಲಿನ ಕವರ್‌ಗೆ ನಿಷೇಧ ವಿಧಿಸಿಲ್ಲ. ಪ್ಲಾಸ್ಟಿಕ್ ಬಳಕೆ ನಿಷೇಧ ಕುರಿತು ಹಲವು ರೀತಿಯಲ್ಲಿ ಜಾಗೃತಿ ಮೂಡಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಪ್ಲಾನ್ ಮಾಡಿದೆ ಎಂದು ಸ್ಪಷ್ಟಪಡಿಸಿದರು.

    Live Tv

  • ಪ್ಲಾಸಿಕ್ ಬಾಟಲಿ ಕೊಟ್ಟರೆ ಬಸ್‌ನಲ್ಲಿ ಉಚಿತ ಪ್ರಯಾಣ!

    ಪ್ಲಾಸಿಕ್ ಬಾಟಲಿ ಕೊಟ್ಟರೆ ಬಸ್‌ನಲ್ಲಿ ಉಚಿತ ಪ್ರಯಾಣ!

    ಅಬುಧಾಬಿ: ಪ್ಲಾಸ್ಟಿಕ್ ಇಂದು ಪ್ರತಿ ಹಂತದಲ್ಲಿ ನಾವು ಬಳಸುವ ವಸ್ತುವಿನಲ್ಲಿ ಸಿಗುತ್ತಿದೆ. ಕುಡಿಯುವ ನೀರಿನಿಂದ ಮಲಗುವ ಹಾಸಿಗೆವರೆಗೂ ಬಳಸುವ ವಸ್ತುಗಳಲ್ಲಿ ಪ್ಲಾಸ್ಟಿಕ್ ಅಂಶ ಇಲ್ಲದೇ ಬಳಸಲಾಗುವುದೇ ಇಲ್ಲ ಎನ್ನುವಂತಾಗಿದೆ. ಪ್ಲಾಸ್ಟಿಕ್‌ನಿಂದ ಎಷ್ಟೋ ಪ್ರಾಣಿ ಸಂಕುಲ ಅಳಿಯುತ್ತಿವೆ. ಮಾಲಿನ್ಯದಿಂದ ಪರಿಸರವೂ ಹಾಳಾಗುತ್ತಿದೆ.

    ಯುನೈಟೆಡ್ ಅರಬ್ ಎಮಿರೇಟ್ಸ್ ರಾಷ್ಟ್ರದಲ್ಲಿ ಪ್ಲಾಸ್ಟಿಕ್ ಬಾಟಲಿಗಳನ್ನು ನೀಡಿದೆರೆ ಸಾರ್ವಜನಿಕ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾದ ಒಂದು ಅವಕಾಶವನ್ನು ಅಬುಧಾಮಿ ಮುನ್ಸಿಪಾಲಿಟಿ ಹಾಗೂ ಸಾರಿಗೆ ಇಲಾಖೆಯ ಸಮಗ್ರ ಸಾರಿಗೆ ಕೇಂದ್ರಗಳು ಕಲ್ಪಿಸಿಕೊಟ್ಟಿವೆ. ಪರಿಸರ ಸಂಸ್ಥೆ ಅಬುಧಾಬಿ (ಇಎಡಿ), ಅಬುಧಾಬಿ ತ್ಯಾಜ್ಯ ನಿರ್ವಹಣಾ ಕೇಂದ್ರ (ತದ್ವೀರ್) ಮತ್ತು ಡಿ ಗ್ರೇಡ್ ಸಹಯೋಗದಲ್ಲಿ ಈ ಅಭಿಯಾನ ಶುರುವಾಗಿದೆ. ಬಿಸಾಡುವ ಪ್ರತಿ ಬಾಟಲ್ ಅನ್ನು ಉಚಿತ ಪ್ರಯಾಣಕ್ಕೆ ಬಳಸಬಹುದಾಗಿದೆ. ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಅನುದಾನ ಹಂಚಿಕೆ -ಬಜೆಟ್‍ನಲ್ಲಿ ರಾಜ್ಯಕ್ಕೆ 832 ಕೋಟಿ ಮೀಸಲು

    PLASTIC DEPOSAL

    ನೀರು, ತಂಪು ಪಾನೀಯ ಅಥವಾ ಯಾವುದೇ ದ್ರವ್ಯ ಸೇವಿಸಿದ ಬಳಿಕ ಪ್ಲಾಸ್ಟಿಕ್ ಬಾಟಲಿಗಳನ್ನು ಅಲ್ಲಲ್ಲೇ ಬಿಸಾಡುವುದು ಸಾಮಾನ್ಯವಾಗಿಬಿಟ್ಟಿದೆ. ಒಮ್ಮೆ ಕಸದ ತೊಟ್ಟಿಗೂ ಹಾಕಿದರೂ ಕೂಡ ಅದು ಸಂಸ್ಕರಣೆಗೊಳ್ಳುವುದಿಲ್ಲ. ಎಲ್ಲೆಂದರಲ್ಲಿ ಈ ಪ್ಲಾಸ್ಟಿಕ್ ಬಿಸಾಡಿ ಉಂಟಾಗುವ ಮಾಲಿನ್ಯ ತಪ್ಪಿಸಬೇಕು ಹಾಗೂ ತ್ಯಾಜ್ಯ ನಿರ್ವಹಣೆ ಸರಿಯಾಗಿ ಆಗಬೇಕು ಎಂಬ ಉದ್ದೇಶದಿಂದ ಅಬುಧಾಬಿ ಸರ್ಕಾರ ಹೀಗೊಂದು ಆಫರ್ ನೀಡಿದೆ. ‌

    ಏನು ಮಾಡಬೇಕು?
    ಅಬುಧಾಬಿ ಡಿಎಂಟಿ ಈ ಪ್ಲಾಸ್ಟಿಕ್ ನಿಯಂತ್ರಣ ಅಭಿಯಾನಕ್ಕೆ ಪಾಯಿಂಟ್ಸ್ ಫಾರ್ ಪ್ಲಾಸಿಕ್; ದಿ ಬಸ್ ಟ್ರಿಪ್ ಎಂದು ಹೆಸರಿಟ್ಟಿದೆ. ಅದರ ಅಡಿಯಲ್ಲಿ ಅಬುಧಾಬಿಯ ಮುಖ್ಯ ಬಸ್ ನಿಲ್ದಾಣದಲ್ಲಿ ಒಂದು ಪ್ಲಾಸ್ಟಿಕ್ ಡೆಪಾಸಿಟ್ (ಪ್ಲಾಸ್ಟಿಕ್ ಬಾಟಲಿಯ ಠೇವಣಿ ಇಡುವ) ಮಶಿನ್ ಅನ್ನು ಅಳವಡಿಸಲಾಗಿದೆ. ಯಾವುದೇ ಪ್ರಯಾಣಿಕ ಖಾಲಿ ಪ್ಲಾಸ್ಟಿಕ್ ಬಾಟಲಿಯನ್ನು ಅದರಲ್ಲಿ ಹಾಕಿದರೆ, ಬಾಟಲಿಗೆ ಇಂತಿಷ್ಟು ಪಾಯಿಂಟ್ಸ್ ಸಿಗುತ್ತದೆ. ಈ ಪಾಯಿಂಟ್ಸ್‌ಗಳನ್ನು ಪಾಯಿಂಟ್‌ಗಳನ್ನು ಬಸ್ ಪ್ರಯಾಣ ದರಕ್ಕೆ ಅನ್ವಯ ಮಾಡಿಕೊಳ್ಳಬಹುದಾಗಿದೆ. ಇದನ್ನೂ ಓದಿ: ಬೀದರ್‌ನ ಮಸೀದಿಗಳಿಗೆ ಪ್ಲಾಸ್ಟಿಕ್ ಹೊದಿಕೆ 

    PLASTIC

    ಹೀಗಿರಿಲಿದೆ ಪ್ರಕ್ರಿಯೆ…
    600 ಎಂಎಲ್ ಅಥವಾ ಅದಕ್ಕೂ ಕಡಿಮೆ ಅಳತೆಯ ಪ್ರತಿ ಬಾಟಲಿಗೂ ಒಂದೊಂದು ಪಾಯಿಂಟ್ ಇರುತ್ತದೆ. 600 ಎಂಎಲ್ ಮತ್ತು ಅದಕ್ಕೂ ದೊಡ್ಡದಾದ ಪ್ರತಿ ಬಾಟಲಿಗಳಿಗೆ 2 ಪಾಯಿಂಟ್ ಸಿಗಲಿದೆ. ಪ್ಲಾಸ್ಟಿಕ್ ಬಾಟಲಿಯಿಂದ ಗಳಿಸಿದ ಒಂದು ಪಾಯಿಂಟ್ 10 ಫಿಲ್ಸ್‌ಗಳಿಗೆ ಸಮ (ಫಿಲ್ಸ್ ಎಂದರೆ ಕರೆನ್ಸಿಯ ಘಟಕ)ವಾಗಲಿದೆ. 10 ಪಾಯಿಂಟ್‌ಗಳು 1 ದಿರ್ಹಾಮ್‌ಗೆ ಸರಿಸಮ (ದಿರ್ಹಾಮ್ ಎಂದರೆ ಯುನೈಟೆಡ್ ಅರಬ್ ಎಮಿರೇಟ್ಸ್‌ನ ಕರೆನ್ಸಿ). ಈ ಲೆಕ್ಕಾಚಾರದಲ್ಲಿ ಬಸ್ ದರವನ್ನು ಪರಿಗಣಿಸಿ, ಎಷ್ಟು ಹಣ ಆಗುತ್ತದೆಯೋ ಅಷ್ಟು ದೂರ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.

     

  • ಬೀದರ್‌ನ ಮಸೀದಿಗಳಿಗೆ ಪ್ಲಾಸ್ಟಿಕ್ ಹೊದಿಕೆ

    ಬೀದರ್‌ನ ಮಸೀದಿಗಳಿಗೆ ಪ್ಲಾಸ್ಟಿಕ್ ಹೊದಿಕೆ

    ಬೀದರ್: ಇಂದು ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬೀದರ್‌ನ  ಮಸೀದಿಗಳಿಗೆ ಪ್ಲಾಸ್ಟಿಕ್ ಹೊದಿಕೆ ಹಾಕಲಾಗಿದೆ.

    ನಗರದ ಹುಮ್ನಾಬಾದ್ ಪಟ್ಟಣದಲ್ಲಿರುವ ಜನ ಬಿಡ ಪ್ರದೇಶದಲ್ಲಿರುವ ಮಸೀದಿಗಳಿಗೆ ಹುಮ್ನಾಬಾದ್ ಪುರಸಭೆಯಿಂದ ಪ್ಲಾಸ್ಟಿಕ್ ಹೊದಿಕೆ ಹಾಕಲಾಗಿದೆ. ಹುಮ್ನಾಬಾದ್‍ನ ಜೀರಪೇಟೆ ಓಣಿಯ ಗೋಸಿಸಾಬ್ ಮಸೀದಿ, ಅಖಾಡಾ ನೂರ್ ಮಸೀದಿ, ಜಾಮಾ ಮಸೀದಿ ಸೇರಿದಂತೆ ಜಿಲ್ಲೆಯ ಅತೀ ಸೂಕ್ಷ್ಮ ಪ್ರದೇಶದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ಲಾಸ್ಟಿಕ್ ಹೊದಿಕೆಯನ್ನು ಹಾಕಲಾಗಿದೆ. ಇದನ್ನೂ ಓದಿ: ಹೆಣ್ಣುಮಕ್ಕಳೇ ನಾನು ಪ್ರಧಾನಮಂತ್ರಿಯಾಗಲು ಶಕ್ತಿ ಕೊಟ್ಟಿದ್ದು: ಹೆಚ್‍ಡಿಡಿ

    ಕಳೆದ ಬಾರಿ ಕಿಡಗೇಡಿಗಳು ಮಸೀದಿ ಮೇಲೆ ಬಣ್ಣವನ್ನು ಹಾಕಿ ಕೋಮು ಗಲಭೆಗೆ ಕಾರಣವಾಗಿತ್ತು. ಹೀಗಾಗಿ ಈ ಬಾರಿ ಈ ರೀತಿಯ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಪ್ಲಾಸ್ಟಿಕ್ ಹೊದಿಕೆ ಜೊತೆಗೆ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇದನ್ನೂ ಓದಿ: ನಾನೂ ಹಿಂದೂ ಸಮಾಜದಲ್ಲಿಯೇ ಹುಟ್ಟಿದ್ದೇನೆ: ಎಚ್‍ಡಿಕೆ