ಕನ್ನಡ ಚಿತ್ರರಂಗದಲ್ಲಿ ಹಲವು ಹೊಸತುಗಳಿಗೆ ನಾಂದಿ ಹಾಡಿರುವ ಆರ್ ಚಂದ್ರು (R. Chandru) ಅವರು ಆರ್ ಸಿ ಸ್ಟುಡಿಯೋಸ್ ಎಂಬ ಬೃಹತ್ ಪ್ಯಾನ್ ಇಂಡಿಯಾ ಚಿತ್ರ ನಿರ್ಮಾಣ ಸಂಸ್ಥೆಯನ್ನು ಆರಂಭಿಸಿ, ಆ ಮೂಲಕ ಐದು ಚಿತ್ರಗಳ ಶೀರ್ಷಿಕೆಯನ್ನು ಏಕಕಾಲಕ್ಕೆ ಸನ್ಮಾನ್ಯ ಮುಖ್ಯಮಂತ್ರಿಗಳಿಂದ ಅನಾವರಣ ಮಾಡಿಸಿದ್ದರು.
ಆ ಪೈಕಿ ಮೊದಲ ಚಿತ್ರವಾಗಿ ರಾಜ್ ಮೋಹನ್ ಅವರ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ (Darling Krishna) ಹಾಗೂ ಖ್ಯಾತ ನಟ ಪ್ರಕಾಶ್ ರೈ (Prakash Raj)ಅವರು ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ “ಫಾದರ್” (Father) ಚಿತ್ರ ಆರಂಭವಾಗಿದ್ದು ಎಲ್ಲರಿಗೂ ತಿಳಿದ ಸಂಗತಿ. ಪ್ರಸ್ತುತ “ಫಾದರ್” ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಬೆಂಗಳೂರು, ಆನೇಕಲ್, ಚನ್ನಪಟ್ಟಣ, ಮಂಗಳೂರು, ಧರ್ಮಸ್ಥಳ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.
ಬಾಕಿಯಿರುವ ಎರಡು ಹಾಡುಗಳ ಚಿತ್ರೀಕರಣವನ್ನು ಸದ್ಯದಲ್ಲೇ ಪೂರ್ಣಗೊಳಿಸಿ, ಆದಷ್ಟು ಬೇಗ ಚಿತ್ರವನ್ನು ತೆರೆಗೆ ತರುವುದಾಗಿ ತಿಳಿಸಿರುವ ಆರ್ ಚಂದ್ರು, ಶೀಘ್ರದಲ್ಲೇ ಉಳಿದ ನಾಲ್ಕು ಚಿತ್ರಗಳಿಗೂ ಚಾಲನೆ ನೀಡುವುದಾಗಿ ಹೇಳಿದ್ದಾರೆ.
ವಿನೋದ್ ಮಾಸ್ಟರ್ ಸಾಹಸ ನಿರ್ದೇಶನ ಹಾಗೂ ಸುಜ್ಞಾನಮೂರ್ತಿ ಅವರ ಛಾಯಾಗ್ರಹಣ ಬಹು ನಿರೀಕ್ಷಿತ ಈ ಚಿತ್ರಕ್ಕಿದೆ.
ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಕೆಲವು ದಿನಗಳ ಹಿಂದೆ ಆರ್ ಸಿ ಸ್ಟುಡಿಯೋಸ್ ಎಂಬ ನಿರ್ಮಾಣ ಸಂಸ್ಥೆ ಆರಂಭಿಸುವುದರ ಮೂಲಕ ಐದು ಸಿನಿಮಾಗಳನ್ನು ನಿರ್ಮಾಣ ಮಾಡುವುದಾಗಿ ಹೇಳಿದ್ದರು. ಆ ಪೈಕಿ ಮೊದಲ ಚಿತ್ರವಾಗಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ ‘ಫಾದರ್’ ಚಿತ್ರ ನಿರ್ಮಾಣವಾಗುತ್ತಿದೆ. ಇತ್ತೀಚಿಗೆ ಈ ಚಿತ್ರದ ಮುಹೂರ್ತ (Muhurta) ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಗೀತಾ ಶಿವರಾಜಕುಮಾರ್ ಅವರು ಆರಂಭ ಫಲಕ ತೋರುವುದರ ಮೂಲಕ ಫಾದರ್ ಚಿತ್ರದ ಮೊದಲ ಸನ್ನಿವೇಶಕ್ಕೆ ಚಾಲನೆ ನೀಡಿದರು.ರಾಜಕೀಯ ಮುಖಂಡ ಎಚ್.ಎಂ.ರೇವಣ್ಣ, ಶಾಸಕ ಪ್ರದೀಪ್ ಈಶ್ವರ್, ನಿರ್ಮಾಪಕ ಕೆ.ಪಿ.ಶ್ರೀಕಾಂತ್, ಬಹದ್ದೂರ್ ಚೇತನ್ ಕುಮಾರ್, ಮಂಜುನಾಥ್, ಮಮತ ದೇವರಾಜ್, ಮಂಜುನಾಥ್ ಮುಂತಾದ ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.
ಆರ್ ಚಂದ್ರು ನನ್ನ ಆತ್ಮೀಯರು. ಸಿನಿಮಾವನ್ನು ಹೆಚ್ಚಾಗಿ ಪ್ರೀತಿಸುತ್ತಾರೆ. ಆರ್ ಸಿ ಸ್ಟುಡಿಯೋಸ್ ಮೂಲಕ ಮೊದಲ ಚಿತ್ರವಾಗಿ ಫಾದರ್ (Father) ಚಿತ್ರ ಆರಂಭಿಸಿದ್ದಾರೆ. ಚಂದ್ರು (R. Chandru) ಅವರಿಗೆ ಹಾಗೂ ಇಡೀ ಚಿತ್ರತಂಡಕ್ಕೆ ಶುಭವಾಗಲಿ ಎಂದು ಶಿವರಾಜಕುಮಾರ್ ಹಾರೈಸಿದರು.
ನನ್ನ ಚಾರ್ ಮಿನಾರ್ ಚಿತ್ರ ಆರಂಭವಾದಗಿನಿಂದ ಹಿಡಿದು ಈವರೆಗೂ ನನಗೆ ಶಿವಣ್ಣ ಹಾಗೂ ಗೀತಾ ಶಿವರಾಜಕುಮಾರ್ ಅವರು ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಚುನಾವಣೆ ಸಮಯ. ಆದರೂ ಇಂದು ಇಲ್ಲಿಗೆ ಆಗಮಿಸಿ, ನಮ್ಮ ಫಾದರ್ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಅವರಿಗೆ ಹಾಗೂ ಆಗಮಿಸಿರುವ ಎಲ್ಲಾ ಗಣ್ಯರಿಗೂ ಧನ್ಯವಾದ ತಿಳಿಸುತ್ತೇನೆ. ಕೆಲವು ದಿನಗಳ ಮುಂಚೆ ನಮ್ಮ ಆರ್ ಸಿ ಸ್ಟುಡಿಯೋಸ್ ಸಂಸ್ಥೆಯನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದರು. ಈ ಸಂಸ್ಥೆಯಿಂದ ಒಂದು ವರ್ಷದಲ್ಲಿ ಐದು ಸಿನಿಮಾಗಳನ್ನು ನಿರ್ಮಿಸುವುದಾಗಿ ಹೇಳಿದ್ದೆ. ಅದರ ಮೊದಲ ಹೆಜ್ಜೆಯಾಗಿ ಇಂದು “ಫಾದರ್” ಚಿತ್ರ ಆರಂಭವಾಗಿದೆ. ಶಿವಣ್ಣ ಅವರ ಭೈರಾಗಿ ಚಿತ್ರಕ್ಕೆ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದ ರಾಜ್ ಮೋಹನ್ ಈ ಚಿತ್ರದ ನಿರ್ದೇಶಕರು. ಡಾರ್ಲಿಂಗ್ ಕೃಷ್ಣ ನಾಯಕರಾಗಿ, ಅಮೃತ ಅಯ್ಯಂಗಾರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಪ್ರಕಾಶ್ ರೈ, ಸುನೀಲ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಮುಂಬೈನ ಆನಂದ್ ಪಂಡಿತ್ ಅವರು ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ. ಹನುಮಾನ್ ಚಿತ್ರದ ಖ್ಯಾತಿಯ ಹರಿ ಸಂಗೀತ ನೀಡುತ್ತಿದ್ದಾರೆ. ನಮ್ಮ ಫಾದರ್ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದು ನಿರ್ಮಾಪಕ ಆರ್. ಚಂದ್ರು ತಿಳಿಸಿದರು.
ಇದೊಂದು ತಂದೆ – ಮಗನ ಬಾಂಧವ್ಯದ ಚಿತ್ರ. ಕಥೆ ತುಂಬಾ ಚೆನ್ನಾಗಿದೆ. ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ಫಾದರ್ ಚಿತ್ರದಲ್ಲಿದೆ ಎಂದರು ನಿರ್ದೇಶಕ ರಾಜ್ ಮೋಹನ್. ನಿರ್ದೇಶಕರು ಹೇಳಿದ ಕಥೆ ಮನಸ್ಸಿಗೆ ಹತ್ತಿರವಾಯಿತು. ಆರ್ ಚಂದ್ರು ಅವರ ಜೊತೆಗೆ ಇದು ನನ್ನ ಮೊದಲ ಚಿತ್ರ ಎಂದು ನಾಯಕ ಡಾರ್ಲಿಂಗ್ ಕೃಷ್ಣ (Darling Krishna) ತಿಳಿಸಿದರು.
ಕಥೆ ಹಾಗೂ ನನ್ನ ಪಾತ್ರ ಎರಡು ತುಂಬಾ ಚೆನ್ನಾಗಿದೆ ಎಂದರು ನಾಯಕಿ ಅಮೃತ ಅಯ್ಯಂಗಾರ್. ಸಂಗೀತ ನಿರ್ದೇಶಕ ಹರಿ ಸೇರಿದಂತೆ ಅನೇಕರು ಚಿತ್ರದ ಕುರಿತು ಮಾತನಾಡಿದರು.
ಆರ್.ಚಂದ್ರು ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಫಾದರ್ ಸಿನಿಮಾದ ಮುಹೂರ್ತ ನಾಳೆ ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಬೆಳಗ್ಗೆ 11 ಗಂಟೆಗೆ ನೆರವೇರಲಿದೆ. ಈ ಅದ್ಧೂರಿ ಸಮಾರಂಭಕ್ಕೆ ನಟ ಶಿವರಾಜ್ ಕುಮಾರ್ (Shivaraj Kumar) ಮತ್ತು ನಿರ್ಮಾಪಕಿ ಗೀತಾ ಶಿವರಾಜ್ ಕುಮಾರ್ (Geeta Shivaraj Kumar) ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ರಾಮಚಂದ್ರ ಗೌಡ, ಮಂಜುನಾಥ್ ಹೆಗಡೆ, ನಿರ್ಮಾಪಕ ಕೆ.ಪಿ ಶ್ರೀಕಾಂತ್ ಅತಿಥಿಗಳಾಗಿ ಆಗಮಿಸುತ್ತಿದ್ದು, ನಾಯಕ ಡಾರ್ಲಿಂಗ್ ಕೃಷ್ಣ, ನಾಯಕಿ ಅಮೃತಾ ಅಯ್ಯಂಗಾರ, ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಪ್ರಕಾಶ್ ರಾಜ್, ಸುನಿಲ್ ಸೇರಿದಂತೆ ಹಲವಾರು ನಟ ನಟಿಯರು ಹಾಗೂ ತಂತ್ರಜ್ಞರು ಭಾಗಿಯಾಗಲಿದ್ದಾರೆ.
ಆರ್.ಸಿ. ಸ್ಟುಡಿಯೋಸ್. ಇದು ಆರ್ ಚಂದ್ರು (R. Chandru) ಅವರ ಬಹುದೊಡ್ಡ ಕನಸು. ಇದೊಂದು ಪ್ಯಾನ್ ಇಂಡಿಯಾ ಬ್ಯಾನರ್. ಕನ್ನಡಕ್ಕೆ ಸೀಮಿತವಾಗಿದ್ದ ಶ್ರೀ ಸಿದ್ದೇಶ್ವರ ಮೂವೀಸ್ ಬ್ಯಾನರ್ ಅನ್ನು ಸೇರಿಸಿಕೊಂಡೇ ಆರ್.ಸಿ. ಸ್ಟುಡಿಯೋಸ್ ಹುಟ್ಟು ಕಂಡಿದೆ. ಈವರೆಗೆ ಸ್ಟಾರ್ ನಟರ ಐದು ಯಶಸ್ವಿ ಸಿನಿಮಾಗಳನ್ನು ನಿರ್ಮಿಸಿದ್ದ ಆರ್.ಚಂದ್ರು, ಈಗ ಆರ್.ಸಿ. ಸ್ಟುಡಿಯೋಸ್ ಸಂಸ್ಥೆ ಮೂಲಕ ಒಟ್ಟಾರೆ ಆರು ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಅನೌನ್ಸ್ ಮಾಡಿದ್ದಾರೆ. ಅವೆಲ್ಲವೂ ಬಿಗ್ ಬಜೆಟ್ ಸಿನಿಮಾಗಳು, ಬಿಗ್ ಸ್ಟಾರ್ಸ್ ಸಿನಿಮಾಗಳು ಅನ್ನೋದು ವಿಶೇಷ. ಆ ಸಾಲಿನಲ್ಲಿರುವ ಸಿನಿಮಾಗಳ ಪೈಕಿ ‘ಫಾದರ್’ (Father) ಎಂಬ ಆರನೇ ಸಿನಿಮಾ ಏಪ್ರಿಲ್ 27ರಂದು ಅದ್ಧೂರಿಯಾಗಿ ಮುಹೂರ್ತ ನೆರವೇರುತ್ತಿದೆ. ಹುಡುಗಿಯರ ಪಾಲಿನ ಪ್ರೀತಿಯ ಡಾರ್ಲಿಂಗ್ ಎನಿಸಿಕೊಂಡಿರುವ ಡಾರ್ಲಿಂಗ್ ಕೃಷ್ಣ (Darling Krishna) ಮತ್ತು ಪಂಚಭಾಷೆ ನಟ ಪ್ರಕಾರ್ ರೈ (Prakash Raj) ಈ ಚಿತ್ರದ ಮುಖ್ಯ ಆಕರ್ಷಣೆ.
ಈ ಸಿನಿಮಾದ ಶೀರ್ಷಿಕೆಯೇ ಹೇಳುವಂತೆ, ಇದೊಂದು ಅಪ್ಪ- ಮಗನ ಬಾಂಧವ್ಯ ಕುರಿತಾದ ಕಥಾಹಂದರ ಹೊಂದಿರುವ ಸಿನಿಮಾ. ಅಪ್ಪನ ಮೌಲ್ಯ ಸಾರಿದ್ದ ಆರ್. ಚಂದ್ರು ಅವರ ಮೊದಲ ಸೂಪರ್ ಹಿಟ್ ಸಿನಿಮಾ ತಾಜ್ ಮಹಲ್ ಇಂದಿಗೂ ಕಾಡುತ್ತೆ. ಫಾದರ್ ಕೂಡ ಅಂಥದ್ದೇ ಕಂಟೆಂಟ್ ಹೊಂದಿರುವ ಸಿನಿಮಾ ಅನ್ನೋ ಫೀಲ್ ಹೆಸರಲ್ಲೇ ಇದೆ. ಮೊದಲಿಂದಲೂ ಆರ್. ಚಂದ್ರು ಕಂಟೆಂಟ್‌ಗೆ ಒತ್ತು ಕೊಟ್ಟವರು. ಈ ಫಾದರ್ ಕೂಡ ಅದಕ್ಕೆ ಹೊರತಾಗಿರಲ್ಲ ಎಂಬ ಭಾವನೆ ನಮ್ಮದು. ಸದ್ಯಕ್ಕೆ ಫಾದರ್ ಏಪ್ರಿಲ್ 27 ರಂದು ಸೆಟ್ಟೇರುತ್ತಿದೆ. ಅಂದಿನಿಂದಲೇ ಚಿತ್ರೀಕರಣಕ್ಕೂ ಚಾಲನೆ ಸಿಗಲಿದೆ.
ಸಿನಿಮಾ ಅನ್ನೋದಕ್ಕೆ ದೊಡ್ಡ ಶಕ್ತಿ ಇದೆ. ಅಳು-ನಗುವಿನ ಸಂಕೇತವಿದ್ದರೂ ಅಲ್ಲೆಲ್ಲೋ ಒಂದು ಕಡೆ ಆಪ್ತವೆನಿಸೋ ಅಂಶಗಳು ನೋಡುಗರನ್ನು ಬಿಗಿದಪ್ಪುತ್ತವೆ. ಈ ಫಾದರ್ ಸಿನಿಮಾ ಕೂಡ ಎದೆ ಭಾರವೆನಿಸುವ ಚಿತ್ರ. ಮನಸ್ಸಿಗೆ ಖುಷಿ ಕೊಡುವ, ಕಣ್ಣಲ್ಲಿ ಆನಂದಭಾಷ್ಪ ತರುವ ಮತ್ತೆ ಮತ್ತೆ ಕಾಡುವ, ಏನೋ ಕಳೆದುಕೊಂಡ ಸಂಕಟ, ಇನ್ನೇನ್ನನ್ನೋ ಪಡೆಯಬೇಕೆಂಬ ಹಂಬಲ, ಮತ್ತೇನೋ ಉಳಿಸಿಕೊಳ್ಳಬೇಕೆಂಬ ಹಠ ಇವೆಲ್ಲದರ ಸಮ್ಮಿಶ್ರಣವೇ ಫಾದರ್ ಅಂತೆ.
ಇಲ್ಲಿ ನೋವಿದೆ, ನಲಿವಿದೆ. ಬಾಂಧವ್ಯದ ಹೂರಣವಿದೆ. ಎಲ್ಲಕ್ಕಿಂತ ಹೆಚ್ಚಾಗಿ ವಾಸ್ತವದ ತಿರುಳಿದೆ. ಪ್ರತಿಯೊಬ್ಬರ ಮನಸ್ಸಿಗೂ ನಾಟುವ ಅಂಶವಿದೆ. ಕಣ್ಣಿಗೆ ಕಟ್ಟುವ ಚಿತ್ರಣವೂ ಇರಲಿದೆ. ಫಾದರ್ ಪ್ರತಿಯೊಬ್ಬರ ಮನಸ್ಸನ್ನು ಹಗುರಾಗಿಸೋ ಚಿತ್ರವಾದರೂ, ಏನೋ ಒಂದು ಮಿಸ್ ಆಯ್ತು ಅನ್ನೋ ಭಾವನೆಯ ಚಿತ್ರ ಇದಾಗಲಿದೆ. ಆರ್.ಸಿ. ಸ್ಟುಡಿಯೋದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಇದಾಗಿರುವುದರಿಂದ ಸ್ಟುಡಿಯೋ ಮುಖ್ಯಸ್ಥ ಆರ್.ಚಂದ್ರು ಒಂದೊಳ್ಳೆಯ ಕಂಟೆಂಟ್ ಆಯ್ಕೆ ಮಾಡಿಕೊಂಡಿದ್ದಾರೆ. ಹೌದು, ಜಗತ್ತಿನಲ್ಲಿ ಅಪ್ಪನ ಸ್ಥಾನ ತುಂಬೋಕೆ ಯಾರಿಂದಲೂ ಸಾಧ್ಯವಿಲ್ಲ. ಅಪ್ಪ ಅನ್ನೋದು ಆಕಾಶಕ್ಕಿಂತಲೂ ಮಿಗಿಲು. ಅಪ್ಪನ ಬಿಸಿಯುಸಿರು, ಅಪ್ಪನ ಅಪ್ಪುಗೆ, ಅಪ್ಪನ ನೋವು, ಅಪ್ಪನ ಬೆವರು, ಅಪ್ಪನ ಕಾತರ, ಆತುರ, ಚಡಪಡಿಕೆ, ಆಸೆ, ಜವಾಬ್ದಾರಿ ಇತ್ಯಾದಿಗಳ ರೂಪವೇ ಈ ಫಾದರ್ ಅಂತಂದುಕೊಂಡರೂ ಅದಕ್ಕಿಂತಲೂ ಮಿಗಿಲಾಗಿದ್ದು ಈ ಫಾದರ್ ಒಳಗಿದೆ. ಇದು ಎಲ್ಲರಿಗೂ ಇಷ್ಟವಾಗುವ ಚಿತ್ರವಾಗುತ್ತೆ ಎಂಬ ಭರವಸೆ ಆರ್ ಸಿ ಸ್ಟುಡಿಯೋದ್ದು.
ಡಾರ್ಲಿಂಗ್ ಕೃಷ್ಣ ನಟನೆಯ ಫಾದರ್ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಅಮೃತಾ ಅಯ್ಯಂಗಾರ್ (Amrutha iyengar). ಈ ನಟನ ಜೊತೆ ಎರಡನೇ ಬಾರಿ ಇವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಇದೊಂದು ವಿಶೇಷ ಪಾತ್ರವಾಗಿದ್ದು, ಚಿತ್ರದುದ್ದಕ್ಕೂ ಮೇಕಪ್ ಇಲ್ಲದೇ ನಟಿಸುವಂತಹ ಪಾತ್ರ ಅದಾಗಿದೆ ಎಂದಿದ್ದಾರೆ. ಇಂಥದ್ದೊಂದು ಪಾತ್ರ ಸಿಕ್ಕಿರೋದಕ್ಕೆ ಖುಷಿಯಾಗುತ್ತಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಇನ್ನು ಚಂದ್ರು ಕಂಟೆಂಟ್‌ಗೆ ಬೆಲೆ ಕೊಡ್ತಾರೆ. ಆ ಕಾರಣಕ್ಕೆ ಬಿಗ್ ಬಜೆಟ್ ಆಗಿದ್ದರೂ, ನಿರ್ದೇಶಕ ರಾಜ ಮೋಹನ್ ಎಂಬುವವರನ್ನು ಕನ್ನಡಕ್ಕೆ ಕರೆದು ಅವಕಾಶ ಕೊಡುತ್ತಿದ್ದಾರೆ. ಆ ನಿರ್ದೇಶಕನಿಗೆ ಪ್ಯಾನ್ ಇಂಡಿಯಾ ಸಿನಿಮಾ ಮಾಡಲು ಅವಕಾಶ ಕೊಟ್ಟ ಚಂದ್ರು ಕೂಡ ಸಿನಿಮಾದ ಗಾಡ್ ಫಾದರ್ ಇದ್ದಂತೆ. ಈ ಮಾತು ಅತಿಶಯೋಕ್ತಿಯಲ್ಲ.
ಕನ್ನಡದ ಹೆಸರಾಂತ ನಿರ್ದೇಶಕ, ನಿರ್ಮಾಪಕ ಆರ್.ಚಂದ್ರು (R. Chandru) ಕಳೆದ ತಿಂಗಳವಷ್ಟೇ ಐದು ಸಿನಿಮಾಗಳನ್ನು ಘೋಷಣೆ ಮಾಡಿದ್ದರು. ಮೊದಲ ಚಿತ್ರವಾಗಿ ಫಾದರ್ (Father) ಸೆಟ್ಟೇರಲಿದೆ. ಏಪ್ರಿಲ್ ತಿಂಗಳ ಕೊನೆಯಲ್ಲಿ ವಾರದಿಂದ ಚಿತ್ರೀಕರಣವನ್ನು (Shooting) ಆರಂಭಿಸುವುದಾಗಿ ಚಿತ್ರತಂಡ ಹೇಳಿದೆ. ಆರಂಭವಾಗಲಿರುವ ಈ ಚಿತ್ರದಲ್ಲಿ ಹೆಸರಾಂತ ತಾರಾ ಬಳಗವೇ ಇದೆ.
ಡಾರ್ಲಿಂಗ್ ಕೃಷ್ಣ (Darling Krishna) ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದರೆ, ತಂದೆಯ ಪಾತ್ರದಲ್ಲಿ ಹೆಸರಾಂತ ನಟ ಪ್ರಕಾಶ್ ರೈ (Prakash Rai) ಅಭಿನಯಿಸುತ್ತಿದ್ದಾರೆ. ಅಪ್ಪ – ಮಗನ ಬಾಂಧವ್ಯದ ಚಿತ್ರವಿದು. ತೆಲುಗಿನ ಸುನೀಲ್ ಸೇರಿದಂತೆ ದಕ್ಷಿಣ ಭಾರತದ ಖ್ಯಾತ ನಟರು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಒಟ್ಟಿನಲ್ಲಿ ಇದೇ ವರ್ಷ ಐದು ಚಿತ್ರಗಳಿಗೂ ಚಾಲನೆ ಸಿಗಲಿದೆ ಎನ್ನುವುದು ಚಂದ್ರು ಮಾತು.
ಡಾರ್ಲಿಂಗ್ ಕೃಷ್ಣ ಮತ್ತು ಪ್ರಕಾಶ್ ರೈ ಕಾಂಬಿನೇಷನ್ ನ ಮೊದಲ ಸಿನಿಮಾವಿದು. ಈ ಸಿನಿಮಾ ಕೂಡ ಪ್ಯಾನ್ ಇಂಡಿಯಾ ಪರಿಕಲ್ಪನೆಯಲ್ಲಿ ಮೂಡಿ ಬರಲಿದೆ. ಸದ್ಯಕ್ಕೆ ಇಷ್ಟೇ ಮಾಹಿತಿಯನ್ನು ನೀಡಿರುವ ಚಂದ್ರು, ಮುಂದಿನ ದಿನಗಳಲ್ಲಿ ನಾಯಕಿ ಮತ್ತು ತಂತ್ರಜ್ಞರ ವಿವರನ್ನು ನೀಡಲಿದ್ದಾರಂತೆ.
ಈ ಸಿನಿಮಾದ ನಂತರ ಚಂದ್ರು ಮತ್ತೊಂದು ಮೆಗಾ ಪ್ರಾಜೆಕ್ಟ್ ಅನ್ನು ಕೈಗೆತ್ತಿಕೊಳ್ಳಲಿದ್ದಾರೆ. ಅದು ಕೂಡ ಭಾರೀ ಬಜೆಟ್ ಅನ್ನು ಹೊಂದಿರುವ ಸಿನಿಮಾವಾಗಿದ್ದು, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ಮೂಡಿ ಬರಲಿದೆ. ಈಗಾಗಲೇ ಸಿನಿಮಾದ ಸ್ಕ್ರಿಪ್ಟ್ ಕೆಲಸದಲ್ಲಿ ಅವರು ತೊಡಗಿಕೊಳ್ಳಲಿದ್ದಾರೆ.
ಕನ್ನಡದ ಹೆಸರಾಂತ ನಿರ್ದೇಶಕ, ನಿರ್ಮಾಪಕ ಆರ್.ಚಂದ್ರು (R. Chandru) ಕಳೆದ ತಿಂಗಳವಷ್ಟೇ ಐದು ಸಿನಿಮಾಗಳನ್ನು ಘೋಷಣೆ ಮಾಡಿದ್ದರು. ಮೊದಲ ಚಿತ್ರವಾಗಿ ಫಾದರ್ (Father) ಸೆಟ್ಟೇರಲಿದೆ. ಚಂದ್ರು ತಮ್ಮ ಹುಟ್ಟು ಹಬ್ಬದಂದು ಈ ಸಿನಿಮಾದ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ತಿಂಗಳ ಕೊನೆಯಲ್ಲಿ ಆರಂಭವಾಗಲಿರುವ ಈ ಚಿತ್ರದಲ್ಲಿ ಹೆಸರಾಂತ ತಾರಾ ಬಳಗವೇ ಇದೆ.
ಡಾರ್ಲಿಂಗ್ ಕೃಷ್ಣ (Darling Krishna) ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದರೆ, ತಂದೆಯ ಪಾತ್ರದಲ್ಲಿ ಹೆಸರಾಂತ ನಟ ಪ್ರಕಾಶ್ ರೈ (Prakash Rai) ಅಭಿನಯಿಸುತ್ತಿದ್ದಾರೆ. ಅಪ್ಪ – ಮಗನ ಬಾಂಧವ್ಯದ ಚಿತ್ರವಿದು. ತೆಲುಗಿನ ಸುನೀಲ್ ಸೇರಿದಂತೆ ದಕ್ಷಿಣ ಭಾರತದ ಖ್ಯಾತ ನಟರು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಒಟ್ಟಿನಲ್ಲಿ ಇದೇ ವರ್ಷ ಐದು ಚಿತ್ರಗಳಿಗೂ ಚಾಲನೆ ಸಿಗಲಿದೆ ಎನ್ನುವುದು ಚಂದ್ರು ಮಾತು.
ಡಾರ್ಲಿಂಗ್ ಕೃಷ್ಣ ಮತ್ತು ಪ್ರಕಾಶ್ ರೈ ಕಾಂಬಿನೇಷನ್ ನ ಮೊದಲ ಸಿನಿಮಾವಿದು. ಈ ಸಿನಿಮಾ ಕೂಡ ಪ್ಯಾನ್ ಇಂಡಿಯಾ ಪರಿಕಲ್ಪನೆಯಲ್ಲಿ ಮೂಡಿ ಬರಲಿದೆ. ಸದ್ಯಕ್ಕೆ ಇಷ್ಟೇ ಮಾಹಿತಿಯನ್ನು ನೀಡಿರುವ ಚಂದ್ರು, ಮುಂದಿನ ದಿನಗಳಲ್ಲಿ ನಾಯಕಿ ಮತ್ತು ತಂತ್ರಜ್ಞರ ವಿವರನ್ನು ನೀಡಲಿದ್ದಾರಂತೆ.
ಈ ಸಿನಿಮಾದ ನಂತರ ಚಂದ್ರು ಮತ್ತೊಂದು ಮೆಗಾ ಪ್ರಾಜೆಕ್ಟ್ ಅನ್ನು ಕೈಗೆತ್ತಿಕೊಳ್ಳಲಿದ್ದಾರೆ. ಅದು ಕೂಡ ಭಾರೀ ಬಜೆಟ್ ಅನ್ನು ಹೊಂದಿರುವ ಸಿನಿಮಾವಾಗಿದ್ದು, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ಮೂಡಿ ಬರಲಿದೆ. ಈಗಾಗಲೇ ಸಿನಿಮಾದ ಸ್ಕ್ರಿಪ್ಟ್ ಕೆಲಸದಲ್ಲಿ ಅವರು ತೊಡಗಿಕೊಳ್ಳಲಿದ್ದಾರೆ.
ನವದೆಹಲಿ: ತಾಯಿ-ಮಗಳು ಚರ್ಚ್‍ಗೆ ತೆರಳಿದ ವೇಳೆ ಪಾದ್ರಿ ಪುಟ್ಟ ಬಾಲಕಿಗೆ ಆಶೀರ್ವದಿಸಲು ಮುಂದಾಗಿದ್ದು, ಪಾದ್ರಿ ಕೈ ಮುಂದೆ ತರುತ್ತಿದ್ದಂತೆ ತನ್ನ ಕೈ ಸೇರಿಸಿ ಬಾಲಕಿ ಹೈ ಫೈ ಮಾಡಿದ್ದಾಳೆ. ಈ ಕ್ಯೂಟ್ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.
ಈ ವಿಡಿಯೋವನ್ನು ಮಾಜಿ ಬಾಸ್ಕೆಟ್ ಬಾಲ್ ಆಟಗಾರ ರೆಕ್ಸ್ ಚಪ್‍ಮಾನ್ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಫಾದರ್ ಆಶೀರ್ವದಿಸಲು ಕೈ ಮುಂದೆ ತಂದರೆ, ಮುಗ್ಧ ಬಾಲಕಿ ಹೈ ಫೈ ಮಾಡುತ್ತಾಳೆ. ಆಗ ಫಾದರ್ ನಗು ತಡೆಯಲು ಯತ್ನಿಸುತ್ತಾರೆ. ತುಂಬಾ ಒಳ್ಳೆಯದನ್ನು ನೀವು ಇಂದು ನೋಡುತ್ತಿದ್ದೀರಿ ಎಂದು ಬರೆದುಕೊಂಡಿದ್ದಾರೆ.
ವಿಡಿಯೋದಲ್ಲಿ ಏನಿದೆ?
ಪುಟ್ಟ ಬಾಲಕಿ ತನ್ನ ತಾಯಿಯೊಂದಿಗೆ ಚರ್ಚ್‍ಗೆ ತೆರಳಿದ್ದಾಳೆ. ಈ ವೇಳೆ ಚರ್ಚ್‍ನ ಫಾದರ್ ಆಶೀರ್ವಾದ ಪಡೆಯಲು ತೆರಳಿದ್ದಾರೆ. ಅದೇ ರೀತಿ ಫಾದರ್ ಸಹ ಬಾಲಕಿಗೆ ಆಶೀರ್ವಾದ ಮಾಡಲು ಕೈ ಮುಂದೆ ತಂದಿದ್ದು, ಇದನ್ನು ಗಮನಿಸಿದ ಕ್ಯೂಟ್ ಬೇಬಿ ಸಹ ತನ್ನ ಕೈ ಮುಂದೆ ತಂದಿದ್ದಾಳೆ. ಅಲ್ಲದೆ ಅವರಿಗೆ ಹೈ ಫೈ ಮಾಡಿದ್ದಾಳೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ಕಮೆಂಟ್ ಮಾಡುವ ಮೂಲಕ ಹಲವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಬಾಲಕಿಯ ಮುಗ್ಧತೆ ಕಂಡು ಫಾದರ್ ಬೆರಗಾಗಿದ್ದು, ನಗುವಿನಲ್ಲಿ ತೇಲುವಂತೆ ಮಾಡಿದೆ. ನಂತರ ಮುಖವನ್ನು ಕೈಯಿಂದ ಮುಚ್ಚಿಕೊಂಡು ಬಾಲಕಿಗೆ ಆಶೀರ್ವದಿಸುತ್ತಾರೆ.
ಈ ವಿಡಿಯೋ ನಿರೀಕ್ಷೆಯಂತೆ ಸಖತ್ ವೈರಲ್ ಆಗಿದ್ದು, 22 ಲಕ್ಷ ಬಾರಿ ವೀಕ್ಷಣೆಯಾಗಿದೆ. 29,100ಕ್ಕೂ ಅಧಿಕ ಜನ ಲೈಕ್ ಮಾಡಿದ್ದಾರೆ. ಅಲ್ಲದೆ 6,300ಕ್ಕೂ ಹೆಚ್ಚು ಜನ ರೀಟ್ವೀಟ್ ಮಾಡಿದ್ದಾರೆ. ಬಾಲಕಿ ಹೈ ಫೈ ಮಾಡಿರುವುದು, ಫಾದರ್ ನಗುವಿನಲ್ಲಿ ತೇಲಿರುವ ದೃಶ್ಯ ನೆಟ್ಟಿಗರ ಹೃದಯ ಗೆದ್ದಿದೆ.
ಚಿಕ್ಕ ವಯಸ್ಸಿನಲ್ಲಿ ಪ್ರತಿಯೊಬ್ಬರಿಗೂ ಹೈ ಫೈ ಮಾಡುವುದು ಕಲಿಸಿಲ್ಲ ಎಂದಾದರೆ ನೀವು ಸರಿಯಾಗಿ ಬೆಳೆದಿಲ್ಲ ಎಂದರ್ಥ ಎಂದು ಬಳಕೆದಾರರೊಬ್ಬರು ಕಮೆಂಟ್ ಮಾಡಿದ್ದಾರೆ. ಚರ್ಚ್‍ನಲ್ಲಿ ಗಂಭೀರ ಕ್ಷಣದ ಮಧ್ಯೆ ನಗುವುದಕ್ಕಿಂತ ಇನ್ನಾವುದೇ ನಗುವನ್ನು ಹಿಡಿದಿಡಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದಾರೆ.
ಮಗುವಿನ ಕಣ್ಣಿನ ಮೂಲಕ ಪ್ರಪಂಚ ನೋಡುವುದು ಅದ್ಭುತ ಕ್ಷಣ ಎಂದು ಮೂರನೇಯವರು ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ನೋಡಿ ಚರ್ಚ್‍ನ ವ್ಯವಸ್ಥೆಯಲ್ಲಿಯೂ ನಮಗೆ ಸ್ವಲ್ಪ ಮಟ್ಟಿನ ಅವಶ್ಯಕತೆ ಇದೆ. ಒಳ್ಳೆಯ ಫಾದರ್ ತಮ್ಮ ಇತರ ಅನುಯಾಯಿಗಳಿಗೂ ಇದೇ ರೀತಿ ಹೇಳಿಕೊಡುತ್ತಾರೆ ಎಂಬ ನಂಬಿಕೆ ನನಗಿದೆ ಎಂದು ಹೇಳಿದ್ದಾರೆ.
ತಿರುವಂತನಪುರಂ: ಫಾದರ್ ಓರ್ವ ಚರ್ಚ್‌ನಲ್ಲಿಯೇ ಮಹಿಳೆಯೊಂದಿಗೆ ಸೆಕ್ಸ್ ಮಾಡಿದ್ದು, ಆ ಅಶ್ಲೀಲ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಮೂಲಕ ಫಾದರ್ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿರುವ ಘಟನೆ ಕೇರಳದಲ್ಲಿ ನಡೆದಿದೆ.
ಇಡುಕ್ಕಿ ಜಿಲ್ಲೆಯ ಕ್ಯಾಥೊಲಿಕ್ ಚರ್ಚ್ ನ ಪಾದ್ರಿ ಜೇಮ್ಸ್ ಮಂಗಲಾಶೇರಿಯ ಅಶ್ಲೀಲ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಕೇರಳದ ಇಡುಕ್ಕಿ ಜಿಲ್ಲೆಯ ಮೊಬೈಲ್ ಫೋನ್ ಅಂಗಡಿಯೊಂದರಿಂದ ಈ ಫೋಟೋಗಳು ಆನ್‍ಲೈನ್‍ನಲ್ಲಿ ಲೀಕ್ ಆಗಿವೆ ಎಂದು ಹೇಳಲಾಗುತ್ತಿದೆ. ಆದರೆ ಅಂಗಡಿಯ ಮಾಲೀಕ ಈ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
ಫಾದರ್ ತನ್ನ ಮೊಬೈಲ್ ಫೋನ್ ಅನ್ನು ರಿಪೇರಿಗಾಗಿ ಮೊಬೈಲ್ ಅಂಗಡಿಗೆ ಕೊಡಲಾಗಿದೆ. ಆಗ ಅಶ್ಲೀಲ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆಗಿದೆ. ಆದರೆ ಅಂಗಡಿ ಮಾಲೀಕ ನಮ್ಮ ಅಂಗಡಿಯಿಂದ ಫೋಟೋಗಳು ಲೀಕ್ ಆಗಿಲ್ಲ ಎಂದು ಆರೋಪವನ್ನು ತಳ್ಳಿ ಹಾಕಿದ್ದಾರೆ.
ಈಗಾಗಲೇ ಫಾದರ್ ವಿರುದ್ಧ ಚರ್ಚ್ ಕ್ರಮ ಕೈಗೊಂಡಿದೆ. “ಮಾರ್ಚ್ 24, 2020 ರಂದು ಮಂಗಲಾಶೇರಿಯನ್ನು ಅಮಾನತುಗೊಳಿಸಲಾಗಿದೆ. ಅಲ್ಲದೇ ಈ ಕುರಿತು ತನಿಖೆ ಕೂಡ ನಡೆಯುತ್ತಿದೆ” ಎಂದು ಚರ್ಚ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.
ಫಾದರ್ ಜೊತೆಗಿದ್ದ ಮಹಿಳೆ ಎರಡು ಮಕ್ಕಳ ತಾಯಿ ಎಂದು ತಿಳಿದುಬಂದಿದೆ. ಸುಮಾರು ಎರಡು ತಿಂಗಳಿನಿಂದ ಈ ಇಬ್ಬರು ಸಂಬಂಧ ಹೊಂದಿದ್ದರು. ಆದರೆ ಈಗ ಇವರ ಕಾಮದಾಟ ಬಯಲಾಗಿದೆ. ಫೋಟೋಗಳು ಲೀಕ್ ಆಗುವ ಮೊದಲೇ ಫಾದರ್ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಎರ್ನಾಕುಲಂ ಜಿಲ್ಲೆಯೊಂದರ ಆಶ್ರಮಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.
ಇದರುವರೆಗೂ ಫಾದರ್ ಅಥವಾ ಮಹಿಳೆಯಿಂದ ಯಾವುದೇ ದೂರು ಬಂದಿಲ್ಲ. ಮೊಬೈಲ್ ಫೋನ್ ಅಂಗಡಿ ಮಾಲೀಕರು ನೀಡಿದ ದೂರಿನ ಆಧಾರದ ಮೇರೆಗೆ ತನಿಖೆ ನಡೆಸಲಾಗುತ್ತಿದೆ ಎಂದು ಸರ್ಕಲ್ ಇನ್ಸ್ ಪೆಕ್ಟರ್ ಹೇಳಿದರು.
ಉಡುಪಿ: ಗುಡ್ ಫ್ರೈಡೇ ದಿನವೇ ಚರ್ಚಿನ ಧರ್ಮಗುರು ಮತ್ತು ಪ್ರಾರ್ಥನೆಯಲ್ಲಿ ಪಾಲ್ಗೊಂಡವರ ಮೇಲೆ ಕೇಸು ದಾಖಲಾಗಿದೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನಲ್ಲಿ ಈ ಘಟನೆ ನಡೆದಿದೆ.
ಪಡುಕೋಣೆಯಲ್ಲಿ ಗುಡ್ ಫ್ರೈಡೇ ಹಿನ್ನೆಲೆಯಲ್ಲಿ ಇಂದು ಸಾಮೂಹಿಕ ಪ್ರಾರ್ಥನೆ ನಡೆದಿದೆ. ಧರ್ಮಗುರು ಮತ್ತು ಆರು ಜನರ ಮೇಲೆ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಪಡುಕೋಣೆಯ ಸಂತ ಅಂತೋನಿ ಚರ್ಚ್‍ನಲ್ಲಿ ಇಂದು ಗುಡ್ ಫ್ರೈಡೇ ಪ್ರಾರ್ಥನೆ ನಡೆದಿತ್ತು. ಬೈಂದೂರು ತಾಲೂಕು ನಾಡ ಗ್ರಾಮದಲ್ಲಿರುವ ಚರ್ಚ್ ಧರ್ಮಗುರು ಮತ್ತು ಆರು ಮಂದಿ ಬೆಳಗ್ಗಿನ ಪ್ರಾರ್ಥನೆಯನ್ನು ಚರ್ಚ್ ಹಾಲ್ ನಲ್ಲಿ ನೆರವೇರಿಸಿದ್ದರು.
ಸಾರ್ವಜನಿಕವಾಗಿ ಬಂದ ದೂರಿನ ಹಿನ್ನೆಲೆಯಲ್ಲಿ ಫಾದರ್ ಫ್ರೆಡ್ ಮಸ್ಕರೇನಸ್ ಹಾಗೂ ಆರು ಮಂದಿ ಪ್ರಾರ್ಥನೆ ಮಾಡಿದವರ ಮೇಲೆ ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಯಾರೂ ಸಾಮೂಹಿಕ ಪ್ರಾರ್ಥನೆ ನಡೆಸದಂತೆ ಬಿಷಪ್ ಅವರು ಕೂಡ ಆದೇಶಿಸಿದ್ದರು. ಈ ನಡುವೆಯೂ ಪ್ರಾರ್ಥನೆ ನೆರವೇರಿಸಿದ್ದಕ್ಕೆ ಉಡುಪಿಯ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.