Tag: ಫಾದರ್ ಮುಲ್ಲರ್ ಆಸ್ಪತ್ರೆ

  • ಕುಕ್ಕರ್ ಬಾಂಬರ್ ಶಾರೀಕ್ ಹತ್ಯೆಗೆ ಸಂಚು ಶಂಕೆ- ಆಸ್ಪತ್ರೆ ಸುತ್ತ ಹೆಚ್ಚಿದ ಭದ್ರತೆ

    ಕುಕ್ಕರ್ ಬಾಂಬರ್ ಶಾರೀಕ್ ಹತ್ಯೆಗೆ ಸಂಚು ಶಂಕೆ- ಆಸ್ಪತ್ರೆ ಸುತ್ತ ಹೆಚ್ಚಿದ ಭದ್ರತೆ

    ಮಂಗಳೂರು: ಸೂಸೈಡ್ ಬಾಂಬರ್ ಶಾರೀಕ್ (Cooker Bomb Blast) ಹತ್ಯೆಗೆ ಸಂಚು ನಡೆಯುತ್ತಿದೆ ಅನ್ನೋ ಮಾಹಿತಿ ಹೊರಬಿದ್ದಿದೆ. ಐಸಿಆರ್ ಮಾಡಿದ ಪೋಸ್ಟ್ ನಲ್ಲೇ ಉಗ್ರರು ಈ ಹತ್ಯೆಯ ಸುಳಿವು ನೀಡಿದ್ದಾರೆ. ಇದೇ ಕಾರಣಕ್ಕೆ ಶಾರೀಕ್ ಚಿಕಿತ್ಸೆ ಪಡೆಯಿತ್ತಿರೋ ಆಸ್ಪತ್ರೆಗೆ ಪೊಲೀಸರು ಭಾರೀ ಬಂದೋಬಸ್ತ್ ನೀಡಿದ್ದಾರೆ.

    ಕರಾವಳಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಆತ್ಮಾಹುತಿ ದಾಳಿಕೋರ ಶಾರೀಕ್‍ನ ಒಂದೊಂದೇ ಉಗ್ರ ಸತ್ಯಗಳು ಬಯಲಾಗ್ತಿದೆ. ಇದರ ಮಧ್ಯೆ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಿರುವ ಉಗ್ರ ಶಾರೀಕ್‍ನನ್ನೂ ಹತ್ಯೆಗೆ ಸಂಚಿನ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ತುಂಗಾತೀರದಲ್ಲಿ ಮಾತ್ರವಲ್ಲ, ಚಾರ್ಮಾಡಿ ತಪ್ಪಲಿನಲ್ಲೂ ನಡೀತಾ ಟ್ರಯಲ್ ಬ್ಲಾಸ್ಟ್?

    ಹ್ಯಾಂಡ್ಲರ್ ಗಳು ಸ್ಲೀಪರ್ ಸೆಲ್‍ಗಳನ್ನು ಆಕ್ಟೀವ್ ಮಾಡಿಸಿ ದಾಳಿ ನಡೆಸೋ ಸಾಧ್ಯತೆ ಇದೆ. ಶಾರೀಕ್‍ನೊಂದಿಗೆ ಬ್ಯಾಗ್ ಹಾಕಿಕೊಂಡು ಬಂದವನೂ ನಾಪತ್ತೆ ಆಗಿರೋದ್ರಿಂದ ಆತಂಕ ಹೆಚ್ಚಿದೆ. ಹೀಗಾಗಿ ಶಾರೀಕ್ ಚಿಕಿತ್ಸೆ ಪಡೀತಿರೋ ಮಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ. ಶಾರೀಕ್ ಕೊಠಡಿ ಪ್ರವೇಶದ ಬಳಿ ಮೆಟಲ್ ಡಿಟೆಕ್ಟರ್ ಅಳವಡಿಸಿದ್ದು, ಉಗ್ರ ಶಾರೀಕ್ ಚಿಕಿತ್ಸೆಗೆ ಸ್ಪಂದಿಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಇವಿಷ್ಟೇ ಅಲ್ಲದೇ ಶಾರಿಕ್ ಮೊಬೈಲ್‍ (Shariq Mobile) ನಲ್ಲಿ ಪತ್ತೆಯಾದ 1,200 ವೀಡಿಯೋಗಳು, ಬಾಂಬ್ ತಯಾರಿಕೆ, ಪ್ರಚೋದನೆ, ಐಸಿಸ್, ಅಲ್‍ಖೈದಾ ವಿಡಿಯೋ ಬಗ್ಗೆ ಪೊಲೀಸರು ತನಿಖೆ ನಡೆಸ್ತಿದ್ದಾರೆ. ಬಹುತೇಕ ಕ್ಯಾಶ್ ವ್ಯವಹಾರವೇ ಮಾಡುತ್ತಿದ್ದ ಶಾರೀಕ್ ದಿನವಿಡೀ ಮೊಬೈಲ್‍ನಲ್ಲೇ ವೀಡಿಯೋಗಳನ್ನು ನೋಡ್ತಿದ್ದ. ಮನೆಯವ್ರಿಗೆ ಟಿವಿ ನೋಡಲೂ ಬಿಡುತ್ತಿರಲಿಲ್ವಂತೆ. 4 ವರ್ಷಗಳಿಂದ ಈ ರೀತಿ ವಿಚಿತ್ರವಾಗಿ ವರ್ತಿಸುತ್ತಿದ್ದ ಅಂತ ಶಾರೀಕ್ ಕುಟುಂಬಸ್ಥರು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ. ಇದನ್ನೂ ಓದಿ: ಬಾಂಬ್ ತಂದಿದ್ದು ಒಬ್ಬನ್ನಲ್ಲ, ಇಬ್ಬರು- ತನಿಖೆ ವೇಳೆ ಸ್ಫೋಟಕ ಮಾಹಿತಿ ಬಯಲು

    ಒಟ್ಟಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಅತೀ ಮುಖ್ಯ ಸಾಕ್ಷಿ ಶಾರೀಕ್‍ನನ್ನು ಜೀವಂತವಾಗಿ ಉಳಿಸಲು ಪೊಲೀಸರು ಮತ್ತು ವೈದ್ಯರು ಶತಾಯಗತಾಯ ಪ್ರಯತ್ನ ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಉಡುಪಿಯ ಕಾಂಗ್ರೆಸ್ ನಾಯಕಿಗೆ ಚಾಕು ಇರಿತ

    ಉಡುಪಿಯ ಕಾಂಗ್ರೆಸ್ ನಾಯಕಿಗೆ ಚಾಕು ಇರಿತ

    ಉಡುಪಿ: ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿಸೋಜಾ ಅವರಿಗೆ ವ್ಯಕ್ತಿಯೋರ್ವ ಚೂರಿಯಿಂದ ಇರಿದು ಹಲ್ಲೆ ಮಾಡಿದ್ದಾನೆ.

    ಕಳೆದ ರಾತ್ರಿ ಮನೆ ಪಕ್ಕದಲ್ಲಿ ರೀನಾ ಡಿಸೋಜಾ ಅವರು ತನ್ನ ಗೆಳತಿ ಜೊತೆ ಮಾತನಾಡುತ್ತಿದ್ದಾಗ, ಕುಡಿತದ ಚಟ ಹೊಂದಿದ್ದ ನೆರೆಮನೆಯ ಸುಮಾರು 45 ವರ್ಷದ ವ್ಯಕ್ತಿ ಕ್ಷುಲ್ಲಕ ಕಾರಣಕ್ಕೆ ಜಗಳಕ್ಕಿಳಿದಿದ್ದಾನೆ. ಮಾತಿನ ಚಕಮಕಿ ನಡೆಯುವ ಸಂದರ್ಭದಲ್ಲಿ ನೇರವಾಗಿ ರೀನಾ ಅವರಿಗೆ ಚಾಕು ಇರಿದಿದ್ದಾನೆ.

    ALCOHOL

    ಕೂಡಲೇ ಸ್ಥಳೀಯರು ರೀನಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ರಕ್ತಸ್ರಾವವಾದ ಕಾರಣ ರೀನಾ ಅವರನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಇದನ್ನೂ ಓದಿ: ಕ್ಲಬ್‍ಹೌಸ್ ಆ್ಯಪ್ ಚಾಟ್ ಪ್ರಕರಣ – 18ರ ಯುವಕ ಅರೆಸ್ಟ್

    ಪ್ರಸ್ತುತ ರೀನಾ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಸ್ಥಳೀಯ ಕಾಂಗ್ರೆಸ್ ಮುಖಂಡರು ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ಪೆÇಲೀಸರು ವಶಕ್ಕೆ ಪಡೆದುಕೊಂಡಿದ್ದು, ನಾನು ಕುಡಿತ ಬಿಡುವ ಕೋರ್ಸ್ ಮಾಡುತ್ತಿದ್ದೇನೆ. ಅದಕ್ಕೆ ಈ ವೇಳೆ ಸ್ಥಿಮಿತ ಕಳೆದುಕೊಂಡು ಹೀಗೆ ಮಾಡಿದ್ದೇನೆ ಎಂದು ಪೊಲೀಸರಲ್ಲಿ ಹೇಳಿಕೊಂಡಿದ್ದಾನೆ. ಪಡುಬಿದ್ರೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.