Tag: ಫಾರೂಕ್ ಅಬ್ದುಲ್ಲಾ

  • ಶೀಘ್ರವೇ ಸರ್ಕಾರ ಕ್ರಮ ಕೈಗೊಳ್ಳದಿದ್ರೆ ಕಾಶ್ಮೀರದಲ್ಲಿ ಹಿಂದೂಗಳೇ ಇರುವುದಿಲ್ಲ: ಫಾರೂಕ್ ಅಬ್ದುಲ್ಲಾ

    ಶೀಘ್ರವೇ ಸರ್ಕಾರ ಕ್ರಮ ಕೈಗೊಳ್ಳದಿದ್ರೆ ಕಾಶ್ಮೀರದಲ್ಲಿ ಹಿಂದೂಗಳೇ ಇರುವುದಿಲ್ಲ: ಫಾರೂಕ್ ಅಬ್ದುಲ್ಲಾ

    ಶ್ರೀನಗರ: ಕೇಂದ್ರಾಡಳಿತ ಪ್ರದೇಶದಲ್ಲಿ ಕಾಶ್ಮೀರಿ ಪಂಡಿತರ (Kashmiri Pandits) ಹತ್ಯೆಗಳು ಹೆಚ್ಚುತ್ತಿದೆ. ಈ ಹಿನ್ನೆಲೆ ಶೀಘ್ರದಲ್ಲಿಯೇ ಸರ್ಕಾರ ಏನನ್ನು ಮಾಡದೇ ಹೋದರೆ ಕಾಶ್ಮೀರದಲ್ಲಿ ಖಂಡಿತ 100% ಹಿಂದೂಗಳು ಕಡಿಮೆಯಾಗುತ್ತಾರೆ ಎಂದು ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (ಜೆಕೆಎನ್‍ಸಿ) (Jammu and Kashmir National Conference) ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ (Farooq Abdullah) ಹೇಳಿದ್ದಾರೆ.

    ಈ ಕುರಿತಂತೆ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು, 1990ರಲ್ಲಿ ಸಂಭವಿಸಿದ್ದ ಪರಿಸ್ಥಿತಿಗಳು ಕಾಶ್ಮೀರಿ ಪಂಡಿತರಿಗೆ ಪುನಃ ಬಂದಿದೆ. ಈ ವಿಚಾರವಾಗಿ ಸರ್ಕಾರ ಕೂಡಲೇ ಏನ್ನಾನಾದರೂ ಮಾಡಲಿಲ್ಲ ಎಂದರೆ ಮುಂದಿನ ದಿನಗಳಲ್ಲಿ ಕಾಶ್ಮೀರದಲ್ಲಿ ಶೇ. 100% ಹಿಂದೂಗಳು ಕಡಿಮೆಯಾಗುತ್ತಾರೆ. ಅಲ್ಲದೇ ನಾನು ಯಾವುದೇ ಭಯೋತ್ಪಾದಕರ ಪರ ಹೇಳಿಕೆಗಳನ್ನು ನೀಡಿಲ್ಲ ಎಂದು ತಿಳಿಸಿದ್ದಾರೆ.

    ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಮಧ್ಯಸ್ಥಿಕೆ ವಹಿಸಬೇಕು. ಈ ಬಗ್ಗೆ ಗಮನ ಹರಿಸಬೇಕು. ಕಾಶ್ಮೀರಿ ಪಂಡಿತರ ಉದ್ದೇಶಿತ ಹತ್ಯೆಗಳು ಮತ್ತು ಅಲ್ಪಸಂಖ್ಯಾತ ಹಿಂದೂಗಳ ವಲಸೆಯ ಬಗ್ಗೆ ಸರ್ವಪಕ್ಷ ಸಭೆಯನ್ನು ಕರೆಯಬೇಕು ಎಂದು ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸಲ್ಲ: ಫಾರೂಕ್ ಅಬ್ದುಲ್ಲಾ

    ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸಲ್ಲ: ಫಾರೂಕ್ ಅಬ್ದುಲ್ಲಾ

    ಶ್ರೀನಗರ: ರಾಷ್ಟ್ರಪತಿ ಸ್ಥಾನದ ಚುನಾವಣೆಗೆ ಸ್ಪರ್ಧಿಸುವ ಪ್ರಸ್ತಾಪವನ್ನು ನ್ಯಾಷನಲ್ ಕಾನ್ಪರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಶನಿವಾರ ತಿರಸ್ಕರಿಸಿದ್ದಾರೆ.

    ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜಂಟಿ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಫಾರೂಕ್ ಅಬ್ದುಲ್ಲಾ ಅವರ ಹೆಸರನ್ನು ಸೂಚಿಸಿದ್ದರು. ಆದರೆ ಫಾರೂಕ್ ಅಬ್ದುಲ್ಲಾ ಈ ಪ್ರಸ್ತಾಪವನ್ನು ನಿರಾಕರಿಸಿದ್ದಾರೆ ಹಾಗೂ ಜಮ್ಮು-ಕಾಶ್ಮೀರಕ್ಕೆ ಕೊಡುಗೆ ನೀಡಲು ಬಯಸುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಅಗ್ನಿಫಥ್‌ನಿಂದ ಹೆಚ್ಚಿದ ಕಿಚ್ಚು- ನಾಲ್ಕೇ ದಿನಗಳಲ್ಲಿ 200 ಕೋಟಿ ಆಸ್ತಿ ನಷ್ಟ

    ಜಮ್ಮು ಮತ್ತು ಕಾಶ್ಮೀರದ ಈಗಿನ ಪರಿಸ್ಥಿತಿಯಲ್ಲಿ ನನ್ನ ಸಹಕಾರದ ಅಗತ್ಯವಿದೆ. ಮುಂದೆ ನನಗೆ ರಾಜಕೀಯದಲ್ಲಿ ಹಾಗೂ ಸೇವೆಯಲ್ಲಿ ಹೇರಳ ಅವಕಾಶವಿದೆ. ಹೀಗಾಗಿ ನಾನು ರಾಷ್ಟ್ರಪತಿ ಚುನಾವಣೆಗೆ ನನ್ನ ಹೆಸರನ್ನು ಹಿಂಪಡೆಯಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಅಭಾವ – ಮುಂದಿನ ವಾರದಿಂದಲೇ ಶಾಲೆಗಳು ಬಂದ್

    ಕೆಲವು ದಿನಗಳ ಹಿಂದೆ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುವ ಪ್ರಸ್ತಾಪದಿಂದ ಹಿಂದೇಟು ಹಾಕಿದ್ದರು. ಇದೀಗ ಫಾರೂಕ್ ಅಬ್ದುಲ್ಲಾ ಸ್ಪರ್ಧೆಗೆ ಹಿಂದೆ ಸರಿದಿದ್ದಾರೆ.

    Live Tv

  • ದ್ವೇಷದ ವಾತಾವರಣ ಸೃಷ್ಟಿಸಿರುವ ʼದಿ ಕಾಶ್ಮೀರ್‌ ಫೈಲ್ಸ್‌ʼ ಸಿನಿಮಾ ಬ್ಯಾನ್‌ ಮಾಡಿ: ಫಾರೂಕ್‌ ಅಬ್ದುಲ್ಲಾ ಒತ್ತಾಯ

    ದ್ವೇಷದ ವಾತಾವರಣ ಸೃಷ್ಟಿಸಿರುವ ʼದಿ ಕಾಶ್ಮೀರ್‌ ಫೈಲ್ಸ್‌ʼ ಸಿನಿಮಾ ಬ್ಯಾನ್‌ ಮಾಡಿ: ಫಾರೂಕ್‌ ಅಬ್ದುಲ್ಲಾ ಒತ್ತಾಯ

    ಶ್ರೀನಗರ: ದೇಶದಲ್ಲಿ ದ್ವೇಷದ ವಾತಾವರಣ ಸೃಷ್ಟಿಸಿರುವ ವಿವೇಕ್‌ ಅಗ್ನಿಹೋತ್ರಿ ನಿರ್ದೇಶನದ ʼದಿ ಕಾಶ್ಮೀರ್‌ ಫೈಲ್ಸ್‌ʼ ಸಿನಿಮಾವನ್ನು ನಿಷೇಧಿಸಬೇಕು ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ಒತ್ತಾಯಿಸಿದ್ದಾರೆ.

    ಆಧಾರರಹಿತ ಸನ್ನಿವೇಶಗಳನ್ನು ಸಿನಿಮಾ ಒಳಗೊಂಡಿದೆ. ನಾವು ಎಲ್‌ಜಿ ಮನೋಜ್ ಸಿನ್ಹಾ ಅವರನ್ನು ಭೇಟಿ ಮಾಡಿದ್ದೇವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವುದೇ ಈ ಸಿನಿಮಾದ ಉದ್ದೇಶ. ಪ್ರವಾಸಿಗರು ಕಣಿವೆಗೆ ಭೇಟಿ ನೀಡುತ್ತಿದ್ದರೆ, ನಿತ್ಯ ಅವರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬುಲ್ಡೋಜರ್ ಕಾರ್ಯಾಚರಣೆ- ಸ್ವಾತಂತ್ರ್ಯ ಭಾರತದ ಅತಿದೊಡ್ಡ ವಿನಾಶ: ಕೇಜ್ರಿವಾಲ್

    ನಾವು ಒಬ್ಬರಿಗೊಬ್ಬರು ಹತ್ತಿರವಾಗಬೇಕಾದರೆ, ಈ ದ್ವೇಷ ಕೊನೆಗೊಳ್ಳಬೇಕು. ಮುಸಲ್ಮಾನನೊಬ್ಬ ಹಿಂದೂ ವ್ಯಕ್ತಿಯನ್ನು ಕೊಂದು ಅವನ ರಕ್ತ ಮೆತ್ತಿಕೊಂಡಿದ್ದ ಅಕ್ಕಿಯನ್ನು ಅವನ ಹೆಂಡತಿಗೆ ತಿನ್ನಲು ಹೇಳುವ ದೃಶ್ಯ ಸಿನಿಮಾದಲ್ಲಿದೆ. ಇದು ಆಧಾರರಹಿತ ಚಲನಚಿತ್ರವಾಗಿದೆ. ಈ ಸಿನಿಮಾ ದೇಶದಲ್ಲಿ ದ್ವೇಷವನ್ನು ಬಿತ್ತುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸಹಕಾರಿಯಾಗುವ ಎಲ್ಲದರೊಂದಿಗೂ ನಿಲ್ಲಿರಿ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ನಾವು ಬಯಸುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವ ಸಂಜೀವ್ ಬಲ್ಯಾನ್ ಮೇಲೆ ಮಸಿ ಎರಚಿದ ಕೈ ಕಾರ್ಯಕರ್ತರು

    ಕಾಶ್ಮೀರಿ ಪಂಡಿತ್ ಮತ್ತು ಸರ್ಕಾರಿ ನೌಕರ ರಾಹುಲ್ ಭಟ್ ಅವರು ಈಚೆಗೆ ಉಗ್ರರ ಗುಂಡಿಗೆ ಹತ್ಯೆಯಾದರು. ಹತ್ಯೆಗೆ ಸ್ಥಳೀಯರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

  • ಪಂಡಿತನ ಮೇಲಿನ ದಾಳಿಯಲ್ಲ, ಅದು ಕಾಶ್ಮೀರದ ಆತ್ಮದ ಮೇಲಿನ ದಾಳಿ: ಫಾರೂಕ್ ಅಬ್ದುಲ್ಲಾ

    ಪಂಡಿತನ ಮೇಲಿನ ದಾಳಿಯಲ್ಲ, ಅದು ಕಾಶ್ಮೀರದ ಆತ್ಮದ ಮೇಲಿನ ದಾಳಿ: ಫಾರೂಕ್ ಅಬ್ದುಲ್ಲಾ

    ಶ್ರೀನಗರ: ಕಾಶ್ಮೀರಿ ಪಂಡಿತರ ಮೇಲಿನ ಪ್ರತಿಯೊಂದು ದಾಳಿಯು ಕಾಶ್ಮೀರದ ಆತ್ಮದ ಮೇಲೆಯೇ ದಾಳಿ ಮಾಡಿದಂತಾಗುತ್ತದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದರು.

    ಸಂವಾದದಲ್ಲಿ ಮಾತನಾಡಿದ ಅವರು, ಕಾಶ್ಮೀರಿ ಪಂಡಿತರ ಹತ್ಯೆಗಳು ಕಣಿವೆಯಲ್ಲಿ ಹೆಚ್ಚಳವಾಗುತ್ತಿದ್ದರೂ, ಇದರ ವಿರುದ್ಧವಾಗಿ ಸರ್ಕಾರದ ಹೇಳಿಕೆಯನ್ನು ನೀಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

    ಪಂಡಿತ ಸಹೋದರರ ಮೇಲಿನ ಪ್ರತಿಯೊಂದು ದಾಳಿಯು ಕಾಶ್ಮೀರದ ಆತ್ಮದ ಮೇಲಿನ ದಾಳಿಯಾಗಿದೆ. ಕಾಶ್ಮೀರಿ ಮುಸ್ಲಿಮರು ಮತ್ತು ಕಾಶ್ಮೀರಿ ಪಂಡಿತರು ಇಬ್ಬರೂ ಅಕ್ಕಪಕ್ಕದಲ್ಲಿ ವಾಸಿಸುವ ಸಮಯವನ್ನು ಎದುರು ನೋಡುತ್ತಿದ್ದೇನೆ. ಆದರೆ ಪ್ರಸ್ತುತ ಸರ್ಕಾರವು ಕೇವಲ ಆಡಂಬರ, ಪ್ರದರ್ಶನ ತೋರಿಸುತ್ತಿದೆಯೇ ವಿನಃ ಮತ್ತು ಶಾಶ್ವತ ವಾಪಸಾತಿಗೆ ಅನುವು ಮಾಡಿಕೊಡುವ ವಾತಾವರಣವನ್ನು ಸೃಷ್ಟಿಸಲು ಯಾವುದೇ ಪ್ರಯತ್ನಗಳನ್ನು ತೆಗೆದುಕೊಳ್ಳಲಾಗುತ್ತಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಹ್ಯಾರೀಸ್ ಅಂಧ ದರ್ಬಾರ್- ಗ್ರಂಥಾಲಯದ ಜಾಗದಲ್ಲಿ ಶಾಸಕರ ಕಚೇರಿ!

    ಕಾಶ್ಮೀರಿ ಪಂಡಿತ್ ಸರ್ಕಾರಿ ನೌಕರ ಮತ್ತು ಪೊಲೀಸರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಅಧಿಕಾರದಲ್ಲಿರುವ ಸರ್ಕಾರವು ರಾಜಕೀಯ ಭರವಸೆಯನ್ನು ನೀಡುತ್ತಿದೆಯೇ ಹೊರತಾಗಿ ಕಾಶ್ಮೀರದಲ್ಲಿ ಸುರಕ್ಷಿತ ಭಾವನೆಯನ್ನು ಮೂಡಿಸಲು ಏನನ್ನು ಮಾಡಿಲ್ಲ ಎಂದ ಅವರು, ಕಾಶ್ಮೀರಿ ಪಂಡಿತರು ಮಾತ್ರವಲ್ಲದೆ ಸಿಖ್ಖರು ಮತ್ತು ಇತರೆ ಅಲ್ಪ ಸಂಖ್ಯಾತರು ಕಾಶ್ಮೀರದ ಸಾಮಾಜಿಕ- ಸಾಂಸ್ಕೃತಿಕ ಪರಿಸರದ ಭಾಗವಾಗಿದ್ದಾರೆ ಎಂದರು. ಇದನ್ನೂ ಓದಿ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮತ್ತೆ ಸಕ್ರಿಯವಾಯ್ತು ದರೋಡೆ ಗ್ಯಾಂಗ್‌

    ಗುರುವಾರ ಚದೂರದಲ್ಲಿರುವ ತಹಸಿಲ್ದಾರ್‌ ಕಚೇರಿಗೆ ಭಯೋತ್ಪಾದಕರು ನುಗ್ಗಿ ಗುಮಾಸ್ತ ರಾಹುಲ್ ಭಟ್ ಮೇಲೆ ಗುಂಡು ಹಾರಿಸಿದ್ದಾರೆ. ಒಂದು ದಿನದ ನಂತರ, ಜಿಲ್ಲೆಯ ಗುಡೂರದಲ್ಲಿ ಕಾನ್‍ಸ್ಟೆಬಲ್ ರಿಯಾಜ್ ಅಹ್ಮದ್ ಥೋಕರ್ ಮೇಲೆ ಗುಂಡು ಹಾರಿಸಲಾಗಿತ್ತು. ಆಗ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.

  • ಸುಪ್ರಿಯಾ ಮೆಲು ಧ್ವನಿಯಲ್ಲಿ ಮಾತನಾಡುತ್ತಿದ್ದರು, ಕೇಳಿಸಿಕೊಳ್ಳಲು ನಾನು ಡೆಸ್ಕ್ ಮೇಲೆ ಒರಗಿದೆ

    ಸುಪ್ರಿಯಾ ಮೆಲು ಧ್ವನಿಯಲ್ಲಿ ಮಾತನಾಡುತ್ತಿದ್ದರು, ಕೇಳಿಸಿಕೊಳ್ಳಲು ನಾನು ಡೆಸ್ಕ್ ಮೇಲೆ ಒರಗಿದೆ

    ನವದೆಹಲಿ: ಸಂಸತ್ತಿನಲ್ಲಿ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಅವರೊಂದಿಗಿನ ಇತ್ತೀಚಿನ ಸಂಭಾಷಣೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಕಾಂಗ್ರೆಸ್ ಸಂಸದ ಶಶಿ ತರೂರ್ ಪ್ರತಿಕ್ರಿಯಿಸಿದ್ದಾರೆ.

    ಲೋಕಸಭೆ ಕಲಾಪದ ವೇಳೆ, ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಎದ್ದು ನಿಂತು, ಸದನವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಆದರೆ, ಅವರ ಹಿಂದೆ ಕುಳಿತಿದ್ದ ಶಶಿ ತರೂರ್, ಸಂಸದೆ ಸುಪ್ರಿಯಾ ಸುಳೆ ಅವರೊಂದಿಗೆ ಮಾತುಕತೆಯಲ್ಲಿ ಮಗ್ನರಾಗಿದ್ದರು. ಇದನ್ನು ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿದ್ದರು.

    ಈ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ತರೂರ್, ವೀಡಿಯೋ ನೋಡಿ ಆಂದಿಸುತ್ತಿರುವ ಎಲ್ಲರಿಗೂ ಸ್ಪಷ್ಟನೆ ನೀಡಲು ಬಯಸುತ್ತೇನೆ. ಲೋಕಸಭೆಯಲ್ಲಿ ಫಾರೂಕ್ ಅಬ್ದುಲ್ಲಾ ಮಾತುಕತೆ ಮುಗಿದ ಬಳಿಕ ಸುಪ್ರಿಯಾ ಮಾತನಾಡಲಿದ್ದರು. ಅದಕ್ಕಾಗಿ ಸುಪ್ರಿಯಾ, ನನ್ನ ಬಳಿ ಪ್ರಶ್ನೆಯೊಂದನ್ನು ಕೇಳುತ್ತಿದ್ದರು. ಫಾರೂಕ್ ಅವರಿಗೆ ತೊಂದರೆಯಾಗದಂತೆ ಸುಪ್ರಿಯಾ ಮೃದುವಾಗಿ ಮಾತನಾಡುತ್ತಿದ್ದರು. ಅವರ ಮಾತುಗಳನ್ನು ಕೇಳಿಸಿಕೊಳ್ಳಲು ನಾನು ಡೆಸ್ಕ್ ಮೇಲೆ ಒರಗಿದೆ ಅಷ್ಟೇ’ ಎಂದು ಹೇಳಿಕೊಂಡಿದ್ದಾರೆ.

  • ಕಾಶ್ಮೀರಿ ಪಂಡಿತರ ಹತ್ಯೆಗೆ ಕಾರಣನಾಗಿದ್ದರೆ ನನ್ನನ್ನು ನೇಣಿಗೇರಿಸಿ: ಫಾರೂಕ್ ಅಬ್ದುಲ್ಲಾ

    ಕಾಶ್ಮೀರಿ ಪಂಡಿತರ ಹತ್ಯೆಗೆ ಕಾರಣನಾಗಿದ್ದರೆ ನನ್ನನ್ನು ನೇಣಿಗೇರಿಸಿ: ಫಾರೂಕ್ ಅಬ್ದುಲ್ಲಾ

    ನವದೆಹಲಿ: 1990ರ ದಶಕದಲ್ಲಿ ನಡೆದ ಕಾಶ್ಮೀರಿ ಪಂಡಿತರ ವಲಸೆ ಹಾಗೂ ಹತ್ಯೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ಕೈಗೊಳ್ಳಲು ಪ್ರಾಮಾಣಿಕ ನ್ಯಾಯಾಧೀಶರ ಸಮಿತಿಯನ್ನು ರಚಿಸುವಂತೆ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಮನವಿ ಮಾಡಿದ್ದಾರೆ.

    `ದಿ ಕಾಶ್ಮೀರ್ ಫೈಲ್ಸ್’ ಕುರಿತು ಪ್ರತಿಕ್ರಿಯಿಸಿರುವ ಅವರು ತನಿಖೆ ನಡೆಸಿದರಷ್ಟೇ ಸತ್ಯ ಹೊರಬೀಳಲಿದೆ ಎಂದಿದ್ದಾರೆ. ಈ ಬಗ್ಗೆ ಸತ್ಯ ತಿಳಿದುಕೊಳ್ಳಲು ಇಚ್ಛಿಸುವವರು, ಆ ಸಮಯದಲ್ಲಿ ಗುಪ್ತಚರ ಇಲಾಖೆ ಮುಖ್ಯಸ್ಥನಾಗಿದ್ದವರ ಬಳಿ ಮಾತನಾಡಬೇಕು. ಇಲ್ಲವೇ ಕೇರಳದ ಈಗಿನ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನೂ ಕೇಳಬಹುದು. ಆ ಸಮಯದಲ್ಲಿ ಅವರು ಕೇಂದ್ರ ಸಚಿವರಾಗಿದ್ದರು.

    ಕಾಶ್ಮೀರಿ ಪಂಡಿತರ ಮೇಲಿನ ದೌರ್ಜನ್ಯಕ್ಕೆ ನನ್ನನ್ನೇ ಹೊಣೆ ಎಂದು ಬಿಂಬಿಸಲಾಗುತ್ತಿದೆ. ಇದು ಸುಳ್ಳು. ಕಾಶ್ಮೀರಿ ಪಂಡಿತರ ದುರಂತಕ್ಕೆ ಫಾರೂಕ್ ಅಬ್ದುಲ್ಲಾರೇ ಹೊಣೆ ಎಂಬುದು ಸತ್ಯವಾದರೆ, ಈ ದೇಶದ ಯಾವುದೇ ಮೂಲೆಗೆ ಕರೆದುಕೊಂಡು ಹೋಗಿ ನೇಣಿಗೇರಿಸಿದರೂ ಅದಕ್ಕೆ ನಾನು ಸಿದ್ಧನಿದ್ದೇನೆ. ತನಿಖೆಯಾಗಲಿ, ಅದು ಬಿಟ್ಟು ಸುಮ್ಮನೆ ಯಾರನ್ನೋ ಹೊಣೆ ಮಾಡಬಾರದು ಎಂದು ಎಂದು ಕಿಡಿಕಾರಿದ್ದಾರೆ.

    ಕಾಶ್ಮೀರಿ ಪಂಡಿತರ ಹತ್ಯಾಕಾಂಡ, ವಲಸೆ ಕಥಾಹಂದರ ಇರುವ `ದಿ ಕಾಶ್ಮೀರ ಫೈಲ್ಸ್’ ಸಿನಿಮಾ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಬಿಜೆಪಿ ಆಡಳಿತದಲ್ಲೇ ಇರುವ ಕೆಲವು ಸರ್ಕಾರಗಳು ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸುತ್ತಿದ್ದು, ಈ ಮೂಲಕ ಜನರ ಹೃದಯದಲ್ಲಿ ನಮ್ಮ ಬಗ್ಗೆ ಇನ್ನಷ್ಟು ದ್ವೇಷ ಹುಟ್ಟುವಂತೆ ಮಾಡುತ್ತಿವೆ. ಅಲ್ಲದೆ, ಪ್ರತಿಯೊಬ್ಬರೂ ಸಿನಿಮಾ ನೋಡಿ ಎಂದು ಕರೆ ನೀಡಲಾಗುತ್ತಿದ್ದು, ಪ್ರತಿಯೊಬ್ಬ ಯೋಧ, ಪೊಲೀಸ್ ಸಹ ದಿ ಕಾಶ್ಮೀರ್ ಫೈಲ್ಸ್ ನೋಡಬೇಕು ಎಂದು ಸಾರಲಾಗುತ್ತಿದೆ. ಇದರಿಂದಾಗಿ ಜನರಿಗೆ ಮುಸ್ಲಿಮರ ಬಗ್ಗೆ ಇನ್ನಷ್ಟು ದ್ವೇಷ ಹುಟ್ಟಿಕೊಳ್ಳುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಡಾ.ರಾಜ್ ಕುಮಾರ್ ಮತ್ತು ಡಾ.ಪುನೀತ್ ರಾಜ್ ಕುಮಾರ್ : ಫೋಟೋ ವೈರಲ್

    ದಿ ಕಾಶ್ಮೀರಿ ಫೈಲ್ಸ್ ಪ್ರಚಾರಕ್ಕಾಗಿ ಮಾಡಲಾದ ಸಿನಿಮಾ. ಇದು ಪ್ರತಿ ರಾಜ್ಯದ ಹಿಂದು-ಮುಸ್ಲಿಮರನ್ನು ಬಾಧಿಸುತ್ತದೆ. ಅಂದಿನ ದುರಂತ ನೆನಪಿಸಿಕೊಂಡರೆ ಇಂದಿಗೂ ಭಯವಾಗುತ್ತದೆ. ಜನಾಂಗೀಯ ನಿರ್ಮೂಲನೆಯಲ್ಲಿ ಆಸಕ್ತಿಹೊಂದಿದ್ದ ರಾಜಕೀಯ ಪಕ್ಷಗಳ ಪಾತ್ರ ಆ ದುರ್ಘಟನೆಯಲ್ಲಿ ಜಾಸ್ತಿ ಇದೆ ಎಂದು ವಿಶ್ಲೇಷಿಸಿದ್ದಾರೆ. ಇದನ್ನೂ ಓದಿ: ಮಂಗಳೂರಿನ ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ

  • ಜಮ್ಮು-ಕಾಶ್ಮೀರದ ಮೂವರು ಮಾಜಿ ಮುಖ್ಯಮಂತ್ರಿಗಳಿಗೆ ಗೃಹ ಬಂಧನ

    ಜಮ್ಮು-ಕಾಶ್ಮೀರದ ಮೂವರು ಮಾಜಿ ಮುಖ್ಯಮಂತ್ರಿಗಳಿಗೆ ಗೃಹ ಬಂಧನ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕ್ಷೇತ್ರ ಪುನರ್‌ ವಿಂಗಡಣಾ ಆಯೋಗದ ಕರಡು ಪ್ರಸ್ತಾವವನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ತಡೆಯುವುದಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ.

    ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್‌ ಅಬ್ದುಲ್ಲಾ, ಮೆಹಬೂಬ ಮುಫ್ತಿ, ಓಮರ್‌ ಅಬ್ದುಲ್ಲಾ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ. ಅವರು ವಾಸವಾಗಿರುವ ಶ್ರೀನಗರದ ಗುಪ್ಕರ್‌ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಎಲ್‌ಪಿಜಿ ಬಳಕೆದಾರರಿಗೆ ಶುಭಸುದ್ದಿ – ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 102.5 ರೂ. ಕಡಿತ

    ರಾಜಕೀಯ ಮುಖಂಡರ ಮನೆಗಳ ಹೊರಗೆ ಪೊಲೀಸರು ಭದ್ರತಾ ಟ್ರಕ್‌ಗಳನ್ನು ನಿಯೋಜಿಸಿದ್ದು, ಅಲ್ಲಿಂದ ಯಾರಿಗೂ ಒಳ ಹೋಗಲು ಅಥವಾ ಹೊರ ಬರಲು ಅವಕಾಶ ನೀಡುತ್ತಿಲ್ಲ.

    ಜಮ್ಮು ಪ್ರಾಂತ್ಯದಲ್ಲಿ ಆರು, ಕಾಶ್ಮೀರ ಕಣಿವೆ ಪ್ರದೇಶದಲ್ಲಿ ಒಂದು ವಿಧಾನಸಭಾ ಕ್ಷೇತ್ರಗಳನ್ನು ಹೆಚ್ಚುವರಿಯಾಗಿ ಸೇರ್ಪಡೆ ಮಾಡುವ ಕರಡು ಪ್ರಸ್ತಾವವನ್ನು ವಿರೋಧಿಸಿ ಪ್ರತಿಭಟನೆ ನಡೆಸುವುದಾಗಿ ಗುಪ್ಕಾರ್‌ ಅಲಯನ್ಸ್‌ನ ನೇತೃತ್ವ ವಹಿಸಿರುವ ಫಾರೂಕ್‌ ಅಬ್ದುಲ್ಲಾ ಅವರು ಘೋಷಿಸಿದ್ದರು.

    ಮಾಜಿ ಸಿಎಂ ಓಮರ್‌ ಅಬ್ದುಲ್ಲಾ ಅವರು ಫೋಟೀ ಸಹಿತ ಟ್ವೀಟ್‌ ಮಾಡಿದ್ದು, ತಮ್ಮ ಹಾಗೂ ತಂದೆ, ಸಹೋದರಿಯರ ಮನೆಗೆ ಬೀಗ ಹಾಕಲಾಗಿದೆ. ಗೇಟ್‌ಗಳ ಹೊರಗೆ ಭದ್ರತಾ ಟ್ರಕ್‌ಗಳನ್ನು ನಿಯೋಜಿಸಲಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಜನರನ್ನು ಸಜ್ಜುಗೊಳಿಸಬೇಕಾದ ಸಚಿವರು, ಶಾಸಕರಿಗೆ ಸೋಂಕು ತಗುಲಿರುವುದು ಆತಂಕಕಾರಿ: ಅಜಿತ್‌ ಪವಾರ್‌

    ಕ್ಷೇತ್ರ ಪುನರ್‌ ವಿಂಗಡಣಾ ಆಯೋಗದ ಕರಡು ಪ್ರಸ್ತಾವವನ್ನು ರಾಜಕೀಯ ನಾಯಕರಷ್ಟೇ ಅಲ್ಲ, ಇಲ್ಲಿನ ಎಲ್ಲ ವರ್ಗದ ಜನರು ಒಪ್ಪಲು ಸಾಧ್ಯವಿಲ್ಲ ಎಂದು ವಿರೋಧ ಪಕ್ಷಗಳ ನಿಲುವಾಗಿದೆ.

  • ಪಾಕ್‍ನೊಂದಿಗೆ ಮಾತುಕತೆ ಇಲ್ಲದೇ ಉಗ್ರವಾದ ಅಂತ್ಯ ಅಸಾಧ್ಯವಾಗಿದೆ: ಫಾರೂಕ್ ಅಬ್ದುಲ್ಲಾ

    ಪಾಕ್‍ನೊಂದಿಗೆ ಮಾತುಕತೆ ಇಲ್ಲದೇ ಉಗ್ರವಾದ ಅಂತ್ಯ ಅಸಾಧ್ಯವಾಗಿದೆ: ಫಾರೂಕ್ ಅಬ್ದುಲ್ಲಾ

    -ಮುಸ್ಲಿಮರ ಸಾರ್ವಜನಿಕ ಪ್ರಾರ್ಥನೆಗಳಿಗೆ ಅವಕಾಶ ನೀಡಲೇಬೇಕು

    ಶ್ರೀನಗರ: ಪಾಕ್‍ನೊಂದಿಗೆ ಯಾವುದೇ ಮಾತುಕತೆ ಇಲ್ಲದೇ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಅಂತ್ಯಗೊಳಿಸಲು ಸಾಧ್ಯವಿಲ್ಲ. ಉಗ್ರವಾದವನ್ನು ಕೊನೆಗಾಣಿಸಲು ಬೇರೆ ದಾರಿಗಳಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

    ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರಿಗೆ ಸುರಕ್ಷತೆ ಇಲ್ಲ. ಇಂತಹ ಸಂದರ್ಭದಲ್ಲಿ ಜನ ಸಾಮಾನ್ಯರು ಹೇಗೆ ಸುರಕ್ಷಿತವಾಗಿರಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ನಡುರಾತ್ರಿ ಕಾರು ಹಿಂಬಾಲಿಸಿ ಅಪರಿಚಿತನ ಕಿರಿಕ್ – ಪುಂಡನ ಪುಂಡಾಟಕ್ಕೆ ಇಡೀ ಕುಟುಂಬ ಹೈರಾಣು

    ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂಬ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅಬ್ದುಲ್ಲಾ, ದೇಶದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ದೇಶದಲ್ಲಿ ಧಾರ್ಮಿಕ ಸಹಿಷ್ಣುತೆ ಇರುವುದರಿಂದ ಮುಸ್ಲಿಮರ ಸಾರ್ವಜನಿಕ ಪ್ರಾರ್ಥನೆಗಳಿಗೆ ಅವಕಾಶ ನೀಡಲೇಬೇಕು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಪತಿಗೆ ಡೈವೋರ್ಸ್ ಕೊಡು, ಮುಸ್ಲಿಂ ಯುವಕನ ಜೊತೆ ಮದುವೆ ಮಾಡಿಸ್ತೀನಿ – ನೂರ್ ಜಹಾನ್ ಅರೆಸ್ಟ್

  • ಚೀನಾ ಸಹಾಯದಿಂದ ಮತ್ತೆ 370ನೇ ವಿಧಿ ಜಾರಿ – ಫಾರೂಕ್ ಅಬ್ದುಲ್ಲಾ

    ಚೀನಾ ಸಹಾಯದಿಂದ ಮತ್ತೆ 370ನೇ ವಿಧಿ ಜಾರಿ – ಫಾರೂಕ್ ಅಬ್ದುಲ್ಲಾ

    ನವದೆಹಲಿ: ಚೀನಾದ ಬೆಂಬಲ ಪಡೆದು ಜಮ್ಮು ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಜಾರಿಗೆ ತರುವ ಆಶಯವನ್ನು ಹೊಂದಿದ್ದೇನೆ ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

    ರಾಷ್ಟ್ರೀಯ ಸುದ್ದಿ ವಾಹಿನಿಯೊಂದಿಗೆ ಮಾತನಾಡಿರುವ ಅವರು, ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾದಿಂದಲೇ ಲಡಾಖ್‍ನ ವಾಸ್ತವ ಗಡಿ ರೇಖೆ(ಎಲ್‍ಎಸಿ)ಯ ಬಳಿ ಚೀನಾ ಆಕ್ರಮಣ ಮಾಡುತ್ತಿದೆ ಎಂದು ಹೇಳಿದ್ದಾರೆ. ಮಾತ್ರವಲ್ಲದೆ 370ನೇ ವಿಧಿ ರದ್ದತಿಯನ್ನು ಚೀನಾ ಒಪ್ಪಿಕೊಂಡಿಲ್ಲ. ಹೀಗಾಗಿ ಚೀನಾದ ಬೆಂಬಲದಿಂದಾಗಿ 370ನೇ ವಿಧಿಯನ್ನು ಮತ್ತೆ ಜಾರಿಗೆ ತರುವ ಆಶಯ ಹೊಂದಿದ್ದೇನೆ ಎಂದು ಹೇಳಿದ್ದಾರೆ.

    ಲಡಾಖ್‍ನ ಎಲ್‍ಎಸಿ ಬಳಿ ಚೀನಾ ಏನೇನು ಮಾಡುತ್ತಿದೆಯೋ ಅದಕ್ಕೆಲ್ಲ 370ನೇ ವಿಧಿಯೇ ಕಾರಣ. ಇದನ್ನು ಅವರು ಎಂದೂ ಒಪ್ಪುವುದಿಲ್ಲ. ಅವರ ಬೆಂಬಲದಿಂದಲೇ 370ನೇ ವಿಧಿಯನ್ನು ಮತ್ತೆ ಜಾರಿಗೆ ತರುವ ಆಶಯ ಹೊಂದಿದ್ದೇನೆ. 2019ರ ಆಗಸ್ಟ್ 5ರಂದು ಸರ್ಕಾರ ಮಾಡಿದ್ದನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಜಮ್ಮು ಕಾಶ್ಮೀರದ ಸಮಸ್ಯೆಗಳ ಬಗ್ಗೆ ಮಾತನಾಡಲು ಸಂಸತ್‍ನಲ್ಲಿ ನನಗೆ ಅವಕಾಶವನ್ನೇ ಕೊಟ್ಟಿಲ್ಲ ಎಂದು ಅವರು ತಿಳಿಸಿದರು.

    ಜಮ್ಮು ಕಾಶ್ಮೀರಕ್ಕೆ 370 ಹಾಗೂ 35ಎ ಅಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಜಮ್ಮುಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾರ್ಪಡಿಸಲಾಗಿದೆ. ಕಳೆದ ವರ್ಷ ಆಗಸ್ಟ್ 5ರಂದು ಗೃಹ ಸಚಿವ ಅಮಿತ್ ಶಾ ಸಂಸತ್‍ನಲ್ಲಿ ಮಸೂದೆಯನ್ನು ಮಂಡಿಸಿ ಜಾರಿಗೊಳಿಸಿದ್ದಾರೆ.

    ಜಮ್ಮು ಕಾಶ್ಮೀರಕ್ಕೆ 370ನೇ ವಿಧಿಯಡಿ ನೀಡಿದ್ದ ವಿಶೇಷ ಸ್ಥಾನಮಾನವನ್ನು ತೆರವುಗೊಳಿಸಿದರು. ಬಳಿಕ 2ನೇ ನಿರ್ಣಯ ಕೈಗೊಳ್ಳುವ ಮೂಲಕ ಜಮ್ಮು ಕಾಶ್ಮೀರ ಹಾಗೂ ಲಡಾಖ್ ಎಂದು ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾರ್ಪಡಿಸಲಾಯಿತು. ಇದಾದ ಬಳಿಕ 2019ರ ಅಕ್ಟೋಬರ್ 31ರಿಂದ ಹೊಸ ಆಡಳಿತ ಜಾರಿಗೆ ಬಂದಿದೆ.

    ಜಮ್ಮು ಕಾಶ್ಮೀರದ ವಿಶೇಷ ಸ್ಥಾನವನ್ನು ರದ್ದುಪಡಿಸಿದ ಬಳಿಕ ಅಲ್ಲಿನ ಹಲವು ರಾಜಕೀಯ ನಾಯಕರನ್ನು ಗೃಹ ಬಂಧನದಲ್ಲಿರಿಸಲಾಗಿದೆ. ಈ ಪೈಕಿ ಫಾರೂಕ್ ಅಬ್ದುಲ್ಲಾ, ಅವರ ಮಗ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹಾಗೂ ಪಿಡಿಪಿ ಮುಖ್ಯಸ್ಥೆ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು.

  • ಗಾಂಧಿ ಹತ್ಯೆಗೈದವರು ದೆಹಲಿಯಲ್ಲಿ ಕುಳಿತು ಸರ್ಕಾರ ನಡೆಸುತ್ತಿದ್ದಾರೆ: ಫಾರೂಕ್ ಅಬ್ದುಲ್ಲಾ

    ಗಾಂಧಿ ಹತ್ಯೆಗೈದವರು ದೆಹಲಿಯಲ್ಲಿ ಕುಳಿತು ಸರ್ಕಾರ ನಡೆಸುತ್ತಿದ್ದಾರೆ: ಫಾರೂಕ್ ಅಬ್ದುಲ್ಲಾ

    ಶ್ರೀನಗರ: ಮಹಾತ್ಮ ಗಾಂಧೀಜಿ ಅವರನ್ನು ಕೊಲೆ ಮಾಡಿದವರು ದೆಹಲಿಯಲ್ಲಿ ಕುಳಿತು ಸರ್ಕಾರ ನಡೆಸುತ್ತಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ (ಎನ್‍ಸಿಪಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ನಡೆದಿದ್ದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಮಹಾತ್ಮಾ ಗಾಂಧೀಜಿ ಅವರನ್ನು ಆರ್‌ಎಸ್‌ಎಸ್ ಬೆಂಬಲಿಗರು ಹತ್ಯೆ ಮಾಡಿದ್ದಾರೆ. ಆಗ ಕೇಂದ್ರ ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಾಭ್‍ಭಾಯಿ ಅವರು, ಆರ್‌ಎಸ್‌ಎಸ್ ಅನ್ನು ಬ್ಯಾನ್ ಮಾಡಿದ್ದರು. ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಿದ್ದ ಆರ್‌ಎಸ್‌ಎಸ್ ಅನ್ನು ಅನೇಕ ನಾಯಕರು ಒಪ್ಪಿಕೊಳ್ಳಲಿಲ್ಲ ಎಂದು ಹೇಳಿದರು. ಇದನ್ನು ಓದಿ: ಗಾಂಧೀಜಿಯನ್ನು ಕೊಂದವರಿಂದ ನಮ್ಗೆ ಪಾಠ ಬೇಕಿಲ್ಲ: ಕೈ ಅಭ್ಯರ್ಥಿ ಬಿ.ವಿ.ನಾಯಕ್

    ಪ್ರಧಾನಿ ನರೇಂದ್ರ ಮೋದಿ ಅವರು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದು ಹೇಳಿದರು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಮ್ಮು-ಕಾಶ್ಮೀರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಅವರು ನಮಗೆ ಶಾಂತಿ, ನೆಮ್ಮದಿ ಕೊಟ್ಟಿದ್ದಾರಾ ಎಂದು ಸಮಾವೇಶದಲ್ಲಿ ಸೇರಿದ್ದ ಜನರನ್ನು ಪ್ರಶ್ನಿಸಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದರು.

    ಶ್ರೀನಗರ-ಜಮ್ಮು ಹೆದ್ದಾರಿ ಬಂದ್ ಮಾಡಿದ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಫಾರುಕ್ ಅಬ್ದುಲ್ಲಾ ಅವರು, ಬಿಜೆಪಿ ಸರ್ಕಾರ ರಸ್ತೆಯನ್ನು ಬಂದ್ ಮಾಡಿತು. ಕಾರ್ಗಿಲ್ ಯುದ್ಧ ಯಾವಾಗ ನಡೆಯಿತು ಸಮಾವೇಶದಲ್ಲಿ ಸೇರಿದ್ದ ಜನರನ್ನು ಪ್ರಶ್ನಿಸಿದ ಅವರು, ಯುದ್ಧದ ಬಳಿಕ ರಸ್ತೆ ಸಂಚಾರ ಬಂದ್ ಆಗಲಿಲ್ಲ. ನಾನು ಮುಖ್ಯಮಂತ್ರಿಯಾಗಿದ್ದಾಗ ರಸ್ತೆ ತಡೆಯಲಿಲ್ಲ. ಈಗ ಯಾವ ಯುದ್ಧ ನಡೆಯುತ್ತದೆ? ಯಾವುದೇ ಯುದ್ಧ ನಡೆಯದಿದ್ದರೂ ರಸ್ತೆ ಸಂಚಾರ ಯಾಕೆ ಕಡಿತಗೊಳಿಸಲಾಗಿದೆ? ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂದು ದೂರಿದರು.