Tag: ಫಾರ್ ರೆಜಿಸ್ಟೇಶನ್

  • ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಕಾಂಬಿನೇಷನ್ ಸಿನಿಮಾ ಫೆ.10ಕ್ಕೆ ರಿಲೀಸ್

    ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಕಾಂಬಿನೇಷನ್ ಸಿನಿಮಾ ಫೆ.10ಕ್ಕೆ ರಿಲೀಸ್

    ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ನಾಯಕ – ನಾಯಕಿಯಾಗಿ ನಟಿಸಿರುವ  “F0R REGN”. (ಫಾರ್ ರಿಜಿಸ್ಟರೇಷನ್) ಚಿತ್ರ 2023 ರ ಫೆಬ್ರವರಿ 10ರಂದು ಬಿಡುಗಡೆಯಾಗಲಿದೆ. ಕರ್ನಾಟಕ ರಾಜ್ಯೋತ್ಸವದ ಶುಭದಿನದಂದು ಚಿತ್ರದ ಬಿಡುಗಡೆ ದಿನಾಂಕ ಹಾಗೂ ಫಸ್ಟ್ ಲುಕ್ ಅನಾವರಣಗೊಂಡಿದೆ. ನಿರ್ಮಾಪಕ ನವೀನ್ ರಾವ್  ಹಾಗೂ  ನಿರ್ದೇಶಕ ನವೀನ್ ದ್ವಾರಕನಾಥ್ ಅವರ ಪೋಷಕರು ಫಸ್ಟ್ ಲುಕ್ ಹಾಗೂ ಬಿಡುಗಡೆ ದಿನಾಂಕವನ್ನು ಅನಾವರಣಗೊಳಿಸಿದರು‌.

    ನಾನು ಹಾಗೂ ನಿರ್ಮಾಪಕ ನವೀನ್ ರಾವ್ ಸಹಪಾಠಿಗಳು. ಕಿರುಚಿತ್ರಗಳನ್ನು ನಿರ್ದೇಶಿಸುತ್ತಿದ್ದ ನನಗೆ ಒಂದು ದಿನ ನನ್ನ ಸ್ನೇಹಿತ ನವೀನ್ ರಾವ್ ಈ ಚಿತ್ರವನ್ನು ನಿರ್ದೇಶಿಸಲು ಪ್ರೇರೇಪಿಸಿದರು. ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ನಾಯಕ – ನಾಯಕಿ ಅಂತ ನಿರ್ಧರಿಸಲಾಯಿತು. ಆಗ ಅವರಿಬ್ಬರ ” ದಿಯಾ” ಹಾಗೂ “ಲವ್ ಮಾಕ್ಟೇಲ್” ಸಿನಿಮಾಗಳು ಯಶಸ್ವಿಯಾಗಿದ್ದವು. ಹೀಗೆ ಚಿತ್ರ ಆರಂಭವಾಗಿ ಈಗ ಬಿಡುಗಡೆ ಹಂತಕ್ಕೆ ತಲುಪಿದೆ. ಫೆಬ್ರವರಿ ಹತ್ತರಂದು ಚಿತ್ರ ಬಿಡುಗಡೆಯಾಗುತ್ತಿದೆ ಎಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ನವೀನ್ ದ್ವಾರಕನಾಥ್. ಇದನ್ನೂ ಓದಿ:‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಅಪ್ಪುಗೆ ಅರ್ಪಿಸಿದ ಪುನೀತ್ ಪತ್ನಿ ಅಶ್ವಿನಿ

    ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದಾಗ ನನಗೆ ಅನಿಸಿದ್ದು, ನಿರ್ಮಾಪಕ ಹಣ ಒದಗಿಸಿಕೊಡತ್ತಾನೆ.‌ ಆದರೆ ಇಡೀ ತಂಡ ಚಿತ್ರಕ್ಕಾಗಿ ಎಷ್ಟು ಕಷ್ಟ ಪಡುತ್ತದೆ ಎಂದು.  ಅವರೆಲ್ಲರ ಶ್ರಮದಿಂದ ಉತ್ತಮ ಚಿತ್ರವೊಂದು ನಿರ್ಮಾಣವಾಗಿದೆ. ನೋಡಿ ಹಾರೈಸಿ ಎಂದರು ನಿರ್ಮಾಪಕ ನವೀನ್ ರಾವ್. ನಾನು ತುಳು ಸಿ‌ನಿಮಾ ಒಂದನ್ನು ಆಗಷ್ಟೇ ಮುಗಿಸಿದೆ. ಮಂಗಳೂರಿನಲ್ಲಿ ನಿರ್ದೇಶಕರು ಈ ಚಿತ್ರದ ಕಥೆ ಹೇಳಿದರು. ಇಷ್ಟವಾಯಿತು. ಎಲ್ಲದ್ದಕ್ಕೂ ರಿಜಿಸ್ಟ್ರೇಷನ್ ಕಡ್ಡಾಯ. ನಾವು ಪ್ರೀತಿಗೂ ರಿಜಿಸ್ಟ್ರೇಷನ್ ಕಡ್ಡಾಯವಾದರೆ ಹೇಗೆ ಎಂಬುದನ್ನು ತೋರಿಸಿದ್ದೇವೆ ಎನ್ನುತ್ತಾರೆ ನಾಯಕ ಪೃಥ್ವಿ ಅಂಬರ್.

    ಒಳ್ಳೆಯ ತಂಡದೊಂದಿಗೆ ಒಳ್ಳೆಯ ಚಿತ್ರ ಮಾಡಿದ್ದು ಖುಷಿಯಾಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ. ಫೆಬ್ರವರಿ ತಿಂಗಳು ನನಗೆ ಲಕ್ಕಿ. ಈ ಚಿತ್ರ ಕೂಡ ಅದೇ ತಿಂಗಳಲ್ಲಿ ತೆರೆಗೆ ಬರುತ್ತಿರುವುದು ಮತ್ತಷ್ಟು ಖುಷಿಯಾಗಿದೆ ಎಂದರು ನಾಯಕಿ ಮಿಲನ ನಾಗರಾಜ್. ಸಂಗೀತ ನಿರ್ದೇಶಕ ಹರೀಶ್ ಹಾಗೂ ಕಾರ್ಯಕಾರಿ ನಿರ್ಮಾಪಕ ನಿರಂಜನ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಪೃಥ್ವಿ ಅಂಬರ್, ಮಿಲನ‌ ನಾಗರಾಜ್, ರವಿಶಂಕರ್, ಬಾಬು ಹಿರಣ್ಣಯ್ಯ, ಸ್ವಾತಿ, ಸುಧಾ ಬೆಳವಾಡಿ, ತಬಲನಾಣಿ, ರಮೇಶ್ ಭಟ್, ಸಿಹಿಕಹಿ ಚಂದ್ರು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಭಾರೀ ಮೊತ್ತಕ್ಕೆ ‘F0R REGN’  ಚಿತ್ರದ ಆಡಿಯೋ ಹಕ್ಕು ಸೇಲ್

    ಭಾರೀ ಮೊತ್ತಕ್ಕೆ ‘F0R REGN’ ಚಿತ್ರದ ಆಡಿಯೋ ಹಕ್ಕು ಸೇಲ್

    ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ನಾಯಕ – ನಾಯಕಿಯಾಗಿ ನಟಿಸಿರುವ  “F0R REGN”. (ಫಾರ್ ರಿಜಿಸ್ಟರೇಷನ್) ಚಿತ್ರದ ಆಡಿಯೋ ಹಕ್ಕನ್ನು ಪ್ರತಿಷ್ಟಿತ ಜಂಕಾರ್ ಮ್ಯೂಸಿಕ್ ಸಂಸ್ಥೆ ಭಾರೀ ಮೊತ್ತ‌ ನೀಡಿ ಖರೀದಿಸಿದೆ. ಈ ಚಿತ್ರದಲ್ಲಿ ಆರು ಹಾಡುಗಳಿದ್ದು,   ಬಹದ್ದೂರ್ ಚೇತನ್ ಕುಮಾರ್, ಕವಿರಾಜ್ ಹಾಗೂ ನಾಗಾರ್ಜುನ ಶರ್ಮ ಬರೆದಿದ್ದಾರೆ. ವಿಜಯ್ ಪ್ರಕಾಶ್, ಚಂದನ್ ಶೆಟ್ಟಿ ಹಾಗೂ ವಾಸುಕಿ ವೈಭವ್ ಹಾಡಿದ್ದಾರೆ. ಆರ್.ಕೆ.ಹರೀಶ್ ಈ ಚಿತ್ರದ ಸಂಗೀತ ನಿರ್ದೇಶಕರು. ಇದನ್ನೂ ಓದಿ:ರಚಿತಾ ರಾಮ್ @30: ಹ್ಯಾಪಿ ಬರ್ತ್‌ಡೇ ರಚ್ಚು ಅಂದ್ರು ಫ್ಯಾನ್ಸ್

    ಒಂದೇ ಒಂದು ಹಾಡಿನ ಚಿತ್ರೀಕರಣ ಮಾತ್ರಬಾಕಿಯಿದ್ದು, ಉಳಿದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯ ಮಾತಿನ ಜೋಡಣೆ ನಡೆಯುತ್ತಿದೆ. ಬೆಂಗಳೂರು, ಉಡುಪಿ, ಮಂಗಳೂರು ಹಾಗೂ ಸಕಲೇಶಪುರದಲ್ಲಿ ಚಿತ್ರೀಕರಣ ನಡೆದಿದೆ. ” ದಿಯಾ” ಹಾಗೂ “ಲವ್ ಮಾಕ್ಟೇಲ್” ಚಿತ್ರಗಳ ಮೂಲಕ ಸಿನಿರಸಿಕರ ಮನಗೆದ್ದಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಜೋಡಿಯ ಈ ಚಿತ್ರದ  ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆಯಿದೆ.  ರವಿಶಂಕರ್, ಬಾಬು ಹಿರಣ್ಣಯ್ಯ, ಸ್ವಾತಿ, ಸುಧಾ ಬೆಳವಾಡಿ, ತಬಲನಾಣಿ, ರಮೇಶ್ ಭಟ್, ಸಿಹಿಕಹಿ ಚಂದ್ರು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    ನಿಶ್ಚಲ್ ಫಿಲಂಸ್ ಮೂಲಕ  ಎನ್ .ನವೀನ್ ರಾವ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.  ನವೀನ್ ದ್ವಾರಕನಾಥ್ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ.  ಅಭಿಷೇಕ್ ಕಲ್ಲತ್ತಿ- ಅಭಿಷೇಕ್ ಕಾಸರಗೋಡು  ಛಾಯಾಗ್ರಹಣ ಹಾಗೂ ಮನು ಶೆಡ್ಗಾರ್ ಅವರ ಸಂಕಲನವಿದೆ.

    Live Tv
    [brid partner=56869869 player=32851 video=960834 autoplay=true]

  • ಪೃಥ್ವಿ, ಮಿಲನಾ ಜೋಡಿಯ ಮೆಚ್ಚಿಕೊಂಡ ಅಭಿಮಾನಿ

    ಪೃಥ್ವಿ, ಮಿಲನಾ ಜೋಡಿಯ ಮೆಚ್ಚಿಕೊಂಡ ಅಭಿಮಾನಿ

    ದಿಯಾ ಹಾಗೂ ಲವ್ ಮಾಕ್ಟೇಲ್ ಚಿತ್ರಗಳ ಮೂಲಕ ಮನೆಮಾತಾಗಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಕಾಂಬಿನೇಷನ್ ನಲ್ಲಿ ಮೂಡಿಬರುರುತ್ತಿರುವ ಮತ್ತೊಂದು ಸದಭಿರುಚಿಯ ಚಿತ್ರ  ‘ಫಾರ್ ರಿಜಿಸ್ಟರೇಷನ್’ ದ ಫಸ್ಟ್ ಲುಕ್ ಯುಗಾದಿ ದಿನದಂದು ಬಿಡುಗಡೆ ಆಗಿದೆ. ಈ ಸಿನಿಮಾದ ಮೊದಲ ನೋಟಕ್ಕೆ ಅಭಿಮಾನಿಗಳು ಕೂಡ ಫಿದಾ ಆಗಿದ್ದಾರೆ. ಇದನ್ನೂ ಓದಿ : ಪಾವನಾ ನಾಯಕಿಯಾಗಿ ನಟಿಸಿದ ‘ಇನ್’ ಚಿತ್ರದ ಟೀಸರ್ ರಿಲೀಸ್ ಮಾಡಿದ ಕಿಚ್ಚ

    ಸಾಮಾಜಿಕ  ಜಾಲತಾಣಗಳಲ್ಲಿ ಈಗಾಗಲೇ  ಒಂದು ಮಿಲಿಯನ್ ಗೂ ಅಧಿಕ ಲೈಕ್ಸ್ ದೊರಕಿದೆ. ಅಲ್ಲದೇ ಈ ಜೋಡಿಯ ಬಗ್ಗೆ ಸಾಕಷ್ಟು ಕಾಮೆಂಟ್ಸ್ ಕೂಡ ಹರಿದು ಬರುತ್ತಿದೆ. ಈ ಸಿನಿಮಾದ ಬಹುತೇಕ ಭಾಗದ ಚಿತ್ರೀಕರಣ ಮುಕ್ತಾಯವಾಗಿದ್ದು, ಈ ಚಿತ್ರದಲ್ಲಿ ಪೃಥ್ವಿ ಆಶು ಪಾತ್ರದಲ್ಲಿ ಹಾಗೂ ಮಿಲನಾ ಅವರು ಅನ್ವಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ : ರಾಷ್ಟ್ರ ಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ನಿರ್ದೇಶನದ ‘ಡೊಳ್ಳು’ ಚಿತ್ರಕ್ಕೆ ಮತ್ತೆರಡು ಪುರಸ್ಕಾರ

    ದ್ವಾರಕನಾಥ್ ಈ ಸಿನಿಮಾವನ್ನು ನಿರ್ದೇಶನ ಮಾಡುವುದರ ಜತೆಗೆ ಕಥೆ, ಚಿತ್ರಕಥೆಯನ್ನು ಬರೆದಿದ್ದಾರೆ. ಆರ್.ಕೆ.ಹರೀಶ್ ಸಂಗೀತ ನಿರ್ದೇಶನದಲ್ಲಿ ಹಾಡುಗಳು ತಯಾರಾಗಿದ್ದು, ಅಭಿಷೇಕ್ ಕಳತ್ತಿ ಛಾಯಾಗ್ರಹಣ ಹಾಗೂ ಮನು ಶೆಡ್ಗಾರ್ ಅವರ ಸಂಕಲನ ಚಿತ್ರಕ್ಕಿದೆ.