Tag: ಫಿಎಫ್‌ಐ

  • ಪ್ರವೀಣ್‌ ನೆಟ್ಟಾರು ಕೇಸ್‌- ಮೋಸ್ಟ್‌ ವಾಂಟೆಡ್‌ ಪಿಎಫ್‌ಐ ಸದಸ್ಯ ಅರೆಸ್ಟ್‌

    ಪ್ರವೀಣ್‌ ನೆಟ್ಟಾರು ಕೇಸ್‌- ಮೋಸ್ಟ್‌ ವಾಂಟೆಡ್‌ ಪಿಎಫ್‌ಐ ಸದಸ್ಯ ಅರೆಸ್ಟ್‌

    ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ (Praveen Nettaru Murder case) ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಪರಾರಿಯಾಗಿದ್ದ ಮೋಸ್ಟ್‌ ವಾಂಟೆಡ್ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

    ಪಿಎಫ್‌ಐ (PFI) ಸದಸ್ಯ ಮಡಿಕೇರಿ ಮೂಲದ ತೌಫಿಲ್‌ನನ್ನು (Thufall) ಶನಿವಾರ ರಾತ್ರಿ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಬಂಧಿಸಲಾಗಿದೆ.

    ತೌಫಿಲ್‌ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಎನ್‌ಐಎ ಘೋಷಣೆ ಮಾಡಿತ್ತು. ಇದನ್ನೂ ಓದಿ: ನಮ್ಮ ಕಲ್ಲಿದ್ದಲಿನಿಂದ ಭಾರತದ ಮಂದಿಗೆ ವಿದ್ಯುತ್: ಅದಾನಿ ಪರ ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ಬ್ಯಾಟಿಂಗ್

    ಏನಿದು ಪ್ರಕರಣ?
    ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ಅವರು ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.

    ತಕ್ಷಣ ಪುತ್ತೂರು ಆಸ್ಪತ್ರೆಗೆ ಪ್ರವೀಣ್‌ ಅವರನ್ನು ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದ ಕಾರಣ ಚಿಕಿತ್ಸೆ ಫಲಕರಿಯಾಗದೇ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಈವರೆಗೆ ಹಲವಾರು ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.