Tag: ಫಿಲ್ಮಂ ಚೇಂಬರ್

  • ಏ.15ರ ಒಳಗೆ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ನಡೆಯಬೇಕು :  ತಾಕೀತು ಮಾಡಿದ ಸಹಕಾರಿ ಇಲಾಖೆ

    ಏ.15ರ ಒಳಗೆ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ನಡೆಯಬೇಕು : ತಾಕೀತು ಮಾಡಿದ ಸಹಕಾರಿ ಇಲಾಖೆ

    ಳೆದ ಎರಡು ವರ್ಷಗಳಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ನಡೆದಿಲ್ಲ. ಕೊರೋನಾ ನೆಪ ಮಾಡಿಕೊಂಡು ಚುನಾವಣೆಯನ್ನು ಮುಂದೂಡುತ್ತಲೇ ಬಂದಿದ್ದಾರೆ ಎನ್ನುವ ಆರೋಪ ಈಗಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಮೇಲಿದೆ. ಹಾಗಾಗಿ ಹಲವು ಬಾರಿ ಸಹಕಾರಿ ಸಂಘಗಳ ಉಪ ನಿಬಂಧಕರು ಹಾಗೂ ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳಿಗೆ ನಿರ್ಮಾಪಕರು ಪತ್ರ ಬರೆದಿದ್ದಾರೆ. ಇದನ್ನೂ ಓದಿ : ಹರೀಶ್ ವಯಸ್ಸು 36 ಹಾಸ್ಯ ಸಿನಿಮಾಗಾಗಿ ಟೈಟಲ್ ಸಾಂಗ್ ಹಾಡಿದ ಪುನೀತ್

    ಪದೇ ಪದೇ ನಿರ್ಮಾಪಕರು ಜಿಲ್ಲಾ ನೋಂದಣಾಧಿಕಾರಿಗಳಿಗೆ ಪತ್ರ ಬರೆದಾಗ, ಆಡಳಿತಾಧಿಕಾರಿ ನೇಮಿಸಬೇಕಾಗುತ್ತದೆ ಎಂದು ಈ ಹಿಂದೆ ಸಹಕಾರಿ ಇಲಾಖೆಯು ವಾಣಿಜ್ಯ ಮಂಡಳಿಗೆ ಪತ್ರ ಬರೆದಿತ್ತು. ಈ ಬೆನ್ನಲ್ಲೆ ಮೇ-2022ರಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಚುನಾವಣೆ ನಡೆಸುವುದಾಗಿ ತಿಳಿಸಿತ್ತು. ಇದಕ್ಕೂ ತಡೆಕೋರೆ ವಾಣಿಜ್ಯ ಮಂಡಳಿಯ 50ಕ್ಕೂ ಹೆಚ್ಚು ಸದಸ್ಯರು ಮತ್ತೆ ಸಹಕಾರಿ ಇಲಾಖೆಗೆ ಪತ್ರ ಬರೆದಿದ್ದಾರೆ. ಈಗಿರುವ ಮತದಾರರ ಪಟ್ಟಿಯನ್ನೇ ಇಟ್ಟುಕೊಂಡು ಚುನಾವಣೆ ನಡೆಸಬೇಕೆಂದು ಮನವಿ ಮಾಡಿದ್ದಾರೆ. ಹಾಗಾಗಿ ಮತ್ತೆ ವಾಣಿಜ್ಯ ಮಂಡಳಿಗೆ ಇಲಾಖೆ ಪತ್ರ ಬರೆದಿದೆ. ಇದನ್ನೂ ಓದಿ : ಸ್ಸಾರಿ.. ಈ ಬಾರಿ ಹುಟ್ಟು ಹಬ್ಬ ಆಚರಿಸಲ್ಲ : ಜಗ್ಗೇಶ್

    ಮೇ 2022ಕ್ಕೂ ಮುನ್ನ ಚುನಾವಣೆ ನಡೆಸಬೇಕೆಂದು ತಾಕೀತು ಮಾಡಿದೆ.  ಏಪ್ರಿಲ್ 15ರ ಒಳಗೆ ಚುನಾವಣೆ ನಡೆಸಲೇಬೇಕೆಂದು ಸುತ್ತೋಲೆ ಕಳುಹಿಸಿದೆ. ತಪ್ಪಿದ್ದಲ್ಲಿ ಅಗತ್ಯ ಕ್ರಮಗಳನ್ನು ತಗೆದುಕೊಳ್ಳುವುದಾಗಿಯೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

  • ನಟಿ ಹರಿಪ್ರಿಯಾ ವಿರುದ್ಧ ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ‘ಸೂಜಿದಾರ’ ನಿರ್ದೇಶಕ

    ನಟಿ ಹರಿಪ್ರಿಯಾ ವಿರುದ್ಧ ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ‘ಸೂಜಿದಾರ’ ನಿರ್ದೇಶಕ

    ಬೆಂಗಳೂರು: ಸೂಜಿದಾರ ಚಿತ್ರದಲ್ಲಿ ತಮ್ಮ ಪಾತ್ರವನ್ನು ಸರಿಯಾಗಿ ಬಿಂಬಿಸಿಲ್ಲ, ಅಲ್ಲದೇ ತಮ್ಮ ಜೊತೆ ಚರ್ಚಿಸದೇ ನಿರ್ದೇಶಕರು ಕಥೆಯನ್ನು ತಿರುಚಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಸೂಜಿದಾರ ಚಿತ್ರತಂಡ ಹರಿಪ್ರಿಯಾ ವಿರುದ್ಧ ವಾಣಿಜ್ಯ ಮಂಡಳಿಗೆ ದೂರು ನೀಡಿದೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹರಿಪ್ರಿಯಾ ಅವರು ಅನಗತ್ಯವಾಗಿ ನಮ್ಮ ಹಾಗೂ ಚಿತ್ರತಂಡದ ಮೇಲೆ ಆರೋಪ ಮಾಡುತ್ತಿದ್ದಾರೆ. ಚಿತ್ರ ತೆರೆಕಂಡ ಮೂರೇ ದಿನಕ್ಕೆ ಈ ರೀತಿಯ ಆರೋಪ ಮಾಡುವುದು ಸರಿಯಲ್ಲ. ಅಲ್ಲದೇ ಅವರ ಹೇಳಿಕೆಯಿಂದಾಗಿ ಕಳೆದ ಮೂರು ದಿನಗಳಿಂದ ಚಿತ್ರದ ಕಲೆಕ್ಷನ್ ಕೂಡ ಕಡಿಮೆಯಾಗಿದೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಹರಿಪ್ರಿಯಾ ಅವರು ಚಿತ್ರದ ಬಗ್ಗೆ ನೀಡಿರುವ ಹೇಳಿಕೆ ಖಂಡನಾರ್ಹವಾದದ್ದು, ನಮ್ಮ ಫೋನ್ ಕರೆಯನ್ನು ಅವರು ಸ್ವೀಕರಿಸುತ್ತಿಲ್ಲ. ಚಿತ್ರತಂಡದ ವಿರುದ್ಧ ನಟಿ ಹರಿಪ್ರಿಯಾ ಅವರು ಅನಗತ್ಯವಾಗಿ ಆರೋಪ ಮಾಡುತ್ತಿದ್ದು, ಅವರಿಂದ ಸಿನಿಮಾಗೆ ತೊಂದರೆ ಆಗುತ್ತಿದೆ ಎಂದು ಆರೋಪಿಸಿದ್ದಾರೆ.

    ನಟಿ ಹರಿಪ್ರಿಯಾ ಅವರಿಗೆ ಬಹುಶಃ ಇಗೋ ಸಮಸ್ಯೆ ಇರಬಹುದು. ಚಿತ್ರತಂಡ ನಡೆಸಿದ ಯಾವುದೇ ಸುದ್ದಿಗೋಷ್ಠಿಗೂ ಅವರು ಬಂದು ಬೆಂಬಲ ನೀಡಿಲ್ಲ. ಆದರೆ ಚಿತ್ರ ಉತ್ತಮ ಗಳಿಕೆ ಮಾಡುತ್ತಿರುವ ವೇಳೆಯೇ ಇಂತಹ ಆರೋಪ ಮಾಡಿದ್ದಾರೆ. ಇದರಿಂದ ಚಿತ್ರದ ಗಳಿಕೆ ಮೇಲೆ ಪರಿಣಾಮ ಬೀರಿದೆ. ಅಲ್ಲದೇ ನಮ್ಮ ಸ್ವಾಭಿಮಾನಕ್ಕೂ ಧಕ್ಕೆಯಾಗಿದೆ. ಚಿತ್ರದ ನಿರ್ಮಾಪಕರಿಗೆ ಹೆಚ್ಚು ನಷ್ಟ ಆಗಿದೆ ಎಂದಿದ್ದಾರೆ.

    ಇದೇ ವೇಳೆ ಹರಿಪ್ರಿಯಾ ಅವರ ಆರೋಪಕ್ಕೆ ಸ್ಪಷ್ಟ ನೀಡಿರುವ ನಿರ್ದೇಶಕರು, ಸಿನಿಮಾ ಕಥೆಯನ್ನೂ ನಾವು ತಿರುಚಿಲ್ಲ. ಚಿತ್ರದ ಬೇರೆ ಪಾತ್ರಗಳು ಹೈಲೈಟ್ ಆಗಿರುವುದು ಅವರಿಗೆ ಸಮಸ್ಯೆ ಆಗಿದೆ. ನಮ್ಮ ಚಿತ್ರತಂಡ ಹೊಸಬರ ತಂಡವಾಗಿದ್ದು, ಆದ್ದರಿಂದಲೇ ಅಸಡ್ಡೆ ತೋರಿದ್ದಾರೆ. ಆದ್ದರಿಂದ ತಮ್ಮ ಹೇಳಿಕೆಯ ಬಗ್ಗೆ ಅವರು ಸ್ಪಷ್ಟನೆ ನೀಡಬೇಕು ಎಂದರು.

    ಒಂದೊಮ್ಮೆ ಸಿನಿಮಾ ಬಗ್ಗೆ ಯಾವುದೇ ಸಮಸ್ಯೆ ಇದ್ದರೆ ಚಿತ್ರತಂಡ ನಮ್ಮ ಎದುರು ಪ್ರಸ್ತಾಪ ಮಾಡಿ ಬಗೆಹರಿಸಕೊಳ್ಳಬಹುದಿತ್ತು. ಆದರೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ವಿವಾದ ಮಾಡಿದ್ದಾರೆ. ಸಿನಿಮಾ ಒಪ್ಪಿಕೊಳ್ಳುವ ಮುನ್ನ ಸಿನಿಮಾ ಕಥೆ ಹೇಳಿದ್ದೇವೆ. ಚಿತ್ರದ ಸ್ಕ್ರಿಪ್ಟ್ ಮಾದರಿಯನ್ನು ನೀಡಿದ್ದೇವೆ. ಕಳೆದ ವರ್ಷ ವರಮಹಾಲಕ್ಷಿ ಹಬ್ಬದಲ್ಲಿ ಅವರಿಗೆ ಚಿತ್ರತಂಡದ ಬಗ್ಗೆ ವೈಮನಸ್ಸು ಆರಂಭವಾಗಿತ್ತು. ಅವರ ಪೋಸ್ಟರ್ ಗೆ ಉತ್ತಮ ಪ್ರತಿಕ್ರಿಯೆ ಕೂಡ ಬಂದಿತ್ತು. ಆ ಬಳಿಕ ನಾವು ಚಿತ್ರದ ಎಲ್ಲಾ ಪಾತ್ರಧಾರಿಗಳ ಪರಿಚಯಿಸುವ ಪೋಸ್ಟರ್ ರಿಲೀಸ್ ಮಾಡಿದ್ದೇವು. ಇದರಿಂದ ಅವರಿಗೆ ಇರುಸು ಮುರಿಸು ಆಗಿದೆ. ಚಿತ್ರದ ಪೋಸ್ಟರ್ ನಲ್ಲಿ ಅವರು ಒಬ್ಬರೇ ಇರಬೇಕು ಎಂಬ ಆಸೆ ಇತ್ತು. ಅದಕ್ಕಾಗಿಯೇ ಸಿನಿಮಾ ಪ್ರೆಸ್ ಮೀಟ್‍ಗೆ ಬರಬೇಕಾದರೆ ಸಹ ನಟಿ ಚೈತ್ರಾ ಬರಬಾರದು ಎಂದು ತಿಳಿಸಿದ್ದರು ಎಂದು ಆರೋಪಿಸಿದರು.

    ಇತ್ತೀಚಿಗಷ್ಟೇ ಡಾಟರ್ ಆಫ್ ಪಾರ್ವತಮ್ಮ ಚಿತ್ರದ ಆಡಿಯೋ ಲಾಂಚ್ ವೇಳೆ ಹರಿಪ್ರಿಯಾ ಚಿತ್ರತಂಡದ ಬಗ್ಗೆ ತಮ್ಮ ಅಸಮಾಧಾನ ಹೊರಹಾಕಿದ್ದರು. ಇದನ್ನು ಓದಿ : ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ಹರಿಪ್ರಿಯಾ

  • ಘಟನೆ ನಡೆದಾಗಲೇ ಚಲನಚಿತ್ರ ಮಂಡಳಿಗೆ ದೂರು ನೀಡಬೇಕಿತ್ತು: ಫಿಲ್ಮಂ ಚೇಂಬರ್ ಅಧ್ಯಕ್ಷ ಚೆನ್ನೇಗೌಡ

    ಘಟನೆ ನಡೆದಾಗಲೇ ಚಲನಚಿತ್ರ ಮಂಡಳಿಗೆ ದೂರು ನೀಡಬೇಕಿತ್ತು: ಫಿಲ್ಮಂ ಚೇಂಬರ್ ಅಧ್ಯಕ್ಷ ಚೆನ್ನೇಗೌಡ

    ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಮೀಟೂ ಶುರುವಾಗಿದ್ದು, ನಟಿ ಸಂಜನಾ ಹಾಗೂ ಶೃತಿ ಹರಿಹರನ್ ತಮಗಾದ ಲೈಂಗಿಕ ದೌರ್ಜನ್ಯದ ಬಗ್ಗೆ ಮಾತನಾಡಿದ್ದಾರೆ. ಸದ್ಯ ನಟಿಯರಾದ ಸಂಜನಾ ಹಾಗೂ ಶೃತಿ ಹರಿಹರನ್ ಮಾಡಿರುವ ಆರೋಪಗಳಿಗೆ ಘಟನೆ ನಡೆದಾಗಲೇ ಚಲನಚಿತ್ರ ಮಂಡಳಿಗೆ ದೂರು ನೀಡಬೇಕಿತ್ತು ಫಿಲ್ಮಂ ಚೇಂಬರ್ ಅಧ್ಯಕ್ಷ ಚೆನ್ನೇಗೌಡ ಪ್ರತಿಕ್ರಿಯಿಸಿದ್ದಾರೆ.

    ಶೃತಿ ಹರಿಹರನ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಫಿಲ್ಮಂ ಚೇಂಬರ್ ಅಧ್ಯಕ್ಷ ಚಿನ್ನೇಗೌಡ, “ಈ ಘಟನೆ ನಡೆದು ತುಂಬಾ ದಿನ ಆಗಿದೆ. ಈಗ ಈ ಘಟನೆ ಬಗ್ಗೆ ಮಾತನಾಡುವುದು ಸರಿಯಲ್ಲ. ಈ ಘಟನೆ ನಡೆದಾಗಲೇ ಚಲನಚಿತ್ರ ಮಂಡಳಿಗೆ ದೂರು ನೀಡಬೇಕಿತ್ತು. ಈಗ ಯಾಕೆ ಹೀಗೆ ಮಾಡುತ್ತಿದ್ದಾರೆಂಬುದು ನನಗೆ ಗೊತ್ತಿಲ್ಲ. ಅಂದೇ ಇಬ್ಬರು ಕುಳಿತು ಮಾತುಕತೆ ನಡೆಸಿ ಈ ಪ್ರಕರಣವನ್ನು ಬಗೆಹರಿಸಿಕೊಳ್ಳಬೇಕಿತ್ತು. ಫಿಲ್ಮಂ ಚೇಂಬರ್ ಗೆ ಬಂದು ಮಾತನಾಡಬಹುದಿತ್ತು. ಅದನ್ನು ಬಿಟ್ಟು ಮಾಧ್ಯಮದ ಮೂಲಕ ಈ ರೀತಿ ಮಾತನಾಡುವುದು ಸರಿಯಲ್ಲ. ಇಲ್ಲಿವರೆಗೂ ದೂರು ಬಂದಿಲ್ಲ ದೂರು ಬಂದರೆ ಈ ಬಗ್ಗೆ ಮಾತನಾಡುತ್ತೇವೆ” ಎಂದು ಶೃತಿ ಹರಿಹರನ್ ಹಾಗು ಸಂಜನಾ ಮಾಡಿರುವ ಆರೋಪಗಳ ಬಗ್ಗೆ ಮಾತನಾಡಿದ್ದಾರೆ. ಇದನ್ನೂ ಓದಿ:  ಶೃತಿ ಹರಿಹರನ್ ಆರೋಪಕ್ಕೆ ಅರ್ಜುನ್ ಸರ್ಜಾ ತಿರುಗೇಟು

    ಅರ್ಜುನ್ ಸರ್ಜಾ ಅವರನ್ನು ನಾನು ಮೊದಲಿನಿಂದಲೂ ನೋಡಿದ್ದೇನೆ. ಅರ್ಜುನ್ ಸರ್ಜಾ ಮೇಲೆ ಇಲ್ಲಿಯವರೆಗೂ ಈ ರೀತಿಯ ಆರೋಪ ಎದುರಿಸಿಲ್ಲ. ಈ ರೀತಿ ಆರೋಪಗಳನ್ನು ಮಾಡಿ ಲೈಮ್ ಲೈಟ್ ಗೆ ಬರುವುದು ನಿಲ್ಲಬೇಕು ಎಂದು ಅರ್ಜುನ್ ಸರ್ಜಾ ಬಗ್ಗೆ ನಿರ್ಮಾಪಕ ಭಾ. ಮಾ ಹರೀಶ್ ಹೇಳಿದ್ದಾರೆ. ಇದನ್ನೂ ಓದಿ: ಬೆಡ್ ರೂಂ, ಕ್ಲೋಸ್ ಅಪ್ ಸೀನ್ ಇದ್ದ ಚಿತ್ರವನ್ನ ಯಾಕೆ ಮಾಡ್ಬೇಕು – ಶ್ರುತಿ ವಿರುದ್ಧ ಅರ್ಜುನ್ ಸರ್ಜಾ ಅತ್ತೆ ಕಿಡಿ

    ಮೀಟೂ ಆರೋಪ ಎದುರಿಸುತ್ತಿರುವ ನಿರ್ದೇಶಕ ರವಿ ಶ್ರೀವತ್ಸಾ ಫಿಲಂ ಚೇಂಬರ್ ನಲ್ಲಿ ಮೀಟೂ ಆರೋಪದ ಬಗ್ಗೆ ಕುರಿತು ಚರ್ಚೆ ಮಾಡುತ್ತಿದ್ದಾರೆ. ಎರಡು ದಿನಗಳ ಹಿಂದೆ ನಟಿ ಸಂಜನ ನಿರ್ದೇಶಕ ರವಿ ಶ್ರೀವತ್ಸಾ ವಿರುದ್ಧ ಆರೋಪ ಮಾಡಿದರು. ಸದ್ಯ ಈ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡ ಜೊತೆ ರವಿ ಶ್ರೀವತ್ಸಾ ಮಾತುಕತೆ ನಡೆಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv