Tag: ಫಿಲ್ಮ್ ಫೆಸ್ಟಿವಲ್

  • ಬೆಂಗಳೂರು ‘ಫಿಲ್ಮ್ ಫೆಸ್ಟಿವಲ್’ನಲ್ಲಿ ರಿಷಬ್ ಶೆಟ್ಟಿ ಚಿತ್ರಕ್ಕೆ ಅನ್ಯಾಯ

    ಬೆಂಗಳೂರು ‘ಫಿಲ್ಮ್ ಫೆಸ್ಟಿವಲ್’ನಲ್ಲಿ ರಿಷಬ್ ಶೆಟ್ಟಿ ಚಿತ್ರಕ್ಕೆ ಅನ್ಯಾಯ

    ವರ್ಷದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (Bangalore, Film Festival)  ಜೈ ಶಂಕರ್ (Jai Shankar) ನಿರ್ದೇಶನದ, ರಿಷಬ್ ಶೆಟ್ಟಿ ನಿರ್ಮಾಣದ ‘ಶಿವಮ್ಮ’ ಸಿನಿಮಾ ಆಯ್ಕೆಯಾಗದೇ ಇರುವುದಕ್ಕೆ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಸೇರಿದಂತೆ ಸಾಕಷ್ಟು ಸಿನಿಮಾ ಪ್ರೇಮಿಗಳು ಅಚ್ಚರಿ ವ್ಯಕ್ತ ಪಡಿಸಿದ್ದಾರೆ.

    ಸುದ್ದಿಯೊಂದರಲ್ಲಿಓದಿದ ಪ್ರಕಾರ ಅವರ ಸಿನೆಮಾ 2023 ರಲ್ಲಿ ಸೆನ್ಸಾರ್ ಪ್ರಮಾಣಪತ್ರ ಪಡೆದಿದೆ ಎಂದರೆ, ಚಿತ್ರೋತ್ಸವದ ಮಾನದಂಡದ ಪ್ರಕಾರ ಆಯ್ಕೆಯಾಗಲು ಎಲ್ಲಾ ಅರ್ಹತೆಯನ್ನು ಪಡೆದಿದೆ. ಬುಸಾನ್ ಸೇರಿದಂತೆ ವಿವಿಧ ದೇಶಗಳ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ಪ್ರಶಸ್ತಿ ಪಡೆದಿರುವ ಸಿನಿಮಾ ಆಯ್ಕೆಯಾಗದಿರುವುದಕ್ಕೆ ನೀಡಿರುವ ಕಾರಣ ಸಮಂಜಸವಾಗಿಲ್ಲ. ಅರ್ಹ ಸಿನಿಮಾನ ಆಯ್ಕೆ ಮಾಡದಿರುವುದು ದುರಂತ. ಶಿವಮ್ಮ ಸಿನಿಮಾಗೆ ನ್ಯಾಯ ಸಿಗಲೇಬೇಕು ಎಂದು ಮಂಸೋರೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ದೊಡ್ಡ ಬಜೆಟ್ಟಿನ ಚಿತ್ರಗಳ ಅಬ್ಬರದ ನಡುವೆ ಕನ್ನಡದ ಕೆಲವು ಸಣ್ಣ ಸಿನಿಮಾಗಳು ಭಾರತದ ಗಡಿಯಾಚೆಗೆ ಸಂಚರಿಸಿ ಅಲ್ಲಿನ ಚಿತ್ರೋತ್ಸವಗಳಲ್ಲಿ ಮನ್ನಣೆ ಗಳಿಸಿ ಕನ್ನಡ ಚಿತ್ರೋದ್ಯಮದ ಕೀರ್ತಿ ಪತಾಕೆಯನ್ನು ಹಾರಿಸಿವೆ. ಅದರಲ್ಲಿ ನಮ್ಮ ರಿಷಬ್ ಶೆಟ್ಟಿ (Rishabh Shetty) ಸಂಸ್ಥೆಯ ‘ಶಿವಮ್ಮ’ ಚಿತ್ರ ಪ್ರಪಂಚಾದ್ಯಂತ ತನ್ನ ತೆಕ್ಕೆಗೆ ಪ್ರಶಸ್ತಿ, ಪ್ರಶಂಸೆಯನ್ನು ಗಳಿಸಿ ತನ್ನ ವರ್ಲ್ಡ್ ಟೂರಿನ ಮ್ಯಾರಥಾನ್ ಅನ್ನು ಮುಂದುವರಿಸಿದೆ.  ಕೊಪ್ಪಳ ಜಿಲ್ಲೆಯ ಯಾರೇಹಂಚಿನಾಳ ಗ್ರಾಮದಿಂದ ಶುರುವಾದ ಪ್ರಯಾಣ ಹತ್ತಾರು ದೇಶಗಳಲ್ಲಿ ಹಲವಾರು ಪ್ರಶಸ್ತಿ, ಪ್ರಶಂಸೆಗಳನ್ನು ಗಳಿಸಿದ್ದಲ್ಲದೆ ವಿದೇಶಿಗರ ಪ್ರೀತಿಗೂ ಪಾತ್ರವಾದ ಈ ಸಿನಿಮಾ  ‘ರಿಷಬ್ ಶೆಟ್ಟಿ ಫಿಲ್ಮ್ಸ್’ ಸಂಸ್ಥೆಯ ಹೆಮ್ಮೆಯ ಕೊಡುಗೆ.

    ಈವರೆಗೂ ಶಿವಮ್ಮ (Shivamma) ಗೆದ್ದ  ಪ್ರಶಸ್ತಿಗಳ ಪಟ್ಟಿ ದೊಡ್ಡದಿದೆ. ನ್ಯೂ ಕರೆಂಟ್ಸ್ ಪುರಸ್ಕಾರ, ಬುಸಾನ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ 2022, ಯಂಗ್ ಜೂರಿ ಪುರಸ್ಕಾರ, ಫೆಸ್ಟಿವಲ್ ಡೆಸ್ 3 ಕಾಂಟಿನೆಂಟಸ್, ನಾಂಟೆಸ್ 2022, ಅತ್ಯುತ್ತಮ ನಿರ್ದೇಶಕ, ಫಾಜರ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಗ್ರಾಂಡ್ ಪ್ರಿಕ್ಸ್  ಅಟ್ ಜೆರ್ಕೋಲೊ ಹೈನಾನ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಚೀನಾ ಬ್ಲಾಕ್ ಮೂವಿ, ಸ್ವಿಟ್ಜರ್ಲ್ಯಾಂಡ್ ಫಜರ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ , ಇರಾನ್ ಗೋಥೆಂಬರ್ಗ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಸ್ಪೀಡನ್ ಫಿಲ್ಮ್ ಫೆಸ್ಟ್ ಮುಂಚಿಯನ್, ಮ್ಯುನಿಚ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಜೆರ್ಕಾಲೋ , ರಷ್ಯಾ ಇಮೆಜಿನ್ ಇಂಡಿಯಾ, ಸ್ಪೇನ್ ಅಲ್ಬರ್ಟಾ ಭಾರತೀಯ ಚಲನಚಿತ್ರೋತ್ಸವ, ಕೆನಡ ಇಂಡಿಯನ್ ಪಿಲ್ಮ್  ಫೆಸ್ಟಿವಲ್, ಮೆಲ್ಬೋರ್ನ್ ಅಂಡ್ರಿ ತರ್ಕೊವ್ಸ್ಕಿ  ಅಂತರ್ರಾಷ್ಟ್ರೀಯ ಚಿತ್ರೋತ್ಸವ  ಮುಂತಾದ ಚಿತ್ರೋತ್ಸವಗಳಲ್ಲಿ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.

     

    ಭಾರತದ ಪ್ರತಿಷ್ಠಿತ ಮಾಮಿ ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ದಕ್ಷಿಣ ಏಷ್ಯಾದ ಚೊಚ್ಚಲ ಪ್ರದರ್ಶನವನ್ನು ಕಂಡಿದೆ. ಶಿವಮ್ಮ ಚಿತ್ರವನ್ನು ಸಂಪೂರ್ಣವಾಗಿ ಉತ್ತರ ಕರ್ನಾಟಕದ ಕೊಪ್ಪಳ ಜಿಲ್ಲೆಯ ಯರೇಹಂಚಿನಾಳ ಗ್ರಾಮದಲ್ಲಿ ಚಿತ್ರೀಕರಿಸಲಾಗಿದ್ದು, ಊರಿನ ಗ್ರಾಮಸ್ಥರೇ ಮುಖ್ಯ ತಾರಾಗಣದಲ್ಲಿದ್ದಾರೆ. ತನ್ನ ಕುಟುಂಬದ ಉನ್ನತಿಗೋಸ್ಕರ ನೆಟ್ವರ್ಕ್ ಮಾರ್ಕೆಟಿಂಗ್ ವ್ಯಾಪಾರದಲ್ಲಿ ತೊಡಗುವ ಸರ್ಕಾರಿ ಶಾಲೆಯಲ್ಲಿ ಅಡುಗೆ ಕೆಲಸ ಮಾಡುವ ಹಳ್ಳಿ ಹೆಣ್ಣುಮಗಳ ಕಥೆಯಾಗಿದೆ. ಈ ಸಿನಿಮಾದಲ್ಲಿ ಶರಣಮ್ಮ ಚಟ್ಟಿ, ಚನ್ನೆಮ್ಮ ಅಬ್ಬಿಗೆರೆ, ಶಿವು ಅಬ್ಬಿಗೆರೆ, ಶ್ರುತಿ ಕೊಂಡೇನಹಳ್ಳಿ ಸೇರಿದಂತೆ ಅನೇಕ ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ.

  • BIFFES 2023- ಬೆಂಗಳೂರು ಚಿತ್ರೋತ್ಸವ SCHEDULE : ಮಾರ್ಚ್ 24 ರಿಂದ 30ರವರೆಗೆ

    BIFFES 2023- ಬೆಂಗಳೂರು ಚಿತ್ರೋತ್ಸವ SCHEDULE : ಮಾರ್ಚ್ 24 ರಿಂದ 30ರವರೆಗೆ

    ಮಾರ್ಚ್ 23 ರಿಂದ 14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ (BIFFES) ಆರಂಭವಾಗಲಿದ್ದು, 23 ರಂದು ಉದ್ಘಾಟನೆ ಮತ್ತು ಉದ್ಘಾಟನಾ ಸಿನಿಮಾವಾಗಿ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಚಿತ್ರ ಪ್ರದರ್ಶನವಾಗಲಿದೆ.

    (2023 ಮಾರ್ಚ್ 24)

    ಮಾರ್ಚ್ 24 ರಿಂದ 30ರವರೆಗೆ ಒಟ್ಟು ಎಂಟು ದಿನಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ. ಯಾವ ಸಿನಿಮಾಗಳು, ಯಾವ ದಿನಾಂಕ ಮತ್ತು ಸ್ಥಳದಲ್ಲಿ ನಡೆಯುತ್ತವೆ ಎನ್ನುವ ವಿವರವೂ ಈ ಪಟ್ಟಿಯಲ್ಲಿವೆ.

    (2023 ಮಾರ್ಚ್ 25)

    ಮಾರ್ಚ್ 24 ರಿಂದ ಬೆಂಗಳೂರಿನ ಒರಯನ್ ಮಾಲ್, ಕಲಾವಿದರ ಸಂಘ ಹಾಗೂ ಸುಚಿತ್ರಾ ಫಿಲ್ಮ್ಸ್ ನಲ್ಲಿ ಚಿತ್ರ ಪ್ರದರ್ಶನಗಳು ನಡೆಯಲಿವೆ. ಚಿತ್ರ ಪ್ರದರ್ಶನ, ಗೋಷ್ಠಿಗಳು, ಸಂದರ್ಶನ, ಸಿನಿಮಾ ಸ್ಪರ್ಧೆ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಚಿತ್ರೋತ್ಸವದ ಭಾಗವಾಗಿ ಆಯೋಜನೆ ಮಾಡಿದ್ದಾರೆ.

    (2023 ಮಾರ್ಚ್ 26)

    ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆರ್.ಆರ್.ಆರ್ ಸೇರಿದಂತೆ ಸಾಕಷ್ಟು ಹಿಟ್ ಚಿತ್ರಗಳಿಗೆ ಕಥೆ, ಚಿತ್ರಕಥೆ ಬರೆದಿರುವ ವಿ.ವಿಜಯೇಂದ್ರ ಪ್ರಸಾದ್ ಬರಲಿದ್ದಾರೆ. ಚಿತ್ರೋತ್ಸವದ ಸ್ಮರಣ ಸಂಚಿಕೆಯನ್ನು ಅವರು ಉದ್ಘಾಟನಾ ಸಮಾರಂಭದಲ್ಲಿ ಬಿಡುಗಡೆಗೊಳಿಸಲಿದ್ದಾರೆ.

    (2023 ಮಾರ್ಚ್ 27)

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಜಂಟಿಯಾಗಿ ಆಯೋಜಿಸಿರುವ ಈ ಚಿತ್ರೋತ್ಸವ ಮಾರ್ಚ್ 23 ರಿಂದ ಆರಂಭವಾಗಿ 30ನೇ ತಾರೀಖಿನವರೆಗೂ ನಡೆಯಲಿದೆ. ನೂರಕ್ಕೂ ಹೆಚ್ಚು ಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ.

    (2023 ಮಾರ್ಚ್ 28)

    ಈ ಚಿತ್ರೋತ್ಸವದಲ್ಲಿ ಒಟ್ಟು ಮೂರು ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಕನ್ನಡ ವಿಭಾಗ, ಇಂಡಿಯನ್ ವಿಭಾಗ ಹಾಗೂ ಏಷನ್ ವಿಭಾಗಗಳಲ್ಲಿ ಸ್ಪರ್ಧೆಗಳಿದ್ದು ಹತ್ತು ಲಕ್ಷ ರೂಪಾಯಿ ಬಹುಮಾನ ಕೂಡ ಇದೆ. ಚಿತ್ರೋತ್ಸವದ ಕೊನೆಯ ದಿನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

    (2023 ಮಾರ್ಚ್ 29)

    ಈ ಬಾರಿ ಖ್ಯಾತ ಫೋಟೋಗ್ರಾಫರ್ ಮೂರ್ತಿ ಅವರ ನೆನಪಿನಲ್ಲಿ ಹಲವು ಕಾರ್ಯಕ್ರಮಗಳು ನಡೆಯಲಿವೆ. ವಿಶೇಷವಾಗಿ ಫೋಟೋಗ್ರಫಿ ಮೇಲೆ ಕ್ಲಾಸ್ ಗಳನ್ನು ಆಯೋಜನೆ ಮಾಡಲಾಗಿದೆ. ಅಲ್ಲದೇ, ಮೂರ್ತಿ ಅವರ ಕುರಿತಾದ ಉಪನ್ಯಾಸ ಕೂಡ ಇದೆ.

    (2023 ಮಾರ್ಚ್ 30)

    ಚಿತ್ರೋತ್ಸವದ ಸಮಾರೋಪ ಸಮಾರಂಭವು ವಿಧಾನಸೌಧದಲ್ಲಿ ನಡೆಯಲಿದ್ದು, ಸಮಾರಂಭದ ಅತಿಥಿಯಾಗಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಭಾಗಿಯಾಗಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಸಚಿವರು ಮತ್ತು ಚಿತ್ರೋದ್ಯಮದ ಗಣ್ಯರು ಉಪಸ್ಥಿತರಿರಲಿದ್ದಾರೆ.

  • ಬೆಂಗಳೂರು ಚಿತ್ರೋತ್ಸವ : ಲಕ್ಷ ಲಕ್ಷ ಏರಿಕೆಯಾದ ಬಹುಮಾನ ಮೊತ್ತ

    ಬೆಂಗಳೂರು ಚಿತ್ರೋತ್ಸವ : ಲಕ್ಷ ಲಕ್ಷ ಏರಿಕೆಯಾದ ಬಹುಮಾನ ಮೊತ್ತ

    ಮಾರ್ಚ್ 23 ರಿಂದ ಬೆಂಗಳೂರು (Bangalore) ಅಂತಾರಾಷ್ಟ್ರೀಯ ಚಿತ್ರೋತ್ಸವ ನಿಗದಿಯಾಗಿದೆ. ಇದು 14ನೇ ಅಂತಾರಾಷ್ಟ್ರೀಯ ಬೆಂಗಳೂರು ಚಿತ್ರೋತ್ಸವ (Film Festival) ಆಗಿದ್ದು, ನಾನಾ ರೀತಿಯ ಬದಲಾವಣೆಗಳನ್ನು ಮಾಡುವ ಮೂಲಕ ಮತ್ತಷ್ಟು ನಿರೀಕ್ಷೆ ಮೂಡುವಂತೆ ಮಾಡಿದ ಕರ್ನಾಟಕ ಚಲನಚಿತ್ರ ಅಕಾಡೆಮಿ. ಸರಕಾರದಿಂದ ಹಣ ಬಿಡುಗಡೆ ಆಗಿಲ್ಲ ಎನ್ನುವ ಕಾರಣಕ್ಕಾಗಿ ಚಿತ್ರೋತ್ಸವ ನಡೆಯುತ್ತದೋ ಇಲ್ಲವೋ ಎಂಬ ಅನುಮಾನ ಮೂಡಿತ್ತು. ಕೊನೆಗೂ ಹಣ ಬಿಡುಗಡೆಯಾಗಿ ಚಿತ್ರೋತ್ಸವದ ಕೆಲಸಗಳಿಗೆ ವೇಗ ಬಂದಿದೆ.

    ಈ ಬಾರಿ ನಡೆಯುವ ಚಿತ್ರೋತ್ಸವದ ಕುರಿತು ಅಕಾಡೆಮಿ ಅಧ್ಯಕ್ಷ ಅಶೋಕ್ ಕಶ್ಯಪ್ (Ashok Kashyap) ನಿನ್ನೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಹಲವು ವಿಷಯಗಳನ್ನು ಹಂಚಿಕೊಂಡರು. ಅದರಲ್ಲೂ ಸಿನಿಮಾ ಸ್ಪರ್ಧೆಯಲ್ಲಿ ಗೆದ್ದ ಚಿತ್ರಗಳ ಬಹುಮಾನ ಮೊತ್ತವನ್ನು ತಿಳಿಸಿ ಅಚ್ಚರಿ ಮೂಡಿಸಿದರು. ಈ ಬಾರಿ ಮೊದಲ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಪಡೆದ ಚಿತ್ರಕ್ಕೆ ಬರೋಬ್ಬರಿ ಹತ್ತು ಲಕ್ಷ ರೂಪಾಯಿ ಸಿಗುವ ಸಾಧ್ಯತೆ ಇದೆ. ಈವರೆಗೂ ಮೂರು ಲಕ್ಷ ರೂಪಾಯಿಗಳನ್ನು ಮಾತ್ರ ನೀಡಲಾಗುತ್ತಿತ್ತು. ಈ ಬಾರಿ ಹತ್ತು ಲಕ್ಷಕ್ಕೆ ಏರಿಸಿ ಎಂದು ಸರಕಾರಕ್ಕೆ ಅಕಾಡೆಮಿ ಶಿಫಾರಸು ಮಾಡಿದೆಯಂತೆ. ಇದನ್ನೂ ಓದಿ: ನನ್ನ ಸಾವಿಗೆ ಇವರೇ ಕಾರಣವೆಂದು ಸೂಸೈಡ್‌ ನೋಟ್‌ ಬರೆದಿಟ್ಟ ʻವರ್ಷಧಾರೆʼ ನಟಿ ಪಾಯಲ್‌

    ಏಷಿಯನ್, ಭಾರತೀಯ ಹಾಗೂ ಕನ್ನಡ ಸಿನಿಮಾ ಹೀಗೆ ಮೂರು ವಿಭಾಗಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತಿಯ ಬಹುಮಾನಗಳನ್ನು ನೀಡಲಾಗುತ್ತಿದ್ದು, ಕ್ರಮವಾಗಿ 10 ಲಕ್ಷ ರೂ, 5 ಲಕ್ಷ ರೂ ಹಾಗೂ 3 ಲಕ್ಷ ರೂಪಾಯಿ ಬಹುಮಾನವಾಗಿ ಇರಲಿದೆ ಎಂದೂ ಕಶ್ಯಪ್ ತಿಳಿಸಿದ್ದಾರೆ. ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮೇಲೆ ಮಾರ್ಚ್ 23 ರಂದು ಸಂಜೆ 6 ಗಂಟೆಗೆ ಚಿತ್ರೋತ್ಸವ ಉದ್ಘಾಟನೆಯಾಗಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಚಿತ್ರೋತ್ಸವವನ್ನು ಉದ್ಘಾಟಿಸಲಿದ್ದಾರೆ.

    ಈ ಬಾರಿಯ ಚಿತ್ರೋತ್ಸವದ ಮತ್ತೊಂದು ವಿಶೇಷವೆಂದರೆ, ಮೊನ್ನೆಯಷ್ಟೇ ನಡೆದ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಏಳು ಆಸ್ಕರ್ ಪ್ರಶಸ್ತಿಯನ್ನು ಪಡೆದಿರುವ ‘ಎವ್ರಿಥಿಂಗ್ ಎವ್ರಿವೇರ್ ಆಲ್ ಆಟ್ ಒನ್ಸ್’ ಸಿನಿಮಾ ಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣಲಿದೆ. ಜೊತೆಗೆ ವಿಶ್ವದ 61 ಸಿನಿಮಾಗಳು ಬೆಂಗಳೂರು ಚಿತ್ರೋತ್ಸವದಲ್ಲಿ ಭಾಗಿಯಾಗಲಿವೆ. ಒಟ್ಟು 50 ದೇಶಗಳ 200 ಚಿತ್ರಗಳನ್ನು ಈ ಆವೃತ್ತಿಯಲ್ಲಿ ಪ್ರದರ್ಶಿಸಲು ತೀರ್ಮಾನಿಸಲಾಗಿದೆ ಎಂದು ಕಶ್ಯಪ್ ತಿಳಿಸಿದ್ದಾರೆ.

  • ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ : ಮುಂದಿನ 7 ದಿನಗಳ ಮುನ್ನೋಟ

    ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ : ಮುಂದಿನ 7 ದಿನಗಳ ಮುನ್ನೋಟ

    13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಗುರುವಾರವಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ಕೊಟ್ಟಿದ್ದಾರೆ. ಫೆ.3 ರಿಂದ ಫೆ.10 ವರೆಗೆ ಏಳು ದಿನಗಳ ಕಾಲ ಚಿತ್ರೋತ್ಸವ ನಡೆಯಲಿದೆ.

    ಈ ಬಾರಿ 55  ರಾಷ್ಟ್ರಗಳ 200 ಚಲನಚಿತ್ರಗಳು ಪ್ರದರ್ಶನವಾಗಲಿದ್ದು ಅವುಗಳಲ್ಲಿ ಪ್ರಾದೇಶಿಕ,  ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ ಚಿತ್ರಗಳು ಆಯ್ಕೆಯಾಗಿವೆ. ಚಿತ್ರಗಳನ್ನು ಪ್ರದರ್ಶಿಸಲ ಬೆಂಗಳೂರಿನ ಒರಾಯನ್ ಮಾಲ್‌ನಲ್ಲಿ ೧೧ ಪ್ರದರ್ಶನ ಮಂದಿರಗಳನ್ನು ಮೀಸಲಿಡಲಾಗಿದೆ. ಇಲ್ಲಿ ಚಿತ್ರ ಪ್ರದರ್ಶನ ಮಾತ್ರವಲ್ಲದೆ ನಿರ್ದೇಶಕರು, ಕಲಾವಿದರು, ತಂತ್ರಜ್ಞರೊಂದಿಗೆ ಸಂವಾದ, ಸಂದರ್ಶನವನ್ನು ಏರ್ಪಡಿಸಲಾಗಿದೆ. ಅಲ್ಲದೇ, ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘ ಡಾ.ರಾಜ್ ಭವನ ಮತ್ತು  ಸುಚಿತ್ರಾ ಫಿಲಂ ಸೊಸೈಟಿಯಲ್ಲೂ ಚಿತ್ರಗಳ ಪ್ರದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಇದನ್ನೂ ಓದಿ : ಮಾರ್ಚ್ 27ಕ್ಕೆ ಕೆಜಿಎಫ್ 2 ಟ್ರೈಲರ್ ರಿಲೀಸ್

    ಸಿನಿಮಾ ಕ್ಷೇತ್ರದ ಹೆಸರಾಂತ ವೃತ್ತಿಪರ ಪರಿಣಿತರು, ಕಲಾವಿದರು, ತಂತ್ರಜ್ಞರಿಂದ ನಾನಾ ವಿಷಯಗಳ ಕುರಿತಾಗಿ ಉಪನ್ಯಾಸ ಹಾಗೂ ಸಂವಾದವನ್ನೂ ಈ ಸಂದರ್ಭದಲ್ಲಿ ಏರ್ಪಡಿಸಿದ್ದಾರೆ. ಈ ಬಾರಿ ಚಿತ್ರಮಂದಿರಗಳಲ್ಲಿನ ಪ್ರದರ್ಶನದ ಜೊತೆಗೆ, ಆನ್‌ಲೈನ್‌ನಲ್ಲೂ ಪ್ರದರ್ಶನದ ಅನುಕೂಲ ಕಲ್ಪಿಸಲಾಗಿದ್ದು ವಿದೇಶ.

    ಈ ಬಾರಿಯ ಚಲನಚಿತ್ರೋತ್ಸವದ ವಸ್ತುವಿಷಯವಾಗಿ ಪ್ರದರ್ಶಕ ಕಲೆಗಳು ಹಾಗೂ ಆಜಾದಿ ಕಿ ಅಮೃತ್ ಮಹೋತ್ಸವವಾಗಿ ಆಯ್ದುಕೊಳ್ಳಲಾಗಿದೆ.  ಏಷ್ಯಾ ಚಲನಚಿತ್ರ ವಿಭಾಗ, ಭಾರತೀಯ ಚಲನಚಿತ್ರಗಳ ವಿಭಾಗ, ಕನ್ನಡ ಚಲನಚಿತ್ರಗಳ ಸ್ಪರ್ಧಾ ವಿಭಾಗ, ಕನ್ನಡದ ಜನಪ್ರಿಯ ಮನೋರಂಜನಾ ಪ್ರಧಾನ ಚಿತ್ರಗಳ ಸ್ಪರ್ಧಾ ವಿಭಾಗ,  ಸಮಕಾಲೀನ ವಿಶ್ವಸಿನಿಮಾ, ವಿದೇಶವೊಂದರ ವಿಶೇಷ ನೋಟ, ಈಶಾನ್ಯ ರಾಜ್ಯಗಳ ವಿಶೇಷ ನೋಟ ಹೀಗೆ ನಾನಾ ವಿಭಾಗಗಳಲ್ಲಿ ಸ್ಪರ್ಧೆ ಮತ್ತು ಸಿನಿಮಾ ಪ್ರದರ್ಶನಗಳನ್ನು ಕೂಡ ಈ ಚಿತ್ರೋತ್ಸವದಲ್ಲಿ ಆಯೋಜನೆ ಮಾಡಲಾಗಿದೆ.

    ಶ್ರೀಮತಿ ಭಾರತಿ ವಿಷ್ಣುವರ್ಧನ್ ಜೀವನ ಕುರಿತಾದ ಕಿರುಚಿತ್ರ ಪ್ರದರ್ಶನ, ಆಜಾದಿ ಕಿ ಅಮೃತ್‌ಮಹೋತ್ಸವ್‌ ನೆನಪಿನಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದ ಚಿತ್ರಗಳು ಪ್ರದರ್ಶನಗೊಳ್ಳಲಿವೆ. ತುಳು ಚಿತ್ರರಂಗದ ಸುವರ್ಣ ಮಹೋತ್ಸವಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಇತ್ತೀಚೆಗಷ್ಟೇ ಅಗಲಿರುವ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಪುನೀತ್ ರಾಜ್ ಕುಮಾರ್ ಮತ್ತು ಕಳೆದ ವರ್ಷ ನಿಧನರಾದ ಸಂಚಾರಿ ವಿಜಯ್ ಅವರ ಸಾಧನೆಯನ್ನು ಚಿತ್ರೋತ್ಸವದಲ್ಲಿ ಸ್ಮರಿಸಲಾಗುವುದು. ಭಾರತದಿಂದ ಆಹ್ವಾನಿತರಾದ ಪ್ರತಿನಿಧಿಗಳಲ್ಲಿ ಚಲನಚಿತ್ರ ನಿರ್ಮಾಪಕರು, ಚಿತ್ರೋತ್ಸವ ಸಂಘಟಕರು/ಕಾರ್ಯಕ್ರಮ ನಿಯೋಜಕರು ಹಾಗೂ ಪಶ್ಚಿಮ ಬಂಗಾಳ, ಮಹಾರಾಷ್ಟ, ರಾಜಸ್ಥಾನ, ತೆಲಂಗಾಣ, ದೆಹಲಿ, ಕೇರಳ, ತಮಿಳುನಾಡು ಮತ್ತು ಈಶಾನ್ಯ ರಾಜ್ಯಗಳ ಪತ್ರಕರ್ತರು ಮತ್ತು ವಿಮರ್ಶಕರು ಸೇರಿದ್ದಾರೆ ಚಿತ್ರೋತ್ಸವದಲ್ಲಿ ಭಾಗಿಯಾಗಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

    ಸಮಾರೋಪ ಸಮಾರಂಭ ಮಾರ್ಚ್ 10ರಂದು ಸಂಜೆ ನಡೆಯಲಿದ್ದು ಅಂದು ಏಷಿಯನ್, ಭಾರತೀಯ ಹಾಗು ಕನ್ನಡ ಚಲನಚಿತ್ರ ಸ್ಪರ್ಧೆಗಳ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.

  • ಪಟ್ಟಭದ್ರ ಹಿತಾಸಕ್ತಿಯಿಂದ ಪೆದ್ರೊ ವಂಚಿತ : ಚಿತ್ರೋತ್ಸವದ ಬಗ್ಗೆ ರಿಷಭ್ ಶೆಟ್ಟಿ ಅಸಮಾಧಾನ

    ಪಟ್ಟಭದ್ರ ಹಿತಾಸಕ್ತಿಯಿಂದ ಪೆದ್ರೊ ವಂಚಿತ : ಚಿತ್ರೋತ್ಸವದ ಬಗ್ಗೆ ರಿಷಭ್ ಶೆಟ್ಟಿ ಅಸಮಾಧಾನ

    ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಒಂದಿಲ್ಲೊಂದು ಕಾರಣದಿಂದಾಗಿ ಪ್ರತಿ ವರ್ಷವೂ ವಿವಾದದಿಂದಲೇ ಶುರುವಾಗುತ್ತದೆ. ಸತತ 13 ವರ್ಷಗಳಿಂದ ಇದೇ ಆಗಿದೆ. ಈ ವರ್ಷವಾದರೂ ವಿವಾದಮುಕ್ತ ಚಿತ್ರೋತ್ಸವ ನಡೆಯಲಿ ಎನ್ನುವುದು ಚಿತ್ರೋದ್ಯಮದ ಆಸೆಯಾಗಿತ್ತು. ಕೊನೆಗೂ ಆಸೆ ಈಡೇರಲಿಲ್ಲ. ತಮ್ಮ ನಿರ್ಮಾಣದ ‘ಪೆದ್ರೊ’ ಚಿತ್ರಕ್ಕೆ ಚಿತ್ರೋತ್ಸವದಲ್ಲಿ ಮನ್ನಣೆ ಸಿಕ್ಕಿಲ್ಲವೆಂದ ನಿರ್ದೇಶಕ ಕಂ ನಿರ್ಮಾಪಕ ರಿಷಭ್ ಶೆಟ್ಟಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ : EXCLUSIVE: ಸ್ಯಾಂಡಲ್‌ವುಡ್‌ಗೆ ವಾಪಸ್ಸಾದ ಮೀಟೂ ಪರ ಧ್ವನಿ ಎತ್ತಿದ್ದ ನಟಿ ಸಂಗೀತಾ

    “ಜಗತ್ತಿನ ಹಲವು ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು, ಪ್ರಶಸ್ತಿ ಪಡೆದು, ವಿಮರ್ಶಕರಿಂದ ಪ್ರಶಂಸೆ ಪಡೆದ ಪೆದ್ರೂ ಚಿತ್ರ ನಮ್ಮ ಬೆಂಗಳೂರಿನ ಚಿತ್ರೋತ್ಸವಕ್ಕೆ ಯಾಕೋ ರುಚಿಸಿಲ್ಲ. ಕೆಲವೊಮ್ಮೆ ಕಹಿಗುಳಿಗೆಯನ್ನೂ ನುಂಗಬೇಕು ಆರೋಗ್ಯದ ದೃಷ್ಟಿಯಿಂದ. ನಮ್ಮ ಸಿನಿಮಾ ಚಿತ್ರೋತ್ಸವದಿಂದ ವಂಚಿತವಾಯಿತು ಎಂಬುದು ಎಷ್ಟು ಸತ್ಯವೋ ನಮ್ಮದೇ ಊರಿನ ಜನ ತಮ್ಮದೇ ಸಿನಿಮಾವನ್ನು ವೀಕ್ಷಿಸಲು ವಂಚಿತರಾದರು ಎಂಬುದು ಅಷ್ಟೇ ಸತ್ಯ. ನಮ್ಮಲ್ಲಿಯ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅದಕ್ಕೆ ತಡೆಗಾಲು ಒಡ್ಡುವ ಪ್ರಯತ್ನ ಮಾಡಿದ್ದಾರೆ” ಎಂದು ಸುದೀರ್ಘವಾದ ಪತ್ರ ಬರೆದು, ಆರೋಪಿಸಿದ್ದಾರೆ ರಿಷಭ್. ಇದನ್ನೂ ಓದಿ : ಕಾಲಿಂದ ಕುಡಿಕೆಯೊದ್ದ ರಾಣಾ: ಪವರ್ ಸ್ಟಾರ್ ಪವನ್ ಕಲ್ಯಾಣ್ ಸಿನಿಮಾ ವಿರುದ್ಧ ದೂರು ದಾಖಲು

    ರಿಷಭ್ ಅವರ ಆರೋಪಕ್ಕೆ ಮಂಸೋರೆ, ಅಭಯ್ ಸಿಂಹ ಸೇರಿದಂತೆ ಕೆಲ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕರು ಧ್ವನಿ ಗೂಡಿಸಿದ್ದಾರೆ. ಒಳ್ಳೊಳ್ಳೆ ಸಿನಿಮಾಗಳಿಗೆ ಮಾನ್ಯತೆ ಸಿಗಲಿ ಎಂದು ಪ್ರತಿಕ್ರಿಯಿಸಿದ್ದಾರೆ.

  • ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ : ನಾಳೆ ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ

    ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ : ನಾಳೆ ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ

    13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಫೆ.3 ರಿಂದ ಏಳು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ.  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಚಿತ್ರೋತ್ಸವವನ್ನು ಉದ್ಘಾಟಿಸಿ ಚಾಲನೆ ನೀಡಲಿದ್ದಾರೆ. ಬೆಂಗಳೂರಿನ ಜಿ.ಕೆ.ವಿ.ಕೆ ಸಭಾಂಗಣದಲ್ಲಿ ಸಂಜೆ 4.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ಎಂ.ರಾಜೀವ್ ಚಂದ್ರಶೇಖರ್ ಗೌರವಾನ್ವಿತ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥ್ ನಾರಾಯಣ್, ಕಂದಾಯ ಸಚಿವ ಆರ್.ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ್, ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್, ಆಹಾರ, ನಾಗರೀಕ ಸರಬರಾಜು ಸಚಿವ ಕೆ.ಗೋಪಾಲಯ್ಯ, ತೋಟಗಾರಿಕೆ ಸಚಿವ ಮುನಿರತ್ನ, ಪೌರಾಡಳಿತ ಮತ್ತು ಸಣ್ಣ ಕೈಗಾರಿಕಾ ಸಚಿವ ಎಂಟಿಬಿ ನಾಗರಾಜ್, ಶಾಸಕರಾದ ಎಸ್.ಆರ್. ವಿಶ್ವನಾಥ್, ಎಂ.ಕೃಷ್ಣಪ್ಪ, ಎಂ.ಸತೀಶ್ ರೆಡ್ಡಿ, ಬಿ.ಕೆ ಹರಿಪ್ರಸಾದ್ ಮುಖ್ಯ ಅತಿಥಿಗಳಾಗಿದ್ದಾರೆ. ಇದನ್ನೂ ಓದಿ : ಅದ್ಧೂರಿ ಸಮಾರಂಭದಲ್ಲಿ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಹೀರೋ ಆಗಿ ಲಾಂಚ್

    ನಟ ದರ್ಶನ್ ಚಿತ್ರೋತ್ಸವದ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರೆ, ವಿಶೇಷ ಅತಿಥಿಯಾಗಿ ಹಿರಿ ನಟಿ ಭಾರತಿ ವಿಷ್ಣುವರ್ಧನ್ ಮತ್ತು ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಚಲನಚಿತ್ರ ನಿರ್ದೇಶಕ ಪ್ರಿಯದರ್ಶನ್ ಆಗಮಿಸುತ್ತಿದ್ದಾರೆ. ಇದನ್ನೂ ಓದಿ : ದುನಿಯಾ ವಿಜಯ್ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್

    ಚಿತ್ರೋತ್ಸವದ ಕುರಿತು ಕರ್ನಾಟಕ ಚಲನಚಿತ್ರ ಅಕಾಡಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಪ್ರಾಸ್ತಾವಿಕ ನುಡಿಗಳನ್ನು ಆಡಿದರೆ, ನಟಿ ಪ್ರಣೀತಾ ಸುಭಾಷ್, ವಾಣಿಜ್ಯ ಮಂಡಳಿಯ ಅಧ್ಯಕ್ಷ ಡಿ.ಆರ್.ಜೈರಾಜ್ ಮತ್ತು ಮುಂತಾದವರು ವೇದಿಕೆಯ ಮೇಲೆ ಉಪಸ್ಥಿತರಿರಲಿದ್ದಾರೆ.