Tag: ಫುಡ್ ಪಾಯಿಸನ್

  • ರಾಯಚೂರು | ಫುಡ್ ಪಾಯಿಸನ್‌ನಿಂದ ತಂದೆ, ಇಬ್ಬರು ಮಕ್ಕಳು ಸಾವು

    ರಾಯಚೂರು | ಫುಡ್ ಪಾಯಿಸನ್‌ನಿಂದ ತಂದೆ, ಇಬ್ಬರು ಮಕ್ಕಳು ಸಾವು

    ರಾಯಚೂರು: ಫುಡ್ ಪಾಯಿಸನ್‌ನಿಂದಾಗಿ (Food poisoning) ತಂದೆ, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ರಾಯಚೂರಿನ (Raichur) ಸಿರವಾರ ತಾಲೂಕಿನ ಕೆ.ತಿಮ್ಮಾಪುರ (K Thimmapura) ಗ್ರಾಮದಲ್ಲಿ ಘಟನೆ ನಡೆದಿದೆ.

    ತಂದೆ ರಮೇಶ್(38), ಮಗಳು ನಾಗಮ್ಮ(8), ದೀಪಾ(6) ಮೃತ ದುರ್ವೈವಿಗಳು. ತಾಯಿ ಪದ್ಮಾ, ಮಕ್ಕಳಾದ ಕೃಷ್ಣ, ಚೈತ್ರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಸೋಶಿಯಲ್‌ ಮೀಡಿಯಾದಲ್ಲಿ ಫೋಟೋ ವೈರಲ್‌ ಮಾಡಿ ಕಿರುಕುಳ – ಡ್ಯಾಂಗೆ ಹಾರಿ ಯುವತಿ ಆತ್ಮಹತ್ಯೆ

    ಬೆಂಗಳೂರಿಗೆ ಗುಳೆ ಹೋಗಿದ್ದ ರಮೇಶ್ ಕುಟುಂಬವು 4 ದಿನಗಳ ಹಿಂದೆ ಗ್ರಾಮಕ್ಕೆ ಬಂದಿದ್ದರು. ಸೋಮವಾರ ಜಮೀನಿನಲ್ಲಿ ಬೆಳೆದಿದ್ದ ತೊಗರಿ ಬೆಳೆಗೆ ರಮೇಶ್ ಕ್ರಿಮಿನಾಶಕ ಸಿಂಪಡಣೆ ಮಾಡಿದ್ದರು. ಇದನ್ನೂ ಓದಿ: ಲವ್ವರ್‌ ಜೊತೆ ಸೇರಿ ಪತಿ ಹತ್ಯೆ – ಟೈಲ್ಸ್‌ನ ಕೆಳಗೆ ಮೃತದೇಹ ಹೂತಿಟ್ಟ ಪತ್ನಿ!

    ಬಳಿಕ ರಾತ್ರಿ ರೊಟ್ಟಿ ಚವಳೆಕಾಯಿ ಪಲ್ಯ, ಅನ್ನ, ಸಾಂಬರ್ ಊಟ ಮಾಡಿದ್ದರು. ರಾತ್ರಿ 3 ಗಂಟೆ ಸುಮಾರಿಗೆ ಕುಟುಂಬಸ್ಥರಿಗೆ ಹೊಟ್ಟೆನೋವು ಕಾಣಿಸಿಕೊಂಡು ಅಸ್ವಸ್ಥರಾಗಿದ್ದರು. ಬಳಿಕ ಅವರನ್ನು ಲಿಂಗಸುಗೂರು ಆಸ್ಪತ್ರೆಗೆ ದಾಖಲಾಗಿತ್ತು.

    ಆಸ್ಪತ್ರೆಗೆ ರವಾನಿಸುವ ವೇಳೆ ಮಾರ್ಗ ಮಧ್ಯದಲ್ಲೇ ದೀಪಾ ಕೊನೆಯುಸಿರೆಳೆದಿದ್ದಾಳೆ. ಬಳಿಕ ರಮೇಶ್ ಹಾಗೂ ನಾಗಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇನ್ನುಳಿದ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯು ಕವಿತಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • Chitradurga | ಮದುವೆ ಊಟ ಸೇವಿಸಿದ್ದ 100ಕ್ಕೂ ಅಧಿಕ ಮಂದಿ ಅಸ್ವಸ್ಥ

    Chitradurga | ಮದುವೆ ಊಟ ಸೇವಿಸಿದ್ದ 100ಕ್ಕೂ ಅಧಿಕ ಮಂದಿ ಅಸ್ವಸ್ಥ

    ಚಿತ್ರದುರ್ಗ: ಮದುವೆ ಊಟ ಸೇವಿಸಿದ್ದ 100ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿರುವ (Food Poison) ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹೊಸದುರ್ಗ (Hosadurga) ತಾಲೂಕಿನ ಮಲ್ಲಿಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಸೋಮವಾರ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಲ್ಲಿಹಳ್ಳಿ ಗ್ರಾಮದ ಪ್ರಭುಲಿಂಗಪ್ಪ ಪುತ್ರನ ವಿವಾಹ ಸಂಭ್ರಮದಲ್ಲಿ ಘಟನೆ ನಡೆದಿದೆ. ಗವಿರಂಗಾಪುರ ಬೆಟ್ಟದಲ್ಲಿ ಭಾನುವಾರ ಮದುವೆ ನಡೆದಿತ್ತು. ಸೋಮವಾರ ಬೆಳಗ್ಗೆಯಿಂದ ಮದುವೆ ಹಾಜರಾದವರಿಗೆ ರಾತ್ರಿಯಿಂದಲೇ ಹೊಟ್ಟೆನೋವು ಶುರುವಾಗಿದೆ. ಬೆಳಗ್ಗೆ ವಾಂತಿಬೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ಏರ್‌ಸ್ಟ್ರೈಕ್‌ಗೆ ಪಾಕ್‌ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ – ವ್ಯವಹಾರವೇ ಸ್ಥಗಿತ

    ಶ್ರೀರಾಂಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ರೋಗಿಗಳು ದಾಖಲಾಗಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೆಡ್‌ಗಳು ಭರ್ತಿ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಮಲ್ಲಿಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿಕಿತ್ಸಾ ಶಿಬಿರ ಆಯೋಜನೆ ಮಾಡಲಾಗಿದೆ. ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಸೈನಿಕರಿಗೆ ಮೋದಿ ಆತ್ಮಸ್ಥೈರ್ಯ, ಉಗ್ರರಿಗೆ ಇದು ಎಚ್ಚರಿಕೆ: ಬಿ.ವೈ ವಿಜಯೇಂದ್ರ

  • ಮಳವಳ್ಳಿ ಫುಡ್ ಪಾಯಿಸನ್ ಕೇಸ್ – ಆರು ಮಂದಿ ಮೇಲೆ ಎಫ್‌ಐಆರ್

    ಮಳವಳ್ಳಿ ಫುಡ್ ಪಾಯಿಸನ್ ಕೇಸ್ – ಆರು ಮಂದಿ ಮೇಲೆ ಎಫ್‌ಐಆರ್

    ಮಂಡ್ಯ: ಜಿಲ್ಲೆಯ ಮಳವಳ್ಳಿ (Malavalli) ಖಾಸಗಿ ಶಾಲೆಯಲ್ಲಿ ಫುಡ್ ಪಾಯಿಸನ್ (Food Poison) ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಳಿ ಹಬ್ಬದ ಆಯೋಜಕರು, ಆಹಾರ ತಯಾರಕರು ಹಾಗೂ ಶಾಲೆಯ ಮುಖ್ಯಸ್ಥರು ಸೇರಿದಂತೆ 6 ಮಂದಿಯ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ.

    ಶುಕ್ರವಾರ ಮಳವಳ್ಳಿ ಪಟ್ಟಣ ಮದನ್ ಲಾಲ್ ಕಲ್ಯಾಣ ಮಂಟಪದಲ್ಲಿ ಪುಷ್ಪೇಂದ್ರ ಕುಮಾರ್ ಹೋಳಿ ಹಬ್ಬ ಆಚರಣೆ ಮಾಡಿದ್ದು, ಈ ಹೋಳಿ ಹಬ್ಬಕ್ಕೆ ಸಿದ್ದರಾಜು ಎಂಬವರ ಹೋಟೆಲ್‌ನಲ್ಲಿ ವೆಜಿಟೇಬಲ್ ಪಲಾವ್ ಮಾಡಿಸಲಾಗಿತ್ತು. ಇನ್ನೂ ಕಾಗೇಪುರದ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗೆ ಉಳಿಕೆ ವೆಜಿಟೇಬಲ್ ಪಲಾವ್‌ನ್ನು ನೀಡಲಾಗಿತ್ತು. ಇದನ್ನೂ ಓದಿ: ಕನ್ನಡ ಸಂಘಟನೆಗಳ ಪ್ರತಿಭಟನೆ ಬೆನ್ನಲ್ಲೇ ನೋಟಿಫಿಕೇಶನ್‌ನಲ್ಲಿ ಅಕ್ಷರದೋಷ ಸರಿಪಡಿಸ್ತೇವೆ ಎಂದ BMRCL

    ಈ ವೆಜಿಟೇಬಲ್ ಪಲಾವ್ ತಿಂದ 29 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಇನ್ನೂ ಹೋಳಿಯಲ್ಲಿ ಭಾಗಿಯಾದ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು. ಇದನ್ನೂ ಓದಿ: ರಾಜ್ಯಸಭೆಯಲ್ಲಿ ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಈರಣ್ಣ ಕಡಾಡಿ

    ಈ ಪ್ರಕರಣ ಸಂಬಂಧ ಹೋಳಿ ಆಯೋಜಕ ಪುಷ್ಪೇಂದ್ರ, ಹೋಟೆಲ್ ಮಾಲೀಕ ಸಿದ್ದರಾಜು, ಕಲ್ಯಾಣ ಮಂಟಪ ಸಿಬ್ಬಂದಿ ಕೃಷ್ಣ, ಗೋಕುಲ ವಿದ್ಯಾ ಸಂಸ್ಥೆ ಮುಖ್ಯಸ್ಥ ಲಂಕೇಶ್, ಕಾರ್ಯದರ್ಶಿ ಜಗದೀಶ್, ಕೆಲಸಗಾರ ಅಭಿಷೇಕ್ ಮೇಲೆ ಬಿಇಓ ಉಮಾ ನೀಡಿದ ಮೇರೆಗೆ ಎಫ್‌ಐಆರ್ ಹಾಕಲಾಗಿದೆ. ಇದನ್ನೂ ಓದಿ: ಸೂಲಿಬೆಲೆ ವಿರುದ್ಧ ಉಳ್ಳಾಲದಲ್ಲಿ ಎಫ್‌ಐಆರ್‌ ದಾಖಲು

  • ಮಾಂಸಾಹಾರ ಸೇವನೆಯಿಂದ ಫುಡ್ ಪಾಯಿಸನ್ – 20 ಮಂದಿ ಅಸ್ವಸ್ಥ, 10 ಮಂದಿ ಆಸ್ಪತ್ರೆಗೆ ದಾಖಲು

    ಮಾಂಸಾಹಾರ ಸೇವನೆಯಿಂದ ಫುಡ್ ಪಾಯಿಸನ್ – 20 ಮಂದಿ ಅಸ್ವಸ್ಥ, 10 ಮಂದಿ ಆಸ್ಪತ್ರೆಗೆ ದಾಖಲು

    ರಾಯಚೂರು: ದೇವರ ಕಾರ್ಯಕ್ಕೆ ಮಾಡಿದ್ದ ಮಾಂಸಾಹಾರ ಸೇವಿಸಿದ ಬಳಿಕ ವಾಂತಿ ಭೇದಿಯಾಗಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಲಿಂಗಸುಗೂರು (Lingasuguru) ತಾಲೂಕಿನ ಪರಂಪೂರ ತಾಂಡದಲ್ಲಿ ನಡೆದಿದೆ.

    ಬುಧವಾರ ಮಧ್ಯಾಹ್ನದ ಊಟದ ಬಳಿಕ ಸಂಜೆ ವೇಳೆಗೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಮಕ್ಕಳು ಹಿರಿಯರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದ್ದು ಸುಮಾರು 10 ಜನರಿಗೆ ವಾಂತಿ ಭೇದಿಯಿಂದ ನಿರ್ಜಲೀಕರಣವಾಗಿದೆ. ತೀವ್ರ ಅಸ್ವಸ್ಥಗೊಂಡ 10 ಜನರನ್ನ ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರಿಗೆ ಗ್ರಾಮದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಎಫ್‌16 ಯುದ್ಧ ವಿಮಾನ ಹಾರಿಸಿದ್ದ ರತನ್‌ ಟಾಟಾ

    ಸುಮಾರು 250 ಕುಟುಂಬಗಳು ವಾಸಿಸುವ ತಾಂಡದಲ್ಲಿ ಘಟನೆ ನಡೆದಿದೆ. ದೇವರ ಕಾರ್ಯಕ್ಕಾಗಿ ಮಾಡಿದ್ದ ಮಾಂಸಾಹಾರ ಸೇವಿಸಿದವರು ಮಾತ್ರ ಅನಾರೋಗ್ಯಕ್ಕೀಡಾಗಿದ್ದಾರೆ. ಸ್ಥಳಕ್ಕೆ ತಾಲೂಕು ಆರೋಗ್ಯಾಧಿಕಾರಿ ಅಮರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಹೋಗಿ ಬಾ ನನ್ನ ಗೆಳೆಯ – ರತನ್ ಟಾಟಾ ನಿಧನಕ್ಕೆ ಸ್ನೇಹಿತೆ ಸಿಮಿ ಭಾವುಕ ಪೋಸ್ಟ್​

     

  • ಚಿಕನ್‌, ಗೀರೈಸ್‌ ತಿಂದು ಫುಡ್‌ ಪಾಯಿಸನ್‌ – ನರ್ಸಿಂಗ್‌ ಕಾಲೇಜಿನ 137 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

    ಚಿಕನ್‌, ಗೀರೈಸ್‌ ತಿಂದು ಫುಡ್‌ ಪಾಯಿಸನ್‌ – ನರ್ಸಿಂಗ್‌ ಕಾಲೇಜಿನ 137 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

    ಮಂಗಳೂರು: ನರ್ಸಿಂಗ್‌ ಕಾಲೇಜಿನ (Nursing College) ಹಾಸ್ಟೆಲ್‌ನ 137ಕ್ಕೂ ಹೆಚ್ಚು ವಿದ್ಯಾರ್ಥಿಗಳು ಫುಡ್‌ ಪಾಯಿಸನ್‌ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರಿನಲ್ಲಿ (Mangaluru) ನಡೆದಿದೆ.

    ಮಂಗಳೂರು ಹೊರವಲಯದ ಶಕ್ತಿ ನಗರದಲ್ಲಿರುವ ಪ್ರತಿಷ್ಠಿತ ಸಿಟಿ ಆಸ್ಪತ್ರೆಯ (City Hospital) ನರ್ಸಿಂಗ್ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಚಿಕನ್‌, ಗೀರೈಸ್‌ ತಿಂದು ಫುಡ್‌ ಪಾಯಿಸನ್‌ ಆಗಿ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದಾರೆ. ನಗರದ ಸಿಟಿ ಆಸ್ಪತ್ರೆ, ಎ.ಜೆ. ಆಸ್ಪತ್ರೆ, ಕೆಎಂಸಿ ಆಸ್ಪತ್ರೆಗಳಿಗೆ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಮಗು ಅಪಹರಣಕ್ಕೆ ಮುಸುಕುದಾರಿಗಳು ಯತ್ನ

    ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಲೇಜು ಆಡಳಿತ ಮಂಡಳಿ ವಿರುದ್ಧ ನಿರ್ಲಕ್ಷ್ಯದ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಗಳು ದಾಖಲಾಗಿರುವ ಆಸ್ಪತ್ರೆಗಳಿಗೆ ಮಂಗಳೂರು ಪೊಲೀಸ್‌ ಆಯುಕ್ತ ಶಶಿಕುಮಾರ್‌ ಭೇಟಿ ನೀಡಿದ್ದಾರೆ.

    ಫುಡ್ ಪಾಯಿಸನ್ ಆದ ಕಾರಣ ಅವರನ್ನು ದಾಖಲು ಮಾಡಲಾಗಿದೆ. ಆತಂಕ ಪಡುವ ಅಗತ್ಯವಿಲ್ಲ. ಹಾಸ್ಟೆಲ್‌ಗೆ ಭೇಟಿ ನೀಡಿ ವಾರ್ಡನ್ ಜತೆ ಸಂವಾದ ನಡೆಸಿ ಎಲ್ಲವನ್ನೂ ತಿಳಿದುಕೊಳ್ಳುತ್ತೇವೆ. ಎಲ್ಲಾ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಶೋಕ್‌ ತಿಳಿಸಿದ್ದಾರೆ. ಇದನ್ನೂ ಓದಿ: ಶೇ.50 ಫೈನ್ ಡಿಸ್ಕೌಂಟ್‍ಗೆ ಫುಲ್ ರೆಸ್ಪಾನ್ಸ್- 3 ದಿನದಲ್ಲಿ 30 ಕೋಟಿ ದಂಡ ವಸೂಲಿ

    ಮಧ್ಯರಾತ್ರಿ 2 ಗಂಟೆಯಿಂದ ವಿದ್ಯಾರ್ಥಿಗಳು ಹೊಟ್ಟೆ ನೋವು, ಭೇದಿ, ವಾಂತಿಯಿಂದ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ ಎಂದು ನಮಗೆ ತಿಳಿದು ಬಂದಿದೆ. ನಾವು ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸ್‌ ಆಯುಕ್ತರು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹಾಸ್ಟೆಲ್‌ನಲ್ಲಿ ಫುಡ್ ಪಾಯಿಸನ್- 25ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

    ಹಾಸ್ಟೆಲ್‌ನಲ್ಲಿ ಫುಡ್ ಪಾಯಿಸನ್- 25ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

    ಶಿವಮೊಗ್ಗ: ಫುಡ್ ಪಾಯಿಸನ್‌ನಿಂದ 25ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಹಾಸ್ಟೆಲ್‌ನಲ್ಲಿ ನಡೆದಿದೆ.

    ನಿನ್ನೆ ಮಧ್ಯಾಹ್ನ ಹಾಸ್ಟೆಲ್‌ನಲ್ಲಿ ಊಟ ಮಾಡಿದ್ದ ವಿದ್ಯಾರ್ಥಿನಿಯರಿಗೆ ಸಂಜೆ ವೇಳೆಗೆ ವಾಂತಿ ಬೇಧಿಯಾಗಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿನಿಯರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ದೇವಸ್ಥಾನಕ್ಕೆ ತೆರಳಿ ಹಿಂತಿರುಗುತ್ತಿದ್ದಾಗ ಭೀಕರ ಅಪಘಾತ – ಐವರ ದುರ್ಮರಣ

    ಫುಡ್ ಪಾಯಿಸನ್‌ನಿಂದಾಗಿ ಈ ರೀತಿಯಾಗಿದೆ. ಯಾವುದೇ ಸಮಸ್ಯೆ ಇಲ್ಲ. ವಿದ್ಯಾರ್ಥಿನಿಯರನ್ನು ಶುಕ್ರವಾರ ಸಂಜೆ ಅಥವಾ ಶನಿವಾರ ಮುಂಜಾನೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಮನೆಯ ಸುತ್ತ ಕಂದಕ ತೋಡಿ ಕಾರ್ಮಿಕನಿಗೆ ಹಿಂಸೆ – ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ

     

  • ಹಳಸಿದ ಆಹಾರ ಸೇವಿಸಿ 110 ಮಂದಿ ವಿದ್ಯಾರ್ಥಿಗಳು ಅಸ್ವಸ್ಥ- ಡಿಎಚ್‍ಓ ಸ್ಪಷ್ಟನೆ

    ಹಳಸಿದ ಆಹಾರ ಸೇವಿಸಿ 110 ಮಂದಿ ವಿದ್ಯಾರ್ಥಿಗಳು ಅಸ್ವಸ್ಥ- ಡಿಎಚ್‍ಓ ಸ್ಪಷ್ಟನೆ

    ಚಿಕ್ಕಬಳ್ಳಾಪುರ: ಜಿಲ್ಲೆಯ ಬಿಜಿಎಸ್ ವಿದ್ಯಾರ್ಥಿನಿಲಯದಲ್ಲಿ ಹಳಸಿದ ಆಹಾರ ಸೇವನೆ ಮಾಡಿದ ಪರಿಣಾಮ 110 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ ಅಂತ ಚಿಕ್ಕಬಳ್ಳಾಪುರ ಡಿಎಚ್‍ಓ ರವಿಶಂಕರ್ ಸ್ಪಷ್ಟಪಡಿಸಿದ್ದಾರೆ.

    ಎರಡು ದಿನಗಳಿಂದ ಪದೇ ಪದೇ ಅಗಲಗುರ್ಕಿ ಗ್ರಾಮದ ಬಳಿಯ ಬಿಜಿಎಸ್ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ವಾಂತಿ-ಭೇದಿಯಿಂದ ಚಿಕ್ಕಬಳ್ಳಾಪುರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದರು. ಈ ಬಗ್ಗೆ ಆಡಳಿತ ಮಂಡಳಿ ವೈರಲ್ ಫೀವರ್ ಅಂತ ಹೇಳಿ ಏನೂ ಆಗಿಲ್ಲ ಅನ್ನೋ ರೀತಿ ವರ್ತನೆ ಮಾಡಿತ್ತು. ಆದ್ರೆ ಸದ್ಯ ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಇಲಾಖಾಧಿಕಾರಿಗಳು ಘಟನೆಯ ಮಾಹಿತಿ ಪಡೆದಿದ್ದು ಹಳಸಿದ ಆಹಾರ ಸೇವನೆಯೇ ವಿದ್ಯಾರ್ಥಿಗಳ ಅಸ್ವಸ್ಥತೆಗೆ ಕಾರಣ ಅಂತ ತಿಳಿದುಬಂದಿದೆ. ಇದನ್ನೂ ಓದಿ: ಬಿಜಿಎಸ್ ವಿದ್ಯಾರ್ಥಿನಿಲಯದಲ್ಲಿ ಫುಡ್ ಪಾಯಿಸನ್ ಶಂಕೆ – 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

    110 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯ ಪರಿಸ್ಥಿತಿ ಇಲ್ಲ. ಇನ್ನೂ ಬಿಜಿಎಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಕೆಲ ವಿದ್ಯಾರ್ಥಿಗಳನ್ನ ಈಗಾಗಲೇ ಮನೆಗೆ ಕಳುಹಿಸಿದ್ದು, ಕೆಲ ವಿದ್ಯಾರ್ಥಿಗಳಿಗೆ ಪೋಷಕರೇ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದಾರೆ ಅಂತ ಮಾಹಿತಿ ಲಭಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಜಿಎಸ್ ವಿದ್ಯಾರ್ಥಿನಿಲಯದಲ್ಲಿ ಫುಡ್ ಪಾಯಿಸನ್ ಶಂಕೆ – 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

    ಬಿಜಿಎಸ್ ವಿದ್ಯಾರ್ಥಿನಿಲಯದಲ್ಲಿ ಫುಡ್ ಪಾಯಿಸನ್ ಶಂಕೆ – 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

    ಚಿಕ್ಕಬಳ್ಳಾಪುರ: ಜಿಲ್ಲೆಯ ಬಿಜಿಎಸ್ ವಿದ್ಯಾರ್ಥಿನಿಲಯದಲ್ಲಿ ವಾಂತಿ-ಭೇದಿ ಜ್ವರದಿಂದ 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಅಗಲಗುರ್ಕಿ ಗ್ರಾಮದ ಬಳಿ ಇರುವ ಆದಿಚುಂಚನಗಿರಿ ಮಠದ ಬಿಜಿಎಸ್ ಶಿಕ್ಷಣ ಟ್ರಸ್ಟ್ ಗೆ ಸೇರಿದ ಬಿಜಿಎಸ್ ವಿದ್ಯಾರ್ಥಿನಿಲಯದಲ್ಲಿದ್ದ ಪಿಯು ಕಾಲೇಜಿನ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಅಂದ ಹಾಗೆ ಕಳೆದ ರಾತ್ರಿ ಊಟ ಮಾಡಿದ ನಂತರ 40ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಕೂಡಲೇ ಎಚ್ಚೆತ್ತ ವಿದ್ಯಾರ್ಥಿನಿಲಯದ ಸಿಬ್ಬಂದಿ ಚಿಕ್ಕಬಳ್ಳಾಪುರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಮಂಗಳವಾರ ತಡರಾತ್ರಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, 20 ಮಂದಿ ಚಿಕಿತ್ಸೆ ಪಡೆದು ವಾಪಸ್ಸಾಗಿದ್ದಾರೆ. ಉಳಿದ ಮಂದಿ ಆಸ್ಪತ್ರೆಯಲ್ಲೇ ಡೇ ಕೇರ್ ಚಿಕಿತ್ಸೆಗೆ ಒಳಗಾಗಿದ್ದಾರೆ. ಇನ್ನೂ ಬೆಳಿಗ್ಗೆಯೂ ಸಹ ಕೆಲ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಅವರನ್ನ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ.

    ಈ ವಿಷಯ ತಿಳಿದು ಚಿತ್ರೀಕರಣಕ್ಕೆ ಮುಂದಾದ ಪಬ್ಲಿಕ್ ಟವಿ ಕ್ಯಾಮೆರಾಗೆ ವಾರ್ಡನ್ ಕೈ ಅಡ್ಡ ಹಾಕಿ ಚಿತ್ರೀಕರಣ ಮಾಡದಂತೆ ತಡೆ ಒಡ್ಡಿದ್ದಾರೆ. ತದನಂತರ ಪಬ್ಲಿಕ್ ಟಿವಿಗೆ ಮೌಖಿಕವಾಗಿ ಮಾಹಿತಿ ನೀಡಿದ ಪ್ರಿನ್ಸಿಪಾಲ್ ಮೋಹನ್, ಕಳೆದ ರಾತ್ರಿಯಿಂದ ವಿದ್ಯಾರ್ಥಿಗಳಲ್ಲಿ ವೈರಲ್ ಫೀವರ್ ಕಾಣಿಸಿಕೊಂಡಿದೆ. ಹೀಗಾಗಿ ಒಬ್ಬರಿಂದ ಒಬ್ಬರಿಗೆ ವೈರಲ್ ಫೀವರ್ ಹರಡಿದೆ ಅಂತ ಮಾಹಿತಿ ನೀಡಿದ್ದಾರೆ. ಆದರೆ ಇಷ್ಟೊಂದು ಮಂದಿಗೆ ಅದೇಗೆ ಒಮ್ಮೆಲೆ ವೈರಲ್ ಫೀವರ್ ಹರಡಿದೆ ಅನ್ನೋ ಅನುಮಾನ ವ್ಯಕ್ತವಾಗಿದ್ದು, ಫುಡ್ ಪಾಯಿಸನ್ ಶಂಕೆ ವ್ಯಕ್ತವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆಸ್ಪತ್ರೆಯಿಂದ ರಮ್ಯಾ ಡಿಸ್ಚಾರ್ಚ್

    ಆಸ್ಪತ್ರೆಯಿಂದ ರಮ್ಯಾ ಡಿಸ್ಚಾರ್ಚ್

    ಬೆಂಗಳೂರು: ಸ್ಯಾಂಡಲ್‍ವುಡ್ ಕ್ವೀನ್, ಮಾಜಿ ಸಂಸದೆ ರಮ್ಯಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಶನಿವಾರ ರಮ್ಯಾ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಫುಡ್ ಪಾಯಿಸನ್ ಆಗಿದ್ದರಿಂದ ರಮ್ಯಾರ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಬೇರೆ ಯಾವ ರೀತಿಯ ಸಮಸ್ಯೆಯೂ ಇಲ್ಲ. ಸದ್ಯ ಚೇತರಿಸಿಕೊಂಡಿದ್ದಾರೆ.

    ರಮ್ಯಾ ಅವರಿಗೆ ಅವಶ್ಯಕ ಪರೀಕ್ಷೆಗಳನ್ನು ನಡೆಸಲಾಗಿದ್ದು, ಸೂಕ್ತ ಚಿಕಿತ್ಸೆ ನೀಡಲಾಗಿದೆ. ರಮ್ಯಾ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಅಭಿಮಾನಿಗಳು ಆತಂಕ ಪಡಬೇಕಾಗಿಲ್ಲ ಎಂದು ವಿಕ್ರಂ ಆಸ್ಪತ್ರೆಯ ವೈದ್ಯ ಡಾ.ಧೀರಜ್ ಕಾರಂತ್ ಹೇಳಿದ್ದಾರೆ