Tag: ಫೇಕ್ ವೀಡಿಯೋ

  • ರಶ್ಮಿಕಾ ಅರೆಬೆತ್ತಲೆ ಫೇಕ್ ವಿಡಿಯೋ: ಕಿಡಿಗೇಡಿಗಳಿಗೆ ರಾಜೀವ್‌ ಚಂದ್ರಶೇಖರ್‌ ಖಡಕ್‌ ವಾರ್ನಿಂಗ್‌

    ರಶ್ಮಿಕಾ ಅರೆಬೆತ್ತಲೆ ಫೇಕ್ ವಿಡಿಯೋ: ಕಿಡಿಗೇಡಿಗಳಿಗೆ ರಾಜೀವ್‌ ಚಂದ್ರಶೇಖರ್‌ ಖಡಕ್‌ ವಾರ್ನಿಂಗ್‌

    ನವದೆಹಲಿ: ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಅವರದ್ದು ಎನ್ನಲಾದ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಇತ್ತೀಚೆಗಷ್ಟೇ ವೈರಲ್‌ ಆಗಿದ್ದು, ಬಿಸಿ ಬಿಸಿ ಚರ್ಚೆಯಲ್ಲಿದೆ. ವೀಡಿಯೋದಲ್ಲಿ ರಶ್ಮಿಕಾ ಅವರ ಎದೆ ಭಾಗ ಕಾಣಿಸುವಂತೆ ಬಟ್ಟೆ ಹಾಕಿರುವ ವಿಡಿಯೋವನ್ನು ಹಲವರು ಹಂಚಿಕೊಂಡಿದ್ದರು. ಆದರೀಗ ಅದು ರಶ್ಮಿಕಾ ಅವರ ವಿಡಿಯೋ ಅಲ್ಲವೆಂಬ ಸತ್ಯ ಬಯಲಾಗಿದೆ.

    ಸೋಶಿಯಲ್‌ ಮೀಡಿಯಾ ಬಳಕೆದಾರರೊಬ್ಬರು ಮೂಲ ವೀಡಿಯೋವನ್ನ ಪತ್ತೆ ಮಾಡಿ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೋ ವಾಸ್ತವಾಂಶ ಬಯಲಾದ ಬಳಿಕ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ (Rajeev Chandrasekha) ಪ್ರತಿಕ್ರಿಯಿಸಿದ್ದಾರೆ. ಜೊತೆಗೆ ದೇಶದ ಐಟಿ ನಿಯಮಗಳನ್ನು ಉಲ್ಲಂಘಿಸುವ ಯಾವುದೇ ವೀಡಿಯೋ ಮತ್ತು ಇತರ ವಿಷಯಗಳನ್ನು ತೆಗೆದುಹಾಕುವಂತೆ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ.

    ಇದರೊಂದಿಗೆ ತಮ್ಮ ಪೋಸ್ಟ್‌ನಲ್ಲಿ, ಯಾವುದೇ ವೇದಿಕೆಯಲ್ಲಿ ತಪ್ಪು ಮಾಹಿತಿ ಪೋಸ್ಟ್‌ ಮಾಡಿದ್ರೆ, ಅದನ್ನ 36 ಗಂಟೆಗಳ ಒಳಗೆ ತೆಗೆದುಹಾಕಬೇಕು. ಇಲ್ಲದಿದ್ದರೇ ನೊಂದ ವ್ಯಕ್ತಿ ಪ್ರಕರಣವನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಬಹುದು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಅರೆಬೆತ್ತಲೆ ಫೇಕ್ ವಿಡಿಯೋ: ಅಮಿತಾಭ್ ಕಿಡಿಕಿಡಿ

    ನರೇಂದ್ರ ಮೋದಿಜೀ ಅವರ ಸರ್ಕಾರವೂ ಇಂಟರ್ನೆಟ್‌ ಬಳಸುವ ಎಲ್ಲಾ ಡಿಜಿಟಲ್‌ ನಾಗರಿಕೆ ಸುರಕ್ಷತೆ ಮತ್ತು ನಂಬಿಕೆ ಉಳಿಸಿಕೊಳ್ಳಲು ಬದ್ಧವಾಗಿದೆ. ಏಪ್ರಿಲ್, 2023 ರಲ್ಲಿ ಸೂಚಿಸಲಾದ ಐಟಿ ನಿಯಮಗಳ ಅಡಿಯಲ್ಲಿ – ಇದು ಪ್ಲಾಟ್‌ಫಾರ್ಮ್‌ಗಳಿಗೆ ಕಾನೂನು ಬಾಧ್ಯತೆಯಾಗಿದೆ. ಯಾವುದೇ ಬಳಕೆದಾರರು ಮತ್ತು ಪ್ಲಾಟ್‌ಫಾರ್ಮ್‌ಗಳು ಇದನ್ನು ಅನುಸರಿಸದಿದ್ದರೆ 36 ಗಂಟೆಗಳಲ್ಲಿ ತಪ್ಪು ಮಾಹಿತಿಗಳನ್ನು ತೆಗೆದುಹಾಕಬೇಕಾಗುತ್ತದೆ. ಇಲ್ಲದಿದ್ದಲ್ಲಿ ಇದು ಐಟಿ ನಿಯಮ 7ರ (IT rules Seven) ಅಡಿಯಲ್ಲಿ ಕಾನೂನು ಉಲ್ಲಂಘನೆಯಾಗಲಿದ್ದು, ಐಪಿಸಿಯ ನಿಬಂಧನೆಗಳ ಅಡಿಯಲ್ಲಿ ಬಾಧಿತ ವ್ಯಕ್ತಿಯಿಂದ ವೇದಿಕೆಗಳನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಬಹುದು ಎಂದು ಎಚ್ಚರಿದ್ದಾರೆ. ಇಂತಹ ಹಾನಿಕಾರಕ ತಪ್ಪು ಮಾಹಿತಿಗಳನ್ನು ವೇದಿಕೆಗಳ ಮೂಲಕ ವ್ಯವಹರಿಸಬೇಕು ಎಂದೂ ಹೇಳಿದ್ದಾರೆ. ಇದನ್ನೂ ಓದಿ: Bigg Boss: ತನಿಷಾ, ವರ್ತೂರು ಸಮ್‌ಥಿಂಗ್‌ ಸಮ್‌ಥಿಂಗ್‌ ಬಗ್ಗೆ ಸುದೀಪ್‌ ರಿಯಾಕ್ಷನ್

    ಏನಿದು ವೈರಲ್‌ ವೀಡಿಯೋ ಸ್ಟೋರಿ?
    ರಶ್ಮಿಕಾ ಮಂದಣ್ಣ ಅವರದ್ದು ಎಂದು ಹೇಳಲಾದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಅದು ಅಸಲಿಯೋ ಅಥವಾ ನಕಲಿಯೋ (Fake Video) ಎಂದು ಪತ್ತೆ ಹಚ್ಚುವಲ್ಲಿ ಹಲವರು ನಿರತರಾಗಿದ್ದರು. ಆ ವಿಡಿಯೋ ಖಂಡಿತಾ ರಶ್ಮಿಕಾ ಅವರದ್ದು ಅಲ್ಲ ಎಂದು ಕೆಲವರು ಹೇಳಿದ್ದರು. ಕೊನೆಗೂ ಅಭಿಷೇಕ್ ಅಸಲಿ ಮತ್ತು ನಕಲಿ ಎರಡೂ ವಿಡಿಯೋವನ್ನ ಹಂಚಿಕೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೋ ಝರಾ ಪಟೀಲ್ (Zara Patel) ಎನ್ನುವವರದ್ದು ಎಂದು ಅಭಿಷೇಕ್ ಬರೆದುಕೊಂಡಿದ್ದಾರೆ. ಝರಾ ಪಟೇಲ್ ಅವರು ಆ ವೀಡಿಯೋವನ್ನ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್‌ ಮಾಡಿದ್ದರು. ಕಿಡಿಗೇಡಿಗಳು ಆ ವಿಡಿಯೋಗೆ ರಶ್ಮಿಕಾ ತಲೆಯನ್ನು ಮಾರ್ಫಿಂಗ್‌ ಮಾಡಿ ಹರಿಬಿಟ್ಟಿದ್ದರು. ಈ ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿತ್ತು.

  • ರಾಹುಲ್ ಗಾಂಧಿ ಫೇಕ್ ವೀಡಿಯೋ ವೈರಲ್ – ಬಿಜೆಪಿ ಶಾಸಕರ ವಿರುದ್ಧ ಎಫ್‍ಐಆರ್

    ರಾಹುಲ್ ಗಾಂಧಿ ಫೇಕ್ ವೀಡಿಯೋ ವೈರಲ್ – ಬಿಜೆಪಿ ಶಾಸಕರ ವಿರುದ್ಧ ಎಫ್‍ಐಆರ್

    ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೆಲ ಬಿಜೆಪಿ ಶಾಸಕರು ನಕಲಿ ವೀಡಿಯೋವನ್ನು ಸೃಷ್ಟಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರು, ಬಿಜೆಪಿ ಶಾಸಕರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ.

    ಕೋಮು ಸೌಹಾರ್ದತೆ ಕದಡುವ ಉದ್ದೇಶದಿಂದ ರಾಹುಲ್ ಗಾಂಧಿ ಅವರ ನಕಲಿ ವೀಡಿಯೋವನ್ನು ಬಿಜೆಪಿಯ ಸಂಸದರಾದ ರಾಜ್ಯವರ್ಧನ್ ಸಿಂಗ್ ರಾಥೋಡ್ ಮತ್ತು ಸುಬ್ರತ್ ಪಾಠಕ್ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದರು. ಈ ಹಿನ್ನೆಲೆ ಅವರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದೇವೆ ಎಂದು ಕಾಂಗ್ರೆಸ್ ಹೇಳಿದೆ.

    ಛತ್ತೀಸ್‍ಗಢದ ಬಿಲಾಸ್‍ಪುರದಲ್ಲಿ ಸಂಸದರು ಮತ್ತು ಇತರ ಮೂವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಪಕ್ಷದ ಪ್ರಚಾರ ತಂಡದ ಮುಖ್ಯಸ್ಥ ಪವನ್ ಖೇರಾ ಹೇಳಿದ್ದಾರೆ. ದೆಹಲಿ, ಜಾರ್ಖಂಡ್, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಾಸ್ಥಾನ ಮತ್ತು ಉತ್ತರ ಪ್ರದೇಶದಲ್ಲೂ ಕಾಂಗ್ರೆಸ್ ಅವರ ವಿರುದ್ಧ ದೂರು ದಾಖಲಿಸಿದೆ ಎಂದು ಪವನ್ ಖೇರಾ ಮತ್ತು ಪಕ್ಷದ ಸಾಮಾಜಿಕ ಮಾಧ್ಯಮ ಉಸ್ತುವಾರಿ ಸುಪ್ರಿಯಾ ಶ್ರೀನಾಟೆ ಸುದ್ದಿಗಾರರಿಗೆ ತಿಳಿಸಿದರು.

    ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿದ್ದು, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಡಿದ ನಾಯಕರ ವಿರುದ್ಧ ಪಕ್ಷವು ಕ್ರಮ ಕೈಗೊಳ್ಳಬೇಕೆ ಎಂದು ಒತ್ತಾಯಿಸಿದ್ದಾರೆ.

    ಸುಪ್ರಿಯಾ ಶ್ರೀನಾಟೆ ಅವರು ರಾಜ್ಯವರ್ಧನ್ ಸಿಂಗ್ ರಾಥೋಡ್ ವಿರುದ್ಧ ದೇಶದ್ರೋಹದ ಆರೋಪ ಮಾಡಿದರು. ದೇಶದಲ್ಲಿ ಕೋಮು ಸೌಹಾರ್ದತೆ ಕದಡುವ ಉದ್ದೇಶದಿಂದ ಕೇಂದ್ರದ ಮಾಜಿ ಸಚಿವರೊಬ್ಬರು ಸುಳ್ಳು ಸುದ್ದಿ ಹಬ್ಬಿಸಲು ಯತ್ನಿಸಿದರೆ, ಅದು ದೇಶದ್ರೋಹಕ್ಕೆ ಸಮ ಎಂದು ಆರೋಪಿಸಿದ್ದಾರೆ.

    ಸುಪ್ರಿಯಾ ಶ್ರೀನಾಟೆ ಈ ಕುರಿತು ಮಾತನಾಡಿದ್ದು, ಈ ಜನರು ದೇಶಾದ್ಯಂತ ದ್ವೇಷದ ಬೆಂಕಿಯನ್ನು ಏಕೆ ಹರಡುತ್ತಿದ್ದಾರೆ? ಸಂಸದರು ಮತ್ತು ಮಾಜಿ ಸಚಿವರನ್ನು ಏಕೆ ಟ್ರೋಲ್ ಮಾಡುತ್ತಿದ್ದಾರೆ ಎಂದು ನಾವು ಪ್ರಧಾನಿಯನ್ನು ಕೇಳುತ್ತೇವೆ. ಸುಳ್ಳು ಸುದ್ದಿಗಳನ್ನು ಹರಡುವವರಿಗೆ ಬಿಜೆಪಿಯಲ್ಲಿ ಬಡ್ತಿ ಸಿಗುತ್ತದೆ. ದೆಹಲಿ ಗಲಭೆಯ ಸಮಯದಲ್ಲಿ ಪ್ರಸ್ತುತ ಮಾಹಿತಿ ಮತ್ತು ಪ್ರಸಾರ ಸಚಿವರು ಏನು ಹೇಳಿದರು ಮತ್ತು ಅವರಿಗೆ ಬಡ್ತಿ ನೀಡಲಾಗಿದೆ ಎಂದು ಎಲ್ಲರಿಗೂ ತಿಳಿದಿದೆ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • FASTag ನಿಂದ ಹಣ ಕದಿಯುತ್ತಾರೆ – ಫೇಕ್‌ ವೀಡಿಯೋ ಶೇರ್‌ ಮಾಡಬೇಡಿ

    FASTag ನಿಂದ ಹಣ ಕದಿಯುತ್ತಾರೆ – ಫೇಕ್‌ ವೀಡಿಯೋ ಶೇರ್‌ ಮಾಡಬೇಡಿ

    ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಫಾಸ್ಟ್‌ಟ್ಯಾಗ್‌ ಕೋಡ್‌ ಅನ್ನು ಸ್ಕ್ಯಾನ್‌ ಮಾಡಿ ಖಾತೆಯಿಂದ ಹಣವನ್ನು ವಂಚನೆ ಮಾಡಲಾಗುತ್ತದೆ ಎಂಬ ಸಂದೇಶವಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಆದರೆ ಈ ವೀಡಿಯೋ ಫೇಕ್‌ ಆಗಿದ್ದು ಈ ರೀತಿಯ ಯಾವುದೇ ವಂಚನೆ ಆಗುವುದಿಲ್ಲ ಎಂದು FASTag NETC ತಿಳಿಸಿದೆ.

    https://twitter.com/Bikash63/status/1540285101598134273

    ವೀಡಿಯೋದಲ್ಲಿ ಏನಿದೆ?
    ಕಾರು ಸ್ವಚ್ಛ ಮಾಡುವ ನೆಪದಲ್ಲಿ ಬಾಲಕನೊಬ್ಬ ಮುಂದುಗಡೆಯ ಗ್ಲಾಸ್‌ ಕ್ಲೀನ್‌ ಮಾಡುತ್ತಿರುತ್ತಾನೆ. ಫಾಸ್ಟ್‌ ಟ್ಯಾಗ್‌ ಇರುವ ಜಾಗದಲ್ಲಿ ತನ್ನ ಬಲಕೈಯಲ್ಲಿರುವ ವಾಚ್ ಅನ್ನು ತಂದು ಸ್ಕ್ಯಾನ್‌ ಮಾಡುತ್ತಾನೆ. ಕೂಡಲೇ ಈ ಫಾಸ್ಟ್‌ ಟ್ಯಾಗ್ ಖಾತೆಯಲ್ಲಿರುವ ಹಣ ವರ್ಗಾವಣೆಯಾಗುತ್ತದೆ ಎಂದು ಕಾರಿನಲ್ಲಿರುವ ವ್ಯಕ್ತಿ ಹೇಳುತ್ತಾನೆ.

    ಸರ್ಕಾರ ಹೇಳಿದ್ದು ಏನು?
    ಆಯಾ ಭೌಗೋಳಿಕ ಸ್ಥಳಗಳಿಂದ ಮಾತ್ರ NPCI ಯಿಂದ ನೋಂದಾಯಿತರಾದವರು (ಟೋಲ್ ಮತ್ತು ಪಾರ್ಕಿಂಗ್ ಪ್ಲಾಜಾ ನಿರ್ವಾಹಕರು) ಮಾತ್ರ ಫಾಸ್ಟ್‌ಟ್ಯಾಗ್‌ ವಹಿವಾಟು ನಡೆಸುತ್ತಾರೆ. ಯಾವುದೇ ಅನಧಿಕೃತ ಸಾಧನ ಬಳಸಿ FASTag ನಲ್ಲಿ ಯಾವುದೇ ಹಣಕಾಸಿನ ವಹಿವಾಟುಗಳ ನಡೆಸಲು ಸಾಧ್ಯವಿಲ್ಲ ಎಂದು NETC FASTag ಸ್ಪಷ್ಟಪಡಿಸಿದೆ.

    FASTag ನಲ್ಲಿ RFID( ರೇಡಿಯೋ ತರಂಗಾಂತರ ಗುರುತಿಸುವಿಕೆ ಅಥವಾ Radio-frequency identification) ಇರುತ್ತದೆ. ಬ್ಯಾಂಕ್‌ನಲ್ಲಿ ವಾಹನದ ನೋಂದಣಿ ಸಂಖ್ಯೆ ಮತ್ತು ಪ್ರತ್ಯೇಕ ಯುಪಿಐ ಐಡಿ ಇರುತ್ತದೆ.

    Live Tv

  • ಹುಲಿಯ ಫೇಕ್ ವೀಡಿಯೋ ವೈರಲ್- ಇಬ್ಬರ ಬಂಧನ

    ಹುಲಿಯ ಫೇಕ್ ವೀಡಿಯೋ ವೈರಲ್- ಇಬ್ಬರ ಬಂಧನ

    ಚಿಕ್ಕಮಗಳೂರು: ಎರಡ್ಮೂರು ವರ್ಷದ ಹಿಂದಿನ ಹುಲಿಗಳ ವೀಡಿಯೋವನ್ನ ನಗರದ ಗಾಲ್ಫ್ ಕ್ಲಬ್ ಬಳಿ ಕಂಡ ಹುಲಿಗಳು ಎಂದು ಹಳೇ ವೀಡಿಯೋಗೆ ಹೊಸ ರೂಪ ಕೊಟ್ಟು ಹರಿಬಿಟ್ಟಿದ್ದ ಇಬ್ಬರು ಯುವಕರನ್ನ ಪೊಲೀಸರು ಬಂಧಿಸಿದ್ದಾರೆ.

    ಎರಡು ದಿನಗಳ ಹಿಂದೆ ಸುಮಾರು ಎರಡ್ಮೂರು ವರ್ಷದ ಹಿಂದಿನ ಹುಲಿಗಳ ಸಂಚಾರದ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ನಗರದ ಗಾಲ್ಫ್ ಕ್ಲಬ್ ಬಳಿ ಕಂಡ ಹುಲಿಗಳು ಎಂದು ಹರಿಬಿಟ್ಟಿದ್ದರು. ವೀಡಿಯೋ ನೋಡಿ ಹುಲಿಗಳು ಕಾಡಂಚಿನ ಗ್ರಾಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದವು. ಈಗ ಜಿಲ್ಲಾ ಕೇಂದ್ರಕ್ಕೂ ಬಂದಿವೆ ಎಂದು ಜನ ಆತಂಕಕ್ಕೀಡಾಗಿದ್ದರು.

    ಅರಣ್ಯ ಇಲಾಖೆ ಸಿಬ್ಬಂದಿ ಈ ಹುಲಿಗಳನ್ನು ಎಲ್ಲಿ ಹುಡುಕೋದು ಎಂದು ಕಂಗಾಲಾಗಿದ್ದರು. ಆದರೆ ವೀಡಿಯೋ, ಅದರಲ್ಲಿನ ಸಂಭಾಷಣೆ ನೋಡಿದ ಬಳಿಕ ಅದು ಹೊರರಾಜ್ಯದ ಎರಡ್ಮೂರು ವರ್ಷದ ಹಿಂದಿನ ವೀಡಿಯೋ ಎಂದು ಅರಿವಾಗಿದೆ. ಇದು ಹಳೇ ವೀಡಿಯೋ ಎಂದು ಅರಿತ ಅರಣ್ಯ ಇಲಾಖೆ ಹುಲಿ ಹುಡುಕೋದನ್ನು ಬಿಟ್ಟು, ಹುಲಿ ವೀಡಿಯೋ ಹರಿಬಿಟ್ಟಿವರನ್ನು ಹುಡುಕೋಕೆ ಪ್ರಾರಂಭಿಸಿದ್ದರು.

    ಕೊನೆಗೆ ಫೇಕ್ ವೀಡಿಯೋ ಹರಿಬಿಟ್ಟ ಸಮೀರ್ ಹುಸೇನ್ ಹಾಗೂ ಸೈಯದ್ ಹುಸೇನ್ ಎಂಬವರನ್ನು ಪತ್ತೆ ಹಚ್ಚಿ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ನಗರದ ಸೆನ್ ಸ್ಟೇಷನ್ ಪೊಲೀಸರು ಇಬ್ಬರನ್ನೂ ಕರೆತಂದು ವಾರ್ನ್ ಮಾಡಿ ಬಿಟ್ಟಿದ್ದಾರೆ. ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ – ಹ್ಯಾರಿಸ್, ಲಮಾಣಿ ಪುತ್ರರ ಹೆಸರು ಹೇಳಿರೋ ಹ್ಯಾಕರ್ ಶ್ರೀಕಿ

    ಎಲ್ಲಿಯೋ ಹುಲಿ. ಎಲ್ಲೋ ರೆಕಾರ್ಡ್ ಆಗಿತ್ತು. ಯಾರೋ ರೆಕಾರ್ಡ್ ಮಾಡಿದ್ದರು. ಇಲ್ಲಿ ಏಕೆ ವೈರಲ್ ಆಯ್ತು ಎಂಬ ಪ್ರಶ್ನೆ ಸ್ಥಳೀಯರು ಹಾಗೂ ಅಧಿಕಾರಿಗಳಲ್ಲಿ ಪ್ರಶ್ನೆ ಮೂಡಿಸಿತ್ತು. ಆದರೆ ಪ್ರವಾಸೋದ್ಯಮ ಜಿಲ್ಲೆಯಲ್ಲಿ ಸುಮಾರು 600ಕ್ಕೂ ಅಧಿಕ ಹೋಂ ಸ್ಟೇ ಹಾಗೂ ರೆಸಾರ್ಟ್ ಗಳಿವೆ. ಹಾಗಾಗಿ, ಪ್ರವಾಸಿಗರನ್ನು ಸೆಳೆಯಲು ಈ ರೀತಿ ಸುಳ್ಳು ಸುದ್ದಿಯನ್ನ ಹಬ್ಬಿಸಿದ್ದಾರೆಂದು ಹೇಳಲಾಗುತ್ತಿದೆ.

    ಇಲ್ಲದ ಹುಲಿಯನ್ನ ಇದೆ ಎಂದು ಬಿಂಬಿಸಿ ಗ್ರಾಹಕರನ್ನ ಸೆಳೆಯೋದು, ಜನರನ್ನ ಭಯ ಬೀಳಿಸೋದು ಎಷ್ಟು ಸರಿ ಎಂದು ಪರಿಸರವಾದಿಗಳು ಹಾಗೂ ಹೋಂ ಸ್ಟೇ ಅಸೋಷಿಯನ್ ಸದಸ್ಯರು ಗಾಳಿಸುದ್ದಿಕೋರರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ:ಸೆಲ್ಫಿ ತೆಗೆದುಕೊಳ್ಳುವಾಗ ಬಂಡೆಯಿಂದ‌ ಜಾರಿ‌ ನದಿಗೆ ಬಿದ್ದ ಯುವಕ ಕಣ್ಮರೆ!