Tag: ಫೈಟ್ ಮಾಸ್ಟರ್ ವಿನೋದ್

  • ಲವ್ ಯು ರಚ್ಚು ಶೂಟಿಂಗ್ ದುರಂತ – ನಿರ್ದೇಶಕ ಸೇರಿ ನಾಲ್ವರು ಪೊಲೀಸ್ ವಶಕ್ಕೆ

    ಲವ್ ಯು ರಚ್ಚು ಶೂಟಿಂಗ್ ದುರಂತ – ನಿರ್ದೇಶಕ ಸೇರಿ ನಾಲ್ವರು ಪೊಲೀಸ್ ವಶಕ್ಕೆ

    ಬೆಂಗಳೂರು: ಲವ್ ಯು ರಚ್ಚು ಚಿತ್ರೀಕರಣ ವೇಳೆ ಫೈಟರ್ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿನಿಮಾ ನಿರ್ದೇಶಕ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಮೃತ ಫೈಟರ್ ವಿವೇಕ್ ಕುಟುಂಬಸ್ಥರು ನೀಡಿದ ದೂರಿನನ್ವಯ ನಿರ್ದೇಶಕ ಶಂಕರ್ ರಾಜ್, ಸ್ಟಂಟ್ ಮಾಸ್ಟರ್ ವಿನೋದ್, ಜಮೀನು ಮಾಲೀಕ ಪುಟ್ಟರಾಮು ಹಾಗೂ ಕ್ರೇನ್ ಡ್ರೈವರ್ ನನ್ನು ವಶಕ್ಕೆ ಪಡೆದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಬಳಿಕ ಪೊಲೀಸರು ನಾಲ್ವರನ್ನು ಬಂಧಿಸುವ ಸಾಧ್ಯತೆಗಳಿವೆ. ಇನ್ನೂ ಇದೇ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ರಂಜಿತ್ ಎಂಬವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಘಟನೆ ನಡೆಯುತ್ತಿದ್ದಂತೆ ಶೂಟಿಂಗ್ ನಿಲ್ಲಿಸಿ ಚಿತ್ರತಂಡ ಪ್ಯಾಕಪ್ ಮಾಡಿಕೊಂಡು ಸ್ಥಳದಿಂದ ಪರಾರಿಯಾಗಿದೆ. ಚಿತ್ರೀಕರಣಕ್ಕೆ ಸಿನಿಮಾ ತಂಡ ಸ್ಥಳೀಯ ಪೊಲೀಸರ ಅನುಮತಿ ಸಹ ಪಡೆದುಕೊಂಡಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ದುರಂತ – ಹೈಟೆನ್ಷನ್ ವೈರ್ ತಗುಲಿ ಫೈಟರ್ ಸಾವು

    ಫೈಟರ್ ವಿವೇಕ್ ಸಾವು:
    ಬಿಡದಿಯ ಈಗಲ್‍ಟನ್ ರೆಸಾರ್ಟ್ ಬಳಿಯಲ್ಲಿ ಅಜಯ್ ರಾವ್ ಮತ್ತು ರಚಿತಾ ರಾಮ್ ಅಭಿನಯಿಸುತ್ತಿರುವ ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣ ನಡೆಯುತ್ತಿತ್ತು. ಫೈಟ್ ಮಾಸ್ಟರ್ ವಿನೋದ್ ಸಾಹಸ ನಿರ್ದೇಶನದಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಚಿತ್ರಕ್ಕೆ ಗುರುದೇಶಪಾಂಡೆ ನಿರ್ಮಾಣವಿದೆ. ಇಂದು ಮಧ್ಯಾಹ್ನ ಸುಮಾರು 12 ಗಂಟೆಗೆ ಹೈಟೆನ್ಷನ್ ವೈರ್ ತಗುಲಿ 35 ವರ್ಷದ ವಿವೇಕ್ ಎಂಬವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಹೈಟೆನ್ಷನ್ ವೈರ್ ತಗುಲಿದ್ದರಿಂದ ಫೈಟರ್ ಸಾವಾಯ್ತು: ನಟ ಅಜಯ್ ರಾವ್

  • ಹೈಟೆನ್ಷನ್ ವೈರ್ ತಗುಲಿದ್ದರಿಂದ ಫೈಟರ್ ಸಾವಾಯ್ತು: ನಟ ಅಜಯ್ ರಾವ್

    ಹೈಟೆನ್ಷನ್ ವೈರ್ ತಗುಲಿದ್ದರಿಂದ ಫೈಟರ್ ಸಾವಾಯ್ತು: ನಟ ಅಜಯ್ ರಾವ್

    – ಹೈಟೆನ್ಷನ್ ವೈರ್ ಇರೋದು ಫೈಟರ್ ಮಾಸ್ಟರ್​​​ಗೆ ಗೊತ್ತಿರಬೇಕಿತ್ತು

    ಬೆಂಗಳೂರು: ಹೈಟೆನ್ಷನ್ ವೈರ್ ತಗುಲಿದ್ದರಿಂದ ಫೈಟರ್ ಸಾವಾಯ್ತು. ಸಾಹಸ ದೃಶ್ಯಗಳ ಚಿತ್ರೀಕರಣ ಮಾಡುವಾಗ ಫೈಟ್ ಮಾಸ್ಟರ್ ವಿನೋದ್ ಗಮನಿಸಬೇಕಿತ್ತು. ಈ ಮೊದಲು ಅಲ್ಲಿ ಹೈಟೆನ್ಷನ್ ವೈರ್ ಇದ್ದಿದ್ದರಿಂದ ನಾನು ಆ ದೃಶ್ಯ ಮಾಡಲ್ಲ ಅಂತ ಹೇಳಿದ್ದೆ ಎಂದು ಲವ್ ಯು ರಚ್ಚು ಸಿನಿಮಾದ ನಾಯಕ ನಟ ಅಜಯ್ ರಾವ್ ಪಬ್ಲಿಕ್ ಟಿವಿಗೆ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅಜಯ್ ರಾವ್, ಅಲ್ಲಿ ನನ್ನ ಸೀನ್ ಇರದ ಕಾರಣ ದೂರದಲ್ಲಿ ಕುಳಿತಿದ್ದೆ. ಇದ್ದಕ್ಕಿದ್ದಂತೆ ಶಾರ್ಟ್ ಸಕ್ರ್ಯೂಟ್ ರೀತಿಯಲ್ಲಿ ಸೌಂಡ್ ಕೇಳಿಸಿದಾಗ, ನನ್ನ ಹುಡುಗರು ಬಂದು ವಿಷಯ ಹೇಳಿದರು. ಕಳೆದ ಐದು ದಿನಗಳಿಂದ ಈಗಲ್ ಟನ್ ಬಳಿಯಲ್ಲಿ ಸಾಹಸ ಚಿತ್ರೀಕರಣ ನಡೆಯುತ್ತಿತ್ತು. ಕೋವಿಡ್ ಸಂದರ್ಭದಲ್ಲಿ ಚಿತ್ರೀಕರಣ ನಡೆಸೋದು ಕಷ್ಟದ ಕೆಲಸ. ನಮ್ಮ ಟೀಂ ನಿರ್ಮಿಸಿದ ವಾಟರ್ ಟ್ಯಾಂಕ್ ಬಳಿ ಫೈಟ್ ಸೀನ್ ಇತ್ತು. ಆದ್ರೆ ನಾನು ಬೇಡ ಅಂತ ಹೇಳಿದ್ದಕ್ಕೆ ಅಜಯ್ ಎಲ್ಲದಕ್ಕೂ ಹಿಂದೇಟು ಹಾಕ್ತಾರೆ ಅನ್ನೋ ಮಾತುಗಳು ಕೇಳಿ ಬಂದವು ಎಂದು ಬೇಸರದ ಮಾತುಗಳನ್ನಾಡಿದರು.

    ಒಬ್ಬ ಹುಡುಗ ಹೈಟೆನ್ಷನ್ ವೈರ್ ಬಳಿಯಲ್ಲಿದ್ದನಾ ಅಥವಾ ರೂಪ್ ಎಳೆಯುತ್ತಿದ್ದನಾ ಅಂತ ಸ್ಪಷ್ಟವಾಗಿ ಗೊತ್ತಿಲ್ಲ. ಮತ್ತೋರ್ವ ಹುಡುಗ ಬಿದ್ದು ಗಾಯಗೊಂಡಿದ್ದು ಮಾತ್ರ ಕಾಣಿಸಿತು. ಸದ್ಯ ಆ ಹುಡುಗ ಹುಷಾರಾಗಿದ್ದಾನೆ. ಅಷ್ಟರಲ್ಲಿ ಫೈಟರ್ ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಈಗಲೂ ಕೂಡ ನನ್ನ ಕೈಕಾಲು ನಡಗುತ್ತಿದೆ. ಇದಾದ ಕೆಲವೇ ನಿಮಿಷದಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಫೈಟ್ ಮಾಸ್ಟರ್ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ನನ್ನಿಂದ ಏನಾದ್ರೂ ಸಹಾಯ ಬೇಕಾದ್ರೆ ಬರುತ್ತೇನೆ ಎಂದು ಹೇಳಿ ಮನೆಗೆ ಬಂದಿದ್ದೇನೆ ಎಂದು ತಿಳಿಸಿದರು.

    ಏನಿದು ಘಟನೆ?:
    ಬಿಡದಿಯ ಈಗಲ್‍ಟನ್ ರೆಸಾರ್ಟ್ ಬಳಿಯಲ್ಲಿ ಅಜಯ್ ರಾವ್ ಮತ್ತು ರಚಿತಾ ರಾಮ್ ಅಭಿನಯಿಸುತ್ತಿರುವ ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣ ನಡೆಯುತ್ತಿತ್ತು. ಫೈಟ್ ಮಾಸ್ಟರ್ ವಿನೋದ್ ಸಾಹಸ ನಿರ್ದೇಶನದಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಚಿತ್ರಕ್ಕೆ ಗುರುದೇಶಪಾಂಡೆ ನಿರ್ಮಾಣವಿದೆ. ಇಂದು ಮಧ್ಯಾಹ್ನ ಸುಮಾರು 12 ಗಂಟೆಗೆ ಹೈಟೆನ್ಷನ್ ವೈರ್ ತಗುಲಿ 35 ವರ್ಷದ ವಿವೇಕ್ ಎಂಬವವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.