Tag: ಫೋನ್ ಕಾಲ್

  • ಹಿಂದೂಗಳು ಜಾಸ್ತಿ ಇರುವ ಜಾಗದಲ್ಲಿ ಬಾಂಬ್ ಹಾಕಬೇಕು: ಆಡಿಯೋ ವೈರಲ್

    ಹಿಂದೂಗಳು ಜಾಸ್ತಿ ಇರುವ ಜಾಗದಲ್ಲಿ ಬಾಂಬ್ ಹಾಕಬೇಕು: ಆಡಿಯೋ ವೈರಲ್

    ಮಡಿಕೇರಿ: ಕೊಡಗಿನಲ್ಲಿ (Kodagu) ಹಿಂದಿನಿಂದಲೂ ಒಬ್ಬರಲ್ಲಾ ಒಬ್ಬ ಉಗ್ರರು ಬಂದು ನೆಲೆಕಂಡುಕೊಂಡಿರುವುದು ನಿಮಗೆಲ್ಲರಿಗೂ ಗೊತ್ತೇ ಇದೆ. ಅಬ್ದುಲ್ ಮದನಿ ಕೂಡ ಕೊಡಗಿನ ಹೊಸತೋಟಕ್ಕೆ ಬಂದು ತಂಗಿದ್ದು ಹೊಸ ವಿಚಾರವೇನು ಅಲ್ಲ. ಆದರೆ ಈಗ ಮಡಿಕೇರಿ ನಗರಕ್ಕೆ ಪೆಟ್ರೋಲ್ ಬಾಂಬ್ (Bomb) ಹಾಕಬೇಕು ಎಂದು ಮಾತನಾಡಿರುವ ಆಡಿಯೋ (Audio) ಮಡಿಕೇರಿ (Madikeri) ನಗರದ ಜನತೆಯಲ್ಲಿ ಆತಂಕ ಮೂಡಿಸಿದೆ.

    ದೇಶದಲ್ಲಿ ಅಪಾಯಕಾರಿ ಬೆಳವಣಿಗೆಗಳು, ದೇಶ ವಿದ್ರೋಹಿ ಚಟುವಟಿಕೆಗಳು ನಡೆಯಲು ಸಂಚು ರೂಪಿಸಲಾಗುತ್ತಿದೆ ಎಂದು ಪಿಎಫ್‍ಐ (PFI) ಸಂಘಟನೆಯನ್ನು ಇತ್ತೀಚೆಗಷ್ಟೇ ನಿಷೇಧ ಮಾಡಲಾಗಿದೆ. ಆದರೆ ಕಳೆದ ಆರು ತಿಂಗಳ ಹಿಂದೆ ಅಂದರೆ ಏಪ್ರಿಲ್ 25 ರಂದು ಮಡಿಕೇರಿ ನಗರ ಸಭೆ ಸದಸ್ಯ ಜೆಡಿಎಸ್‍ನ ಮುಸ್ತಫಾ ಎಂಬುವರು ಆತನ ಸ್ನೇಹಿತ ಬೆಟ್ಟಗೇರಿಯ ಅಬ್ದುಲ್ಲಾ ಎಂಬುವರೊಂದಿಗೆ ಮಡಿಕೇರಿ ನಗರಕ್ಕೆ ಬಾಂಬ್ ಹಾಕಬೇಕು. ಹಿಂದೂಗಳು ಜಾಸ್ತಿ ಇರುವ ಜಾಗದಲ್ಲಿ ಬಾಂಬ್ ಹಾಕಬೇಕು. ನಮ್ಮವರು ಒಂದಷ್ಟು ಜನರು ಸತ್ತರೂ ಪರವಾಗಿಲ್ಲ ಎಂದು ಮಾತನಾಡಿರುವ ಆಡಿಯೋ ಲೀಕ್ ಆಗಿದ್ದು, ಜಿಲ್ಲೆಯ ಜನರು ಬೆಚ್ಚಿ ಬೀಳುವಂತೆ ಮಾಡಿದೆ. 50ಕ್ಕೂ ಹೆಚ್ಚು ಪ್ರದೇಶಗಳನ್ನು ಟಾರ್ಗೆಟ್ ಮಾಡಿ ಪೆಟ್ರೋಲ್ ಬಾಂಬ್ ಹಾಕಬೇಕು ಎಂದು ಮಲೆಯಾಳಂ ಭಾಷೆಯಲ್ಲಿ ಮಾತನಾಡಿರುವ ಆಡಿಯೋ ಹರಿದಾಡುತ್ತಿದೆ. ಇದನ್ನೂ ಓದಿ: RSS ಬಗ್ಗೆ ಹೊಟ್ಟೆ ಕಿಚ್ಚಿದ್ದವರಿಗೆ ಮದ್ದಿಲ್ಲ: ಪ್ರಮೋದ್ ಮಧ್ವರಾಜ್

    50 ಜನರ ತಂಡ ಕಟ್ಟಿ ತರಬೇತಿ ಮಾಡಬೇಕು. ಇದಕ್ಕೆ ಎಲ್ಲರೂ 50 ಸಾವಿರ ಒಂದು ಲಕ್ಷ ಹಾಕಬೇಕು. ಅದನ್ನು ಬಳಸಿಕೊಂಡು ಮಡಿಕೇರಿ ನಗರಕ್ಕೆ ಪೆಟ್ರೋಲ್ ಬಾಂಬ್ ಹಾಕಿಬಿಡೋದು. ಆ…. ನನ್ನ ಮಕ್ಕಳಿಗೆ ಬುದ್ದಿ ಕಲಿಸಬೇಕು. ಇಡೀ ಮಡಿಕೇರಿ ಟೌನ್ ಹೊತ್ತಿ ಉರಿಯಬೇಕು. ಮಡಿಕೇರಿ ಮಾತ್ರ ಅಲ್ಲ ಎಲ್ಲಾ ಕಡೆ ಹಾಕಬೇಕು. ಅಲ್ಲ ಅಲ್ಲ.. ಇಡೀ ಮಡಿಕೇರಿ ಹೊತ್ತಿ ಉರಿಯಬೇಕು. ಅವರೂ ಸಾಯಲಿ, ನಾವು ಸಾಯೋಣ. ಒಟ್ನಲ್ಲಿ ಅವರಿಗೆ ಭಯ ಹುಟ್ಟಬೇಕು. 50 ಜಾಗದಲ್ಲಿ ಬಾಂಬ್ ಹಾಕಬೇಕು. ಆಗ ಅವರ ಪಾರ್ಟಿ ಲೈಫ್ ಲಾಂಗ್ ಇರಲ್ಲ. ಬಿಜೆಪಿಯವರು ನಿಲ್ಲೋದಕ್ಕೂ ಹೆದರಬೇಕು. ಈ ಬಾರಿ ರಾಜ್ಯದಲ್ಲಿ ಬಿಜೆಪಿ (BJP) ಸೋಲುತ್ತದೆ. ಆಗ ಇವರಿಗೆ ಗೊತ್ತಾಗುತ್ತದೆ. ಡಿಕೆ ಶಿವಕುಮಾರ್ (D.K Shivakumar)  ಮೈಂಡ್ ಹಿಂದುತ್ವದ್ದು, ಸಿದ್ದರಾಮಯ್ಯ (Siddaramaiah) ಮೈಂಡ್ ಜಾತ್ಯಾತೀತ ಮೈಂಡ್. ಎರಡೂ ಒಂದೇ ಆಗಲು ಸಾಧ್ಯವಿಲ್ಲ ಎಂದು ಪರಸ್ಪರ ಮಾತನಾಡಿರುವ ಆಡಿಯೋ ಫೋನ್‍ನಲ್ಲಿ ರೆಕಾರ್ಡ್ ಆಗಿದೆ. ಇದನ್ನೂ ಓದಿ: ಆನ್‌ಲೈನ್ ಶಿಕ್ಷಣವೇ ವಿದ್ಯಾರ್ಥಿಗಳಿಗೆ ಶಿಕ್ಷೆ – ನ್ಯಾ. ಮಲ್ಲಿಕಾರ್ಜುನ ಗೌಡ

     

    ಮಡಿಕೇರಿ ನಗರದ ನಿವಾಸಿ ಶೇಷಪ್ಪ ರೈ ಎಂಬವರು ಮುಸ್ತಫಾ ಅವರಿಗೆ ಯಾವುದೋ ವ್ಯವಹಾರದ ವಿಷಯ ಮಾತನಾಡುವುದಕ್ಕೆ ಕರೆ ಮಾಡಿದ್ದಾರೆ. ಈ ವೇಳೆ ಮುಸ್ತಫಾ, ಶೇಷಪ್ಪ ರೈ ಅವರ ಫೋನ್ ಕಟ್ ಮಾಡುವ ಬದಲು, ಮಿಸ್ ಆಗಿ ರಿಸೀವ್ ಮಾಡಿ ಫೋನ್ ಅನ್ನು ತನ್ನ ಜೇಬಿನಲ್ಲಿ ಇರಿಸಿಕೊಂಡಿದ್ದಾರೆ. ಬಳಿಕ ಮಡಿಕೇರಿಯಲ್ಲಿ ಪೆಟ್ರೋಲ್ ಬಾಂಬ್ ಹಾಕುವ ವಿಷಯವನ್ನು ತನ್ನ ಸ್ನೇಹಿತ ಅಬ್ದುಲ್ಲಾ ಎಂಬುವವನೊಂದಿಗೆ ನೇರವಾಗಿ ಮಾತನಾಡಿದ್ದಾರೆ. ಈ ಎಲ್ಲಾ ವಿಷಯ ಮುಸ್ತಫಾಗೆ ಕರೆ ಮಾಡಿದ್ದ ಶೇಷಪ್ಪ ರೈ ಅವರ ಫೋನ್‌ನಲ್ಲಿ ಕಾಲ್ ರೆಕಾರ್ಡ್ ಆಗಿದೆ. ಇತ್ತೀಚೆಗೆ ಕಾಲ್ ರೆಕಾರ್ಡ್‍ಗಳನ್ನು ಪರಿಶೀಲನೆ ನಡೆಸುವಾಗ ಇದು ಬೆಳಕಿಗೆ ಬಂದಿದ್ದು ಶೇಷಪ್ಪ ರೈ ಮಡಿಕೇರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಶೇಷಪ್ಪ ರೈ ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಮಡಿಕೇರಿ ನಗರದ ಪೊಲೀಸರು ಮಡಿಕೇರಿ ನಗರಸಭೆ ಸದಸ್ಯ ಮುಸ್ತಫಾ, ಬೆಟ್ಟಗೇರಿ ಅಬ್ದುಲ್ಲಾ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಜೀನಾಮೆಗೆ ಮುಂದಾಗಿರೋ ಆನಂದ್ ಸಿಂಗ್ ಸಿಎಂ ಕರೆಗೂ ಡೋಂಟ್ ಕೇರ್!

    ರಾಜೀನಾಮೆಗೆ ಮುಂದಾಗಿರೋ ಆನಂದ್ ಸಿಂಗ್ ಸಿಎಂ ಕರೆಗೂ ಡೋಂಟ್ ಕೇರ್!

    ಬೆಂಗಳೂರು: ರಾಜೀನಾಮೆ ನೀಡಲು ಮುಂದಾಗಿರುವ ಸಚಿವ ಆನಂದ್ ಸಿಂಗ್ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕರೆಗೂ ಡೋಂಟ್ ಕೇರ್ ಅಂದಿದ್ದಾರೆ.

    ಹೌದು. ಖಾತೆ ಕ್ಯಾತೆ ಸಂಬಂಧ ಬೊಮ್ಮಾಯಿ ಕರೆ ಮಾಡಿದ್ರೂ ಆನಂದ್ ಸಿಂಗ್ ಮಾತ್ರ ಫೋನ್ ಸ್ವೀಕರಿಸುತ್ತಿಲ್ಲ. ಈ ಮೂಲಕ ಸಚಿವರು ಸಿಎಂ ಅವರ ಸಂಪರ್ಕಕ್ಕೆ ಸಿಗುತ್ತಿಲ್ಲ. ಖಾತೆ ಬದಲಾಯಿಸದ ಹಿನ್ನೆಲೆಯಲ್ಲಿ ಸಚಿವರು ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

    ಸಿಎಂ ಬೊಮ್ಮಾಯಿ ಮೇಲೆ ಮುನಿಸಿಕೊಂಡಿರುವ ಆನಂದ್ ಸಿಂಗ್ ಅವರ ಕುಟುಂಬಸ್ಥರ ಮೊಬೈಲ್‍ಗೆ ಕರೆ ಮಾಡಿದ್ರೂ ಸ್ವೀಕರಿಸಿದೆ ತಮ್ಮ ಸಿಟ್ಟು ಹೊರಹಾಕುತ್ತಿದ್ದಾರೆ. ಇದನ್ನೂ ಓದಿ: ಕಚೇರಿಯ ಬೋರ್ಡ್ ತೆರವು – ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ ಆನಂದ್ ಸಿಂಗ್?

    ಒಟ್ಟಿನಲ್ಲಿ ಬಿಜೆಪಿ ಸರ್ಕಾರದಲ್ಲಿ ಖಾತೆ ಕ್ಯಾತೆ ಭುಗಿಲೆದ್ದಿದ್ದು, ಪ್ರಬಲ ಖಾತೆಗೆ ಸಚಿವ ಆನಂದ್ ಸಿಂಗ್ ಪಟ್ಟುಹಿಡಿದಿದ್ದಾರೆ. ತಾನು ಬಯಸಿದ ಖಾತೆ ಸಿಕ್ಕಿಲ್ಲವೆಂದು ಸಚಿವರು ಇದೀಗ ರಾಜೀನಾಮೆಗೆ ಮುಂದಾಗಿದ್ದಾರೆ. ಇದಕ್ಕೆ ಪೂರಕವಾಗಿ ಹೊಸಪೇಟೆಯಲ್ಲಿರುವ ಶಾಸಕರ ಕಚೇರಿ ಬೋರ್ಡ್ ತೆರವುಗೊಳಿಸಿದ್ದಾರೆ. ಕ್ರೇನ್ ಬಳಸಿ ಕಚೇರಿಯ ಬೋರ್ಡ್ ತೆಗೆಸಿದ ಆನಂದ್ ಸಿಂಗ್, ಸಂಪೂರ್ಣ ಕಚೇರಿ ಬಂದ್ ಮಾಡಲು ಮುಂದಾಗಿದ್ದಾರೆ. ಕಳೆದ 14 ವರ್ಷಗಳಿಂದ ಅಚಿವರು ಈ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

    ಬೊಮ್ಮಾಯಿ ಕ್ಯಾಬಿನೆಟ್ ನಲ್ಲಿ ಆನಂದ್ ಸಿಂಗ್ ಅವರು ಇಂಧನ ಅಥವಾ ಲೋಕೋಪಯೋಗಿ ಅಥವಾ ಗಣಿ ಇಲಾಖೆ ಬಯಸಿದ್ದರು. ಆದರೆ ಅವರಿಗೆ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ನೀಡಲಾಗಿದ್ದು, ಇದೇ ವಿಚಾರಕ್ಕೆ ಆನಂದ್ ಸಿಂಗ್ ಅವರು ಸಿಟ್ಟಾಗಿದ್ದು, ರಾಜೀನಾಮೆ ನೀಡುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

  • ಕೆಜಿ ಹಳ್ಳಿಯಿಂದ ಸಾವಿರಾರು ಫೋನ್‌ ಕಾಲ್‌ – ತನಿಖೆ ವೇಳೆ ಬಯಲಾಗುತ್ತಿದೆ ಸ್ಫೋಟಕ ವಿಚಾರ

    ಕೆಜಿ ಹಳ್ಳಿಯಿಂದ ಸಾವಿರಾರು ಫೋನ್‌ ಕಾಲ್‌ – ತನಿಖೆ ವೇಳೆ ಬಯಲಾಗುತ್ತಿದೆ ಸ್ಫೋಟಕ ವಿಚಾರ

    – ಭಯಗೊಂಡು ಎಫ್‌ಬಿ ಖಾತೆ ಡಿಲೀಟ್‌, ಪುಂಡರು ಪರಾರಿ
    – ಮತ್ತೆ 57 ಆರೋಪಿಗಳು ಅರೆಸ್ಟ್‌

    ಬೆಂಗಳೂರು: ಗಲಭೆ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಆರೋಪಿಗಳ ಫೋನ್ ಕಾಲ್ ಲೆಕ್ಕ ನೋಡಿ ಶಾಕ್ ಆಗಿದ್ದಾರೆ.

    ಘಟನೆ ನಡೆದ ರಾತ್ರಿ ಸುಮಾರು 30 ಆರೋಪಿಗಳ ಮೊಬೈಲ್‍ಗಳಿಂದ ಹೊರ ಜಿಲ್ಲೆಗಳಿಗೆ ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಿಂದಲೇ ಸಾವಿರಾರು ಕಾಲ್ ಹೋಗಿದೆ. ಎಲ್ಲವನ್ನು ಡಿ-ಕೋಡಿಂಗ್ ಮಾಡುವ ಕೆಲಸ ಆರಂಭಗೊಂಡಿದೆ. ಇನ್ನಷ್ಟು ಆರೋಪಿಗಳ ಪತ್ತೆಗಾಗಿ ಪೊಲೀಸರು 800ಕ್ಕೂ ಸಿಸಿಟಿವಿಗಳನ್ನು ವಶಕ್ಕೆ ಪಡೆದಿದ್ದಾರೆ.

    ದೊಂಬಿ ನಡೆಯುವ ಹಿಂದಿನ ದಿನ ಪುಂಡರನ್ನು ಸೇರಿಸಲು 10 ಫೇಸ್‍ಬುಕ್ ಲೈವ್ ಮಾಡಲಾಗಿತ್ತು. ಪ್ರಚೋದಿಸುವ ಮೂಲಕ 50 ಜನರಿದ್ದ ಗುಂಪನ್ನು 5 ಸಾವಿರಕ್ಕೆ ಏರಿಸಲಾಗಿತ್ತು. ಫೇಸ್‍ಬುಕ್ ಲೈವ್ ನಡೆಸಿದ್ದ ಪುಂಡರು ಪರಾರಿಯಾಗಿದ್ದಾರೆ. ಬಹುತೇಕರು ಎಫ್‍ಬಿ ಅಕೌಂಟ್ ಡಿಲೀಟ್ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

    ಡಿಜೆ ಹಳ್ಳಿ ಪೊಲೀಸರು ತಡರಾತ್ರಿ ಪ್ರಮುಖ ಆರೋಪಿ ಎಸ್‍ಡಿಪಿಐನ ಸಲೀಂ ಸೇರಿದಂತೆ 57 ಮಂದಿಯನ್ನು ಬಂಧಿಸಿದ್ದು, ಈವರೆಗೆ 370ಕ್ಕೂ ಹೆಚ್ಚು ಆರೋಪಿಗಳು ಅಂದರ್ ಆಗಿದ್ದಾರೆ. ಅಷ್ಟೇ ಅಲ್ಲ, ಸದ್ಯದಲ್ಲೇ ಉದ್ಘಾಟನೆಗೆ ಸಿದ್ದವಾಗಿದ್ದ ಹೆಗ್ಗಡೆನಗರದ ಎಸ್‍ಡಿಪಿಐ ಕಚೇರಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, 8 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ದಾಳಿ ವೇಳೆ ಕಬ್ಬಿಣದ ರಾಡ್, ಬ್ಯಾಟ್ ಸಮೇತ ಹಲವು ಮಾರಕಾಸ್ತ್ರ ಗಳನ್ನು ವಶಕ್ಕೆ ಪಡೆಯಲಾಗಿದೆ.

    ಆರೋಪಿ ಮುಜಾಮ್ಮಿಲ್ ಹೇಳಿಕೆ ಆಧರಿಸಿ ಸಾರಾಯಿಪಾಳ್ಯದಲ್ಲಿ 20ಕ್ಕೂ ಜನರನ್ನು ಸಿಸಿಬಿ ಬಂಧಿಸಿದೆ. ಮೊನ್ನೆ ಅರೆಸ್ಟ್ ಆದ ಕಾರ್ಪೊರೇಟರ್ ಪತಿ ಖಲೀಂ ಪಾಷಾ, ಮೊಬೈಲ್‍ನಲ್ಲಿ ಇಡೀ ಗಲಭೆಯ ಪಿನ್ ಟು ಪಿನ್ ಬ್ಲೂ ಪ್ರಿಂಟ್ ಸಿಕ್ಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

  • ಒಂದು ಫೋನ್ ಕಾಲ್‍ಗೆ ಸಿದ್ದರಾಮಯ್ಯ ಕೂಲ್? – ಇಲ್ಲಿದೆ ಇನ್‍ಸೈಡ್ ಸ್ಟೋರಿ

    ಒಂದು ಫೋನ್ ಕಾಲ್‍ಗೆ ಸಿದ್ದರಾಮಯ್ಯ ಕೂಲ್? – ಇಲ್ಲಿದೆ ಇನ್‍ಸೈಡ್ ಸ್ಟೋರಿ

    ಬೆಂಗಳೂರು: ಸಮ್ಮಿಶ್ರ ಸರ್ಕಾರದ ವಿರುದ್ಧ ರೆಬೆಲ್ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ತಾಳ್ಮೆಯಿಂದ ಇರುವಂತೆ ಮಾಡಲು ಹೈಕಮಾಂಡ್ ಹಿರಿಯ ನಾಯಕ, ಸೋನಿಯಾ ಗಾಂಧಿ ಆಪ್ತ ಕಾರ್ಯದರ್ಶಿ ಅಹಮದ್ ಪಟೇಲ್ ಅವರಿಂದ ಕರೆ ಮಾಡಿಸಿ ಸಮಾಧಾನ ಪಡಿಸುವ ಯತ್ನ ನಡೆಸಿದೆ.

    ಈ ಹಿಂದೆ ಕಾಂಗ್ರೆಸ್ ಹೈಕಮಾಂಡ್ ಸೋನಿಯಾ ಅವರಿಗೆ ಸಿದ್ದರಾಮಯ್ಯ ಅವರ ನೇರ ನುಡಿಯ ಬಗ್ಗೆ ಪರಿಚಯಿಸಿದ್ದ ಅಹಮದ್ ಪಾಟೇಲ್ ಅವರೇ ಸಿದ್ದರಾಮಯ್ಯ ಅವರನ್ನ ತಾಳ್ಮೆ ವಹಿಸುವಂತೆ ಮನವಿ ಮಾಡಿದ್ದಾರೆ. ಬುಧವಾರ ರಾತ್ರಿ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿದ್ದ ಅಹಮದ್ ಪಾಟೇಲ್ ಅವರು 7 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿದೆ.

    ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ ಅಹಮದ್ ಪಟೇಲ್ ಅವರು, ಮೈತ್ರಿ ಸರ್ಕಾರ ವಿರುದ್ಧ ಸಿಟ್ಟಾಗಿರುವ ಕುರಿತು ಪ್ರಶ್ನೆ ಮಾಡಿದ್ದಾರೆ. ಪಟೇಲ್ ಅವರ ಮಾತಿಗೆ ನೇರವಾಗಿ ಉತ್ತರಿಸಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನನಗೆ ಎಲ್ಲವನ್ನು ಕೊಟ್ಟಿದೆ. ಅದನ್ನು ನಾನು ಮರೆಯಲ್ಲ, ನನಗೆ ಇಷ್ಟ ಇಲ್ಲದಿದ್ದರೂ ಹೈಕಮಾಂಡ್‍ಗೆ ಗೌರವ ಕೊಟ್ಟು ಮೈತ್ರಿ ಸರ್ಕಾರಕ್ಕೆ ಒಪ್ಪಿದ್ದು. ದೇವೇಗೌಡರು ತಮ್ಮ ಅಧಿಕಾರಕ್ಕಾಗಿ ನಮ್ಮನ್ನು ಮುಗಿಸಿಬಿಡುತ್ತಾರೆ. ಕಾಂಗ್ರೆಸ್ ನ ದುಸ್ಥಿತಿ ಲಾಭ ಪಡೆದುಕೊಂಡು ದೇವೇಗೌಡರು ಈ ರೀತಿ ನಡೆಸುತ್ತಿದ್ದಾರೆ. ಇದರಿಂದ ನನಗಷ್ಟೇ ಅಲ್ಲ, ಪಕ್ಷದ ಹಲವು ನಾಯಕರು, ಶಾಸಕರಿಗೆ ತೊಂದರೆಯಾಗುತ್ತಿದೆ. ಇದರ ಅಪಾಯವನ್ನೇ ಅರಿತು ನಾನು ಹೆಜ್ಜೆ ಇಡುತ್ತಿದ್ದೇನೆ ಅಷ್ಟೇ ಎಂದು ತನ್ನ ನೋವನ್ನು ತೋಡಿಕೊಂಡಿದ್ದಾರೆ. ಇದನ್ನು ಓದಿ: ಸಿದ್ದರಾಮಯ್ಯ ವಿರುದ್ಧ ದೂರು ನೀಡಿ ಕಾಂಗ್ರೆಸ್ಸಿಗೆ 3 ಷರತ್ತು ವಿಧಿಸಿದ ದೇವೇಗೌಡರು!

    ಕಾಂಗ್ರೆಸ್ ನಾಯಕರಿಂದಲೂ ದೂರು: ಪಕ್ಷದ ಹಲವು ನಾಯಕರು ಕೂಡ ನಿಮ್ಮ ವಿರುದ್ಧ ದೂರು ನೀಡುತ್ತಿದ್ದಾರೆ ಎಂಬ ಪಟೇಲರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು, ಆ ರೀತಿ ಯಾವುದು ಇಲ್ಲ. ದೇವೇಗೌಡರ ಜೊತೆಗೆ ಪರಮೇಶ್ವರ್ ಕೂಡ ಸೇರಿಕೊಂಡು ನಮ್ಮನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇದರಿಂದ ಸರ್ಕಾರಕ್ಕೆ ಏನು ಅಪಾಯ ಆಗಲ್ಲ, ಆದರೆ ಕೆಲ ವಿಚಾರಗಳಲ್ಲಿ ಕಂಟ್ರೋಲ್ ನಲ್ಲಿ ಇಡಬೇಕು ಎಂದಿದ್ದಾರೆ. ಇದನ್ನು ಓದಿ: ಸಿದ್ದರಾಮಯ್ಯ ಹೇಳಿಕೆಯಿಂದ ಸರ್ಕಾರದ ಮೇಲೆ ಪರಿಣಾಮವಿಲ್ಲ – ಮಾಜಿ ಸಿಎಂಗೆ ಡಿಕೆಶಿ ನೇರ ಟಾಂಗ್

    ಸದ್ಯ ಸಿದ್ದರಾಮಯ್ಯ ಅವರ ಮಾತನ್ನು ಹೈಕಮಾಂಡ್ ಗಮನಕ್ಕೆ ತರುವ ಕುರಿತು ಅಶ್ವಾಸನೆ ನೀಡಿರುವ ಅಹಮದ್ ಪಟೇಲ್ ಮುಂದಿನ ದಿನಗಳಲ್ಲಿ ಸಮಾಧಾನದಿಂದ ಮುಂದುವರೆಯಿರಿ ಎಂದು ಹೇಳಿದ್ದಾರೆ. ಕೇಂದ್ರ ನಾಯಕರ ಮಧ್ಯ ಪ್ರವೇಶದ ಬಳಿಕ ಸಿದ್ದರಾಮಯ್ಯ ಅವರ ಅಸಮಾಧಾನ ಕೊನೆಗೊಳ್ಳುತ್ತಾ ಎಂಬುವುದನ್ನು ಕಾದು ನೋಡಬೇಕಿದೆ. ಇದನ್ನು ಓದಿ: ಸಮ್ಮಿಶ್ರ ಸರ್ಕಾರದ ಮೇಲೆ ಅಹಿಂದ ಅಸ್ತ್ರ – ಆಪ್ತರೊಂದಿಗೆ ಸಿದ್ದರಾಮಯ್ಯ ಸಭೆ

  • ಸಿಸಿಬಿ ಕಚೇರಿಯಿಂದ್ಲೇ ಸುನಿಲ್ ಹೆಗ್ಗರವಳ್ಳಿಗೆ ಬೆಳಗೆರೆ ಕರೆ- ಬೇಲ್‍ಗೆ ಅಡ್ಡಿಯಾಗುತ್ತಾ ಫೋನ್‍ಕಾಲ್?

    ಸಿಸಿಬಿ ಕಚೇರಿಯಿಂದ್ಲೇ ಸುನಿಲ್ ಹೆಗ್ಗರವಳ್ಳಿಗೆ ಬೆಳಗೆರೆ ಕರೆ- ಬೇಲ್‍ಗೆ ಅಡ್ಡಿಯಾಗುತ್ತಾ ಫೋನ್‍ಕಾಲ್?

    ಬೆಂಗಳೂರು: ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪವನ್ನು ಎದುರಿಸುತ್ತಿರುವ ಪತ್ರಕರ್ತ ರವಿ ಬೆಳಗೆರೆ, ಸಿಸಿಬಿ ವಶದಲ್ಲಿದ್ದುಕೊಂಡೇ ಸುನಿಲ್ ಹೆಗ್ಗರವಳ್ಳಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ.

    ಭಾನುವಾರ ರಾತ್ರಿ ಸುಮಾರು 9.40ರ ವೇಳೆಗೆ ಮಧು ಎಂಬಾತ ಸುನಿಲ್ ಹೆಗ್ಗರವಳ್ಳಿಗೆ ಕರೆ ಮಾಡಿದ್ದಾರೆ. ಸುನಿಲ್ ರಿಸೀವ್ ಮಾಡಿದಾಗ ಕರೆ ಮಾಡಿದ್ದ ಮಧು ಎಂಬಾತ ರವಿ ಬೆಳೆಗೆರೆಯವರಿಗೆ ಫೋನ್ ಕೊಟ್ಟಿದ್ದಾನೆ. ಈ ವೇಳೆ ಸುನಿಲ್ ಜೊತೆ ಮಾತನಾಡಿದ ರವಿ ಬೆಳಗೆರೆ, ಯಶೋಮತಿ ಜೊತೆ ಸಂಬಂಧ ಇದೆ ಅಂತಾ ಮಾಧ್ಯಮಗಳ ಮುಂದೆ ಹೇಳಿದ್ದೀಯಾ? ಅಂತಾ ಕೇಳಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಸುನಿಲ್ , ನನಗೆ ಯಶೋಮತಿ ಜೊತೆ ಸಂಬಂಧವಿಲ್ಲ. ಹೀಗಿದ್ದಾಗ ನಾನ್ ಯಾಕೆ ಹಾಗೆ ಹೇಳಲಿ? ಅಂತಾ ಪ್ರಶ್ನಿಸಿದ್ದಾರೆ.

    ಇನ್ನು ಇದೇ ವಿಚಾರವಾಗಿ ಪ್ರತಿಕ್ರಿಯಿಸಿದ ಬೆಳಗೆರೆ ಪುತ್ರಿ ಚೇತನಾ ಬೆಳಗೆರೆ, ಸಿಸಿಬಿ ಕಚೇರಿಯಿಂದ ನಮ್ಮ ತಂದೆ ಕರೆ ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ಸುನಿಲ್ ಹೆಗ್ಗರವಳ್ಳಿಯವರೂ ದೂರು ನೀಡಲಿ. ನಾವೂ ದೂರು ನೀಡುತ್ತೇವೆ. ನಮ್ಮ ತಂದೆಗೆ ಬೇಲ್ ಸಿಗದಂತೆ ಮಾಡಲು ಮತ್ತೊಂದು ಷಡ್ಯಂತ್ರ ರಚಿಸಿದ್ದಾರೆ ಎಂದಿದ್ದಾರೆ.

    ನನಗೆ ಏನೇ ಆದರೂ ರವಿ ಬೆಳಗೆರೆ ಅವರೇ ಕಾರಣ ಅಂತ ಸುನಿಲ್ ಹೆಗ್ಗರವಳ್ಳಿ ಹೇಳಿದ್ದಾರೆ. ಸಿಸಿಬಿ ಕಚೇರಿಯಿಂದ ಕರೆ ಮಾಡುವ ಮೂಲಕ ತಾನು ಏನ್ ಬೇಕಾದ್ರೂ ಮಾಡ್ತೀನಿ ಅನ್ನೋ ಮೆಸೇಜ್ ಕೊಟ್ಟಿದ್ದಾರೆ. ಯಶೋಮತಿ ನನ್ನ ಗೆಳತಿಯಷ್ಟೇ. ಎಲ್ಲರೂ ರವಿ ಬೆಳಗೆರೆಯಂತೆ ಇರಲು ಆಗುತ್ತಾ? ಅವರಿಗಾದರೂ ಹತ್ತಾರು ಮಂದಿ ಗರ್ಲ್ ಫ್ರೆಂಡ್ಸ್ ಇದ್ದಾರೆ ಅಂತಾ ಸುನಿಲ್ ಹೇಳಿದ್ದಾರೆ.

     

  • ಪ್ರಿಯಕರ ಫೋನ್ ಕಾಲ್ ರಿಸೀವ್ ಮಾಡದ್ದಕ್ಕೆ ಮನನೊಂದು ನೇಣಿಗೆ ಶರಣು

    ಪ್ರಿಯಕರ ಫೋನ್ ಕಾಲ್ ರಿಸೀವ್ ಮಾಡದ್ದಕ್ಕೆ ಮನನೊಂದು ನೇಣಿಗೆ ಶರಣು

    ನೆಲಮಂಗಲ: ಪ್ರಿಯಕರ ಫೋನ್ ಕರೆ ಸ್ವೀಕರಿಸದ್ದಕ್ಕೆ ಮನನೊಂದ  ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತಿಪ್ಪಗೊಂಡನಹಳ್ಳಿ ಬಳಿ ನಡೆದಿದೆ.

    ಪಶ್ಚಿಮ ಬಂಗಾಳ ಮೂಲದ ಮೂಲದ ರಿಜೀಯಾ ಕಾಟೂನ್ (19)ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

    ತಾಲೂಕಿನ ಟಿ.ಬೇಗೂರು ಬಳಿಯ ಅಂಬಿಕಾ ನರ್ಸಿಂಗ್ ಕಾಲೇಜಿನಲ್ಲಿ ಮೊದಲ ವರ್ಷದ ಡಿಪ್ಲೋಮಾ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ  ಈಕೆ ಅದೇ ಕಾಲೇಜಿನ ವಿದ್ಯಾರ್ಥಿಯನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಭಾನುವಾರ ಫೋನ್ ಕರೆಯನ್ನು ರಿಸೀವ್ ಮಾಡದಿದ್ದಕ್ಕೆ ಮನನೊಂದು ಪ್ರಿಯತಮನ ಜೊತೆ ತಂಗಲು ಬಾಡಿಗೆ ಪಡೆದಿದ್ದ ತೋಟದ ಮನೆಯಲ್ಲಿ ರಿಜೀಯಾ ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಿಯಕರ ಹಾಗೂ ಕಾಲೇಜು ಆಡಳಿತ ಮಂಡಳಿಯವರ ವಿಚಾರಣೆ ನಡೆಸುತ್ತಿದ್ದಾರೆ.