Tag: ಫ್ಯಾಮಿಲಿ ಪ್ಯಾಕ್

  • ಯುಗಾದಿ ಹಬ್ಬಕ್ಕೆ ‘ಫುಲ್ ಮಿಲ್ಸ್’ ಚಿತ್ರದ ಸ್ಪೆಷಲ್ ಪೋಸ್ಟರ್

    ಯುಗಾದಿ ಹಬ್ಬಕ್ಕೆ ‘ಫುಲ್ ಮಿಲ್ಸ್’ ಚಿತ್ರದ ಸ್ಪೆಷಲ್ ಪೋಸ್ಟರ್

    ಸಂಕಷ್ಟಕರ ಗಣಪತಿ, ಫುಲ್ ಮಿಲ್ಸ್ , ಅಬ್ಬಬ್ಬ ಚಿತ್ರಗಳ ಖ್ಯಾತಿಯ ನಾಯಕ ನಟ ಲಿಖಿತ್ ಶೆಟ್ಟಿ ನಟಿಸಿ, ನಿರ್ಮಿಸುತ್ತಿರುವ ‘ಫುಲ್ ಮೀಲ್ಸ್’ ಚಿತ್ರತಂಡ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದೆ. ಚಿತ್ರದ ಇಬ್ಬರು ನಾಯಕಿಯರಾದ ಖುಷಿ ರವಿ ಮತ್ತು ತೇಜಸ್ವಿನಿ ಶರ್ಮ ಒಂದೇ ಬಾಳೆ ಎಲೆಯಲ್ಲಿ ಊಟ ಮಾಡುತ್ತಿರುವ ಪೋಸ್ಟರ್ ಇದಾಗಿದ್ದು,  ಎಲ್ಲರೂ ಒಟ್ಟಿಗೆ ಸೇರಿ ಮಾಡುವ ಸಂಭ್ರಮವೇ ಹಬ್ಬ ಎಂಬ ಥೀಮ್ ಮೇಲೆ ತಯಾರಾಗಿರುವ ಈ ಪೋಸ್ಟರ್ ಸುಂದರವಾಗಿ ಕಾಣುತ್ತಿದೆ.  ನೋಡುಗರ ಗಮನವನ್ನು ಸೆಳೆದಿದೆ.   ಸಿನೆಮಾಗೆ ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲವು ಕೆಲಸಗಳು ಬಾಕಿಯಿದ್ದು, ಆದಷ್ಟು ಶೀಘ್ರದಲ್ಲಿ ಸಿನೆಮಾವನ್ನು ತೆರೆಗೆ ತರುವ ಪ್ರಯತ್ನದಲ್ಲಿ ಚಿತ್ರತಂಡವಿದೆ.

    ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾ ಹಂದರವನ್ನು ಹೊಂದಿರುವ ಈ ಸಿನೆಮಾ, ಮನೋರಂಜನೆಯ ಜೊತೆಗೆ ಸಾಕಷ್ಟು ಹೊಸ ವಿಷಯಗಳನ್ನು ಒಳಗೊಂಡಿದ್ದು, ಪ್ರೇಕ್ಷಕರು ಸಿನೆಮಾವನ್ನು ಇಷ್ಟಪಡುತ್ತಾರೆಂಬ ವಿಶ್ವಾಸ ಚಿತ್ರತಂಡಕ್ಕಿದೆ.

    ಚಿತ್ರದುರ್ಗದ ಪ್ರತಿಭೆ ಎನ್. ವಿನಾಯಕ ಈ ಚಿತ್ರದ ಮೂಲಕ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ.   ಹರೀಶ್ ಗೌಡ ಸಂಭಾಷಣೆ ಬರೆದಿದ್ದು, ಮನೋಹರ್ ಜೋಷಿ ಛಾಯಾಗ್ರಹಣ,  ಗುರು ಕಿರಣ್ ಸಂಗೀತ, ದೀಪು ಎಸ್ ಕುಮಾರ್ ಸಂಕಲನವಿದೆ. ಉಳಿದಂತೆ ತಾರಾಗಣದಲ್ಲಿ ರಂಗಾಯಣ ರಘು, ವಿಜಯ್ ಚಂಡೂರ್, ರವಿ ಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಸೂರಜ್ ಲೋಕ್ರೆ, ಹೂನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ನಾಗೇಂದ್ರ ಅರಸ್, ಮೂಗು ಸುರೇಶ್ ಮುಂತಾದವರಿದ್ದಾರೆ.

  • ಪುನೀತ್ ನಿರ್ಮಾಣದ ಫ್ಯಾಮಿಲಿ ಪ್ಯಾಕ್ ಚಿತ್ರ ನಿರ್ದೇಶಕನಿಗೆ ಟಾಲಿವುಡ್ ನಿಂದ ಮೆಗಾ ಆಫರ್

    ಪುನೀತ್ ನಿರ್ಮಾಣದ ಫ್ಯಾಮಿಲಿ ಪ್ಯಾಕ್ ಚಿತ್ರ ನಿರ್ದೇಶಕನಿಗೆ ಟಾಲಿವುಡ್ ನಿಂದ ಮೆಗಾ ಆಫರ್

    ಪುನೀತ್ ರಾಜ್ ಕುಮಾರ್ ಅವರ ಪಿ.ಆರ್.ಕೆ ಬ್ಯಾನರ್ ನಿಂದ ಮೂಡಿ ಬಂದಿರುವ “ಫ್ಯಾಮಿಲಿ ಪ್ಯಾಕ್” ಚಿತ್ರ ನಿರ್ದೇಶಕನಿಗೆ ಟಾಲಿವುಡ್ ನಿಂದ ಮೆಗಾ ಆಫರ್ ಬಂದಿದೆ. ಟಾಲಿವುಡ್ ನ ಎರಡು ನಿರ್ಮಾಣ ಸಂಸ್ಥೆಗಳು ನಿರ್ದೇಶಕ ಅರ್ಜುನ್ ಕುಮಾರ್ ಗೆ ಸಿನಿಮಾ ಮಾಡುವಂತೆ ಆಹ್ವಾನ ನೀಡಿವೆ. ಈ ಬಗ್ಗೆ ನಿರ್ದೇಶಕರು ಪ್ರತಿಕ್ರಿಯಿಸಿ, “ಎರಡು ನಿರ್ಮಾಣ ಸಂಸ್ಥೆಗಳು ತಮಗೆ ಸಿನಿಮಾ ಮಾಡುವಂತೆ ಕೇಳಿವೆ. ಆದರೆ, ಸದ್ಯಕ್ಕೆ ಯಾವುದೂ ಅಂತಿಮವಾಗಿಲ್ಲ. ಈಗಲೇ ಅದೆಲ್ಲವನ್ನು ನಾನು ರಿವೀಲ್ ಮಾಡುವುದಿಲ್ಲ. ಸದ್ಯ ಪಿಆರ್​ಕೆ ಸಂಸ್ಥೆ ವತಿಯಿಂದ ನಿರ್ಮಾಣವಾಗಿರುವ ಫ್ಯಾಮಿಲಿ ಪ್ಯಾಕ್ ಚಿತ್ರಕ್ಕೆ ಒಳ್ಳೆಯ ರೆಸ್ಪಾನ್ಸ್ ಸಿಗುತ್ತಿದೆ. ಅದೇ ಖುಷಿಯ ವಿಚಾರ” ಅಂತಾರೆ. ಇದನ್ನೂ ಓದಿ : ಫೆ.27ಕ್ಕೆ ಡಾ.ಅಂಬರೀಶ್ ಸ್ಮಾರಕ ಶಂಕು ಸ್ಥಾಪನೆ : ಸಿಎಂ ಬಸವರಾಜ ಬೊಮ್ಮಾಯಿ ಭಾಗಿ

    ಫ್ಯಾಮಿಲಿ ಪ್ಯಾಕ್ ಸಿನಿಮಾದ ಬಗ್ಗೆ ಅವರು ಮಾತನಾಡಿ, “ಸಿನಿಮಾ ಶೀರ್ಷಿಕೆ ನೋಡಿ ಇದೊಂದು ಡಬಲ್ ಮೀನಿಂಗ್ ಸಿನಿಮಾ ಅಂದುಕೊಂಡವರೇ ಹೆಚ್ಚು. ಆದರೆ ಇದೊಂದು ಪಕ್ಕಾ ಕೌಟುಂಬಿಕ ಚಿತ್ರ. ಪಿಆರ್​ಆಕೆ ಸಿನಿಮಾ ಸಂಸ್ಥೆ ವಜ್ರೇಶ್ವರಿ ಸಂಸ್ಥೆ ಹಾಕಿಕೊಟ್ಟ ದಾರಿಯಲ್ಲಿಯೇ ನಡೆಯಲಿದೆ. ಆ ಸಂಸ್ಥೆ ಸಾಗಿ ಬಂದ ರೀತಿಯಲ್ಲಿಯೇ ಮನರಂಜನಾತ್ಮಕ ಸಿನಿಮಾಗಳನ್ನು ನೀಡುವುದು ಸಂಸ್ಥೆಯ ಉದ್ದೇಶ. ಹಾಗಾಗಿ ನಾವೂ ಕೂಡ ಶುದ್ಧ ಮನರಂಜನೆ ಸಿನಿಮಾ ಮಾಡಿದ್ದೇವೆ” ಅಂತಾರೆ. ಇದನ್ನೂ ಓದಿ : ವಿಮಾನದಲ್ಲೂ ಯಶ್-ರಾಧಿಕಾ ಪಂಡಿತ್ ಅವರ ಮಕ್ಕಳ ಆಟ

    ಲಿಖಿತ್ ಶೆಟ್ಟಿ, ಅಮೃತಾ ಅಯ್ಯಂಗಾರ್ ನಾಯಕ, ನಾಯಕಿಯಾಗಿ ನಟಿಸಿರುವ ಫ್ಯಾಮಿಲಿ ಪ್ಯಾಕ್ ಸಿನಿಮಾ ಓಟಿಟಿಯಲ್ಲಿ ರಿಲೀಸ್ ಆಗಿತ್ತು. ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗಿದೆ.