ದಾವಣಗೆರೆ: ಸಾವರ್ಕರ್ ಪೋಸ್ಟರ್ ಅನ್ನು ಕಿಡಿಗೇಡಿಗಳು ಬ್ಲೇಡ್‍ನಿಂದ ಹರಿದು ಹಾಕಿ ವಿಕೃತಿ ಮೆರೆದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ನಗರದಾದ್ಯಂತ ಗಣಪತಿ ಪ್ರತಿಷ್ಠಾಪನೆ ಹಿನ್ನೆಲೆ ಸಾವರ್ಕರ್ ಹಾಗೂ ರೇಣುಕಾಚಾರ್ಯ ಫ್ಲೆಕ್ಸ್ ಗಳನ್ನು ಬೆಂಬಲಿಗರು ಹಾಕಿದ್ದರು. ಇದೀಗ ಈ ಫ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಹರಿದುಹಾಕಿದ್ದಾರೆ.
ಹೊನ್ನಾಳಿ ಪಟ್ಟಣ ಹಾಗೂ ಗೊಲ್ಲರಹಳ್ಳಿಯಿಂದ ಹೊನ್ನಾಳಿ ಮಾರ್ಗವಾಗಿ ಈ ಫ್ಲೆಕ್ಸ್ ಗಳನ್ನು ಹಾಕಲಾಗಿತ್ತು. ಇದೀಗ ಈ ರೀತಿ ವಿಕೃತಿ ಮೆರೆದ ದುಷ್ಕರ್ಮಿಗಳನ್ನು ಶೀಘ್ರವೇ ಬಂಧಿಸುವಂತೆ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅನಧಿಕೃತ ಪ್ಲೆಕ್ಸ್ ಬ್ಯಾನರ್ ವಿರುದ್ಧ ಈಗ ಬಿಬಿಎಂಪಿ ಅಧಿಕಾರಿಗಳು ಫೀಲ್ಡ್ ಗಿಳಿದಿದ್ದಾರೆ.
ಅನುಮತಿ ಪಡೆಯದೇ ನಿರ್ಮಾಣವಾಗಿರುವ ಬ್ಯಾನರ್ ಅಂಗಡಿಗಳಿಗೆ ತೆರಳಿ ಅಂಗಡಿಗಳನ್ನು, ಬ್ಯಾನರ್ ಗಳನ್ನು ಸೀಝ್ ಮಾಡುತ್ತಿದೆ. ನಗರದಲ್ಲಿ ಫ್ಲೆಕ್ಸ್ ಆಳವಡಿಕೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಿ ಅಂತಾ ಪದೇ ಪದೇ ಹೈಕೋರ್ಟ್ ಚಾಟಿ ಬೀಸುತ್ತಲೇ ಇದೆ. ಇದನ್ನೂ ಓದಿ: ರಾಜ್ಯದಲ್ಲಿ ಮಂಕಿಪಾಕ್ಸ್ ಬಗ್ಗೆ ಅಲರ್ಟ್ ಘೋಷಿಸಿದ ಆರೋಗ್ಯ ಇಲಾಖೆ
ಫ್ಲೆಕ್ಸ್ ಬ್ಯಾನರ್ ಬಳಕೆ ಮಾಡಬಾರದು ಅಂತಾ ನಿರ್ದೇಶನ ಇದ್ರೂ ಜನಪ್ರತಿನಿಧಿಗಳೇ ಇದನ್ನು ಉಲ್ಲಂಘಿಸುತ್ತಿದ್ದಾರೆ. ಇವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕೋಕೆ ಬಿಬಿಎಂಪಿ ಹಿಂದೇಟು ಹಾಕುತ್ತಿದೆ. ಆದರೆ ಈಗ ಕೊನೆಗೂ ಎಚ್ಚೆತ್ತು ಗಾಂಧಿನಗರದಲ್ಲಿ ಅಕ್ರಮ ಪ್ಲೆಕ್ಸ್ ಬ್ಯಾನರ್ ಅಂಗಡಿಗಳಿಗೆ ಬಿಸಿ ಮುಟ್ಟಿಸುವ ಕೆಲ್ಸವನ್ನು ಬಿಬಿಎಂಪಿ ಮಾಡಿದೆ.
ಮುಂದಿನ ದಿನದಲ್ಲಿ ಬೆಂಗಳೂರಿನ ಎಲ್ಲಾ ವಾರ್ಡ್‍ಗಳಲ್ಲಿಯೂ ಈ ಪರಿಶೀಲನಾ ಕಾರ್ಯ ನಡೆಸೋದಾಗಿ ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ.
Live Tv
[brid partner=56869869 player=32851 video=960834 autoplay=true]
ಹಾಸನ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವಿರುವ ಫ್ಲೆಕ್ಸ್‌ನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಕುಡುಕುಂದಿ ಗುಡ್ಡದಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ವತಿಯಿಂದ ಅಂಬೇಡ್ಕರ್ ಅವರ 131ನೇ ಜಯಂತಿ ಪ್ರಯುಕ್ತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನೆಲೆ ಹಲವೆಡೆ ಅಂಬೇಡ್ಕರ್ ಫ್ಲೆಕ್ಸ್ ಹಾಕಲಾಗಿತ್ತು. ಆದರೆ ಕೆಲವು ಕಿಡಿಗೇಡಿಗಳು ಫ್ಲೆಕ್ಸ್ ಹರಿದು ಹಾಕಿದ್ದಾರೆ. ಇದನ್ನೂ ಓದಿ: 3 ವರ್ಷಗಳ ಬಳಿಕ ಟಿಎಂಸಿ ಪಕ್ಷಕ್ಕೆ ಬಿಜೆಪಿ ಎಂಪಿ ವಾಪಸ್
ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಕಾರ್ಯಕ್ರಮ ಆಯೋಜಕರು ಆರೋಪಿಸಿದ್ದಾರೆ. ಘಟನೆ ಕುರಿತು ಗಂಡಸಿ ಪೊಲೀಸ್ ಠಾಣೆ ಎದುರು ಜಮಾಯಿಸಿರುವ ಹೋರಾಟಗಾರರು, ಫ್ಲೆಕ್ಸ್ ಹರಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕುತುಬ್ ಮಿನಾರ್ ವಿವಾದ – ಸದ್ಯಕ್ಕಿಲ್ಲ ಉತ್ಖನನ
ಮಂಡ್ಯ: ಸನ್ನಿಲಿಯೋನ್ ಎಂದರೆ ಸಮಾಜದಲ್ಲಿ ಜನ ನೋಡುವ ದೃಷ್ಟಿಯೇ ಬೇರೆ, ಆದರೆ ಸಕ್ಕರೆ ನಾಡು ಮಂಡ್ಯದ ಅಭಿಮಾನಿಗಳು ಸನ್ನಿಲಿಯೋನ್‍ನ ಸಮಾಜ ಸೇವೆಯನ್ನು ಸ್ಪೂರ್ತಿಯಾಗಿ ತೆಗೆದುಕೊಂಡು ಹುಟ್ಟು ಹಬ್ಬವನ್ನು ಅರ್ಥ ಪೂರ್ಣವಾಗಿ ಆಚರಣೆ ಮಾಡಿದ್ದಾರೆ.
ಮಂಡ್ಯದ ಕಾರಸವಾಡಿ ಗ್ರಾಮದ ಪ್ರಸಾದ್ ನಗರದ ನೂರಡಿ ರಸ್ತೆಯ ಕರ್ನಾಟಕ ಬಾರ್ ವೃತ್ತದಲ್ಲಿ ಡಿಕೆ ಫ್ರೆಶ್ ಚಿಕನ್ ಸೆಂಟರ್ ಇಟ್ಟಿದ್ದಾರೆ. ಇವರು ಸನ್ನಿಲಿಯೋನ್ ಮಾಡುವ ಸಮಾಜ ಸೇವೆಗೆ ಮಾರುಹೋಗಿ ಆಕೆಯ ಅಪ್ಪಟ ಅಭಿಮಾನಿಯಾಗಿದ್ದಾರೆ. ಆಕೆ ಅನಾಥ ಮಕ್ಕಳನ್ನು ದತ್ತು ತೆಗೆದುಕೊಂಡು ಸಾಕುವ ಕೆಲಸಕ್ಕೆ ಫುಲ್ ಫಿದಾ ಆಗಿದ್ದು, ಆಕೆಯ ಸಮಾಜ ಸೇವೆಗೆ ಮಾರುಹೋಗಿದ್ದಾರೆ. ಹೀಗಾಗಿ ಇಂದು ಸನ್ನಿಲಿಯೋನ್ ಅವರ 41ನೇ ಹುಟ್ಟು ಹಬ್ಬದ ಹಿನ್ನೆಲೆ ಚಿಕನ್ ಸೆಂಟರ್ ಎದುರು ಕೇಕ್ ಕತ್ತರಿಸಿ ಬಡವರಿಗೆ ಬಿರಿಯಾನಿಯನ್ನು ಹಂಚಿದ್ದು, ಸಾಮಾಜಿಕ ಜಾಲತಾಣದಲ್ಲಿ ಸನ್ನಿಯ ಪೋಸ್ಟ್‍ಗಳಿಗೆ ಅತೀ ಹೆಚ್ಚು ಲೈಕ್ಸ್ ಮತ್ತು ಕಾಮೆಂಟ್ಸ್ ಮಾಡಿದ ಅಭಿಮಾನಿಗಳಗೆ ತಮ್ಮ ಚಿಕನ್ ಸೆಂಟರ್‍ನಲ್ಲಿ 10% ಡಿಸ್ಕೌಂಟ್‍ನ್ನು ಸಹ ನೀಡಿದ್ದಾರೆ. ಇದನ್ನೂ ಓದಿ: ಸನ್ನಿ ಲಿಯೋನ್ ಮೂರು ಮಕ್ಕಳ ತಾಯಿ, ನೂರಾರು ಕೋಟಿ ಒಡತಿ : ಜಸ್ಟ್ @ 40
ಇದಲ್ಲದೇ ಮಂಡ್ಯ ತಾಲೂಕಿನ ಕೊಮ್ಮೇರನಹಳ್ಳಿ ಗ್ರಾಮದಲ್ಲೂ ಸಹ ಸನ್ನಿಲಿಯೋನ್ ಬರ್ತಡೇ ಆಚರಣೆ ಮಾಡಿದ್ದು, ಗ್ರಾಮದ ರಸ್ತೆಯ ಬಳಿ ಅನಾಥ ಮಕ್ಕಳ ತಾಯಿ ಎಂದು ಸನ್ನಿಲಿಯೋನ್‍ನ 20 ಅಡಿ ಉದ್ದದ ಫೆಕ್ಸ್ ಹಾಕಲಾಗಿದೆ. ಅವರ ಹುಟ್ಟು ಹಬ್ಬವನ್ನು ಅರ್ಥ ಪೂರ್ಣವಾಗಿ ಮಾಡಬೇಕೆಂದು ಜೀವಧಾರೆ ಟ್ರಸ್ಟ್ ಸಹಯೋಗದಲ್ಲಿ ರಕ್ತದಾನ ಶಿಬಿರ ಮಾಡಲಾಯಿತು. ಬಳಿಕ ಗ್ರಾಮದ ಮಕ್ಕಳ ಕೈಯಲ್ಲಿ ಕೇಕ್ ಕತ್ತರಿಸಿ ಇಲ್ಲಿನ ಗ್ರಾಮಸ್ಥರು ಸಂಭ್ರಮಿಸಿ ನಂತರ ಜನರಿಗೆ ಮಾಂಸದ ಊಟವನ್ನು ಹಂಚಲಾಯಿತು.
ಮೈಸೂರು: ಸ್ವ-ಪಕ್ಷೀಯ ಮುಖಂಡರು ಮೈಸೂರು ನಗರದ ಎಲ್ಲೆಡೆ ಸಚಿವರ ಸ್ವಾಗತಕ್ಕೆ ಹಾಕಿದ ಫ್ಲೆಕ್ಸ್ ವಿರುದ್ಧವೇ ಸಂಸದ ಪ್ರತಾಪ್ ಸಿಂಹ ತಿರುಗಿ ಬಿದ್ದಿದ್ದಾರೆ.
ಮೈಸೂರು ನಗರದಲ್ಲಿ ಫ್ಲೆಕ್ಸ್ ಅಳವಡಿಕೆ ವಿರುದ್ಧ ಸಂಸದರು ಕಿಡಿಕಾರಿದ್ದು, ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಫ್ಲೆಕ್ಸ್ ಅಳವಡಿಸುವ ರಾಜಕೀಯ ಪಕ್ಷಗಳಿಗೆ ನೋಟಿಸ್ ನೀಡುವಂತೆ ಮೈಸೂರು ನಗರ ಪೊಲೀಸ್ ಆಯುಕ್ತರು ಹಾಗೂ ಮೈಸೂರು ಮಹಾ ನಗರ ಪಾಲಿಕೆ ಆಯುಕ್ತರಿಗೆ ಟ್ಲೀಟರ್ ಮೂಲಕ ಆಗ್ರಹಿಸಿದ್ದಾರೆ.
Dear @mysurucorp, I had requested you to issue notices to all political parties under THE KARNATAKA OPEN PLACES (PREVENTION OF DISFIGUREMENT) ACT, 1981 n take strict action. But…! Don’t allow anyone to dirt our beloved city #Mysuru. Sir @DC_Mysuru pls intervene @CPMysurupic.twitter.com/v4iYuuqrtq
ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಸಚಿವ ಮುರಗೇಶ್ ನಿರಾಣಿ ಮೈಸೂರಿಗೆ ಬಂದ ಕಾರಣ ಅವರ ಅಭಿಮಾನಿಗಳು ಸಂಸದ ಪ್ರತಾಪ್ ಸಿಂಹ ಅವರ ಫೋಟೋ ಸಮೇತ ನಗರದ ವಿವಿಧೆಡೆ ಫ್ಲೆಕ್ಸ್ ಹಾಕಿದ್ದರು. ಇದರ ಜೊತೆಗೆ ಜೆಡಿಎಸ್ ನ ಜನತಾ ಜಲಧಾರೆ ಹಿನ್ನೆಲೆಯಲ್ಲೂ ಜೆಡಿಎಸ್ ಮುಖಂಡರು ಎಲ್ಲಾ ಕಡೆ ಫ್ಲೆಕ್ಸ್ ಹಾಕಿದ್ದಾರೆ.
ಚಿತ್ರದುರ್ಗ: ಫ್ಲೆಕ್ಸ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದು ಮೂವರು ಆಸ್ಪತ್ರೆಗೆ ದಾಖಲಾಗಿರೋ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ನಡೆದಿದೆ.
ಮಂಗಳವಾರ ಹಿರಿಯೂರು ಪಟ್ಟಣದಲ್ಲಿ ನಡೆಯಲಿರುವ ರಾಜ್ಯಮಟ್ಟದ ಬಾಬುಜಗಜೀವನ್ ರಾಮ್ ಜಯಂತಿ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗಮಿಸಲಿದ್ದಾರೆ. ಹೀಗಾಗಿ ಕಾಂಗ್ರೆಸ್ ಮಾಜಿ ಸಚಿವ ಡಿ.ಸುಧಾಕರ್ ಹಾಗೂ ಎಂಎಲ್‍ಸಿ ಚುನಾವಣೆಯ ಪರಾಜಿತ ಅಭ್ಯರ್ಥಿ ಸೋಮಶೇಖರ್ ನಡುವೇ ಶಕ್ತಿ ಪ್ರದರ್ಶನದ ಪೈಪೋಟಿ ಶುರುವಾಗಿದೆ. ರಾಜ್ಯ ನಾಯಕರನ್ನು ಓಲೈಸಲು ಫ್ಲೆಕ್ಸ್ ಹಾಕಿಸಲು ನಾ ಮುಂದು, ನೀ ಮುಂದು ಎಂದು ಕಾರ್ಯಕರ್ತರು ಮುಗಿಬಿದ್ದಿದ್ದಾರೆ. ಇದನ್ನೂ ಓದಿ: ಮೈಸೂರಿನಿಂದ ಬಂದ ರಾಯಲ್ ಎನ್‍ಫೀಲ್ಡ್ ಆಂಧ್ರದಲ್ಲಿ ಸ್ಫೋಟ
ಈ ವೇಳೆ ಸೋಮಶೇಖರ್ ಹಾಕಿಸಿದ್ದ ಫ್ಲೆಕ್ಸನ್ನು ಸುಧಾಕರ್ ಬೆಂಬಲಿಗರು ತೆರವುಗೊಳಿಸಿದ್ದಾರೆ. ಈ ಕಾರಣ ಆಕ್ರೋಶಗೊಂಡಿರೋ ಸೋಮಶೇಖರ್ ಬೆಂಬಲಿಗರು ಕಾಂಗ್ರೆಸ್‍ನಲ್ಲೂ ಅಲ್ಪಸಂಖ್ಯಾತರ ಕಡೆಗಣನೆ ಶುರುವಾಗಿದೆ ಎಂದು ಆರೋಪಿಸಿದ್ದಾರೆ.
ಕೋಪಗೊಂಡ ಸುಧಾಕರ್ ಬೆಂಬಲಿಗರಾದ ಮಾಜಿ ಜಿಪಂ ಸದಸ್ಯರಾದ ನಾಗೇಂದ್ರ ನಾಯಕ್, ಅಶೋಕ್ ಹಾಗೂ ಸುರೇಶ್ ಬಾಬು ಕಾಂಗ್ರೆಸ್ ನಾಯಕರ ಮುಂದೆಯೇ ವಾಗ್ವಾದ ನಡೆಸಿದ್ದಾರೆ. ಕೊನೆಗೆ ಮಾತಿನ ಚಕಮಕಿ ಕೈ-ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಈ ವೇಳೆ ಸೋಮಶೇಖರ್ ಬೆಂಬಲಿಗರಾದ ಅಸ್ಲಂ ಭಾಷಾ, ಮಹಮ್ಮದ್ ಗಫರ್, ಸೈಯದ್ ಅಕ್ತಾರ್ ಭಾಷಾ ಗಾಯಗೊಂಡು ಹಿರಿಯೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಬುದ್ದಿ ಮಾತು ಹೇಳಿದ ತಮ್ಮನನ್ನೆ ಕೊಂದ ಅಣ್ಣ
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಬಿ.ಎನ್ ಚಂದ್ರಪ್ಪ ಹಾಗೂ ಮಾಜಿ ಸಚಿವ ಡಿ.ಸುಧಾಕರ್ ಅವರ ಸಮ್ಮುಖದಲ್ಲಿಯೇ ಇಬ್ಬರು ನಾಯಕರ ಬೆಂಬಲಿಗರ ನಡುವೆ ಮಾತಿನ ಚಕಮಕಿ ಘರ್ಷಣೆ ನಡೆದಿದೆ. ಬೆಂಬಲಿಗರ ಘರ್ಷಣೆ ವೇಳೆ ನಾಯಕರು ಮೂಕ ಪ್ರೇಕ್ಷಕರಾಗಿದ್ದರು. ಈ ಸಂಬಂಧ ಹಿರಿಯೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ನಗರದಲ್ಲಿನ ಅನಧಿಕೃತ ಫ್ಲೆಕ್ಸ್, ಬ್ಯಾನರ್ಸ್, ಬಂಟಿಂಗ್ಸ್‍ಗಳನ್ನು ತೆರವುಗೊಳಿಸುವ ಕೆಲಸ ಇನ್ನಷ್ಟು ವೇಗವಾಗಿ ನಡೆಯಬೇಕಿದ್ದು, ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಅಧಿಕಾರಿಗಳು ತತ್‍ಕ್ಷಣ ಕಾರ್ಯಪ್ರವೃತ್ತರಾಗಿ ತೆರವು ಕಾರ್ಯಾಚರಣೆ ನಡೆಸಬೇಕೆಂದು ಮುಖ್ಯ ಆಯುಕ್ತರಾದ ಗೌರವ್ ಗುಪ್ತರವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಫ್ಲೆಕ್ಸ್, ಬಂಟಿಂಗ್ಸ್ ಮತ್ತು ಬ್ಯಾನರ್ಸ್‍ಗಳ ತೆರವುಗೊಳಿಸುವಿಕೆ ಬಗ್ಗೆ ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಬ್ಯಾನರ್, ಫ್ಲೆಕ್ಸ್‍ಗಳನ್ನು ವ್ಯಾಪಕವಾಗಿ ಅಳವಡಿಸಲಾಗುತ್ತಿದೆ. ಆಯಾ ವಲಯ ವ್ಯಾಪ್ತಿಯಲ್ಲಿಯ ಸ್ಥಳೀಯ ಅಧಿಕಾರಿಗಳು ಯಾವುದೇ ಫ್ಲೆಕ್ಸ್‍ಗಳನ್ನು ಅಳವಡಿಸಲು ಬಿಡಬಾರದು. ಅನಧಿಕೃತವಾಗಿ ಫ್ಲೆಕ್ಸ್ ಅಳವಡಿಸುವಂತಹವರ ಮೇಲೆ ಸ್ಥಳಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಎಫ್‍ಐಆರ್ ದಾಖಲಿಸಲು ಸೂಚನೆ ನೀಡಿದರು. ಇದನ್ನೂ ಓದಿ: ಉಕ್ರೇನ್ ಗಡಿ ತಲುಪಿದ್ರೂ ಭಾರತಕ್ಕೆ ಬರಲಾಗದೆ ರಾಯಚೂರು ವಿದ್ಯಾರ್ಥಿಗಳು ಪರದಾಟ
ಚುನಾವಣೆಯ ಸಂದರ್ಭದಲ್ಲಿ ಹೇಗೆ ನಗರವು ಬ್ಯಾನರ್ಸ್, ಫ್ಲೆಕ್ಸ್‍ಗಳಿಂದ ಮುಕ್ತವಾಗಿರುತ್ತದೆಯೋ ಅದೇ ರೀತಿ ಈಗಲೂ ಕೂಡ ನಗರವು ಬ್ಯಾನರ್ಸ್, ಫ್ಲೆಕ್ಸ್‍ಗಳಿಂದ ಮುಕ್ತವಾಗಿರಬೇಕು. ನಗರದಲ್ಲಿ ಎಲ್ಲೆಲ್ಲಿ ಹೆಚ್ಚಾಗಿ ಫ್ಲೆಕ್ಸ್, ಬ್ಯಾನರ್‍ಗಳನ್ನು ಅಳವಡಿಸಲಾಗಿದೆಯೋ ಅಂತಹ ಸ್ಥಳಗಳಲ್ಲಿ ಪೊಲೀಸ್ ಸಹಯೋಗದ ಜೊತೆಗೆ ಮಾರ್ಷಲ್‍ಗಳನ್ನು ಸಹ ನಿಯೋಜನೆ ಮಾಡಿಕೊಂಡು ತೆರವುಗೊಳಿಸಲು ಮುಂದಾಗಬೇಕು. ಪಾಲಿಕೆಯ ಶಿಲ್ಟ್ ಅಂಡ್ ಟ್ರ್ಯಾಕ್ಟರ್, ಪ್ರಹಾರಿ ಸೇರಿದಂತೆ ಹೆಚ್ಚುವರಿಯಾಗಿ ಇನ್ನಿತರೆ ವಾಹನಗಳು ಹಾಗೂ ಅಗತ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಿಕೊಂಡು ತೆರವು ಕಾರ್ಯಾರಣೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಲ್ಲಿ ಫ್ಲೆಕ್ಸ್, ಬ್ಯಾನರ್ಸ್, ಬಂಟಿಗ್ಸ್, ಭಿತ್ತಿಪತ್ರ, ಬಾವುಟಗಳು ಸೇರಿದಂತೆ ಇತ್ಯಾದಿ ಜಾಹೀರಾತು/ಪ್ರಕಟಣೆಗಳ ಅಳವಡಿಕೆಯು ಬಿಬಿಎಂಪಿ ಕಾಯ್ದೆ 2020 ಮತ್ತು ಕರ್ನಾಟಕ ಮುಕ್ತ ಸ್ಥಳಗಳ (ವಿರೂಪಗೊಳಿಸುವಿಕೆ ತಡೆ) ಕಾಯ್ದೆ 1981ರ ಕಲಂ(3)ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದರು.
ಆದರೂ ಸಹ ನಗರದಲ್ಲಿ ಮತ್ತೆ ಮತ್ತೆ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾರ್ನರ್‍ಗಳನ್ನು ಅಳವಡಿಸಿ ನಗರದ ಸೌಂದರ್ಯ ಹಾಳಾಗುವಂತಹ ಕೆಲಸ ಮಾಡಲಾಗುತ್ತಿದೆ. ಈ ಸಂಬಂಧ ಪಾಲಿಕೆಯ ಎಲ್ಲಾ ವಲಯಗಳಲ್ಲಿಯೂ ಅಧಿಕಾರಿಗಳು ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಂಡು ತೆರವು ಕಾರ್ಯಾಚರಣೆ ಮಾಡಿ, ಯಾವುದೇ ಅನಧಿಕೃತ ಫ್ಲೆಕ್ಸ್‍ಗಳು ಇರದಂತೆ ಕ್ರಮವಹಿಸಲು ಸೂಚನೆ ನೀಡಿದರು. ಇದನ್ನೂ ಓದಿ: ನಮ್ಮ ಸ್ವಂತ ಜನರನ್ನು ನಾವು ಬಿಟ್ಟುಕೊಡಲು ಸಾಧ್ಯವಿಲ್ಲ: ಕೇಂದ್ರದ ವಿರುದ್ಧ ರಾಹುಲ್ ಕಿಡಿ
ಪೊಲೀಸ್ ಇಲಾಖೆಯಿಂದ ಸಹಯೋಗ ನೀಡಲು ಮನವಿ:
ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ಸ್, ಬಂಟಿಗ್ಸ್‍ಗಳನ್ನು ಅಳವಡಿಸುವ ಪ್ರಕ್ರಿಯೆ ಹೆಚ್ಚಾಗಿದ್ದು, ಇದರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಸಿಬ್ಬಂದಿಯು ಅನಧಿಕೃತ ಫ್ಲೆಕ್ಸ್‍ಗಳನ್ನು ತೆರವುಗೊಳಿಸುವ ವೇಳೆ ಪಾಲಿಕೆ ಅಧಿಕಾರಿಗಳ ಜೊತೆ ತೆರಳಿ ಅಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು.
ಇದಕ್ಕೆ ಪೊಲೀಸ್ ಇಲಾಖೆಗೆ ಸಹಕಾರ ಅತ್ಯಗತ್ಯ ಎಂದು ಮುಖ್ಯ ಆಯುಕ್ತರು ನಗರ ಪೆÇಲೀಸ್ ಆಯುಕ್ತರಾದ ಕಮಲ್ ಪಂತ್‍ರವರಿಗೆ ಮನವಿ ಮಾಡಿದರು. ಈ ವೇಳೆ ನಗರ ಪೆÇಲೀಸ್ ಆಯುಕ್ತರಾದ ಕಮಲ್ ಪಂತ್‍ರವರು ಪ್ರತಿಕ್ರಿಯಿಸಿ, ಪಾಲಿಕೆಯ ಜೊತೆಗೆ ನಮ್ಮ ಅಧಿಕಾರಿಗಳು ಕೈಜೋಡಿಸಿ ಕಾರ್ಯನಿರ್ವಹಿಸಲಿದ್ದು, ಪಾಲಿಕೆ ಅಧಿಕಾರಿಗಳಿಗೆ ಬೇಕಾದಂತಹ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ಸಭೆಯಲ್ಲಿ ಪಾಲಿಕೆಯ ಎಲ್ಲಾ ವಲಯ ಆಯುಕ್ತರುಗಳು, ಹಣಕಾಸು ವಿಭಾಗದ ಅಪರ ಆಯುಕ್ತರು ವೆಂಕಟೇಶ್. ಎಸ್, ಎಲ್ಲಾ ವಲಯ ಜಂಟಿ ಆಯುಕ್ತರುಗಳು, ಎಲ್ಲಾ ವಲಯ ಮುಖ್ಯ ಇಂಜಿನಿಯರ್‌ಗಳು ಎಲ್ಲಾ ವಿಭಾಗೀಯ ಕಾರ್ಯಪಾಲಕ ಇಂಜಿನಿಯರ್‍ಗಳು ಇತರ ಅಧಿಕಾರಿಗಳು ಉಪಸ್ಥಿರಿದ್ದರು.
ಬೆಂಗಳೂರು: ಅನಧಿಕೃತ ಬ್ಯಾನರ್, ಫ್ಲೆಕ್ಸ್, ಪೋಸ್ಟರ್ಸ್, ಬಂಟಿಂಗ್ಸ್ ಅಳವಡಿಸುವವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಬ್ಯಾನರ್, ಫ್ಲೆಕ್ಸ್, ಪೋಸ್ಟರ್ಸ್, ಬಂಟಿಂಗ್ಸ್ ಅಳವಡಿಸುವವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಎಫ್‌ಐಆರ್ ದಾಖಲಿಸಲು ಎಲ್ಲಾ ವಲಯದ ಅಧಿಕಾರಿಗಳಿಗೆ ಮುಖ್ಯ ಆಯುಕ್ತರು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: 9 ಎಫ್‍ಐಆರ್, 7 ಮಂದಿ ಅರೆಸ್ಟ್ – ಶಿವಮೊಗ್ಗ ನಗರದಲ್ಲಿ ಶುಕ್ರವಾರದವರೆಗೆ ನಿಷೇಧಾಜ್ಞೆ
ಪಾಲಿಕೆಯ ಎಲ್ಲಾ 8 ವಲಯಗಳಲ್ಲಿಯೂ ಮುಖ್ಯ ಇಂಜಿನಿಯರ್‌ಗಳ ನೇತೃತ್ವದ ತಂಡವು ಅನಧಿಕೃತವಾಗಿ ಅಳವಡಿಸಿರುವ ಬ್ಯಾನರ್ಸ್, ಫ್ಲೆಕ್ಸ್ , ಪೋಸ್ಟರ್ಸ್, ಬಂಟಿಂಗ್ಸ್‌ಗಳ ತೆರವು ಕಾರ್ಯಾಚರಣೆ ತೀವ್ರಗತಿಯಲ್ಲಿ ನಡೆಯುತ್ತಿದೆ. ನಗರದಲ್ಲಿ ಇನ್ನು ಮುಂದೆ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್‌ಗಳನ್ನು ಅಳವಡಿಸುವುದು ಕಂಡುಬಂದಲ್ಲಿ, ಕೂಡಲೇ ತಪ್ಪಿತಸ್ಥರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಒಂದು ಟ್ವೀಟ್ ಎಡವಟ್ – ಶೇಷಾದ್ರಿಪುರಂ ಪೊಲೀಸರ ವಶದಲ್ಲಿ ಚೇತನ್
ಚಿಕ್ಕಮಗಳೂರು: ಸ್ಯಾಂಡಲ್‍ವುಡ್ ನಟ ದಿ. ಪುನೀತ್ ರಾಜ್ ಕುಮಾರ್ ಅವರ ಫೋಟೋ(ಫ್ಲೆಕ್ಸ್) ಹರಿದವನನ್ನು ಹಿಗ್ಗಾಮುಗ್ಗ ಥಳಿಸಿದ ಘಟನೆ ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯಲ್ಲಿ ನಡೆದಿದೆ.
ಪುನೀತ್ ಫ್ಲೆಕ್ಸ್ ಹರಿಯುತ್ತಿರುವ ವೀಡಿಯೋ ಸಿಸಿ ಟಿವಿಯಲ್ಲಿ ಲಭ್ಯವಾಗಿದೆ. ಪುನೀತ್ ಫ್ಲೆಕ್ಸ್ ಹರಿಯುತ್ತಿರುವುದನ್ನು ಗಮನಿಸಿದ ಸ್ಥಳೀಯ ಯುವಕರ ಗುಂಪು, ಯುವಕನನ್ನು ಹಿಗ್ಗಾಮುಗ್ಗ ಥಳಿಸಿದೆ. ಅಲ್ಲದೆ ಹರಿದ ಅದೇ ಫ್ಲೆಕ್ಸನ್ನು ಯುವಕನ ಮೇಲೆ ಹೊದ್ದು ಠಾಣೆಗೆ ಕರೆತಂದಿದ್ದಾರೆ. ರಸ್ತೆಯುದ್ದಕ್ಕೂ ಯುವಕನಿಗೆ ಹೊಡೆದುಕೊಂಡೇ ಯುವಕರ ಗುಂಪು ಚಿಕ್ಕಮಗಳೂರು ನಗರ ಠಾಣೆಗೆ ಕರೆತಂದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಭಾರೀ ಮಳೆ, ಪ್ರವಾಹದಿಂದ ಹಾನಿಗೊಳಗಾದ ಮನೆಗಳಿಗೆ ತಕ್ಷಣವೇ ಪರಿಹಾರ: ಆರ್.ಅಶೋಕ್
ಅಕ್ಟೋಬರ್ 29ರ ಶುಕ್ರವಾರ ಬೆಳಗ್ಗೆ ಮನೆಯಲ್ಲಿ ವರ್ಕೌಟ್ ಮಾಡಿದ ಸಂದರ್ಭದಲ್ಲಿ ಅಪ್ಪುಗೆ ಆಯಾಸ ಕಾಣಿಸಿಕೊಂಡಿತು. ಹಾಗೆಯೇ ಸ್ಟೀಮ್ ಬಾತ್ ಮಾಡಿಕೊಂಡು ಪತ್ನಿ ಜೊತೆ ಸ್ಥಳೀಯ ರಮಣಶ್ರೀ ಆಸ್ಪತ್ರೆಗೆ ತೆರಳಿದ್ದಾರೆ. ಅಲ್ಲಿ ಇಸಿಜಿ ಮಾಡಿಸಿಕೊಂಡು ಇನ್ನೇನು ಹೊರಡುವಷ್ಟರಲ್ಲಿ ಅಲ್ಲಿಯೇ ಕುಸಿದುಬಿದ್ದಿದ್ದರು. ಕೂಡಲೇ ಅವರನ್ನು ಕಾರಿನಲ್ಲಿ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತಾದರೂ, ಅದು ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ ಕಾಂಗ್ರೆಸ್ ಎಲ್ಲಿದೆ?: ಈಶ್ವರಪ್ಪ ಪ್ರಶ್ನೆ
ತುಮಕೂರು: ಕಾಂಗ್ರೆಸ್ ಶಾಸಕ ಜಿ.ಪರಮೇಶ್ವರ್ ಅವರ ಬರ್ತ್ ಡೇ ಫ್ಲೆಕ್ಸ್ ತೆರವುಗೊಳಿಸಿ ಜೆಡಿಎಸ್ ಶಾಸಕರ ಹುಟ್ಟುಹಬ್ಬ ಫ್ಲೆಕ್ಸ್ ಗೆ ಅನುವು ಮಾಡಿಕೊಟ್ಟ ವಿಚಾರವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಜಿಲ್ಲೆಯ ಕೊರಟಗೆರೆ ಪಟ್ಟಣ ಪಂಚಾಯತ್ ಬಳಿ ಮಾತಿನ ಚಕಮಕಿ ನಡೆದಿದೆ.
ಆಗಸ್ಟ್ 6 ರಂದು ಜಿ.ಪರಮೇಶ್ವರ್ ಹುಟ್ಟುಹಬ್ಬ ನಿಮಿತ್ತ ಕೊರಟಗೆರೆ ಪಟ್ಟಣದಲ್ಲಿ ಹಾಗೂ ಹಳ್ಳಿಗಳಲ್ಲಿ ಪರಮೇಶ್ವರ್ ಫ್ಲೆಕ್ಸ್‍ಗಳನ್ನು ಅಭಿಮಾನಿಗಳು ಕಟ್ಟಿದ್ದರು. ಈ ಫ್ಲೆಕ್ಸ್ ಗಳನ್ನು ಕೊರಟಗೆರೆ ಪಟ್ಟಣ ಪಂಚಾಯತ್ ಸಿಬ್ಬಂದಿ ತೆರುವುಗೊಳಿಸುತ್ತಿದ್ದರು. ಇದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಫ್ಲೆಕ್ಸ್ ತೆರವುಗೊಳಿಸದಂತೆ ಅಡ್ಡಿಪಡಿಸಿದ್ದರು. ಈ ನಡುವೆ ಜೆಡಿಎಸ್ ನಿಂದಲೂ ಮಾಜಿ ಶಾಸಕ ಸುಧಾಕರ್ ಲಾಲ್ ರ ಹುಟ್ಟುಹಬ್ಬಕ್ಕೆ ಫ್ಲೆಕ್ಸ್ ಹಾಕಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಇದನ್ನೂ ಓದಿ: ಸಂವಿಧಾನದತ್ತ ಸಂಸದ ಸ್ಥಾನಕ್ಕೆ ಬೆಲೆ ಕೊಡದ ಶ್ರೀನಿವಾಸ್‍ರದ್ದು ವಿಕೃತ ಮನಸ್ಥಿತಿ: ಬಿಜೆಪಿ ಟೀಕೆ
ಪರಮೇಶ್ವರ್ ಅವರ ಫ್ಲೆಕ್ಸ್ ಇರುವುದರಿಂದ ಸುಧಾಕರ್ ಅವರ ಫ್ಲೆಕ್ಸ್ ಹಾಕಲು ಜಾಗ ಇರಲಿಲ್ಲ. ಹಾಗಾಗಿ ಪರಮೇಶ್ವರ್ ಅವರ ಫ್ಲೆಕ್ಸ್ ತೆರವುಗೊಳಿಸಿದ್ದರು ಎನ್ನಲಾಗಿದೆ. ಹೀಗಾಗಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಪರಸ್ಪರ ವಾಗ್ವಾದ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು ಫ್ಲೆಕ್ಸ್ ತೆರವುಗೊಳಿಸದಂತೆ ಪಟ್ಟು ಹಿಡಿದರೆ, ಜೆಡಿಎಸ್ ಕಾರ್ಯಕರ್ತರು ಫ್ಲೆಕ್ಸ್ ತೆರುವುಗೊಳಿಸಲು ಒತ್ತಾಯಿಸಿದ್ದರು. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಇದನ್ನೂ ಓದಿ: ಮಿತ್ರಮಂಡಳಿಯಲ್ಲಿ ಬಿರುಕು: ಎಸ್‍ಟಿಎಸ್ ವಿರುದ್ಧ ಹೆಚ್. ವಿಶ್ವನಾಥ್ ಬಹಿರಂಗ ಅಸಮಾಧಾನ