Tag: ಫ್ಲೈಓವರ್

  • Bengaluru | ಒನ್ ವೇಯಲ್ಲಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಕಾರು – ಫ್ಲೈಓವರ್ ಮೇಲಿಂದ ಬಿದ್ದು ಮಹಿಳೆ ಸಾವು

    Bengaluru | ಒನ್ ವೇಯಲ್ಲಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಕಾರು – ಫ್ಲೈಓವರ್ ಮೇಲಿಂದ ಬಿದ್ದು ಮಹಿಳೆ ಸಾವು

    ಬೆಂಗಳೂರು: ಹಿಟ್ ಅಂಡ್ ರನ್‌ಗೆ (Hit And Run) ಫ್ಲೈಓವರ್ (Flyover) ಮೇಲಿಂದ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ (Devanahalli) ಸಮೀಪದ ಬಚ್ಚಳ್ಳಿ ಗೇಟ್ ಫ್ಲೈಓವರ್ ಮೇಲೆ ನಡೆದಿದೆ.

    ನೇತ್ರಾವತಿ (31) ಹಿಟ್ ಅಂಡ್ ರನ್‌ಗೆ ಬಲಿಯಾದ ಮಹಿಳೆ. ನೇತ್ರಾವತಿ ಹಾಗೂ ಪತಿ ಬೈಕಿನಲ್ಲಿ ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಕಡೆಗೆ ಹೋಗುತ್ತಿದ್ದರು. ಈ ವೇಳೆ ಒನ್ ವೇನಲ್ಲಿ ಬಂದ ಕಾರು ಬೈಕ್‌ಗೆ ಡಿಕ್ಕಿಯಾಗಿದೆ. ಕಾರು ಗುದ್ದಿದ ರಭಸಕ್ಕೆ ಬೈಕ್‌ನಲ್ಲಿದ್ದ ನೇತ್ರಾವತಿ ಫ್ಲೈಓವರ್ ಕೆಳಗೆ ಬಿದ್ದಿದ್ದಾರೆ. ಫ್ಲೈಓವರ್ ಮೇಲಿಂದ ಬಿದ್ದಿದ್ದರಿಂದ ತಲೆಗೆ ಬಲವಾದ ಪೆಟ್ಟು ಬಿದ್ದು ನೇತ್ರಾವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಬೈಕ್‌ನ ಎಡಭಾಗಕ್ಕೆ ಬಿದ್ದು ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಮಂಜುನಾಥಸ್ವಾಮಿಗೆ ಬೆದರಿಕೆ – ತುಮಕೂರಿನಲ್ಲಿ ಯೂಟ್ಯೂಬರ್‌ ಅರೆಸ್ಟ್‌

    ಅಪಘಾತ ಮಾಡಿ ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡ ದೇವನಹಳ್ಳಿ ಸಂಚಾರಿ ಪೊಲೀಸರು ಕಾರು ಚಾಲಕನಿಗಾಗಿ ಶೋಧ ನಡೆಸುತ್ತಿದ್ದಾರೆ. ಘಟನೆ ಸಂಬಂಧ ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸೆ.3-4ಕ್ಕೆ ಜಿಎಸ್‌ಟಿ ಕೌನ್ಸಿಲ್ ಸಭೆ; ಮೋದಿಯ ದೀಪಾವಳಿ ಗಿಫ್ಟ್ ಘೋಷಣೆಯ ಬಗ್ಗೆ ಸಭೆಯಲ್ಲಿ ಅಂತಿಮ ನಿರ್ಧಾರ

  • Chitradurga | ಕೆಆರ್ ಹಳ್ಳಿ ಗೇಟ್ ಬಳಿ ಟ್ರಾಫಿಕ್ ಜಾಮ್ – 5 ಕಿ.ಮೀ ದೂರದವರೆಗೂ ನಿಂತ ವಾಹನಗಳು

    Chitradurga | ಕೆಆರ್ ಹಳ್ಳಿ ಗೇಟ್ ಬಳಿ ಟ್ರಾಫಿಕ್ ಜಾಮ್ – 5 ಕಿ.ಮೀ ದೂರದವರೆಗೂ ನಿಂತ ವಾಹನಗಳು

    – ಬೆಂಗಳೂರಿಗೆ ತೆರಳುವವರು ಮಾರ್ಗ ಬದಲಾಯಿಸಿ

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು (Hiriyur) ತಾಲೂಕಿನ ಕೆಆರ್ ಹಳ್ಳಿ ಗೇಟ್ (KR Halli Gate) ಬಳಿ ಟ್ರಾಫಿಕ್ ಜಾಮ್ (Traffic Jam) ಉಂಟಾದ ಪರಿಣಾಮ ಸುಮಾರು 5 ಕಿಲೋ ಮೀಟರ್‌ವರೆಗೂ ವಾಹನಗಳು ನಿಂತಲ್ಲೇ ನಿಂತಿದೆ.

    ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಆದಿವಾಲದಿಂದ ಗೊರ್ಲಡಕು ಗೇಟ್ ಮುಂದೆ ಜವನಗೊಂಡನಹಳ್ಳಿಯಿಂದ ಶಿರಾ ತಲುಪುವವರೆಗೆ ಜಾಮ್ ಉಂಟಾಗಿದೆ. ಟ್ರಾಫಿಕ್ ಹಿನ್ನೆಲೆ ಬೆಂಗಳೂರಿಗೆ ತೆರಳುವವರು ಮಾರ್ಗ ಬದಲಿಸುವುದು ಉತ್ತಮ. ಇದನ್ನೂ ಓದಿ: ಆ.15 ರಿಂದ ಸಿಗುತ್ತೆ ಫಾಸ್ಟ್ಯಾಗ್‌ ವಾರ್ಷಿಕ ಪಾಸ್‌

    ಕೆಆರ್ ಹಳ್ಳಿ ಬಳಿ ಫ್ಲೈಓವರ್ ನಿರ್ಮಾಣ ಹಿನ್ನೆಲೆ ವಾಹನಗಳು ಸರ್ವಿಸ್ ರಸ್ತೆಯಲ್ಲಿ ಚಲಿಸಿತ್ತಿದೆ. ಕಿರಿದಾದ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡು ಟ್ರಾಫಿಕ್ ಉಂಟಾಗಿದೆ. ಟ್ರಾಫಿಕ್‌ನಲ್ಲಿ ಸಿಲುಕಿದ ವಾಹನ ಸವಾರರು ಕಂಗಾಲಾಗಿದ್ದಾರೆ. ಭಾನುವಾರ ರಾತ್ರಿ ಕೂಡ ಇದೇ ಸಮಸ್ಯೆ ತಲೆದೋರಿತ್ತು. ಇದನ್ನೂ ಓದಿ: Belagavi | 500 ರೂ.ಗಾಗಿ ತಾಯಿ ಎದುರೇ ಸ್ನೇಹಿತನ ಕೊಲೆ

  • ಆವತ್ತು ಸೈಕಲ್; ಇವತ್ತು ಸ್ಕೂಟರ್ – ಹೊಸ ಫ್ಲೈಓವರ್ ಮೇಲೆ ಡಿಕೆಶಿ ಸ್ಕೂಟರ್ ಸವಾರಿ

    ಆವತ್ತು ಸೈಕಲ್; ಇವತ್ತು ಸ್ಕೂಟರ್ – ಹೊಸ ಫ್ಲೈಓವರ್ ಮೇಲೆ ಡಿಕೆಶಿ ಸ್ಕೂಟರ್ ಸವಾರಿ

    ಬೆಂಗಳೂರು: ಆವತ್ತು ಸೈಕಲ್ಲು, ಇವತ್ತು ಸ್ಕೂಟರು. ಡಿಸಿಎಂ ಡಿಕೆಶಿ (DK Shivakumar) ವಿಧಾನಸೌಧದಲ್ಲಿ ಸೈಕಲ್ ತುಳಿದು ಗಮನ ಸೆಳೆದಿದ್ದರು. ಇಂದು ಹೆಬ್ಬಾಳದ ಹೊಸ ಮೇಲ್ಸೇತುವೆ (Hebbal Flyover) ಮೇಲೆ ಸ್ಕೂಟರ್ ಓಡಿಸಿ ಗಮನ ಸೆಳೆದರು.

    ಇಂದು ಬೆಳಗ್ಗೆ ಹೆಬ್ಬಾಳ ಬಳಿ ಬಿಡಿಎ ವತಿಯಿಂದ ನಿರ್ಮಿಸುತ್ತಿರುವ ಹೊಸ ಮೇಲ್ಸೇತುವೆ ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದರು. ಬಳಿಕ ಹೊಸ ಫ್ಲೈಓವರ್ ಮೇಲೆಯೇ ಡಿಕೆಶಿ ಸ್ಕೂಟರ್ ರೈಡ್ ಮಾಡಿ ಖುಷಿ ಪಟ್ಟರು. ಡಿಕೆಶಿಯವರು ಈ ವೇಳೆ ಕಾರ್ಯಕರ್ತರೊಬ್ಬರ ಡಿಯೋ ಸ್ಕೂಟರ್ ಅನ್ನು ತಾವೇ ಓಡಿಸಿಕೊಂಡು ಹೊಸ ಫ್ಲೈಓವರ್ ಮೇಲೆ ಒಂದು ರೌಂಡ್ ಹೋಗಿ ಬಂದು ಎಲ್ಲರ ಗಮನ ಸೆಳೆದಿದ್ದಾರೆ. ಇದನ್ನೂ ಓದಿ: ಯೆಲ್ಲೋ ಲೈನ್ ಮೆಟ್ರೋ ಉದ್ಘಾಟನೆಗೆ ಮೋದಿ ಆಗಮನ ಖಚಿತ – ಬಿಜೆಪಿ ಕಾರ್ಯಕರ್ತರ ಸಮಾವೇಶ, ರೋಡ್ ಶೋಗೆ ಕೊಕ್

    ಇನ್ನು ಡಿಕೆಶಿ ಹಿಂದೆಯೇ ಶಾಸಕ ಎನ್‌ಎ ಹ್ಯಾರೀಸ್ ಕೂಡಾ ಸ್ಕೂಟರ್‌ನಲ್ಲಿ ರೌಂಡ್ ಹೊಡೆದರು. ಡಿಕೆಶಿ ಹೆಲ್ಮೆಟ್ ಹಾಕಿಕೊಂಡು ಗಾಡಿ ಓಡಿಸಿದ್ರೆ, ಹೆಲ್ಮೆಟ್ ಹಾಕದೇ ಹ್ಯಾರಿಸ್ ಗಾಡಿ ಓಡಿಸಿದರು. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ರಹಸ್ಯ: 11ನೇ ಪಾಯಿಂಟ್‌ನಲ್ಲಿ ಸಿಗಲಿಲ್ಲ ಕಳೇಬರ

  • ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸರಣಿ ಅಪಘಾತ – ಬೈಕ್ ಸವಾರನಿಗೆ ಗಾಯ

    ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸರಣಿ ಅಪಘಾತ – ಬೈಕ್ ಸವಾರನಿಗೆ ಗಾಯ

    ಬೆಂಗಳೂರು: ಎರಡು ಬಸ್, ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಸರಣಿ ಅಪಘಾತ (Serial Accident) ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ (Electronic City Flyover) ಮೇಲೆ ನಡೆದಿದೆ.

    ಅಪಘಾತದಲ್ಲಿ ಬಸ್ ಗಳು ಜಖಂಗೊಂಡಿದ್ದು, ಯಾವುದೇ ಪ್ರಾಣಹಾನಿಯಾಗಿಲ್ಲ. ಸ್ಥಳಕ್ಕೆ ಹೆಚ್‌ಎಸ್‌ಆರ್ ಲೇಔಟ್ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ವಾಹನಗಳನ್ನು ತೆರವುಗೊಳಿಸುತ್ತಿದ್ದಾರೆ. ಇದನ್ನೂ ಓದಿ: ಧಾರಾಕಾರ ಮಳೆಗೆ 101 ಬಾಗಿಲುಗಳುಳ್ಳ 160 ವರ್ಷಗಳ ಕಟ್ಟಡ ಕುಸಿತ

    ತಾತ್ಕಾಲಿಕವಾಗಿ ಎಲಿವೇಟೆಡ್ ಫ್ಲೈಓವರ್ ಬಂದ್ ಮಾಡಲಾಗಿದೆ. ಹೊಸೂರು ಕಡೆ ಹೋಗುವವರು ಫ್ಲೈಓವರ್ ಕೆಳಗಡೆ ಹೋಗಲು ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಉಡುಪಿ | ಭಾರೀ ಮಳೆಗೆ ರೈಲ್ವೇ ಸೇತುವೆ ಬಳಿಯೇ ಭೂಕುಸಿತ

  • ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ನಲ್ಲಿ ಸರಣಿ ಅಪಘಾತ – ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್

    ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ನಲ್ಲಿ ಸರಣಿ ಅಪಘಾತ – ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್

    ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ನಲ್ಲಿ (Electronic City Flyover) ಗುರುವಾರ ರಾತ್ರಿ ಸರಣಿ ಅಪಘಾತ ಸಂಭವಿಸಿದೆ. ಇದರ ಪರಿಣಾಮ ಫ್ಲೈಓವರ್ ಮೇಲೆ ಭಾರೀ ಟ್ರಾಫಿಕ್ ಜಾಮ್ (Traffic Jam) ಉಂಟಾಗಿದೆ.

    ಕಾರೊಂದು ಅತಿವೇಗವಾಗಿ ಬಂದ ಪರಿಣಾಮ ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಆ ಕಾರು ಇನ್ನೊಂದು ಫಾರ್ಚುನರ್ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಘಟನೆಯಲ್ಲಿ ಒಟ್ಟು ಮೂರು ಕಾರುಗಳು ಹಾಗೂ ಬೈಕ್ ಜಖಂ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಇದನ್ನೂ ಓದಿ: ಶುಕ್ರವಾರದಿಂದ ಭಾರತ-ಆಸೀಸ್‌ ನಡುವೆ ಹೈವೋಲ್ಟೇಜ್‌ ಟೆಸ್ಟ್‌ ಸರಣಿ – ಕ್ಯಾಪ್ಟನ್‌ ಬುಮ್ರಾ ಏನ್‌ ಹೇಳಿದ್ರು?

    ಸರಣಿ ಅಪಘಾತದಿಂದಾಗಿ ಫ್ಲೈಓವರ್ ಸುತ್ತಮುತ್ತ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಕಿಲೋಮೀಟರ್‌ಗಟ್ಟಲೆ ವಾಹನಗಳು ನಿಂತಲ್ಲೇ ನಿಂತಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಸ್ಥಳಕ್ಕೆ ಎಲೆಕ್ಟ್ರಾನ್ ಸಿಟಿ ಎಲಿವೇಟೆಡ್ ಫ್ಲೈವರ್ ಸಿಬ್ಬಂದಿ ಆಗಮಿಸಿದ್ದು, ಅಪಘಾತವಾಗಿದ್ದ ವಾಹನಗಳನ್ನು ತೆರವು ಮಾಡಲು ಹರಸಾಹಸಪಟ್ಟಿದ್ದಾರೆ.

    ಇನ್ನೂ ಅಪಘಾತವಾದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಪಾಕಿಸ್ತಾನದಲ್ಲಿ ವಾಹನಗಳ ಮೇಲೆ ಭಯೋತ್ಪಾದಕರ ದಾಳಿ – 50 ಜನ ಸಾವು

  • ಸರ್ವಿಸ್ ರಸ್ತೆಯಲ್ಲಿ ಗುಂಡಿ ಗಂಡಾಂತರ: ಹೆದ್ದಾರಿಯಲ್ಲಿ ಕುಸಿದ ಬೃಹತ್ ಸ್ಲಾಬ್‌ಗಳು

    ಸರ್ವಿಸ್ ರಸ್ತೆಯಲ್ಲಿ ಗುಂಡಿ ಗಂಡಾಂತರ: ಹೆದ್ದಾರಿಯಲ್ಲಿ ಕುಸಿದ ಬೃಹತ್ ಸ್ಲಾಬ್‌ಗಳು

    ನೆಲಮಂಗಲ: ಸಿಲಿಕಾನ್ ಸಿಟಿಯಲ್ಲಿ ವಾಹನ ಚಾಲಕರಿಗೆ ಯಾವಾಗಲೂ ಟ್ರಾಫಿಕ್ ಸಮಸ್ಯೆ, ಮಳೆಯ ಸಂದರ್ಭದಲ್ಲಿ ಗುಂಡಿಯ ಸಮಸ್ಯೆ. ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತಲೇ ಇರುತ್ತದೆ.

    ಕೆಲ ವರ್ಷಗಳ ಹಿಂದೆ ದಾಸರಹಳ್ಳಿಯ (Dasarahalli) ಎಂಟನೇ ಮೈಲಿ ಬಳಿ ಫ್ಲೈಓವರ್‌ ರಸ್ತೆಯ ಪಿಲ್ಲರ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ವಾಹನಗಳಿಗೆ ನಿಷೇಧ ಹೇರಲಾಯಿತು. ಇದರಿಂದಾಗಿ ಸಾಕಷ್ಟು ಸಮಸ್ಯೆಯಾಗಿ ಪ್ರತಿನಿತ್ಯ ಟ್ರಾಫಿಕ್ ಜಾಮ್‌ನಿಂದಾಗಿ ಸವಾರರು ಪರಿತಪ್ಪಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿ ಸುದ್ದಿಗೆ ಕಾರಣವಾಗಿತ್ತು. ಇತ್ತೀಚೆಗಷ್ಟೇ ನೆಲಮಂಗಲ (Nelamangala) ಹಾಗೂ ಗೊರಗುಂಟೆಪಾಳ್ಯ (Gorguntepalya) ನಡುವಿನ ರಾಷ್ಟ್ರೀಯ ಹೆದ್ದಾರಿಯು ಈ ಟ್ರಾಫಿಕ್ ಸಮಸ್ಯೆಗಳಿನ್ನು ತೆರವುಗೊಳಿಸಿ, ವಾಹನಗಳಿಗೆ ಸಂಚಾರಕ್ಕೆ ಅನುವು ಮಾಡಿಕೊಟ್ಟಿತ್ತು.ಇದನ್ನೂ ಓದಿ: ಪಶ್ಚಿಮ ಬಂಗಾಳದ ʼಅಪರಾಜಿತ ಬಿಲ್‌ʼ ಪೋಕ್ಸೊಗಿಂತ ಭಿನ್ನ ಹೇಗೆ?

    ಇಗೀಗ ಟೋಲ್ ಕಂಪನಿಯ ನಿರ್ಲಕ್ಷ್ಯದಿಂದ ಮತ್ತೊಂದು ಭಾರೀ ಅನಾಹುತಕ್ಕೆ ಕಾರಣವಾಗಿದೆ. ನೆಲಮಂಗಲದ ಕುಣಿಗಲ್ ಬೈಪಾಸ್, ಮಾಕಳಿ, ಮಾದನಾಯಕನಹಳ್ಳಿ, ಮಾದಾವಾರ ರಸ್ತೆಯ ಬಳಿ ಬೃಹತ್ ಗುಂಡಿಗಳಿಂದ ಸವಾರರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಹೆಚ್ಚಿನ ಪ್ರಮಾಣದಲ್ಲಿ ಮಳೆ ಬಂದ ಪರಿಣಾಮ ರಸ್ತೆಯ ಪಕ್ಕದ ಬೃಹತ್ ಸ್ಲಾಬ್‌ಗಳು ಕುಸಿದು ವಾಹನ ಸವಾರರ ಜೀವಕ್ಕೆ ಮೃತ್ಯು ಕೂಪವಾಗಿ ಪರಿಣಮಿಸಿವೆ.

    ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚಾರ ಮಾಡುವ ಎರಡು ರಾಷ್ಟ್ರೀಯ ಹೆದ್ದಾರಿಗಳು ಹಾಗೂ ರಾಜ್ಯದ ಸುಮಾರು 17 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಬೃಹತ್ ಗುಂಡಿಗಳ ಗಂಡಾಂತರದಿಂದ ಪರಿಸ್ಥಿತಿ ಹದಗೆಟ್ಟಿದೆ. ದ್ವಿಚಕ್ರ ವಾಹನ ಸವಾರರು ಸ್ವಲ್ಪ ಯಾಮಾರಿದರೂ ಜೀವಕ್ಕೆ ಸಂಚಕಾರ ತರಲಿದೆ.ಇದನ್ನೂ ಓದಿ: Breaking | ರೇಣುಕಾಸ್ವಾಮಿ ಕೊಲೆ ಕೇಸ್‌ – ದರ್ಶನ್‌ & ಗ್ಯಾಂಗ್‌ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

    ಪ್ರತಿನಿತ್ಯ ಲಕ್ಷಾಂತರ ರೂಪಾಯಿ ಟೋಲ್ ಹಣ ಸಂಗ್ರಹಿಸುವ ಟೋಲ್ ಕಂಪನಿ ನಿರ್ವಹಣೆ ಮಾಡಬೇಕಿದ್ದು, ಸವಾರರ ಜೀವದ ಜೊತೆಗೆ ಚಲ್ಲಾಟವಾಡುತ್ತಿದ್ದಾರೆ ಎಂದು ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ಸಮಸ್ಯೆಗಳ ಆಗರವಾಗಿರುವ ನೆಲಮಂಗಲ ಗೊರಗುಂಟೆಪಾಳ್ಯ ನಡುವಿನ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಒಂದಲ್ಲ ಒಂದು ಸಮಸ್ಯೆ ಸವಾರರ ಜೀವಕ್ಕೆ ಯಮಸ್ವರೂಪಿಯಾಗಿದೆ.

  • Bengaluru: ಫ್ಲೈಓವರ್ ಮೇಲಿಂದ ಜಿಗಿದು ಕರ್ನಾಟಕ ವಿದ್ಯುತ್ ಕಾರ್ಖಾನೆ ಗುತ್ತಿಗೆ ನೌಕರ ಆತ್ಮಹತ್ಯೆ!

    Bengaluru: ಫ್ಲೈಓವರ್ ಮೇಲಿಂದ ಜಿಗಿದು ಕರ್ನಾಟಕ ವಿದ್ಯುತ್ ಕಾರ್ಖಾನೆ ಗುತ್ತಿಗೆ ನೌಕರ ಆತ್ಮಹತ್ಯೆ!

    ಬೆಂಗಳೂರು: ಇಲ್ಲಿನ ನಾಯಂಡಹಳ್ಳಿ ಫ್ಲೈಓವರ್ ಮೇಲಿನಿಂದ ಜಿಗಿದು ಕರ್ನಾಟಕ ವಿದ್ಯುತ್ ಕಾರ್ಖಾನೆಯ (Karnataka Power Factory )ಗುತ್ತಿಗೆ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

    ನವೀನ್ ಕುಮಾರ್ (30) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ತನ್ನ ಬೈಕನ್ನ ಫ್ಲೈಓವರ್ (Nayandahalli Flyover) ಮೇಲೆ ಪಾರ್ಕಿಂಗ್ ಮಾಡಿ ಏಕಾಏಕಿ ಕೆಳಗೆ ಜಿಗಿದಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: I.N.D.I.A ಒಕ್ಕೂಟ ಅಧಿಕಾರಕ್ಕೆ ಬಂದ್ರೆ ಮೋದಿ ಜೈಲಿಗೆ – ಮಿಸಾ ಭಾರತಿ

    ಕಳೆದ 3-4 ತಿಂಗಳಿನಿಂದ ಕರ್ನಾಟಕ ವಿದ್ಯುತ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ನವೀನ್, ಕೆಲಸಕ್ಕೆ ಹೋಗುವುದಾಗಿ ಹೇಳಿ ಹೊರಟಿದ್ದಾನೆ. ಬಳಿಕ ಬೈಕ್ ಪಾರ್ಕ್ (Bike Parking) ಮಾಡಿ, ಫ್ಲೈಓವರ್‌ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಜೆಡಿಎಸ್‌ಗೆ ಬಿಗ್ ಶಾಕ್- ಕಾಂಗ್ರೆಸ್‌ನಿಂದ ಮಿಡ್‍ನೈಟ್ ಆಪರೇಷನ್

    2 ತಿಂಗಳ ಹಿಂದೆಯಷ್ಟೇ ಮದುವೆ:
    ಆತ್ಮಹತ್ಯೆ ಮಾಡಿಕೊಂಡ ನವೀನ್ 2 ತಿಂಗಳ ಹಿಂದೆ ಮದುವೆಯಾಗಿದ್ದ, ಕವಿಕಾ (ಕರ್ನಾಟಕ ವಿದ್ಯುತ್ ಕಾರ್ಖಾನೆ)ದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ. ಕೆಲಸದ ಮೇಲೆ ಹೋಗಿ ಬರ್ತೀನಿ ಅಂತಾ ಏಪ್ರಿಲ್ 11ರಂದು ಮನೆಯಿಂದ ಹೊರಟಿದ್ದ ನವೀನ್‌, ಇಂದು (ಏ.12) ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    ಆತ್ಮಹತ್ಯೆ ಪ್ರಕರಣದ ಕುರಿತು ಬ್ಯಾಟರಾಯನಪುರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: War 2: ಹೃತಿಕ್‌ ರೋಷನ್‌ ಜೊತೆಗಿನ ಸಿನಿಮಾಗಾಗಿ ಮುಂಬೈಗೆ ಬಂದಿಳಿದ ಜ್ಯೂ.ಎನ್‌ಟಿಆರ್

  • ವಾಹನ ಸವಾರರಿಗೆ ಗುಡ್‌ನ್ಯೂಸ್ – ಪೀಣ್ಯ ಫ್ಲೈಓವರ್‌ನಲ್ಲಿ ಹೆವಿ ವೆಹಿಕಲ್ ಸಂಚಾರಕ್ಕೆ ಗ್ರೀನ್ ಸಿಗ್ನಲ್

    ವಾಹನ ಸವಾರರಿಗೆ ಗುಡ್‌ನ್ಯೂಸ್ – ಪೀಣ್ಯ ಫ್ಲೈಓವರ್‌ನಲ್ಲಿ ಹೆವಿ ವೆಹಿಕಲ್ ಸಂಚಾರಕ್ಕೆ ಗ್ರೀನ್ ಸಿಗ್ನಲ್

    – ಫೆಬ್ರವರಿ ಮೊದಲ ವಾರದಲ್ಲಿ ವಾಹನ ಸಂಚಾರಕ್ಕೆ ಸಿಗ್ನಲ್ ಕೊಟ್ಟ ಐಐಎಸ್‌ಸಿ

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಿಂದ (Bengaluru) ರಾಜ್ಯದ 22 ಜಿಲ್ಲೆಗಳು ಸೇರಿದಂತೆ ಗೋವಾ, ಮಹಾರಾಷ್ಟ್ರಕ್ಕೆ ಸಂಪರ್ಕಿಸುವ ಪೀಣ್ಯ ಫ್ಲೈಓವರ್ (Peenya Flyover) ಮೇಲೆ ಸಂಚರಿಸುವ ವಾಹನ ಸವಾರರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಹೆವಿ ವಾಹನಗಳ (Heavy Vehicle) ಸಂಚಾರಕ್ಕೆ ಫ್ಲೈಓವರ್ ಫಿಟ್ ಆಗಿರುವ ಬಗ್ಗೆ ಐಐಎಸ್‌ಸಿ (IISC) ತಜ್ಞರ ವರದಿ ಎನ್‌ಹೆಚ್‌ಎಐ ಕೈ ಸೇರಿದೆ.

    ಬೆಂಗಳೂರಿನಿಂದ ರಾಜ್ಯದ ಶೇ.80ರಷ್ಟು ಜಿಲ್ಲೆಗಳಿಗೆ ಸಂಪರ್ಕಿಸುವ ಪೀಣ್ಯ ಫ್ಲೈಓವರ್‌ಗೆ ಹಿಡಿದಿದ್ದ ಗ್ರಹಣ ದೂರಾಗುವ ಸಂದರ್ಭ ಬಂದಿದೆ. ಇದೇ ಫೆಬ್ರವರಿ ಮೊದಲ ವಾರದಿಂದಲೇ ಹೆವಿ ವೆಹಿಕಲ್ ಓಡಾಟಕ್ಕೆ ಸಂಚಾರ ಮುಕ್ತವಾಗುವ ಸಾಧ್ಯತೆ ಇದೆ. ಫ್ಲೈಓವರ್ ಲೋಡ್ ಟೆಸ್ಟಿಂಗ್ ಬಳಿಕ ಫ್ಲೈಓವರ್ ಫಿಟ್ನೆಸ್ ಬಗ್ಗೆ ಪರೀಕ್ಷೆ ಮಾಡಿದ್ದ ಐಐಎಸ್‌ಸಿ ತಜ್ಞರ ತಂಡ ವರದಿ ಸಿದ್ಧಪಡಿಸಿ ಎನ್‌ಹೆಚ್‌ಎಐ ಅಧಿಕಾರಿಗಳಿಗೆ ರಿಪೋರ್ಟ್ ನೀಡಿದೆ. ಇದನ್ನೂ ಓದಿ: ಕೆ.ಎನ್.ರಾಜಣ್ಣ, ಶಾಮನೂರು ಶಿವಶಂಕರಪ್ಪಗೆ ಕೈ ಹೈಕಮಾಂಡ್ ವಾರ್ನಿಂಗ್

    2 ವರ್ಷದಿಂದ ಹೆವಿ ವಾಹನಗಳ ಸಂಚಾರಕ್ಕೆ ಹೇರಿದ್ದ ನಿರ್ಬಂಧ ಸದ್ಯ ಇದೇ ಫೆಬ್ರವರಿ ಮೊದಲ ವಾರದಲ್ಲಿ ತೆರವು ಮಾಡುವ ಸಾಧ್ಯತೆ ಇದೆ. ಫ್ಲೈಓವರ್ ಎರಡು ಪಿಲ್ಲರ್‌ಗಳಲ್ಲಿ ಕಾಣಿಸಿಕೊಂಡ ಸಮಸ್ಯೆಯಿಂದಾಗಿ ಹೆವಿ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಸಮಸ್ಯೆ ಪತ್ತೆಗೆ ಮುಂದಾಗಿದ್ದ ಐಐಎಸ್‌ಸಿ ತಜ್ಞರು ಫ್ಲೈಓವರ್ ಕೇಬಲ್‌ಗಳು ಹಾಳಾಗಿದ್ದ ಕಾರಣವನ್ನು ಪತ್ತೆ ಹಚ್ಚಿದ್ದಾರೆ. ಈ ಹಿಂದೆ ಪಿಲ್ಲರ್‌ಗಳಿಗೆ ಅಳವಡಿಕೆ ಮಾಡಿದ್ದ ಕೇಬಲ್‌ಗಳು ತುಕ್ಕು ಹಿಡಿದಿದ್ದೆ ದೋಷಕ್ಕೆ ಕಾರಣ ಎಂಬ ರಿಪೋರ್ಟ್ ನೀಡಿವೆ. ಇದನ್ನೂ ಓದಿ: ಕೆರೆಗೋಡು ಹನುಮ ಧ್ವಜ ಪ್ರಕರಣ – ಪಿಡಿಓ ಅಮಾನತು

    ಕೇಬಲ್‌ಗಳಿಗೆ ನೀರು ತಗುಲಿದ್ದ ಕಾರಣ ಸಂಪೂರ್ಣ ಕೇಬಲ್ ತುಕ್ಕು ಹಿಡಿದಿದ್ದ ಪರಿಣಾಮ ಪಿಲ್ಲರ್‌ಗಳಲ್ಲಿ ಅಳವಡಿಕೆ ಮಾಡಿದ್ದ ಕೇಬಲ್ ಹಾಳಾಗಿತ್ತು. ಸದ್ಯ ಈಗ ಆ ಎಲ್ಲವನ್ನು ತೆರವು ಮಾಡಿ ಈ ಹಿಂದೆ ಅಳವಡಿಕೆ ಮಾಡಿದ್ದ ಕೇಬಲ್‌ಗಳಿಗಿಂತ 4 ಪಟ್ಟು ಸದೃಢವಾದ ಕೇಬಲ್ ಅಳವಡಿಕೆ ಮಾಡುವುದರ ಜೊತೆಗೆ ತುಕ್ಕು ಹಿಡಿಯದಂತೆ ಗ್ರೀಸ್ ಇರುವ ಕೇಬಲ್ ಅನ್ನು ಅಳವಡಿಕೆ ಮಾಡಲಾಗಿದೆ. ಜೊತೆಗೆ ಮುಂದೆ ಈ ರೀತಿ ಸಮಸ್ಯೆಯಾದರೆ ವಾಹನ ಓಡಾಟ ನಿಲ್ಲಿಸದೇ ಹಾಗೇ ಸರಿ ಮಾಡಬಹುದಾದ ಕ್ಷಮತೆ ಕೂಡ ಕೇಬಲ್‌ಗೆ ಇದೆ ಎಂದು ಐಐಎಸ್‌ಸಿ ವರದಿ ನೀಡಿದೆ. ಇದನ್ನೂ ಓದಿ: ವಿಷ್ಣುವಿನ 11ನೇ ಅವತಾರವಾಗಲು ಮೋದಿ ಪ್ರಯತ್ನಿಸ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

    ಸದ್ಯ ಇದೇ ವಾರ ಐಐಎಸ್‌ಸಿ ತಜ್ಞರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಭೆ ಮಾಡಲಿದ್ದು, ಸಭೆ ಬಳಿಕ ಸಂಚಾರ ಮುಕ್ತ ಯಾವಾಗ ಎಂಬ ಅಧಿಕೃತ ಮಾಹಿತಿ ನೀಡುವ ಸಾಧ್ಯತೆ ಇದೆ. ಕಳೆದೆರಡು ವರ್ಷಗಳಿಂದ ಟ್ರಾಫಿಕ್‌ನಿಂದ ಪರದಾಡುತ್ತಿದ್ದ ಹೆವಿ ವಾಹನಗಳಿಗೆ ಸದ್ಯ ಗುಡ್‌ನ್ಯೂಸ್ ಸಿಕ್ಕಿದ್ದು, ಇನ್ಮುಂದೆ ಟ್ರಾಫಿಕ್ ಕಿರಿಕಿರಿ ಇಲ್ಲದೆ ಸಂಚಾರ ಮಾಡಬಹುದಾಗಿದೆ. ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆದ್ದರೆ ಕಾಂಗ್ರೆಸ್ ಸರ್ಕಾರ ತೆಗೆಯುವ ಗ್ಯಾರಂಟಿ: ಬೊಮ್ಮಾಯಿ

  • ಇಂದಿನಿಂದ 3 ದಿನ ಪೀಣ್ಯ ಫ್ಲೈಓವರ್ ಬಂದ್

    ಇಂದಿನಿಂದ 3 ದಿನ ಪೀಣ್ಯ ಫ್ಲೈಓವರ್ ಬಂದ್

    ಬೆಂಗಳೂರು: ಬರೋಬ್ಬರಿ 22 ಜಿಲ್ಲೆಗಳ ಸಂಚಾರ ರಹದಾರಿ ಪೀಣ್ಯ ಫ್ಲೈಓವರ್ (Peenya Flyover) ಇಂದಿನಿಂದ ಮತ್ತೆ ಮೂರು ದಿನಗಳ ಕಾಲ ಬಂದ್ ಆಗಲಿದೆ. ಲೋಡ್ ಟೆಸ್ಟಿಂಗ್‌ಗಾಗಿ (Load Testing) ಎನ್‌ಹೆಚ್‌ಎ (NHA) ಮನವಿ ಮೇರೆಗೆ ಸಂಚಾರಿ ಪೊಲೀಸರು ಇಂದಿನಿಂದ ಫ್ಲೈಓವರ್ ಕ್ಲೋಸ್ ಮಾಡಲಿದ್ದಾರೆ.

    ಸುಮಾರು ಮೂರು ವರ್ಷದಿಂದ ಪೀಣ್ಯ ಫ್ಲೈಓವರ್ ಭಾರಿ ವಾಹನಗಳಿಗೆ ಬಂದ್ ಆಗಿದೆ. 2021ರಲ್ಲಿ ಪೀಣ್ಯ ಫ್ಲೈಓವರ್‌ನಲ್ಲಿ ತಾಂತ್ರಿಕ ತೊಂದರೆ ಉಂಟಾಗಿ ಭಾರಿ ಪ್ರಮಾಣದ ವಾಹನಗಳ ಸಂಚಾರ ನಿಷೇಧ ಮಾಡಲಾಗಿತ್ತು. ಪೀಣ್ಯ ಫ್ಲೈಓವರ್‌ನ ಗುಣಮಟ್ಟ ಸರಿಯಿಲ್ಲ, ಕಳಪೆ ಕಾಮಾಗಾರಿ, ಇಡೀ ಫ್ಲೈಓವರ್ ಅನ್ನು ಕೆಡವಬೇಕು ಎಂಬ ಚರ್ಚೆ ಆರಂಭವಾಗಿತ್ತು. ಆದರೆ ಕೆಲ ದಿನಗಳ ನಂತರ ಸಣ್ಣಪುಟ್ಟ ಕಾಮಾಗಾರಿ ಮಾಡಿ ಕೆಲ ಕೇಬಲ್‌ಗಳನ್ನು ಅಳವಡಿಸಿ ಸಣ್ಣ ಪ್ರಮಾಣದ ವೆಹಿಕಲ್ ಓಡಾಟಕ್ಕೆ ಅವಕಾಶ ಮಾಡಲಾಗಿತ್ತು. ಫ್ಲೈಓವರ್ ಮೇಲೆ ಸಂಪೂರ್ಣವಾಗಿ ಹೆವಿ ವೆಹಿಕಲ್‌ಗಳ ಓಡಾಟ ನಿರ್ಬಂಧಿಸಲಾಗಿತ್ತು. ಇದೀಗ ಮತ್ತೆ ಮೂರು ದಿನಗಳ ಕಾಲ ಪೀಣ್ಯ ಫ್ಲೈಓವರ್ ಬಂದ್ ಮಾಡಲಾಗುತ್ತದೆ. ಇದನ್ನೂ ಓದಿ: ನನಗೆ ತುಂಬಾ ಖುಷಿಯಾಗಿದೆ: ಅಯೋಧ್ಯೆ ರಾಮಮಂದಿರಕ್ಕೆ ಮಗ ಕೆತ್ತಿರುವ ರಾಮಲಲ್ಲಾ ಮೂರ್ತಿ ಆಯ್ಕೆಯಾಗಿದ್ದಕ್ಕೆ ತಾಯಿ ಸಂತಸ

    ಇಂದು ರಾತ್ರಿ 11 ಗಂಟೆಯಿಂದ ಜನವರಿ 19ರ ಬೆಳಗ್ಗೆ 11 ಗಂಟೆವರೆಗೆ ಪೀಣ್ಯ ಫ್ಲೈಓವರ್ ಬಂದ್ ಮಾಡಲಾಗುತ್ತದೆ. ಎನ್‌ಹೆಚ್‌ಎಐ ಅಧಿಕಾರಿಗಳು ಕೇಬಲ್ ಅಳವಡಿಕೆ ಕಾರ್ಯ ಪೂರ್ಣಗೊಳಿಸಿದ್ದು, ಹೆವಿ ವೆಹಿಕಲ್‌ಗಳ ಓಡಾಟ ನಡೆಸಿ ಪರೀಕ್ಷೆ ನಡೆಸಲಿದ್ದಾರೆ. ಹೆವಿ ವೆಹಿಕಲ್‌ಗಳ ಓಡಾಟಕ್ಕೆ ತಂತ್ರಜ್ಞರು ಯೆಸ್ ಅಂದರೆ ಇನ್ಮುಂದೆ ಬಸ್ಸು, ಲಾರಿಗಳು ಫ್ಲೈಓವರ್ ಮೇಲೆಯೇ ಸಾಗಬಹುದು. ಹೀಗಾಗಿ ಎನ್‌ಹೆಚ್‌ಎಐ ಅಧಿಕಾರಿಗಳ ಮನವಿ ಮೇರೆಗೆ ಮೂರು ದಿನಗಳ ಕಾಲ ಸಂಚಾರಿ ಪೊಲೀಸರು ಫ್ಲೈಓವರ್ ಬಂದ್ ಮಾಡಲಿದ್ದಾರೆ. ಮೂರು ದಿನಗಳ ಕಾಲ ಎನ್‌ಹೆಚ್ 48ರಲ್ಲಿ ಟ್ರಾಫಿಕ್ ಸಮಸ್ಯೆ ಎದುರಾಗಲಿದ್ದು, ವಾಹನ ಸವಾರರು ಪರ್ಯಾಯ ರಸ್ತೆ ಬಳಸುವುದು ಒಳಿತು. ಇದನ್ನೂ ಓದಿ: ಕೆಎಸ್‌ಆರ್‌ಟಿಸಿ ಬಸ್‌ಗೆ ಫುಡ್‌ ಡೆಲಿವರಿ ಬಾಯ್‌ ಬಲಿ

  • ಡಿವೈಡರ್‌ಗೆ ಡಿಕ್ಕಿಯಾಗಿ ಟ್ಯಾಂಕರ್‌ ಪಲ್ಟಿ- ಫ್ಲೈಓವರ್‌ ಮೇಲೆ ಧಗಧಗಿಸಿದ ಬೆಂಕಿ

    ಡಿವೈಡರ್‌ಗೆ ಡಿಕ್ಕಿಯಾಗಿ ಟ್ಯಾಂಕರ್‌ ಪಲ್ಟಿ- ಫ್ಲೈಓವರ್‌ ಮೇಲೆ ಧಗಧಗಿಸಿದ ಬೆಂಕಿ

    ಚಂಡೀಗಢ: ಪಂಜಾಬ್‌ನ  ಲೂಧಿಯಾನದಲ್ಲಿ  (Punjab’s Ludhiana)  ಫ್ಲೈಓವರ್‌ ಮೇಲೆ ಬೆಂಕಿಯ ಕೆನ್ನಾಲಿಗೆ ಧಗಧಗಿಸುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ (Social Media) ಸಖತ್‌ ವೈರಲ್‌ ಆಗುತ್ತಿದೆ.

    ಲೂಧಿಯಾನದ ಖನ್ನಾ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಯಿಲ್‌ ತುಂಬಿ ಹೊರಟಿದ್ದ ಟ್ಯಾಂಕರ್‌ (Oil Tanker) ಫ್ಲೈಓವರ್‌ನ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಪರಿಣಾಮ ಬೆಂಕಿ ಹೊತ್ತಿ ಉರಿದಿದೆ.

    ಘಟನೆಯ ಹಿನ್ನೆಲೆಯಲ್ಲಿ ಕೆಲ ಕಾಲ ಆ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಇನ್ನು ಫ್ಲೈಓವರ್‌ನಲ್ಲಿ ಬೆಂಕಿಯ ಕೆನ್ನಾಲಿಗೆ ಆಕಾಶದೆತ್ತರಕ್ಕೆ ಹೊತ್ತಿ ಉರಿಯುತ್ತಿದ್ದರೆ,ಇದರ ಕೆಳಗೆ ವಾಹನಗಳು ಚಲಿಸುತ್ತಿದ್ದವು. ಸದ್ಯಕ್ಕೆ ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯಗಳ ಬಗ್ಗೆ ವರದಿಯಾಗಿಲ್ಲ. ಇದನ್ನೂ ಓದಿ: ಮಕ್ಕಳು ಹೂ ಕಿತ್ತಿದ್ದಕ್ಕೆ ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿದ ಮಾಲೀಕ

    ಘಟನೆಯ ಫೋಟೋಗಳು ಮತ್ತು ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗಿವೆ. ಘಟನೆಯ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಹರಸಾಹಸಪಟ್ಟಿದ್ದಾರೆ. ಈ ಮೂಲಕ ಭಾರೀ ಅನಾಹುತವನ್ನು ತಡೆಯಲು ಪ್ರಯತ್ನಿಸಿವೆ.