Tag: ಫ್ಲೈ ಓವರ್

  • ಟೆಕ್ಕಿಗಳೇ ಗಮನಿಸಿ, ಎಲೆಕ್ಟ್ರಾನಿಕ್‌ ಸಿಟಿ ಫ್ಲೈ ಓವರ್‌ನಲ್ಲಿ ರಾತ್ರಿ ಸಂಚಾರ ಬಂದ್‌!

    ಟೆಕ್ಕಿಗಳೇ ಗಮನಿಸಿ, ಎಲೆಕ್ಟ್ರಾನಿಕ್‌ ಸಿಟಿ ಫ್ಲೈ ಓವರ್‌ನಲ್ಲಿ ರಾತ್ರಿ ಸಂಚಾರ ಬಂದ್‌!

    ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಕಾಮಗಾರಿ ಹಿನ್ನೆಲೆಯಲ್ಲಿ ರಾತ್ರಿ ವೇಳೆ ಬೆಂಗಳೂರಿನ (Bengaluru) ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ನಲ್ಲಿ (Electronic City Fly Over) ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

    ಈ ಕುರಿತು ಬೆಂಗಳೂರು ನಗರ ಸಂಚಾರಿ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ, ಹೊಸೂರು ರಸ್ತೆ ಎಲಿವೇಟೆಡ್‌ ಫ್ಲೈಓವರ್‌ನಲ್ಲಿ ನಿರ್ವಹಣೆ ಕಾಮಗಾರಿ ನಡೆಯಲಿರುವುದರಿಂದ ರಾತ್ರಿಯಿಂದಲೇ ಅನ್ವಯವಾಗುವಂತೆ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ರಾತ್ರಿ ಎಲ್ಲಾ ರೀತಿಯ ವಾಹನಗಳ ಸಂಚಾರ ಬಂದ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ಬಸ್, ಮೆಟ್ರೋ ಬಳಿಕ ಹಾಲು ಆಟೋ ದರ ಏರಿಕೆಗೆ ಮುಹೂರ್ತ ಫಿಕ್ಸ್

    ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯವರೆಗೆ ಫ್ಲೈ ಓವರ್ ಮೇಲೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಮುಂದಿನ ಆದೇಶದವರೆಗೂ ಈ ನಿರ್ಬಂಧ ಜಾರಿಯಲ್ಲಿ ಇರಲಿದೆ.

     

  • ‘ಪಬ್ಲಿಕ್ ಟಿವಿ’ ವರದಿ ಇಂಪ್ಯಾಕ್ಟ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಸ್ಲಾಬ್ ಕುಸಿತ – ಟೋಲ್ ಸಿಬ್ಬಂದಿಯಿಂದ ದುರಸ್ತಿ

    ‘ಪಬ್ಲಿಕ್ ಟಿವಿ’ ವರದಿ ಇಂಪ್ಯಾಕ್ಟ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಸ್ಲಾಬ್ ಕುಸಿತ – ಟೋಲ್ ಸಿಬ್ಬಂದಿಯಿಂದ ದುರಸ್ತಿ

    ನೆಲಮಂಗಲ: ನೆಲಮಂಗಲ (Nelamangala) ಹಾಗೂ ಗೊರಗುಂಟೆಪಾಳ್ಯ (Gorguntepalya) ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಜೀವಕ್ಕೆ ಕುತ್ತು ಬರುವ ಹಾಗೇ ಗುಂಡಿಗಳ ಸಮಸ್ಯೆಯಿತ್ತು. ಇದಕ್ಕೆ ಸಂಬಂಧಿಸಿದಂತೆ ‘ಪಬ್ಲಿಕ್ ಟಿವಿ’ (PUBLiC TV) ವರದಿ ಮಾಡಿತ್ತು.ಇದನ್ನೂ ಓದಿ: ಬಾಲಿವುಡ್‌ನತ್ತ ನಟ- ‘ಜಬ್ ವಿ ಮೆಟ್’ ನಿರ್ದೇಶಕನ ಸಿನಿಮಾದಲ್ಲಿ ಫಹಾದ್ ಫಾಸಿಲ್

    ಪಬ್ಲಿಕ್ ಟಿವಿಯಲ್ಲಿ ವರದಿ ಬಿತ್ತರವಾದ ಹಿನ್ನೆಲೆ ಟೋಲ್ ನಿರ್ವಹಣೆಯ ಸಿಬ್ಬಂದಿ, ಕುಸಿದು ಬಿದ್ದ ಬೃಹತ್ ಸ್ಲಾಬ್‌ಗಳನ್ನು ದುರಸ್ತಿ ಮಾಡಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ನಗರದ ಕುಣಿಗಲ್ ಬೈಪಾಸ್ ಬಳಿ ಸ್ಲಾಬ್‌ಗಳು ಕುಸಿದಿದ್ದವು. ವರದಿ ಬಳಿಕ ಓಡೋಡಿ ಬಂದು ಟೋಲ್ ಸಿಬ್ಬಂದಿಗಳು ದುರಸ್ತಿ ಕಾರ್ಯ ಆರಂಭಿಸಿದ್ದಾರೆ.

    ವಾಹನ ಸವಾರರಿಗೆ ಯಮಸ್ವರೂಪಿ ಮೃತ್ಯು ಕೂಪವಾಗಿದ್ದ ಬೃಹತ್ ಗುಂಡಿ ಸ್ಲಾಬ್‌ಗಳನ್ನು ಅಳವಡಿಸಿದ್ದಾರೆ. ಕಂಡು ಕಾಣದಂತೆ ಇದ್ದ ಟೋಲ್ ನಿರ್ವಹಣೆ ಕಂಪನಿಯ ಸಿಬ್ಬಂದಿ ಬೆಂಗಳೂರು ಹಾಗೂ ತುಮಕೂರು ರಾಷ್ಟ್ರೀಯ ಹೆದ್ದಾರಿಯ (Bengaluru Tumkuru National Highway) ಗುಂಡಿಯನ್ನು ದುರಸ್ತಿ ಮಾಡಿದ್ದು, ಇನ್ನೂ ಸಾಕಷ್ಟು ದುರಸ್ತಿ ಕೆಲಸ ಮಾಡಬೇಕಿದೆ. ರಸ್ತೆಯಲ್ಲಿ ಗುಂಡಿ ಗಂಡಾಂತರ ಜನಾಕ್ರೋಶದ ವರದಿ ಪ್ರಸಾರ ಮಾಡಿದ್ದ ‘ಪಬ್ಲಿಕ್ ಟಿವಿ’ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಹರಿಯಾಣ ವಿಧಾನಸಭೆ ಚುನಾವಣೆ – ಆಪ್, ಕಾಂಗ್ರೆಸ್‌ ಮೈತ್ರಿ ಹಿಂದಿನ ಲೆಕ್ಕಾಚಾರ ಏನು?

  • ಯಶವಂತಪುರ ಫ್ಲೈ ಓವರ್ ಕೆಳಗೆ ಸಿಲುಕಿದ ಬೃಹತ್ ಟ್ರಕ್

    ಯಶವಂತಪುರ ಫ್ಲೈ ಓವರ್ ಕೆಳಗೆ ಸಿಲುಕಿದ ಬೃಹತ್ ಟ್ರಕ್

    ಬೆಂಗಳೂರು: ಯಶವಂತಪುರ ಫ್ಲೈ ಓವರ್ (Yeshwanthpur Flyover) ಕೆಳಗೆ ಬೃಹತ್‌ ಗಾತ್ರ ಟ್ರಕ್‌ (Truck) ಒಂದು ಸಿಲುಕಿಕೊಂಡಿದೆ.

    ಎತ್ತರ ಮಿತಿ ಅರಿಯದೇ ಚಲಾಯಿಸಿದ್ದರಿಂದ ಫ್ಲೈ ಓವರ್ ಕೆಳಭಾಗದಲ್ಲಿ ಟ್ರಕ್ ಸಿಕ್ಕಿ ಹಾಕಿಕೊಂಡಿದೆ. ಟ್ರಕ್ ಹೊರ ತೆಗೆಸಲು ಟ್ರಾಫಿಕ್‌ ಪೊಲೀಸರು ಈಗ ಹರಸಾಹಸ ಪಡುತ್ತಿದ್ದಾರೆ. ಸ್ಥಳಕ್ಕೆ ಕ್ರೇನ್ ಕರೆಸಿ ಟ್ರಕ್ ಹೊರಗೆ ತೆಗೆಯಲು ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ. ಇದನ್ನೂ ಓದಿ: ಚರಂಡಿ ನೀರಿಗೆ ಬಿದ್ದು 4 ವರ್ಷದ ಬಾಲಕ ಸಾವು

    ಟ್ರಕ್ ಚಾಲಕನ ಅಜಾಗರೂಕತೆ ಚಾಲನೆಯಿಂದ ವಾಹನ ಸವಾರರು ಕಿರಿಕಿರಿ ಅನುಭವಿಸುವಂತಾಗಿದೆ.

     

  • ಸ್ಯಾಂಕಿ ರಸ್ತೆ ವಿಸ್ತರಣೆಗೆ ಮುಂದಾದ ಬಿಬಿಎಂಪಿ

    ಸ್ಯಾಂಕಿ ರಸ್ತೆ ವಿಸ್ತರಣೆಗೆ ಮುಂದಾದ ಬಿಬಿಎಂಪಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸಾವು

    ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸಾವು

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Bengaluru) ನಡೆದ ಅಪಘಾತಕ್ಕೆ ದ್ವಿಚಕ್ರ ವಾಹನ ಸವಾರರೊಬ್ಬರು ಬಲಿಯಾಗಿದ್ದಾರೆ. ಬೈಕ್‍ನಲ್ಲಿ (Bike) ಸಂಚರಿಸುತ್ತಿದ್ದಾಗ ಫ್ಲೈಓವರ್‌ನ ತಡೆಗೊಡೆಗೆ ಗುದ್ದಿ ಫ್ಲೈಓವರ್ ಮೇಲಿಂದ ಕೆಳಕ್ಕೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯ (Electronics City) ನೀಲಾದ್ರಿ ಕ್ರಾಸ್ ಬಳಿ ನಡೆದಿದೆ.

    ಆಂಧ್ರ ಮೂಲದ ಕೌರಿ ನಾಗಾರ್ಜುನ (33) ಮೃತ ದುರ್ದೈವಿ. ಬೆಂಗಳೂರಿನಿಂದ ಹೊಸೂರು (Hosur) ಕಡೆ ನಾಗಾರ್ಜುನ ಪಲ್ಸರ್ ಬೈಕ್‍ನಲ್ಲಿ ಹೊರಟಿದ್ದರು. ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ಕ್ರಾಸ್ ಬಳಿ ಬರುತ್ತಿದ್ದಂತೆ ಫ್ಲೈಓವರ್ ಇಳಿಯಬೇಕಾಗಿತ್ತು. ಈ ವೇಳೆ ಏಕಾಏಕಿ ಬೈಕ್ ಕಂಟ್ರೋಲ್‍ಗೆ ಬಾರದೆ ಸ್ಕಿಡ್ ಆಗಿ ಫ್ಲೈಓವರ್‌ನ ತಡೆಗೊಡೆಗೆ ಗುದ್ದಿ ಮೇಲಿಂದ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಇದನ್ನೂ ಓದಿ: ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಪತಿ ಜಾನ್ ಶಾ ನಿಧನ

    ತಕ್ಷಣ ಸಾರ್ವಜನಿಕರು ಸ್ಥಳೀಯ ಖಾಸಗಿ ಆಸ್ಪತ್ರೆಗೆ (Hospital) ದಾಖಲಿಸಿದ್ದರು. ಆ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ನಾಗಾರ್ಜುನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಬಸವರಾಜ ಬೊಮ್ಮಾಯಿ ಅವರಿಗೆ ಗಂಡೆದೆ ಇದೆ – ಆರ್.ಅಶೋಕ್

    Live Tv
    [brid partner=56869869 player=32851 video=960834 autoplay=true]

  • ಸುಮ್ಮನಹಳ್ಳಿ ಬ್ರಿಡ್ಜ್‌ ಮತ್ತೆ ಕುಸಿತದ ಭೀತಿ – ನೆಲ ಕಾಣುವ ಮಟ್ಟಕ್ಕೆ ಕಿತ್ತು ಹೋದ ಕಾಂಕ್ರಿಟ್ ಸ್ಲ್ಯಾಬ್

    ಸುಮ್ಮನಹಳ್ಳಿ ಬ್ರಿಡ್ಜ್‌ ಮತ್ತೆ ಕುಸಿತದ ಭೀತಿ – ನೆಲ ಕಾಣುವ ಮಟ್ಟಕ್ಕೆ ಕಿತ್ತು ಹೋದ ಕಾಂಕ್ರಿಟ್ ಸ್ಲ್ಯಾಬ್

    ಬೆಂಗಳೂರು: ನಾಗರಬಾವಿಯಿಂದ ರಾಜಕುಮಾರ್ ಸಮಾಧಿಗೆ ಸಂಪರ್ಕ ಕಲ್ಪಿಸುವ ಸುಮ್ಮನಹಳ್ಳಿ ಬ್ರಿಡ್ಜ್ (Sumanahalli Bridge) ಮತ್ತೊಮ್ಮೆ ಕುಸಿತಗೊಂಡಿದ್ದು, ವಾಹನ ಸವಾರರ ಆತಂಕ ಹೆಚ್ಚಾಗಿದೆ.

    ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ (Bengaluru) ಸುಮ್ಮನಹಳ್ಳಿ ಬ್ರಿಡ್ಜ್‌ನ ಸಿಮೆಂಟ್ ಸ್ಲ್ಯಾಬ್‍ಗಳು ಕಿತ್ತು ಬಂದಿದ್ದು, ಫ್ಲೈ ಓವರ್ ಗುಂಡಿಯಿಂದ ನೆಲ ಕಾಣಿಸುತ್ತಿದೆ. ಸದ್ಯಕ್ಕೆ ಪೊಲೀಸರು (Police) ಭದ್ರತೆಗೆ ಬಂದಿದ್ದಾರೆ. ಇನ್ನೂ ಘಟನೆ ಹಿನ್ನೆಲೆಯಲ್ಲಿ ಕಿ.ಮೀಗಟ್ಟಲೇ ಟ್ರಾಫಿಕ್ ಉಂಟಾಗುತ್ತಿದ್ದು, ಸರ್ಕಾರದ ವಿರುದ್ಧ ವಾಹನ ಸವಾರರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಎಸ್‌ಎಸ್‌ಎಲ್‌ಸಿ-ಪಿಯು ಮಂಡಳಿ ವಿಲೀನಕ್ಕೆ ನಿರ್ಧಾರ – ಸಂಪುಟ ಸಭೆಯಲ್ಲಿ ಅನುಮೋದನೆ

    ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗುತ್ತಲೇ ಅಧಿಕಾರಿಗಳು ಗುಂಡಿ ಬಿದ್ದ ಜಾಗದಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಪೊಲೀಸರು ಫ್ಲೈ ಓವರ್‌ನ್ನು ಬಂದ್ ಮಾಡಿದ್ದು, ಬದಲಿ ಮಾರ್ಗದ ವ್ಯವಸ್ಥೆಯನ್ನು ಮಾಡಿದ್ದಾರೆ. ವಾಹನ ಸಂಚಾರಕ್ಕೆ ಬದಲಿ ಮಾರ್ಗವಾಗಿ ಬ್ರಿಡ್ಜ್ ಕೆಳ ಭಾಗದ ರಸ್ತೆಯಿಂದ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಇದನ್ನೂ ಓದಿ: ಇಡಿ ವಿಚಾರಣೆ ಎದುರಿಸಿದ್ದ ಡಿ.ಕೆ ಶಿವಕುಮಾರ್‌ಗೆ ಅನಾರೋಗ್ಯ

    2019ರಲ್ಲಿಯೂ ಸ್ಲ್ಯಾಬ್ ಕುಸಿದಿತ್ತು. ಆ ಸಮಯದಲ್ಲಿ ಸುಮ್ಮನಹಳ್ಳಿ ಬ್ರಿಡ್ಜ್‌ನ್ನು 6 ತಿಂಗಳು ಬಂದ್ ಮಾಡಲಾಗಿತ್ತು. ಸ್ಲ್ಯಾಬ್ ಬಿದ್ದ ಪಕ್ಕದ ರಸ್ತೆಯಲ್ಲೇ ಪ್ರಧಾನಿ ಮೋದಿ ಭೇಟಿ ನೀಡಿದ್ದಾಗ ಗುಣಮಟ್ಟದ ಡಾಂಬರಿಕರಣ ಮಾಡಲಾಗಿತ್ತು. ಸ್ಲ್ಯಾಬ್ ಬಿದ್ದ ರಸ್ತೆಗೆ ಡಾಂಬರಿಕರಣ ಮಾಡದೇ ನಿರ್ಲಕ್ಷ್ಯ ಮಾಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಹೊಟ್ಟೆ ಹರಿದುಕೊಂಡಿದ್ದ ಕೋತಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

    ಹೊಟ್ಟೆ ಹರಿದುಕೊಂಡಿದ್ದ ಕೋತಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

    ಧಾರವಾಡ: ಫ್ಲೈ ಓವರ್ ಮೇಲಿಂದ ಬಿದ್ದು ಹೊಟ್ಟೆ ಹರಿದುಕೊಂಡಿದ್ದ ಕೋತಿಗೆ ಧಾರವಾಡದಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.

    ಧಾರವಾಡ ಹೊರವಲಯದ ನವಲೂರು ರೈಲ್ವೆ ನಿಲ್ದಾಣದ ಬಳಿಯ ಫ್ಲೈ ಓವರ್ ಮೇಲಿಂದ ಬಿದ್ದಿದ್ದ ಕೋತಿಗೆ ಹೊಟ್ಟೆಗೆ ಬಲವಾದ ಪೆಟ್ಟಾಗಿತ್ತು. ಇದರಿಂದ ಕೋತಿಯ ಹೊಟ್ಟೆಯಿಂದ ಕರಳುಗಳು ಹೊರಗೆ ಬಂದು ತೀವ್ರ ರಕ್ತಸ್ರಾವವಾಗಿ, ಕೋತಿ ನಿತ್ರಾಣ ಸ್ಥಿತಿ ಗಂಭೀರವಾಗಿತ್ತು. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಂದ ವನ್ಯಜೀವಿ ಸಂರಕ್ಷಕ ಸೋಮಶೇಖರ್ ಚನ್ನಶೆಟ್ಟಿ ಹಾಗೂ ತಂಡದವರು ಆ ಕೋತಿಯನ್ನು ಹಿಡಿದುಕೊಂಡು ಪಶು ವೈದ್ಯ ಡಾ.ವಿನೀತ ಅವರ ಬಳಿ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಭೀಕರ ಅಪಘಾತ- 7 ಮಂದಿ ದುರ್ಮರಣ

    ಡಾ.ವಿನೀತ ಅವರು ಆ ಕೋತಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ 15 ಹೊಲಿಗೆಯನ್ನು ಹಾಕಿದ್ದಾರೆ. ಯಶಸ್ವಿ ಶಸ್ತ್ರ ಚಿಕಿತ್ಸೆ ನಂತರ ಆ ಕೋತಿಯನ್ನು ಅರಣ್ಯ ಇಲಾಖೆಯ ಕೊಠಡಿಯಲ್ಲಿ ಆರೈಕೆ ಮಾಡಲಾಗುತ್ತಿದೆ. ಸದ್ಯ ಕೋತಿ ನೀರು ಕುಡಿಯುತಿದ್ದು, ಇನ್ನು ಮೂರು ದಿನಗಳ ಕಾಲ ತೀವ್ರ ನಿಗಾ ವಹಿಸಲಾಗಿದೆ. ಇದನ್ನೂ ಓದಿ: ದೇವರಿಗಾಗಿ ದೇವರಿಂದ್ಲೇ ಹುಡುಕಾಟ- ಹುತ್ತದಲ್ಲಿ ಸಿಕ್ಕೇ ಬಿಡ್ತು 200 ವರ್ಷದ ಹಿಂದಿನ ವಿಗ್ರಹ

    Live Tv

  • ಸಿಲಿಕಾನ್ ಸಿಟಿ ಫ್ಲೈಓವರ್‌ನಲ್ಲಿ ಭೀಕರ ಅಪಘಾತ – ಸವಾರ ಸಾವು

    ಸಿಲಿಕಾನ್ ಸಿಟಿ ಫ್ಲೈಓವರ್‌ನಲ್ಲಿ ಭೀಕರ ಅಪಘಾತ – ಸವಾರ ಸಾವು

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಫ್ಲೈಓವರ್‌ನಲ್ಲಿ ಇಂದು ಮುಂಜಾನೆಯೇ ಬೈಕ್‌ ಸವಾರ ಮೃತಪಟ್ಟಿದ್ದಾನೆ.

    ಬೆಂಗಳೂರಿನ ಜಕ್ಕೂರು ಏರೊಡ್ರಮ್ ಬಳಿ ಘಟನೆ ನಡೆದಿದ್ದು, ಏರ್‌ಪೋರ್ಟ್ ಫ್ಲೈಓವರ್ ಮೇಲೆ ಬೈಕ್‍ನಲ್ಲಿ 45 ವರ್ಷದ ಸವಾರ ಮತ್ತು ಹಿಂಬದಿಯಲ್ಲಿ 12 ವರ್ಷದ ಬಾಲಕ ಕುಳಿತುಕೊಂಡಿದ್ದ. ಬೈಕ್ ಎಡಬದಿಯಲ್ಲಿ ಹೋಗುತ್ತಿದ್ದರೂ ಕಾರೊಂದು ರಭಸವಾಗಿ ಬಂದು ಗುದ್ದಿದೆ. ಪರಿಣಾಮ ವಾಹನ ಸವಾರ ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದು ಕೊನೆಯುಸಿರೆಳೆದಿದ್ದಾನೆ. ಬಾಲಕನಿಗೆ ಗಂಭೀರ ಗಾಯವಾಗಿದೆ.

    ಆಕ್ಸಿಡೆಂಟ್ ಆದ ಸ್ಥಳದಿಂದ 200 ಮೀಟರ್ ದೂರದಲ್ಲಿ ಬೈಕ್ ಬಿದ್ದಿದೆ. ವಿಷಯ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಅಪಘಾತಕ್ಕೆ ಒಳಗಾದವರ ಗುರುತು ಪತ್ತೆ ಮಾಡುತ್ತಿದ್ದಾರೆ. ಕೆ.ಆರ್.ಪುರಂ ಬಳಿ ಕಾರು ಚಾಲಕನನ್ನ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಕಾರೊಳಗೆ ಪೆಟ್ರೋಲ್ ಸುರಿದುಕೊಂಡು ಜೋಡಿ ಆತ್ಮಹತ್ಯೆ!

    ನಡೆದಿದ್ದೇನು?
    ಮೃತ ವ್ಯಕ್ತಿ ಗೋವಿಂದಪ್ಪ(44) ಎಂದು ಗುರುತಿಸಲಾಗಿದ್ದು, ಅವರು ಜಕ್ಕೂರು ಲೇಔಟ್ ನಿವಾಸಿಯಾಗಿದ್ದರು. ಗೋವಿಂದಪ್ಪ ಅವರು ಸಂಬಂಧಿಕರ ಮಗ ಸಂಜಯ್ ಜಕ್ಕೂರು ಏರೋಡ್ರಮ್ ತೋರಿಸಲು ಏರ್‌ಪೋರ್ಟ್ ಫ್ಲೈಓವರ್ ಬಳಿ ಬಂದಿದ್ದರು. ಈ ವೇಳೆ ಗೋವಿಂದಪ್ಪ ಫ್ಲೈಓವರ್ ಮೇಲೆ ಮೊಪೆಡ್ ಬೈಕ್ ನಿಲ್ಲಿಸಿ ಸಂಜಯ್‍ಗೆ ಏರೋಡ್ರಮ್ ತೋರಿಸುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಮೊಪೆಡ್‍ಗೆ ಡಿಕ್ಕಿ ಹೊಡೆದಿದೆ.

    ಡಿಕ್ಕಿ ಹೊಡೆದ ರಭಸಕ್ಕೆ ಗೋವಿಂದಪ್ಪ ಫ್ಲೈಓವರ್ ಮೇಲಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಸಂಜಯ್‍ಗೆ ಗಂಭೀರ ಗಾಯವಾಗಿದ್ದು, ಪ್ರಸ್ತುತ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಲಾಯಿಸುತ್ತಿದ್ದ ವರುಣ್‍ನನ್ನು ಪೊಲೀಸರು ಬಂಧಿಸಿದ್ದಾರೆ. ಕಾರಿನಲ್ಲಿ ಐವರು ಸ್ನೇಹಿತರ ಜೊತೆ ವರುಣ್ ಬರುತ್ತಿದ್ದರು. ಇವರು ಜೆಸಿ ನಗರದ ಮೆಡಿಕಲ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಹಿಮಾಚಲ ಉಪಸಭಾಧ್ಯಕ್ಷರಿಂದ ವಿದ್ಯಾರ್ಥಿಗೆ ಕಪಾಳ ಮೋಕ್ಷ ಆರೋಪ

  • ಲಾರಿಗೆ ಬೈಕ್ ಡಿಕ್ಕಿ – ತಂದೆ, ಮಗ ಸಾವು

    ಲಾರಿಗೆ ಬೈಕ್ ಡಿಕ್ಕಿ – ತಂದೆ, ಮಗ ಸಾವು

    ಬೆಂಗಳೂರು: ಲಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್‍ನಲ್ಲಿದ್ದ ತಂದೆ ಹಾಗೂ ಮಗ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯ ಫ್ಲೈ ಓವರ್ ಮೇಲೆ ನಡೆದಿದೆ.

    ರಾಷ್ಟ್ರೀಯ ಹೆದ್ದಾರಿ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದಾಗಿ ಬೈಕಿನಲ್ಲಿ ತೆರಳುತ್ತಿದ್ದ ತಂದೆ-ಮಗ ಸಾವನಪ್ಪಿದ್ದು, ಪತ್ನಿಗೆ ಗಂಭೀರ ಗಾಯವಾಗಿದೆ. ತಕ್ಷಣವೇ ತಾಯಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಶಿವಮೊಗ್ಗ ಮೂಲದ ಕುಟುಂಬ ಎನ್ನಲಾಗಿದ್ದು ಹೆಸರುಗಳು ಪತ್ತೆಯಾಗಿಲ್ಲ. ಇದನ್ನೂ ಓದಿ: ವೆಲ್ ಕಮ್ ಬ್ಯಾಕ್! ನಿಮ್ಮ ಕುಟುಂಬಗಳು ನಿಮಗಾಗಿ ಉಸಿರು ಬಿಗಿಹಿಡಿದು ಕಾಯುತ್ತಿವೆ: ಸ್ಮೃತಿ ಇರಾನಿ

    ಫ್ಲೈ ಓವರ್ ಮೇಲೆ ಅನಗತ್ಯವಾಗಿ ನಿಂತಿದ್ದ ಲಾರಿಯಿಂದಾಗಿ ಅಪಘಾತವಾಗಿದ್ದು, ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಈ ಅಪಘಾತಗಳಿಗೆ ತುಮಕೂರು, ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆಯ ಅಕ್ಕ ಪಕ್ಕ ಅವೈಜ್ಞಾನಿಕ ವಾಹನಗಳ ಪಾರ್ಕಿಂಗ್ ವ್ಯವಸ್ಥೆಯನ್ನ ಪೊಲೀಸರು ತಪ್ಪಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

  • ನೆಲಮಂಗಲ ಫ್ಲೈಓವರ್ ಬಗ್ಗೆ ಮಾಹಿತಿ ನೀಡಿ ಟ್ವೀಟ್ ಡಿಲೀಟ್ ಮಾಡಿದ ಸಿಎಂ

    ನೆಲಮಂಗಲ ಫ್ಲೈಓವರ್ ಬಗ್ಗೆ ಮಾಹಿತಿ ನೀಡಿ ಟ್ವೀಟ್ ಡಿಲೀಟ್ ಮಾಡಿದ ಸಿಎಂ

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೀಣ್ಯ ನೆಲಮಂಗಲ ಫ್ಲೈ ಓವರ್ ಮತ್ತೆ ಓಪನ್ ಮಾಡುವ ವಿಚಾರವಾಗಿ ಲಘು ವಾಹನಗಳಿಗೆ ಅವಕಾಶ ನೀಡುವುದಾಗಿ ಟ್ವೀಟ್ ಮಾಡಿ ಡಿಲೀಟ್ ಮಾಡಿದ್ದಾರೆ.

    ಟ್ವೀಟ್‍ನಲ್ಲಿ ಏನಿತ್ತು?: ನಾಳೆಯಿಂದ ಲಘು ವಾಹನ ಓಡಾಟಕ್ಕೆ ಫ್ಲೈ ಓವರ್‌ನಲ್ಲಿ ಅವಕಾಶ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬ್ರಿಡ್ಜ್ ತಜ್ಞರು ಅಭಿಪ್ರಾಯ ಪಡೆದುಕೊಂಡು ಓಪನ್ ಮಾಡಲು ನಿರ್ಧರಿಸಿದ್ದಾರೆಂದು ಟ್ವೀಟ್ ಮಾಡಿದ್ದರು. ಆದರೆ ನಿನ್ನೆ ರಾತ್ರಿ ಹಾಕಿದ್ದ ಈ ಟ್ವೀಟ್‍ನ್ನು ಈಗ ಡಿಲೀಟ್ ಮಾಡಿದ್ದಾರೆ.

    ಡಿಸೆಂಬರ್ ಕೊನೆಯ ವಾರದ ವೇಳೆ ರಾಷ್ಟ್ರೀಯ ಹೆದ್ದಾರಿ-4ರಲ್ಲಿನ ನೆಲಮಂಗಲ-ಗೊರಗುಂಟೆಪಾಳ್ಯ ಫ್ಲೈಓವರ್‌ನ 102-103ನೇ ಪಿಲ್ಲರ್ ನಡುವಿನ ಸ್ಲಾಬ್‍ಗಳಲ್ಲಿ ಸೆಗ್ಮೆಂಟ್ ಜಾಯಿಂಟ್ ಸಮಸ್ಯೆ ಕಂಡುಬಂದಿತ್ತು. ಅದನ್ನು ಸರಿಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಫ್ಲೈಓವರ್‍ನ ಸಂಚಾರವನ್ನು ನಿರ್ಬಂಧ ಮಾಡಿತ್ತು. ಇದನ್ನೂ ಓದಿ: ಪೀಣ್ಯ ಫ್ಲೈಓವರ್‌ ಧ್ವಂಸವಾಗುತ್ತಾ?- ಅನಾಹುತ ಸಂಭವಿಸಿದರೆ ಹೊಣೆ ಯಾರು ಎಂದ ಸಿಎಂ

    ಪ್ರಾರಂಭದಲ್ಲಿ ಒಂದೇ ವಾರಕ್ಕೆ ದುರಸ್ಥಿ ಕಾರ್ಯ ಮುಗಿಸುವುದಾಗಿ ಹೇಳಿದ್ದ ಅಧಿಕಾರಿಗಳು ತಿಂಗಳಾದರೂ ರಿಪೇರಿ ಕಾರ್ಯ ಮುಗಿಸಿರಲಿಲ್ಲ. ಆದರೆ ಸದ್ಯ ಈಗ ಸಂಪೂರ್ಣ ರಿಪೇರಿ ಕಾರ್ಯ ಮುಗಿದಿದ್ದು, ತಾಂತ್ರಿಕ ದೋಷ ಇದ್ದ ಪಿಲ್ಲರ್‌ಗಳಿಗೆ ಸಪೋರ್ಟಿವ್ ಲಿಂಕ್ ಅಳವಡಿಸಿದ್ದಾರೆ. ಈಗಾಗಲೇ ದೆಹಲಿಯ ಇಂಜಿನಿಯರ್‍ಗಳು ಬಂದು ಪರಿಶೀಲನೆ ನಡೆಸಿದ್ದಾರೆ. ಆದರೂ ಈವರೆಗೂ ಫ್ಲೈ ಓವರ್ ಓಪನ್ ಮಾಡಿಲ್ಲ. ಇದರಿಂದಾಗಿ ಸವಾರರು ನಿತ್ಯವೂ ಕಿರಿಕಿರಿ ಅನುಭವಿಸುತ್ತಿದ್ದಾರೆ.  ಇದನ್ನೂ ಓದಿ: ನನ್ನ ಮಗನಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದರೆ ಗೆಲ್ಲುತ್ತಿದ್ದ: ಹರೀಶ್ ರಾವತ್