Tag: ಬಂಗಾಳಕೊಲ್ಲಿ

  • ಆಂಧ್ರ, ಒಡಿಶಾಕ್ಕೆ ಅಪ್ಪಳಿಸಲಿದೆ `ಮೊಂಥಾ’ ಸೈಕ್ಲೋನ್ – ಕರ್ನಾಟಕ ಸೇರಿ ತಮಿಳುನಾಡಿಗೆ ಮಳೆಯಾರ್ಭಟ

    ಆಂಧ್ರ, ಒಡಿಶಾಕ್ಕೆ ಅಪ್ಪಳಿಸಲಿದೆ `ಮೊಂಥಾ’ ಸೈಕ್ಲೋನ್ – ಕರ್ನಾಟಕ ಸೇರಿ ತಮಿಳುನಾಡಿಗೆ ಮಳೆಯಾರ್ಭಟ

    ನವದೆಹಲಿ: ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಆಂಧ್ರಪ್ರದೇಶ ಹಾಗೂ ಒಡಿಶಾಕ್ಕೆ ಮೊಂಥಾ ಚಂಡಮಾರುತ ಅಪ್ಪಳಿಸಲಿದೆ. ಪರಿಣಾಮ ಕರ್ನಾಟಕ, ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

    ಮಂಗಳವಾರ (ಅ.28) ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿ ತೀರ ಪ್ರದೇಶಕ್ಕೆ ಮೊಂಥಾ ಚಂಡಮಾರುತ 110 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದ್ದು, ಇಡೀ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ 26 ಜಿಲ್ಲೆಗಳ ಪೈಕಿ 23 ಜಿಲ್ಲೆಗಳಿಗೆ ರೆಡ್ ಮತ್ತು ಆರೆಂಜ್ ಅಲರ್ಟ್ ನೀಡಲಾಗಿದೆ. ಧಾರಾಕಾರ ಮಳೆ, ಅತೀ ವೇಗದ ಗಾಳಿ ಮತ್ತು ಸಂಭವನೀಯ ಪ್ರವಾಹದ ಸಾಧ್ಯತೆ ಇದೆ ಎಂದು ಹವಾಮಾವ ಇಲಾಖೆ ತಿಳಿಸಿದೆ. ಇದನ್ನೂ ಓದಿ: Cyclone Montha| ಎರಡು ದಿನ ಬೆಂಗಳೂರು ಸೇರಿದಂತೆ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

    ಕಾಕಿನಾಡ ಬಳಿಯ ಮಚಲಿಪಟ್ನಂ ಮತ್ತು ಕಳಿಂಗಪಟ್ನಂ ನಡುವೆ ಭೂಕುಸಿತ ಉಂಟಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕಾಕಿನಾಡ, ಕೋನ ಸೀಮಾ, ಎಲುರು, ಪಶ್ಚಿಮ ಗೋದಾವರಿ, ಕೃಷ್ಣ, ಗುಂಟೂರು, ಬಾಪಟ್ಲಾ, ಪ್ರಕಾಶಂ ಮತ್ತು ಎಸ್‌ಪಿಎಸ್‌ಆರ್ ನೆಲ್ಲೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಮಳೆ ಮುನ್ಸೂಚನೆ ಹಿನ್ನೆಲೆ ಆಂಧ್ರಪ್ರದೇಶದ ಎಲ್ಲಾ ಶಾಲೆಗಳನ್ನು ಮುಚ್ಚುವಂತೆ ನಿರ್ದೇಶಿಸಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಸಮುದ್ರ ತೀರ ಪ್ರದೇಶಗಳಲ್ಲಿನ ಜನರನ್ನು ಸ್ಥಳಾಂತರ ಮಾಡಿದ್ದು, ಆಶ್ರಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

    ಮುಂದಿನ ಮೂರ್ನಾಲ್ಕು ದಿನ ಕರ್ನಾಟಕದಲ್ಲೂ ಮಳೆಯಬ್ಬರ:
    ಮೊಂಥಾ ಚಂಡಮಾರುತದಿಂದ ಮುಂದಿನ ಮೂರ್ನಾಲ್ಕು ದಿನ ಕರ್ನಾಟಕದಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದ್ದು, ಬೆಂಗಳೂರು ಸೇರಿ ರಾಜ್ಯಾದ್ಯಂತ ಅಲ್ಲಲ್ಲಿ ನಿರಂತರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

    ಒಡಿಶಾ, ತಮಿಳುನಾಡಿನಲ್ಲೂ ಹೈ ಅಲರ್ಟ್:
    ಮೊಂಥಾ ಚಂಡಮಾರುತ ಹಿನ್ನೆಲೆ ಒಡಿಶಾ, ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಭೂಕುಸಿತ ಸಂಭವಿಸುವ ಸಾಧ್ಯತೆಯಿರುವ ಕಾರಣ ಒಡಿಶಾ ಸರ್ಕಾರವು ಎಲ್ಲಾ ಶಾಲೆಗಳು, ಅಂಗನವಾಡಿ ಕೇಂದ್ರಗಳು ಮತ್ತು ಕಾಲೇಜುಗಳಿಗೆ ಅ.30ರವರೆಗೆ ರಜೆ ನೀಡಲಾಗುವುದು ಎಂದು ತಿಳಿಸಿದೆ. ಇನ್ನೂ ಸೋಮವಾರ (ಅ.27) ಹಾಗೂ ಮಂಗಳವಾರ (ಅ.28) ತಮಿಳುನಾಡು, ಪುದುಚೇರಿಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.ಇದನ್ನೂ ಓದಿ: ಪುನಾರಚನೆಗೆ ಅವಕಾಶ ನೀಡಿದ್ರೆ ಸಿಎಂ ಸ್ಥಾನ ಅಬಾಧಿತ, ಇಲ್ಲದೇ ಇದ್ರೆ ರಾಜಕೀಯ ಚಟುವಟಿಕೆ: ರಾಜಣ್ಣ

  • ಹಿಂದೂ ಮಹಾಸಾಗರ, ಬಂಗಾಳಕೊಲ್ಲಿ ಸಮುದ್ರದಲ್ಲಿ 28 ಕಿ.ಮೀ ಈಜಿ ಹುಬ್ಬಳ್ಳಿ ಇನ್ಸ್ಪೆಕ್ಟರ್ ಸಾಧನೆ

    ಹಿಂದೂ ಮಹಾಸಾಗರ, ಬಂಗಾಳಕೊಲ್ಲಿ ಸಮುದ್ರದಲ್ಲಿ 28 ಕಿ.ಮೀ ಈಜಿ ಹುಬ್ಬಳ್ಳಿ ಇನ್ಸ್ಪೆಕ್ಟರ್ ಸಾಧನೆ

    ಹುಬ್ಬಳ್ಳಿ: ಹಿಂದೂ ಮಹಾಸಾಗರ (Indian Ocean) ಹಾಗೂ ಬಂಗಾಳಕೊಲ್ಲಿಯಲ್ಲಿ (Bay of Bengal) 28 ಕಿ.ಮೀ ಈಜಿ ಹುಬ್ಬಳ್ಳಿ ಇನ್ಸ್ಪೆಕ್ಟರ್ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಹುಬ್ಬಳ್ಳಿ (Hubballi) ಗ್ರಾಮೀಣ ಇನ್ಸ್ಪೆಕ್ಟರ್ ಮುರುಗೇಶ್ ಚೆನ್ನಣ್ಣ ಅವರು ಶ್ರೀಲಂಕಾದ ರಾಮಸೇತುಯಿಂದ ಭಾರತದ ಧನುಷ್ ಕೋಡಿವರೆಗೆ ಸ್ವಿಮ್ಮಿಂಗ್ ರಿಲೇ ಮಾಡಿದ್ದಾರೆ.

    ಭೀಕರ ಸಮುದ್ರದಲೆಗಳನ್ನು ಲೆಕ್ಕಿಸಿದೇ ಕೇವಲ 8 ಗಂಟೆ 30 ನಿಮಿಷದಲ್ಲಿ 28 ಕಿ.ಮೀ ಈಜಿದ ಇನ್ಸ್ಪೆಕ್ಟರ್ ಮುರುಗೇಶ್ ಚನ್ನಣ್ಣ ಮತ್ತು ಅವರ 8 ಜನರ ತಂಡ ಈ ಸಾಧನೆ ಮಾಡಿದೆ. ಉತ್ತರಪ್ರದೇಶ ಮತ್ತು ಹರಿಯಾಣದ ಇಬ್ಬರು ಐಎಎಸ್ ಅಧಿಕಾರಿಗಳು, ಪಶ್ಚಿಮ ಬಂಗಾಳ ಮತ್ತು ಹರಿಯಾಣದ ಅಂಗವಿಕಲ ಕ್ರೀಡಾಪಟುಗಳು, ಹುಬ್ಬಳ್ಳಿ ಕಿಮ್ಸ್‌ನ ಎಂಬಿಬಿಎಸ್ ವಿದ್ಯಾರ್ಥಿನಿ ಅಮನ ಶಾನ್‌ಭಾಗ್ ಈ ಸಾಧನೆ ಮಾಡಿದ್ದಾರೆ. ಫಿಟ್ ಇಂಡಿಯಾ ಮತ್ತು ಭಾರತ ಸ್ವಿಮ್ಮಿಂಗ್ ಫೆಡರೇಷನ್ ನೇತೃತ್ವದಲ್ಲಿ ಸ್ವಿಮ್ಮಿಂಗ್ ರಿಲೇ ನಡೆದಿತ್ತು. ಇದನ್ನೂ ಓದಿ: ಪ್ರಣಿತಾ ಮಗನ ನಾಮಕರಣದ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್ ತಾರೆಯರು

    ಇನ್ನೂ ಜೂನ್ ತಿಂಗಳಲ್ಲಿ ಈ ತಂಡವು ಅತ್ಯಂತ ಅಪಾಯಕಾರಿಯಾಗಿರುವ ಇಂಗ್ಲಿಷ್ ಕಾಲುವೆಯಲ್ಲಿ ಈಜಲು ಸಿದ್ಧವಾಗಿದೆ. ಇಂಗ್ಲೆಂಡ್ ಮತ್ತು ಫ್ರಾನ್ಸ್ ಮಧ್ಯದಲ್ಲಿರುವ 36 ಕಿ.ಮೀ ಇಂಗ್ಲಿಷ್ ಕಾಲುವೆಯಲ್ಲಿ ಈಜಿ ಮತ್ತೊಂದು ಮೈಲಿಗಲ್ಲು ಸಾಧಿಸಲು ಸಜ್ಜಾಗಿದೆ. ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿರುವ ಇನ್ಸ್ಪೆಕ್ಟರ್ ಮುರುಗೇಶ್ ಚೆನ್ನಣ್ಣ ಅವರ ಸಾಧನೆಯು ಎಲ್ಲರ ಮೆಚ್ಚುಗೆಗಳಿಸಿದೆ.

  • ಬಂಗಾಳಕೊಲ್ಲಿಯಲ್ಲಿ ಚುರುಕುಗೊಂಡ ಚಂಡಮಾರುತ – ಒಂದು ವಾರ ರಾಜ್ಯದಲ್ಲಿ ಗಾಳಿ ಸಹಿತ ಮಳೆ

    ಬಂಗಾಳಕೊಲ್ಲಿಯಲ್ಲಿ ಚುರುಕುಗೊಂಡ ಚಂಡಮಾರುತ – ಒಂದು ವಾರ ರಾಜ್ಯದಲ್ಲಿ ಗಾಳಿ ಸಹಿತ ಮಳೆ

    ಬೆಂಗಳೂರು: ಗುರುವಾರದಿಂದ ಒಂದು ವಾರಗಳ ಕಾಲ ರಾಜ್ಯದಲ್ಲಿ ಗಾಳಿ ಸಹಿತ ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.

    ಬಂಗಾಳಕೊಲ್ಲಿಯಲ್ಲಿ (Bay Of Bengal) ಚಂಡಮಾರುತಗಳು (Cyclone) ಚುರುಕುಗೊಂಡ ಹಿನ್ನೆಲೆ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ. ಕೆಲವು ಜಿಲ್ಲೆಗಳಲ್ಲಿ ಒಂದು ವಾರ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್ 03, 04 ಮತ್ತು 05ರಂದು ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದನ್ನೂ ಓದಿ: ಕನ್ನಡ, ಕನ್ನಡಿಗರಿಗಾಗಿ 2 ಕೋಟಿ ಈಡುಗಾಯಿ ಹೊಡೆಯಿರಿ: ವಾಟಾಳ್ ನಾಗರಾಜ್ ಕರೆ

    ಹಾಸನ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರಾವಾಡ, ಗದಗ, ಹಾವೇರಿ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಇಂದು ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇದನ್ನೂ ಓದಿ: ಚೆಕ್‌ಬೌನ್ಸ್ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಿರ್ಮಾಪಕ ಎಂ.ಎನ್ ಕುಮಾರ್ ಅರೆಸ್ಟ್

  • Cyclone Fengal | ಚೆನ್ನೈ ಏರ್‌ಪೋರ್ಟ್‌ನಿಂದ 13 ವಿಮಾನಗಳ ಯಾನ ರದ್ದು

    Cyclone Fengal | ಚೆನ್ನೈ ಏರ್‌ಪೋರ್ಟ್‌ನಿಂದ 13 ವಿಮಾನಗಳ ಯಾನ ರದ್ದು

    – ಅಬುದಾಬಿಯಿಂದ ಚೆನ್ನೈಗೆ ಹೊರಟಿದ್ದ ವಿಮಾನ ಬೆಂಗಳೂರಿಗೆ ಡೈವರ್ಟ್‌
    – ರೈಲು ಸೇವೆಯಲ್ಲೂ ವ್ಯತ್ಯಯ; ವಿಪತ್ತು ನಿರ್ವಹಣಾ ಪಡೆ ಸಿದ್ಧ

    ಚೆನ್ನೈ: ಫೆಂಗಲ್ ಚಂಡಮಾರುತ (Cyclone Fengal) ತೀವ್ರತೆ ಪಡೆದುಕೊಂಡಿದೆ. ಚೆನ್ನೈನಲ್ಲಿ ಭಾರಿ ಮಳೆಯಿಂದಾಗಿ (Heavy Rain In Chennai) ವಿಮಾನ ಮತ್ತು ರೈಲು ಸೇವೆಗಳಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ.

    ಮಳೆಯ ಅಬ್ಬರದಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ 10ಕ್ಕೂ ಹೆಚ್ಚು ಆಗಮನ ಮತ್ತು ನಿರ್ಗಮನ ರದ್ದುಗೊಳಿಸಲಾಗಿದೆ. ಇಂಡಿಯೋ ತನ್ನ ಎಲ್ಲಾ ಆಗಮನ ಮತ್ತು ನಿರ್ಗಮನ ವಿಮಾನ (flights) ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಇದರೊಂದಿಗೆ ಅಬುದಾಬಿಯಿಂದ ಚೆನ್ನೈಗೆ ತೆರಳಬೇಕಿದ್ದ ಇಂಡಿಗೋ ವಿಮಾನವನ್ನು (6E1412) ಪ್ರತಿಕೂಲ ಹವಾಮಾನದಿಂದಾಗಿ ಬೆಂಗಳೂರಿಗೆ ತಿರುಗಿಸಲಾಗಿದೆ.

    ಚಂಡಮಾರುತದಿಂದಾಗಿ ತಿರುವಳ್ಳೂರು, ಕಾಂಚೀಪುರಂ, ಕಲ್ಲಕುರಿಚಿ, ಮತ್ತು ತಮಿಳುನಾಡಿನ ಕಡಲೂರು ಜಿಲ್ಲೆಗಳು ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಾರೈಕಲ್ ಮತ್ತು ಮಹಾಬಲಿಪುರಂ ನಡುವೆ ಭೂಕುಸಿತ ಉಂಟುಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಇದನ್ನೂ ಓದಿ: Cyclone Fengal | ತಮಿಳುನಾಡಿಗೆ ಇಂದು ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ – ಭೂಕುಸಿತ ಸಾಧ್ಯತೆ

    ವಿಪತ್ತು ನಿರ್ವಹಣಾ ಪಡೆ ಸಿದ್ಧ
    ತಮಿಳುನಾಡು ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆಯು ಈಗಾಗಲೇ ಮುನ್ನೆಚ್ಚರಿಕಾ ಕ್ರಮದ ಭಾಗವಾಗಿ ರಾಜ್ಯಾದ್ಯಂತ 2,229 ಪರಿಹಾರ ಶಿಬಿರಗಳನ್ನು ಸ್ಥಾಪಿಸಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಆಶ್ರಯ ಅಗತ್ಯವಿರುವವರಿಗೆ ಸಂಪನ್ಮೂಲಗಳನ್ನು ಸಂಗ್ರಹಿಸಲಾಗಿದೆ. ಈವರೆಗೆ ತಿರುವಳ್ಳೂರು ಮತ್ತು ನಾಗಪಟ್ಟಿಣಂ ಜಿಲ್ಲೆಗಳಲ್ಲಿ 164 ಕುಟುಂಬಗಳ 471 ಜನರನ್ನು ಈಗಾಗಲೇ ಪರಿಹಾರ ಕೇಂದ್ರಗಳಲ್ಲಿ ಇರಿಸಲಾಗಿದೆ. ಸಂಭವನೀಯ ಪ್ರವಾಹದ ನಿರೀಕ್ಷೆಯಲ್ಲಿ ಸ್ಥಳೀಯ ಅಧಿಕಾರಿಗಳು ಮೋಟಾರ್ ಪಂಪ್‌ಗಳು, ಜನರೇಟರ್‌ಗಳು ಮತ್ತು ದೋಣಿಗಳು ಸೇರಿದಂತೆ ಅಗತ್ಯ ಸಾಧನಗಳನ್ನು ಸಿದ್ಧಪಡಿಸಲಾಗಿದೆ. ಇದರೊಂದಿಗೆ ಎನ್‌ಡಿಆರ್‌ಎಫ್‌ ಹಾಗೂ ವಿಪತ್ತು ನಿರ್ವಹಣಾ ಪಡೆಗಳನ್ನ ಚೆನ್ನೈ, ಕಡಲೂರು ಮತ್ತು ಮೈಲಾಡುತುರೈ ಮುಂತಾದ ಪೀಡಿತ ಪ್ರದೇಶಗಳಿಗೆ ನಿಯೋಜಿಸಿದ್ದಾರೆ. ಇದನ್ನೂ ಓದಿ: ವಾರಣಾಸಿ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಬಳಿ ಆಕಸ್ಮಿಕ ಬೆಂಕಿ – 200 ದ್ವಿಚಕ್ರ ವಾಹನಗಳು ಭಸ್ಮ

    ಐಟಿ ಕಂಪನಿಗಳಿಗೆ ವರ್ಕ್‌ ಫ್ರಮ್‌ ಹೋಮ್‌:
    ಈಗಾಗಲೇ ತಮಿಳುನಾಡಿನಲ್ಲಿ ಅಧಿಕಾರಿಗಳು ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಫೆಂಗಲ್ ಚಂಡಮಾರುತವು ಭಾರಿ ಮಳೆ ತರಲಿದ್ದು ಮತ್ತು ಗಂಟೆಗೆ 70 ರಿಂದ 90 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ರಾಜ್ಯ ಸರ್ಕಾರ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಸಾರ್ವಜನಿಕ ಸಾರಿಗೆ ಸೇವೆಗಳನ್ನು ಸ್ಥಗಿತಗೊಳಿಸಿದೆ. ಐಟಿ ಕಂಪನಿಗಳು ಮನೆಯಿಂದಲೇ ಕೆಲಸ ಮಾಡುವ ನಿಯಮ ಜಾರಿಗೊಳಿಸುವಂತೆ ಸೂಚಿಸಿದೆ.

    ಮಳೆ ಮುನ್ಸೂಚನೆ ಹೊಂದಿರುವ ಇತರ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರ ಸೂಚಿಸಿದೆ.

  • Cyclone Fengal | ತಮಿಳುನಾಡಿಗೆ ಇಂದು ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ – ಭೂಕುಸಿತ ಸಾಧ್ಯತೆ

    Cyclone Fengal | ತಮಿಳುನಾಡಿಗೆ ಇಂದು ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ – ಭೂಕುಸಿತ ಸಾಧ್ಯತೆ

    – ಶಾಲಾ, ಕಾಲೇಜುಗಳು ಬಂದ್‌
    – 2,229 ಪರಿಹಾರ ಕೇಂದ್ರಗಳ ಸ್ಥಾಪನೆ
    – ಐಟಿ ಉದ್ಯೋಗಿಗಳಿಗೆ ವರ್ಕ್‌ ಫ್ರಮ್‌ ಹೋಮ್‌

    ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಫೆಂಗಲ್‌ ಚಂಡಮಾರುತ (Cyclone Fengal) ತೀವ್ರತೆ ಪಡೆದಿದ್ದು, ಶನಿವಾರ (ಇಂದು) ಉತ್ತರ ತಮಿಳುನಾಡು ಹಾಗೂ ಪುದುಚೇರಿ ಕರಾವಳಿಗೆ ಅಪ್ಪಳಿಸಲಿದೆ. ಚಂಡಮಾರುತದಿಂದ ಈಗಾಗಲೇ ಗುಡುಗು ಸಹಿತ ಮಳೆ ಎದುರಿಸುತ್ತಿರುವ ತಮಿಳುನಾಡು (Tamil Nadu) ಹಾಗೂ ಆಂಧ್ರಪ್ರದೇಶದ ಹಲವು ಸ್ಥಳಗಳಲ್ಲಿ ಶನಿವಾರ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

    ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಕಲ್ಲಕುರಿಚಿ, ಮತ್ತು ತಮಿಳುನಾಡಿನ ಕಡಲೂರು ಜಿಲ್ಲೆಗಳು ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ. ಜೊತೆಗೆ ರಾಣಿಪೇಟ್, ತಿರುವಣ್ಣಾಮಲೈ, ವೆಲ್ಲೂರು, ಪೆರಂಬಲೂರು, ಅರಿಯಲೂರು, ತಂಜಾವೂರು, ತಿರುವರೂರು, ಮೈಲಾಡುತುರೈ, ನಾಗಪಟ್ಟಿಣಂ ಜಿಲ್ಲೆಗಳು ಮತ್ತು ಕಾರೈಕಲ್ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಇದನ್ನೂ ಓದಿ: ಅದಾನಿ ಬಂಧನಕ್ಕೆ ಅಮೆರಿಕದಿಂದ ಯಾವುದೇ ವಿನಂತಿ ಸ್ವೀಕರಿಸಿಲ್ಲ: ಕೇಂದ್ರ

    ಅಲ್ಲದೇ ಕಾರೈಕಲ್ ಮತ್ತು ಮಹಾಬಲಿಪುರಂ ನಡುವೆ ಭೂಕುಸಿತ ಉಂಟುಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು (IMD) ತಮಿಳುನಾಡು, ಪುದುಚೇರಿಯ ಜೊತೆಗೆ ಆಂಧ್ರದ ನೆಲ್ಲೂರು, ತಿರುಪತಿ, ಚಿತ್ತೂರು ಜಿಲ್ಲೆಗಳಿಗೂ ರೆಡ್‌ ಅಲರ್ಟ್‌ ಘೋಷಿಸಿದೆ. ಇದನ್ನೂ ಓದಿ: ಮೋದಿಯನ್ನು ಭೇಟಿಯಾಗಿ ರಾಜ್ಯದ ಯೋಜನೆಗಳಿಗೆ ಅನುದಾನ ಕೋರಿದ ಡಿಕೆಶಿ: ಏನೇನು ಮನವಿ ಮಾಡಲಾಗಿದೆ?

    ಈಗಾಗಲೇ ತಮಿಳುನಾಡಿನಲ್ಲಿ ಅಧಿಕಾರಿಗಳು ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಫೆಂಗಲ್‌ ಚಂಡಮಾರುತವು ಭಾರಿ ಮಳೆ ತರಲಿದ್ದು ಮತ್ತು ಗಂಟೆಗೆ 70 ರಿಂದ 90 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ರಾಜ್ಯ ಸರ್ಕಾರ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಸಾರ್ವಜನಿಕ ಸಾರಿಗೆ ಸೇವೆಗಳನ್ನು ಸ್ಥಗಿತಗೊಳಿಸಿದೆ. ಐಟಿ ಕಂಪನಿಗಳು ಮನೆಯಿಂದಲೇ ಕೆಲಸ ಮಾಡುವ ನಿಯಮ ಜಾರಿಗೊಳಿಸುವಂತೆ ಸೂಚಿಸಿದೆ. ಮಳೆ ಮುನ್ಸೂಚನೆ ಹೊಂದಿರುವ ಇತರ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರ ಸೂಚಿಸಿದೆ.

    2,229ರ ಪರಿಹಾರ ಶಿಬಿರ ಸ್ಥಾಪನೆ:
    ತಮಿಳುನಾಡು ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆಯು ಈಗಾಗಲೇ ಮುನ್ನೆಚ್ಚರಿಕಾ ಕ್ರಮದ ಭಾಗವಾಗಿ ರಾಜ್ಯಾದ್ಯಂತ 2,229 ಪರಿಹಾರ ಶಿಬಿರಗಳನ್ನು ಸ್ಥಾಪಿಸಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಆಶ್ರಯ ಅಗತ್ಯವಿರುವವರಿಗೆ ಸಂಪನ್ಮೂಲಗಳನ್ನು ಸಂಗ್ರಹಿಸಲಾಗಿದೆ. ಈವರೆಗೆ ತಿರುವಳ್ಳೂರು ಮತ್ತು ನಾಗಪಟ್ಟಿಣಂ ಜಿಲ್ಲೆಗಳಲ್ಲಿ 164 ಕುಟುಂಬಗಳ 471 ಜನರನ್ನು ಈಗಾಗಲೇ ಪರಿಹಾರ ಕೇಂದ್ರಗಳಲ್ಲಿ ಇರಿಸಲಾಗಿದೆ. ಸಂಭವನೀಯ ಪ್ರವಾಹದ ನಿರೀಕ್ಷೆಯಲ್ಲಿ ಸ್ಥಳೀಯ ಅಧಿಕಾರಿಗಳು ಮೋಟಾರ್‌ ಪಂಪ್‌ಗಳು, ಜನರೇಟರ್‌ಗಳು ಮತ್ತು ದೋಣಿಗಳು ಸೇರಿದಂತೆ ಅಗತ್ಯ ಸಾಧನಗಳನ್ನು ಚೆನ್ನೈ, ಕಡಲೂರು ಮತ್ತು ಮೈಲಾಡುತುರೈ ಮುಂತಾದ ಪೀಡಿತ ಪ್ರದೇಶಗಳಿಗೆ ನಿಯೋಜಿಸಿದ್ದಾರೆ.

    ಶ್ರೀಲಂಕಾದಲ್ಲಿ 12 ಸಾವು:
    ಶ್ರೀಲಂಕಾದಲ್ಲೂ ಫೆಂಗಲ್‌ ಹಾವಳಿಗೆ ಜನರು ತತ್ತರಿಸಿದ್ದು, 3 ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಮಳೆ ಸಂಬಂಧಿತ ದುರ್ಘ‌ಟನೆಗಳಲ್ಲಿ 12 ಮಂದಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಹೈಕೋರ್ಟ್‌ಗೆ ತೆರಳುವಂತೆ ಶಾಹಿ ಈದ್ಗಾ ಸಮಿತಿಗೆ ಸೂಚನೆ; ʻಹೈʼಆದೇಶ ಬರೋವರೆಗೆ ಮಸೀದಿ ಸಮೀಕ್ಷೆಗೆ ಸುಪ್ರೀಂ ತಡೆ

  • ತಮಿಳುನಾಡಿನಲ್ಲಿ ಭಾರೀ ಮಳೆ – 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, ಚೆನ್ನೈ ಜಲಾವೃತ

    ತಮಿಳುನಾಡಿನಲ್ಲಿ ಭಾರೀ ಮಳೆ – 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, ಚೆನ್ನೈ ಜಲಾವೃತ

    ಚೆನ್ನೈ: ಬಂಗಾಳಕೊಲ್ಲಿಯಲ್ಲಿ (Bay of Bengal) ವಾಯುಭಾರ ಕುಸಿತ ಸಂಭವಿಸಿದ್ದು ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ (Chennai) ಭಾರೀ ಮಳೆಯಾಗುತ್ತಿದೆ. ರಸ್ತೆಗಳು ನೀರಿನಿಂದ ಜಲಾವೃತವಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು ಸಂಚಾರಕ್ಕೆ ಸಮಸ್ಯೆಯಾಗಿದೆ. ದಟ್ಟವಾದ ಮಂಜು ಅವರಿಸಿದ್ದು ರಸ್ತೆಗಳು ಕಾಣದಾಗಿದೆ.

    ತಮಿಳುನಾಡಿನ ಕರಾವಳಿ ಮತ್ತು ಡೆಲ್ಟಾ ಜಿಲ್ಲೆಗಳಲ್ಲಿ ಮಂಗಳವಾರದಿಂದ ಮುಂದಿನ ಐದು ದಿನಗಳ ಕಾಲ ತೀವ್ರ ಮಳೆಯಾಗುವ (Heavy Rainfall) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

    ವಾಯುಭಾರ ಕುಸಿತದಿಂದ ರಾಮನಾಥಪುರಂ, ತಿರುಚಿರಾಪಳ್ಳಿ, ಪೆರಂಬಲೂರು, ಕಲ್ಲಕುರಿಚಿ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ನೀವು ಗೆದ್ದಾಗ ಮಾತ್ರ ಇವಿಎಂ ತಿರುಚಿರಲ್ವಾ? – ಬ್ಯಾಲೆಟ್‌ ಪೇಪರ್‌ ಮತದಾನ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಕಡಲೂರು ಮತ್ತು ಮೈಲಾಡುತುರೈ ಜಿಲ್ಲೆಗಳು ಮತ್ತು ಕಾರೈಕಲ್‌ನ ಕೆಲವು ಸ್ಥಳಗಳಲ್ಲಿ ಭಾರೀ ಮಳೆ ಮತ್ತು ಒಂದು ಅಥವಾ ಎರಡು ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತನ್ನ ಬುಲೆಟಿನ್‌ನಲ್ಲಿ ತಿಳಿಸಿದೆ.

    ಅರಿಯಲೂರ್, ತಿರುವರೂರ್, ನಾಗಪಟ್ಟಣಂ, ತಂಜಾವೂರು, ಪುದುಕೊಟ್ಟೈ, ವಿಳ್ಳುಪ್ಪುರಂ, ಪುದುಚೇರಿ, ಶಿವಗಂಗಾ, ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ರಾಣಿಪೇಟ್ ಮತ್ತು ತಿರುವಣ್ಣಾಮಲೈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.

    ಭಾರೀ ಮಳೆಯಿಂದಾಗಿ, ರಾಮನಾಥಪುರಂ, ತೂತುಕುಡಿ, ತಿರುನೆಲ್ವೇಲಿ, ತೆಂಕಶಿ ಮತ್ತು ತಿರುವರೂರು ಜಿಲ್ಲೆಗಳಲ್ಲಿ ನವೆಂಬರ್ 20 ಬುಧವಾರದಂದು ಶಾಲೆಗಳಿಗೆ ರಜೆ ನೀಡಲಾಗಿತ್ತು.

     

  • ಅ.24 ರಂದು ಒಡಿಶಾಕ್ಕೆ ಅಪ್ಪಳಿಸಲಿದೆ ಚಂಡಮಾರುತ – ಗಂಟೆಗೆ 100 -120 ಕಿ.ಮೀ ವೇಗದಲ್ಲಿ ಗಾಳಿ ಜೊತೆ ಸುರಿಯಲಿದೆ ಮಳೆ

    ಅ.24 ರಂದು ಒಡಿಶಾಕ್ಕೆ ಅಪ್ಪಳಿಸಲಿದೆ ಚಂಡಮಾರುತ – ಗಂಟೆಗೆ 100 -120 ಕಿ.ಮೀ ವೇಗದಲ್ಲಿ ಗಾಳಿ ಜೊತೆ ಸುರಿಯಲಿದೆ ಮಳೆ

    – ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆ ಸಾಧ್ಯತೆ
    – 14 ಎನ್‌ಡಿಆರ್‌ಎಫ್‌ ತಂಡವನ್ನು ನಿಯೋಜಿಸಿದ ಕೇಂದ್ರ

    ಭುವನೇಶ್ವರ: ಬಂಗಾಳ ಕೊಲ್ಲಿಯಲ್ಲಿ (Bay of engal) ವಾಯುಭಾರ ಕುಸಿತವಾಗಿದ್ದು ಗುರುವಾರ ಬಂಗಾಳಕೊಲ್ಲಿ ತೀರದ ಪ್ರದೇಶಗಳಿಗೆ ಡಾನಾ ಚಂಡಮಾರುತ (Cyclone Dana) ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಪ್ರಕಟಣೆಯಲ್ಲಿ ತಿಳಿಸಿದೆ.

    ಪೂರ್ವ– ಮಧ್ಯ ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದ ಉತ್ತರಕ್ಕೆ ವಾಯುಭಾರ ಕುಸಿತ ಉಂಟಾಗಿದೆ. ಇದು ‍ಪಶ್ಚಿಮ– ವಾಯುವ್ಯ ದಿಕ್ಕಿನೆಡೆಗೆ ಚಲಿಸಿ ಬುಧವಾರದ ವೇಳೆಗೆ ಅದು ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಅಕ್ಟೋಬರ್ 24 ರ ವೇಳೆಗೆ ಇದು ತೀವ್ರ ಚಂಡಮಾರುತವಾಗಿ ತೀವ್ರಗೊಂಡು ಉತ್ತರ ಬಂಗಾಳ ಕೊಲ್ಲಿಯ ತೀರ ಪ್ರದೇಶವನ್ನು ಅಪ್ಪಳಿಸಲಿದೆ.

    ವಾಯುವ್ಯ ದಿಕ್ಕಿಗೆ ಚಲಿಸಲಿರುವ ಈ ಚಂಡಮಾರುತ ಗುರುವಾರ ರಾತ್ರಿ ಅಥವಾ ಶುಕ್ರವಾರ ಮುಂಜಾನೆ ಒಡಿಶಾದ ಪುರಿಗೆ (Odisha Puri) ಅಪ್ಪಳಿಸಲಿದೆ. ಈ ವೇಳೆ ಗಾಳಿಯ ವೇಗ ಗಂಟೆಗೆ 100 ರಿಂದ 120 ಕಿಲೋಮೀಟರ್‌ಗಳವರೆಗೆ ಇರುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆಯೊಳಗೆ ದಡ ಸೇರುವಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಇದನ್ನೂ ಓದಿ: ರಷ್ಯಾವನ್ನು ಹಾಡಿ ಹೊಗಳಿ ಪಾಶ್ಚಿಮಾತ್ಯ ದೇಶಗಳಿಗೆ ಮಾತಿನಲ್ಲೇ ತಿವಿದ ಜೈಶಂಕರ್‌

    ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಗುರುವಾರ ಮತ್ತು ಶುಕ್ರವಾರ ಭಾರೀ ಮಳೆಯಾಗಲಿದೆ. ಅಕ್ಟೋಬರ್ 23 ರಿಂದಲೇ ಒಡಿಶಾದ ಕರಾವಳಿ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಗಂಟೆಗೆ 90 ರಿಂದ 120 ಕಿಮಿ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಇದನ್ನು ತೀವ್ರ ಚಂಡಮಾರುತ ಎಂದು ವರ್ಗೀಕರಿಸಲಾಗಿದೆ.

    ಪುರಿ, ಭುವನೇಶ್ವರ, ಜಗತ್‌ಸಿಂಗ್‌ಪುರ, ಕೇಂದ್ರಪಾರಾ, ಭದ್ರಕ್, ಬಾಲಸೋರ್, ಜಾಜ್‌ಪುರ್, ಧೆಂಕನಲ್, ಕೆಂದುಜಾರ್ ಮತ್ತು ಮಯೂರ್‌ಭಂಜ್ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಕೇಂದ್ರ ಸರ್ಕಾರ ಕೂಡ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ) ರಕ್ಷಣಾ ಮತ್ತು ಪರಿಹಾರ ಸಿದ್ಧತೆಗಳನ್ನು ಪರಿಶೀಲಿಸಲು ಸಭೆಯನ್ನು ಕರೆದಿದೆ.

    ಸಂಭಾವ್ಯ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸಲು ಒಟ್ಟು 14 NDRF ತಂಡಗಳನ್ನು ಪಶ್ಚಿಮ ಬಂಗಾಳದಲ್ಲಿ ಮತ್ತು 11 ಒಡಿಶಾದಲ್ಲಿ ನಿಯೋಜಿಸಲಾಗಿದೆ. ಕ್ಯಾಬಿನೆಟ್ ಕಾರ್ಯದರ್ಶಿ ಟಿವಿ ಸೋಮನಾಥನ್ ಅವರು  ಆಸ್ತಿ, ಪಾಸ್ತಿ ನಷ್ಟವನ್ನು ಕಡಿಮೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಎರಡೂ ರಾಜ್ಯ ಸರ್ಕಾರಗಳಿಗೆ ಸೂಚಿಸಿದ್ದಾರೆ.

     

  • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದ 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದ 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

    – ಮುಂದಿನ 2-3 ದಿನ ಮಳೆ ಬಿರುಸು

    ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ (Bay Of Bengal) ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಮುಂದಿನ 2-3 ದಿನ ಮಳೆ (Rain) ಬಿರುಸು ಪಡೆಯುವ ಸಾಧ್ಯತೆಯಿದ್ದು, 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.

    ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: Haryana Result | 2 ಲಕ್ಷ ಸರ್ಕಾರಿ ಉದ್ಯೋಗ ಭರವಸೆ, 100 ಚದರ ಅಡಿ ಸೈಟು ಫ್ರೀ ಗ್ಯಾರಂಟಿ: ಯಾರ ʻಕೈʼ ಮೇಲಾಗುತ್ತೆ?

    ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬಳ್ಳಾರಿ, ಕೋಲಾರ, ವಿಜಯನಗರ, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ರಾಜಕೀಯ ಕೈದಿಗಳಿಗೆ ಕ್ಷಮಾದಾನ, ಆರ್ಟಿಕಲ್‌ 370 ಮರುಸ್ಥಾಪನೆ – J&K ನಲ್ಲಿ ಪಕ್ಷಗಳ ಪ್ರಣಾಳಿಕೆ ಬಲ ನೀಡುತ್ತಾ?

    ಇತ್ತ ಹಿಂಗಾರು ಕಾಲಿಟ್ಟ ವಾರದಲ್ಲೇ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ವಾಡಿಕೆ ಪ್ರಕಾರ ಹಿಂಗಾರು 41 ಮಿ.ಮೀ ಮಳೆಯಾಗಬೇಕಿತ್ತು. ಸದ್ಯ ದಕ್ಷಿಣ ಒಳನಾಡು ಭಾಗದಲ್ಲಿ 54 ಮಿ.ಮೀ ಮಳೆಯಾಗಿದೆ. ಶೇ. 32ರಷ್ಟು ಹೆಚ್ಚು ಮಳೆಯಾಗಿದೆ. ಆದರೆ ಉತ್ತರ ಒಳನಾಡು, ಹಾಗೂ ಕರಾವಳಿ ಭಾಗದಲ್ಲಿ ಮಳೆ ಕೊರತೆಯಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆ ಅವಾಂತರ – 60 ಮನೆಗಳಿಗೆ ಪರಿಹಾರ ನೀಡಲು ಬಿಬಿಎಂಪಿ ಪಟ್ಟಿ ಸಿದ್ಧ

  • ಶಾಂತವಾಗುತ್ತಿದೆ ರೆಮಾಲ್ ಚಂಡಮಾರುತ – ಪಶ್ಚಿಮ ಬಂಗಾಳ, ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆ

    ಶಾಂತವಾಗುತ್ತಿದೆ ರೆಮಾಲ್ ಚಂಡಮಾರುತ – ಪಶ್ಚಿಮ ಬಂಗಾಳ, ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆ

    ಕೋಲ್ಕತ್ತಾ: ಬಂಗಾಳಕೊಲ್ಲಿಯಲ್ಲಿ(Bay of Bengal) ತೀವ್ರ ಆತಂಕ ಹುಟ್ಟಿಸಿದ್ದ ರೆಮಾಲ್ ಚಂಡಮಾರುತ (Cyclone Remal) ಶಾಂತವಾಗುತ್ತಿದೆ. ಗಂಟೆಗೆ 135 ಕಿಲೋಮೀಟರ್ ವೇಗದಲ್ಲಿ ಅಪ್ಪಳಿಸಿದ ಚಂಡಮಾರುತದ ವೇಗ ನಿಧಾನವಾಗಿ ಕುಸಿಯುತ್ತಿದೆ. ಇಂದು ರಾತ್ರಿ ಹೊತ್ತಿಗೆ ಗಾಳಿಯ ವೇಗ ಗಂಟೆಗೆ 70-80 ಕಿಲೋಮೀಟರ್‌ನಿಂದ 50-70 ಕಿಲೋಮೀಟರ್‌ಗೆ ಕುಸಿಯುವ ಸಾಧ್ಯತೆಯಿದೆ.

     

    ತಡರಾತ್ರಿ ಬಾಂಗ್ಲಾದೇಶ, ಪಶ್ಚಿಮ ಬಂಗಾಳ ಕರಾವಳಿ ಗಡಿಯ ತೀರಕ್ಕೆ ಗಂಟೆಗೆ 135 ಕಿಲೋಮೀಟರ್ ವೇಗದಲ್ಲಿ ಅಪ್ಪಳಿಸಿತ್ತು. ಪರಿಣಾಮ ಪಶ್ಚಿಮ ಬಂಗಾಳ (West Bengal), ಒಡಿಶಾ, ಅಸ್ಸಾಂ ಸೇರಿ ಈಶಾನ್ಯ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

    ನೂರಾರು ಮರಗಳು, ವಿದ್ಯುತ್ ಕಂಬಗಳು ಉರುಳಿ ಅಪಾರ ಹಾನಿಯುಂಟಾಗಿದೆ. ಕೋಲ್ಕತ್ತಾದಲ್ಲಿ ಮೆಟ್ರೋ ಮತ್ತು ಹಲವು ರೈಲುಗಳ ಸಂಚಾರ ರದ್ದಾಗಿದೆ. ಪಶ್ಚಿಮ ಬಂಗಳಾದಲ್ಲಿ ಇಬ್ಬರು, ಬಾಂಗ್ಲಾದಲ್ಲಿ ಏಳು ಮಂದಿ ಬಲಿ ಆಗಿದ್ದಾರೆ.  ಇದನ್ನೂ ಓದಿ: ಗೇಮಿಂಗ್ ಝೋನ್‌ನಲ್ಲಿ ಅಗ್ನಿ ಅವಘಡ ಪ್ರಕರಣ – 7 ಅಧಿಕಾರಿಗಳು ಅಮಾನತು

     

    ಚಂಡಮಾರುತ ದುರ್ಬಲಗೊಂಡ ನಂತರ ಕೋಲ್ಕತ್ತಾದಲ್ಲಿ ವಿಮಾನಸೇವೆಗಳು ಪುನಾರಂಭಗೊಂಡಿವೆ. ಮಂಗಳವಾರ ಸಂಜೆಯವರೆಗೂ ಗಾಳಿ ಮಳೆಯ ಪರಿಸ್ಥಿತಿ ಇರಲಿದೆ. ಸದ್ಯ ಚಂಡಮಾರುತ ಅಸ್ಸಾಂ, ಮೇಘಾಲಯದತ್ತ ಚಲಿಸುತ್ತಿದೆ.

    ಕೋಲ್ಕತ್ತಾದಿಂದ ಪೂರ್ವಕ್ಕೆ 90 ಕಿಲೋಮಿಟರ್ ದೂರದಲ್ಲಿ ರೆಮಾಲ್ ಕೇಂದ್ರೀಕೃತವಾಗಿದೆ. ಈ ಹಿಂದೆ ತೀವ್ರ ಅನಾಹುತ ಉಂಟು ಮಾಡಿದ್ದ ಆಂಫನ್‌ಗೆ ಹೋಲಿಸಿದ್ರೆ ರೆಮಾಲ್ ಪ್ರಭಾವ ಕಡಿಮೆ ಎಂದು ವರದಿಯಾಗಿದೆ. ಇದನ್ನೂ ಓದಿ: ಗೌತಮ್‌ ಗಂಭೀರ್‌ಗೆ ಬ್ಲ್ಯಾಂಕ್‌ ಚೆಕ್‌ ಆಫರ್‌ ಕೊಟ್ಟಿದ್ದೇಕೆ ಶಾರುಖ್‌?

     

  • ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಎಫೆಕ್ಟ್- ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆಯ ಎಚ್ಚರಿಕೆ

    ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಎಫೆಕ್ಟ್- ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆಯ ಎಚ್ಚರಿಕೆ

    ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ (Bay Of Bengal) ಚಂಡಮಾರುತದ (Cyclone) ಪರಿಣಾಮ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

    ರಾಜ್ಯದ ಹಲವು ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದ್ದು, ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದೂ ಸಹ ಮಳೆಯ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ವಾಡಿಕೆಗಿಂತ ಉತ್ತಮ ಮಳೆಯಾಗುತ್ತಿದ್ದು, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯ ಎಚ್ಚರಿಕೆ ನೀಡಿದೆ. 40-50 ಕಿ.ಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ರಾತ್ರಿ ಸುರಿದ ಮಳೆಗೆ ರಾಜಕಾಲುವೆಗೆ ಉರುಳಿದ ಆಟೋ – ಚಾಲಕ ದುರ್ಮರಣ

    ಕೋಲಾರ, ಬಳ್ಳಾರಿ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ ಬೀದರ್, ಧಾರವಾಡ,ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಭೂಮಿ ಮೇಲಿನ ಸ್ವರ್ಗ ಸೇಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸಿಗರಿಗೆ ನಿಷೇಧ