Tag: ಬಂಗಾಳ ಮಹಿಳೆ

  • ಪದ್ಮಶ್ರೀ ಪುರಸ್ಕೃತ ಸಾಧು ವಿರುದ್ಧ ಅತ್ಯಾಚಾರ, ಗರ್ಭಪಾತ ಆರೋಪ ಮಾಡಿದ ಬಂಗಾಳ ಮಹಿಳೆ

    ಪದ್ಮಶ್ರೀ ಪುರಸ್ಕೃತ ಸಾಧು ವಿರುದ್ಧ ಅತ್ಯಾಚಾರ, ಗರ್ಭಪಾತ ಆರೋಪ ಮಾಡಿದ ಬಂಗಾಳ ಮಹಿಳೆ

    * 6 ತಿಂಗಳಲ್ಲಿ 12 ಬಾರಿ ಅತ್ಯಾಚಾರ ಮಾಡಿದ ಆರೋಪ

    ಕೋಲ್ಕತ್ತಾ: ಪದ್ಮ ಪುರಸ್ಕೃತ ಸಾಧು ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ, ಗರ್ಭಪಾತ ಆರೋಪ ಹೊರಿಸಿದ್ದಾರೆ.

    ಪಶ್ಚಿಮ ಬಂಗಾಳದ ಮಹಿಳೆಯೊಬ್ಬರು (Bengal Women) ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸನ್ಯಾಸಿ, ಕಾರ್ತಿಕ್ ಮಹಾರಾಜ್ (Bengal Woman) ಎಂದೇ ಪ್ರಸಿದ್ಧರಾಗಿರುವ ಸ್ವಾಮಿ ಪ್ರದೀಪ್ತಾನಂದ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದಾರೆ. ಶಾಲೆಯಲ್ಲಿ ಕೆಲಸ ನೀಡುವ ನೆಪದಲ್ಲಿ 2013ರ ಜನವರಿ-ಜೂನ್ ನಡುವೆ 6 ತಿಂಗಳಲ್ಲಿ 12 ಬಾರಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಮದ್ವೆ ಆದ್ಮೇಲೆ ಗಂಡನ ಜೊತೆ ಹೇಗಿರಬೇಕು ಅಂತ ಹೇಳ್ಕೊಡ್ತೀನಿ – ತಾಯಿಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ!

    ರಾಜ್ಯದ ಮುರ್ಷಿದಾಬಾದ್ ಜಿಲ್ಲೆಯ ಭಾರತ್ ಸೇವಾಶ್ರಮ ಸಂಘದ ಬೆಲ್ದಂಗಾ ಘಟಕದೊಂದಿಗೆ ಸಂಬಂಧ ಹೊಂದಿರುವ ಸಾಧು ತಮ್ಮ ಮೇಲಿನ ಆರೋಪಗಳನ್ನು ತಳ್ಳಿಹಾಕಿದ್ದಾರೆ. ನನ್ನ ಹೆಸರು ಮತ್ತು ಖ್ಯಾತಿಗೆ ಕಳಂಕ ತರುವ ಪಿತೂರಿ ಇದು ಎಂದು ಪ್ರತಿಕ್ರಿಯಿಸಿದ್ದಾರೆ.

    ಈ ವರ್ಷದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪಡೆದವರಲ್ಲಿ ಮಹಾರಾಜ್ ಕೂಡ ಒಬ್ಬರು. ಇದು ವಿಶಿಷ್ಟ ಸೇವೆಗಾಗಿ ನೀಡಲಾಗುವ ಪ್ರಶಸ್ತಿಯಾಗಿದೆ. ಇದನ್ನೂ ಓದಿ: ಆಪರೇಷನ್ ಸಿಂಧೂರ ವೇಳೆ S-400 ಯಶಸ್ವಿ ಕಾರ್ಯಾಚರಣೆ; S-500 ರಕ್ಷಣಾ ವ್ಯವಸ್ಥೆ ಖರೀದಿಗೂ ಆಸಕ್ತಿ ತೋರಿದ ಭಾರತ

    ಕೋಲ್ಕತ್ತಾದ ಕಾನೂನು ವಿದ್ಯಾರ್ಥಿನಿಯೊಬ್ಬಳ ಮೇಲೆ ವಿದ್ಯಾರ್ಥಿಗಳು ಮತ್ತು ಆಕೆಯ ಕಾಲೇಜಿನ ಸಿಬ್ಬಂದಿ ನಡೆಸಿದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ರಾಜಕೀಯ ಘರ್ಷಣೆ ನಡೆಯುತ್ತಿದೆ. ಕಳೆದ ವರ್ಷ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯೊಬ್ಬರ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ದೇಶಾದ್ಯಂತ ಪ್ರತಿಭಟನೆಗೆ ಕಾರಣವಾಗಿತ್ತು.