Tag: ಬಂಡೀಪುರ ರಾಷ್ಟ್ರೀಯ ಉದ್ಯಾನವನ

  • ಕರ್ನಾಟಕದ ಕಾಶ್ಮೀರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್‌ ಸಂಚಾರ ಬಂದ್‌

    ಕರ್ನಾಟಕದ ಕಾಶ್ಮೀರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್‌ ಸಂಚಾರ ಬಂದ್‌

    ಚಾಮರಾಜನಗರ: ಕರ್ನಾಟಕದ ಕಾಶ್ಮೀರ ಎಂದೇ ಕರೆಯಲ್ಪಡುವ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ (Himavad Gopalaswamy Hills) ಬಸ್‌ ಸಂಚಾರ ಸ್ಥಗಿತಗೊಳಿಸಲಾಗಿದೆ.

    ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ನಿರಂತರ ಮಳೆಯಿಂದಾಗಿ (Rain) ಬೆಟ್ಟಕ್ಕೆ ಹೋಗುವ ರಸ್ತೆಗಳಲ್ಲಿ ಕೊರಕಲು ಉಂಟಾಗಿದೆ. ರಸ್ತೆ ಬದಿಗಳಲ್ಲಿ ಮಣ್ಣು ಕೊಚ್ಚಿಹೋಗಿದ್ದು, ದುರಸ್ತಿಗೆ ಬಂದಿದೆ. ಇನ್ನೂ ಮಳೆ ಹೆಚ್ಚಾದರೆ ರಸ್ತೆಯೇ ಕುಸಿಯುವ ಭೀತಿ ಎದುರಾಗಿದೆ. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬಸ್‌ ಸಂಚಾರ ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: ಚಿನ್ನ ಕಳ್ಳಸಾಗಣೆ ಪ್ರಕರಣ ಕರ್ನಾಟಕಕ್ಕೆ ವರ್ಗಾಯಿಸಲು ಕೋರಿದ್ದ ED ಮನವಿಗೆ ವಿರೋಧ – ಸುಪ್ರೀಂಗೆ ಕೇರಳ ಸರ್ಕಾರ ಅಫಿಡವಿಟ್‌

    ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟವು ಬಂಡೀಪುರ ರಾಷ್ಟ್ರೀಯ ಉದ್ಯಾನವನದ (Bandipur National Park) ಹೃದಯ ಭಾಗದಲ್ಲಿದೆ.

    Live Tv
    [brid partner=56869869 player=32851 video=960834 autoplay=true]

  • ವರ್ಷದ ಕಡೆಯ ಭಾನುವಾರ ಬಂಡೀಪುರಕ್ಕೆ ಹರಿದು ಬಂದ ಜನಸಾಗರ

    ವರ್ಷದ ಕಡೆಯ ಭಾನುವಾರ ಬಂಡೀಪುರಕ್ಕೆ ಹರಿದು ಬಂದ ಜನಸಾಗರ

    ಚಾಮರಾಜನಗರ: ಇಂದು ತಿಂಗಳ ಕಡೆಯ ಭಾನುವಾರ ಕೂಡ ಹೌದು. ಅಷ್ಟೇ ಏಕೆ ಈ ವರ್ಷದ ಕಡೆ ಭಾನುವಾರ ಕೂಡ ಹೌದು. ಹೀಗಾಗಿಯೇ ಗಡಿ ಜಿಲ್ಲೆ ಚಾಮರಾಜನಗರದ ಪ್ರವಾಸಿ ತಾಣಗಳಲ್ಲಿ ಈಗ ಜನವೋ ಜನ. ಅದರಲ್ಲೂ ವನ್ಯಜೀವಿ ಮತ್ತು ಪ್ರಕೃತಿ ಪ್ರಿಯರು ಜಿಲ್ಲೆಯತ್ತ ಹೆಚ್ಚಿನ ಸಂಖ್ಯೆಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ. ರಾಜ್ಯಗಳಿಂದ ಮಾತ್ರವಲ್ಲದೆ ಹೊರ ರಾಜ್ಯಗದಳಿಂದಲೂ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಸಾಗರೋಪಾದಿಯಲ್ಲಿ ಆಗಮಿಸುತ್ತಿರುವ ಪ್ರವಾಸಿಗರನ್ನು ನಿಯಂತ್ರಿಸಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ. ಇದರ ಜೊತೆಗೆ ವನ್ಯಜೀವಿಗಳ ದರ್ಶನ ಪ್ರವಾಸಿಗರನ್ನು ಮತ್ತಷ್ಟು ದಿಲ್ ಖುಷ್ ಮಾಡಿಸಿದೆ.

    29 ಡಿಸೆಂಬರ್ 2019ರ ಕಡೆಯ ಭಾನುವಾರ. ನೂತನ ವರ್ಷಾರಂಭ ಸ್ವಾಗತಕ್ಕೆ ಎಲ್ಲರೂ ಕಾತುರರಾಗಿದ್ದಾರೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಪ್ರವಾಸಿ ತಾಣಗಳಿಗೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ಕೊಡುತ್ತಿದ್ದಾರೆ. ಹೊಸ ವರ್ಷಾಚರಣೆ ಸಂಭ್ರಮ ಆಚರಿಸಲು ತಮಿಳುನಾಡಿನ ಊಟಿ. ಕೇರಳ ಸೇರಿದಂತೆ ಇತರೆ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಸಾಗರೋಪಾದಿಯಲ್ಲಿ ಕುಟುಂಬಸ್ಥರೊಂದಿಗೆ, ಸ್ನೇಹಿತರೊಂದಿಗೆ ತೆರಳುತ್ತಿದ್ದಾರೆ. ಊಟಿ, ಕೇರಳಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿಯೇ ಬಂಡೀಪುರ ರಾಷ್ಟ್ರೀಯ ಉದ್ಯಾನ ಇರುವುದರಿಂದ ಬಂಡೀಪುರಕ್ಕೂ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.

    ಸಾಮಾನ್ಯವಾಗಿ ರಜೆ ದಿನಗಳಲ್ಲಿ ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಇಲ್ಲಿಗೆ ಪ್ರವಾಸಿಗರು ಬರುತ್ತಾರೆ. ಆದರೆ ನೂತನ ವರ್ಷಾಚರಣೆ ಹಿನ್ನೆಲೆಯಲ್ಲಿ ಈಗ ಮಹಾರಾಷ್ಟ್ರ, ಒಡಿಶಾ, ಮಧ್ಯಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಂದಲೂ ಪ್ರವಾಸಿಗರು ಆಗಮಿಸುತ್ತಿದ್ದಾರೆ.

    ತಮಿಳುನಾಡಿನ ಊಟಿಗೆ ಸಂಪರ್ಕ ಕಲ್ಪಿಸುವ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದಾರೆ. ದಟ್ಟ ಕಾನನದ ನಡುವೆ ಹಸಿರು ಸೀರೆಯುಟ್ಟು ಕಂಗೊಳಿಸುವ ಅರಣ್ಯ ಪ್ರದೇಶದಲ್ಲಿ ತಂಪಾದ ವಾತಾರಣ ಇರುವುದರಿಂದ ಪೋಷಕರು ಮಕ್ಕಳೊಂದಿಗೆ, ಸ್ನೇಹಿತರೊಂದಿಗೆ ಬಂಡೀಪುರಕ್ಕೆ ಭೇಟಿ ನೀಡಿ ಒಂದು ಸುತ್ತು ಸಫಾರಿ ಮುಗಿಸಿಕೊಂಡು ನೂತನ ವರ್ಷಾಚರಣೆಗೆ ಊಟಿ ಹಾಗೂ ಕೇರಳದತ್ತ ಪ್ರವಾಸಿಗರು ತೆರಳುತ್ತಿದ್ದಾರೆ.

    ಅತ್ತ ಸುಡುವ ಬಿಸಿಲು ಇಲ್ಲದೆ, ಇತ್ತ ಮಳೆಯೂ ಇಲ್ಲದೆ ಇರುವುದರಿಂದ ಹುಲಿ, ಆನೆ, ಚಿರತೆ, ಜಿಂಕೆ, ಸೀಳುನಾಯಿ, ಕಾಡೆಮ್ಮೆಗಳಂತಹ ವನ್ಯಜೀವಿಗಳು ಹೇರಳವಾಗಿ ನೋಡಲು ಸಿಗುತ್ತಿರುವುದು ಪ್ರವಾಸಿಗರಲ್ಲಿ ಮತ್ತಷ್ಟು ಸಂತಸ ತರುತ್ತಿದೆ. ಪೂರ್ವ ಮುಂಗಾರಿನಲ್ಲಿ ಉತ್ತಮ ಮಳೆಯಾಗಿರುವುದರಿಂದ ಬಂಡೀಪುರ ಸಂಪೂರ್ಣವಾಗಿ ಹಸಿರಿನಿಂದ ಕಂಗೊಳಿಸುತ್ತಿದೆ. ಹಸಿರು ಸೀರೆಯುಟ್ಟ ಮದುವಣಗಿತ್ತಿ ರೀತಿಯ ಬಂಡೀಪುರ ಎಲ್ಲಾ ವರ್ಗದವರನ್ನು ಹೆಚ್ಚು ಹೆಚ್ಚು ಅಕರ್ಷಿಸುತ್ತಿದೆ.

    ಪ್ರವಾಸಿಗರು ನೂತನ ವರ್ಷಾಚರಣೆಗೆ ಸಾಗರೋಪಾದಿಯಲ್ಲಿ ಆಗಮಿಸುತ್ತಿದ್ದರೆ ಬರುವ ಪ್ರವಾಸಿಗರನ್ನು ನಿಯಂತ್ರಣ ಮಾಡಲು ಅರಣ್ಯ ಇಲಾಖೆ ಹೈರಣಾಗಿ ಹೋಗಿದೆ. ಕೆಲವರಿಗೆ ಸಫಾರಿ ಹೋಗಲು ಟಿಕೆಟ್ ಸಿಗದೆ ನಿರಾಸೆಯಿಂದ ವಾಪಸ್ ಹೋದ ಪ್ರಸಂಗ ಕೂಡ ನಡೆದಿದೆ. ಪ್ರವಾಸಿಗರ ಆಗಮನದಿಂದ ಅಷ್ಟೇ ಪ್ರಮಾಣದಲ್ಲಿ ಅರಣ್ಯ ಇಲಾಖೆಗೆ ಆದಾಯ ಹರಿದು ಬರುತ್ತಿರುವುದು ಸಂತಸದ ವಿಷಯವಾಗಿದೆ.

  • ಎಚ್‍ಡಿ ಕೋಟೆಯಲ್ಲಿ ಕಬ್ಬಿನ ಗದ್ದೆಗೆ ನುಗ್ಗಿ ಕಾಡಾನೆಗಳಿಂದ ದಾಂಧಲೆ-ಬೆಳೆ ನಾಶ

    ಎಚ್‍ಡಿ ಕೋಟೆಯಲ್ಲಿ ಕಬ್ಬಿನ ಗದ್ದೆಗೆ ನುಗ್ಗಿ ಕಾಡಾನೆಗಳಿಂದ ದಾಂಧಲೆ-ಬೆಳೆ ನಾಶ

    ಮೈಸೂರು: ಕಾಡಿನಿಂದ ನಾಡಿಗೆ ಬಂದ ಆನೆಗಳು ಕಬ್ಬಿನ ಗದ್ದೆಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಬಸಾಪುರದಲ್ಲಿ ನಡೆದಿದೆ.

    5 ಆನೆಗಳ ಹಿಂಡು ಬಸಾಪುರ ಗ್ರಾಮ ಹೊಲಕ್ಕೆ ನುಗ್ಗಿ 5 ಎಕರೆ ಕಬ್ಬು, 2 ಎಕರೆ ಜೋಳ ಬೆಳೆ ನಾಶ ಮಾಡಿವೆ. ಗ್ರಾಮದ ನಾಗರಾಜು, ಸೌಮ್ಯ ಹಾಗೂ ನಾಗಮ್ಮ ಎಂಬುವವರ ಜಮೀನಿನಲ್ಲಿ ಆನೆಗಳು ಪುಂಡಾಟ ಮಾಡಿವೆ.

    ಈ ಕಾರಣ ಸ್ಥಳಕ್ಕೆ ಆಗಮಿಸಿದ ಹಿರಿಯ ಅರಣ್ಯ ಅಧಿಕಾರಿ ಪರಮೇಶ್, ಕಬ್ಬಿನ ಗದ್ದೆಯೊಳಗೆ ಸೇರಿಕೊಂಡಿರುವ ಆನೆಗಳನ್ನು ಸಂಜೆವರೆಗೂ ಓಡಿಸುವುದು ಕಷ್ಟ. ಇದೀಗ ಕಾರ್ಯಚರಣೆ ನಡೆಸಿದರೆ ಗ್ರಾಮದ ಒಳಗಡೆ ಆನೆಗಳು ಬರುವ ಭೀತಿ ಇದೆ. ಹೀಗಾಗಿ ಕಾರ್ಯಾಚರಣೆ ಆರಂಭಿಸಿಲ್ಲ ಎಂದು ಹೇಳಿದ್ದಾರೆ. ಈಗ ಸ್ಥಳದಲ್ಲೇ ಎಸಿಎಫ್ ಹಾಗೂ ಆರ್‍ಎಫ್‍ಓ ಹಾಗೂ ಸಿಬ್ಬಂದಿ ಬೀಡು ಬಿಟ್ಟಿದ್ದಾರೆ.

  • ಬಿಳಿಗಿರಿ ರಂಗನ ಬೆಟ್ಟದಲ್ಲಿ ನಿಯಂತ್ರಣಕ್ಕೆ ಬಂದ ಬೆಂಕಿ

    ಬಿಳಿಗಿರಿ ರಂಗನ ಬೆಟ್ಟದಲ್ಲಿ ನಿಯಂತ್ರಣಕ್ಕೆ ಬಂದ ಬೆಂಕಿ

    ಚಾಮರಾಜನಗರ: ಕಳೆದ ಎಂಟು ದಿನಗಳಿಂದ ಬಂಡೀಪುರ ರಾಷ್ಟ್ರೀಯ ಉದ್ಯಾನವನ, ಮೂರು ದಿನಗಳಿಂದ ಬಿಳಿಗಿರಿರಂಗನ ಬೆಟ್ಟದ ಹುಲಿ ಸಂರಕ್ಷಣಾ ಪ್ರದೇಶ ಅಕ್ಷರಶಃ ಬೆಂಕಿಯಿಂದ ಹೊತ್ತಿ ಉರಿದಿತ್ತು. ಇದೀಗ ಬೆಂಕಿಯನ್ನು ನಂದಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.

    ಬೆಂಕಿ ಜ್ವಾಲೆಯ ನಡುವೆ ಅರಣ್ಯ ಇಲಾಖೆ ಸಿಬ್ಬಂದಿಗಳು ಹಗಲಿರುಳು ನಿದ್ದೆ, ಊಟವಿಲ್ಲದೇ ನಡೆಸಿದ ಕಾರ್ಯಚರಣೆಯ ಫಲವಾಗಿ ಬೆಂಕಿ ಸಂಪೂರ್ಣ ಹತೋಟಿಗೆ ಬಂದಿದೆ. ಕಿಡಿಗೇಡಿಗಳು ಹಚ್ಚಿದ್ದ ಬೆಂಕಿಗೆ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಣಾ ಪ್ರದೇಶದಲ್ಲಿ ಸಾವಿರಕ್ಕೂ ಅಧಿಕ ಎಕರೆ ಅರಣ್ಯ ಪ್ರದೇಶ ನಾಶವಾಗಿದೆ. ಅಲ್ಲದೇ ಅಲವಾರು ಪ್ರಾಣಿ ಸಂಕುಲ ಬೆಂಕಿಯ ಕಿನ್ನಾಲೆಗೆ ತುತ್ತಾಗಿವೆ.

    ಬಂಡೀಪುರದ ಕಲ್ಕರೆ, ಗುಂಡ್ರೆ, ಮದ್ದೂರು ಅರಣ್ಯ ಪ್ರದೇಶ ಹಾಗೂ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಣಾ ಪ್ರದೇಶದ ಮದಲೆಮಾವು, ಪುಣಜೂರು, ಬೆಡಗುಳಿ ಪ್ರದೇಶದಲ್ಲಿ ಬಿದ್ದಿದ್ದ ಬೆಂಕಿ ಸಂಪೂರ್ಣ ಹತೋಟಿಗೆ ಬಂದಿದೆ.