ಚಾಮರಾಜನಗರ: ಫೋಟೊ ತೆಗೆಯಲು ಹೋದವನ ಮೇಲೆ ಕಾಡಾನೆಯೊಂದು ದಾಳಿ ನಡೆಸಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ.
ರಸ್ತೆ ಬದಿಯಲ್ಲಿ ಕಾಡಾನೆ ನಿಂತಿತ್ತು. ಈ ವೇಳೆ ಕಾರಿನಿಂದ ಇಳಿದು ಪ್ರವಾಸಿಗರು ಹುಚ್ಚಾಟ ಮೆರೆದಿದ್ದರು. ಪ್ರವಾಸಿಗರು ಕಿರುಚಾಡಿ ಆನೆಯನ್ನು ಉದ್ವೇಗಗೊಳಿಸಿದರು. ಓರ್ವ ಪ್ರವಾಸಿಗ ಆನೆ ಸಮೀಪವೇ ತೆರಳಿ ಪೋಟೊ ಕ್ಲಿಕ್ಕಿಸಿಕೊಳ್ಳಲು ಯತ್ನಿಸಿದ. ಈ ವೇಳೆ ಕೆರಳಿದ ಆನೆ ಏಕಾಏಕಿ ದಾಳಿ ನಡೆಸಿತು.
ಓಡಿ ಹೋಗುತ್ತಿದ್ದ ಪ್ರವಾಸಿಗ ರಸ್ತೆ ಮೇಲೆ ಪಲ್ಟಿ ಹೊಡೆದ. ಕೊನೆಗೆ ಅಟ್ಟಾಡಿಸಿ ಆನೆ ದಾಳಿ ನಡೆಸಿದೆ. ಗಾಯಗೊಂಡ ಪ್ರವಾಸಿಗನನ್ನು ಕುಟುಂಬಸ್ಥರು ಆಸ್ಪತ್ರೆಗೆ ಸೇರಸಿದ್ದಾರೆ.
ಆನೆ ದಾಳಿಗೆ ಒಳಗಾದವನ ಬಗ್ಗೆ ಅರಣ್ಯ ಇಲಾಖೆ ಮಾಹಿತಿ ಪಡೆಯಲು ಮುಂದಾಗಿದೆ. ಆದರೆ, ಇಲ್ಲಿಯವರೆಗೂ ಮಾಹಿತಿ ಪತ್ತೆಯಾಗಿಲ್ಲ.
ಚಾಮರಾಜನಗರ: ದೇಶದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಚಾಮರಾಜನಗರ ಜಿಲ್ಲೆಯಲ್ಲೇ ಕಳೆದ 10 ವರ್ಷದಲ್ಲಿ 100ಕ್ಕೂ ಹೆಚ್ಚು ಹುಲಿಗಳ ಸಂಖ್ಯೆ ಹೆಚ್ಚಾಗಿದ್ದು, ಅತಿಹೆಚ್ಚು ಹುಲಿಗಳನ್ನು ಪೋಷಿಸುತ್ತಿರುವ ಜಿಲ್ಲೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.
ಪ್ರತಿ ವರ್ಷವೂ ಜುಲೈ 29ರ ದಿನವನ್ನು `ವಿಶ್ವಹುಲಿ’ ದಿನವನ್ನಾಗಿ ಆಚರಿಸಲಾಗುತ್ತದೆ. ಹಿಂದೆ ಹುಲಿಗಳ ಸಂರಕ್ಷಣೆ ದೊಡ್ಡ ಸವಾಲಾಗಿತ್ತು. ಆದರೀಗ ಸಂರಕ್ಷಣೆ ಉತ್ತಮವಾಗಿದ್ದು, ಹುಲಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಅದರಲ್ಲೂ ಗಡಿಜಿಲ್ಲೆ ಚಾಮರಾಜನಗರ ಹುಲಿಗಳ ನಾಡು ಎಂದೇ ಹೆಸರು ಗಳಿಸಿದೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ NIA ಹೆಗಲಿಗೆ
ಚಾಮರಾಜನಗರ ಜಿಲ್ಲೆಯಲ್ಲಿ ಬಂಡೀಪುರ, ಬಿಳಿಗಿರಿ ರಂಗನಬೆಟ್ಟ ಹುಲಿ ಸಂರಕ್ಷಿತ ಪ್ರದೇಶಗಳಾಗಿವೆ. ಮಲೈ ಮಹದೇಶ್ವರ ವನ್ಯಜೀವಿಧಾಮವೂ ಕೆಲವೇ ದಿನಗಳಲ್ಲಿ ಹುಲಿ ಸಂರಕ್ಷಿತ ಪ್ರದೇಶ ಆಗುವ ನಿರೀಕ್ಷೆಯಿದೆ. ಬಂಡೀಪುರ ಅರಣ್ಯ ಪ್ರದೇಶವು 1973ರಲ್ಲಿ ಮೊದಲಿಗೆ ಹುಲಿ ಸಂರಕ್ಷಿತ ಅರಣ್ಯಪ್ರದೇಶವಾಗಿ ಘೋಷಣೆಯಾಯ್ತು. ಆಗ ಸಂದರ್ಭದಲ್ಲಿ 12 ಹುಲಿಗಳಷ್ಟೇ ಇತ್ತು ಎಂದು ಅಂದಾಜು ಮಾಡಲಾಗಿತ್ತು. ಕ್ರಮೇಣ ಹುಲಿಗಳ ಸಂರಕ್ಷಣೆ ಹೆಚ್ಚಾಯ್ತು.
On International Tiger Day, I laud all those who are actively working to protect the tiger. It would make you proud that India has 52 tiger reserves covering over 75,000 sq. km. Innovative measures are being undertaken to involve local communities in tiger protection. pic.twitter.com/JlF8dQ3cxn
ಇದಿಗ ಕಳೆದ ಹುಲಿ ಗಣತಿಯ ಪ್ರಕಾರ ಸುಮಾರು 150ಕ್ಕೂ ಹೆಚ್ಚು ಹುಲಿಗಳಿರೋದು ಗೊತ್ತಾಗಿದೆ. ಅದೇ ರೀತಿ ಬಿಳಿಗಿರಿ ರಕ್ಷಿತಾರಣ್ಯದಲ್ಲೂ ಕಳೆದ ಗಣತಿಯಲ್ಲಿ 86 ಹುಲಿಗಳಿರೋದು ಕಂಡು ಬಂದಿದೆ. ಮಲೈ ಮಹದೇಶ್ವರ ವನ್ಯಜೀವಿಧಾಮದಲ್ಲಿ 15ಕ್ಕೂ ಹೆಚ್ಚು ಹುಲಿಗಳಿದ್ದು, ಇದೀಗ ಅದರ ಸಂಖ್ಯೆ 25 ರಿಂದ 30ಕ್ಕೆ ಹೆಚ್ಚಾಗಿದೆ ಎಂದು ಅಂದಾಜಿಸಲಾಗಿದೆ. ಕಳೆದ 10 ವರ್ಷದಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಹುಲಿಗಳ ಸಂಖ್ಯೆ ಹೆಚ್ಚಾಗಿದ್ದರೆ, ಗಡಿ ಅರಣ್ಯದಲ್ಲಿ 250ಕ್ಕೂ ಹುಲಿಗಳಿವೆ ಎಂದು ಪ್ರಸ್ತುತ ಗಣತಿಯು ಮಾಹಿತಿ ನೀಡಿದೆ. ಅರಣ್ಯ ಇಲಾಖೆಯ ಸರಂಕ್ಷಣಾ ಕ್ರಮಗಳೂ ಹುಲಿಗಳ ಸಂಖ್ಯೆ ಹೆಚ್ಚಾಗಲೂ ಕಾರಣವಾಗಿದೆ.
ಈ ಹಿಂದೆ ಹುಲಿಗಳ ಹಾಗೂ ವನ್ಯಜೀವಿ ಕಳ್ಳಭೇಟೆಗಾರರ ಮೇಲೆ ಇಲಾಖೆ ಸಾಕಷ್ಟು ನಿಗಾ ಇಟ್ಟಿತು. ಇದರಿಂದ ಹುಲಿಗಳ ಸಂಖ್ಯೆ ಹೆಚ್ಚಾಗಿದ್ದು, ಪ್ರವಾಸೋದ್ಯಮ ಚಟುವಟಿಕೆ ಕೂಡ ಹೆಚ್ಚಾಗಿದೆ. ದೇಶ ವಿದೇಶದಿಂದ ಪ್ರವಾಸಿಗರನ್ನು ಸೆಳೆಯುತ್ತಿದೆ. ಅದೇ ರೀತಿ ಕಾಡಿನ ಸಂರಕ್ಷಣೆಯಲ್ಲೂ ಹುಲಿಗಳು ಮಹತ್ವದ ಪಾತ್ರ ವಹಿಸಿದೆ. ಇದನ್ನೂ ಓದಿ: ಇಡೀ ಬಿಜೆಪಿ ಪಕ್ಷ ಹಾಳಾಗಿ ಹೋಗುತ್ತೆ, ಅಣ್ಣಪ್ಪನ ಶಾಪ ಇದೆ: ಮಹೇಶ್ ಶೆಟ್ಟಿ ತಿಮರೋಡಿ ಕಿಡಿ
ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿರುವುದರಿಂದ ಪ್ರವಾಸಿಗರೂ ಫುಲ್‌ಖುಷ್ ಆಗಿದ್ದಾರೆ. ಹುಲಿಗಳ ದರ್ಶನದಿಂದ ಪುಳಕಗೊಂಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಹುಲಿಗಳು ಪೋಷಣೆ ಆಗುತ್ತಿರುವುದರಿಂದ `ಹುಲಿಗಳ ನಾಡು’ ಎಂದೇ ಕರೆಸಿಕೊಳ್ಳುತ್ತಿದೆ.
Live Tv
[brid partner=56869869 player=32851 video=960834 autoplay=true]