Tag: ಬಂಡೆಪ್ಪ ಖಾಶೆಂಪುರ್

  • ಶಾಸಕ ಬಂಡೆಪ್ಪ ಖಾಶೆಂಪುರ್ ಸಮ್ಮುಖದಲ್ಲಿ ಜೆಡಿಎಸ್ ಸೇರಿದ ಯುವಕರು

    ಶಾಸಕ ಬಂಡೆಪ್ಪ ಖಾಶೆಂಪುರ್ ಸಮ್ಮುಖದಲ್ಲಿ ಜೆಡಿಎಸ್ ಸೇರಿದ ಯುವಕರು

    ಬೀದರ್: ದಕ್ಷಿಣ ವಿಧಾನಸಭಾ ಕ್ಷೇತ್ರದ ಬಂಬಳಗಿಯ ಈ ಮುಂಚೆ ಕಾಂಗ್ರೆಸ್ ನಲ್ಲಿದ್ದ ಗ್ರಾಮ ಪಂಚಾಯತಿ ಸದಸ್ಯ ಪ್ರಕಾಶ್ ಭಾಲೆರವರು ಹಾಗೂ ಕೋಳಾರ ಕೆ ಗ್ರಾಮದ ಪ್ರಮುಖರು, ಯುವಕರು ಸೇರಿದಂತೆ ಅನೇಕರು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ (Bandeppa Kashempur) ರವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

    ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ (Bidar South Vidhanasabha Constituency) ದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸದ ಆವರಣದಲ್ಲಿ ಜೆಡಿಎಸ್ ಶಾಲು ಹೊದಿಸಿ, ಪಕ್ಷದ ಧ್ವಜ ನೀಡುವ ಮೂಲಕ ಗ್ರಾಮ ಪಂಚಾಯತಿ ಸದಸ್ಯರನ್ನು, ವಿವಿಧ ಗ್ರಾಮಗಳ ಮುಖಂಡರನ್ನು, ಯುವಕರನ್ನು, ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡರು.

    ಈ ಸಂದರ್ಭದಲ್ಲಿ ಜೆಡಿಎಸ್ (JDS) ಎಸ್‍ಟಿ ಘಟಕದ ಜಿಲ್ಲಾಧ್ಯಕ್ಷ ಬೋಮಗೊಂಡ ಚಿಟ್ಟಾವಾಡಿ, ಪ್ರಮುಖರಾದ ರೇವಣಸಿದ್ದಪ್ಪ ಸಿರಕಟನಳ್ಳಿ, ಪುಟ್ಟರಾಜ ರೇಕುಳಗಿ, ಕ್ರಿಸ್ಟೋಫರ್ ಎಸ್ ರೇಕುಳಗಿ ಸೇರಿದಂತೆ ಅನೇಕರಿದ್ದರು. ಇದನ್ನೂ ಓದಿ: ಖರ್ಗೆ ತವರು ಜಿಲ್ಲೆಯಲ್ಲಿ ಆಪರೇಷನ್ ಹಸ್ತ- ಹಾಲಿ ಬಿಜೆಪಿ ಶಾಸಕರಿಗೆ ಗಾಳ

  • 54 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಂಡೆಪ್ಪ ಖಾಶೆಂಪುರ್

    54 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಂಡೆಪ್ಪ ಖಾಶೆಂಪುರ್

    ಬೀದರ್: 54 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗಳಿಗೆ ಬೀದರ್‍ನಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ಚಾಲನೆ ಕೊಟ್ಟಿದ್ದಾರೆ.

    ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನ್ನಾಎಖೇಳ್ಳಿ ಗ್ರಾಮದಲ್ಲಿ ಕೆ.ಕೆ.ಆರ್.ಡಿ.ಬಿ ಯೋಜನೆಯಲ್ಲಿ ಸುಮಾರು 54 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆಚಾಲನೆ ನೀಡಿದರು. ಗ್ರಾಮದ ಮೈನೋದ್ಧೀನ್ ಕಟಲೇರಿ ಮನೆಯಿಂದ ಶೆಟಕಾರ ಶಾಲೆವರೆಗೆ, ಮಸ್ತಾನ ಭಗವಾನ ಮನೆಯಿಂದ ಗೋರಮಿಯಾ ಮನೆಯವರೆಗೆ ಹಾಗೂ ಅನೇಕ ಕಡೆಗಳಲ್ಲಿ ನಿರ್ಮಿಸಲಾಗುತ್ತಿರುವ ಸಿಸಿ ರಸ್ತೆ ಕಾಮಗಾರಿಗೆ ಇಂದು ಚಾಲನೆ ನೀಡಿದರು. ಇದನ್ನೂ ಓದಿ:  ಪರಿಸರವನ್ನು ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿ: ವೇದವ್ಯಾಸ ಕಾಮತ್

    ಬಳಿಕ ಮಾತನಾಡಿದ ಅವರು, ನಿಗದಿತ ಸಮಯದಲ್ಲೇ ಉತ್ತಮ ಗುಣಮಟ್ಟದ ಸಿಸಿ ರಸ್ತೆ ನಿರ್ಮಾಣ ಮಾಡಬೇಕು. ಕಾಮಗಾರಿಯಲ್ಲಿ ಯಾವುದೇ ರೀತಿಯ ಸಮಸ್ಯೆಯಾಗಬಾರದು. ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ದೂರುಗಳು ಬಾರದಂತೆ ಗುಣಮಟ್ಟದ ಕೆಲಸ ಮಾಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ:  ಹೋರಿಯ ಹುಟ್ಟು ಹಬ್ಬ ಆಚರಿಸಿದ ಶಾಸಕ ರೇಣುಕಾಚಾರ್ಯ

    ಈ ಸಂದರ್ಭದಲ್ಲಿ ಮುಖಂಡರಾದ ಸಂತೋಷ ರಾಸೂರು, ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಭಾಗ್ಯಜ್ಯೋತಿ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಗುಂಡಮ್ಮ ಸುಭಾಸ್ ನಾಟೀಕರ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.