Tag: ಬಂದ್

  • ಸತತ ಮೂರು ದಿನ ರಾಷ್ಟ್ರಾದ್ಯಂತ ಬ್ಯಾಂಕ್ ಬಂದ್

    ಸತತ ಮೂರು ದಿನ ರಾಷ್ಟ್ರಾದ್ಯಂತ ಬ್ಯಾಂಕ್ ಬಂದ್

    ಬೆಂಗಳೂರು: ಜನವರಿ 31 ಹಾಗೂ ಫೆಬ್ರವರಿ 1 ರಾಷ್ಟ್ರಾದ್ಯಂತ ಬ್ಯಾಂಕ್‍ಗಳ ಮುಷ್ಕರ ಇರಲಿದೆ. ಫೆ.2 ಭಾನುವಾರ ಆದ್ದರಿಂದ ಒಟ್ಟು ಮೂರು ದಿನ ಸತತವಾಗಿ ಬ್ಯಾಂಕ್ ಬಂದ್ ಆಗಲಿದೆ. ಒಟ್ಟು ಮೂರು ದಿನ ಬ್ಯಾಂಕ್ ಬಂದ್ ಇರುವುದರಿಂದ ಸಾರ್ವಜನಿಕರಿಗೆ ಬ್ಯಾಂಕಿಂಗ್ ವಿಚಾರದಲ್ಲಿ ವ್ಯತ್ಯಯ ಆಗಲಿದೆ.

    ಸರ್ಕಾರ ಮತ್ತು ಬ್ಯಾಂಕ್‍ಗಳ ನಡುವೆ ವೇತನ ಒಪ್ಪಂದ ಮತ್ತು ವಿವಿಧ ಬೇಡಿಕೆಗಳಿಗೆ ಸಂಬಂಧಪಟ್ಟಂತೆ ಸತತ ಎರಡು ವರ್ಷಗಳಿಂದ ಮಾತುಕತೆ, ಚರ್ಚೆಗಳು ನಡೆಯುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ವೇತನ ಹೆಚ್ಚಳ ಮಾತುಕತೆ ವಿಫಲವಾಗಿರೋ ಕಾರಣ ಬ್ಯಾಂಕ್ ನೌಕರರು ಬಂದ್ ನಡೆಸುತ್ತಿದ್ದಾರೆ. ಆದ್ದರಿಂದ ಬ್ಯಾಂಕ್ ನೌಕರರು ಈಗ ಬ್ಯಾಂಕ್ ಬಂದ್ ಮಾಡಲು ಮುಂದಾಗಿದ್ದಾರೆ. 12.30% ವೇತನ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಆದರೆ ಬ್ಯಾಂಕ್ ನೌಕರರು 2017ರಲ್ಲಿ 15% ಇತ್ತು. ಈಗ ಅದಕ್ಕೂ ಕಡಿಮೆ ಅಂದರೆ ಸಾಧ್ಯವಿಲ್ಲ ಎಂದು ಪಟ್ಟು ಹಿಡಿದ ಕಾರಣ ಸತತ ಎರಡು ವರ್ಷಗಳ ಚರ್ಚೆಯಾಗುತ್ತಿತ್ತು.

    2017ಕ್ಕೆ ಹಳೆ ವೇತನ ಒಪ್ಪಂದ ಮುಗಿದಿದೆ. ನಂತರ ಸತತ ಎರಡು ವರ್ಷಗಳಿಂದ ವೇತನ ಒಪ್ಪಂದದ ಮಾತುಕತೆ ಫಲ ಕೊಡದ ಹಿನ್ನೆಲೆ ಬಂದ್‍ಗೆ ಯುನೈಟೆಡ್ ಫಾರಂ ಆಫ್ ಬ್ಯಾಂಕ್ ಯೂನಿಯನ್ಸ್ ನೇತೃತ್ವದಲ್ಲಿ ಕರೆ ನೀಡಲಾಗಿದೆ. ಜನವರಿ 31 ಹಾಗೂ ಫೆಬ್ರವರಿ 1 ಒಟ್ಟು ಎರಡು ದಿನ ಬಂದ್ ಮಾಡಿ. ನಂತರ ಮಾರ್ಚ್ 11, 12, 13 ಒಟ್ಟು ಮೂರು ದಿನ ಬಂದ್ ಮಾಡುವ ತೀರ್ಮಾನಕ್ಕೆ ಬರಲಾಗಿದೆ. ಈ ಎರಡೂ ಬಂದ್ ನಂತರವೂ ಸರ್ಕಾರ ವೇತನ ಒಪ್ಪಂದ ಸರಿ ಮಾಡದೇ ಇದ್ದರೆ ಏಪ್ರಿಲ್ 1 ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ.

  • ಕಂಟೋನ್ಮೆಂಟ್ ಸಂಪೂರ್ಣ ಬಂದ್ – ಪೊಲೀಸರ ಸರ್ಪಗಾವಲು

    ಕಂಟೋನ್ಮೆಂಟ್ ಸಂಪೂರ್ಣ ಬಂದ್ – ಪೊಲೀಸರ ಸರ್ಪಗಾವಲು

    ಬೆಂಗಳೂರು: ಸಿಎಎ, ಎನ್‍ಆರ್ ಸಿ ವಿರೋಧಿಸಿ ಇಡೀ ಕಂಟೋನ್ಮೆಂಟ್ ಬಂದ್ ಮಾಡಲಾಗಿದೆ. ಶಿವಾಜಿನಗರದ ಅಂಗಡಿ ಮುಗ್ಗಟ್ಟು, ಫುಟ್ ಪಾತ್ ವ್ಯಾಪಾರ ಸಹ ಪೂರ್ಣ ಬಂದ್ ಆಗಿದೆ.

    ರಸೆಲ್ ಮಾರ್ಕೆಟ್‍ನ ಚಾಂದನಿ ಚೌಕ್ ಸರ್ಕಲ್‍ನಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಜಾಯಂಟ್ ಆ್ಯಕ್ಷನ್ ಕಮಿಟಿ ಹಾಗೂ ಪೀಪಲ್ ಫೆಡರೇಶನ್ ವತಿಯಿಂದ ಬೃಹತ್ ಸಭೆಗೆ ಸಿದ್ಧತೆ ನಡೆದಿದೆ.

    ಕಂಟೋನ್ಮೆಂಟ್ 9 ಮಾರುಕಟ್ಟೆಗಳಲ್ಲೂ ವ್ಯಾಪಾರ ಬಂದ್ ಆಗಿದ್ದು ರಸೆಲ್ ಮಾರುಕಟ್ಟೆ, ಬೀಫ್ ಮಾರ್ಕೆಟ್, ನಾಲಾ ವೆಜಿಟೇಬಲ್ ಮಾರ್ಕೆಟ್, ಇವಿನಿಂಗ್ ಬಜಾರ್ ಮಾರ್ಕೆಟ್, ಗುಜರಿ ಮಾರ್ಕೆಟ್, ಬಂಡಿ ಮೋಟ್ ಮಾರ್ಕೆಟ್, ಸ್ಟಿಫನ್ ಸ್ಕೋರ್ ಮಾರ್ಕೆಟ್ ಹಾಗೂ ಸೆಂಟ್ರಲ್ ಸ್ಟ್ರೀಟ್ ಮಾರ್ಕೆಟ್ ಸೇರಿದಂತೆ ಇಡೀ ಕಂಟೋನ್ಮೆಂಟ್ ಸಂಪೂರ್ಣ ಬಂದ್ ಆಗಿದೆ.

    ಬಂದ್ ಹಿನ್ನೆಲೆಯಲ್ಲಿ ಈಸ್ಟ್ ಡಿಸಿಪಿ ಶರಣಪ್ಪ ಭದ್ರತೆ ಪರಿಶೀಲನೆ ಮುಗಿಸಿದ್ದು, ಶಾಂತಿಯುತ ಧರಣಿ ನಡೆಸಲು ಸೂಚನೆ ನೀಡಿದ್ದಾರೆ.

  • ಬಂದ್ ಯಾವುದೇ ಪರಿಣಾಮ ಬೀರದು – ಸಿಎಂ ಬಿಎಸ್‍ವೈ

    ಬಂದ್ ಯಾವುದೇ ಪರಿಣಾಮ ಬೀರದು – ಸಿಎಂ ಬಿಎಸ್‍ವೈ

    ಬೆಂಗಳೂರು: ವಿವಿಧ ಕಾರ್ಮಿಕ ಸಂಘಟನೆಗಳು ಬುಧವಾರ ಕರೆ ನೀಡಿರುವ ಬಂದ್ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

    ರಾಜ್ಯದ ಎಲ್ಲಾ ನಗರಗಳು, ಅದರಲ್ಲೂ ಬೆಂಗಳೂರಿನಲ್ಲಿ ಜನಜೀವನ ಎಂದಿನಂತೆ ಸಾಮಾನ್ಯವಾಗಿರುತ್ತದೆ ಮತ್ತು ಜನರ ದಿನನಿತ್ಯದ ಕಾರ್ಯಗಳಿಗೆ ಯಾವುದೇ ತಡೆ ಇರುವುದಿಲ್ಲ. ಶಾಲಾ-ಕಾಲೇಜು ಎಂದಿನಂತೆ ಕಾರ್ಯನಿರ್ವಹಿಸುತ್ತವೆ ಮತ್ತು ಸಾರಿಗೆ ಕೂಡ ಸಾಮಾನ್ಯವಾಗಿರುತ್ತದೆ.

    ಯಾವುದೇ ಸಮಾಜ ವಿರೋಧಿ ಶಕ್ತಿಗಳು ಬಂದ್ ನಲ್ಲಿ ಭಾಗವಹಿಸಲು ಒತ್ತಾಯ ಮಾಡಿದರೆ ಅಥವಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲು ಪ್ರಯತ್ನಿಸಿದರೆ ಅಂತಹವರ ವಿರುದ್ಧ ಪೊಲೀಸ್ ವ್ಯವಸ್ಥೆ ಕಠಿಣ ಕ್ರಮ ಕೈಗೊಳ್ಳುತ್ತದೆ. ಬಂದ್‍ಗಳು ಜನವಿರೋಧಿ ಎಂದು ಹಿಂದೆ ಸರ್ವೋಚ್ಛ ನ್ಯಾಯಾಲಯ ಹೇಳಿದೆ. ಈ ವಿಷಯ ಬಂದ್‍ಗೆ ಕರೆ ಕೊಟ್ಟವರ ಗಮನದಲ್ಲಿ ಇರಬೇಕು.

    ಜನರು ಯಾವುದೇ ಪ್ರಚೋದನೆಗೆ ಒಳಗಾಗದೆ ಶಾಂತಿ ಕಾಪಾಡಿಕೊಂಡು ತಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕು ಎನ್ನುವುದು ನನ್ನ ಕಳಕಳಿಯ ಮನವಿ ಎಂದು ಮುಖ್ಯಮಂತ್ರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಭಾರತ್ ಬಂದ್‍ಗೆ ಸಕಲ ಬಂದೋಬಸ್ತ್ ಆಗಿದೆ – ಬಸವರಾಜ್ ಬೊಮ್ಮಾಯಿ

    ಭಾರತ್ ಬಂದ್‍ಗೆ ಸಕಲ ಬಂದೋಬಸ್ತ್ ಆಗಿದೆ – ಬಸವರಾಜ್ ಬೊಮ್ಮಾಯಿ

    ಉಡುಪಿ: ನಾಳೆ ಭಾರತ್ ಬಂದ್‍ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದು, ರಾಜ್ಯಾದ್ಯಂತ ಕಾನೂನು ಸುವ್ಯವಸ್ಥೆ ಕ್ರಮ ಕೈಗೊಂಡಿದ್ದೇವೆ. ಎಲ್ಲಾ ಬಂದೋಬಸ್ತ್ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.

    ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಐಟಿಯು ಅಧ್ಯಕ್ಷ ಅನಂತ್ ಸುಬ್ಬರಾವ್ ಮುಷ್ಕರ ಮಾಡೋದಾಗಿ ಹೇಳಿದ್ದಾರೆ. ಪ್ರತಿಭಟನೆಗೆ ಅವಕಾಶ ಕಲ್ಪಿಸಲಾಗಿದೆ, ಮೆರವಣಿಗೆಗೆ ಅವಕಾಶ ಇಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ದಿನನಿತ್ಯದ ಚಟುವಟಿಕೆಗೆ ಸಮಸ್ಯೆ ಇಲ್ಲ ಎಂದು ತಿಳಿಸಿದರು.

    ಬಂದ್ ಇರೋದಿಲ್ಲ, ಅಗತ್ಯ ವಸ್ತುಗಳು ಸಿಗುತ್ತವೆ. ಶಾಲಾ ಕಾಲೇಜುಗಳು ತೆರೆದಿರುತ್ತದೆ. ರಾಜ್ಯದ ಜನ ಗಾಬರಿಯಾಗುವುದು ಬೇಡ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಭೆ ಮಾಡಿದ್ದೇವೆ. ಪ್ರತಿಭಟನೆಗೆ ಅವಕಾಶ ಕೊಡಲಾಗಿದೆ. ಮೆರವಣಿಗೆ, ಬಂದ್ ಮಾಡಿಸಲು ಅವಕಾಶ ಇಲ್ಲ ಎಂದು ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

  • ಸಾರಿಗೆ ಸಿಬ್ಬಂದಿಗೆ ಡಿಸಿಎಂ ಸವದಿ ವಾರ್ನಿಂಗ್

    ಸಾರಿಗೆ ಸಿಬ್ಬಂದಿಗೆ ಡಿಸಿಎಂ ಸವದಿ ವಾರ್ನಿಂಗ್

    ಬೆಂಗಳೂರು: ನಾಳೆ ನಡೆಯುವ ಭಾರತ್ ಬಂದ್ ನಲ್ಲಿ ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ ಸಿಬ್ಬಂದಿ ಭಾಗವಹಿಸಬಾರದು. ಸಂಸ್ಥೆಯ ಕೆಲಸಕ್ಕೆ ಗೈರು ಹಾಜರಾದರೆ ಅಂತಹವರ ವೇತನವನ್ನು ಕಡಿತಗೊಳಿಸಲಾಗುವುದು ಹಾಗೂ ಅವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದೆಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಾರಿಗೆ ಸಿಬ್ಬಂದಿಗೆ ವಾರ್ನಿಂಗ್ ಕೊಟ್ಟಿದ್ದಾರೆ.

    ಸಾರಿಗೆ ನಿಗಮಗಳನ್ನು ಸರ್ಕಾರವು ಸಾರ್ವಜನಿಕ ಅಗತ್ಯ ಸೇವಾ ಸಂಸ್ಥೆ ಎಂದು ಘೋಷಿಸಿದೆ. ಆ ಪ್ರಕಾರ ಸಮರ್ಪಕವಾದ ಸಾರಿಗೆ ಸೌಲಭ್ಯವನ್ನು ಒದಗಿಸುವುದು ಪ್ರತಿಯೊಬ್ಬ ಅಧಿಕಾರಿ ಹಾಗೂ ನೌಕರರ ಆದ್ಯ ಕರ್ತವ್ಯವಾಗಿದೆ. ಹೀಗಾಗಿ ಕೆ.ಎಸ್.ಆರ್.ಟಿ.ಸಿ ಹಾಗೂ ಬಿಎಂಟಿಸಿ ಎಂದಿನಂತೆ ಕಾರ್ಯ ನಿರ್ವಹಿಸಬೇಕೆಂದು ಮುನ್ನೆಚ್ಚರಿಕೆ ನೀಡಲಾಗಿದೆಂದು ತಿಳಿಸಿದ್ದಾರೆ.

    ಸಾರ್ವಜನಿಕರಿಗೆ ಅಗತ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಬಂದ್-ಮುಷ್ಕರದಲ್ಲಿ ಭಾಗವಹಿಸುವ ಯಾರೊಬ್ಬರೂ ಸರ್ಕಾರಿ ಆಸ್ತಿ- ಪಾಸ್ತಿಗಳಿಗೆ ಅದರಲ್ಲೂ ವಿಶೇಷವಾಗಿ ಸಾರಿಗೆ ಬಸ್ಸುಗಳಿಗೆ ಹಾನಿ ಉಂಟುಮಾಡುವ ದುಷ್ಕೃತ್ಯಕ್ಕೆ ಮುಂದಾಗಬಾರದು. ಒಂದು ವೇಳೆ ಕಾನೂನು ಉಲ್ಲಂಘಿಸಿ ಅಹಿತಕರ ಘಟನೆಗಳಿಗೆ ಯತ್ನಿಸಿದ್ದಲ್ಲಿ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಹಿಂದೆ ಮುಂದೆ ನೋಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

    ಈ ರೀತಿಯ ಬಂದ್‍ಗಳಿಂದಾಗಿ ನಮ್ಮ ಸರ್ಕಾರಿ ಸಂಸ್ಥೆಗಳಿಗೆ ನಷ್ಟವಾಗುವುದಲ್ಲದೇ ರಾಷ್ಟ್ರದ ಆರ್ಥಿಕ ಚಟುವಟಿಕೆಗಳು ಅಧೋಗತಿಗೆ ತಲುಪುವಂತಾಗುತ್ತದೆ ಎಂದು ಪ್ರಕಟನೆ ಹೊರಡಿಸಿದ್ದಾರೆ.

  • ಕದಂಬ ನೌಕಾನೆಲೆಯಲ್ಲಿ ಸ್ಮಾರ್ಟ್ ಫೋನ್, ಇಂಟರ್‌ನೆಟ್ ಬಂದ್

    ಕದಂಬ ನೌಕಾನೆಲೆಯಲ್ಲಿ ಸ್ಮಾರ್ಟ್ ಫೋನ್, ಇಂಟರ್‌ನೆಟ್ ಬಂದ್

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅರಗಾ ಬಳಿ ಇರುವ ಕದಂಬ ನೌಕಾನೆಲೆ ಸೇರಿದಂತೆ ಭಾರತೀಯ ನೌಕಾದಳದಲ್ಲಿ ಇಂದಿನಿಂದಲೇ ಜಾರಿ ಬರುವಂತೆ ಸ್ಮಾರ್ಟ್ ಫೋನ್, ಫೇಸ್‍ಬುಕ್ ಹಾಗೂ ಇಂಟರ್‌ನೆಟ್ ಬಳಕೆಗೆ ಭಾರತೀಯ ನೌಕಾಪಡೆ ನಿಷೇಧ ಹೇರಿದೆ.

    ಕಳೆದ ತಿಂಗಳು ಪಾಕಿಸ್ತಾನದ ಹನಿಟ್ರ್ಯಾಪ್ ಬಲೆಗೆ ಸಿಲುಕಿ, ಭಾರತದ ಭದ್ರತೆಗೆ ಸಂಬಂಧಿಸಿದ ಬಹುಮುಖ್ಯ ರಹಸ್ಯ ಮಾಹಿತಿಗಳನ್ನು ರವಾನಿಸುತ್ತಿದ್ದ ಆರೋಪದ ಮೇರೆಗೆ ಸುಮಾರು 10 ಮಂದಿಯನ್ನು ಬಂಧಿಸಲಾಗಿತ್ತು. ಜಿಲ್ಲೆಯ ಕಾರವಾರದ ಅರಗಾದ ಕದಂಬ ನೌಕಾನೆಲೆಯ ಇಬ್ಬರು, ಭಾರತೀಯ ನೌಕಾಪಡೆಯ ಒಟ್ಟು 7 ಸಿಬ್ಬಂದಿ ಹಾಗೂ ಓರ್ವ ಹವಾಲ ವ್ಯವಹಾರದ ವ್ಯಕ್ತಿಯನ್ನು ಆಂಧ್ರ ಪೋಲೀಸರು ಬಂಧಿಸಿದ್ದರು.

    ಹೀಗಾಗಿ ಭಾರತೀಯ ನೌಕಾಪಡೆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ನೌಕಾ ಸಿಬ್ಬಂದಿ ಸಮುದ್ರ ನೆಲೆಯಲ್ಲಿ ಸಾಮಾಜಿಕ ಮಾಧ್ಯಮಗಳು ಹಾಗೂ ಸ್ಮಾರ್ಟ್ ಫೋನ್ ಬಳಸುವುದನ್ನು ನಿಷೇಧಿಸಿದೆ. ಈ ಹಿಂದೆ ಇಂಟರ್ ನೆಟ್, ಸ್ಮಾರ್ಟ್ ಫೋನ್ ಬಳಸುವುದಕ್ಕೆ ಯಾವುದೇ ಅಡ್ಡಿ ಇರಲಿಲ್ಲ. ಆದರೆ ಏಳು ಜನ ನೌಕಾ ಸಿಬ್ಬಂದಿ ಬಂಧನದ ನಂತರ ಮೊಬೈಲ್ ಬಳಕೆಯಿಂದಲೇ ದೊಡ್ಡ ದೊಡ್ಡ ಮಾಹಿತಿ ಪಾಕಿಸ್ತಾನ ಗುಪ್ತ ದಳಕ್ಕೆ ಹಂಚಿಕೆಯಾಗಿತ್ತು.

    ಇದಲ್ಲದೇ ದೊಡ್ಡ ಅಧಿಕಾರಿಗಳನ್ನು ಸಹ ಹನಿಟ್ರ್ಯಾಪ್ ಮೂಲಕ ಬಲೆಗೆ ಬೀಳಿಸಿಕೊಂಡ ಪಾಕಿಸ್ತಾನ ಗುಪ್ತದಳ ಇಲಾಖೆ ನೌಕಾದಳದವರಿಂದ ಹಲವು ಮಾಹಿತಿ ಪಡೆದಿತ್ತು. ಈ ಹಿನ್ನೆಲೆಯಲ್ಲಿ ಭಾರತೀಯ ನೌಕಾದಳ ಈ ನಿರ್ಧಾರ ಕೈಗೊಂಡಿದೆ.

  • ಮಡಿಕೇರಿ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ – ಮುಸ್ಲಿಂ ಸಮುದಾಯದ ಅಂಗಡಿಗಳು ನಗರದಲ್ಲಿ ಬಂದ್

    ಮಡಿಕೇರಿ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ – ಮುಸ್ಲಿಂ ಸಮುದಾಯದ ಅಂಗಡಿಗಳು ನಗರದಲ್ಲಿ ಬಂದ್

    ಮಡಿಕೇರಿ: ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ಮತ್ತು ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಶೂಟೌಟ್‍ಗೆ ಕೊಡಗಿನಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

    ಮಂಗಳೂರಿನಲ್ಲಿ ನಡೆದ ಇಬ್ಬರ ಗೋಲಿಬಾರ್ ಗೆ ಇಂದು ಕೂಡ ಮಡಿಕೇರಿಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಲಾಗಿದೆ. ಮಡಿಕೇರಿಯ ಮಾರುಕಟ್ಟೆ, ಇಂದಿರಾಗಾಂಧಿ ವೃತ್ತ ಮತ್ತು ಮಹದೇವ್ ಪೇಟೆ ಸೇರಿದಂತೆ ವಿವಿಧೆಡೆ ಅಂಗಡಿಮುಂಗಟ್ಟುಗಳನ್ನು ಮುಚ್ಚಿ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.

    ಇಂದು ಬೆಳಗ್ಗೆ ಆರು ಗಂಟೆಯಿಂದಲೇ ಅಂಗಡಿಗಳನ್ನು ತೆರೆಯದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಜೆ ಆರು ಗಂಟೆಯವರೆಗೆ ಅಂಗಡಿಗಳನ್ನು ಮುಚ್ಚಲಿದ್ದು, ಪರಿಣಾಮ ಮಡಿಕೇರಿಯ ರಸ್ತೆಗಳಲ್ಲಿ ಜನಗಳ ಓಡಾಟ ಕಡಿಮೆಯಾಗಿದೆ.

    ಮುಸ್ಲಿಂ ಸಮುದಾಯದ ವ್ಯಾಪಾರಸ್ಥರು ಮಾತ್ರ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದು, ಉಳಿದಂತೆ ಬೇರೆ ಸಮುದಾಯದ ವ್ಯಾಪಾರಸ್ಥರು ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಹೀಗಾಗಿ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

  • ಗೋರಿಪಾಳ್ಯದಲ್ಲಿ ಸ್ವಯಂ ಪ್ರೇರಿತವಾಗಿ ವ್ಯಾಪಾರಿಗಳಿಂದ ಅಂಗಡಿಗಳು ಬಂದ್

    ಗೋರಿಪಾಳ್ಯದಲ್ಲಿ ಸ್ವಯಂ ಪ್ರೇರಿತವಾಗಿ ವ್ಯಾಪಾರಿಗಳಿಂದ ಅಂಗಡಿಗಳು ಬಂದ್

    ಬೆಂಗಳೂರು: ಅಯೋಧ್ಯೆ ತೀರ್ಪು ಇಂದು ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಗೋರಿಪಾಳ್ಯದಲ್ಲಿ ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ಬಂದ್ ಮಾಡಲಾಗಿದೆ.

    ಈ ಸಮಯಕ್ಕೆ ಗೋರಿಪಾಳ್ಯದಲ್ಲಿ ಎಂದಿನಂತೆ ಅಂಗಡಿಗಳು ಓಪನ್ ಮಾಡಲಾಗುತ್ತೆ. ಆದರೆ ಇಂದು ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಮಾಡಲಾಗಿದೆ. ಚಾಮರಾಮಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನಸಂಖ್ಯೆ ವಿರಳವಾಗಿದೆ.

    ಗೋರಿಪಾಳ್ಯ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಬಹುತೇಕ ಅಂಗಡಿ ಮುಗ್ಗಟ್ಟುಗಳು ಇನ್ನೂ ಓಪನ್ ಆಗಿಲ್ಲ. ಮತ್ತೆ ಕೆಲವು ಮಂದಿ ಹತ್ತು ಗಂಟೆಯ ನಂತರ ಪರಿಸ್ಥಿತಿ ನೋಡಿಕೊಂಡು ಅಂಗಡಿ ತೆರೆಯಲು ನಿರ್ಧರಿಸಿದ್ದಾರೆ.

    ವ್ಯಾಪಾರಿಗಳು ಮಾರ್ಕೆಟ್ ಏರಿಯಾಗಳಲ್ಲಿ ಎಂದಿನಂತೆ ಅಂಗಡಿ ಓಪನ್ ಮಾಡಿದ್ದಾರೆ.

  • ಮುಸ್ಲಿಂ ಯುವಕರ ಬಿಡುಗಡೆ ಖಂಡಿಸಿ ನಾಳೆ ಕೆಆರ್ ಪೇಟೆ ಬಂದ್

    ಮುಸ್ಲಿಂ ಯುವಕರ ಬಿಡುಗಡೆ ಖಂಡಿಸಿ ನಾಳೆ ಕೆಆರ್ ಪೇಟೆ ಬಂದ್

    ಮಂಡ್ಯ: ಮುಸ್ಲಿಂ ಯುವಕರನ್ನು ಬಂಧನ ಮಾಡಿ, ಜಾಮೀನಿನ ಮೇಲೆ ಬಿಡುಗಡೆಗೊಳಿಸಿರುವುದನ್ನು ಖಂಡಿಸಿ ನಾಳೆ ಹಿಂದೂಪರ ಮತ್ತು ಕನ್ನಡ ಪರ ಸಂಘಟನೆಗಳು ಕೆಆರ್ ಪೇಟೆ ಬಂದ್‍ಗೆ ಕರೆ ನೀಡಿವೆ.

    ಅಕ್ಟೋಬರ್ 27 ರಂದು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಆಲಂಬಾಡಿಕಾವಲು ಬಳಿ ಮುಸ್ಲಿಂ ಯುವಕರು ಅನುಮಾನಾಸ್ಪದವಾಗಿ ಪೇರೆಡ್ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ 16 ಮುಸ್ಲಿಂ ಯುವಕರನ್ನು ಬಂಧಿಸಿದ್ದರು.

    ನಂತರ ಅವರು ಪಿಎಸ್‍ಎಫ್ ಸಂಘಟನೆಯ ಕಾರ್ಯಕರ್ತರು ಎಂದು ತಿಳಿದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಇದೀಗ ಇದನ್ನು ಖಂಡಿಸಿ ನಾಳೆ ಕೆಆರ್ ಪೇಟೆ ಬಂದ್‍ಗೆ ಸಂಘಟನೆಗಳು ಕರೆ ನೀಡಿವೆ. ಕೆಆರ್ ಪೇಟೆ ಭಾಗದಲ್ಲಿ ದೇಶ ವಿರೋಧಿ ಚಟುವಟಿಗಳು ನಡೆಯುತ್ತಿವೆ. ಆದರೆ ಪೊಲೀಸರು ಕಣ್ಮುಚ್ಚಿ ಕುಳಿತಿದ್ದು, ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಮೂರು ದಿನಗಳ ಹಿಂದೆ ಬಂಧನ ಮಾಡಿ ಬಿಡುಗಡೆ ಮಾಡಿರುವ ಯುವಕರು ಸಹ ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದರು ಎಂದು ಆರೋಪಿಸಿದ್ದಾರೆ.

    ಪೊಲೀಸರು ಯಾರದ್ದೋ ಒತ್ತಡಕ್ಕೆ ಮಣಿದು ಯುವಕರ ಮೇಲೆ ಸಣ್ಣಪುಟ್ಟ ಪ್ರಕರಣಗಳನ್ನು ದಾಖಲಿಸಿ, ನಂತರ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದಾರೆ. ಬಿಡುಗಡೆ ಮಾಡಿರುವ ಯುವಕರನ್ನು ಮತ್ತೆ ಬಂಧಿಸಿ, ಕೆಆರ್ ಪೇಟೆ ಭಾಗದಲ್ಲಿ ನಡೆಯುತ್ತಿರುವ ದೇಶ ವಿರೋಧಿ ಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕು ಎಂದು ಹಿಂದೂ ಪರ ಮತ್ತು ಕನ್ನಡ ಪರ ಸಂಘಟನೆಗಳು ಬಂದ್‍ಗೆ ಕರೆ ನೀಡಿವೆ.

    ಕೆಆರ್ ಪೇಟೆಯನ್ನು ಬಂದ್ ಮಾಡಿ ಬೃಹತ್ ಪ್ರತಿಭಟನೆ ಮಾಡಲು ಈಗಾಗಲೇ ಸಂಘಟನೆಗಳು ನಿರ್ಧರಿಸಿವೆ. ಈ ಪ್ರತಿಭಟನೆಯಲ್ಲಿ ಹಲವು ಮಠಗಳ ಮಠಾಧೀಶರುಗಳು ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಪೊಲೀಸರು ಬಿಗಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಿದ್ದಾರೆ.

  • ತೀವ್ರ ಸ್ವರೂಪ ಪಡೆದ ಜಮಖಂಡಿ ಜಿಲ್ಲಾ ಬೇಡಿಕೆ – ಇಂದು ಬಂದ್

    ತೀವ್ರ ಸ್ವರೂಪ ಪಡೆದ ಜಮಖಂಡಿ ಜಿಲ್ಲಾ ಬೇಡಿಕೆ – ಇಂದು ಬಂದ್

    ಬಾಗಲಕೋಟೆ: ಜಮಖಂಡಿ ಹೊಸ ಜಿಲ್ಲೆ ಮಾಡಬೇಕು ಎಂಬ ಹೋರಾಟ ತೀವ್ರ ಸ್ವರೂಪ ಪಡೆದಿದ್ದು, ಇಂದು ಜಮಖಂಡಿ ನಗರ ಬಂದ್‍ಗೆ ಕರೆ ನೀಡಲಾಗಿದೆ.

    ಜಮಖಂಡಿ ಜಿಲ್ಲಾ ಸಂಕಲ್ಪ ಹೋರಾಟ ಸಮಿತಿಯಿಂದ ಬಂದ್ ಗೆ ಕರೆ ನೀಡಿದ್ದು, ಅಂಗಡಿಮುಂಗಟ್ಟು ವ್ಯಾಪಾರ ವಹಿವಾಟು ಬಂದ್ ಆಗಲಿದೆ. ಇದರ ಜೊತೆಗೆ ಬಸ್ ಸಂಚಾರ ಸೇರಿದಂತೆ ಎಲ್ಲ ಸಾರಿಗೆ ವ್ಯವಸ್ಥೆ ಇಂದು ಬಂದ್ ಆಗಲಿದೆ.

    ಈ ಬಂದ್‍ನಲ್ಲಿ ಶಾಲಾ ಕಾಲೇಜು, ಸರ್ಕಾರಿ ಕಚೇರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಈ ಬಂದ್‍ನಲ್ಲಿ ಪಕ್ಷಾತೀತವಾಗಿ ಎಲ್ಲ ರಾಜಕೀಯ ಮುಖಂಡರು ಭಾಗಿಯಾಗಲಿದ್ದು, ಜಮಖಂಡಿ ಕಾಂಗ್ರೆಸ್ ಶಾಸಕ ಆನಂದ ನ್ಯಾಮಗೌಡ ಮತ್ತು ತೇರದಾಳ ಬಿಜೆಪಿ ಶಾಸಕ ಸಿದ್ದು ಸವದಿ ಭಾಗಿಯಾಗಲಿದ್ದಾರೆ.

    ಇಂದು ನಗರದಲ್ಲಿ ಬೃಹತ್ ಪ್ರತಿಭಟನೆ ರ‍್ಯಾಲಿ ನಡೆಯಲಿದ್ದು, ಹೋರಾಟದ ನೇತೃತ್ವವನ್ನು ಜಮಖಂಡಿ ಓಲೆ ಮಠದ ಚನ್ನಬಸವ ಸ್ವಾಮೀಜಿ ವಹಿಸಿದ್ದಾರೆ. ಪ್ರತಿಭಟನೆಯಲ್ಲಿ ಜಿಲ್ಲಾ ಸಂಕಲ್ಪ ಹೋರಾಟ ಸಮಿತಿ ಸದಸ್ಯರು, ಜಮಖಂಡಿ ಭಾಗದ 25ಕ್ಕೂ ಹೆಚ್ಚು ಮಠಾಧೀಶರು ಮತ್ತು ಸಾರ್ವಜನಿಕರು ಭಾಗಿಯಾಗಲಿದ್ದಾರೆ. ಬೆಳಗ್ಗೆ 10 ಗಂಟೆಗೆ ನಗರದಲ್ಲಿ ಪ್ರತಿಭಟನಾ ರ್ಯಾಲಿ ಶುರುವಾಗಲಿದ್ದು, ಹನುಮಾನ ಚೌಕದಿಂದ ದೇಸಾಯಿ ವೃತ್ತದವರೆಗೆ ಪ್ರತಿಭಟನಾ ರ‍್ಯಾಲಿ ಸಾಗಲಿದೆ.

    ಈಗಾಗಲೇ ಹೊಸ ಜಿಲ್ಲೆ ಹೋರಾಟಕ್ಕೆ ಶಾಸಕರಾದ ಆನಂದ ನ್ಯಾಮಗೌಡ ಮತ್ತು ಸಿದ್ದು ಸವದಿ ಬೆಂಬಲಿಸೋದಾಗಿ ಹೇಳಿದ್ದು, ನಾಳೆ ಜಿಲ್ಲೆಗೆ ಸಿಎಂ ಯಡಿಯೂರಪ್ಪ ಭೇಟಿ ನೀಡಲಿದ್ದಾರೆ. ಈ ಭೇಟಿ ವೇಳೆ ಹೋರಾಟಗಾರರು ಸಿಎಂಗೆ ಹೊಸ ಜಿಲ್ಲೆ ಮಾಡಬೇಕು ಎಂದು ಮನವಿ ಸಲ್ಲಿಸಲಿದ್ದಾರೆ.