Tag: ಬಂದ್

  • ನಿಯಮ ಮೀರಿ ಚಾಮರಾಜಪೇಟೆ ಬಂದ್ ಮಾಡಿದ್ರೆ ಕಠಿಣ ಕ್ರಮ: ಪೊಲೀಸರ ಎಚ್ಚರಿಕೆ

    ನಿಯಮ ಮೀರಿ ಚಾಮರಾಜಪೇಟೆ ಬಂದ್ ಮಾಡಿದ್ರೆ ಕಠಿಣ ಕ್ರಮ: ಪೊಲೀಸರ ಎಚ್ಚರಿಕೆ

    ಬೆಂಗಳೂರು: ಒಂದು ವೇಳೆ ನಿಯಮ ಮೀರಿ ಚಾಮರಾಜಪೇಟೆ ಠಾಣಾ ವ್ಯಾಪ್ತಿಯಲ್ಲಿ ಬಂದ್ ಮಾಡಿದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತೆ ಎಂದು ಚಾಮರಾಜಪೇಟೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

    ಜುಲೈ-12 ರಂದು ಚಾಮರಾಜಪೇಟೆ ಬಂದ್‍ಗೆ ಕರೆ ನೀಡಲಾಗಿದೆ. ಆದರೆ ಈ ಬಂದ್‍ಗೆ ಚಾಮರಾಜಪೇಟೆಯಲ್ಲಿ ಅನುಮತಿಯಿಲ್ಲ. ಈ ಹಿನ್ನೆಲೆ ಪೊಲೀಸರು ಚಾಮರಾಜಪೇಟೆ ಒಕ್ಕೂಟ ಸಂಘಟನೆಗಳಿಗೆ ಪತ್ರ ಬರೆದಿದ್ದು, ರ‍್ಯಾಲಿ, ಮುಷ್ಕರ, ಮೆರವಣಿಗೆ ಅಥವಾ ಒತ್ತಾಯ ಪೂರ್ವಕ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡುವಂತಿಲ್ಲ. ಪ್ರತಿಭಟನೆ, ರ‍್ಯಾಲಿ ನಡೆಸುವುದಕ್ಕೆ ಕೇವಲ ಫ್ರೀಡಂ ಪಾರ್ಕ್‍ನಲ್ಲಿ ಮಾತ್ರ ಅವಕಾಶವಿದೆ ಎಂದು ಸೂಚನೆ ಕೊಟ್ಟಿದ್ದಾರೆ.

    ಒಂದು ವೇಳೆ ನಿಯಮ ಮೀರಿ ಚಾಮರಾಜಪೇಟೆ ಠಾಣಾ ವ್ಯಾಪ್ತಿಯಲ್ಲಿ ಬಂದ್ ಮಾಡಿದರೆ ಸೂಕ್ತ ಕ್ರಮ ತೆಗೆದುಕೊಳ್ಳಾಗುತ್ತೆ ಎಂದು ಎಚ್ಚರಿಕೆಯನ್ನು ಕೊಟ್ಟಿದ್ದಾರೆ. ಇದನ್ನೂ ಓದಿ: ಜುಲೈ 12ಕ್ಕೆ ಚಾಮರಾಜಪೇಟೆ ಬಂದ್ – ಬೆಂಬಲ ನೀಡಲು ಮುಸ್ಲಿಂ ವ್ಯಾಪಾರಿಗಳು ನಿರಾಕರಣೆ

    ಬಂದ್ ಯಾಕೆ?
    ಈದ್ಗಾ ಮೈದಾನ ವಕ್ಫ್ ಬೋರ್ಡ್‍ಗೆ ಸೇರಿದ್ದು ಎಂಬ ಪಾಲಿಕೆಯ ಹೇಳಿಕೆ ಖಂಡಿಸಿ ಜುಲೈ 12ಕ್ಕೆ ಚಾಮರಾಜಪೇಟೆ ಬಂದ್‍ಗೆ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಕರೆ ನೀಡಿದೆ.

    ಈದ್ಗಾ ಮೈದಾನ ಸರ್ಕಾರದ ಆಸ್ತಿ. ವರ್ಷಕ್ಕೆ ಎರಡು ಬಾರಿ ಮಾತ್ರ ಇಲ್ಲಿ ನಮಾಜ್ ಮಾಡಲು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಹೀಗಿದ್ದರೂ ಈದ್ಗಾ ಮೈದಾನ ವಕ್ಫ್ ಬೋರ್ಡ್‍ಗೆ ಸೇರಿದೆ ಎಂದು ಹೇಳಿ ಗೊಂದಲ ಮೂಡಿಸುತ್ತಿದೆ. ಶಾಸಕ ಜಮೀರ್ ಹೇಳಿದಂತೆ ಕೆಲಸ ಮಾಡುತ್ತಿದೆ. ಇದು ಆಟದ ಮೈದಾನವಾಗಿಯೇ ಇರಬೇಕು ಎಂದು ಆಗ್ರಹಿಸಿ ನಾಗರಿಕರು ಬಂದ್‍ಗೆ ಕರೆ ನೀಡಿದ್ದಾರೆ. ಇದನ್ನೂ ಓದಿ: ಜು.12ಕ್ಕೆ ಬೆಂಗಳೂರಿನ ಚಾಮರಾಜಪೇಟೆ ಬಂದ್‌

    Live Tv
    [brid partner=56869869 player=32851 video=960834 autoplay=true]

  • ಈದ್ಗಾ ಆಟದ ಮೈದಾನವಾಗಿಯೇ ಉಳಿಯಬೇಕು – ರಕ್ತ ಕೊಟ್ಟಾದರೂ ಉಳಿಸಿಕೊಳ್ತೇವೆ

    ಈದ್ಗಾ ಆಟದ ಮೈದಾನವಾಗಿಯೇ ಉಳಿಯಬೇಕು – ರಕ್ತ ಕೊಟ್ಟಾದರೂ ಉಳಿಸಿಕೊಳ್ತೇವೆ

    ಬೆಂಗಳೂರು: ಈದ್ಗಾ ವಿವಾದದ ಕಿಚ್ಚು ಮತ್ತೆ ಹೆಚ್ಚಾಗುತ್ತಿದೆ. ಜುಲೈ 12ಕ್ಕೆ ಚಾಮರಾಜಪೇಟೆಯನ್ನು ಸಂಪೂರ್ಣ ಬಂದ್ ಮಾಡಲು ಕ್ಷೇತ್ರದ ಜನ ನಿರ್ಧರಿಸಿದ್ದಾರೆ. ಹೀಗಾಗಿ ಮನೆ, ಮನೆಗೆ ಭಿತ್ತಿಪತ್ರಗಳನ್ನು ಹಂಚಲು ತೀರ್ಮಾನಿಸಿ ಈದ್ಗಾ ಆಟದ ಮೈದಾನವಾಗಿಯೇ ಉಳಿಯಬೇಕೆಂಬ ನಿರ್ಧಾರಕ್ಕೆ ಸ್ಥಳೀಯರು ಬಂದಿದ್ದಾರೆ.


    ಈದ್ಗಾ ಆಟದ ಮೈದಾನ ವಿವಾದ, ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಮೈದಾನವನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡಲ್ಲ. ರಕ್ತಕೊಟ್ಟಾದ್ರೂ ಚಾಮರಾಜಪೇಟೆ ಆಟದ ಮೈದಾನವನ್ನು ಉಳಿಸಿಕೊಳ್ಳುತ್ತೇವೆ ಎಂದು ಸ್ಥಳೀಯರು ಬಿಗಿ ಪಟ್ಟು ಹಿಡಿದಿದ್ದಾರೆ. ಮೈದಾನ ಉಳಿವಿಗಾಗಿ ಇದೇ ತಿಂಗಳು 12ಕ್ಕೆ ಸಂಪೂರ್ಣ ಚಾಮರಾಜಪೇಟೆ ಬಂದ್‍ಗೆ ಕರೆ ನೀಡಲಾಗಿದೆ. ಇದನ್ನೂ ಓದಿ: ದೇಶಕ್ಕೆ ಮಾತಾಡುವ ರಾಷ್ಟ್ರಪತಿ ಬೇಕು; ನಾನು ಗೆದ್ದರೆ ದೇಶದ್ರೋಹ ಕಾನೂನು ರದ್ದು ಮಾಡ್ತೀನಿ – ಯಶವಂತ್‌ ಸಿನ್ಹಾ

    ಈದ್ಗಾ ಆಟದ ಮೈದಾನ ಉಳಿವಿಗಾಗಿ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಹಾಗೂ 50ಕ್ಕೂ ಹೆಚ್ಚು ಸಂಘಟನೆಗಳು ಸೇರಿ ಬಂದ್‍ಗೆ ಕರೆಯನ್ನು ನೀಡಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಸಿರ್ಸಿ ಸರ್ಕಲ್ ನಿಂದ ಈದ್ಗಾ ಮೈದಾನದವರೆಗೆ ಬೃಹತ್ ರ‍್ಯಾಲಿ ನಡೆಸಲು ನಿರ್ಧರಿಸಲಾಗಿದೆ. ಕ್ಷೇತ್ರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ, ಪಶ್ಚಿಮ ವಲಯದ ಜಂಟಿ ಆಯುಕ್ತರಿಗೆ ಮನವಿ ಪತ್ರ ನೀಡಲಿದ್ದಾರೆ. ಇಂದಿನಿಂದ ಮನೆ ಮನೆಗೆ ತೆರಳಿ ಭಿತ್ತಿಪತ್ರವನ್ನ ನೀಡಿ, ಬಂದ್‍ನಲ್ಲಿ ಭಾಗಿಯಾಗುವಂತೆ ಕರೆ ನೀಡಲು ಸ್ಥಳೀಯರು ಮುಂದಾಗಿದ್ದಾರೆ. ಇದನ್ನೂ ಓದಿ: ಸಿದ್ದರಾಮೋತ್ಸವ ನಡೆಸುವುದು ತಪ್ಪಲ್ಲ: ಜಿ. ಪರಮೇಶ್ವರ್


    ಇಂದು ಚಾಮರಾಜಪೇಟೆಯ ಜಂಗಮ ಮಂಟಪದಲ್ಲಿ ನಡೆದ ಸಭೆಯಲ್ಲಿ ಜಯಕರ್ನಾಟಕ ಸಂಘಟನೆ ಬಂದ್‍ಗೆ ಕರೆ ನೀಡಿತು. ಇದಕ್ಕೆ ಉಳಿದ ಸಂಘಟನೆಗಳು ಕೂಡ ಒಪ್ಪಿಗೆ ಸೂಚಿಸಿದವು. ಬಂದ್ ದಿನ ಜನ ಸ್ವಯಂ ಪ್ರೇರಿತವಾಗಿ ಬರ್ತಾರೆ. ನಮ್ಮ ರ‍್ಯಾಲಿಯನ್ನು ಪೊಲೀಸರು ತಡೆದ್ರೆ, ಸರಿಯಿರಲ್ಲ. ಯಾರೇ ಬಂದ್ರೂ ನಮ್ಮನ್ನು ತಡೆಯೋಕೆ ಆಗಲ್ಲ ಎಂದು ಸ್ಥಳೀಯರು ಎಚ್ಚರಿಸಿದ್ದಾರೆ. ಬಿಬಿಎಂಪಿ, ವಕ್ಫ್ ಬೋರ್ಡ್ ಜಟಾಪಟಿ ನಡುವೆ ಸ್ಥಳೀಯರೇ ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾಗಿದ್ದಾರೆ.

    Live Tv

  • ಮತ್ತೆ ಬಂದ್ ಆಗ್ತಿದೆಯಾ ಶಿರಾಡಿ ಘಾಟ್..?

    ಮತ್ತೆ ಬಂದ್ ಆಗ್ತಿದೆಯಾ ಶಿರಾಡಿ ಘಾಟ್..?

    ಹಾಸನ: ಹೆದ್ದಾರಿ ಕಾಮಗಾರಿ ನಡೆಸುವ ಸಲುವಾರಿ ಶಿರಾಡಿ ರಸ್ತೆಯನ್ನು ಸುಮಾರು ನಾಲ್ಕು ತಿಂಗಳುಗಳ ಕಾಲ ಬಂದ್ ಮಾಡುವ ವಿಚಾರವಾಗಿ ಮತ್ತೆ ಚರ್ಚೆ ಶುರುವಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ, ದೋಣಿಗಾಲ್ ನಿಂದ ಮಾರನಹಳ್ಳಿವರೆಗೆ ಸುಮಾರು 14 ಕಿಲೋಮೀಟರ್ ದೂರ ಶಿರಾಡಿ ಹೆದ್ದಾರಿ ಬಂದ್ ಮಾಡಿ, ಕಾಮಗಾರಿ ನಡೆಸಲು ಗುತ್ತಿಗೆದಾರರು ಮನವಿ ಮಾಡಿದ್ದಾರೆ ಎನ್ನಲಾಗಿದೆ.

    ಬೆಂಗಳೂರಿನಿಂದ ಮಂಗಳೂರು, ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳ ಸೇರಿದಂತೆ ಇನ್ನಿತರ ಸ್ಥಳಗಳಿಗೆ ಹೋಗಲು ಶಿರಾಡಿಘಾಟ್ ರಸ್ತೆಯೇ ಮುಖ್ಯ ರಸ್ತೆಯಾಗಿದೆ. ಅಷ್ಟೇ ಅಲ್ಲದೆ ಚನ್ನೈ ಟು ಮಂಗಳೂರು ಬಂದರಿಗೆ ಕೂಡ ಇದೇ ಶಿರಾಡಿಘಾಟ್ ಮೂಲಕ ಹೋಗಬೇಕು. ಆದರೆ ಶಿರಾಡಿಘಾಟ್ ಬಳಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ರಸ್ತೆ ದುರಸ್ತಿಗೆ ಸುಮಾರು ನಾಲ್ಕು ತಿಂಗಳುಕಾಲ ಶಿರಾಡಿಘಾಟ್ ಬಂದ್ ಮಾಡಬೇಕಾಗುತ್ತದೆ. ಇದನ್ನೂ ಓದಿ: ಜುಲೈ 1 ರಿಂದ ಟೋಲ್ ಶುಲ್ಕ ಹೆಚ್ಚಳ

    ಒಂದು ವೇಳೆ ಶಿರಾಡಿಘಾಟ್ ಬಂದ್ ಆದರೆ ಬದಲಿ ಮಾರ್ಗದ ಮೊರೆ ಹೋಗಬೇಕಾಗುತ್ತದೆ. ಈ ಬಗ್ಗೆ ಹಾಸನ ಜಿಲ್ಲಾಧಿಕಾರಿ, ಮಂಗಳೂರು ಜಿಲ್ಲಾಧಿಕಾರಿ, ಸ್ಥಳೀಯ ಜನಪ್ರತಿನಿಧಿಗಳು ಈ ಹಿಂದೆಯೂ ಚರ್ಚೆ ನಡೆಸಿದ್ದರು. ಆ ವೇಳೆ ಸ್ಥಳೀಯರು ಶಿರಾಡಿಘಾಟ್ ರಸ್ತೆ ಬಂದ್‍ಗೆ ವ್ಯಾಪಕ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಕೂಡ ನಡೆಸಿದ್ದರು. ಹೀಗಾಗಿ ಶಿರಾಡಿಘಾಟ್ ರಸ್ತೆ ಬಂದ್ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. ಇದನ್ನೂ ಓದಿ: ಚಾರ್ಮಾಡಿ ಘಾಟಿಯ ಬಂಡೆಗಳ ಮೇಲೆ ಪ್ರವಾಸಿಗರ ಮೋಜು-ಮಸ್ತಿ- ಸೂಕ್ತ ಕ್ರಮಕ್ಕೆ ಮನವಿ

    ಹಾಸನದಿಂದ ಸಕಲೇಶಪುರದವರೆಗಿನ ಹೆದ್ದಾರಿ ಕಾಮಗಾರಿ ಕಳೆದ 6 ವರ್ಷದಿಂದ ಕುಂಟುತ್ತ ಸಾಗುತ್ತಿದ್ದು, ಇನ್ನೂ ಕೂಡ ಪೂರ್ತಿಯಾಗಿಲ್ಲ. ಅದೇ ರೀತಿ ಶಿರಾಡಿಘಾಟ್ ರಸ್ತೆ ಕಾಮಗಾರಿ ಕೂಡ ವಿಳಂಭವಾದರೆ, ಪ್ರತಿನಿತ್ಯ ಸಂಚರಿಸುವ ಸ್ಥಳೀಯರಿಗೆ ತೊಂದರೆಯಾಗುತ್ತೆ ಎಂದು ಶಿರಾಡಿ ರಸ್ತೆ ಬಂದ್‍ಗೆ ವಿರೋಧ ವ್ಯಕ್ತವಾಗಿತ್ತು. ಇದೀಗ ಮತ್ತೆ ಶಿರಾಡಿಘಾಟ್ ರಸ್ತೆ ಬಂದ್ ಮಾಡುತ್ತಿದ್ದರೆ. ಅಷ್ಟೇ ಅಲ್ಲದೆ ಸಕಲೇಶಪುರ ಹೆಚ್ಚು ಮಳೆಯಾಗುವ ಭಾಗವಾಗಿದ್ದು, ಮಳೆಗಾಲದಲ್ಲಿ ಕಾಮಗಾರಿ ಆರಂಭಿಸಿದ್ರೆ ಹೇಗೆ ಕೆಲಸ ಮಾಡುತ್ತಾರೆ ಎಂಬ ಚರ್ಚೆ ಕೂಡ ಶುರುವಾಗಿದೆ.

    Live Tv

  • ಅಗ್ನಿಪಥ್ ಯೋಜನೆ ವಿರೋಧಿಸಿ ಬೆಳಗಾವಿ ಬಂದ್ ಕರೆ – ರ‍್ಯಾಪಿಡ್ ಆಕ್ಷನ್ ಫೋರ್ಸ್‌ನಿಂದ ಪಂಥ ಸಂಚಲನ

    ಅಗ್ನಿಪಥ್ ಯೋಜನೆ ವಿರೋಧಿಸಿ ಬೆಳಗಾವಿ ಬಂದ್ ಕರೆ – ರ‍್ಯಾಪಿಡ್ ಆಕ್ಷನ್ ಫೋರ್ಸ್‌ನಿಂದ ಪಂಥ ಸಂಚಲನ

    ಬೆಳಗಾವಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆ ವಿರೋಧಿಸಿ ಬೆಳಗಾವಿ ಬಂದ್‍ಗೆ ಕರೆ ನೀಡಿದೆ. ಈ ಹಿನ್ನೆಲೆ ಬೆಳಗಾವಿ ನಗರ ಹಾಗೂ ಜಿಲ್ಲಾ ಪೊಲೀಸರು ಬಿಗಿ ಭದ್ರತೆ ವಹಿಸಿದ್ದು, ರ‍್ಯಾಪಿಡ್ ಆಕ್ಷನ್ ಫೋರ್ಸ್‌ ಪಂಥ ಸಂಚಲನ ನಡೆಸಿದೆ.

    ವಾಟ್ಸಪ್ ಮೂಲಕ ಬೆಳಗಾವಿ ಬಂದ್‍ಗೆ ಅನಾಮಧೇಯ ಸೇನಾ ಆಕಾಂಕ್ಷಿ ಯುವಕರ ಆಹ್ವಾನ ಹಿನ್ನೆಲೆ ಬೆಳಗಾವಿ ನಗರ, ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ನಿಯೋಜಿಸಿದ್ದಾರೆ. ಈಗಾಗಲೇ ಸಂದೇಶ ರವಾನೆ ಮಾಡಿದ್ದ ಯುವಕರನ್ನ ಕರೆಯಿಸಿ ಪೊಲೀಸರು ಖಡಕ್ ವಾರ್ನಿಂಗ್ ಸಹ ಕೊಟ್ಟಿದ್ದಾರೆ. ಇದನ್ನೂ ಓದಿ: ಅಗ್ನಿಪಥ್ ಪ್ರತಿಭಟನೆಗಳ ನಡುವೆ, ಅಗ್ನಿವೀರರಿಗೆ ಆನಂದ್ ಮಹೀಂದ್ರಾ ಕೊಟ್ರು ಬಿಗ್ ಆಫರ್ 

    ಸೇನಾಕಾಂಕ್ಷಿಗಳು, ಕೋಚಿಂಗ್ ಸೆಂಟರ್ ಮುಖ್ಯಸ್ಥರಿಂದ ಬಂದ್ ಮಾಡದಂತೆ ವೀಡಿಯೋ ಹೇಳಿಕೆ ರಿಲೀಸ್ ಮಾಡಲಾಗಿದೆ. ಬೆಳಗಾವಿ ನಗರ ಸಂಪರ್ಕ ಕಲ್ಪಿಸುವ ಮಾರ್ಗಗಳು, ಬಸ್ ನಿಲ್ದಾಣ, ರೈಲು ನಿಲ್ದಾಣ, ಟೋಲ್‍ಗಳಲ್ಲಿ ಬಿಗಿ ಬಂದೋಬಸ್ತ್ ಮಾಡುವ ಮೂಲಕ ಬೆಳಗಾವಿಗೆ ಬರುವ ಯುವಕರ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಇದರ ಜೊತೆಗೆ ಬೆಳಗಾವಿ ಜಿಲ್ಲಾ ಪೊಲೀಸ್ ವತಿಯಿಂದ ಎಸ್‍ಪಿ ಲಕ್ಷ್ಮಣ ನಿಂಬರಗಿ ನೇತೃತ್ವದಲ್ಲಿ ಗೋಕಾಕ್ ನಗರದಲ್ಲಿ ಪಥಸಂಚಲನ ಮಾಡುವ ಮೂಲಕ ಪ್ರತಿಭಟನೆ ಮಾಡುವ ಯುವಕರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

    ರ‍್ಯಾಪಿಡ್ ಆಕ್ಷನ್ ಫೋರ್ಸ್‌ನಿಂದ ಪಥಸಂಚಲನ
    ಬೆಳಗಾವಿಯಲ್ಲಿ ಅಗ್ನಿಪಥ್ ವಿರೋಧಿಸಿ ಬೆಳಗಾವಿ ಬಂದ್ ಕರೆ ಹಿನ್ನೆಲೆ ನಗರದ ಚೆನ್ನಮ್ಮ ವೃತ್ತದಲ್ಲಿ ರೈಲ್ವೆ ಪೊಲೀಸರು, ರ‍್ಯಾಪಿಡ್ ಆಕ್ಷನ್ ಫೋರ್ಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೀಡುಬಿಟ್ಟಿದ್ದಾರೆ. ಇದಾದಬಳಿಕ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ನೇತೃತ್ವದಲ್ಲಿ ನಗರದ ಚೆನ್ನಮ್ಮ ವೃತ್ತದಿಂದ ರೈಲ್ವೆ ಪೊಲೀಸರು, ರ‍್ಯಾಪಿಡ್ ಆಕ್ಷನ್ ಫೋರ್ಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳಿಂದ ಪಥಸಂಚಲನ ನಡೆಸಲಾಯಿತು.

    ಬೆಳಗಾವಿಯ ರಾಣಿ ಚನ್ನಮ್ಮಾಜಿ ವೃತ್ತದಿಂದ ಆರಂಭವಾದ ಪಥಸಂಚಲನ ಲಿಂಗರಾಜು ಕಾಲೇಜು ರಸ್ತೆ, ಧರ್ಮವೀರ ಸಂಭಾಜಿ ಸರ್ಕಲ್, ಕಿರ್ಲೋಸ್ಕರ್ ರೋಡ್, ರಾಮದೇವ ಗಲ್ಲಿ, ಖಡೇ ಬಜಾರ್ ಬಳಿಕ ಅಂತಿಮವಾಗಿ ಚೆನ್ನಮ್ಮಾಜಿ ವೃತ್ತಕ್ಕೆ ಆಗಮಿಸಿ ಅಂತ್ಯವಾಯಿತು. ಪರೇಡ್‍ನಲ್ಲಿ ಸ್ವತಃ ಬೋರಲಿಂಗಯ್ಯ ಅವರು ಹೆಜ್ಜೆ ಹಾಕಿದ್ರು. ಕಮಿಷನರ್‌ಗೆ ಡಿಸಿಪಿ ರವೀಂದ್ರ ಗಡಾದಿ, ಎಸಿ ರವೀಂದ್ರ ಕರಿಲಿಂಗನ್ನವರ, ಎಸಿಪಿ ಚಂದ್ರಪ್ಪ, ಸಿಪಿಐ ಧೀರಜ ಶಿಂಧೆ, ಸಿಪಿಐ ದಿಲೀಪ ನಿಂಬಾಳ್ಕರ್, ಸಿಪಿಐ ರಾಘವೇಂದ್ರ ಹವಾಲ್ದಾರ್ ಸೇರಿದಂತೆ ಇನ್ನಿತರ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

    ಹುಕ್ಕೇರಿ, ಹಿರೇಬಾಗೆವಾಡಿ ಚೆಕ್  ಪೋಸ್ಟ್‌ನಲ್ಲಿ ಹೈ ಅಲರ್ಟ್:
    ಬೆಳಗಾವಿ ಚಲೋ, ಬೆಳಗಾವಿ ಬಂದ್‍ಗೆ ಕರೆ ಹಿನ್ನೆಲೆ ಬೆಳಗಾವಿ ಜಿಲ್ಲೆಯಾದ್ಯಂತ ಇರುವ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ಹೈ ಅಲರ್ಟ ಘೋಷಣೆ ಮಾಡಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ. ಹುಕ್ಕೇರಿ ತಾಲೂಕಿನ ಹತ್ತರಗಿ ಚೆಕ್ ಹಾಗೂ ನಿಪ್ಪಾಣಿ ತಾಲೂಕಿನ ಕುಗನೊಳ್ಳಿಯಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಇದರ ಜೊತೆಗೆ ಬೆಳಗಾವಿ ತಾಲೂಕಿನ ಹಿರೇಬಾಗೆವಾಡಿ ಚೆಕ್ ಪೋಸ್ಟ್‌ನಲ್ಲಿ ಬೆಳಗಾವಿಗೆ ಬರುವ ಯುವಕರನ್ನು ತಡೆಯಲು ಸಜ್ಜಾಗಿದ್ದು, ಬೆಳಗಾವಿ ನಗರಕ್ಕೆ ಬರುವ ಯುವಕರನ್ನು ಅಲ್ಲಿಯೇ ತಡೆದು ವಾಪಸ್ ಕಳಿಸಲು ನಿರ್ಧರಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಆಸ್ಕರ್ ಪ್ರಶಸ್ತಿ ವಿಜೇತ ನಿರ್ದೇಶಕ ಅರೆಸ್ಟ್

    ಕುಂದಾನಗರಿ ಬೆಳಗಾವಿಯಲ್ಲಿ ಎಂದಿನಂತೆ ಜನಜೀವನ
    ಅಗ್ನಿಪಥ್ ಯೋಜನೆ ವಿರೋಧಿಸಿ ಬೆಳಗಾವಿ ಬಂದ್ ಕರೆ ಹಿನ್ನೆಲೆ ಕುಂದಾನಗರಿ ಬೆಳಗಾವಿಯಲ್ಲಿ ಎಂದಿನಂತೆ ಜನಜೀವನ ನಡೆದಿದೆ. ಅಂಗಡಿ ಮುಂಗಟ್ಟುಗಳಲ್ಲಿ ವ್ಯಾಪಾರ ವಹಿವಾಟು ನಡೆದಿದ್ದು, ಶಾಲಾ-ಕಾಲೇಜುಗಳು, ಬಸ್‍ಗಳು ಎಂದಿನಂತೆ ಸಂಚಾರ ನಡೆಸಿವೆ.

    Live Tv

  • ನಾಳೆ ಏನಾದ್ರೂ ಅಹಿತಕರ ಘಟನೆ ಸಂಭವಿಸಿದ್ರೆ ಅಂತವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲು ಸಿದ್ಧ: ಬೋರಲಿಂಗಯ್ಯ

    ನಾಳೆ ಏನಾದ್ರೂ ಅಹಿತಕರ ಘಟನೆ ಸಂಭವಿಸಿದ್ರೆ ಅಂತವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲು ಸಿದ್ಧ: ಬೋರಲಿಂಗಯ್ಯ

    ಬೆಳಗಾವಿ: ಅಗ್ನಿಪಥ್ ಯೋಜನೆ ಸಂಬಂಧ ಬೆಳಗಾವಿ ಬಂದ್‍ಗೆ ಯಾವುದೇ ರೀತಿ ಅನುಮತಿ ಇಲ್ಲ. ಅನುಮತಿ ಇಲ್ಲದೇ ಪ್ರತಿಭಟನೆಯಲ್ಲಿ ಭಾಗಿಯಾದ್ರೆ ಸೂಕ್ತ ಕಾನೂನುಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಎಚ್ಚರಿಸಿದರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಗ್ನಿಪಥ್ ಯೋಜನೆ ಸಂಬಂಧ ನಾಳೆ ಬೆಳಗಾವಿ ಚಲೋ ಹಾಗೂ ಬೆಳಗಾವಿ ಬಂದ್ ಮಾಡಲು ಹೊರಟಿದ್ದಾರೆ. ಅವರು ಯಾವುದೇ ರೀತಿ ಮನವಿ ಮಾಡಿಕೊಂಡಿಲ್ಲ. ನಾಳೆ ಏನಾದ್ರೂ ಅಹಿತಕರ ಘಟನೆಗಳು ಸಂಭವಿಸಿದ್ರೆ ಅಂತವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲು ನಾವು ಸಂಪೂರ್ಣವಾಗಿ ಸಿದ್ಧರಾಗಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಅಗ್ನಿಪಥ್ ಯೋಜನೆ ವಿರುದ್ಧ ಯುವಕರನ್ನು ಕಾಂಗ್ರೆಸ್‍ ಬೇಕೆಂದು ಪ್ರಚೋದಿಸುತ್ತಿದೆ: ಬಿ.ಸಿ.ಪಾಟೀಲ್ 

    ಡ್ರೋನ್ ಕ್ಯಾಮರಾ ಉಪಯೋಗಿಸಿಕೊಂಡು ರೈಲ್ವೆ ನಿಲ್ದಾಣ ಸೇರಿದಂತೆ ಪ್ರತಿಭಟನೆ ನಡೆಯುವ ಸಾಧ್ಯತೆ ಇರುವ ಸ್ಥಳಗಳಲ್ಲಿ ಕಣ್ಗಾವಲು ಇಡುತ್ತೇವೆ. ಬಂದೋಬಸ್ತ್ ಬಗ್ಗೆಯೂ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.

    ನಾವು ಎಲ್ಲವನ್ನು ಗಮನಿಸುತ್ತಿದ್ದೇವೆ. ಅವಶ್ಯಕತೆ ಕಂಡುಬಂದರೆ ಅಂತವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಚೋದನೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಯಾರು ಆಕಾಂಕ್ಷಿಗಳು ಇದ್ದಾರೆ. ಯಾವುದೇ ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾದರೆ ಮುಂದೆ ಸರ್ಕಾರಿ ಕೆಲಸದಲ್ಲಿ ನೇಮಕಾತಿ ಪಡೆಯಲು ಅರ್ಹತೆ ಇರೋದಿಲ್ಲ ಎಂದು ಹೇಳಿದರು.

    ಅದೇ ರೀತಿ ಖಾಸಗಿ ಕೆಲಸವನ್ನು ಅಷ್ಟು ಸುಲಭವಾಗಿ ಪಡೆದುಕೊಳ್ಳಲು ಆಗೋದಿಲ್ಲ. ಇದೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ನಿಮ್ಮ ಭವಿಷ್ಯವನ್ನು ಉಜ್ವಲ ಮಾಡಿಕೊಳ್ಳುವ ಸಂದರ್ಭ ಇದು. ಯಾವುದೇ ರೀತಿಯ ಪ್ರಚೋದನೆಗೆ ಕಿವಿಗೊಡದೇ ನಿಮ್ಮ ಭವಿಷ್ಯದ ಬಗ್ಗೆ ಯೋಚನೆ ಮಾಡಬೇಕು. ಏನೇ ಮಾಡೋದು ಇದ್ದರೆ ಅನುಮತಿ ಪಡೆದು, ಶಾಂತಿ ಸುವ್ಯವಸ್ಥೆಯಿಂದ ಮಾಡಬಹುದು. ಆದರೆ, ಯಾವುದೇ ಅನುಮತಿ ಪಡೆಯದೇ ಗಲಾಟೆ, ಧೋಂಬಿ ಮಾಡಲು ಬಂದರೆ ನಾವು ಯಾವುದಕ್ಕೂ ಬಿಡೋದಿಲ್ಲ ಎಂದು ಎಚ್ಚರಿಸಿದರು. ಇದನ್ನೂ ಓದಿ: ಮಕ್ಕಳನ್ನು ನೋಡಿಕೊಳ್ಳಲು ಆಗುತ್ತಿಲ್ಲವೆಂದು ಪತ್ನಿಯನ್ನ ಕೊಂದು ಬಾತ್‍ರೂಮ್‍ನಲ್ಲಿ ಬಚ್ಚಿಟ್ಟ 

    Live Tv

  • ಪ್ರದರ್ಶನ ನಿಲ್ಲಿಸಲಿದೆಯಾ ಮೈಸೂರು ಒಲಂಪಿಯಾ ಥಿಯೇಟರ್

    ಪ್ರದರ್ಶನ ನಿಲ್ಲಿಸಲಿದೆಯಾ ಮೈಸೂರು ಒಲಂಪಿಯಾ ಥಿಯೇಟರ್

    ಮೈಸೂರಿನ ಹಳೆಯ ಚಿತ್ರಮಂದಿರವೊಂದು ಪ್ರದರ್ಶನ ನಿಲ್ಲಿಸುವ ಮೂಲಕ ನೋಡುಗರನ್ನು ಭಾವುಕ ದಂಡೆಗೆ ನಿಲ್ಲಿಸಿದೆ. ಮೈಸೂರಿನ ಗಾಂಧಿ ವೃತ್ತದ ಬಳಿ ಇರುವ ಈ ಒಲಂಪಿಯಾ ಚಿತ್ರಮಂದಿರವು ಸತತ 73 ವರ್ಷಗಳ ಕಾಲ ಪ್ರದರ್ಶನ ಮಾಡಿ, ಇದೀಗ ಇತಿಹಾಸದ ಪುಟ ಸೇರುತ್ತಿದೆ. ಈ ಮೂಲಕ ಮೈಸೂರಿನ ಮತ್ತೊಂದು ಚಿತ್ರಮಂದಿರ ಬಂದ್ ಆಗಲಿದೆ. ಇದನ್ನೂ ಓದಿ : ಓಟಿಟಿಯಲ್ಲೂ ದಾಖಲೆ ಬರೆದ ‘ದಿ ಕಾಶ್ಮೀರ್ ಫೈಲ್ಸ್’

    ಪ್ರೇಕ್ಷಕರ ಕೊರತೆ ಮತ್ತು ಕೋವಿಡ್ ಕಾರಣದಿಂದಾಗಿ ತಮ್ಮ ಸಿನಿಮಾ ಮಂದಿರವನ್ನು ಮುಚ್ಚುತ್ತಿರುವುದಾಗಿ ಮಾಲೀಕರು ಹೇಳಿದ್ದು ಸುದ್ದಿಯಾಗಿದೆ. ಕೊರೊನಾ ನಂತರ ಕರ್ನಾಟಕದ ಅನೇಕ ಚಿತ್ರಮಂದಿರಗಳು ಬಾಗಿಲು ಹಾಕಿದ್ದು, ಚಿತ್ರ ವಿತರಕರಿಗೆ ಇದು ಭಾರೀ ತಲೆನೋವಾಗಿ ಪರಿಣಮಿಸಿದೆ. ಕೊರೊನಾ ಮತ್ತು ಪ್ರೇಕ್ಷಕರ ಕೊರೆಯಿಂದಾಗಿ ನಷ್ಟ ಮಾಡಿಕೊಳ್ಳುವುದಕ್ಕಿಂತ ಥಿಯೇಟರ್ ಮುಚ್ಚುವುದೇ ಸರಿಯಾದದ್ದು ಎಂದಿದ್ದಾರಂತೆ ಮಾಲೀಕರು. ಇದನ್ನೂ ಓದಿ : ಯಶ್ ಆಸೆ ಈಡೇರಿಸುತ್ತಾರಾ ತಮಿಳಿನ ಖ್ಯಾತ ನಿರ್ದೇಶಕ ಶಂಕರ್

    ಮೈಸೂರಿನಲ್ಲಿ 25ಕ್ಕೂ ಹೆಚ್ಚು ಚಿತ್ರಮಂದಿರಗಳಿದ್ದವು. ಇತ್ತೀಚೆಗಷ್ಟೇ ಮೈಸೂರಿನ ಪ್ರಖ್ಯಾತ ಚಿತ್ರಮಂದಿರಗಳಾದ ಶಾಂತಲಾ, ಲಕ್ಷ್ಮೀ ಮತ್ತು ಸರಸ್ವತಿ ಥಿಯೇಟರ್ಸ್ ಕೂಡ ಮುಚ್ಚಿವೆ. ಸದ್ಯ ಮೈಸೂರಿನಲ್ಲಿ ಉಳಿದಿರುವ ಥಿಯೇಟರ್ ಸಂಖ್ಯೆ ಕೇವಲ ಹತ್ತು ಮಾತ್ರ ಎನ್ನಲಾಗುತ್ತಿದೆ. ಪ್ರಮುಖ ಚಿತ್ರಮಂದಿರಗಳಲ್ಲಿ ಒಂದೊಂದೇ ಚಿತ್ರಮಂದಿರಗಳು ಬಾಗಿಲು ಹಾಕಿಕೊಳ್ಳುತ್ತಿರುವುದರಿಂದ ಸಹಜವಾಗಿಯೇ ಚಿತ್ರ ನಿರ್ಮಾಪಕರಿಗೆ ಆತಂಕ ಶುರುವಾಗಿದೆ.  ಇದನ್ನೂ ಓದಿ : ಪ್ರಾದೇಶಿಕ ಭಾಷಾ ಮಹತ್ವ ಪ್ರಧಾನಿ ಮೋದಿ ಮಾತಿಗೆ ಸಂತಸ ವ್ಯಕ್ತ ಪಡಿಸಿದ ಕಿಚ್ಚ ಸುದೀಪ್

    ಮೈಸೂರು ಭಾಗದಲ್ಲಿ ಅತೀ ಹೆಚ್ಚು ಹಣ ತಂದು ಕೊಡುವ ಚಿತ್ರಮಂದಿರಗಳೇ ಬಂದ್ ಆದರೆ, ನಿರ್ಮಾಪಕನಿಗೆ ಭಾರೀ ನಷ್ಟವಾಗಲಿದೆ. ಹಾಗಾಗಿ ಅವುಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲೇ ಒಂದಷ್ಟು ಕಾರ್ಯಗಳು ನಡೆಯಬೇಕು ಎನ್ನುತ್ತಾರೆ ವಿತರಕರು.

  • ಹಿಜಬ್ ತೀರ್ಪಿಗೆ ವಿರೋಧ – ಭಟ್ಕಳದಲ್ಲಿ ಬುಧವಾರ ಬಂದ್‌ಗೆ ಕರೆ

    ಹಿಜಬ್ ತೀರ್ಪಿಗೆ ವಿರೋಧ – ಭಟ್ಕಳದಲ್ಲಿ ಬುಧವಾರ ಬಂದ್‌ಗೆ ಕರೆ

    ಕಾರವಾರ: ಹಿಜಬ್ ವಿರುದ್ಧ ತೀರ್ಪು ಬಂದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಾಳೆ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲು ತಂಜಿಮ್ ಸಂಘಟನೆ ಮನವಿ ಮಾಡಿದೆ.

    ಹೈಕೋರ್ಟ್ನಲ್ಲಿ ಹಿಜಬ್ ವಿರುದ್ಧ ತೀರ್ಪು ಬಂದಿರುವ ಹಿನ್ನೆಲೆಯಲ್ಲಿ ಇದನ್ನು ವಿರೋಧಿಸಿ ತಂಜಿಮ್ ಸಂಘಟನೆ ಸ್ವಯಂ ಪ್ರೇರಿತ ಬಂದ್‌ಗೆ ಮುಸ್ಲಿಂ ವರ್ತಕರಲ್ಲಿ ಮನವಿ ಮಾಡಿದೆ. ಹೀಗಾಗಿ ಭಟ್ಕಳದಲ್ಲಿ ನಾಳೆ ಬಹುತೇಕ ಬಂದ್ ಇರಲಿದೆ. ಇದನ್ನೂ ಓದಿ: ಹಿಜಬ್‌ ಧರಿಸುವುದು ಇಸ್ಲಾಂ ಧರ್ಮದಲ್ಲಿ ಅತ್ಯಗತ್ಯ: ಹಿರಿಯ ವಕೀಲ ಎ.ಎಂ.ಧಾರ್‌

    ಇಂದು ಸ್ವಯಂ ಪ್ರೇರಿತ ಬಂದ್:
    ಹಿಜಬ್ ವಿರುದ್ಧ ಹೈಕೋರ್ಟ್ನಲ್ಲಿ ತೀರ್ಪು ಬರುತ್ತಿದ್ದಂತೆ ಭಟ್ಕಳ ನಗರದಲ್ಲಿ ಮುಸ್ಲಿಂ ವರ್ತಕರು ಸ್ವಯಂ ಪ್ರೇರಿತ ಅಂಗಡಿ ಮುಂಗಟ್ಟು ಬಂದ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

    ಬೆಳಗ್ಗೆಯಿಂದ ಗಿಜುಗುಡುತಿದ್ದ ಭಟ್ಕಳ ನಗರದ ಮಾರುಕಟ್ಟೆ ಮಾಧ್ಯಾಹ್ನದ ಬಳಿಕ ಖಾಲಿ ಖಾಲಿ ಎನಿಸುತ್ತಿತ್ತು. ಬಹುತೇಕ ಮುಸ್ಲಿಂ ವರ್ತಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದು, ಭಟ್ಕಳ ನಗರದ ಹಳೆ ಬಸ್ ನಿಲ್ದಾಣದಿಂದ ಚೌಕ್ ಬಜಾರ್‌ವರೆಗಿನ ಬಹುತೇಕ ಮುಸ್ಲಿಂ ವರ್ತಕರಿರುವ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಇದನ್ನೂ ಓದಿ: ಹಿಜಬ್‌- ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ವಿದ್ಯಾರ್ಥಿನಿ

    ಪೊಲೀಸರ ಎಚ್ಚರಿಕೆ:
    ಕೆಲವೆಡೆ ತೀರ್ಪು ವಿರೋಧಿಸಿ ಮುಸ್ಲಿಂ ವರ್ತಕರು ಸ್ವಯಂ ಪ್ರೇರಿತ ಬಂದ್ ಮಾಡಿರೆ, ಕೆಲವರು ಅಂಗಡಿ ಮುಂಗಟ್ಟನ್ನು ಬಂದ್ ಮಾಡದೇ ತೆರದಿದ್ದರಿಂದ ಕೆಲವು ಮುಖಂಡರು ಬಲವಂತವಾಗಿ ಬಂದ್ ಮಾಡಿಸಿದರು. ಈ ಹಿನ್ನೆಲೆಯಲ್ಲಿ ಭಟ್ಕಳ ನಗರದ ಡಿವೈಎಸ್‌ಪಿ ಬೆಳ್ಳಿಯಪ್ಪ ಸ್ಥಳಕ್ಕೆ ಆಗಮಿಸಿ ಬಲವಂತವಾಗಿ ಬಂದ್ ಮಾಡಿಸದಂತೆ ಎಚ್ಚರಿಕೆ ನೀಡಿದರು. ಈ ವೇಳೆ ಮುಸ್ಲಿಂ ಮುಖಂಡರು ಹಾಗೂ ಪೊಲೀಸರ ನಡುವೆ ಕೆಲವು ಸಮಯ ಮಾತಿನ ಚಕಮಕಿ ನಡೆಯಿತು.

  • ಗೊರಗುಂಟೆಪಾಳ್ಯ ಫ್ಲೈಓವರ್‌ನಲ್ಲಿ ರಾತ್ರಿ ಸಂಚಾರ ಬಂದ್

    ಗೊರಗುಂಟೆಪಾಳ್ಯ ಫ್ಲೈಓವರ್‌ನಲ್ಲಿ ರಾತ್ರಿ ಸಂಚಾರ ಬಂದ್

    ಬೆಂಗಳೂರು: ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ರಾತ್ರಿ ವೇಳೆ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ.

    ಮೇಲ್ಸೇತುವೆಯಲ್ಲಿ ಭಾರೀ ವಾಹನ ಹಾಗೂ ಲಘು ವಾಹನ ಪ್ರತ್ಯೇಕಿಸಿ ಕಳುಹಿಸುವುದಕ್ಕೆ ಪೊಲೀಸರಿಗೆ ಕಷ್ಟವಾಗುತ್ತಿರುವ ಹಿನ್ನೆಲೆ, ಜೊತೆಗೆ ಭಾರೀ ವಾಹನಗಳ ತಡೆಗಟ್ಟಲು ಅಳವಡಿಸಿರುವ ಗ್ಯಾಂಟ್ರಿ ಪದೇ, ಪದೇ ಡ್ಯಾಮೇಜ್ ಆಗುತ್ತಿರುವ ಕಾರಣ ರಾತ್ರಿ 12 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಟ್ರಾಫಿಕ್ ಪೊಲೀಸರು ನಿರ್ಬಂಧ ಹೇರಿದ್ದಾರೆ. ಇದನ್ನೂ ಓದಿ: ನೈಸ್ ರಸ್ತೆಯಲ್ಲಿ ವ್ಯಕ್ತಿ ಸಹಿತ ಕಾರು ಸುಟ್ಟು ಕರಕಲು

    ರಾತ್ರಿ 12 ಗಂಟೆ ನಂತರ ಸರ್ವಿಸ್ ರಸ್ತೆ ಮೂಲಕ ದಾಸರಹಳ್ಳಿ, ಪೀಣ್ಯ, ಜಾಲಹಳ್ಳಿ ಕ್ರಾಸ್ ಮೂಲಕ ಗೊರಗುಂಟೆಪಾಳ್ಯ ತಲುಪಬಹುದಾಗಿದೆ. ಗೊರಗುಂಟೆಪಾಳ್ಯದಿಂದ ಔಟರ್ ರಿಂಗ್ ರೋಡ್ ಬಳಸಿ ನಗರದಿಂದ ಹೊರ ಹೋಗಬಹುದು ಮತ್ತು ನಗರಕ್ಕೆ ಬರುವ ವಾಹನಗಳು ಮಾದಾವಾರ ಬಳಿ ನೈಸ್ ರಸ್ತೆ ಬಳಸಿಕೊಂಡು ಬರಬಹುದು ಎಂದು ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ತಿಳಿಸಿದ್ದಾರೆ. ಇದನ್ನೂ ಓದಿ: ಮದುವೆಗಾಗಿ ಕೂದಲು ಕಸಿ ಮಾಡಿಸಿಕೊಂಡು ಮಸಣ ಸೇರಿದ

  • 371 ಜೆ ಅನುಷ್ಠಾನಕ್ಕೆ ಆಗ್ರಹ: ರಾಯಚೂರು ನಗರ ಬಂದ್‍ಗೆ ಉತ್ತಮ ಪ್ರತಿಕ್ರಿಯೆ

    371 ಜೆ ಅನುಷ್ಠಾನಕ್ಕೆ ಆಗ್ರಹ: ರಾಯಚೂರು ನಗರ ಬಂದ್‍ಗೆ ಉತ್ತಮ ಪ್ರತಿಕ್ರಿಯೆ

    ರಾಯಚೂರು: ವೈದ್ಯಕೀಯ ಸೀಟ್‍ಗಳ ಹಂಚಿಕೆ ವಿಚಾರದಲ್ಲಿ ಕಲಂ 371 ಜೆ ವಿಶೇಷ ಸ್ಥಾನಮಾನದ ವಿರುದ್ಧ ನ್ಯಾಯಾಲಯದ ಮೆಟ್ಟಿಲು ಏರಿರುವ ನಗರದ ನವೋದಯ ಶಿಕ್ಷಣ ಸಂಸ್ಥೆ ನಿಲುವನ್ನ ಖಂಡಿಸಿ ಕಲ್ಯಾಣ ಕರ್ನಾಟಕ 371 ಜೆ ಅನುಷ್ಠಾನ ಹೋರಾಟ ಸಮಿತಿ ಕರೆ ನೀಡಿತ್ತು. ಈ ಹಿನ್ನೆಲೆ ರಾಯಚೂರಿನಲ್ಲಿ ಬಂದ್ ನಡೆದಿದ್ದು, ಅದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

    ಶಾಲಾ ಕಾಲೇಜು, ಬಸ್ ಸಂಚಾರ, ಅಂಗಡಿ ಮುಗ್ಗಟ್ಟು, ತರಕಾರಿ ಮಾರುಕಟ್ಟೆ, ಎಪಿಎಂಸಿ ಬಂದ್ ಮಾಡಲಾಗಿದೆ. ಸ್ವಯಂ ಪ್ರೇರಿತರಾಗಿ ವ್ಯಾಪಾರಿಗಳು ಅಂಗಡಿಗಳನ್ನು ಬಂದ್ ಮಾಡಿದ್ದಾರೆ. ನಗರದ ಭಗತ್ ಸಿಂಗ್ ವೃತ್ತದಲ್ಲಿ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆದಿದೆ. ಹೋರಾಟಗಾರರು ಬೈಕ್ ರ್ಯಾಲಿ ಮೂಲಕ ಬಂದ್‍ಗೆ ಬೆಂಬಲ ಕೋರುತ್ತಿದ್ದಾರೆ. ಇದನ್ನೂ ಓದಿ: ಕಲಂ 371ಜೆ ಸಮರ್ಪಕ ಅನುಷ್ಠಾನಕ್ಕೆ ಆಗ್ರಹ – ಮಾರ್ಚ್ 7 ರಾಯಚೂರು ಬಂದ್

    ಬಂದ್ ಹಿನ್ನೆಲೆ ಯರಮರಸ್ ಬೈಪಾಸ್ ಬಳಿ ಟೈಯರ್‍ಗೆ ಬೆಂಕಿ ಹಚ್ಚಿ ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಹನಗಳ ಸಂಚಾರ ತಡೆದು ಹೋರಾಟ ನಡೆಸಿರುವ ಹಿನ್ನೆಲೆ ಸುಮಾರು ಒಂದು ಕಿ.ಮೀ ವರೆಗೆ ಟ್ರಾಫಿಕ್ ಜಾಮ್ ಆಗಿದೆ. ಹೋರಾಟ ನಿರತರನ್ನು ಸ್ಥಳದಿಂದ ತೆರವುಗೊಳಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

    ನಗರದ ನವೋದಯ ಮೆಡಿಕಲ್ ಕಾಲೇಜ್ 371 ಜೆ ಪ್ರಶ್ನಿಸಿ, ವೈದ್ಯಕೀಯ ಪ್ರವೇಶ ನಿರಾಕರಿಸಿ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದೆ. ರಿಟ್ ಅರ್ಜಿ ವಾಪಸ್ ಪಡೆಯುವಂತೆ ಆಗ್ರಹಿಸಿ ಬಂದ್ ಗೆ ಕರೆ ನೀಡಲಾಗಿದೆ. ವಿವಿಧ ರಾಜಕೀಯ ಪಕ್ಷಗಳು ಹಾಗೂ ವಿವಿಧ ಸಂಘಟನೆಗಳು ಒಟ್ಟಾಗಿ ಹೋರಾಟ ನಡೆಸಿವೆ. ಇದನ್ನೂ ಓದಿ: ಬಾಹುಬಲಿ ಕಟ್ಟಪ್ಪನ ಬಗ್ಗೆ ಪ್ರಭಾಸ್ ಹೇಳಿದ್ದೇನು ಗೊತ್ತಾ?

  • ಕಲಂ 371ಜೆ ಸಮರ್ಪಕ ಅನುಷ್ಠಾನಕ್ಕೆ ಆಗ್ರಹ – ಮಾರ್ಚ್ 7 ರಾಯಚೂರು ಬಂದ್

    ಕಲಂ 371ಜೆ ಸಮರ್ಪಕ ಅನುಷ್ಠಾನಕ್ಕೆ ಆಗ್ರಹ – ಮಾರ್ಚ್ 7 ರಾಯಚೂರು ಬಂದ್

    ರಾಯಚೂರು: ನಗರದ ನವೋದಯ ಶಿಕ್ಷಣ ಸಂಸ್ಥೆ ಕಲಂ 371 ಜೆ ಅನುಷ್ಠಾನಕ್ಕೆ ಅಡ್ಡಿಯಾಗುವ ನಿಲುವನ್ನು ತಳಿದಿದ್ದು ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿರುವ ಹಿನ್ನೆಲೆ ಅರ್ಜಿ ವಾಪಸ್ ಪಡೆಯುವಂತೆ ಆಗ್ರಹಿಸಿ ವಿವಿಧ ರಾಜಕೀಯ ಪಕ್ಷ ಹಾಗೂ ಸಂಘಟನೆಗಳು ಒಂದಾಗಿ ಕಲಂ 371ಜೆ ಅನುಷ್ಠಾನ ಸಮಿತಿ ಅಡಿಯಲ್ಲಿ ರಾಯಚೂರು ನಗರ ಬಂದ್‍ಗೆ ಕರೆ ನೀಡಲಾಗಿದೆ. ಮಾರ್ಚ್ 7 ರಂದು ರಾಯಚೂರು ನಗರ ಬಂದ್ ಮಾಡಲು ನಿರ್ಧರಿಸಲಾಗಿದೆ.

    Raichuru

     

    ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ಬಂದ್ ನಡೆಯಲಿದೆ. ನವೋದಯ ಶಿಕ್ಷಣ ಸಂಸ್ಥೆ ನಿಲುವಿನ ವಿರುದ್ಧ ವಿವಿಧ ಸಂಘಟನೆಗಳು ಹೋರಾಟ ಮುಂದುವರೆಸಿವೆ. ಸಂಸ್ಥೆಗೆ ಕಲಂ 371ಜೆ ಅನ್ವಯಿಸದಂತೆ ಕೋರ್ಟ್ ಮೊರೆ ಹೋದ ಹಿನ್ನೆಲೆ ಬಂದ್ ಕರೆ ನೀಡಲಾಗಿದೆ. ಇದನ್ನೂ ಓದಿ: ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮುಖ್ಯಸ್ಥ ಪಾಣಕ್ಕಾಡ್ ತಂಙಳ್ ನಿಧನ

    Raichuru

    ಮೆಡಿಕಲ್ ಸೀಟ್ ಹಂಚಿಕೆಯಲ್ಲಿ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಈ ವರ್ಷ 106 ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟ್ ಕೈ ತಪ್ಪುತ್ತಿತ್ತು. ಮೊದಲೇ ಸೀಟ್ ಹಂಚಿಕೆ ಹಿನ್ನೆಲೆ ಕಲಂ 371ಜೆ ಅಡಿ ಸೀಟ್ ಕೊಟ್ಟಿದ್ದಾರೆ. ಮುಂದಿನ ವರ್ಷ ವಿಶೇಷ ಸ್ಥಾನಮಾನದ ಅಡಿ ಮೆಡಿಕಲ್ ಸೀಟ್ ನೀಡದಿರಲು ಕೋರ್ಟ್‍ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಅರ್ಜಿ ವಾಪಸ್ ಪಡೆಯುವಂತೆ ಆಗ್ರಹಿಸಿ ರಾಯಚೂರು ಬಂದ್‍ಗೆ ಕರೆ ನೀಡಿರುವುದಾಗಿ ಹೋರಾಟಗಾರರು ತಿಳಿಸಿದ್ದಾರೆ. ಇದನ್ನೂ ಓದಿ:  ಬಾಹುಬಲಿ ಕಟ್ಟಪ್ಪನ ಬಗ್ಗೆ ಪ್ರಭಾಸ್ ಹೇಳಿದ್ದೇನು ಗೊತ್ತಾ?