Tag: ಬಂದ್

  • ಶಿವಮೊಗ್ಗ ಕಾಲೇಜಿನಲ್ಲಿ ಕೇಸರಿ ಧ್ವಜ ಹಾರಾಟ, ಕಲ್ಲು ತೂರಾಟ – ನಿಷೇಧಾಜ್ಞೆ ಜಾರಿ

    ಶಿವಮೊಗ್ಗ ಕಾಲೇಜಿನಲ್ಲಿ ಕೇಸರಿ ಧ್ವಜ ಹಾರಾಟ, ಕಲ್ಲು ತೂರಾಟ – ನಿಷೇಧಾಜ್ಞೆ ಜಾರಿ

    ಶಿವಮೊಗ್ಗ: ಹಿಜಬ್‌ – ಕೇಸರಿ(Hijab Kesari) ವಿವಾದ ತೀವ್ರಗೊಂಡಿದ್ದು ಶಿವಮೊಗ್ಗದ ಸರ್ಕಾರಿ ಪದವಿ ಕಾಲೇಜ್‌ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಕಲ್ಲುತೂರಾಟ ನಡೆದಿದೆ. ಬಸ್‌ಗಳ ಮೇಲೂ ಕಲ್ಲು ತೂರಾಟ ನಡೆದಿದ್ದು ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಅಂಗಡಿಗಳನ್ನು ಬಂದ್‌ ಮಾಡುವಂತೆ ಪೊಲೀಸರು ಸೂಚನೆ ನೀಡಿದ್ದು ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ.

    ರಾಷ್ಟ್ರಧ್ವಜ ಹಾರಿಸುವ ಸ್ಥಳದಲ್ಲಿ ವಿದ್ಯಾರ್ಥಿಗಳು ಕೇಸರಿ ಧ್ವಜ ಹಾರಿಸಿದ್ದರೆ ಇನ್ನೊಂದು ಕಡೆಯಲ್ಲಿ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಲಾಠಿ ಚಾರ್ಜ್‌ ಮಾಡಿ ನಿಯಂತ್ರಿಸಿದ್ದಾರೆ. ಇದನ್ನೂ ಓದಿ: ಕೇಸರಿ ಪೇಟ, ಕೇಸರಿ ಶಾಲಿನೊಂದಿಗೆ ಕಾಲೇಜಿಗೆ ಬಂದ ಎಂಜಿಎಂ ವಿದ್ಯಾರ್ಥಿಗಳು!

    ಆರಂಭದಲ್ಲಿ ಕಲ್ಲು ತೂರಾಟ ನಡೆಸಿದ ವಿದ್ಯಾರ್ಥಿಗಳನ್ನು ಬಂಧಿಸುವಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಕಲ್ಲು ತೂರಾಟ ನಡೆಸಿದ 6 ವಿದ್ಯಾರ್ಥಿಗಳನ್ನು ಠಾಣೆಗೆ ಕರೆದುಕೊಂಡು ಹೋಗುವ ವೇಳೆ ವಿದ್ಯಾರ್ಥಿಗಳ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಧರ್ಮವನ್ನು ಮನೆಗಳಲ್ಲಿ ಆಚರಿಸಿ, ಶಿಕ್ಷಣಕ್ಕೆ ತರಬೇಡಿ: ಸುರಯ್ಯ ಅಂಜುಮ್

    ವಿದ್ಯಾರ್ಥಿಗಳನ್ನು ಪೊಲೀಸರು ಠಾಣೆಗೆ ಕರೆದೊಯ್ಯುವ ವೇಳೆ ರಸ್ತೆಯಲ್ಲಿ ಪೊಲೀಸ್ ವಾಹನಕ್ಕೆ ಸಮುದಾಯದ ಜನ ಅಡ್ಡಲಾಗಿ ಮಲಗಿದ್ದಾರೆ. ‌ಈ ವೇಳೆ ಐವರು ವಿದ್ಯಾರ್ಥಿಗಳು ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ.

    ರಾಷ್ಟ್ರೀಯ ಪದವಿ ಪೂರ್ವ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ಕೊಠಡಿಯಲ್ಲಿ ಕುಳ್ಳಿರಿಸಲಾಗಿತ್ತು. ಈ ವಿಚಾರ ತಿಳಿದು ವಿದ್ಯಾರ್ಥಿಗಳು ಕಾಲೇಜಿನ ಗೇಟಿಗೆ ಕಲ್ಲು ಹೊಡೆದಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತೆರಳುತ್ತಿದ್ದಂತೆ ಇಂದು ಮತ್ತು ನಾಳೆ ಕಾಲೇಜಿಗೆ ಜಿಲ್ಲಾಧಿಕಾರಿ ಆರ್‌.ಸೆಲ್ವಮಣಿ ರಜೆ ಘೋಷಿಸಿದ್ದಾರೆ.

  • ನಾಳೆ ಬಂದ್ ಇಲ್ಲ – ವ್ಯಾಪಾರ, ವ್ಯವಹಾರ ನಡೆಸಬಹುದು: ಬೊಮ್ಮಾಯಿ

    ನಾಳೆ ಬಂದ್ ಇಲ್ಲ – ವ್ಯಾಪಾರ, ವ್ಯವಹಾರ ನಡೆಸಬಹುದು: ಬೊಮ್ಮಾಯಿ

    ಬೆಂಗಳೂರು: ಕನ್ನಡದ ರಕ್ಷಣೆಗೆ ಸರ್ಕಾರ ಯಾವತ್ತು ಬದ್ಧವಾಗಿದೆ. ಕನ್ನಡ ಸಂಘಟನೆ ನಾಳೆ ಕರೆ ಕೊಟ್ಟಿರುವ ಬಂದ್‍ನ್ನು ವಾಪಸ್ ತೆಗೆದುಕೊಂಡಿದೆ. ನಾಳೆ ಬಂದ್ ಇಲ್ಲ. ಎಲ್ಲರೂ ಕೂಡ ಎಂದಿನಂತೆ ವ್ಯಾಪಾರ ವ್ಯವಹಾರಗಳನ್ನು ನಡೆಸಬಹುದು ಎಂದಿದ್ದಾರೆ.

    ಕನ್ನಡ ಸಂಘಟನೆಯ ಮುಖಂಡರೊಂದಿಗೆ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕನ್ನಡದ ಹಿರಿಯ ಕಟ್ಟಾಳು ವಾಟಾಳ್ ನಾಗರಾಜ್ ಬಂದ್‍ಗೆ ಕರೆ ಕೊಟ್ಟಿದ್ರು. ಮೊನ್ನೆ ಸಹ ನಾನು ವಾಟಾಳ್ ಜೊತೆ ಮಾತನಾಡಿದ್ದೆ. ಇಂದು ನನ್ನ ಮನವಿಗೆ ಗೌರವ ಕೊಟ್ಟು ಬಂದ್ ಹಿಂಪಡೆದಿದ್ದಾರೆ. ನಾಳೆ ಬಂದ್ ಇರುವುದಿಲ್ಲ ವ್ಯಾಪಾರ ವ್ಯವಹಾರಗಳಿಗೆ ಯಾವುದೇ ತೊಡಕಾಗುವುದಿಲ್ಲ. ಕನ್ನಡಿಗರ ಗಡಿ, ಕನ್ನಡಿಗರ ರಕ್ಷಣೆಗೆ ನಾವು ಯಾವತ್ತು ಸಿದ್ಧ. ಎಂಇಎಸ್ ಬಗ್ಗೆ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುತ್ತೇವೆ ಬಂದ್ ವಾಪಸ್ ಪಡೆದ ಎಲ್ಲರಿಗೂ ಧನ್ಯವಾದಗಳು ಎಂದರು. ಇದನ್ನೂ ಓದಿ: ನಾಳೆಯ ಕರ್ನಾಟಕ ಬಂದ್ ವಾಪಸ್

    ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಮಾತನಾಡಿ, ಬಂದ್ ಬೇಡ ಎಂದು ಸಿಎಂ ಎರಡು ಬಾರಿ ಮಾತಾಡಿದರು. ಎಂಇಎಸ್ ನಿಷೇಧ ಮಾಡುವ ಭರವಸೆ ನೀಡಿದರು. ಕಾನೂನು ಪ್ರಕಾರ ನಿಷೇಧ ಮಾಡಲು ಪ್ರಯತ್ನ ಮಾಡ್ತೀವಿ. ಬಂದ್ ಹಿಂಪಡೆಯಲು ಸಿಎಂ ಮನವಿ ಮಾಡಿದರು. ಅವರ ಮಾತಿಗೆ ಗೌರವ ಕೊಟ್ಟು ಬಂದ್ ವಾಪಸ್ ಪಡೆಯುವುದಾಗಿ ಹೇಳಿದರು. ಇದನ್ನೂ ಓದಿ: ಜನವರಿ 1 ರಿಂದ ಜಿಎಸ್‍ಟಿ ನಿಯಮಗಳ ಬದಲಾವಣೆ – ಹೀಗಿದೆ ಮುಖ್ಯ ಬೆಲೆ ಏರಿಕೆಗಳ ಪಟ್ಟಿ

    ಇದೇ ವೇಳೆ ನನ್ನ ಜೀವನದಲ್ಲಿ ಈ ಬಾರಿಯ ಬಂದ್ ಮಾಡಲು ಹೋದಾಗ ತುಂಬಾ ಒತ್ತಡಗಳು ಬಂತು. ನಾಳೆ ರಾಜ್ಯದಲ್ಲಿ ಯಾವುದೇ ಬಂದ್ ಇರಲ್ಲ. ಎಂದಿನಂತೆ ನೀವು ನಿಮ್ಮ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಬಹುದು. ಬಸ್ ಸಂಚಾರ ಸೇರಿ ಎಲ್ಲವೂ ಎಂದಿನಂತೆ ಇರಲಿದೆ ಎಂದು ವಾಟಾಳ್ ಹೇಳಿದರು.

  • ಪವರ್ ಸ್ಟಾರ್ ವಿಧಿವಶ- ಚಾಮರಾಜನಗರದಲ್ಲಿ ಸ್ವಯಂ ಪ್ರೇರಿತ ಬಂದ್

    ಪವರ್ ಸ್ಟಾರ್ ವಿಧಿವಶ- ಚಾಮರಾಜನಗರದಲ್ಲಿ ಸ್ವಯಂ ಪ್ರೇರಿತ ಬಂದ್

    ಚಾಮರಾಜನಗರ: ಸ್ಯಾಂಡಲ್‍ವುಡ್ ಪವರ್ ಸ್ಟಾರ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಸ್ವಯಂಪ್ರೇರಿತ ಬಂದ್‍ಗೆ ಕರೆ ನೀಡಲಾಗಿದೆ.

    ಅಗಲಿದ ನೆಚ್ಚಿನ ನಟನ ಗೌರವಾರ್ಥವಾಗಿ ಅಂಗಡಿ ಮುಂಗಟ್ಟು ಹೊಟೇಲ್, ಸಿನಿಮಾ ಮಂದಿರಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡುವಂತೆ ಅಪ್ಪು ಅಭಿಮಾನಿಗಳು ಮನವಿ ಮಾಡಿಕೊಂಡಿದ್ದಾರೆ. ಪುನೀತ್ ಭಾವಚಿತ್ರ ಹಿಡಿದು ಬೈಕ್ ಗಳಲ್ಲಿ ತೆರಳಿ ಈ ಮನವಿ ಮಾಡಿದ್ದಾರೆ.

    ನಗರದ ಪ್ರಮುಖ ವೃತ್ತಗಳಲ್ಲಿ ಪುನೀತ್ ಫ್ಲೆಕ್ಸ್, ಕಟೌಟ್ ಇಟ್ಟು ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ. ಒಟ್ಟಿನಲ್ಲಿ ಅಗಲಿದ ನಟನಿಗೆ ತವರು ಜಿಲ್ಲೆಯ ಜನ ಕಂಬನಿ ಮಿಡಿಯುತ್ತಿದ್ದಾರೆ. ಇದನ್ನೂ ಓದಿ: ಆಯಸ್ಸಲ್ಲಿ 10 ವರ್ಷ ಅಪ್ಪುಗೆ ಕೊಟ್ಟು ನನ್ನ ಆ ರೀತಿ ಮಾಡಿದ್ರೆ ಚೆನ್ನಾಗಿರ್ತಿತ್ತು: ಸೋಮಶೇಖರ್ ರೆಡ್ಡಿ ಕಣ್ಣೀರು

    ನಿನ್ನೆ ಮಧ್ಯಾಹ್ನ ವೇಳೆ ನಟ ಪುನೀತ್ ಅವರು ನಗರದ ವಿಕ್ರಂ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಬಳಿಕ ಸಂಜೆ 5 ಗಂಟೆ ಸುಮಾರಿನಿಂದ ಅವರ ಮೃತದೇಹವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಮೊದಲು ಸದಾಶಿನಗರದ ಅವರ ನಿವಾಸಕ್ಕೆ ಮೃತದೇಹ ತೆಗೆದುಕೊಂಡು ಹೋಗಲಾಗಿತ್ತು. ಅಲ್ಲಿ ಕುಟುಂಬಸ್ಥರು ಅಂತಿಮ ದರ್ಶನ ಪಡೆದುಕೊಂಡ ಬಳಿಕ ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

    ಮಧ್ಯರಾತ್ರಿಯಿಂದ ಹಿಡಿದು ಇದುವರೆಗೂ ಅಪ್ಪು ಅಭಿಮಾನಿಗಳು ಅಂತಿಮ ದರ್ಶನ ಪಡೆಯುತ್ತಲೇ ಇದ್ದಾರೆ. ಮುಂಜಾನೆಯಾದರೂ ಅಭಿಮಾನಿಗಳ ಸಾಲು ಕರಗಲಿಲ್ಲ. ಸದ್ಯ ಅಮೆರಿಕದಲ್ಲಿರುವ ಮಗಳು ಬಂದ ಬಳಿಕ ಅಂತ್ಯಕ್ರಿಯೆ ನಡೆಯುತ್ತದೆ. ಇದನ್ನೂ ಓದಿ: ಪುನೀತ್ ನಿಧನಕ್ಕೆ ಕಂಬನಿ ಮಿಡಿದ ಭಾರತೀಯ ಸಿನಿತಾರೆಯರು

  • ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ- ನಾಳೆ ತುಮಕೂರು ಬಂದ್

    ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ- ನಾಳೆ ತುಮಕೂರು ಬಂದ್

    ತುಮಕೂರು: ಬಜರಂಗದಳದ ಜಿಲ್ಲಾ ಸಂಚಾಲಕ ಹಾಗೂ ಕಾರ್ಯಕರ್ತರ ಮೇಲೆ ಹಲ್ಲೆಯಾಗಿರೋದನ್ನು ಖಂಡಿಸಿ ವಿವಿಧ ಹಿಂದೂಪರ ಸಂಘಟನೆಗಳು ನಾಳೆ ತುಮಕೂರು ಬಂದ್ ಗೆ ಕರೆ ನೀಡಿದೆ.

    ತುಮಕೂರು ತಾಲೂಕು ಸಂಪೂರ್ಣ ಬಂದ್ ಆಗಲಿದ್ದು ವಿವಿಧ ಸಮುದಾಯದ ಮುಖಂಡರು, ವರ್ತಕರು ಬಂದ್ ಗೆ ಬೆಂಬಲ ನೀಡಿದ್ದಾರೆ ಎಂದು ವಿಶ್ವಹಿಂದುಪರಿಷತ್ ಮುಖಂಡ ಜಿ.ಕೆ.ಶ್ರೀನಿವಾಸ್ ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ಸಿಗೆ ದ್ರೋಹ ಮಾಡಿರುವ ಸುಧಾಕರ್ ಅಧಿಕಾರದ ಮದದಿಂದ ವರ್ತಿಸ್ತಿದ್ದಾರೆ: ಸಿದ್ದರಾಮಯ್ಯ

    ಇದೇ ವೇಳೆ ಮಾತನಾಡಿದ ನಗರ ಶಾಸಕ ಜ್ಯೋತಿಗಣೇಶ್, ವಿಶ್ವದಲ್ಲಿ ಹಿಂದೂಗಳಿಗೆ ಮುಕ್ತವಾಗಿರುವ ದೇಶ ಅಂದರೆ ಅದು ಭಾರತ ಮಾತ್ರ. ಇಲ್ಲೂ ಈ ರೀತಿ ದೌರ್ಜನ್ಯಗಳು ನಡೆದರೆ ಹಿಂದೂಗಳನ್ನು ಅರಬ್ಬೀ ಸಮುದ್ರಕ್ಕೆ ಎಸೆಯಬೇಕಾಗುತ್ತದೆ. ಹಾಗಾಗಿ ಹಿಂದೂ ಸಮಾಜ ಒಗ್ಗಟ್ಟಾಗಿ ನಮ್ಮ ಮೇಲಾಗುತ್ತಿರುವ ದೌರ್ಜನ್ಯ ಖಂಡಿಸಬೇಕು ಎಂದು ಕರೆ ನೀಡಿದರು. ಇದನ್ನೂ ಓದಿ: ಅಲ್ಪಸಂಖ್ಯಾತರ ಬಗ್ಗೆ ಬಿಜೆಪಿ ದ್ವಂದ್ವ ನೀತಿ: ಹೆಚ್‍ಡಿಕೆ ತರಾಟೆ

    ಏನಿದು ಪ್ರಕರಣ?:
    ಬಜರಂಗದಳ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ತುಮಕೂರು ನಗರದ ಗುಬ್ಬಿ ಗೇಟ್ ವೃತ್ತದಲ್ಲಿ ನಡೆದಿದೆ. ಬಜರಂಗದಳ ಜಿಲ್ಲಾ ಸಂಚಾಲಕ ಮಂಜು ಭಾರ್ಗವ ಹಾಗೂ ಅವರ ಜೊತೆಯಲ್ಲಿದ್ದ ಕಿರಣ್ ಎಂಬವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು. ಚಿಕಿತ್ಸೆಗಾಗಿ ತುಮಕೂರು ಜಿಲ್ಲೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಬ್ಬರು ಕಾರಿನಲ್ಲಿ ಬರುತ್ತಿದ್ದ ವೇಳೆ ಅಡ್ಡಗಟ್ಟಿದ ದುಷ್ಕರ್ಮಿಗಳು, ಮನಸ್ಸೋ ಇಚ್ಛೆ ರಾಡ್ ನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಈ ಸಂಬಂಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

  • ತಪ್ಪು ಕಲ್ಪನೆಗಳಿಂದ ಭಾರತ್ ಬಂದ್ ಕರೆ ನೀಡಲಾಗಿದೆ: ಲಕ್ಷ್ಮಣ್ ಸವದಿ

    ತಪ್ಪು ಕಲ್ಪನೆಗಳಿಂದ ಭಾರತ್ ಬಂದ್ ಕರೆ ನೀಡಲಾಗಿದೆ: ಲಕ್ಷ್ಮಣ್ ಸವದಿ

    ಚಿಕ್ಕೋಡಿ: ತಪ್ಪು ಕಲ್ಪನೆಗಳಿಂದ ಭಾರತ ಬಂದ್ ಮಾಡಲಾಗಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಬೆಳಗಾವಿಯಲ್ಲಿ ಹೇಳಿದ್ದಾರೆ.

    ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕೃಷಿ ಕಾನೂನು ರೈತರಿಗೆ ಅನುಕೂಲ ಮಾಡಲೆಂದು ಸರ್ಕಾರ ರೂಪಿಸಿದೆ. ದಲ್ಲಾಳಿಗಳಿಗೆ ಬಾರಿ ನಷ್ಟವಾಗುತ್ತಿರುವ ಕಾರಣ ರೈತರಿಗೆ ತಪ್ಪು ಸಂದೇಶ ಸಾರುತ್ತಿದ್ದಾರೆ. 2008ರಿಂದ ಕರ್ನಾಟಕದಲ್ಲಿ ಈ ಕಾನೂನು ಜಾರಿ ಇದೆ. ಕೇಂದ್ರ ಸರ್ಕಾರ ಈಗಷ್ಟೇ ಕಾನೂನು ತಿದ್ದುಪಡಿ ಮಾಡಿದೆ ಎಂದಿದ್ದಾರೆ. ಇದನ್ನೂ ಓದಿ:  ಮಗಳ ಹೆಸರು ರಿವೀಲ್ ಮಾಡಿದ ಯವರತ್ನ ನಟಿ ಸಯೇಷಾ

    ಹರಿಯಾಣ, ಉತ್ತರ ಪ್ರದೇಶ, ಜಾಖರ್ಂಡ್ ರಾಜ್ಯದಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದೆ. ರೈತರನ್ನು ಅವರು ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದ್ದಾರೆ. ಅವರಿಗೆ ಭಾರಿ ನಷ್ಟ ಸಂಭವಿಸುವುದರಿಂದ ಕೃಷಿ ಕಾನೂನು ಬಗ್ಗೆ ತಪ್ಪು ಸಂದೇಶ ಸಾರಲಾಗುತ್ತಿದೆ. ರೈತರಿಗೆ ಅನ್ಯಾಯವಾಗುತ್ತದೆ ಎನ್ನುವರು ಬಹಿರಂಗ ಸವಾಲಕ್ಕೆ ಬರಲಿ, ಯಾರಾದರೂ ಸಾಬೀತು ಪಡಿಸಿದರೆ ಕಾನೂನನ್ನು ವಾಪಸ್ ಪಡೆಯುತ್ತೇವೆ ಎಂದು ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಲಕ್ಷ್ಮಣ್ ಸವದಿ ಸವಾಲು ಹಾಕಿದ್ದಾರೆ.

  • ರೈತರ ಭಾರತ್ ಬಂದ್‌ಕರೆಗೆ ಆಂಧ್ರ ಪ್ರದೇಶ ಸರ್ಕಾರ ಬೆಂಬಲ

    ರೈತರ ಭಾರತ್ ಬಂದ್‌ಕರೆಗೆ ಆಂಧ್ರ ಪ್ರದೇಶ ಸರ್ಕಾರ ಬೆಂಬಲ

    ಹೈದರಾಬಾದ್: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ ಬಂದ್‍ಗೆ ಆಂಧ್ರ ಪ್ರದೇಶ ಸರ್ಕಾರ ಬೆಂಬಲ ಘೋಷಿಸಿದೆ ಎಂದು ಆಂಧ್ರ ಪ್ರದೇಶದ ಮಾಹಿತಿ ಮತ್ತು ಸಾರಿಗೆ ಸಚಿವ ಪೆರ್ನಿ ವೆಂಕಟರಾಮಯ್ಯ ತಿಳಿಸಿದ್ದಾರೆ.

    ಆಂಧ್ರ ಪ್ರದೇಶ ಸರ್ಕಾರ, ವೈಎಸ್‍ಆರ್ ಕಾಂಗ್ರೆಸ್ ಬಂದ್‍ಗೆ ಬೆಂಬಲ ನೀಡುತ್ತಿವೆ. ಸೆಪ್ಟೆಂಬರ್ 26ರ ಮಧ್ಯರಾತ್ರಿಯಿಂದ 27ರ ಸಂಜೆಯವರೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‍ಗಳೂ ರಸ್ತೆಗಿಳಿಯುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ:  ಒಳ್ಳೆಯ ಕೆಲಸ ಮಾಡಿದ್ದರೆ ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ಇಳಿಸುತ್ತಿರಲಿಲ್ಲ: ಡಿಕೆಶಿ

    ವಿಶಾಖಪಟ್ಟಣ ಉಕ್ಕಿನ ಕಾರ್ಖಾನೆಯ ಕಾರ್ಮಿಕರೂ ಬಂದ್‍ಗೆ ಬೆಂಬಲ ಸೂಚಿಸಿದ್ದಾರೆ.ವಿಶಾಖಪಟ್ಟಣ ಉಕ್ಕಿನ ಕಾರ್ಖಾನೆಯ ಖಾಸಗೀಕರಣವನ್ನು ವಿರೋಧಿಸುವುದಾಗಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಎಡಪಕ್ಷಗಳು, ಕಾಂಗ್ರೆಸ್ ಮತ್ತು ತೆಲುಗುದೇಶಂ ಪಕ್ಷಗಳೂ ಬಂದ್‍ಗೆ ಬೆಂಬಲ ಘೋಷಿಸಿವೆ.

  • ರೈತರು ನೀಡಿರುವ ಭಾರತ್ ಬಂದ್‍ಗೆ ಬೆಂಬಲವಿಲ್ಲ: ಶ್ರೀರಾಮುಲು

    ರೈತರು ನೀಡಿರುವ ಭಾರತ್ ಬಂದ್‍ಗೆ ಬೆಂಬಲವಿಲ್ಲ: ಶ್ರೀರಾಮುಲು

    -ಯಥಾಸ್ಥಿತಿ ಬಸ್ ಸಂಚಾರ

    ಚಿಕ್ಕೋಡಿ: ದೇಶವ್ಯಾಪಿ ರೈತರು ನೀಡಿರುವ ಭಾರತ್ ಬಂದ್‍ಗೆ ಬೆಂಬಲವಿಲ್ಲ, ಎಂದಿನಂತೆ ರಾಜ್ಯದ ಎಲ್ಲಕಡೆಗೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ಸಾರಿಗೆ ಬಸ್‍ಗಳು ಸಂಚಾರ ನಡೆಸಲಿವೆ ಎಂದು ಸಾರಿಗೆ ಇಲಾಖೆ ಸಚಿವ ಬಿ.ಶ್ರೀರಾಮುಲು ಹೇಳಿದರು.

    ಚಿಕ್ಕೋಡಿ ಪಟ್ಟಣದಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥದ ಶೀಲಾನ್ಯಾಸ ನೆರವೇರಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಬೆಳೆಯುವ ಸಲುವಾಗಿ ಕಾಂಗ್ರೆಸ್ ಪಕ್ಷ ಸ್ವಾರ್ಥದ ರಾಜಕಾರಣ ಮಾಡುತ್ತಿದ್ದು, ರೈತರನ್ನು ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದೆ. ರೈತರು ನೀಡಿರುವ ಭಾರತ ಬಂದ್‍ಗೆ ಸಾರಿಗೆ ಇಲಾಖೆ ಮತ್ತು ಸರ್ಕಾರದಿಂದ ಬೆಂಬಲವಿಲ್ಲ. ರಾಜ್ಯದ ಎಲ್ಲ ಕಡೆಗೂ ಸಾರಿಗೆ ಬಸ್‍ಗಳು ಸಂಚಾರ ನಡೆಸಲಿವೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಯಥಾಸ್ಥಿತಿಯಲ್ಲಿ ಬಸ್‍ಗಳನ್ನು ಆರಂಭಿಸಲಾಗುವುದು ಎಂದರು. ಇದನ್ನೂ ಓದಿ:  ದೇಶಕ್ಕೆ 600 ವೈದ್ಯಕೀಯ ಕಾಲೇಜು, ಏಮ್ಸ್‌ನಂಥ 50 ಸಂಸ್ಥೆ ಬೇಕು: ನಿತಿನ್ ಗಡ್ಕರಿ

    ರೈತರ ಹೆಸರು ಇಟ್ಟುಕೊಂಡು ತಮ್ಮ ಸ್ವಾರ್ಥಕ್ಕಾಗಿ ಸಾರ್ವಜನಿಕರಿಗೆ ತೊಂದರೆ ಕೊಡಬಾರದು. ಸರ್ಕಾರ ಮತ್ತು ಸಾರಿಗೆ ಇಲಾಖೆಯಿಂದ ಯಾವುದೇ ಕಾರಣಕ್ಕೂ ರೈತರು ಕರೆ ನೀಡಿದ್ದ ಬಂದ್ ಬೆಂಬಲಕ್ಕೆ ಸಹಕಾರವಿಲ್ಲ. ಸೆಪ್ಟೆಂಬರ್ 27ರದಂದು ಸಾರ್ವಜನಿಕ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು. ಮೋದಿ ಸರ್ಕಾರದ ರೈತರಪರವಾಗಿ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಪಕ್ಷದ ನಾಯಕರು ರೈತರನ್ನು ದಾರಿ ತಪ್ಪಿಸುವ ಕೆಲಸವನ್ನು ದೇಶ,ರಾಜ್ಯದಲ್ಲಿ ಮಾಡುತ್ತಿದ್ದಾರೆ. ಅಸಲಿ ರೈತರ ಬಿಜೆಪಿ ಜೊತೆಗೆ ಇದ್ದಾರೆ. ಬಿಳಿ ಬಟ್ಟೆ ಹಾಕಿ ರಾಜಕಾರಣ ಮಾಡುತ್ತಿರುವ ರೈತರು ನಿಜವಾದ ರೈತರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಶ್ರೀರಾಮುಲು ಹೇಳಿದರು.

  • ಎರಡು ತಿಂಗಳು ಕೊಡಗಿನಲ್ಲಿ ಪ್ರವಾಸೋದ್ಯಮ ಸಂಪೂರ್ಣ ಸ್ಥಗಿತಗೊಳಿಸಿ- ಸ್ಥಳೀಯರ ಆಗ್ರಹ

    ಎರಡು ತಿಂಗಳು ಕೊಡಗಿನಲ್ಲಿ ಪ್ರವಾಸೋದ್ಯಮ ಸಂಪೂರ್ಣ ಸ್ಥಗಿತಗೊಳಿಸಿ- ಸ್ಥಳೀಯರ ಆಗ್ರಹ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಾಸಿಟಿವ್ ಪ್ರಮಾಣ ಏರಿಳಿತದ ನಡುವೆಯೂ ರಾಜ್ಯ ಸರ್ಕಾರ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಒಂದಷ್ಟು ಮಾನದಂಡಗಳ ಜೊತೆ ಮುಕ್ತ ಅವಕಾಶ ಮಾಡಿಕೊಟ್ಟಿದೆ. ಹೀಗಾಗಿ ವೀಕೆಂಡ್ ಗಳಲ್ಲಿ ಪ್ರವಾಸಿಗರು ಕೊಡಗು ಜಿಲ್ಲೆಗೆ ಹೆಚ್ಚು ಅಗಮಿಸುತ್ತಿದ್ದಾರೆ. ಇದರಿಂದ ಪ್ರವಾಸೋದ್ಯಮ ಅವಲಂಬಿಸಿಕೊಂಡು ಬದುಕು ನಡೆಸುತ್ತಿರುವವರು ಚೇತರಿಕೆ ಕಾಣ್ಣುತ್ತಿದ್ದಾರೆ. ಇದೀಗ ಕೊಡಗು ಜಿಲ್ಲೆಯ ಜನ ಎರಡು ತಿಂಗಳ ಕಾಲ ಪ್ರವಾಸೋದ್ಯಮ ಚಟುವಟಿಕೆ ಸ್ಥಗಿತ ಮಾಡಬೇಕೆಂದು ಆಗ್ರಹಿಸಿದ್ದಾರೆ.

    ಇಂದು ಕೊಡಗಿನ ಜನ, ವಿವಿಧ ಸಂಘಟನೆಗಳು ಹಾಗೂ ಸಮಾನ ಮನಸ್ಕರನ್ನು ಒಳಗೊಂಡ ‘ಸೇವ್ ಕೊಡಗು ಫ್ರಮ್ ಟೂರಿಸ್ಟ್’ ತಂಡ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಿನಲ್ಲಿ ಜಿಲ್ಲೆಯಾದ್ಯಂತ ಪ್ರವಾಸೋದ್ಯಮವನ್ನು ಸಂಪೂರ್ಣ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಪತ್ರ ನೀಡಿದೆ. ಇದನ್ನೂ ಓದಿ: ಬ್ಯಾಂಕ್‍ನಲ್ಲಿ ಹಿಂದಿ ಬೇಡ, ಚೆಕ್ಕುಗಳು ಕನ್ನಡದಲ್ಲೇ ಇರಬೇಕು: ವಾಟಾಳ್

    ಅಕ್ಟೋಬರ್ ತಿಂಗಳಿನಲ್ಲಿ ನಡೆಯಲಿರುವ ಕೊಡಗಿನ ಸಂಪ್ರದಾಯಿಕ ಹಬ್ಬ ತುಲಾ ಸಂಕ್ರಮಣ ಆಚರಣೆಯ ಹಿತದೃಷ್ಟಿಯಿಂದ ಹಾಗೂ ಶಾಲಾ-ಕಾಲೇಜುಗಳ ಪುನರಾರಂಭದ ಹಿನ್ನೆಲೆ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಈ ಕಠಿಣ ನಿಯಮವನ್ನು ಜಾರಿಗೊಳಿಸಬೇಕೆಂದು ತಂಡ ಒತ್ತಾಯಿಸಿದೆ. ಗಡಿರಾಜ್ಯ ಕೇರಳದಲ್ಲಿ ಕೋವಿಡ್ ಹಾಗೂ ನಿಫಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊಡಗಿನ ಎಲ್ಲ ಗಡಿಗಳಿಂದಲೂ ಪ್ರವಾಸಿಗಳನ್ನು ಒಳಬಾರದಂತೆ ತಡೆಯಬೇಕು ಎಂದು ಒತ್ತಾಯಿಸಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಹೆಚ್ಚಾಗದಂತೆ ತಡೆಯಬೇಕು ಎಂದು ಆಗ್ರಹಿಸಿದೆ. ದನ್ನೂ ಓದಿ:  ರಾಮ, ಕೃಷ್ಣ, ಶಿವ ಭಾರತದ ಮುಸ್ಲಿಮರ ಪೂರ್ವಜರು: ಆನಂದ್ ಸ್ವರೂಪ್ ಶುಕ್ಲಾ

    ಕಳೆದ ಬಾರಿ ಜಿಲ್ಲಾಡಳಿತದ ವೈಫಲ್ಯದಿಂದ ತುಲಾ ಸಂಕ್ರಮಣದ ಸಂದರ್ಭ ಗೊಂದಲ ಉಂಟಾಗಿದ್ದು, ಕೊಡಗಿನ ಮೂಲ ನಿವಾಸಿಗಳಿಗೆ ಅತೀವ ನೋವುಂಟಾಗಿದೆ. ಈ ಬಾರಿ ಆ ರೀತಿ ಆಗದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿಬೇಕು ಎಂದು ತಂಡ ಮನವಿ ಮಾಡಿಕೊಂಡಿದೆ. ಕೊಡಗಿನ ಮೂಲ ನಿವಾಸಿಗಳಿಗೆ ಈ ಬಾರಿಯ ಹಬ್ಬದಲ್ಲಿ ಭಾಗಿಯಾಗಲು ಮುಕ್ತ ಅವಕಾಶ ಕೊಡಬೇಕು. ಹೊರಗಿನಿಂದ ಜಾತ್ರೆಗೆ ಆಗಮಿಸುವ ಭಕ್ತರು ಕಡ್ಡಾಯವಾಗಿ ಮುಂಗಡ ಹೆಸರು ನೊಂದಾಯಿಸಿಕೊಂಡು, ಕೋವಿಡ್ ನೆಗೆಟಿವ್ ರಿಪೋರ್ಟ್‍ನೊಂದಿಗೆ ಭಾಗವಹಿಸಲು ಮಾತ್ರ ಅವಕಾಶ ನೀಡಬೇಕು ಎಂದು ಮನವಿ ಮಾಡಲಾಗಿದೆ.

  • ದಕ್ಷಿಣ ಕನ್ನಡ, ಕಾಸರಗೋಡಿಗೆ ಹೊಂದಿಕೊಂಡಿರುವ ಮದ್ಯದಂಗಡಿಗಳು ಕ್ಲೋಸ್

    ದಕ್ಷಿಣ ಕನ್ನಡ, ಕಾಸರಗೋಡಿಗೆ ಹೊಂದಿಕೊಂಡಿರುವ ಮದ್ಯದಂಗಡಿಗಳು ಕ್ಲೋಸ್

    ಮಂಗಳೂರು: ಕೊರೊನಾ ಎಫೆಕ್ಟ್‌ನಿಂದಾಗಿ ದಕ್ಷಿಣ ಕನ್ನಡ ಮತ್ತು ಕಾಸರಗೋಡಿಗೆ ಹೊಂದಿಕೊಂಡಿರುವ ಮದ್ಯದಂಗಡಿಗಳನ್ನು ಕ್ಲೋಸ್ ಮಾಡಲಾಗಿದೆ.

    ಕೇರಳ ಗಡಿಗೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಟಫ್ ರೂಲ್ಸ್ ಗೆ ತಜ್ಞರು ಶಿಪಾರಸ್ಸು ನೀಡಿದ್ದಾರೆ. ಈ ಬೆನ್ನಲ್ಲೆ ಕಠಿಣ ಕಾಯ್ದೆಯನ್ನು ಜಿಲ್ಲಾಡಳಿತ ಹೇರಲು ಮುಂದಾಗಿದೆ. ಇದನ್ನೂ ಓದಿ:  ಅಪ್ಪ ಅರೆಸ್ಟ್, ಅಮ್ಮ ಕಣ್ಣೀರು – ಪೋಸ್ಟ್ ಮಾಡಿ ಸುದ್ದಿಯಾದ ಶಿಲ್ಪಾ ಶೆಟ್ಟಿ ಮಗ

    ಕೇರಳದಿಂದ ದಕ್ಷಿಣ ಕನ್ನಡದ ಬಾರ್ಡರ್‍ನ ಮದ್ಯದಂಗಡಿಗೆ ಜನ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಈಗ ಮದ್ಯದಂಗಡಿಯನ್ನು ಬಂದ್ ಮಾಡಲು ಸೂಚನೆ ಕೊಟ್ಟಿದೆ. ಇಂದಿನಿಂದ ದಿನಾಂಕ 15ರ ತನಕ ಮದ್ಯದಂಗಡಿ ಮುಚ್ಚಿಸಲು ಆದೇಶ ಕೊಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಸುಳ್ಯ, ಪುತ್ತೂರು ತಾಲೂಕು ವ್ಯಾಪ್ತಿಯ ಕೆಲ ಮದ್ಯದಂಗಡಿ ಮುಚ್ಚಲು ಜಿಲ್ಲಾಡಳಿತ ಆದೇಶಿಸಿದೆ.

  • ಕೊರೊನಾ ಇಳಿಮುಖ- ಧಾರವಾಡದಲ್ಲಿ 64 ಕೋವಿಡ್ ಕೇಂದ್ರ ಸ್ಥಗಿತ

    ಕೊರೊನಾ ಇಳಿಮುಖ- ಧಾರವಾಡದಲ್ಲಿ 64 ಕೋವಿಡ್ ಕೇಂದ್ರ ಸ್ಥಗಿತ

    ಹುಬ್ಬಳ್ಳಿ: ಕೊರೊನಾ ಸೋಂಕಿತರ ಸಂಖ್ಯೆ ದಿನ ಕಳೆದಂತೆ ಇಳಿಮುಖವಾಗುತ್ತಿರುವುದರಿಂದ ಜಿಲ್ಲೆಯಲ್ಲಿನ 84 ಕೋವಿಡ್ ಕೇರ್ ಸೆಂಟರ್ ಪೈಕಿ 64 ಕೇಂದ್ರಗಳನ್ನು ಸ್ಥಗಿತಗೊಳಿಸಲಾಗಿದೆ.

    ಏಪ್ರಿಲ್-ಮೇ ತಿಂಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿ ಗ್ರಾಮೀಣ ಪ್ರದೇಶಕ್ಕೂ ವ್ಯಾಪಿಸಿತ್ತು. ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ಎಷ್ಟೋ ಜನರು ಅಸುನೀಗಿದ್ದರು. ಜೊತೆಗೆ ಹೋಮ್ ಐಸೋಲೇಷನ್‍ನಲ್ಲಿ ಇರುವವರಿಂದ ಸೋಂಕು ಹೆಚ್ಚಾಗಿ ಹರಡಿತ್ತು. ಇದನ್ನು ಮನಗಂಡು ಜಿಲ್ಲಾಡಳಿತ ಸೋಂಕಿತರನ್ನು ಹೋಮ್ ಐಸೋಲೇಶನ್ ಮಾಡದೆ ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ನೀಡುವ ಉದ್ದೇಶದಿಂದ ಈ ಕೇಂದ್ರಗಳನ್ನು ತೆರೆಯಲಾಗಿತ್ತು.

    ಗ್ರಾಮೀಣ 10, ಹುಬ್ಬಳ್ಳಿ ಗ್ರಾಮೀಣ 14, ಕಲಘಟಗಿ 12, ಅಣ್ಣಿಗೇರಿ 8, ಕುಂದಗೋಳ 16, ನವಲಗುಂದ 8, ಅಳ್ನಾವರ 5 ಹೀಗೆ ಒಟ್ಟು 84 ಕೇಂದ್ರಗಳನ್ನು ತೆರೆಯಲಾಗಿತ್ತು. ಹೋಮ್ ಐಸೋಲೇಷನ್‍ನಲ್ಲಿದ್ದ ಕೆಲವರನ್ನು ಈ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಜೊತೆಗೆ ಮನೆಗಳಲ್ಲಿ ಪ್ರತ್ಯೇಕವಾಗಿ ವಾಸವಾಗಿರಲು ಅವಕಾಶ ಇಲ್ಲದ ಸೌಮ್ಯ ಲಕ್ಷಣಗಳಿರುವ ಸೋಂಕಿತರನ್ನು ಸಹ ದಾಖಲಿಸಲಾಗಿತ್ತು. ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 2,011 ಸೋಂಕಿತರು ಕೋವಿಡ್ ಕೇರ್ ಸೆಂಟರ್‍ಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

    2,011 ಸೋಂಕಿತರ ಪೈಕಿ ಈ ವರೆಗೆ 1,940 ಜನರು ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಉಳಿದವರು ಬರೀ 71 ಜನ ಮಾತ್ರ. ಅದರಲ್ಲೂ ಹುಬ್ಬಳ್ಳಿ-ಧಾರವಾಡ ಮಹಾನಗರದ ಕೋವಿಡ್ ಕೇರ್ ಸೆಂಟರ್ ನಲ್ಲಿ ಅತಿ ಹೆಚ್ಚು ಎಂದರೆ 39 ಸೋಂಕಿತರಿದ್ದರೆ, 14 ಜನ ಧಾರವಾಡ ಗ್ರಾಮೀಣ ಭಾಗದಲ್ಲಿದ್ದಾರೆ. ಅಣ್ಣಿಗೇರಿ 8, ಕುಂದಗೋಳ 7, ನವಲಗುಂದದಲ್ಲಿ 3 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ 20 ಕೋವಿಡ್ ಕೇರ್ ಸೆಂಟರ್ ಬಿಟ್ಟು ಉಳಿದ 64ನ್ನು ಮುಚ್ಚಲಾಗಿದೆ. ಒಂದು ವೇಳೆ ಕೋವಿಡ್ ಕೇರ್ ಸೆಂಟರ್ ಮತ್ತೆ ಬೇಕೆನಿಸಿದರೆ ಪ್ರಾರಂಭಿಸಲಾಗುವುದು. ಆದರೆ ಸದ್ಯ ಇವುಗಳನ್ನು ಬಂದ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.