Tag: ಬಂದ್

  • ಕೊಡಗಿನಲ್ಲಿ ಮಂಗಳವಾರ, ಶುಕ್ರವಾರ ಅರ್ಧ ದಿನ ಮಾತ್ರ ಅಂಗಡಿ ಓಪನ್

    ಕೊಡಗಿನಲ್ಲಿ ಮಂಗಳವಾರ, ಶುಕ್ರವಾರ ಅರ್ಧ ದಿನ ಮಾತ್ರ ಅಂಗಡಿ ಓಪನ್

    – ಉಳಿದ ದಿನ ಪೂರ್ತಿ ಬಂದ್

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳಿಗೆ ಜಿಲ್ಲಾಡಳಿತ ಮುಂದಾಗಿದೆ.

    ಇನ್ನೂ ಮುಂದೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರ ಮಾತ್ರ ಜಿಲ್ಲೆಯಾದ್ಯಂತ ಬೆಳಗ್ಗೆ 6 ಗಂಟೆಯಿಂದ 12 ಗಂಟೆಯವರೆಗೆ ದಿನಸಿ, ಹಣ್ಣು-ತರಕಾರಿ, ಮಾಂಸದ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಹಾಗೂ ಉಳಿದ ದಿನ ಅಂಗಡಿಗಳನ್ನು ತೆರೆದು ವಹಿವಾಟು ನಡೆಸಲು ಅವಕಾಶ ಇರುವುದಿಲ್ಲ ಎಂದು ಕೊಡಗು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

    ಔಷಧಿ ಅಂಗಡಿಗಳು, ಪೆಟ್ರೋಲ್ ಬಂಕ್‍ಗಳಿಗೆ ಬಂದ್ ಅನ್ವಯಿಸುವುದಿಲ್ಲ. ಹಾಲು ಮತ್ತು ಹಾಲಿನ ಉತ್ಪನ್ನಗಳಿಗೆ ಪತ್ರಿಕೆ ವಿತರಣೆಗೆ ಪ್ರತಿನಿತ್ಯ ಬೆಳಗ್ಗೆ 6 ರಿಂದ 10 ಗಂಟೆವರೆಗೆ ವಹಿವಾಟಿಗೆ ಅವಕಾಶ ನೀಡಲಾಗಿದೆ. ಬೆಂಗಳೂರು-ಮೈಸೂರು ಕೇರಳದಿಂದ ಬಂದವರಿಂದ ಕೊಡಗು ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಅಭಿಪ್ರಾಯಪಟ್ಟ ಜಿಲ್ಲಾಧಿಕಾರಿ, ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯ ಪಡೆಗಳು ಹೊರ ಊರುಗಳಿಂದ ಬಂದವರು ಆರೋಗ್ಯದ ಬಗ್ಗೆ ನಿಗಾ ವಹಿಸಿದ್ದಾರೆ. ಸೋಂಕು ತಡೆಯಲು ಪ್ರತಿಯೊಬ್ಬರೂ ಜಿಲ್ಲಾ ಆಡಳಿತದೊಂದಿಗೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

  • ಕೊಡಗಿನಿಂದ ವಾಪಸ್ ಆಗುತ್ತಿದ್ದಾರೆ ನೂರಾರು ಪ್ರವಾಸಿಗರು

    ಕೊಡಗಿನಿಂದ ವಾಪಸ್ ಆಗುತ್ತಿದ್ದಾರೆ ನೂರಾರು ಪ್ರವಾಸಿಗರು

    ಮಡಿಕೇರಿ: ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳನ್ನು ಬಂದ್ ಮಾಡುವಂತೆ ಕೊಡಗು ಜಿಲ್ಲಾಡಳಿತ ಆದೇಶ ಮಾಡಿದೆ.

    ಫೆಬ್ರವರಿ 3ರ ಸಂಜೆಯಿಂದಲೇ ಪ್ರವಾಸಿ ತಾಣಗಳನ್ನು ಬಂದ್ ಮಾಡುವಂತೆ ಆದೇಶಿಸಿದ್ದು, ಏಪ್ರಿಲ್ 20 ರವರೆಗೆ ಮುಚ್ಚಲಿವೆ. ಕೊಡಗಿನ ಪ್ರಸಿದ್ದ ಪ್ರವಾಸಿ ತಾಣ ಪ್ರವಾಸಿಗರ ಹಾಟ್ ಸ್ಪಾಟ್ ಆಗಿರುವ ರಾಜಾಸೀಟ್, ಅಬ್ಬಿಫಾಲ್ಸ್, ದುಬಾರೆ ಅಷ್ಟೇ ಅಲ್ಲ ತಲಕಾವೇರಿ ಸೇರಿದಂತೆ ಎಲ್ಲಾ ಪ್ರವಾಸಿ ತಾಣಗಳನ್ನು ಬಂದ್ ಮಾಡಲಾಗಿದೆ.

    ಪ್ರವಾಸಿ ತಾಣಗಳನ್ನು ನಿನ್ನೆ ಸಂಜೆ ಇದ್ದಕ್ಕಿದ್ದಂತೆ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಸಾಕಷ್ಟು ಪ್ರವಾಸಿಗರು ಸಮಸ್ಯೆಗೆ ಸಿಲುಕುವಂತಾಯಿತು. ಅದರಲ್ಲೂ ರಜಾ ದಿನವಾದ ಭಾನುವಾರವೂ ಮಾಹಿತಿ ಇಲ್ಲದೆ, ಜಿಲ್ಲೆಯ ಪ್ರವಾಸಿ ತಾಣಗಳಿಗೆ ಬಂದಿದ್ದ ನೂರಾರು ಪ್ರವಾಸಿಗರು ನಿರಾಶರಾಗಬೇಕಾಯಿತು. ಹೊರ ಜಿಲ್ಲೆ ಮತ್ತು ಹೊರರಾಜ್ಯಗಳಿಂದ ಬಂದಿದ್ದ ಪ್ರವಾಸಿಗರು ಪ್ರವಾಸಿ ತಾಣಗಳ ಎಂಟ್ರಿಯಲ್ಲೇ ಬೀಗ ಹಾಕಿರುವುದನ್ನು ನೋಡಿ ವಾಪಸ್ ತೆರಳಿದರು. ಮೊದಲೇ ಮಾಹಿತಿ ನೀಡಿದ್ದರೆ ವೆಚ್ಚ ಮಾಡಿಕೊಂಡು ಕೊಡಗಿಗೆ ಬರುವುದೆಲ್ಲವೂ ತಪ್ಪುತ್ತಿತ್ತು ಎಂದು ಪ್ರವಾಸಿಗರು ಅಸಮಾಧಾನ ವ್ಯಕ್ತಪಡಿಸಿದರು.

    ಮತ್ತೊಂದೆಡೆ ಪ್ರವಾಸಿ ತಾಣಗಳಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ ವ್ಯಾಪಾರಿಗಳು ವೀಕೆಂಡ್‍ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವರೆಂದು ಸಾಕಷ್ಟು ಬಂಡವಾಳ ಹಾಕಿದ್ದು, ಇದ್ದಕ್ಕಿದ್ದಂತೆ ಪ್ರವಾಸಿ ತಾಣಗಳನ್ನು ಬಂದ್ ಮಾಡಿದ್ದರಿಂದ ವ್ಯಾಪಾರಿಗಳು ನಷ್ಟ ಅನುಭವಿಸುವಂತಾಗಿದೆ. ಕಳೆದ ವರ್ಷವೂ ಆರೇಳು ತಿಂಗಳ ಕಾಲ ಲಾಕ್ ಡೌನ್ ಆಗಿದ್ದರಿಂದ ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ್ದೇವು. ಈಗ ಮತ್ತೆ ಲಾಕ್‍ಡೌನ್ ಮಾಡಿರುವುದರಿಂದ ತಮ್ಮ ಬದುಕು ಅತಂತ್ರವಾಗುವ ಸ್ಥಿತಿ ನಿರ್ಮಾಣವಾಗಿದೆ ಎಂದು ವ್ಯಾಪಾರಿಗಳು ಅಳಲು ತೋಡಿಕೊಳ್ಳುತ್ತಿದ್ದಾರೆ.

  • ಪಂಜಾಬ್‍ನಲ್ಲಿ ಶಾಲಾ ಕಾಲೇಜುಗಳು ಬಂದ್- ನೈಟ್ ಕಫ್ರ್ಯೂ ಜಾರಿ

    ಪಂಜಾಬ್‍ನಲ್ಲಿ ಶಾಲಾ ಕಾಲೇಜುಗಳು ಬಂದ್- ನೈಟ್ ಕಫ್ರ್ಯೂ ಜಾರಿ

    – 11 ಜಿಲ್ಲೆಗಳಲ್ಲಿ ಕಫ್ರ್ಯೂ ಜಾರಿ
    – ಚಿತ್ರಮಂದಿರಗಳಲ್ಲಿ ಶೆ.50ರಷ್ಟು ಭರ್ತಿ

    ಚಂಡೀಗಢ: ಕೊರೊನಾ ಸೋಂಕು ಹೆಚ್ಚಾಗಿರುವ ಕಾರಣದಿಂದಾಗಿ ಪಂಜಾಬ್‍ನಲ್ಲಿ ನೈಟ್ ಕಫ್ರ್ಯೂ ಹಾಗೂ 31ರವರೆಗೆ ಶಾಲಾ ಕಾಲೇಜನ್ನು ಮುಚ್ಚಲು ಆದೇಶಿಸಲಾಗಿದೆ.

    ಕೊರೊನ ಸೋಂಕು ಹೆಚ್ಚು ಆಗಿರುವ ಹಿನ್ನಲೆಯಲ್ಲಿ 8 ಜಿಲ್ಲೆಗಳಲ್ಲಿ ರಾತ್ರಿ ಕಫ್ರ್ಯೂವನ್ನು ವಿಧಿಸಲಾಗಿತ್ತು. ಇದೀಗ 11 ಜಿಲ್ಲೆಗಳಿಗೆ ಇದೆ ಆದೇಶವನ್ನು ಜಾರಿಗೊಳಿಸಲಾಗಿದೆ. ಸಭೆ, ಸಮಾರಂಭಗಳ ಮೇಲೆ ಸಂಪೂರ್ಣವಾದ ನಿಷೇಧವನ್ನು ವಿಧಿಸಲಾಗಿದೆ.

    ವೈದ್ಯಕೀಯ ಕಾಲೇಜುಗಳನ್ನು ಹೊರತುಪಡಿಸಿ ಉಳಿದೆಲ್ಲ ಶಿಕ್ಷಣ ಸಂಸ್ಥೆಗಳನ್ನು ಮಾರ್ಚ್ 31ರ ವರೆಗೆ ಮುಚ್ಚಬೇಕೆಂದು ಆದೇಶಿಸಲಾಗಿದೆ. ಮಾಲ್‍ಗಳಲ್ಲಿ 100 ಜನರಿಗೆ ಮಾತ್ರ ಅವಕಾಶವನ್ನು ಕೊಡಬೇಕು. ಚಿತ್ರಮಂದಿರಗಳಲ್ಲಿ ಶೆ.50ರಷ್ಟು ಮಾತ್ರ ಜನರನ್ನು ಸೇರಿಸಬೇಕು ಎಂದು ಆದೇಶಿಸಲಾಗಿದೆ.

    ಪಂಜಾಬ್‍ನಲ್ಲಿ 24 ಗಂಟೆಗಳ ಅವಧಿಯಲ್ಲಿ 2,387 ಕೊರೊನಾ ಪ್ರಕರಣಗಳು ವರಧಿಯಾಗಿದೆ. ರಾಜ್ಯದಲ್ಲಿ 2.05 ಲಕ್ಷ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 6,204 ಮಂದಿ ಮೃತಪಟ್ಟಿದ್ದಾರೆ.

  • ರೇಷ್ಮೆ ಗೂಡು ಮಾರುಕಟ್ಟೆ ಸ್ಥಳಾಂತರ ಖಂಡಿಸಿ ರಾಮನಗರ ಬಂದ್

    ರೇಷ್ಮೆ ಗೂಡು ಮಾರುಕಟ್ಟೆ ಸ್ಥಳಾಂತರ ಖಂಡಿಸಿ ರಾಮನಗರ ಬಂದ್

    ರಾಮನಗರ: ಜಿಲ್ಲೆಯ ನಗರಸಭೆ ಕಾರ್ಯವೈಖರಿ ಹಾಗೂ ರೇಷ್ಮೆ ಗೂಡು ಮಾರುಕಟ್ಟೆ ಸ್ಥಳಾಂತರ ಖಂಡಿಸಿ ಜನ ಜಾಗೃತಿ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಇಂದು ರಾಮನಗರ ಬಂದ್ ಮಾಡಲು ಕರೆ ನೀಡಿವೆ.

    ಜನ ಜಾಗೃತಿ ವೇದಿಕೆಯ ಅಧ್ಯಕ್ಷ ಕೆ.ಶೇಷಾದ್ರಿ ನೇತೃತ್ವದಲ್ಲಿ ಬಂದ್ ಜರುಗಲಿದ್ದು, ಬೆಳಗ್ಗೆ 11 ಗಂಟೆಗೆ ರಾಮನಗರದ ಮಿನಿ ವಿಧಾನಸೌಧದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಕಾರರು ಪಾದಯಾತ್ರೆ ಕೈಗೊಳ್ಳಲಿದ್ದಾರೆ.

    ನಗರಸಭೆಯಲ್ಲಿ ನಡೆಯುತ್ತಿರುವ ಅಕ್ರಮ ನಿಲ್ಲಬೇಕು ಹಾಗೂ ಏಷ್ಯಾದಲ್ಲೇ ಅತಿದೊಡ್ಡ ರೇಷ್ಮೆ ಗೂಡು ಮಾರುಕಟ್ಟೆ ಎನಿಸಿಕೊಂಡಿರುವ ರಾಮನಗರ ರೇಷ್ಮೆ ಗೂಡು ಮಾರುಕಟ್ಟೆಯನ್ನು ಸ್ಥಳಾಂತರ ಮಾಡುವ ನಿರ್ಧಾರವನ್ನು ಕೂಡಲೇ ಕೈ ಬಿಡಬೇಕು ಎಂದು ಹೋರಾಟ ಮಾಡಲಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿಂದು 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಬೇಕೆಂದು ರಾಮನಗರ ತಹಶೀಲ್ದಾರ್ ನರಸಿಂಹಮೂರ್ತಿ ಪೊಲೀಸರಿಗೆ ಆದೇಶಿಸಿದ್ದಾರೆ.

    ಪಾದಯಾತ್ರೆ ಜೊತೆಗೆ ಜನ ಜಾಗೃತಿ ವೇದಿಕೆ ಕಾರ್ಯಕರ್ತರು ಹಾಗೂ ಸಂಘಟನೆ ಕಾರ್ಯಕರ್ತರು ನಗರದಲ್ಲಿ ಬೈಕ್ ರ್ಯಾಲಿ ನಡೆಸಲಿದ್ದಾರೆ. ಅಲ್ಲದೆ ಅಂಗಡಿ ಮುಗ್ಗಟ್ಟುಗಳನ್ನು ತೆರೆಯದೆ ಬಂದ್ ಗೆ ಬೆಂಬಲ ನೀಡಿ ಎಂದು ಇತರರಿಗೂ ಕರೆ ನೀಡಿದ್ದಾರೆ.

  • ಜನವರಿ 30 ರಾಜ್ಯದಲ್ಲಿ ರೈಲು ಬಂದ್ -ವಾಟಾಳ್ ನಾಗರಾಜ್

    ಜನವರಿ 30 ರಾಜ್ಯದಲ್ಲಿ ರೈಲು ಬಂದ್ -ವಾಟಾಳ್ ನಾಗರಾಜ್

    -ಬೆಳಗಾವಿಯ ರಾಜಕಾರಣಿಗಳು ಕೋಮಾದಲ್ಲಿದ್ದಾರೆ
    -ಕನ್ನಡಪರ ಸಂಘಟನೆಗಳಿಂದ ಕನ್ನಡ ಉಳಿದಿದೆ
    – ಬಿಜೆಪಿ ಕನ್ನಡ ಸಂಘಟನೆಗಳ ವಿರೋಧಿ ಸರ್ಕಾರ

    ಚಿಕ್ಕಬಳ್ಳಾಪುರ : ಮರಾಠ ಅಭಿವೃದ್ಧಿ ಪ್ರಾಧಿಕಾರ ರದ್ದು ಹಾಗೂ ಎಂಇಎಸ್ ಸಂಘಟನೆ ನಿಷೇಧಿಸುವಂತೆ ಜನವರಿ 30 ರಂದು ರಾಜ್ಯದಲ್ಲಿ ರೈಲು ಬಂದ್ ಮಾಡಿ ಹೋರಾಟ ಮಾಡುವುದಾಗಿ ಕನ್ನಡಪರ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.

     

    ಚಿಕ್ಕಬಳ್ಳಾಪುರ ರೈಲು ನಿಲ್ದಾಣದಲ್ಲಿ ಕಪ್ಪುಪಟ್ಟಿ ಧರಿಸಿ ಮಾತನಾಡಿದ ಅವರು, ಬೆಳಗಾವಿ ನಮ್ಮದು-ಕಾರವಾರ ನಮ್ಮದು. ಆದರೆ ಮಹಾರಾಷ್ಟ್ರದ ಶಿವಸೇನೆಯ ಸರ್ಕಾರ ಸಿಎಂ ಉದ್ದವ್ ಠಾಕ್ರೆ ಬೆಳಗಾವಿಯನ್ನೇ ಪಡೆದೇ ಪಡೆಯಬೇಕು ಎಂಬ ಹಠದಲ್ಲಿ ದಾಂಧಲೆ ಮಾಡುತ್ತಿದ್ದಾರೆ. ಅವರಿಗೆ ಎಂಇಎಸ್ ನವರು ಬೆಂಬಲ ಕೊಡುತ್ತಿದ್ದಾರೆ. ಆದರೆ ಕರ್ನಾಟಕ ಸರ್ಕಾರ ನಿಷ್ಕ್ರಿಯವಾಗಿದೆ. ಬೆಳಗಾವಿಯ ರಾಜಕಾರಣಿಗಳು ಕೋಮಾದಲ್ಲಿದ್ದಾರೆ. ಅವರಿಗೆ ಯಾರು ಬೇಕಾಗಿಲ್ಲ ಮಂತ್ರಿಯಾಗಬೇಕು ಅಷ್ಟೇ. ಬೆಳಗಾವಿ ರಾಜಕಾರಣಿಗಳು ಮಹಾರಾಷ್ಟ್ರ ಹಾಗೂ ಎಂಇಎಸ್ ಎಜೆಂಟ್ ಗಳಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ಕನ್ನಡ ಉಳಿದಿದ್ದರೇ ಕನ್ನಡಪರ ಸಂಘಟನೆಗಳಿಂದಾಗಿದೆ. ಯಡಿಯೂರಪ್ಪ ಸರ್ಕಾರ ತೀರ ಇತ್ತೀಚೆಗೆ ಬಂದಿರುವ ಎಲ್ಲಾ ಸರ್ಕಾರಗಳಿಗಿಂತಲೂ ಹೀನಾಯ ಸರ್ಕಾರ. ಕನ್ನಡ ವಿರೋಧಿ ಸರ್ಕಾರ. ಕನ್ನಡ ಸಂಘಟನೆಗಳ ವಿರೋಧಿ ಸರ್ಕಾರ. ಬಿಜೆಪಿ ಆರ್ ಎಸ್ ಎಸ್ ಸರ್ಕಾರ. ಇವರಿಗೆ ಹಿಂದಿ ಬಗ್ಗೆ ಅಭಿಮಾನವೇ ಹೊರತು ಕನ್ನಡದ ಬಗ್ಗೆ ಅಲ್ಲ. ಯಡಿಯೂರಪ್ಪನವರು ಮರಾಠ ಅಭಿವೃದ್ದಿ ಪ್ರಾಧಿಕಾರ ರಚನೆ ಮಾಡುವ ಮೂಲಕ ಕನ್ನಡಿಗರಿಗೆ ದ್ರೋಹ ಅನ್ಯಾಯ ಮಾಡಿದ್ದಾರೆ. ಹೀಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಹಿಂಪಡೆಯಬೇಕು. ಎಂಎಎಸ್ ಸಂಘಟನೆ ನಿಷೇಧ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

  • 9 ಸಾವಿರ ಬಾಡಿಗೆ ನೀಡಿ ಬಳ್ಳಾರಿಯಿಂದ ಬೆಳಗಾವಿಗೆ ಬಂದ ಯೋಧರು!

    9 ಸಾವಿರ ಬಾಡಿಗೆ ನೀಡಿ ಬಳ್ಳಾರಿಯಿಂದ ಬೆಳಗಾವಿಗೆ ಬಂದ ಯೋಧರು!

    – ಅಳಲು ತೋಡಿಕೊಂಡ ಸೈನಿಕರು

    ಬೆಳಗಾವಿ: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ನಿರಂತರ ಮುಷ್ಕರ ನಡೆಯುತ್ತಿದೆ. ಪರಿಣಾಮ ರಾಜ್ಯಾದ್ಯಂತ ಬಸ್ ಬಂದ್ ಆಗಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ. ಇದೇ ರೀತಿ ಇದೀಗ ಈ ಬಂದ್ ಬಿಸಿ ದೇಶ ಕಾಯುವ ಯೋಧರಿಗೂ ತಟ್ಟಿದೆ.

    ಇಬ್ಬರು ಯೋಧರು ಬರೋಬ್ಬರಿ 9 ಸಾವಿರ ರೂ. ಬಾಡಿಗೆ ನೀಡಿ ಕ್ಯಾಬ್ ನಲ್ಲಿ ಬಳ್ಳಾರಿಯಿಂದ ಬೆಳಗಾವಿಗೆ ಬಂದಿದ್ದಾರೆ. ಈ ಇಬ್ಬರು ಯೋಧರು ಬೆಳಗಾವಿಯ ಮರಾಠಾ ಲೈಟ್ ಇನ್ಫೆಂಟ್ರಿಗೆ ಹಾಜರಾಗಬೇಕಿದ್ದರು. ಬೆಳಗಾವಿಯಲ್ಲಿ ರಿಪೋರ್ಟ್ ಮಾಡಿ ಜಮ್ಮುಗೆ ತೆರಳಬೇಕಿದ್ದರಿಂದ ಅವರಿಗೆ ಇಷ್ಟೊಂದು ಹಣ ಕೊಟ್ಟಾದರೂ ತೆರಳುವ ಅನಿವಾರ್ಯವಿತ್ತು.

    ಬಸ್ ಬಂದ್‍ನಿಂದಾಗಿ ತುಂಬಾ ತೊಂದರೆಯಾಗುತ್ತಿದೆ. ಇನ್ನೂ ಹಲವು ಯೋಧರು ಬೆಳಗಾವಿಗೆ ಬರಬೇಕಾಗಿದೆ. ಸರ್ಕಾರಿ ಬಸ್‍ಗಳು ಆರಂಭವಾದರೆ ಕಡಿಮೆ ಹಣದಲ್ಲಿ ಬರಬಹುದು. ಬಸ್‍ಗಳ ಸಂಚಾರ ಆರಂಭಿಸಿ ಅನುಕೂಲ ಮಾಡಿಕೊಡಿ ಎಂದು ಯೋಧರೊಬ್ಬರು ತಮ್ಮ ಅಳಲು ತೋಡಿಕೊಂಡರು.

  • ಇಂದು ರೋಡಿಗಿಳಿಯೋ ಮುನ್ನ ಎಚ್ಚರ- ಬೆಂಗಳೂರಲ್ಲಿ ಬಸ್ ಓಡಾಟ ಬಹುತೇಕ ಸ್ಥಗಿತ

    ಇಂದು ರೋಡಿಗಿಳಿಯೋ ಮುನ್ನ ಎಚ್ಚರ- ಬೆಂಗಳೂರಲ್ಲಿ ಬಸ್ ಓಡಾಟ ಬಹುತೇಕ ಸ್ಥಗಿತ

    ಬೆಂಗಳೂರು: ಇಂದು ರೋಡಿಗೆ ಇಳಿಯೋ ಮುನ್ನ ಎಚ್ಚರವಾಗಿರಿ. ಯಾಕಂದ್ರೆ ಇಂದು ಸಾರಿಗೆ ನೌಕರರು ಸಂಪೂರ್ಣವಾಗಿ ಬಂದ್ ಗೆ ಕರೆಕೊಟ್ಟಿದ್ದಾರೆ.

    ಹೌದು. ಬಂದ್ ಕರೆಕೊಟ್ಟ ಹಿನ್ನೆಲೆಯಲ್ಲಿ ಈಗಾಗಲೇ ಬೆಂಗಳೂರಲ್ಲಿ ಬಸ್ಸುಗಳ ಓಡಾಟ ಬಹುತೇಕ ಸ್ಥಗಿತಗೊಂಡಿದೆ. ಬಸ್ ಹೊರಡದೆ ಡಿಪೋದಲ್ಲಿಯೇ ಸ್ಥಗಿತಗೊಳಿಸಲಾಗಿದೆ. ವಿವಿಧ ಡಿಪೋಗಳಿಂದ ಸಿಬ್ಬಂದಿ ಒಂದೆಡೆ ಸೇರಿದ್ದು, ನಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಗಣಿಸುವವವರೆಗೆ ಹೋರಾಟ ಕೈ ಬಿಡಲ್ಲ ಎಂದು ಆಗ್ರಹಿಸುತ್ತಿದ್ದಾರೆ.

    ನಿನ್ನೆ ವಿಧಾನ ಸೌಧ ಮುತ್ತಿಗೆ ಹಾಕಿದರೂ ಸರ್ಕಾರ ಅಹವಾಲು ಆಲಿಸಲಿಲ್ಲ ಎಂದು ಇಂದು ಸಾರಿಗೆ ನೌಕರರು ರೊಚ್ಚಿಗೆದ್ದಿದ್ದಾರೆ. ಬೆಳಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆಯವರೆಗೂ ಬಸ್ ಆರಂಭ ಮಾಡದೇ ಇರಲು ನಿರ್ಧಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆರೂವರೆ ಸಾವಿರ ಬಿಎಂಟಿಸಿ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

    ಒಂದೆಡೆ ಮೆಟ್ರೋ ಸಂಚಾರದಲ್ಲಿ ಕೂಡ ಏರುಪೇರಾಗುವ ಸಾಧ್ಯತೆಗಳಿವೆ. ಇನ್ನೊಂದೆಡೆ ನಾಲ್ಕು ಸಾರಿಗೆ ನಿಗಮಗಳಾದ ಬಿಎಂಟಿಸಿ ಸಾರಿಗೆ ನಿಗಮ, ಕೆಎಸ್‍ಆರ್‍ಟಿಸಿ ಸಾರಿಗೆ ನಿಗಮ, ವಾಯುವ್ಯ ಸಾರಿಗೆ ನಿಗಮ ಹಾಗೂ ನೈರುತ್ಯ ಸಾರಿಗೆ ನಿಗಮ ನೌಕರರು ಕೂಡ ಡ್ಯೂಟಿಗೆ ಬರಲ್ಲ.

  • ಚಾರ್ಮಾಡಿ ರಸ್ತೆ ದುರಸ್ತಿಗೆ ಆಗ್ರಹಿಸಿ ಕೊಟ್ಟಿಗೆಹಾರ ಬಂದ್

    ಚಾರ್ಮಾಡಿ ರಸ್ತೆ ದುರಸ್ತಿಗೆ ಆಗ್ರಹಿಸಿ ಕೊಟ್ಟಿಗೆಹಾರ ಬಂದ್

    ಚಿಕ್ಕಮಗಳೂರು: ಜಿಲ್ಲೆಯ ಕೊಟ್ಟಿಗೆಹಾರ ಮೂಲಕ ದಕ್ಷಿಣ ಕನ್ನಡಕ್ಕೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ರಸ್ತೆಯನ್ನು ದುರಸ್ತಿಗೊಳಿಸುವಂತೆ ಆಗ್ರಹಿಸಿ ಕೊಟ್ಟಿಗೆಹಾರ ಬಂದ್ ಮಾಡಲಾಗಿದೆ.

    ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ವರ್ತಕರ ಸಂಘ ಹಾಗೂ ಗೆಳೆಯರ ಬಳಗ ಕೊಟ್ಟಿಗೆಹಾರ ಬಂದ್ ಮಾಡಿ ಚಾರ್ಮಾಡಿ ಘಾಟಿಯಲ್ಲಿ ಪಾದಯಾತ್ರೆ ನಡೆಸಿ ಚಾರ್ಮಾಡಿ ಉಳಿವಿಗೆ ಆಗ್ರಹಿಸಿದ್ದಾರೆ. ಮಲೆನಾಡಿನ ಜನ ಆರ್ಥಿಕ, ಶೈಕ್ಷಣಿಕ ಹಾಗೂ ಆರೋಗ್ಯಕ್ಕಾಗಿ ಚಾರ್ಮಾಡಿ ಘಾಟಿಯನ್ನೆ ಆಶ್ರಯಿಸಿಕೊಂಡಿದ್ದಾರೆ. ಆದರೆ ಪ್ರತಿ ವರ್ಷದ ಮಳೆಯಿಂದ ಚಾರ್ಮಾಡಿ ಘಾಟ್ ತನ್ನ ಸಾಮಥ್ರ್ಯವನ್ನು ಕಳೆದುಕೊಳ್ಳುತ್ತಿದೆ. ಇದಕ್ಕೆ ಮೂಲ ಕಾರಣ ಸರ್ಕಾರ ಚಾರ್ಮಾಡಿ ಘಾಟಿಯನ್ನು ಸಮರ್ಪಕ ರೀತಿಯಲ್ಲಿ ದುರಸ್ತಿ ಮಾಡದಿರುವುದು ಎಂದು ಪ್ರತಿಭಟನಾಕಾರರು ಅಸಮಾಧಾನ ಹೊರಹಾಕಿದ್ದಾರೆ.

    ಪ್ರತಿ ಮಳೆಗಾಲದಲ್ಲೂ ಈ ಮಾರ್ಗ ಬಂದ್ ಮಾಡುತ್ತಾರೆ. ಇದರಿಂದ ಹಲವರಿಗೆ ನಾನಾ ರೀತಿಯ ತೊಂದರೆಯಾಗಲಿದೆ. ಸರ್ಕಾರ ಚಾರ್ಮಾಡಿಗೆ ಪರ್ಯಾಯ ರಸ್ತೆಯಾಗಿ ಶಿಶಿಲ-ಬೈರಾಪುರ ರಸ್ತೆ ನಿರ್ಮಾಣಕ್ಕೆ ಮುಂದಾಗಿತ್ತು. ಆದರೆ ನ್ಯಾಯಾಲಯ ಈ ರಸ್ತೆ ಕಾಮಾಗಾರಿಗೆ ತಡೆಯೊಡ್ಡಿರುವುದರಿಂದ ಕೂಡಲೇ ಚಾರ್ಮಾಡಿ ರಸ್ತೆಯನ್ನು ದುರಸ್ತಿಗೊಳಿಸಿ, ಉಳಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಮಾರ್ಗ ರಾಷ್ಟ್ರೀಯ ಹೆದ್ದಾರಿಯಾಗಿದ್ದು, ವಿಲ್ಲುಪುರಂಗೆ ಸಂಪರ್ಕ ಕಲ್ಪಿಸುವ ಮಾರ್ಗವಾಗಿದೆ. ಪ್ರತಿನಿತ್ಯ ಸಾವಿರಾರು ವಾಹನಗಳು ಓಡಾಡುತ್ತವೆ. ಈ ಮಾರ್ಗ ನೂರಾರು ರೀತಿಯಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗಿದೆ. ಕೂಡಲೇ ಈ ಮಾರ್ಗವನ್ನು ಅಭಿವೃದ್ಧಿಪಡಿಸಿ, ಉಳಿಸಬೇಕೆಂದು ಆಗ್ರಹಿಸಿದ್ದಾರೆ.

  • ಬೆಳ್ಳಂಬೆಳಗ್ಗೆ ರೈಲು, ವಿಮಾನ ನಿಲ್ದಾಣಕ್ಕೆ ಕರವೇ ಮುತ್ತಿಗೆ – ಕಾರ್ಯಕರ್ತರ ಬಂಧನ

    ಬೆಳ್ಳಂಬೆಳಗ್ಗೆ ರೈಲು, ವಿಮಾನ ನಿಲ್ದಾಣಕ್ಕೆ ಕರವೇ ಮುತ್ತಿಗೆ – ಕಾರ್ಯಕರ್ತರ ಬಂಧನ

    ಬೆಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ರೈತರು ಆಕ್ರೋಶ ಶುರು ಮಾಡಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆಗೆ ಯತ್ನಿಸಿದ್ದಾರೆ. ಪರಿಣಾಮ 50ಕ್ಕೂ ಹೆಚ್ಚು ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

    ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕರವೇ ಮಹಿಳಾ ಕಾರ್ಯಕರ್ತೆಯರು ಏರ್‌ಪೋರ್ಟಿಗೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಈ ವೇಳೆ ಪೊಲೀಸರು 30ಕ್ಕೂ ಹೆಚ್ಚು ಮಹಿಳಾ ಪ್ರತಿಭಟನಕಾರರನ್ನ ಬಂಧಿಸಿದ್ದಾರೆ. ಇತ್ತ ಮೆಜೆಸ್ಟಿಕ್‍ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕರವೇ ಕಾರ್ಯಕರ್ತರು ರೈಲ್ವೆ ಸ್ಟೇಷನ್ ಮುತ್ತಿಗೆಗೆ ಯತ್ನಿಸಿದ್ದಾರೆ. ಆಗ ಫ್ಲಾಟ್ ಫಾರಂಗೆ ಬಿಡದೆ ಎಲ್ಲಾ ಕರವೇ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಅಲ್ಲದೇ ಕೋಡಿಹಳ್ಳಿ ಚಂದ್ರಶೇಖರ್, ಟಿ.ಎ.ನಾರಾಯಣಗೌಡ ಸೇರಿದಂತೆ ರೈಲ್ವೆ ನಿಲ್ದಾಣದಲ್ಲಿ ಕರವೇ ಕಾರ್ಯಕರ್ತರ ಪೊಲೀಸರು ಬಂಧಿಸಿದ್ದಾರೆ.

    ಅರೆಸ್ಟ್ ಆಗಿದ್ದ ಕರವೇ ಕಾರ್ಯಕರ್ತರು ಬಸ್ಸಿನಿಂದ ಕೆಳಗಿಳಿದು ಆನಂದ್ ರಾವ್ ಫ್ಲೈ ಓವರ್ ಮೇಲೆ ರಸ್ತೆ ತಡೆದು ಪ್ರತಿಭಟನೆಗೆ ಮುಂದಾಗಿದ್ದರು. ಆಗ ಮತ್ತೆ ಕಾರ್ಯಕರ್ತರನ್ನು ಬಸ್ಸಿಗೆ ತುಂಬಿ ಪೊಲೀಸರು ಕಳುಹಿಸಿದ್ದಾರೆ. ಬೆಂಗಳೂರಿನ ಅಷ್ಟದಿಕ್ಕೂಗಳಲ್ಲೂ ಸಾಲು ಸಾಲು ಪ್ರತಿಭಟನೆ ಮಾಡುತ್ತಿದ್ದು, ಹಲವೆಡೆ ರೈತರ ಮೆರವಣಿಗೆ, ಬೈಕ್ ರ‍್ಯಾಲಿ, ರಸ್ತೆ ತಡೆ ಮಾಡುವ ಸಾಧ್ಯತೆ ಇದೆ.

    ಬೆಂಗಳೂರಲ್ಲಿ ಎಲ್ಲೆಲ್ಲಿ ಬಂದ್ ಬಿಸಿ
    * ಟೌನ್ ಹಾಲ್ – ಐಕ್ಯ ಸಮಿತಿ ಹಾಗೂ ರೈತ ಹೋರಾಟಗಾರರ ಪ್ರತಿಭಟನೆ (ಟೌನ್‍ಹಾಲ್‍ನಿಂದ ಫ್ರೀಡಂ ಪಾರ್ಕ್ ವರೆಗೆ ರ‍್ಯಾಲಿ)
    * ಮೈಸೂರು ಬ್ಯಾಂಕ್ ಸರ್ಕಲ್ – ಬಡಗಲಪುರ ನಾಗೇಂದ್ರ ಮುಂದಾಳತ್ವದ ರೈತ ಸಂಘಟನೆ (ಕೆಜಿ ರೋಡ್, ಗಾಂಧಿನಗರ, ಮೆಜೆಸ್ಟಿಕ್ ಸುತ್ತಮುತ್ತ ಮೆರವಣಿಗೆ)
    * ಮೌರ್ಯ ಸರ್ಕಲ್ – ಕೋಡಿಹಳ್ಳಿ ಚಂದ್ರಶೇಖರ್ ಸಾರಥ್ಯದ ರಾಜ್ಯ ರೈತ ಸಂಘ ಹಸಿರು ಸೇನೆ


    * ಮೆಜೆಸ್ಟಿಕ್‍ನಲ್ಲಿ ಬಸ್ ತಡೆ – ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಚಳವಳಿ ಸಂಘಟನೆ

    * ಮೆಜೆಸ್ಟಿಕ್‍ನಲ್ಲಿ ರೈಲು ತಡೆ – ನಾರಾಯಣಗೌಡ ನೇತೃತ್ವದ ಕರವೇ
    * ಸುಮನಹಳ್ಳಿ ಸರ್ಕಲ್ – ಗಿರೀಶ್ ಗೌಡ ನೇತೃತ್ವದ ರಾಜ್ಯ ರೈತ ಸಂಘಟನೆ
    * ಡಾ. ರಾಜಕುಮಾರ್ ಸಮಾಧಿ (ಲಗ್ಗರೆ ಜಂಕ್ಷನ್) – ಜಯರಾಜ್ ನಾಯ್ಡು ನಾಯಕತ್ವದ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ
    * ಕೆಪಿಸಿಸಿ ಕಚೇರಿ – ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ( ಮನೋಹರ್)

  • ನಾಳೆ ಬಸ್ಸುಗಳ ಕಾರ್ಯಾಚರಣೆಯಲ್ಲಿ‌ ಯಾವುದೇ ವ್ಯತ್ಯಯ ಇಲ್ಲ – ಕೆಎಸ್ಆರ್‌ಟಿಸಿ

    ನಾಳೆ ಬಸ್ಸುಗಳ ಕಾರ್ಯಾಚರಣೆಯಲ್ಲಿ‌ ಯಾವುದೇ ವ್ಯತ್ಯಯ ಇಲ್ಲ – ಕೆಎಸ್ಆರ್‌ಟಿಸಿ

    ಬೆಂಗಳೂರು: ನಾಳೆ ಕರ್ನಾಟಕ ಬಂದ್‌ ಇರುವ ಹಿನ್ನೆಲೆಯಲ್ಲಿ ಬಸ್‌ ಇರುತ್ತದೋ ಇಲ್ಲವೋ ಎನ್ನುವ ಗೊಂದಲಕ್ಕೆ ಕೆಎಸ್‌ಆರ್‌ಟಿಸಿ ಪ್ರತಿಕ್ರಿಯಿಸಿದೆ.

    ನಾಳೆ‌ಯ ಬಂದ್‌ಗೆ ಸಂಬಂಧಪಟ್ಟಂತೆ, ಕೆಎಸ್ಆರ್‌ಟಿಸಿ ಬಸ್ಸುಗಳ ಕಾರ್ಯಾಚರಣೆಯಲ್ಲಿ‌ ಯಾವುದೇ ವ್ಯತ್ಯಯವಾಗುವುದಿಲ್ಲ, ಎಂದಿನಂತೆ ಕಾರ್ಯಾಚರಣೆ‌‌ ಇರಲಿದೆ. ಪ್ರಯಾಣಿಕರಲ್ಲಿ ಯಾವುದೇ ಗೊಂದಲ ಹಾಗೂ ಆತಂಕ ಬೇಡ ಎಂದು ಟ್ವೀಟ್‌ ಮಾಡಿ ತಿಳಿಸಿದೆ.  ಇದನ್ನೂ ಓದಿ: ಕರಾವಳಿಯ ಮೂರು ಜಿಲ್ಲೆ ಬಿಟ್ಟು ಉಳಿದ ಕಡೆ ನಾಳೆ ಕರ್ನಾಟಕ ಬಂದ್

    ಸಾರಿಗೆ ವ್ಯವಸ್ಥೆಯು ಅಗತ್ಯ ಸೇವೆಯಾಗಿರುವುದರಿಂದ, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾಗದಂತೆ,‌ ಪ್ರಯಾಣಿಕರ ಬೇಡಿಕೆ ಹಾಗೂ ಅಗತ್ಯನುಸಾರ ಬಸ್ಸುಗಳ ಕಾರ್ಯಾಚರಣೆಯನ್ನು ಮಾಡಲಾಗುವುದು ಎಂದು ಹೇಳಿದೆ.

    ರೈತ ಸಂಘಟನೆಗಳು, ಕನ್ನಡ ಸಂಘಟನೆಗಳು, ವಿವಿಧ ಕಾರ್ಮಿಕ ಸಂಘಟನೆಗಳ ಜೊತೆ ಹಲವು ಸಂಘಟನೆಗಳು ಪ್ರತಿಭಟನೆ ಮಾಡಲಿದ್ದು ಈಗಾಗಲೇ ರಸ್ತೆ ತಡೆ ನಡೆಸುವುದಾಗಿ ತಿಳಿಸಿದೆ. ಹೀಗಾಗಿ ರಾಜ್ಯದ ಹಲವೆಡೆ ರಸ್ತೆ ಸಂಚಾರದ ವೇಳೆ ಸಮಸ್ಯೆಯಾಗುವ ಸಾಧ್ಯತೆಯಿದೆ.