Tag: ಬಘೀರ ಸಿನಿಮಾ

  • ‘ಬಘೀರ’ ಚಿತ್ರದಲ್ಲಿ ರುಕ್ಮಿಣಿ ವಸಂತ್ ಪಾತ್ರ ಹೇಗಿದೆ? ಹೊರಬಿತ್ತು ಇಂಟ್ರಸ್ಟಿಂಗ್‌ ಮಾಹಿತಿ

    ‘ಬಘೀರ’ ಚಿತ್ರದಲ್ಲಿ ರುಕ್ಮಿಣಿ ವಸಂತ್ ಪಾತ್ರ ಹೇಗಿದೆ? ಹೊರಬಿತ್ತು ಇಂಟ್ರಸ್ಟಿಂಗ್‌ ಮಾಹಿತಿ

    ಸ್ಯಾಂಡಲ್‌ವುಡ್ ಬೆಡಗಿ ರುಕ್ಮಿಣಿ ವಸಂತ್ (Rukmini Vasanth) ಸದ್ಯ ಕನ್ನಡದ ಬ್ಯುಸಿ ನಟಿ. ಪರಭಾಷೆಗಳಲ್ಲೂ ಬೇಡಿಕೆ ಸೃಷ್ಟಿಸಿಕೊಂಡಿರುವ ‘ಸಪ್ತಸಾಗರದಾಚೆ ಎಲ್ಲೋ’ ನಟಿ ರುಕ್ಮಿಣಿ ಇದೀಗ ‘ಬಘೀರ’ (Bagheera Film) ಸಿನಿಮಾದಲ್ಲಿನ ಅವರ ಬಗ್ಗೆ ಇಂಟ್ರಸ್ಟಿಂಗ್ ಮಾಹಿತಿ ಹೊರಬಿದ್ದಿದೆ. ಇದನ್ನೂ ಓದಿ:ಸೆಲೆಬ್ರಿಟಿಗಳಿಗೆ ಸಿಹಿಸುದ್ದಿ ಕೊಟ್ಟ ಡಿಬಾಸ್- ‘ಡೆವಿಲ್’ ಚಿತ್ರದ ರಿಲೀಸ್ ಡೇಟ್ ಅನೌನ್ಸ್

    ರೋರಿಂಗ್ ಸ್ಟಾರ್ ಶ್ರೀಮುರಳಿಗೆ ನಾಯಕಿಯಾಗಿ ರುಕ್ಮಿಣಿ ವಸಂತ್ ಕಾಣಿಸಿಕೊಳ್ತಿದ್ದಾರೆ. ಈ ಚಿತ್ರದಲ್ಲಿ ಡಾಕ್ಟರ್ ಪಾತ್ರವನ್ನು ನಿರ್ವಹಿಸಿದ್ದಾರೆ. ವಿಶೇಷ ಅಂದರೆ, ರುಕ್ಮಿಣಿ ವಸಂತ್ ನಟನೆಯ ಸನ್ನಿವೇಶಗಳ ಚಿತ್ರೀಕರಣ ಈಗಾಗಲೇ ಮುಗಿದಿದೆ. ಅವರ ಪಾತ್ರಕ್ಕೆ ಬಹಳ ಮಹತ್ವವಿದೆ. ಈ ಚಿತ್ರವನ್ನು ಹೊಂಬಾಳೆ ಸಂಸ್ಥೆ ನಿರ್ಮಾಣ ಮಾಡಿದೆ. ಇದನ್ನೂ ಓದಿ:ಮೆಗಾಸ್ಟಾರ್ ಚಿರಂಜೀವಿ ಚಿತ್ರದಲ್ಲಿ ಚುಟು ಚುಟು ಬೆಡಗಿ ಆಶಿಕಾ ರಂಗನಾಥ್

    ಅಂದಹಾಗೆ, ವಿಜಯ್ ಸೇತುಪತಿ (Vijay Sethupathi) ಜೊತೆ ‘ಏಸ್’ ಸಿನಿಮಾದಲ್ಲಿ ಲೀಡ್ ರೋಲ್‌ನಲ್ಲಿ ರುಕ್ಮಿಣಿ ನಟಿಸಿದ್ದಾರೆ. ಈ ವರ್ಷದ ಅಂತ್ಯದಲ್ಲಿ ಚಿತ್ರ ರಿಲೀಸ್ ಆಗಲಿದೆ. ಇದರ ಜೊತೆಗೆ ತಮಿಳಿನ ನಟ ಶಿವಕಾರ್ತಿಕೇಯನ್‌ಗೆ (Sivakarthikeyan) ಜೋಡಿಯಾಗಿ ನಟಿಸಿದ್ದಾರೆ. ಈ ಚಿತ್ರ ಕೂಡ ವರ್ಷದ ಅಂತ್ಯದಲ್ಲಿ ಥಿಯೇಟರ್‌ನಲ್ಲಿ ದರ್ಶನ ಕೊಡಲಿದೆ. ಸೌತ್ ಸಿನಿಮಾಗಳ ಜೊತೆ ಕನ್ನಡದ ‘ಭೈರತಿ ರಣ್‌ಗಲ್’ ಚಿತ್ರದಲ್ಲಿ ಶಿವಣ್ಣಗೆ ನಾಯಕಿಯಾಗಿ ಕಾಣಿಸಿಕೊಳ್ತಿದ್ದಾರೆ.

    ಅದಷ್ಟೇ ಅಲ್ಲ, ‘ಕಾಂತಾರ’ ಚಾಪ್ಟರ್ 1ರಲ್ಲಿ ರುಕ್ಮಿಣಿ ನಾಯಕಿ ಎಂಬ ಸುದ್ದಿ ಕೂಡ ಇದೆ. ಅಧಿಕೃತ ಘೋಷಣೆ ಆಗಬೇಕಿದೆ. ಕೈತುಂಬಾ ಅವಕಾಶಗಳ ಜೊತೆ ಬ್ಯುಸಿಯಿರುವ ನಟಿ ಮುಂದಿನ ದಿನಗಳಲ್ಲಿ ನಂಬರ್ ಒನ್ ಪಟ್ಟಕ್ಕೆ ಏರುವುದು ಗ್ಯಾರಂಟಿ ಅಂತಿದ್ದಾರೆ ಸಿನಿಪಂಡಿತರು.

  • ಆರೋಗ್ಯದಲ್ಲಿ ಚೇತರಿಕೆ, ಸದ್ಯದಲ್ಲೇ ಶ್ರೀಮುರಳಿ ಶೂಟಿಂಗ್‌ಗೆ ಹಾಜರ್

    ಆರೋಗ್ಯದಲ್ಲಿ ಚೇತರಿಕೆ, ಸದ್ಯದಲ್ಲೇ ಶ್ರೀಮುರಳಿ ಶೂಟಿಂಗ್‌ಗೆ ಹಾಜರ್

    ರೋರಿಂಗ್ ಸ್ಟಾರ್ ಶ್ರೀಮುರಳಿ (Srimurali) ಅವರು ಇತ್ತೀಚಿಗೆ ಧನ್ಯಾ ರಾಮ್‌ಕುಮಾರ್ (Dhanya Ramkumar) ಅವರ ಹೊಸ ಚಿತ್ರಕ್ಕೆ ಸಾಥ್ ನೀಡುವ ಮೂಲಕ ಸುದ್ದಿಯಲ್ಲಿದ್ದರು. ಈ ವೇಳೆ ತಮ್ಮ ಆರೋಗ್ಯದ ಬಗ್ಗೆ ಅಪ್‌ಡೇಟ್ ಹಂಚಿಕೊಂಡಿದ್ದಾರೆ. ಹಾಗೆಯೇ ಫ್ಯಾನ್ಸ್‌ಗೆ ನಟ ಗುಡ್ ನ್ಯೂಸ್ ಕೊಟ್ಟಿದ್ದಾರೆ.

    ಈ ವರ್ಷ ಜನವರಿಯಲ್ಲಿ ನಟ ಶ್ರೀಮುರಳಿ ಅವರಿಗೆ ‘ಬಘೀರ’ (Bhageera Film) ಸಿನಿಮಾದ ಚಿತ್ರೀಕರಣದ ವೇಳೆ ಕಾಲಿಗೆ ಪೆಟ್ಟಾಗಿತ್ತು. ರಾಕ್‌ಲೈನ್ ಸ್ಟುಡಿಯೋದಲ್ಲಿ ಸಿನಿಮಾಗಾಗಿ ಸ್ಟಂಟ್ಸ್ ಮಾಡುವ ವೇಳೆ ಶ್ರೀಮುರಳಿ ಅವರಿಗೆ ಗಾಯಗಳಾಗಿತ್ತು. ಇದೀಗ ಅವರು ಆರೋಗ್ಯವಾಗಿದ್ದಾರೆ. ಇದನ್ನೂ ಓದಿ:ಅಖಿಲ್ ಅಕ್ಕಿನೇನಿ ಜೊತೆ ಜಾನ್ವಿ ಕಪೂರ್ ರೊಮ್ಯಾನ್ಸ್

    ಇತ್ತೀಚಿಗೆ ಕಾಶಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಎಲ್ಲಾ ನಿನಗಾಗಿ’ (Ella Ninagagi) ಚಿತ್ರದ ಟೈಟಲ್ ರಿವೀಲ್ ಮಾಡಿಕೊಡುವ ಮೂಲಕ ಧನ್ಯಾ ರಾಮ್‌ಕುಮಾರ್ ಟೀಂ ಶುಭಕೋರಿದ್ದರು. ಈ ವೇಳೆ ಶ್ರೀಮುರಳಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಬಹಳ ಕಷ್ಟವಾದ ಸ್ಟಂಟ್ಸ್‌ಗಳನೆಲ್ಲಾ ಆರಾಮಾಗಿ ಮಾಡಿದ್ದೇನೆ. ಆದರೆ ಈ ಸಣ್ಣ ಸ್ಟಂಟ್ ಮಾಡಲು ಹೋಗಿ 3 ತಿಂಗಳು ರೆಸ್ಟ್ ತೆಗೆದುಕೊಳ್ಳುವಂತಾಯ್ತು. ಈಗ ಚೇತರಿಸಿಕೊಂಡಿದ್ದೇನೆ. ಮೇ ಮೊದಲ ವಾರದಲ್ಲಿ ಮತ್ತೆ ಬಘೀರ ಸಿನಿಮಾದ ಚಿತ್ರೀಕರಣಕ್ಕೆ ಹೋಗಲಿದ್ದೇನೆ ಎಂದು ಸಿಹಿಸುದ್ದಿ ನೀಡಿದ್ದಾರೆ.

    ಹೊಂಬಾಳೆ ಸಂಸ್ಥೆ ನಿರ್ಮಾಣದ ‘ಬಘೀರ’ ಚಿತ್ರದಲ್ಲಿ ಶ್ರೀಮುರಳಿ ಭಿನ್ನ ಲುಕ್‌ನಲ್ಲಿ ಕಾಣಿಸಿಕೊಳ್ತಿದ್ದಾರೆ. ರುಕ್ಮಿಣಿ ವಸಂತ್ (Rukmini Vasanth) ನಾಯಕಿಯಾಗಿ ನಟಿಸುತ್ತಿದ್ದಾರೆ. ಕೆಜಿಎಫ್ (KGF) ಮಾಸ್ಟರ್ ಮೈಂಡ್ ಪ್ರಶಾಂತ್ ನೀಲ್ (Prashanth Neel) ಬರೆದ ಕಥೆಗೆ ಡಾ.ಸೂರಿ ನಿರ್ದೇಶನ ಮಾಡ್ತಿದ್ದಾರೆ.

  • `ಬಘೀರ’ ಸಿನಿಮಾದ ಶೂಟಿಂಗ್ ವೇಳೆ ಅವಗಢ: ನಟ ಶ್ರೀಮುರಳಿಗೆ ಪೆಟ್ಟು

    `ಬಘೀರ’ ಸಿನಿಮಾದ ಶೂಟಿಂಗ್ ವೇಳೆ ಅವಗಢ: ನಟ ಶ್ರೀಮುರಳಿಗೆ ಪೆಟ್ಟು

    ಸ್ಯಾಂಡಲ್‌ವುಡ್ ನಟ ಶ್ರೀಮುರಳಿಗೆ (Srimurali) ಮತ್ತೆ ಪೆಟ್ಟಾಗಿದೆ. `ಬಘೀರ’ (Bhageera) ಚಿತ್ರದ ಶೂಟಿಂಗ್ ವೇಳೆ ಅನಾಹುತವಾಗಿದೆ. ಶೂಟಿಂಗ್ ವೇಳೆ ಶ್ರೀಮುರಳಿಗೆ ತೀವ್ರ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

    `ಮದಗಜ’ (Madagaja) ಸಿನಿಮಾದ ನಂತರ ಬಘೀರ ಚಿತ್ರದಲ್ಲಿ ನಟ ಶ್ರೀಮುರಳಿ ಬ್ಯುಸಿಯಾಗಿದ್ದರು. ರಾಕ್‌ಲೈನ್ ಸ್ಟುಡಿಯೋದಲ್ಲಿ (Rockline Studio) ಹೊಂಬಾಳೆ ಸಂಸ್ಥೆ (Hombale Films) ನಿರ್ಮಾಣದ `ಬಘೀರ’ ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ರೋರಿಂಗ್ ಸ್ಟಾರ್ ಶ್ರೀಮುರಳಿಗೆ (Actor Srimurali) ಗಾಯಗಳಾಗಿದೆ. ಸೂರಿ ನಿರ್ದೇಶನದ ಈ ಚಿತ್ರ ಕೊನೆಯ ಹಂತದ ಚಿತ್ರೀಕರಣದಲ್ಲಿತ್ತು. ಇನ್ನೇರೆಡೆ ದಿನಗಳಲ್ಲಿ ಶೂಟಿಂಗ್‌ಗೆ ಬ್ರೇಕ್ ಬೀಳೋದರಲ್ಲಿತ್ತು. ಈ ವೇಳೆ ಶ್ರೀಮುರಳಿಗೆ ಪೆಟ್ಟಾಗಿದೆ. ಇದನ್ನೂ ಓದಿ: ಹನಿಮೂನ್ ಬಗ್ಗೆ ಕೇಳಿದ್ದಕ್ಕೆ ನಾಚಿ ನೀರಾದ ಹರಿಪ್ರಿಯಾ- ವಸಿಷ್ಠ

    ಈ ಹಿಂದೆ ಮಹೇಶ್ ಕುಮಾರ್ ನಿರ್ದೇಶನದ ಮದಗಜ ಶೂಟಿಂಗ್ ವೇಳೆ ಹೀಗೆ ಆಗಿತ್ತು. ಶ್ರೀಮುರಳಿ ಅವರ ಎಡಗಾಲಿಗೆ ಪೆಟ್ಟಾಗಿತ್ತು. ಈಗ ಮತ್ತೆ ಅದೇ ಕಾಲಿಗೆ ಪೆಟ್ಟಾಗಿದೆ. ಹಾಗಾಗಿ ನಟ ಈ ಸಂಬಂಧ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸೆಟ್ಟೇರಿದ `ಬಘೀರ’ ಸಿನಿಮಾ: ಪ್ರಶಾಂತ್‌ ನೀಲ್‌ ಕಥೆಗೆ ಶ್ರೀಮುರಳಿ ಹೀರೋ

    ಸೆಟ್ಟೇರಿದ `ಬಘೀರ’ ಸಿನಿಮಾ: ಪ್ರಶಾಂತ್‌ ನೀಲ್‌ ಕಥೆಗೆ ಶ್ರೀಮುರಳಿ ಹೀರೋ

    ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ  ʻಬಘೀರ’ ಸಿನಿಮಾ ಇಂದು ಸೆಟ್ಟೇರಿದೆ. ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದಲ್ಲಿ ಮೂಡಿ ಬರಲಿರುವ, ಡಾ.ಸೂರಿ ಆ್ಯಕ್ಷನ್ ಕಟ್ ಹೇಳ್ತಿರುವ ʻಬಘೀರʼ ಚಿತ್ರದ ಮುಹೂರ್ತ ನೆರವೇರಿದೆ.

    ಉಗ್ರಂ, ಭರಾಟೆ, ಮದಗಜ ಸಿನಿಮಾಗಳ ಮೂಲಕ ಮೋಡಿ ಮಾಡಿದ್ದ ರೋರಿಂಗ್ ಸ್ಟಾರ್ ಶ್ರೀಮುರಳಿ ಈಗ ಬಘೀರನಾಗಿ ಮಿಂಚಲು ರೆಡಿಯಾಗಿದ್ದಾರೆ. ಈ ಚಿತ್ರದ ಮುಹೂರ್ತ ಇಂದು ಸರಳವಾಗಿ ನೆರವೇರಿದೆ. ಈ ವೇಳೆ `ಬಘೀರ’ ಚಿತ್ರದ ನಟ ಶ್ರೀಮುರಳಿ, ನಿರ್ದೇಶಕ ಡಾ.ಸೂರಿ ಮತ್ತು ಹೊಂಬಾಳೆ ಫಿಲ್ಮ್ಸ್‌ ಸಂಸ್ಥಾಪಕ ವಿಜಯ್ ಕಿರಗಂದೂರು ಸಾರಥ್ಯದ ಚಿತ್ರಕ್ಕೆ ರಿಷಬ್ ಶೆಟ್ಟಿ, ಮತ್ತು ನಿರ್ದೇಶಕ ಸಂತೋಷ್ ಆನಂದ್ ರಾಮ್ ಮುಹೂರ್ತಕ್ಕೆ ಆಗಮಿಸಿ ಶುಭಹಾರೈಸಿದ್ದಾರೆ.

    `ಕೆಜಿಎಫ್’ ಮಾಸ್ಟರ್ ಮೈಂಡ್ ಪ್ರಶಾಂತ್ ನೀಲ್ ಬರೆದಿರುವ ಕಥೆಗೆ, ಡಾ.ಸೂರಿ ನಿರ್ದೇಶನ ಮಾಡುತ್ತಿದ್ದು, ಬಘೀರನಾಗಿ ಶ್ರೀಮುರಳಿ ಕಾಣಿಸಿಕೊಳ್ತಿದ್ದಾರೆ. ಚಿತ್ರದಲ್ಲಿ ಶ್ರೀಮುರಳಿ ರಗಡ್ ಪೊಲೀಸ್ ಆಫೀಸರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಡಿಫರೆಂಟ್ ಸ್ಟೋರಿ ಮೂಲಕ ಮೋಡಿ ಮಾಡೋಕೆ ಶ್ರೀಮುರಳಿ ರೆಡಿಯಾಗಿದ್ದಾರೆ.

    ಈ ಹಿಂದೆಯೇ ಚಿತ್ರ ಫಸ್ಟ್ ಲುಕ್ ರಿವೀಲ್ ಆಗಿದ್ದು, ಶ್ರೀಮುರಳಿ ಸಖತ್ ಖಡಕ್ ಲುಕ್ಕಿನಲ್ಲಿ ಕಾಣಿಸಿಕೊಂಡಿದ್ರು. ಈ ಲುಕ್ ನೋಡಿ ಅಭಿಮಾನಿಗಳು ಕೂಡ ಖುಷಿಪಟ್ಟಿದ್ದರು. ಪ್ರಶಾಂತ್ ನೀಲ್ ಕಥೆಯಲ್ಲಿ, ಶ್ರೀಮುರಳಿ ನಟಿಸಲಿದ್ದು, ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆಯಿದೆ. ಈಗಷ್ಟೇ ಚಿತ್ರದ ಮುಹೂರ್ತ ನೆರವೇರಿಸಿಕೊಂಡಿರುವ ʻಬಘೀರʼ ಸಿನಿಮಾದ ಶೂಟಿಂಗ್ ಸದ್ಯದಲ್ಲೇ ಶುರುವಾಗಲಿದೆ.