Tag: ಬಜರಂಗದಳ

  • ವಿನಾಶ ಕಾಲದಲ್ಲಿ ಕಾಂಗ್ರೆಸ್‌ಗೆ ವಿಪರೀತ ಬುದ್ಧಿ: ಸದಾನಂದ ಗೌಡ ವಾಗ್ದಾಳಿ

    ವಿನಾಶ ಕಾಲದಲ್ಲಿ ಕಾಂಗ್ರೆಸ್‌ಗೆ ವಿಪರೀತ ಬುದ್ಧಿ: ಸದಾನಂದ ಗೌಡ ವಾಗ್ದಾಳಿ

    ಮಡಿಕೇರಿ: ಕಾಂಗ್ರೆಸ್‌ನವರು (Congress) ಬಜರಂಗದಳ (Bajrang Dal) ಬ್ಯಾನ್ ಮಾಡುತ್ತೇವೆ ಎಂದು ಹೇಳುತ್ತಾರೆ. ವಿನಾಶ ಕಾಲದಲ್ಲಿ ವಿಪರೀತ ಬುದ್ಧಿ ಎಂಬ ಮಾತಿನಂತೆ ಕಾಂಗ್ರೆಸ್ ತನ್ನ ವಿನಾಶಕ್ಕೆ ಬಜರಂಗದಳವನ್ನು ನಿಷೇಧಿಸುವ ಭರವಸೆ ನೀಡಿದೆ ಎಂದು ಸಂಸದ ಡಿವಿ ಸದಾನಂದ ಗೌಡ (DV Sadananda Gowda) ವಾಗ್ದಾಳಿ ನಡೆಸಿದ್ದಾರೆ.

    ಮಡಿಕೇರಿಯಲ್ಲಿ (Madikeri) ಮಾತಾನಾಡಿದ ಅವರು, ದೇಶಪ್ರೇಮಿ ಎಂಬ ಸಂಘಟನೆ ರಾಜಕೀಯ ರಂಗದಲ್ಲಿ ಇರುವುದು ಎಂದರೆ ಅದು ಬಿಜೆಪಿ ಮಾತ್ರ. ಈ ಬಾರಿ ಕರ್ನಾಟಕದಲ್ಲಿ ಬಿಜೆಪಿಗೆ ಇದು ಸವಾಲಿನ ಚುನಾವಣೆಯಾಗಿದೆ. ರಾಜ್ಯದಲ್ಲಿ ಸಂಪೂರ್ಣ ಬಹುಮತದ ಸರ್ಕಾರ ತರಲು ಎಲ್ಲಾ ರೀತಿಯ ಪ್ರಯತ್ನ ನಡೆಯುತ್ತಿದೆ. ಸ್ವಂತ ಶಕ್ತಿಯಲ್ಲಿ ಬಿಜೆಪಿ 125 ರಿಂದ 130 ಸ್ಥಾನ ಗಳಿಸಿ ಅಧಿಕಾರ ಹಿಡಿಯಲಿದೆ ಎಂದು ಮಾಜಿ ಸಿಎಂ ಸದಾನಂದಗೌಡ ಹೇಳಿದರು.

    ಬಜರಂಗದಳ ನಿಷೇಧದ ಬಗ್ಗೆ ಕಾಂಗ್ರೆಸ್ ಪ್ರಣಾಳಿಕೆ ಮಾಡಿದೆ. ಕಾಂಗ್ರೆಸ್‌ನ ವಿಪರೀತ ಬುದ್ಧಿ ವಿನಾಶಕ್ಕೆ ಹಾದಿ. ರಾಷ್ಟ್ರಪ್ರೇಮ ಗೊತ್ತಿಲ್ಲದ ಕಾಂಗ್ರೆಸ್ ಈ ರೀತಿಯ ಪ್ರಣಾಳಿಕೆ ನೀಡಿದೆ. ಕೊನೆಗೆ ದೀಪ ಜೋರಾಗಿ ಉರಿಯುತ್ತದೆ. ಆ ರೀತಿ ಕಾಂಗ್ರೆಸ್‌ನ ಸ್ಥಿತಿ ಆಗುತ್ತದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರಾತ್ರಿ ಮಟನ್ ತಿಂತೀರಿ, ಹಗಲೊತ್ತಲ್ಲಿ ಮಾಂಸಾಹಾರಿಗಳಿಗೆ ಬೈತೀರಿ – ಬಿಜೆಪಿ ನಾಯಕರ ವಿರುದ್ಧ ಖರ್ಗೆ ವಾಗ್ದಾಳಿ

    ಈ ಬಾರಿ ಪೂರ್ಣ ಬಹುಮತದ ಸರ್ಕಾರವನ್ನು ಬಿಜೆಪಿ ರಚಿಸಲಿದೆ. ಚುನಾವಣೆಯ ನಂತರ ಕಾಂಗ್ರೆಸ್‌ನವರು ರಾಜಕೀಯ ಸನ್ಯಾಸ ಪಡೆಯುವುದು ಖಚಿತ ಎಂದರು. ಇದನ್ನೂ ಓದಿ: ಬಜರಂಗ ಬಲಿ ಕೀ ಜೈ ಘೋಷಣೆ ಮಾಡಿ ತುಳುವಿನಲ್ಲಿ ಭಾಷಣ ಮಾಡಿದ ಮೋದಿ

  • ಕಾಂಗ್ರೆಸ್‌ಗೆ ಠಕ್ಕರ್ – ಗುರುವಾರ ಏಕಕಾಲಕ್ಕೆ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಣ

    ಕಾಂಗ್ರೆಸ್‌ಗೆ ಠಕ್ಕರ್ – ಗುರುವಾರ ಏಕಕಾಲಕ್ಕೆ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಣ

    ಬೆಂಗಳೂರು: ಚುನಾವಣೆಗೆ ಬೆರಳೆಣಿಕೆಯಷ್ಟು ದಿನಗಳು ಉಳಿದುಕೊಂಡಿರುವ ಸಮಯದಲ್ಲಿ ಕಾಂಗ್ರೆಸ್ (Congress) ಬಜರಂಗದಳವನ್ನು (Bajrang Dal) ನಿಷೇಧಿಸುವ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಹಾಕಿ ವಿವಾದವನ್ನು ಎಳೆದುಕೊಂಡಿದೆ. ಇದೀಗ ಬಜರಂಗದಳ ಸೇರಿದಂತೆ ಹಿಂದೂ ಸಂಘಟನೆಗಳು ಕಾಂಗ್ರೆಸ್‌ಗೆ ಠಕ್ಕರ್ ಕೊಡಲು ಮುಂದಾಗಿದೆ.

    ಗುರುವಾರ ಏಕಕಾಲಕ್ಕೆ ದೇವಾಲಯಗಳಲ್ಲಿ (Temple) ಹನುಮಾನ್ ಚಾಲೀಸಾ (Hanuman Chalisa) ಪಠಿಸಲು ಬಜರಂಗದಳ ನಿರ್ಧರಿಸಿದೆ. ಸಂಜೆ 7 ಗಂಟೆಗೆ ಹನುಮಾನ್ ಚಾಲೀಸಾ ಪಠಣ ಆಯೋಜನೆಗೆ ಸಿದ್ಧತೆ ನಡೆಸುತ್ತಿದೆ.

    ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಪ್ರಕಟಿಸಿದ ಚಿಂತಕ ಚಕ್ರವರ್ತಿ ಸೂಲಿಬೆಲೆ, ಬಜರಂಗ ದಳ ನಾಳೆ ಸಂಜೆ 7 ಗಂಟೆಗೆ ರಾಜ್ಯದಾದ್ಯಂತ ಸಾಮೂಹಿಕ ಹನುಮಾನ್ ಚಾಲಿಸಾ ಪಠಣವನ್ನು ಆಯೋಜಿಸಿದೆ. ಇದು ಧರ್ಮಕ್ಕೆ ಸಂಕಟವೆರಗಿರುವ ಸಮಯ. ಒಟ್ಟಾಗಿ ನಿಲ್ಲುವುದೊಂದೇ ಪರಿಹಾರ. ನಮ್ಮೆಲ್ಲ ಭೇದಗಳನ್ನು ಒತ್ತಟ್ಟಿಗಿಟ್ಟು ಧರ್ಮರಕ್ಷಣೆಗೆ ಜೊತೆಯಾಗೋಣ, ಕೈ ಜೋಡಿಸೋಣ ಎಂದು ಬರೆದುಕೊಂಡಿದ್ದಾರೆ.

    ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಏನಿದೆ?
    ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಸೇರಿದ್ದು ಹೇಗೆ? – ಇನ್‌ಸೈಡ್‌ ಸ್ಟೋರಿ

    ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಿಗಳಾಗ ಬಜರಂಗದಳ ಮತ್ತು ಪಿಎಫ್‌ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಇದನ್ನೂ ಓದಿ: ಕಾಂಗ್ರೆಸ್‌ಗೆ ಮತ ನೀಡಿದ್ರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ: ಯತ್ನಾಳ್

  • ಕಾಂಗ್ರೆಸ್‌ಗೆ ಮತ ನೀಡಿದ್ರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ: ಯತ್ನಾಳ್

    ಕಾಂಗ್ರೆಸ್‌ಗೆ ಮತ ನೀಡಿದ್ರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ: ಯತ್ನಾಳ್

    ಗದಗ: ಕಾಂಗ್ರೆಸ್‌ಗೆ (Congress) ಮತ ನೀಡಿದರೆ ಪಾಕಿಸ್ತಾನಕ್ಕೆ (Pakistan) ಮತ ಹಾಕಿದಂತೆ. ಕಾಂಗ್ರೆಸ್‌ಗೆ ಮತಹಾಕಿದರೆ ಮುಸ್ಲಿಮರಿಗೆ (Muslim) ಮತ ಹಾಕಿದಂತೆ. ಕಾಂಗ್ರೆಸ್ ಹಿಂದೂ (Hindu) ವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಗುಡುಗಿದ್ದಾರೆ.

    ಗದಗದಲ್ಲಿ (Gadag) ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಯತ್ನಾಳ್, ಇದು ಹಿಂದೂ ವಿರೋಧಿ ಕಾಂಗ್ರೆಸ್ ಇದೆ. ಪಿಎಫ್‌ಐ (PFI) ಸಂಘಟನೆಯ ಮೂಲ ಗುರಿ 2047ಕ್ಕೆ ಭಾರತವನ್ನು ಇಸ್ಲಾಂ ಧರ್ಮವನ್ನಾಗಿ ಮಾಡುವುದು. ಪಿಎಫ್‌ಐ ಹಾಗೂ ಕಾಂಗ್ರೆಸ್ ಆಂತರಿಕ ಒಪ್ಪಂದ ಇದೆ. ಆ ದೃಷ್ಟಿಯಿಂದ ಕಾಂಗ್ರೆಸ್‌ನವರು ಬಜರಂಗದಳ (Bajrang Dal) ನಿಷೇಧ ಮಾಡುತ್ತೇವೆ ಎಂದಿದ್ದಾರೆ ಎಂದರು.

     

    ಬಜರಂಗದಳ ಯಾವುದೇ ರಾಷ್ಟ್ರ ವಿರೋಧಿ ಚಟುವಟಿಕೆ ಮಾಡುತ್ತಿಲ್ಲ. ಹಿಂದೂ ಧರ್ಮ, ಸಂಸ್ಕೃತಿ ಭಾರತದ ನಾಗರಿಕತೆ ಉಳಿಸುವ ಕೆಲಸ ಮಾಡುತ್ತಿದೆ. ಬಜರಂಗದಳ ನಿಷೇಧ ಮಾಡಲು ಜಗತ್ತಿನ ಯಾವುದೇ ಶಕ್ತಿಯಿಂದ ಸಾಧ್ಯವಿಲ್ಲ. ಡಿಕೆಶಿಗೆ ಧಮ್ ಇದ್ರೆ ಮೀಸಲಾತಿ ತೆಗೆಯುವುದು, ಬಜರಂಗದಳ ನಿಷೇಧ ಮಾಡಲಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಸೇರಿದ್ದು ಹೇಗೆ? – ಇನ್‌ಸೈಡ್‌ ಸ್ಟೋರಿ

    ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರುವುದಿಲ್ಲ. ಕೇವಲ ಬಜರಂಗದಳ ಅಷ್ಟೇ ಬಾಯ್ ಕಾಟ್ ಅಲ್ಲಾ, ಎಲ್ಲಾ ಹಿಂದೂಗಳು ಬಾಯ್ ಕಾಟ್ ಮಾಡುತ್ತೇವೆ. ಮುಸ್ಲಿಮರ ಮತ ಓಲೈಕೆಗಾಗಿ ಹೀಗೆ ಮಾಡುತ್ತಿದ್ದಾರೆ. ಕಾಂಗ್ರೆಸ್‌ನವರಿಗೆ ಕೇವಲ ಮುಸ್ಲಿಂ ಮತಗಳು ಬೇಕಿದೆ, ಹಿಂದೂಗಳ ಮತ ಬೇಕಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮೇ 22 ರಿಂದ ಜೂನ್ 2ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

  • ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಸೇರಿದ್ದು ಹೇಗೆ? – ಇನ್‌ಸೈಡ್‌ ಸ್ಟೋರಿ

    ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಸೇರಿದ್ದು ಹೇಗೆ? – ಇನ್‌ಸೈಡ್‌ ಸ್ಟೋರಿ

    ಬೆಂಗಳೂರು: ಚುನಾವಣೆಗೆ ಕೇವಲ ಒಂದು ವಾರ ಬಾಕಿ ಇರುವಾಗ ರಾಜ್ಯ ಕಾಂಗ್ರೆಸ್ ಬಜರಂಗದಳವನ್ನು (Bajrang Dal) ನಿಷೇಧಿಸುವ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ (Manifesto) ಹಾಕಿ ವಿವಾದಕ್ಕೆ ಸಿಲುಕಿದೆ. ಆದರೆ ಕಾಂಗ್ರೆಸ್ (Congress) ಪ್ರಣಾಳಿಕೆ ಸಮಿತಿ ಮುಖ್ಯಸ್ಥ ಪರಮೇಶ್ವರ್ (Parameshwar) ನೇತೃತ್ವದಲ್ಲಿ ಈ ವಿಚಾರ ತೀರ್ಮಾನ ಆಗಿರಲಿಲ್ಲ ಎಂಬ ವಿಚಾರ ಈಗ ತಿಳಿದು ಬಂದಿದೆ.

    “ಮತೀಯ ಚಟುವಟಿಕೆ ನಡೆಸುವ ಸಂಘಟನೆಗಳನ್ನು ನಿಷೇಧ ಮಾಡಲಾಗುವುದು”  ಎಂಬ ಘೋಷಣೆಗೆ ಕಾಂಗ್ರೆಸ್‌ ಮುಂದಾಗಿತ್ತು. ಮತೀಯ ಸಂಘಟನೆ ವಿಚಾರದಲ್ಲಿ ಸ್ಪಷ್ಟತೆ ಇರಬೇಕು. ಅದು ಯಾವ ಧರ್ಮವಾದರೂ ಆಗಲಿ ಅದನ್ನು ಹೇಳೋಣ ಎಂದು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

    ಸಿದ್ದರಾಮಯ್ಯನವರ (Siddaramaiah) ಈ ನಿಲುವನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ (Surjewala) ಸಮರ್ಥಿಸುವ ಮೂಲಕ ಹೆಸರು ಪ್ರಸ್ತಾಪಕ್ಕೆ ಮುಂದಾದರು ಎನ್ನಲಾಗಿದೆ. ಕೊನೆ ಕ್ಷಣದಲ್ಲಿ ಇವರ ಮಾತನ್ನು ಒಪ್ಪಿದ ಪ್ರಣಾಳಿಕೆ ಸಮಿತಿ ಪಿಎಫ್‍ಐ, ಭಜರಂಗದಳದ ಹೆಸರನ್ನು ಪ್ರಸ್ತಾಪಿಸಿದೆ.  ಇದನ್ನೂ ಓದಿ: ಭಯೋತ್ಪಾದನೆಗೆ ಉತ್ತೇಜನ ಕೊಟ್ರೆ, PFI, ಬಜರಂಗದಳ ಆದ್ರೂ ಬ್ಯಾನ್ ಮಾಡಲಾಗುತ್ತೆ: ಬಿ.ಕೆ‌ ಹರಿಪ್ರಸಾದ್

    ಸೈದ್ದಾಂತಿಕ ಸ್ಪಷ್ಟತೆ ತೋರಿಸಲು ಹೋಗಿ ವಿವಾದ ಮೈ ಮೇಲೆ ಎಳೆದುಕೊಂಡ ಕಾಂಗ್ರೆಸ್ ಈಗ ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ಸೈದ್ದಾಂತಿಕ ಸ್ಪಷ್ಟತೆ ಇರಬೇಕು ಎಂಬ ಸಿದ್ದರಾಮಯ್ಯ ನಡೆಯೇ ಬಜರಂಗದಳ ವಿವಾದಕ್ಕೆ ಮೂಲವಾಯ್ತಾ? ಚಟುವಟಿಕೆ ಆಧಾರವಾಗಿ ಮತೀಯ ಸಂಘಟನೆಗಳ ನಿಷೇಧ ಬಗ್ಗೆ ಪ್ರಸ್ತಾಪಿಸಿದ್ದ ಪರಮೇಶ್ವರ್ ಸಮಿತಿಗೆ ಸಿದ್ದರಾಮಯ್ಯ ಸುರ್ಜೆವಾಲಾ ನಿಲುವೇ ಮುಳುವಾಯ್ತಾ ಎಂಬ ಪ್ರಶ್ನೆ ಎದ್ದಿದೆ.

    ಪ್ರಣಾಳಿಕೆಯಲ್ಲಿ ಏನಿದೆ?
    ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ.

    ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಿಗಳಾಗ ಬಜರಂಗದಳ ಮತ್ತು ಪಿಎಫ್‌ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.

  • ಹನುಮ ಭಕ್ತ ಬಜರಂಗದಳದವರು ಸಿಡಿದು ನಿಂತ್ರೆ ಬೇರು ಸಮೇತ ಕಿತ್ತೋಗ್ತೀರಿ: ಬೊಮ್ಮಾಯಿ

    ಹನುಮ ಭಕ್ತ ಬಜರಂಗದಳದವರು ಸಿಡಿದು ನಿಂತ್ರೆ ಬೇರು ಸಮೇತ ಕಿತ್ತೋಗ್ತೀರಿ: ಬೊಮ್ಮಾಯಿ

    ಧಾರವಾಡ: ಬಜರಂಗದಳ (Bajarangdal) ದವರು ನಮ್ಮ ಹನುಮನ ಭಕ್ತರು. ಒಬ್ಬೊಬ್ಬರು ಸಿಡಿದು ನಿಂತರೆ ಬೇರು ಸಮೇತ ಕಿತ್ತು ಹೋಗುತ್ತೀರಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Basavaraj Bommai) ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

    ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ‌ (Shankar Patil Munenakoppa) ಪರ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಈ ವೇಳೆ ಮಾತನಾಡಿ, ನವಲಗುಂದಕ್ಕೆ ಇದು ಬಂಡಾಯ ನಾಡು ಎಂದು ಕರೆದರು. ಈ ಭಾಗದಲ್ಲಿ ಮಹದಾಯಿ ನೀರು ಬಂದಿರಲಿಲ್ಲ, ರೈತರ ಮೇಲೆ ಗುಂಡು ಹಾಕಿದ ಸರ್ಕಾರ ಕಾಂಗ್ರೆಸ್ ಎಂದು ಟೀಕಿಸಿದ ಅವರು, ಮಹದಾಯಿ (Mayadayi) ನೀರನ್ನು ಮಲಪ್ರಭೆಗೆ ತಂದು ನೀರು ಕೊಡಲು ಅಡ್ಡ ಹಾಕಿದ್ದ ಕಾಂಗ್ರೆಸ್, ಸೋನಿಯಾ ಗಾಂಧಿ ಅವರು ಗೋವಾ (Goa) ದಲ್ಲಿ ಹೋಗಿ ಹನಿ ನೀರು ಕೊಡಲ್ಲ ಎಂದಿದ್ರು ಎಂದರು.

    ಮನಮೋಹನ್ ಸಿಂಗ್ (Manamohan Singh) ಅವರು ನಮಗೆ ನೀರು ಕೊಡಲು ಟ್ರಿಬುನಲ್ ಮಾಡಿದ್ರು, ಸಿದ್ದರಾಮಯ್ಯ ಸರ್ಕಾರ ಗೋಡೆ ಕಟ್ಟಿದ್ರು, ಒಂದು ಕೋಟಿ ಖರ್ಚು ಮಾಡಿ ನಾವು ಕೆನಲ್ ಕಟ್ಟಿದೆವು, ಗೋಡೆ ಕಟ್ಟಿದೆವು ಎಂದ ಸಿಎಂ, ಇದೇ ನವಲಗುಂದ ತಾಲೂಕಿನಲ್ಲಿ ಹೆಣ್ಣು ಮಕ್ಕಳ ಮೇಲೆ ಲಾಠಿ ಹೊಡೆದವರಿಗೆ ಮತ ಹಾಕ್ತಿರಾ ಎಂದು ಪ್ರಶ್ನೆ ಮಾಡಿದರು. ಮೋದಿ ಅವರು ನಮಗೆ ಮಹದಾಯಿಗಾಗಿ ಅನುಮತಿ ಕೊಟ್ಡಿದ್ದಾರೆ. ನಾವು ಟೆಂಡರ್ ಮಾಡಿದ್ದೇವೆ, ಕೆಲಸ ಆರಂಭ ಆಗಲಿದೆ ಎಂದ ಬೊಮ್ಮಾಯಿ, ಈಗಾಗಲೇ ನಾನು ಒಂದು ಸಾವಿರ ಕೋಟಿ ಕೊಟ್ಟಿದ್ದೇನೆ. ಎರಡು ವರ್ಷದಲ್ಲಿ ಕಾಮಗಾರಿ ಮಾಡ್ತೇವೆ ಎಂದರು.

    ಗ್ಯಾರಂಟಿ ಕೊಡುತ್ತಾರೆ ಕಾಂಗ್ರೆಸ್ ನವರು, ಮೋದಿ (Narendra Modi) ಅವರ ಅಕ್ಕಿ ಅದು, ಎಲ್ಲ ಗ್ಯಾರಂಟಿ ಮೇ 10ವರೆಗೆ, ಅದರ ನಂತರ ಗಳಗಂಟಿ ಎಂದ ಸಿಎಂ, ಮೀಸಲಾತಿ ಹೆಚ್ಚಳ ಮಾಡಿದೆ. ನಮ್ಮ ದುಡಿಯುವ ಜನರಿಗೆ ಮೀಸಲಾತಿ ಕೊಟ್ಟಿದ್ದೇವೆ, ನಮ್ಮ ಎದುರಿಗೆ ಅವರು ವಿರೋಧ ಮಾಡಿ ಕೋರ್ಟ್‍ಗೆ ಹೋಗಿದ್ದಾರೆ ಎಂದರು. ಇದನ್ನೂ ಓದಿ: ಮೋದಿಗೆ ಎಷ್ಟು ಬೈತಿರೋ ಅಷ್ಟು ಕಮಲ ಅರಳುತ್ತೆ: ಕಾಂಗ್ರೆಸ್‍ಗೆ ಅಮಿತ್ ಶಾ ತಿರುಗೇಟು

    ನಾವು ಬಜರಂಗದಳ ಬ್ಯಾನ್ ಮಾಡುತ್ತೇವೆ ಅಂತಾರೆ, ಭಯೋತ್ಪಾದನೆ ಮಾಡಿದ ಪಿಎಫ್‍ಐಗೆ ಅವರು ಕೇಸ್ ವಾಪಸ್ ಪಡೆದರು, ಬಜರಂಗದಳದವರು ನಮ್ಮ ಹನುಮನ ಭಕ್ತರು, ಒಬ್ಬೊಬ್ಬರು ಸಿಡಿದು ನಿಂತರೆ ಬೇರು ಸಮೇತ ಕಿತ್ತು ಹೋಗ್ತೀರಿ ಎಂದ ಸಿಎಂ, ರಾಮನ ದೇವಸ್ಥಾನ ಆಗುತ್ತಿದೆ. ಸಬ್ ಕಾ ವಿಕಾಸ ನಾವು ಮಾಡುತ್ತೇವೆ. ಮನೆ ಮನೆಗೆ ಹೋಗಿ ಮೇ 10 ಕ್ಕೆ ಮುನೇನಕೊಪ್ಪ ಅವರಿಗೆ ಮತ ಹಾಕುವಂತೆ ಹೇಳಿ, ಬಹಳ ಜನ ಮಾತನಾಡುತ್ತಾರೆ. ಆದರೆ ಜಗದೇಕ ಮಲ್ಲ ಮುನೇನಕೊಪ್ಪ, 25 ಸಾವಿತ ಮತದಿಂದ ಗೆಲ್ಲಿಸಿ ಎಂದು ಕೇಸರಿ ಶಾಲು ತಿರುವಿಸಿ ಬಜರಂಗಿ ಎಂದು ಘೋಷಣೆ ಹಾಕಿದರು. ಇದೇ ವೇಳೆ ಕುರುಬ ಸಮುದಾಯದಿಂದ ಸಿಎಂಗೆ ಕಂಬಳಿ ಹೊದಿಸಿ ಸನ್ಮಾನ ಮಾಡಿದರು. ಸಿಎಂಗೆ ಟಗರು ಮರಿ ಕೊಟ್ಟ ನಂತರ ಅದಕ್ಕೆ ಕೈಯಲ್ಲಿ ಹಿಡಿದು ಸಿಎಂ ಮುತ್ತಿಟ್ಟರು ಎಂದರು.

  • ಬಜರಂಗದಳ ನಿಷೇಧ ಭರವಸೆ – ಪ್ರೊಫೈಲ್ ಫೋಟೋ ಬದಲಿಸಿದ BJP ನಾಯಕರು

    ಬಜರಂಗದಳ ನಿಷೇಧ ಭರವಸೆ – ಪ್ರೊಫೈಲ್ ಫೋಟೋ ಬದಲಿಸಿದ BJP ನಾಯಕರು

    ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Election 2023) ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಕಾಂಗ್ರೆಸ್‌ ಪಕ್ಷ ಮಂಗಳವಾರ ತನ್ನ ಪ್ರಣಾಳಿಕೆಯನ್ನ ಬಿಡುಗಡೆಗೊಳಿಸಿದೆ.

    ಎಸ್ಸಿ ಸಮುದಾಯಕ್ಕೆ ಶೇ. 15 ರಿಂದ 17ಕ್ಕೆ, ಎಸ್ಟಿ ಸಮುದಾಯಕ್ಕೆ ಶೇ. 3 ರಿಂದ 7ಕ್ಕೆ, ಅಲ್ಪಸಂಖ್ಯಾತರಿಗೆ ಶೇ. 4ರ ಮರುಸ್ಥಾಪನೆ, ಲಿಂಗಾಯತ, ಒಕ್ಕಲಿಗ ಮತ್ತಿತರ ಸಮುದಾಯಗಳ ಆಶೋತ್ತರಗಳನ್ನು ಈಡೇರಿಸಲು ಮೀಸಲಾತಿಯನ್ನು ಶೇ. 50ರಿಂದ 75ರ ವರೆಗೆ ಹೆಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಇದರ ಜೊತೆಗೆ ಬಜರಂಗದಳವನ್ನು (Bajrang Dal) ನಿಷೇಧಿಸುತ್ತೇವೆ ಎಂದು ಕಾಂಗ್ರೆಸ್ (Congress) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ಇದನ್ನೂ ಓದಿ: ಮೀಸಲಾತಿ ಶೇ.75ರವರೆಗೆ ಹೆಚ್ಚಳ, NEP ರದ್ದು, ಭಜರಂಗದಳ ನಿಷೇಧ- ಕಾಂಗ್ರೆಸ್‍ನಿಂದ ಪ್ರಣಾಳಿಕೆ ರಿಲೀಸ್

    ಕಾಂಗ್ರೆಸ್‌ ಬಜರಂಗದಳ ನಿಷೇಧ ಭರವಸೆಗೆ ಬಿಜೆಪಿ ನಾಯಕರು ಸಿಡಿದೆದ್ದಿದ್ದಾರೆ. ತಮ್ಮ ಪ್ರೊಫೈಲ್ ಫೋಟೋ, ವಾಟ್ಸಪ್, ಫೇಸ್‌ಬುಕ್ ಸ್ಟೇಟಸ್‌ಗಳಲ್ಲಿ ನಾನೊಬ್ಬ ಭಜರಂಗಿ ಅಂತಾ ಘೋಷಣೆ ಮಾಡ್ಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಭರವಸೆ ವಿರುದ್ಧ ಡಿಜಿಟಲ್ ಅಭಿಯಾನ ಕೈಗೊಂಡಿದ್ದು, ಬಜರಂಗದಳ ನಿಷೇಧ ಭರವಸೆಯನ್ನೇ ಚುನಾವಣಾ ಪ್ರಚಾರಕ್ಕೆ ಅಸ್ತ್ರ ಮಾಡಿಕೊಂಡಿದೆ ಅನ್ನೋದು ತಿಳಿದುಬಂದಿದೆ. ಇದನ್ನೂ ಓದಿ: ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್

    ಕಡೇ 7 ದಿನದ ಆಟದಲ್ಲಿ ಜೈ ಭಜರಂಗಿ‌ ಕ್ಯಾಂಪೇನ್:
    ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೂ 7 ದಿನಗಳ ಬಾಕಿಯಿರುವ ಹೊತ್ತಿನಲ್ಲೇ ರಾಜ್ಯಾದ್ಯಂತ ʻಜೈ ಭಜರಂಗಿ‌ ಕ್ಯಾಂಪೇನ್ʼ ಶುರುವಾಗಿದೆ. ಬಜರಂಗದಳವನ್ನ ʻನಾನೊಬ್ಬ ಭಜರಂಗಿʼ ಎಂದು ತಿರುಗಿಸಿದೆ. ಇನ್ನೂ ಬಿಜೆಪಿ ಹೈಕಮಾಂಡ್‌ ಸಹ ಎಲ್ಲ ನಾಯಕರಿಗೂ ಖಡಕ್‌ ಸೂಚನೆ ಕೊಟ್ಟಿದ್ದು, ಕಾಂಗ್ರೆಸ್ ಟಾರ್ಗೆಟ್ ಮಾಡಿ‌ ಕಡೇ 7 ದಿನದ ಪ್ರಚಾರ ಮಾಡಲು ಸೂಚನೆ ನೀಡಿದೆ ಎನ್ನಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ಸಿಗರು ವೋಟ್‌ ಕೇಳೋಕೆ ಬಂದ್ರೆ ʻನಾಯಿ ಬಿಡ್ತೀವಿʼ ಭಜರಂಗದಳ ಎಚ್ಚರಿಕೆ

    ಈ ಹಿಂದೆ ನಮಗೂ ಬಜರಂಗದಳಕ್ಕೂ ಸಂಬಂಧವೇ ಇಲ್ಲ ಎಂದು ಬಿಜೆಪಿಗರು ಹೇಳಿದ್ದರು. ಆದರೀಗ ಕಾಂಗ್ರೆಸ್ ಕೊಟ್ಟ ಬಜರಂಗದಳ ನಿಷೇಧ ಭರವಸೆಯ ಬ್ರಹ್ಮಾಸ್ತ್ರದಿಂದ ರಾಜಕೀಯ ತಿರುವು ಸಿಗುತ್ತಾ? ಅನ್ನೋದನ್ನ ಕಾದುನೋಡಬೇಕಿದೆ.

  • ಸುಟ್ಟ ಸ್ಥಿತಿಯಲ್ಲಿ ಇಬ್ಬರ ಮೃತ ದೇಹ ಪತ್ತೆ – ಗೋ ರಕ್ಷಕರ ವಿರುದ್ಧ ಪ್ರಕರಣ ದಾಖಲು

    ಸುಟ್ಟ ಸ್ಥಿತಿಯಲ್ಲಿ ಇಬ್ಬರ ಮೃತ ದೇಹ ಪತ್ತೆ – ಗೋ ರಕ್ಷಕರ ವಿರುದ್ಧ ಪ್ರಕರಣ ದಾಖಲು

    ಜೈಪುರ್: ಕಾರಿನಲ್ಲಿ ಇಬ್ಬರ ಮೃತ ದೇಹ ಸುಟ್ಟ ಸ್ಥಿತಿಯಲ್ಲಿ (Burnt Bodies) ಪತ್ತೆಯಾದ ಒಂದು ದಿನದ ನಂತರ ಐವರು ಗೋರಕ್ಷಕರ ಮೇಲೆ ಅಪಹರಣ ಪ್ರಕರಣ ದಾಖಲಾದ ಘಟನೆ ರಾಜಸ್ಥಾನದ (Rajasthan) ಭರತ್‍ಪುರ್ ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಭರತ್‍ಪುರನ ನಾಸಿರ್ (25) ಹಾಗೂ ಜುನೈದ್ (35) ಎಂಬ ಇಬ್ಬರು ಬುಧವಾರದಿಂದ ನಾಪತ್ತೆಯಾಗಿದ್ದರು. ಇಬ್ಬರನ್ನು ಅಪಹರಿಸಲಾಗಿದೆ ಎಂದು ಕುಟುಂಬಸ್ಥರು ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಡಿಕೆಶಿ ಕಿವಿಯಿಂದ ಹೂ ತೆಗೆದ ಯಡಿಯೂರಪ್ಪ

    ಹರಿಯಾಣದ ಭಿವಾನಿ ಜಿಲ್ಲೆಯಲ್ಲಿ ಬೊಲೆರೋ (Bolero) ವಾಹನದಲ್ಲಿ ಸುಟ್ಟ ಸ್ಥಿತಿಯಲ್ಲಿ ಇಬ್ಬರ ಮೃತ ದೇಹ ಪತ್ತೆಯಾಗಿತ್ತು. ಮೃತ ದೇಹಗಳು ನಾಸಿರ್ ಮತ್ತು ಜುನೈದ್ ಅವರದ್ದೇ ಎಂಬುದನ್ನು ಖಚಿತ ಪಡಿಸಲು ಕುಟುಂಬಸ್ಥರನ್ನು ಸ್ಥಳಕ್ಕೆ ಕರೆದೊಯ್ಯಲಾಗುವುದು. ಮರಣೋತ್ತರ ಪರೀಕ್ಷೆ ಹಾಗೂ ಡಿಎನ್‍ಎ ವರದಿ ಆಧರಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರತ್‍ಪುರದ ಇನ್ಸ್‍ಪೆಕ್ಟರ್ ಜನರಲ್ ಗೌರವ್ ಶ್ರೀವಾಸ್ತವ ತಿಳಿಸಿದ್ದಾರೆ.

    ಮೃತ ದೇಹಗಳು ಪತ್ತೆಯಾದ ಕಾರನ್ನು ಕುಟುಂಬಸ್ಥರು ಪತ್ತೆಹಚ್ಚಿದ್ದಾರೆ. ನಾಸಿರ್ ಹಾಗೂ ಜುನೈದ್ ಅವರ ಪರಿಚಿತರ ಕಾರು ಎಂದು ಅವರು ಹೇಳಿದ್ದಾರೆ.

    ಜುನೈದ್ ವಿರುದ್ಧ ಗೋವು ಕಳ್ಳಸಾಗಾಣಿಕೆಯ ಐದು ಪ್ರಕರಣಗಳಿದ್ದವು. ಆದರೆ ನಾಸಿರ್ ಯಾವುದೇ ಕ್ರಿಮಿನಲ್ ಹಿನ್ನಲೆ ಹೊಂದಿರಲಿಲ್ಲ. ಈ ಪ್ರಕರಣದಲ್ಲಿ ಗೋ ರಕ್ಷಕರ ಪಾತ್ರವಿರುವ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಶ್ರೀವಾಸ್ತವ ತಿಳಿಸಿದ್ದಾರೆ.

    ಮೋನು ಮನೆಸರ್, ಲೋಕೇಶ್ ಸಿಂಘಿಯಾ, ರಿಂಕು ಸೈನಿ, ಅನಿಲ್ ಮತ್ತು ಶ್ರೀಕಾಂತ್ ಅಪಹರಿಸಿದ್ದಾರೆ. ಆರೋಪಿಗಳೆಲ್ಲ ಬಲಪಂಥೀಯ ಬಜರಂಗದಳದ ಕಾರ್ಯಕರ್ತರು ಎಂಬ ಆರೋಪ ಬಂದಿದೆ. ಇದನ್ನೂ ಓದಿ: ಗುಂಡಿಟ್ಟು ಕೊಲ್ತೀನಿ, ಕಸ ಗುಡಿಸ್ತೀನಿ ಎಂದವನು ಎಲ್ಲಿ ಹೋದ?- ಅಶ್ವಥ್ ವಿರುದ್ಧ ಡಿಕೆಶಿ ವಾಗ್ದಾಳಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹನುಮಜಯಂತಿ, ಶೋಭಾಯಾತ್ರೆ ಹಿನ್ನೆಲೆ ಹಾಸನದಲ್ಲಿ ಮದ್ಯ ನಿಷೇಧ, ಬಿಗಿ ಪೊಲೀಸ್ ಭದ್ರತೆ

    ಹನುಮಜಯಂತಿ, ಶೋಭಾಯಾತ್ರೆ ಹಿನ್ನೆಲೆ ಹಾಸನದಲ್ಲಿ ಮದ್ಯ ನಿಷೇಧ, ಬಿಗಿ ಪೊಲೀಸ್ ಭದ್ರತೆ

    ಹಾಸನ: ವಿಶ್ವ ಹಿಂದೂ ಪರಿಷತ್ (Vishva Hindu Parishad) ಹಾಗೂ ಬಜರಂಗದಳ (Bajrang Dal) ವತಿಯಿಂದ ಮಂಗಳವಾರ ಹಾಸನ (Hassan) ನಗರದಲ್ಲಿ ಹಮ್ಮಿಕೊಂಡಿರುವ ಹನುಮಜಯಂತಿ (Hanumajayanti) ಹಾಗೂ ಬೃಹತ್ ಶೋಭಾಯಾತ್ರೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹಾಸನ ನಗರ ವ್ಯಾಪ್ತಿಯಲ್ಲಿ ಮದ್ಯ (Alcohol) ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಎಂಎಸ್ ಅರ್ಚನಾ ಆದೇಶ ಹೊರಡಿಸಿದ್ದಾರೆ.

    ಹಾಸನ ನಗರ ವ್ಯಾಪ್ತಿಯಲ್ಲಿ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ನೀರುಬಾಗಿಲು ಶ್ರೀ ಆಂಜನೇಯ ದೇವಸ್ಥಾನದಲ್ಲಿ ಧಾರ್ಮಿಕ ಕೈಂಕರ್ಯಗಳು ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಸಂತೇಪೇಟೆ ವೃತ್ತದಿಂದ ಬೃಹತ್ ಶೋಭಾಯಾತ್ರೆ ಆರಂಭಗೊಳ್ಳಲಿದ್ದು ಎನ್‌ಆರ್ ವೃತ್ತ, ಮಹಾವೀರ ವೃತ್ತ, ಸಹ್ಯಾದ್ರಿ ವೃತ್ತ, ಸೀತಾರಾಮಾಂಜನೇಯ ದೇವಸ್ಥಾನದ ರಸ್ತೆ ಮೂಲಕ ಯಾತ್ರೆ ಸಾಗಲಿದೆ. ಬಸಟ್ಟಿ ಕೊಪ್ಪಲು, ಎಂಜಿ ರಸ್ತೆ, ಶಂಕರಮಠ ರಸ್ತೆ, ಶಕ್ತಿಗಣಪತಿ ದೇವಸ್ಥಾನ ವೃತ್ತ, ಕುವೆಂಪುನಗರ, ಬಿಎಂ ರಸ್ತೆ ಮೂಲಕ ರೈಲ್ವೆ ನಿಲ್ದಾಣದವರೆಗೆ ಶೋಭಾಯಾತ್ರೆ ನಡೆಯಲಿದೆ. ಇದನ್ನೂ ಓದಿ: ಮಾಜಿ ಶಿಷ್ಯನ ವಿರುದ್ಧ ತೊಡೆ ತಟ್ಟಲಿದ್ದಾರೆ ಸಿದ್ದರಾಮಯ್ಯ – ಕೋಲಾರದಲ್ಲೇ ಸ್ಪರ್ಧೆ ಯಾಕೆ?

    ಶೋಭಾಯಾತ್ರೆಯಲ್ಲಿ 15-20 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ. ಸಂಜೆ 5:30 ಕ್ಕೆ ರೈಲ್ವೇ ನಿಲ್ದಾಣ ಮುಂಭಾಗ ಸಾರ್ವಜನಿಕ ಸಮಾರಂಭ ಕಾರ್ಯಕ್ರಮ ಆಯೋಜಿಸಿದ್ದು ಆದಿಚುಂಚನಗಿರಿ ಹಾಸನ ಶಾಖಾಮಠದ ಶ್ರೀ ಶಂಭುನಾಥ ಸ್ವಾಮೀಜಿ, ತಣ್ಣೀರುಹಳ್ಳ ಮಠದ ಶ್ರೀ ವಿಜಯಕುಮಾರ ಸ್ವಾಮೀಜಿ, ಬೆಲಗೂರು ಮಾರುತಿ ಪೀಠದ ವಿಜಯಮಾರುತಿ ಶರ್ಮ ಗುರುಗಳು ಭಾಗವಹಿಸಲಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ್ಯ ಕಾರ್ಯಕಾರಿಣಿ ಆಮಂತ್ರಿತ ಸದಸ್ಯ ಕಲ್ಲಡ್ಕ ಪ್ರಭಾಕರ್ ಭಟ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಹಾಸನ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇದನ್ನೂ ಓದಿ: ಅತ್ತೆ ಹೆಬ್ಬಾಳ್ಕರ್ ಮಾದರಿಯಲ್ಲಿ ರಾಜಕೀಯ ಶುರು ಮಾಡಿದ ಅಳಿಯ ರಜತ್ ಉಳ್ಳಾಗಡ್ಡಿಮಠ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹಿಂದೂ ಯುವತಿಯರ ಜೊತೆ ನಡುರಾತ್ರಿ ತಿರುಗಾಡುತ್ತಿದ್ದ ಮುಸ್ಲಿಂ ಯುವಕರ ಮೇಲೆ ಹಲ್ಲೆಗೆ ಯತ್ನ

    ಹಿಂದೂ ಯುವತಿಯರ ಜೊತೆ ನಡುರಾತ್ರಿ ತಿರುಗಾಡುತ್ತಿದ್ದ ಮುಸ್ಲಿಂ ಯುವಕರ ಮೇಲೆ ಹಲ್ಲೆಗೆ ಯತ್ನ

    ಮಂಗಳೂರು: ನಗರದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದೆ. ಸುಳ್ಯದಲ್ಲಿ ಮುಸ್ಲಿಂ (Muslim) ಜೋಡಿಗೆ ಮುಸ್ಲಿಂ ಯುವಕರೇ ಹಲ್ಲೆ ನಡೆಸಿದ ಘಟನೆಯ ನೆನಪು ಮಾಸುವ ಮೊದಲೇ ಮತ್ತೆ ಮಂಗಳೂರು (Mangaluru) ನಗರದಲ್ಲಿ ಹಲ್ಲೆಗೆ ಯತ್ನ ನಡೆದಿದೆ. ಮುಸ್ಲಿಂ ಯುವಕರೊಂದಿಗೆ ಹಿಂದೂ (Hindu) ಯುವತಿಯರು ತಡ ರಾತ್ರಿ ಸುತ್ತಾಡುತ್ತಿದ್ದುದನ್ನು ನೋಡಿದ್ದ ಬಜರಂಗದಳದ (Bajrang Dal) ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ.

    ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯದ ಕರಾವಳಿಯಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಈ ಬಾರಿಯೂ ಆಗ್ಗಾಗ್ಗೆ ನೈತಿಕ ಪೊಲೀಸ್ ಗಿರಿ ಬೆಳಕಿಗೆ ಬರುತ್ತಿದೆ. ಕಳೆದ 2 ದಿನದ ಹಿಂದೆ ಸುಳ್ಯದ ಸಂತೋಷ್ ಚಿತ್ರ ಮಂದಿರಕ್ಕೆ ಕಾಂತಾರ ಚಿತ್ರ ನೋಡಲು ಬಂದ ಮುಸ್ಲಿಂ ಜೋಡಿಗೆ ಹಿಗ್ಗಾಮುಗ್ಗ ಥಳಿಸಲಾಗಿತ್ತು. ಹಿಂದೂ ಧರ್ಮದ ದೈವಾರಾಧನೆಗೆ ಸಂಬಂಧಿಸಿದ ಕಾಂತಾರ ಚಿತ್ರವನ್ನು ನೋಡಲು ಬಂದಿದ್ದ ಮುಸ್ಲಿಂ ವಿದ್ಯಾರ್ಥಿ ಜೋಡಿಗೆ ಮುಸ್ಲಿಂ ಯುವಕರೇ ಹಲ್ಲೆ ನಡೆಸಿದ್ದರು. ಕಾಂತಾರ ಚಿತ್ರವನ್ನು ನೋಡದಂತೆ ತಾಕೀತು ಮಾಡಿದ್ದರು.

    ಸುಳ್ಯದ ಹಲ್ಲೆಯ ಘಟನೆಯ ನೆನಪು ಮಾಸುವ ಮೊದಲೇ ನಿನ್ನೆ ತಡ ರಾತ್ರಿ ಬಜರಂಗದಳದ ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿಗೆ ಯತ್ನಿಸಿದ್ದರು. ನಗರದ ಕೊಟ್ಟಾರ ಎಂಬಲ್ಲಿ ಹಿಂದೂ ಯುವತಿಯರೊಂದಿಗೆ ಮುಸ್ಲಿಂ ಯುವಕರು ತಡ ರಾತ್ರಿ 12 ಗಂಟೆಗೆ ಸುತ್ತಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ತಡೆದು ಪ್ರಶ್ನಿಸಿ ಹಲ್ಲೆಗೆ ಮುಂದಾಗಿದ್ದರು.  ಇದನ್ನೂ ಓದಿ: ರಾಜ್ಯಪಾಲರ ಕಾರು ಚಾಲಕ ಹೃದಯಾಘಾತದಿಂದ ಸಾವು

    ಯುವಕರ ತಂಡ ಊಟಕ್ಕೆ ಹೋಗಿದ್ದಾಗಿ ಹೇಳಿದೆ. ಇಷ್ಟೊಂದು ರಾತ್ರಿ ವೇಳೆ ಎಲ್ಲಿ ಹೋಟೆಲ್ ಇರುತ್ತೆ ಎಂದು ಬಜರಂಗದಳದ ಕಾರ್ಯಕರ್ತರು ಪ್ರಶ್ನಿಸಿ ಹಲ್ಲೆಗೆ ಯತ್ನಿಸಿದ್ದರು. ತಕ್ಷಣ ಸ್ಥಳದಲ್ಲೇ ಇದ್ದ ನೈಟ್ ಬೀಟ್ ಪೊಲೀಸರು ಇದನ್ನು ತಡೆದಿದ್ದು, ಹಲ್ಲೆಗೆ ಆಸ್ಪದ ನೀಡಿಲ್ಲ. ಬಳಿಕ ಉರ್ವಾ ಪೊಲೀಸ್ ಠಾಣೆಗೆ ಯುವಕರನ್ನು ಕರೆತಂದು ಎಚ್ಚರಿಕೆ ನೀಡಿ ಕಳುಹಿಸಲಾಗಿದೆ.

    ಸುಳ್ಯದ ಪ್ರಕರಣದಲ್ಲಿ ಐವರು ಆರೋಪಿಗಳು ಜೈಲು ಕಂಬಿ ಎಣಿಸುತ್ತಿದ್ದಾರೆ. ಒಟ್ಟಿನಲ್ಲಿ ಕರಾವಳಿಯಲ್ಲಿ ಈ ರೀತಿಯ ನೈತಿಕ ಪೊಲೀಸ್ ಗಿರಿ ನಡೆಯುತ್ತಿದ್ದರೂ ಅನ್ಯಕೋಮಿನ ಜೋಡಿಗಳು ಮತ್ತೆ ಮತ್ತೆ ಸುತ್ತಾಟ ನಡೆಸುತ್ತಿರುವುದು ಆಗಾಗ ಬೆಳಕಿಗೆ ಬರುತ್ತಲೇ ಇವೆ. ಇದನ್ನೂ ಓದಿ: ರಾತ್ರಿ 11 ಗಂಟೆ ನಂತ್ರ ಓಡಾಡಿದ್ದಕ್ಕೆ ದಂಪತಿಗೆ ದಂಡ ಹಾಕಿದ್ದ ಪೊಲೀಸರು ಸಸ್ಪೆಂಡ್‌

    Live Tv
    [brid partner=56869869 player=32851 video=960834 autoplay=true]

  • ಮಂಗಳೂರು ಸೆಂಟ್ರಲ್ ಮಾರ್ಕೆಟ್‌ನ ನೀಲನಕ್ಷೆಯಲ್ಲಿ ಬೀಫ್ ಸ್ಟಾಲ್ – ಬಿಜೆಪಿ ವಿರುದ್ಧ ಹಿಂದೂ ಸಂಘಟನೆಗಳ ಆಕ್ರೋಶ

    ಮಂಗಳೂರು ಸೆಂಟ್ರಲ್ ಮಾರ್ಕೆಟ್‌ನ ನೀಲನಕ್ಷೆಯಲ್ಲಿ ಬೀಫ್ ಸ್ಟಾಲ್ – ಬಿಜೆಪಿ ವಿರುದ್ಧ ಹಿಂದೂ ಸಂಘಟನೆಗಳ ಆಕ್ರೋಶ

    ಮಂಗಳೂರು: ವಿವಾದದ ಕೇಂದ್ರ ಬಿಂದುವಾಗಿದ್ದ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ (Mangaluru Central Market) ಮತ್ತೆ ವಿವಾದದಿಂದ ಸುದ್ದಿಯಾಗಿದೆ. ನೂತನವಾಗಿ ನಿರ್ಮಾಣ ಆಗುತ್ತಿರುವ ಮಾರುಕಟ್ಟೆಯಲ್ಲಿ ಅಧಿಕೃತ ಬೀಫ್ ಸ್ಟಾಲ್‌ಗೆ (Beef Stall) ಪಾಲಿಕೆ ಅವಕಾಶ ನೀಡಿದೆ. ಬಿಜೆಪಿ (BJP) ಆಡಳಿತ ಇರುವ ಪಾಲಿಕೆಯೇ ಈ ನಿರ್ಧಾರ ಮಾಡಿರುವುದು ಹಿಂದೂ ಸಂಘಟನೆಗಳ (Hindu Organization) ಕೆಂಗಣ್ಣಿಗೆ ಗುರಿಯಾಗಿದೆ.

    ಬ್ರಿಟಿಷರ ಕಾಲದಿಂದ ಇದ್ದ ಈ ಮಾರುಕಟ್ಟೆಯನ್ನು ನವೀಕರಣಗೊಳಿಸಲು ಕಳೆದ ವರ್ಷ ನೆಲಸಮಗೊಳಿಸಲಾಗಿತ್ತು. ಆಗಲೇ ಮಾರ್ಕೆಟ್‌ನಲ್ಲಿದ್ದ ಎಲ್ಲಾ ಅಂಗಡಿಯವರು ವಿರೋಧ ವ್ಯಕ್ತಪಡಿಸಿ ನ್ಯಾಯಾಲಯದ ಮೆಟ್ಟಿಲು ಏರಿದ್ದರು. ಇದೀಗ ಪಾಲಿಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 114 ಕೋಟಿ ರೂ. ವೆಚ್ಚದಲ್ಲಿ ಹೊಸ ಮಾರ್ಕೆಟ್‌ನ ಕಾಮಗಾರಿ ಆರಂಭಿಸಿದೆ. ಅದರ ನೀಲನಕ್ಷೆಯನ್ನು (Blueprint) ರೆಡಿ ಮಾಡಿದ್ದು ಅದರಲ್ಲಿರುವ ಮಾಹಿತಿ ಇದೀಗ ವಿವಾದವನ್ನು ಸೃಷ್ಟಿಸಿದೆ.

    ಹೊಸ ಮಾರ್ಕೆಟ್‌ನಲ್ಲಿ ಬರೋಬ್ಬರಿ 9 ಬೀಫ್ ಸ್ಟಾಲ್‌ಗಳು ಬರುತ್ತದೆ ಎಂದು ನೀಲನಕ್ಷೆಯಲ್ಲಿ ನಮೂದಿಸಿರುವುದು ಇದೀಗ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಜಿಲ್ಲೆಯಲ್ಲಿ ಸಾಕಷ್ಟು ಗೋಕಳ್ಳತನ, ಗೋಹತ್ಯೆ, ಅಕ್ರಮ ಕಸಾಯಿಖಾನೆಗಳು ಮಿತಿ ಮೀರಿ ನಡೆಯುತ್ತಿದೆ. ಅದಕ್ಕೆ ಬೆಂಬಲವೆಂಬಂತೆ ಇದೀಗ ಪಾಲಿಕೆಯೇ ಬೀಫ್ ಸ್ಟಾಲ್‌ನ ಪ್ರಸ್ತಾವನೆ ಸಲ್ಲಿಸಿದ್ದು ಸರಿಯಲ್ಲ. ತಕ್ಷಣ ಇದನ್ನು ರದ್ದು ಮಾಡಬೇಕು. ಒಂದು ವೇಳೆ ಮುಂದುವರಿಸಿದರೆ ಅದರ ವಿರುದ್ಧದ ತೀವ್ರವಾದ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅವಕಾಶ ಕೇಳಿದ್ದ ಬೆನ್ನಲ್ಲೇ ಇದೀಗ ಕನಕದಾಸ ಜಯಂತಿಗೂ ಮನವಿ

    ಮಾರ್ಕೆಟ್‌ನ ನೀಲನಕ್ಷೆಯಲ್ಲಿ ಕೋಳಿ, ಮೀನು, ಕುರಿಮಾಂಸದ ಸ್ಟಾಲ್‌ಗಳ ಜೊತೆಗೇ 9 ಬೀಫ್ ಸ್ಟಾಲ್‌ನ ಬಗ್ಗೆಯೂ ನಮೂದಿಸಲಾಗಿದೆ. ಪಾಲಿಕೆಯಲ್ಲಿ ಬಿಜೆಪಿ ಆಡಳಿತ ಇದ್ದರೂ, ಸ್ಥಳೀಯ ಶಾಸಕರು ಬಿಜೆಪಿಯವರೇ ಆಗಿದ್ದರೂ, ಗೋ ಹತ್ಯೆ ನಿಷೇಧದ ಬಗ್ಗೆ ಸಾಕಷ್ಟು ಮಾತನಾಡುವ ಬಿಜೆಪಿಗರೇ ಈ ರೀತಿ ಮಾಡಿರುವುದು ಯಾಕೆ ಎನ್ನುವುದು ಹಿಂದೂ ಸಂಘಟನೆಗಳ ಆಕ್ರೋಶದ ಮಾತು. ಈ ನಿರ್ಧಾರದಿಂದ ಹಿಂದೆ ಸರಿದು ಬೀಫ್ ಸ್ಟಾಲ್ ಅನ್ನು ಕೈ ಬಿಡಬೇಕೆಂದು ಸ್ಥಳೀಯ ಶಾಸಕ ವೇದವ್ಯಾಸ ಕಾಮತ್‌ಗೆ ವಿಹೆಚ್‌ಪಿ – ಬಜರಂಗದಳ ಮನವಿ ಮಾಡಿದೆ. ಬೀಫ್ ಸ್ಟಾಲ್ ಅನ್ನು ಕೈಬಿಡುತ್ತಾರೆ ಎನ್ನುವ ನಂಬಿಕೆ ಇದೆ. ಒಂದು ವೇಳೆ ಕೈಬಿಡದೇ ಹೋದರೆ ಉಗ್ರ ಹೋರಾಟದ ಚಿಂತನೆ ನಡೆಸಲು ಹಿಂದೂ ಸಂಘಟನೆಗಳು ತೀರ್ಮಾನಿಸಿದೆ. ಬಿಜೆಪಿ ಆಡಳಿತ ಇರುವ ಪಾಲಿಕೆ ಈ ಬೀಫ್ ಸ್ಟಾಲ್‌ನ ನಿರ್ಧಾರ ಮಾಡಿರುವುದು ಯಾಕೆ ಎನ್ನುವುದೇ ಕುತೂಹಲ. ಇದನ್ನೂ ಓದಿ: ಬಿಜೆಪಿ ಸರ್ಕಾರದ ಮೇಲೆ ಹೇಸಿಗೆ ಬರುತ್ತಿದೆ : ಶ್ರೀರಾಮಸೇನೆ

    Live Tv
    [brid partner=56869869 player=32851 video=960834 autoplay=true]