Tag: ಬಜರಂಗ್ ಪುನಿಯಾ

  • ಒಲಿಂಪಿಕ್ಸ್‌ ಪದಕ ವಿಜೇತ ಕುಸ್ತಿಪಟುಗೆ ಶಾಕ್‌ – ಬಜರಂಗ್‌ ಪುನಿಯಾ 4 ವರ್ಷ ಬ್ಯಾನ್‌

    ಒಲಿಂಪಿಕ್ಸ್‌ ಪದಕ ವಿಜೇತ ಕುಸ್ತಿಪಟುಗೆ ಶಾಕ್‌ – ಬಜರಂಗ್‌ ಪುನಿಯಾ 4 ವರ್ಷ ಬ್ಯಾನ್‌

    ನವದೆಹಲಿ: ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA) ಕುಸ್ತಿಪಟು ಬಜರಂಗ್ ಪುನಿಯಾ (Wrestler Bajrang Punia) ಅವರನ್ನ ನಾಲ್ಕು ವರ್ಷಗಳ ಕಾಲ ಬ್ಯಾನ್‌ ಮಾಡಿದೆ.

    ಮಾರ್ಚ್ 10 ರಂದು ಸೋನೆಪತ್‌ನಲ್ಲಿ ನಡೆದ ರಾಷ್ಟ್ರೀಯ ತಂಡದ ಆಯ್ಕೆಗೆ ನಡೆದ ಟ್ರಯಲ್ಸ್‌ನಲ್ಲಿ ಆಯ್ಕೆಯಾದ ನಂತರ ಪುನಿಯಾ ಮೂತ್ರದ ಮಾದರಿಯನ್ನು (Urine Sample) ಪರೀಕ್ಷೆಗೆ ನೀಡಲಿ ನಿರಾಕರಿಸಿದರು. ಇದನ್ನು ನಿಯಮ ಬಾಹಿರ ಎಂದು ಪರಿಗಣಿಸಿರುವ ನಾಡಾ ಪೂನಿಯಾರನ್ನ ನಾಲ್ಕು ವರ್ಷಗಳ ಕಾಲ ಬ್ಯಾನ್‌ ಮಾಡಿದೆ. ಕಳೆದ ಏಪ್ರಿಲ್‌ 23ರಂದು ಪುನಿಯಾರನ್ನ ನಾಡಾ ಮೊದಲಬಾರಿಗೆ ಅಮಾನತುಗೊಳಿಸಿತ್ತು. ನಂತರ ವಿಶ್ವ ಕುಸ್ತಿ ಆಡಳಿತ ಮಂಡಳಿ (UWW) ಸಹ ಅವರನ್ನ ಅಮಾನತುಗೊಳಿಸಿತ್ತು. ಇದರ ವಿರುದ್ಧ ಪುನಿಯಾ ಮೇಲ್ಮನವಿ ಸಲ್ಲಿಸಿದ್ದರು. ಆದ್ರೆ ನಾಡಾದ ಆಂಟಿ-ಡಿಸಿಪ್ಲಿನರಿ ಡೋಪಿಂಗ್ ಪ್ಯಾನೆಲ್ (ADDP) ಮುಂದಿನ ಸೂಚನೆ ನೀಡುವವರೆಗೆ ಮೇಲ್ಮನವಿಯನ್ನು ರದ್ದುಗೊಳಿಸಿತ್ತು. ಇದನ್ನೂ ಓದಿ: 1,000 ಕೋಟಿಗೆ RCB ಫ್ರಾಂಚೈಸಿ ಖರೀದಿಸಲು ಪ್ಲ್ಯಾನ್‌; ಮಂಡ್ಯದಲ್ಲಿ ಸದ್ದು ಮಾಡ್ತಿದೆ ಫ್ಯಾನ್ಸ್‌ ಪೋಸ್ಟರ್‌

    ನಾಡಾಗೆ ಮೂತ್ರ ಮಾದರಿಯನ್ನು ನೀಡದೇ ಇದ್ದದ್ದು ಯಾಕೆ? ಎಂದು ಜೂನ್‌ 23 ರಂದು ಕುಸ್ತಿಪಟುಗೆ ನೋಟಿಸ್‌ ನೀಡಿತ್ತು. ಸೆಪ್ಟೆಂಬರ್ 20 ಮತ್ತು ಅಕ್ಟೋಬರ್ 4 ರಂದು ವಿಚಾರಣೆ ನಡೆಸಲಾಗಿತ್ತು. ಇದೀಗ ಆದೇಶ ಪ್ರಕಟಿಸಿರುವ ಎಡಿಡಿಪಿ, ಕಲಂ 10.3.1 ರ ಅಡಿಯಲ್ಲಿ ನಿರ್ಬಂಧಗಳಿಗೆ ಅಥ್ಲೀಟ್ ಹೊಣೆಗಾರನಾಗಿರುತ್ತಾನೆ ಮತ್ತು 4 ವರ್ಷಗಳ ಅವಧಿಗೆ ಅನರ್ಹತೆಗೆ ಹೊಣೆಗಾರನಾಗಿರುತ್ತಾನೆ ಎಂದು ಹೇಳಿದೆ. ಈ ಸಂದರ್ಭದಲ್ಲಿ ಬಜರಂಗ್ ಪುನಿಯಾ ಸ್ಪರ್ಧಾತ್ಮಕ ಕುಸ್ತಿಗೆ ಮರಳಲು ಮತ್ತು ವಿದೇಶದಲ್ಲಿ ಕೋಚಿಂಗ್‌ ಕೆಲಸಕ್ಕೆ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ ಎಂದು ಸಹ ತನ್ನ ಆದೇಶದಲ್ಲಿ ತಿಳಿದಿದೆ. ಇದನ್ನೂ ಓದಿ: Keep Distance – ಇದು ನಮ್ಮ ನಿಮ್ಮ ನೆಮ್ಮದಿಯ ವಿಷಯ!

    ಕೆಲ ದಿನಗಳ ಹಿಂದೆಯಷ್ಟೇ ವಿನೇಶ್ ಫೋಗಟ್, ಬಜರಂಗ್ ಪುನಿಯಾ ಕಾಂಗ್ರೆಸ್‌ ಸೇರ್ಪಡೆಯಾದರು. ಆನಂತರ ಪೂನಿಯಾ ಅವರನ್ನ ಅಖಿಲ ಭಾರತ ಕಿಸಾನ್ ಕಾಂಗ್ರೆಸ್‌ನ (Indian Kisan Congress) ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಯಿತು. ಇದಕ್ಕೂ ಮುನ್ನ ಅವರು ರೈಲ್ವೆ ಉದ್ಯೋಗಕ್ಕೆ ರಾಜೀನಾಮೆ ನೀಡಿದ್ದರು. ಇದನ್ನೂ ಓದಿ: 2026ರ ವೇಳೆಗೆ ದುಬೈನಲ್ಲಿ ವಿಶ್ವದ ಮೊದಲ ಡ್ರೋನ್‌ ಏರ್‌ ಟ್ಯಾಕ್ಸಿ ಹಾರಾಟ- ಹೇಗಿರಲಿದೆ ಟ್ಯಾಕ್ಸಿ?

  • ವಿನೇಶ್ ಫೋಗಟ್, ಬಜರಂಗ್ ರಾಜೀನಾಮೆ ಅಂಗೀಕರಿಸಿದ ರೈಲ್ವೇ

    ವಿನೇಶ್ ಫೋಗಟ್, ಬಜರಂಗ್ ರಾಜೀನಾಮೆ ಅಂಗೀಕರಿಸಿದ ರೈಲ್ವೇ

    ನವದೆಹಲಿ: ಒಲಿಂಪಿಕ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ (Vinesh Phogat) ಹಾಗೂ ಬಜರಂಗ್ ಪುನಿಯಾ (Bajrang Punia) ಅವರ ರಾಜೀನಾಮೆಯನ್ನು ಭಾರತೀಯ ರೈಲ್ವೇ ಅಂಗೀಕರಿಸಿದೆ.

    ಕಾಂಗ್ರೆಸ್ ಸೇರ್ಪಡೆಗೂ ಮುನ್ನ ಭಾರತೀಯ ರೈಲ್ವೆಯಲ್ಲಿನ (Indian Railways) ತಮ್ಮ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ರಾಜೀನಾಮೆ ಅಂಗೀಕಾರಗೊಂಡಿದೆ.ಇದನ್ನೂ ಓದಿ: ‘ಭೂತ್ ಬಂಗ್ಲಾ’ ಕಥೆ ಹೇಳಲು ಸಜ್ಜಾದ ಅಕ್ಷಯ್ ಕುಮಾರ್

    ಇತ್ತೀಚಿಗಷ್ಟೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ನವದೆಹಲಿಯಲ್ಲಿ ಭೇಟಿಯಾದ ನಂತರ ಅವರ ರಾಜಕೀಯ ಪ್ರವೇಶದ ಬಗ್ಗೆ ಊಹಾಪೋಹಗಳು ವ್ಯಕ್ತವಾಗಿದ್ದವು. ಅದಾದ ಬಳಿಕ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು. ಸೇರ್ಪಡೆಯಾದ ಬಳಿಕ ಕುಸ್ತಿಪಟು ವಿನೇಶ್ ಫೋಗಟ್‌ಗೆ ಹರಿಯಾಣ ಚುನಾವಣೆಯಲ್ಲಿ (Hariyana) ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡಿತ್ತು.

    ಪಕ್ಷ ಸೇರ್ಪಡೆಗೂ ಮುನ್ನ ವಿನೇಶ್ ಫೋಗಟ್ ಹಾಗೂ ಬಜರಂಗ್ ಪುನಿಯಾ ಭಾರತೀಯ ರೈಲ್ವೆಯಲ್ಲಿರುವ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಭಾರತೀಯ ರೈಲ್ವೆಗೆ ಸೇವೆ ಸಲ್ಲಿಸುವುದು ನನ್ನ ಜೀವನದ ಸ್ಮರಣೀಯ ಮತ್ತು ಹೆಮ್ಮೆಯ ಸಮಯ. ನನ್ನ ಜೀವನದ ಈ ಹಂತದಲ್ಲಿ ನಾನು ರೈಲ್ವೆ ಸೇವೆಯಿಂದ ಹೊರಬರಲು ನಿರ್ಧರಿಸಿದೆ. ನನ್ನ ರಾಜೀನಾಮೆಯನ್ನು ಭಾರತೀಯ ರೈಲ್ವೆಯ ಸಮರ್ಥ ಅಧಿಕಾರಿಗಳಿಗೆ ಸಲ್ಲಿಸಿದ್ದೇನೆ. ರಾಷ್ಟ್ರದ ಸೇವೆಯಲ್ಲಿ ರೈಲ್ವೆ ನನಗೆ ನೀಡಿದ ಈ ಅವಕಾಶಕ್ಕಾಗಿ ನಾನು ಭಾರತೀಯ ರೈಲ್ವೆ ಕುಟುಂಬಕ್ಕೆ ಯಾವಾಗಲೂ ಕೃತಜ್ಞಳಾಗಿದ್ದೇನೆ ಎಂದು ಎಕ್ಸ್‌ನಲ್ಲಿ ಫೋಗಟ್ ಪೋಸ್ಟ್ ಹಾಕಿದ್ದರು.ಇದನ್ನೂ ಓದಿ: ಚಾರ್ಜ್‌ಶೀಟ್‌ನಲ್ಲಿ ಗೌಪ್ಯ ಮಾಹಿತಿ ಪ್ರಸಾರಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಿ: ಕೋರ್ಟ್‌ ಮೊರೆ ಹೋದ ದರ್ಶನ್‌

    ಹರಿಯಾಣದ ಜುಲಾನಾ (Julana) ಕ್ಷೇತ್ರದಿಂದ ವಿನೇಶ್ ಫೋಗಟ್ ಕಣಕ್ಕಿಳಿಯಲಿದ್ದಾರೆ. ಬಜರಂಗ್ ಪುನಿಯಾ ಅವರನ್ನು ಅಖಿಲ ಭಾರತ ಕಿಸಾನ್ ಕಾಂಗ್ರೆಸ್‌ನ (Indian Kisan Congress) ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

  • ಕುಸ್ತಿಪಟುಗಳ ಬಗ್ಗೆ ಮಾತನಾಡಬೇಡಿ – ಬ್ರಿಜ್ ಭೂಷಣ್ ಸಿಂಗ್‍ಗೆ ಬಿಜೆಪಿ ಎಚ್ಚರಿಕೆ

    ಕುಸ್ತಿಪಟುಗಳ ಬಗ್ಗೆ ಮಾತನಾಡಬೇಡಿ – ಬ್ರಿಜ್ ಭೂಷಣ್ ಸಿಂಗ್‍ಗೆ ಬಿಜೆಪಿ ಎಚ್ಚರಿಕೆ

    – ವಿನೇಶ್ ಒಲಿಂಪಿಕ್ಸ್ ಅನರ್ಹತೆ ಕುರಿತು ಟೀಕಿಸಿದ್ದ ಮಾಜಿ ಸಂಸದ

    ನವದೆಹಲಿ: ಒಲಿಂಪಿಕ್ಸ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ವಿರುದ್ಧ ಹೇಳಿಕೆ ನೀಡದಂತೆ ಮಾಜಿ ಸಂಸದ ಹಾಗೂ ಕುಸ್ತಿ ಸಂಸ್ಥೆಯ (Wrestling Federation of India) ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಅವರಿಗೆ ಬಿಜೆಪಿ (BJP) ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

    ಹರಿಯಾಣ ವಿಧಾನಸಭಾ ಚುನಾವಣೆಗು ಮುನ್ನ ವಿನೇಶ್, ಪುನಿಯಾ ಕಾಂಗ್ರೆಸ್‍ಗೆ ಸೇರ್ಪಡೆಗೊಂಡಿದ್ದಾರೆ. ಈ ವಿಚಾರವಾಗಿ ಡಬ್ಲ್ಯುಎಫ್‍ಐ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಅವರು ಇಬ್ಬರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡದಂತೆ ಬ್ರಿಜ್ ಭೂಷಣ್ ಅವರಿಗೆ ಪಕ್ಷದ ಹಿರಿಯ ನಾಯಕರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

    ಮಾಧ್ಯಮಗಳೊಂದಿಗೆ ಮಾತನಾಡುತ್ತ ಬ್ರಿಜ್ ಭೂಷಣ್ ಸಿಂಗ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಅವರು ಕುಸ್ತಿಯಲ್ಲಿ ಹೆಸರು ಮಾಡಿದ್ದಾರೆ. ಆದರೆ ಕಾಂಗ್ರೆಸ್ ಸೇರಿದ ನಂತರ ಅವರ ಹೆಸರುಗಳು ಅಳಿಸಿ ಹೋಗಲಿವೆ. ತಾವು ವಿಧಾನಸಭೆ ಚುನಾವಣೆಯಲ್ಲಿ ಗೆದ್ದುಬಿಡುತ್ತೇವೆ ಎಂದು ವಿನೇಶ್ ಫೋಗಟ್ ಹಾಗೂ ಬಜರಂಗ್ ಪೂನಿಯಾ ಭಾವಿಸಿದ್ದರೆ ಅದು ತಪ್ಪು. ಅವರು ಹರ್ಯಾಣದ ಯಾವುದೇ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿದರೂ, ಬಿಜೆಪಿಯ ಸಣ್ಣ ಅಭ್ಯರ್ಥಿ ಕೂಡ ಅವರನ್ನು ಸೋಲಿಸುತ್ತಾರೆ ಎಂದು ಸಿಂಗ್ ಹೇಳಿದ್ದರು.

    ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿದ್ದಾಗ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್, ಇದು ಕಾಂಗ್ರೆಸ್ ಪಕ್ಷವು ತಮ್ಮ ವಿರುದ್ಧ ನಡೆಸಿದ್ದ ಸಂಚು. ಇದಕ್ಕೆ ಫೋಗಟ್ ಹಾಗೂ ಪೂನಿಯಾ ಅವರ ಕಾಂಗ್ರೆಸ್ ಸೇರ್ಪಡೆ ಸಾಕ್ಷಿ ಎಂದು ಹೇಳಿದ್ದರು.

    ಅನರ್ಹಗೊಂಡ ವಿನೇಶ್‍ಗೆ ದೇವರೇ ಶಿಕ್ಷೆ ನೀಡಿದ್ದಾನೆ!
    ಪ್ರತಿಭಟನೆ ಆರಂಭಿಸಿದ ದಿನವೇ, ಇದರ ಹಿಂದೆ ಕಾಂಗ್ರೆಸ್ (Congress) ಪಾತ್ರವಿದೆ ಎಂದು ಹೇಳಿದ್ದೆ. ಈಗ ಅದೇ ನಿಜವಾಗಿದೆ. ಕಾಂಗ್ರೆಸ್ ಸಂಚಿಗೆ ವಿನೇಶ್ ಮತ್ತು ಬಜರಂಗ್ ದಾಳವಾಗಿದ್ದಾರೆ. ಭಾರತೀಯ ಕುಸ್ತಿ ಫೆಡರೇಷನ್ ಮೇಲೆ ಹಿಡಿತ ಸಾಧಿಸಲು ಮತ್ತು ಬಿಜೆಪಿ ವಿರುದ್ಧ ದಾಳಿ ನಡೆಸಲು ಸಂಚು ರೂಪಿಸಲಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಅವರ ಪಕ್ಷ ಇಂತಹ ಕೆಲಸಗಳನ್ನು ಮಾಡುತ್ತಲೇ ಇರುತ್ತದೆ. ಇದಕ್ಕಾಗಿ ಭೂಪಿಂದರ್ ಹೂಡಾ, ಕಾಂಗ್ರೆಸ್ ಮತ್ತು ಕಾಂಗ್ರೆಸ್ ಕುಟುಂಬ ಕುಸ್ತಿಪಟುಗಳನ್ನು ದಾಳವಾಗಿ ಬಳಸಿಕೊಂಡಿದೆ ಎಂದು ಕಿಡಿಕಾರಿದ್ದರು.

    ಈ ವೇಳೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅಂತಿಮ ಹಂತದಲ್ಲಿ ಅನರ್ಹಗೊಂಡ ವಿನೇಶ್‍ಗೆ ದೇವರೇ ಶಿಕ್ಷೆ ನೀಡಿದ್ದಾನೆ ಎಂದು ಬ್ರಿಜ್‍ಭೂಷಣ್ ಹೇಳಿದ್ದರು.

    ಮುಂದುವರಿದು, ಒಬ್ಬ ಆಟಗಾರ ಒಂದು ದಿನದಲ್ಲಿ 2 ತೂಕದ ವಿಭಾಗಗಳಲ್ಲಿ ಟ್ರಯಲ್ಸ್ ನೀಡಬಹುದೇ ಎಂದು ನಾನು ವಿನೇಶ್ ಅವರನ್ನು ಕೇಳಲು ಬಯಸುತ್ತೇನೆ. ತೂಕದ ನಂತರ 5 ಗಂಟೆಗಳ ಕಾಲ ಪ್ರಯೋಗ ನಿಲ್ಲಿಸಬಹುದೇ? ನೀವು ಕುಸ್ತಿಯನ್ನು ಗೆಲ್ಲಲಿಲ್ಲ, ನೀವು ಮೋಸದಿಂದ ಅಲ್ಲಿಗೆ ಹೋಗಿದ್ದೀರಿ. ದೇವರು ನಿಮಗೆ ಅದೇ ಶಿಕ್ಷೆ ನೀಡಿದ್ದಾನೆ ಎಂದು ಲೇವಡಿ ಮಾಡಿದ್ದರು. ಇದು ಟೀಕೆಗೆ ಕಾರಣವಾಗಿತ್ತು.

  • ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ವಿನೇಶ್‌ ಅನರ್ಹ ಕುರಿತು ಟೀಕೆ – ದೇವರೇ ನಿಮಗೆ ಶಿಕ್ಷೆ ಕೊಟ್ಟಿದ್ದಾನೆ ಎಂದ ಬ್ರಿಜ್‌ ಭೂಷಣ್‌

    ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ವಿನೇಶ್‌ ಅನರ್ಹ ಕುರಿತು ಟೀಕೆ – ದೇವರೇ ನಿಮಗೆ ಶಿಕ್ಷೆ ಕೊಟ್ಟಿದ್ದಾನೆ ಎಂದ ಬ್ರಿಜ್‌ ಭೂಷಣ್‌

    – ಕುಸ್ತಿಪಟುಗಳನ್ನು ಕಾಂಗ್ರೆಸ್‌ ದಾಳವಾಗಿ ಬಳಸಿಕೊಂಡಿದೆ ಎಂದು ಆರೋಪ

    ನವದೆಹಲಿ: ಕುಸ್ತಿಪಟುಗಳಾದ ವಿನೇಶ್ ಫೋಗಟ್ (Vinesh Phogat), ಬಜರಂಗ್‌ ಪುನಿಯಾ ಕಾಂಗ್ರೆಸ್ ಸೇರಿದ್ದಾರೆ. ಈ ಬೆನ್ನಲ್ಲೇ ಹರಿಯಾಣ ಚುನಾವಣೆಯಲ್ಲಿ ವಿನೇಶ್‌ಗೆ ಕಾಂಗ್ರೆಸ್‌ಗೆ ಟಿಕೆಟ್‌ ಘೋಷಣೆಯಾಗಿದೆ. ಪುನಿಯಾಗೆ ಪಕ್ಷದಲ್ಲಿ ಪ್ರಮುಖ ಸ್ಥಾನ ನೀಡಲಾಗಿದೆ. ಈ ವಿಚಾರವಾಗಿ ಲೈಂಗಿಕ ಕಿರುಕುಳ ಆರೋಪಿ, ಮಾಜಿ ಸಂಸದ ಬ್ರಿಜ್‌ಭೂಷಣ್ ಶರಣ್‌ ಸಿಂಗ್ (Brij Bhushan Sharan Singh) ಸಿಡಿದೆದ್ದಿದ್ದಾರೆ. ಇದನ್ನೂ ಓದಿ: ಪ್ರಸಾದಕ್ಕೆ ಪರವಾನಗಿ; ರಾಜ್ಯ ಸರ್ಕಾರದ್ದು ಹುಚ್ಚು ಆದೇಶ – ಪ್ರಲ್ಹಾದ್ ಜೋಶಿ ಆಕ್ರೋಶ

    ಈ ಕುರಿತು ದೆಹಲಿಯಲ್ಲಿ (New Delhi) ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕುಸ್ತಿಪಟುಗಳನ್ನು ಕಾಂಗ್ರೆಸ್‌ (Congress) ದಾಳವಾಗಿ ಬಳಸಿಕೊಂಡಿದೆ. ರೆಸ್ಲರ್‌ಗಳು ಪ್ರತಿಭಟನೆ ಆರಂಭಿಸಿದ ದಿನವೇ, ಇದರ ಹಿಂದೆ ಕಾಂಗ್ರೆಸ್ ಪಾತ್ರವಿದೆ ಎಂದು ಹೇಳಿದ್ದೆ. ಈಗ ಅದೇ ನಿಜವಾಗಿದೆ. ಕಾಂಗ್ರೆಸ್ ಸಂಚಿಗೆ ವಿನೇಶ್ ಮತ್ತು ಬಜರಂಗ್‌ ದಾಳವಾಗಿದ್ದಾರೆ. ಭಾರತೀಯ ಕುಸ್ತಿ ಫೆಡರೇಷನ್‌ ಮೇಲೆ ಹಿಡಿತ ಸಾಧಿಸಲು ಮತ್ತು ಬಿಜೆಪಿ ವಿರುದ್ಧ ದಾಳಿ ನಡೆಸಲು ಸಂಚು ರೂಪಿಸಲಾಗಿದೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಮತ್ತು ಅವರ ಪಕ್ಷ ಇಂತಹ ಕೆಲಸಗಳನ್ನು ಮಾಡುತ್ತಲೇ ಇರಯತ್ತದೆ. ಇದಕ್ಕಾಗಿ ಭೂಪಿಂದರ್‌ ಹೂಡಾ, ಕಾಂಗ್ರೆಸ್‌ ಮತ್ತು ಕಾಂಗ್ರೆಸ್‌ ಕುಟುಂಬ ಕುಸ್ತಿಪಟುಗಳನ್ನು ದಾಳವಾಗಿ ಬಳಸಿಕೊಂಡಿದೆ ಎಂದು ಕಿಡಿ ಕಾರಿದ್ದಾರೆ.

    ಈ ವೇಳೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅಂತಿಮ ಹಂತದಲ್ಲಿ ಅನರ್ಹಗೊಂಡ ವಿನೇಶ್‌ಗೆ ದೇವರೇ ಶಿಕ್ಷೆ ನೀಡಿದ್ದಾನೆ ಎಂದು ಬ್ರಿಜ್‌ಭೂಷಣ್ ಹೇಳಿದ್ದಾರೆ. ಇದನ್ನೂ ಓದಿ: ಹಲ್ಲೆ ನಡೆಸಲು ಪವಿತ್ರಾಗೆ ದರ್ಶನ್ ಪ್ರಚೋದನೆ – ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೂ ಕರಗದ ನಟಿ; ಚಾರ್ಜ್‌ಶೀಟ್‌ನಲ್ಲಿ ರಹಸ್ಯ ಸ್ಫೋಟ

    ಮುಂದುವರಿದು, ಒಬ್ಬ ಆಟಗಾರ ಒಂದು ದಿನದಲ್ಲಿ 2 ತೂಕದ ವಿಭಾಗಗಳಲ್ಲಿ ಟ್ರಯಲ್ಸ್ ನೀಡಬಹುದೇ ಎಂದು ನಾನು ವಿನೇಶ್ ಅವರನ್ನು ಕೇಳಲು ಬಯಸುತ್ತೇನೆ. ತೂಕದ ನಂತರ 5 ಗಂಟೆಗಳ ಕಾಲ ಪ್ರಯೋಗ ನಿಲ್ಲಿಸಬಹುದೇ? ನೀವು ಕುಸ್ತಿಯನ್ನು ಗೆಲ್ಲಲಿಲ್ಲ, ನೀವು ಮೋಸದಿಂದ ಅಲ್ಲಿಗೆ ಹೋಗಿದ್ದೀರಿ. ದೇವರು ನಿಮಗೆ ಅದೇ ಶಿಕ್ಷೆ ನೀಡಿದ್ದಾನೆ ಎಂದು ಲೇವಡಿ ಮಾಡಿದ್ದಾರೆ. ಇದು ಟೀಕೆಗೆ ಕಾರಣವಾಗಿದೆ. ಇದನ್ನೂ ಓದಿ: 25 ವರ್ಷಗಳ ಬಳಿಕ ಮೊದಲ ಬಾರಿಗೆ ಕಾರ್ಗಿಲ್ ಯುದ್ಧದಲ್ಲಿ ತನ್ನ ಪಾತ್ರದ ಬಗ್ಗೆ ಪಾಕ್‌ ತಪ್ಪೊಪ್ಪಿಗೆ!

  • ಭಾರತೀಯ ರೈಲ್ವೆಗೆ ಗುಡ್‌ಬೈ ಹೇಳಿ ಕಾಂಗ್ರೆಸ್‌ ಸೇರಿದ ವಿನೇಶ್‌ ಫೋಗಟ್‌

    ಭಾರತೀಯ ರೈಲ್ವೆಗೆ ಗುಡ್‌ಬೈ ಹೇಳಿ ಕಾಂಗ್ರೆಸ್‌ ಸೇರಿದ ವಿನೇಶ್‌ ಫೋಗಟ್‌

    – ಕುಸ್ತಿಪಟು ಬಜರಂಗ್‌ ಪುನಿಯಾ ಕೂಡ ಕಾಂಗ್ರೆಸ್‌ ಸೇರ್ಪಡೆ

    ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಗೆ ಮುನ್ನ ಒಲಿಂಪಿಕ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ (Vinesh Phogat) ಮತ್ತು ಬಜರಂಗ್ ಪುನಿಯಾ (Bajrang Punia) ಶನಿವಾರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ (Congress) ಸೇರ್ಪಡೆಯಾದರು.

    ಇಬ್ಬರು ಕುಸ್ತಿಪಟುಗಳು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ದೆಹಲಿಯ ನಿವಾಸಕ್ಕೆ ಆಗಮಿಸಿ ಬಳಿಕ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಇದನ್ನೂ ಓದಿ: ಆರ್ಥಿಕ ಅವ್ಯವಹಾರಗಳ ಸಿಬಿಐ ತನಿಖೆ ಪ್ರಶ್ನಿಸಿ ಸಂದೀಪ್ ಘೋಷ್ ಸಲ್ಲಿಸಿದ್ದ ಅರ್ಜಿ ವಜಾ

    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರನ್ನು ಸೆ.4 ರಂದು ನವದೆಹಲಿಯಲ್ಲಿ ಇತ್ತೀಚೆಗೆ ಭೇಟಿಯಾದ ನಂತರ ಈ ಬೆಳವಣಿಗೆಯಾಗಿದೆ. ಅವರ ರಾಜಕೀಯ ಪ್ರವೇಶದ ಬಗ್ಗೆ ಊಹಾಪೋಹಗಳಿಗೆ ಕೊನೆಗೂ ತೆರೆಬಿದ್ದಿದೆ.

    ಪಕ್ಷ ಸೇರ್ಪಡೆಗೂ ಮುನ್ನ ವಿನೇಶ್‌ ಫೋಗಟ್‌ ಭಾರತೀಯ ರೈಲ್ವೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಭಾರತೀಯ ರೈಲ್ವೆಗೆ ಸೇವೆ ಸಲ್ಲಿಸುವುದು ನನ್ನ ಜೀವನದ ಸ್ಮರಣೀಯ ಮತ್ತು ಹೆಮ್ಮೆಯ ಸಮಯ. ನನ್ನ ಜೀವನದ ಈ ಹಂತದಲ್ಲಿ ನಾನು ರೈಲ್ವೆ ಸೇವೆಯಿಂದ ಹೊರಬರಲು ನಿರ್ಧರಿಸಿದೆ. ನನ್ನ ರಾಜೀನಾಮೆಯನ್ನು ಭಾರತೀಯ ರೈಲ್ವೆಯ ಸಮರ್ಥ ಅಧಿಕಾರಿಗಳಿಗೆ ಸಲ್ಲಿಸಿದ್ದೇನೆ. ರಾಷ್ಟ್ರದ ಸೇವೆಯಲ್ಲಿ ರೈಲ್ವೆ ನನಗೆ ನೀಡಿದ ಈ ಅವಕಾಶಕ್ಕಾಗಿ ನಾನು ಭಾರತೀಯ ರೈಲ್ವೆ ಕುಟುಂಬಕ್ಕೆ ಯಾವಾಗಲೂ ಕೃತಜ್ಞಳಾಗಿದ್ದೇನೆ ಎಂದು ಎಕ್ಸ್‌ನಲ್ಲಿ ಫೋಗಟ್‌ ಪೋಸ್ಟ್‌ ಹಾಕಿದ್ದರು. ಇದನ್ನೂ ಓದಿ: ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

  • ಬ್ರಿಜ್‌ ಭೂಷಣ್‌ ಆಪ್ತನಿಗೆ ಕುಸ್ತಿ ಅಧ್ಯಕ್ಷ ಪಟ್ಟ – ವಿರೋಧಿಸಿ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿದ ಕುಸ್ತಿಪಟು ಬಜರಂಗ್‌ ಪುನಿಯಾ

    ಬ್ರಿಜ್‌ ಭೂಷಣ್‌ ಆಪ್ತನಿಗೆ ಕುಸ್ತಿ ಅಧ್ಯಕ್ಷ ಪಟ್ಟ – ವಿರೋಧಿಸಿ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿದ ಕುಸ್ತಿಪಟು ಬಜರಂಗ್‌ ಪುನಿಯಾ

    ನವದೆಹಲಿ: ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಆಪ್ತ ಸಂಜಯ್ ಸಿಂಗ್ (Sanjay Singh) ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದನ್ನು ವಿರೋಧಿಸಿ, ಕುಸ್ತಿಪಟು ಬಜರಂಗ್‌ ಪುನಿಯಾ (Bajrang Punia) ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ.

    ಸಂಜಯ್‌ ಸಿಂಗ್‌ ಆಯ್ಕೆ ವಿರೋಧಿಸಿ ಕುಸ್ತಿಪಟು ಸಾಕ್ಷಿ ಮಲಿಕ್‌ (Sakshee Mallikh), ಗುರುವಾರ ಕಣ್ಣೀರಿಟ್ಟು ಕುಸ್ತಿಗೆ ವಿದಾಯ ಹೇಳಿದರು. ಇದರ ಬೆನ್ನಲ್ಲೇ ಬಜರಂಗ್‌ ಪುನಿಯಾ, ಪದ್ಮಶ್ರೀ ಪ್ರಶಸ್ತಿ (Padma Shri) ಹಿಂದಿರುಗಿಸುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಈಗಲೂ ನ್ಯಾಯ ಸಿಗುವ ನಿರೀಕ್ಷೆಯಲ್ಲಿದ್ದೇವೆ, ನಮ್ಮ ದುಃಖ ಯಾರಿಗೆ ಹೇಳೋಣ? – ನಿಲ್ಲದ ಕುಸ್ತಿಪಟುಗಳ ವೇದನೆ

    ‘ನಾನು ನನ್ನ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಿಗೆ ಹಿಂದಿರುಗಿಸುತ್ತಿದ್ದೇನೆ. ಅದನ್ನು ಹೇಳಲು ಈ ಪತ್ರ ಬರೆದಿದ್ದೇನೆ ಎಂದು ಬಜರಂಗ್‌ ಪುನಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ.

    ‘ಎಲ್ಲಿ ಹೋಗಬೇಕು, ಏನು ಮಾಡಬೇಕು ಮತ್ತು ಹೇಗೆ ಬದುಕಬೇಕು ಎಂದು ನನಗೆ ಅರ್ಥವಾಗಲಿಲ್ಲ. ಸರ್ಕಾರ ಮತ್ತು ಜನರು ನನಗೆ ತುಂಬಾ ಗೌರವ ನೀಡಿದರು. ಈ ಗೌರವದ ಹೊರೆಯಲ್ಲಿ ನಾನು ಉಸಿರುಗಟ್ಟುವುದನ್ನು ಮುಂದುವರಿಸಬೇಕೇ? 2019 ರಲ್ಲಿ ನನಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಯಿತು. ನನಗೂ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗಳು ದೊರೆತಿವೆ. ಈ ಗೌರವಗಳು ನನಗೆ ಸಿಕ್ಕಾಗ ತುಂಬಾ ಸಂತೋಷವಾಯಿತು. ಜೀವನದಲ್ಲಿ ಯಶಸ್ವಿಯಾಗಿದ್ದೇನೆ ಎಂದು ಅನಿಸಿತು. ಆದರೆ ಇಂದು ನಾನು ಆ ಕಾಲದ ಸಂತೋಷಕ್ಕಿಂತ ಹೆಚ್ಚು ದುಃಖಿತನಾಗಿದ್ದೇನೆ. ಈ ಗೌರವಗಳು ನನ್ನನ್ನು ಉಸಿರುಗಟ್ಟಿಸುತ್ತಿವೆ’ ಎಂದು ಪುನಿಯಾ ಹಿಂದಿಯಲ್ಲಿ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಬ್ರಿಜ್‌ ಭೂಷಣ್‌ ಆಪ್ತ ಕುಸ್ತಿ ಅಧ್ಯಕ್ಷ: ಶೂ ಬಿಚ್ಚಿಟ್ಟು‌, ಕಣ್ಣೀರಿಡುತ್ತಾ ಕುಸ್ತಿಗೆ ವಿದಾಯ ಹೇಳಿದ ಸಾಕ್ಷಿ ಮಲಿಕ್!

    ಕನಿಷ್ಠ 12 ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬಿಜೆಪಿ ನಾಯಕ ಹಾಗೂ ಕುಸ್ತಿ ಫೆಡರೇಷನ್‌ ಆಫ್‌ ಇಂಡಿಯಾ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ಧ ಪ್ರತಿಭಟಿಸಿದ ಕುಸ್ತಿಪಟುಗಳಲ್ಲಿ ಬಜರಂಗ್ ಪುನಿಯಾ ಕೂಡ ಒಬ್ಬರು.

  • ಪ್ರತಿಭಟನೆಯಿಂದ ಹಿಂದೆ ಸರಿದ ಕುಸ್ತಿಪಟುಗಳು – ಮರಳಿ ರೈಲ್ವೇ ಉದ್ಯೋಗಕ್ಕೆ

    ಪ್ರತಿಭಟನೆಯಿಂದ ಹಿಂದೆ ಸರಿದ ಕುಸ್ತಿಪಟುಗಳು – ಮರಳಿ ರೈಲ್ವೇ ಉದ್ಯೋಗಕ್ಕೆ

    ನವದೆಹಲಿ: ಲೈಂಗಿಕ ಕಿರುಕುಳ ಆರೋಪದ ಮೇಲೆ ಬಿಜೆಪಿ (BJP) ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯಿಂದ ಕುಸ್ತಿಪಟುಗಳು (Wrestlers) ಸೋಮವಾರ ಹಿಂದೆ ಸರಿದಿದ್ದಾರೆ.

    ಕುಸ್ತಿಪಟುಗಳಾದ ಸಾಕ್ಷಿ ಮಲಿಕ್ (Sakshi Malik), ವಿನೇಶ್ ಫೋಗಟ್ (Vinesh Phogat) ಹಾಗೂ ಬಜರಂಗ್ ಪುನಿಯಾ (Bajrang Punia) ಅವರು ಪ್ರತಿಭಟನೆಯಿಂದ ಹಿಂದೆ ಸರಿದ ಬಳಿಕ ರೈಲ್ವೆಯಲ್ಲಿ (Railways) ಕೆಲಸವನ್ನು ಪುನರಾರಂಭಿಸಿದ್ದಾರೆ. ಶನಿವಾರ ಕುಸ್ತಿಪಟುಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಬಳಿಕ ಈ ಬೆಳವಣಿಗೆ ನಡೆದಿದೆ. ಇದನ್ನೂ ಓದಿ: ಕಾನೂನು ಎಲ್ಲರಿಗೂ ಒಂದೇ, ತನ್ನದೇ ಆದ ಕ್ರಮ ತೆಗೆದುಕೊಳ್ಳಲಿ- ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ

    ಕಳೆದ ಒಂದು ತಿಂಗಳ ಕಾಲ ಧರಣಿ ನಡೆಸಿದ್ದ ಕುಸ್ತಿಪಟುಗಳು ರಜೆಯಲ್ಲಿದ್ದರು. ಈ ಬಗ್ಗೆ ಪ್ರತಿಭಟನೆ ವೇಳೆ ಮಾತನಾಡಿದ್ದ ಬಜರಂಗ್ ಪುನಿಯಾ, ಆರಂಭದಲ್ಲಿ 10 ದಿನಗಳವರೆಗೆ ರಜೆ ತೆಗೆದುಕೊಂಡಿದ್ದೇವೆ. ಅಲ್ಲದೆ ನಾವು ನಮ್ಮ ರಜೆಯನ್ನು ವಿಸ್ತರಿಸುತ್ತಲೇ ಇದ್ದೇವೆ. ಇಲ್ಲಿಯವರೆಗೆ ಸರ್ಕಾರ ಯಾವುದೇ ಒತ್ತಡ ಹಾಕಿಲ್ಲ. ನಮ್ಮ ರಜೆಯ ಸಮಯದಲ್ಲಿ ನಮಗೆ ಬೇಕಾದುದನ್ನು ಮಾಡಲು ನಾವು ಸ್ವತಂತ್ರರಾಗಿದ್ದೇವೆ. ಅಲ್ಲದೆ ಪ್ರತಿಭಟನೆ ಮಾಡುವುದು ನಮ್ಮ ಪ್ರಜಾಸತ್ತಾತ್ಮಕ ಹಕ್ಕು ಎಂದು ಕಳೆದ ತಿಂಗಳು ಹೇಳಿದ್ದರು.

    ಕುಸ್ತಿಪಟುಗಳು ನೂತನ ಸಂಸತ್ ಭವನದ ಉದ್ಘಾಟನೆಯ ವೇಳೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದರು. ಬಳಿಕ ರೈಲ್ವೆ ಇಲಾಖೆ ಅವರಿಗೆ ಶೋಕಾಸ್ ನೋಟಿಸ್ ಕಳುಹಿಸಿತ್ತು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಒಡಿಶಾ ರೈಲು ದುರಂತ- ಪತ್ರದ ಮೂಲಕ ಮೋದಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ

  • ಕುಸ್ತಿ ಪಟುಗಳಿಗೆ ನ್ಯಾಯ ಸಿಗುತ್ತಾ – ಬ್ಯಾಟ್‍ನಂತೆ ಚಾಟಿ ಬೀಸಿದ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್

    ಕುಸ್ತಿ ಪಟುಗಳಿಗೆ ನ್ಯಾಯ ಸಿಗುತ್ತಾ – ಬ್ಯಾಟ್‍ನಂತೆ ಚಾಟಿ ಬೀಸಿದ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್

    ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ (Jantar Mantar) ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಭಾರತದ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ (Kapil Dev) ಬೆಂಬಲ ನೀಡಿದ್ದಾರೆ. ಅವರು ಇನ್ಸ್ಟಾಗ್ರಾಮ್‍ನಲ್ಲಿ ಪ್ರತಿಭಟನಾ ನಿರತರ ಫೋಟೋ ಹಂಚಿಕೊಂಡು ನ್ಯಾಯ ಸಿಗುತ್ತದೆಯೇ? ಎಂದು ಬರೆದುಕೊಂಡಿದ್ದಾರೆ.

     

    ಕುಸ್ತಿ ಫೆಡರೇಷನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿರುವ ವಿನೇಶ್ ಫೋಗಟ್ (Vinesh Phogat), ಬಜರಂಗ್ ಪುನಿಯಾ (Bajrang Punia), ಸಾಕ್ಷಿ ಮಲಿಕ್ (Sakshi Malik) ಸೇರಿ ಹಲವಾರು ಕುಸ್ತಿ ಪಟುಗಳು ಕಳೆದ ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ದೇವ್ ಅವರಿಗೆ ಬೆಂಬಲ ನೀಡಿದ್ದು ಹೊಸ ಸಂಚಲನ ಮೂಡಿಸಿದೆ. ಇದನ್ನೂ ಓದಿ: ಬಿಜೆಪಿ ಸಂಸದ, WFI ಅಧ್ಯಕ್ಷನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಪ್ರತಿಭಟನೆಗೆ ರಾಜಕೀಯ ಪಕ್ಷಗಳನ್ನು ಕರೆದ ಕುಸ್ತಿಪಟುಗಳು

    ಇದಕ್ಕೂ ಮುನ್ನ ಒಲಿಂಪಿಕ್ಸ್ (Olympic) ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ (Neeraj Chopra) ಪ್ರತಿಭಟನಾ ನಿರತ ಕುಸ್ತಿ ಪಟುಗಳಿಗೆ ಬೆಂಬಲ ಸೂಚಿಸಿದ್ದರು. ಸಂತ್ರಸ್ತರಿಗೆ ಶೀಘ್ರವಾಗಿ ನ್ಯಾಯ ಒದಗಿಸುವಂತೆ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಅಲ್ಲದೆ ಕುಸ್ತಿಪಟುಗಳು ಬೀದಿಗಿಳಿದಿರುವುದು ದುಃಖದ ಸಂಗತಿ ಎಂದು ಹೇಳಿಕೊಂಡಿದ್ದರು.

    ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ (Indian Olympic Association) ಅಧ್ಯಕ್ಷೆ ಪಿ.ಟಿ ಉಷಾ (PT Usha) ಕುಸ್ತಿ ಪಟುಗಳ ಪ್ರತಿಭಟನೆಯನ್ನು ತೀವ್ರವಾಗಿ ಖಂಡಿಸಿದ್ದರು. ದೇಶದ ಘನತೆಗೆ ಧಕ್ಕೆ ತರಲು ಪ್ರತಿಭಟನೆ ನಡೆಸುತ್ತಿದ್ದಾರೆ. ಅಸೋಸಿಯೇಷನ್ ಬಳಿ ಬರುವುದು ಬಿಟ್ಟು ರಸ್ತೆಗಿಳಿದಿರುವುದ ಸರಿಯಲ್ಲ ಎಂದು ಟೀಕಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಅವರ ಹೇಳಿಕೆ ವಿರುದ್ಧ ಜನ ಆಕ್ರೋಶ ಹೊರಹಾಕಿದ್ದರು. ಇದನ್ನೂ ಓದಿ: ಕುಸ್ತಿಪಟುಗಳು ಬೀದಿಗಿಳಿದು ಪ್ರತಿಭಟನೆ ಮಾಡ್ತಿರೋದು ದೇಶದ ಘನತೆಗೆ ಧಕ್ಕೆ – ಪಿ.ಟಿ ಉಷಾ ಬೇಸರ

  • ಬಿಜೆಪಿ ಸಂಸದ, WFI ಅಧ್ಯಕ್ಷನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಇಂದು ಸುಪ್ರೀಂ ನಲ್ಲಿ ವಿಚಾರಣೆ

    ಬಿಜೆಪಿ ಸಂಸದ, WFI ಅಧ್ಯಕ್ಷನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಇಂದು ಸುಪ್ರೀಂ ನಲ್ಲಿ ವಿಚಾರಣೆ

    ನವದೆಹಲಿ: ಬಿಜೆಪಿ (BJP) ಸಂಸದ ಹಾಗೂ ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ಭೂಷಣ್ ಶಂಕರ್ ಸಿಂಗ್ (Brij Bhushan Sharan Singh) ವಿರುದ್ಧ ಮಹಿಳಾ ಕುಸ್ತಿಪಟುಗಳು ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿ ತುರ್ತು ವಿಚಾರಣೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಶುಕ್ರವಾರ ಸುಪ್ರೀಂ ಕೋರ್ಟ್ (Supreme Court) ವಿಚಾರಣೆ ನಡೆಸಲಿದೆ.

    ಈ ವರ್ಷದ ಆರಂಭದಲ್ಲಿ ಪ್ರತಿಭಟನೆ ನಡೆಸಿದ್ದ ಭಾರತದ ಕುಸ್ತಿಪಟುಗಳು (Wrestlers) ಮತ್ತೆ ಪ್ರತಿಭಟನೆಗೆ ಮುಂದಾಗಿದ್ದು ನ್ಯಾಯ ಕೊಡಿಸುವಂತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಕುಸ್ತಿಪಟುಗಳ ಮನವಿ ಮೇರೆಗೆ ಸುಪ್ರೀಂ ಕೋರ್ಟ್ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿತ್ತು. ಆದರೆ ಈ ಸಂಬಂಧ ಯಾವುದೇ ಪ್ರಕರಣ ಸಹ ದಾಖಲಾಗಿಲ್ಲ ಎಂದು ತಿಳಿದುಬಂದಿದೆ.

    ಇದರಿಂದ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿರುವ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಬಗ್ಗೆ ಅರ್ಜಿಯಲ್ಲಿ ಗಂಭೀರ ಆರೋಪಗಳನ್ನ ಮಾಡಿದ್ದಾರೆ. ಈ ವಿಷಯವನ್ನು ನ್ಯಾಯಾಲಯವು ಪರಿಗಣಿಸಬೇಕು ಎಂದು ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠ ಹೇಳಿತ್ತು. ಇದನ್ನೂ ಓದಿ: ನ್ಯಾಯ ಸಿಗೋವರೆಗೂ ಇಲ್ಲೇ ಊಟ, ಇಲ್ಲೇ ನಿದ್ರೆ – ಮತ್ತೆ ಅಖಾಡಕ್ಕಿಳಿದ ಕುಸ್ತಿಪಟುಗಳು

    ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು, ಈ ಸಂಬಂಧ ಪ್ರಕರಣ ದಾಖಲಿಸುವವರೆಗೂ ತಾವು ಪ್ರತಿಭಟನೆ ಕೈಬಿಡುವುದಿಲ್ಲ ಎಂಬುದಾಗಿ ಪ್ರತಿಪಾದಿಸಿದ್ದಾರೆ. ಅವರಲ್ಲಿ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರಂತಹ ಸ್ಟಾರ್ ಕುಸ್ತಿಪಟುಗಳೂ ಇದ್ದಾರೆ.

    ಏನಿದು ಕೇಸ್?
    ರಾಷ್ಟ್ರೀಯ ತರಬೇತುದಾರರು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಡಬ್ಲ್ಯುಎಫ್‌ಐ ಅಧಿಕಾರಿಗಳು ಅಥ್ಲೀಟ್‌ಗಳಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಭಾರತದ ಇತರ ಅಗ್ರ ಕುಸ್ತಿಪಟುಗಳೊಂದಿಗೆ ನವದೆಹಲಿಯ ಜಂತರ್ ಮಂತರ್‌ನಲ್ಲಿ ವಿನೇಶ್ ಫೋಗಟ್ ಈ ವರ್ಷದ ಆರಂಭದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ಬಿಜೆಪಿ ಸಂಸದ, WFI ಅಧ್ಯಕ್ಷನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಪ್ರತಿಭಟನೆಗೆ ರಾಜಕೀಯ ಪಕ್ಷಗಳನ್ನು ಕರೆದ ಕುಸ್ತಿಪಟುಗಳು

    ಡಬ್ಲ್ಯುಎಫ್‌ಐ ಅಧ್ಯಕ್ಷರನ್ನು ತೆಗೆದುಹಾಕುವವರೆಗೆ ನಾವು ಯಾವುದೇ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದೂ ಸಹ ಘೋಷಿಸಿದ್ದರು. ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಕೇಂದ್ರ ಕ್ರೀಡಾ ಸಚಿವರು ಪ್ರತಿಭಟನಾನಿರತ ಕುಸ್ತಿಪಟುಗಳೊಂದಿಗೆ ಮಾತುಕತೆ ನಡೆಸಿ, ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಅದಾದ ಬಳಿಕ ಕುಸ್ತಿಪಟುಗಳು ಪ್ರತಿಭಟನೆ ಕೈಬಿಟ್ಟಿದ್ದರು. ಇದೀಗ ಮತ್ತೆ ಪ್ರತಿಭಟನೆಗಿಳಿದಿರುವ ಕುಸ್ತಿಪಟುಗಳು ಸುಪ್ರೀಂ ಕೋರ್ಟ್ ಮೊರೆಹೋಗಿದ್ದಾರೆ.

  • ಕುಸ್ತಿಯಲ್ಲಿ ಬ್ಯಾಕ್ ಟು ಬ್ಯಾಕ್ ಚಿನ್ನ – ಸಾಕ್ಷಿ ಮಲಿಕ್ ಬಂಗಾರದ ಹುಡುಗಿ

    ಕುಸ್ತಿಯಲ್ಲಿ ಬ್ಯಾಕ್ ಟು ಬ್ಯಾಕ್ ಚಿನ್ನ – ಸಾಕ್ಷಿ ಮಲಿಕ್ ಬಂಗಾರದ ಹುಡುಗಿ

    ಲಂಡನ್: ಕಾಮನ್‍ವೆಲ್ತ್ ಕ್ರೀಡಾಕೂಟದ ಮಹಿಳೆಯರ 62 ಕೆಜಿ ವಿಭಾಗದ ಕುಸ್ತಿಯಲ್ಲಿ ಒಲಿಂಪಿಕ್ಸ್ ಪದಕ ವಿಜೇತ ಭಾರತದ ಕುಸ್ತಿ ಪಟು ಸಾಕ್ಷಿ ಮಲಿಕ್ ಚಿನ್ನದ ಪದಕ ಗೆದ್ದಿದ್ದಾರೆ.

    ಫೈನಲ್‍ನಲ್ಲಿ ಕೆನಡಾದ ಅನಾ ಗಾಡಿನೆಜ್ ಗೊನ್ಜಾಲೆಜ್ ವಿರುದ್ಧ ಮೇಲುಗೈ ಸಾಧಿಸಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದರು. ಈ ಪದಕದೊಂದಿಗೆ ಭಾರತಕ್ಕೆ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ 8ನೇ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಇದನ್ನೂ ಓದಿ: CWG 2022: ಭಜರಂಗ್ ಪೂನಿಯಾ ಚಿನ್ನದ ಬೇಟೆ – ಭಾರತಕ್ಕೆ 7ನೇ ಚಿನ್ನ

    ಈ ಮೊದಲು ಪುರುಷರ 65 ಕೆಜಿ ವಿಭಾಗದಲ್ಲಿ ಭಜರಂಗ್ ಪೂನಿಯಾ ಚಿನ್ನ, ಮಹಿಳೆಯರ 57 ಕೆಜಿ ವಿಭಾಗದ ಕುಸ್ತಿ ಫೈನಲ್‍ನಲ್ಲಿ ಅಂಶು ಮಲಿಕ್ ಬೆಳ್ಳಿ ಪದಕ ಗೆದ್ದು ಕುಸ್ತಿಯಲ್ಲಿ 2 ಪದಕದ ಬೇಟೆಯಾಡಿದ್ದರು. ಈ ಮೂಲಕ ಭಾರತ ತಂಡ ಈವರೆಗೆ 2022ರ ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ 8 ಚಿನ್ನ, 8 ಬೆಳ್ಳಿ, 7 ಕಂಚು ಸೇರಿ ಒಟ್ಟು 23 ಪದಕ ಗೆದ್ದಂತಾಗಿದೆ. ಇದನ್ನೂ ಓದಿ: CWG 2022: ಕುಸ್ತಿಯಲ್ಲಿ ಬೆಳ್ಳಿ ಪದಕ ಬೇಟೆಯಾಡಿದ ಅಂಶು ಮಲಿಕ್

    ಇದಲ್ಲದೇ ದೀಪಕ್ ಪುನಿಯಾ (ಪುರುಷರ 86 ಕೆಜಿ) ಫೈನಲ್‍ಗೆ ತಲುಪಿದ್ದು ಚಿನ್ನದ ಪದಕಕ್ಕಾಗಿ ಹೋರಾಟ ನಡೆಸಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]