Tag: ಬಜರಂಗ ದಳ

  • ಸಾವರ್ಕರ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿದ ಕಾಂಗ್ರೆಸ್ ಮುಖಂಡರ ವಿರುದ್ಧ ಕೇಸ್

    ಸಾವರ್ಕರ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿದ ಕಾಂಗ್ರೆಸ್ ಮುಖಂಡರ ವಿರುದ್ಧ ಕೇಸ್

    ಧಾರವಾಡ: ವಿ.ಡಿ ಸಾವರ್ಕರ್ ಅವರ ಭಾವಚಿತ್ರದ ವಿವಾದ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಪರಿಸ್ಥಿತಿ ಇನ್ನೂ ಬೂದಿ ಮುಚ್ಚಿದ ಕೆಂಡದಂತಿರುವಾಗಲೇ ಮತ್ತೊಂದು ತಿರುವು ಪಡೆದುಕೊಳ್ಳುತ್ತಿದೆ. ನಿನ್ನೆ ವಿ.ಡಿ ಸಾವರ್ಕರ್ ಅವರ ಭಾವಚಿತ್ರಕ್ಕೆ ಧಾರವಾಡದಲ್ಲಿ ಬೆಂಕಿ ಹಚ್ಚಿ ಅಪಮಾನ ಮಾಡಿದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

    ಸಾವರ್ಕರ್ ಫೋಟೋ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗ ದಳ ಮುಖಂಡ ಶಿವಾನಂದ ಸತ್ತಿಗೇರಿ ಅವರ ದೂರನ್ನು ಆಧರಿಸಿ ಧಾರವಾಡ ಉಪನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಗ್ರಾಮೀಣ ಜಿಲ್ಲಾಧ್ಯಕ್ಷ ಅನಿಲಕುಮಾರ ಪಾಟೀಲ, ಮಹಾನಗರ ಜಿಲ್ಲಾಧ್ಯಕ್ಷ ಅಲ್ತಾಫ್ ಹಳ್ಳೂರ ಸೇರಿದಂತೆ 12 ಮುಖಂಡರ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ನಾಟಕ ಆಡ್ತಿದ್ದಾರೆ – ಪ್ರಮೋದ್ ಮುತಾಲಿಕ್ ಕಿಡಿ

    ನಿನ್ನೆ ಪ್ರತಿಭಟನೆ ನೆಪದಲ್ಲಿ ಸಾವರ್ಕರ್ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ಮೊಟ್ಟೆ ಒಡೆದು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಸಾವರ್ಕರ್ ಅವರ ಭಾವಚಿತ್ರವನ್ನೂ ಬೂಟುಗಾಲಿನಿಂದ ತುಳಿದು ಅಪಮಾನ ಮಾಡಿ, ಧಿಕ್ಕಾರ ಕೂಗಿದ್ದರು. ಇದನ್ನೂ ಓದಿ: ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿದ್ದು ಅಪ್ಪಚ್ಚು ರಂಜನ್ ಆಪ್ತ!

    ಈ ಹಿನ್ನೆಲೆಯಲ್ಲಿ ಬಜರಂಗ ದಳದ ಮುಖಂಡ ಶಿವಾನಂದ ಸತ್ತಿಗೇರಿ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಮಾಜಿ ಸಚಿವ ವಿನಯ ಕುಲಕರ್ಣಿ ಆಪ್ತ ಅರವಿಂದ ಏಗನಗೌಡರ್ ಎ-1 ಆರೋಪಿಯಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಂಗಳೂರಿನಲ್ಲಿ 150 ಮಂದಿಗೆ ತ್ರಿಶೂಲ ಹಂಚಿದ ವಿಹೆಚ್‍ಪಿ!

    ಮಂಗಳೂರಿನಲ್ಲಿ 150 ಮಂದಿಗೆ ತ್ರಿಶೂಲ ಹಂಚಿದ ವಿಹೆಚ್‍ಪಿ!

    – ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೈತಿಕ ಪೊಲೀಸ್ ಗಿರಿ ಪ್ರಕರಣಗಳ ನಡುವೆ ಹಿಂದೂ ಸಂಘಟನೆಗಳ ಕಾರ್ಯಕರ್ತರಿಗೆ ಆಯುಧ ಪೂಜೆಯಂದು ಶಸ್ತ್ರಾಸ್ತ್ರಗಳನ್ನು ಹಂಚಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

    ಮಂಗಳೂರಿನ ಕದ್ರಿಯಲ್ಲಿರುವ ವಿಶ್ವ ಹಿಂದೂ ಪರಿಷತ್ ಕಚೇರಿಯಲ್ಲಿ ಹಿಂದೂಪರ ಸಂಘಟನೆಯಿಂದ ತ್ರಿಶೂಲ ದೀಕ್ಷೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಹರಿತದ ಕತ್ತಿಯನ್ನು ಹಂಚಲಾಗಿದೆ. 150 ಮಂದಿಗೆ ತ್ರಿಶೂಲ ಹಂಚಲಾಗಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ಲಸಿಕೆ ಪಡೆಯದೇ ಓಡಾಟ ನಡೆಸುವವರ ಮೇಲೆ ನಿಗಾ

    ತ್ರಿಶೂಲ ದೀಕ್ಷೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅಲ್ಲದೆ ಈ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆಗಳು ಆರಂಭವಾಗಿದೆ. ತ್ರಿಶೂಲ ನೆಪದಲ್ಲಿ ಹರಿತದ ಕತ್ತಿಯನ್ನು ನೀಡಿ ಶಸ್ತ್ರ ಹಿಡಿಯಲು ಪ್ರೇರಣೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಪತಿಯನ್ನು ಕೊಂದು ಸೂಟ್‍ಕೇಸ್‍ನಲ್ಲಿ ಸಾಗಿಸಿದಳು

    ಇತ್ತೀಚೆಗೆ ಸುರತ್ಕಲ್ ಮತ್ತು ಮೂಡಬಿದಿರೆಯಲ್ಲಿ ಅನೈತಿಕ ಪೊಲೀಸ್‍ಗಿರಿ ಪ್ರಕರಣ ವರದಿ ಆಗಿತ್ತು. ಅನೈತಿಕ ಪೊಲೀಸ್‍ಗಿರಿಯನ್ನು ಖುದ್ದು ಸಿಎಂ ಬಸವರಾಜ ಬೊಮ್ಮಾಯಿಯವರೇ ಆಕ್ಷನ್-ರಿಯಾಕ್ಷನ್ ಎಂದು ಹೇಳಿ ಬಹಿರಂಗವಾಗಿ ಸಮರ್ಥಿಸಿಕೊಂಡಿದ್ದರು. ಇದನ್ನೂ ಓದಿ: ಅಮೇರಿಕಾದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

  • ದತ್ತ ಪೀಠಕ್ಕೆ ಶೀಘ್ರವೇ ಹಿಂದೂ ಅರ್ಚಕರನ್ನು ನೇಮಿಸಿ- ಸಿಎಂಗೆ ಬಜರಂಗದಳ ಮನವಿ

    ದತ್ತ ಪೀಠಕ್ಕೆ ಶೀಘ್ರವೇ ಹಿಂದೂ ಅರ್ಚಕರನ್ನು ನೇಮಿಸಿ- ಸಿಎಂಗೆ ಬಜರಂಗದಳ ಮನವಿ

    ಚಿಕ್ಕಮಗಳೂರು/ಬೆಂಗಳೂರು: ದತ್ತ ಪೀಠಕ್ಕೆ ಶೀಘ್ರವೇ ಹಿಂದೂ ಅರ್ಚಕರನ್ನು ನೇಮಕ ಮಾಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಜರಂಗದಳದಿಂದ ಇಂದು ಮನವಿ ಸಲ್ಲಿಸಲಾಯಿತು.

    ಚಿಕ್ಕಮಗಳೂರಿನ ದತ್ತ ಪೀಠವು ಹಿಂದಿನ ಹಲವು ದಶಕಗಳಿಂದ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿದ್ದು ದುರದೃಷ್ಟವಶಾತ್ ಅಲ್ಲಿ ಮುಸ್ಲಿಂ ಮೌಲ್ವಿಗಳು ಪೂಜೆ ಸಲ್ಲಿಸುತ್ತಿದ್ದು, ಪ್ರಸ್ತುತ ಹೈಕೋರ್ಟ್ ತೀರ್ಪಿನ ಪ್ರಕಾರ ಮೌಲ್ವಿಗಳ ನೇಮಕಾತಿಯನ್ನು ರದ್ದುಪಡಿಸಲಾಗಿದೆ. ಕಳೆದ ಹಲವಾರು ವರ್ಷಗಳಿಂದ ಹಿಂದೂ ಸಮಾಜವು ಈ ಒಂದು ಅಪೇಕ್ಷೆಯನ್ನು ಮುಂದಿಟ್ಟುಕೊಂಡು ಹೋರಾಟವನ್ನು ನಡೆಸುತ್ತಾ ಬಂದಿದೆ.

    ಹೈಕೋರ್ಟಿನ ಈ ತೀರ್ಪು ಹಿಂದೂ ಸಮಾಜದಲ್ಲಿ ಸಂತಸವನ್ನು ತಂದಿದೆ ಹಾಗೂ ಹಿಂದೂ ಸಮಾಜದ ನಂಬಿಕೆಗಳಿಗೆ ಬೆಲೆ ಸಿಕ್ಕಂತಾಗಿದೆ. ನ್ಯಾಯಾಲಯದ ಈ ತೀರ್ಪು ಹಿಂದೂ ಸಮಾಜದ ಗೆಲುವಾಗಿದೆ. ನ್ಯಾಯಾಲಯವು ನೀಡಿದ ತೀರ್ಪಿನಂತೆ ತಾವು ತಕ್ಷಣ ದತ್ತಪೀಠದಲ್ಲಿ ಹಿಂದೂ ಅರ್ಚಕರನ್ನು ನೇಮಿಸಬೇಕು. ಅಲ್ಲದೆ ಡಿಸೆಂಬರ್ 18 ರಂದು ದತ್ತ ಜಯಂತಿಯ ಪ್ರಯುಕ್ತ ನಡೆಯುವ 3 ದಿನದ ಕಾರ್ಯಕ್ರಮಕ್ಕೆ ಸಂಪೂರ್ಣ ಹಿಂದೂ ಧಾರ್ಮಿಕ ವಿಧಿ-ವಿಧಾನದಂತೆ ನಡೆಸಲು ಅನುವು ಮಾಡಿಕೊಡಬೇಕು. ತಾವು ಕೂಡ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಸಿಎಂಗೆ ಸಲ್ಲಿಸಿರುವ ಮನವಿಯಲ್ಲಿ ಬಜರಂಗದಳ ರಾಜ್ಯ ಸಂಚಾಲಕ ಕೆ.ಆರ್ ಸುನಿಲ್ ತಿಳಿಸಿದ್ದಾರೆ.

    ಈ ಸಂದರ್ಭದಲ್ಲಿ ರಘು ಸಕಲೇಶಪುರ ಮತ್ತು ಮುರಳಿ ಕೃಷ್ಣ ಹಸಂತಡ್ಕ ಅವರುಗಳು ಜೊತೆಗಿದ್ದರು. ಇದನ್ನೂ ಓದಿ: ದತ್ತಪೀಠದಲ್ಲಿ ಮುಜಾವರ್ ನೇಮಕ ರದ್ದು – ಮತ್ತೆ ಸರ್ಕಾರದ ಅಂಗಳಕ್ಕೆ ಚೆಂಡು

    ಕೋರ್ಟ್ ತೀರ್ಪು:
    ವಿವಾದಿತ ಬಾಬಾಬುಡೆನ್‍ಗಿರಿಯ ದತ್ತಾತ್ರೇಯ ಪೀಠದ ಪೂಜೆಗೆ ಮೌಲ್ವಿ ನೇಮಕ ಮಾಡಿದ್ದ ಆದೇಶವನ್ನು ಕಳೆದ 7 ದಿನಗಳ ಹಿಂದೆ ಹೈಕೋರ್ಟ್ ರದ್ದು ಮಾಡಿದೆ. 2018ರ ಮಾರ್ಚ್ 19ರಂದು ದತ್ತಾತ್ರೇಯ ಪೀಠದ ಪೂಜೆಗೆ ಮೌಲ್ವಿ ಸೈಯದ್ ಗೌಸ್ ಮೊಹಿದ್ದೀನ್‍ರನ್ನು ಧಾರ್ಮಿಕ ದತ್ತಿ ಇಲಾಖೆ ನೇಮಿಸಿತ್ತು. ಇದನ್ನು ಪ್ರಶ್ನಿಸಿ ಸಂವರ್ಧನಾ ಸಮಿತಿ ಕೋರ್ಟ್ ಮೊರೆ ಹೋಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದಿನೇಶ್ ಕುಮಾರ್ ನೇತೃತ್ವದ ನ್ಯಾಯಪೀಠ, ಮೌಲ್ವಿ ನೇಮಕಾತಿಯನ್ನು ರದ್ದು ಮಾಡಿ ಆದೇಶ ಹೊರಡಿಸಿದೆ. ಅಲ್ಲದೆ ಈ ಪ್ರಕರಣವನ್ನು ಹೊಸದಾಗಿ ಪರಿಗಣಿಸಿ ಕಾನೂನಿನ ಪ್ರಕಾರ ಸೂಕ್ತ ನಿರ್ಧಾರ ಕೈಗೊಳ್ಳಿ ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿದೆ.

  • ಶಿವಮೊಗ್ಗದಲ್ಲಿ 62 ಮಂದಿ ವಶ, ಯಾವುದೇ ವದಂತಿ ನಂಬಬೇಡಿ – ಐಜಿಪಿ ರವಿ

    ಶಿವಮೊಗ್ಗದಲ್ಲಿ 62 ಮಂದಿ ವಶ, ಯಾವುದೇ ವದಂತಿ ನಂಬಬೇಡಿ – ಐಜಿಪಿ ರವಿ

    ಶಿವಮೊಗ್ಗ : ಬಜರಂಗದಳದ ಕಾರ್ಯಕರ್ತನ ಮೇಲೆ ದಾಳಿ ಹಿನ್ನೆಲೆಯಲ್ಲಿ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಶಾಂತಿ ಕಾಪಾಡಲು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದು, ಜನರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಪೂರ್ವ ವಲಯ ಐಜಿಪಿ ರವಿ ಅವರು ಮನವಿ ಮಾಡಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುರುವಾರ ಶಿವಮೊಗ್ಗ ನಗರದಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ 62 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತೀವ್ರ ನಿಗಾ ಇರಿಸಲಾಗಿದೆ ಎಂದರು.

    ಕಾನೂನು ಸುವ್ಯವಸ್ಥೆ ಕಾಪಾಡಲು ನೆರೆಯ ಜಿಲ್ಲೆಗಳಿಂದ ಪೊಲೀಸರನ್ನು ಕರೆಸಲಾಗಿದೆ. 148 ಪ್ರದೇಶಗಳನ್ನು ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಎಂದು ಗುರುತಿಸಲಾಗಿದೆ. ಪೊಲೀಸ್ ಬಂದೋಬಸ್ತು ತೀವ್ರಗೊಳಿಸಲಾಗಿದೆ. 9 ಚೆಕ್ ಪೋಸ್ಟ್ ಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಹೊರಗಿನಿಂದ ಬರುವವರ ಮೇಲೆ ನಿಗಾ ಇರಿಸಲಾಗಿದೆ. 22 ಚೀತಾ ಮತ್ತು 13 ಗಸ್ತು ಸಂಚಾರಿ ವಾಹನಗಳು ನಗರದಾದ್ಯಂತ ನಿಗಾ ಇರಿಸಿದೆ. ಯಾವುದೇ ಕಾರಣಕ್ಕೂ ಪರಿಸ್ಥಿತಿ ಬಿಗಡಾಯಿಸಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

     

    ಇದೇ ವೇಳೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮಾತನಾಡಿ, ಪರಿಸ್ಥಿತಿಯನ್ನು ನಿಯಂತ್ರಿಸಲು ಪೆÇಲೀಸರು ಎಲ್ಲಾ ಬಿಗಿ ಕ್ರಮಗಳನ್ನು ಕೈಗೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನಗರ ವ್ಯಾಪ್ತಿಯಲ್ಲಿ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ದೊಡ್ಡಪೇಟೆ, ಕೋಟೆ ಮತ್ತು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಫ್ರ್ಯೂ ಮುಂದುವರಿಸಲಾಗಿದೆ. ಹಾಲು, ಔಷಧಿ ಮತ್ತಿತರ ಅಗತ್ಯ ಸಾಮಾಗ್ರಿಗಳ ಪೂರೈಕೆಗೆ ಯಾವುದೇ ನಿಬರ್ಂಧ ವಿಧಿಸಲಾಗಿಲ್ಲ. ಜನರು ವದಂತಿಗಳಿಗೆ ಕಿವಿಗೊಡದೆ ಶಾಂತಿಯನ್ನು ಕಾಪಾಡಬೇಕೆಂದು ಅವರು ಮನವಿ ಮಾಡಿದರು.

    ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ವದಂತಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಎಚ್ಚರಿಕೆ ನೀಡಿದ್ದಾರೆ.

    ಸಾರ್ವಜನಿಕರಿಗೆ ಭೀತಿಯನ್ನು ಹುಟ್ಟಿಸುವ, ಯಾವುದೇ ವರ್ಗ ಅಥವಾ ಸಮುದಾಯದ ವಿರುದ್ಧ ಅಪರಾಧ ಮಾಡುವಂತೆ ಪ್ರಚೋದಿಸುವ ಬರಹಗಳನ್ನು ವಾಟ್ಸಪ್, ಫೇಸ್ಬುಕ್ ಮತ್ತಿತರ ಸಾಮಾಜಿಕ ಜಾಲತಾಣದಲ್ಲಿ ಹರಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್ ಪಿ ಶಾಂತರಾಜ್ ಎಚ್ಚರಿಕೆ ನೀಡಿದ್ದಾರೆ.

    ಏನಿದು ಘಟನೆ:
    ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾ ಬಳಿ ಬಜರಂಗದಳ ಕಾರ್ಯಕರ್ತ ನಾಗೇಶ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ನಾಗೇಶ್ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಬೆಳಗ್ಗೆ ನೆಹರೂ ಕ್ರೀಡಾಂಗಣದಲ್ಲಿ ವಾಕಿಂಗ್ ಮುಗಿಸಿ ಮರಳಿ ಹೋಗುತ್ತಿದ್ದ ವೇಳೆ ಐದು ಮಂದಿಯಿದ್ದ ದುಷ್ಕರ್ಮಿಗಳ ತಂಡ ಹಲ್ಲೆಮಾಡಿ ಪರಾರಿಯಾಗಿದ್ದರು. ಈ ಘಟನೆ ನಂತರ ನಗರದಲ್ಲಿ ಐದಾರೂ ಕಡೆಗಳಲ್ಲಿ ಅಹಿತಕರ ಘಟನೆಗಳು ನಡೆದಿದ್ದವು. ಐದಾರು ಕಾರುಗಳು, 2 ಆಟೋ, 2 ಬೈಕ್, ತರಕಾರಿ ಗಾಡಿಯನ್ನು ಜಖಂ ಗೊಳಿಸಲಾಗಿತ್ತು. 10ಕ್ಕಿಂತ ಹೆಚ್ಚು ಜನರಿಗೆ ಗಾಯಗಳಾಗಿದ್ದವು. ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿತ್ತು.

    ಗಾಂಧಿ ಬಜಾರ್, ಮೀನು ಮಾರುಕಟ್ಟೆ, ಚೋರ್ ಬಜಾರ್, ರವಿ ವರ್ಮ ಬೀದಿ, ಕಸ್ತೂರಾ ಬಾ ರಸ್ತೆಗಳಲ್ಲಿ ಕಿಡಿಗೇಡಿಗಳು ದುಷ್ಕøತ್ಯ ನಡೆಸಿದ್ದರು. ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ನಡೆಸಿದ್ದರು. ಗಾಯಗೊಂಡಿರುವ ಸುಮಾರು 10 ಕ್ಕಿಂತ ಹೆಚ್ಚು ಜನ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಂಧಿ ಬಜಾರ್ ಸುತ್ತಮುತ್ತ ನಿಲ್ಲಿಸಿದ್ದ, ಸುಮಾರು ಐದಕ್ಕೂ ಹೆಚ್ಚು ಕಾರುಗಳು ಜಖಂಗೊಳಿಸಲಾಗಿತ್ತು.

  • ದತ್ತಜಯಂತಿಗೆ ಕಾಫಿನಾಡಲ್ಲಿ ಖಾಕಿಗಳ ಸರ್ಪಗಾವಲು

    ದತ್ತಜಯಂತಿಗೆ ಕಾಫಿನಾಡಲ್ಲಿ ಖಾಕಿಗಳ ಸರ್ಪಗಾವಲು

    – 3 ದಿನಗಳ ಕಾಲ ಪ್ರವಾಸಿಗರ ಆಗಮನಕ್ಕೆ ನಿಷೇಧ

    ಚಿಕ್ಕಮಗಳೂರು: ದತ್ತಜಯಂತಿ ಆಚರಣೆ ಹಿನ್ನೆಲೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ. ಜಿಲ್ಲಾದ್ಯಂತ 35 ಚೆಕ್ ಪೋಸ್ಟ್, 48 ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು, 800ಕ್ಕೂ ಅಧಿಕ ಕ್ಯಾಮೆರಾ ಹಾಗೂ 5 ಸಾವಿರಕ್ಕಿಂತಲೂ ಅಧಿಕ ಪೊಲೀಸರು ಕಾಫಿನಾಡಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ.

    ವಿಶ್ವಹಿಂದೂ ಪರಿಷದ್ ಹಾಗೂ ಬಜರಂಗದಳ ನೇತೃತ್ವದಲ್ಲಿ ಡಿಸೆಂಬರ್ 10 ರಿಂದ 12ರವರೆಗೆ ಮೂರು ದಿನಗಳ ಕಾಲ ನಡೆಯುವ ದತ್ತಜಯಂತಿಗೆ ಜಿಲ್ಲಾಡಳಿತ ಜಿಲ್ಲಾದ್ಯಂತ ಸರ್ಪಗಾವಲನ್ನು ಹಾಕಿದೆ. ಡಿಸೆಂಬರ್ 10 ರಿಂದ 12ರವರೆಗೆ ಮೂರು ದಿನಗಳ ಕಾಲ ಜಿಲ್ಲಾದ್ಯಂತ ಮದ್ಯ ಮಾರಾಟವನ್ನ ನಿಷೇಧಿಸಿಸಲಾಗಿದೆ.

    ನಿಷೇಧ: ಡಿ.12 ರಂದು ಚಿಕ್ಕಮಗಳೂರಿನ ಕೆ.ಎಂ.ರಸ್ತೆ, ಐ.ಜಿ. ರಸ್ತೆ, ಬಸವನಹಳ್ಳಿ ಮುಖ್ಯರಸ್ತೆ ಸೇರಿದಂತೆ ಆಲ್ದೂರು ಪಟ್ಟಣ, ಹಾಂದಿಯಿಂದ ವಸ್ತಾರೆವರೆಗೆ ಅಂಗಡಿ-ಮುಂಗಟ್ಟುಗಳನ್ನ ಮುಚ್ಚುವಂತೆ ಆದೇಶಿಸಲಾಗಿದೆ. ಡಿ. 10 ರಿಂದ 12ರವರೆಗೆ ಮುಳ್ಳಯ್ಯನಗಿರಿ, ಸೀತಾಳಯ್ಯನಿಗಿರಿ, ದತ್ತಪೀಠ, ಗಾಳಿಕೆರೆ, ಮಾಣಿಕ್ಯಾಧಾರಕ್ಕೆ ಪ್ರವಾಸಿಗರನ್ನು ಸಂಪೂರ್ಣ ನಿಷೇಧಿಸಿದ್ದಾರೆ.

    ಡಿ.10 ರಂದು ಅನಸೂಯ ಜಯಂತಿ. ನಗರದಲ್ಲಿ ಸಾವಿರಾರು ಮಹಿಳೆಯರು ಮೆರವಣಿಗೆ ನಡೆಸಿ ದತ್ತಪೀಠದಲ್ಲಿ ಪೂಜೆ-ಹೋಮ-ಹವನ ನಡೆಸಲಿದ್ದಾರೆ. ಡಿ.11 ರಂದು ನಗರದಲ್ಲಿ 10 ಸಾವಿರಕ್ಕೂ ಅಧಿಕ ದತ್ತಭಕ್ತರು ಬೃಹತ್ ಶೋಭಾಯಾತ್ರೆ ನಡೆಸಲಿದ್ದಾರೆ. ಡಿ.12 ರಂದು ರಾಜ್ಯಾದ್ಯಂತ ಬರಲಿರೋ 20 ಸಾವಿರಕ್ಕೂ ಅಧಿಕ ದತ್ತಭಕ್ತರು ದತ್ತಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ ಪಡೆದು ದತ್ತಪೀಠದಲ್ಲಿ ಹೋಮ-ಹವನ ನಡೆಸಲಿದ್ದಾರೆ. ಮೂರು ದಿನಗಳ ಕಾಲ ಜಿಲ್ಲಾದ್ಯಂತ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಕೂಡ ಹೈ-ಅಲರ್ಟ್ ಘೋಷಿಸಿದೆ. ಜಿಲ್ಲಾದ್ಯಂತ 5 ಸಾವಿರಕ್ಕೂ ಅಧಿಕ ಪೊಲೀಸರನ್ನು ಬಂದೋಬಸ್ತ್ ಗೆ ನಿಯೋಜಿಸಲಾಗಿದ್ದು, ಇಂದು ನಗರದ ಪ್ರಮುಖ ಬೀದಿಗಳಲ್ಲಿ ಮೂರು ಸಾವಿರಕ್ಕೂ ಅಧಿಕ ಪೊಲೀಸರು ಪಥಸಂಚಲನ ನಡೆಸಿದರು.

  • ಪಾಕ್‍ನ ಐಎಸ್‍ಐನಿಂದ ಬಿಜೆಪಿ, ಬಜರಂಗ ದಳ ಹಣ ಪಡೆಯುತ್ತಿವೆ: ದಿಗ್ವಿಜಯ್ ಸಿಂಗ್

    ಪಾಕ್‍ನ ಐಎಸ್‍ಐನಿಂದ ಬಿಜೆಪಿ, ಬಜರಂಗ ದಳ ಹಣ ಪಡೆಯುತ್ತಿವೆ: ದಿಗ್ವಿಜಯ್ ಸಿಂಗ್

    ಭೋಪಾಲ್: ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‍ಐ)ನಿಂದ ಬಿಜೆಪಿ ಹಾಗೂ ಬಜರಂಗ ದಳ ಹಣ ಪಡೆಯುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಂಸದ ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ.

    ಮಧ್ಯಪ್ರದೇಶದ ಭಿಂಡ್‍ನಲ್ಲಿ ಮಾಜಿ ಸಂಸದರು ಶನಿವಾರ ಮಹಾರಾಣಾ ಪ್ರತಾಪ್ ಅವರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದರು. ಈ ವೇಳೆ ಮಾತನಾಡಿದ ಅವರು, ಮುಸ್ಲಿಮರಿಗಿಂತ ಮುಸ್ಲಿಮೇತರರೇ ಹೆಚ್ಚಾಗಿ ಪಾಕಿಸ್ತಾನದ ಐಎಸ್‍ಐಗೆ ಬೇಹುಗಾರಿಕೆ ನಡೆಸುತ್ತಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಬಿಜೆಪಿ ಹಾಗೂ ಹಿಂದೂ ಸಂಘಟನೆಯಾಗಿರುವ ಬಜರಂಗ ದಳಕ್ಕೆ ಪಾಕಿಸ್ತಾನದ ಐಎಸ್‍ಐನಿಂದ ಹಣ ವರ್ಗಾವಣೆಯಾಗುತ್ತಿದೆ. ಇದನ್ನು ಎಲ್ಲರೂ ಗಮನಿಸಬೇಕು, ಅರ್ಥ ಮಾಡಿಕೊಳ್ಳಬೇಕು. ಕಾಂಗ್ರೆಸ್ ಪಕ್ಷವು ಬಿಜೆಪಿ ಹಾಗೂ ಸಂಘ ಪರಿವಾರ ಸಿದ್ಧಾಂತದ ವಿರುದ್ಧ ಹೋರಾಡುತ್ತಿದೆ. ಸ್ವಾತಂತ್ರ್ಯ ಹೋರಾಟದ ವೇಳೆ ಬಿಜೆಪಿ- ಸಂಘ ಪರಿವಾರ ಇರಲಿಲ್ಲ. ಹೀಗಾಗಿ ಅವರಿಂದ ನಾವು ದೇಶ ಪ್ರೇಮವನ್ನು ಕಲಿಯುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

    ದಿಗ್ವಿಜಯ್ ಸಿಂಗ್ ಅವರ ವಿವಾದಾತ್ಮಕ ಹೇಳಿಕೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಜಿ ಸಂಸದರ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ.

  • 7 ವರ್ಷಗಳ ಕಾಲ ನನ್ನ ಜೊತೆಯಿದ್ದ ದೀಪಕ್ ಸಾವು ಊಹಿಸಲು ಸಾಧ್ಯವಿಲ್ಲ: ಮಾಲೀಕ ಮಜೀದ್

    7 ವರ್ಷಗಳ ಕಾಲ ನನ್ನ ಜೊತೆಯಿದ್ದ ದೀಪಕ್ ಸಾವು ಊಹಿಸಲು ಸಾಧ್ಯವಿಲ್ಲ: ಮಾಲೀಕ ಮಜೀದ್

    ಮಂಗಳೂರು: ದೀಪಕ್ ಒಳ್ಳೆಯ ಹುಡುಗನಾಗಿದ್ದ. ಆತನನ್ನು ಹತ್ಯೆ ಮಾಡಿದವರಿಗೆ ಶಿಕ್ಷೆಯಾಗಬೇಕು ಎಂದು ಅಂಗಡಿ ಮಾಲೀಕ ಮಜೀದ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಅವರು, ಕಳೆದ 7 ವರ್ಷಗಳಿಂದ ಆತ ನನ್ನ ಜೊತೆ ಕೆಲಸಕ್ಕೆ ಇದ್ದ. ಅಂಗಡಿಯಲ್ಲಿ ನಮ್ಮ ಭಾಷೆಯಲ್ಲೇ ವ್ಯವಹರಿಸುತ್ತಿದ್ದ. ಎಲ್ಲರ ಜೊತೆ ಸ್ನೇಹ ಮನೋಭಾವ ಹೊಂದಿದ್ದ ಆತನ ಹತ್ಯೆಗೆ ಕಾರಣ ಏನು ಎನ್ನುವುದು ನನಗೆ ಗೊತ್ತಿಲ್ಲ ಎಂದು ಹೇಳಿದರು.

    ಯಾರ ಮೇಲೂ ದೀಪಕ್ ದ್ವೇಷ ಹೊಂದಿರಲಿಲ್ಲ. ಆತನ ಸಾವು ನನಗೆ ಊಹಿಸಲೂ ಸಾಧ್ಯ ಇಲ್ಲ. ನಮ್ಮೆಲ್ಲರ ಜೊತೆ ಚೆನ್ನಾಗಿ ವ್ಯವಹರಿಸುತ್ತಿದ್ದ ದೀಪಕ್ ಕೊಂದಿದ್ದು ಯಾಕೆ ಎನ್ನುವುದು ನನಗೆ ಇನ್ನು ತಿಳಿಯುತ್ತಿಲ್ಲ ಎಂದರು. ಇದನ್ನು ಓದಿ: ದೀಪಕ್ ಹತ್ಯೆ ಕೇಸ್: ಪೊಲೀಸರ 27 ಕಿ.ಮೀ ಥ್ರಿಲ್ಲಿಂಗ್ ಚೇಸಿಂಗ್ ಸ್ಟೋರಿ ಓದಿ 

    ಇದೇ ವೇಳೆ ದೀಪಕ್ ಕುಟುಂಬದ ಆಧಾರ ಸ್ತಂಭವಾಗಿದ್ದ, ಯಾವುದೇ ಸಮಾಜ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿರಲಿಲ್ಲ ಎಂದು ಹೇಳಿ ಮಜೀದ್ ಕಣ್ಣೀರಟ್ಟರು.  ಇದನ್ನು ಓದಿ: ಕೊಲೆ ಸಂಖ್ಯೆ 21. ಇನ್ನು ಎಷ್ಟು ಕೊಲೆಯಾಗಬೇಕು: ಸಿಎಂಗೆ ಪ್ರತಾಪ್ ಸಿಂಹ ಪ್ರಶ್ನೆ

    ದೀಪಕ್ ಅವರು ಅಬ್ದುಲ್‌ ಮಜೀದ್‌ ಅವರ ಮೊಬೈಲ್‌ ಮತ್ತು ಸಿಮ್‌ ವ್ಯಾಪಾರ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದರು. ಬುಧವಾರ ಮಧ್ಯಾಹ್ನ ಮಜೀದ್‌ ಅವರ ಮನೆಗೆ ಹೋಗಿ ಸಿಮ್‌ ವಿತರಣೆಗೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸಿಕೊಂಡು ಮರಳುತ್ತಿರುವಾಗ ಅವರನ್ನು ಅಡ್ಡಗಟ್ಟಿ ಹಂತಕರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.  ಇದನ್ನು ಓದಿ: ಆಗ ಸುಮ್ಮನಿದ್ದವರು ಈಗೇನು ಮಾತನಾಡೋದು: ಬಿಜೆಪಿ ನಾಯಕರ ವಿರುದ್ಧ ಮುತಾಲಿಕ್ ಕಿಡಿ

    https://www.youtube.com/watch?v=0iJpHrCbDbc