Tag: ಬಜೆಟ್‌ 2023

  • Karnataka Budget 2023: ಸಿಎಂ ತವರು ಜಿಲ್ಲೆಗೆ ಸಿಕ್ಕಿದ್ದೇನು?

    Karnataka Budget 2023: ಸಿಎಂ ತವರು ಜಿಲ್ಲೆಗೆ ಸಿಕ್ಕಿದ್ದೇನು?

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ತವರು ಜಿಲ್ಲೆಗೆ ಮೈಸೂರಿಗೆ (Mysuru) ಭರ್ಜರಿ ಕೊಡುಗೆ ನೀಡಿದ್ದಾರೆ.

    ಶುಕ್ರವಾರ ಬಜೆಟ್‌ ಮಂಡಿಸಿದ ಸಿಎಂ, ವಿಶೇಷ ಕಂಪು, ರುಚಿ ಮತ್ತು ಸೊಗಡಿನಿಂದ ಜನಮನದಲ್ಲಿ ನೆಲೆಸಿರುವ ಮೈಸೂರು ಮಲ್ಲಿಗೆ (Mysuru Mallige), ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಗಳು GI Tag ಗಳನ್ನು ಪಡೆದಿವೆ. ಇವುಗಳ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ ಮತ್ತು ಬ್ರ್ಯಾಂಡಿಂಗ್‌ ಉತ್ತೇಜಿಸಲು ನೂತನ ಕಾರ್ಯಕ್ರಮಗಳನ್ನ ರೂಪಿಸುವುದಾಗಿ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಸದನದಲ್ಲಿ ಭದ್ರತಾ ಲೋಪ – ಬಜೆಟ್ ಮಂಡನೆ ವೇಳೆ ಶಾಸಕರ ಸೀಟ್‍ನಲ್ಲಿ ಕುಳಿತ ಖಾಸಗಿ ವ್ಯಕ್ತಿ

    ಅಲ್ಲದೇ, ಮೈಸೂರು ಬಿತ್ತನೆ ಪ್ರದೇಶದಲ್ಲಿ ಮೂಲಭೂತ ಸೌಕರ್ಯ ಬಲಪಡಿಸಲಾಗುವುದು. ಇದರಿಂದ ಉತ್ತಮ ಗುಣಮಟ್ಟದ ರೋಗರಹಿತವಾದ ಮೈಸೂರು ಬಿತ್ತನೆ ಗೂಡುಗಳನ್ನು ಉತ್ಪಾದಿಸಿ, ವಾಣಿಜ್ಯ ರೇಷ್ಮೆ ಬೆಳೆಗಾರರಿಗೆ ವಿತರಿಸಲು ಮತ್ತು ಉತ್ತಮ ಗುಣಮಟ್ಟದ ಮಿಶ್ರತಳಿ ಕಚ್ಚಾ ರೇಷ್ಮೆಯನ್ನು ಉತ್ಪಾದಿಸಲು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 3.27 ಲಕ್ಷ ಕೋಟಿ ರೂ. ಬಜೆಟ್‌ನಲ್ಲಿ 4 ಗ್ಯಾರಂಟಿಗೆ ಬೇಕು 57,910 ಕೋಟಿ ರೂ – ಯಾವುದಕ್ಕೆ ಎಷ್ಟು?

    ಮೈಸೂರಿಗೆ ಏನೇನು ಕೊಡುಗೆ?

    * ಮೈಸೂರು ರಾಜ್ಯ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮಗಳ ಆಯೋಜನೆ.

    * ಮೈಸೂರಿನ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಆವರಣವನ್ನು ಮೇಲ್ದರ್ಜೆಗೇರಿಸಲು ಕ್ರಮ.

    * ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದ ಬಳಿ Augmented Reality (AR) ಮತ್ತು Virtual Reality (VR) ತಂತ್ರಜ್ಞಾನದೊಂದಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ʻಕರ್ನಾಟಕ ಪುರಾತತ್ವ ವಸ್ತುಸಂಗ್ರಹಾಲಯ ಮತ್ತು ಕಲಾಗ್ಯಾಲರಿʼ ನಿರ್ಮಾಣ.

    * ಮಾನವ – ವನ್ಯಪ್ರಾಣಿ ಸಂಘರ್ಷದಲ್ಲಿ ಸಂರಕ್ಷಿಸಿದ, ಗಾಯಗೊಂಡ ಅನಾರೋಗ್ಯಪೀಡಿತ ಪ್ರಾಣಿಗಳ ರಕ್ಷಣೆ/ನಿರ್ವಹಣೆಗಾಗಿ ಬನ್ನೇರುಘಟ್ಟ ಮತ್ತು ಮೈಸೂರಿನಲ್ಲಿರುವ ಪುನರ್ವಸತಿ ಕೇಂದ್ರಗಳ ಸಾಮರ್ಥ್ಯ ವರ್ಧನೆ ಹಾಗೂ ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಕೇಂದ್ರಗಳ ನಿರ್ಮಾಣ.

    * ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಸ್ಥಾನ ಹಾಗೂ ಚಾಮುಂಡಿಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕ್ರಮ.

    * ಮೈಸೂರು ಜಿಲ್ಲೆಯಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ನಿರ್ಮಾಣ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಒಂದೇ ತಿಂಗಳಲ್ಲಿ 6,085 ಕೋಟಿ GST ಸಂಗ್ರಹ – ಸಿಎಂ ಬೊಮ್ಮಾಯಿ

    ಒಂದೇ ತಿಂಗಳಲ್ಲಿ 6,085 ಕೋಟಿ GST ಸಂಗ್ರಹ – ಸಿಎಂ ಬೊಮ್ಮಾಯಿ

    ಬೆಂಗಳೂರು: ಜನವರಿ ಒಂದೇ ತಿಂಗಳಲ್ಲಿ 6085 ಕೋಟಿ ರೂ. ಜಿಎಸ್‌ಟಿ (GST) ಸಂಗ್ರಹ ಮಾಡಿ ರಾಜ್ಯ ದಾಖಲೆ ಬರೆದಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ (Karnataka) ಶೇ.30 ರಷ್ಟು ಅತ್ಯಧಿಕ ಬೆಳವಣಿಗೆ ಪ್ರಮಾಣ ಹೊಂದಿರುವ ರಾಜ್ಯವಾಗಿದೆ. ಇದನ್ನೂ ಓದಿ: ದಶಪಥ ರಸ್ತೆ ಕಾಮಗಾರಿಗೆ ಟ್ವೀಟ್ ಮೂಲಕ ಮೋದಿ ಮೆಚ್ಚುಗೆ

    ತೆರಿಗೆ ಸಂಗ್ರಹದಲ್ಲಿ ಸುಧಾರಣೆ, ಹೆಚ್ಚಿನ ಕಣ್ಗಾವಲು, ಆರ್ಥಿಕತೆಯಲ್ಲಿ ಚೇತರಿಕೆ ಹಾಗೂ ತೆರಿಗೆದಾರರಲ್ಲಿ ಹೆಚ್ಚಿರುವ ಅನುಸರಣೆಯಿಂದಾಗಿ ಈ ಗಮನಾರ್ಹ ಸಾಧನೆ ಮಾಡಲು ಸಾಧ್ಯವಾಗಿದೆ. ಈ ಆದಾಯದ ಬೆಳವಣಿಗೆಯಿಂದಾಗಿ ಸರ್ಕಾರ ಈ ವರ್ಷ ಉತ್ತಮ ಆಯವ್ಯಯ ಮಂಡಿಸಲು ಅನುವು ಮಾಡಿಕೊಡಲಿದೆ ಎಂದು ಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ಟರ್ಕಿ ಭೂಕಂಪ- ಎಂಟು ವರ್ಷದ ಬಾಲಕಿಯನ್ನು ರಕ್ಷಿಸಿದ NDRF

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 2022ರ ಬಜೆಟ್ ಓದಿ ನಗೆಪಾಟಲಿಗೀಡಾದ ರಾಜಸ್ಥಾನ ಸಿಎಂ ಗೆಹ್ಲೋಟ್

    2022ರ ಬಜೆಟ್ ಓದಿ ನಗೆಪಾಟಲಿಗೀಡಾದ ರಾಜಸ್ಥಾನ ಸಿಎಂ ಗೆಹ್ಲೋಟ್

    ಜೈಪುರ: ರಾಜಸ್ಥಾನ ಮುಖ್ಯಮಂತ್ರಿ (Rajasthan CM) ಅಶೋಕ್ ಗೆಹ್ಲೋಟ್ (Ashok Gehlot) ಅವರು 2023-24ನೇ ಸಾಲಿನ ಬಜೆಟ್ ಮಂಡಿಸುವ ಬದಲು 2022ರ ಬಜೆಟ್ (Budget 2022) ಓದಿ ಇದೀಗ ನಗೆಪಾಟಲಿಗೀಡಾಗಿದ್ದಾರೆ.

    ಸುಮಾರು 8 ನಿಮಿಗಳ ಕಾಲ ಹಿಂದಿನ ವರ್ಷದ ಬಜೆಟ್ ಓದಿ ಹಾಸ್ಯಕ್ಕೆ ಒಳಗಾಗಿದ್ದಾರೆ. ಈ ಕುರಿತ ವೀಡಿಯೋ ಜಾಲತಾಣದಲ್ಲಿ (Social Media) ಭಾರೀ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಶಾಲಾ ಮಕ್ಕಳ ಜೊತೆ ಕೂತು ಬಿಸಿಯೂಟ ಸವಿದ ಸಿಪಿವೈ

    ಹೌದು. ಶುಕ್ರವಾರ ಅಶೋಕ್ ಗೆಹ್ಲೋಟ್ (Ashok Gehlot) ರಾಜ್ಯ ಬಜೆಟ್ ಮಂಡಿಸಬೇಕಿತ್ತು. ಅದರಂತೆ ಬಜೆಟ್ ಓದಲು ಶುರು ಮಾಡಿದ್ದರು. ಸುಮಾರು 8 ನಿಮಿಷಗಳ ಕಾಲ ಬಜೆಟ್ ಓದಿದ ನಂತರ ಸಚಿವ ಮಹೇಶ್ ಜೋಶಿ ಅವರು ತಿಳಿಸಿದ ಬಳಿಕ ಬಜೆಟ್ ಭಾಷಣವನ್ನು ನಿಲ್ಲಿಸಿದರು. ಇದನ್ನೂ ಓದಿ: ಕೇಸರಿ ಭದ್ರಕೋಟೆಗೆ ಚಾಣಕ್ಯ: ಮಂಗಳೂರಿನಲ್ಲಿ ಶಾ ಚುನಾವಣ ರಣತಂತ್ರ

    2023-24ರ ಬಜೆಟ್ ಮಂಡಿಸಬೇಕಿದ್ದ ಗೆಹ್ಲೋಟ್ ಕಳೆದ ವರ್ಷ ಜಾರಿಗೆ ತಂದಿದ್ದ ಯೋಜನೆಗಳು ಹಾಗೂ ನಗರಾಭಿವೃದ್ಧಿ ಯೋಜನೆಗಳನ್ನೇ ಓದುತ್ತಿದ್ದರು. ಈ ವೇಳೆ ಸಚಿವ ಮಹೇಶ್ ಜೋಶಿ (Mahesh Joshi) ಸಿಎಂಗೆ ಕಳೆದ ವರ್ಷದ ಬಜೆಟ್ ಓದುತ್ತಿರುವುದಾಗಿ ತಿಳಿಸಿದರು. ಬಳಿಕ ಹಳೆಯ ಬಜೆಟ್ ನಿಲ್ಲಿಸಿದ ಮುಖ್ಯಮಂತ್ರಿ ಕ್ಷಮೆಯಾಚಿಸಿದರು.

    ಈ ವೇಳೆ ಬಿಜೆಪಿ (BJP) ನಾಯಕರು ಪ್ರತಿಭಟನೆಗಳಿದು (Protest) ತೀವ್ರ ಟೀಕೆಗೆ ಮುಂದಾದರು. ಬಜೆಟ್ ತಾಂತ್ರಿಕವಾಗಿ ಸೋರಿಕೆಯಾಗಿದೆ. ಬಜೆಟ್ ಪ್ರತಿಯನ್ನು ಮುಖ್ಯಮಂತ್ರಿ ಹೊರತು ಬೇರೆ ಯಾರೂ ತರುವಂತಿರಲಿಲ್ಲ. ಆದರೆ ಬಜೆಟ್ ಪ್ರತಿ ತರಲು ರಾಜ್ಯ ಸರ್ಕಾರದ ಅಧಿಕಾರಿಗಳು ದೌಡಾಯಿಸಿದ್ದರು. ಅದು ಐದಾರು ಜನರ ಕೈಗಳಿಂದ ಕೊನೆಗೆ ಮುಖ್ಯಮಂತ್ರಿ ಅವರಿಗೆ ತಲುಪಿದೆ ಎಂದು ಬಿಜೆಪಿ ಶಾಸಕ ಪ್ರತಾಪ್ ಸಿಂಗ್ ಸಿಂಘ್ವಿ ಆರೋಪಿಸಿದರು.

    ಇದರ ಹೊರತಾಗಿ ಬಜೆಟ್ ಸೋರಿಕೆಯಾಗಿದೆ ಎಂಬ ಆರೋಪ ನಿರಾಕರಿಸಿದ ಗೆಹ್ಲೋಟ್, ಹಳೆಯ ಬಜೆಟ್ ಪ್ರತಿ ಓದಿರುವುದಾಗಿ ಹೇಳಿ ಕ್ಷಮೆಯಾಚಿಸಿದರು. ಹಳೆಯ ಬಜೆಟ್ ಓದಿದರೆ ಹೊಸ ಬಜೆಟ್ ಸೋರಿಕೆಯಾದ ಪ್ರಶ್ನೆ ಹೇಗೆ ಉದ್ಭವಿಸುತ್ತದೆ ಎಂದು ಪ್ರಶ್ನಿಸಿದರು.

    ಬಿಜೆಪಿ ನಾಯಕಿ ಮಾಜಿ ಸಿಎಂ ವಸುಂಧರ ರಾಜೆ ಅವರು ಗೆಹ್ಲೋಟ್ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಾನು ಸಿಎಂ ಆಗಿದ್ದಾಗ, ಬಜೆಟ್ ಮಂಡಿಸುವ ಮುನ್ನ ಪದೇ – ಪದೇ ಪರಿಶೀಲಿಸುತ್ತಿದೆ, ಓದುತ್ತಿದೆ. ಆದರೆ ಇಂದಿನ ಮುಖ್ಯಮಂತ್ರಿ ಕೈಯಲ್ಲಿ ಬಜೆಟ್ ಎಷ್ಟು ಸುರಕ್ಷಿತವಾಗಿದೆ ಎಂಬುದನ್ನು ಊಹಿಸಿಕೊಳ್ಳಿ ಎಂದು ಟಾಂಗ್ ಕೊಟ್ಟರು.

    ಸದನದ ಬಾವಿಗಿಳಿದು ಪ್ರತಿಭಟನೆ: 2022-23ನೇ ಸಾಲಿನ ಬಜೆಟ್‌ನಲ್ಲಿನ ಮೊದಲ ಎರಡು ಘೋಷಣೆಗಳನ್ನು ಮಾಡುತ್ತಿದ್ದಂತೆಯೇ, ವಿರೋಧ ಪಕ್ಷವು ಗದ್ದಲ ಶುರುಮಾಡಿತು. ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಸುಮಾರು 30 ನಿಮಿಷಗಳ ಕಾಲ ಪ್ರತಿಭಟನೆ ನಡೆಯಿತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 25 ಎಂಪಿಗಳನ್ನು ಕೊಟ್ಟ ಕರುನಾಡಿಗೆ ಈ ಬಾರಿ ಬೆಲ್ಲನಾ.. ಬೇವಾ..?

    25 ಎಂಪಿಗಳನ್ನು ಕೊಟ್ಟ ಕರುನಾಡಿಗೆ ಈ ಬಾರಿ ಬೆಲ್ಲನಾ.. ಬೇವಾ..?

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k