Tag: ಬಜೆಟ್‌ 2024

  • ಕುಡಿಯುವ ನೀರಿಗಾಗಿ ಜನ ಮತ ಹಾಕಿದ್ದಾರೆ; ಬೆಂಗಳೂರಿಗೆ ನೀರು ಕೊಡಿ – ರಾಜ್ಯಸಭೆಯಲ್ಲಿ ಹೆಚ್‌ಡಿಡಿ ಮನವಿ

    ಕುಡಿಯುವ ನೀರಿಗಾಗಿ ಜನ ಮತ ಹಾಕಿದ್ದಾರೆ; ಬೆಂಗಳೂರಿಗೆ ನೀರು ಕೊಡಿ – ರಾಜ್ಯಸಭೆಯಲ್ಲಿ ಹೆಚ್‌ಡಿಡಿ ಮನವಿ

    ನವದೆಹಲಿ: ಹಳೇ ಮೈಸೂರು ಭಾಗ ಮತ್ತು ಬೆಂಗಳೂರಿಗೆ ಕಾವೇರಿಯೇ ಆಧಾರ, ಕುಡಿಯುವ ನೀರು ಕೊಡುವ ಭರವಸೆಯ ಮೇಲೆ ಜನರು ಎನ್‌ಡಿಎಗೆ ಮತ ಹಾಕಿದ್ದಾರೆ. ಹಣಕಾಸು ಸಚಿವರು ಕರ್ನಾಟಕದಿಂದ ಆಯ್ಕೆಯಾಗಿದ್ದಾರೆ. ಇಲ್ಲಿ ನಾನು ಯಾರನ್ನೂ ದೂಷಿಸುವುದಿಲ್ಲ. ಬೆಂಗಳೂರು ಕುಡಿಯುವ ನೀರಿನ (Bengaluru Drinking Water) ಸಮಸ್ಯೆ ಬಗೆಹರಿಸಿ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (HD Devegowda) ಪ್ರಶ್ನಿಸಿದ್ದಾರೆ.

    ಬಜೆಟ್ ಮೇಲೆ ರಾಜ್ಯಸಭೆಯಲ್ಲಿ (Rajyasabha) ಮಾತನಾಡಿದ ಅವರು, ಬೆಂಗಳೂರು ಬೆಳೆಯುತ್ತಿರುವ ನಗರ ಅದಕ್ಕೆ ಕುಡಿಯುವ ನೀರಿನ ಅಗತ್ಯವಿದೆ. ಜನರು ಕುಡಿಯುವ ನೀರಿಲ್ಲದೇ (Drinking Water) ಸಂಕಷ್ಟದಲ್ಲಿದ್ದಾರೆ, ನೀರಿಲ್ಲದೇ ತತ್ತರಿದ್ದ ವೇಳೆ ಒಂದು ಟಿಎಂಸಿ ನೀರು ಹರಿಸಲು CWRC (ಕಾವೇರಿ ನೀರು ನಿಯಂತ್ರಣ ಸಮಿತಿ) ಹೇಳಿತ್ತು, ಮಳೆಯಿಂದ ಈಗ ಎಲ್ಲವೂ ಸುಗಮವಾಗಿದೆ. ಮಳೆ ಬರದಿದ್ದರೇ ನಮ್ಮ ಪರಿಸ್ಥಿತಿ ಏನು ಹೇಳಿ? ಎಂದು ಪ್ರಶ್ನಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ – ಸಿದ್ದರಾಮಯ್ಯ ಪರ ಸಚಿವ ಜಮೀರ್ ಬ್ಯಾಟಿಂಗ್‌

    ನಾನು ಸಾಕಷ್ಟು ನೀರಿನ ವ್ಯಾಜ್ಯ ಬಗೆಹರಿಸಿದ್ದೇನೆ, ಮುಂದಿನ ಬಜೆಟ್ ಬಗ್ಗೆ ಮಾತನಾಡಲು ಇರ್ತಿನೊ ಇಲ್ವೊ ಗೊತ್ತಿಲ್ಲ. ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಜನರು ಎನ್‌ಡಿಎ ಬೆಂಬಲಿಸಿದ್ದಾರೆ. ಹಳೇ ಮೈಸೂರು ಭಾಗ ಮತ್ತು ಬೆಂಗಳೂರಿಗೆ ಕಾವೇರಿಯೇ ಆಧಾರ, ಕುಡಿಯುವ ನೀರು ಕೊಡುವ ಭರವಸೆ ಮೇಲೆ ಜನರು ಎನ್‌ಡಿಎಗೆ ಮತ ಹಾಕಿದ್ದಾರೆ. ಹಣಕಾಸು ಸಚಿವರು ಕರ್ನಾಟಕದಿಂದ ಆಯ್ಕೆಯಾಗಿದ್ದಾರೆ. ಇಲ್ಲಿ ನಾನು ಯಾರನ್ನೂ ದೂಷಿಸುವುದಿಲ್ಲ. ಬೆಂಗಳೂರು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಎಂದು ಮನವಿ ಮಾಡಿದರು.

    ಬಜೆಟ್ ಬಗ್ಗೆ ಮಾತನಾಡಿದ ಅವರು, ನಾನು ಹೃದಯಪೂರ್ವಕವಾಗಿ ಬಜೆಟ್ ಬೆಂಬಲಿಸುತ್ತೇನೆ. ನಾನು 1991 ರಲ್ಲಿ ಸಂಸತ್‌ಗೆ ಬಂದೆ ಈಗ ನನಗೆ 92 ವರ್ಷ ಮುಂದಿನ ಬಜೆಟ್ ಬಗ್ಗೆ ಮಾತಮಾಡ್ತಿನೋ ಇಲ್ಲವೊ ಗೊತ್ತಿಲ್ಲ, ನಾನು ಹಿಂದೆ ಮೋದಿ ಅವರನ್ನ ವಿರೋಧಿಸಿದ್ದೆ. ಆದರೆ ಈಗ ನಾನು ಎನ್‌ಡಿಎ ಭಾಗವಾಗಿದ್ದೇನೆ ಅದಕ್ಕಾಗಿ ಜೆ.ಪಿ ನಡ್ಡಾ ಅವರಿಗೆ ಧನ್ಯವಾದಗಳು ಎಂದರು. ಇದನ್ನೂ ಓದಿ: ಅಭಿಮನ್ಯುವಿಗೆ ಮಾಡಿದಂತೆ ಇಡೀ ಭಾರತಕ್ಕೆ ಚಕ್ರವ್ಯೂಹ ರಚಿಸಿದ್ದಾರೆ, ದೇಶವನ್ನ ಧ್ವಂಸಗೊಳಿಸುತ್ತಾರೆ – ರಾಗಾ ಆತಂಕ

    ನಾನು ಕೃಷಿ ಮತ್ತು ನಿರುದ್ಯೋಗ ಸಮಸ್ಯೆ ಬಗ್ಗೆ ಮಾತನಾಡುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಬದ್ಧತೆ ಇರುವ ವ್ಯಕ್ತಿಯನ್ನು ಕೃಷಿಗೆ ಸಚಿವರನ್ನಾಗಿ ಮಾಡಿದ್ದಾರೆ. ಉತ್ತಮ ಅನುಭವ ಇರುವ ತಂಡವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಹತ್ತು ವರ್ಷ ಸಿಎಂ ಆಗಿದ್ದಾಗ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಅತ್ಯುತ್ತಮ ಮಾದರಿ ರಾಜ್ಯ ಗುಜರಾತ್ ಆಗಿದೆ. ಮೈತ್ರಿ ಸರ್ಕಾರವನ್ನು ನಡೆಸುವುದು ತುಂಬಾ ಕಷ್ಟ, ನಾನು ಮೈತ್ರಿ ಸರ್ಕಾರವನ್ನ ನಡೆಸಿದ್ದೇನೆ. ಆದರೆ ನರೇಂದ್ರ ಮೋದಿ ಎಲ್ಲೂ ಹೊಂದಾಣಿಕೆ ಮಾಡಿಕೊಳ್ಳದೇ ಜವಾಬ್ದಾರಿ ನಿಭಾಯಿಸಿದ್ದಾರೆ. ಸ್ಪೀಕರ್ ಆಯ್ಕೆಯಿಂದ ಹಿಡಿದು ಅವರ ಪ್ರಮುಖ ನಿರ್ಧಾರಗಳಲ್ಲಿ ಯಾರು ಆಕ್ಷೇಪ ವ್ಯಕ್ತಪಡಿಸಿಲ್ಲ. ಕರ್ನಾಟಕದಲ್ಲಿ ಎರಡು ಸೀಟು ಮಾತ್ರ ನಮ್ಮ ಶಕ್ತಿ ಆದಾಗ್ಯೂ ಪರಿಗಣಿಸಿ ಒಂದು ಸಂಪುಟ ದರ್ಜೆ ಸ್ಥಾನ ನೀಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.

    2024ರ ಬಜೆಟ್ ಕುರಿತು ಮಾತನಾಡಿದ ಗೌಡರು, ವೈಜ್ಞಾನಿಕ ಬಜೆಟ್ ಇದು, ಮಹಿಳೆಯರು, ಬಡವರು, ಯುವಕರು, ರೈತರ ಪರವಾಗಿ ಬಜೆಟ್ ಮಂಡಿಸಿದೆ. ಕೃಷಿಯಲ್ಲಿ ಉತ್ಪಾದಕತೆಯನ್ನು ಹೆಚ್ಚಿಸಲು ಒತ್ತು ನೀಡಿದೆ. ಹಂಚಿಕೆ ಸರಪಳಿ ಬಲಿಷ್ಠಗೊಳಿಸಲು ಕ್ರಮ ತೆಗೆದುಕೊಂಡಿದೆ. ಯುವಕರಿಗೆ ಇಂರ್ಟನಶಿಪ್ ನಲ್ಲಿ ಮೊದಲ ತಿಂಗಳ ಸಂಬಂಳ ನೀಡಲಾಗುತ್ತಿದೆ. ಉದ್ಯೋಗ ಹೆಚ್ಚಿಸಲು ಸರ್ಕಾರ ಆದ್ಯತೆ ನೀಡಿದೆ. ಯುವಕರಲ್ಲಿ ಕೌಶಲ್ಯಯುತರಾಗಿ ಮಾಡಲು ವ್ಯಯ ಮಾಡುತ್ತಿದೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ದೇವೇಗೌಡರ ಕುಟುಂಬಕ್ಕೆ ಎಷ್ಟು ಸೈಟು ಬರೆಸಿಕೊಂಡಿದ್ದಾರೆ ಪಟ್ಟಿ ಕೊಡ್ಲಾ? – ಸಿದ್ದರಾಮಯ್ಯ

  • ಯಾವ ರಾಜ್ಯವನ್ನೂ ಕಡೆಗಣಿಸಿಲ್ಲ, ಪ್ರತಿಪಕ್ಷಗಳ ಪ್ರತಿಭಟನೆ ದುರುದ್ದೇಶಪೂರ್ವಕ: ನಿರ್ಮಲಾ ಸೀತಾರಾಮನ್

    ಯಾವ ರಾಜ್ಯವನ್ನೂ ಕಡೆಗಣಿಸಿಲ್ಲ, ಪ್ರತಿಪಕ್ಷಗಳ ಪ್ರತಿಭಟನೆ ದುರುದ್ದೇಶಪೂರ್ವಕ: ನಿರ್ಮಲಾ ಸೀತಾರಾಮನ್

    ನವದೆಹಲಿ: ಈ ಬಾರಿಯ ಬಜೆಟ್ (Union Budget 2024) ಯಾವುದೇ ರಾಜ್ಯವನ್ನು ಕಡೆಗಣಿಸಿಲ್ಲ. ಕಾಂಗ್ರೆಸ್ (Congress) ನೇತೃತ್ವದ ಪ್ರತಿಪಕ್ಷಗಳು ಉದ್ದೇಶಪೂರ್ವಕವಾಗಿ ನಾಗರಿಕರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳಿದ್ದಾರೆ.

    ರಾಜ್ಯಗಳ ನಡುವೆ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ಬಜೆಟ್‌ನಲ್ಲಿ ಈ ದೇಶದ ಪ್ರತಿಯೊಂದು ರಾಜ್ಯವನ್ನು ಹೆಸರಿಸಲು ಅವಕಾಶ ಸಿಗುವುದಿಲ್ಲ. ಈ ಪ್ರತಿಭಟನೆ ದುರುದ್ದೇಶದಿಂದ ಕೂಡಿದೆ ಎಂದರು.

     

    ಇದಕ್ಕೆ ಉದಾಹರಣೆ ನೀಡಿ, ಮಹಾರಾಷ್ಟçದ ಪಾಲ್ಘರ್ ಜಿಲ್ಲೆಯ ವಂಧವನ್ ಎಂಬ ಪಟ್ಟಣದಲ್ಲಿ ಬಂದರು ಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಆದರೆ ಮಂಗಳವಾರದ ತನ್ನ ಬಜೆಟ್ ಭಾಷಣದಲ್ಲಿ ರಾಜ್ಯದ ಹೆಸರನ್ನು ಉಲ್ಲೇಖಿಸಿಲ್ಲ. ಇದರರ್ಥ ಮಹಾರಾಷ್ಟçವನ್ನು ಕಡೆಗಣಿಸಲಾಗಿದೆ ಎಂದರ್ಥವೇ ಎಂದು ಪ್ರಶ್ನಿಸಿದರು.

    ಭಾಷಣದಲ್ಲಿ ನಿರ್ದಿಷ್ಟ ರಾಜ್ಯವನ್ನು ಹೆಸರಿಸಿದರೆ, ಭಾರತ ಸರ್ಕಾರದ ಕಾರ್ಯಕ್ರಮಗಳು ಈ ರಾಜ್ಯಗಳಿಗೆ ಹೋಗುವುದಿಲ್ಲ ಎಂದರ್ಥವೇ? ಇದು ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಉದ್ದೇಶಪೂರ್ವಕ ಪ್ರಯತ್ನವಾಗಿದೆ. ನಮ್ಮ ರಾಜ್ಯಗಳಿಗೆ ಏನನ್ನೂ ನೀಡಿಲ್ಲ ಎಂಬ ಭಾವನೆ ಜನರಲ್ಲಿ ಮೂಡಿಸಲು ಹೀಗೆ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದರು.

  • ಮೋದಿ 3.0 ಸರ್ಕಾರದ ಬಜೆಟ್‌ ಮಂಡನೆ ಇಂದು; ತೆರಿಗೆ ಪದ್ಧತಿಯಲ್ಲಿ ಆಗುತ್ತಾ ಬದಲಾವಣೆ?

    ಮೋದಿ 3.0 ಸರ್ಕಾರದ ಬಜೆಟ್‌ ಮಂಡನೆ ಇಂದು; ತೆರಿಗೆ ಪದ್ಧತಿಯಲ್ಲಿ ಆಗುತ್ತಾ ಬದಲಾವಣೆ?

    – ದಾಖಲೆಯ 7ನೇ ಬಜೆಟ್‌ ಮಂಡಿಸಲಿದ್ದಾರೆ ನಿರ್ಮಲಾ ಸೀತಾರಾಮನ್

    ನವದೆಹಲಿ: ಉದ್ಯೋಗ ಮತ್ತು ಬೆಲೆ ಏರಿಕೆ ಕುರಿತು ಪ್ರತಿಪಕ್ಷಗಳ ಕಠಿಣ ಪ್ರಶ್ನೆಗಳ ನಡುವೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಮಂಗಳವಾರ ಮೋದಿ 3.0 ರ ಮೊದಲ ಕೇಂದ್ರ ಬಜೆಟ್ (Union Budget 2024) ಅನ್ನು ಮಂಡಿಸಲಿದ್ದಾರೆ.

    ಸೀತಾರಾಮನ್ ಅವರು ತಮ್ಮ ಏಳನೇ ಕೇಂದ್ರ ಬಜೆಟ್ ಮಂಡನೆಯಲ್ಲಿ, ಹೊಸ ಉತ್ಪಾದನಾ ಸೌಲಭ್ಯಗಳಿಗೆ ತೆರಿಗೆ ಪ್ರೋತ್ಸಾಹವನ್ನು ನೀಡುವ ಸಾಧ್ಯತೆಯಿದೆ. ಉದ್ಯೋಗಗಳನ್ನು ಸೃಷ್ಟಿಸಲು ಕ್ಷೇತ್ರಗಳಾದ್ಯಂತ ಸ್ಥಳೀಯ ಸಂಗ್ರಹಣೆಯನ್ನು ಉತ್ತೇಜಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ಬೆಂಗಳೂರನ್ನು 5 ವಲಯಗಳನ್ನಾಗಿ ವಿಭಜಿಸುವ ಮಸೂದೆಗೆ ಕ್ಯಾಬಿನೆಟ್‌ ಒಪ್ಪಿಗೆ

    ವಿತ್ತ ಸಚಿವರು ಮಧ್ಯಮ ವರ್ಗದವರಿಗೆ ತೆರಿಗೆ ವಿನಾಯಿತಿಯನ್ನು ಘೋಷಿಸುತ್ತಾರೆಯೇ ಎಂಬುದು ಅವರ ಬಜೆಟ್ ಭಾಷಣದಲ್ಲಿ ಬಹು ನಿರೀಕ್ಷಿತ ಭಾಗವಾಗಿದೆ. ಚುನಾವಣಾ ಪೂರ್ವ ಮಧ್ಯಂತರ ಬಜೆಟ್‌ನಲ್ಲಿ ಮಧ್ಯಮ ವರ್ಗದವರಿಗೆ ಏನೂ ಸಿಗಲಿಲ್ಲ. ಹಾಗಾಗಿ ಅವರ ನಿರೀಕ್ಷೆಗಳು ಹೆಚ್ಚಿವೆ.

    ಬಜೆಟ್ ವಿತ್ತೀಯ ಕೊರತೆಯು ಶೇ.4.5 ರಷ್ಟಿದ್ದು, ಕಳೆದ ಆರ್ಥಿಕ ವರ್ಷದಲ್ಲಿ ಶೇ.5.8 ರಷ್ಟಿತ್ತು. ಪೂರ್ಣ ಬಜೆಟ್ ಮೊದಲಿನ ವಿತ್ತೀಯ ಕೊರತೆಯ ಪ್ರಕ್ಷೇಪಗಳಿಗಿಂತ ಉತ್ತಮವಾಗಿದೆ ಎಂದು ನಿರೀಕ್ಷಿಸಲಾಗಿದೆ. ವಿತ್ತೀಯ ಕೊರತೆಯು ಸರ್ಕಾರದ ವೆಚ್ಚ ಮತ್ತು ಆದಾಯದ ನಡುವಿನ ವ್ಯತ್ಯಾಸವಾಗಿದೆ. ಇದನ್ನೂ ಓದಿ: ಶೇ.6.5 -7 ರಷ್ಟು ಆರ್ಥಿಕ ಬೆಳವಣಿಗೆ – ಬಡವರಿಗೆ 9 ವರ್ಷದಲ್ಲಿ 2.63 ಕೋಟಿ ಮನೆ ನಿರ್ಮಾಣ

    ಮೂಲಸೌಕರ್ಯ ಅಭಿವೃದ್ಧಿಗೆ ಮೋದಿ ಸರ್ಕಾರ ಹೆಚ್ಚಿನ ಒತ್ತು ನೀಡಿದೆ. ಸರ್ಕಾರದ ಯೋಜಿತ ಬಂಡವಾಳ ವೆಚ್ಚವು (ಕ್ಯಾಪೆಕ್ಸ್) 11.1 ಲಕ್ಷ ಕೋಟಿಯಲ್ಲಿದೆ. ಇದು ಕಳೆದ ಆರ್ಥಿಕ ವರ್ಷದಲ್ಲಿ 9.5 ಲಕ್ಷ ಕೋಟಿಗಿಂತ ಹೆಚ್ಚಾಗಿದೆ. ಸರ್ಕಾರವು ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುತ್ತಿದೆ. ಕ್ಯಾಪೆಕ್ಸ್ ಅನ್ನು ಹೆಚ್ಚಿಸಲು ರಾಜ್ಯಗಳನ್ನು ಪ್ರೋತ್ಸಾಹಿಸುತ್ತಿದೆ.

    ಕೇಂದ್ರ ಬಜೆಟ್ 2024ರ ಜು.30 ರಂದು ಅಂಗೀಕಾರವಾಗುವ ಸಾಧ್ಯತೆಯಿದೆ. ಬೆಲೆ ಏರಿಕೆ, ನಿರುದ್ಯೋಗ, ಪ್ರಮುಖ ಕ್ಷೇತ್ರಗಳಲ್ಲಿನ ಬೆಳವಣಿಗೆಯ ಕೊರತೆ ಮತ್ತು ಕೃಷಿ ಸಂಕಷ್ಟದ ಬಗ್ಗೆ ವಿಪಕ್ಷಗಳು ಹೆಚ್ಚು ಚರ್ಚೆ ನಡೆಸುತ್ತಿವೆ.

  • ಬೆಳಗಾವಿ, ತುಮಕೂರು ಜಿಲ್ಲೆಗಳ ವಿಭಜನೆ ಫಿಕ್ಸ್?

    ಬೆಳಗಾವಿ, ತುಮಕೂರು ಜಿಲ್ಲೆಗಳ ವಿಭಜನೆ ಫಿಕ್ಸ್?

    – ಬಜೆಟ್‌ನಲ್ಲಿ ಹೊಸ ಜಿಲ್ಲೆಗಳ ಘೋಷಣೆ ಮಾಡುತ್ತಾ ಸರ್ಕಾರ?

    ಬೆಳಗಾವಿ: ಫೆ.16ರಂದು (ಶುಕ್ರವಾರ) ಸಿಎಂ ಸಿದ್ದರಾಮಯ್ಯ (Siddaramaiah) ರಾಜ್ಯ ಸರ್ಕಾರದ ಪೂರ್ಣಾವಧಿ ಬಜೆಟ್ ಮಂಡನೆ ಮಾಡಲಿದ್ದಾರೆ. ಅಲ್ಲದೇ ಸಿದ್ದರಾಮಯ್ಯ ಅವರು ಮಂಡಿಸಲಿರುವ ದಾಖಲೆಯ 15ನೇ ಬಜೆಟ್ ಸಹ ಇದಾಗಿದೆ. ಬಜೆಟ್‌ನಲ್ಲಿ ಸರ್ಕಾರ ಹೊಸ ಜಿಲ್ಲೆಗಳನ್ನು ಘೋಷಣೆ ಮಾಡುವ ಸಾಧ್ಯತೆಗಳಿದ್ದು, ಬೆಳಗಾವಿ ಮತ್ತು ತುಮಕೂರು (Belagavi, Tumkur) ಜಿಲ್ಲೆ ವಿಭಜನೆ ಫಿಕ್ಸ್ ಆಗುತ್ತಾ ಅನ್ನೋ ಪ್ರಶ್ನೆ ಎದಿದೆ.

    ಇದೇ ಫೆಬ್ರವರಿ 8ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯಲ್ಲಿ, ಅಸ್ತಿತ್ವದಲ್ಲಿ ಇರೋ ಜಿಲ್ಲೆಗಳ ಮಿತಿಯನ್ನು ಪುನರ್ ರಚಿಸುವ ಬಗ್ಗೆ ಉಲ್ಲೇಖಿಸಿತ್ತು. ನೋಂದಣಿ ಕಾಯ್ದೆ 1908 (ಕೇಂದ್ರ ಅಧಿನಿಯಮ 16, 1908) ಅಡಿಯಲ್ಲಿ ಜಿಲ್ಲೆಗಳ ಮಿತಿಯನ್ನು ಪುನರ್ ರಚಿಸುವ ಬಗ್ಗೆ ಉಲ್ಲೇಖಿಸಿತ್ತು. ಈ ಪೈಕಿ ರಾಜ್ಯದಲ್ಲಿ ದೊಡ್ಡ ಜಿಲ್ಲೆಗಳಾಗಿರುವ ಬೆಳಗಾವಿ ಹಾಗೂ ತುಮಕೂರು ಜಿಲ್ಲೆಗಳ ಹೆಸರನ್ನು ಉಲ್ಲೇಖಿಸಲಾಗಿತ್ತು. ಇದನ್ನೂ ಓದಿ: ‘ಮಿಂಟೋ’ ಆಸ್ಪತ್ರೆಯ ಕರ್ಮಕಾಂಡ – ಆಸ್ಪತ್ರೆಗೆ ಬೀಗ ಹಾಕಿ ರಸ್ತೆಯಲ್ಲೇ ರೋಗಿಗಳಿಗೆ ಚಿಕಿತ್ಸೆ

    ಸದ್ಯ ಜಿಲ್ಲೆಗಳ ವಿಭಜನೆಯ ಸದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಪ್ರತ್ಯೇಕ ಜಿಲ್ಲೆಗಾಗಿ ಗೋಕಾಕ್, ಚಿಕ್ಕೋಡಿ, ಬೈಲಹೊಂಗಲ ಹಾಗೂ ಅಥಣಿ ನಡುವೆ ಫೈಟ್ ನಡೆಯುತ್ತಿದ್ದು, ಜನಪ್ರತಿನಿಧಿಗಳು ಅಲರ್ಟ್ ಆಗಿದ್ದಾರೆ. ಹಾಗಾಗಿ ಗುರುವಾರ (ಇಂದು) ಬೆಳಗಾವಿ ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡುವ ಸಾಧ್ಯತೆಗಳಿದ್ದು, ತಮ್ಮ ಬೇಡಿಕೆಗಳನ್ನು ಮುಂದಿಡಲಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಲೋಕಸಭೆ ಚುನಾವಣೆ: RSS ಹಿನ್ನೆಲೆಯುಳ್ಳ ಅಭ್ಯರ್ಥಿಗಳು ಬಿಜೆಪಿಯಿಂದ ಕಣಕ್ಕೆ?

    ಸಿಎಂ ದಾಖಲೆ ಬಜೆಟ್ ಮಂಡನೆ:
    2023ರಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾದ ಬಳಿಕ ಸಿಎಂ ಸಿದ್ದರಾಮಯ್ಯ ಪೂರ್ಣಾವಧಿ ಬಜೆಟ್ ಮಂಡಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇದು ಅವರ ದಾಖಲೆಯ 15ನೇ ಬಜೆಟ್ ಆಗಿದೆ. ಕಳೆದ ವರ್ಷ ಮಧ್ಯಂತರ ಬಜೆಟ್ ಮಂಡಿಸಿದ್ದರು. ಇದೀಗ ಪೂರ್ಣಾವಧಿ ಬಜೆಟ್ ಮಂಡಿಸುತ್ತಿದ್ದು, ರಾಜ್ಯದ ಜನರು ಹಲವು ನಿರೀಕ್ಷೆಗಳನ್ನಿಟ್ಟುಕೊಂಡಿದ್ದಾರೆ. ಇದನ್ನೂ ಓದಿ: ನಿಗೂಢ ಕೆಲಸಕ್ಕೆ 42 ಅಕ್ರಮ ಸಿಮ್‌ಗಳೊಂದಿಗೆ ಬೆಂಗಳೂರಿಗೆ ಹೊರಟಿದ್ದ ಯುವಕರು ಅರೆಸ್ಟ್‌ 

  • ರಾಜ್ಯಕ್ಕೆ 62 ಸಾವಿರ ಕೋಟಿ ರೂ. ನಷ್ಟ – ಫೆ.7 ರಂದು ದೆಹಲಿಯಲ್ಲಿ ಕರ್ನಾಟಕ ಸರ್ಕಾರದಿಂದ ಪ್ರತಿಭಟನೆ ಎಂದ ಡಿಕೆಶಿ

    ರಾಜ್ಯಕ್ಕೆ 62 ಸಾವಿರ ಕೋಟಿ ರೂ. ನಷ್ಟ – ಫೆ.7 ರಂದು ದೆಹಲಿಯಲ್ಲಿ ಕರ್ನಾಟಕ ಸರ್ಕಾರದಿಂದ ಪ್ರತಿಭಟನೆ ಎಂದ ಡಿಕೆಶಿ

    ಬೆಂಗಳೂರು: ಕೇಂದ್ರ ಬಜೆಟ್‌ನಲ್ಲಿ (Union Budget 2024) ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ 5 ವರ್ಷಗಳಲ್ಲಿ ರಾಜ್ಯಕ್ಕೆ 62 ಸಾವಿರ ಕೋಟಿ ಹಣ ನಷ್ಟವಾಗಿದೆ. ಹೀಗಾಗಿ ಫೆ.7 ರಂದು ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ

    ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿ ನಾನು ಸೇರಿದಂತೆ ರಾಜ್ಯದ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇವೆ. ಪ್ರತಿಭಟನೆ ಸ್ಥಳವಕಾಶದ ಬಗ್ಗೆ ಕೆಂದ್ರಕ್ಕೆ ಪತ್ರ ಬರೆದಿದ್ದು, ಅನುಮತಿ ಸಿಕ್ಕ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತೇವೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರತಿಭಟನೆ (Protest) ನಮ್ಮ ಮೂಲಭೂತ ಹಕ್ಕು. ಕಾಂಗ್ರೆಸ್ ಜನಪ್ರತಿನಿಧಿಗಳು ಭಾಗವಹಿಸಲಿರುವ ಈ ಪ್ರತಿಭಟನೆಯಲ್ಲಿ ಪ್ರತಿಪಕ್ಷದ ಸಂಸದರು. ಶಾಸಕರು ಭಾಗವಹಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

    ರಾಜ್ಯಕ್ಕೆ ಅನ್ಯಾಯವಾಗಿದೆ:
    2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ 24.5 ಲಕ್ಷ ಕೋಟಿ ಇತ್ತು. 2023-24ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದು 47 ಲಕ್ಷ ಕೋಟಿಯಾಗಿದೆ. 2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರಾಜ್ಯಕ್ಕೆ 46 ಸಾವಿರ ಕೋಟಿ ಅನುದಾನ ಸಿಕ್ಕಿತ್ತು. ಆದರೆ 2024-25ನೇ ಸಾಲಿನಲ್ಲಿ ರಾಜ್ಯಕ್ಕೆ ಬಂದಿರುವ ಅನುದಾನ ಕೇವಲ 50 ಸಾವಿರ ಕೋಟಿ ಮಾತ್ರ. ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದರೂ ರಾಜ್ಯಕ್ಕೆ ಬರುವ ಅನುದಾನದ ಪ್ರಮಾಣದಲ್ಲಿ ಅತ್ಯಲ್ಪ ಏರಿಕೆ ಮಾತ್ರವಾಗಿದೆ. ಕರ್ನಾಟಕ ರಾಜ್ಯ ದೇಶದಲ್ಲೇ ಪ್ರಗತಿಪರ ರಾಜ್ಯ. ಮಹಾರಾಷ್ಟ್ರ ಬಿಟ್ಟರೆ ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಪಾವತಿ ಮಾಡುತ್ತಿರುವ ರಾಜ್ಯ ಕರ್ನಾಟಕ. ಆದ್ರೆ ಕಳೆದ 5 ವರ್ಷಗಳ ಬಜೆಟ್ ನೋಡಿದ್ರೆ ನಮಗೆ ನಮ್ಮ ಪಾಲು ನ್ಯಾಯುತವಾಗಿ ಸಿಕ್ಕಿಲ್ಲ. ರಾಜ್ಯದ 28 ಸಂಸದರ ಪೈಕಿ 27 ಸಂಸದರು ಎನ್‌ಡಿಎ ಮೈತ್ರಿಕೂಟದವರೇ ಆಗಿದ್ದರೂ ನಮಗೆ ಸೂಕ್ತ ನ್ಯಾಯ ಸಿಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

    62 ಸಾವಿರ ಕೋಟಿ ಹಣ ಕಡಿಮೆಯಾಗಿದೆ:
    2018-19ರಿಂದ ಈಗಿನವರೆಗೂ ಕೇಂದ್ರ ಬಜೆಟ್ ಗಮನಿಸಿದರೆ ನಮ್ಮ ರಾಜ್ಯದ ಪಾಲಿನಲ್ಲಿ 40 ರಿಂದ 45% ಪಾಲು ಕಡಿಮೆಯಾಗಿದೆ. ಇದರಿಂದಾಗಿ ನಮ್ಮ ರಾಜ್ಯದ ಮೇಲೆ ಸಾಲದ ಹೊರೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಪ್ರತಿ ವರ್ಷ 7-10 ಸಾವಿರ ಕೋಟಿ ಅನುದಾನ ಕಡಿಮೆಯಾಗುತ್ತಾ ಬರುತ್ತಿದೆ. 14ನೇ ಹಣಕಾಸು ಆಯೋಗದ ಶಿಫಾರಸಿನಂತೆ ಕರ್ನಾಟಕ ರಾಜ್ಯಕ್ಕೆ 4.71% ಪಾಲು ನೀಡಲಾಗಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಪಾಲನ್ನು 3.64%ಗೆ ಇಳಿಸಲಾಗಿದೆ. ಇದರಿಂದಾಗಿ ನಮಗೆ 5 ವರ್ಷಕ್ಕೆ 62 ಸಾವಿರ ಕೋಟಿಯಷ್ಟು ಹಣ ಕಡಿಮೆಯಾಗಿದೆ. ಇನ್ನೂ ವಿವಿಧ ರೀತಿಯಲ್ಲಿ ಕರ್ನಾಟಕ ರಾಜ್ಯಕ್ಕೆ ಘೋಷಣೆ ಮಾಡಿದ್ದ ಅನುದಾನ ಕೂಡ ಸರಿಯಾಗಿ ನೀಡಿಲ್ಲ ಎಂದು ಕೇಂದ್ರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

    ಭದ್ರಾ ಮೇಲ್ದಂಡೆ ಯೋಜನೆಯ ಪ್ರಸ್ತಾಪವೇ ಇಲ್ಲ:
    ನೀರಾವರಿ ಯೋಜನೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,200 ಕೋಟಿ ನೀಡುವುದಾಗಿ ಘೋಷಣೆ ಮಾಡಿದ್ದರು. ಅದನ್ನೂ ನೀಡಿಲ್ಲ. ಇನ್ನು ಬೆಂಗಳೂರಿನಲ್ಲಿ ಮೆಟ್ರೋಗೆ ಕೂಡ ವಿವಿಧ ಹಂತದ ಯೋಜನೆ ಅನುದಾನ ನೀಡುವುದಾಗಿ ಹೇಳಿದ್ದರು. ನಾನು ಸಹ ಹಲವು ಬಾರಿ ಪ್ರಧಾನಿ, ಜಲಶಕ್ತಿ ಸಚಿವರು, ನಗರಾಭಿವೃದ್ಧಿ ಸಚಿವರಿಗೆ ಪತ್ರ ಬರೆದಿದ್ದೇನೆ. ನಮ್ಮ ರಾಜ್ಯದಿಂದ ಹೆಚ್ಚು ತೆರಿಗೆ ರವಾನೆಯಾಗುತ್ತಿದ್ದರೂ ನಮಗೆ ಮಲತಾಯಿ ಧೋರಣೆ ತೋರುತ್ತಿದ್ದೀರಿ. ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಆದರೂ ಯಾವುದೇ ಪ್ರಯೋಜನ ಆಗಿಲ್ಲ. ಇದರಿಂದಾಗಿ ನಮಗೆ ನಿರಾಸೆಯಾಗಿದೆ. ನಮಗೆ ಆಗಿರುವ ಅನ್ಯಾಯದ ಬಗ್ಗೆ ರಾಜ್ಯದ ಜನರಿಗೆ ತಿಳಿಸಬೇಕು. ನಮ್ಮ ರಾಜ್ಯದಲ್ಲಿ ಬರಗಾಲ ಎದುರಾಗಿದೆ. ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ನಮ್ಮ ಹಣಕಾಸು ಹಾಗೂ ಕೃಷಿ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ್ದರು. ಸಂಸದರು ಕೂಡ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದೆವು. ಆದರೂ ನಯಾಪೈಸೆ ಹಣ ಬಂದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

    ಡಬಲ್‌ ಇಂಜಿನ್‌ ಸರ್ಕಾರದಲ್ಲೂ ರಾಜ್ಯಲ್ಲೆ ಲಾಭ ಆಗಿಲ್ಲ:
    ಹಿಂದಿನ ಬಿಜೆಪಿ ಸರ್ಕಾರ ಇದ್ದಾಗ ಡಬಲ್ ಇಂಜಿನ್ ಸರ್ಕಾರದಿಂದ ನಮಗೆ ಲಾಭ ಆಗಿರಬಹುದು ಎಂದು ಭಾವಿಸಿದ್ದೆವು. ಆದರೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿದಾಗ ನಮ್ಮ ರಾಜ್ಯಕ್ಕೆ 62 ಸಾವಿರ ಕೋಟಿ ನಷ್ಟವಾಗಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಗೆ ವಿರೋಧ ಪಕ್ಷದ ಸಂಸದರಿಗೂ ಆಹ್ವಾನ ನೀಡಲಿದ್ದೇವೆ. ಈ ಸಮಯದಲ್ಲಿ ನಾವು ಅನಿವಾರ್ಯವಾಗಿ ಹೋರಾಟ ಮಾಡಬೇಕಿದೆ. ಕರ್ನಾಟಕ ಸರ್ಕಾರ ಮುಖ್ಯಮಂತ್ರಿಗಳ ನೇತೃತ್ವದಲ್ಲಿ 136+2 ಒಟ್ಟು 138 ಶಾಸಕರು, ಎಲ್ಲಾ ಪರಿಷತ್ ಸದಸ್ಯರು ಫೆ.6ರಂದು ದೆಹಲಿಗೆ ತಲುಪಿ, ಫೆ.7ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದ್ದೇವೆ. ನಮ್ಮ ಧ್ವನಿಯನ್ನು ಕೇಂದ್ರ ಸರ್ಕಾರಕ್ಕೆ ಮುಟ್ಟಿಸಲು ಮುಂದಾಗಿದ್ದೇವೆ. ಫೆ.7ರಂದು ಬೆಳಗ್ಗೆ 10 ಗಂಟೆಗೆ ನಮಗೆ ಅನುಮತಿ ನೀಡುವ ಸ್ಥಳದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದ್ದಾರೆ.

    ಮೇಕೆದಾಟುಗೆ ಹೊಸ ಸಮಿತಿ ರಚಿಸಲು ತೀರ್ಮಾನ:
    ಇದೇ ವೇಳೆ ಮೇಕೆದಾಟು ಯೋಜನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ಮೇಕೆದಾಟು ವಿಚಾರವಾಗಿ ಕರ್ನಾಟಕಕ್ಕೆ ಹೊಸ ಆಯಾಮ ಶುರುವಾಗಿದೆ. ನಿನ್ನೆ ಸಭೆಯಲ್ಲಿ ಮತಗಳನ್ನು ಹಾಕಲಾಗಿದೆ. ತಾಂತ್ರಿಕ ಸಮಿತಿ ರಚನೆಗೆ ತೀರ್ಮಾನವಾಗಿದೆ. ನಮ್ಮ ನೀರು ನಮ್ಮ ಹಕ್ಕು. ಅದನ್ನು ಬಳಸಿಕೊಂಡು ಅವರ ಪಾಲಿನ ನೀರನ್ನು ಖಂಡಿತವಾಗಿಯೂ ನೀಡುತ್ತೇವೆ. ಈ ವಿಚಾರವಾಗಿ ನಾವು ಅವರಿಗೆ ಮನದಟ್ಟು ಮಾಡುತ್ತೇವೆ. ಕೇಂದ್ರ ಸರ್ಕಾರ ಕೂಡ ಪರಿಸರ ಇಲಾಖೆ ಅನುಮತಿ ನೀಡಿ ಸಹಕಾರ ನೀಡಬೇಕಾಗುತ್ತದೆ. ಎಲ್ಲಾ ಸಂಸದರು ಒಟ್ಟಾಗಿ ಧ್ವನಿ ಎತ್ತಲಿ ಎಂದು ಮನವಿ ಮಾಡುತ್ತೇನೆ ಎಂದು ನುಡಿದಿದ್ದಾರೆ.