Tag: ಬಜೆಟ್‌ 2025

  • Delhi Election Results | ಬಜೆಟ್ ಡೇ ಸೂಪರ್ ಓವರ್‌ನಲ್ಲಿ ಸೀತಾರಾಮನ್ ʻಸಿಕ್ಸ್‌ʼ – ಬಿಜೆಪಿ ಚಾಂಪಿಯನ್‌!

    Delhi Election Results | ಬಜೆಟ್ ಡೇ ಸೂಪರ್ ಓವರ್‌ನಲ್ಲಿ ಸೀತಾರಾಮನ್ ʻಸಿಕ್ಸ್‌ʼ – ಬಿಜೆಪಿ ಚಾಂಪಿಯನ್‌!

    ನವದೆಹಲಿ: ಬಜೆಟ್ (Budget 2025) ಡೇ ಸೂಪರ್ ಓವರ್‌ನಲ್ಲಿ ನಿರ್ಮಲಾ ಸೀತಾರಾಮನ್ (Nirmala sitharaman) ʻಸೂಪರ್ ಸಿಕ್ಸ್ʼ ಸಿಡಿಸಿದ ಪರಿಣಾಮ ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಏರಿದೆ ಎಂಬ ವಿಶ್ಲೇಷಣೆ ಈಗ ಕೇಳಿ ಬಂದಿದೆ.

    ಫೆಬ್ರವರಿ ಕೊನೆಯವರೆಗೂ ಆಪ್‌ ಮತ್ತು ಬಿಜೆಪಿ ಮಧ್ಯೆ ನೆಕ್‌ ಟು ನೆಕ್‌ ಪೈಪೋಟಿ ಇತ್ತು. ಈ ಸಂದರ್ಭದಲ್ಲಿ ಕೇಂದ್ರ ಬಜೆಟ್‌ ಬಂದಿತ್ತು. ಮಧ್ಯಮ ವರ್ಗದವರನ್ನು ಗುರಿಯಾಗಿಸಿ ನಿರ್ಮಲಾ ಸೀತಾರಾಮನ್‌ ಘೋಷಿಸಿದ ತೆರಿಗೆ ವಿನಾಯಿತಿ ಈ ಚುನಾವಣೆಯಲ್ಲಿ ಬೂಸ್ಟ್‌ ನೀಡಿದ ಪರಿಣಾಮ ಈಗ ದೆಹಲಿಯಲ್ಲಿ (Delhi) 27 ವರ್ಷದ ಬಳಿಕ ಬಿಜೆಪಿ ಅಧಿಕಾರಕ್ಕೆ ಏರಿದೆ.

    ಇದೇ ತಿಂಗಳು ಫೆಬ್ರವರಿ 1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಬಜೆಟ್‌ನಲ್ಲಿ 12 ಲಕ್ಷ ರೂ. ವರೆಗೂ ತೆರಿಗೆ ವಿನಾಯಿತಿ ಘೋಷಿಸಿದರು. ಇದು ರಾಷ್ಟ್ರ ರಾಜಧಾನಿಯಲ್ಲಿರುವ ಮಧ್ಯಮ ವರ್ಗದ 45% ಮತದಾರರ ಮೇಲೆ ಪರಿಣಾಮ ಬೀರಿತ್ತು. ಇದನ್ನೂ ಓದಿ: ದೆಹಲಿಯಲ್ಲಿ ಬಿಜೆಪಿ ಗೆಲುವು, ರಾಜ್ಯದ ಮುಂದಿನ ಚುನಾವಣೆಗೆ ದಿಕ್ಸೂಚಿ – ಆರ್.ಅಶೋಕ್

    ದೆಹಲಿ ಚುನಾವಣೆಯ (Delhi Election) ನೀತಿ ಸಂಹಿತೆ ಜಾರಿಯಾಗಿದ್ದರಿಂದ ಬಜೆಟ್‌ನಲ್ಲಿ ಯಾವುದೇ ದೆಹಲಿ ಸಂಬಂಧ ಯೋಜನೆಗಳನ್ನು ಪ್ರಕಟಿಸಬಾರದು ಎಂದು ಕೇಂದ್ರ ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿತ್ತು. ಹೀಗಿದ್ದರೂ ಮಾಸ್ಟರ್‌ ಪ್ಲ್ಯಾನ್‌ ಮಾಡಿದ್ದ ಬಿಜೆಪಿ ಮಧ್ಯಮ ವರ್ಗದ ಜನ ಹೆಚ್ಚಾಗಿರುವ ದೆಹಲಿಯನ್ನ ಕೇಂದ್ರೀಕರಿಸಿ ತೆರಿಗೆಯಲ್ಲಿ ವಿನಾಯತಿ ನೀಡಿತ್ತು. ಇದು ಕೇಸರಿ ಪಡೆಗೆ ದೊಡ್ಡ ಶಕ್ತಿ ತಂದುಕೊಟ್ಟಿತು. 2020ರಲ್ಲಿ ಮಧ್ಯಮ ವರ್ಗದ ಬೆಂಬಲದಿಂದಲೇ ಆಮ್ ಆದ್ಮಿ ಪಕ್ಷ ಅಧಿಕಾರದ ಗದ್ದುಗೆ ಹಿಡಿದಿತ್ತು.

    2024ರಲ್ಲಿ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿಗೆ ಇದೇ ಮಧ್ಯಮ ವರ್ಗ ಸಂಪೂರ್ಣ ಬೆಂಬಲ ನೀಡಿತ್ತು. ಈ ಬಜೆಟ್‌ನಲ್ಲೂ ಪ್ರಧಾನಿ ಮೋದಿ ಮಧ್ಯಮ ವರ್ಗವನ್ನು ಕೇಂದ್ರೀಕರಿಸಿ ಆದಾಯ ತೆರಿಗೆ ಮಿತಿ ಸಡಿಲಿಕೆ ನೀಡಿದ್ದರಿಂದಲೇ ದೆಹಲಿ ಜನರ ಒಲವು ಬಿಜೆಪಿಯತ್ತ ವಾಲಿತು.

    ಮಧ್ಯಮ ವರ್ಗದವರ ಆಕ್ರೋಶ ತಣ್ಣಗೆ ಮಾಡಲು ನಿರ್ಮಲಾ ಸೀತಾರಾಮನ್‌ 2024 ಜುಲೈನಲ್ಲೇ 12 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಘೋಷಿಸಬಹುದಿತ್ತು. ಆದ್ರೆ ಆ ಸಂದರ್ಭದಲ್ಲಿ ಯಾವುದೇ ಮಹತ್ವದ ತೆರಿಗೆ ವಿನಾಯಿತಿ ಘೋಷಣೆ ಮಾಡದ ಸೀತಾರಾಮನ್‌ ಈ ಬಜೆಟ್‌ನಲ್ಲಿ ಪ್ರಸ್ತಾಪಿಸಿದ್ದರು. ಚುನಾವಣೆಯ ಹತ್ತಿರ ಇರುವಾಗಲೇ ಈ ಐತಿಹಾಸಿಕ ಘೋಷಣೆ ಪ್ರಕಟವಾದ್ದರಿಂದ ದೆಹಲಿಯ ಮತದಾರರು ಈ ಬಾರಿ ಬಿಜೆಪಿ ಕೈ ಹಿಡಿದಿದ್ದಾರೆ.

    ದೆಹಲಿಯ 70 ಕ್ಷೇತ್ರಗಳಿಗೆ ಫೆಬ್ರವರಿ 5ರಂದು ನಡೆದ ಚುನಾವಣೆಯಲ್ಲಿ 60.42% ರಷ್ಟು ಮತದಾನ ನಡೆದಿತ್ತು. ಇದನ್ನೂ ಓದಿ: ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣಗೆ ಮದುವೆ ಆಮಂತ್ರಣ ನೀಡಿದ ಡಾಲಿ

    ಇನ್ನೂ ಕಳೆದ 25 ವರ್ಷಗಳಿಂದ ಮರೀಚಿಕೆಯಾಗಿರುವ ಅಧಿಕಾರವನ್ನು ದಕ್ಕಿಸಿಕೊಳ್ಳಲು ಬಿಜೆಪಿ ಸರ್ವ ಶಕ್ತಿಗಳನ್ನು ಪಣಕ್ಕೊಡಿತ್ತು. ದಶಕದಿಂದ ಇರುವ ಅಧಿಕಾರವನ್ನು ಉಳಿಸಿಕೊಳ್ಳಲು ಹಿಂದೆಂದಿಗಿಂತಲೂ ಹೆಚ್ಚು ಉಚಿತ ಯೋಜನೆಗಳನ್ನು ಆಪ್ (AAP) ಘೋಷಿಸಿತ್ತು. ಒಂದಿಷ್ಟು ಸೀಟ್‌ಗಳನ್ನಾದರೂ ಗೆದ್ದು ಮಾನ ಉಳಿಸಿಕೊಳ್ಳಲು ಕಾಂಗ್ರೆಸ್ (Congress) ಸಹ ಭರವಸೆಗಳ ಮೇಲೆ ಭರವಸೆ ನೀಡಿತ್ತು. ಆದ್ರೆ ಒಂದೂ ಖಾತೆ ತೆರೆಯದೆ ಕಾಂಗ್ರೆಸ್‌ ಮಕಾಡೆ ಮಲಗಿತು.

  • ಕೇರಳಕ್ಕೆ ಅನುದಾನ ಬೇಕಿದ್ರೆ ʻ ಹಿಂದುಳಿದ ರಾಜ್ಯʼ ಎಂದು ಘೋಷಿಸಲಿ: ಜಾರ್ಜ್‌ ಕುರಿಯನ್‌

    ಕೇರಳಕ್ಕೆ ಅನುದಾನ ಬೇಕಿದ್ರೆ ʻ ಹಿಂದುಳಿದ ರಾಜ್ಯʼ ಎಂದು ಘೋಷಿಸಲಿ: ಜಾರ್ಜ್‌ ಕುರಿಯನ್‌

    ತಿರುವನಂತಪುರಂ: ಕೇರಳಕ್ಕೆ (Kerala) ಹೆಚ್ಚಿನ ಅನುದಾನ ಬೇಕಿದ್ದರೆ ಹಿಂದುಳಿದ ರಾಜ್ಯವೆಂದು ಘೋಷಿಸಲಿ ಎಂದು ಕೇಂದ್ರ ಸಚಿವ ಜಾರ್ಜ್‌ ಕುರಿಯನ್‌ (George Kurian) ಹೇಳಿದ್ದಾರೆ.

    2022ರ ಬಜೆಟ್‌ನಲ್ಲಿ (Budget 2025) ಕೇಂದ್ರ ಸರ್ಕಾರ ಕೇರಳ ರಾಜ್ಯವನ್ನು ಕಡೆಗಣಿಸಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕುರಿಯನ್‌, ಕೇರಳ ರಾಜ್ಯವು ಕೇಂದ್ರದಿಂದ ಹೆಚ್ಚಿನ ಅನುದಾನ ಬಯಸಿದ್ರೆ, ಹಿಂದುಳಿದ ರಾಜ್ಯ ಎಂದು ಘೋಸಿಸಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ವರ `ಚೋಲಿ ಕೆ ಪೀಚೆ ಕ್ಯಾ ಹೈ’ ಡ್ಯಾನ್ಸ್ ಮಾಡಿದ್ದಕ್ಕೆ ಮದ್ವೆ ನಿಲ್ಲಿಸಿದ ವಧುವಿನ ತಂದೆ

    ಅಭಿವೃದ್ಧಿ ಸೂಚ್ಯಂಕದಲ್ಲಿ ಹಿಂದೆ ಬಿದ್ದ ರಾಜ್ಯಗಳಿಗೆ ಕೇಂದ್ರವು ವಿಶೇಷ ಹಣಕಾಸಿನ ಪ್ಯಾಕೇಜ್‌ಗಳನ್ನ ಹಂಚುತ್ತದೆ. ಹಾಗಾಗಿ ನೀವು ಕೇರಳ ಹಿಂದುಳಿದಿದೆ. ರಸ್ತೆಗಳು ಸರಿಯಿಲ್ಲ, ಉತ್ತಮ ಶಿಕ್ಷಣವಿಲ್ಲ, ಮೌಲ ಸೌಕರ್ಯಗಳಲ್ಲಿ ಹಿಂದುಳಿದಿದೆ ಎಂದು ನೀವು ಘೋಷಿಸಿದ್ರೆ, ಹಣಕಾಸು ಆಯೋಗ ಪರಿಶೀಲಿಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಬಳಿಕ ಹೆಚ್ಚಿನ ಅನುದಾನ ಸಿಗಲಿದೆ ಎಂದು ಹೇಳಿದ್ದಾರೆ.

    ಸಚಿವರ ಈ ಹೇಳಿಕೆ ತೀವ್ರ ರಾಜಕೀಯ ಗದ್ದಲಕ್ಕೆ ಕಾರಣವಾಗಿದೆ. ಸಚಿವರ ಹೇಳಿಕೆಯು ಕೇರಳ ವಿರೋಧಿ ನಿಲುವನ್ನು ತೋರಿಸುತ್ತದೆ ಎಂದು ರಾಜ್ಯದ ಆಡಳಿತ ಪಕ್ಷದ ನಾಯಕರು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಪಟ್ಟಾ ಜಮೀನು ಹೊಂದಿರುವವರ ಅರಣ್ಯ ಹಕ್ಕು ಅರ್ಜಿ ಪರಿಶೀಲನೆಗೆ ಈಶ್ವರ್ ಖಂಡ್ರೆ ಸೂಚನೆ

    ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ತಮ್ಮ 8ನೇ ಬಜೆಟ್‌ ಭಾಷಣ ಮಂಡಿಸಿದ ಬಳಿಕ ಕೇರಳ ಸಿಎಂ ಇದು ನಿರಾಶಾದಾಯಕ ಬಜೆಟ್‌. ಕಳೆದ ಜುಲೈನಲ್ಲಿ ಭೂಕುಸಿತ ಸಂಭವಿಸಿದ ವಯನಾಡನ್ನು ಮತ್ತೆ ನಿರ್ಮಿಸಲು ಅನುದಾನಕ್ಕೆ ಮನವಿ ಮಾಡಿದ್ದೆವು. ಆದ್ರೆ ಕೇಂದ್ರ ಸರ್ಕಾರ ನಮ್ಮ ಮನವಿಯನ್ನು ಕಡೆಗಣಿಸಿದೆ ಎಂದು ಅಸಮಾಧಾನ ಹೊರಹಾಕಿದ್ದರು.

    ವಯನಾಡ್‌ ಭೂಕುಸಿತಕ್ಕೆ ಸಂಬಂಧಿಸಿದಂತೆ ಅನುದಾನ ಹಾಗೂ 24,000 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್‌ ಸಹ ನೀಡುವಂತೆ ಕೋರಿದ್ದೆವು. ವಿಝಿಂಜಂ ಬಂದರಿನ ರಾಷ್ಟ್ರೀಯ ಪ್ರಾಮುಖ್ಯತೆ ಪರಿಗಣಿಸಿ, ಅದಕ್ಕೂ ಬೆಂಬಲವನ್ನು ಕೋರಿದ್ದೆವು. ಇದ್ಯಾವುದನ್ನು ಸರ್ಕಾರ ಪರಿಗಣಿಸಿಲ್ಲ. ಕೇರಳ ಶಿಕ್ಷಣ ಹಾಗೂ ಇತರ ಕ್ಷೇತ್ರಗಳಲ್ಲಿ ಮುಂದಿದೆ. ಆದ್ರೆ ಕೆಲವು ಕ್ಷೇತ್ರಗಳಲ್ಲಿ ಹಿಂದುಳಿದಿದೆ. ಆ ಕ್ಷೇತ್ರಗಳ ಉನ್ನತೀಕರಣಕ್ಕಾಗಿ ಅನುದಾನ ಕೇಳಿದರೂ ಕಡೆಗಣಿಸಲಾಗಿದೆ ಎಂದು ಅಕ್ಷೇಪಿಸಿದ್ದರು.

  • Budget 2025 | ದೆಹಲಿ ಚುನಾವಣೆಯಲ್ಲಿ ಬಿಜೆಪಿಗೆ ಬಲ ನೀಡುತ್ತಾ ʻಮಿಡಲ್ ಕ್ಲಾಸ್ʼ ಬಜೆಟ್‌

    Budget 2025 | ದೆಹಲಿ ಚುನಾವಣೆಯಲ್ಲಿ ಬಿಜೆಪಿಗೆ ಬಲ ನೀಡುತ್ತಾ ʻಮಿಡಲ್ ಕ್ಲಾಸ್ʼ ಬಜೆಟ್‌

    ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆ (Delhi Elections) ಹೊತ್ತಲ್ಲೇ ಬಜೆಟ್ ಮೂಲಕ ಮಧ್ಯಮ ವರ್ಗದ ಮತಗಳ ಮೇಲೆ ಬಿಜೆಪಿ (BJP) ಕೇಂದ್ರೀಕರಿಸಿದೆ.

    12 ಲಕ್ಷದವರೆಗೂ ತೆರಿಗೆ ವಿನಾಯತಿ ನೀಡಿದ್ದು ಇದು ರಾಷ್ಟ್ರ ರಾಜಧಾನಿಯಲ್ಲಿರುವ ಮಧ್ಯಮ ವರ್ಗದ 45% ಮತದಾರರ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ. ಇದನ್ನೂ ಓದಿ: ಕಿಸಾನ್ ಕ್ರೆಡಿಟ್‌ಕಾರ್ಡ್ ಸಾಲದ ಮಿತಿ 5 ಲಕ್ಷಕ್ಕೆ ಹೆಚ್ಚಳ – 2028ರ ವರೆಗೂ ಜಲಜೀವನ್ ಮಿಷನ್ ವಿಸ್ತರಣೆ

    ದೆಹಲಿ ಕೇಂದ್ರಿತ ಯಾವುದೇ ಘೋಷಣೆಗಳನ್ನು ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿತ್ತು, ಈ ನಡುವೆ ಆದಾಯ ತೆರಿಗೆಯಲ್ಲಿ ವಿನಾಯತಿ ನೀಡಿರುವುದು ಚುನಾವಣೆಯಲ್ಲಿ ಬಿಜೆಪಿ ನಾಯಕರಿಗೆ ಶಕ್ತಿ ತುಂಬಿದಂತಾಗಲಿದೆ. 2020ರಲ್ಲಿ, ಮಧ್ಯಮ ವರ್ಗದ ಬೆಂಬಲದಿಂದ ಆಮ್ ಆದ್ಮಿ ಪಕ್ಷ ಗೆಲುವಿನತ್ತ ಸಾಗಿತು.

    2024ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸಂಪೂರ್ಣ ಬೆಂಬಲ ನೀಡಿದ್ದು ಇದೇ ಮಧ್ಯಮ ವರ್ಗ, ಈಗ ಬಜೆಟ್ ನಲ್ಲೂ ಪ್ರಧಾನಿ ನರೇಂದ್ರ ಮೋದಿ ಮಧ್ಯಮ ವರ್ಗವನ್ನು ಕೇಂದ್ರೀಕರಿಸಿದ್ದು ಆದಾಯ ತೆರಿಗೆ ಮಿತಿ ಸಡಿಲಿಕೆಯಿಂದ ಬಿಜೆಪಿಯತ್ತ ದೆಹಲಿಯಲ್ಲಿ ಒಲವು ಹೆಚ್ಚಬಹುದು ಎನ್ನಲಾಗುತ್ತಿದೆ. ಇದನ್ನೂ ಓದಿ: Budget 2025: ದೇಶದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಡೇಕೇರ್‌ ಕ್ಯಾನ್ಸರ್‌ ಕೇಂದ್ರ ಸ್ಥಾಪನೆ

  • ಕೇಂದ್ರ ಸರ್ಕಾರದ ಬಜೆಟ್ ದೊಡ್ಡ ದೊಡ್ಡ ಘೋಷಣೆಗಳಿಗಷ್ಟೇ ಸೀಮಿತ: ಪ್ರಿಯಾಂಕ್‌ ಖರ್ಗೆ

    ಕೇಂದ್ರ ಸರ್ಕಾರದ ಬಜೆಟ್ ದೊಡ್ಡ ದೊಡ್ಡ ಘೋಷಣೆಗಳಿಗಷ್ಟೇ ಸೀಮಿತ: ಪ್ರಿಯಾಂಕ್‌ ಖರ್ಗೆ

    ಕಲಬುರಗಿ: ಕೇಂದ್ರ ಸರ್ಕಾರದ (Union Government) ಇಂತಹ 10 ಬಜೆಟ್ ನೋಡಿದ್ದೇವೆ. ಎಲ್ಲ ಬಜೆಟ್‌ನಲ್ಲಿಯೂ ಘೋಷಣೆಗಳು ಮಾತ್ರವೇ ಇರುತ್ತವೆಯೇ ಹೊರತು, ಅದರಲ್ಲಿ ಜನರಿಗೆ ಗಣನೀಯವಾಗಿ ಅನುಕೂಲ ಆಗುವಂತಹದ್ದು ಇಲ್ಲ. ಕಾರ್ಮಿಕರು, ಮಹಿಳೆಯರು, ಯುವಕರಿಗೆ, ಆದಾಯ ತೆರಿಗೆ ಪಾವತಿದಾರರು, ಎಸ್‌ಎಂಇ, ಎಂಎಸ್‌ಎಂಇ, ನವೋದ್ಯಮಿಗಳಿಗೆ ಸರಿಯಾದ ಸ್ಪಂದನೆ ಸಿಕ್ಕಿಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆದಾಯ ತೆರಿಗೆ ಸ್ಲ್ಯಾಬ್ ಬಗ್ಗೆ ಮಾತನಾಡುತ್ತಿದ್ದಾರೆ. ಈ ಹಿಂದೆ ಜಿಎಸ್‌ಟಿ (GST) ಬಗ್ಗೆ, ಆದಾಯ ತೆರಿಗೆ ಬಗ್ಗೆಯೂ ಹೀಗೆ ಮಾತನಾಡಿದ್ದರು. ಈವರೆಗೂ ಅವರು ಟ್ಯಾಕ್ಸೇಷನ್ ಪದ್ದತಿಯನ್ನು ಸರಿಯಾಗಿ ಅಳವಡಿಸಿಕೊಂಡಿಲ್ಲ ಎಂದಿದ್ದಾರೆ. ಇದನ್ನೂ ಓದಿ: ರಕ್ತಾಭಿಷೇಕ ನಡೆದಿದ್ದು ಬಲಪಡಿಸೋದಕ್ಕಲ್ಲ, ನನ್ನ ವಶೀಕರಣಕ್ಕೆ – ಸ್ನೇಹಮಯಿ ಕೃಷ್ಣ ದೂರು

    ಕೇಂದ್ರದ ಯಾವ ಯೋಜನೆ ಸಂಪೂರ್ಣವಾಗಿ ಯಶಸ್ವಿಯಾಗಿದೆ? ಸ್ಟಾರ್ಟ್‌ಅಪ್ ಇಂಡಿಯಾ ಯೋಜನೆಯಲ್ಲಿ 9 ವರ್ಷದ ಹಿಂದೆ ನೆರವು ಘೋಷಣೆ ಮಾಡಿದ್ದರು. ಈವರೆಗೂ ಕೊಟ್ಟಿದ್ದು 454 ಕೋಟಿ ರೂ. ಅಷ್ಟೆ. ಅವರು ಅಲಂಕಾರಿಕ ಪದಗಳನ್ನ ಬಳಸಿ ಘೋಷಣೆಗಳನ್ನು ಮಾಡುವುದರಲ್ಲಿ ಮುಂದಿದ್ದಾರೆ. ಆದರೆ ತಳಮಟ್ಟದಿಂದ ಅನುಷ್ಠಾನ ಶೂನ್ಯ ಎಂದು ಅಸಮಾಧಾನ ಹೊರಹಾಕಿದ್ರು. ಇದನ್ನೂ ಓದಿ: ಅನಗತ್ಯ ವೆಚ್ಚ, ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದ ಕೇಂದ್ರ ಸರ್ಕಾರ: ಆರ್‌.ಅಶೋಕ್

    ಕೇಂದ್ರದ ಬಳಿ ಬಳಿ ದುಡ್ಡಿಲ್ಲ. ಕರ್ನಾಟಕದಲ್ಲಿ ಜಲಜೀವನ್ ಮಿಷನ್‌ಗೆ 3,500 ಕೋಟಿ ರೂ. ಕೊಡಬೇಕು. ಆದ್ರೆ ಕೊಟ್ಟಿರೋದು 500 ಕೋಟಿ ರೂ. ಮಾತ್ರ. ನಾವು ಕೇಳಿದಾಗ, ನಮ್ಮ ಬಳಿ ದುಡ್ಡಿಲ್ಲ ಎನ್ನುತ್ತಾರೆ. ಕೆಲಸ ನಿಲ್ಲಬಾರದು ಎಂಬ ಕಾರಣಕ್ಕಾಗಿ ಕೇಂದ್ರ ಸರ್ಕಾರದ ಜವಾಬ್ದಾರಿಯನ್ನು ರಾಜ್ಯ ಸರ್ಕಾರವೇ ನಿಭಾಯಿಸುತ್ತಿದೆ. ಉಳಿದ 3,000 ಕೋಟಿ ಮೊತ್ತವನ್ನು ನಾವೇ ಬಿಡುಗಡೆ ಮಾಡಿದ್ದೇವೆ. ಕೇಂದ್ರ ಸರ್ಕಾರದ ಬಜೆಟ್ ದೊಡ್ಡ ದೊಡ್ಡ ಘೋಷಣೆಗಳಿಗೆ ಸೀಮಿತವಾಗಿದೆ. ಆದರೆ ಅವುಗಳ ಪರಿಪೂರ್ಣ ಅನುಷ್ಠಾನ ಎಂದಿಗೂ ನಡೆದಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.

  • ಮಧ್ಯಮ ವರ್ಗಕ್ಕೆ ಆರ್ಥಿಕ ಶಕ್ತಿ ತುಂಬುವ ಐತಿಹಾಸಿಕ ಬಜೆಟ್: ನಿಖಿಲ್

    ಮಧ್ಯಮ ವರ್ಗಕ್ಕೆ ಆರ್ಥಿಕ ಶಕ್ತಿ ತುಂಬುವ ಐತಿಹಾಸಿಕ ಬಜೆಟ್: ನಿಖಿಲ್

    ರಾಮನಗರ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ರವರು (Nirmala Sitharaman) ಮಂಡನೆ ಮಾಡಿರೋದು ಐತಿಹಾಸಿಕ ಬಜೆಟ್. ಮಧ್ಯಮ ವರ್ಗಕ್ಕೆ ಅನುಕೂಲ ಆಗುವಂತೆ ನಿರ್ಣಯ ಮಾಡಿದ್ದಾರೆ ಎಂದು ಕೇಂದ್ರ ಬಜೆಟ್ ಬಗ್ಗೆ ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಪ್ರತಿಕ್ರಿಯೆ ನೀಡಿದ್ದಾರೆ.

    ರಾಮನಗರದಲ್ಲಿ (Ramanagara) ಮಾಧ್ಯಮಗಳ ಜೊತೆ ಮಾತನಾಡಿದ ಅವರು, 12 ಲಕ್ಷದ ವರೆಗೂ ತೆರಿಗೆ ವಿನಾಯಿತಿ ನೀಡಿರುವುದು ಖುಷಿಯ ವಿಚಾರ. ಮಧ್ಯಮ ವರ್ಗಕ್ಕೆ ಆರ್ಥಿಕ ಶಕ್ತಿ ತುಂಬುವ ಕೆಲಸ ಆಗಿದೆ. ಪ್ರಧಾನ ಮಂತ್ರಿಗಳ ಕನಸಿನಂತೆ ಮೇಕ್ ಇನ್ ಇಂಡಿಯಾಗೆ ಒತ್ತು ನೀಡಲಾಗಿದೆ ಎಂದರು. ಇದನ್ನೂ ಓದಿ: ಬಜೆಟ್‌ ಮಂಡನೆ ವೇಳೆ ನಿರ್ಮಲಾ ಉಲ್ಲೇಖಿಸಿದ ಕವಿತೆ ಬರೆದ ಗುರಜದ ವೆಂಕಟ ಅಪ್ಪರಾವ್ ಯಾರು ಗೊತ್ತಾ?

    ಚನ್ನಪಟ್ಟಣ ಗೊಂಬೆ ಉದ್ಯಮಕ್ಕೆ ಪ್ರೋತ್ಸಾಹ ನೀಡಿರುವುದು ಸ್ವಾಗತಾರ್ಹ. ಬಜೆಟ್ ಬಗ್ಗೆ ಪರ-ವಿರೋಧ ಚರ್ಚೆ ಸಹಜ. ಆದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜ್ಯಕ್ಕೆ ಅನುದಾನ ಬರುವ ನಿರೀಕ್ಷೆ ಇದೆ. ದೇಶದ ಅಭಿವೃದ್ಧಿ ದೃಷ್ಟಿಯಿಂದ ಇದೊಂದು ಉತ್ತಮ ಬಜೆಟ್ ಎಂದು ತಿಳಿಸಿದರು. ಇದನ್ನೂ ಓದಿ: ಅನಗತ್ಯ ವೆಚ್ಚ, ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದ ಕೇಂದ್ರ ಸರ್ಕಾರ: ಆರ್‌.ಅಶೋಕ್

  • ಅನಗತ್ಯ ವೆಚ್ಚ, ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದ ಕೇಂದ್ರ ಸರ್ಕಾರ: ಆರ್‌.ಅಶೋಕ್

    ಅನಗತ್ಯ ವೆಚ್ಚ, ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದ ಕೇಂದ್ರ ಸರ್ಕಾರ: ಆರ್‌.ಅಶೋಕ್

    ಬೆಂಗಳೂರು: ಯುಪಿಎ ಅವಧಿಯಲ್ಲಿ ಅನಗತ್ಯ ವೆಚ್ಚ ಹಾಗೂ ಲೂಟಿಯಿಂದಾಗಿ ಅಧಿಕ ಗಾತ್ರದ ಬಜೆಟ್‌ ಮಂಡಿಸಲು ಸಾಧ್ಯವಾಗುತ್ತಿರಲಿಲ್ಲ. ಅವುಗಳಿಗೆ ಕಡಿವಾಣ ಹಾಕಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ, ಅತ್ಯಧಿಕ ಗಾತ್ರದ ಬಜೆಟ್‌ (Union Budget 2025) ಮಂಡಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ (R.Ashok) ಹೇಳಿದರು.

    ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2013-14 ರ ಮನಮೋಹನ್‌ ಸಿಂಗ್‌ ಸರ್ಕಾರದಲ್ಲಿ ಬಜೆಟ್‌ ಗಾತ್ರ 16,65,297 ಕೋಟಿ ರೂ. ಆಗಿತ್ತು. 2025-26 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ 50,65,345 ಕೋಟಿ ರೂ. ಗಾತ್ರದ ಬಜೆಟ್‌ ಮಂಡಿಸಿದೆ. ಲೂಟಿಯಾಗುತ್ತಿದ್ದ ಹಣವನ್ನು ಮರಳಿ ತಂದಿದ್ದರಿಂದ ಬಜೆಟ್‌ ಗಾತ್ರ ಹೆಚ್ಚಾಗಿದೆ. ಹಿಂದೆ 11,09,997 ಕೋಟಿ ರೂ. ಯೋಜನೇತರ ವೆಚ್ಚವಾಗಿದ್ದರೆ, ಈಗ ಅದು 39,44,255 ಕೋಟಿ ರೂ. ಗೆ ಏರಿದೆ. ಬಂಡವಾಳ ವೆಚ್ಚ ಆಗ 2,29,129 ಕೋಟಿ ರೂ. (13.7%) ಆಗಿದ್ದು, ಈಗ 11,21,090 ಕೋಟಿ ರೂ. ಆಗಿದೆ. ಅಂದರೆ ಬಂಡವಾಳ ವೆಚ್ಚ 9 ಲಕ್ಷ ಕೋಟಿ ರೂ. (22.13%) ಏರಿಕೆ ಕಂಡಿದೆ. ಅಂದರೆ ತೆರಿಗೆ ಸೋರಿಕೆ, ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಲಾಗಿದೆ ಎಂದರು. ಇದನ್ನೂ ಓದಿ: Union Budget 2025| ಬಜೆಟ್‌ನಲ್ಲಿ ಕರ್ನಾಟಕಕ್ಕೆ ಸಿಕ್ಕಿದ್ದು ಏನು?

    ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಸಿಗುವ ಸಾಲದ ಮಿತಿಯನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ. ಗೆ ಏರಿಸಲಾಗಿದೆ. ಸ್ಟಾರ್ಟ್‌ಅಪ್ ಕಂಪನಿಗಳಿಗೆ 10 ಕೋಟಿ ರೂ.ನಿಂದ 20 ಕೋಟಿ ರೂ. ವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ. ಮೊದಲ ಬಾರಿ ಉದ್ಯಮ ಆರಂಭಿಸುವ ಎಸ್‌ಸಿ, ಎಸ್‌ಟಿ ವರ್ಗದ 5 ಲಕ್ಷ ಮಹಿಳೆಯರಿಗೆ ಹೊಸ ಯೋಜನೆಯಡಿ ಟರ್ಮ್‌ಲೋನ್‌ ನೀಡಲಾಗುತ್ತದೆ ಎಂದರು.

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವಾಗುತ್ತಿದೆ. ಕೇಂದ್ರ ಸರ್ಕಾರದಿಂದ 1 ಕೋಟಿ ತಾಯಂದಿರಿಗೆ ಪೌಷ್ಟಿಕ ಆಹಾರ ನೀಡುವ ಯೋಜನೆ ತರಲಾಗಿದೆ. ಇದು ಬಾಣಂತಿಯರ ಆರೋಗ್ಯ ರಕ್ಷಣೆಗೆ ಸಹಾಯವಾಗಲಿದೆ ಎಂದು ತಿಳಿಸಿದರು.

    ಮಧ್ಯಮ ವರ್ಗಕ್ಕೆ ಉಡುಗೊರೆ
    ಮಧ್ಯಮ ವರ್ಗಕ್ಕೆ ಬಂಪರ್‌ ಉಡುಗೊರೆ ನೀಡಲಾಗಿದೆ. 12 ಲಕ್ಷ ರೂ. ವರೆಗೆ ತೆರಿಗೆ ವಿನಾಯಿತಿ ನೀಡಿರುವುದರಿಂದ ಜನರಿಗೆ ಅನುಕೂಲವಾಗಿದೆ. ಸಿಎಂ ಸಿದ್ದರಾಮಯ್ಯ ಗಾಳಿ ಒಂದನ್ನು ಬಿಟ್ಟು ಎಲ್ಲಕ್ಕೂ ತೆರಿಗೆ ವಿಧಿಸಿದ್ದಾರೆ. ಮೋದಿ ಸರ್ಕಾರ ಯಾವುದೇ ತೆರಿಗೆಯನ್ನು ಹೇರಿಲ್ಲ ಎಂದರು. ಇದನ್ನೂ ಓದಿ: Budget 2025: ಬಾಡಿಗೆ ಮೇಲಿನ TDS ಕಡಿತ ಮಿತಿ 6 ಲಕ್ಷಕ್ಕೆ ಏರಿಕೆ

    ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್‌ ಕೇಂದ್ರ ಆರಂಭಿಸುವ ಮೂಲಕ ಬಡವರಿಗೆ ಅನುಕೂಲ ಕಲ್ಪಿಸಲಾಗಿದೆ. ಕ್ಯಾನ್ಸರ್‌ ಸೇರಿದಂತೆ 36 ಜೀವ ರಕ್ಷಕ ಔಷಧಗಳಿಗೆ ಕಸ್ಟಮ್ಸ್ ಸುಂಕದಿಂದ ಸಂಪೂರ್ಣವಾಗಿ ವಿನಾಯಿತಿ ನೀಡಲಾಗಿದೆ. ಮುಂದಿನ ವರ್ಷದಿಂದ ವೈದ್ಯಕೀಯ ಕಾಲೇಜಿನಲ್ಲಿ 10 ಸಾವಿರ ಸೀಟುಗಳನ್ನು ಹೆಚ್ಚಿಸಲಾಗುತ್ತದೆ. ಟಿವಿ, ಸ್ವದೇಶಿ ಉಡುಪು, ಚರ್ಮ ಉತ್ಪನ್ನಗಳ ದರ ಇಳಿಕೆಯಾಗಲಿದೆ ಎಂದು ಹೇಳಿದರು.

    ರಾಜ್ಯಗಳಿಗೆ 50 ವರ್ಷಗಳ ಬಡ್ಡಿ ರಹಿತ ಸಾಲಕ್ಕಾಗಿ 1.5 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ. ಆದರೆ ಕಾಂಗ್ರೆಸ್‌ ಇನ್ನೂ ಕೇಂದ್ರದಿಂದ ತಾರತಮ್ಯ ಎಂದು ಹೇಳುತ್ತಲೇ ಇದೆ. ಆದಾಯ ತೆರಿಗೆ ಮಿತಿ ಹೆಚ್ಚಿಸಿದ್ದಕ್ಕೆ ಕಾಂಗ್ರೆಸ್‌ ನಾಯಕರು ಅಭಿನಂದನೆ ತಿಳಿಸಿಲ್ಲ. ಜಲಜೀವನ್‌ ಮಿಷನ್‌ ಯೋಜನೆಯನ್ನು ವಿಸ್ತರಣೆ ಮಾಡಲಾಗಿದೆ. ಈ ಎಲ್ಲ ಯೋಜನೆಗಳು ರಾಜ್ಯದ ಜನರಿಗೆ ಸಿಗಲಿದೆ. ಆದರೆ ಕರ್ನಾಟಕಕ್ಕೆ ಏನೂ ನೀಡಿಲ್ಲ ಎಂದು ಕಾಂಗ್ರೆಸ್‌ ನಾಯಕರು ಸುಳ್ಳು ಹೇಳುತ್ತಿದ್ದಾರೆ ಎಂದು ದೂರಿದರು. ಇದನ್ನೂ ಓದಿ: 3ನೇ ಅತಿದೊಡ್ಡ ಆರ್ಥಿಕ ರಾಷ್ಟ್ರಕ್ಕೆ ಸ್ಫೂರ್ತಿದಾಯಕ ಬಜೆಟ್ – ಪ್ರಹ್ಲಾದ್ ಜೋಶಿ

    ಬೆಂಗಳೂರಿಗೆ 65 ಸಾವಿರ ಕೋಟಿ ರೂ., ನೀರಾವರಿಗೆ 85 ಸಾವಿರ ಕೋಟಿ ರೂ. ಅನುದಾನವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೇಳಿದ್ದಾರೆ. ಮನಮೋಹನ್‌ ಸಿಂಗ್‌ ಅವಧಿಯಲ್ಲಿ ಎಷ್ಟು ಅನುದಾನ ಬಂದಿದೆ ಎಂದು ಮೊದಲು ಲೆಕ್ಕ ಕೊಡಲಿ. ಸಿಎಂ ಸಿದ್ದರಾಮಯ್ಯ ತೆರಿಗೆಯನ್ನು ಹೋಲಿಕೆ ಮಾಡುತ್ತಾರೆ. ಆಗ ಎಲ್ಲವೂ ಸೋರಿಕೆಯಾಗುತ್ತಿದ್ದುದರಿಂದ ಹೆಚ್ಚು ಅನುದಾನ ಬರುತ್ತಿರಲಿಲ್ಲ. ಈಗ ಸೋರಿಕೆ ನಿಯಂತ್ರಣವಾಗಿದೆ. ಕಾಂಗ್ರೆಸ್‌ ನಾಯಕರು ಕಾಮಾಲೆ ಕಣ್ಣನ್ನು ಬದಿಗಿಟ್ಟು ಮಾತಾಡಲಿ ಎಂದರು.

    ಸಿಎಂ ಸಿದ್ದರಾಮಯ್ಯನವರ ಸಂತೆ ಭಾಷಣವನ್ನು ಯಾರೂ ಕೇಳುವುದಿಲ್ಲ. ಮನಮೋಹನ್‌ ಸಿಂಗ್‌ ಅವರನ್ನು ಕೇಳಿದ ಕೂಡಲೇ ಅನುದಾನ ಕೊಟ್ಟಿದ್ದಾರಾ? ಯಾವ ರಾಜ್ಯಕ್ಕೆ ಎಷ್ಟು ಅನುದಾನ ನೀಡಬೇಕೆಂದು ಇವರೇ ನಿಯಮ ಮಾಡಿದ್ದು, ಈಗ ಇವರೇ ಅದನ್ನು ವಿರೋಧಿಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯನವರಿಗೆ ಜನರೇ ಚೊಂಬು ಕೊಡುವ ಕಾಲ ಬರಲಿದೆ. ಕಾಂಗ್ರೆಸ್‌ ಶಾಸಕರೇ ಸರ್ಕಾರದಿಂದ ಅನುದಾನ ಬಂದಿಲ್ಲ ಎಂದು ದೂರಿದ್ದಾರೆ. ಈ ಸಮಸ್ಯೆಯನ್ನು ಮೊದಲು ಪರಿಹರಿಸಲಿ. ಈ ಸರ್ಕಾರ ಬೀಡಾಡಿ ದನಗಳಂತಾಗಿದೆ. ಇಲ್ಲಿ ಯಾರೂ ಹೇಳುವವರು, ಕೇಳುವವರು ಇಲ್ಲ ಎಂದು ತಿಳಿಸಿದರು.

  • Budget 2025: ಬಾಡಿಗೆ ಮೇಲಿನ TDS ಕಡಿತ ಮಿತಿ 6 ಲಕ್ಷಕ್ಕೆ ಏರಿಕೆ

    Budget 2025: ಬಾಡಿಗೆ ಮೇಲಿನ TDS ಕಡಿತ ಮಿತಿ 6 ಲಕ್ಷಕ್ಕೆ ಏರಿಕೆ

    – ಹಿರಿಯ ನಾಗರಿಕರಿಗೆ ಬಡ್ಡಿ ಮೇಲಿನ ತೆರಿಗೆ ವಿನಾಯಿತಿ ಮಿತಿ 1 ಲಕ್ಷಕ್ಕೆ ಹೆಚ್ಚಳ

    ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಮಂಡಿಸಿದ 2025-26ನೇ ಸಾಲಿನ ಆಯವ್ಯಯದಲ್ಲಿ, ಬಾಡಿಗೆ ಪಾವತಿಗೆ ಟಿಡಿಎಸ್ (TDS) ಮಿತಿಯನ್ನು 6 ಲಕ್ಷ ರೂ. ಹೆಚ್ಚಿಸಲಾಗಿದೆ.

    ಬಾಡಿಗೆ ಪಾವತಿಗಳು, ಹಣ ರವಾನೆ, ಉನ್ನತ ಶಿಕ್ಷಣ, ಸರಕುಗಳ ಮಾರಾಟ ಮತ್ತು ಅಪರಾಧಿಗಳ ಅಪರಾಧಮುಕ್ತೀಕರಣಕ್ಕೆ ಸಂಬಂಧಿಸಿದಂತೆ ಅವರು ಹಲವಾರು ಪ್ರಮುಖ ಸುಧಾರಣೆಗಳನ್ನು ಬಜೆಟ್‌ನಲ್ಲಿ ಪರಿಚಯಿಸಿದ್ದಾರೆ. ಇದನ್ನೂ ಓದಿ: ಮಧ್ಯಮ ವರ್ಗಕ್ಕೆ ಮತ್ತೊಂದು ಸಿಹಿ – ಎರಡನೇ ಮನೆಗೂ ತೆರಿಗೆ ಪಾವತಿಯಿಂದ ವಿನಾಯಿತಿ

    ಹಿರಿಯ ನಾಗರಿಕರಿಗೆ ಗುಡ್‌ನ್ಯೂಸ್
    ಹಿರಿಯ ನಾಗರಿಕರಿಗೆ ಬಡ್ಡಿಯ ಮೇಲಿನ ತೆರಿಗೆ ವಿನಾಯಿತಿ ಮಿತಿಯನ್ನು 50,000 ರೂ. ನಿಂದ 1 ಲಕ್ಷಕ್ಕೆ ಹೆಚ್ಚಿಸಲಾಗಿದೆ.

    ಬಾಡಿಗೆ
    ಬಾಡಿಗೆ ಮೇಲಿನ ಟಿಡಿಎಸ್‌ನ ವಾರ್ಷಿಕ ಮಿತಿ 2.40 ಲಕ್ಷದಿಂದ 6 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಇದರರ್ಥ ಬಾಡಿಗೆದಾರರು ತಿಂಗಳಿಗೆ 20,000 ರೂ. ದರದಲ್ಲಿ ನೀಡಲಾಗುವ ಬಾಡಿಗೆಗೆ ಟಿಡಿಎಸ್ ಕಡಿತಗೊಳಿಸಬೇಕಾಗಿತ್ತು. ಆದರೆ, ಈಗ ಮಿತಿಯನ್ನು 50,000 ರೂ.ಗೆ ಹೆಚ್ಚಿಸಲಾಗಿದೆ.

    ಹಣ ರವಾನೆ
    ಆದಾಯ ಮೂಲದಿಂದ ತೆರಿಗೆ ಸಂಗ್ರಹ 7 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸಲಾಗಿದೆ. ವಿದೇಶದಿಂದ ರವಾನಿಸುವ ಹಣದ ಮೇಲಿನ ಟಿಡಿಎಸ್‌ ಕಡಿತಗೊಳಿಸಲಾಗಿದೆ. ಇದನ್ನೂ ಓದಿ: ಪ್ರವಾಸೋದ್ಯಮಕ್ಕೆ ಉತ್ತೇಜನ – ಹೋಂಸ್ಟೇ ನಿರ್ಮಾಣಕ್ಕೆ ಮುದ್ರಾ ಲೋನ್‌ ವಿಸ್ತರಣೆ

    ಉನ್ನತ ಶಿಕ್ಷಣ
    ಶೈಕ್ಷಣಿಕ ಉದ್ದೇಶಗಳಿಗಾಗಿ ಯಾರಾದರೂ ಬ್ಯಾಂಕಿನಿಂದ ಬ್ಯಾಂಕ್‌ನಿಂದ ಸಾಲ ಪಡೆದರೆ ಟಿಸಿಎಸ್ ಇರುವುದಿಲ್ಲ. ಹೆಚ್ಚಿನ ಟಿಡಿಎಸ್ ಕಡಿತದ ನಿಬಂಧನೆಗಳು ಪ್ಯಾನ್ ಅಲ್ಲದ ಪ್ರಕರಣಗಳಲ್ಲಿ ಮಾತ್ರ ಅನ್ವಯಿಸುತ್ತವೆ.

    ಸರಕುಗಳ ಮಾರಾಟ
    ಪ್ರಸ್ತುತ ಸರಕುಗಳ ಮಾರಾಟಕ್ಕೆ ಸಂಬಂಧಿಸಿದ ವಹಿವಾಟುಗಳಿಗೆ ಟಿಡಿಎಸ್ ಮತ್ತು ಟಿಸಿಎಸ್ ಎರಡೂ ಅನ್ವಯಿಸುತ್ತವೆ. ಟಿಸಿಎಸ್ ಅನ್ನು ಕೈಬಿಡುವ ಪ್ರಸ್ತಾಪ ಮಾಡಿದ್ದಾರೆ. ಇದನ್ನೂ ಓದಿ: Budget 2025 | ಉದ್ಯಮ ಆರಂಭಿಸುವ 5 ಲಕ್ಷ SC, ST ಮಹಿಳೆಯರಿಗೆ ಆರ್ಥಿಕ ನೆರವು: ನಿರ್ಮಲಾ ಸೀತಾರಾಮನ್‌

  • Union Budget 2025: ಯಾವುದು ಅಗ್ಗ, ಯಾವುದು ದುಬಾರಿ?

    Union Budget 2025: ಯಾವುದು ಅಗ್ಗ, ಯಾವುದು ದುಬಾರಿ?

    ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಶನಿವಾರ ತಮ್ಮ 8ನೇ ಬಜೆಟ್‌ ಮಂಡಿಸಿದ್ದಾರೆ. ಮಹಿಳೆಯರು, ರೈತರು, ಯುವಜನತೆ, ಬಡವರನ್ನು ಕೇಂದ್ರವಾಗಿಟ್ಟುಕೊಂಡು ಬಜೆಟ್‌ನಲ್ಲಿ ಕೊಡುಗೆ ನೀಡಿದ್ದಾರೆ. ಮಧ್ಯಮ ವರ್ಗದ ಆರ್ಥಿಕ ಸಬಲೀಕರಣಕ್ಕೆ ತೆರಿಗೆ ವಿನಾಯಿತಿ ಗಿಫ್ಟ್‌ ಕೊಟ್ಟಿದ್ದಾರೆ.

    ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಬಜೆಟ್‌ನಲ್ಲಿ ಈ ಬಾರಿ ಯಾವ್ಯಾವ ವಸ್ತುಗಳು ಅಗ್ಗ ಮತ್ತು ಯಾವ್ಯಾವುವು ದುಬಾರಿ ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

    ಬೆಲೆ ಇಳಿಕೆ
    * ಮೊಬೈಲ್‌
    * ಎಲ್‌ಇಡಿ/ಎಲ್‌ಸಿಡಿ ಟಿವಿ
    * ಸುಗಂದ ದ್ರವ್ಯ
    * ಲಿಥಿಯಂ ಅಯಾನ್ ಬ್ಯಾಟರಿ
    * ಲೆದರ್‌ ಬೆಲ್ಟ್‌, ಶೂ, ಜಾಕೆಟ್‌
    * ಸಾಗರ ಉತ್ಪನ್ನ
    * ಹಡಗುಗಳ ತಯಾರಿಕೆಗೆ ಬಳಸುವ ಕಚ್ಚಾ ವಸ್ತು
    * ಕ್ಯಾನ್ಸರ್‌ ಔಷಧಿ, ಜೀವರಕ್ಷಕ ಔಷಧಿ
    * ಸ್ವದೇಶಿ ಬಟ್ಟೆ

    ಬೆಲೆ ಏರಿಕೆ
    * ಹೆಣೆದ ಬಟ್ಟೆಗಳು
    * ಪ್ಯಾನೆಲ್‌ ಡಿಸ್‌ಪ್ಲೇ ಮೇಲಿನ ಕಸ್ಟಮ್ಸ್‌ ಸುಂಕ ಹೆಚ್ಚಳ (10%-20%)
    * ಟೆಲಿಕಾಂ ಉಪಕರಣಗಳ ಮೇಲಿನ ಕಸ್ಟಮ್ಸ್‌ ಸುಂಕ ಹೆಚ್ಚಳ (10%-15%)

  • ನಿರ್ಮಲಾ ಕರ್ನಾಟಕದಿಂದ ಬಂದಿದ್ರೂ ರಾಜ್ಯವನ್ನು ನಿರ್ಲಕ್ಷಿಸಿದ್ದಾರೆ: ಜಿ.ಸಿ ಚಂದ್ರಶೇಖರ್ ಕಿಡಿ

    ನಿರ್ಮಲಾ ಕರ್ನಾಟಕದಿಂದ ಬಂದಿದ್ರೂ ರಾಜ್ಯವನ್ನು ನಿರ್ಲಕ್ಷಿಸಿದ್ದಾರೆ: ಜಿ.ಸಿ ಚಂದ್ರಶೇಖರ್ ಕಿಡಿ

    ಬೆಂಗಳೂರು: ನಿರ್ಮಲಾ (Nirmala Sitharaman) ಕರ್ನಾಟಕದಿಂದ ಬಂದಿದ್ದರೂ ರಾಜ್ಯವನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಬಜೆಟ್‌ನಲ್ಲಿ (Union Budget 2025) ರಾಜ್ಯಕ್ಕೆ ನಿರಾಸೆ ಮೂಡಿಸಿದ್ದಾರೆ. ಅವರನ್ನು ಕಳುಹಿಸಿದ ನಮಗೆ ನಾಚಿಕೆಯಾಗುತ್ತಿದೆ ಎಂದು ಕಾಂಗ್ರೆಸ್ ಸಂಸದ ಜಿ.ಸಿ ಚಂದ್ರಶೇಖರ್ (GC Chandrashekar) ಕಿಡಿಕಾರಿದ್ದಾರೆ.

    ಕೇಂದ್ರ ಬಜೆಟ್ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಜೆಟ್ ಬಗ್ಗೆ ಏನು ಹೇಳೋದು ಗೊತ್ತಾಗುತ್ತಿಲ್ಲ. ರಾಜ್ಯಕ್ಕೆ ಏನೂ ಕೊಟ್ಟಿಲ್ಲ. ಹೇಳೋಕೆ ಏನೂ ಉಳಿದಿಲ್ಲ. ಕಳೆದ ಕೆಲವು ವರ್ಷದಲ್ಲೇ ರಾಜ್ಯಕ್ಕೆ ಏನೂ ಕೊಟ್ಟಿಲ್ಲ. ಕಳೆದ ಬಾರಿ ಆಂಧ್ರಕ್ಕೆ ಅನುಕೂಲ ಮಾಡಿಕೊಟ್ಟಿದ್ದರು. ಕಳೆದ ಬಾರಿ ಆಂಧ್ರದ ಬಜೆಟ್ ಈ ಬಾರಿ ಬಿಹಾರದ ಬಜೆಟ್. ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಬಿಹಾರಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: Union Budget 2025 | ಯಾವ ವರ್ಷ ಎಷ್ಟು ಲಕ್ಷ ತೆರಿಗೆ ವಿನಾಯಿತಿ ಸಿಕ್ಕಿತ್ತು? – ಇಲ್ಲಿದೆ ಪೂರ್ಣ ವಿವರ

    ನಮ್ಮ ಪಾಲಿನ ತೆರಿಗೆ ನಮಗೆ ಕೊಡುತ್ತಿಲ್ಲ. ನಮ್ಮ ತೆರಿಗೆ ನಮ್ಮ ಹಕ್ಕು ಹೋರಾಟ ಮಾಡಬೇಕಾಗುತ್ತೆ ಎಂಬ ಎಚ್ಚರಿಕೆ ಕೊಡುತ್ತೇವೆ. ಇಷ್ಟೊಂದು ಬಿಜೆಪಿ ಸಂಸದರು ಇದ್ದಾರೆ. ಆದರೆ ಕರ್ನಾಟಕಕ್ಕೆ ಯಾವುದೇ ಯೋಜನೆ ನೀಡಿಲ್ಲ. ಕೇಂದ್ರ ಸರ್ಕಾರದಿಂದ ಮೋಸ ಆಗಿದೆ. ಬೆಂಗಳೂರು ಸಿ.ಟಿ ಟ್ರಾಫಿಕ್‌ಗೆ ಮುಕ್ತಿ ನೀಡಲು ಯಾವುದೇ ಯೋಜನೆ ರೂಪಿಸಿಲ್ಲ. ನಾವು ಕೊಟ್ಟಂತಹ ಮನವಿಯನ್ನು ಪರಿಗಣಿಸಿಲ್ಲ. ಬೆಂಗಳೂರಿಗೆ ಮತ್ತೊಂದು ಏರ್‌ಪೋರ್ಟ್ ಅಗತ್ಯವಿದೆ. ಇದರ ಬಗ್ಗೆಯೂ ಏನ್ನೂ ಹೇಳಿಲ್ಲ. ಇದೊಂದು ದುರ್ದೈವದ ಸಂಗತಿ. ರಾಜ್ಯದ ಸಚಿವರು ಕೆಲಸ ಮರೆತಿದ್ದಾರೆ. ಕನ್ನಡದ ಜನತೆ ಅರ್ಥ ಮಾಡಿಕೊಳ್ಳಬೇಕು ಎಂದು ಗುಡುಗಿದರು. ಇದನ್ನೂ ಓದಿ: Budget 2025: ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಸಿಕ್ಕಿದೆ?

  • Budget 2025: ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಸಿಕ್ಕಿದೆ?

    Budget 2025: ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಸಿಕ್ಕಿದೆ?

    ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸತತ 8ನೇ ಬಜೆಟ್‌ ಮಂಡಿಸಿದ್ದಾರೆ. 2025-26ನೇ ಹಣಕಾಸು ವರ್ಷದಲ್ಲಿ ವಿವಿಧ ವಲಯಗಳಿಗೆ ಅನುದಾನದ ಕೊಡುಗೆ ನೀಡಿದ್ದಾರೆ. ಯಾವ್ಯಾವ ಕ್ಷೇತ್ರಕ್ಕೆ ಎಷ್ಟೆಷ್ಟು ಹಣ ಸಿಕ್ಕಿದೆ ಎಂಬ ವಿವರ ಇಲ್ಲಿದೆ.

    ಯಾವ ವಲಯಕ್ಕೆ ಎಷ್ಟು
    ರಕ್ಷಣಾ ವಲಯ – 4,91,732 ಕೋಟಿ ರೂ.
    ಗ್ರಾಮೀಣಾಭಿವೃದ್ಧಿ – 2,66,817
    ಗೃಹ ವ್ಯವಹಾರಗಳು – 2,33,211
    ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳು – 1,71,437
    ಶಿಕ್ಷಣ – 1,28,650
    ಆರೋಗ್ಯ – 98,311
    ನಗರಾಭಿವೃದ್ಧಿ – 96,777
    ಐಟಿ ಮತ್ತು ದೂರಸಂಪರ್ಕ – 95,298
    ಇಂಧನ – 81,174
    ವಾಣಿಜ್ಯ ಮತ್ತು ಕೈಗಾರಿಕೆ – 65,553
    ಸಮಾಜ ಕಲ್ಯಾಣ ಇಲಾಖೆ – 60,052
    ವಿಜ್ಞಾನ – 55,679